Tag: M.B Patil

  • ಜನರ ಸಾವು ಬದುಕಿನ ಸಮಯದಲ್ಲಿ ಸಾವಿರಾರು ಕೋಟಿ ಲೂಟಿ: ಎಂಬಿ ಪಾಟೀಲ್

    ಜನರ ಸಾವು ಬದುಕಿನ ಸಮಯದಲ್ಲಿ ಸಾವಿರಾರು ಕೋಟಿ ಲೂಟಿ: ಎಂಬಿ ಪಾಟೀಲ್

    ಬೆಂಗಳೂರು: ಕೋವಿಡ್ (Covid) ಸಂದರ್ಭದಲ್ಲಿ ಸರ್ಕಾರ ಮಾನವೀಯ ದೃಷ್ಟಿಯಿಂದ ಕೆಲಸ ಮಾಡಬೇಕಿತ್ತು. ಸಾವಿರಾರು ಕೋಟಿ ಲೂಟಿ ಹೊಡೆದಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ (M B Patil) ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್ ಸಂದರ್ಭದಲ್ಲಿ ಸಾವಿರಾರು ಕೋಟಿ ಲೂಟಿ ಹೊಡೆಯುವ ಮೂಲಕ ದೊಡ್ಡ ಹಗರಣವನ್ನು ಸೃಷ್ಟಿಮಾಡಿದ್ದಾರೆ. ನಮ್ಮ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ (Private Medical College) ನಾವು ಕಡಿಮೆ ದರದಲ್ಲಿ ಗುಣಮಟ್ಟದ ಚಿಕಿತ್ಸೆ ಕೊಟ್ಟಿದ್ದೇವೆ. ಅದು ನಮ್ಮ ಜವಾಬ್ದಾರಿ. ನಾನು ಇದಕ್ಕೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ಮಾತನಾಡಿದ್ದೇನೆ. ಕಳಪೆ ಮಟ್ಟದ ಉಪಕರಣಗಳ ಬಳಕೆ ಮಾಡಿದ್ದಾರೆ. ಕೆಲಸ ಮಾಡಬೇಕು ನಿಜ, ಲೂಟಿ ಹೊಡೆಯಬೇಕು ಎಂದಿಲ್ಲ ಆದರೆ ಸಾವು-ಬದುಕಿನ ಸಂದರ್ಭದಲ್ಲಿ ಲೂಟಿ ಹೊಡೆದಿದ್ದಾರೆ ಎಂದರು.ಇದನ್ನೂ ಓದಿ: ಆಂಧ್ರ, ತೆಲಂಗಾಣದಲ್ಲಿ ಪ್ರವಾಹ – ಸಾವಿನ ಸಂಖ್ಯೆ 27ಕ್ಕೆ ಏರಿಕೆ

    ಸರ್ಕಾರ ಫಿಕ್ಸ್ ಮಾಡಿದ ಹಣಕ್ಕಿಂತ ನಮ್ಮ ಮೆಡಿಕಲ್ ಆಸ್ಪತ್ರೆಯಲ್ಲಿ ಕಡಿಮೆ ಬೆಲೆಗೆ ಮಾಡಿದ್ದೀವಿ. ನಾವು ಒಂದು ಸಾವಿರಕ್ಕೆ ಗುಣಮಟ್ಟದ ಪಿಪಿಇ ಕಿಟ್‌ (PPE Kit) ಗಳನ್ನು ತಗೋತಿದ್ವಿ. ಆದರೆ ಸರ್ಕಾರ ಕಳಪೆ ಮಟ್ಟದ 150 ರೂ. ದನ್ನು ನಾಲ್ಕು ಪಟ್ಟು ಜಾಸ್ತಿ ದುಡ್ಡು ಕೊಟ್ಟು ಪಿಪಿಇ ಕಿಟ್‌ಗಳನ್ನು ಖರೀದಿ ಮಾಡಿದ್ದಾರೆ. ಕೊರೊನಾದಲ್ಲಿ (Corona) ಮಾನವೀಯತೆ ಮೆರೆಯಬೇಕಿತ್ತು ಆದರೆ ಸಾವಿರಾರು ಕೋಟಿ ಲೂಟಿ ಹೊಡೆದು ದೊಡ್ಡ ಹಗರಣವನ್ನೇ ಮಾಡಿದ್ದಾರೆ ಎಂದು ಕಿಡಿಕಾರಿದರು.

    ಈ ಹಗರಣದಲ್ಲಿ ಡಾ.ಕೆ ಸುಧಾಕರ್ (Dr. K Sudhakar) ಭಾಗಿ ನಿಶ್ಚಿತವಾಗಿದೆ. ಆ ಸಮಯದಲ್ಲಿ ಮಂತ್ರಿ ಸ್ಥಾನದಲ್ಲಿದ್ದರೂ ಇದರ ಹೊಣೆಯನ್ನು ಅವರೇ ಹೊರಬೇಕಾಗುತ್ತದೆ. ನಾನು ರಿಪೋರ್ಟ್ ನೋಡಿಲ್ಲ, ಆದ್ರೆ ನಿಶ್ಚಿತವಾಗಿ ಭಾಗಿಯಾಗಿದ್ದಾರೆ. ಬೋವಿ ನಿಗಮ, ಅಂಬೇಡ್ಕರ್ ನಿಗಮ, ಟ್ರಕ್ ಟರ್ಮಿನಲ್ ಬಹಳ ಹಗರಣಗಳಿವೆ. ಪಿಎಸ್‌ಐ ನೇಮಕಾತಿ ಸ್ಕ್ಯಾಮ್ ಎಲ್ಲವನ್ನು ತರಿಸಿಕೊಳ್ತೀವಿ. ಕ್ಯಾಬಿನೆಟ್ ಅನುಮತಿ ಇಲ್ಲದೇ ಬಹಳ ಭ್ರಷ್ಟಾಚಾರ ಮಾಡಿದ್ದಾರೆ. ಬಿಟ್ ಕಾಯಿನ್ ಮಾತ್ರವಲ್ಲ ಎಲ್ಲಾ ಹಗರಣಗಳ ತನಿಖೆ ಆಗಬೇಕು. ಎಲ್ಲವನ್ನೂ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುತ್ತೇವೆ ಎಂದು ಆಗ್ರಹಿಸಿದ್ದಾರೆ.ಇದನ್ನೂ ಓದಿ: ಮೂಡುಗಲ್ಲು ಕೇಶವನಾಥೇಶ್ವರ ದೇಗುಲಕ್ಕೆ ಭೇಟಿ ನೀಡಿದ ಜೂನಿಯರ್‌ ಎನ್‌ಟಿಆರ್‌

    ಜೊಲ್ಲೆಯವರು ಕೇಸನ್ನು ವಿಲೇವಾರಿ ಮಾಡಿದ್ದೀನಿ. ಬಾಕಿಯದ್ದು ಪರಿಶೀಲನೆಗೆ ಕಳುಹಿಸಿದ್ದೇನೆ ಎಂದು ರಾಜ್ಯಪಾಲರು ಹೇಳಿದ್ದಾರೆ. ರಾಜ್ಯಪಾಲರ ನಡೆ ಇಡಿ ರಾಜ್ಯಕ್ಕೆ ಗೊತ್ತಾಗಿದೆ. ಸ್ವಯಂ ಆಗಿ ಕೆಲಸ ಮಾಡ್ತಿಲ್ಲ. ರಾಜಭವನ ಬಿಜೆಪಿ ಕಚೇರಿ ಆಗಿದೆ ಎಂದು ಕಿಡಿಕಾರಿದ್ದಾರೆ.

    ಹೈಕೋರ್ಟ್‌ನಲ್ಲಿ ಸಿಎಂಗೆ ಹಿನ್ನಡೆ ಆಗೋ ಪ್ರಶ್ನೆ ಇಲ್ಲ. ಸಿಎಂ ಈಗ ಶಕ್ತಿಶಾಲಿ ಇದ್ದಾರೆ, ಇನ್ನಷ್ಟು ಶಕ್ತಿಶಾಲಿ ಆಗ್ತಾರೆ. ಖರ್ಗೆ ಹಿರಿಯರು, ಎಐಸಿಸಿ ಅಧ್ಯಕ್ಷರಿದ್ದಾರೆ. ಅಂಥದ್ದೇನೂ ಇಲ್ಲ ದೇಶಪಾಂಡೆ ಅವ್ರು ಸುಮ್ಮನೆ ಮಾತಾಡಿದ್ದಾರೆ ಎಂದರು.

  • ಸಚಿವರ ಜೊತೆ ಕಂಪನಿಯ ನಿಯೋಗದ ಭೇಟಿ; ವಿಜಯಪುರ ಜಿಲ್ಲೆಯಲ್ಲಿ ಕೆನಡಾದ ವಿಟೆರಾದಿಂದ 250 ಕೋಟಿ ಹೂಡಿಕೆ: ಎಂ.ಬಿ.ಪಾಟೀಲ್

    ಸಚಿವರ ಜೊತೆ ಕಂಪನಿಯ ನಿಯೋಗದ ಭೇಟಿ; ವಿಜಯಪುರ ಜಿಲ್ಲೆಯಲ್ಲಿ ಕೆನಡಾದ ವಿಟೆರಾದಿಂದ 250 ಕೋಟಿ ಹೂಡಿಕೆ: ಎಂ.ಬಿ.ಪಾಟೀಲ್

    ಬೆಂಗಳೂರು: ವಿಜಯಪುರ (Vijayapura) ಜಿಲ್ಲೆಯಲ್ಲಿ ಕೃಷಿ ಮೂಲಸೌಕರ್ಯ ಅಭಿವೃದ್ಧಿಪಡಿಸಲು ಕೆನಡಾದ ಕೃಷಿ ಉತ್ಪನ್ನ ತಯಾರಿಕಾ ಪ್ರಮುಖ ಕಂಪನಿಯಾಗಿರುವ ವಿಟೆರಾ (Viterra Canada) 250 ಕೋಟಿ ರೂ. ಮೊತ್ತದ ಬಂಡವಾಳ ಹೂಡಲಿದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ (M.B.Patil) ತಿಳಿಸಿದ್ದಾರೆ.

    ವಿಟೆರಾ ಕಂಪನಿಯ ಪ್ರತಿನಿಧಿಗಳ ಜತೆ ಸಚಿವರು ಇಲ್ಲಿನ ಖನಿಜ ಭವನದಲ್ಲಿ ನಡೆಸಿದ ಸಭೆಯಲ್ಲಿ‌ ಈ ಬಂಡವಾಳ ಹೂಡಿಕೆ ನಿರ್ಧಾರ ಕೈಗೊಳ್ಳಲಾಗಿದೆ. ಇದನ್ನೂ ಓದಿ: ನಿವೇಶನ ಲೂಟಿ ಮಾಡುತ್ತಿರುವುದು ನಾನಾ ನೀವಾ? – ಎಂ.ಬಿ.ಪಾಟೀಲರ ಸೈಟ್ ಅಕ್ರಮ ಸದ್ಯದಲ್ಲೇ ಬಯಲು: ಛಲವಾದಿ ನಾರಾಯಣಸ್ವಾಮಿ

    ವಿಜಯಪುರ ಜಿಲ್ಲೆಯ ಕೃಷಿ ಸಮುದಾಯದ ಬಳಕೆಗೆ ಅತ್ಯಾಧುನಿಕ ಶೈತ್ಯಾಗಾರಗಳನ್ನು ನಿರ್ಮಿಸಿ ರೈತರು ಸುಗ್ಗಿಯ ನಂತರ ಎದುರಿಸುವ ನಷ್ಟ ತಗ್ಗಿಸಲು ಮತ್ತು ಕೃಷಿ ಉತ್ಪನ್ನಗಳ ಉತ್ಪಾದನೆ, ಪೂರೈಕೆ ಹಾಗೂ ಮಾರಾಟ ಪ್ರಕ್ರಿಯೆಯಲ್ಲಿ ದಕ್ಷತೆ ತರಲು ವಿಟೆರಾ ನೆರವಾಗಲಿದೆ. ವಿಟೆರಾ ಕಂಪನಿಯು ಸುಧಾರಿತ ಉತ್ಪಾದನಾ ತಂತ್ರಜ್ಞಾನ ಬಳಸಲಿದೆ. ರಾಜ್ಯದಲ್ಲಿ ಕೆನಡಾದ ಆಧುನಿಕ ಕೃಷಿ ತಂತ್ರಜ್ಞಾನ ಬಳಕೆ ಹಾಗೂ ಈ ಬಂಡವಾಳ ಹೂಡಿಕೆಯಿಂದ ಕೃಷಿ ಕ್ಷೇತ್ರದ ಉತ್ಪಾದನೆ ಹೆಚ್ಚಲಿದ್ದು, ಅದರಿಂದ ರಾಜ್ಯದ ಒಟ್ಟಾರೆ ಆರ್ಥಿಕತೆಗೂ ಉತ್ತೇಜನ ದೊರೆಯಲಿದೆ ಎಂದು ಸಚಿವರು ಹೇಳಿದ್ದಾರೆ.

    ಸಭೆಯಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಆಯುಕ್ತೆ ಗುಂಜನ್ ಕೃಷ್ಣ, ಕೆಐಎಡಿಬಿ ಸಿಇಒ ಡಾ.ಮಹೇಶ ಹಾಗೂ ಇತರ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು. ಇದನ್ನೂ ಓದಿ: ಚನ್ನಪಟ್ಟಣದ ಅಭ್ಯರ್ಥಿ ನಾನೇ: ಡಿ.ಕೆ.ಶಿವಕುಮಾರ್

  • ರಾಹುಲ್ ಖರ್ಗೆ ಟ್ರಸ್ಟ್‌ಗೆ ನಿಯಮಾನುಸಾರ ಸಿಎ ನಿವೇಶನ – ಎಂ.ಬಿ ಪಾಟೀಲ್

    ರಾಹುಲ್ ಖರ್ಗೆ ಟ್ರಸ್ಟ್‌ಗೆ ನಿಯಮಾನುಸಾರ ಸಿಎ ನಿವೇಶನ – ಎಂ.ಬಿ ಪಾಟೀಲ್

    ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಯವರ ಪುತ್ರ ರಾಹುಲ್ ಖರ್ಗೆ (Rahul Kharge) ಅವರ ಸಿದ್ಧಾರ್ಥ ವಿಹಾರ ಶಿಕ್ಷಣ ಟ್ರಸ್ಟ್‌ಗೆ ಏರೋಸ್ಪೇಸ್ ಪಾರ್ಕ್‌ನಲ್ಲಿರುವ ಸಿಎ ನಿವೇಶನವನ್ನು ಕಾನೂನಿನ ಪ್ರಕಾರವೇ ನಿಗದಿತ ಬೆಲೆಗೆ ಕೊಡಲಾಗಿದೆ. ಅವರು ಅಲ್ಲಿ ಸಂಶೋಧನೆ ಮತ್ತು ತರಬೇತಿ ಕೇಂದ್ರ ಸ್ಥಾಪಿಸುವುದಾಗಿ ಹೇಳಿದ್ದಾರೆ. ಇದರಲ್ಲಿ ಬಿಜೆಪಿ ನಾಯಕ ಲೆಹರ್ ಸಿಂಗ್ ಆರೋಪಿಸಿರುವಂತೆ ಯಾವ ನಿಯಮವೂ ಉಲ್ಲಂಘನೆ ಆಗಿಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ (M B Patil) ಹೇಳಿದ್ದಾರೆ.

    ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಹುಲ್ ಖರ್ಗೆ ಅವರು ಐಐಟಿ ಪದವೀಧರರು. ಅವರ ಕುಟುಂಬವು ನಾನಾ ಬಗೆಯ ಶೈಕ್ಷಣಿಕ ಚಟುವಟಿಕೆಗಳಲ್ಲಿ ತೊಡಗಿಕೊಂಡಿದೆ. ಕೆಐಎಡಿಬಿ ನಿಯಮಗಳ ಪ್ರಕಾರ ಸಿಎ ನಿವೇಶನಗಳಲ್ಲಿ ಆರ್ & ಡಿ ಕೇಂದ್ರಗಳು, ಉತ್ಕೃಷ್ಟತಾ ಕೇಂದ್ರಗಳು, ತಾಂತ್ರಿಕ ಸಂಸ್ಥೆಗಳು, ಕೌಶಲ್ಯಾಭಿವೃದ್ಧಿ, ಸರ್ಕಾರಿ ಕಚೇರಿಗಳು, ಬ್ಯಾಂಕು, ಆಸ್ಪತ್ರೆ, ಹೋಟೆಲ್, ಪೆಟ್ರೋಲ್ ಬಂಕ್, ಕ್ಯಾಂಟೀನ್, ವಸತಿ ಸೌಲಭ್ಯ ಇತ್ಯಾದಿಗಳ ಅಭಿವೃದ್ಧಿಗೆ ಅವಕಾಶವಿದೆ. ಆಸಕ್ತರು ಯಾರು ಬೇಕಾದರೂ ಇದಕ್ಕೆ ಪ್ರಯತ್ನಿಸಬಹುದು. ರಾಜ್ಯ ಮಟ್ಟದ ಏಕಗವಾಕ್ಷಿ ಸಮಿತಿಯ ಶಿಫಾರಸಿನ ನಂತರವಷ್ಟೇ ಇವುಗಳ ಹಂಚಿಕೆಯಾಗುತ್ತದೆ. ಏರೋಸ್ಪೇಸ್ ಪಾರ್ಕಿನಲ್ಲಿ ರಾಹುಲ್ ಅವರಿಗೆ ಕೈಗಾರಿಕಾ ನಿವೇಶನವನ್ನೇನೂ ಕೊಟ್ಟಿಲ್ಲ. ಬದಲಿಗೆ, ಸಿಎ ನಿವೇಶನವನ್ನು ಆರ್ & ಡಿ ಕೇಂದ್ರ ಸ್ಥಾಪನೆಗಾಗಿ ನಿಗದಿತ ಬೆಲೆಗೆ ಕೊಡಲಾಗಿದೆ. ಇದರಲ್ಲಿ ಅವರಿಗೆ ಯಾವ ರಿಯಾಯಿತಿಯನ್ನೂ ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

    ಈ ಹಿಂದೆ ಬಿಜೆಪಿ ಸರ್ಕಾರದಲ್ಲಿ ಚಾಣಕ್ಯ ವಿಶ್ವವಿದ್ಯಾಲಯಕ್ಕೆ ಕೈಗಾರಿಕಾ ಪ್ರದೇಶದಲ್ಲೇ 116 ಎಕರೆಯನ್ನು ಬರೀ 50 ಕೋಟಿ ರೂ.ಗೆ ಕೊಡಲಾಗಿದೆ. ಅದರಿಂದ 137 ಕೋಟಿ ರೂ. ಬೊಕ್ಕಸಕ್ಕೆ ನಷ್ಟವಾಗಿದೆ. ಲೆಹರ್ ಸಿಂಗ್ ಅವರು ಈ ಬಗ್ಗೆಯೂ ಚಕಾರ ಎತ್ತಬಹುದಲ್ಲವೇ ಎಂದು ಅವರು ಪ್ರಶ್ನಿಸಿದ್ದಾರೆ.

    ಹಿಂದೆಲ್ಲ ಕೆಐಎಡಿಬಿ ಮಂಡಳಿಯೇ ಸಿ.ಎ. ನಿವೇಶನಗಳನ್ನು ಹಂಚುತ್ತಿತ್ತು. ಆದರೆ ನಾನು ಸಚಿವನಾದ ಮೇಲೆ ರಾಜ್ಯಮಟ್ಟದ ಏಕಗವಾಕ್ಷಿ ಸಮಿತಿ ಅನುಮೋದನೆ ನೀಡುವ ಹಾಗೆ ಪಾರದರ್ಶಕ ವ್ಯವಸ್ಥೆ ಜಾರಿ ಮಾಡಲಾಗಿದೆ. ಅಲ್ಲದೆ ಮೊದಲ ಬಾರಿಗೆ ಸಿ.ಎ ನಿವೇಶನಗಳ ಹಂಚಿಕೆಯಲ್ಲೂ ಪರಿಶಿಷ್ಟರಿಗೆ ಶೇ 24.10ರಷ್ಟು ಮೀಸಲಾತಿ ಕಲ್ಪಿಸಲಾಗಿದೆ. ಲೆಹರ್ ಸಿಂಗ್ ಈ ಸತ್ಯವನ್ನು ಅರಿತು ಮಾತನಾಡುವುದು ಒಳ್ಳೆಯದು ಎಂದು ಹೇಳಿದ್ದಾರೆ.

  • 500 ಕೋಟಿ ಕೊಟ್ಟರೂ ನಮ್ಮ ಶಾಸಕರನ್ನು ಖರೀದಿಸಲು ಸಾಧ್ಯವಿಲ್ಲ- ಎಂ.ಬಿ ಪಾಟೀಲ್

    500 ಕೋಟಿ ಕೊಟ್ಟರೂ ನಮ್ಮ ಶಾಸಕರನ್ನು ಖರೀದಿಸಲು ಸಾಧ್ಯವಿಲ್ಲ- ಎಂ.ಬಿ ಪಾಟೀಲ್

    ಬೆಂಗಳೂರು: ಮುಡಾ (MUDA) ಕೇಸ್‌ನಲ್ಲಿ ಹೈಕಮಾಂಡ್ ಸಿದ್ದರಾಮಯ್ಯ (CM Siddarmaiah) ಪರ ಇದೆ. ಹೈಕೋರ್ಟ್‌ನಲ್ಲಿ ಸಿದ್ದರಾಮಯ್ಯ ಅವರಿಗೆ ನ್ಯಾಯ ಸಿಕ್ಕೇ ಸಿಗುತ್ತದೆ ಎಂದು ಸಚಿವ ಎಂ.ಬಿ ಪಾಟೀಲ್ (M B Patil) ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ನಗರದಲ್ಲಿ ಮಾತನಾಡಿದ ಅವರು, ನ್ಯಾಯಾಲಯದಲ್ಲಿ ಮುಡಾ ಕೇಸ್ ವಿಚಾರದಲ್ಲಿ ನಿಶ್ಚಿತವಾಗಿ ಗೆಲುವು ಸಿಗಲಿದೆ. ಮುಡಾ ಕೇಸ್ ನಲ್ಲಿ ಏನು ಇಲ್ಲ. ಇದರಲ್ಲಿ ತಪ್ಪು ಆಗಿರೋದು ಮುಡಾದಿಂದ. ಮುಡಾ ಜಮೀನು ಪಡೆದು ಸೈಟ್ ಮಾಡಿದೆ. ಇದೊಂದು ಫಾಲ್ಸ್ ಕೇಸ್, ಕೋರ್ಟ್‌ನಲ್ಲಿ ವಜಾ ಆಗುತ್ತದೆ. ಆದಾದ ಮೇಲೆ ಬಿಜೆಪಿ (BJP) ಅವರಿಗೆ ಅಪಮಾನ ಆಗುತ್ತದೆ ಎಂದಿದ್ದಾರೆ.

    ಈ ಕೇಸ್‌ನಲ್ಲಿ ಗೆದ್ದು ಸಿದ್ದರಾಮಯ್ಯ ಅವರು ಮತ್ತಷ್ಟು ಬಲಿಷ್ಟರಾಗುತ್ತಾರೆ. ಕುಮಾರಸ್ವಾಮಿ, ನಿರಾಣಿ, ಜೊಲ್ಲೆ, ಎಲ್ಲರಿಗೂ ಅನುಮತಿ ಕೇಳಿದ್ದಾರೆ. ಕುಮಾರಸ್ವಾಮಿ ಮೇಲೂ ರಾಜಕೀಯವಾಗಿ ನಾವು ಅಟ್ಯಾಕ್ ಮಾಡಬೇಕು. ಸ್ವಲ್ಪ ದಿನ ಕಾಯಿರಿ. ಕೊರೊನಾ, ಪಿಎಸ್‌ಐ ಕೇಸ್ ಎಲ್ಲಾ ಹಗರಣ ಹೊರಗೆ ಬರಲಿದೆ. ಕೋರ್ಟ್‌ನಲ್ಲಿ ಸಿದ್ದರಾಮಯ್ಯಗೆ ನ್ಯಾಯ ಸಿಕ್ಕೇ ಸಿಗುತ್ತದೆ. ಅದರಲ್ಲಿ ಅನುಮಾನ ಇಲ್ಲ. ಹೈಕಮಾಂಡ್, ನಮ್ಮ ಶಾಸಕರು, ಸಚಿವರು, ಪಕ್ಷದ ಕಾರ್ಯಕರ್ತರು, ಸಿದ್ದರಾಮಯ್ಯ ಪರ ಇದ್ದಾರೆ. ಇಡೀ ಕಾಂಗ್ರೆಸ್ ಸಿದ್ದರಾಮಯ್ಯ ಪರ ಇದೆ. ಯಾರು ಸಿಎಂ ಸ್ಥಾನಕ್ಕೆ ಟವಲ್ ಹಾಕಿಲ್ಲ. ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾರೆ. ಮುಂದೆಯೂ ಸಿಎಂ ಆಗಿ ಇರುತ್ತಾರೆ ಎಂದು ಖಡಕ್ ಆಗಿ ಉತ್ತರಿಸಿದ್ದಾರೆ.

    ಬಳಿಕ ಬಿಜೆಪಿಯವರ ಆಪರೇಷನ್ ಕಮಲ ಪ್ರಯತ್ನ ಮಾಡ್ತಿರೋ ವಿಚಾರವಾಗಿ ಮಾತನಾಡಿದ ಅವರು 100 ಕೋಟಿ ರೂ. ಅಲ್ಲ 500 ಕೋಟಿ ರೂ. ಕೊಟ್ಟರೂ ನಮ್ಮ ಶಾಸಕರು ಮಾರಾಟ ಆಗೋದಿಲ್ಲ. ಆಪರೇಷನ್ ಕಮಲ ಸಾಧ್ಯವೇ ಇಲ್ಲ ಅಂತ ಬಿಜೆಪಿ ನಾಯಕರಿಗೆ ಸಚಿವ ಎಂಬಿ ಪಾಟೀಲ್ ಸವಾಲ್ ಹಾಕಿದ್ದಾರೆ.

    ನಮ್ಮ ಯಾವ ಶಾಸಕರು ಆಮಿಷಕ್ಕೆ ಬಲಿಯಾಗಲ್ಲ. 136 ಸ್ಥಾನ ಪಡೆದು ಬಾರಿ ಬಹುಮತದಿಂದ ಸರ್ಕಾರ ಮಾಡಿದ್ದೇವೆ. ಸರ್ಕಾರ ಬೀಳಬೇಕಾದ್ರೆ 2/3 ಶಾಸಕರನ್ನು ಕರೆದುಕೊಂಡು ಹೋಗಬೇಕು. ಅದು ಆಗದ ಮಾತು. ಬಿಜೆಪಿ-ಜೆಡಿಎಸ್‌ನಿಂದಲೂ 10-12 ಜನ ಕಾಂಗ್ರೆಸ್ ಜೊತೆ ಗುರುತಿಸಿಕೊಂಡಿದ್ದಾರೆ. ಈ ಸರ್ಕಾರ ಕೆಡವಲು ಆಗೋದಿಲ್ಲ. ಆಪರೇಷನ್ ಕಮಲ ವರ್ಕೌಟ್ ಆಗೊಲ್ಲ. 100 ಕೋಟಿ ರೂ. ಅಲ್ಲ. 500 ಕೋಟಿ ರೂ. ಕೊಟ್ಟರೂ ನಮ್ಮ ಶಾಸಕರನ್ನು ಕರೆದುಕೊಂಡು ಹೋಗಲು ಆಗೋದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

  • ಸರ್ಕಾರಕ್ಕೆ ಕಪ್ಪುಚುಕ್ಕಿ ತರುವ ಸುಳ್ಳು ಆರೋಪಕ್ಕೆ‌ ರಾಜ್ಯಪಾಲರ ಸಮ್ಮತಿ: ಸಚಿವ ಎಂ.ಬಿ.ಪಾಟೀಲ್

    ಸರ್ಕಾರಕ್ಕೆ ಕಪ್ಪುಚುಕ್ಕಿ ತರುವ ಸುಳ್ಳು ಆರೋಪಕ್ಕೆ‌ ರಾಜ್ಯಪಾಲರ ಸಮ್ಮತಿ: ಸಚಿವ ಎಂ.ಬಿ.ಪಾಟೀಲ್

    ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಕಪ್ಪುಚುಕ್ಕೆ ತರಲು ಮಾಡಿದ ಸುಳ್ಳು ಆರೋಪಕ್ಕೆ ರಾಜ್ಯಪಾಲರು ಅನುಮತಿ ಕೊಟ್ಟಿದ್ದಾರೆ ಎಂದು ಸಿಎಂ ವಿರುದ್ಧದ ರಾಜ್ಯಪಾಲರ ಪ್ರಾಸಿಕ್ಯೂಷನ್‌ಗೆ ಸಚಿವ ಎಂ.ಬಿ.ಪಾಟೀಲ್ (M.B.Patil) ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ರಾಜ್ಯದಲ್ಲಿ ಆಗಿರುವ ಬೆಳವಣಿಗೆಗಳು ಮುಡಾ ವಿಚಾರವಾಗಿ ಎಐಸಿಸಿ ಅಧ್ಯಕ್ಷರು, ಖರ್ಗೆ ಜೊತೆ ಚರ್ಚೆ ಮಾಡುತ್ತಾರೆ. ಸುಳ್ಳು ಆರೋಪ ಹೊರಿಸಿ ಸರ್ಕಾರದ ಮೇಲೆ‌ ಕಪ್ಪುಚುಕ್ಕೆ ಹಾಕೋದು. ಇದರ ಜೊತೆಗೆ ಹಲವು ವಿಚಾರದ ಕುರಿತು ಚರ್ಚೆ ಮಾಡುತ್ತಾರೆ. ಅದರ ಕುರಿತು ಹೈಕಮಾಂಡ್ ಕೂಡ‌ ಕೆಲ ಸಲಹೆ ಕೊಡುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ದಾಖಲೆಗಳ ನಾಶ ಪಡಿಸಲು ವೈಟ್ನರ್ ಹಚ್ಚಿದ್ದು ಯಾರು? – ನಾವು ಸರ್ಕಾರ ಬೀಳಿಸಲ್ಲ: ಸಿಎಂ ವಿರುದ್ಧ ಸುನೀಲ್ ಕುಮಾರ್ ಕಿಡಿ

    ನಿನ್ನೆಯ ಶಾಸಕಾಂಗ ಪಕ್ಷದ ಸಭೆಯಲ್ಲಿ ಸರ್ಕಾರ ಅಸ್ಥಿರಗೊಳಿಸುವ ಪ್ರಯತ್ನ ಬಗ್ಗೆ ಸಿಎಂ ಮಾತನಾಡಿದ್ದಾರೆ. ಡಿಸಿಎಂ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ 3/1 ಶಾಸಕರು ಹೋಗಬೇಕು ಅಂದರೆ 80 ಕ್ಕೂ ಹೆಚ್ಚು ಶಾಸಕರು ಹೋಗಬೇಕು. ಸರ್ಕಾರ ಸರಳ‌ ಬಹುಮತದಿಂದ ಕುಸಿಯಲು ಆಪರೇಷನ್ ಕಮಲ ಮಾಡಿದರು. 60 ಶಾಸಕರು ಬೇಕು. ಸರ್ಕಾರ ಬೀಳಿಸುವುದು ಅಷ್ಟು ಸುಲಭವಲ್ಲ. ತಲೆ ಕೆಳಗೆ ಮಾಡಿ ಕಾಲು ಮೇಲೆ ಮಾಡಿದರೂ ಸರ್ಕಾರವನ್ನ ಏನು ಮಾಡೋಕೆ ಆಗಲ್ಲ‌ ಎಂದು ಬಿಜೆಪಿಗೆ ಟಾಂಗ್‌ ಕೊಟ್ಟಿದ್ದಾರೆ.

    ನಿನ್ನೆಯ ಶಾಸಕಾಂಗ ಪಕ್ಷದ ಸಭೆಯಲ್ಲಿ ರಾಷ್ಟ್ರಪತಿಗಳನ್ನು ಭೇಟಿ ಮಾಡುವ ಬಗ್ಗೆ ಸಲಹೆ ಬಂದಿದೆ. ಹೀಗಾಗಿ ಇಂದು ವರಿಷ್ಠರನ್ನು ಸಿಎಂ, ಡಿಸಿಎಂ ಭೇಟಿಯಾಗಿ ಅನುಮತಿ ಕೇಳಿದ್ದಾರೆ. ಆ ನಂತರ ಗವರ್ನರ್‌ರನ್ನು ವಾಪಸ್ಸು ಕರೆಸಿಕೊಳ್ಳುವಂತೆ ರಾಷ್ಟ್ರಪತಿಗಳ ಒತ್ತಾಯ ಮಾಡಲು ಶಾಸಕರು ದೆಹಲಿಗೆ ತೆರಳುವ ಬಗ್ಗೆ ನಿರ್ಣಯ ಮಾಡಲಾಗುತ್ತದೆ. ರಾಜ್ಯಪಾಲರ ಸಂವಿಧಾನದ ರಕ್ಷಣೆ ಮಾಡಬೇಕು. ಅವರೇ ಇದಕ್ಕೆ ಹೆಡ್. ಇಲ್ಲಿ ರಾಜ್ಯಪಾಲರ ಕಚೇರಿ ಬಿಜೆಪಿ ಕಚೇರಿ ಆಗಿದೆ. ಸಿದ್ದರಾಮಯ್ಯ ವಿಚಾರದಲ್ಲಿ ಅಬ್ರಹಾಂ ಮನವಿ ಇಟ್ಕೊಂಡು ರಾತ್ರಿ ಶೋಕಾಸ್ ನೋಟಿಸ್ ಕೊಟ್ಟಿದ್ದಾರೆ. ಅದು ಕೂಡ ಕೇವಲ 9 ಗಂಟೆಗಳ ಮಧ್ಯದಲ್ಲಿ ನೋಟಿಸ್ ಕೊಟ್ಟಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ಬಿಜೆಪಿ ಏನೇ ಆರೋಪ ಮಾಡಲಿ ತಲೆ ಕೆಡಿಸಿಕೊಳ್ಳಬೇಡಿ: ಸಿಎಂಗೆ ಹೈಕಮಾಂಡ್ ಅಭಯ

    ಈ ಕೇಸ್‌ನಲ್ಲಿ ಯಾರೂ ಕೂಡ ತನಿಖೆ ಮಾಡಿಲ್ಲ. ಶಶಿಕಲಾ ಜೊಲ್ಲೆ, ಕುಮಾರಸ್ವಾಮಿ, ರೆಡ್ಡಿ ಹಾಗೂ ಮುರುಗೇಶ್ ನಿರಾಣಿ ಕೇಸ್‌ನಲ್ಲಿ‌ ಹಲವು ತನಿಖೆ ಆಗಿತ್ತು. ಆದರೆ ಇವರ ಕೇಸ್‌ನಲ್ಲಿ ಯಾವುದೇ ಪ್ರಾಸಿಕ್ಯೂಷನ್ ಕೊಡೋದಕ್ಕೆ ಆಗಿಲ್ಲ. ಆದರೆ ಸಿದ್ದರಾಮಯ್ಯ ವಿಚಾರದಲ್ಲಿ ಮಾತ್ರ ಪ್ರಾಸಿಕ್ಯೂಷನ್ ಕೊಟ್ಟಿದ್ದಾರೆ ಎಂದು ಸಚಿವರು ಬೇಸರಿಸಿದ್ದಾರೆ.

  • ವಯನಾಡು ದುರಂತ: ಸಹಾಯಹಸ್ತ ನೀಡಲು ಉದ್ಯಮಿಗಳಿಗೆ ಸಚಿವ ಎಂಬಿ ಪಾಟೀಲ್ ಮನವಿ

    ವಯನಾಡು ದುರಂತ: ಸಹಾಯಹಸ್ತ ನೀಡಲು ಉದ್ಯಮಿಗಳಿಗೆ ಸಚಿವ ಎಂಬಿ ಪಾಟೀಲ್ ಮನವಿ

    ಬೆಂಗಳೂರು: ಕಂಡುಕೇಳರಿಯದ ಭೂಕುಸಿತದಿಂದ ನಲುಗಿರುವ ಕೇರಳದ ವಯನಾಡ್ ಜನತೆಯ ನೆರವಿಗೆ ರಾಜ್ಯದ ಕೈಗಾರಿಕೋದ್ಯಮಿಗಳು ಧಾವಿಸಿ, ಸಹಾಯಹಸ್ತ ಚಾಚಬೇಕು ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಮನವಿ ಮಾಡಿದ್ದಾರೆ.

    ಈ ಬಗ್ಗೆ ಶನಿವಾರ ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಈ ಸಂಬಂಧ ಯಾವುದೇ ಮಾಹಿತಿ/ಮಾರ್ಗದರ್ಶನ ಬೇಕಾದಲ್ಲಿ ಕೈಗಾರಿಕಾ ಇಲಾಖೆಯ ಆಯುಕ್ತೆ ಗುಂಜನ್ ಕೃಷ್ಣ ಅವರನ್ನು ದೂರವಾಣಿ ಸಂಖ್ಯೆ 080-22386796 ಅಥವಾ ಮಿಂಚಂಚೆ officeofdicommissioner@gmail.com ಮೂಲಕ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

    ವಯನಾಡು ದುರಂತದಲ್ಲಿ 412 ಮಂದಿ ಜೀವ ಕಳೆದುಕೊಂಡಿದ್ದು, ಇನ್ನೂ 138 ಜನ ಕಣ್ಮರೆಯಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಉದ್ಯಮಲೋಕವು ಮಾನವೀಯತೆಯನ್ನು ಎತ್ತಿ ಹಿಡಿಯಬೇಕಾಗಿದೆ ಎಂದು ಹೇಳಿದ್ದಾರೆ.

    ಉದ್ಯಮಿಗಳು ಸಂತ್ರಸ್ತರ ಪುನರ್ವಸತಿ, ಅಗತ್ಯ ವಸ್ತುಗಳ ಪೂರೈಕೆ, ಮನೆಗಳ ಪುನರ್‌ನಿರ್ಮಾಣ, ಮೂಲಸೌಕರ್ಯ, ಜೀವನೋಪಾಯಕ್ಕೆ ನೆರವು, ವೈದ್ಯಕೀಯ ನೆರವು ಹೀಗೆ ಯಾವ ರೂಪದಲ್ಲಾದರೂ ಸಹಾಯ ಮಾಡಬಹುದು ಎಂದು ಸಚಿವರು ತಿಳಿಸಿದ್ದಾರೆ.

    ನೆರೆಯ ರಾಜ್ಯವು ಈಗ ಪ್ರಾಕೃತಿಕ ವಿಕೋಪಕ್ಕೆ ಸಿಲುಕಿ ತತ್ತರಿಸಿದೆ. ಆ ರಾಜ್ಯಕ್ಕೆ ನೆರವು ನೀಡಲು ಕರ್ನಾಟಕ ಸರ್ಕಾರ ಬದ್ಧವಾಗಿದೆ ಎಂದು ವಿವರಿಸಿದ್ದಾರೆ.

  • ಕಳಂಕಿತ ಬಿಜೆಪಿಗೆ ಹೋರಾಟ ಮಾಡುವ ನೈತಿಕತೆ ಇಲ್ಲ: ಎಂ‌.ಬಿ.ಪಾಟೀಲ್

    ಕಳಂಕಿತ ಬಿಜೆಪಿಗೆ ಹೋರಾಟ ಮಾಡುವ ನೈತಿಕತೆ ಇಲ್ಲ: ಎಂ‌.ಬಿ.ಪಾಟೀಲ್

    ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯವರು ಬೇಕಾದರೆ ಪಾದಯಾತ್ರೆ ಮಾಡಿಕೊಳ್ಳಲಿ. ತಮ್ಮ ಸರ್ಕಾರವಿದ್ದಾಗ ನಡೆದ 40% ರಷ್ಟು ಕಮಿಷನ್, ಕೋವಿಡ್ ಕಾಲದ ಹಗರಣ, ಮಾರಿಷಸ್‌ನಲ್ಲಿ ಇಟ್ಟಿದ್ದಾರೆ ಎನ್ನಲಾಗುತ್ತಿರುವ ಹತ್ತು ಸಾವಿರ ಕೋಟಿ ರೂಪಾಯಿ ಹಗರಣಗಳ ಬಗ್ಗೆ ಅವರು ಮೊದಲು ಜನತೆಗೆ ಸತ್ಯ ತಿಳಿಸಲಿ ಎಂದು ಬೃಹತ್ ಕೈಗಾರಿಕಾ ಸಚಿವ ಎಂ‌.ಬಿ.ಪಾಟೀಲ್ (M.B.Patil) ಕುಟುಕಿದರು.

    ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ಬಿಜೆಪಿಯಲ್ಲಿ ವಿಜಯೇಂದ್ರ, ಅಶ್ವತ್ಥನಾರಾಯಣ, ಅಶೋಕ್‌, ರಮೇಶ್ ಜಾರಕಿಹೊಳಿ, ಯತ್ನಾಳ್‌ ಹೀಗೆ ಇಪ್ಪತ್ತು ಗುಂಪುಗಳಿವೆ. ಪಾದಯಾತ್ರೆ ಬಗ್ಗೆ ಬಿಜೆಪಿ ಮತ್ತು ಜೆಡಿಎಸ್ ಮಧ್ಯೆಯೇ ಒಮ್ಮತವಿಲ್ಲ. ಬಿಜೆಪಿಯಲ್ಲೂ ಯತ್ನಾಳ್‌ ಮತ್ತು ರಮೇಶ್‌ ಜಾರಕಿಹೊಳಿ ಬೇರೆ ತರಹ ಮಾತನಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ನೇಹಾ ಹತ್ಯೆ ಪ್ರಕರಣ ಫಾಸ್ಟ್‌ಟ್ರ್ಯಾಕ್ ಕೋರ್ಟ್‌ಗೆ ಕೊಡುವ ಅವಶ್ಯಕತೆ ಇಲ್ಲ: ಪರಮೇಶ್ವರ್

    ಬಿಜೆಪಿ ಸರ್ಕಾರವಿದ್ದಾಗ ಸಾಲುಸಾಲು ಹಗರಣಗಳು ನಡೆದಿದ್ದವು. ವಾಲ್ಮೀಕಿ ನಿಗಮದ ಹಗರಣದ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ. ಮೈಸೂರು ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಾತ್ರ ಏನೂ ಇಲ್ಲ. ಈಗಾಗಲೇ ಅವರು ಇದರ ಬಗ್ಗೆ ಸ್ಪಷ್ಟೀಕರಣ ಕೊಟ್ಟಿದ್ದಾರೆ ಎಂದು ಪ್ರತಿಪಾದಿಸಿದರು.

    ಮುಡಾದಲ್ಲಿ ಬದಲಿ ನಿವೇಶನ ಹಂಚಿಕೆಯ ನೀತಿ ಮಾಡಿದ್ದೇ ಬಿಜೆಪಿಯವರು. ಸೈಟುಗಳನ್ನು ಹಂಚಿದ್ದೂ ಅವರೇ. ಈಗ ಜನರ ದಿಕ್ಕು ತಪ್ಪಿಸಲು ಪಾದಯಾತ್ರೆಯ ನಾಟಕ ಆಡಲು ಹೊರಟಿದ್ದಾರೆ ಎಂದು ಟೀಕಿಸಿದರು. ಇದನ್ನೂ ಓದಿ: ದೇವೇಗೌಡರ ಕುಟುಂಬಕ್ಕೆ ವಿಷ ಇಟ್ಟವನ ಜತೆ ವೇದಿಕೆ ಹಂಚಿಕೊಳ್ಳಲು ಸಾಧ್ಯವೇ?: ಕುಮಾರಸ್ವಾಮಿ ಕಿಡಿ

    ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಪಕ್ಷದ ಹಲವು ವಿಚಾರಗಳ ಬಗ್ಗೆ ಮಾತನಾಡಲು ದೆಹಲಿಗೆ ಹೋಗಿದ್ದಾರಷ್ಟೆ. ಸಂಪುಟ ಪುನಾರಚನೆ ಎಲ್ಲ ಏನೂ ಇಲ್ಲ. ಮಂತ್ರಿಸ್ಥಾನ ಬೇಕೆಂಬ ಆಸೆ ಇರುವವರು ಅದಕ್ಕಾಗಿ ಕೇಳುವುದು ಸ್ವಾಭಾವಿಕ ಎಂದು ಉತ್ತರಿಸಿದರು.

    ಸಚಿವ ಜಮೀರ್ ಅಹಮದ್ ಸಂಪುಟ ಪುನಾರಚನೆ ಬಗ್ಗೆ ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ಇದನ್ನೆಲ್ಲ ಹೈಕಮಾಂಡ್ ನೋಡಿಕೊಳ್ಳುತ್ತದೆ‌. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆಯೂ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ನುಡಿದರು.

  • ಎರಡನೇ ವಿಮಾನ ನಿಲ್ದಾಣದ ಬಗ್ಗೆ ವಿಸ್ತೃತ ಚರ್ಚೆ ಬಳಿಕ ಸೂಕ್ತ ತೀರ್ಮಾನ: ಎಂ‌.ಬಿ.ಪಾಟೀಲ್

    ಎರಡನೇ ವಿಮಾನ ನಿಲ್ದಾಣದ ಬಗ್ಗೆ ವಿಸ್ತೃತ ಚರ್ಚೆ ಬಳಿಕ ಸೂಕ್ತ ತೀರ್ಮಾನ: ಎಂ‌.ಬಿ.ಪಾಟೀಲ್

    ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು (Bengaluru) ಸಮೀಪ ಮತ್ತೊಂದು ವಿಮಾನ ನಿಲ್ದಾಣ ಅತ್ಯಗತ್ಯವಾಗಿದೆ. ಇದನ್ನು ಎಲ್ಲಿ‌ ನಿರ್ಮಿಸಬೇಕು ಎನ್ನುವ ಬಗ್ಗೆ ಮತ್ತೊಂದು ಸುತ್ತಿನ ಚರ್ಚೆ ಮತ್ತು ಮುಖ್ಯಮಂತ್ರಿಗಳ ಜೊತೆ ವಿಚಾರ ವಿನಿಮಯ ನಡೆಸಿ, ತೀರ್ಮಾನಿಸಲಾಗುವುದು ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್ (M.B.Patil) ಹೇಳಿದರು.

    ಬೆಂಗಳೂರಿನಲ್ಲಿ ಮಾತನಾಡಿದ ಅವರು, ಎರಡನೇ ಏರ್ಪೋರ್ಟ್ ಅಭಿವೃದ್ಧಿ ಕುರಿತು ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯಲ್ಲಿ ಒಂದು ಸಭೆ ನಡೆದಿದೆ. ಸದ್ಯಕ್ಕೆ ಬಿಐಎಎಲ್ ಜೊತೆ ಚಾಲ್ತಿಯಲ್ಲಿರುವ ಒಪ್ಪಂದದಲ್ಲಿ 2033ರವರೆಗೂ 150 ಕಿ.ಮೀ. ಅಂತರದಲ್ಲಿ ಇನ್ನೊಂದು ವಿಮಾನ ನಿಲ್ದಾಣ ನಿರ್ಮಿಸಬಾರದು ಎಂಬ ಷರತ್ತಿದೆ. ನಾವು ಈಗಿನಿಂದಲೇ ಕಾರ್ಯ ಪ್ರವೃತ್ತರಾದರೆ ಇನ್ನು ಎಂಟು ವರ್ಷಗಳಲ್ಲಿ ಪ್ರಗತಿ ಸಾಧಿಸಬಹುದು ಎಂದರು. ಇದನ್ನೂ ಓದಿ: ಕಾರ್ಯಕರ್ತರ ಜೊತೆ ಸಭೆ ನಡೆಸಿ ಅಭ್ಯರ್ಥಿ ಆಯ್ಕೆ ಬಗ್ಗೆ ರಹಸ್ಯ ಕಾಯ್ದುಕೊಂಡ ಹೆಚ್‌ಡಿಕೆ

    ಪ್ರಯಾಣಿಕರ ಒತ್ತಡ ನೋಡಿದರೆ ಬೆಂಗಳೂರಿನ ದಕ್ಷಿಣ ಭಾಗ, ಕನಕಪುರ ಇತ್ಯಾದಿ ಭಾಗಗಳಿವೆ. ಈಗಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಮೀಪದಲ್ಲೇ ನೂತನ ವಿಮಾನ ನಿಲ್ದಾಣವು ಬರಬೇಕು ಎಂದಾದರೆ ಡಾಬಸ್‌ಪೇಟೆ, ತುಮಕೂರು ಇತ್ಯಾದಿಗಳು ಬರುತ್ತವೆ. ಇವೆಲ್ಲವನ್ನೂ ಪರಿಗಣಿಸಿ ಸ್ಥಳ ನಿಗದಿ, ಭೂ ಸ್ವಾಧೀನ, ಪರಿಹಾರ ಹಂಚಿಕೆ ಇತ್ಯಾದಿಗಳನ್ನು ಕೈಗೊಳ್ಳಬೇಕಾಗುತ್ತದೆ ಎಂದು ತಿಳಿಸಿದರು.

    ಮುಂಬಯಿ ನಗರದಲ್ಲಿ ಎರಡು ವಿಮಾನ ನಿಲ್ದಾಣಗಳ ನಡುವೆ ಕೇವಲ 36 ಕಿ.ಮೀ. ಅಂತರವಿದೆ. ನ್ಯೂಯಾರ್ಕ್ ಮತ್ತು ಲಂಡನ್ ನಗರಗಳಲ್ಲಿ ಕೂಡ ಹೆಚ್ಚು ದೂರವಿಲ್ಲ. ಜೊತೆಗೆ, ಬಿಐಎಎಲ್ ಹೊಂದಿರುವ ಷರತ್ತು ತಮಿಳುನಾಡಿಗೂ ಅನ್ವಯಿಸುತ್ತದೋ ಇಲ್ಲವೋ ಪರಿಶೀಲಿಸಬೇಕು. ನಾವು ಎರಡನೇ ವಿಮಾನ ನಿಲ್ದಾಣದ ಬಗ್ಗೆ ಮಾತನಾಡಿದ ಮೇಲೆ ತಮಿಳುನಾಡು ಸರ್ಕಾರವು ಹೊಸೂರಿನಲ್ಲಿ ಏರ್ಪೋರ್ಟ್ ಕಟ್ಟುವುದಾಗಿ ಹೇಳುತ್ತಿದೆ. ಇದರ ಸಾಧಕ-ಬಾಧಕಗಳನ್ನು ಅಧ್ಯಯನ ಮಾಡಲಾಗುವುದು ಎಂದರು. ಇದನ್ನೂ ಓದಿ: ನಾನು ಉಸ್ತುವಾರಿ ಸಚಿವನಿದ್ದಾಗಲೇ ಮುಡಾದಲ್ಲಿ ಅವ್ಯವಹಾರ ನಡೆದಿತ್ತು – ಎಸ್‌ಟಿಎಸ್‌ ಬಾಂಬ್‌

  • ದರ್ಶನ್ ಕೃಷಿ ಇಲಾಖೆ ರಾಯಭಾರಿಯಾಗಿ ಮುಂದುವರಿಯುವ ಪ್ರಶ್ನೆಯೇ ಇಲ್ಲ: ಎಂ.ಬಿ ಪಾಟೀಲ್

    ದರ್ಶನ್ ಕೃಷಿ ಇಲಾಖೆ ರಾಯಭಾರಿಯಾಗಿ ಮುಂದುವರಿಯುವ ಪ್ರಶ್ನೆಯೇ ಇಲ್ಲ: ಎಂ.ಬಿ ಪಾಟೀಲ್

    ಹುಬ್ಬಳ್ಳಿ: ಕೊಲೆ ಆರೋಪ ಎದುರಿಸುತ್ತಿರುವ ನಟ ದರ್ಶನ್ (Darshan) ಅವರು ಕೃಷಿ ಇಲಾಖೆಯ ರಾಯಭಾರಿಯಾಗಿಯಾಗಿ (Agriculture Department Ambassador) ಮುಂದುವರಿಯುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಎಂ.ಬಿ ಪಾಟೀಲ್ (M.B Patil) ಹೇಳಿದ್ದಾರೆ.

    ಈ ಬಗ್ಗೆ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೇಣುಕಾಸ್ವಾಮಿ ಹತ್ಯೆ ಪ್ರಕರಣ ಪಾರದರ್ಶಕವಾಗಿ ತನಿಖೆ ನಡೆಸಲಾಗುತ್ತಿದೆ. ದರ್ಶನ್‍ಗೆ ರಾಜಮರ್ಯಾದೆಯ ಪ್ರಶ್ನೆಯೇ ಇಲ್ಲ. ಆರೋಪಿ ಆರೋಪಿಯೇ, ಆರೋಪ ಸಾಬೀತಾದರೆ ಅವರಿಗೆ ಶಿಕ್ಷೆ ಆಗುತ್ತದೆ. ಇಂತಹ ಆರೋಪ ಎದುರಿಸುತ್ತಿರುವಾಗ ಅವರು ಕೃಷಿ ಇಲಾಖೆಯ ರಾಯಭಾರಿಯಾಗಿ ಮುಂದುವರಿಯಲು ಸಾಧ್ಯವಿಲ್ಲ ಎಂದಿದ್ದಾರೆ. ಇದನ್ನೂ ಓದಿ: ನನ್ನನ್ನೂ ಜೈಲಿಗೆ ಕಳಿಸುವ ಪ್ರಯತ್ನ ನಡೆಯುತ್ತಿದೆ – ಕೇಂದ್ರ ಸಚಿವ ಹೆಚ್‌ಡಿಕೆ ಕಳವಳ

    ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್ ವಿಚಾರವಾಗಿ ಮಾತನಾಡಿ, ಇದರಲ್ಲಿ ಯಾವುದೇ ರಾಜಕೀಯ ದ್ವೇಷವಿಲ್ಲ. ಪೋಕ್ಸೋ ಕಾಯ್ದೆ ಅತ್ಯಂತ ಗಂಭೀರವಾದದ್ದು. ಅಪ್ರಾಪ್ತ ವಯಸ್ಸಿನ ಮಕ್ಕಳ ಮೇಲೆ ದೌರ್ಜನ್ಯವಾದರೆ ಈ ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗುತ್ತದೆ. ಇದರಲ್ಲಿ ಸರ್ಕಾರ ಹಸ್ತಕ್ಷೇಪ ಮಾಡಲು ಬರುವುದಿಲ್ಲ ಎಂದಿದ್ದಾರೆ.

    ಪೋಕ್ಸೋ ವಿಚಾರವಾಗಿ, ಚಿತ್ರದುರ್ಗದ ಮುರುಘಾ ಮಠದ ಸ್ವಾಮಿಗಳ ಪ್ರಕರಣವನ್ನು ನೋಡಿದ್ದೀರಿ. ಪೋಕ್ಸೋ ಕಾಯ್ದೆ ಅಡಿ ತನ್ನದೇ ಆದ ಕ್ರಮಗಳನ್ನು ಕೈಗೊಳ್ಳಬೇಕಾಗುತ್ತದೆ. ಇದರಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿಯ ಪ್ರಶ್ನೆ ಬರಲ್ಲ. ಯಡಿಯೂರಪ್ಪ ತಪ್ಪಿತಸ್ಥರು ಹೌದೋ? ಅಲ್ಲವೋ? ಎನ್ನುವುದನ್ನು ನ್ಯಾಯಾಲಯ ನಿರ್ಧರಿಸುತ್ತದೆ. ಸಂತ್ರಸ್ತೆಯೇ ನ್ಯಾಯಾಧೀಶರ ಎದುರು ಹೇಳಿಕೆ ಕೊಟ್ಟಿದ್ದಾರೆ. ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ರೇಣುಕಾಸ್ವಾಮಿ ಹತ್ಯೆ ಕೇಸ್‌: ಕಣ್ಣೆದುರೇ ಮಗ ಅರೆಸ್ಟ್‌ – ಮನನೊಂದ ತಂದೆ ಹೃದಯಾಘಾತದಿಂದ ಸಾವು!

  • ಸಚಿವರ ಮೌಲ್ಯಮಾಪನದ ಬಗ್ಗೆ ಪಕ್ಷದ ವೇದಿಕೆಯಲ್ಲಿ ಚರ್ಚೆಯಾಗಿಲ್ಲ: ಎಂ.ಬಿ ಪಾಟೀಲ್

    ಸಚಿವರ ಮೌಲ್ಯಮಾಪನದ ಬಗ್ಗೆ ಪಕ್ಷದ ವೇದಿಕೆಯಲ್ಲಿ ಚರ್ಚೆಯಾಗಿಲ್ಲ: ಎಂ.ಬಿ ಪಾಟೀಲ್

    ಬೆಂಗಳೂರು: ಸಚಿವರ ಮೌಲ್ಯ ಮಾಪನದ ಬಗ್ಗೆ ಪಕ್ಷದ (Congress) ವೇದಿಕೆಯಲ್ಲಿ ಚರ್ಚೆ ನಡೆದಿಲ್ಲ ಎಂದು ಸಚಿವ ಎಂ.ಬಿ ಪಾಟೀಲ್ (M.B Patil) ಹೇಳಿದ್ದಾರೆ.

    ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶುಕ್ರವಾರ ನಡೆದ ಸಭೆ ಕೇವಲ ಎರಡೇ ನಿಮಿಷದಲ್ಲಿ ಮುಗಿದಿದೆ. ರಾಜ್ಯದಲ್ಲಿ ಲೋಕಸಭಾ ಚುನಾವಣೆಯಲ್ಲಿ ಯಾಕೆ ಹಿನ್ನಡೆಯಾಗಿದೆ ಎಂದು ರಾಹುಲ್ ಗಾಂಧಿಯವರಿಗೆ (Rahul Gandhi) ಸುರ್ಜೇವಾಲಾ ಅವರು ತಿಳಿಸಿದ್ದಾರೆ. ಯಾಕೆ ಎಂದು ವಿವರವಾಗಿ ವಿಮರ್ಶೆ ಮಾಡಿ ಎಂದು ಕೇಳಿದರು. ರಾಜ್ಯದಲ್ಲಿ ಪಕ್ಷಕ್ಕೆ ಯಾಕೆ ಹಿನ್ನಡೆಯಾಗಿದೆ? ಮುಂದೆ ಹೇಗೆ ಇರಬೇಕು? ಎಂಬ ಬಗ್ಗೆ ನಾವೇ ಆತ್ಮಾವಲೋಕನ ಮಾಡುತ್ತೇವೆ ಎಂದು ಅವರಿಗೆ ತಿಳಿಸಿದ್ದೇವೆ. ಇದರಲ್ಲಿ ಸಚಿವರ ಮೌಲ್ಯ ಮಾಪನ ಎಂಬುದು ಏನಿಲ್ಲ. ಆ ರೀತಿಯಾದ ಚರ್ಚೆ ನಡೆದಿಲ್ಲ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಡಿಕೆಸು ಸೋಲಿಗೆ ಸಿದ್ದರಾಮಯ್ಯ & ಟೀಂ ಕಾರಣ: ಹೊಸ ಬಾಂಬ್ ಸಿಡಿಸಿದ ಸುರೇಶ್ ಗೌಡ

    ಸಚಿವ ಶರಣಪ್ರಕಾಶ್ ಪಾಟೀಲ್ (Sharanprakash Patil) ವಿರುದ್ಧದ ಆರೋಪದ ವಿಚಾರವಾಗಿ, ಅವರು ಅಪ್ಪಟ ಪ್ರಾಮಾಣಿಕ ವ್ಯಕ್ತಿಯಾಗಿದ್ದಾರೆ. ಅವರು ಸಾಕ್ಷಿ ನಾಶ ಮಾಡುವ, ಭ್ರಷ್ಟಾಚಾರ ಮಾಡುವಂತಹ ವ್ಯಕ್ತಿಯಲ್ಲ. ಆ ಎಂ.ಡಿ ವಂಚಕ, ನಾಳೆ ಎಲ್ಲರ ಹೆಸರೂ ಹೇಳ್ತಾನೆ. ಇದರಲ್ಲಿ ಶರಣಪ್ರಕಾಶ್ ಪಾಟೀಲ್ ಹೆಸರು ತರೋದು ಬೇಡ ಎಂದು ಅವರು ಹೇಳಿದ್ದಾರೆ.

    ಕೇಂದ್ರದಲ್ಲಿ ಮೂರನೇ ಬಾರಿಗೆ ನರೇಂದ್ರ ಮೋದಿ ಪ್ರಧಾನಿ ಆಗುತ್ತಿರುವ ವಿಚಾರವಾಗಿ, ನರೇಂದ್ರ ಮೋದಿಯವರು ಈಗ ಬಹಳ ದುರ್ಬಲರಾಗಿದ್ದಾರೆ. ನಿತೀಶ್ ಕುಮಾರ್, ಚಂದ್ರಬಾಬು ನಾಯ್ಡು ಮೇಲೆ ಅವಲಂಬಿತರಾಗಿದ್ದಾರೆ. ಮುಂದೆ ಇವರ ಕಥೆ ಯಾವಾಗ ಏನಾಗುತ್ತೋ ಗೊತ್ತಿಲ್ಲ. ಎರಡು ಬಾರಿ ಅವರು ಸ್ವಶಕ್ತಿಯಿಂದ ಪ್ರಧಾನಿ ಆಗಿದ್ದರು. ಮತ್ತೆ ಚುನಾವಣೆ ಬಂದರೂ ಬರಬಹುದು ಎಂದಿದ್ದಾರೆ. ಇದನ್ನೂ ಓದಿ: ಲೋಕಸಭೆಯ ವಿಪಕ್ಷ ನಾಯಕನಾಗಿ ರಾಹುಲ್‌ ಗಾಂಧಿ ನೇಮಕಕ್ಕೆ CWC ನಿರ್ಣಯ ಅಂಗೀಕಾರ