Tag: M.B Patil

  • ಜೂ. 4ರಂದು 10,000 ವನರಕ್ಷಕರಿಗೆ ಕೆಎಸ್‌ಡಿಎಲ್‌ನಿಂದ ಸುರಕ್ಷಾ ಕಿಟ್ ವಿತರಣೆ: ಎಂಬಿಪಿ

    ಜೂ. 4ರಂದು 10,000 ವನರಕ್ಷಕರಿಗೆ ಕೆಎಸ್‌ಡಿಎಲ್‌ನಿಂದ ಸುರಕ್ಷಾ ಕಿಟ್ ವಿತರಣೆ: ಎಂಬಿಪಿ

    ಬೆಂಗಳೂರು: ಅರಣ್ಯ ರಕ್ಷಣೆಯಲ್ಲಿ ಮಹತ್ತರ ಪಾತ್ರ ವಹಿಸುತ್ತಿರುವ ರಾಜ್ಯದ 10 ಸಾವಿರ ಅರಣ್ಯ ರಕ್ಷಕರು/ ವೀಕ್ಷಕರು, ಕಾವಾಡಿಗಳು, ಮಾವುತರು ಮತ್ತು ಚಾಲಕರಿಗೆ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತದ (KSDL) ವತಿಯಿಂದ ಗುಣಮಟ್ಟದ ಬ್ಯಾಗ್, ಜರ್ಕಿನ್, ಶೂ ಮತ್ತು ನೀರಿನ ಬಾಟಲಿ ಇರುವ ಕಿಟ್ ವಿತರಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ (M B Patil) ತಿಳಿಸಿದರು.

    ಈ ಬಗ್ಗೆ ಮಾಹಿತಿ ನೀಡಿದ ಅವರು, ಈ ಸಿಎಸ್‌ಆರ್ ಉಪಕ್ರಮದ ಮೊದಲ ಕಾರ್ಯಕ್ರಮ ಬುಧವಾರ(ಜೂನ್ 4) ಮಧ್ಯಾಹ್ನ 2ಗಂಟೆಗೆ ಮೈಸೂರಿನ (Mysuru) ಮುಕ್ತ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ನಡೆಯಲಿದೆ. ಕೆಎಸ್‌ಡಿಎಲ್ ಸಂಸ್ಥೆಯ 2024-25ನೇ ಸಾಲಿನ 2 ಕೋಟಿ ರೂ. ಸಿಎಸ್‌ಆರ್ ನಿಧಿಯನ್ನು ಈ ಕಿಟ್ ಖರೀದಿಗೆ ಬಳಸಲಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಪ್ರಚೋದನಾಕಾರಿ ಭಾಷಣ ಕೇಸ್‌ – ಕಲ್ಲಡ್ಕ ಪ್ರಭಾಕರ್ ಭಟ್‌ಗೆ ಬಿಗ್ ರಿಲೀಫ್

    ಕೆಎಸ್‌ಡಿಎಲ್‌ನ ಹೆಮ್ಮೆಯ ಉತ್ಪನ್ನ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕೆಗೆ ಗಂಧದ ಎಣ್ಣೆ ಮುಖ್ಯವಾಗಿದೆ. ಈ ಸಂಪತ್ತನ್ನು ಕಾಪಾಡುವವರೇ ವನರಕ್ಷಕರು. ಅಂಥವರ ಕುರಿತ ಕಳಕಳಿ ಈ ಹೆಜ್ಜೆಯಾಗಿದೆ ಎಂದರು. ಇದನ್ನೂ ಓದಿ: ಉನ್ನತ ಶಿಕ್ಷಣ ಸಮಗ್ರ ಮಾಹಿತಿಗಾಗಿ ಪತ್ರಿಕೆ ಬಿಡುಗಡೆ ಮಾಡಿದ ಸಿಎಂ

    ಬುಧವಾರದ ಕಾರ್ಯಕ್ರಮದಲ್ಲಿ ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳ ಅರಣ್ಯ ವೃತ್ತಗಳ 2,168 ಸಿಬ್ಬಂದಿಗೆ ಈ ಕಿಟ್ ವಿತರಿಸಲಾಗುವುದು. ಅರಣ್ಯ ಸಚಿವ ಈಶ್ವರ್ ಖಂಡ್ರೆ, ಕೆಎಸ್‌ಡಿಎಲ್ ಅಧ್ಯಕ್ಷ ಸಿ.ಎಸ್.ನಾಡಗೌಡ, ವನ್ಯಜೀವಿ ಮಂಡಳಿ ಸದಸ್ಯ ಧ್ರುವ ಪಾಟೀಲ್ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು ಇದಕ್ಕೆ ಸಾಕ್ಷಿಯಾಗಲಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ದಕ್ಷಿಣ ಆಫ್ರಿಕಾದ ದೈತ್ಯ ಬ್ಯಾಟರ್‌ ಕ್ಲಾಸೆನ್‌ ಗುಡ್‌ಬೈ

    ಮುಂದಿನ ದಿನಗಳಲ್ಲಿ ರಾಜ್ಯದ ಉಳಿದ ಅರಣ್ಯಗಳಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿಗೂ ಕಿಟ್ ವಿತರಣೆ ಮಾಡಲಾಗುವುದು. ಕಿಟ್ ಸ್ವೀಕರಿಸುವ ಪ್ರತಿಯೊಬ್ಬರಿಂದ ಮೊದಲೇ ಅಳತೆ ತೆಗೆದುಕೊಂಡು, ಜರ್ಕಿನ್, ಶೂ ಖರೀದಿಸಲಾಗಿದೆ. ಇದರಲ್ಲಿ 5 ಸಾವಿರ ಮಂದಿ ಖಾಯಂ ಸಿಬ್ಬಂದಿಯಾಗಿದ್ದು, ಉಳಿದವರು ತಾತ್ಕಾಲಿಕ ನೆಲೆಯಲ್ಲಿದ್ದಾರೆ. ಇವರೆಲ್ಲರ ಯೋಗಕ್ಷೇಮ ನಮ್ಮ ಹೊಣೆಯಾಗಿದೆ ಎಂದು ನುಡಿದರು. ಇದನ್ನೂ ಓದಿ: ಸೀರಿಯಲ್ ನಟಿ ವೈಷ್ಣವಿ ಗೌಡ ಮದುವೆ ಶಾಸ್ತ್ರಗಳು ಆರಂಭ‌

    ವನ್ಯಜೀವಿ ಮಂಡಳಿ ಸದಸ್ಯರೂ ಆದ ಸೊಸೈಟಿ ಫಾರ್ ಪ್ರೊಟೆಕ್ಷನ್ ಆಫ್ ಪ್ಲಾಂಟ್ಸ್ ಅಂಡ್ ಅನಿಮಲ್ಸ್(ಎಸ್‌ಪಿಪಿಎ) ಸಂಸ್ಥಾಪಕ ಧ್ರುವ ಪಾಟೀಲ್ ಅವರು ಹವ್ಯಾಸಿ ವನ್ಯಜೀವಿ ಛಾಯಾಗ್ರಾಹಕರಾಗಿದ್ದು, ಪ್ರತಿಕೂಲ ಸಂದರ್ಭಗಳಲ್ಲಿ ವನರಕ್ಷಕರು ಎದುರಿಸುತ್ತಿದ್ದ ಸಮಸ್ಯೆಗಳಿಗೆ ಕಿವಿಯಾಗಿ ಈ ಯೋಜನೆ ರೂಪಿಸಲು ನೆರವಾಗಿದ್ದಾರೆ ಎಂದರು.

  • ಕಾಂಗ್ರೆಸ್‌ನವ್ರೇ ಇ.ಡಿಗೆ ಪರಂ ವಿರುದ್ಧ ದಾಖಲೆ ಕೊಟ್ಟಿದ್ರೆ ಹೆಸರು ಬಹಿರಂಗಪಡಿಸಿ: ಜೋಶಿಗೆ ಎಂಬಿ ಪಾಟೀಲ್ ಸವಾಲು

    ಕಾಂಗ್ರೆಸ್‌ನವ್ರೇ ಇ.ಡಿಗೆ ಪರಂ ವಿರುದ್ಧ ದಾಖಲೆ ಕೊಟ್ಟಿದ್ರೆ ಹೆಸರು ಬಹಿರಂಗಪಡಿಸಿ: ಜೋಶಿಗೆ ಎಂಬಿ ಪಾಟೀಲ್ ಸವಾಲು

    ಬೆಂಗಳೂರು: ಪರಮೇಶ್ವರ್ ವಿರುದ್ಧ ಇ.ಡಿಗೆ ಯಾವ ಕಾಂಗ್ರೆಸ್ ನಾಯಕರು ದಾಖಲೆ ಕೊಟ್ಟಿದ್ರು ಅಂತ ಪ್ರಹ್ಲಾದ್ ಜೋಶಿ (Pralhad Joshi) ಅವರು ಬಹಿರಂಗಪಡಿಸಲಿ ಎಂದು ಸಚಿವ ಎಂ.ಬಿ.ಪಾಟೀಲ್ (M.B.Patil) ಸವಾಲೆಸೆದಿದ್ದಾರೆ.

    ಬೆಂಗಳೂರಿನಲ್ಲಿ ಮಾತಾಡಿದ ಎಂ.ಬಿ.ಪಾಟೀಲ್, ಇ.ಡಿಗೆ ಪರಮೇಶ್ವರ್ ವಿರುದ್ಧ ಯಾರು ದಾಖಲೆ ಕೊಟ್ರು? ಪ್ರಹ್ಲಾದ್ ಜೋಶಿಯವರ ಬಳಿ ಮಾಹಿತಿ ಇದ್ರೆ ಹೇಳಲಿ. ಸುಮ್ಮನೆ ಗಾಳಿಯಲ್ಲಿ ಗುಂಡು ಹೊಡೆಯೋದು ಬೇಡ. ಯಾಕೆ ಕಾಂಗ್ರೆಸ್‌ನವ್ರು ಯಾರು ಅಂತ ಬಹಿರಂಗಪಡಿಸಲು ಜೋಶಿಯವರಿಗೆ ಧೈರ್ಯ ಇಲ್ವಾ ಎಂದು ಟಾಂಗ್ ಕೊಟ್ಟರು. ಇದನ್ನೂ ಓದಿ: ಇಡಿ ತನಿಖೆಗೆ ಸಂಪೂರ್ಣ ಸಹಕಾರ – ದಾಳಿ ಉದ್ದೇಶ ಗೊತ್ತಿಲ್ಲ, ನಾನೇನೂ ಮುಚ್ಚಿಟ್ಟಿಲ್ಲ ಅಂದ ಪರಂ

    ಯಾರು ದಾಖಲೆ ಕೊಟ್ಟವರು ಅಂತ ಅವರಿಗೆ ಗೊತ್ತಿರುತ್ತೆ. ಸಂಪೂರ್ಣ ಮಾಹಿತಿ ಇರುತ್ತೆ. ಅವರ ಅಡಿಯಲ್ಲೇ ಇ.ಡಿ, ಐಟಿ ಎಲ್ಲ ಬರೋದು. ಮೋದಿ, ಪ್ರಹ್ಲಾದ್ ಜೋಶಿಯವರೇ ಇದನ್ನೆಲ್ಲ ಮಾಡಿಸ್ತಿದ್ದಾರೆ. ಹಾಗಾದ್ರೆ ಇ.ಡಿಯವ್ರು ಎಲ್ಲವನ್ನೂ ಪ್ರಹ್ಲಾದ್ ಜೋಶಿಯವರಿಗೆ ರಿಪೋರ್ಟ್ ಮಾಡ್ತಾರೆ ಅಂತ ಆಯ್ತಲ್ಲ ಎಂದು ವಾಗ್ದಾಳಿ ನಡೆಸಿದರು.

  • ರಶ್ಮಿಕಾ, ಶ್ರೀಲೀಲಾ ಎಲ್ಲಾ ಬ್ಯುಸಿ ಇದ್ರು, ಅದಕ್ಕೇ ತಮನ್ನಾ ಆಯ್ಕೆ ಮಾಡಿದ್ವಿ: ಎಂ.ಬಿ ಪಾಟೀಲ್

    ರಶ್ಮಿಕಾ, ಶ್ರೀಲೀಲಾ ಎಲ್ಲಾ ಬ್ಯುಸಿ ಇದ್ರು, ಅದಕ್ಕೇ ತಮನ್ನಾ ಆಯ್ಕೆ ಮಾಡಿದ್ವಿ: ಎಂ.ಬಿ ಪಾಟೀಲ್

    ಬೆಂಗಳೂರು: ಮೈಸೂರು ಸ್ಯಾಂಡಲ್ ಸೋಪ್‌ಗೆ ರಾಯಭಾರಿಯಾಗಲು ಕನ್ನಡ ಮೂಲದ ಕೆಲ ನಟಿಯರನ್ನ ಸಂಪರ್ಕಿಸಲಾಗಿತ್ತು. ಅವರು ಸಿಗದ ಕಾರಣ ತಮನ್ನಾ ಭಾಟಿಯಾ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಸ್ಪಷ್ಟಪಡಿಸಿದರು.

    ನಟಿ ತಮನ್ನಾ ಭಾಟಿಯಾಗೆ ಕನ್ನಡಪರ ಸಂಘಟನೆಗಳಿಂದ ವಿರೋಧ ಬರುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಮಾತಾಡಿದ ಅವರು, ರಾಯಭಾರಿ ಆಯ್ಕೆಗೆ ಒಂದು ಸಮಿತಿ ರಚಿಸಲಾಗಿತ್ತು. ಕನ್ನಡಿಗರನ್ನೇ ನಾವು ಮೊದಲು ಸಂಪರ್ಕಿಸಿದ್ದೇವೆ. ಆದ್ರೆ ಅವ್ರು ಯಾರೂ ಫ್ರೀ ಇರಲಿಲ್ಲ ಎಂದರು. ಇದನ್ನೂ ಓದಿ: ಅಪ್ಪಂಗೂ, ತಾತನಿಗೂ ಇಬ್ರೂ ಹೆಂಡ್ತಿರು, ನಿನ್ನ ಮದ್ವೆ ಆಗ್ತೀನಿ ಅಂತ ಕಥೆ ಕಟ್ಟಿದ್ದ- ಮನು ಕರ್ಮಕಾಂಡ ಬಿಚ್ಚಿಟ್ಟ ಸಂತ್ರಸ್ತೆ

    ರಶ್ಮಿಕಾ ಮಂದಣ್ಣ ಅವರನ್ನೂ ಕೇಳಿದ್ದೇವೆ. ಅವರು ಬೇರೆ ಕಡೆ ಸೈನ್ ಮಾಡಿದ್ದೇನೆ ಆಗಲ್ಲ ಅಂದ್ರು. ಶ್ರೀಲೀಲಾ ಅವರನ್ನು ಸಂಪರ್ಕಿಸಿದ್ದೇವೆ, ಅವ್ರೂ ಆಗಲ್ಲ ಅಂದಿದ್ರು. ಬಳಿಕ ಪೂಜಾ ಹೆಗಡೆ, ಕಿಯಾರಾ ಅಡ್ವಾಣಿ ಅವರೂ ಆಗೋದಿಲ್ಲ ಬೇರೆ ಪ್ರಾಜೆಕ್ಟ್ ಒಪ್ಪಿಕೊಂಡಿದ್ದೇನೆ ಅಂತಾ ಹೇಳಿದ್ರು. ದೀಪಿಕಾ ಪಡುಕೋಣೆ ನಮ್ಮ ಬಜೆಟ್‌ಗೆ ಎಟುಕದವರು, ಹಾಗಾಗಿ ಅವರನ್ನು ಸಂಪರ್ಕ ಮಾಡಿಲ್ಲ. ಕೊನೆಯದಾಗಿ ತಮನ್ನಾ ಭಾಟಿಯಾ ಅವರನ್ನು ಆಯ್ಕೆ ಮಾಡಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ತಾಳಿ ಕಟ್ಟುವ ವೇಳೆ ಮುರಿದು ಬಿದ್ದ ಮದುವೆ – ನಂಗೆ ಮದ್ವೆ ಬೇಡ ಎಂದ ವಧು, ವರ ಶಾಕ್‌

    ಇನ್ನು ಯಾರೇ ರಾಯಭಾರಿ ಆದರೂ 2 ವರ್ಷ ಲಾಕ್ ಆಗ್ತಾರೆ. ಇದರಲ್ಲಿ ಕನ್ನಡಕ್ಕೆ ಅವಮಾನ ಮಾಡಬೇಕು ಎಂಬ ಉದ್ದೇಶ ಇಲ್ಲ. ಇದು ಬಿಸಿನೆಸ್, ಸ್ಪರ್ಧೆ ಜಾಸ್ತಿ. ಕನ್ನಡದ ಅಸ್ಮಿತೆ, ಕನ್ನಡದ ಕಲಾವಿದರ ಬಗ್ಗೆ ಬದ್ಧತೆ, ಗೌರವ ಇದೆ. ಯಾರೂ ವಿವಾದ ಮಾಡಬಾರದು. ನಮ್ಮದು ಪ್ಯಾನ್ ಇಂಡಿಯಾ ಬಿಸಿನೆಸ್, ಈಗ ವಿದೇಶಕ್ಕೂ ಬಿಸಿನೆಸ್ ಒಯ್ಯಬೇಕೆಂಬ ಯೋಜನೆ ಇದೆ ಎಂದು ವಿವರಿಸಿದರು. ಇದನ್ನೂ ಓದಿ: ಹಾನಗಲ್ ಗ್ಯಾಂಗ್ ರೇಪ್ | ಆರೋಪಿಗಳಿಗೆ ಜಾಮೀನು – ಜೈಲಿನಿಂದಲೇ 5 ಕಾರು, ಹಿಂಬಾಲಕರೊಂದಿಗೆ ರೋಡ್ ಶೋ

    ಮೈಸೂರು ಸ್ಯಾಂಡಲ್ ಸಂಸ್ಥೆಯಿಂದ ಹೊಸ ಸೋಪ್‌ಗಳನ್ನು ಸಹ ಪರಿಚಯ ಮಾಡಿದ್ದೇವೆ. ನಾವು ಈಗ ಪರ್‌ಫ್ಯೂಮ್ ಮಾರ್ಕೆಟ್‌ಗೂ ಕಾಲಿಡ್ತಿದ್ದೇವೆ. ಇದನ್ನು 5 ಸಾವಿರ ಕೋಟಿ ರೂ. ಬಿಸಿನೆಸ್‌ಗೆ ತೆಗೆದುಕೊಂಡು ಹೋಗುವ ಯೋಜನೆ ಇದೆ. ಮುಂದೆ ವಿದೇಶಿಯವರನ್ನೂ ರಾಯಭಾರಿಯಾಗಿ ಆಯ್ಕೆ ಮಾಡುವ ಉದ್ದೇಶ ಇದೆ. ಆ ಕಾಲ ಬರಲಿ ಅಂತ ಹಾರೈಸಿ. ಬಿಸಿನೆಸ್ ಇನ್ನೂ ಎತ್ತರಕ್ಕೆ ಒಯ್ಯುವ ಉದ್ದೇಶ ಇದೆ ಎಂದು ತಿಳಿಸಿದರು. ಇದನ್ನೂ ಓದಿ: ಯೂಟ್ಯೂಬ್‌ ಸಂದರ್ಶನ ನೀಡಿ ತಗಲಾಕಿಕೊಂಡ ದಾಸ – ಕೋರ್ಟ್‌ನಿಂದ ದರ್ಶನ್‌, ವಿಜಯಲಕ್ಷ್ಮಿಗೆ ಸಮನ್ಸ್‌

    ಗಲ್ಫ್, ಯುರೋಪ್ ದೇಶಗಳಿಗೂ ನಮ್ಮ ಉತ್ಪನ್ನಗಳು ಹೋಗಬೇಕು. 23 ಉತ್ಪನ್ನಗಳ ಉತ್ಪಾದನೆ ಮಾಡ್ತಿದ್ದೇವೆ. ಕನ್ನಡ, ನಮ್ಮ ಕಲಾವಿದರ ಬಗ್ಗೆ ನಮಗೆ ಗೌರವ ಇದೆ. ಇದರಲ್ಲಿ ಯಾವುದೇ ತಪ್ಪು ತಿಳಿದುಕೊಳ್ಳುವ ಅಗತ್ಯ ಇಲ್ಲ. ಕಮಿಟಿ ರಚಿಸಿ ತಮನ್ನಾ ಭಾಟಿಯಾರನ್ನು ರಾಯಭಾರಿಯಾಗಿ ಆಯ್ಕೆ ಮಾಡಲಾಗಿದೆ ಎಂದು ಸಮರ್ಥಿಸಿದರು.

  • ಚಿಕ್ಕಮಗಳೂರು ಏರ್-ಸ್ಟ್ರಿಪ್ ನಿರ್ಮಾಣ: ಭೂಸ್ವಾಧೀನಕ್ಕೆ ಬಾಕಿ ಇರುವ 17 ಕೋಟಿ ಬಿಡುಗಡೆಗೆ ಕ್ರಮ

    ಚಿಕ್ಕಮಗಳೂರು ಏರ್-ಸ್ಟ್ರಿಪ್ ನಿರ್ಮಾಣ: ಭೂಸ್ವಾಧೀನಕ್ಕೆ ಬಾಕಿ ಇರುವ 17 ಕೋಟಿ ಬಿಡುಗಡೆಗೆ ಕ್ರಮ

    ಬೆಂಗಳೂರು: ಪ್ರವಾಸೋದ್ಯಮ ಮತ್ತು ವಾಣಿಜ್ಯ ವ್ಯವಹಾರಗಳಿಗೆ ಉತ್ತೇಜನ ನೀಡಲು ಚಿಕ್ಕಮಗಳೂರಿನಲ್ಲಿ (Chikkamagaluru) ಏರ್-ಸ್ಟ್ರಿಪ್ (Airstrip) ನಿರ್ಮಾಣಕ್ಕೆ ಸಂಬಂಧಿಸಿದಂತೆ ಬಾಕಿ ಇರುವ ಭೂಸ್ವಾಧೀನ ಪ್ರಕ್ರಿಯೆಯ ಪರಿಹಾರದ ಬಾಬ್ತಿನ 17.6 ಕೋಟಿ ರೂ.ಗಳನ್ನು ತ್ವರಿತವಾಗಿ ಬಿಡುಗಡೆ ಮಾಡುವ ಉದ್ದೇಶದಿಂದ ಈ ಯೋಜನೆಯ ಪ್ರಸ್ತಾವನೆಯನ್ನು ಮುಂಬರುವ ಸಚಿವ ಸಂಪುಟ ಸಭೆಗೆ ಮಂಡಿಸಲು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ ಪಾಟೀಲ್‌ (M.B Patil) ಅಧಿಕಾರಿಗಳಿಗೆ ಸೂಚಿಸಿದರು.

    2023-24ರ ಬಜೆಟ್‌ನಲ್ಲಿ ಘೋಷಿಸಿದ್ದ ಚಿಕ್ಕಮಗಳೂರು ಮತ್ತು ಕೊಡಗು ಏರ್-ಸ್ಟ್ರಿಪ್ ನಿರ್ಮಾಣ ಯೋಜನೆಗೆ ಸಂಬಂಧಿಸಿದಂತೆ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ ಜೆ ಜಾರ್ಜ್ ಅವರ ಜೊತೆ ಸಂಬಂಧಿಸಿದ ಅಧಿಕಾರಿಗಳೊಂದಿಗೆ ವಿಧಾನಸೌಧದಲ್ಲಿ ಸಭೆ ನಡೆಸಿ, ಸೂಕ್ತ ಆದೇಶ ನೀಡಿದರು. ಇದನ್ನೂ ಓದಿ: ಪಿಎಂ ಇ-ಡ್ರೈವ್ – ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ ಹಂಚಿಕೆ ಭರವಸೆ ಕೊಟ್ಟ ಹೆಚ್‌ಡಿಕೆ

    ಚಿಕ್ಕಮಗಳೂರು ಏರ್-ಸ್ಟ್ರಿಪ್ ಯೋಜನೆಗೆ ಅಲ್ಲಿನ ಜಿಲ್ಲಾಡಳಿತವು ಚಿಕ್ಕಮಗಳೂರು-ಹಿರೇಮಗಳೂರು ನಡುವೆ ಈಗಾಗಲೇ 137 ಎಕರೆ ಜಮೀನು ನೀಡಿದೆ. ಈ ಪೈಕಿ 120 ಎಕರೆ ಸರ್ಕಾರಿ ಜಮೀನೇ ಆಗಿದೆ. ಉಳಿದ 17.1 ಎಕರೆ ಮಾತ್ರ ಖಾಸಗಿಯಾಗಿದ್ದು, ಇದರ ಸ್ವಾಧೀನ ಬಾಕಿ ಇದೆ. ಇದಕ್ಕೆ 24.6 ಕೋಟಿ ರೂ. ವೆಚ್ಚವಾಗಲಿದ್ದು, ಈಗಾಗಲೇ 7 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ಉಳಿದಿರುವ 17.6 ಕೋಟಿ ರೂ.ಗಳ ಬಿಡುಗಡೆ ಬಾಕಿ ಇದೆ ಎಂದು ಅವರು ವಿವರಿಸಿದ್ದಾರೆ.

    ಇದು ಸಕಾರದ ಮುಂದೆ ಬಂದಿದ್ದು, ಬಳಿಕ ಕರ್ನಾಟಕ ರಾಜ್ಯ ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮಕ್ಕೆ ಬಾಕಿ ಹಣ ಬಿಡುಗಡೆ ಮಾಡುವಂತೆ ಸೂಚಿಸಲಾಗಿತ್ತು. ಇಲ್ಲಿಂದ ಈ ವಿಚಾರವು ಹಣಕಾಸು ಇಲಾಖೆಗೆ ಹೋಗಿದೆ. ಅಲ್ಲಿಂದ ಸಂಪುಟ ಸಭೆಯ ಮುಂದೆ ಬರಬೇಕಾಗಿದೆ. ಹೀಗಾಗಿ ಕೂಡಲೇ ಈ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಇಬ್ಬರೂ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

    ಉದ್ದೇಶಿತ ಏರ್-ಸ್ಟ್ರಿಪ್ ನಲ್ಲೇ ಹೆಲಿಪೋರ್ಟ್ ಕೂಡ ಅಭಿವೃದ್ಧಿಪಡಿಸಲಾಗುವುದು. ಜತೆಗೆ ಮುಂಬರುವ ದಿನಗಳಲ್ಲಿ ಬೃಹತ್ ವಿಮಾನಗಳ ಪ್ರಯಾಣಕ್ಕೂ ಅನುಕೂಲವಾಗುವ ಹಾಗೆ ನಿಲ್ದಾಣ ಅಭಿವೃದ್ಧಿ ಪಡಿಸುವ ಉದ್ದೇಶ ಇಟ್ಟುಕೊಳ್ಳಬೇಕು. ಪೂರಕವಾಗಿ ಅಕ್ಕಪಕ್ಕದ ಜಮೀನು ಗುರುತಿಸುವುದು. ಮುಂದಿನ ದಿನಗಳಲ್ಲಿ ಇದನ್ನು ಸ್ವಾಧೀನ ಪಡಿಸಿಕೊಳ್ಳಲು ಜಿಲ್ಲಾಡಳಿತಕ್ಕೆ ಸೂಚಿಸಲಾಗುವುದು. ಇದಕ್ಕೆ ಕೆಎಸ್ಐಐಡಿಸಿ ವತಿಯಿಂದ ಪರಿಣತರ ತಂಡವನ್ನು ಕಳಿಸಲಾಗುವುದು ಎಂದು ಅವರು ವಿವರಿಸಿದ್ದಾರೆ.

    ಇದೇ ರೀತಿಯಲ್ಲಿ ಕೊಡಗಿನಲ್ಲಿ ಏರ್-ಸ್ಟ್ರಿಪ್ ನಿರ್ಮಾಣಕ್ಕೆ ಅಗತ್ಯವಿರುವ ಭೂಮಿಯ ಸ್ವಾಧೀನಕ್ಕೆ ಸಂಬಂಧಿಸಿದಂತೆ ಸಮಸ್ಯೆ ತಲೆದೋರಿದೆ. ಇದನ್ನು ಆದಷ್ಟು ಬೇಗ ಬಗೆಹರಿಸಿ, ಜಾಗವನ್ನು ಗುರುತಿಸಬೇಕು ಎಂದು ನಿರ್ದೇಶನ ನೀಡಲಾಗಿದೆ ಎಂದು ಪಾಟೀಲ ಮಾಹಿತಿ ನೀಡಿದ್ದಾರೆ.

    ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಕಾರ್ಯದರ್ಶಿ ಎನ್ ಮಂಜುಳಾ, ಕೆಎಸ್ಐಐಡಿಸಿ ವ್ಯವಸ್ಥಾಪಕ ನಿರ್ದೇಶಕಿ ಖುಷ್ಬೂ ಗೋಯಲ್, ಕೆಐಎಡಿಬಿ ಸಿಇಒ ಡಾ.ಮಹೇಶ ಅವರು ಸಭೆಯಲ್ಲಿ ಹಾಜರಿದ್ದರು. ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರು ವರ್ಚುಯಲ್ ರೂಪದಲ್ಲಿ ಸಭೆಯಲ್ಲಿ ಭಾಗವಹಿಸಿದ್ದರು. ಇದನ್ನೂ ಓದಿ: ನಾನು ಶಾಂತವಾಗಿದ್ದರೂ ನನ್ನ ರಕ್ತ ನಾಳಗಳಲ್ಲಿ ʻಸಿಂಧೂರʼ ಕುದಿಯುತ್ತಲೇ ಇರುತ್ತೆ – ಪಾಕ್‌ಗೆ ಮೋದಿ ಖಡಕ್‌ ಸಂದೇಶ

  • ಶಿವಾನಂದ್ ಪಾಟೀಲ್ ವಿಚಾರ ಹೈಕಮಾಂಡ್ ಗಮನಕ್ಕೆ ತರುತ್ತೇನೆ: ಎಂ.ಬಿ.ಪಾಟೀಲ್

    ಶಿವಾನಂದ್ ಪಾಟೀಲ್ ವಿಚಾರ ಹೈಕಮಾಂಡ್ ಗಮನಕ್ಕೆ ತರುತ್ತೇನೆ: ಎಂ.ಬಿ.ಪಾಟೀಲ್

    ಬೆಂಗಳೂರು: ಶಿವಾನಂದ್ ಪಾಟೀಲ್ (Shivanand Patil) ವಿಚಾರ ಹೈ ಕಮಾಂಡ್ ಗಮನಕ್ಕೆ ತರುತ್ತೇನೆ ಎಂದು ಸಚಿವ ಎಂ.ಬಿ ಪಾಟೀಲ್‌ (M.B Patil) ಹೇಳಿದ್ದಾರೆ.

    ಬೆಂಗಳೂರಿನಲ್ಲಿ (Bengaluru) ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ವೇಳೆ, ಶಿವಾನಂದ್ ಪಾಟೀಲ್ ಅವರು ರಾಜೀನಾಮೆ ಕೊಟ್ಟ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದರು. ಈ ವೇಳೆ, ಅಶ್ಲೀಲ ಪದದಲ್ಲಿ ಮಾತಾಡೋದು ತಪ್ಪು ಅಂತ ಹೇಳಿದ್ದೇನೆ. ಮೊನ್ನೆ ಕೂಡ ಮೊಹಮ್ಮದ್ ಪೈಗಂಬರ್ ಬಗ್ಗೆ ಹೇಳಿಕೆ ಕೊಟ್ಟಿದ್ದು ತಪ್ಪು. ಮುಸಲ್ಮಾನರು ಸಭೆ ಮಾಡಿದ್ರೂ, ಅಲ್ಲಿ ಕೂಡ ಅಶ್ಲೀಲ ಪದ ಬಳಿಸಿದ್ದರು. ಇದಕ್ಕೆ ಮೂಲ ಕಾರಣ ಯತ್ನಾಳ್, ನೀವು ಅಭಿವೃದ್ಧಿ ಬಗ್ಗೆ ಸವಾಲು ಹಾಕಿ, ಈ ರೀತಿ ತಂದೆ ತಾಯಿ ಅಂತ ಮಾತಾಡೋದು ತಪ್ಪು ಎಂದಿದ್ದಾರೆ.

    ಸುರ್ಜೇವಾಲ ಅವರು ಇಲ್ಲಿಗೆ ಬಂದಿದ್ದರು ಅವರ ಜೊತೆ ಇದ್ದೆ ಎಂದು ತಿಳಿದುಕೊಂಡು ಈ ರೀತಿ ಮಾಡಿದರು. ತಪ್ಪು ಸಂದೇಶ ಮುಸ್ಲಿಂ ಸಮುದಾಯಕ್ಕೆ ಕೊಡೋಕೆ ಹೊರಟಿದ್ದಾರೆ. ನಾನು ಈ ವಿಚಾರ ಹೈಕಮಾಂಡ್‌ಗೂ ಹೇಳ್ತೀನಿ. ಮೊದಲು ಅಲ್ಲಿ ನಮ್ಮ ತಂದೆ ಶಾಸಕರಾಗಿದ್ದರು. ಈಗ ನಾನು ಶಾಸಕ ಆಗಿದ್ದೇನೆ. ಈ ಹಿಂದೆ ಯತ್ನಾಳ್‌ಗೆ (Basangouda Patil Yatnal) ಮಾತಾಡೋಕೆ ಕಲ್ಸಿದ್ದೆ ಇವರು. ಅವ್ರು ನನ್ನ ಹೆಸರು ಪ್ರಸ್ತಾಪ ಮಾಡಿದರು. ಸೋತ ವ್ಯಕ್ತಿ ಅಂತ ಹೇಳಿಕೆ ಕೊಟ್ಟಿದ್ದಕ್ಕೆ ನಾನು ಮಾತಾಡ್ತಿದೀನಿ. ಹೈ ಕಮಾಂಡ್, ಅಧ್ಯಕ್ಷರು, ಸಿಎಂ ಎಲ್ಲರ ಗಮನಕ್ಕೆ ತರ್ತಿನಿ ಎಂದು ಎಚ್ಚರಿಕೆ ನೀಡಿದ್ದಾರೆ.

    ಇವರಿಗೆ ಮುಂದಿನ ದಿನದಲ್ಲಿ ವಿಜಯಪುರದಲ್ಲಿ ಸ್ಪರ್ಧೆ ಮಾಡಬೇಕು ಅಂತ ಈ ರೀತಿ ತಪ್ಪು ಸಂದೇಶ ರವಾನೆ ಮಾಡ್ತಿದ್ದಾರೆ. ಮುಸಲ್ಮಾನರ ಪ್ರತಿಭಟನೆಗೆ ನಾನು ಹೋಗಿಲ್ಲ. ಅವರಿಗೆ ಹಿಂದಿನ ದಿನ ಭೇಟಿ ಮಾಡಿ ಮಾತನಾಡಿದ್ದೆ. ಬರೋಕೆ ಆಗಲ್ಲ ಅಂತ ಹೇಳಿದ್ದೆ. ನನ್ನ ಸಹೋದರನನ್ನ ಅಲ್ಲಿಗೆ ಕಳ್ಸಿದ್ದೆ. ಬೇರೆಯವರ ತರ ನನ್ನ ಸಹೋದರ ಬೇರೆ ಪಕ್ಷದಲ್ಲಿ ಇಲ್ಲ. ಒಂದೇ ಪಕ್ಷದಲ್ಲಿ ಇದ್ದೇವೆ. ಶಿವಾನಂದ ಪಾಟೀಲ್ ಅವರೇ ಈ ರೀತಿ ಮಾಡಬೇಡಿ ಎಲ್ಲರೂ ಒಂದೇ ಪಕ್ಷದಲ್ಲಿ ಇದ್ದೀವಿ. ಒಟ್ಟಿಗೆ ಯತ್ನಾಳ್ ವಿರುದ್ಧ ಹೋರಾಟ ಮಾಡೋಣ. 15 ದಿನ ಆಗಿದೆ ಮಹಮ್ಮದ್ ಪೈಗಂಬರ್‌ಗೆ ಬೈದು ಇವಾಗ ಹೇಳ್ತಿದ್ದಾರೆ. ನೀವು ಅವಾಗ ಯಾಕೆ ಮಾತಾಡಿಲ್ಲ ಎಂದು ಪ್ರಶ್ನಿಸಿದ್ದಾರೆ.

  • ಜಾತಿಗಣತಿಯಲ್ಲಿ ಲಿಂಗಾಯತರ ಸಂಖ್ಯೆ ಕಡಿಮೆ ಆಗಲು ನಾವೇ ಕಾರಣ: ಎಂ.ಬಿ.ಪಾಟೀಲ್

    ಜಾತಿಗಣತಿಯಲ್ಲಿ ಲಿಂಗಾಯತರ ಸಂಖ್ಯೆ ಕಡಿಮೆ ಆಗಲು ನಾವೇ ಕಾರಣ: ಎಂ.ಬಿ.ಪಾಟೀಲ್

    ವಿಜಯಪುರ: ಜಾತಿಗಣತಿಯಲ್ಲಿ (Caste Census) ಲಿಂಗಾಯತರ ಸಂಖ್ಯೆ ಕಡಿಮೆ ಆಗಲು ನಾವೇ ಕಾರಣ. ನಮ್ಮವರು ಮೀಸಲಾತಿಗಾಗಿ ಹಿಂದೂ ರೆಡ್ಡಿ, ಹಿಂದೂ ಬಣಜಿಗ ಈ ತರಹ ಬರೆಸಿದ್ದಾರೆ. ಎಲ್ಲರನ್ನೂ ಒಗ್ಗೂಡಿಸಿದರೇ ಲಿಂಗಾಯತರು 1 ಕೋಟಿಗೂ ಅಧಿಕ ಆಗುತ್ತಾರೆ ಎಂದು ಸಚಿವ ಎಂ.ಬಿ.ಪಾಟೀಲ್ (M B Patil)  ಹೇಳಿದರು.

    ವಿಜಯಪುರದಲ್ಲಿ (Vijayapura) ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಾತಿಗಣತಿ ಅಧ್ಯಯನ ಮಾಡಲು ಇಂದು ವರದಿ ಪ್ರತಿ ಬಂದಿದೆ. ನಾನು ಇದುವರೆಗೂ ಅಧ್ಯಯನ ಮಾಡಿಲ್ಲ. ಅದನ್ನ ತಗೆದು ನೋಡುತ್ತೇನೆ. ಇವತ್ತು ಜಾತಿಗಣತಿಯಲ್ಲಿ ಲಿಂಗಾಯತರ ಸಂಖ್ಯೆ ಕಡಿಮೆ ಆಗಿದೆ. ಮಾಧ್ಯಮಗಳ ವರದಿಯಲ್ಲಿ ನೋಡಿದ್ದೇನೆ. ಲಿಂಗಾಯತ ಕೆಲ ಸಮಾಜದವರು ಮೀಸಲಾತಿಗಾಗಿ ದಾಖಲಾತಿಗಳಲ್ಲಿ ಬೇರೆ ನಮೂದಿಸಿದ್ದಾರೆ ಎಂದರು. ಇದನ್ನೂ ಓದಿ: ಜಾತಿ ಜನಗಣತಿ ವರದಿಯೇ ಸಿದ್ದರಾಮಯ್ಯಗೆ ಮರಣ ಶಾಸನ ಆಗಬಹುದು: ವಿ. ಸೋಮಣ್ಣ

    ಜಾತಿಗಣತಿಯಲ್ಲಿ ಲಿಂಗಾಯತರ ಸಂಖ್ಯೆ ಕಡಿಮೆ ಆಗಲು ನಾವೇ ಕಾರಣ. ನಮ್ಮವರು ಮೀಸಲಾತಿಗಾಗಿ ಹಿಂದೂ ರೆಡ್ಡಿ, ಹಿಂದೂ ಬಣಜಿಗ ಈ ತರಹ ಬರೆಸಿದ್ದಾರೆ. ಇದರಿಂದ ಲಿಂಗಾಯತರ ಸಂಖ್ಯೆ ಕಡಿಮೆಯಾಗಿದೆ. ಎಲ್ಲರನ್ನೂ ಒಗ್ಗೂಡಿಸಿದರೆ ಲಿಂಗಾಯತರು 1 ಕೋಟಿಗೂ ಅಧಿಕ ಆಗುತ್ತಾರೆ. ಮೊದಲು ವರದಿಯನ್ನ ಅಧ್ಯಯನ ಮಾಡಿದ ನಂತರ ನಮ್ಮ ಸಂಶಯಗಳೇನಿವೆ ಅದನ್ನ ಚರ್ಚಿಸುತ್ತೇವೆ. ವರದಿಯ ಒಳಗಡೆ ಏನಿದೆ ಎಂದು ನೋಡಿ ನಂತರ ಅದರ ಬಗ್ಗೆ ಚರ್ಚೆ ಮಾಡುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: ಪತ್ನಿ ಆತ್ಮಹತ್ಯೆ; ಹಳೇ ಲವರ್ ಜೊತೆಗಿದ್ದ ಅಕ್ರಮ ಸಂಬಂಧದ ಬಗ್ಗೆ ಒಪ್ಪಿಕೊಂಡ ಟೆಕ್ಕಿ ಪತಿ

    ಬಿಜೆಪಿಯವರು ಕೇಂದ್ರದ ವಿರುದ್ಧ ಹೋರಾಟ ಮಾಡಲಿ
    ಬಿಜೆಪಿ (BJP) ಜನಾಕ್ರೋಶ ಯಾತ್ರೆ ವಿಚಾರವಾಗಿ ಪ್ರತಿಕ್ರಿಯಿಸಿ, ಯಾವ ಮುಖ ಇಟ್ಟುಕೊಂಡು ಯಾತ್ರೆ ಮಾಡುತ್ತಾರೆ. ಕನ್ನಡಿಯಲ್ಲಿ ಮುಖ ನೋಡೋಕೆ ಹೇಳಿ ಅವರಿಗೆ. ಇಲ್ಲ ಮೋದಿ ಮುಖ ನೋಡಿ ಮೋದಿಗೆ ನಮಸ್ಕಾರ ಮಾಡಲು ಹೇಳಿ. 50 ರೂ. ಸಿಲಿಂಡರ್ ದರ ಜಾಸ್ತಿ ಆಗಿದೆ. ಡಿಸೇಲ್, ಪೆಟ್ರೋಲ್ ದರ ಜಾಸ್ತಿ ಮಾಡಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಖಳನಟ ಶೇಷಗಿರಿ ಬಸವರಾಜು ವಿರುದ್ಧ ರೇಪ್ ಆರೋಪ ಪ್ರಕರಣ‌; ಬಿ-ರಿಪೋರ್ಟ್ ಸಲ್ಲಿಕೆ

    ಬಿಜೆಪಿ ಅವರು ಹೋರಾಟ ಮಾಡುವುದು ಸರಿಯಾಗಿದೆ. ಆದರೆ ಕಾಂಗ್ರೆಸ್ ವಿರುದ್ಧದ ಹೋರಾಟ ಬೇಡ. ಕೇಂದ್ರ ಸರ್ಕಾರ, ನರೇಂದ್ರ ಮೋದಿ ವಿರುದ್ಧ ಮಾಡಲಿ ಎಂದು ಸಲಹೆ ಕೊಡುತ್ತೇನೆ ಟೀಕಿಸಿದರು. ಇದನ್ನೂ ಓದಿ: ಜಾತಿಗಣತಿ ವರದಿ ತಯಾರಿಕೆಯ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ: ರಂಭಾಪುರಿ ಶ್ರೀ

    ಯತ್ನಾಳ್ ಹತ್ಯೆಗೆ ಸಂಚು ವಿಚಾರವಾಗಿ ಮಾತನಾಡಿ, ಕಾನೂನು ಎಲ್ಲರಿಗೂ ಅನ್ವಯ ಆಗುತ್ತದೆ. ಯತ್ನಾಳ್ ಅವರು ಇವತ್ತು ಮುಸ್ಲಿಂಮರ ಪೈಗಂಬರ್ ಬಗ್ಗೆ ಮಾತನಾಡಿರುವುದು ಸರಿಯಲ್ಲ. ಯತ್ನಾಳ್ ಮೇಲೆ ಬೆದರಿಕೆ ಹಾಕಿದ್ದು ಅದು ಕೂಡ ತಪ್ಪು. ಈ ಎರಡು ಘಟನೆಗಳ ಪ್ರಕರಣ ದಾಖಲಾಗುತ್ತದೆ ಹಾಗೂ ತನಿಖೆಯೂ ಆಗುತ್ತದೆ. ಆದರೆ ಯತ್ನಾಳ್ ಅವರೇ ಇದನೆಲ್ಲಾ ಅಹ್ವಾನಿಸಿಕೊಂಡಿದ್ದಾರೆ. ಯತ್ನಾಳ್ ಅವರಿಗೆ ಸೂಕ್ತ ಭದ್ರತೆ ಕೊಡುತ್ತೇವೆ ಆತಂಕ ಬೇಡ ಎಂದರು.

  • ಯತ್ನಾಳ್‌ರನ್ನ ಕಾಂಗ್ರೆಸ್‌ಗೆ ಸೇರಿಸಿಕೊಳ್ಳೋದು ಕಷ್ಟ – ಎಂ.ಬಿ ಪಾಟೀಲ್‌

    ಯತ್ನಾಳ್‌ರನ್ನ ಕಾಂಗ್ರೆಸ್‌ಗೆ ಸೇರಿಸಿಕೊಳ್ಳೋದು ಕಷ್ಟ – ಎಂ.ಬಿ ಪಾಟೀಲ್‌

    ವಿಜಯಪುರ: ಶಾಸಕ ಬಸನಗೌಡ ಪಾಟೀಲ್‌ (Basanagouda Patil Yatnal) ಅವರನ್ನ ಕಾಂಗ್ರೆಸ್‌ ಪಕ್ಷಕ್ಕೆ ಸೇರಿಸಿಕೊಳ್ಳುವುದು ಕಷ್ಟ ಸಾಧ್ಯ ಅಂತ ಸಚಿವ ಎಂ.ಬಿ ಪಾಟೀಲ್‌ (M.B. Patil) ಹೇಳಿದ್ದಾರೆ.

    ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯತ್ನಾಳ್ ಹೊಸ ಪಕ್ಷ ಕಟ್ಟುವ ವಿಚಾರಕ್ಕೆ ನಾನು ಏನು ಹೇಳಲ್ಲ. ಆದ್ರೆ ಅವರು ನಮ್ಮ ಪಕ್ಷಕ್ಕೆ ಯಾವುದೇ ಅರ್ಜಿ ಹಾಕಿಲ್ಲ. ಹಾಕಿದರು ಕೂಡ ನಮ್ಮಲ್ಲಿ ಅವರನ್ನು ಸೇರಿಸಿಕೊಳ್ಳುವುದು ಕಷ್ಟ ಇದೆ. ಅವರು ಒಂದು ಸಮಾಜದ (ಮುಸ್ಲಿಂ) ವಿರುದ್ಧ ಬಹಳಷ್ಟು ಮಾತನಾಡಿದ್ದಾರೆ. ಈ ಕಾರಣ ನಮ್ಮಲ್ಲಿ ಅವರನ್ನ ಸೇರಿಸಿಕೊಳ್ಳುವುದು ಕಷ್ಟ ಅಂತ ಸಚಿವರು ಹೇಳಿದ್ದಾರೆ.

    ಇದೇ ವೇಳೆ ಸಚಿವ ರಾಜಣ್ಣ ಪುತ್ರನ ಹತ್ಯೆಗೆ ಸುಪಾರಿ ವಿಚಾರಕ್ಕೆ ಪ್ರತಿಕ್ರಿಯಿಸಿ, ಈ ಪ್ರಕರಣ ನೋಡಿಕೊಳ್ಳಲು ಗೃಹ ಸಚಿವರು, ಪೊಲೀಸರು ಇದ್ದಾರೆ. ಅವರು ಪ್ರಕರಣವನ್ನ ಬಯಲಿಗೆ ಎಳೆಯುತ್ತಾರೆ ಎಂದಿದ್ದಾರೆ.  ಇದನ್ನೂ ಓದಿ: ಬೆಂಗ್ಳೂರು ಸೇರಿದಂತೆ ದೇಶದ ವಿವಿಧೆಡೆ ವಕ್ಫ್‌ ಬಿಲ್‌ಗೆ ವಿರೋಧ – ಕಪ್ಪು ಪಟ್ಟಿ ಧರಿಸಿ ರಂಜಾನ್‌ ಪ್ರಾರ್ಥನೆ

    ಇನ್ನೂ ಹನಿಟ್ರ್ಯಾಪ್ ವಿಚಾರದಲ್ಲಿ ಸಚಿವ ರಾಜಣ್ಣ ದೂರು ಯಾಕೆ ಕೊಟ್ಟಿಲ್ಲ ಎನ್ನುವ ವಿಚಾರ ಕುರಿತು ಮಾತನಾಡಿ, ಪಕ್ಷದಲ್ಲಿ ಯಾವುದೇ ಒತ್ತಡ ಇಲ್ಲ. ದೂರು ಕೊಡೋದು ಅವರಿಗೆ ಬಿಟ್ಟ ವಿಚಾರ. ಯಾಕೆ ಏನು ಅನ್ನೋದನ್ನ ರಾಜಣ್ಣರಿಗೆ ಕೇಳಬೇಕು ಅಂತ ಹೇಳಿದ್ದಾರೆ.  ಇದನ್ನೂ ಓದಿ: Exclusive | ಎಂಎಲ್‌ಸಿ ರಾಜೇಂದ್ರ ಹತ್ಯೆಗೆ ಸುಪಾರಿ ಕೇಸ್‌ – ಆಡಿಯೋದಲ್ಲಿ ಬಯಲಾಯ್ತು ಸಂಚಿನ ರಹಸ್ಯ

    ಮುಂದುವರಿದು.. ರಾಜ್ಯಾಧ್ಯಕ್ಷ ಬದಲಾವಣೆಯನ್ನ ಹೈಕಮಾಂಡ್ ನಿರ್ಧಾರ ಮಾಡುತ್ತೆ. ನಾವು ಮಾತನಾಡೋದ್ರಲ್ಲಿ ಅರ್ಥ ಇಲ್ಲ ಅಂತ ಎಂಬಿಪಿ ತಿಳಿಸಿದ್ದಾರೆ.  ಇದನ್ನೂ ಓದಿ: ಹೋಟಲ್‌ನಲ್ಲಿದ್ದಾಗ ಭೂಕಂಪ – 10ನೇ ಫ್ಲೋರ್‌ನಿಂದ ಕನ್ನಡಿಗರು ಬದುಕಿ ಬಂದಿದ್ದೇ ರೋಚಕ!

  • ಗೋಲ್ಡ್ ಸ್ಮಗ್ಲಿಂಗ್ ರನ್ಯಾ ಕೇಸ್: ಯಾವ ಸಚಿವರು? – ಎಂ.ಬಿ ಪಾಟೀಲ್‌ ಪ್ರಶ್ನೆ

    ಗೋಲ್ಡ್ ಸ್ಮಗ್ಲಿಂಗ್ ರನ್ಯಾ ಕೇಸ್: ಯಾವ ಸಚಿವರು? – ಎಂ.ಬಿ ಪಾಟೀಲ್‌ ಪ್ರಶ್ನೆ

    – ಯಾರ ಮೇಲೂ ಆರೋಪ ಮಾಡಲ್ಲ ಎಂದ ಹೆಚ್‌.ಕೆ ಪಾಟೀಲ್

    ಬೆಂಗಳೂರು: ರನ್ಯಾ ರಾವ್ (Ranya Rao) ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಸಚಿವರ ಭಾಗಿ ಆರೋಪ ವಿಚಾರಕ್ಕೆ ಸಚಿವ ಹೆಚ್.ಕೆ.ಪಾಟೀಲ್ (H.K.Patil) ಪ್ರತಿಕ್ರಿಯಿಸಿದ್ದಾರೆ.

    ಮೊದಲು ಇಬ್ಬರು ಸಚಿವರು ಅಂತಾ ಹೇಳಿದ್ರು. ಈಗ ಮೂವರು ಸಚಿವರು ಅಂತಿದ್ದಾರೆ. ಏನೇ ಇರಲಿ, ಕಾನೂನು ಪ್ರಕಾರ ಕ್ರಮ ಆಗಬೇಕು. ಸಿಬಿಐ ತನಿಖೆ ನಡೆಯುತ್ತಿದೆ. ನಾನು ಯಾರ ಮೇಲೂ ಆರೋಪ ಮಾಡಲ್ಲ. ಯಾರೇ ತಪ್ಪಿತಸ್ಥರಿದ್ದರೂ ಕ್ರಮ ಆಗಬೇಕು ಎಂದರು. ಇದನ್ನೂ ಓದಿ: ರನ್ಯಾ ರಾವ್‌ಗೆ KIADBಯಿಂದ ಜಮೀನು ಮಂಜೂರು ಮಾಡಿಲ್ಲ: ಸಿಇಓ ಸ್ಪಷ್ಟನೆ

    ಇದೇ ವೇಳೆ, ಸಚಿವ ಎಂ.ಬಿ.ಪಾಟೀಲ್ (M.B.Patil) ಮಾತನಾಡಿ, ಯಾವ ಸಚಿವರು? ನನಗೆ ಅದರ ಬಗ್ಗೆ ಮಾಹಿತಿ ಇಲ್ಲ. ಮಾಧ್ಯಮದಲ್ಲಿ ಬಂದಿದ್ದನ್ನ‌‌ ನಾನು ಗಮನಿಸಿದ್ದೇನೆ ಎಂದು ತಿಳಿಸಿದರು.

    ರನ್ಯಾ ರಾವ್ ನಿರ್ದೇಶಕಿಯಾಗಿರುವ ಕಂಪನಿಗೆ ಕೆಐಎಡಿಬಿಯಿಂದ ಭೂಮಿ ಹಂಚಿಕೆ ಪ್ರಕರಣ ಆರೋಪ ಕುರಿತು ಮಾತನಾಡಿ, ಕೆಐಎಡಿಬಿ ಭೂಮಿ ಹಂಚಿಕೆ ವಿಚಾರ ಬಿಜೆಪಿ ಸರ್ಕಾರದ ಅವಧಿಯಲ್ಲಿ ಆಗಿದ್ದು. ಅವರ ಕಂಪನಿಗೆ ಶಿರಾದಲ್ಲಿ ಭೂಮಿ ಹಂಚಿಕೆ ಆಗಿತ್ತು ಎಂದು ಹೇಳಿದರು. ಇದನ್ನೂ ಓದಿ: ಕಾಂಗ್ರೆಸ್ ಸಚಿವರಿಗೆ ರನ್ಯಾ ಕರೆ ಮಾಡಿದ್ದಾಳೆ: ಶಾಸಕ ಭರತ್ ಶೆಟ್ಟಿ ಬಾಂಬ್

    ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ನಟಿ ರನ್ಯಾ ರಾವ್‌ಗೆ ರಾಜ್ಯದ ಪ್ರಭಾವಿ ನಾಯಕರ ಜೊತೆ ನಂಟಿದೆ ಎಂಬ ಆರೋಪ ಕೇಳಿಬಂದಿದೆ. ನಟಿ ಕೆಲ ಸಚಿವರಿಗೆ ಕರೆ ಮಾಡಿದ್ದಾಳೆ. ಆಕೆಯನ್ನು ಬಿಡಿಸಲು ಸಚಿವರು ಪ್ರಭಾವ ಬಳಸಿದ್ದಾರೆಂಬ ಆರೋಪ ವ್ಯಕ್ತವಾಗಿವೆ.

  • ಹೆಬ್ಬಾಳದಲ್ಲಿ ಮೆಟ್ರೋಗೆ ಜಮೀನು ನೀಡುವುದೇ ನಮ್ಮ ಮೊದಲ ಆದ್ಯತೆ: ಸಚಿವ ಎಂ.ಬಿ.ಪಾಟೀಲ್

    ಹೆಬ್ಬಾಳದಲ್ಲಿ ಮೆಟ್ರೋಗೆ ಜಮೀನು ನೀಡುವುದೇ ನಮ್ಮ ಮೊದಲ ಆದ್ಯತೆ: ಸಚಿವ ಎಂ.ಬಿ.ಪಾಟೀಲ್

    ಬೆಂಗಳೂರು: ಹೆಬ್ಬಾಳದಲ್ಲಿರುವ 45 ಎಕರೆ ಜಾಗವನ್ನು ಬಹುಮಾದರಿ ಸಾರಿಗೆ ಹಬ್ ನಿರ್ಮಾಣಕ್ಕೆ ಬಿಎಂಆರ್‌ಸಿಎಲ್ ಸಂಸ್ಥೆಗೆ (ನಮ್ಮ ಮೆಟ್ರೊ) ಹಸ್ತಾಂತರಿಸಬೇಕು ಎನ್ನುವುದೇ ಸರ್ಕಾರದ ಮುಖ್ಯ ಉದ್ದೇಶವಾಗಿದೆ. ಆದರೆ, ಈ ಪ್ರಕರಣದಲ್ಲಿ ಇರುವ ಕಾನೂನಿನ ತೊಡಕುಗಳನ್ನು ನಿವಾರಿಸಿಕೊಂಡು ಮುಂದುವರಿಯುವುದು ಸೂಕ್ತ ಎನ್ನುವುದಷ್ಟೇ ನಮ್ಮ ಕಳಕಳಿಯಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ.

    ಈ ಬಗ್ಗೆ ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಹೆಬ್ಬಾಳದಲ್ಲಿ ಈಗ ಚರ್ಚೆಯಲ್ಲಿರುವ ಜಮೀನಿನ ಒಟ್ಟು ವಿಸ್ತೀರ್ಣ 55 ಎಕರೆ 13 ಗುಂಟೆ ಇದೆ. ಇದರಲ್ಲಿ ನಮ್ಮ ಮೆಟ್ರೊ ಸಂಸ್ಥೆಯು 45 ಎಕರೆ 5 ಗುಂಟೆಯನ್ನು ತನಗೆ ಹಸ್ತಾಂತರಿಸುವಂತೆ ಕೇಳಿದೆ. ಈ ಸಂಬಂಧವಾಗಿ ತಮ್ಮ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಸಭೆ ನಡೆಸಲಾಯಿತು. ಇದರಲ್ಲಿ ಈಗಾಗಲೇ ಇರುವ ಕಾನೂನಿನ ತೊಡಕುಗಳನ್ನು ಮೊದಲು ನಿವಾರಿಸಲು ತೀರ್ಮಾನಿಸಲಾಗಿದೆ. ಇಲ್ಲದೆ ಹೋದರೆ ಇದು ಮತ್ತಷ್ಟು ಸಮಸ್ಯೆಗಳನ್ನು ಸೃಷ್ಟಿಸುತ್ತದೆ ಎಂದಿದ್ದಾರೆ.

    ಹಿಂದಿನ ಬಿಜೆಪಿ ಸರ್ಕಾರವು ಈ ಜಮೀನು ತನ್ನದೆಂದು ಹೇಳುತ್ತಿರುವ ಸಂಸ್ಥೆಯ ಯೋಜನೆ ಜಾರಿಗೆ ಇನ್ನೂ ಮೂರು ವರ್ಷಗಳ ಕಾಲಾವಕಾಶ ನೀಡಿ ಆದೇಶ ಹೊರಡಿಸಿದೆ. ಇನ್ನೊಂದೆಡೆ, ನ್ಯಾಯಾಲಯದ ಆದೇಶವೂ ಇದೆ. ಹೀಗಾಗಿ ಏಕಾಏಕಿ ಮೆಟ್ರೋ ಸಂಸ್ಥೆಗೆ ಜಮೀನನ್ನು ಹಸ್ತಾಂತರಿಸುವುದು ಮತ್ತಷ್ಟು ಜಟಿಲತೆಗೆ ದಾರಿಯಾಗುತ್ತದೆ ಎಂದು ಅವರು ವಿವರಿಸಿದ್ದಾರೆ.

    ಸಚಿವನಾಗಿ ಸರ್ಕಾರ ಹಾಗೂ ನ್ಯಾಯಾಲಯದ ಆದೇಶಗಳಿಗೆ ವ್ಯತಿರಿಕ್ತವಾಗಿ ಹೋಗುವುದು ಸರಿಯಲ್ಲ. ಏಕಪಕ್ಷೀಯ ನಿರ್ಧಾರದಿಂದ ಮತ್ತಷ್ಟು ಕಗ್ಗಂಟಾಗುತ್ತದೆ. ಆದ್ದರಿಂದ, ಮೆಟ್ರೋಗೆ ಜಮೀನಿನ ಸುಗಮ ಹಸ್ತಾಂತರಕ್ಕೆ ಇರುವ ದಾರಿ ಯಾವುದು ಎನ್ನುವುದನ್ನು ನೋಡಲಾಗುತ್ತಿದೆ ಎಂದು ಸ್ಪಷ್ಟಪಡಿಸಿದ್ದಾರೆ.

    ಯೋಜನಾ ಪ್ರವರ್ತಕರೊಂದಿಗಿನ ಮಾತುಕತೆ, ಸೂಕ್ತ ಕಾನೂನು ನೆರವು ಸೇರಿದಂತೆ ಎಲ್ಲ ಸಾಧ್ಯತೆಗಳನ್ನೂ ಪರಿಶೀಲಿಸಲಾಗುತ್ತಿದೆ. ಹೆಬ್ಬಾಳದಲ್ಲಿ ಬಹುಮಾದರಿ ಸಾರಿಗೆ ಹಬ್ ನಿರ್ಮಾಣವಾದರೆ ಅದರಿಂದ ಲಕ್ಷಾಂತರ ಮಂದಿಗೆ ಅನುಕೂಲವಾಗಲಿದೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ಆದರೆ, ಅವಸರದಿಂದಾಗಿ ಇನ್ನಷ್ಟು ಹೊಸ ಸಮಸ್ಯೆ ಉದ್ಭವಿಸಬಾರದು. ಹಾಗೆಯೇ ಹಸ್ತಾಂತರ ಪ್ರಕ್ರಿಯೆ ವಿಳಂಬ‌ ಕೂಡ ಆಗಬಾರದು. ಇದರಿಂದ ಜನಪರ ಯೋಜನೆ ಯೊಂದರ ತ್ವರಿತ ಅನುಷ್ಠಾನಕ್ಕೆ ತೊಡಕು ಉಂಟಾಗುತ್ತದೆ ಎನ್ನುವ ಸ್ಪಷ್ಟ ಅರಿವೂ ನಮಗಿದೆ. ಈ ಎಲ್ಲ ಅಂಶಗಳನ್ನು ಮುಂದಿಟ್ಟುಕೊಂಡು ಎಚ್ಚರಿಕೆಯಿಂದ ಹೆಜ್ಜೆ ಇಡಲಾಗುವುದು. ಕಾನೂನು ಪರಿಪಾಲನೆ ಜತೆಗೆ ಅಭಿವೃದ್ಧಿ ನಮ್ಮ ಆದ್ಯತೆ ಆಗಿದೆ. ಈ ವಿಚಾರದಲ್ಲಿ ಸರ್ಕಾರದ ಮುಂದಿರುವ ಅನೇಕ ಸಾಧ್ಯತೆಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಪಾಟೀಲ ಹೇಳಿದ್ದಾರೆ.

    ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಉಮಾಶಂಕರ್, ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ನಮ್ಮ ಮೆಟ್ರೊ ವ್ಯವಸ್ಥಾಪಕ ನಿರ್ದೇಶಕ ಮಹೇಶ್ವರ ರಾವ್, ಕೆಐಎಡಿಬಿ ಸಿಇಒ ಡಾ.ಮಹೇಶ್ ಸೇರಿದಂತೆ ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

  • ಡಿಕೆಶಿ ಶಿವರಾತ್ರಿಗೆ ಹೋದ್ರೆ ಪಕ್ಷದ ವಿರುದ್ಧ ಆಗುತ್ತಾ? : ಎಂ.ಬಿ ಪಾಟೀಲ್

    ಡಿಕೆಶಿ ಶಿವರಾತ್ರಿಗೆ ಹೋದ್ರೆ ಪಕ್ಷದ ವಿರುದ್ಧ ಆಗುತ್ತಾ? : ಎಂ.ಬಿ ಪಾಟೀಲ್

    ವಿಜಯಪುರ: ಡಿಸಿಎಂ ಡಿ.ಕೆ ಶಿವಕುಮಾರ್ (D K Shivakumar) ಹಿಂದೂ ಅಲ್ವಾ. ಅವರು ಶಿವರಾತ್ರಿಗೆ ಹೋದರೆ ಏನಾಗುತ್ತದೆ. ಶಿವರಾತ್ರಿ ಆಚರಿಸುವುದು ಪಕ್ಷದ ವಿರುದ್ಧ ಆಗುತ್ತಾ ಎಂದು ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ (M B Patil) ಪ್ರಶ್ನಿಸಿದರು.

    ಡಿಕೆಶಿ ಶಿವರಾತ್ರಿ ಆಚರಣೆಯಲ್ಲಿ ಭಾಗಿ ವಿಚಾರಕ್ಕೆ ವಿಜಯಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಅದು ಅವರ ವೈಯಕ್ತಿಕ ವಿಚಾರ. ನನ್ನ ವೈಯಕ್ತಿಕ ವಿಚಾರ ಪಕ್ಷದಲ್ಲ. ಪಕ್ಷದ ವಿಚಾರ ನನ್ನ ವೈಯಕ್ತಿಕ ಅಲ್ಲ. ನನ್ನ ವೈಯಕ್ತಿಕ ಅಸ್ಮಿತೆ, ನನ್ನ ವೈಯಕ್ತಿಕ ಆಚರಣೆ ಅದು ಬೇರೆ ಎಂದು ಸಮರ್ಥಿಸಿಕೊಂಡರು. ಇದನ್ನೂ ಓದಿ: 1ನೇ ತರಗತಿಗೆ ದಾಖಲಾತಿ ವಯಸ್ಸು ಸಡಿಲಿಕೆಯಿಲ್ಲ – ಮಧು ಬಂಗಾರಪ್ಪ

    ಹೀಗಾಗಿ ಒಂದಕ್ಕೊಂದು ಮಿಕ್ಸ್ ಮಾಡುವ ಅವಶ್ಯಕತೆ ಇಲ್ಲ. ಪಕ್ಷದ ಸಿದ್ದಾಂತ ಇರುತ್ತದೆ. ಡಿಕೆಶಿ ಅವರು ಹಿಂದೂ ಅಲ್ವಾ. ಶಿವರಾತ್ರಿಗೆ ಹೋದ್ರೆ ಏನಾಗುತ್ತೆ, ಪಕ್ಷದ ವಿರುದ್ಧ ಆಗುತ್ತಾ. ನಾನು ಶಿವರಾತ್ರಿಗೆ ಲಿಂಗದ ಗುಡಿಗೆ ಹೋಗಿದ್ದೆ. ಶಿವಗಿರಿಗೆ ಹೋಗಿದ್ದೆ. ಅಮಿತ್ ಶಾ ಅವರ ಜೊತೆಯಲ್ಲಿ ಡಿಕೆಶಿ ಅವರು ಶಿವರಾತ್ರಿ ಕಾರ್ಯಕ್ರಮದಲ್ಲಿ ಭಾಗಿ ಆದರೆ ಏನು ತಪ್ಪಿದೆ. ಅನೇಕ ಕಾರ್ಯಕ್ರಮಗಳಲ್ಲಿ ನಮ್ಮನ್ನೂ ಕರೆದಿರುತ್ತಾರೆ, ಅವರನ್ನೂ ಕರೆದಿರುತ್ತಾರೆ ಎಂದು ಹೇಳಿದರು.

    ರಾಹುಲ್ ಗಾಂಧಿ ವಿರುದ್ಧ ಸದ್ಗುರು ಜಗ್ಗಿ ವಾಸುದೇವ ಅವರ ಹೇಳಿಕೆ ಒಂದು ಭಾಗ. ಇದು ಶಿವರಾತ್ರಿ ಕಾರ್ಯಕ್ರಮಕ್ಕೆ ಅವರೂ ಹೋಗಿದ್ದಾರೆ ಎಂದರು. ಇದನ್ನೂ ಓದಿ: ತಂಗಿ ಬಗ್ಗೆ ರಶ್ಮಿಕಾ ಮಂದಣ್ಣ ಶಾಕಿಂಗ್ ಕಾಮೆಂಟ್: ಹೀಗ್ಯಾಕಂದ್ರು ಶ್ರೀವಲ್ಲಿ?

    ಸಿಎಂ ಬದಲಾವಣೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, ನಾನು ಯಾವುದೇ ಹೇಳಿಕೆ ನೀಡುವುದಿಲ್ಲ ಎಂದುನಿರ್ಧಾರ ಮಾಡಿದ್ದೇನೆ. ಈ ವಿಚಾರ ಹೈಕಮಾಂಡ್‌ಗೆ ಬಿಟ್ಟಿದ್ದು ಎಂದರು.