Tag: M.B Patil

  • ಯಡ್ಡಿಯೂರಪ್ಪ ಹಿರಿಯರಾದರೂ ಮೂರ್ಖತನದ ಕೆಲಸ ಮಾಡಿದ್ದಾರೆ: ಎಂ.ಬಿ.ಪಾಟೀಲ್

    ಯಡ್ಡಿಯೂರಪ್ಪ ಹಿರಿಯರಾದರೂ ಮೂರ್ಖತನದ ಕೆಲಸ ಮಾಡಿದ್ದಾರೆ: ಎಂ.ಬಿ.ಪಾಟೀಲ್

    ವಿಜಯಪುರ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹಿರಿಯರಾದ್ರೂ ಮೂರ್ಖತನ ಮಾಡಿದ್ದಾರೆ ಅಂತಾ ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಇಂದು ನಗರದಲ್ಲಿ ಹೇಳಿದ್ದಾರೆ.

    ಭ್ರದಾ ಮೇಲ್ದಂಡೆ ಯೋಜನೆಯ ವಿಶ್ವೇಶ್ವರಯ್ಯ ಜಲ ನಿಗಮ ಕಾಮಗಾರಿಯ ಫೈಲನ್ನು ಯಡಿಯೂರಪ್ಪವರಿಗೆ ಕೊಟ್ಟು ಕಳುಹಿಸುತ್ತೇನೆ. ಅವರು ಅವಶ್ಯವಿದ್ದರೆ ಎಕ್ಸಫರ್ಟ್ ಗಳನ್ನು ಕರೆಯಿಸಿ ಫೈಲನ್ನು ಮೊದಲು ಪರಿಶೀಲಿಸಲಿ ಅಂತಾ ಎಂ ಬಿ ಪಾಟೀಲ್ ಸವಾಲು ಹಾಕಿದ್ದಾರೆ. ಇದನ್ನೂ ಓದಿ: ನಾನು ಕೊಟ್ಟಿರುವ ದಾಖಲೆಗಳಲ್ಲಿ ಸಣ್ಣಪುಟ್ಟ ಲೋಪದೋಷಗಳಿದ್ದರೆ ಎಂ.ಬಿ.ಪಾಟೀಲ್ ಹೇಳಿದ್ದಂತೆ ಕೇಳಲು ನಾನು ಸಿದ್ದನಿದ್ದೇನೆ: ಬಿಎಸ್‍ವೈ

    ಕಾಮಗಾರಿ ಗುತ್ತಿಗೆ ಪಡೆದವರು ಸರಿಯಾದ ದಾಖಲಾತಿ ನೀಡಿಲ್ಲ. ಕಾರಣ ಅವರ ಇಎಂಡಿ ಮುಟ್ಟುಗೋಲು ಹಾಕಿ ಗುತ್ತಿಗೆದಾರನ್ನು ಕಪ್ಪು ಪಟ್ಟಿಗೆ ಸೇರಿಸಿದ್ದೇವೆ. ಈ ವಿಷಯದಲ್ಲಿ ಯಡಿಯೂರಪ್ಪ ಅವರ ಬಗ್ಗೆ ಕನಿಕರ ಮೂಡುತ್ತಿದೆ ಅಂತಾ ಅಂದ್ರು. ಇದನ್ನೂ ಓದಿ: ನಾಲಾ ಕಾಮಗಾರಿಯಲ್ಲಿ 27 ಕೋಟಿ ರೂ. ಕಿಕ್‍ಬ್ಯಾಕ್, ಎಂ.ಬಿ ಪಾಟೀಲರನ್ನ ನೇಣು ಹಾಕಿ: ಬಿಎಸ್‍ವೈ ಆಕ್ರೋಶ

    ಈ ಹಿಂದೆ ಸಚಿವ ಡಿ.ಕೆ.ಶಿವಕುಮಾರ್ ಅವರ ಮನೆ ಮೇಲೆ ಐಟಿ ದಾಳಿ ನಡೆದಿತ್ತು. ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ನನ್ನ ಮೇಲೆಯೂ ಐಟಿ ದಾಳಿ ನಡೆಯುವ ಸಾಧ್ಯತೆಗಳಿವೆ. ಕಾಂಗ್ರೆಸ್ ನಾಯಕರ ಮೇಲಿನ ಐಟಿ ರೇಡ್ ನಂತೆ ಬಿಜೆಪಿ ನಾಯಕರಾದ ಶೋಭಾ ಕರಂದ್ಲಾಜೆ, ಜಗದೀಶ್ ಶೆಟ್ಟರ್, ಆರ್ ಅಶೋಕ್, ಈಶ್ವರಪ್ಪ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಲಿ ಅಂತಾ ಹೇಳಿದ್ರು. ಇದನ್ನೂ ಓದಿ: ಬಿಎಸ್‍ವೈ ಪೆದ್ದ ಅಲ್ಲ ಜೋಕರ್ ಎಂದ ಎಂ.ಬಿ ಪಾಟೀಲ್ – ಮಾಧ್ಯಮಗಳಿಗೆ ಗೊತ್ತಾಗ್ಲಿ ಅಂತಾನೇ ಹೇಳಿದ್ದು ಅಂದ್ರು ಸಿಎಂ

  • ಕೀಳುಮಟ್ಟದ ಪ್ರಚಾರದಿಂದ ಮೋದಿಗೆ ಗೆಲುವು: ಸಚಿವ ಎಂ.ಬಿ ಪಾಟೀಲ್

    ಕೀಳುಮಟ್ಟದ ಪ್ರಚಾರದಿಂದ ಮೋದಿಗೆ ಗೆಲುವು: ಸಚಿವ ಎಂ.ಬಿ ಪಾಟೀಲ್

    ವಿಜಯಪುರ: ಗುಜರಾತ್ ಮತ್ತು ಹಿಮಾಚಲಪ್ರದೇಶ ಚುನಾವಣೆಯಲ್ಲಿ ಮೋದಿ ಕೀಳುಮಟ್ಟದ ಪ್ರಚಾರ ಮಾಡಿ ಗೆದ್ದಿದ್ದಾರೆ. ಇದು ನಿಜವಾದ ಗೆಲುವಲ್ಲ, ಇದು ಮೋಸದ ಗೆಲುವೆಂದು ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ.

    ಗುಜರಾತ್ ಮೊದಲನೇ ಹಂತದ ಮತದಾನದ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್ ಸಮವಾಗಿತ್ತು. ಯಾವಾಗ ಮೋದಿ ಕಾಂಗ್ರೆಸ್ ಮತ್ತು ಪಾಕಿಸ್ತಾನ ಲಿಂಕ್ ಅಂತಾ ಅಪಪ್ರಚಾರ ಮಾಡಿದ್ದಕ್ಕೆ ಕಾಂಗ್ರೆಸ್ ಸೋಲುವಂತಾಯಿತು ಎಂದು ಎಂ.ಬಿ ಪಾಟೀಲ್ ಹೇಳಿದ್ದಾರೆ.

    ಅಲ್ಲದೆ ಇದರ ಬಗ್ಗೆ ರಾಷ್ಟ್ರಪತಿ, ಸುಪ್ರೀಂ ಕೋರ್ಟ್ ಮತ್ತು ಚುನಾವಣೆ ಆಯೋಗಕ್ಕೆ ದೂರು ನೀಡುತ್ತೇವೆ. ಇನ್ನು ಈ ಫಲಿತಾಂಶ ಕರ್ನಾಟಕದ 2018 ರ ವಿಧಾನಸಭೆ ಚುನಾವಣೆ ಮೇಲೆ ಯಾವುದೇ ಪರಿಣಾಮ ಬೀಳಲ್ಲ ಎಂದು ವಿಜಯಪುರದಲ್ಲಿ ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ.

  • ಮಕ್ಕಳ ದಿನಾಚರಣೆ ಅಂಗವಾಗಿ ವಿಜಯಪುರ ಸರ್ಕಾರಿ ಶಾಲೆಯ ಮಕ್ಕಳಿಗೆ ಬಂಪರ್ ಗಿಫ್ಟ್

    ಮಕ್ಕಳ ದಿನಾಚರಣೆ ಅಂಗವಾಗಿ ವಿಜಯಪುರ ಸರ್ಕಾರಿ ಶಾಲೆಯ ಮಕ್ಕಳಿಗೆ ಬಂಪರ್ ಗಿಫ್ಟ್

    ವಿಜಯಪುರ: ಖಾಸಗಿ ಶಾಲೆಗಳ ಭರಾಟೆಯಲ್ಲಿ ಸರ್ಕಾರಿ ಶಾಲೆಗಳು ವಿಮುಕ ಆಗಿ ಹೊರಟಿವೆ. ಸರ್ಕಾರಿ ಶಾಲೆಗಳಿಗೆ ಜನರು ತಮ್ಮ ಮಕ್ಕಳನ್ನು ಸೇರಿಸಲು ಹಿಂದೇಟು ಹಾಕುತ್ತಾರೆ. ಆದರೆ ಸರ್ಕಾರಿ ಶಾಲೆಗಳತ್ತ ಮಕ್ಕಳನ್ನು ಸೆಳೆಯಲು ಸಚಿವ ಎಂ.ಬಿ.ಪಾಟೀಲ್ ಪ್ಲಾನ್ ಮಾಡಿದ್ದಾರೆ.

    ಸಾಮಾನ್ಯವಾಗಿ ಮಕ್ಕಳ ದಿನಾಚರಣೆ ಬಂದಾಗ ಜಿಲ್ಲಾ ಕೇಂದ್ರ ಮತ್ತು ತಾಲೂಕಾ ಕೇಂದ್ರಗಳಲ್ಲಿ ಶಿಕ್ಷಣ ಇಲಾಖೆ ಕಾರ್ಯಕ್ರಮ ಆಯೋಜಿಸುತ್ತದೆ. ಆದರೆ ಈ ಬಾರಿ ವಿಜಯಪುರದ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ ಪಾಟೀಲ್,ವಿಜಯಪುರ ತಾಲೂಕಿನ 100 ಸರ್ಕಾರಿ ಶಾಲೆಗಳನ್ನು ಡಿಜಿಟಲ್ ಮಾಡಿಸಿದ್ದಾರೆ. ಶಾಸಕರ ಅನುದಾನದಲ್ಲಿ ಒಂದು ಶಾಲೆಗೆ 1 ಲಕ್ಷ ರೂ.ಯಂತೆ ಡಿಜಿಟಲ್ ಕೋಣೆ ಮಾಡಲಾಗಿದೆ. ಕಬ್ಬಿಣದ ಕಡಲೆಯಂತಿರುವ ವಿಜ್ಞಾನ, ಗಣಿತ ಮತ್ತು ಇಂಗ್ಲೀಷ್ ಸೇರಿದಂತೆ ಕಠಿಣ ವಿಷಯಗಳು ಮಕ್ಕಳಿಗೆ ಸರಳವಾಗಿ ಅರ್ಥವಾಗಲು ಎಲ್‍ಇಡಿ ಟಿವಿ ಅಳವಡಿಸಲಾಗಿದೆ. ಎಲ್‍ಇಡಿಯಲ್ಲಿ ವಿಷಯಕ್ಕೆ ತಕ್ಕಂತೆ ವಿಡಿಯೋ ಹಾಗು ಚಿತ್ರಗಳು ಬರೋದ್ರಿಂದ ಮಕ್ಕಳ ಮನದಲ್ಲಿ ವಿಷಯಗಳು ಅಚ್ಚಳಿಯದೇ ಉಳಿಯುತ್ತದೆ.

    ಈಗಾಗಲೇ ಲೋಡ್ ಶೆಡ್ಡಿಂಗ್ ಶುರುವಾಗಿದ್ದು ವಿದ್ಯುತ್ ಸಮಸ್ಯೆ ಉಂಟಾಗುತ್ತಿದೆ. ಹಾಗಾಗಿ ಎಲ್‍ಇಡಿ ಟಿವಿಗಳಿಗೆ ಸೋಲಾರ್ ಹಾಕಿಸಿದ್ದು, ತಡೆಯಿಲ್ಲದೆ 8 ಗಂಟೆ ನಿರಂತರ ಅಭ್ಯಾಸ ಮಾಡಬಹುದು. ಈ ಯೋಜನೆಗೆ ಟೆಲ್ಕೋ ಸೋಲಾರ್ ಕಂಪನಿ ಕೈ ಜೋಡಿಸಿದ್ದು, ಅರ್ಧದಷ್ಟು ಹಣ ಕಂಪನಿ, ಉಳಿದ ಅರ್ಧ ಹಣ ಶಾಸಕರ ಅನುದಾನದಲ್ಲಿ ಸಿಗುತ್ತದೆ.

  • ಸಚಿವ ಎಂ.ಬಿ.ಪಾಟೀಲ್ ಹೇಳಿಕೆಗೂ ಪಕ್ಷಕ್ಕೂ ಸಂಬಂಧವಿಲ್ಲ: ದಿನೇಶ್ ಗುಂಡೂರಾವ್

    ಸಚಿವ ಎಂ.ಬಿ.ಪಾಟೀಲ್ ಹೇಳಿಕೆಗೂ ಪಕ್ಷಕ್ಕೂ ಸಂಬಂಧವಿಲ್ಲ: ದಿನೇಶ್ ಗುಂಡೂರಾವ್

    ಬೆಂಗಳೂರು: ಪ್ರತ್ಯೇಕ ಲಿಂಗಾಯಿತ ಧರ್ಮಕ್ಕೆ ಶಿವಕುಮಾರ ಸ್ವಾಮೀಜಿಗಳ ಬೆಂಬಲವಿದೆ ಎಂದಿದ್ದ ನೀರಾವರಿ ಸಚಿವ ಎಂಬಿ ಪಾಟೀಲ್ ಹೇಳಿಕೆಗೂ ನಮ್ಮ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ.

    ಕೆಪಿಸಿಸಿ ಕಛೇರಿಯಲ್ಲಿ ಮಾತಾನಾಡಿದ ಅವರು ಪ್ರತ್ಯೇಕ ಧರ್ಮ ಸ್ಥಾಪನೆ ವಿಚಾರವು ಅವರ ಸಮುದಾಯಕ್ಕೆ ಸಂಬಂಧಿಸಿದ ಆಂತರಿಕ ವಿಚಾರವಾಗಿದ್ದು, ಸಮಾಜದವರು ಕುಳಿತುಕೊಂಡು ಸಮಸ್ಯೆಯನ್ನು ಒಳ್ಳೆಯ ರೀತಿಯಲ್ಲಿ ಬಗೆಹರಿಸಿಕೊಳ್ಳಬೇಕೆಂಬ ಎಂಬ ಸಲಹೆಯನ್ನು ನೀಡಿದರು.

    ಇದನ್ನೂ ಓದಿ:ಸಚಿವ ಎಂ.ಬಿ.ಪಾಟೀಲ್ ರಿಂದ ಹೊಸ `ಸಿಡಿ’ ಬಾಂಬ್!

    ಇದೇ ಸಮಯದಲ್ಲಿ ಕಾಂಗ್ರೆಸ್ ಪಕ್ಷದ ಉಪಾಧ್ಯಾಕ್ಷ ರಾಹುಲ್ ಗಾಂಧಿ ಪ್ರಧಾನಿ ಅಭ್ಯರ್ಥಿಯಾಗಲು ಸಿದ್ಧ ಎಂಬ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಪಕ್ಷದಲ್ಲಿ ಎಲ್ಲರು ಇದನ್ನೇ ಬಯಸುತ್ತಿದ್ದಾರೆ. 2019ರ ಲೋಕಸಭಾ ಚುನಾವಣೆಯ ಪ್ರಧಾನಿ ಅಭ್ಯರ್ಥಿ ರಾಹುಲ್ ಗಾಂಧಿ ಪ್ರಧಾನಿ ಅಭ್ಯರ್ಥಿಯಾಗಬೇಕು ಎಂದರು.

    ರಾಹುಲ್ ಗಾಂಧಿ ಕ್ಯಾಲಿಫೊರ್ನಿಯದಲ್ಲಿ ತಮ್ಮ ಮನ ಬಿಚ್ಚಿ ಮಾತಾನಾಡಿದ್ದಾರೆ. ಅಲ್ಲದೆ ಎಲ್ಲ ಪ್ರಶ್ನೆಗಳಿಗೂ ಸೌಮ್ಯವಾಗಿ ಉತ್ತರಿಸಿದ್ದು ಅಭಿನಂದನಾರ್ಹವಾಗಿದೆ. ಬಿಜೆಪಿಯವರು ರಾಹುಲ್ ಅವರನ್ನು ರಾಜಕೀಯವಾಗಿ ಮೂಲೆ ಗುಂಪು ಮಾಡಲು ಪ್ರಯತ್ನಿಸುತ್ತಿದ್ದಾರೆ. ಅದರಿಂದಲೆ ಇದನ್ನು ವಿರೋಧ ಮಾಡುತ್ತಿದ್ದಾರೆ ಎಂದರು.

    ಇದನ್ನೂ ಓದಿ: ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟಕ್ಕೆ ಹಿನ್ನಡೆ, ಎಂಬಿ ಪಾಟೀಲ್‍ಗೆ ಭಾರೀ ಮುಖಭಂಗ

    ಕಾಂಗ್ರೆಸ್ ಪಕ್ಷದಲ್ಲಿ ಕೆಲಸದ ಸಮಸ್ಯೆಯಿಂದ ಕಳೆದ ಬಾರಿ ಸೋತ್ತಿದ್ದು ನಿಜ. ಅದನ್ನು ರಾಹುಲ್ ಮುಕ್ತವಾಗಿ ಒಪ್ಪಿಕೊಂಡಿದ್ದು ಅದರಲ್ಲಿ ಯಾವುದೇ ತಪ್ಪಿಲ್ಲ. ರಾಹುಲ್ ಪ್ರಧಾನಿ ಅಭ್ಯರ್ಥಿಯಾಗುವುದು ನಮ್ಮೆಲ್ಲರ ಅಭಿಪ್ರಾಯವಾಗಿದೆ. ಮುಂದಿನ ಬಾರಿ ಗೆಲುವಿಗಾಗಿ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುತ್ತೇವೆ ಎಂದು ತಿಳಿಸಿದರು.

    ಯಡಿಯೂರಪ್ಪ ಅವರು ಸಹ ಸಿಎಂ ಅಗುವ ಕನಸ್ಸನ್ನು ಹೊಂದಿದ್ದಾರೆ, ಕನಸ್ಸು ಎಲ್ಲ ರಾಜಕಾರಣಿಗಳಿಗೂ ಇರುತ್ತದೆ. ಹೀಗಿರುವಾಗ ರಾಹುಲ್ ಗಾಂಧಿ ಬಗ್ಗೆ ಹೀಗೆ ಹೇಳುವುದು ಸರಿ ಅಲ್ಲ ಎಂದು ತಿರುಗೇಟು ನೀಡಿದರು.