Tag: M.B Patil

  • ಕ್ಲೀನ್‌ ಚಿಟ್‌ ಕೊಡೋಕೆ ಪ್ರಜ್ವಲ್‌ ಕೇಸನ್ನ ಸಿಬಿಐಗೆ ವಹಿಸಬೇಕಾ: ಎಂ.ಬಿ.ಪಾಟೀಲ್‌ ಪ್ರಶ್ನೆ

    ಕ್ಲೀನ್‌ ಚಿಟ್‌ ಕೊಡೋಕೆ ಪ್ರಜ್ವಲ್‌ ಕೇಸನ್ನ ಸಿಬಿಐಗೆ ವಹಿಸಬೇಕಾ: ಎಂ.ಬಿ.ಪಾಟೀಲ್‌ ಪ್ರಶ್ನೆ

    ಬೆಂಗಳೂರು: ಪ್ರಜ್ವಲ್ ಕೇಸನ್ನ ಸಿಬಿಐಗೆ ಕೊಡಿ ಅಂತಾ ಬಿಜೆಪಿ-ಜೆಡಿಎಸ್ ಅವರು ಕೇಳ್ತಿರೋದಾ ಕ್ಲೀನ್‌ ಚಿಟ್‌ ಕೊಡೋಕಾ ಎಂದು ಸಚಿವ ಎಂ.ಬಿ.ಪಾಟೀಲ್ (M.B.Patil) ಕಿಡಿಕಾರಿದರು.

    ನಗರದಲ್ಲಿ ಮಾತನಾಡಿದ ಅವರು, ಜೆಡಿಎಸ್-ಬಿಜೆಪಿಯಿಂದ ಸಿಬಿಐಗೆ ಕೊಡಬೇಕು ಅಂತಿದ್ದಾರೆ. ಸಿಬಿಐಗೆ (CBI) ಕೊಡೋದು ಕ್ಲೀನ್‌ ಚಿಟ್ ಕೊಡೋದಕ್ಕಾ? ಬಿಜೆಪಿ ಅದನ್ನ ವಾಷಿಂಗ್ ಮಿಷನ್‌ಗೆ ಹಾಕೋಕಾ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ರಾಜ್ಯದಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಮುಂದುವರಿಯುತ್ತೆ: ಬಿಎಸ್‌ವೈ

    ಈಗಾಗಲೇ ಪ್ರಜ್ವಲ್ ಕೇಸ್‌ನಲ್ಲಿ SIT ತನಿಖೆ ಆಗುತ್ತಿದೆ. ಯಾರೇ ಇದ್ದರೂ, ಎಷ್ಟೇ ದೊಡ್ಡವರು ಇದ್ದರೂ ಅವರ ವಿರುದ್ಧ ತನಿಖೆ ಆಗುತ್ತದೆ. ನಾನು ಮಾಜಿ ಗೃಹ ಸಚಿವ ಆಗಿದ್ದವನು. ಹೀಗಾಗಿ ತನಿಖೆ ಹಂತದಲ್ಲಿ ‌ನಾನು ಮಾತಾಡೋದಿಲ್ಲ. ಕಾನೂನು ಪ್ರಕಾರ ತನಿಖೆ ಆಗುತ್ತಿದೆ. ತನಿಖೆಯಿಂದ ಎಲ್ಲಾ ಹೊರಗೆ ಬರಲಿದೆ ಎಂದರು.

    ಬಿಜೆಪಿಯವರು ಹಿಂದೆ ಸಿಬಿಐ ಕಾಂಗ್ರೆಸ್ ಇನ್ವೆಸ್ಟಿಗೇಷನ್ ಅಂತಿದ್ದರು. ಈಗ ಸಿಬಿಐಗೆ ಕೊಡಬೇಕು ಅಂತಾರೆ. SIT ತನಿಖೆ ಆಗುತ್ತಿದೆ. ಎಲ್ಲಾ ಸತ್ಯ ಹೊರಗೆ ಬರಲಿದೆ. ಪ್ರಜ್ವಲ್ ರೇವಣ್ಣ ಎಲ್ಲೇ ಇದ್ದರೂ ಬಂದು ಶರಣಾಗಬೇಕು. ಕಾನೂನಿಗೆ ಬೆಲೆ ಕೊಡೋದಾದ್ರೆ ಬಂದು ಶರಣಾಗಬೇಕು.ಇಲ್ಲದೆ ಹೋದರೆ ಕೇಂದ್ರ ಸರ್ಕಾರ ಈ ಕೇಸನ್ನು ಗಂಭೀರವಾಗಿ ಪರಿಗಣಿಸಿ ಅವರನ್ನು ಕರೆ ತರಬೇಕು ಎಂದು ಹೇಳಿದರು. ಇದನ್ನೂ ಓದಿ: ಇಂದು ನ್ಯಾಯಾಧೀಶರ ಮುಂದೆ ದೇವರಾಜೇಗೌಡ

    ಬರ ಪರಿಹಾರ ಕುರಿತು ಮಾತನಾಡಿ, ಕೇಂದ್ರ ಸರ್ಕಾರ ನಾವು ಕೇಳಿದಷ್ಟು ಬರ ಪರಿಹಾರ ಕೊಡುವವರೆಗೂ ಸುಪ್ರೀಂ ಕೋರ್ಟ್‌ನಲ್ಲಿ ಹೋರಾಟ‌ ಮಾಡಲಾಗುವುದು. ಕೇಂದ್ರದಿಂದ ಬಂದ ಬರ ಪರಿಹಾರದ ಹಣ ರೈತರಿಗೆ ಹಂಚಿಕೆ ಮಾಡುತ್ತಿದ್ದೇವೆ. ಪರಿಹಾರ ಹಾಕೋದು‌ ಆಗುತ್ತೆ. ಆದರೆ ನಾವು ಬರ ಪರಿಹಾರ ಕೇಳಿದ್ದೆಷ್ಟು ಅವರು ಕೊಟ್ಟಿದ್ದು ಎಷ್ಟು ಎಂದು ಪ್ರಶ್ನಿಸಿದರು.

    NDRF, SDRF ನಿಯಮಗಳು ಬದಲಾವಣೆ ಆಗಬೇಕು. ನಾವು ಕೇಳಿದ್ದು 18 ಸಾವಿರ ಕೋಟಿ. ಅವರು ಕೊಟ್ಟಿದ್ದು 3,500 ಕೋಟಿ. ಈ ಹಣದಿಂದ ರೈತರಿಗೆ ಬೀಜ, ಗೊಬ್ಬರ ತೆಗೆದುಕೊಳ್ಳಲು ಆಗುವುದಿಲ್ಲ. ಹೀಗಾಗಿ ನಾವು ಕೇಳಿದಷ್ಟು ಸಂಪೂರ್ಣ ಹಣ ಬಿಡುಗಡೆ ಆಗಬೇಕು. ಇಲ್ಲದೇ ಹೋದರೆ ನಾವು ಕೋರ್ಟ್‌ನಲ್ಲಿ ಹೋರಾಟ ಮಾಡ್ತೀವಿ. ಕೇಂದ್ರ ಸರ್ಕಾರದ ವಿರುದ್ಧ ಕೋರ್ಟ್‌ನಲ್ಲಿ ಹೋರಾಟ ಮುಂದುವರೆಸುತ್ತೇವೆ ಎಂದು ತಿಳಿಸಿದರು.

  • ಮೈಸೂರು ಸ್ಯಾಂಡಲ್‌ ಸೋಪ್‌ ನಕಲಿ ಘಟಕದ ಮೇಲೆ ದಾಳಿ; 2 ಕೋಟಿ ಮೌಲ್ಯದ ಸಾಮಗ್ರಿ ವಶ

    ಮೈಸೂರು ಸ್ಯಾಂಡಲ್‌ ಸೋಪ್‌ ನಕಲಿ ಘಟಕದ ಮೇಲೆ ದಾಳಿ; 2 ಕೋಟಿ ಮೌಲ್ಯದ ಸಾಮಗ್ರಿ ವಶ

    – ಪ್ರಕರಣದಲ್ಲಿ ಇಬ್ಬರ ಬಂಧನ

    ಹೈದರಾಬಾದ್‌: ಇಲ್ಲಿನ ಮೈಸೂರು ಸ್ಯಾಂಡಲ್‌ ಸೋಪ್‌ (Mysore Sandal Soap) ನಕಲಿ ಘಟಕದ ಮೇಲೆ ಪೊಲೀಸರು ದಾಳಿ ನಡೆಸಿ 2 ಕೋಟಿ ರೂ. ಮೌಲ್ಯದ ನಕಲಿ ಸಾಮಗ್ರಿ ವಶಕ್ಕೆ ಪಡೆದಿದ್ದಾರೆ.

    ಈ ಸಂಬಂಧ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿರುವ ಸಚಿವ ಎಂ.ಬಿ.ಪಾಟೀಲ್‌, ಹೈದರಾಬಾದ್ ಮಾರುಕಟ್ಟೆಗೆ ನಕಲಿ ಮೈಸೂರು ಸ್ಯಾಂಡಲ್ ಸೋಪ್ ಪೂರೈಕೆಯಾಗುತ್ತಿರುವ ಬಗೆಗೆ ಅನಾಮಧೇಯ ಕರೆ ಬಂತು. ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಸಂಸ್ಥೆಯ MDಯವರಿಗೆ ನಿರ್ದೇಶನ ನೀಡಿದ್ದೆ. ಅದರಂತೆ ಸಿಕಂದರಾಬಾದಿನಲ್ಲಿರುವ ನಮ್ಮ ಸಂಸ್ಥೆಯ ಅಧಿಕೃತ ಮಾರಾಟದ ಸಿಬ್ಬಂದಿ, ನಕಲಿಗಳ ಜಾಲವನ್ನು ಬೇಧಿಸಲು ತಂತ್ರ ರೂಪಿಸಿದರು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸಂವಿಧಾನದ ಮೂಲಭೂತ ಹಕ್ಕುಗಳ ಭಾಗದಲ್ಲಿ ಶ್ರೀರಾಮ-ಲಕ್ಷ್ಮಣ, ಸೀತಾದೇವಿಯ ಚಿತ್ರಗಳಿವೆ: ಜಗದೀಪ್‌ ಧನಕರ್‌

    ಪೊಲೀಸರೊಂದಿಗೆ ಭೇಟೆಯಾಡಿ 2 ಕೋಟಿ ಮೌಲ್ಯದ ಮಾಲನ್ನು ವಶಪಡಿಸಿಕೊಂಡಿದ್ದಾರೆ. ಅಪರಾಧಿಗಳಿಗೆ ಕಾನೂನು ರೀತಿಯಲ್ಲಿ ಉಗ್ರ ಶಿಕ್ಷೆಯಾಗಲಿ. ಮೈಸೂರು ಸ್ಯಾಂಡಲ್‌ನ ಅಸಲಿ ಪರಿಮಳ ಎಲ್ಲೆಡೆ ಪಸರಿಸಲಿ ಎಂದು ಸಚಿವರು ಹೇಳಿದ್ದಾರೆ.

    ಕರ್ನಾಟಕ ಸರ್ಕಾರಿ ಸ್ವಾಮ್ಯದ ಕರ್ನಾಟಕ ಸೋಪ್ ಮತ್ತು ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್‌ಡಿಎಲ್)ನ ಮೈಸೂರು ಸ್ಯಾಂಡಲ್ ಸೋಪ್‌ನ ನಕಲಿ ಉತ್ಪನ್ನ ತಯಾರಿಸಿ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಶನಿವಾರ ಇಬ್ಬರನ್ನು ಬಂಧಿಸಲಾಗಿದೆ. ಇದನ್ನೂ ಓದಿ: ರಾಮಮಂದಿರ ಪ್ರಾಣಪ್ರತಿಷ್ಠೆಗೆ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್‌ಗೆ ಆಹ್ವಾನ

    ಮಲಕಪೇಟೆ ಪೊಲೀಸರು ನಕಲಿ ಉತ್ಪನ್ನಗಳು ಮತ್ತು ಪ್ಯಾಕೇಜಿಂಗ್ ಸಾಮಗ್ರಿಗಳು ಸೇರಿದಂತೆ ಸುಮಾರು 2 ಕೋಟಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

    150 ಗ್ರಾಂ ಸಾಬೂನು ಪ್ಯಾಕ್‌ಗಳ 1,800 ತುಂಡುಗಳನ್ನು ಹೊಂದಿರುವ 20 ಪೆಟ್ಟಿಗೆಗಳು, 75 ಗ್ರಾಂ ಸಾಬೂನಿನ 9,400 ತುಂಡುಗಳ 47 ರಟ್ಟಿನ ಪೆಟ್ಟಿಗೆಗಳು ಮತ್ತು 150 ಗ್ರಾಂ ಹಾಗೂ 75 ಗ್ರಾಂ ಸಾಬೂನುಗಳ 400 ಖಾಲಿ ಪ್ಯಾಕೇಜಿಂಗ್ ಬಾಕ್ಸ್‌ಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಇದನ್ನೂ ಓದಿ: I.N.D.I.A ಮೈತ್ರಿಕೂಟದ ಜವಾಬ್ದಾರಿ ಮಲ್ಲಿಕಾರ್ಜುನ್‌ ಖರ್ಗೆ ಹೆಗಲಿಗೆ

    ಆರೋಪಿ ರಾಕೇಶ್ ಜೈನ್ ಮತ್ತು ಮಹಾವೀರ್ ಜೈನ್ ವಿರುದ್ಧ ಹೈದರಾಬಾದ್‌ನ ಮಲಕ್‌ಪೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕೆಎಸ್‌ಡಿಎಲ್‌ ಅಧ್ಯಕ್ಷ, ಸಚಿವ ಎಂ.ಬಿ.ಪಾಟೀಲ್‌ ಅವರಿಗೆ ಅನಾಮಧೇಯ ಸುಳಿವು ದೊರೆತ ಹಿನ್ನೆಲೆಯಲ್ಲಿ ತನಿಖೆ ಆರಂಭಿಸಲಾಗಿತ್ತು. ಹೈದರಾಬಾದ್‌ನಲ್ಲಿ ನಕಲಿ ಮೈಸೂರು ಸ್ಯಾಂಡಲ್ ಸಾಬೂನುಗಳು ಚಲಾವಣೆಯಾಗುತ್ತಿರುವ ಬಗ್ಗೆ ಕರೆ ಸ್ವೀಕರಿಸಿದ ಸಚಿವ ಪಾಟೀಲ್, ಈ ಬಗ್ಗೆ ಪರಿಶೀಲಿಸುವಂತೆ ಕೆಎಸ್‌ಡಿಎಲ್ ವ್ಯವಸ್ಥಾಪಕ ನಿರ್ದೇಶಕ ಡಾ.ಪ್ರಶಾಂತ್ ಅವರಿಗೆ ಸೂಚಿಸಿದ್ದರು.

    ಕೆಎಸ್‌ಡಿಎಲ್ ತಂಡವು ಮಾರುಕಟ್ಟೆಯಲ್ಲಿ ನಕಲಿ ಸಾಬೂನು ಇರುವುದನ್ನು ದೃಢಪಡಿಸಿದ ನಂತರ, ಅದರ ಮೂಲವನ್ನು ಪತ್ತೆಹಚ್ಚಲು ಕಾರ್ಯಾಚರಣೆಯನ್ನು ನಡೆಸಿತು. ತಂಡವು ಮೊದಲು ಒಂದು ಲಕ್ಷ ರೂಪಾಯಿ ಮೌಲ್ಯದ ನಕಲಿ ಉತ್ಪನ್ನವನ್ನು ಖರೀದಿಸಿತು. ಅದನ್ನು ಪರಿಶೀಲಿಸಿದಾಗ ನಕಲಿ ಉತ್ಪನ್ನ ಎಂಬುದು ಗೊತ್ತಾಗಿ ಘಟಕದ ವಿರುದ್ಧ ಕ್ರಮಕೈಗೊಳ್ಳಲಾಗಿದೆ. ಇದನ್ನೂ ಓದಿ: ಸಿದ್ದರಾಮಯ್ಯ ಅಯೋಧ್ಯೆ ಭೇಟಿಯಲ್ಲಿ ತಪ್ಪೇನಿದೆ?: ಸಿಎಂ ಹೇಳಿಕೆ ಸಮರ್ಥಿಸಿದ ಸಚಿವ ಕೆ.ಎನ್ ರಾಜಣ್ಣ

  • ಯತ್ನಾಳ್ ಬಳಿ ಬಿಜೆಪಿಯವರ ಎಲ್ಲಾ ವೀಕ್ನೆಸ್ ಇದ್ದಂತೆ ಕಾಣ್ತಿದೆ: ಎಂ.ಬಿ.ಪಾಟೀಲ್

    ಯತ್ನಾಳ್ ಬಳಿ ಬಿಜೆಪಿಯವರ ಎಲ್ಲಾ ವೀಕ್ನೆಸ್ ಇದ್ದಂತೆ ಕಾಣ್ತಿದೆ: ಎಂ.ಬಿ.ಪಾಟೀಲ್

    ಬೆಂಗಳೂರು: ಬಸನಗೌಡ ಪಾಟೀಲ್ ಯತ್ನಾಳ್ ಕಾಂಗ್ರೆಸ್ ಏಜೆಂಟ್ ಅಲ್ಲ. ಕಾಂಗ್ರೆಸ್‌ಗೂ ಯತ್ನಾಳ್‌ಗೂ (Basanagouda Patil Yatnal) ಸಂಬಂಧ ಇಲ್ಲ ಎಂದು ಸಚಿವ ಎಂ.ಬಿ.ಪಾಟೀಲ್ (M.B.Patil) ಹೇಳಿದರು.

    ನಗರದಲ್ಲಿ ಮಾತನಾಡಿದ ಅವರು, ಯತ್ನಾಳ್ ಬಳಿ ಬಿಜೆಪಿಯವರ ಎಲ್ಲಾ ವೀಕ್ನೆಸ್ ಇದ್ದಂತೆ ಕಾಣುತ್ತಿದೆ. ಯತ್ನಾಳ್ ಹಿಂದಿನಿಂದ ಹೇಳುತ್ತ ಬಂದಿರುವುದು ಎಲ್ಲವೂ ಸತ್ಯ. ಹೀಗಾಗಿಯೇ ಯತ್ನಾಳ್ ವಿರುದ್ಧ ಬಿಜೆಪಿಯವರು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಯಾವುದೇ ಶಿಸ್ತು ಕ್ರಮ ಆಗದೇ ಇರುವುದು ನೋಡಿದರೆ ಅವರ ಬಳಿ ಎಲ್ಲ ದಾಖಲೆ ಇದ್ದಂತೆ ಇದೆ. ಸರ್ಕಾರ ಕೂಡ ತನಿಖೆ ಮಾಡ್ತಾ ಇದೆ. ಕೊರೊನಾ ಸಂದರ್ಭದಲ್ಲಿ ಗುತ್ತಿಗೆದಾರರ ಅಸೋಸಿಯೇಷನ್ ಆರೋಪ ಸೇರಿ ಎಲ್ಲ ತನಿಖೆ ಮಾಡ್ತೇವೆ. ಸರ್ಕಾರ ಸುಮ್ಮನೆ ಕುಳಿತಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: BSY ವಿರುದ್ಧ ಆರೋಪದ ನಡುವೆಯೇ ವಿಜಯಪುರಕ್ಕೆ ವಿಜಯೇಂದ್ರ ಭೇಟಿ- ಜಿಲ್ಲಾ ಬಿಜೆಪಿಯಲ್ಲಿ ಸಂಚಲನ

    ಜಾತಿ ಜನಗಣತಿ ವಿಚಾರದಲ್ಲಿ ಪದೇ ಪದೇ ಹೇಳಿಸಬೇಡಿ. ಹಿಂದೂ ಲಿಂಗಾಯತ, ಹಿಂದೂ ಬಣಜಿಗ, ಹಿಂದೂ ಸಾದರ ಎಂದು ಜಾತಿ ಜನಗಣತಿಯಲ್ಲಿ ಬರೆಸಿದ್ದಾರೆ. 2ಎ ಮೀಸಲಾತಿ ಸಲುವಾಗಿ ಬೇರೆ ಬೇರೆ ಬರೆಸಿದರೆ ಯಾವುದೇ ಪ್ರಯೊಜನ ಇಲ್ಲ. 17-22% ನಾವು ಲಿಂಗಾಯತರು ರಾಜ್ಯದಲ್ಲಿ ಇದ್ದೇವೆ. ಒಂದೇ ಸೂರಿನಡಿ ಎಲ್ಲ ಲಿಂಗಾಯತರನ್ನು ತರಬೇಕಿದೆ. ಜಾತಿ ಜನಗಣತಿಗೆ ನಮ್ಮ ವಿರೋಧವಿಲ್ಲ. ಗೊಂದಲಗಳನ್ನು ಸರಿಪಡಿಸಿ ಎಂಬುದಷ್ಟೇ ನಮ್ಮ ಆಗ್ರಹ ಎಂದರು.

    ಹೆಚ್ಚುವರಿ ಡಿಸಿಎಂ ಆಯ್ಕೆ ವಿಚಾರವಾಗಿ ನಾನು ಬಹಿರಂಗವಾಗಿ ಏನೂ ಹೇಳುವುದಿಲ್ಲ. ನಮ್ಮ ಅಭಿಪ್ರಾಯ ನಮ್ಮ ಹೈಕಮಾಂಡ್ ಮುಂದೆ ಹೇಳ್ತೀನಿ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮುಂದೆ ಹೇಳ್ತೇವೆ ಎಂದು ಹೇಳಿದರು. ಇದನ್ನೂ ಓದಿ: ಹೊಸ ವರ್ಷಕ್ಕೆ ಪಕ್ಕದ ರಾಜ್ಯಗಳಿಂದ ಮದ್ಯ ಸರಬರಾಜು – ಹದ್ದಿನ ಕಣ್ಣಿಟ್ಟ ಅಬಕಾರಿ ಇಲಾಖೆ

    ಬಿಜೆಪಿ ಎಷ್ಟು ದುರ್ಬಲ ಆಗಿದೆ ಅಂದ್ರೆ, ಯತ್ನಾಳ್ ಮೇಲೆ ಕ್ರಮ ಕೈಗೊಳ್ಳಲು ಆಗ್ತಿಲ್ಲ. ಯತ್ನಾಳ್ ವಿರುದ್ಧ ಕ್ರಮ ಆಗದೇ ಇರುವುದು ಬಿಜೆಪಿ ದೌರ್ಬಲ್ಯ. ನಿನ್ನೆ ಕೋರ್ ಕಮಿಟಿ ಮೀಟಿಂಗ್ ಮಾಡಿದ್ದಾರೆ. ಆದ್ರೂ ಯತ್ನಾಳ್ ಮೇಲೆ ಕ್ರಮ ಆಗ್ತಿಲ್ಲ. ಕಳೆದ ಐದು ವರ್ಷಗಳಲ್ಲಿ ಯತ್ನಾಳ್ ಹೇಳಿದ್ದೆಲ್ಲ ಸತ್ಯ ಇದೆ. ಅದಕ್ಕಾಗಿಯೇ ಬಿಜೆಪಿಯವರು ಹೆದರಿಕೊಂಡಿದ್ದಾರೆ. ಕಾಂಗ್ರೆಸ್ ಏಜೆಂಟ್ ಆಗಿದ್ರೆ ಯಾಕೆ ಆ್ಯಕ್ಷನ್ ತೆಗೆದುಕೊಳ್ತಿಲ್ಲ. ಕಾಂಗ್ರೆಸ್‌ಗೂ ಯತ್ನಾಳ್‌ಗೂ ಸಂಬಂಧ ಇಲ್ಲ ಎಂದು ಸ್ಪಷ್ಟಪಡಿಸಿದರು.

    ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡ ಬಂಧನ ಹಾಗೂ ಕನ್ನಡ ಕಡ್ಡಾಯ ವಿಚಾರವಾಗಿ ಮಾತನಾಡಿ, ನಮ್ಮ ಜಿಲ್ಲೆಯಲ್ಲಿ ಕನ್ನಡ ಕಡ್ಡಾಯದ ಬಗ್ಗೆ ಏನೂ ಸಮಸ್ಯೆ ಇಲ್ಲ. ಎಲ್ಲರೂ ಕನ್ನಡ ಫಲಕ ಹಾಕಬೇಕು. ಆದ್ರೆ ಯಾರೂ ಕಾನೂನು ಕೈಗೆ ತೆಗೆದುಕೊಳ್ಳಬಾರದು. ಸರ್ಕಾರಕ್ಕೆ ಗಡುವು ಕೊಡಿ. ಸ್ವಯಂ ಇಚ್ಛೆಯಿಂದ ಹಾಕಿ ನೀವು ಕಾನೂನು ಕೈಗೆ ತೆಗೆದುಕೊಳ್ಳೋದು ಆಗಬಾರದು. ಸರ್ಕಾರದ ಆಸ್ತಿಗೆ ಹಾನಿ ಮಾಡಬಾರದು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೆಟ್ಟ ಹೆಸರು ಬರಲಿದೆ. ಬಹಳ ಎಚ್ಚರಿಕೆಯಿಂದ ಹೆಜ್ಜೆ ಇಡಬೇಕು. ಕೈಗಾರಿಕೆಗಳಿಗೂ ಒಂದು ಅಡ್ವೈಸ್ ಕಳಿಸ್ತೀವಿ ಎಂದು ತಿಳಿಸಿದರು. ಇದನ್ನೂ ಓದಿ: ಲೋಕಸಭಾ ಚುನಾವಣೆ: ಶಿವಸಂಕಲ್ಪ ಅಭಿಯಾನ ಘೋಷಿಸಿದ ಸಿಎಂ ಏಕನಾಥ್‌ ಶಿಂಧೆ

    ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿ, ಕೋಮುಗಲಭೆ ಉದ್ದೇಶಪೂರ್ವಕವಾಗಿ ಮಾಡ್ತಾರೆ. ಕೆಟ್ಟ ಚಾಳಿ ಇದು. ಪ್ರಭಾಕರ್ ಭಟ್ ಅಥವಾ ಯಾರೇ ಇರಲಿ. ನಿರ್ದಾಕ್ಷಿಣ್ಯ ಕ್ರಮ ಆಗಬೇಕು. ಇದು ಸರ್ವ ಜನಾಂಗದ ಶಾಂತಿಯ ತೋಟ ಎಂದರು.

  • ವೀರಶೈವ ಸಮಾವೇಶಕ್ಕೆ ಸಚಿವ ಎಂ.ಬಿ. ಪಾಟೀಲ್ ಸಿಡಿಮಿಡಿ

    ವೀರಶೈವ ಸಮಾವೇಶಕ್ಕೆ ಸಚಿವ ಎಂ.ಬಿ. ಪಾಟೀಲ್ ಸಿಡಿಮಿಡಿ

    ಕೊಪ್ಪಳ: ದಾವಣಗೆರೆಯಲ್ಲಿ (Davanagere) ನಡೆಯಲಿರುವ ವೀರಶೈವ ಸಮಾವೇಶದ (Veerashaiva samavesha) ಬಗ್ಗೆ ಪತ್ರಕರ್ತರ ಪ್ರಶ್ನೆಗೆ, ಈ ಕುರಿತು ಶಾಮನೂರು ಶಿವಶಂಕರಪ್ಪ ಹಾಗೂ ಸಚಿವ ಈಶ್ವರ ಖಂಡ್ರೆ ಅವರನ್ನು ಕೇಳಬೇಕು ಎಂದು ಸಚಿವ ಎಂ.ಬಿ. ಪಾಟೀಲ್ (M.B. Patil) ಸಿಡಿಮಿಡಿಗೊಂಡಿದ್ದು, ಪರೋಕ್ಷವಾಗಿ ವಿರೋಧ ವ್ಯಕ್ತಪಡಿಸಿದ್ದಾರೆ.

    ತಾವರಗೇರ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಾವೇಶದಲ್ಲಿ ಭಾಗವಹಿಸುವ ಬಗ್ಗೆ ವಿಚಾರ ಮಾಡುತ್ತೇನೆ. ಸಮಾವೇಶದ ಬಗ್ಗೆ ನನಗೆ ಹೆಚ್ಚಿನ ಮಾಹಿತಿ ಇಲ್ಲ. ಸಮಾವೇಶದ ಬಗ್ಗೆ ಶಾಮನೂರು ಶಿವಶಂಕರಪ್ಪ ಹಾಗೂ ಸಚಿವ ಈಶ್ವರ ಖಂಡ್ರೆ ಅವರನ್ನು ಕೇಳಬೇಕು ಎಂದಿದ್ದಾರೆ. ಇದನ್ನೂ ಓದಿ: ಭಾರತದ ಕುಸ್ತಿ ಫೆಡರೇಶನ್ ಅಧ್ಯಕ್ಷಗಿರಿಗೆ ಬ್ರಿಜ್ ಭೂಷಣ್ ಬೆಂಬಲಿತ ಅಭ್ಯರ್ಥಿ ಆಯ್ಕೆ

    ಲೋಕಸಭೆಯಲ್ಲಿ ಸಂಸದರ ಅಮಾನತು ಮಾಡಿದ ವಿಚಾರವಾಗಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸದನದಲ್ಲಿ ಸಂವಿಧಾನಾತ್ಮಕವಾಗಿ ಪ್ರತಿಭಟನೆ ನಡೆಸಲಾಗುತ್ತದೆ. ಅದಕ್ಕಾಗಿ ಸಂಸದರನ್ನು ಅಮಾನತು ಮಾಡಿದ್ದು ಸರಿಯಾದ ಕ್ರಮವಲ್ಲ. ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಇಷ್ಟೊಂದು ಸಂಸದರನ್ನು ಅಮಾನತು ಮಾಡಲಾಗಿದೆ. ಅಮಾನತು ಮಾಡುವುದರಲ್ಲೂ ಇತಿಹಾಸ ಸೃಷ್ಟಿಸಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

    ಶಾಸಕ ಬಿ.ಆರ್. ಪಾಟೀಲ್ ಅಸಮಾಧಾನ ವಿಚಾರಕ್ಕೆ ಪ್ರತಿಕ್ರಿಯಿಸಿ, ಅವರು ನಮ್ಮ ಪಕ್ಷದ ಹಿರಿಯರು. ಹಳೇ ಸರ್ಕಾರದ ಬಜೆಟ್‍ನಲ್ಲಿ ಅನುದಾನ ನೀಡಲು ಆಗಿಲ್ಲ ಎಂದು ಸಿಎಂ ಈಗಾಗಲೇ ಹೇಳಿದ್ದಾರೆ. ಹಳೇ ಬಜೆಟ್ ಮುಂದುವರಿಸಿದ್ದೇವೆ. ಲಕ್ಷಾಂತರ ರೂ. ಅನುದಾನ ಬಿಡುಗಡೆ ಬಾಕಿ ಇಟ್ಟು ಹೋಗಿದ್ದಾರೆ. ನಮ್ಮ ಸಿಎಂ ಸಮರ್ಥರಿದ್ದು, ಮಾರ್ಚ್ ಒಳಗಾಗಿ ಎಲ್ಲಾ ಶಾಸಕರಿಗೆ ಅನುದಾನ ನೀಡಲಿದ್ದಾರೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಸಂಸದರಿಗೇ ರಕ್ಷಣೆ ಇಲ್ಲ, ಬೇರೆಯವ್ರಿಗೆ ಹೇಗೆ ಎಂದು ಪ್ರಶ್ನಿಸಿದ ನಮ್ಮನ್ನೂ ಅಮಾನತು ಮಾಡಿದ್ರು: ಡಿಕೆ‌ ಸುರೇಶ್

  • ಜಾತಿಗಣತಿಗೆ ನಮ್ಮ ವಿರೋಧ ಇಲ್ಲ.. ಕೆಲವು ಆತಂಕಗಳಿವೆ: ಎಂ.ಬಿ.ಪಾಟೀಲ್

    ಜಾತಿಗಣತಿಗೆ ನಮ್ಮ ವಿರೋಧ ಇಲ್ಲ.. ಕೆಲವು ಆತಂಕಗಳಿವೆ: ಎಂ.ಬಿ.ಪಾಟೀಲ್

    ಬೆಂಗಳೂರು: ಜಾತಿಗಣತಿಗೆ (Caste Census) ನಮ್ಮ ವಿರೋಧ ಇಲ್ಲ. ನಮಗೆ ಕೆಲವು ಆತಂಕಗಳಿವೆ ಎಂದು ಸಚಿವ ಎಂ.ಬಿ.ಪಾಟೀಲ್‌ (M.B.Patil) ತಿಳಿಸಿದ್ದಾರೆ.

    ನಗರದಲ್ಲಿ ಮಾತನಾಡಿದ ಅವರು, ಕಾಂತರಾಜು ಕಮಿಟಿ ವಿಚಾರದಲ್ಲಿ ಲಿಂಗಾಯತ ಸಮುದಾಯದ ನಿಲುವಿನ ವಿಚಾರದಲ್ಲಿ ಯಾವುದೇ ಮುಚ್ಚುಮರೆ ಇಲ್ಲ. ನಾವು ವಿರೋಧ ವ್ಯಕ್ತಪಡಿಸಿಲ್ಲ. ನಮಗೆ ಕೆಲ ಆತಂಕಗಳಿವೆ ಅಷ್ಟೆ. ಈ ವಿಚಾರದಲ್ಲಿ ಯಾವುದೇ ಮುಚ್ಚುಮರೆ ಇಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಜಾತಿಗಣತಿ ವರದಿ ಬಂದ ಬಳಿಕ‌ವೇ ಅನುಷ್ಠಾನಕ್ಕೆ ತೀರ್ಮಾನ – ಶಿವರಾಜ್ ತಂಗಡಗಿ

    ಲಿಂಗಾಯತ ಸಮುದಾಯದಲ್ಲಿ 40 ಪ್ರಮುಖ ಉಪಜಾತಿಗಳಿವೆ. ಲಿಂಗಾಯತ ಗಾಣಿಗ ಅಂತಿದ್ದರೆ, ಹಿಂದೂ ಗಾಣಿಗ ಅಂತಾ ಬರೆಸಿರುತ್ತಾರೆ. ಸಾದರ ಸಮುದಾಯ, ಹಿಂದೂ ಸಾದರ ಅಂತ ಬರೆಸಿರುತ್ತಾರೆ. ಹೀಗೆ ಉಪಜಾತಿಗಳನ್ನು ಅವರ ಉಪಜಾತಿಯ ಹೆಸರಿನಲ್ಲಿ ಬರೆಸಿರುತ್ತಾರೆ. ಲಿಂಗಾಯತ ಸಮುದಾಯದ ಎಲ್ಲ ಉಪಜಾತಿಗಳನ್ನು ಒಂದೇ ಕಡೆ ತನ್ನಿ ಎನ್ನುವುದು ನಮ್ಮ ಬೇಡಿಕೆ. ಜಾತಿಗಣತಿಗೆ ನಮ್ಮ ವಿರೋಧ ಇಲ್ಲ. ನಾವು ಕೇಳ್ತಿರೋದ್ರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದ್ದಾರೆ.

    ಉಪಜಾತಿಗಳನ್ನು ಪ್ರತ್ಯೇಕವಾಗಿ ಬರೆದಿರುವುದನ್ನು ಸರಿಪಡಿಸಿ ಎಂದು ಹೇಳಿದ್ದೇವೆ. ಒಕ್ಕಲಿಗ ಸಮುದಾಯದಲ್ಲೂ ಇದೇ ಸಮಸ್ಯೆ ಇದೆ. ಅವರದ್ದೂ ಸರಿಪಡಿಸಲಿ. ಇದು ಸೆನ್ಸಸ್‌ (ಜಾತಿಜನಗಣತಿ) ಅಲ್ಲ. ಸೆನ್ಸಸ್ ಮಾಡುವ ಅಧಿಕಾರ ಕೇಂದ್ರ ಸರ್ಕಾರಕ್ಕೆ ಮಾತ್ರ. ಇದೊಂದು ಸಮೀಕ್ಷೆ ಆಗಿದೆ. ಅದಕ್ಕೆ ಸ್ಯಾಂಪಲ್ಸ್ ಇರ್ತವೆ. ಇದಕ್ಕೆ ನಮ್ಮ ವಿರೋಧ ಇಲ್ಲ. ಎಲ್ಲಾ ಉಪ ಸಮುದಾಯಗಳನ್ನು ಕೌಂಟ್ ಮಾಡಿ ಒಂದೇ ಹೆಸರಿನಲ್ಲಿ ತನ್ನಿ ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಜಾತಿಗಣತಿ ವರದಿಯಿಂದ ಲಿಂಗಾಯತರು, ಒಕ್ಕಲಿಗರ ಪ್ರಾಬಲ್ಯ ಕಡಿಮೆಯಾಗಲ್ಲ: ರಾಯರೆಡ್ಡಿ

    ವರದಿ ಕೊಡುವ ಮುಂಚೆಯೇ ಇದನ್ನು ಸರಿಪಡಿಸಬೇಕು ಎಂಬ ಬೇಡಿಕೆ ಇದೆ. ಜಾತಿಗಣತಿಗೆ ಆಗ್ರಹಿಸಿ ಅಹಿಂದದವರು ಮಾಡ್ಲಿ, ದಲಿತ ಸಮುದಾಯ ಮಾಡ್ಲಿ, ಲಂಬಾಣಿ ಸಮುದಾಯ ಮಾಡ್ಲಿ, ಪರಿಶಿಷ್ಟ ಪಂಗಡ ಎಲ್ಲ ಸಮುದಾಯದವರು ಮಾಡ್ಲಿ ತಪ್ಪೇನಿಲ್ಲ. ಸಣ್ಣ ಸಣ್ಣ ಸಮುದಾಯಗಳು ಯಾಕೆ ಮಾಡಬಾರದು? ಮಾಡಲಿ ಎಂದಿದ್ದಾರೆ. ಜಾತಿಗಣತಿ ಲೋಕಸಭೆ ಮೇಲೆ ಪರಿಣಾಮ ಬೀರುವ ವಿಚಾರದಲ್ಲಿ ಸಮಸ್ಯೆ ಸರಿಪಡಿಸಿದರೆ ಯಾಕೆ ಪರಿಣಾಮ ಬೀರುತ್ತೆ? ಮುಖ್ಯಮಂತ್ರಿಗಳ ಮೇಲೆ ನಮಗೆ ವಿಶ್ವಾಸ ಇದೆ. ಸರಿಪಡಿಸುತ್ತೇವೆ ಅಂತಾ ಹೇಳಿದ್ದಾರೆ ಎಂದು ಮಾತನಾಡಿದ್ದಾರೆ.

  • ಹೊನಗಾ ಕೈಗಾರಿಕಾ ಪ್ರದೇಶದಲ್ಲಿ ತಿಂಗಳಲ್ಲಿ ಖಾತಾ: ಉದ್ಯಮಿಗಳ ನಿಯೋಗಕ್ಕೆ ಎಂ.ಬಿ.ಪಾಟೀಲ್‌ ಭರವಸೆ

    ಹೊನಗಾ ಕೈಗಾರಿಕಾ ಪ್ರದೇಶದಲ್ಲಿ ತಿಂಗಳಲ್ಲಿ ಖಾತಾ: ಉದ್ಯಮಿಗಳ ನಿಯೋಗಕ್ಕೆ ಎಂ.ಬಿ.ಪಾಟೀಲ್‌ ಭರವಸೆ

    ಬೆಳಗಾವಿ: ಇಲ್ಲಿನ‌ ಹೊರವಲಯದಲ್ಲಿ ಇರುವ ಹೊನಗಾ ಕೈಗಾರಿಕಾ ಪ್ರದೇಶದಲ್ಲಿ (Honaga Industrial Area) ಇದುವರೆಗೂ ಖಾತಾ ಪಡೆಯದೆ ಇರುವ ಉದ್ಯಮಿಗಳು ಅರ್ಜಿ ಸಲ್ಲಿಸಿದರೆ, ಮುಂದಿನ 31 ದಿನಗಳಲ್ಲಿ ಖಾತಾ ಮಾಡಿಸಿ ಕೊಡಲಾಗುವುದು ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ (M.B.Patil) ಹೇಳಿದ್ದಾರೆ.

    ಗುರುವಾರ ಇಲ್ಲಿನ ಸುವರ್ಣಸೌಧದ ಕಮಿಟಿ ರೂಮ್‌ನಲ್ಲಿ ಉತ್ತರ ಬೆಳಗಾವಿ ಕೈಗಾರಿಕಾ ಒಕ್ಕೂಟದ ಪ್ರತಿನಿಧಿಗಳ ಜತೆ ವಿವಿಧ ಸಮಸ್ಯೆಗಳನ್ನು ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಇದನ್ನೂ ಓದಿ: ಹಲ್ಲೆ ಪ್ರಕರಣ ಮುಚ್ಚಿ ಹಾಕಲು ಪ್ರಿಯಾಂಕ್ ಖರ್ಗೆ ಯತ್ನ – ಸುಳ್ಳು ಕೇಸ್‌ಗಳಿಗೆ ನಾವು ಭಯಪಡಲ್ಲ: ಮಣಿಕಂಠ್ ರಾಠೋಡ್

    ಹೊನಗಾ ಕೈಗಾರಿಕಾ ಪ್ರದೇಶದಲ್ಲಿ ಒಟ್ಟು 233 ಉದ್ಯಮಗಳು ಇವೆ. ಇವುಗಳ ಪೈಕಿ 202ಕ್ಕೆ ಸೇಲ್ ಡೀಡ್ ಆಗಿದ್ದು, 131 ಉದ್ಯಮಿಗಳಿಗೆ ಮಾತ್ರ ಖಾತಾ ಸಿಕ್ಕಿದೆ. ಉಳಿದ ಉದ್ಯಮಗಳಿಗೂ ಖಾತೆ ಸೌಲಭ್ಯ ಮಾಡಿಕೊಡಬೇಕು ಎಂದು ಉದ್ಯಮಿಗಳು ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಸಚಿವರು ಈ ಭರವಸೆ ನೀಡಿದರು.

    ಇದಕ್ಕೆ ಸ್ಪಂದಿಸಿದ ಸಚಿವರು, ಹೊನಗಾ ಕೈಗಾರಿಕಾ ಪ್ರದೇಶದಲ್ಲಿ ಕೆಲವು ಸಮಸ್ಯೆಗಳು ಬಹುಕಾಲದಿಂದ ನನೆಗುದಿಗೆ ಬಿದ್ದಿವೆ. ಖಾತೆ ಸೌಲಭ್ಯ ಗ್ರಾಮ ಪಂಚಾಯಿತಿ ಮೂಲಕ ಆಗಬೇಕು. ಕೈಗಾರಿಕಾ ಬಡಾವಣೆಯಲ್ಲಿನ ನಿವೇಶನಗಳಿಗೆ ಆಸ್ತಿ ತೆರಿಗೆಯನ್ನು ಹಲವು ವರ್ಷಗಳಿಂದ ವಸೂಲಿ ಮಾಡಿಲ್ಲ. ಹೀಗಾಗಿ ಮಾರ್ಗದರ್ಶಿ ಬೆಲೆ ಅನ್ವಯವಾದ 2017 ರಿಂದ ಆಸ್ತಿ ತೆರಿಗೆ ವಸೂಲಿ‌ ಮಾಡಲು ತೀರ್ಮಾನಿಸಲಾಯಿತು. ಇದಕ್ಕೆ ಎಲ್ಲ ಉದ್ಯಮಿಗಳು ಒಪ್ಪಿಕೊಂಡಿದ್ದಾರೆ ಎಂದರು. ಇದನ್ನೂ ಓದಿ: ಯತ್ನಾಳ್ ಆರೋಪಿಸಿದ ಅದೇ ಮೌಲ್ವಿ ಜೊತೆ ಗಡ್ಕರಿ ಫೋಟೋ ಬಿಡುಗಡೆ ಮಾಡಿದ ಕಾಂಗ್ರೆಸ್ ಮುಖಂಡ

    ಹೊನಗಾದಲ್ಲಿ ಇರುವ ಕ್ಯಾಂಟೀನ್ ಕಟ್ಟಡವನ್ನು ಆಡಳಿತ ಕಚೇರಿ ಆರಂಭಿಸಲು ನಿಯೋಗವು ಕೇಳಿದೆ. ಸರ್ಕಾರವು ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಲಿದೆ ಎಂದು ಅವರು ನುಡಿದರು. ಸಭೆಯಲ್ಲಿ ಒಕ್ಕೂಟದ ಅಧ್ಯಕ್ಷ ಶಿವಕುಮಾರ್, ಉಪಾಧ್ಯಕ್ಷ ಅಜಿತ್ ಪಾಟೀಲ, ನಾಗೇಂದ್ರ ಇದ್ದರು.

    ಗ್ರಾಮೀಣಾಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಅಂಜುಂ‌ ಪರ್ವೇಜ್, ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಬೆಳಗಾವಿ ಜಿಲ್ಲಾಧಿಕಾರಿ ನಿತೀಶ್ ಪಾಟೀಲ, ಕೈಗಾರಿಕಾ ಇಲಾಖೆ ನಿರ್ದೇಶಕ ರಮೇಶ ಉಪಸ್ಥಿತರಿದ್ದರು.

  • 3607.19 ಕೋಟಿ ರೂ. ಬಂಡವಾಳ ಹೂಡಿಕೆಯ 62 ಯೋಜನೆಗಳಿಗೆ ಅನುಮೋದನೆ

    3607.19 ಕೋಟಿ ರೂ. ಬಂಡವಾಳ ಹೂಡಿಕೆಯ 62 ಯೋಜನೆಗಳಿಗೆ ಅನುಮೋದನೆ

    ಬೆಂಗಳೂರು: ಬೃಹತ್ ಮತ್ತು ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್ (M.B.Patil) ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ 141‌ ನೇ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿ ಸಭೆಯಲ್ಲಿ ಒಟ್ಟು 3,607.19 ಕೋಟಿ ರೂ. ಬಂಡವಾಳ ಹೂಡಿಕೆಯ 62 ಯೋಜನೆಗಳಿಗೆ ಅನುಮೋದನೆ ನೀಡಲಾಗಿದ್ದು, ಇವುಗಳಿಂದ 10,755 ಜನರಿಗೆ ಉದ್ಯೋಗ ಅವಕಾಶ ದೊರೆಯಲಿದೆ.

    50 ಕೋಟಿ ರೂ.ಗೂ ಹೆಚ್ಚಿನ ಬಂಡವಾಳ ಹೂಡಿಕೆಯ 8 ಪ್ರಮುಖ ಬೃಹತ್ ಮತ್ತು ಮಧ್ಯಮ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಇವುಗಳಿಂದ ರಾಜ್ಯದಲ್ಲಿ 2,088.44 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆಯಾಗಲಿದೆ. ಇವುಗಳಿಂದ 6,360 ಜನರಿಗೆ ಉದ್ಯೋಗ ಅವಕಾಶಗಳು ದೊರೆಯಲಿವೆ. ಇದನ್ನೂ ಓದಿ: ಗಸ್ತು ವೇಳೆ ಹಫ್ತಾ ಪಡೆಯೋದು ಬಿಟ್ಟಿದ್ದರೆ ಕಂದಮ್ಮಗಳ ಮಾರಣಹೋಮ ತಪ್ಪುತಿತ್ತು: ಯತ್ನಾಳ್ ಕಿಡಿ

    15 ಕೋಟಿಯಿಂದ 50 ಕೋಟಿ ರೂ. ಮೊತ್ತದ ಒಳಗಿನ ಬಂಡವಾಳ ಹೂಡಿಕೆಯ 51 ಹೊಸ ಯೋಜನೆಗಳಿಗೆ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಇವುಗಳಿಂದ 941.40 ಕೋಟಿ ರೂ. ಬಂಡವಾಳ ಹೂಡಿಕೆಯಾಗಲಿದೆ. ಅಂದಾಜು 4,395 ಜನರಿಗೆ ಉದ್ಯೋಗಗಳು ಲಭ್ಯವಾಗಲಿವೆ. ಹೆಚ್ಚುವರಿ ಬಂಡವಾಳ ಹೂಡಿಕೆಯ 3 ಯೋಜನೆಗಳಿಗೆ ಸಭೆಯು ಅನುಮೋದಿಸಿದ್ದು ಇದರಿಂದ 577.35 ಕೋಟಿ ರೂ. ಬಂಡವಾಳ ಹೂಡಿಕೆ ಆಗಲಿದೆ.

    ಸಭೆಯಲ್ಲಿ ಸರ್ಕಾರದ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಡಾ. ಎಸ್.ಸೆಲ್ವಕುಮಾರ್, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಆಯುಕ್ತ ಗುಂಜನ್ ಕೃಷ್ಣ, ಅರಣ್ಯ ಮತ್ತು ಪರಿಸರ ಇಲಾಖೆಯ ಪ್ರಧಾನ ಕಾರ್ಯದರ್ಶಿ ರವಿ ಬಿ.ಪಿ., ಕೆಐಎಡಿಬಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಎಂ.ಮಹೇಶ್, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ತಾಂತ್ರಿಕ ನಿರ್ದೇಶಕ ಆರ್.ರಮೇಶ್, ಕರ್ನಾಟಕ ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ದೊಡ್ಡಬಸವರಾಜು ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಹಾಜರಿದ್ದರು. ಇದನ್ನೂ ಓದಿ: ಹಸುಗೂಸುಗಳ ಮಾರಾಟ ದಂಧೆ- ಕೊಂಡವರು, ಮಾರಾಟ ಮಾಡಿದವರ ಪತ್ತೆಗೆ ಸಿಸಿಬಿ ಶೋಧ

    ಅನುಮೋದನೆ ನೀಡಿರುವ ಪ್ರಮುಖ ಪ್ರಸ್ತಾವನೆಗಳು ಹೀಗಿವೆ
    ಸಂಸ್ಥೆ: ಟೆಕ್ಸ್ ಕಾನ್ ಸ್ಟೀಲ್ಸ್ ಲಿಮಿಟೆಡ್
    ಸ್ಥಳ: ರಾಯಚೂರು
    ಹೂಡಿಕೆ: 480 ಕೋಟಿ ರೂ.
    ಉದ್ಯೋಗ: 200

    ಸಂಸ್ಥೆ: ಹುಂಡ್ರಿ ಷುಗರ್ಸ್ ಅಂಡ್ ಎಥೆನಾಲ್ ಪೈವೇಟ್ ಲಿಮಿಟೆಡ್
    ಸ್ಥಳ: ಧಾರವಾಡ ಜಿಲ್ಲೆ
    ಹೂಡಿಕೆ: 476.54 ಕೋಟಿ ರೂ.
    ಉದ್ಯೋಗ: 300

    ಸಂಸ್ಥೆ: ಬ್ರೆನ್ ಲೈಫ್ ಸೈನ್ಸಸ್ ಪೈವೇಟ್ ಲಿಮಿಟೆಡ್
    ಸ್ಥಳ: ಬೆಂಗಳೂರು ನಗರ ಜಿಲ್ಲೆ
    ಹೂಡಿಕೆ: 230.56 ಕೋಟಿ ರೂ.
    ಉದ್ಯೋಗ: 1,750

    ಸಂಸ್ಥೆ: ಅಲ್ಟೈನ್ ಎಥೆನಾಲ್ ಪೈವೇಟ್ ಲಿಮಿಟೆಡ್
    ಸ್ಥಳ: ಗದಗ ಜಿಲ್ಲೆ
    ಹೂಡಿಕೆ: 229.19 ಕೋಟಿ
    ಉದ್ಯೋಗ: 107

    ಸಂಸ್ಥೆ: ವಿರೂಪಾಕ್ಷ ಲ್ಯಾಬೊರೇಟರೀಸ್ ಪೈವೇಟ್ ಲಿಮಿಟೆಡ್
    ಸ್ಥಳ: ಯಾದಗಿರಿ ಜಿಲ್ಲೆ
    ಹೂಡಿಕೆ: 212.55 ಕೋಟಿ ರೂ.
    ಉದ್ಯೋಗ: 790

    ಸಂಸ್ಥೆ: ಕ್ವಾಲ್ ಕಾಂ ಇಂಡಿಯಾ ಪೈವೇಟ್ ಲಿಮಿಟೆಡ್
    ಸ್ಥಳ: ಬೆಂಗಳೂರು
    ಹೂಡಿಕೆ: 175 ಕೋಟಿ ರೂ.
    ಉದ್ಯೋಗ: 1,553

    ಸಂಸ್ಥೆ: ಎಲ್.ಆರ್.ಬಿ ವುಡ್ ಇಂಡಸ್ಟ್ರಿ (ಇಂಡಿಯಾ)
    ಸ್ಥಳ: ಚಾಮರಾಜನಗರ ಜಿಲ್ಲೆ
    ಹೂಡಿಕೆ: 102.50 ಕೋಟಿ ರೂ.
    ಉದ್ಯೋಗ: 160

    ಸಂಸ್ಥೆ: ಮಾತಾ ಇಂಡಸ್ಟ್ರೀಸ್
    ಸ್ಥಳ: ಬೆಂಗಳೂರು ನಗರ ಜಿಲ್ಲೆ
    ಹೂಡಿಕೆ: 102.10 ಕೋಟಿ ರೂ.
    ಉದ್ಯೋಗ: 1,500

  • ಮಹಿಳಾ ಉದ್ಯಮಿಗಳಿಗೆ ಉತ್ತೇಜನ ನೀಡಲು ಸರ್ಕಾರ ಬದ್ಧ: ಎಂ.ಬಿ.ಪಾಟೀಲ್

    ಮಹಿಳಾ ಉದ್ಯಮಿಗಳಿಗೆ ಉತ್ತೇಜನ ನೀಡಲು ಸರ್ಕಾರ ಬದ್ಧ: ಎಂ.ಬಿ.ಪಾಟೀಲ್

    ಬೆಂಗಳೂರು: ರಾಜ್ಯ ಸರ್ಕಾರವು ಮಹಿಳಾ ಉದ್ಯಮಿಗಳಿಗೆ ಕರ್ನಾಟಕ ಪ್ರದೇಶ ಕೈಗಾರಿಕಾ ಅಭಿವೃದ್ಧಿ ಮಂಡಲಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ಮಂಡಲಿ ಸೇರಿದಂತೆ ಹಲವು ಸಾಂಸ್ಥಿಕ ವ್ಯವಸ್ಥೆಗಳ ಮೂಲಕ ಉತ್ತೇಜನ ನೀಡುತ್ತಿದೆ. ಉದ್ಯಮಶೀಲ ಮಹಿಳೆಯರು ಬೆಂಗಳೂರಿನ ಆಚೆಗೂ ಉದ್ಯಮಗಳನ್ನು ಸ್ಥಾಪಿಸಲು ಮನಸ್ಸು ಮಾಡಬೇಕು ಎಂದು ಸಚಿವ ಎಂ.ಬಿ.ಪಾಟೀಲ್ (M.B.Patil) ಕರೆ ನೀಡಿದ್ದಾರೆ.

    ಶನಿವಾರ ಇಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಮಹಿಳಾ ಉದ್ಯಮಿಗಳ ಸಮಾವೇಶದಲ್ಲಿ ಅವರು ಮಾತನಾಡಿದರು. ಮಹಿಳಾ ಉದ್ಯಮಿಗಳ ಮಹಾಒಕ್ಕೂಟವಾದ ʼಉಬುಂಟುʼ ಇದನ್ನು ಏರ್ಪಡಿಸಿತ್ತು. ಇದನ್ನೂ ಓದಿ: ಕುಮಾರಸ್ವಾಮಿ ತಮ್ಮ ಘನತೆಗೆ ತಕ್ಕಂತೆ ವರ್ತಿಸಲಿ: ಡಿಕೆ ಶಿವಕುಮಾರ್

    ರಾಜ್ಯದ ಕೈಗಾರಿಕಾ ನೀತಿಯಲ್ಲಿ ಕೆಐಎಡಿಬಿ ಮೂಲಕ ಉದ್ಯಮಿಗಳಿಗೆ ಹಂಚುತ್ತಿರುವ ನಿವೇಶನದಲ್ಲಿ ಮಹಿಳಾ ಉದ್ಯಮಿಗಳಿಗೆ ಶೇ.5 ರಷ್ಟು ಮೀಸಲಾತಿ ಇದೆ. ಜೊತೆಗೆ ಕೆಎಸ್ಸೆಸೈಡಿಸಿಯಲ್ಲೂ ಜಮೀನು ಹಂಚಿಕೆಯಲ್ಲಿ ಇದೇ ಸೂತ್ರವನ್ನು ಅಳವಡಿಸಿಕೊಳ್ಳಲಾಗಿದೆ. ಹೂಡಿಕೆ ಸಬ್ಸಿಡಿಯಾಗಿ ಶೇ.5ರಷ್ಟು ಹೆಚ್ಚುವರಿ ಪ್ರೋತ್ಸಾಹ ಮತ್ತು ವಿದ್ಯುತ್‌ ಬಿಲ್‌ ಮೇಲೆ ಗರಿಷ್ಠ ನಾಲ್ಕು ವರ್ಷಗಳ ವಿನಾಯಿತಿ ನೀಡಲಾಗುತ್ತಿದೆ ಎಂದು ಅವರು ಹೇಳಿದರು.

    ರಾಜ್ಯವು ಮಹಿಳೆಯರನ್ನು ಕೈಗಾರಿಕಾ ರಂಗದಲ್ಲಿ ಮೊದಲಿನಿಂದಲೂ ಪ್ರೋತ್ಸಾಹಿಸುತ್ತಿದೆ. ತಂತ್ರಜ್ಞಾನ ಪರಿಪೋಷಣಾ ಕೇಂದ್ರ, ತಂತ್ರಜ್ಞಾನ ಅಳವಡಿಕೆ ಇವುಗಳಲ್ಲೂ ಅರ್ಧದಷ್ಟು ಮೊತ್ತವನ್ನು ಸಬ್ಸಿಡಿಯಾಗಿ ನೀಡಲಾಗುತ್ತಿದೆ. ಇದಕ್ಕೆ ಪೂರಕವಾಗಿ ಮಳೆನೀರು ಸಂಗ್ರಹಣೆ, ತ್ಯಾಜ್ಯ ನೀರು ಮರುಬಳಕೆ, ತ್ಯಾಜ್ಯ ಸಂಸ್ಕರಣಾ ಘಟಕ ಸ್ಥಾಪನೆಗಳಿಗೂ ಪ್ರೋತ್ಸಾಹ ಕೊಡಲಾಗುತ್ತಿದೆ ಎಂದು ವಿವರಿಸಿದರು. ಇದನ್ನೂ ಓದಿ: ಯತ್ನಾಳ್ ವಿರುದ್ಧ ಒಳಸಂಚು ಮಾಡಿ ವಿಪಕ್ಷ ನಾಯಕ ಸ್ಥಾನ ತಪ್ಪಿಸಿದರು: ಜಯಮೃತ್ಯುಂಜಯ ಸ್ವಾಮೀಜಿ

    ಮಹಿಳೆಯರು ಕೈಗಾರಿಕೆಗಳನ್ನು ಸ್ಥಾಪಿಸಲು ಮುಂದೆ ಬಂದರೆ, ಕೆಎಸ್‌ಎಫ್‌ಸಿ ಮೂಲಕ ಗರಿಷ್ಠ 2 ಕೋಟಿ ರೂ. ವರೆಗೂ ಶೇ.14 ರಷ್ಟು ಬಡ್ಡಿ ದರದಲ್ಲಿ ಸುಲಭವಾಗಿ ಸಾಲ ಕೊಡಲಾಗುತ್ತಿದೆ. ಸಣ್ಣ ಮತ್ತು ಮಧ್ಯಮ ಸ್ವರೂಪದ ಕೈಗಾರಿಕೆಗಳನ್ನು ಸ್ಥಾಪಿಸುವ ಆಸಕ್ತಿ ಇರುವ ಮಹಿಳೆಯರು ಇದನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಈ ಸಾಲಕ್ಕೆ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು ಐದು ವರ್ಷಗಳವರೆಗೆ ಶೇ.10 ರಷ್ಟು ಬಡ್ಡಿಯನ್ನು ತಾನೇ ಪಾವತಿಸುತ್ತದೆ ಎಂದು ಸಚಿವರು ನುಡಿದರು.

    ಉದ್ಯೋಗಸ್ಥ ಮಹಿಳೆಯರಿಗೆ ವಸತಿ ಸೌಲಭ್ಯ ಕಲ್ಪಿಸಲು ಸರ್ಕಾರವು ಒತ್ತು ಕೊಟ್ಟಿದೆ. ಜೊತೆಗೆ ಕೌಶಲ್ಯಾಭಿವೃದ್ಧಿಗೂ ಗಮನ ಹರಿಸಲಾಗಿದೆ. ಮಹಿಳೆಯರು ಆರ್ಥಿಕ ಪ್ರಗತಿ ಸಾಧಿಸುವ ಮೂಲಕ ಹಲವು ಸಾಮಾಜಿಕ ಆಶಯಗಳನ್ನೂ ನನಸು ಮಾಡಿಕೊಳ್ಳುವುದು ಸಾಧ್ಯವಿದೆ ಎಂದು ಪ್ರತಿಪಾದಿಸಿದರು. ಕಾರ್ಯಕ್ರಮದಲ್ಲಿ ಕೆ.ರತ್ನಪ್ರಭಾ, ಉದ್ಯಮಿಗಳಾದ ಉಮಾ ರೆಡ್ಡಿ, ರಾಜಲಕ್ಷ್ಮಿ, ಲತಾ ಗಿರೀಶ್‌ ಮುಂತಾದವರು ಉಪಸ್ಥಿತರಿದ್ದರು. ಇದನ್ನೂ ಓದಿ: ಈ ಮೂರು ದಿನ ಕರೆಂಟ್ ಬಿಲ್ ಕಟ್ಟೋಕೆ ಆಗಲ್ಲ – ನವೆಂಬರ್ ಅಂತ್ಯಕ್ಕೆ ವಿದ್ಯುತ್ ದರ ಏರಿಕೆ ಸಾಧ್ಯತೆ?

  • ಬೆಂಗಳೂರಿನಲ್ಲಿ `ವಾಟರ್ಸ್’ ಕಂಪನಿ ಕೇಪಬಿಲಿಟಿ ಸೆಂಟರ್ ಸ್ಥಾಪನೆ: ಎಂ.ಬಿ. ಪಾಟೀಲ್

    ಬೆಂಗಳೂರಿನಲ್ಲಿ `ವಾಟರ್ಸ್’ ಕಂಪನಿ ಕೇಪಬಿಲಿಟಿ ಸೆಂಟರ್ ಸ್ಥಾಪನೆ: ಎಂ.ಬಿ. ಪಾಟೀಲ್

    ಬೆಂಗಳೂರು: ಆರೋಗ್ಯ ಮತ್ತು ಔಷಧಿ ತಯಾರಿಕೆ ಕ್ಷೇತ್ರದ ದೈತ್ಯ ಕಂಪನಿ ‘ವಾಟರ್ಸ್’ ಬೆಂಗಳೂರಿನ ಆರ್.ಎಂ.ಜೆಡ್ ಇಕೋವರ್ಲ್ಡ್ ಸಂಕೀರ್ಣದಲ್ಲಿ 16 ಮಿಲಿಯನ್ ಡಾಲರ್ ವೆಚ್ಚದಲ್ಲಿ ಕೇಪಬಿಲಿಟಿ ಸೆಂಟರ್ ಸ್ಥಾಪಿಸಲು ಒಪ್ಪಿಕೊಂಡಿದೆ. ಗುರುವಾರದಂದು ಆ ಕಂಪನಿಯ ಉನ್ನತಾಧಿಕಾರಿಗಳೊಂದಿಗೆ ಸಹಭಾಗಿತ್ವ ಉಪಕ್ರಮ ಕುರಿತು ನಡೆಸಿದ ಚರ್ಚೆಯ ಫಲವಿದು ಎಂದು ಸಚಿವ ಎಂ.ಬಿ. ಪಾಟೀಲ್ (M.B.Patil) ತಿಳಿಸಿದ್ದಾರೆ.

    ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ರಾಜ್ಯದ ಆರ್ಥಿಕತೆಯ ಅಭಿವೃದ್ಧಿಗೆ ನಿರೀಕ್ಷಿತ ವೇಗವನ್ನು ಕೊಡಬೇಕಾದ ಸ್ಪರ್ಧಾತ್ಮಕ ಯುಗದಲ್ಲಿ ನಾವಿದ್ದೇವೆ. ಇದನ್ನು ಗಮನದಲ್ಲಿಟ್ಟುಕೊಂಡು, ಉತ್ಕೃಷ್ಟ ಗುಣಮಟ್ಟದ ಔಷಧಿಗಳು ನಮ್ಮಲ್ಲೇ ತಯಾರಾಗುವಂತಹ ವಾತಾವರಣ ನಿರ್ಮಿಸಬೇಕಾಗಿದೆ. ಕರ್ನಾಟಕದಲ್ಲಿ ಸಕ್ರಿಯವಾಗಿರುವ ಔಷಧಿ ತಯಾರಿಕೆ ಕಂಪನಿಗಳೊಂದಿಗೆ ವಾಟರ್ಸ್ ಕಂಪನಿಯ ಸಹಭಾಗಿತ್ವ ಸ್ಥಾಪನೆ ಅತ್ಯಗತ್ಯವಾಗಿದ್ದು, ಔಷಧೋತ್ಪನ್ನಗಳನ್ನು ರಫ್ತು ಮಾಡುವ ಮಟ್ಟಕ್ಕೆ ಬೆಳೆಯಬೇಕಿದೆ. ಈ ನಿಟ್ಟಿನಲ್ಲಿ ಕಂಪನಿಯು ಸರ್ಕಾರ ಮತ್ತು ಕಾಲೇಜುಗಳೊಂದಿಗೆ ಸಹಭಾಗಿತ್ವ ಹೊಂದುವ ಮೂಲಕ ಪರಿಣತ ಸಿಬ್ಬಂದಿಯನ್ನು ಸಜ್ಜುಗೊಳಿಸುವ ಬಗ್ಗೆ ಚರ್ಚಿಸಲಾಗಿದೆ ಎಂದಿದ್ದಾರೆ. ಇದನ್ನೂ ಓದಿ: CWRC, CWMA, ಸುಪ್ರೀಂ ಕೋರ್ಟ್‌ ಮುಂದೆ ವಾಸ್ತವಾಂಶ ಇಟ್ಟರೂ ನ್ಯಾಯ ಸಿಗ್ತಿಲ್ಲ: ಸಿಎಂ

    16 ಬಿಲಿಯನ್ ಡಾಲರ್ ವಹಿವಾಟು ನಡೆಸುತ್ತ, 8 ಸಾವಿರ ಉದ್ಯೋಗಿಗಳನ್ನು ಹೊಂದಿರುವ ವಾಟರ್ಸ್ ಕಂಪನಿಯು ಕ್ರೊಮ್ಯಾಟೋಗ್ರಫಿ, ಮಾಸ್ ಸ್ಪೆಕ್ಟ್ರೋಮೆಟ್ರಿ, ಥರ್ಮಲ್ ಅನಾಲಿಸಿಸ್ ಅನ್ವೇಷಣೆಗಳ ಮೂಲಕ ಮನುಷ್ಯರ ಆರೋಗ್ಯ ವೃದ್ಧಿ ಮತ್ತು ಕ್ಷೇಮಪಾಲನೆ ಕ್ಷೇತ್ರಗಳಲ್ಲಿ ಗಮನಾರ್ಹ ಕೆಲಸಗಳನ್ನು ಮಾಡುತ್ತಿದೆ. ರಾಜ್ಯದಲ್ಲಿ ಈಗ ಬಯೋಸಿಮಿಲರ್‌ಗಳ ಪರೀಕ್ಷಾರ್ಥ ಬಳಕೆ ಮೇಲೆ ಬಿಗಿಯಾದ ನಿಯಮಗಳಿವೆ. ಇವುಗಳನ್ನು ಸಡಿಲಿಸಬೇಕಾದ ಅಗತ್ಯದ ಬಗ್ಗೆ ಕಂಪನಿಯ ಪ್ರತಿನಿಧಿಗಳು ಚರ್ಚಿಸಿದರು ಎಂದು ವಿವರಿಸಿದ್ದಾರೆ.

    ಸಚಿವರ ನೇತೃತ್ವದ ನಿಯೋಗವು ಇದೇ ಸಂದರ್ಭದಲ್ಲಿ ವಾಟರ್ಸ್ ಕಂಪನಿಯ ಉತ್ಪಾದನಾ ಘಟಕಕ್ಕೂ ಭೇಟಿ ನೀಡಿದ್ದು, ಅಲ್ಲಿನ ವ್ಯವಸ್ಥೆಯನ್ನು ವೀಕ್ಷಿಸಿದೆ. ಮಾತುಕತೆಯಲ್ಲಿ ಕಂಪನಿಯ ಸಿಇಒ ಮತ್ತು ಅಧ್ಯಕ್ಷ ಉದಿತ್ ಬಾತ್ರಾ, ಸಿಎಫ್ಒ ಅನ್ಮೋಲ್ ಚೌಬಾಲ್, ಸಿಐಒ ಬ್ರೂಕ್ ಕೊಲ್ಯಾಂಜೆಲೋ ಮತ್ತು ಉಪಾಧ್ಯಕ್ಷ ಕ್ರಿಸ್ಟಿನ್ ಗಾರ್ವಿ ಉಪಸ್ಥಿತರಿದ್ದರು. ರಾಜ್ಯ ಸರ್ಕಾರದ ನಿಯೋಗದಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್. ಸೆಲ್ವಕುಮಾರ್ ಮತ್ತು ಆಯುಕ್ತೆ ಗುಂಜನ್ ಕೃಷ್ಣ ಇದ್ದರು.

    ಟೆರಾಡೈನ್ ಜತೆಗೂ ಮಾತುಕತೆ
    ಸೆಮಿಕಂಡಕ್ಟರ್ ಕ್ಷೇತ್ರದಲ್ಲಿ ಹೆಸರು ಮಾಡಿರುವ ಟೆರಾಡೈನ್ ಕಂಪನಿಯೊಂದಿಗೂ ರಾಜ್ಯದಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿ ಹಾಗೂ ತಯಾರಿಕೆ ಸಂಬಂಧವರ್ಧನೆ ಕುರಿತು ವಿಚಾರ ವಿನಿಮಯ ನಡೆಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ. ವರ್ಷಕ್ಕೆ 15 ಬಿಲಿಯನ್ ಡಾಲರ್ ವಹಿವಾಟು ನಡೆಸುವ ಟೆರಾಡೈನ್ ಕಂಪನಿಯು ರೋಬೋಟಿಕ್ಸ್ ತಂತ್ರಜ್ಞಾನದ ಮೂಲಕ ಆಟೋಮೇಷನ್ ತಯಾರಿಕೆಯಲ್ಲಿ ಮುಂಚೂಣಿಯಲ್ಲಿದೆ. ಇದರ ಜತೆಗೆ ರಕ್ಷಣಾ ಮತ್ತು ವೈಮಾಂತರಿಕ್ಷ ಸಾಧನಗಳು, ಮೆಮೋರಿ ಟೆಸ್ಟಿಂಗ್ ವಲಯಗಳಲ್ಲೂ ಕಂಪನಿಯು ದೊಡ್ಡ ಮಟ್ಟದಲ್ಲಿ ಸಾಧನೆ ಮಾಡಿದೆ. ಹೀಗಾಗಿ ರಾಜ್ಯದಲ್ಲಿ ಸೆಮಿಕಂಡಕ್ಟರ್ ವಲಯದ ಉತ್ತೇಜನೆಗೆ ಸರ್ಕಾರವು ರೂಪಿಸಿರುವ ಉಪಕ್ರಮ ಮತ್ತು ನೀತಿಗಳನ್ನು ವಿವರಿಸಿ, ಹೂಡಿಕೆ ಮಾಡಲು ಆಹ್ವಾನಿಸಲಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಅಂಧರ ವಿಶ್ವಕಪ್ – ಭಾರತ ತಂಡದಲ್ಲಿರುವ ಕರ್ನಾಟಕದ ಆಟಗಾರರನ್ನು ಅಭಿನಂದಿಸಿದ ಸಿಎಂ, ರಾಜ್ಯಪಾಲರು

    ಸಚಿವರ ನೇತೃತ್ವದ ನಿಯೋಗವು, ಟೆರಾಡೈನ್ ಉತ್ಪಾದನಾ ಘಟಕಕ್ಕೂ ಭೇಟಿ ನೀಡಿತು. ಅಲ್ಲಿನ ವ್ಯವಸ್ಥೆ ನೋಡಿ ಮೆಚ್ಚುಗೆ ವ್ಯಕ್ತಪಡಿಸಿತು. ಮಾತುಕತೆಯಲ್ಲಿ ಕಂಪನಿಯ ಪರವಾಗಿ ಅದರ ಉನ್ನತಾಧಿಕಾರಿಗಳಾದ ಪರೇಶ್ ಬರ್ಖಾಡ ಮತ್ತು ಸ್ಯಾಮ್ ರೋಸೆನ್ ಪಾಲ್ಗೊಂಡಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರಾಜ್ಯದ ವಿಮಾನ ನಿಲ್ದಾಣಗಳ ಬಳಿ ಲಾಜಿಸ್ಟಿಕ್ ಕೇಂದ್ರ, ಪೈಲಟ್ ತರಬೇತಿ ಸಂಸ್ಥೆ ಸ್ಥಾಪನೆ – ಬೋಯಿಂಗ್ ಕಂಪನಿಗೆ ಎಂ.ಬಿ.ಪಾಟೀಲ್ ಆಹ್ವಾನ

    ರಾಜ್ಯದ ವಿಮಾನ ನಿಲ್ದಾಣಗಳ ಬಳಿ ಲಾಜಿಸ್ಟಿಕ್ ಕೇಂದ್ರ, ಪೈಲಟ್ ತರಬೇತಿ ಸಂಸ್ಥೆ ಸ್ಥಾಪನೆ – ಬೋಯಿಂಗ್ ಕಂಪನಿಗೆ ಎಂ.ಬಿ.ಪಾಟೀಲ್ ಆಹ್ವಾನ

    – “ಚೀನಾ+ಒನ್” ನೀತಿಯ ಲಾಭ ಪಡೆಯಲು ಐಎಂಎಫ್ ಜೊತೆ ಸಮಾಲೋಚನೆ

    ವಾಷಿಂಗ್ಟನ್ ಡಿಸಿ/ಬೆಂಗಳೂರು: ಅಮೆರಿಕ ಪ್ರವಾಸದಲ್ಲಿರುವ ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ (M.B.Patil) ನೇತೃತ್ವದ ನಿಯೋಗವು ಮಂಗಳವಾರ ಐಎಂಎಫ್ (ಅಂತಾರಾಷ್ಟ್ರೀಯ ಹಣಕಾಸು ನಿಧಿ) ಜೊತೆ ಮಹತ್ವದ ಮಾತುಕತೆ ನಡೆಸಿತು. ಜಾಗತಿಕ ಕಂಪನಿಗಳು ಅನುಸರಿಸುತ್ತಿರುವ “ಚೀನಾ+ಒನ್” ಕಾರ್ಯಾಚರಣೆ ತಂತ್ರದ ಸದುಪಯೋಗ ಪಡೆಯಲು ಕರ್ನಾಟಕಕ್ಕೆ ಇರುವ ಅನುಕೂಲತೆಗಳ ಬಗ್ಗೆ ಈ ಸಂದರ್ಭದಲ್ಲಿ ಚರ್ಚಿಸಲಾಯಿತು.

    ಐಎಂಎಫ್ (IMF) ಉಪ ವ್ಯವಸ್ಥಾಪಕ ನಿರ್ದೇಶಕಿ ಗೀತಾ ಗೋಪಿನಾಥ್ ಮತ್ತಿತರರು ಪಾಲ್ಗೊಂಡಿದ್ದ ಉನ್ನತ ಮಟ್ಟದ ಸಭೆಯಲ್ಲಿ ಭಾರತದ ಬೆಳವಣಿಗೆ ಸಾಧ್ಯತೆಗಳ ಬಗ್ಗೆ ವಿಶ್ಲೇಷಣೆಯನ್ನೂ ನಡೆಸಲಾಯಿತು. ಇದನ್ನೂ ಓದಿ: ಮುಂದಿನ ವರ್ಷದಿಂದಲೇ ರಾಜ್ಯ ಶಿಕ್ಷಣ ನೀತಿ ಜಾರಿ: ಸಚಿವ ಎಂ.ಸಿ ಸುಧಾಕರ್

    ಪ್ರಮುಖ ಎಂಎನ್‌ಸಿ ಕಂಪನಿಗಳು ಚೀನಾದಲ್ಲಿ ತಾವು ಹೊಂದಿರುವ ತಯಾರಿಕಾ ಘಟಕದ ಜೊತೆಗೆ ಬೇರೆ ದೇಶದಲ್ಲಿ ಮತ್ತೊಂದು ಘಟಕ ಸ್ಥಾಪಿಸುವ ಯೋಜನೆಗಳನ್ನು ಹಾಕಿಕೊಳ್ಳುತ್ತಿವೆ (ಚೀನಾ+ಒನ್ ನೀತಿ). ಈ ಸಂಬಂಧ ಭಾರತವು ಜಾಗತಿಕ ಕಂಪನಿಗಳ ಗಮನ ಸೆಳೆದಿದ್ದು, ಕರ್ನಾಟಕವು ಆಯಕಟ್ಟಿನ ಸ್ಥಳವಾಗಿದೆ ಎಂಬ ಬಗ್ಗೆ ಎಂ.ಬಿ. ಪಾಟೀಲ್ ಅವರು ಸಭೆಯ ಗಮನ ಸೆಳೆದರು.

    ಇದೇ ವೇಳೆ, ಬೆಂಗಳೂರಿಗೆ ಹೆಚ್ಚಿನ ಹೂಡಿಕೆಯನ್ನು ಸೆಳೆಯುವ ನಿಟ್ಟಿನಲ್ಲಿ ನಗರದ ದಟ್ಟಣೆಯನ್ನು ತಗ್ಗಿಸುವ ಬಗ್ಗೆಯೂ ಸಭೆಯಲ್ಲಿ ಪ್ರಸ್ತಾಪಿಸಲಾಯಿತು. ಸಚಿವ ಪಾಟೀಲ್ ಅವರು ಕೌಶಲ್ಯಯುಕ್ತ ಕಾರ್ಮಿಕರ ಸಂಖ್ಯೆಯಲ್ಲಿ ಕೊರತೆ ಉಂಟಾಗದಂತಹ ನೀತಿಯನ್ನು ರೂಪಿಸುವ ಅಗತ್ಯವಿದೆ ಎಂದು ಒತ್ತಿ ಹೇಳಿದರು.

    ಮುಂಚೂಣಿ ವಿಮಾನ ತಯಾರಿಕಾ ಕಂಪನಿ ಬೋಯಿಂಗ್ ಜೊತೆ ನಡೆದ ಸಭೆಯಲ್ಲಿ ರಾಜ್ಯದ ವಿಮಾನ ನಿಲ್ದಾಣಗಳ ಬಳಿ ಲಾಜಿಸ್ಟಿಕ್ ಕೇಂದ್ರಗಳ ಸ್ಥಾಪನೆ, ಪೈಲಟ್ ಹಾಗೂ ವಿಮಾನ ಸಿಬ್ಬಂದಿ ತರಬೇತಿ ಕ್ಷೇತ್ರದಲ್ಲಿ ಇರುವ ಹೂಡಿಕೆ ಅವಕಾಶಗಳ ಬಗ್ಗೆ ಗಮನ ಸೆಳೆಯಲಾಯಿತು.‌ ಯುಎಸ್ಐಎಸ್‌ಪಿಎಫ್ (ಯುಎಸ್- ಇಂಡಿಯಾ ಸ್ಟ್ರಾಟೆಜಿಕ್ ಪಾರ್ಟ್ನರ್ಶಿಪ್ ಫೋರಂ) ಜೊತೆ ನಡೆದ ಸಭೆಯಲ್ಲಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹತ್ತಿರ ನಿರ್ಮಾಣವಾಗಲಿರುವ ಆರೋಗ್ಯ ತಂತ್ರಜ್ಞಾನ ಪಾರ್ಕ್‌ನಲ್ಲಿ ಹೂಡಿಕೆಗೆ ಇರುವ ಅವಕಾಶಗಳ ಬಗ್ಗೆ ಅವಲೋಕಿಸಲಾಯಿತು. ಇದನ್ನೂ ಓದಿ: ನಮ್ಮ ರಾಜ್ಯವನ್ನು ತಮಿಳುನಾಡಿಗೆ ಅಡ ಇಟ್ಟಿದ್ದಾರೆ; ಸರ್ಕಾರದ ವಿರುದ್ಧ ಹೆಚ್.ಡಿ ರೇವಣ್ಣ ಕಿಡಿ

    ಕರ್ನಾಟಕದಲ್ಲಿ ವೈದ್ಯಕೀಯ ಪ್ರವಾಸೋದ್ಯಮವನ್ನು ಉತ್ತೇಜಿಸಲು ಪೂರಕವಾದ ನೀತಿಗಳನ್ನು ಅನುಸರಿಸುವ ಅಗತ್ಯವಿದೆ ಎಂಬ ಸಲಹೆ ಸಭೆಯಲ್ಲಿದ್ದವರಿಂದ ವ್ಯಕ್ತವಾಯಿತು. ಯುಎಸ್ಐಎಸ್‌ಪಿಎಫ್ ಪ್ರತಿನಿಧಿಗಳನ್ನು ಉದ್ದೇಶಿಸಿ ಎಂ.ಬಿ. ಪಾಟೀಲ್ ಮಾತನಾಡಿ, ಇ-ಆಡಳಿತ ಮತ್ತು ಸ್ಥಳೀಯ ಸಂಸ್ಥೆಗಳ ಮುಂದಿರುವ ಕೆಲವು ಸವಾಲುಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಬ್ಲಾಕ್ ಚೈನ್ ತಂತ್ರಜ್ಞಾನದ ನೆರವು ಪಡೆಯಲು ಸಮರ್ಥ ಪಾಲುದಾರಿಕೆಗಾಗಿ ಶೋಧನೆ ನಡೆಸಲಾಗುವುದು ಎಂದರು.

    ಇಂಡಸ್ಟ್ರಿ 4.0 ಸಂಬಂಧಿಸಿದ ಕೌಶಲಗಳ ಕಲಿಕೆಗೆ ಪೂರಕವಾಗಿ ತರಬೇತಿ ಪಠ್ಯಕ್ರಮಗಳನ್ನು ಸಿದ್ಧಪಡಿಸುವ ಬಗ್ಗೆಯೂ ವಿಚಾರ ವಿನಿಮಯ ನಡೆಯಿತು. ಜಿಇ ವೆರ್ನೋವ ಜೊತೆಗಿನ ಸಭೆಯಲ್ಲಿ ಕರ್ನಾಟಕದಲ್ಲಿ ಕಾಂಪೋನೆಂಟ್‌ಗಳ ತಯಾರಿಕೆಗೆ ಇರುವ ಅವಕಾಶಗಳ ಬಗ್ಗೆ ಗಮನಹರಿಸಲಾಯಿತು. ಜೊತೆಗೆ ಸೌರಶಕ್ತಿ, ಪವನ ಶಕ್ತಿ ಮತ್ತಿತರ ಪರ್ಯಾಯ ಇಂಧನಗಳ ಸಂಗ್ರಹ ವ್ಯವಸ್ಥೆ ಸ್ಥಾಪನೆ ಸಂಬಂಧ ಇರುವ ಹೂಡಿಕೆ ಅವಕಾಶಗಳ ಬಗ್ಗೆ ಸಮಾಲೋಚನೆ ನಡೆಸಲಾಯಿತು.

    ಜಿಇ ಹೆಲ್ತ್ ಕೇರ್‌ನೊಂದಿಗಿನ ಸಭೆಯಲ್ಲಿ ಮುಂಬರುವ ದಶಕದಲ್ಲಿ ಜೀವ ವಿಜ್ಞಾನಗಳ ಕ್ಷೇತ್ರದಲ್ಲಿ ಎಐ/ಎಂಎಲ್ ನಿರ್ಣಾಯಕ ಪಾತ್ರ ವಹಿಸಲಿರುವ ನಿರೀಕ್ಷೆಯಿರುವುದರಿಂದ ಅದಕ್ಕೆ ತಕ್ಕಂತೆ ಉದ್ಯೋಗಿಗಳ ಕೌಶಲವನ್ನು ಮೇಲ್ದರ್ಜೆಗೇರಿಸಲು ಸಹಭಾಗಿತ್ವಗಳನ್ನು ಸಾಧಿಸುವ ಬಗ್ಗೆ ಚರ್ಚಿಸಲಾಯಿತು. ಬೋಯಿಂಗ್ ಉಪಾಧ್ಯಕ್ಷರಾದ ಗ್ರೆಟಾ ಲಂಡ್ ಬರ್ಗ್, ನಿರ್ದೇಶಕರಾದ ನಿಕೋಲ ಪೊರ್ರೆಕಾ, ಯುಎಸ್ಐಪಿಎಫ್ ಸಿಇಒ ಮುಕೇಶ್ ಅಘಿ, ಉಪಾಧ್ಯಕ್ಷರಾದ ಸೂಸನ್ ರಿಚಿ, ಜಿಇ ವೆರ್ನೋವಾ ವ್ಯವಸ್ಥಾಪಕ ನಿರ್ದೇಶಕ ಜಾರ್ಜ್ ಪಿಕ್ಯಾರ್ಟ್ ಮತ್ತಿತರರು ಸಭೆಯಲ್ಲಿ ಪಾಲ್ಕೊಂಡಿದ್ದರು. ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್. ಸೆಲ್ವಕುಮಾರ್ ಮತ್ತು ಆಯುಕ್ತೆ ಗುಂಜನ್ ಕೃಷ್ಣ ಸಭೆಯಲ್ಲಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]