Tag: lucknow

  • ಹುಲಿ ಮೇಲೆ ಟ್ರ್ಯಾಕ್ಟರ್ ಹತ್ತಿಸಿ ಸೇಡು ತೀರಿಸಿಕೊಂಡ ಗ್ರಾಮಸ್ಥರು

    ಹುಲಿ ಮೇಲೆ ಟ್ರ್ಯಾಕ್ಟರ್ ಹತ್ತಿಸಿ ಸೇಡು ತೀರಿಸಿಕೊಂಡ ಗ್ರಾಮಸ್ಥರು

    ಲಕ್ನೋ: 50 ವರ್ಷದ ವ್ಯಕ್ತಿಯನ್ನು ಕೊಂದು ಹಾಕಿದ್ದಕ್ಕೆ ರೊಚ್ಚಿಗೆದ್ದ ಗ್ರಾಮಸ್ಥರು ಹುಲಿಯ ಮೇಲೆ ಟ್ರ್ಯಾಕ್ಟರ್ ಹತ್ತಿಸಿ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಪಿಲಿಭಿತ್ ಜಿಲ್ಲೆಯ ದುಧ್ವಾ ಹುಲಿ ಅಭಯಾರಣ್ಯ ಪ್ರದೇಶದಲ್ಲಿ ನಡೆದಿದೆ.

    ಈ ಘಟನೆ ಭಾನುವಾರ ನಡೆದಿದ್ದು, ದುಧ್ವಾ ಹುಲಿ ಅಭಯಾರಣ್ಯ ಉಪನಿರ್ದೇಶಕ ಮಹಾವೀರ್ ಕೌಜಲಗಿ ಅವರು ಈ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ ಗ್ರಾಮಸ್ಥರು ರೊಚ್ಚಿಗೆದ್ದು ಹುಲಿಯನ್ನು ಕೊಂದಿದ್ದಾರೆ ಎಂದು ತಿಳಿಸಿದ್ದಾರೆ.

    ನಾವೆಲ್ಲರೂ ಹುಲಿಯಿಂದ ದಾಳಿಗೆ ಒಳಗಾಗಿದ್ದ 50 ವರ್ಷದ ದೇವಾನಂದ್ ಅವರನ್ನು ಪ್ರಾಣಪಾಯದಿಂದ ರಕ್ಷಿಸಲು ಆಸ್ಪತ್ರೆಗೆ ದಾಖಲಿಸುವಲ್ಲಿ ಕಾರ್ಯನಿರತರಾಗಿದ್ದರೆ ಗ್ರಾಮಸ್ಥರು ಸುತ್ತುವರಿದು ಆ ಹುಲಿಯ ಮೇಲೆ ಟ್ರ್ಯಾಕ್ಟರ್ ಹತ್ತಿಸಿ ಕೊಂದಿದ್ದಾರೆ ಎಂದು ಹೇಳಿದರು.

    ಹುಲಿಯನ್ನು ಹತ್ಯೆ ಮಾಡುವಲ್ಲಿ ಯಾರೆಲ್ಲಾ ಭಾಗಿಯಾದ್ದರೋ ಅವರ ವಿರುದ್ಧ ಕ್ರಮಕೈಗೊಳ್ಳಲಾಗುವುದು. ಅಷ್ಟೇ ಅಲ್ಲದೇ ಸಂರಕ್ಷಿತ ಪ್ರದೇಶದೊಳಗೆ ಹುಲಿ ಹತ್ಯೆ ಮಾಡುವುದು ಗಂಭೀರ ಅಪರಾಧವಾಗಿದೆ. ಹೀಗಾಗಿ ವನ್ಯಜೀವಿ ಸಂರಕ್ಷಣಾ ಕಾಯಿದೆ ಅಡಿಯಲ್ಲಿ ಎಫ್‍ಐಆರ್ ದಾಖಲಾಗಿದೆ ಎಂದು ನಿರ್ದೇಶಕ ರಮೇಶ್ ಕುಮಾರ್ ಪಾಂಡೆ ಅವರು ಹೇಳಿದ್ದಾರೆ.

    ಘಟನೆಯ ಬಳಿಕ ಹುಲಿಯ ಮೃತ ದೇಹವನ್ನು ಪಡೆಯಲಾಗಿದ್ದು, ಸೋಮವಾರ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ ಮಾರ್ಗದರ್ಶಿ ಸೂತ್ರಗಳ ಅಡಿಯಲ್ಲಿ ಶವಪರೀಕ್ಷೆಯನ್ನು ಕೈಗೊಳ್ಳಲಾಗುವುದು ಎಂದು ಕೌಜಲಗಿ ತಿಳಿಸಿದ್ದಾರೆ.

    ಇದೇ ರೀತಿ ಮಹಾರಾಷ್ಟ್ರದಲ್ಲಿ 14 ಮಂದಿಯನ್ನು ಕೊಂದಿದ್ದ ಅವನಿ ಎಂಬ ಹೆಣ್ಣು ಹುಲಿಯನ್ನು ಹತ್ಯೆ ಮಾಡಲಾಗಿತ್ತು. ಈ ಘಟನೆಯಾದ ಎರಡು ದಿನದ ಬಳಿಕವೇ ದುಧ್ವಾ ಹುಲಿ ಅಭಯಾರಣ್ಯದಲ್ಲಿ ಈ ಘಟನೆ ಸಂಭವಿಸಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ದಂಪತಿಗೆ ಠಾಣೆಯಲ್ಲೇ ಪೊಲೀಸ್ ಅಧಿಕಾರಿಯಿಂದ ಹಿಗ್ಗಾಮುಗ್ಗಾ ಥಳಿತ..!

    ದಂಪತಿಗೆ ಠಾಣೆಯಲ್ಲೇ ಪೊಲೀಸ್ ಅಧಿಕಾರಿಯಿಂದ ಹಿಗ್ಗಾಮುಗ್ಗಾ ಥಳಿತ..!

    ಲಕ್ನೋ: ಉತ್ತರ ಪ್ರದೇಶದ ಡೆಪ್ಯೂಟಿ ಸೂಪರಿಟೆಂಡೆಂಟ್ ಪೊಲೀಸ್ ಅಧಿಕಾರಿಯೊಬ್ಬರು ಮುಸ್ಲಿಂ ದಂಪತಿಗೆ ಪೊಲೀಸ್ ಠಾಣೆಯಲ್ಲಿ ಹಿಗ್ಗಾಮುಗ್ಗಾ ಥಳಿಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

    ಈ ಘಟನೆ ಉತ್ತರ ಪ್ರದೇಶದ ಮೀರತ್ ನಲ್ಲಿ ನಡೆದಿದೆ. ಡಿಎಸ್‍ಪಿ ಅಶೋಕ್ ಕುಮಾರ್ ದೀಕ್ಷಿತ್ ಈ ರೀತಿ ಮುಸ್ಲಿಂ ದಂಪತಿಯ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಸಹರಾನ್ಪುರದ ಸರ್ಕಾರಿ ರೈಲ್ವೆ ಪೊಲೀಸ್ ಈ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾರೆ.

    ಅಕ್ಟೋಬರ್ 12 ರಂದು ಈ ಘಟನೆ ಸಂಭವಿಸಿದೆ. ಆದರೆ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ ತಡವಾಗಿ ಬೆಳಕಿಗೆ ಬಂದಿದೆ. ಮುಸ್ಲಿಂ ದಂಪತಿಗೆ ಲಾಠಿ ಮೂಲಕ ಹೊಡೆಯುವುದು ಈ ವಿಡಿಯೋದಲ್ಲಿ ಸೆರೆಯಾಗಿದೆ. ಮೊರಾದಾಬಾದ್ ನ ಪೊಲೀಸ್ ಅಧಿಕಾರಿಗಳಿಗೆ ಈ ಕುರಿತು ತನಿಖೆ ಮಾಡುವಂತೆ ರೈಲ್ವೆ ಅಧಿಕಾರಿ ಸಂಜಯ್ ಸಿಂಘಾಲ್ ಆದೇಶಿಸಿದ್ದಾರೆ.

    ಮುಸ್ಲಿಂ ದಂಪತಿಯ ಮೇಲೆ ಹಲ್ಲೆ ಮಾಡಿದ್ದ ಅಶೋಕ್ ಕುಮಾರ್ ದೀಕ್ಷಿತ್ ಅಕ್ಟೋಬರ್ 31 ರಂದು ನಿವೃತ್ತರಾಗಿದ್ದಾರೆ. ಈ ಬಗ್ಗೆ ನಿವೃತ್ತಿ ಅಧಿಕಾರಿಯನ್ನು ವಿಚಾರಣೆ ಮಾಡಲಾಗುತ್ತದೆ. ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಿಂಘಾಲ್ ಹೇಳಿದ್ದಾರೆ.

    ವಿಡಿಯೋದಲ್ಲಿ ಏನಿದೆ?
    ದೀಕ್ಷಿತ್ ಅವರು ಸಹರಾನ್ಪುರದ ರೈಲ್ವೆ ರಕ್ಷಣಾ ಪಡೆ(ಜಿಆರ್ ಪಿ) ನಿಲ್ದಾಣದಲ್ಲಿ ಕುರ್ಚಿಯ ಮೇಲೆ ಕುಳಿತುಕೊಂಡು ಮುಸ್ಲಿಂ ದಂಪತಿಯನ್ನು ವಿಚಾರಣೆ ನಡೆಸುತ್ತಿದ್ದಾರೆ. ಈ ವೇಳೆ ಅವರು ಕೈಯಲ್ಲಿ ಲಾಠಿ ಹಿಡಿದಿರುವುದನ್ನು ನೋಡಬಹುದಾಗಿದೆ. ಬಳಿಕ ಯುವಕ ಮೊದಲು ಕುಳಿತಿದ್ದು, ಬಳಿಕ ಎದ್ದು ನಿಂತಿದ್ದಾನೆ. ಈ ವೇಳೆ ಪೊಲೀಸ್ ಯುವತಿಗೆ ಲಾಠಿಯಿಂದ ಹಲ್ಲೆ ಮಾಡಿ ಬೈದಿದ್ದಾರೆ. ನಂತರ ಯುವಕನ ಮೇಲೂ ಹಲ್ಲೆ ಮಾಡಿದ್ದಾರೆ. ಈ ಎಲ್ಲ ದೃಶ್ಯ ನಡೆಯುತ್ತಿದ್ದಾಗ ಇಬ್ಬರು ಪೊಲೀಸ್ ಅಧಿಕಾರಿಗಳು ಠಾಣೆಯ ಒಳಗೆ ಇರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

    ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ವಿಡಿಯೋವನ್ನು ನಾವು ನೋಡಿದ್ದೇವೆ. ಘಟನೆಯ ಬಗ್ಗೆ ತಿಳಿಯಲು ತನಿಖೆ ಮಾಡುತ್ತಿದ್ದೇವೆ. ವಿಡಿಯೋದಲ್ಲಿರುವ ವ್ಯಕ್ತಿಯನ್ನು ಗುರುತಿಸಲಾಗಿದೆ. ಆದರೆ ಈ ಬಗ್ಗೆ ಹಲ್ಲೆಗೊಳಗಾದವರಿಂದ ಯಾವುದೇ ಅಧಿಕೃತ ದೂರನ್ನು ಇನ್ನೂ ಸ್ವೀಕರಿಸಿಲ್ಲ ಎಂದು ರೈಲ್ವೆ ರಕ್ಷಣಾ ಪಡೆಯ ಎಸ್‍ಪಿ ಸುಭಾಷ್ ಚಂದ್ರ ದುಬೆ ಹೇಳಿದ್ದಾರೆ.

    ದೀಕ್ಷಿತ್ ತಪ್ಪಿತಸ್ಥರೆಂದು ಪರಿಗಣಿಸಿದರೆ ಅವರ ವಿರುದ್ಧ ಇಲಾಖೆಯ ಕ್ರಮ ತೆಗೆದುಕೊಳ್ಳಲಾಗುವುದು. ಸದ್ಯಕ್ಕೆ ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಸಿಂಘಾಲ್ ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ದೀಪಾವಳಿ ಬಳಿಕ ರಾಮಮಂದಿರ ನಿರ್ಮಾಣ ಕಾರ್ಯಾರಂಭ : ಯೋಗಿ ಆದಿತ್ಯನಾಥ್

    ದೀಪಾವಳಿ ಬಳಿಕ ರಾಮಮಂದಿರ ನಿರ್ಮಾಣ ಕಾರ್ಯಾರಂಭ : ಯೋಗಿ ಆದಿತ್ಯನಾಥ್

    ಲಕ್ನೋ: ರಾಮ ಮಂದಿರ ವಿಚಾರಣೆಗೆ ತ್ವರಿತಗೊಳಿಸುವಂತೆ ಸುಪ್ರೀಂ ಕೋರ್ಟ್‍ಗೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಜನವರಿಗೆ ಮುಂದೂಡುತ್ತಿದಂತೆ ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಜಾರಿ ಮಾಡುವಂತೆ ಆಗ್ರಹ ಹೆಚ್ಚಾಗುತ್ತಿದೆ. ಇದೇ ವೇಳೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ರಾಮಮಂದಿರ ನಿರ್ಮಾಣ ಕಾರ್ಯಾರಂಭದ ಕುರಿತು ಹೇಳಿಕೆ ನೀಡಿದ್ದಾರೆ.

    ರಾಜಸ್ಥಾನದ ಬಿಕಾನೆರ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಯೋಗಿ ಆದಿತ್ಯನಾಥ್ ಈ ಕುರಿತು ಪರೋಕ್ಷವಾಗಿ ಹೇಳಿಕೆ ಸೂಚನೆ ನೀಡಿದ್ದಾರೆ. ರಾಷ್ಟ್ರೀಯ ಮಾಧ್ಯಮವೊಂದು ಈ ಕುರಿತು ವರದಿ ಮಾಡಿದ್ದು, ಈ ಬಾರಿ ರಾಮನ ಹೆಸರಿನಲ್ಲಿ ದೀಪ ಹಚ್ಚಿ, ರಾಮ ಮಂದಿರದ ಕಾರ್ಯ ಶೀಘ್ರವೇ ಆರಂಭವಾಗಲಿದೆ. ದೀಪಾವಳಿ ಬಳಿಕವೇ ಕಾರ್ಯಾರಂಭವಾಗಲಿದೆ ಎಂದು ಹೇಳಿದ್ದಾರೆ.

    ಇತ್ತ ರಾಮ ಮಂದಿರ ನಿರ್ಮಾಣ ನನ್ನ ಜೀವನದ ಕನಸು ಎಂದು ಕೇಂದ್ರ ಸಚಿವೆ ಉಮಾ ಭಾರತಿ ಹೇಳಿದ್ದು, ರಾಮ ಜನ್ಮಭೂಮಿ ಯಾತ್ರೆಯಲ್ಲಿ ಭಾಗವಹಿಸಿದ್ದು ನನಗೆ ಈಗಲೂ ಹೆಮ್ಮೆ ಇದೆ ಎಂದು ತಿಳಿಸಿದ್ದಾರೆ.

    ರಾಮ ಜನ್ಮ ಭೂಮಿ ಯಾತ್ರೆ ಸಂಬಂಧ ಪ್ರಕರಣದಲ್ಲಿ ಬಿಜೆಪಿ ಹಿರಿಯ ಮುಖಂಡರಾದ ಎಲ್.ಕೆ.ಅಡ್ವಾಣಿ ಹಾಗೂ ನಾನು ಈಗಲೂ ನ್ಯಾಯಾಲಯದಲ್ಲಿ ಪ್ರಕರಣ ಎದುರಿಸುತ್ತಿದ್ದೇವೆ. ಇದಕ್ಕೆ ನಮಗೆ ಹೆಮ್ಮೆ ಇದೆ. ರಾಮ ಮಂದಿರ ನಿರ್ಮಾಣದ ಕಾರ್ಯಕ್ಕೆ ನಾನು ಏನು ಮಾಡಲು ಸಿದ್ಧ ಎಂದು ಬಹಿರಂಗ ಹೇಳಿಕೆ ನೀಡಿದ್ದಾರೆ.

    2010ರಲ್ಲಿ ಅಯೋಧ್ಯೆ ಜಮೀನನ್ನು ಮೂರು ಭಾಗಗಳಾಗಿ ವಿಂಗಡಿಸಿ ಅಲಹಾಬಾದ್ ಹೈಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಹಾಗೂ ವಿವಾದ ಕುರಿತ ವಿಚಾರಣೆ ಶೀಘ್ರ ಆರಂಭ ಮಾಡುವಂತೆ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಅ.29 ರಂದು ಜನವರಿಗೆ ಮುಂದೂಡಿತ್ತು.

    ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ ರಂಜನ್ ಗೊಗಾಯ್, ನ್ಯಾ. ಎಸ್‍ಕೆ ಕೌಲ್, ಕೆಎಂ ಜೋಸೆಫ್ ನೇತೃತ್ವದ ತ್ರಿಸದಸ್ಯ ಪೀಠ ಇಂದು ಅರ್ಜಿಯ ವಿಚಾರಣೆ ನಡೆಸಿ ನಮಗೆ ನಮ್ಮದೇ ಆದ ಆದ್ಯತೆಗಳಿವೆ ಎಂದು ಅಭಿಪ್ರಾಯ ಪಟ್ಟಿತ್ತು. ಅಲ್ಲದೇ ಅಯೋಧ್ಯೆ ಬಗ್ಗೆ ಪ್ರತಿನಿತ್ಯ ವಿಚಾರಣೆ ನಡೆಬೇಕೇ? ಬೇಡವೇ ಎನ್ನುವ ಬಗ್ಗೆ ತೀರ್ಮಾನ ಜನವರಿಯಲ್ಲೇ ಕೈಗೊಳ್ಳಬಹುದು ಎಂದು ತಿಳಿಸಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಐಸಿಯುನಲ್ಲೇ ಅಪ್ತಾಪ್ತೆಯ ಮೇಲೆ ಐವರಿಂದ ಪೈಶಾಚಿಕ ಕೃತ್ಯ

    ಐಸಿಯುನಲ್ಲೇ ಅಪ್ತಾಪ್ತೆಯ ಮೇಲೆ ಐವರಿಂದ ಪೈಶಾಚಿಕ ಕೃತ್ಯ

    ಲಕ್ನೋ: ದಿನೇ ದಿನೇ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈಗ ಖಾಸಗಿ ಆಸ್ಪತ್ರೆಯಲ್ಲಿಯೇ ಅಪ್ರಾಪ್ತೆಯ ಮೇಲೆ ಐದು ಮಂದಿಯಿಂದ ಸಾಮೂಹಿಕ ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.

    ಈ ಘಟನೆ ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ಐಸಿಯುವಿನಲ್ಲಿ ನಡೆದಿದೆ. ಆಸ್ಪತ್ರೆಗೆ ಚಿಕಿತ್ಸೆಗೆಂದು ಐಸಿಯುನಲ್ಲಿ ಅಡ್ಮಿಟ್ ಆಗಿದ್ದ ಸಂತ್ರಸ್ತೆಯ ಮೇಲೆ ಆಸ್ಪತ್ರೆಯ ಸಿಬ್ಬಂದಿ ಸೇರಿದಂತೆ ಐದು ಅಪರಿಚಿತರು ಹುಡುಗಿಯ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    16 ವರ್ಷದ ಬಾಲಕಿಗೆ ಹಾವು ಕಚ್ಚಿದೆ. ಆದ್ದರಿಂದ ಆಕೆಯನ್ನು ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಾಲಕಿಯ ಪರಿಸ್ಥಿತಿ ಗಂಭೀರವಾಗಿದ್ದರಿಂದ ಐಸಿಯುವಿನಲ್ಲಿ ಚಿಕಿತ್ಸೆ ನಡೆಯುತ್ತಿತ್ತು. ಆದರೆ ಇದೇ ವೇಳೆ ಆಸ್ಪತ್ರೆ ಸಿಬ್ಬಂದಿ ಸೇರಿ ಐದು ಮಂದಿ ಆಕೆಯ ಮೇಲೆ ಐಸಿಯುನಲ್ಲೇ ಸಾಮೂಹಿಕ ಅತ್ಯಾಚಾರವನ್ನು ಎಸಗಿದ್ದಾರೆ ಎಸ್‍ಪಿ ಎ.ಸಿಂಗ್ ಅವರು ಹೇಳಿದ್ದಾರೆ.

    ಸಂತ್ರಸ್ತೆಯನ್ನು ಜನರಲ್ ವಾರ್ಡ್ ಗೆ ಶಿಫ್ಟ್ ಮಾಡಿದ ನಂತರ ನಡೆದ ಘಟನೆಯ ಬಗ್ಗೆ ಹೇಳಿಕೊಂಡಿದ್ದಾಳೆ. ಪೊಲೀಸರು ಘಟನೆಯ ಬಗ್ಗೆ ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆಸ್ಪತ್ರೆ ಸಿಬ್ಬಂದಿ ಮತ್ತು ಇತರ ನಾಲ್ಕು ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‍ಐಆರ್ ದಾಖಲಿಸಿದ್ದಾರೆ. ಸದ್ಯಕ್ಕೆ ಈ ಕುರಿತು ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಇತ್ತೀಚೆಗೆ ಉತ್ತರ ಪ್ರದೇಶದ ಅಲಿಗಢದಲ್ಲಿ ಮನೆಯಿಂದ ಹೊರಗಡೆ ಬಂದಿದ್ದ ಅಪ್ರಾಪ್ತೆಯ ಮೇಲೆ ಇಬ್ಬರು ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಆದರೆ ಅತ್ಯಾಚಾರಕ್ಕೋಳಗಾಗಿದ್ದ ಸಂತ್ರಸ್ತೆ ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಳು. ಪೊಲೀಸರು ಆರೋಪಿಗಳಿಬ್ಬರ ವಿರುದ್ಧ ಎಫ್‍ಐಆರ್ ದಾಖಲಿಸಿ ಬಂಧಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಅಯೋಧ್ಯೆಯಲ್ಲಿ ರಾಮಮಂದಿರ, ಲಕ್ನೋದಲ್ಲಿ ಮಸೀದಿ ನಿರ್ಮಾಣ: ರಾಮ ಜನ್ಮಭೂಮಿ ವೇದಿಕೆ ಅಧ್ಯಕ್ಷ

    ಅಯೋಧ್ಯೆಯಲ್ಲಿ ರಾಮಮಂದಿರ, ಲಕ್ನೋದಲ್ಲಿ ಮಸೀದಿ ನಿರ್ಮಾಣ: ರಾಮ ಜನ್ಮಭೂಮಿ ವೇದಿಕೆ ಅಧ್ಯಕ್ಷ

    ಲಕ್ನೋ: ಅಯೋಧ್ಯೆಯಲ್ಲಿ ರಾಮಮಂದಿರದ ನಿರ್ಮಾಣದ ಜೊತೆ ಉತ್ತರಪ್ರದೇಶದ ರಾಜಧಾನಿಯಲ್ಲಿ ಮಸೀದಿಯನ್ನು ನಿರ್ಮಾಣ ಮಾಡುತ್ತೇವೆ ಎಂದು ಬಿಜೆಪಿ ಮಾಜಿ ಸಂಸದ ಹಾಗೂ ರಾಮ ಜನ್ಮಭೂಮಿ ವೇದಿಕೆ ಅಧ್ಯಕ್ಷ ರಾಮ್ ವಿಲಾಸ್ ವೇದಾಂತಿ ಹೇಳಿದ್ದಾರೆ.

    ರಾಮ ಮಂದಿರ ವಿಚಾರ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಂಬರುವ ಡಿಸೆಂಬರ್ ತಿಂಗಳಲ್ಲಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಜೊತೆಗೆ ಲಕ್ನೋದಲ್ಲಿ ಮಸೀದಿಯನ್ನು ನಿರ್ಮಿಸುತ್ತೇವೆ. ದೇವಾಲಯ ಹಾಗೂ ಮಸೀದಿಯ ನಿರ್ಮಾಣ ಕಾರ್ಯಕ್ಕೆ ಯಾವುದೇ ಆದೇಶ ಕಾಯದೇ, ಪರಸ್ಪರ ಒಪ್ಪಂದದ ಮೇರೆಗೆ ನಿರ್ಮಾಣ ಕಾರ್ಯಕ್ಕೆ ಮುಂದಾಗುತ್ತೇವೆ ಎಂದು ತಿಳಿಸಿದರು.

    ಈಗಾಗಲೇ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಬಿಜೆಪಿ ಸಿದ್ಧವಾಗಿದ್ದು, ಇದೇ ಮುಂಬರುವ ಲೋಕಸಭಾ ಚುನಾವಣೆಗೂ ಮುನ್ನ ರಾಮ ಮಂದಿರ ನಿರ್ಮಾಣ ಕಾರ್ಯ ಆರಂಭವಾಗುತ್ತದೆ ಎಂದು ಹೇಳಿದರು.

    2010ರ ಆಯೋಧ್ಯೆ ಭೂ ವಿವಾದಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ನ್ಯಾಯಾಲಯ ನೀಡಿದ್ದ ತೀರ್ಪನ್ನು ಪ್ರಶ್ನಿಸಿ, ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿಯನ್ನು ಸಲ್ಲಿಸಲಾಗಿತ್ತು. ಇದರ ವಿಚಾರಣೆಯನ್ನು ಅಕ್ಟೋಬರ್ 29ರಂದು ಮುಖ್ಯ ನ್ಯಾಯಮೂರ್ತಿಗಳಾದ ರಂಜನ್ ಗೊಗಾಯ್ ನ್ಯಾ. ಎಸ್.ಕೆ.ಕೌಲ್ ಹಾಗೂ ಕೆ.ಎಂ ಜೋಸೆಫ್ ನೇತೃತ್ವದ ತ್ರಿಸದಸ್ಯ ಪೀಠ ಅರ್ಜಿಯ ವಿಚಾರಣೆಯನ್ನು ಜನವರಿ, ಫೆಬ್ರವರಿ ಇಲ್ಲವೇ ಮೇ ತಿಂಗಳಲ್ಲಿ ವಿಚಾರಣೆ ನಡೆಸುವುದಾಗಿ ಹೇಳಿ ಮುಂದೂಡಿತ್ತು. ನಮಗೆ ನಮ್ಮದೇ ಆದ ಆದ್ಯತೆಗಳಿವೆ. ಹೀಗಾಗಿ ಅಯೋಧ್ಯೆ ಕುರಿತು ಪ್ರತಿನಿತ್ಯ ವಿಚಾರಣೆ ನಡೆಸಬೇಕೆ? ಬೇಡವೇ ಎನ್ನುವ ಬಗ್ಗೆ ತೀರ್ಮಾನವನ್ನು ಅಂದೇ ಕೈಗೊಳ್ಳುತ್ತೇವೆಂದು ಪೀಠ ತಿಳಿಸಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕನಸ್ಸಿನಲ್ಲಿ ಬರುತ್ತಿದ್ದ ರಾಮ: ಹಿಂದೂ ಧರ್ಮಕ್ಕೆ ಮತಾಂತರವಾಯ್ತು ಮುಸ್ಲಿಂ ಕುಟುಂಬ

    ಕನಸ್ಸಿನಲ್ಲಿ ಬರುತ್ತಿದ್ದ ರಾಮ: ಹಿಂದೂ ಧರ್ಮಕ್ಕೆ ಮತಾಂತರವಾಯ್ತು ಮುಸ್ಲಿಂ ಕುಟುಂಬ

    ಸಾಂದರ್ಭಿಕ ಚಿತ್ರ

    ಲಕ್ನೋ: ಕನಸ್ಸಿನಲ್ಲಿ ಪದೇ ಪದೇ ಶ್ರೀರಾಮಚಂದ್ರ ಬರುತ್ತಿದ್ದ ಹಿನ್ನೆಲೆಯಲ್ಲಿ ಮುಸ್ಲಿಂ ಕುಟುಂಬವೊಂದು ಹಿಂದೂ ಧರ್ಮಕ್ಕೆ ಮತಾಂತರಗೊಂಡಿರುವ ಘಟನೆ ಉತ್ತರಪ್ರದೇಶ ಶಾಮ್ಲಿ ಜಿಲ್ಲೆಯಲ್ಲಿ ನಡೆದಿದೆ.

    ಶಾಮ್ಲಿ ಜಿಲ್ಲೆಯ ಸದರ್ ಕೋತ್ವಾಲಿಯ ಹರೇಂದ್ರ ನಗರದ ನಿವಾಸಿ ಶಹಜಾದ್ ಕುಂಟುಬ ಬುಧವಾರ ಶಾಸ್ತ್ರೋಕ್ತವಾಗಿ ಹಿಂದೂ ಧರ್ಮವನ್ನು ಸ್ವೀಕರಿಸಿದೆ. ಇದಾದ ನಂತರ ಶ್ರೀರಾಮನ ದೇವಾಲಯಕ್ಕೆ ಪೂಜೆ ಸಲ್ಲಿಸಿ, ಹಿಂದೂ ಧರ್ಮಕ್ಕೆ ಬದಲಾದ ಬಳಿಕ ಶಹಜಾದ್ ತಮ್ಮ ಹೆಸರನ್ನು ಸಂಜು ಎಂದು ಮರು ನಾಮಕರಣವನ್ನು ಮಾಡಿಕೊಂಡಿದ್ದಾರೆ. ಅಲ್ಲದೇ ಜೈ ಶ್ರೀರಾಮ್ ಎನ್ನುವ ಘೋಷಣೆಯನ್ನು ಕೂಗಿದ್ದಾರೆ.

     

    ಈ ಕುರಿತು ಪ್ರತಿಕ್ರಿಯಿಸಿದ ಅವರು, ನನಗೆ ಬಹಳ ದಿನಗಳಿಂದಲೂ ಕನಸ್ಸಿನಲ್ಲಿ ಶ್ರೀರಾಮಚಂದ್ರ ಕಾಣಿಸಿಕೊಳ್ಳುತ್ತಿದ್ದ. ನೀನು ಹಿಂದೂ ಧರ್ಮವನ್ನು ಸ್ವೀಕರಿಸು ಎಂದು ಪ್ರೇರೇಪಿಸುತ್ತಿದ್ದ. ನನ್ನ ಪೂರ್ವಜರು ಕೂಡ ಹಿಂದೂವಾಗಿದ್ದರು. ಆದರೆ ಅವರನ್ನು ಬಲವಂತವಾಗಿ ಮುಸ್ಲಿಂ ಧರ್ಮಕ್ಕೆ ಮತಾಂತರಗೊಳಿಸಲಾಗಿತ್ತು. ಹೀಗಾಗಿ ನಾನು ನನ್ನ ಕುಟುಂಬದ ಸಮೇತ ಹಿಂದೂ ಧರ್ಮವನ್ನು ಸ್ವೀಕರಿಸಿಕೊಂಡಿದ್ದೇನೆ. ನನ್ನ ಆರಾಧ್ಯ ದೈವ ಭಗವಾನ್ ಶ್ರೀರಾಮಚಂದ್ರ. ನಾನು ನನ್ನ ಮುಂದಿನ ದಿನಗಳನ್ನು ಹಿಂದೂ ಸಂಪ್ರದಾಯದಂತೆ ಅನುಸರಿಸುತ್ತೇನೆ ಎಂದು ಹೇಳಿದರು.

    ಈ ಬಗ್ಗೆ ಶಾಮ್ಲಿ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿರುವ ಸಂಜು ಅಲಿಯಾಸ್ ಶಹಜಾದ್, ನಾನು ನನ್ನ ಸ್ವ-ಇಚ್ಛೆಯಿಂದ ಹಿಂದೂ ಧರ್ಮವನ್ನು ಸ್ವೀಕರಿಸಿದ್ದೇನೆ. ನನಗೆ ಹಿಂದೂ ಧರ್ಮಕ್ಕೆ ಮರಳಲು ಹಾಗೂ ಹಿಂದೂಗಳಂತೆ ಪೂಜೆ-ಪುನಸ್ಕಾರ ಸಲ್ಲಿಸಲು ಅನುಮತಿ ನೀಡಬೇಕೆಂದು ಕೋರಿಕೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ನಿಮ್ಮ ಮಗಳನ್ನು ಮದ್ವೆಯಾಗ್ತೀನಿ ಎಂದಿದ್ದಕ್ಕೆ ಪ್ರಿಯಕರನಿಗೆ ಬೆಂಕಿ ಹಚ್ಚಿದ ತಂದೆ!

    ನಿಮ್ಮ ಮಗಳನ್ನು ಮದ್ವೆಯಾಗ್ತೀನಿ ಎಂದಿದ್ದಕ್ಕೆ ಪ್ರಿಯಕರನಿಗೆ ಬೆಂಕಿ ಹಚ್ಚಿದ ತಂದೆ!

    ಲಕ್ನೋ: ನಿಮ್ಮ ಮಗಳನ್ನು ಮದುವೆಯಾಗುತ್ತೇನೆ ಎಂದು ಹೇಳಿದ್ದಕ್ಕೆ ತಂದೆಯೊಬ್ಬ ಯುವಕನಿಗೆ ಬೆಂಕಿ ಹಚ್ಚಿದ ಪ್ರಕರಣವೊಂದು ಬುಧವಾರ ಉತ್ತರ ಪ್ರದೇಶದ ಇತಾ ಜಿಲ್ಲೆಯಲ್ಲಿ ನಡೆದಿದೆ.

    ನರೇಂದ್ರ ಶಾಕ್ಯಾ(22) ಸಾವು ಬದುಕಿನ ನಡುವೆ ಹೋರಾಡುತ್ತಿರುವ ಯುವಕ. ನರೇಂದ್ರ ದಲ್ಹಾಯಿ ಗ್ರಾಮದ ನಿವಾಸಿಯಾಗಿದ್ದು, ಗೇವಾ ಅಸದುಲ್ಲಾಪುರ ಗ್ರಾಮದಲ್ಲಿರುವ ತನ್ನ ಪ್ರೇಯಸಿಯ ಮನೆಗೆ ಹೋಗಿ ಆಕೆಯ ತಂದೆ ಜೊತೆ ಮದುವೆಯ ಪ್ರಸ್ತಾಪ ಮಾಡಿದ್ದಾನೆ.

    ನರೇಂದ್ರ ಯುವತಿಯ ಮನೆಗೆ ಹೋಗುತ್ತಿದ್ದಂತೆ ಆತನನ್ನು ಮಂಚಕ್ಕೆ ಕಟ್ಟಿ ಹಾಕಿದ್ದಾರೆ. ನಂತರ ಯುವತಿಯ ತಂದೆ ಹಾಗೂ ಆಕೆಯ ಸಂಬಂಧಿಕರಾದ ದಯಾರಮ್ ಹಾಗೂ ಉಮೇಶ್ ನರೇಂದ್ರ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಸಂಜಯ್ ಕುಮಾರ್ ತಿಳಿಸಿದ್ದಾರೆ.

    ಅಲ್ಲಿದ್ದ ಜನರು ಪೊಲೀಸರಿಗೆ ಕರೆ ಮಾಡಿ ಘಟನೆ ಬಗ್ಗೆ ಮಾಹಿತಿ ನೀಡಿದ್ದಾರೆ. ಸದ್ಯ ಪೊಲೀಸರು ಯುವತಿಯ ತಂದೆ ಹಾಗೂ ಸಂಬಂಧಿ ದಯಾರಾಮ್‍ನನ್ನು ಬಂಧಿಸಿದ್ದಾರೆ. ಮತ್ತೊಬ್ಬ ಸಂಬಂಧಿ ಉಮೇಶ್ ತಪ್ಪಿಸಿಕೊಂಡಿದ್ದು ಪೊಲೀಸರು ಹುಟುಕಾಟ ನಡೆಸುತ್ತಿದ್ದಾರೆ.

    ಸದ್ಯ ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 307, 342 ಹಾಗೂ 326 ಅಡಿಯಲ್ಲಿ ಕೇಸ್ ದಾಖಲಾಗಿದೆ. ನರೇಂದ್ರ ಹಾಗೂ ಯುವತಿ ಒಬ್ಬರನೊಬ್ಬರು ಪ್ರೀತಿಸುತ್ತಿದ್ದರು. ಇಬ್ಬರು ಮದುವೆಯಾಗಲು ಕೂಡ ಇಚ್ಛಿಸಿದ್ದರು. ಆದರೆ ಯುವತಿ ಮನೆಯವರು ಇಬ್ಬರ ಪ್ರೀತಿಗೆ ವಿರೋಧ ವ್ಯಕ್ತಪಡಿಸಿದ್ದರು ಎಂದು ವರದಿಯಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • `15 ದಿನ ಮೊದಲ ಪತಿಯ ಜೊತೆ 15 ದಿನ ಎರಡನೆಯ ಪತಿ ಜೊತೆ ಸಂಸಾರ ಮಾಡು’

    `15 ದಿನ ಮೊದಲ ಪತಿಯ ಜೊತೆ 15 ದಿನ ಎರಡನೆಯ ಪತಿ ಜೊತೆ ಸಂಸಾರ ಮಾಡು’

    – ಉತ್ತರ ಪ್ರದೇಶ ಪಂಚಾಯತ್ ನಿಂದ ವಿಚಿತ್ರ ಆದೇಶ

    ಲಕ್ನೋ: 15 ದಿನ ಮೊದಲ ಪತಿಯ ಜೊತೆ ಇನ್ನುಳಿದ 15 ದಿನ ಎರಡನೆಯ ಪತಿ ಜೊತೆ ಸಂಸಾರ ಮಾಡು ಎಂದು ವಿಚಿತ್ರವಾದ ತೀರ್ಪನ್ನ ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಪಂಚಾಯತ್ ನೀಡಿದೆ.

    2012 ರಲ್ಲಿ ಮಹಿಳೆಯೊಬ್ಬರು ಲಾಯಕ್ ಎಂಬುವ ವ್ಯಕ್ತಿಯನ್ನ ಮದುವೆಯಾಗಿ, ಒಂದು ಮಗುವನ್ನ ಪಡೆದಿದ್ದರು. ಮಗು ಜನಿಸಿದ ಕೆಲವು ತಿಂಗಳಿನಲ್ಲಿ ವರದಕ್ಷಿಣೆಯ ಕಾರಣದಿಂದ ಲಾಯಕ್ ತನ್ನ ಪತ್ನಿಗೆ 2015ರಲ್ಲಿ ವಿಚ್ಛೇದನ ನೀಡಿದ್ದ.

    ಗಂಡನಿಂದ ಬೇರೆಯಾದ ಮಹಿಳೆ ಮಗುವಿನೊಂದಿಗೆ ತನ್ನ ತವರು ಮನೆಗೆ ಹಿಂದಿರುಗಿದ್ದಳು. 2017 ರಲ್ಲಿ ಮನೆಯವರು ಆಕೆಗೆ ಅದೇ ಊರಿನ ವ್ಯಕ್ತಿಯ ಜೊತೆ ಎರಡನೇ ಮದುವೆ ಮಾಡಿದ್ದರು. ಆದರೆ ಮೊದಲನೆಯ ಪತಿಯಾದ ಲಾಯಕ್ ಮಗುವನ್ನ ತನ್ನಿಂದ ಬಲವಂತವಾಗಿ ತೆಗೆದುಕೊಂಡು ಹೋಗಿದ್ದಾನೆ ಎಂದು ಮಹಿಳೆ ದೂರಿದ್ದಾರೆ.

    ಈ ವಿಚಾರವಾಗಿ ಪೊಲೀಸರಿಗೆ ದೂರು ಸಲ್ಲಿಸಿದರೂ ಯಾವುದೇ ಸಹಾಯ ದೊರಕದ ಕಾರಣ, ಸ್ಥಳೀಯ ಪಂಚಾಯತ್ ನ ಮೊರೆ ಹೋಗಿದ್ದರು. ಈಕೆಯ ದೂರನ್ನು ಪರಿಗಣಿಸಿ ಕಾಪ್ ಪಂಚಾಯತ್ 15 ದಿನ ಮೊದಲ ಪತಿಯ ಜೊತೆ ಇನ್ನುಳಿದ 15 ದಿನ ಎರಡನೆಯ ಪತಿಯ ಜೊತೆ ಸಂಸಾರ ಮಾಡು ಎಂದು ವಿಚಿತ್ರವಾದ ಆದೇಶವನ್ನು ನೀಡಿದೆ.

    ಈ ಆದೇಶದ ಬಳಿಕ ಮಹಿಳೆ ಸಾಮಾಜಿಕ ಕಾರ್ಯಕರ್ತರ ಮೊರೆ ಹೋಗಿದ್ದು, ಅವರು ಪೊಲೀಸರಿಂದ ಸಹಾಯ ಕೊಡಿಸುವುದಾಗಿ ಭರವಸೆ ನೀಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸಹೋದರರ ಕಾಮಾಂಧಕ್ಕೆ 5 ವರ್ಷದಿಂದ ಅಪ್ರಾಪ್ತೆ ಬಲಿ

    ಸಹೋದರರ ಕಾಮಾಂಧಕ್ಕೆ 5 ವರ್ಷದಿಂದ ಅಪ್ರಾಪ್ತೆ ಬಲಿ

    ಲಕ್ನೋ: ಸತತ ಐದು ವರ್ಷಗಳಿಂದ ತನ್ನ ತಂಗಿ ಎಂದು ನೋಡದೇ ಸಹೋದರರು ಆಕೆಯ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಮೀರತ್ ನಲ್ಲಿ ನಡೆದಿದೆ.

    15 ವರ್ಷದ ಅಪ್ರಾಪ್ತೆ ಈ ಬಗ್ಗೆ ದೂರ ದಾಖಲಿಸಿದ ಬಳಿಕ ಈ ಪ್ರಕರಣ ಬೆಳಕಿಗೆ ಬಂದಿದೆ. ಸದ್ಯಕ್ಕೆ ಆರೋಪಿಗಳಿಬ್ಬರು ತಲೆ ಮೆರೆಸಿಕೊಂಡಿದ್ದಾರೆ. ಅವರಿಗಾಗಿ ಶೋಧಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಸಂತ್ರಸ್ತೆಯ ಮೇಲೆ ಆತನ ಇಬ್ಬರು ಸಹೋದರರು ಕಳೆದ ಐದು ವರ್ಷದಿಂದ ಸತತವಾಗಿ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ. ಇದಕ್ಕೆ ಸಂತ್ರಸ್ತೆ ವಿರೋಧ ವ್ಯಕ್ತಪಡಿಸಿದ್ದರಿಂದ ಆಕೆಯ ಮೇಲೆ ಹಲ್ಲೆ ಮಾಡಿದ್ದಾರೆ. ಅಷ್ಟೇ ಅಲ್ಲದೇ ತಾಯಿಯನ್ನು ಕೊಲೆ ಮಾಡುವುದಾಗಿ ಬೆದರಿಕೆ ಒಡ್ಡಿದ್ದಾರೆ. ಆದ್ದರಿಂದ ಈವರೆಗೂ ಸಂತ್ರಸ್ತೆ ದೂರು ದಾಖಲಿಸಲಿಲ್ಲ ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.

    ಈ ಘಟನೆ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯ ಏರಿಯಾದಲ್ಲಿ ಘಟನೆ ನಡೆದಿದೆ. ಸಂತ್ರಸ್ತೆ ಮೇಲೆ ಸಹೋದರರು ಸತತ ಅತ್ಯಾಚಾರ ಎಸಗಿದ್ದಾರೆ. ಸದ್ಯ ಈ ಬಗ್ಗೆ ಬುಧವಾರ ಸಂತ್ರಸ್ತೆ ದೂರು ದಾಖಲಿಸಿದ್ದಾಳೆ. ದೂರು ದಾಖಲಾಗುತ್ತಿದ್ದಂತೆ ಆರೋಪಿಗಳು ಪರಾರಿಯಾಗಿದ್ದು, ಆರೋಪಿಗಳಿಗಾಗಿ ಹುಡುಕಾಟ ನಡೆದಿದೆ ಎಂದು ಮೀರತ್ ನಗರ ಎಸ್ಪಿ ರಣ್ ವಿಜಯ್ ಸಿಂಗ್ ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ನಾಯಿಗೆ ಹೊಡೆದಿದ್ದಕ್ಕೆ ವಿದ್ಯಾರ್ಥಿಗೆ ಗುಂಡು ಹಾರಿಸಿದ್ರು!

    ನಾಯಿಗೆ ಹೊಡೆದಿದ್ದಕ್ಕೆ ವಿದ್ಯಾರ್ಥಿಗೆ ಗುಂಡು ಹಾರಿಸಿದ್ರು!

    ಲಕ್ನೋ: ನಾಯಿಗೆ ಹೊಡೆದಿದ್ದಕ್ಕೆ 17 ವರ್ಷದ ವಿದ್ಯಾರ್ಥಿ ಮೇಲೆ ಗುಂಡು ಹಾರಿಸಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

    ಸಚಿನ್ ಕಶ್ಯಪ್ ಗುಂಡಿನ ದಾಳಿಗೆ ಒಳಗಾದ ವಿದ್ಯಾರ್ಥಿ. 11 ನೇ ತರಗತಿಯನ್ನು ಓದುತ್ತಿರುವ ಸಚಿನ್ ಶನಿವಾರದಂದು ಕಾಲೇಜಿನಿಂದ ಮನೆಗೆ ಬೈಕಿನಲ್ಲಿ ಬರುವಾಗ ನಾಯಿಯೊಂದು ಆತನನ್ನು ಹಿಂಬಾಲಿಸಿ ಬೊಗಳಿದೆ. ಇದನ್ನು ಓದಿ:  ನಾಯಿಮರಿಯಿಂದಾಗಿ 40 ವರ್ಷದ ವ್ಯಕ್ತಿಯ ಪ್ರಾಣವೇ ಹೋಯ್ತು!

    ಹಿಂಬಾಲಿಸಿ ಬೊಗಳಿದ್ದಕ್ಕೆ ಸಿಟ್ಟಾಗಿ ಆತ ಬೈಕ್ ನಿಲ್ಲಿಸಿ ನಾಯಿಗೆ ಹೊಡೆದಿದ್ದಾನೆ. ನಾಯಿಗೆ ಹೊಡೆದ ವಿಚಾರವಾಗಿ ಮೂವರು ಈತನನ್ನು ಪ್ರಶ್ನಿಸಿ ತರಾಟೆಗೆ ತೆಗೆದುಕೊಂಡಿದ್ದಾರೆ. ಜಗಳ ವಿಕೋಪಕ್ಕೆ ತೆರಳಿ ಒಬ್ಬಾತ ಕಶ್ಯಪ್ ಮೇಲೆ ಗುಂಡಿನ ದಾಳಿ ನಡೆಸಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

    ದೇಹಕ್ಕೆ ಎರಡು ಬುಲೆಟ್ ಹೊಕ್ಕಿದ್ದು, ಮೀರತ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಶ್ಯಪ್ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಿಂದ ತಿಳಿದುಬಂದಿದೆ. ಗುಂಡು ಹಾರಿಸಿ ಕೊಲೆಗೆ ಯತ್ನಿಸಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv