Tag: ludhiyana

  • ಡಿವೈಡರ್‌ಗೆ ಡಿಕ್ಕಿಯಾಗಿ ಟ್ಯಾಂಕರ್‌ ಪಲ್ಟಿ- ಫ್ಲೈಓವರ್‌ ಮೇಲೆ ಧಗಧಗಿಸಿದ ಬೆಂಕಿ

    ಡಿವೈಡರ್‌ಗೆ ಡಿಕ್ಕಿಯಾಗಿ ಟ್ಯಾಂಕರ್‌ ಪಲ್ಟಿ- ಫ್ಲೈಓವರ್‌ ಮೇಲೆ ಧಗಧಗಿಸಿದ ಬೆಂಕಿ

    ಚಂಡೀಗಢ: ಪಂಜಾಬ್‌ನ  ಲೂಧಿಯಾನದಲ್ಲಿ  (Punjab’s Ludhiana)  ಫ್ಲೈಓವರ್‌ ಮೇಲೆ ಬೆಂಕಿಯ ಕೆನ್ನಾಲಿಗೆ ಧಗಧಗಿಸುತ್ತಿರುವ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ (Social Media) ಸಖತ್‌ ವೈರಲ್‌ ಆಗುತ್ತಿದೆ.

    ಲೂಧಿಯಾನದ ಖನ್ನಾ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಆಯಿಲ್‌ ತುಂಬಿ ಹೊರಟಿದ್ದ ಟ್ಯಾಂಕರ್‌ (Oil Tanker) ಫ್ಲೈಓವರ್‌ನ ಡಿವೈಡರ್‌ಗೆ ಡಿಕ್ಕಿಯಾಗಿ ಪಲ್ಟಿಯಾಗಿದೆ. ಪರಿಣಾಮ ಬೆಂಕಿ ಹೊತ್ತಿ ಉರಿದಿದೆ.

    ಘಟನೆಯ ಹಿನ್ನೆಲೆಯಲ್ಲಿ ಕೆಲ ಕಾಲ ಆ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ. ಇನ್ನು ಫ್ಲೈಓವರ್‌ನಲ್ಲಿ ಬೆಂಕಿಯ ಕೆನ್ನಾಲಿಗೆ ಆಕಾಶದೆತ್ತರಕ್ಕೆ ಹೊತ್ತಿ ಉರಿಯುತ್ತಿದ್ದರೆ,ಇದರ ಕೆಳಗೆ ವಾಹನಗಳು ಚಲಿಸುತ್ತಿದ್ದವು. ಸದ್ಯಕ್ಕೆ ಯಾವುದೇ ಪ್ರಾಣಹಾನಿ ಅಥವಾ ಗಂಭೀರ ಗಾಯಗಳ ಬಗ್ಗೆ ವರದಿಯಾಗಿಲ್ಲ. ಇದನ್ನೂ ಓದಿ: ಮಕ್ಕಳು ಹೂ ಕಿತ್ತಿದ್ದಕ್ಕೆ ಅಂಗನವಾಡಿ ಸಹಾಯಕಿ ಮೂಗು ಕತ್ತರಿಸಿದ ಮಾಲೀಕ

    ಘಟನೆಯ ಫೋಟೋಗಳು ಮತ್ತು ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಸಖತ್‌ ವೈರಲ್‌ ಆಗಿವೆ. ಘಟನೆಯ ವಿಚಾರ ಸುದ್ದಿಯಾಗುತ್ತಿದ್ದಂತೆಯೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವಲ್ಲಿ ಹರಸಾಹಸಪಟ್ಟಿದ್ದಾರೆ. ಈ ಮೂಲಕ ಭಾರೀ ಅನಾಹುತವನ್ನು ತಡೆಯಲು ಪ್ರಯತ್ನಿಸಿವೆ.

  • ರಾಹುಲ್ ಗಾಂಧಿ ಮುಖಕ್ಕೆ ಧ್ವಜವನ್ನು ಎಸೆದ ವ್ಯಕ್ತಿ

    ರಾಹುಲ್ ಗಾಂಧಿ ಮುಖಕ್ಕೆ ಧ್ವಜವನ್ನು ಎಸೆದ ವ್ಯಕ್ತಿ

    ಚಂಡೀಗಢ: ವ್ಯಕ್ತಿಯೊಬ್ಬ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಮುಖಕ್ಕೆ ಕಾಂಗ್ರೆಸ್ ಪಕ್ಷದ ಧ್ವಜವನ್ನು ಎಸೆದ ಘಟನೆ ಇಂದು ಪಂಜಾಬ್‍ನ ಲುಧಿಯಾನದಲ್ಲಿ ನಡೆದಿದೆ.

    ಭದ್ರತಾ ಲೋಪದಲ್ಲಿ ಅವರ ಮುಖಕ್ಕೆ ಧ್ವಜ ಹಾಕಲಾಗಿದೆ. ರಾಹುಲ್ ಗಾಂಧಿ ಕುಳಿತಿದ್ದ ಕಾರನ್ನು ಪಂಜಾಬ್ ಕಾಂಗ್ರೆಸ್ ಉಸ್ತುವಾರಿ ಸುನಿಲ್ ಜಾಖರ್ ಓಡಿಸುತ್ತಿದ್ದರು. ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ ಮತ್ತು ಪಕ್ಷದ ರಾಜ್ಯ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಕಾರಿನ ಹಿಂದಿನ ಸೀಟುಗಳಲ್ಲಿ ಕುಳಿತಿದ್ದರು. ಇದನ್ನೂ ಓದಿ: ಚುನಾವಣೆಗೆ ತಯಾರಿ – ಮಂಗಳಮುಖಿಯರ ಮೊರೆ ಹೋದ ನಾರಾ ಭರತ್ ರೆಡ್ಡಿ

    ರಾಹುಲ್ ಗಾಂಧಿ ಕಾರಿನ ಮುಂದಿನ ಸೀಟಿನಲ್ಲಿ ಕುಳಿತಿದ್ದು ತಮ್ಮ ಪಕ್ಷದ ಬೆಂಬಲಿಗರನ್ನು ಸ್ವಾಗತಿಸಲು ಅವರ ಕಿಟಕಿ ತೆರೆದಿತ್ತು. ಈ ಸಂದರ್ಭದಲ್ಲಿ ವ್ಯಕ್ತಿಯೊಬ್ಬನು ರಾಹುಲ್ ಅವರ ಕಿಟಕಿಯ ಮೇಲೆ ಬಹಳ ದೂರದಿಂದ ಧ್ವಜವನ್ನು ಎಸೆದಿದ್ದಾನೆ. ಇದನ್ನೂ ಓದಿ: ಸಿಎಂ ತವರು ಜಿಲ್ಲೆಗೂ ಕಾಲಿಟ್ಟ ಹಿಜಬ್, ಕೇಸರಿ ಶಾಲು ಫೈಟ್ – ವಿದ್ಯಾರ್ಥಿಗಳನ್ನ ಹೊರಹಾಕಿದ ಕಾಲೇಜು ಸಿಬ್ಬಂದಿ

    ಪಂಜಾಬ್‍ನಲ್ಲಿ ಇದು ಎರಡನೇ ಭದ್ರತಾ ಲೋಪವಾಗಿದೆ. ಕೆಲವು ದಿನಗಳ ಹಿಂದೆ, ಪ್ರಧಾನಿ ನರೇಂದ್ರ ಮೋದಿ ಅವರ ಕಾರು 20 ನಿಮಿಷಗಳ ಕಾಲ ಫ್ಲೈಓವರ್‍ನಲ್ಲಿ ಸಿಲುಕಿಕೊಂಡಿತ್ತು.

  • ಪ್ರಧಾನಿ ಮೋದಿಗೆ ಭದ್ರತೆ ನೀಡ್ತಿದ್ದ ಲ್ಯಾಬ್ರಡರ್ ನಾಯಿಗೆ ಆಪರೇಶನ್

    ಪ್ರಧಾನಿ ಮೋದಿಗೆ ಭದ್ರತೆ ನೀಡ್ತಿದ್ದ ಲ್ಯಾಬ್ರಡರ್ ನಾಯಿಗೆ ಆಪರೇಶನ್

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಭದ್ರತೆಗೆ ನಿಯೋಜನೆಗೊಂಡಿದ್ದ ಶ್ವಾನ ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದೆ.

    9 ವರ್ಷದ ಲ್ಯಾಬ್ರಾಡರ್ ತಳಿಯ ಕಪ್ಪು ಶ್ವಾನ ಹಲ್ಲುನೋವಿನಿಂದ ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಪಂಜಾಬಿನ ಲೂಧಿಯಾನದ ಗುರು ಅಂಗದ್ ದೇವ್ ವೆಟರ್ನಿಟಿ ಆಂಡ್ ಅನಿಮಲ್ ಸೈನ್ಸ್ ಯೂನಿವರ್ಸಿಟಿಯಲ್ಲಿ ಸರ್ಜರಿಗೆ ಒಳಗಾಗಿದೆ.

    ಮೋದಿ ಭದ್ರತೆಯಲ್ಲಿ ಈ ಶ್ವಾನ ಪ್ರಮುಖ ಪಾತ್ರವಹಿಸುತ್ತಿದ್ದು, ದೊಡ್ಡ ಮೊತ್ತದ ಬಹುಮಾನವನ್ನು ಗೆದ್ದುಕೊಂಡಿದೆ. ಅತ್ಯುತ್ತಮ ಪತ್ತೆ ಕಾರ್ಯಕ್ಕಾಗಿ ಗೃಹ ಸಚಿವಾಲಯ ನೀಡುವ 15 ಲಕ್ಷ ರೂ. ಬಹುಮಾನವನ್ನು ಗೆದ್ದುಕೊಂಡ ಹೆಗ್ಗಳಿಕೆ ಈ ನಾಯಿಗಿದೆ. ಈ ಕಪ್ಪು ಬಣ್ಣದ ಲ್ಯಾಬ್ರಡರ್ ಕಳೆದ 6 ವರ್ಷಗಳಿಂದ ಪ್ರಧಾನಿಯ ಭದ್ರತಾ ತಂಡದ ಜೊತೆಗಿದೆ.

    ಶಸ್ತ್ರಚಿಕಿತ್ಸೆ ಯಾಕೆ?

    ಬಾಯಿಯಲ್ಲಿ ಗಡ್ಡೆ ಬೆಳೆದಿದ್ದು, ಇದರಿಂದ ಶ್ವಾನಕ್ಕೆ ಆಹಾರ ಸೇವಿಸಲು ಸಾಧ್ಯವಾಗುತ್ತಿರಲಿಲ್ಲ. ಹೀಗಾಗಿ ಅಸ್ವಸ್ಥವಾಗಿದ್ದ ಶ್ವಾನವನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗಡ್ಡೆಯನ್ನು ಕೂಡಲೇ ತೆಗೆಯಬೇಕು. ಇಲ್ಲವೆಂದಲ್ಲಿ ಇದು ಬಾಯಿಯ ಇತರ ಕಡೆ ಪಸರಿಸುವ ಸಾಧ್ಯತೆ ಇತ್ತು. ಅಷ್ಟೇ ಅಲ್ಲದೇ ಹಲ್ಲುಗಳಿಗೂ ಇದರಿಂದ ತೊಂದೆಯಾಗುವ ಸಾಧ್ಯತೆ ಇತ್ತು ಎಂದು ಮೂಲಗಳು ತಿಳಿಸಿವೆ. ಈಗ ಗಡ್ಡೆಯನ್ನು ಹೊರತೆಗೆಯಲಾಗಿದ್ದು, ಸದ್ಯ ಶ್ವಾನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದೆ.