Tag: luknow

  • ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಕ ಸಾವು

    ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಕ ಸಾವು

    ಲಕ್ನೋ: ದೆಹಲಿಯಿಂದ ಲಕ್ನೋಗೆ ಪ್ರಯಾಣಿಸಿದ್ದ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಕರೊಬ್ಬರು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಲಕ್ನೋ (Lucknow) ಚೌಧರಿ ಚರಣ್ ಸಿಂಗ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Chaudhary Charan Singh International Airport) ನಡೆದಿದೆ.

    ಮೃತರನ್ನು ಬಿಹಾರದ (Bihar) ಗೋಪಾಲ್‌ಗಂಜ್‌ನ ಆಸಿಫುಲ್ಲಾ ಅನ್ಸಾರಿ(52) ಎಂದು ಗುರುತಿಸಲಾಗಿದೆ. ಬೆಳಗ್ಗೆ 8:10ಕ್ಕೆ ವಿಮಾನ ಲಕ್ನೋದ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆದ ನಂತರ, ಸಿಬ್ಬಂದಿ ಆಸಿಫುಲ್ಲಾರೊಂದಿಗೆ ಮಾತನಾಡಲು ಪ್ರಯತ್ನಿಸಿದರು. ಇದನ್ನೂ ಓದಿ: ಜಾನ್ವಿ ಕಪೂರ್‌ಗೆ ವಿಶೇಷ ಉಡುಗೊರೆ ನೀಡಿದ ರಾಮ್ ಚರಣ್ ಪತ್ನಿ

    ಈ ವೇಳೆ ಆಸಿಫುಲ್ಲಾರಿಂದ ಯಾವುದೇ ಪ್ರತಿಕ್ರಿಯೆ ಸಿಕ್ಕಿರಲಿಲ್ಲ. ವಿಮಾನದಲ್ಲಿದ್ದ ವೈದ್ಯರು ಪರೀಕ್ಷಿಸಿ ಅವರು ಮೃತಪಟ್ಟಿದ್ದಾರೆ ಎಂದು ದೃಢಪಡಿಸಿದರು. ಪ್ರಯಾಣದ ಮಧ್ಯೆ ಆಸಿಫುಲ್ಲಾ ಅವರು ಮೃತಪಟ್ಟಿರಬಹುದು ಎನ್ನಲಾಗಿದೆ. ಇದನ್ನೂ ಓದಿ: ವಿಧಾನಸಭೆಯಲ್ಲಿ ಕೋಲಾಹಲ- ಸ್ಪೀಕರ್‌ ಮೇಲೆ ಪೇಪರ್‌ ಎಸೆತ

    ಮರಣೋತ್ತರ ಪರೀಕ್ಷೆಗೆ ಮೃತ ದೇಹ ರವಾಸಿದ್ದಾರೆ. ಬಳಿಕವೇ ಸಾವಿನ ನಿಖರ ಕಾರಣ ತಿಳಿಯಲಿದೆ ಎಂದು ಮೂಲಗಳು ತಿಳಿಸಿವೆ.

  • ನಿಯಂತ್ರಣ ತಪ್ಪಿ ಟ್ರಕ್‌ಗೆ ಕಾರು ಡಿಕ್ಕಿ- 6 ಮಂದಿ ದುರ್ಮರಣ

    ನಿಯಂತ್ರಣ ತಪ್ಪಿ ಟ್ರಕ್‌ಗೆ ಕಾರು ಡಿಕ್ಕಿ- 6 ಮಂದಿ ದುರ್ಮರಣ

    ಲಕ್ನೋ: ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ದಾರುಣವಾಗಿ ಮತಪಟ್ಟ ಘಟನೆ ಉತ್ತರ ಪ್ರದೇಶದ (Uttar Pradesh) ದೆಹಲಿ-ಲಕ್ನೋ ಹೆದ್ದಾರಿಯಲ್ಲಿ ನಡೆದಿದೆ.

    ಹಾಪುರ್‌ನ ಗರ್ಹ್ ಕೊಟ್ವಾಲಿ ಪ್ರದೇಶದಲ್ಲಿರುವ ಬ್ರಜ್‌ಘಾಟ್ ಟೋಲ್ ಪ್ಲಾಜಾ ಬಳಿ ಸಂಭವಿಸಿದ ಈ ಘಟನೆಯಲ್ಲಿ ಓರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ. ಇದನ್ನೂ ಓದಿ: ಬುರ್ಖಾ ತೆಗೆದು ವೋಟರ್‌ ಐಡಿ ತೋರಿಸಲು ಹೇಳಿದ ಮಾಧವಿ ಲತಾ ವಿರುದ್ಧ ಪ್ರಕರಣ ದಾಖಲು

    ಈ ಸಂಬಂಧ ಸಿಎಚ್‌ಸಿ ಗರಮುಕ್ತೇಶ್ವರ ಡಾ.ಸುಜೀತ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ಘಟನಯಲ್ಲಿ ಸಾವನ್ನಪ್ಪಿದ 6 ಮಂದಿಯ ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಹತ್ತಿರದ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಹೇಳಿದರು.

    ಮಧ್ಯರಾತ್ರಿ 12.30ರ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ವರ್ಮಾ ತಿಳಿಸಿದ್ದಾರೆ. ಮೃತರ ಗುರುತು ಪತ್ತೆ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದರು.

  • ಜ್ಞಾನವಾಪಿ ಮಸೀದಿ ವಿವಾದ – ಇಂದು ಜಿಲ್ಲಾ ಕೋರ್ಟ್‌ಗೆ ವರದಿ ಸಲ್ಲಿಕೆ

    ಜ್ಞಾನವಾಪಿ ಮಸೀದಿ ವಿವಾದ – ಇಂದು ಜಿಲ್ಲಾ ಕೋರ್ಟ್‌ಗೆ ವರದಿ ಸಲ್ಲಿಕೆ

    ಲಕ್ನೋ: ಜ್ಞಾನವಾಪಿ (Gyanvapi)  ಸಮೀಕ್ಷೆಯ ವರದಿಯನ್ನು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಇಂದು ಜಿಲ್ಲಾ ನ್ಯಾಯಾಲಯಕ್ಕೆ ಸಲ್ಲಿಸಲಿದೆ.

    ಅಧೀಕ್ಷಕ ಪುರಾತತ್ವಶಾಸ್ತ್ರಜ್ಞ ಅವಿನಾಶ್ ಮೊಹಾಂತಿ (Avinash Mohanty) ಅವರ ರಕ್ತದೊತ್ತಡ ಹಠಾತ್ ಹೆಚ್ಚಳ ಮತ್ತು ಆರೋಗ್ಯ ಹದಗೆಟ್ಟಿದ್ದರಿಂದ ಡಿಸೆಂಬರ್ 11ರಂದು ವರದಿ ಸಲ್ಲಿಸಲು ಸಾಧ್ಯವಾಗಿರಲಿಲ್ಲ. ಈ ಹಿನ್ನೆಲೆ ಕೋರ್ಟ್ ಒಂದಿ ವಾರದ ಸಮಯ ನೀಡಿತ್ತು. ಜಿಲ್ಲಾ ನ್ಯಾಯಾಧೀಶ ಡಾ.ಅಜಯ್ ಕೃಷ್ಣ ವಿಶ್ವೇಶ್ ಅವರ ಆದೇಶದ ಮೇರೆಗೆ ಎಎಸ್‍ಐ ಜ್ಞಾನವಾಪಿ ಮಸೀದಿಯಮ ಆವರಣದಲ್ಲಿ ಜುಲೈ 24ರಂದು ಸರ್ವೆ ಕಾರ್ಯ ಆರಂಭಿಸಲಾಗಿದ್ದು, ನವೆಂಬರ್ ನ.2ರಂದು ಸರ್ವೆ ಕಾರ್ಯ ಪೂರ್ಣಗೊಂಡಿತ್ತು.

    ಸರ್ವೆ ಬಳಿಕ ವರದಿಯನ್ನು ಸಿದ್ಧಪಡಿಸಲು 15 ದಿನಗಳ ಹೆಚ್ಚುವರಿ ನೀಡಲಾಗಿತ್ತು. ಬಳಿಕ ವಿವಿಧ ಹಂತದಲ್ಲಿ ನ್ಯಾಯಾಲಯವು ವರದಿ ಸಲ್ಲಿಸಲು ನಾಲ್ಕು ಬಾರಿ ಹೆಚ್ಚುವರಿ ಸಮಯವನ್ನು ನೀಡಿದೆ. ಇಂತಹ ಪರಿಸ್ಥಿತಿಯಲ್ಲಿ ಇಂದು ಎಎಸ್‍ಐ ನ್ಯಾಯಾಲಯಕ್ಕೆ ವರದಿ ಸಲ್ಲಿಸುತ್ತಾರಾ ಅಥವಾ ಮತ್ತೊಮ್ಮೆ ಹೆಚ್ಚುವರಿ ಕಾಲಾವಕಾಶ ಕೋರುತ್ತಾರಾ ಎಂಬುದು ಕುತೂಹಲ ಮೂಡಿಸಿದೆ. ಇದನ್ನೂ ಓದಿ: ಜ್ಞಾನವಾಪಿ ಮಸೀದಿ ಸಮೀಕ್ಷೆ ವರದಿ ಸಲ್ಲಿಕೆಗೆ ನೀಡಿದ್ದ ಗಡುವು ಅಂತ್ಯ

  • 6 ತಿಂಗಳಿಂದ ಕಚೇರಿಗೆ ಬರದೇ ಸಂಬಳ ಪಡೀತಿದ್ದ ಮಹಿಳಾ ಅಧಿಕಾರಿ ವಜಾಗೊಳಿಸಿದ ಬ್ರಿಜೇಶ್ ಪತಕ್

    6 ತಿಂಗಳಿಂದ ಕಚೇರಿಗೆ ಬರದೇ ಸಂಬಳ ಪಡೀತಿದ್ದ ಮಹಿಳಾ ಅಧಿಕಾರಿ ವಜಾಗೊಳಿಸಿದ ಬ್ರಿಜೇಶ್ ಪತಕ್

    ಲಕ್ನೋ: ಕಳೆದ 6 ತಿಂಗಳಿನಿಂದ ಕಚೇರಿಗೆ ಬಾರದೇ ಸಂಬಳ ಪಡೆಯುತ್ತಿರುವ ಆರೋಪದ ಮೇಲೆ ಮಹಿಳಾ ಅಧಿಕಾರಿಯನ್ನು ಉತ್ತರಪ್ರದೇಶ (UttarPradesh) ದ ಉಪಮುಖ್ಯಮಂತ್ರಿ ಬ್ರಿಜೇಶ್ ಪತಕ್ (Brijesh Pathak) ವಜಾಗೊಳಿಸಿದ್ದಾರೆ.

    ಅಮ್ರೋಹ ಜಿಲ್ಲೆಯ ಡೆಪ್ಯುಟಿ ಚೀಫ್ ಮೆಡಿಕಲ್ ಆಫೀಸರ್ (CMO) ಇಂದು ಬಾಳ ಶರ್ಮಾ ಅವರನ್ನು ಕೆಲಸದಿಂದ ವಜಾ ಮಾಡಲಾಗಿದೆ. ಇವರು ಕಳೆದ 6 ತಿಂಗಳಿನಿಂದ ಕಚೇರಿಗೆ ಬರುತ್ತಿರಲಿಲ್ಲ. ಆದರೆ ತಮ್ಮ ಹಾಜರಾತಿ ಪುಸ್ತಕದಲ್ಲಿ ನಕಲಿ ಸಹಿ ಮಾಡುತ್ತಿದ್ದರು. ಈ ಮೂಲಕ ಪ್ರತಿ ತಿಂಗಳು ಸಂಬಳ ಪಡೆಯುತ್ತಿದ್ದರು ಎಂಬ ಆರೋಪ ಕೇಳಿ ಬಂದಿದೆ. ಇದನ್ನೂ ಓದಿ: ನಿದ್ದೆಗೆ ಜಾರಿದ್ದ ವೇಳೆ ಮುಖದ ಮೇಲೆ ಮಲ ವಿಸರ್ಜಿಸಿದ ಶ್ವಾನ- ಮಹಿಳೆ ಆಸ್ಪತ್ರೆಗೆ ದಾಖಲು

    ಈ ಪ್ರಕರಣ ಸಂಬಂಧ ಅಂದಿನ ಸಿಎಂಒ ಸಂಜಯ್ ಅಗರ್‍ವಾಲ್ ಅವರು ತನಿಖೆ ನಡೆಸುವಂತೆ ಇಲಾಖೆಗೆ ಆದೇಶ ನೀಡಿದ್ದರು. ಇದೀಗ ಬ್ರಿಜೇಶ್ ಪತಕ್ ಅವರು ಈ ಕುರಿತು ಕ್ರಮ ಕೈಗೊಂಡಿದ್ದು, ವೇತನ ನೀಡುವ ಉಸ್ತುವಾರಿ ಹೊತ್ತಿದ್ದ ಸಂತೋಷ್ ಕುಮಾರ್ ವಿರುದ್ಧವೂ ಕ್ರಮಕ್ಕೆ ಆದೇಶ ಹೊರಡಿಸಲಾಗಿದೆ. ಈ ವಿಚಾರದಲ್ಲಿ ಭಾಗಿಯಾಗಿರುವ ಎಲ್ಲ ನೌಕರರ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಾಗೂ ಎಫ್‍ಐಆರ್‌ (FIR) ದಾಖಲಿಸುವಂತೆಯೂ ಕೋರಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಆರ್‌ಬಿಐ ಪರಿಶೀಲನೆ ವೇಳೆ ನಕಲಿ ನೋಟುಗಳು ಪತ್ತೆ

    ಆರ್‌ಬಿಐ ಪರಿಶೀಲನೆ ವೇಳೆ ನಕಲಿ ನೋಟುಗಳು ಪತ್ತೆ

    ಲಕ್ನೋ: ನೋಟುಗಳ ಪರಿಶೀಲನೆ ವೇಳೆ 454 ನಕಲಿ ನೋಟುಗಳು ಪತ್ತೆಯಾಗಿರುವ ಬಗ್ಗೆ ಆರ್‌ಬಿಐ ಸಹಾಯಕ ವ್ಯವಸ್ಥಾಪಕ ಸತ್ಯವೀರ್ ಸಿಂಗ್ ದೂರು ದಾಖಲಿಸಿದ್ದಾರೆ.

    ಲಕ್ನೋದ ಆಡಿಟ್‌ನಲ್ಲಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಚೆಸ್ಟ್‌ನಲ್ಲಿ 47,710 ರೂ. ಮೌಲ್ಯದ ನಕಲಿ ನೋಟುಗಳು ಪತ್ತೆಯಾಗಿವೆ. ನೋಟುಗಳ ಪರಿಶೀಲನೆಯ ವೇಳೆ 454 ನಕಲಿ ನೋಟುಗಳು ಪತ್ತೆಯಾಗಿರುವ ಬಗ್ಗೆ ಆರ್‌ಬಿಐ ವ್ಯವಸ್ಥಾಪಕ ಸತ್ಯವೀರ್ ಸಿಂಗ್ ದೂರು ದಾಖಲಿಸಿಕೊಂಡಿದ್ದಾರೆ.

    ನಕಲಿ ನೋಟುಗಳಲ್ಲಿ 10 ರೂ.ಯ 1 ನೋಟು, 50 ರೂ.ಯ 18 ನೋಟುಗಳು, 100 ರೂ.ಯ 443 ನೋಟುಗಳು, 500 ರೂ. ಹಾಗೂ 2,000 ರೂ.ಯ ಒಂದೊಂದು ನಕಲಿ ನೋಟುಗಳು ಪತ್ತೆಯಾಗಿವೆ ಎಂದು ಸತ್ಯವೀರ್ ಸಿಂಗ್ ಎಫ್‌ಐಆರ್‌ನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಇಂಟರ್​ನೆಟ್ ಇಲ್ಲದೆ ಆನ್‍ಲೈನ್‍ನಲ್ಲಿ ಹಣ ಕಳುಹಿಸಿ!

    RBI

    ನಕಲಿ ನೋಟುಗಳ ಮುದ್ರಣ ಹಾಗೂ ಚಲಾವಣೆ ಗಂಭೀರ ಅಪರಾಧ. ಪ್ರಕರಣ ದಾಖಲಾದ ಬಳಿಕ ತನಿಖೆಗಾಗಿ ಅವುಗಳನ್ನು ಕರೆನ್ಸಿ ಪ್ರಿಂಟಿಂಗ್ ಪ್ರೆಸ್ ಅಥವಾ ಫೊರೆನ್ಸಿಕ್ ಲ್ಯಾಬ್‌ಗೆ ಕಳುಹಿಸಬಹುದು ಎಂದು ಹೇಳಿದರು. ಇದನ್ನೂ ಓದಿ: ಕೇಂದ್ರದ ಶೆ.50ರಷ್ಟು ಸಿಬ್ಬಂದಿಗೆ ವರ್ಕ್ ಫ್ರಂ ಹೋಂ

    ನಕಲಿ ನೋಟುಗಳನ್ನು ಅಸಲಿ ನೋಟುಗಳ ಮೌಲ್ಯದಲ್ಲಿ ಬಳಸಿರುವ ಆರೋಪದಡಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಠಾಣಾಧಿಕಾರಿ ದಿನೇಶ್ ಚಂದ್ರ ಮಿಶ್ರಾ ತಿಳಿಸಿದ್ದಾರೆ. ಕಳೆದವರ್ಷವೂ ಆರ್‌ಬಿಐ ಪರಿಶೀಲನೆ ವೇಳೆ 20 ಹಾಗೂ 100 ರೂ. ಮುಖಬೆಲೆಯ 44 ನಕಲಿ ನೋಟುಗಳು ಪತ್ತೆಯಾಗಿದ್ದವು.

  • ನಾಳೆ ಬಾಬರಿ ಮಸೀದಿ ಧ್ವಂಸಗೊಂಡ ದಿನ- ಮಥುರಾದಲ್ಲಿ ನಿಷೇಧಾಜ್ಞೆ ಜಾರಿ

    ನಾಳೆ ಬಾಬರಿ ಮಸೀದಿ ಧ್ವಂಸಗೊಂಡ ದಿನ- ಮಥುರಾದಲ್ಲಿ ನಿಷೇಧಾಜ್ಞೆ ಜಾರಿ

    ಲಕ್ನೋ: ಬಾಬರಿ ಮಸೀದಿ ಧ್ವಂಸಗೊಳಿಸಿದ ದಿನವಾದ ಡಿ.6ರಂದು ಯಾವುದೇ ಅಹಿತಕರ ಘಟನೆ ನಡೆಯದಂತೆ ಅಯೋಧ್ಯೆಯಲ್ಲಿ ಮುನ್ನೆಚ್ಚರಿಕೆ ವಹಿಸಲಾಗುತ್ತಿದ್ದು, ಮಥುರಾದಲ್ಲೂ ಭದ್ರತೆ ಹೆಚ್ಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಈ ಹಿಂದೆ ಕೃಷ್ಣ ಜನ್ಮಭೂಮಿ ಮಥುರಾದಲ್ಲಿ ಕಾರ್ಯಕ್ರಮಗಳನ್ನು ನಡೆಸಲು ಬಲಪಂಥೀಯ ಗುಂಪುಗಳಾದ ಅಖಿಲ ಭಾರತ ಹಿಂದೂ ಮಹಾಸಭಾ, ಶ್ರೀಕೃಷ್ಣ ಜನ್ಮಭೂಮಿ ನಿರ್ಮಾಣ ನ್ಯಾಸ್, ನಾರಾಯಣಿ ಸೇನೆ ಮತ್ತು ಶ್ರೀಕೃಷ್ಣ ಮುಕ್ತಿ ದಳಗಳು ಅನುಮತಿ ಕೋರಿದ್ದವು.

    ಅಷ್ಟೆ ಅಲ್ಲದೇ ದೇವರ ನಿಜವಾದ ಜನ್ಮಸ್ಥಳದಲ್ಲಿ ಕೃಷ್ಣನ ವಿಗ್ರಹವನ್ನು ಸ್ಥಾಪಿಸಲು ಅಖಿಲ ಭಾರತ ಹಿಂದೂ ಮಹಾಸಭಾ ಅನುಮತಿ ಕೋರಿತ್ತು. ಆದರೆ ಕೃಷ್ಣನ ಜನ್ಮಸ್ಥಳ ಇಲ್ಲಿನ ಪ್ರಮುಖ ದೇವಾಲಯದ ಸಮೀಪವಿರುವ ಮಸೀದಿಯಲ್ಲಿದೆ ಎಂದು ಹಿಂದೂ ಸಂಘಟನೆಗಳು ವಾದಿಸಿದ್ದವು. ಅದನ್ನು ಜಿಲ್ಲಾ ಮ್ಯಾಜಿಸ್ಟ್ರೇಟ್ ನವನೀತ್ ಸಿಂಗ್ ಚಾಹಲ್ ತೀರಸ್ಕರಿಸಿ, ಶಾಂತಿ ಕದಡುವ ಯಾವುದೇ ಕಾರ್ಯಕ್ರಮಕ್ಕೆ ಅನುಮತಿ ನೀಡುವುದಿಲ್ಲ ಎಂದಿದ್ದರು. ಇದನ್ನೂ ಓದಿ: ಒಂದೇ ದಿನ ಕೋಟಿ ಲಸಿಕೆ ನೀಡಿಕೆ-5ನೇ ಸಲ ದಾಖಲೆ

    ಈ ಹಿನ್ನೆಲೆಯಲ್ಲಿ ಮಥುರಾದಲ್ಲಿ ನಿಷೇಧಾಜ್ಞೆಗಳು ಜಾರಿಗೊಳಿಸಲಾಗಿದೆ. ಜೊತೆಗೆ ಹೆಚ್ಚಿನ ಭದ್ರತೆಗಾಗಿ ಮಥುರಾವನ್ನು ಮೂರು ವಲಯಗಳಾಗಿ ವಿಂಗಡಿಸಲಾಗಿದೆ. ಕತ್ರ ಕೇಶವ ದೇವ್ ದೇವಸ್ಥಾನ ಮತ್ತು ಶಾಹಿ ಈದ್ಗಾ ಪ್ರದೇಶವನ್ನು ಕೆಂಪು ವಲಯ ಎಂದು ಗುರುತಿಸಲಾಗಿದೆ. ಅಲ್ಲಿ ಹೆಚ್ಚಿನ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಈ ಪ್ರವೇಶ ಕೇಂದ್ರಗಳಲ್ಲಿ ತಪಾಸಣೆಯನ್ನು ತೀವ್ರಗೊಳಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಕಾಫಿನಾಡಲ್ಲಿ ಪುನೀತ್ ರಾಜ್‍ಕುಮಾರ್ ಸ್ಮರಣಾರ್ಥ ಅಪ್ಪು ಕಪ್ ಕ್ರಿಕೆಟ್ ಪಂದ್ಯಾವಳಿ

  • ದೇಶ ವಿಭಜನೆಗೆ ಅಂದಿನ ಕಾಂಗ್ರೆಸ್ ನಾಯಕರೇ ಕಾರಣ: ಓವೈಸಿ

    ದೇಶ ವಿಭಜನೆಗೆ ಅಂದಿನ ಕಾಂಗ್ರೆಸ್ ನಾಯಕರೇ ಕಾರಣ: ಓವೈಸಿ

    ಲಕ್ನೋ: ದೇಶ ವಿಭಜನೆ ಮುಸ್ಲಿಮರಿಂದ ಅಲ್ಲ, ಬದಲಿಗೆ ಮೊಹಮ್ಮದ್ ಜಿನ್ನಾ ಅವರಿಂದ ಆಗಿದೆ. ದೇಶ ವಿಭಜನೆಗೆ ಅಲ್ಲಿನ ಕಾಂಗ್ರೆಸ್ ಹಾಗೂ ಆ ಸಮಯದಲ್ಲಿದ್ದ ನಾಯಕರೇ ಕಾರಣರಾಗಿದ್ದಾರೆ ಎಂದು ಎಂಐಎಂಐಎಂ ನಾಯಕ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ.

    ಭಾರತೀಯ ಸಮಾಜ ಪಕ್ಷದ ಮುಖ್ಯಸ್ಥ ಸುಹೇಲ್‍ದೇವ್ ಹೇಳಿಕೆಗೆ ಮೊರದಬಾದ್‍ನಲ್ಲಿ ನಡೆದ ಸಾರ್ವಜನಿಕ ರ‍್ಯಾಲಿಯಲ್ಲಿ ಮಾತನಾಡುತ್ತಾ ಓವೈಸಿ ಟೀಕೆ ವ್ಯಕ್ತಪಡಿಸಿದ್ದಾರೆ. ಇತಿಹಾಸವನ್ನು ಓದದ ರಾಷ್ಟ್ರೀಯ ಸ್ವಯಂ ಸೇವಕ ಸಂಘ, ಭಾರತೀಯ ಜನತಾ ಪಕ್ಷ ಮತ್ತು ಸಮಾಜವಾದಿ ಪಕ್ಷದವರಿಗೆ ನಾನು ಸವಾಲು ಹಾಕುತ್ತೇನೆ.

    ಮುಸ್ಲಿಮರಿಂದ ಅಲ್ಲ ಜಿನ್ನಾ ಅವರಿಂದಾಗಿ ದೇಶ ವಿಭಜನೆ ಆಗಿದೆ. ಆ ಸಮಯದಲ್ಲಿ ಕೇವಲ ಮುಸ್ಲಿಮರು ಹಾಗೂ ನವಾಬರು ಮಾತ್ರವೇ ಜಿನ್ನಾ ಅವರಿಗೆ ಮತವನ್ನು ನೀಡಬಹುದಿತ್ತು. ಆ ಸಮಯದಲ್ಲಿ ಗೆದ್ದ ಕಾಂಗ್ರೆಸ್ ನಾಯಕರೇ ವಿಭಜನೆಗೆ ಕಾರಣರಾಗಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಪೇಂಟಿಂಗ್‌ ಕೆಲಸಕ್ಕೆ ಬಂದು ಬೀಗ ಹಾಕಿದ ಮನೆಗಳಲ್ಲಿ ಕಳ್ಳತನ- ಖತರ್ನಾಕ್‌ ಕಳ್ಳ ಅಂದರ್‌!

    ಸುಹೇಲ್‍ದೇವ್ ಹೇಳಿದ್ದೇನು..?
    ಬುಧವಾರ ವಾರಣಾಸಿಯಲ್ಲಿ ಮಾತನಾಡಿದ್ದ ಸುಹೇಲ್‍ದೇವ್, ಜಿನ್ನಾ ಅವರನ್ನು ಮೊದಲ ಪ್ರಧಾನಿಯನ್ನಾಗಿ ಮಾಡಿದ್ದರೆ ದೇಶ ವಿಭಜನೆಯಾಗುತ್ತಿರಲಿಲ್ಲ ಎಂದು ಹೇಳಿದ್ದರು. ಈ ಹೇಳಿಕೆಗೆ ಓವೈಸಿ ಮೊರದಾಬಾದ್‍ನಲ್ಲಿ ನಡೆದ ಸಾರ್ವಜನಿಕ ರ‍್ಯಾಲಿಯಲ್ಲಿ ಪ್ರತಿಕ್ರಿಯಿಸಿದ್ದಾರೆ.

  • ನಿಮ್ಮ ಧೈರ್ಯಕ್ಕೆ ಅವರು ಹೆದರುತ್ತಾರೆ – ಪ್ರಿಯಾಂಕಾಗೆ ಧೈರ್ಯ ತುಂಬಿದ ಸಹೋದರ ರಾಹುಲ್

    ನಿಮ್ಮ ಧೈರ್ಯಕ್ಕೆ ಅವರು ಹೆದರುತ್ತಾರೆ – ಪ್ರಿಯಾಂಕಾಗೆ ಧೈರ್ಯ ತುಂಬಿದ ಸಹೋದರ ರಾಹುಲ್

    ಲಕ್ನೋ: ನಿಮ್ಮ ಧೈರ್ಯಕ್ಕೆ ಅವರು ಹೆದರುತ್ತಾರೆ ಎಂದು ಹೇಳುವ ಮೂಲಕ ಪೊಲೀಸರ ವಶವಾಗಿರುವ ಎಐಸಿಸಿ ಪ್ರಧಾಕ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರಿಗೆ ಸಹೋದರ ರಾಹುಲ್ ಗಾಂಧಿ ಧೈರ್ಯ ತುಂಬಿದ್ದಾರೆ.

    ಈ ಸಂಬಂಧ ಟ್ವೀಟ್ ಮಾಡಿರುವ ರಾಹುಲ್, ಈ ಪ್ರಕರಣದಿಂದ ನೀವು ಹಿಂದೆ ಸರಿಯಲ್ಲ ಎಂದು ನನಗೆ ಗೊತ್ತು. ಈ ನಿಮ್ಮ ಧೈರ್ಯಕ್ಕೆ ಅವರೇ ಹೆದರುತ್ತಾರೆ. ಈ ಅಹಿಂಸಾತ್ಮಕ ಹೋರಾಟದ ನ್ಯಾಯಕ್ಕಾಗಿ ನಾವು ದೇಶದ ರೈತರನ್ನು ಗೆಲ್ಲುವಂತೆ ಮಾಡುತ್ತೇವೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ರೈತರ ಮೇಲೆ ಕಾರು ಹತ್ತಿಸಿದ ಕೇಂದ್ರ ಸಚಿವನ ಮಗ – ನಾಲ್ವರು ರೈತರು ಸೇರಿ 8 ಮಂದಿ ಸಾವು

    ಘಟನೆಯೇನು..?
    ಲಖೀಂಪುರ್‍ನಲ್ಲಿ ಉಪ ಮುಖ್ಯಮಂತ್ರಿ ಕೇಶವ್‍ಪ್ರಸಾದ್ ಮೌರ್ಯ ಮತ್ತು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಭೇಟಿ ನೀಡುವ ವೇಳೆ ರೈತರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಬೆಂಗಾವಲು ವಾಹನಗಳ ಸಾಲಿನಲ್ಲಿ ಬರುತ್ತಿದ್ದ ಕೇಂದ್ರ ಸಚಿವ ಅಜಯ್ ಮಿಶ್ರಾನ ಪುತ್ರ ಇದ್ದ ರೈತರ ಮೇಲೆ ಹರಿದು ನಾಲ್ವರು ರೈತರು ಮೃತಪಟ್ಟಿದ್ದಾರೆ ಎಂದು ರೈತ ಸಂಘಟನೆಗಳು ಆರೋಪಿಸಿವೆ. ಆ ಬಳಿಕ ಅಲ್ಲಿ ಪ್ರತಿಭಟನೆ ಉದ್ರಿಕ್ತಗೊಂಡು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಇದನ್ನೂ ಓದಿ: ಕೇಂದ್ರ ಸಚಿವ ಅಜಯ್ ಮಿಶ್ರಾ ಪುತ್ರನ ವಿರುದ್ಧ ಕೊಲೆ ಪ್ರಕರಣ ದಾಖಲು

    ಲಂಖಿಪುರದಲ್ಲಿ ನಡೆದ ಘಟನೆಯಲ್ಲಿ ಮೃತಪಟ್ಟ ರೈತರ ಮನೆಗಳಿಗೆ ಭೇಟಿ ನೀಡಲೆಂದು ತೆರಳುತ್ತಿದ್ದ ಪ್ರಿಯಾಂಕಾ ಗಾಂಧಿಯವರನ್ನು ಉತ್ತರಪ್ರದೇಶದ ಪೊಲೀಸರು ತಡೆದಿದ್ದರು. ಈ ವೇಳೆ ಪ್ರಿಯಾಂಕಾ ಗಾಂಧಿ ಹಾಗೂ ಪೊಲೀಸರ ಮಧ್ಯೆ ಮಾತಿನ ಚಕಮಕಿ ನಡೆದಿತ್ತು. ಬಳಿಕ ಪೊಲೀಸರು ಪ್ರಿಯಾಂಕಾ ಅವರನ್ನು ವಶಕ್ಕೆ ಪಡೆದಿದ್ದರು. ಸದ್ಯ ಪೊಲೀಸರ ವಶದಲ್ಲಿರುವ ಪ್ರಿಯಾಂಕ ಅವರಿಗೆ ರಾಹುಲ್ ಗಾಂಧಿ ಧೈರ್ಯದ ಮಾತುಗಳನ್ನು ಹೇಳಿದ್ದಾರೆ. ಸದ್ಯ ಜಿಲ್ಲೆಯಲ್ಲಿ ಸರ್ಕಾರ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಿದೆ.

    ಅಲ್ಲದೆ 144 ಸೆಕ್ಷನ್ ಜಾರಿಗೊಳಿಸಿದೆ. ಇತ್ತ ಕರ್ನಾಟದಲ್ಲಿಯೂ ಕಾಂಗ್ರೆಸ್ ನಾಯಕರು ಯುಪಿ ಪೊಲೀಸರ ವರ್ತನೆಗೆ ಖಂಡನೆ ವ್ಯಕ್ತಪಡಿಸುತ್ತಿದ್ದಾರೆ. ಇದನ್ನೂ ಓದಿ: ವೀಡಿಯೋ- ಕೈ ನಾಯಕಿ ಪ್ರಿಯಾಂಕಾ ಗಾಂಧಿಯನ್ನು ವಶಕ್ಕೆ ಪಡೆದ ಪೊಲೀಸರು

  • ಕುಟುಂಬಕ್ಕೆ ಮುಜುಗರ ತಂದ ಗರ್ಭಿಣಿ ಅಪ್ರಾಪ್ತೆಯನ್ನು ಕೊಂದ ತಂದೆ!

    ಕುಟುಂಬಕ್ಕೆ ಮುಜುಗರ ತಂದ ಗರ್ಭಿಣಿ ಅಪ್ರಾಪ್ತೆಯನ್ನು ಕೊಂದ ತಂದೆ!

    – ಹಿಗ್ಗಾಮುಗ್ಗ ಥಳಿಸಿ ಕತ್ತು ಹಿಸುಕಿ ಕೊಲೆ
    – ಸಾರ್ವಜನಿಕರು ಅವಮಾನ ಮಾಡಿದ್ದರೆಂದು ಕೃತ್ಯ

    ಲಕ್ನೋ: ಯುವತಿಯನ್ನು ಅತ್ಯಾಚಾರವೆಸಗಿ ಬರ್ಬರವಾಗಿ ಕೊಲೆ ಮಾಡಿದ ಪ್ರಕರಣ ಮಾಸುವ ಮುನ್ನವೇ ಉತ್ತರಪ್ರದೇಶದಲ್ಲಿ ಮತ್ತೊಂದು ಅಮಾನವೀಯ ಕೃತ್ಯ ನಡೆದಿರುವುದು ಬೆಳಕಿಗೆ ಬಂದಿದೆ.

    ಕುಟುಂಬದ ಮೇಲೆ ಅವಮಾನ ಉಂಟು ಮಾಡುವ ಕೆಲಸ ಮಾಡಿದ್ದಿ ಎಂದು ತಂದೆಯೇ ತನ್ನ 16 ವರ್ಷದ ಗರ್ಭಿಣಿ ಮಗಳನ್ನು ಬರ್ಬರವಾಗಿ ಕೊಲೆ ಮಾಡಿದ್ದಾನೆ. ಈ ಘಟನೆ ಶಹಜಹಾನಪುರದಲ್ಲಿ ನಡೆದಿದೆ.

    16 ವರ್ಷದ ಅಪ್ರಾಪ್ತೆ ಗರ್ಭಿಣಿಯಾಗಿರುವ ವಿಚಾರ ಇಡೀ ಗ್ರಾಮದಲ್ಲಿ ಹಬ್ಬಿತ್ತು. ಇದು ಆಕೆಯ ಕುಟುಂಬಕ್ಕೆ ತೀವ್ರ ಅವಮಾನ ಉಂಟುಮಾಡಿದೆ. ಈ ಹಿನ್ನೆಲೆಯಲ್ಲಿ ಮೊದಲು ಆಕೆಗೆ ಚೆನ್ನಾಗಿ ಥಳಿಸಿ ಬಳಿಕ ಕತ್ತು ಹಿಸುಕಿ ಕೊಲೆ ಮಾಡಲಾಗಿದೆ. ನಂತರ ಶವವನ್ನು ನದಿ ಪಾತ್ರದಲ್ಲಿ ಸಮಾಧಿ ಮಾಡಲಾಗಿದೆ.

    ಇತ್ತ ಮಗಳನ್ನು ಕೊಂದಿದ್ದು ನಾನೇ ಎಂದು ತಂದೆ ತಪ್ಪು ಒಪ್ಪಿಕೊಂಡಿದ್ದಾನೆ. ಆಕೆ ಗರ್ಭಿಣಿಯಾಗಿದ್ದರಿಂದ ಸಾರ್ವಜನಿಕರು ನನ್ನನ್ನು ಅವಮಾನಿಸಲು ಆರಂಭಿಸಿದರು. ಇದರಿಂದ ಮನನೊಂದು ಆಕೆಯನ್ನು ಕೊಲೆ ಮಾಡಿದ್ದೇನೆ ಎಂದಿದ್ದಾನೆ. ಕೊಲೆಯಲ್ಲಿ ಮೃತಳ ಸಹೋದರನದ್ದೂ ಪಾತ್ರವಿದೆ. ಹೀಗಾಗಿ ಪೊಲೀಸರು ಅಪ್ಪ- ಮಗನ ವಿರುದ್ಧ ಐಪಿಸಿ ಸೆಕ್ಷನ್ 302(ಕೊಲೆ) ಪ್ರಕರಣವನ್ನು ದಾಖಲಿಸಿದ್ದಾರೆ.

    ಘಟನೆ ಸಂಬಂಧ ನಾವು ಬಾಲಕಿಯ ತಾಯಿ ಹಾಗೂ ಇತರ ಸಂಬಂಧಿಕರನ್ನು ಕೂಡ ವಿಚಾರಿಸಿದ್ದೇವೆ. ಆದರೆ ಅವರು ಈ ಕೃತ್ಯದಲ್ಲಿ ಭಾಗಿಯಾಗಿಲ್ಲ ಎಂಬುದನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ಶಹಜಹಾನಪುರದ ಎಸ್‍ಎಸ್‍ಪಿ ತಿಳಿಸಿದ್ದಾರೆ.

    ಎಂದಿಗೂ ಶಾಲೆಗೆ ಹೋಗದ ಸಂತ್ರಸ್ತೆ ಅತ್ಯಾಚಾರದ ಬಳಿಕ ಸುಮ್ಮನಿದ್ದಳು. ಅತ್ಯಾಚಾರ ಮಾಡಿದ ವ್ಯಕ್ತಿಯ ಹೆಸರನ್ನು ಸಂತ್ರಸ್ತೆ ತನ್ನ ಕುಟುಂಬಸ್ಥರಿಗೆ ಕೂಡ ಬಹಿರಂಗಪಡಿಸಿಲ್ಲ. ಆದರೆ ಆರೋಪಿಯನ್ನು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದೆ. ಇತ್ತ ಬಾಲಕಿಯ ಶವವನ್ನು ಮಂಗಳವಾರ ಹೊರತೆಗೆಯಲಾಗಿದೆ. ಸೆಪ್ಟೆಂಬರ್ 23 ರಿಂದ ಬಾಲಕಿ ಕಾಣೆಯಾಗಿದ್ದಾಳೆ. ಆದರೆ ಕುಟುಂಬ ಯಾವುದೇ ದೂರು ನೀಡಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

    ಪೊಲೀಸರು ಕುಟುಂಬವನ್ನು ಪ್ರಶ್ನಿಸಿದಾಗ, ಬಾಲಕಿ ಸಂಬಂಧಿಕರೊಂದಿಗೆ ವಾಸಿಸುತ್ತಿದ್ದಾಳೆ ಎಂದು ಮೊದಲು ಪೊಲೀಸರಿಗೆ ತಿಳಿಸಿದರು. ನಂತರ ಸಂತ್ರಸ್ತೆಯ ತಂದೆ ಹದಿಹರೆಯದ ಮಗಳನ್ನು ಕೊಂದಿದ್ದಾಗಿ ಒಪ್ಪಿಕೊಂಡಿದ್ದಾನೆ. ಹುಡುಗಿಯ ಸಹೋದರ ಇನ್ನೂ ಪರಾರಿಯಾಗಿದ್ದಾನೆ. ಅಪ್ರಾಪ್ತ ಬಾಲಕಿಯೊಂದಿಗಿನ ಲೈಂಗಿಕ ಸಂಬಂಧ ಅಪರಾಧವಾದ್ದರಿಂದ ಹುಡುಗಿಯ ಗರ್ಭಧಾರಣೆಗೆ ಕಾರಣವಾದ ವ್ಯಕ್ತಿಯನ್ನು ಕಂಡುಹಿಡಿಯಲು ನಾವು ಪ್ರಯತ್ನಿಸುತ್ತಿದ್ದೇವೆ ಎಂದು ಎಸ್‍ಎಸ್‍ಪಿ ಭರವಸೆ ನೀಡಿದ್ದಾರೆ.

  • ಗೋಧಿ ಕದ್ದನೆಂದು ಮಗನ ಬಟ್ಟೆ ಬಿಚ್ಚಿ, ಕೈ-ಕಾಲು ಕಟ್ಟಿ ಹಿಗ್ಗಾಮುಗ್ಗ ಥಳಿಸಿದ ತಂದೆ!

    ಗೋಧಿ ಕದ್ದನೆಂದು ಮಗನ ಬಟ್ಟೆ ಬಿಚ್ಚಿ, ಕೈ-ಕಾಲು ಕಟ್ಟಿ ಹಿಗ್ಗಾಮುಗ್ಗ ಥಳಿಸಿದ ತಂದೆ!

    – ತಿಂಡಿ ತೆಗೆದುಕೊಳ್ಳಲೆಂದು ಮನೆಯಿಂದ ಗೋಧಿ ಕದ್ದ ಬಾಲಕ

    ಲಕ್ನೋ: ಗೋಧಿ ಕದ್ದನೆಂದು ಸಿಟ್ಟಿಗೆದ್ದ ತಂದೆಯೊಬ್ಬ ತನ್ನ 11 ವರ್ಷದ ಮಗನ ಬಟ್ಟೆಬಿಚ್ಚಿ, ಕೈ-ಕಾಲು ಕಟ್ಟಿ ಹಿಗ್ಗಾಮುಗ್ಗ ಥಳಿಸಿದ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.

    ಆರೋಪಿ ತಂದೆಯನ್ನು(45) ವರ್ಷದ ಗುದ್ದು ಖಾನ್ ಎಂದು ಗುರುತಿಸಲಾಗಿದೆ. ತಿಂಡಿ ತೆಗೆದುಕೊಳ್ಳಲು ಬಾಲಕನ ಕೈಯಲ್ಲಿ ಹಣವಿರಲಿಲ್ಲ. ಹೀಗಾಗಿ ಆತ ತನ್ನ ಮನೆಯಲ್ಲಿದ್ದ ಗೋಧಿಯನ್ನು ಅಂಗಡಿಯವನಿಗೆ ಕೊಟ್ಟು ತಿಂಡಿ ಖರೀದಿಸಿದ್ದಾನೆ. ಈ ವಿಚಾರ ತಿಳಿದ ತಂದೆ ರೊಚ್ಚಿಗೆದ್ದು, ಮಗನ ಬಟ್ಟೆ ಬಿಚ್ಚಿ, ಕೈ-ಕಾಲು ಕಟ್ಟಿ ಹಿಗ್ಗಾಮುಗ್ಗ ಥಳಿಸಿದ್ದಾರೆ.

    ಮಗನಿಗೆ ತಂದೆ ಹೊಡೆಯುತ್ತಿರುವುದನ್ನು ಕಂಡರೂ ನೆರೆಮನೆಯವರು ಬಾಲಕನ ಸಹಾಯಕ್ಕೆ ಬಂದಿಲ್ಲ. ಬದಲಾಗಿ ನಿಂತು ನೋಡುತ್ತಿದ್ದ ಕೆಲವರು ತಮ್ಮ ಮೊಬೈಲ್ ನಲ್ಲಿ ವಿಡಿಯೋ ಮಾಡುತ್ತಿದ್ದರು. ಬಳಿಕ ಸಾಮಾಜಿಕ ಜಾಲತಾಣಗಳಿಗೆ ಅಪ್ಲೋಡ್ ಮಾಡಿದ್ದಾರೆ. ಹೀಗೆ ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಆರೋಪಿಗಾಗಿ ಬಲೆ ಬೀಸಿದ್ದಾರೆ.

    ಅಂತೆಯೇ ಮಿವಾಲಿ ಗ್ರಾಮದಿಂದ ಆರೋಪಿ ತಂದೆಯನ್ನು ಪೊಲಿಸರು ಬಂಧಿಸಿದ್ದಾರೆ. ಇತ್ತ ಗಾಯಾಳು ಬಾಕನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಇನ್ನು ಘಟನೆಯ ಸಂಬಂಧಿಸಿದಂತೆ ಬಾಲಕನ ಹೇಳಿಕೆಗಳನ್ನು ಪಡೆದುಕೊಳ್ಳಲಾಗುತ್ತದೆ ಎಂದು ಪೊಲೀಸ್ ಅಧಿಕಾರಿ ರವಿ ಕುಮಾರ್ ತಿಳಿಸಿದ್ದಾರೆ.

    ಘಟನೆಯ ಬಗ್ಗೆ ವಿವರಿಸಿದ ಸ್ಥಳೀಯ ನಿವಾಸಿಗಳು, ಸ್ವಲ್ಪ ಗೋಧಿ ಕದ್ದ ಎಂದು ತಂದೆ ತನ್ನ ಮಗನ ಮೇಲೆ ಹಲ್ಲೆ ಮಾಡಿದ್ದಾರೆ. ಅಲ್ಲದೆ ಬಾಲಕನ ಮೇಲೆ ಬಿಸಿ ನೀರು ಎರಚಿ ಹಿಗ್ಗಾಮುಗ್ಗ ಥಳಿಸಿದ್ದಾರೆ ಎಂದು ಆರೋಪಿಸಿದ್ದಾರೆ.

    ಮಗನ ಮೇಲೆ ಹಲ್ಲೆ ನಡೆಸಿದಾಗ ಆರೋಪಿ ಕುಡಿದಿರಲಿಲ್ಲ. ಮೂರು ದಿನಗಳ ಹಿಂದೆಯಷ್ಟೇ ಜಗಳವಾಡಿ ಆರೋಪಿ ಪತ್ನಿ ಆಕೆಯ ಸಹೋದರಿ ಮನೆಗೆ ತೆರಳಿದ್ದರು. ನನ್ನ ಮಗನ ನಡೆ ನನಗೆ ಇಷ್ಟವಾಗಲಿಲ್ಲ. ಹೀಗಾಗಿ ಕೋಪದಿಂದ ಆತನಿಗೆ ಹೊಡೆದೆ ಎಂದು ಆರೋಪಿ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ. ಸದ್ಯ ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.