ಬೆಂಗಳೂರು: ಮೂರು ಡಿಸಿಎಂ ಹುದ್ದೆ ಸೃಷ್ಟಿ ಮಾಡುವ ವಿಚಾರ ಹೈಕಮಾಂಡ್‍ಗೆ ಬಿಟ್ಟಿದ್ದು, ಒಂದು ವೇಳೆ ಹೈಕಮಾಂಡ್ ನನ್ನನ್ನ ಡಿಸಿಎಂ ಆಗು ಎಂದರೆ ಆಗುತ್ತೇನೆ ಎಂದು ಸಚಿವ ಎಂ.ಬಿ ಪಾಟೀಲ್ (M.B Patil) ಡಿಸಿಎಂ (DCM) ಪಟ್ಟದ ಆಸೆ ವ್ಯಕ್ತಪಡಿಸಿದ್ದಾರೆ.
ಸಚಿವ ರಾಜಣ್ಣ ಅವರ 3 ಡಿಸಿಎಂ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಇದು ರಾಜ್ಯ ಮಟ್ಟದಲ್ಲಿ ಆಗುವುದಿಲ್ಲ. ಹೈಕಮಾಂಡ್ ಮಟ್ಟದಲ್ಲಿ ಆಗಬೇಕು. ಹೈಕಮಾಂಡ್ ಮನಸ್ಸು ಮಾಡಿದರೆ ಮೂರು ಇಲ್ಲವೇ ನಾಲ್ಕು ಡಿಸಿಎಂ ಮಾಡಬಹುದು. ಇಲ್ಲವೇ ಮಾಡದೇಯೂ ಇರಬಹುದು. ಅಂತಿಮವಾಗಿ ಹೈಕಮಾಂಡ್ ಈ ಬಗ್ಗೆ ನಿರ್ಧಾರ ಮಾಡಲಿದೆ ಎಂದಿದ್ದಾರೆ. ಇದನ್ನೂ ಓದಿ: ಕಾವೇರಿ ವಿಚಾರವಾಗಿ ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಬೇಕು: M.B ಪಾಟೀಲ್
3 ಡಿಸಿಎಂ ಬೇಕಾ? ಬೇಡವಾ? ಎಂದು ನಾನು ಪಕ್ಷದ ಸಭೆಯಲ್ಲಿ ಹೇಳುತ್ತೇನೆ. ರಾಜಣ್ಣ ಅವರ ಹೇಳಿಕೆಯ ಸಾಧಕ-ಬಾಧಕ ನೋಡಿಕೊಂಡು ಹೈಕಮಾಂಡ್ ತೀರ್ಮಾನ ಮಾಡಲಿದೆ. ಈ ಚುನಾವಣೆಯಲ್ಲಿ ಎಲ್ಲಾ ಸಮುದಾಯ ಕಾಂಗ್ರೆಸ್ ಜೊತೆ ನಿಂತಿದೆ. ಹೀಗಾಗಿ 135 ಸ್ಥಾನ ಬಂದಿದೆ. ರಾಜಣ್ಣ ಅವರು ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಹೇಳಿದ್ದಾರೆ. ಅಂತಿಮವಾಗಿ ಹೈಕಮಾಂಡ್ ಇದರ ಬಗ್ಗೆ ತೀರ್ಮಾನ ಮಾಡುತ್ತದೆ. 135 ಸೀಟು ಜನ ಬಹುಮತ ಕೊಟ್ಟಿದ್ದಾರೆ. ರಾಜ್ಯ ಚುನಾವಣೆ ವಿಷಯ ಬೇರೆ, ಲೋಕಸಭೆ ವಿಷಯ ಬೇರೆ. ಕೇಂದ್ರ, ವಿಧಾನಸಭೆಯಲ್ಲಿ ಬೇರೆ ಬೇರೆ ವಿಷಯದ ಆಧಾರದಲ್ಲಿ ನಡೆಯುತ್ತದೆ. ಈ ವಿಷಯದಲ್ಲಿ ಹಿನ್ನಡೆ ಆಗುವ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್ ಪಕ್ಷ ಲೋಕಸಭೆ ಚುನಾವಣೆಯಲ್ಲಿ 15-20 ಕ್ಷೇತ್ರ ಗೆಲ್ಲಲಿದೆ. ಎಷ್ಟೋ ಕಡೆ ಬಿಜೆಪಿಗೆ ಅಭ್ಯರ್ಥಿಗಳೇ ಇಲ್ಲ ಎಂದು ವ್ಯಂಗ್ಯವಾಡಿದ್ದಾರೆ.
ಡಿಸಿಎಂ ಹುದ್ದೆ ವಿಚಾರವಾಗಿ, ಎಲ್ಲರಿಗೂ ಆಸೆ ಇದ್ದೇ ಇರುತ್ತದೆ. ಆದರೆ ದುರಾಸೆ ಇರಬಾರದು. ಹೈಕಮಾಂಡ್ ಡಿಸಿಎಂ ಆಗಿ ಎಂದರೆ ಆಗುತ್ತೇನೆ. ಆದರೆ ಕೂಸು ಹುಟ್ಟೋಕು ಮುನ್ನ ಕುಲಾವಿ ಹೊಲಿಸೋದು ಬೇಡ. ರಾಜಣ್ಣ ಹೇಳಿದ್ದು ತಪ್ಪಲ್ಲ, ನಮ್ಮಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಇದೆ. ಅಭಿಪ್ರಾಯ ಹೇಳೋಕೆ ಅವಕಾಶ ಇದೆ. ರಾಜಣ್ಣ ಹೇಳಿಕೆ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಅನೇಕ ಸಮುದಾಯಕ್ಕೆ ರಾಜಕೀಯ ಸ್ಥಾನ ನೀಡಲು ಇನ್ನೂ ಆಗಿಲ್ಲ. ಸವದಿ, ರಾಯರೆಡ್ಡಿ, ದೇಶಪಾಂಡೆ, ಜಯಚಂದ್ರ ಎಲ್ಲರೂ ಮಂತ್ರಿ ಆಗೋಕೆ ಸಮರ್ಥರು. ನಂಬರ್ ಸೀಮಿತ ಆಗಿರುವುದರಿಂದ ಮಂತ್ರಿಗೆ ಸೀಮಿತ ಮಾಡಲಾಗಿದೆ ಎಂದಿದ್ದಾರೆ. ಇದನ್ನೂ ಓದಿ: ಎರಡು ಸಲ ನೀರು ಬಿಟ್ಟು ಈಗ ಸುಪ್ರೀಂಕೋರ್ಟ್‌ಗೆ ಹೋಗಿದ್ದಾರೆ: ಬೊಮ್ಮಾಯಿ ಆಕ್ರೋಶ
ಬೆಂಗಳೂರು: ನಗರದ ಹೊರವಲಯದಲ್ಲಿ ಸುಮಾರು 2,000 ಎಕರೆ ಪ್ರದೇಶದಲ್ಲಿ ‘ನಾಲೆಡ್ಜ್ -ಹೆಲ್ತ್- ಇನ್ನೋವೇಶನ್ ಆ್ಯಂಡ್ ರೀಸರ್ಚ್’ ಸಿಟಿ ಸ್ಥಾಪಿಸುವ ಉದ್ದೇಶವಿದ್ದು, ಯೋಜನೆಗೆ ಶೀಘ್ರದಲ್ಲೇ ಚಾಲನೆ ನೀಡಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ (M.B.Patil) ಹೇಳಿದರು.
ಬೆಂಗಳೂರು ಹೊರವಲಯದಲ್ಲಿ ಸುಮಾರು 2,000 ಎಕರೆ ಪ್ರದೇಶದಲ್ಲಿ ‘ನಾಲೆಡ್ಜ್ -ಹೆಲ್ತ್-ಇನ್ನೋವೇಶನ್ ಆ್ಯಂಡ್ ರೀಸರ್ಚ್’ ಸಿಟಿ ಸ್ಥಾಪಿಸಲು ಯೋಜಿಸಲಾಗಿದೆ. ಮೊದಲ ಹಂತದಲ್ಲಿ 1,000 ಎಕರೆ ಪ್ರದೇಶವನ್ನು ಅಭಿವೃದ್ಧಿ ಪಡಿಸಲಾಗುವುದು. ಈ ಸಿಟಿಯಲ್ಲಿ ವಿಶ್ವದರ್ಜೆಯ ವಿಶ್ವವಿದ್ಯಾಲಯ, ಆಸ್ಪತ್ರೆ, ಆವಿಷ್ಕಾರ-ಸಂಶೋಧನಾ ಕೇಂದ್ರಗಳಿರಲಿವೆ. ಈ ಯೋಜನೆ ಜಾಗತಿಕ ವಲಯದಲ್ಲಿ ಬೆಂಗಳೂರಿನ ಹೆಸರನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯುವುದರಲ್ಲಿ ಸಂದೇಹವಿಲ್ಲ ಎಂದು ತಿಳಿಸಿದರು.
ಕೈಗಾರಿಕಾ ಪ್ರದೇಶಗಳ ಮೂಲಸೌಕರ್ಯಗಳ ಸುಧಾರಣೆಗಾಗಿ ನಾವು ಮತ್ತೊಂದು ದಿಟ್ಟ ಹೆಜ್ಜೆ ಇಡುತ್ತಿದ್ದೇವೆ. ಸ್ಥಳೀಯ ಕೈಗಾರಿಕಾ ಅಸೋಸಿಯೇಷನ್‌ಗಳಿಗೆ ಪ್ರದೇಶದ ನಿರ್ವಹಣೆಯ ಜವಾಬ್ದಾರಿ ವಹಿಸಲಾಗುವುದು. ಇದರಿಂದ ಮೂಲಸೌಕರ್ಯದ ಬಹುತೇಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗಲಿದೆ ಎಂಬ ವಿಶ್ವಾಸವಿದೆ ಎಂದರು.
ಸರ್ಕಾರ ಮತ್ತು ಉದ್ಯಮಗಳ ನಡುವಿನ ಅಂತರವನ್ನು ನೀಗಿಸುವ ನಿಟ್ಟಿನಲ್ಲಿ ಕೈಗಾರಿಕಾ ಪ್ರತಿನಿಧಿಗಳೊಂದಿಗೆ ಸಂವಾದ ಪ್ರಾರಂಭಿಸಿದ್ದೇನೆ. ಸ್ಟಾರ್ಟ್‌ಆ್ಯಪ್‌ಗಳಿಂದ ಆರಂಭಿಸಿ ಸಂಘಟಿತ ಸಂಸ್ಥೆಗಳವರೆಗೆ, ಏರೋಸ್ಪೇಸ್‌ನಿಂದ ಎಲೆಕ್ಟ್ರಿಕ್ ವಾಹನಗಳ ಉತ್ಪಾದಕರ ಜತೆ ಮಾತುಕತೆ ಸಾಗಿದೆ. ಇದಲ್ಲದೇ ನೆದರ್‌ಲ್ಯಾಂಡ್ಸ್, ಜರ್ಮನಿ, ತೈವಾನ್ ಮತ್ತು ಇಸ್ರೇಲ್‌ನ ರಾಜತಾಂತ್ರಿಕರೊಂದಿಗೂ ಸಂವಾದ ನಡೆಯುತ್ತಿದ್ದು, ಈ ಮೂಲಕ ಕೈಗಾರಿಕಾ ಪರಿಸರಕ್ಕೆ ಪೂರಕ ವಾತಾವರಣ ಸೃಷ್ಟಿಸುವ ಕೆಲಸ ಆಗುತ್ತಿದೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಕೆಲಸಕ್ಕೆ ಬಾರದವರು ಬಿಜೆಪಿ ಕಚೇರಿ ನಡೆಸುತ್ತಿದ್ದಾರೆ: ರೇಣುಕಾಚಾರ್ಯ ವಾಗ್ದಾಳಿ
‘ಇನ್ವೆಸ್ಟ್ ಕರ್ನಾಟಕ’ ವೇದಿಕೆ ಪುನಾರಚನೆ
ರಾಜ್ಯದಲ್ಲಿ ಸದೃಢ ಕೈಗಾರಿಕಾ ಪರಿಸರ ಸೃಷ್ಟಿ ಜತೆಗೆ ಬಂಡವಾಳ ಆಕರ್ಷಣೆಗೆ ‘ಇನ್ವೆಸ್ಟ್ ಕರ್ನಾಟಕ’ ವೇದಿಕೆಯನ್ನು ಪುನಾರಚಿಸಲಾಗುತ್ತಿದೆ. ಉದ್ಯಮದ ದಿಗ್ಗಜರು ಈ ಮಂಡಳಿಯ ಭಾಗವಾಗಿದ್ದಾರೆ. ವೆಂಚರ್ ಕ್ಯಾಪಿಟಲ್, ಪ್ರೈವೇಟ್ ಇಕ್ವಿಟಿ ಮತ್ತು ಮೂಲಸೌಕರ್ಯ ಅಭಿವೃದ್ಧಿಯಂತಹ ವಿವಿಧ ವಲಯಗಳ ಅನುಭವಿಗಳನ್ನು ಒಳಗೊಂಡ ‘ಕಾರ್ಯತಂತ್ರ ಹೂಡಿಕೆ ಸಮಿತಿ’ ರಚಿಸಲಾಗಿದೆ. ಇದಲ್ಲದೇ, ಸುಲಲಿತ ವ್ಯವಹಾರಕ್ಕೆ ಅನುವು ಮಾಡಲು ಅತ್ಯಾಧುನಿಕ ಏಕಗವಾಕ್ಷಿ ವ್ಯವಸ್ಥೆಯನ್ನು ರೂಪಿಸುವ ಕೆಲಸ ಆಗುತ್ತಿದೆ. ಈ ಸಂಬಂಧ ಹಲವಾರು ಸುತ್ತಿನ ಚರ್ಚೆಗಳು ನಡೆದಿದ್ದು, ಶೀಘ್ರದಲ್ಲೇ ಕ್ರಮ ವಹಿಸಲಾಗುತ್ತದೆ ಎಂದು ಇಲಾಖೆಯಲ್ಲಿ ಕೈಗೊಂಡಿರುವ ಹೊಸ ಕ್ರಮಗಳನ್ನು ವಿವರಿಸಿದರು.
ಹೊಸ ಕೈಗಾರಿಕಾ ನೀತಿ ರಚಿಸಲು ನಮ್ಮ ಸರ್ಕಾರ ಮುಂದಾಗಿದ್ದು, ಇದರಲ್ಲಿ ರಫ್ತಿಗೆ ಹೆಚ್ಚಿನ ಒತ್ತು ನೀಡಲಾಗುವುದು. ಎಲೆಕ್ಟ್ರಿಕ್ ವೆಹಿಕಲ್ ಮತ್ತು ವೇರ್‌ಹೌಸಿಂಗ್ ಮತ್ತು ಲಾಜಿಸ್ಟಿಕ್ಸ್ ವಲಯಗಳಿಗೆ ಈಗಾಗಲೇ ಕರಡು ರೂಪುಗೊಂಡಿವೆ. ಸದ್ಯ ಇತರ ರಾಜ್ಯಗಳ ಕೈಗಾರಿಕಾ ನೀತಿಯ ಅಧ್ಯಯನ ನಡೆಯುತ್ತಿದ್ದು, ಶೀಘ್ರದಲ್ಲೇ ಪ್ರಗತಿಪರ ನೀತಿಯನ್ನು ಹೊರತರಲಿದ್ದೇವೆ. ಜತೆಗೆ ಆಕರ್ಷಕ ಪ್ರೋತ್ಸಾಹಕ ಪ್ಯಾಕೇಜ್‌ಗಳನ್ನು ಘೋಷಿಸಲಿದ್ದೇವೆ ಎಂದು ತಿಳಿಸಿದರು.
ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಬೆಳವಣಿಗೆಗೆ ಉತ್ತೇಜಿಸಲು 10 ಆದ್ಯತಾ ವಲಯಗಳಲ್ಲಿ ‘ವಿಷನ್ ಗ್ರೂಪ್’ ರಚಿಸುತ್ತೇವೆ. ಏರೋಸ್ಪೇಸ್ ಮತ್ತು ಡಿಫೆನ್ಸ್, ಮೆಷಿನ್ ಟೂಲ್ಸ್, ಇಎಸ್‌ಡಿಎಂ, ಫಾರ್ಮಾಸ್ಯುಟಿಕಲ್ಸ್, ಕೋರ್ ಮ್ಯಾನುಫ್ಯಾಕ್ಚರಿಂಗ್, ಆಟೋಮೋಟಿವ್/ಎಲೆಕ್ಟ್ರಿಕ್ ವೆಹಿಕಲ್ಸ್, ಇಂಡಸ್ಟ್ರಿ 5.0, ಟೆಕ್ಸ್‌ಟೈಲ್ಸ್ ಮತ್ತು ಗ್ರೀನ್ ಮತ್ತು ಉದಯೋನ್ಮುಖ ತಂತ್ರಜ್ಞಾನ ಒಳಗೊಂಡಿದೆ ಎಂದರು
60,000 ಕೋಟಿ ರೂ. ಹೂಡಿಕೆ ಒಪ್ಪಂದ
ಹೂಡಿಕೆದಾರರ ನೆಚ್ಚಿನ ತಾಣ ಕರ್ನಾಟಕ ಎನ್ನುವುದರಲ್ಲಿ ಎರಡು ಮಾತಿಲ್ಲ. ಅದಕ್ಕೆ ಸಾಕ್ಷಿಯಾಗಿ, ನೂರು ದಿನಗಳಲ್ಲಿ ಕರ್ನಾಟಕದಲ್ಲಿ ಬರೋಬ್ಬರಿ 60,000 ಕೋಟಿ ರೂ. ಬಂಡವಾಳ ಹೂಡಿಕೆ ಒಪ್ಪಂದ ಆಗಿದೆ. ಮುಖ್ಯವಾಗಿ ಇದರಿಂದ 30,000 ಹೊಸ ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಹೇಳಲು ಬಹಳ ಖುಷಿಯಾಗುತ್ತದೆ ಎಂದು ಸಚಿವರು ಹೇಳಿದರು. ಇದನ್ನೂ ಓದಿ: ಆದಿತ್ಯ ಎಲ್ 1 ಉಡಾವಣೆಗೂ ಮುನ್ನ ತಿರುಪತಿಗೆ ಭೇಟಿ ನೀಡಿದ ಇಸ್ರೋ ಮುಖ್ಯಸ್ಥ
ಫಾಕ್ಸ್‌ಕಾನ್, ಜೆಎಸ್‌ಡಬ್ಲ್ಯೂ ಎನರ್ಜಿ, ಟಾಟಾ ಎಲೆಕ್ಟ್ರಾನಿಕ್ಸ್ ಮತ್ತು ಐಬಿಸಿ ಮುಂತಾದ ಕಂಪನಿಗಳೊಂದಿಗಿನ ಫಲಪ್ರದ ಮಾತುಕತೆ ನಡೆಸಲಾಗಿದೆ. ಈ ಕಂಪನಿಗಳು ದೊಡ್ಡ ಮೊತ್ತದ ಹೂಡಿಕೆ ಒಪ್ಪಂದಗಳಿಗೆ ಸಹಿ ಮಾಡಿವೆ. ಈ ವಿವರಗಳನ್ನು ಈಗಾಗಲೇ ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ ಎಂದು ತಿಳಿಸಿದರು.
20ಕ್ಕೂ ಹೆಚ್ಚು ಸಾಂಭಾವ್ಯ ಹೂಡಿಕೆದಾರರ ಜತೆ ಮಾತುಕತೆ ನಡೆಯುತ್ತಿದ್ದು, ಇದು ಸಫಲವಾದರೆ ರಾಜ್ಯಕ್ಕೆ 1,00,000 ಕೋಟಿ ರೂಪಾಯಿ ಬಂಡವಾಳ ಹರಿದು ಬರಲಿದೆ. ಸಂಭಾವ್ಯ ಹೂಡಿಕೆದಾರರ ಪೈಕಿ ತೈವಾನ್, ಕೊರಿಯಾ ಮೂಲದ ಬಹುರಾಷ್ಟ್ರೀಯ ಕಂಪನಿಗಳು, ಸಾರ್ವಜನಿಕ ಮತ್ತು ಖಾಸಗಿ ವಲಯದ ಪ್ರಮುಖ ಕಂಪನಿಗಳು ಸೇರಿವೆ ಎಂದು ವಿವರ ನೀಡಿದರು.
2024 ಏಪ್ರಿಲ್‌ಗೆ ವಿಜಯಪುರ ವಿಮಾನ ನಿಲ್ದಾಣ
ವಿಜಯಪುರ ವಿಮಾನ ನಿಲ್ದಾಣದ ಕಾಮಗಾರಿಗಳು ಭರದಿಂದ ಸಾಗಿದ್ದು, 2024ರ ಏಪ್ರಿಲ್ ವೇಳೆಗೆ ಉದ್ಘಾಟನೆ ಮಾಡಲು ಎಲ್ಲ ಕ್ರಮಗಳನ್ನೂ ಕೈಗೊಳ್ಳಲಾಗುತ್ತಿದೆ. ಇದರಿಂದ ವಿಜಯಪುರ, ಬಾಗಲಕೋಟೆ, ಯಾದಗಿರಿ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳ ಆರ್ಥಿಕ ಬೆಳವಣಿಗೆಗೆ ಚೈತನ್ಯ ಬರಲಿದೆ. ಜತೆಗೆ ಹಾಸನ ವಿಮಾನ ನಿಲ್ದಾಣ ಕಾಮಗಾರಿ ಪ್ರಗತಿಯಲ್ಲಿದೆ ಎಂದರು.
ಕೆಎಸ್‌ಐಐಡಿಸಿ ವತಿಯಿಂದ ಉತ್ತರ ಕನ್ನಡದ ತದಡಿಯಲ್ಲಿ 1,819 ಎಕರೆ ವಿಸ್ತಾರದಲ್ಲಿ ಸರ್ಕಾರಿ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ಇಕೋ ಟೂರಿಸಂ ಪಾರ್ಕ್ ಸ್ಥಾಪಿಸಲು ಅಗತ್ಯ ಕ್ರಮ ವಹಿಸಲಾಗುತ್ತಿದೆ. ಅಲ್ಲದೇ, ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ 407 ಎಕರೆ ವಿಸ್ತೀರ್ಣದಲ್ಲಿ ದೆಹಲಿಯ ಏರೋ ಸಿಟಿ ಮಾದರಿಯಲ್ಲಿ ‘ಬಿಸಿನೆಸ್ ಪಾರ್ಕ್’ ಸ್ಥಾಪಿಸಲು ಯೋಜಿಸಲಾಗುತ್ತದೆ ಎಂದರು. ಇದನ್ನೂ ಓದಿ: ಪ್ರಜ್ವಲ್ ಜೊತೆ ರೇವಣ್ಣ, ಎ ಮಂಜು ಅನರ್ಹರಾಗುತ್ತಾರೆ: ಪ್ರಮೀಳಾ ನೇಸರ್ಗಿ
ಬೆಂಗಳೂರು ಸಬ್ಅರ್ಬನ್ ಯೋಜನೆಯ ಮೊದಲನೆಯ ಹಂತವು 149 ಕಿ.ಮೀ. ಇದ್ದು, 2ನೇ ಹಂತದಲ್ಲಿ 452 ಕಿ.ಮೀ.ಗಳಿಗೆ ವಿಸ್ತರಿಸಲು ಈಗಾಗಲೇ ಪ್ರಸ್ತಾವನೆ ಸಿದ್ಧಪಡಿಸಲಾಗಿದೆ. ಈ ಸಂಬಂಧ ಕೆ-ಆರ್‌ಐಡಿಇ ಸಂಸ್ಥೆಯು ಕೇಂದ್ರ ರೈಲ್ವೆ ಸಚಿವಾಲಯದ ಅನುಮತಿಯನ್ನು ನಿರೀಕ್ಷಿಸುತ್ತಿದೆ ಎಂದು ತಿಳಿಸಿದರು.
ಕರ್ನಾಟಕ ಮಾಡೆಲ್
ಚುನಾವಣೆ ಸಂದರ್ಭದಲ್ಲಿ ನೀಡಿದ್ದ 5 ಪ್ರಮುಖ ಭರವಸೆಗಳ ಪೈಕಿ ನಾಲ್ಕನ್ನು ಮೊದಲ 100 ದಿನಗಳಲ್ಲೇ ಈಡೇರಿಸಿದ್ದು ನಮ್ಮ ನೆಚ್ಚಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರದ ಸಾಧನೆ. ಐದು ಗ್ಯಾರಂಟಿಗಳ ಪೈಕಿ ನಾಲ್ಕು- ಮಹಿಳಾ ಸಬಲೀಕರಣಕ್ಕಾಗಿಯೇ ರೂಪಿಸಿದ್ದೇವೆ. ಈ ಮೂಲಕ ಇಡೀ ದೇಶಕ್ಕೆ ನಾವು ‘ಕರ್ನಾಟಕ ಮಾಡೆಲ್’ ಏನೆಂದು ಸಾಬೀತು ಪಡಿಸಿದ್ದೇವೆ. ಯಾವುದೇ ಸರ್ಕಾರದ ಮೊದಲ 100 ದಿನಗಳನ್ನು ಸಾಮಾನ್ಯವಾಗಿ ಅದರ ಭವಿಷ್ಯದ ದಿಕ್ಸೂಚಿ ಎಂದೇ ಪರಿಗಣಿಸಲಾಗುತ್ತದೆ. ಮುಂದಿನ ಪ್ರಯತ್ನಗಳಿಗೆ ಇದು ನೀಲನಕ್ಷೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಕೈಗಾರಿಕೆ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ. ಎಸ್.ಸೆಲ್ವಕುಮಾರ್, ಕೈಗಾರಿಕಾಭಿವೃದ್ಧಿ ಆಯುಕ್ತ ಗುಂಜನ್ ಕೃಷ್ಣ, ಕೆಎಸ್ಐಐಡಿಸಿ ವ್ಯವಸ್ಥಾಪಕ ನಿರ್ದೇಶಕ ಡಾ.ಎಂ.ಆರ್.ರವಿ, ಎಂಎಸ್ ಐಎಲ್ ವ್ಯವಸ್ಥಾಪಕ ನಿರ್ದೇಶಕ ಮನೋಜ್ ಕುಮಾರ್, ಕೆಎಸ್‌ಡಿಎಲ್ ವ್ಯವಸ್ಥಾಪಕ ನಿರ್ದೇಶಕ ಪ್ರಶಾಂತ್, ಕರ್ನಾಟಕ ಉದ್ಯೋಗ ಮಿತ್ರದ ವ್ಯವಸ್ಥಾಪಕ ನಿರ್ದೇಶಕ ದೊಡ್ಡ ಬಸವರಾಜು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಂಗಳೂರು: ರಾಜ್ಯದ ಎಲ್ಲಾ ಹಳೇ ಕೈಗಾರಿಕಾ ಪ್ರದೇಶಗಳಲ್ಲಿ ಒಂದು ಬಾರಿ ಪೂರ್ಣ ಪ್ರಮಾಣದಲ್ಲಿ ಮೂಲಭೂತ ಸೌಕರ್ಯಗಳನ್ನು ಅಭಿವೃದ್ದಿಪಡಿಸಿದ ನಂತರ ಆಯಾ ಕೈಗಾರಿಕಾ ಸಂಘಗಳ ಸುಪರ್ದಿಗೇ ಅವುಗಳ ನಿರ್ವಹಣೆಯನ್ನು ಒಪ್ಪಿಸುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗುತ್ತಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಭೂತ ಸೌಕರ್ಯ ಅಭಿವೃದ್ದಿ ಸಚಿವ ಎಂ.ಬಿ. ಪಾಟೀಲ ಭರವಸೆ ನೀಡಿದರು.
ಮಂಗಳವಾರ ಬೆಂಗಳೂರಿನ ಉದ್ಯೋಗ ಮಿತ್ರ ಸಭಾಂಗಣದಲ್ಲಿ ರಾಯಚೂರು ಜಿಲ್ಲೆಯ ಕೈಗಾರಿಕಾ ಕ್ಷೇತ್ರದ ಅಭಿವೃದ್ದಿಗೆ ಸಂಬಂಧಿಸಿಂತೆ ಆಯೋಜಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಭೆಯಲ್ಲಿ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು, ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ದಿ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಶರಣ ಪ್ರಕಾಶ್ ಪಾಟೀಲ್, ರಾಯಚೂರು ಜಿಲ್ಲೆಯ ಶಾಸಕರು ಹಾಗೂ ರಾಯಚೂರು ಕೈಗಾರಿಕೋದ್ಯಮಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು ಮಾತನಾಡಿ, ಜಿಲ್ಲೆಯ ಸಮಗ್ರ ಅಭಿವೃದ್ದಿಗೆ ಹಲವಾರು ಅವಕಾಶಗಳಿವೆ. ಹಿಂದುಳಿದ ಪ್ರದೇಶವಾಗಿರುವ ಕಲ್ಯಾಣ ಕರ್ನಾಟಕದ ಪ್ರಮುಖ ವಾಣಿಜ್ಯ ಕೇಂದ್ರವಾಗಿ ರಾಯಚೂರು ಹೊರಹೊಮ್ಮುತ್ತಿದೆ. ಕೈಗಾರಿಕೆಗಳ ಹೆಚ್ಚಿನ ಸಂಖ್ಯೆಯಲ್ಲಿ ಆಕರ್ಷಿತರಾಗುವಂತೆ ಮಾಡುವ ನಿಟ್ಟಿನಲ್ಲಿ ನಾವುಗಳು ಅಗತ್ಯ ಮೂಲಭೂತ ಸೌಕರ್ಯಗಳನ್ನು ಹೆಚ್ಚಿಸಬೇಕು ಎಂದು ಹೇಳಿದರು.
ಸಭೆಯಲ್ಲಿ ಕೈಗಾರಿಕೋದ್ಯಮಿಗಳು ಹಾಗೂ ಜನಪ್ರತಿನಿಧಿಗಳ ಸಮಸ್ಯೆಗಳನ್ನು ಆಲಿಸಿದ ಬೃಹತ್ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ ಮಾತನಾಡಿ, ರಾಜ್ಯದ ಕೈಗಾರಿಕಾ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿರುವುದು ನಮ್ಮ ಗಮನಕ್ಕೆ ಬಂದಿದೆ. ಇದನ್ನ ಸರಿಪಡಿಸುವ ನಿಟ್ಟಿನಲ್ಲಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಕೈಗಾರಿಕಾ ಪ್ರದೇಶಗಳಲ್ಲಿರುವ ಸಮಸ್ಯೆಗಳನ್ನು ಒಂದು ಬಾರಿ ಅಭಿವೃದ್ದಿ ಮಾಡುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗುತ್ತಿದೆ. ಮೂಲಭೂತ ಸೌಕರ್ಯಗಳ ಅಭಿವೃದ್ದಿ ಮತ್ತು ಸಮಸ್ಯೆಗಳ ನಿವಾರಣೆಯ ನಂತರ ಕೈಗಾರಿಕಾ ಪ್ರದೇಶಗಳನ್ನು ಕೈಗಾರಿಕಾ ಸಂಘಗಳಿಗೆ ವಹಿಸಿಕೊಡಲಾಗುವುದು. ಕೈಗಾರಿಕಾ ಪ್ರದೇಶದಿಂದ ಸಂಗ್ರಹವಾಗುವ ಕರದಲ್ಲಿ ಶೇಕಡಾ 70 ರಷ್ಟು ಕೈಗಾರಿಕಾ ಸಂಘಕ್ಕೆ ಮತ್ತು ಶೇಕಡಾ 30 ರಷ್ಟು ಆಯಾ ನಗರಸಭೆಗಳಿಗೆ ನೀಡಲಾಗುವುದು. ಇದರಿಂದ ಬಹಳಷ್ಟು ಸಮಸ್ಯೆಗಳು ನಿವಾರಣೆಯಾಗಲಿವೆ ಎಂದು ಹೇಳಿದರು.
ರೈಸ್ ಮಿಲ್‌ಗಳಿಗೆ ಮೀಸಲಾದ ನೀರಿನ ಪೈಪ್‌ಲೈನ್:
ರಾಯಚೂರು ನಗರದಲ್ಲಿ 90 ಕ್ಕೂ ಹೆಚ್ಚು ರೈಸ್‌ಮಿಲ್‌ಗಳಿವೆ. ಈ ರೈಸ್‌ಮಿಲ್‌ಗಳ ನಿರ್ವಹಣೆಗಾಗಿ ನೀರಿನ ಅಗತ್ಯವಿದೆ. ಕೈಗಾರಿಕಾ ಪ್ರದೇಶಗಳಿಗೆ ಮೀಸಲಾದ ನೀರಿನ ಸಂಪರ್ಕ ಇಲ್ಲದೆ ಇರುವ ಕಾರಣ ರೈಸ್ ಮಿಲ್‌ಗಳು ತುಂಬ ಸಮಸ್ಯೆಗೆ ಸಿಲುಕಿವೆ. ಅಲ್ಲದೇ ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ರೈಸ್ ಮಿಲ್‌ಗಳನ್ನು ಸ್ಥಾಪಿಸಲು ನೀರಿನ ಅಗತ್ಯತೆ ಹೆಚ್ಚಾಗಿದೆ. ಈ ಸಮಸ್ಯೆಗೆ ಪರಿಹಾರ ಕಂಡು ಹಿಡಿಯುವ ನಿಟ್ಟಿನಲ್ಲಿ ರೈಸ್ ಮಿಲ್‌ಗಳಿಗೆ ಮೀಸಲಾದ ಪೈಪ್ ಲೈನ್ ನಿರ್ಮಾಣದ ವರದಿಯನ್ನ ಸಲ್ಲಿಸುವಂತೆ ಸಚಿವ ಎಂ.ಬಿ ಪಾಟೀಲ ಕೆಐಡಿಬಿ ಅಧಿಕಾರಿಗಳಿಗೆ ಸೂಚಿಸಿದರು.
ಔಷಧ ಕಂಪನಿಗಳ ತ್ಯಾಜ್ಯ ವಿಲೇವಾರಿ ಸೌಲಭ್ಯ ನಿರ್ಮಾಣಕ್ಕೆ ಆದ್ಯತೆ:
ಔಷಧ ಕಂಪನಿಗಳ ಹಬ್ ಆಗಿ ಹೊರಹೊಮ್ಮಿರುವ ರಾಯಚೂರು ಕೈಗಾರಿಕಾ ಪ್ರದೇಶದಲ್ಲಿ ಸಿಇಟಿಪಿಯ ಕೊರತೆಯಿದೆ. ಇದರಿಂದಾಗಿ ತ್ಯಾಜ್ಯವು ಅಂತರ್ಜಲ ಸೇರ್ಪಡೆಯಾಗುತ್ತಿದೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ತ್ಯಾಜ್ಯ ವಿಲೇವಾರಿ ಸೌಲಭ್ಯವನ್ನು ಅಳವಡಿಸುವ ಕಾರ್ಯ ವಿಳಂಬವಾಗಿರುವುದನ್ನ ಕೈಗಾರಿಕೋದ್ಯಮಿಗಳು ಸಭೆಯ ಗಮನಕ್ಕೆ ತಂದರು. ಇದಕ್ಕೆ ಪೂರಕವಾಗಿ ಸ್ಪಂದಿಸಿದ ಸಚಿವರು, ಕೂಡಲೇ ತ್ಯಾಜ್ಯ ವಿಲೇವಾರಿ ಕೇಂದ್ರವನ್ನು ನಿರ್ಮಿಸಬೇಕು. ಇದಕ್ಕೆ ಈಗಾಗಲೇ ಅನುಮತಿ ನೀಡಿರುವ ಮದರ್ ಅರ್ಥ್ ಕಂಪನಿಯ ಜೊತೆಯಲ್ಲಿ ಚರ್ಚಿಸಿ ಕೈಗಾರಿಕೋದ್ಯಮಿಗಳಿಗೆ ಅನುಕೂಲ ಮಾಡಿಕೊಡಬೇಕು ಎಂದು ಸೂಚಿಸಿದರು.
ರಾಯಚೂರಿನಲ್ಲಿ ಟೆಕ್ಸ್‌ಟೈಲ್ ಪಾರ್ಕ್ ನಿರ್ಮಾಣಕ್ಕೆ ಕೇಂದ್ರಕ್ಕೆ ಪ್ರಸ್ತಾಪ:
ರಾಯಚೂರು ಜಿಲ್ಲೆಯಲ್ಲಿ 120 ಕ್ಕೂ ಹೆಚ್ಚು ಜಿನ್ನಿಂಗ್ ಘಟಕಗಳಿವೆ. ಏಷಿಯಾದ 2 ನೇ ಅತಿದೊಡ್ಡ ಕಾಟನ್ ಮಾರ್ಕೆಟ್ ಆಗಿರುವ ಈ ಜಿಲ್ಲೆಯಲ್ಲಿ ಟೆಕ್ಸ್‌ಟೈಲ್ ಪಾರ್ಕ್ ನಿರ್ಮಾಣದ ಅವಶ್ಯಕತೆಯಿದೆ. ಈಗಾಗಲೇ ಕೇಂದ್ರ ಸರ್ಕಾರ ಯಾದಗಿರಿ ಜಿಲ್ಲೆಯಲ್ಲಿ ಟೆಕ್ಸ್‌ಟೈಲ್ ಪಾರ್ಕನ್ನು ನೀಡಲು ಅನುಮತಿ ನೀಡಿದೆ. ಈ ಹಿನ್ನಲೆಯಲ್ಲಿ ರಾಯಚೂರಿನಲ್ಲೂ ಇನ್ನೊಂದು ಟೆಕ್ಸ್‌ಟೈಲ್ ಪಾರ್ಕ್ ನಿರ್ಮಾಣಕ್ಕೆ ಅನುಮತಿ ನೀಡುವಂತೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ಈ ನಿಟ್ಟಿನಲ್ಲಿ ಅಗತ್ಯ ಮಾಹಿತಿಯನ್ನು ಸಂಗ್ರಹಿಸಿ ವರದಿ ತಯಾರಿಸುವಂತೆ ಕೈಗಾರಿಕಾ ಆಯುಕ್ತರಿಗೆ ಸಚಿವ ಎಂ.ಬಿ ಪಾಟೀಲ ಸೂಚಿಸಿದರು.
ರಾಯಚೂರಿನಲ್ಲಿ ವಂದೇ ಭಾರತ್ ರೈಲು ನಿಲುಗಡೆಗೆ ಕೇಂದ್ರಕ್ಕೆ ಮನವಿ ಸಲ್ಲಿಕೆ:
ಬೆಂಗಳೂರು- ಹೈದರಾಬಾದ್ ನಡುವೆ ಸಂಚರಿಸಲಿರುವ ವಂದೇ ಭಾರತ್ ರೈಲು ರಾಯಚೂರು ಮೂಲಕ ಸಂಚರಿಸುವ ಹಾಗೆ ಮಾಡಬೇಕು. ಹಾಗೆಯೇ ಅಲ್ಲಿ ನಿಲುಗಡೆಗೆ ಅವಕಾಶ ನೀಡುವಂತೆ ಕೇಂದ್ರ ರೈಲ್ವೇ ಇಲಾಖೆಗೆ ಪತ್ರ ಬರೆಯುವಂತೆ ಕೈಗಾರಿಕೋದ್ಯಮಿಗಳು ಸಚಿವರಿಗೆ ಮನವಿ ಮಾಡಿದರು. ಈ ನಿಟ್ಟಿನಲ್ಲಿ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು ಕೈಗಾರಿಕಾ ಸಂಘಗಳ ಮನವಿಯ ಆಧಾರದ ಮೇಲೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವ ಭರವಸೆ ನೀಡಿದರು.
ಲಾಜಿಸ್ಟಿಕ್ ಪಾರ್ಕ್ ನಿರ್ಮಾಣ:
ರಾಯಚೂರು ನಗರ ಲಾಜಿಸ್ಟಿಕ್ ಹಬ್ ಆಗುವ ಎಲ್ಲಾ ರೀತಿಯ ಸೌಲಭ್ಯಗಳನ್ನ ಹೊಂದಿದೆ. ಹತ್ತಿರದಲ್ಲೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ರೈಲು ಮತ್ತು ರಾಷ್ಟ್ರೀಯ ಹೆದ್ದಾರಿಗಳ ನೆಟ್‌ವರ್ಕ್ ಇದ್ದು, ಈ ಬಗ್ಗೆಯೂ ಹೆಚ್ಚಿನ ಆಸಕ್ತಿ ವಹಿಸುವಂತೆ ಕೈಗಾರಿಕೋದ್ಯಮಿಗಳ ಮನವಿಗೆ ಸ್ಪಂದಿಸಿದ ಕೈಗಾರಿಕಾ ಸಚಿವರು ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ಸಭೆಯಲ್ಲಿ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ದಿ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಶರಣ ಪ್ರಕಾಶ್ ಪಾಟೀಲ್ ಸೇರಿದಂತೆ ಜಿಲ್ಲೆಯ ಶಾಸಕರು, ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಸೆಲ್ವಕುಮಾರ್, ಕೈಗಾರಿಕಾ ಅಭಿವೃದ್ದಿ ಆಯುಕ್ತ ಗುಂಜನ್ ಕೃಷ್ಣ, ರಾಯಚೂರು ಜಿಲ್ಲೆಯ ಜಿಲ್ಲಾಧಿಕಾರಿಗಳು ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.
ಬ್ರಿಜ್ ಸಿಂಗ್ ಎಂಬವರು ತನ್ನ ಕಂಪನಿಯನ್ನು ನೋಂದಾಯಿಸಲು ಎದುರಿಸುತ್ತಿರುವ ಸಮಸ್ಯೆಯನ್ನು ಸಾರ್ವಜನಿಕವಾಗಿ ಹಂಚಿಕೊಂಡಿದ್ದು, ಅಮೆರಿಕಾಗೆ ಹಿಂತಿರುಗಲು ಸಮಯ ಬಂದಿದೆ ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ವಿಸಿ ನಾಲೆಗೆ ಬಿತ್ತು ಕಾರು – ನಾಲ್ವರು ಮಹಿಳೆಯರು ಸ್ಥಳದಲ್ಲೇ ಸಾವು
Sorry to hear about your problem.
Company formation is usually done by CAs and shouldn’t take more than 15-20 days, to get it cleared by RoC(which falls under the central government, and is the same for all states).
ಎರಡು ತಿಂಗಳು ಕಳೆದರೂ ತನ್ನ ಕಂಪನಿಯನ್ನು ನೋಂದಾಯಿಸಲು ಸಾಧ್ಯವಾಗುತ್ತಿಲ್ಲ. ನಾನು ಅಮೆರಿಕಕ್ಕೆ ಮರಳುವ ಸಮಯ ಬಂದಿದೆ. ಇದನ್ನು ಭಾರವಾದ ಹೃದಯದಿಂದ ಹೇಳುತ್ತಿದ್ದೇನೆ. ಬೆಂಗಳೂರು ಮತ್ತು ಭಾರತದ ಬಗ್ಗೆ ಪ್ರೀತಿಯಿದೆ. ಆದರೆ ಭಾರತದಲ್ಲಿ (ಬೆಂಗಳೂರಿನಲ್ಲಿ) ಕಂಪನಿಯನ್ನು ನೋಂದಾಯಿಸಲು 2 ತಿಂಗಳುಗಳ ಕಾಲ ಪ್ರಯತ್ನಿಸಿದರೂ ಇನ್ನೂ ಪೂರ್ಣಗೊಂಡಿಲ್ಲ ಎಂದು ಜುಲೈ 27 ರಂದು ಟ್ವೀಟ್ ಮಾಡಿ ಬೇಸರ ವ್ಯಕ್ತಪಡಿಸಿದ್ದರು.
ಬ್ರಿಜ್ ಸಿಂಗ್ ಟ್ವೀಟ್‌ಗೆ ರೀ ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ನಿಮಗೆ ಸಮಸ್ಯೆ ಆಗಿರುವುಕ್ಕೆ ಕ್ಷಮೆ ಇರಲಿ. ನಿಮ್ಮ ಕಂಪನಿ ನೋಂದಣಿ ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುತ್ತದೆ. ಅದೇನೆ ಇರಲಿ, ವೈಯುಕ್ತಿಕವಾಗಿ ಬಂದು ಭೇಟಿ ಮಾಡುವುದಾದರೆ ಸಂತೋಷ ಎಂದು ಸಮಸ್ಯೆಗೆ ಸ್ಪಂದಿಸಿದ್ದಾರೆ. ಇದನ್ನೂ ಓದಿ: ಅಂಬೋಲಿ ಅರಣ್ಯ ಪ್ರದೇಶದಲ್ಲಿ ಟ್ರಯಲ್ ಬ್ಲಾಸ್ಟ್ – ಪುಣೆ ಎಟಿಎಸ್‌ನಿಂದ ಇಬ್ಬರು ಶಂಕಿತ ಉಗ್ರರ ಬಂಧನ
ಬೆಂಗಳೂರು: ರನ್‌ವೇ (Runway) ನಿರ್ಮಾಣ ಅಕ್ರಮದಲ್ಲಿ ಆರೋಪ ಆಗಿದೆ ಎಂದು ಸದಸ್ಯರು ಆರೋಪ ಮಾಡಿದ್ದಾರೆ. ಇಲಾಖೆ ಅಧಿಕಾರಿಗಳಿಂದ ಮಾಹಿತಿ ತರಿಸಿ ಅದರ ಬಗ್ಗೆ ಮಾಹಿತಿ ನೀಡುತ್ತೇನೆ. ಅದಕ್ಕೂ ಸದಸ್ಯರು ತೃಪ್ತರಾಗದೇ ಹೋದರೆ ತನಿಖೆ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದು ಮೂಲಭೂತ ಸೌಕರ್ಯಗಳ ಸಚಿವ ಎಂ.ಬಿ ಪಾಟೀಲ್ (M.B.Patil) ಹೇಳಿದರು.
ಶಿವಮೊಗ್ಗ (Shivamogga) ವಿಮಾನ ನಿಲ್ದಾಣದ ಹೊಸ ರನ್‌ವೇ ನಿರ್ಮಾಣಕ್ಕೆ ಸಾಕಷ್ಟು ಹಣ ಖರ್ಚು ಮಾಡಿದ್ದಾರೆ. ರನ್‌ವೇ ನಿರ್ಮಾಣದಲ್ಲಿ ದೊಡ್ಡ ಅಕ್ರಮ ಆಗಿದೆ. ಈ ಬಗ್ಗೆ ಸರ್ಕಾರ ತನಿಖೆ ನಡೆಸಬೇಕು ಎಂದು ಕಾಂಗ್ರೆಸ್ ಸದಸ್ಯ ಮಂಜುನಾಥ್ ಭಂಡಾರಿ ಆಗ್ರಹ ಮಾಡಿದರು. ಶಿವಮೊಗ್ಗ ವಿಮಾನ ನಿಲ್ದಾಣದ ಹೊಸ ರನ್‌ವೇ ನಿರ್ಮಾಣದಲ್ಲಿ ಅಕ್ರಮ ಆಗಿದೆ. ಈ ಬಗ್ಗೆ ಸಂಪೂರ್ಣ ತನಿಖೆ ನಡೆಸಬೇಕು ಎಂದು ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಮಂಜುನಾಥ್ ಭಂಡಾರಿ ಒತ್ತಾಯಿಸಿದರು. ಇದನ್ನೂ ಓದಿ: ಪ್ರಾಥಮಿಕ ಶಾಲಾ ಹಂತದಲ್ಲಿ NEP ಜಾರಿ ಮಾಡೋದಿಲ್ಲ: ಮಧು ಬಂಗಾರಪ್ಪ
ಇದಕ್ಕೆ ಉತ್ತರ ನೀಡಿದ ಮೂಲಭೂತ ಸೌಕರ್ಯಗಳ ಸಚಿವ ಎಂಬಿ ಪಾಟೀಲ್, ಶಿವಮೊಗ್ಗ ವಿಮಾನ ನಿಲ್ದಾಣ ನಿರ್ಮಾಣದ ಪ್ರಾರಂಭಿಕ ಅಂದಾಜು ಮೊತ್ತ 220 ಕೋಟಿ ರೂ. ಇತ್ತು. ಎರಡು ಬಾರಿ ಇದು ಪರಿಷ್ಕರಣೆ ಆಗಿದೆ. ಪರಿಷ್ಕೃತ ಅಂದಾಜು ಮೊತ್ತ 449.22 ಕೋಟಿ ರೂ.ಗೆ ಅನುಮೋದನೆ ನೀಡಲಾಗಿದೆ. ಹಳೇ ಮತ್ತು ಹೊಸ ರನ್‌ವೇ ನಿರ್ಮಾಣಕ್ಕೆ 247.98 ಕೋಟಿ ರೂ. ವೆಚ್ಚ ಮಾಡಲಾಗಿದೆ. ಸುಮಾರು 21.85 ಕೋಟಿ ರೂ. ಮಾತ್ರ ಪಾವತಿ ಬಾಕಿ ಇದೆ ಎಂದರು. ಇದನ್ನೂ ಓದಿ: ರಾಜ್ಯದಲ್ಲಿ ಡಿಸಿ, ಸಿಇಓ, ಕಮಿಷನರ್‌ಗಳಿಗೆ ರೇಟ್ ಫಿಕ್ಸ್ ಆಗಿದೆ: ಕಟೀಲ್ ಗಂಭೀರ ಆರೋಪ
ಬೆಂಗಳೂರು: 5 ವರ್ಷ ಸಿದ್ದರಾಮಯ್ಯ(Siddaramaiah) ಸಿಎಂ ಎಂಬ ಎಂ.ಬಿ ಪಾಟೀಲ್ (M.B.Patil) ಅವರ ಹೇಳಿಕೆಗೆ ಸಂಸದ ಡಿಕೆ ಸುರೇಶ್ (D.K.Suresh) ಆಕ್ರೋಶ ವ್ಯಕ್ತಪಡಿಸಿದ್ದು, ನೇರ ಎಚ್ಚರಿಕೆ ನೀಡಿದ್ದಾರೆ.
ಸಿದ್ದರಾಮಯ್ಯ ಪೂರ್ಣಾವಧಿಯ ಸಿಎಂ ಎಂದು ಎಂ.ಬಿ.ಪಾಟೀಲ್ ಹೇಳಿಕೆಯೊಂದನ್ನು ನೀಡಿದ್ದರು. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸುರೇಶ್ ಅವರು, ನಾನು ಎಂ.ಬಿ.ಪಾಟೀಲ್ ಹೇಳಿಕೆಗೆ ಉತ್ತರ ಕೊಡಬಲ್ಲೆ. ಆದರೆ ಅದು ಈಗ ಬೇಡ ಎಂದು ಕಿಡಿಕಾರಿದರು. ಇದನ್ನೂ ಓದಿ: ಮುಂದಿನ ಲೋಕಸಭಾ ಚುನಾವಣೆಗೆ ಈಗಿನಿಂದಲೇ ಸಿದ್ಧವಾದ ಸುಮಲತಾ ಅಂಬರೀಶ್
ಬೆಂಗಳೂರು: ಕಾಂಗ್ರೆಸ್ (Congress) ಸ್ಟಾರ್ ಪ್ರಚಾರಕಿಯಾಗಿರುವ ಮಾಜಿ ಸಂಸದೆ, ನಟಿ ರಮ್ಯಾ (Ramya) ಚುನಾವಣೆ ಸಲುವಾಗಿ ಕಾಂಗ್ರೆಸ್‌ನ ಹಲವು ಅಭ್ಯರ್ಥಿಗಳ ಪರ ಮತಯಾಚನೆ ಮಾಡಲಿದ್ದಾರೆ.
ಚುನಾವಣೆ (Election) ಸಂದರ್ಭದಲ್ಲಿ ಜನರ ಮತಗಳನ್ನು ತನ್ನತ್ತ ಸೆಳೆಯುವ ಸಲುವಾಗಿ ವಿವಿಧ ಪಕ್ಷಗಳು ಸ್ಟಾರ್ ಪ್ರಚಾರಕರ ಮೂಲಕ ಮತಯಾಚನೆ ಮಾಡಿಸುತ್ತಾರೆ. ಅದರಂತೆ ನಟಿ ರಮ್ಯಾ ಕಾಂಗ್ರೆಸ್ ಸ್ಟಾರ್ ಪ್ರಚಾರಕಿಯಾಗಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತಯಾಚನೆ ಮಾಡಲಿದ್ದಾರೆ. ಮೇ 4ರಂದು ರಮ್ಯಾ ವರುಣಾ (Varuna) ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಪರ ಪ್ರಚಾರ ನಡೆಸಲಿದ್ದಾರೆ. ಇದನ್ನೂ ಓದಿ: ತಪ್ಪಿ ಮೋದಿಯತ್ತ ಎಸೆದ ಮೊಬೈಲ್ ಮರಳಿ ಮಹಿಳೆಯ ಕೈಗೆ ಸಿಕ್ತು!
ಮೇ 6ರಂದು ಬಬಲೇಶ್ವರ (Babaleshwar) ಕ್ಷೇತ್ರದಲ್ಲಿ ಪ್ರಚಾರ ನಡೆಸಲಿರುವ ರಮ್ಯಾ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ (M.B.Patil) ಪರ ಮತಯಾಚಿಸಲಿದ್ದಾರೆ. ನಂತರ ಬೆಂಗಳೂರಿನ (Bengaluru) ಸರ್ವಜ್ಞ ನಗರದಲ್ಲಿ (Sarvagnanagar) ಕೆ.ಜೆ.ಜಾರ್ಜ್ (K.J.George) ಪರ ಪ್ರಚಾರ ನಡೆಸಿ ಮತಯಾಚನೆ ಮಾಡಲಿದ್ದಾರೆ. ಅಲ್ಲದೇ ಮಂಡ್ಯ (Mandya) ಜಿಲ್ಲೆಯಲ್ಲೂ ಸಹ ಪ್ರಚಾರಕ್ಕೆ ಮುಂದಾಗಿದ್ದಾರೆ. ಇದನ್ನೂ ಓದಿ: ಹಳೇ ಮೈಸೂರು ಕ್ಷೇತ್ರಗಳನ್ನು ಕಬ್ಜ ಮಾಡಲು ಮೋದಿ ಪಣ – 25+ ಸ್ಥಾನ ಗೆಲ್ಲಲು ರಣತಂತ್ರ
ಬೆಂಗಳೂರು: ಕಾಂಗ್ರೆಸ್ (Congress) ಗೆದ್ದರೆ ಸಿಎಂ ಯಾರಾಗ್ತಾರೆ ಎಂಬ ಚರ್ಚೆ ‘ಕೈ’ ಪಾಳಯದಲ್ಲಿ ಇನ್ನೂ ನಡೆಯುತ್ತಿದೆ. ಇತ್ತ ಮುಂದಿನ ಸಿಎಂ ನಾನೇ ಅಂತಾ ಸಿದ್ದರಾಮಯ್ಯ, ಅತ್ತ ನನಗೂ ಒಂದು ಅವಕಾಶ ಕೊಡಿ ಎಂದು ಡಿ.ಕೆ.ಶಿವಕುಮಾರ್ ಸಿಎಂ ಕುರ್ಚಿಗೆ ಟವೆಲ್ ಹಾಕಿರುವವರಂತೆ ಮಾತನಾಡುತ್ತಲೇ ಇದ್ದಾರೆ. ಈ ಎಲ್ಲದರ ನಡುವೆ ಮಾಜಿ ಸಚಿವ ಎಂ.ಬಿ.ಪಾಟೀಲ್ (M.B.Patil) ಶಾಕಿಂಗ್ ಸುದ್ದಿ ಕೊಟ್ಟಿದ್ದಾರೆ.
ಸಿಎಂ ಸ್ಥಾನ ಆಕಾಂಕ್ಷಿಗಳ ಪಟ್ಟಿಯನ್ನೇ ಮುಂದಿಟ್ಟಿರುವ ಎಂ.ಬಿ.ಪಾಟೀಲ್, ಯಾರು ಎಷ್ಟನೇ ಸ್ಥಾನದಲ್ಲಿದ್ದಾರೆ ಎಂಬುದನ್ನೂ ತಿಳಿಸಿದ್ದಾರೆ. ಆ ಮೂಲಕ ಕೈ ಪಾಳಯದಲ್ಲಿ ಚರ್ಚೆ ಹುಟ್ಟುಹಾಕಿದ್ದಾರೆ. ಇದನ್ನೂ ಓದಿ: ಸಿದ್ದುಗೆ ಕೋಲಾರ ಟಿಕೆಟ್ ಮಿಸ್ – ವರುಣಾ ಒಂದೇ ಫಿಕ್ಸ್
ಈ ಕುರಿತು ಮಾತನಾಡಿರುವ ಅವರು, ರಾಜ್ಯ ಕಾಂಗ್ರೆಸ್‌ನಲ್ಲಿ ಸಿಎಂ ಆಗಲು ಹಲವು ನಾಯಕರು ಸಮರ್ಥರಿದ್ದಾರೆ. ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಎಐಸಿಸಿ (AICC) ಅಧ್ಯಕ್ಷರಾಗಿದ್ದಾರೆ. ಎಲ್ಲ ರಾಜ್ಯಗಳ ಕಾಂಗ್ರೆಸ್ ಮುಖ್ಯಮಂತ್ರಿಗಳ ಮುಖ್ಯಸ್ಥರು ಖರ್ಗೆ. ಸಿಎಂ ಆಗುವ ಮೊದಲ ಸಾಲಿನಲ್ಲಿ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ, ದೇಶಪಾಂಡೆ (R.V.Deshpande) ಇದ್ದಾರೆ. ಎರಡನೇ ಸಾಲಿನಲ್ಲಿ ನಾನು, ಡಿಕೆಶಿ (D.K.Shivakumar), ಹೆಚ್.ಕೆ.ಪಾಟೀಲ್, ಪರಮೇಶ್ವರ್ (Parameshwar), ದಿನೇಶ್ ಗುಂಡೂರಾವ್, ಕೃಷ್ಣಬೈರೇಗೌಡ, ರಾಮಲಿಂಗರೆಡ್ಡಿ ಇದ್ದೇವೆ ಎಂದು ತಿಳಿಸಿದ್ದಾರೆ.
ಬಿಜೆಪಿ ಹೈಕಮಾಂಡ್ ಲಿಂಗಾಯತ ಸಮುದಾಯವನ್ನು ಮೂಲೆಗುಂಪು ಮಾಡ್ತಿದೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಲಿಂಗಾಯತ ಸಮುದಾಯ ಬಿಟ್ಟು ಬೇರೆ ಸಮುದಾಯಕ್ಕೆ ಮನ್ನಣೆ ಕೊಡಲು ತಯಾರಿ ನಡೆಯುತ್ತಿದೆ. ಯಾಕೆ ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಡೆ ಇಳಿಸಿದ್ರು? ಲಿಂಗಾಯತ ಸಮುದಾಯದ ಪ್ರಬಲ ನಾಯಕ ಯಡಿಯೂರಪ್ಪ ಅವರನ್ನು ಸೈಡ್‌ಲೈನ್ ಮಾಡಿದ್ದಾರೆ. ಲಿಂಗಾಯತ ಸಮುದಾಯದವನ್ನು ಬಿಜೆಪಿ ಹೈಕಮಾಂಡ್ ಕಡೆಗಣಿಸಿದೆ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ಬಿಜೆಪಿಯವರಿಂದಲೇ ಕಾಂಗ್ರೆಸ್ ಸೇರುವ ವಾತಾವರಣ ನಿರ್ಮಾಣ: ಲಕ್ಷ್ಮಣ ಸವದಿ
ವಿಜಯಪುರ: ಕಾಂಗ್ರೆಸ್ (Congress) ಮತ್ತು ಜೆಡಿಎಸ್‌ನಲ್ಲಿ (JDS) ಲೀಡರ್‌ಶಿಪ್ ಡಿಎನ್‌ಎ ಮೂಲಕ ಬರುತ್ತದೆ. ಈ ಎರಡೂ ಪಕ್ಷದಲ್ಲೂ ಅನುವಂಶೀಯ ನಾಯಕತ್ವವಿದೆ. ಈ ಎರಡೂ ಪಕ್ಷಗಳಿಗೂ ಪ್ರಜಾಪ್ರಭುತ್ವದ (Democracy) ಮೇಲೆ ನಂಬಿಕೆ ಇಲ್ಲ. ಆದರೆ ಬಿಜೆಪಿಗೆ (BJP) ಪ್ರಜಾಪ್ರಭುತ್ವದ ಮೇಲೆ ನಂಬಿಕೆಯಿದೆ ಎಂದು ಶಾಸಕ ಹಾಗೂ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ (C.T.Ravi) ಹೇಳಿದರು.
ವಿಜಯಪುರ (Vijayapura) ಜಿಲ್ಲೆಯ ನಿಡಗುಂದಿಯಲ್ಲಿ ಸೋಮವಾರ ಬಿಜೆಪಿ ವಿಜಯಸಂಕಲ್ಪ ಯಾತ್ರೆ (Vijaya Sankalpa Yatra) ಕೈಗೊಂಡಿದ್ದು, ಯಾತ್ರೆಗೂ ಮುನ್ನ ಬಿಜೆಪಿ ನಾಯಕರ ಸುದ್ದಿಗೋಷ್ಠಿ ಏರ್ಪಡಿಸಲಾಗಿತ್ತು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಟಿ.ರವಿ, ಬಿಜೆಪಿ ಪಕ್ಷವು ಜನ ಸಾಮಾನ್ಯರ ನೇತೃತ್ವದಿಂದ ಬೆಳೆದು ಬಂದಿದ್ದು, ನೀತಿಗೆ ಅಂಟಿಕೊಂಡಿದೆ. ರಾಜೀವ್ ಗಾಂಧಿ (Rajiv Gandhi) ಇದ್ದ ಸಂದರ್ಭದಲ್ಲಿ ಕಳ್ಳರೆಲ್ಲಾ ಕಾಂಗ್ರೆಸ್ ಪಕ್ಷದಲ್ಲೇ ಇದ್ದರು. ಇದು ರಾಜೀವ್ ಗಾಂಧಿಯವರಿಗೂ ಗೊತ್ತಿತ್ತು. ನಮಗೆ ನಿಯತ್ತಿದೆ. ನಾವು ಅಭಿವೃದ್ಧಿಯ ರಿಪೋರ್ಟ್ ಕಾರ್ಡ್ ಇಟ್ಟುಕೊಂಡು ಮತಗಳನ್ನು ಕೇಳುತ್ತೇವೆ. ಪ್ರಣಾಳಿಕೆಯಲ್ಲಿ ಹೇಳದೇ ಇರುವಂತಹ ಯೋಜನೆಗಳನ್ನು ನಾವು ಕೊಟ್ಟಿದ್ದೇವೆ. ಅಲ್ಲದೇ ಅದರ ಕೆಲಸಗಳನ್ನು ಯಾರಿಗೂ ಹೇಳದೆ ಮಾಡಿ ತೋರಿಸಿದ್ದೇವೆ ಎಂದರು. ಇದನ್ನೂ ಓದಿ: ಚಾರ್ಜ್ ಹಾಕಿದ್ದ ಎಲೆಕ್ಟ್ರಿಕ್ ಬೈಕ್ ಸ್ಫೋಟ
ಇದೇ ವೇಳೆ ಮಾಜಿ ಸಚಿವ ಎಂ.ಬಿ ಪಾಟೀಲ್ (M.B.Patil) ವಿರುದ್ಧ ವಾಗ್ದಾಳಿ ನಡೆಸಿದ ಅವರು, ಈ ಹಿಂದೆ ಕೆರೆ ತುಂಬುವ ಯೋಜನೆಯನ್ನು ನಿಮ್ಮದೇ ಸರ್ಕಾರ ತಿರಸ್ಕಾರ ಮಾಡಿತ್ತು. ಮಲ್ಲಿಕಾರ್ಜುನ ಖರ್ಗೆ (Mallikarjun Kharge) ನೀರಾವರಿ ಸಚಿವರಾಗಿದ್ದಾಗ ಕೆರೆ ತುಂಬುವ ಯೋಜನೆಗೆ ಅನುಮತಿ ನೀಡಿರಲಿಲ್ಲ. ಬಿಜೆಪಿ ಸರ್ಕಾರ ಕೆರೆ ತುಂಬುವ ಯೋಜನೆಯನ್ನು ಜಾರಿಗೆ ತಂದಿದೆ. ಇದೀಗ ನೀವೂ ಅದೇ ಯೋಜನೆಯ ಹೆಸರಿನಲ್ಲಿ ಫೋಟೋ ಹಾಕಿಕೊಳ್ಳುತ್ತೀರಿ ಎಂದು ಹೇಳಿದರು. ಇದನ್ನೂ ಓದಿ: Special- ‘ಆಸ್ಕರ್’ ಪ್ರಶಸ್ತಿ ಪಡೆದ ‘ದಿ ಎಲಿಫೆಂಟ್ ವಿಸ್ಪರರ್ಸ್’ ಕಿರುಚಿತ್ರದ ವಿಶೇಷತೆ ಏನು?
ರಾಜ್ಯದಲ್ಲಿ ಕಾಂಗ್ರೆಸ್ ನಾಯಕರು ಗ್ಯಾರೆಂಟಿ ಕಾರ್ಡ್ ವಿತರಣೆ ಮಾಡುತ್ತಿದ್ದಾರೆ. ಆದರೆ ಕಾಂಗ್ರೆಸ್ ಪಕ್ಷಕ್ಕೆ ದೇಶದಲ್ಲಿ ವಾರೆಂಟ್ ಅವಧಿ ಮುಗಿದಿದೆ. ಇನ್ನು ವಾರೆಂಟಿ ಕಾರ್ಡ್ ನೀಡಿ ಏನು ಪ್ರಯೋಜನ? ಎಲ್ಲಾ ಕಡೆಯೂ ಕಾಂಗ್ರೆಸ್ ಪಕ್ಷ ತಿರಸ್ಕಾರಕ್ಕೆ ಒಳಗಾಗುತ್ತಿದೆ. ಇಷ್ಟಕ್ಕೂ ನೀವು ಕೊಡುತ್ತಿರುವುದು ಫಾಲ್ಸ್ ಕಾರ್ಡ್ ಎಂಬುವುದು ಜನರಿಗೆ ಗೊತ್ತಿದೆ. ನೀವು ಅಧಿಕಾರದಲ್ಲಿ ಇದ್ದ ಸಂದರ್ಭ ಇದನ್ನು ಅನುಷ್ಠಾನಕ್ಕೆ ತಂದಿದ್ದರೆ ಅದೊಂದು ಮಾದರಿಯಾಗುತ್ತಿತ್ತು. ನೀವು ಈ ಗ್ಯಾರೆಂಟಿ ಕಾರ್ಡ್ ಕೊಟ್ಟಿದ್ದರೆ ಅದು ಸತ್ಯದ ಮಾತಾಗುತ್ತಿತ್ತು. ಈ ಫಾಲ್ಸ್ ಕಾರ್ಡ್‌ಗೆ ಮೂರು ಕಾಸಿನ ಕಿಮ್ಮತ್ತು ಕೂಡಾ ಇಲ್ಲ. ಹಾಗಾಗಿ ಫಾಲ್ಸ್ ಕಾರ್ಡ್ ವಿರುದ್ಧ ನಾವು ರಿಪೋರ್ಟ್ ಕಾರ್ಡ್ ಕೊಡುತ್ತೇವೆ. ಕೆಲಸ ಮಾಡಿರುವುದನ್ನು ಜನರ ಮುಂದೆ ಇಟ್ಟು ಮತ ಕೇಳುತ್ತೇವೆ ಎಂದು ಕಿಡಿಕಾರಿದರು. ಇದನ್ನೂ ಓದಿ: `ಕಾಂತಾರ 2’ಗೆ ಚಾಲನೆ ಸಿಗುವ ಮುನ್ನವೇ ಹೊಸ ಸಿನಿಮಾ ನಿರ್ಮಾಣದತ್ತ ರಿಷಬ್ ಶೆಟ್ಟಿ
ಸಿದ್ದರಾಮಯ್ಯ (Siddaramaiah) ಏನು ಹೇಳುತ್ತಾರೋ ಅದು ಉಲ್ಟಾ ಆಗುತ್ತದೆ. ಈ ಹಿಂದೆ ಮೋದಿ ಪ್ರಧಾನಿ ಆಗುವುದಿಲ್ಲ ಎಂದಿದ್ದರು, ಆದರೆ ಮೋದಿ (Narendra Modi) ಪ್ರಧಾನಿಯಾದರು. ಯಡಿಯೂರಪ್ಪ (Yediyurappa) ಸಿಎಂ ಆಗುವುದಿಲ್ಲ ಎಂದರು, ಆದರೆ ಯಡಿಯೂರಪ್ಪ ಸಿಎಂ ಆದರು. ಹೀಗಾಗಿ ಇನ್ನುಮುಂದೆ ಸಿದ್ದರಾಮಯ್ಯನವರು ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದು ಪ್ರಚಾರ ಮಾಡಬೇಕು ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ರಾಜಕೀಯದಿಂದ ದೂರವಿರಲು ಕಾರಣರಾದ ಆ ವ್ಯಕ್ತಿ ಬಗ್ಗೆ ಬಹಿರಂಗಪಡಿಸಿದ ರಜನಿಕಾಂತ್
ಮಂಡ್ಯದಲ್ಲಿ ಉರಿಗೌಡ ನಂಜೇಗೌಡ ಮಹಾದ್ವಾರ ತೆರವು ಮಾಡಿದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಮಹಾದ್ವಾರ ತೆರವು ಮಾಡಿದ್ದು ಅಕ್ಷಮ್ಯ ಅಪರಾಧ. ದೊಡ್ಡ ನಂಜೇಗೌಡ ಹಾಗೂ ಉರಿಗೌಡ ಅವರು ಟಿಪ್ಪುವನ್ನು ಹತ್ಯೆ ಮಾಡಿದರು. ಯಾಕೆ ಹತ್ಯೆ ಮಾಡಿದರು ಎಂಬ ಸತ್ಯ ಹೊರಬರಬೇಕಾಗಿದೆ. ಅವರಿಗೆ ಇತಿಹಾಸದಲ್ಲಿ ಯಾವ ಗೌರವ ಸಿಗಬೇಕಾಗಿತ್ತೋ ಆ ಗೌರವ ಸಿಕ್ಕಿರಲಿಲ್ಲ. ಅವರಿಗೆ ಮತ್ತೆ ಆ ಗೌರವ ಸಿಗಬೇಕು. ಅದಕ್ಕಾಗಿ ಆ ದ್ವಾರ ಹಾಕಿದ್ದು ಸರಿಯಾಗಿದೆ. ಆ ದ್ವಾರವನ್ನು ತೆರವು ಮಾಡಿದ್ದು ತಪ್ಪು. ಜನರ ಮೂಲಕ ಶಾಶ್ವತವಾಗಿ ಆ ದ್ವಾರವನ್ನು ನಿರ್ಮಾಣ ಮಾಡಲು ಬೇಕಾದ ಶಕ್ತಿಯನ್ನು ನಾವು ಮಂಡ್ಯ(Mandya) ಜನರಿಗೆ ನೀಡುತ್ತೇವೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: ದೆಹಲಿ ಶಾಸಕರ ಸಂಬಳ ಭರ್ಜರಿ ಹೆಚ್ಚಳ
ವಿಜಯಪುರ: ಬೆಂಗಳೂರಿನಲ್ಲಿ ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ವಾಗ್ದಾಳಿ ನಡೆಸಿದ್ದಾರೆ.
ಗೃಹ ಸಚಿವರ ಹೇಳಿಕೆ ಅತಿರೇಕದಿಂದ ಕೂಡಿದೆ. ಮತಗಳ ಆಸೆ ಹಾಗೂ ಮತ ಕ್ರೋಢೀಕರಣಕ್ಕಾಗಿ ಹೀಗೆ ಹೇಳಿದ್ದಾರೆ. ಒಂದಾದ ಮೇಲೆ ಒಂದು ವಿವಾದ ಮಾಡುತ್ತಿದ್ದಾರೆ. ಹಿಜಬ್, ಕಾಶ್ಮೀರಿ ಫೈಲ್ಸ್ ವಿಚಾರ, ಜಾತ್ರೆಗಳಲ್ಲಿ ಮುಸ್ಲಿಂ ವರ್ತಕರಿಗೆ ನಿರ್ಬಂಧ, ಹಲಾಲ್, ಆಜಾನ್ ವಿವಾದ ಮಾಡಲಾಗುತ್ತಿದೆ. ಮುಂದೆ ಇದು ಅವರಿಗೇ ತಿರುಗುಬಾಣವಾಗಲಿದೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಕಾಲ ಕಾಲಕ್ಕೆ ಸತ್ಯ ಹೇಳುವ ಟೀಂ ಇಟ್ಕೋಬೇಕು: ಸಿಟಿ ರವಿ ವಾಗ್ದಾಳಿ
ಇದರಿಂದ ರಾಜ್ಯದ ಮೇಲೆ ದುಷ್ಪರಿಣಾಮ ಬೀರಲಿದೆ. ಕೈಗಾರಿಕೆಗಳು, ಕೈಗಾರಿಕಾ ಉದ್ಯಮಿಗಳು ಇಲ್ಲಿ ಬರಲು ಹಿಂಜರಿಯುತ್ತಿದ್ದಾರೆ. ಈ ಕಾರಣದಿಂದ ಇಂಡಸ್ಟ್ರಿಗಳು ಬೆಳೆಯಲ್ಲಾ. ಇಂಥ ವಿವಾದಗಳ ಕಾರಣದಿಂದಲೇ ಹೈದರಾಬಾದ್, ಬೆಳಗಾವಿಗೆ ಕೈಗಾರಿಕೆಗಳು ಹಾಗೂ ಕೈಗಾರಿಕಾ ಉದ್ಯಮಿಗಳು ಹೋಗುತ್ತಿಲ್ಲ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟವಾಗಿದೆ. ಇಂಥ ವಿವಾದಗಳನ್ನು ಸಾಮರಸ್ಯದಿಂದ ಬಗೆಹರಿಸಬೇಕು. ನಮ್ಮ ನಾಡಿನಲ್ಲಿ ಸಂತರು, ಮಹಾತ್ಮರು ನಡೆದಾಡಿದ್ದಾರೆ. ಈ ಎಲ್ಲಾ ವಿವಾದಗಳ ಕುರಿತು ವಿಚಾರ ಮಾಡಬೇಕು. ಕೋಮು ಸೌಹಾರ್ದತೆಯನ್ನು ಕೆಡಿಸುವ ಕೆಲಸ ಮಾಡಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಅಧಿವೇಶನ ಮುಂದೂಡಲು ಸಂಸದರೇ ಮನವಿ ಮಾಡಿದ್ದರು: ಪ್ರಹ್ಲಾದ್ ಜೋಶಿ
ಬದುಕನ್ನು ಕಟ್ಟೋ ಕೆಲಸವಾಗಬೇಕು. ರಾಜ್ಯ ಸರ್ಕಾರದಲ್ಲಿ ಅಭಿವೃದ್ಧಿ ಇಲ್ಲ, ಹಣವಿಲ್ಲ, ಹಸಿದವರಿಗೆ ಅನ್ನ ಇಲ್ಲ. ಇವೆಲ್ಲ ಸಮಸ್ಯೆಗಳನ್ನು ಮುಚ್ಚಿಕೊಳ್ಳೋಕೆ ಹೀಗೆ ಮಾಡುತ್ತಿದ್ದಾರೆ. ಶ್ರೀಲಂಕಾದಂತೆ ಭಾರತ ಆಗಬಾರದು ಎಂದು ಹೇಳಿದ್ದಾರೆ.
ಸರ್ಕಾರ ಸಾಲದ ಸುಳಿಯಲ್ಲಿದೆ. ಐದು ಲಕ್ಷ ಕೋಟಿ ರೂಪಾಯಿ ಸಾಲವಿದೆ. ಎಲ್ಲಾ ಇಲಾಖೆಯಲ್ಲೂ ಶೇ. 40 ರಷ್ಟು ಹುದ್ದೆಗಳು ಖಾಲಿ ಇವೆ. ಅವನ್ನು ಭರ್ತಿ ಮಾಡಿಲ್ಲ. ಜನ ಬೇಸತ್ತಿದ್ದಾರೆ. ಮತಕ್ಕಾಗಿ ಹೀಗೆಲ್ಲಾ ಮಾಡುತ್ತಿದ್ದಾರೆ ಎಂದು ಗೊತ್ತಾಗಿದೆ ಎಂದು ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.