Tag: M.B Patil

  • ಮೇಕೆದಾಟು ಪಾದಯಾತ್ರೆಯಂತೆ ಮಹದಾಯಿ ಪಾದಯಾತ್ರೆ ಮಾಡುತ್ತೇವೆ: ಎಂ.ಬಿ.ಪಾಟೀಲ್

    ಮೇಕೆದಾಟು ಪಾದಯಾತ್ರೆಯಂತೆ ಮಹದಾಯಿ ಪಾದಯಾತ್ರೆ ಮಾಡುತ್ತೇವೆ: ಎಂ.ಬಿ.ಪಾಟೀಲ್

    ಬೆಳಗಾವಿ: ಮೇಕೆದಾಟು ಪಾದಯಾತ್ರೆಯಂತೆಯೇ ಮಹದಾಯಿ ಪಾದಯಾತ್ರೆ ಮಾಡುತ್ತೇವೆ. ಈಗಾಗಲೇ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಈ ಸಂಬಂಧ ನಿಲುವು ತೆಗೆದುಕೊಂಡು ಅಧಿಕೃತ ಹೇಳಿಕೆ ನೀಡಿದ್ದಾರೆ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ಹೇಳಿದರು.

    ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮಹದಾಯಿ ಯೋಜನೆಯು ಹುಬ್ಬಳ್ಳಿ, ಧಾರವಾಡ ಸೇರಿ ನಾಲ್ಕಾರು ಜಿಲ್ಲೆಗಳಿಗೆ ಕುಡಿಯುವ ನೀರಿಗಾಗಿ ಇರುವ ಯೋಜನೆಯಾಗಿದೆ. ಮಹದಾಯಿ ಕಣಿವೆಯಲ್ಲಿ ಸುಮಾರು 200 ಟಿಎಂಸಿ ನೀರು ಸಿಗುತ್ತದೆ. ನಮ್ಮ ಸರಹದ್ದಿನಲ್ಲಿ 50 ರಿಂದ 60 ಟಿಎಂಸಿ ನೀರು ಬರುತ್ತದೆ ಎಂದರು. ಇದನ್ನೂ ಓದಿ: ಬಿಜೆಪಿಯಲ್ಲಿ ಸಂಪುಟ ಸರ್ಜರಿಗೆ ಡೆಡ್‍ಲೈನ್ – ಮಾರ್ಚಲ್ಲ ಈಗ್ಲೇ ವಿಸ್ತರಿಸಿ ಅಂತ ಬಿಗಿಪಟ್ಟು

    ಮಲಪ್ರಭಾ ಡ್ಯಾಮನಲ್ಲಿ ನೀರಿನ ಕೊರತೆ ಇರುವುದರಿಂದ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಕುಡಿಯುವ ನೀರಿನ ಬೇಡಿಕೆ ಇದೆ. ಒಟ್ಟಾರೆ ನಾವು 36 ಟಿಎಂಸಿ ನೀರಿಗಾಗಿ ಬೇಡಿಕೆ ಸಲ್ಲಿಸಿದ್ದೆವು. ಅದರಲ್ಲಿ 7.5 ಟಿಎಂಸಿ ಕುಡಿಯುವ ನೀರಿಗಾಗಿ ಕೇಳಿದ್ದೆವು. ಆದರೆ, ಟ್ರಿಬ್ಯುನಲ್ ನಮಗೆ 3.9 ಟಿಎಂಸಿ ನೀರು ನೀಡಿದೆ. ಅದು ನಮಗೆ ಯಾವುದಕ್ಕೂ ಸಾಲುವುದಿಲ್ಲ ಎಂದು ತಿಳಿಸಿದರು.

    ಖಾನಾಪುರ ಇನ್ ಬೇಸ್ ಬರುತ್ತೆ. ಅಲ್ಲಿ ಒಂದೂವರೆ ಟಿಎಂಸಿ ನೀರು ಸಿಕ್ಕಿದ್ದು, ಇನ್ನೂ ಜಾಸ್ತಿ ಸಿಗಬಹುದು. ಖಾನಾಪುರ ತಾಲೂಕಿಗೆ ಯಾವುದೇ ಕಾನೂನು ಅಡೆತಡೆ ಬರಲ್ಲ. ವಿದ್ಯುತ್ ಉತ್ಪಾದನೆಯಿಂದ ಗೋವಾಗೆ ಏನೂ ಹಾನಿಯಾಗಲ್ಲ. ಕರ್ನಾಟಕಕ್ಕೆ ಕೇವಲ ರಾಜಕೀಯವಾಗಿ ವಿರೋಧ ಮಾಡುತ್ತಿದ್ದಾರೆ. ಕಾಂಗ್ರೆಸ್ ಪಾದಯಾತ್ರೆಗೆ ಸಂಬಂಧಿಸಿದಂತೆ ಅಧಿಕೃತವಾಗಿ ನಮ್ಮ ಕೆಪಿಸಿಸಿ ಕಾರ್ಯಾಧ್ಯಕ್ಷರು, ಅಧ್ಯಕ್ಷರು, ಶಾಸಕಾಂಗ ಪಕ್ಷದ ನಾಯಕರು ಸೇರಿ ನಿರ್ಧಾರ ಮಾಡುತ್ತಾರೆ ಎಂದರು. ಇದನ್ನೂ ಓದಿ: ಆಣೆ ಪ್ರಮಾಣ ಎಷ್ಟರ ಮಟ್ಟಿಗೆ ಸರಿ ಆ ಬಗ್ಗೆ ಗೊತ್ತಿಲ್ಲ : ಸತೀಶ್ ಜಾರಕಿಹೊಳಿ

    ಮಹದಾಯಿ ಯೋಜನೆಗೆ ಗೋವಾ ವಿರೋಧ ವಿಚಾರವಾಗಿ ಮಾತನಾಡಿ, ಗೋವಾದವರು ಕೇವಲ ರಾಜಕೀಯ ಕಾರಣಕ್ಕಾಗಿ ಮಾತ್ರ ವಿರೋಧ ಮಾಡುತ್ತಿದ್ದಾರೆ. ಗೋವಾದವರಿಗೂ ಗೊತ್ತಾಗಿದೆ. ವಿರೋಧ ಮಾಡುವುದರಿಂದ ಯಾವುದೇ ಹುರುಳಿಲ್ಲ ಎಂದು ಮಾತನಾಡಿದರು.

    ಗೋವಾ ವಿಧಾನಸಭೆ ಚುನಾವಣೆ ವೇಳೆ ಮಹದಾಯಿ ಯೋಜನೆ ಪ್ರಸ್ತಾಪ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನಮ್ಮ ರಾಜ್ಯ, ಅವರ ರಾಜ್ಯದ ನಿಲುವುಗಳು ಬೇರೆ ಬೇರೆ ಇರುತ್ತವೆ. ಅದೇ ರೀತಿ ಪಕ್ಷದ ನಿಲುವುಗಳು ಕೂಡ ಬೇರೆ ಇರುತ್ತವೆ. ನೀರಿನ ವಿಚಾರ ಬಂದಾಗ ನಾವು ರಾಜಿಯಾಗುವ ಪ್ರಶ್ನೆಯೇ ಇಲ್ಲ. ಇದಕ್ಕೂ ಚುನಾವಣೆಗೂ ಸಂಬಂಧವಿಲ್ಲ. ಅಲ್ಲಿಯ ಸರ್ಕಾರಗಳು ಅವರ ರಾಜ್ಯದ ನಿಲುವು ಹೇಳುತ್ತವೆ. ಹಾಗೇ ನಮ್ಮ ರಾಜ್ಯದ ನಿಲುವು ತೆಗೆದುಕೊಳ್ಳಲು ನಮಗೆ ಹಕ್ಕು ಇರುತ್ತದೆ. ಆ ದಿಸೆಯಲ್ಲಿ ನಾವು ಯಾವುದೇ ರೀತಿ ರಾಜಿ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಪ್ರೀತಿ ಇದ್ದಲ್ಲಿಗೆ ಹೋಗುತ್ತೇನೆ: ರಮೇಶ್ ಜಾರಕಿಹೊಳಿ

  • ರಾಜ್ಯದಲ್ಲಿ ಮತ್ತೆ ಪ್ರತ್ಯೇಕ ಲಿಂಗಾಯತ ಧರ್ಮಯುದ್ಧ- ಎಂ.ಬಿ.ಪಾಟೀಲ್ ಧರ್ಮ ದಾಳಕ್ಕೆ ಕಾಂಗ್ರೆಸ್ ಮೌನ

    ರಾಜ್ಯದಲ್ಲಿ ಮತ್ತೆ ಪ್ರತ್ಯೇಕ ಲಿಂಗಾಯತ ಧರ್ಮಯುದ್ಧ- ಎಂ.ಬಿ.ಪಾಟೀಲ್ ಧರ್ಮ ದಾಳಕ್ಕೆ ಕಾಂಗ್ರೆಸ್ ಮೌನ

    ಬೆಂಗಳೂರು: ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರಕ್ಕೆ ಕೈಹಾಕಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಕೈಸುಟ್ಟುಕೊಂಡಿತ್ತು. ಆದ್ರೂ ಆ ಪಕ್ಷದ ನಾಯಕರು ಎಚ್ಚೆತ್ತುಕೊಂಡಿಲ್ಲ. ಪಂಚಮಸಾಲಿಗಳು 2ಎ ಮೀಸಲಾತಿಗಳು ಮತ್ತೆ ಹೋರಾಟ ಶುರು ಮಾಡಿರುವ ಸಂದರ್ಭದಲ್ಲಿ, ಅದೇ ಸಮುದಾಯದ ಮಾಜಿ ಮಂತ್ರಿ ಎಂ.ಬಿ.ಪಾಟೀಲ್, ಪ್ರತ್ಯೇಕ ವೀರಶೈವ ಲಿಂಗಾಯತ ಧರ್ಮದ ವಿಚಾರವನ್ನು ಮುನ್ನೆಲೆಗೆ ತಂದಿದ್ದಾರೆ. ಇದು ಪರ ವಿರೋಧ ಚರ್ಚೆಗೆ ಎಡೆ ಮಾಡಿಕೊಟ್ಟಿದೆ.

    ಇತ್ತೀಚಿಗಷ್ಟೇ ಜೈಲಿಂದ ಜಾಮೀನಿನ ಮೇಲೆ ರಿಲೀಸ್ ಆಗಿರೋ ವಿನಯ್ ಕುಲಕರ್ಣಿ, ಎಲ್ಲರೂ ಕೂಡಿ ಪ್ರತ್ಯೇಕ ಧರ್ಮ ಮಾಡಿದ್ರೆ ಒಳ್ಳೆಯದೇ ಎಂದಿದ್ದಾರೆ. ಪ್ರತ್ಯೇಕ ಧರ್ಮದ ಕಾರಣವೊಂದೇ ಕಾಂಗ್ರೆಸ್ ಸೋಲಿಗೆ ಕಾರಣ ಆಗಿರಲಿಲ್ಲ ಅಂತಲೂ ವ್ಯಾಖ್ಯಾನಿಸಿದ್ದಾರೆ. ಈ ವಿಚಾರದಲ್ಲಿ ಸಿದ್ದರಾಮಯ್ಯ ಎಚ್ಚರಿಕೆಯ ನಡೆ ಇಟ್ಟಿದ್ದಾರೆ. ಪ್ರತ್ಯೇಕ ಧರ್ಮದ ವಿಚಾರವಾಗಿ ನನ್ನನ್ನೇನು ಕೇಳಬೇಡಿ. ಎಂಬಿ ಪಾಟೀಲರನ್ನೇ ಕೇಳಿ ಎನ್ನುವ ಮೂಲಕ ಅಂತರ ಕಾಯ್ದುಕೊಂಡಿದ್ದಾರೆ. ಇದನ್ನೂ ಓದಿ: ಉಡುಪಿಯ ವಾರಾಂತ್ಯ ಕರ್ಫ್ಯೂ ಬಗ್ಗೆ ಸಿಎಂ ಪುನರ್ ಪರಿಶೀಲಿಸಲಿ- ಸಚಿವ ಕೋಟ

    ಇತ್ತ ಕಾಂಗ್ರೆಸ್ಸಿಗರ ಧರ್ಮ ದಾಳಕ್ಕೆ ಸಚಿವ ಬಿ.ಸಿ.ಪಾಟೀಲ್ ಕಿಡಿಕಾರಿದ್ದಾರೆ. ಎಂ.ಬಿ.ಪಾಟೀಲ್ ಈಗಾಗಲೇ ಇಂಥ ಪ್ರಯತ್ನ ಮಾಡಿ ‘ಕೈ’ ಸುಟ್ಟುಕೊಂಡಿದ್ದಾರೆ. ಮತ್ತೆನಾದ್ರೂ ಪ್ರಯತ್ನ ಮಾಡಿದ್ರೆ ಸರ್ವನಾಶ ಆಗ್ತಾರೆ ಅಂತಾ ಎಚ್ಚರಿಸಿದ್ದಾರೆ. ಸಚಿವ ನಿರಾಣಿ ಮಾತ್ರ, ಸಮಸ್ತ ಲಿಂಗಾಯತ ಧರ್ಮದ ಬೇಡಿಕೆ ಇದ್ರೆ ಕೇಳಲಿ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ನೀವು ಹೇಳಿದಂತೆಯೇ ಎಲ್ಲವನ್ನೂ ಮಾಡಿದ್ದೀನಿ, ನೀವು ಏನು ಮಾಡಿದ್ರಿ ಹೇಳಿ?: ಸಚಿವ ಗೋಪಾಲಯ್ಯ

  • ಲಿಂಗಾಯತರ ಧೀಮಂತ ನಾಯಕ ಬಿಎಸ್‍ವೈಯನ್ನು ಸಿಎಂ ಸ್ಥಾನದಿಂದ ಇಳಿಸಬೇಡಿ: ಎಂ.ಬಿ ಪಾಟೀಲ್

    ಲಿಂಗಾಯತರ ಧೀಮಂತ ನಾಯಕ ಬಿಎಸ್‍ವೈಯನ್ನು ಸಿಎಂ ಸ್ಥಾನದಿಂದ ಇಳಿಸಬೇಡಿ: ಎಂ.ಬಿ ಪಾಟೀಲ್

    ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಪದಚ್ಯುತಿಗೊಳಿಸಿದರೆ, ಬಿಜೆಪಿ ವರಿಷ್ಠರು ಲಿಂಗಾಯತರ ಅವಕೃಪೆಗೆ ತುತ್ತಾಗುತ್ತಾರೆ ಎಂದು ಮಾಜಿ ಸಚಿವ ಎಂ.ಬಿ ಪಾಟೀಲ್ ಭವಿಷ್ಯ ನುಡಿದಿದ್ದಾರೆ. ಇದನ್ನೂ ಓದಿ :  ಸಿಎಂ ಬದಲಾದರೆ ಪಕ್ಷಕ್ಕೆ ದೊಡ್ಡ ಹೊಡೆತ ಬೀಳುತ್ತದೆ: ರಂಭಾಪುರಿ ಶ್ರೀ

    ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಲಿಂಗಾಯತ ಸಮುದಾಯದ ಧೀಮಂತ ನಾಯಕರು. ಅವರನ್ನು ಪದಚ್ಯುತಿಗೊಳಿಸಿದರೆ, ನಿಶ್ಚಿತವಾಗಿಯೂ ಬಿಜೆಪಿ ವರಿಷ್ಠರು ಲಿಂಗಾಯತರ ಅವಕೃಪೆಗೆ ತುತ್ತಾಗುತ್ತಾರೆ. ಯಡಿಯೂರಪ್ಪನವರ ವಯಸ್ಸು ಮತ್ತು ಕೊಡುಗೆಯನ್ನು ಪರಿಗಣಿಸಿ, ಅವರನ್ನು ಘನತೆ ಮತ್ತು ಮರ್ಯಾದೆಯಿಂದ ನಡೆಸಿಕೊಳ್ಳಬೇಕೆಂಬುದು ನನ್ನ ವೈಯಕ್ತಿಕ ಅನಿಸಿಕೆ ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ :  ಮಂತ್ರಿ ಸ್ಥಾನ ಹೋದರೆ ಗೂಟ ಹೋದ ಹಾಗೆ: ಕೆ.ಎಸ್ ಈಶ್ವರಪ್ಪ

    ರಾಜ್ಯದಲ್ಲಿ ಸಿಎಂ ಬದಲಾವಣೆಯ ಸುದ್ದಿ ಹಲವಾರು ದಿನಗಳಿಂದ ಹರಿದಾಡುತ್ತಿತ್ತು. ಈ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಇದೀಗ ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ. ಈ ಕುರಿತಾಗಿ ಗಣ್ಯರು, ನಾಯಕರು ತಮ್ಮ ಅಭಿಪ್ರಾಯಗಳನ್ನು ಟ್ವೀಟ್ ಮಾಡುತ್ತಿದ್ದಾರೆ. ಇದನ್ನೂ ಓದಿ :  ಈಶ್ವರಪ್ಪ, ಜಗದೀಶ್ ಶೆಟ್ಟರ್ ಎರಡು ಕಣ್ಣುಗಳಿದ್ದಂತೆ: ನಳಿನ್ ಕುಮಾರ್ ಕಟೀಲ್

    ಆಡಿಯೋದಲ್ಲಿ, ಯಾರಿಗೂ ಹೇಳಬೇಡ ಸಚಿವರಾದ ಜಗದೀಶ್ ಶೆಟ್ಟರ್, ಕೆ.ಎಸ್.ಈಶ್ವರಪ್ಪ ಅವರ ಟೀಮ್‍ನ್ನು ತೆಗೆಯುತ್ತೇವೆ. ಹೊಸ ತಂಡವನ್ನು ಕಟ್ಟುತ್ತೇವೆ. ಈಗ ಸದ್ಯಕ್ಕೆ ಯಾರಿಗೂ ಹೇಳಬೇಡ. ದೆಹಲಿಯಿಂದನೇ ಮಾಡುತ್ತಾರೆ. ಏನೂ ಸಮಸ್ಯೆ ಇಲ್ಲ, ಭಯಪಡಬೇಡ, ನಾವಿದ್ದೇವೆ. ಯಾರೇ ಆದ್ರೂ ಎಲ್ಲ ನಮ್ಮ ಕೈಯಲ್ಲೇ ಇರುತ್ತೆ. ಮೂರು ಹೆಸರು ಇದೆ, ಇದರಲ್ಲಿ ಯಾರಾದರೂ ಆಗುವ ಚಾನ್ಸ್ ಇದೆ ಎಂದು ಹೇಳಲಾಗಿದೆ. ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ ಎನ್ನಲಾದ ಆಡಿಯೋ ಇದು ಎಂದು ವೈರಲ್ ಆಗುತ್ತಿದ್ದು, ಆದರೆ ಇದು ನಕಲಿ ಆಡಿಯೋ ಎಂದು ಕಟೀಲ್ ಸ್ಪಷ್ಟಪಡಿಸಿದ್ದಾರೆ. ಅಲ್ಲದೆ ಈ ಬಗ್ಗೆ ತನಿಖೆಗೆ ಕೂಡ ಆಗ್ರಹಿಸಿದ್ದಾರೆ.

  • ಸರ್ಕಾರ ರೋಗಿಗಳ ಸಂಖ್ಯೆಯನ್ನು ಮುಚ್ಚಿಟ್ಟು ಚಿಕಿತ್ಸೆ ಸೌಲಭ್ಯವನ್ನು ಒದಗಿಸದೇ ವಂಚನೆ ಮಾಡುತ್ತಿದೆ : ಎಂ.ಬಿ.ಪಾಟೀಲ

    ಸರ್ಕಾರ ರೋಗಿಗಳ ಸಂಖ್ಯೆಯನ್ನು ಮುಚ್ಚಿಟ್ಟು ಚಿಕಿತ್ಸೆ ಸೌಲಭ್ಯವನ್ನು ಒದಗಿಸದೇ ವಂಚನೆ ಮಾಡುತ್ತಿದೆ : ಎಂ.ಬಿ.ಪಾಟೀಲ

    ಬೆಂಗಳೂರು: ರಾಜ್ಯದಲ್ಲಿ ಕೊರೊನಾ ರೋಗಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದರೂ ಸರಕಾರ ಮೌಖಿಕ ಆದೇಶದ ಮೂಲಕ ತಪಾಸಣೆಗಳನ್ನು ಕಡಿಮೆಗೊಳಿಸಲಾಗಿದೆ. ಕರ್ನಾಟಕದಲ್ಲಿ ರೋಗಿಗಳ ಸಂಖ್ಯೆ ಇಳಿಮುಖವಾಗಿದೆ ಎಂದು ಅಂಕಿ ಅಂಶಗಳ ತೋರಿಸುವ ಮೂಲಕ ರಾಜ್ಯದ ಜನತೆಯ ಆರೋಗ್ಯದ ಸ್ಥಿತಿಯನ್ನು ತೀರ ಗಂಭೀರವಾಗಿಸುವತ್ತ ಸರ್ಕಾರ ಮುನ್ನಡೆದಿದೆ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ ಆರೋಪಿಸಿದ್ದಾರೆ.

    ಈ ಕುರಿತು ಹೇಳಿಕೆ ನೀಡಿರುವ ಅವರು ಕರ್ನಾಟಕದಲ್ಲಿ ರಾಜಧಾನಿ ಬೆಂಗಳೂರು ನಗರದಲ್ಲಿ ಅತೀ ಹೆಚ್ಚು ಪ್ರಕರಣಗಳು ದಾಖಲಾಗುತ್ತಿರುವುದರಿಂದ ಬಿ.ಬಿ.ಎಂ.ಪಿ ವ್ಯಾಪ್ತಿಯಲ್ಲಿ ಕಳೆದ ವಾರದಿಂದ ತಪಾಸಣೆಗಳನ್ನು ಅತೀ ಕನಿಷ್ಠಗೊಳಿಸಲಾಗಿದೆ. ಇದರಿಂದ ಪಾಸಿಟಿವ್ ರೋಗಿಗಳ ಸಂಖ್ಯೆ ಸ್ವಾಬಾವಿಕವಾಗಿ ಇಳಿಮುಖವಾಗುತ್ತದೆ. ಇದೇ ಪ್ರಯೋಗವನ್ನು ರಾಜ್ಯಾದ್ಯಂತ ಮಾಡಲು ಹೊರಟಿರುವ ರಾಜ್ಯ ಸರಕಾರ, ಇಂದಿನಿಂದ ರಾಜ್ಯದ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ಕೇವಲ 10 ಆರ್.ಟಿ.ಪಿ.ಸಿ.ಆರ್ ತಪಾಸಣೆಗೆ ಸೀಮಿತಗೊಳಿಸಿ ಮಾತ್ರ ಮೌಖಿಕ ಆದೇಶ ಹೊರಡಿಸಿದೆ.

    ಉದಾಹರಣೆಗೆ ವಿಜಯಪುರ ಜಿಲ್ಲೆಯಲ್ಲಿ ಪೆಭ್ರುವರಿಯಿಂದ ಇಲ್ಲಿಯವರಗೆ ಪ್ರತಿನಿತ್ಯ 4000 ತಪಾಸಣೆಗಳನ್ನು ಮಾಡಲಾಗುತ್ತಿತ್ತು, ಇದೀಗ ಜಿಲ್ಲೆಯಲ್ಲಿ 1660 ಆರ್.ಟಿ.ಪಿ.ಸಿ.ಆರ್ ಟೆಸ್ಟ್ ಗಳಿಗೆ ಗರಿಷ್ಠ ಅವಕಾಶ ನೀಡಲಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಕೂಡಾ ಪ್ರತಿನಿತ್ಯ 6000 ಆರ್.ಟಿ.ಪಿ.ಸಿ.ಆರ್  ಟೆಸ್ಟ್‌ಗಳನ್ನು 2500ಕ್ಕೆ ಇಳಿಸಲಾಗಿದೆ. ಇದರಿಂದ ರೋಗಿಗಳ ಸಂಖ್ಯೆ ಇಳಿಮುಖವಾಗಿದೆ ಎಂದು ತೋರಿಸುವ ಸರ್ಕಾರ ನಿಜವಾದ ರೋಗಿಗಳ ಸಂಖ್ಯೆಯನ್ನು ಮುಚ್ಚಿಟ್ಟು ರೋಗಿಗಳಿಗೆ ಚಿಕಿತ್ಸೆ ಸೌಲಭ್ಯವನ್ನು ಒದಗಿಸದೇ ವಂಚನೆ ಮಾಡುತ್ತಿರುವುದು ಅತ್ಯಂತ ಅಮಾನವೀಯ ಕೃತ್ಯ ಎಂದು ಎಂ.ಬಿ.ಪಾಟೀಲ ತಿಳಿಸಿದ್ದಾರೆ.

    ಮಹಾನಗರ, ನಗರ, ಪಟ್ಟಣಗಳಲ್ಲಿ ಹೆಚ್ಚಾಗಿದ್ದ ಕೊರೊನಾ ಗ್ರಾಮಾಂತರ ಪ್ರದೇಶಕ್ಕೂ ವ್ಯಾಪಿಸಿದ್ದು, ಅತೀ ಕಡಿಮೆ ಜನಸಾಂದ್ರತೆ ಹೊಂದಿರುವ ಮಲೆನಾಡಿನ ಹಳ್ಳಿಗಳಲ್ಲಿಯೂ ಇದು ವ್ಯಾಪಕವಾಗಿ ಹಬ್ಬುತ್ತಿದೆ. ಉತ್ತರಕನ್ನಡ ಜಿಲ್ಲೆಯಲ್ಲಿ ಇದರ ಹರಡುವಿಕೆಯನ್ನು ಗಮನಿಸಿದರೆ ಈ ರೋಗದ ಭೀಕರತೆ ತಿಳಿಯುತ್ತದೆ.

    ಇಂತಹ ಸ್ಥಿತಿಯಲ್ಲಿ ಸರಕಾರ ಹೆಚ್ಚೆಚ್ಚು ಆರ್.ಟಿ.ಪಿ.ಸಿ.ಆರ್.  ಟೆಸ್ಟ್‌ಗಳನ್ನು ಮಾಡಿ, ಅಗತ್ಯವಿರುವ ರೋಗಿಗಳಿಗೆ ಚಿಕಿತ್ಸೆ ಸೌಲಭ್ಯ, ಔಷಧಿ ಒದಗಿಸಲು ಮುಂದಾಗಬೇಕು ಅದನ್ನು ಬಿಟ್ಟು ವಾಮ ಮಾರ್ಗದ ಮೂಲಕ ರೋಗಿಗಳ ಸಂಖ್ಯೆ ಇಳಿಕೆಯಗಿದೆ ಎಂದು ತೋರಿಸುವ ಮೂಲಕ ಮಾಡಿದೆ ಎಂದು ರಾಜ್ಯದ ಜನತೆಯನ್ನು ಮತ್ತಷ್ಟು ಪ್ರಪಾತಕ್ಕೆ ದೂಡುವ ಕಾರ್ಯ ಇದಾಗಿದೆ ಎಂದು ಎಂ.ಬಿ.ಪಾಟೀಲ ತಿಳಿಸಿದ್ದಾರೆ.

  • ಪೇಜಾವರಶ್ರೀ ಭೇಟಿ ರದ್ದುಗೊಳಿಸಿದ ಸಿದ್ದು- ಎಂ.ಬಿ ಪಾಟೀಲ್ ಸ್ಪಷ್ಟನೆ

    ಪೇಜಾವರಶ್ರೀ ಭೇಟಿ ರದ್ದುಗೊಳಿಸಿದ ಸಿದ್ದು- ಎಂ.ಬಿ ಪಾಟೀಲ್ ಸ್ಪಷ್ಟನೆ

    ಉಡುಪಿ: ಸೋಮವಾರ ಮಾಜಿ ಸಿಎಂ ಸಿದ್ದರಾಮಯ್ಯ ಮಣಿಪಾಲ ಆಸ್ಪತ್ರೆಗೆ ಭೇಟಿ ನೀಡಿ ಪೇಜಾವರ ಶ್ರೀಗಳ ಆರೋಗ್ಯ ವಿಚಾರಿಸಬೇಕಿತ್ತು. ಆದರೆ ಕೊನೆಯ ಕ್ಷಣದಲ್ಲಿ ಕಾರ್ಯಕ್ರಮ ರದ್ದುಗೊಳಿಸಿದರು.

    ಮಂಗಳೂರು ಪ್ರವಾಸದಿಂದ ಬೆಂಗಳೂರಿಗೆ ವಾಪಾಸ್ ಹೋದ ಸಿದ್ದರಾಮಯ್ಯ ನಡೆಗೆ ಮಾಜಿ ಸಚಿವ ಎಂ.ಬಿ ಪಾಟೀಲ್ ಸ್ಪಷ್ಟನೆ ನೀಡಿದ್ದಾರೆ. ಉಡುಪಿಗೆ ಬರಲು ಸಿದ್ದರಾಮಯ್ಯ ಪ್ಲ್ಯಾನ್ ಹಾಕಿಕೊಂಡಿದ್ದರು. ಮಂಗಳೂರು ಪ್ರವಾಸದಲ್ಲಿ ಅವರು ಸಂಪೂರ್ಣ ಬಳಲಿ ಹೋದರು. ಅವರ ದೇಹಕ್ಕೆ ಸ್ಟಂಟ್ ಅಳವಡಿಸಲಾಗಿದೆ. ಎರಡು ಮೂರು ದಿನದಲ್ಲಿ ಇನ್ನೊಮ್ಮೆ ಉಡುಪಿಗೆ ಬರುತ್ತಾರೆ ಎಂದು ಹೇಳಿದರು.

    ಹೆಲಿಕಾಪ್ಟರ್, ವಿಶೇಷ ವಿಮಾನ ಮೂಲಕ ಬರುತ್ತಾರೆ. ದಯವಿಟ್ಟು ಯಾರೂ ಸಣ್ಣತನದ ಆಲೋಚನೆ ಮಾಡಬೇಡಿ ಎಂದು ಮಾಧ್ಯಮದ ಮೇಲೆ ಗರಂ ಆದರು. ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಕೃಷ್ಣ ಮಠಕ್ಕೆ ಭೇಟಿ ನೀಡದೇ ಇರುವುದು ಸಾಕಷ್ಟು ವಿವಾದಕ್ಕೂ ಕಾರಣವಾಗಿತ್ತು. ಈ ಘಟನೆಯನ್ನು ಹಿಂದಿನ ಬೆಳವಣಿಗೆಗಳ ಜೊತೆ ತಳುಕು ಹಾಕಬೇಡಿ ಎಂದು ಹೇಳಿದರು.

  • ಬಿಎಸ್‍ವೈ ಸರ್ಕಾರ ಪಾಪದ ಕೂಸು ಹೆಚ್ಚು ದಿನ ಉಳಿಯಲ್ಲ: ಎಂಬಿಪಿ

    ಬಿಎಸ್‍ವೈ ಸರ್ಕಾರ ಪಾಪದ ಕೂಸು ಹೆಚ್ಚು ದಿನ ಉಳಿಯಲ್ಲ: ಎಂಬಿಪಿ

    ವಿಜಯಪುರ: ನೂತನವಾಗಿ ಅಧಿಕಾರ ಸ್ವೀಕರಿಸಿರುವ ಬಿಎಸ್ ಯಡಿಯೂರಪ್ಪ ಅವರ ಸರ್ಕಾರ ಪಾಪದ ಕೂಸು. ಇದು ಹೆಚ್ಚು ದಿನ ಉಳಿಯಲ್ಲ ಎಂದು ಮಾಜಿ ಸಚಿವ ಎಂ.ಬಿ ಪಾಟೀಲ್ ಅವರು ಬಿಎಸ್‍ವೈ ವಿರುದ್ಧ ಗುಡುಗಿದ್ದಾರೆ.

    ಅಂತರಾಷ್ಟ್ರೀಯ ಮ್ಯಾರಥಾನ್‍ಗೆ ಎಂ.ಬಿ ಪಾಟೀಲ್ ಅವರು ವಿಜಯಪುರದ ಗೋಲಗುಂಬಜ್‍ನಲ್ಲಿ ಚಾಲನೆ ನೀಡಿದರು. ಅಲ್ಲದೆ ತಾವು ಕೂಡ 3 ಕಿ.ಮೀನ ಆಫ್ ಮ್ಯಾರಥಾನಲ್ಲಿ ಓಡಿ ಕ್ರೀಡಾಪಟುಗಳಿಗೆ ಹುರಿದುಂಬಿಸಿದರು. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಿಎಸ್‍ವೈ ಸರ್ಕಾರ ಪಾಪದ ಕೂಸು. ಅವರಿಗೆ ಸಿಎಂ ಆಗುವ ಅರ್ಜೆನ್ಸಿ ಇತ್ತು. ಆದರೆ ಸಚಿವ ಸಂಪುಟ ವಿಸ್ತರಣೆ ಮಾಡುವ ಬಗ್ಗೆ ಸಿಎಂ ಅವರಿಗೆ ಆಸಕ್ತಿ ಇಲ್ಲ. ಅವರು ಒನ್ ಮ್ಯಾನ್ ಶೋ ಮಾಡುವ ಚಿಂತನೆ ಮಾಡಿದ್ದಾರೆ ಎಂದು ಕಿಡಿಕಾರಿದರು.

    ಇದೊಂದು ಅನೈತಿಕ ಸರ್ಕಾರ. ಈ ಸರ್ಕಾರ ಬಹಳ ದಿನ ಉಳಿಯುವುದಿಲ್ಲ. ಸಿಎಂ ಅವರು ಒಕ್ಕಲಿಗರ ಟಾರ್ಗೆಟ್ ಮಾಡುತ್ತಿದ್ದಾರೆಂಬ ವಿಚಾರಕ್ಕೆ ಪ್ರತಿಕ್ರಿಯಿಸಿ, ರಾಜ್ಯದಲ್ಲಿ ಹೊಸ ಸರ್ಕಾರ ಬಂದಿದೆ. ಹೀಗಾಗಿ ಬಿಎಸ್‍ವೈ ಅವರಿಗೆ ಹೊಸ ಹುರುಪು ಇದೆ. ನಾವು ದ್ವೇಷದ ರಾಜಕಾರಣ ಮಾಡುವುದಿಲ್ಲ ಎಂದ ಬಿಜೆಪಿಯೇ ಈಗ ಸಂಪೂರ್ಣ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಟಿಪ್ಪು ಜಯಂತಿಯನ್ನು ರದ್ದು ಮಾಡಿರುವುದು ಇದಕ್ಕೆ ಉದಾಹರಣೆಯಾಗಿದೆ. ಇದು ಶೋಭೆ ತರುವುದಿಲ್ಲ. ಆಡಳಿತದಲ್ಲಿ ಜಾತಿ ಮುಖ್ಯವಲ್ಲ, ಆಡಳಿತಕ್ಕೆ ಒಳ್ಳೆಯ, ನಿಷ್ಠಾವಂತ ಅಧಿಕಾರಿಗಳು ಮುಖ್ಯವಾಗಿರುತ್ತಾರೆ ಎಂದು ಹರಿಹಾಯ್ದರು.

    ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಬಿಜೆಪಿ ಸರ್ಕಾರ ಹೇಗೆ ಆಡಳಿತಕ್ಕೆ ಬಂದಿದೆ ಎಂದು ಜನರಿಗೆ ತಿಳಿದಿದೆ. ಇದು ಅವರ ಷಡ್ಯಂತ್ರ, ಪ್ರಜಾಪ್ರಭುತ್ವದ ಕಗ್ಗೊಲೆ ಎನ್ನುವ ವಿಚಾರ ಇಡೀ ರಾಜ್ಯಕ್ಕೆ ತಿಳಿದಿದೆ. ಈ ಅನೈತಿಕತೆ ಈಗ ಬೆಳಕಿಗೆ ಬಂದಿದೆ ಎಂದು ವ್ಯಂಗ್ಯವಾಡಿದರು.

    ವೃಕ್ಷೋತ್ಥಾನ ಸಂಸ್ಥೆ ಅಡಿಯಲ್ಲಿ ಅಂತರಾಷ್ಟ್ರೀಯ ಮ್ಯಾರಥಾನ್ ಸ್ಪರ್ಧೆ ನಡೆಯುತ್ತಿದೆ. ಈ ಮ್ಯಾರಥಾನ್ ಯಶಸ್ವಿ ನಾಲ್ಕನೇ ವರ್ಷ ಪೂರೈಸಿದ್ದು, ಇದರ ಬ್ರ್ಯಾಂಡ್ ಅಂಬಾಸಿಡಾರ್ ಆಗಿರುವ ಚಿತ್ರ ನಟ ಯಶ್ ಕಾರಣಾಂತರಗಳಿಂದ ಈ ಬಾರಿ ಗೈರಾಗಿದ್ದರು. ಯಶ್ ಕೆಜಿಎಫ್ ಚಿತ್ರದ ಶೂಟಿಂಗ್‍ನಲ್ಲಿ ಬ್ಯುಸಿಯಿರುವ ಕಾರಣಕ್ಕೆ ಮ್ಯಾರಥಾನ್‍ನಲ್ಲಿ ಪಾಲ್ಗೊಳ್ಳಲಾಗಲಿಲ್ಲ ಎಂದು ಎಂಬಿ ಪಾಟೀಲ್ ಮಾಧ್ಯಮಗಳಿಗೆ ಸ್ಪಷ್ಟಪಡಿಸಿದರು.

  • ಪೇಜಾವರ ಶ್ರೀಗಳ ವಿರುದ್ಧ ಗುಡುಗಿದ ಎಂಬಿ ಪಾಟೀಲ್

    ಪೇಜಾವರ ಶ್ರೀಗಳ ವಿರುದ್ಧ ಗುಡುಗಿದ ಎಂಬಿ ಪಾಟೀಲ್

    ವಿಜಯಪುರ: ಪೇಜಾವರ ಮಠಾಧೀಶ ವಿಶ್ವೇಶತೀರ್ಥ ಸ್ವಾಮೀಜಿ ವಿರುದ್ಧ ಮಾಜಿ ಸಚಿವ ಎಂ.ಬಿ ಪಾಟೀಲ್ ಅವರು ಮತ್ತೆ ಗುಡುಗಿದ್ದಾರೆ.

    ನಗರದಲ್ಲಿ ಮಾತನಾಡಿದ ಮಾಜಿ ಸಚಿವರು, ನಮ್ಮಲ್ಲಿ ಹುಳುಕುಗಳು ಇದ್ದರೆ ಪೇಜಾವರಶ್ರೀ ತೆಗೆಯಲಿ. ನಮ್ಮನ್ನು ಪದೇ ಪದೇ ಕೆದುಕುತ್ತಿದ್ದಾರೆ. ಅವರ ವಯಸ್ಸು ಹಾಗೂ ಹಿರಿತನಕ್ಕೆ ಇದು ಸರಿಯಲ್ಲ. ಹೀಗೆ ಮುಂದುವರಿದರೆ ಧಕ್ಕೆ ಆಗುತ್ತದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

    ನಮ್ಮ ಆತ್ಮಸಾಕ್ಷಿ ಶ್ರೇಷ್ಠವಾಗಿದೆ. ಪೇಜಾವರ ಸ್ವಾಮೀಜಿ ಸವಾಲನ್ನು ಬದ್ಧತೆಯಿಂದ ಸ್ವೀಕರಿಸುತ್ತೇವೆ. ಅವರು ಧೈರ್ಯದ ಬಗ್ಗೆ ಮಾತನಾಡಿದ್ದಾರೆ. ಆ ರೀತಿ ಮಾತನಾಡಬಾರದು. ಬಸವಧರ್ಮದ ಬಗ್ಗೆ ನಮಗಿರುವ ಹೆಮ್ಮೆ, ನಂಬಿಕೆಯನ್ನು ಪೇಜಾವರ ಸ್ವಾಮೀಜಿ ಮುಂದಿಡುತ್ತೇವೆ. ಈ ಮೂಲಕ ಅವರನ್ನು ಕೂಡ ಬಸವ ಧರ್ಮದ ಕಡೆಗೆ ಸೆಳೆದುಕೊಳ್ಳುತ್ತೇವೆ. ಅವರು ಬಸವ ಧರ್ಮವನ್ನು ಒಪ್ಪಿಕೊಳ್ಳುತ್ತಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.

    ಪೇಜಾವರ ಸ್ವಾಮೀಜಿಗಳಿಗೆ ಒಂದು ಕನಿಷ್ಠ ಅರಿವು ಇರಬೇಕಿತ್ತು. ಹಿಂದೂ ಎನ್ನುವುದು ಧರ್ಮವಲ್ಲ. ಅದೊಂದು ಸನ್ಮಾರ್ಗ. ಪ್ರಧಾನಿ ನರೇಂದ್ರ ಮೋದಿ ಅವರು ಈ ಬಗ್ಗೆ ಹೇಳಿದ್ದಾರೆ. ಅದನ್ನು ಪೇಜಾವರ ಶ್ರೀ ತಿಳಿದುಕೊಳ್ಳಬೇಕು. ಅದನ್ನು ಬಿಟ್ಟು ಪ್ರಧಾನಿಯಂತೆ ವರ್ತಿಸುವುದು ಸರಿಯಲ್ಲ ಎಂದು ಕಿಡಿಕಾರಿದರು.

    ಕಳೆದ ತಿಂಗಳು ವೀರಶೈವ ಮತ್ತು ಲಿಂಗಾಯತ ಹಿಂದೂ ಧರ್ಮದ ಅಂಗ ಎಂದು ಪೇಜಾವರ ಶ್ರೀಗಳು ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಎಂಬಿ ಪಾಟೀಲ್, ನಮ್ಮ ಸಮಾಜಕ್ಕೆ ಸಂಬಂಧಿಸಿದ ವಿಷಯದಲ್ಲಿ ಲಿಂಗಾಯತ ಮುಖಂಡರು, ಸ್ವಾಮೀಜಿಗಳು ನಿರ್ಧಾರ ಮಾಡುತ್ತಾರೆ. ಇದರಲ್ಲಿ ಪೇಜಾವರ ಶ್ರೀಗಳು ಹಸ್ತಕ್ಷೇಪ ಮಾಡುವ ಅವಶ್ಯಕತೆ ಇಲ್ಲ ಎಂದು ಹೇಳುವ ಮೂಲಕ ತಿರುಗೇಟು ನೀಡಿದ್ದರು.

    ಈ ವಿಚಾರ ಸಂಬಂಧ ಮೈಸೂರಿನಲ್ಲಿ ಶುಕ್ರವಾರ ಮಾತನಾಡಿದ್ದ ಪೇಜಾವರ ಸ್ವಾಮೀಜಿ, ಎಂ.ಬಿ.ಪಾಟೀಲ್ ಅವರು ದಲಿತರನ್ನು ಮಠಾಧೀಶರನ್ನಾಗಿ ಮಾಡುತ್ತಾರಾ? ಅವರವರ ಧರ್ಮದ ಬಗ್ಗೆ ಆಯ್ಕೆ ಮಾಡಿಕೊಳ್ಳುವ ಸ್ವಾತಂತ್ರ್ಯ ಅವರವರಿಗೆ ಇದೆ. ನೀವು ಹಿಂದೂಗಳು, ನಮ್ಮನ್ನು ಬಿಟ್ಟು ಹೋಗಬೇಡಿ ಎಂದು ಸಲಹೆ ನೀಡಿದ್ದೇನೆ ಅಷ್ಟೇ. ಎಂ.ಬಿ.ಪಾಟೀಲ್ ಅವರ ಆರೋಪಕ್ಕೆ ಯಾವುದೇ ಅರ್ಥವಿಲ್ಲ ಎಂದು ಹೇಳಿದ್ದರು.

    ಎಂ.ಬಿ.ಪಾಟೀಲ್ ಅವರ ಉದ್ವೇಗ, ಆಕ್ರೋಶ ಸರಿಯಲ್ಲ. ನಾನು ಲಿಂಗಾಯತ ಮತವನ್ನು ಸರಿಪಡಿಸಲು ಹೋಗುತ್ತಿಲ್ಲ, ಅವರಲ್ಲಿರುವ ಹುಳುಕು ಹೇಳಿಲ್ಲ, ದೋಷಾರೋಪ ಮಾಡಿಲ್ಲ. ಸ್ನೇಹದಿಂದ ಸಹೋದರತ್ವದಿಂದ ನಮ್ಮಲ್ಲೇ ಇರಿ ಎಂದು ಹೇಳುತ್ತಿದ್ದೇನೆ. ನಾನು ಸೌಜನ್ಯದಿಂದ ಕೇಳಿದರೆ ಅವರು ಅಷ್ಟೊಂದು ಆಕ್ರೋಶಭರಿತವಾಗಿ ಹೇಳಲು ಕಾರಣವೇನು ಎಂದು ಪ್ರಶ್ನಿಸಿದ್ದರು.

    ಬಸವಣ್ಣನವರ ಬಗ್ಗೆ ನನಗೆ ಅಪಾರ ಗೌರವವಿದೆ. ಅವರ ಬಗ್ಗೆ ಯಾವುದೇ ಆರೋಪ ಮಾಡಿಲ್ಲ. ಧರ್ಮದ ಕುರಿತಾಗಿಯೂ ಯಾವುದೇ ದೋಷಾರೋಪ ಮಾಡಿಲ್ಲ. ಅವರಿಗೆ ಧೈರ್ಯವಿದ್ದರೆ ಬಹಿರಂಗ ಚರ್ಚೆಗೆ ಬರಲಿ ನಾನು ಸಿದ್ಧನಿದ್ದೇನೆ. ಇಂತಹ ಭಿನ್ನಾಪ್ರಾಯಗಳಿಗೆ ಸಂವಾದ ನಡೆಸುವುದು ಸೂಕ್ತ ಎಂದು ತಿಳಿಸಿದ್ದರು.

  • ಎಂಬಿಪಿ ದಲಿತರನ್ನ ಮಠಾಧೀಶರನ್ನಾಗಿ ಮಾಡುತ್ತಾರಾ: ಪೇಜಾವರ ಶ್ರೀ ಮರುಪ್ರಶ್ನೆ

    ಎಂಬಿಪಿ ದಲಿತರನ್ನ ಮಠಾಧೀಶರನ್ನಾಗಿ ಮಾಡುತ್ತಾರಾ: ಪೇಜಾವರ ಶ್ರೀ ಮರುಪ್ರಶ್ನೆ

    – ಮಾಜಿ ಸಚಿವರ ಉದ್ವೇಗ, ಆಕ್ರೋಶ ಸರಿಯಲ್ಲ

    ಮೈಸೂರು: ದಲಿತರನ್ನು ಮಠಾಧೀಶರನ್ನಾಗಿ ಮಾಡುತ್ತಾರಾ ಎಂಬ ಮಾಜಿ ಸಚಿವ ಎಂ.ಬಿ.ಪಾಟೀಲ್ ಪ್ರಶ್ನೆಗೆ ಪೇಜಾವರ ಶ್ರೀಗಳು ಮರು ಪ್ರಶ್ನೆ ಹಾಕಿದ್ದಾರೆ.

    ನಗರದಲ್ಲಿ ಮಾತನಾಡಿದ ಅವರು, ಅದನ್ನು ಮಾಜಿ ಸಚಿವರು ಮಾಡುತ್ತಾರಾ? ಅವರವರ ಧರ್ಮದ ಬಗ್ಗೆ ಆಯ್ಕೆ ಮಾಡಿಕೊಳ್ಳುವ ಸ್ವಾತಂತ್ರ್ಯ ಅವರವರಿಗೆ ಇದೆ. ನೀವು ಹಿಂದೂಗಳು, ನಮ್ಮನ್ನು ಬಿಟ್ಟುಹೋಗಬೇಡಿ ಎಂದು ಸಲಹೆ ನೀಡಿದ್ದೇನೆ ಅಷ್ಟೇ. ಎಂ.ಬಿ.ಪಾಟೀಲ್ ಅವರ ಆರೋಪಕ್ಕೆ ಯಾವುದೇ ಅರ್ಥವಿಲ್ಲ ಎಂದು ಹೇಳಿದರು.

    ಎಂ.ಬಿ.ಪಾಟೀಲ್ ಅವರ ಉದ್ವೇಗ, ಆಕ್ರೋಶ ಸರಿಯಲ್ಲ. ನಾನು ಲಿಂಗಾಯತ ಮತವನ್ನು ಸರಿಪಡಿಸಲು ಹೋಗುತ್ತಿಲ್ಲ, ಅವರಲ್ಲಿ ಹುಳುಕು ಹೇಳಿಲ್ಲ, ದೋಷಾರೋಪ ಮಾಡಿಲ್ಲ. ಸ್ನೇಹದಿಂದ ಸಹೋದರತ್ವದಿಂದ ನಮ್ಮಲ್ಲೇ ಇರಿ ಎಂದು ಹೇಳುತ್ತಿದ್ದೇನೆ. ನಾನು ಸೌಜನ್ಯದಿಂದ ಕೇಳಿದರೆ ಅವರು ಅಷ್ಟೊಂದು ಆಕ್ರೋಶ ಬರಿತವಾಗಿ ಹೇಳಲು ಕಾರಣವೇನು ಎಂದು ಪ್ರಶ್ನಿಸಿದರು.

    ಬಸವಣ್ಣನವರ ಬಗ್ಗೆ ನನಗೆ ಬಹಳ ಗೌರವವಿದೆ. ಅವರ ಬಗ್ಗೆ ಯಾವುದೇ ಆರೋಪ ಮಾಡಿಲ್ಲ. ಧರ್ಮದ ಕುರಿತಾಗಿಯೂ ಯಾವುದೇ ದೋಷಾರೋಪ ಮಾಡಿಲ್ಲ. ಅವರು ಬಹಿರಂಗ ಚರ್ಚೆಗೆ ಬರಲಿ ನಾನು ಸಿದ್ಧನಿದ್ದೇನೆ ಎಂದು ಸ್ಪಷ್ಟನೆ ನೀಡಿದರು.

  • ಶೋಭಕ್ಕ ಸ್ವಲ್ಪ ತಾಳ್ಮೆಯಿಂದ ವರ್ತಿಸಲಿ: ಎಂಬಿಪಿ ಕಿವಿ ಮಾತು

    ಶೋಭಕ್ಕ ಸ್ವಲ್ಪ ತಾಳ್ಮೆಯಿಂದ ವರ್ತಿಸಲಿ: ಎಂಬಿಪಿ ಕಿವಿ ಮಾತು

    ಮೈಸೂರು: ಸಂಸದೆ ಶೋಭಕ್ಕ ಸ್ವಲ್ಪ ತಾಳ್ಮೆಯಿಂದ ವರ್ತಿಸಲಿ. ನಾವು ಬಿಜಾಪುರದವರು ನಮ್ಮ ಬಾಯಲ್ಲಿ ಬೇರೆ ಪದಗಳು ಬರುತ್ತೆ. ಆದರೆ ಅವರು ಹೆಣ್ಣುಮಗಳು ಅಂತ ನಾನು ಯಾವ ಪದಗಳನ್ನು ಪ್ರಯೋಗಿಸುತ್ತಿಲ್ಲ ಎಂದು ಸಂಸದೆ ಶೋಭ ಕರಂದ್ಲಾಜೆಗೆ ಗೃಹಸಚಿವ ಎಂ.ಬಿ.ಪಾಟೀಲ್ ತಿರುಗೇಟು ನೀಡಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಗೃಹ ಸಚಿವರಿಗೆ ಕಾನೂನಿನ ಜ್ಞಾನವೇ ಇಲ್ಲ ಎಂಬ ಶೋಭಾ ಕರಂದ್ಲಾಜೆ ಹೇಳಿಗೆ ತಿರುಗೇಟು ನೀಡಿದರು. ಬಳಿಕ ಜಿಂದಾಲ್ ಬಗ್ಗೆ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ಶೋಭಾ ಕರಂದ್ಲಾಜೆಯಂತಹ ಹೆಣ್ಣು ಮಕ್ಕಳ ಬಾಯಲ್ಲಿ ಅಂತ ಪದ ಬರಬಾರದು. ಅವರ ಹಿನ್ನೆಲೆ, ಸಂಸ್ಕಾರ, ಸಂಸ್ಕೃತಿ ಜನರಿಗೆ ಗೊತ್ತಿದೆ. ಅದೆ ನಮ್ಮ ಸಂಸ್ಕಾರ ಹಾಗೂ ಸಂಸ್ಕೃತಿಯು ಜನರಿಗೆ ಗೊತ್ತಿದೆ. ಜಿಂದಾಲ್ ವಿಚಾರಕ್ಕೆ ಸಂಬಂಧಿಸಿದಂತೆ ಒಂದು ಸಮಿತಿಯನ್ನು ರಚನೆ ಮಾಡಲಾಗಿದೆ. ತಕರಾರಿದ್ದರೆ ಕಮಿಟಿ ಮುಂದೆ ಹೋಗಲಿ. ಅದನ್ನು ಬಿಟ್ಟು ಬಾಯಿಗೆ ಬಂದಂತೆ ಮಾತನಾಡೋದು ಸರಿಯಲ್ಲ ಎಂದು ಕಿಡಿಕಾರಿದರು.

    ಐಎಂಎ ವಂಚನೆ ಪ್ರಕರಣದ ಬಗ್ಗೆ ಮಾತನಾಡಿ, ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರು ಕ್ಷಮಿಸುವ ಪ್ರಶ್ನೆಯೇ ಇಲ್ಲ. ಅವರು ಸಚಿವರಾಗಿದ್ದರು ಸರಿ, ಶಾಸಕರಾಗಿದ್ದರು ಸರಿ. ನಮ್ಮ ಇಲಾಖೆ ಪೊಲೀಸರ ಮೇಲೆ ನನಗೆ ನಂಬಿಕೆ ಇದೆ. ಎಸ್.ಐ.ಟಿ. ಇದನ್ನ ಸಮರ್ಪಕವಾಗಿ ನಿಭಾಯಿಸಲಿದೆ. ಸಿಬಿಐಗೆ ಕೊಟ್ಟ ಕೇಸ್‍ಗಳು ಏನಾಗಿವೆ ಅಂತ ನಮಗೆ ಗೊತ್ತಿವೆ. ದಿಢೀರ್ ನೆ ಬಿಜೆಪಿಯವರಿಗೆ ಸಿಬಿಐ ಮೇಲೆ ನಂಬಿಕೆ ಶುರುವಾಗಿದೆ ಎಂದು ಕಿಡಿಕಾರಿದರು.

    ಹಾಗೆಯೇ ಹಣ ಕಳೆದುಕೊಂಡವರಿಗೆ ಹಣ ವಾಪಸ್ ಕೂಡಿಸೋದು ನಮ್ಮ ಗುರಿ. ವಂಚನೆಕಾರರ ಆಸ್ತಿ ಜಪ್ತಿ ಮಾಡೋದು. ಇಂತಹ ಬೇರೆ ಕಂಪನಿಗಳ ತಲೆ ಎತ್ತದಂತೆ ನೋಡಿಕೊಳ್ಳುವ ಕೆಲಸವನ್ನು ನಾವು ಮಾಡುತ್ತಿದ್ದೇವೆ. ಅಲ್ಲದೆ ಚಾರ್ಜ್ ಶೀಟ್ ಆಗದೆ ಯಾರ ಹೆಸರನ್ನು ಪ್ರಕರಣಕ್ಕೆ ಜೊಡಿಸಿ ಹೇಳೋದು ಸರಿಯಲ್ಲ. ಈ ಪ್ರಕರಣ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳುತ್ತದೆ ಎಂದು ಎಂ.ಬಿ.ಪಾಟೀಲ್ ಭರವಸೆ ನೀಡಿದ್ದಾರೆ.

  • ದೋಸ್ತಿ ಮಂತ್ರಿಗಳೇನು ಹವಾಮಾನ ವರದಿಗಾರರಾ, ಜ್ಯೋತಿಷಿಗಳಾ: ಯತ್ನಾಳ್ ಕಿಡಿ

    ದೋಸ್ತಿ ಮಂತ್ರಿಗಳೇನು ಹವಾಮಾನ ವರದಿಗಾರರಾ, ಜ್ಯೋತಿಷಿಗಳಾ: ಯತ್ನಾಳ್ ಕಿಡಿ

    ವಿಜಯಪುರ: ಮಾಜಿ ಸಿಎಂ ಯಡಿಯೂರಪ್ಪ ಬರ ಅಧ್ಯಯನ ಮಾಡಿದರೆ ಇವರಿಗೇಕೆ ಹೊಟ್ಟೆ ಉರಿ? ಈ ಸರ್ಕಾರದ ಮಂತ್ರಿಗಳೇನು ಹವಾಮಾನ ವರದಿಗಾರರಾ? ಅಥವಾ ಚಾನಲ್‍ನಲ್ಲಿ ಕುಳಿತು ಭವಿಷ್ಯ ಹೇಳುವ ಜ್ಯೋತಿಷಿಗಳಾ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಮ್ಮಿಶ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಿಎಸ್‍ವೈ ನಾಟಕದ ಬರ ಪ್ರವಾಸ ಮಾಡುತ್ತಿದ್ದಾರೆ ಎಂಬ ಗೃಹ ಸಚಿವ ಎಂಬಿ ಪಾಟೀಲ್ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಯಡಿಯೂರಪ್ಪ ಅವರು ಬರ ಅಧ್ಯಯನ ಮಾಡಿದರೆ ಇವರಿಗೇಕೆ ಹೊಟ್ಟೆ ಉರಿ. ಮಳೆ ಆಗಲಿ, ಬಿಡಲಿ ಎರಡನ್ನೂ ಚಿಂತನೆ ಮಾಡಬೇಕಿರುವುದು ಸರ್ಕಾರದ ಕೆಲಸ. ಮಳೆ ಆಗುತ್ತದೆ ಎಂದು ಕನಸು ಬಿದ್ದಿದೆಯಾ? ಈ ಸರ್ಕಾರದ ಮಂತ್ರಿಗಳೇನು ಹವಾಮಾನ ವರದಿಗಾರರಾ? ಅಥವಾ ವಾಹಿನಿಯಲ್ಲಿ ಕುಳಿತು ಭವಿಷ್ಯ ಹೇಳುವ ಜ್ಯೋತಿಷಿಗಳಾ? ಈಗಾಗಲೇ 26 ಕಡೆ ಸೋತು ಸುಣ್ಣವಾಗಿದ್ದಾರೆ. ಸುಮ್ಮನೇ ಕೂರಲು ಆಗಲ್ವಾ ಇವರಿಗೆ ಎಂದು ದೋಸ್ತಿ ಸರ್ಕಾರದ ವಿರುದ್ಧ ಹರಿಹಾಯ್ದರು.

    ಸರ್ಕಾರ ಬೀಳುತ್ತೋ ಇಲ್ಲವೋ ಎಂಬುದು ನಾನು ಹೇಳಲ್ಲ. ಯಾಕೆಂದರೆ ನಾನು ಹೇಳಿದ ಭವಿಷ್ಯ ಸುಳ್ಳಾಗುತ್ತಿವೆ, ಅದಕ್ಕೆ ನಾನು ಭವಿಷ್ಯ ಹೇಳೋದು ಬಿಟ್ಟಿದ್ದೇನೆ ಎಂದರು. ಬಳಿಕ ಬಿಜೆಪಿ ಆಪರೇಷನ್ ಕಮಲ ಮಾಡಿಲ್ಲ. ಅವರ ಶಾಸಕರೇ ನಮ್ಮ ಪಾರ್ಟಿಗೆ ಬರುತ್ತೇವೆ ಎಂದು ಚೌಕಾಶಿ ಮಾಡುತ್ತಿದ್ದಾರೆ. ಕರ್ನಾಟಕದಲ್ಲಿ ಸರ್ಕಾರ ಮಾಡುವ ಅವಶ್ಯಕತೆ ನಮಗಿಲ್ಲ. ವಿರೋಧ ಪಕ್ಷವಾಗಿ ಕೆಲಸ ಮಾಡುತ್ತೇವೆ, ಅವರೇ ಹೊಡೆದಾಡಿ ಹೊರಬಂದರೆ ಆಮೇಲೆ ನಾವು ನೋಡೋಣ ಎಂದು ಹೇಳಿದರು.