Tag: ludhiana court

  • ಲೂಧಿಯಾನ ಕೋರ್ಟ್ ಸ್ಫೋಟದ ಆರೋಪಿ, ಭಯೋತ್ಪಾದಕ ಹರ್‌ಪ್ರೀತ್ ಸಿಂಗ್ ಬಂಧನ

    ಲೂಧಿಯಾನ ಕೋರ್ಟ್ ಸ್ಫೋಟದ ಆರೋಪಿ, ಭಯೋತ್ಪಾದಕ ಹರ್‌ಪ್ರೀತ್ ಸಿಂಗ್ ಬಂಧನ

    ನವದೆಹಲಿ: ಕಳೆದ ವರ್ಷ ಪಂಜಾಬ್‌ನ (Punjab) ಲೂಧಿಯಾನದ ಕೋರ್ಟ್‌ನಲ್ಲಿ (Ludhiana Court) ಬಾಂಬ್ ಸ್ಫೋಟಿಸಿದ (Bomb Blast) ಪ್ರಕರಣದ ಆರೋಪಿ ಹಾಗೂ ಮೋಸ್ಟ್ ವಾಂಟೆಡ್ ಭಯೋತ್ಪಾದಕ (Terrorist) ಹರ್‌ಪ್ರೀತ್ ಸಿಂಗ್‌ನನ್ನು (Harpreet Singh) ನವದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.

    ಪಂಜಾಬ್‌ನ ಅಮೃತಸರ ನಿವಾಸಿ ಹರ್‌ಪ್ರೀತ್ ಸಿಂಗ್ ಅಲಿಯಾಸ್ ಹ್ಯಾಪಿ ಮಲೇಷ್ಯಾ ಇಂದು ಬೆಳಗ್ಗೆ ಕೌಲಾಲಂಪುರದಿಂದ ನವದೆಹಲಿ ವಿಮಾನ ನಿಲ್ದಾಣಕ್ಕೆ ಬಂದ ಕೆಲವೇ ಹೊತ್ತಿನಲ್ಲಿ ಬಂಧಿಸಲಾಗಿದೆ. ಆತನ ಬಳಿ 10 ಲಕ್ಷ ರೂ. ನಗದು ಪತ್ತೆಯಾಗಿರುವುದಾಗಿ ಎನ್‌ಐಎ ವಕ್ತಾರರು ತಿಳಿಸಿದ್ದಾರೆ.

    Ludhiana

    ಕಳೆದ ವರ್ಷ ಡಿಸೆಂಬರ್‌ನಲ್ಲಿ ಲೂಧಿಯಾನದ ಕೋರ್ಟ್ ಕಟ್ಟಡದಲ್ಲಿ ನಡೆದ ಭೀಕರ ಬಾಂಬ್ ಸ್ಫೋಟದಿಂದಾಗಿ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು, 6 ಮಂದಿ ಗಾಯಗೊಂಡಿದ್ದರು. ಈ ಬಾಂಬ್ ಸ್ಫೋಟದ ಹಿಂದೆ ಹರ್‌ಪ್ರೀತ್ ಸಿಂಗ್ ಪ್ರಮುಖ ಸಂಚನ್ನು ರೂಪಿಸಿದ್ದ ಎನ್ನಲಾಗಿದೆ. ಇದನ್ನೂ ಓದಿ: ಸಿಧು ಹತ್ಯೆಯ ಮಾಸ್ಟರ್ ಮೈಂಡ್ ಕ್ಯಾಲಿಫೋರ್ನಿಯಾದಲ್ಲಿ ಬಂಧನ

    ಈತ ಪಾಕಿಸ್ತಾನ ಮೂಲದ ಸ್ವಯಂಘೋಷಿತ ಇಂಟರ್‌ನ್ಯಾಷನಲ್ ಸಿಖ್ ಯೂತ್ ಫೆಡರೇಶನ್ (ಐಎಸ್‌ವೈಎಫ್) ಮುಖ್ಯಸ್ಥ ಲಖ್ಬೀರ್ ಸಿಂಗ್ ರೋಡ್‌ನ ಸಹವರ್ತಿಯಾಗಿದ್ದು, ಆತನೊಂದಿಗೆ ಸೇರಿಕೊಂಡೇ ಲೂಧಿಯಾನ ಸ್ಫೋಟದ ಸಂಚನ್ನು ರೂಪಿಸಿದ್ದ ಎಂಬುದು ತನಿಖೆಯಲ್ಲಿ ತಿಳಿದುಬಂದಿದೆ.

    ಹರ್‌ಪ್ರೀತ್ ಸಿಂಗ್ ಸ್ಫೋಟಕಗಳು, ಶಸ್ತ್ರಾಸ್ತ್ರಗಳು ಹಾಗೂ ಮಾದಕ ವಸ್ತುಗಳ ಕಳ್ಳಸಾಗಣೆ ಸೇರಿದಂತೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ. ಮೋಸ್ಟ್ ವಾಂಟೆಡ್ ಭಯೋತ್ಪಾದಕ ಎಂದು ಎನ್‌ಐಎ ತಿಳಿಸಿದೆ. ಇದನ್ನೂ ಓದಿ: “ಬ್ರಾಹ್ಮಣ ಭಾರತ್ ಛೋಡೋ” – ಜೆಎನ್‍ಯು ಕ್ಯಾಂಪಸ್ ಗೋಡೆಗಳ ಮೇಲೆ ವಿವಾದಾತ್ಮಕ ಬರಹ

    Live Tv
    [brid partner=56869869 player=32851 video=960834 autoplay=true]

  • ಲುಧಿಯಾನ ಕೋರ್ಟ್ ಸ್ಫೋಟ – ಡ್ರಗ್ ಕೇಸ್‌ನಲ್ಲಿ ವಜಾಗೊಂಡಿದ್ದ ಪೊಲೀಸ್ ಅಧಿಕಾರಿಯೇ ಬಾಂಬರ್

    ಚಂಡೀಗಢ: ಲುಧಿಯಾನ ಕೋರ್ಟ್ನಲ್ಲಿ ಈಚೆಗೆ ಸಂಭವಿಸಿದ ಸ್ಫೋಟದಲ್ಲಿ ಬಾಂಬ್ ಇಟ್ಟಿದ್ದ ಆರೋಪಿ ಒಬ್ಬ ಮಾಜಿ ಪೊಲೀಸ್ ಅಧಿಕಾರಿ ಎಂಬುದು ತನಿಖೆಯಿಂದ ತಿಳಿದುಬಂದಿದೆ.

    ಡಿಸೆಂಬರ್ 23 ಗುರುವಾರ ಲುಧಿಯಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಶೌಚಾಲಯದಲ್ಲಿ ಸ್ಫೋಟ ಸಂಭವಿಸಿತ್ತು. ಘಟನೆಯಲ್ಲಿ ಬಾಂಬ್ ಇಟ್ಟಿದ್ದ ವ್ಯಕ್ತಿಯೇ ಮೃತಪಟ್ಟಿದ್ದು, ಐವರು ಗಾಯಗೊಂಡಿದ್ದರು.

    ಸ್ಫೋಟದಲ್ಲಿ ಮೃತನಾಗಿದ್ದ ವ್ಯಕ್ತಿ ಮಾಜಿ ಪೊಲೀಸ್ ಅಧಿಕಾರಿ ಗಗನ್‌ದೀಪ್ ಎಂದು ಗುರುತಿಸಲಾಗಿದೆ. ಈತ 2019ರಲ್ಲಿ ಡ್ರಗ್ಸ್ ಕೇಸ್‌ನಲ್ಲಿ ಅಧಿಕಾರದಿಂದ ವಜಾಗೊಂಡಿದ್ದ. ಇದನ್ನೂ ಓದಿ: ಪಂಜಾಬ್‍ನ ಲೂಧಿಯಾನ ನ್ಯಾಯಾಲಯದಲ್ಲಿ ಸ್ಫೋಟ – 2 ಸಾವು, 4 ಮಂದಿಗೆ ಗಾಯ

    Ludhiana

    ಗಗನ್‌ದೀಪ್ ನ್ಯಾಯಾಲಯದ ಆವರಣದಲ್ಲಿ ಸ್ಫೋಟಕ ಇಟ್ಟಿದ್ದ. ಈ ಘಟನೆಯ ಹಿಂದೆ ಪಾಕಿಸ್ತಾನ ಬೆಂಬಲಿತ ಖಲಿಸ್ತಾನ್ ಪರ ಸಂಘಟನೆಯ ಬಬ್ಬರ್ ಖಲ್ಸಾ ಕೈವಾಡವಿದೆ ಎಂದು ಪೊಲೀಸ್ ಮೂಲಗಳು ಶಂಕೆ ವ್ಯಕ್ತಪಡಿಸಿವೆ.

    ಗಗನ್‌ದೀಪ್, ಡಾಂಗಲ್ ಮೂಲಕ ಮೊಬೈಲಿನಲ್ಲಿ ಇಂಟರ್‌ನೆಟ್ ಬಳಸುತ್ತಿದ್ದ. ಆತನಿಗೆ ಬಾಂಬ್ ಸಕ್ರಿಯಗೊಳಿಸುವ ಬಗ್ಗೆ ಆನ್‌ಲೈನ್‌ನಲ್ಲಿ ಯಾರೋ ಮಾಹಿತಿ ನೀಡುತ್ತಿದ್ದರು. ಈ ವೇಳೆ ಸ್ಫೋಟ ಸಂಭವಿಸಿದ್ದು, ಮೊಬೈಲ್ ಅದರೊಂದಿಗೆ ಪುಡಿಯಾಗಿದೆ ಎಂದು ಪಂಜಾಬ್ ಪೊಲೀಸರು ಶಂಕಿಸಿದ್ದಾರೆ. ಇದನ್ನೂ ಓದಿ: ಪೊಲೀಸ್ ಅಧಿಕಾರಿ, ನಾಗರಿಕ ಹತ್ಯೆ ಪ್ರಕರಣ- ಭದ್ರತಾ ಪಡೆ ಕಾರ್ಯಾಚರಣೆಯಲ್ಲಿ 2 ಉಗ್ರರ ಹತ್ಯೆ, ಇನ್ನಿಬ್ಬರ ಬಂಧನ

    ಇಂಟರ್‌ನೆಟ್ ಪಡೆಯುತ್ತಿದ್ದ ಡಾಂಗಲ್‌ನ ಸಿಮ್ ಆಧಾರದ ಮೇಲೆ ಗಗನ್‌ದೀಪ್‌ನನ್ನು ಗುರುತಿಸಲಾಗಿದೆ. ನಂತರ ಆತನ ತೋಳಿನಲ್ಲಿದ್ದ ಹಚ್ಚೆ ನೋಡಿದ ಕುಟುಂಬದವರು ಮೃತದೇಹವನ್ನು ಗುರುತಿಸಿದ್ದಾರೆ.

    ಸ್ಫೋಟಕದಲ್ಲಿ ಕನಿಷ್ಟ 2 ಕೆಜಿ ಆರ್‌ಡಿಎಕ್ಸ್ ಬಳಸಲಾಗಿದೆ ಎಂದು ವಿಧಿವಿಜ್ಞಾನ ವರದಿ ಬಹಿರಂಗ ಪಡಿಸಿದೆ. ಸ್ಫೋಟದ ಸಮಯದಲ್ಲಿ ನೀರಿನ ಪೈಪ್ ಒಡೆದು ಹೋಗಿದ್ದರಿಂದ ಸ್ಫೋಟಕಗಳು ಕೊಚ್ಚಿ ಹೋಗಿವೆ.