Tag: M. Chandrappa

  • ಎಂ ಚಂದ್ರಪ್ಪ ಜೊತೆಗಿನ ಎಂಎಲ್‌ಸಿ ರವಿಕುಮಾರ್ ಸಂಧಾನ ಸಭೆ ವಿಫಲ

    ಎಂ ಚಂದ್ರಪ್ಪ ಜೊತೆಗಿನ ಎಂಎಲ್‌ಸಿ ರವಿಕುಮಾರ್ ಸಂಧಾನ ಸಭೆ ವಿಫಲ

    ಚಿತ್ರದುರ್ಗ: ಲೋಕಸಭಾ ಚುನಾವಣೆಯ (Lok Sabha Election) ಬಿಜೆಪಿ (BJP) ಟಿಕೆಟ್ ತಮ್ಮ ಪುತ್ರನಿಗೆ ಕೈತಪ್ಪಿದ ಹಿನ್ನೆಲೆಯಲ್ಲಿ ರೆಬಲ್ ಆಗಿರುವ ಹೊಳಲ್ಕೆರೆ ಶಾಸಕ ಎಂ ಚಂದ್ರಪ್ಪ (M Chandrappa) ಕುಟುಂಬದ ಮನವೊಲಿಸಲು ಆಗಮಿಸಿದ್ದ ಬಿಜೆಪಿ ಎಂಎಲ್‌ಸಿ ರವಿಕುಮಾರ್ (MLC Ravikumar) ಸಂಧಾನ ಯತ್ನ ವಿಫಲವಾಗಿದೆ.

    ಚಿತ್ರದುರ್ಗ (Chitradurga) ಕ್ಷೇತ್ರದ ಬಿಜೆಪಿ ಟಿಕೆಟ್ ಘೋಷಣೆಯಾದಾಗಿನಿಂದ ಚಿತ್ರದುರ್ಗದ ಅಭ್ಯರ್ಥಿ ಗೋವಿಂದ ಕಾರಜೋಳ ಪ್ರಚಾರಕ್ಕೆ ಶಾಸಕ ಚಂದ್ರಪ್ಪ ಬೆಂಬಲಿಗರು ಅಡ್ಡಗಾಲಾಗಿದ್ದಾರೆ. ಅಲ್ಲದೇ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ತಮ್ಮ ಪುತ್ರ ರಘುಚಂದನ್ ಅವರನ್ನು ಕಣಕ್ಕಿಳಿಸಲು ಸಜ್ಜಾಗಿದ್ದಾರೆ. ಇದನ್ನೂ ಓದಿ: ಅವಧಿ ಮೀರಿ ಪಾರ್ಟಿ ಕೇಸ್ – ನಟ ದರ್ಶನ್ ಸೇರಿ 8 ಮಂದಿಗೆ ರಿಲೀಫ್

    ಹೀಗಾಗಿ ಅಲರ್ಟ್ ಆದ ಬಿಜೆಪಿ ನಾಯಕರು ಹೊಳಲ್ಕೆರೆ ಶಾಸಕ ಎಂ ಚಂದ್ರಪ್ಪ ಕುಟುಂಬವನ್ನು ಮನವೊಲಿಸಲು ಬಿಜೆಪಿ ಪರವಾಗಿ ಸಂಧಾನಕಾರರಾಗಿ ಎಂಎಲ್‌ಸಿ ರವಿಕುಮಾರ್ ಅವರನ್ನು ಕಳುಹಿಸಿದೆ. ಶನಿವಾರ ರಾತ್ರಿ 8 ಗಂಟೆಗೆ ಆಗಮಿಸಿದ ಅವರು ಸುಮಾರು ಎರಡು ತಾಸು ಶಾಸಕರ ಮನೆಯಲ್ಲೇ ಕುಳಿತು ಶಾಸಕರ ಪತ್ನಿ ಚಂದ್ರಕಲಾ ಹಾಗೂ ಪುತ್ರ ರಘುಚಂದನ್ ಜೊತೆ ಸಮಾಲೋಚನೆ ನಡೆಸಿದರು. ಇದನ್ನೂ ಓದಿ: ದೆಹಲಿಯ ರಾಮಲೀಲಾ ಮೈದಾನದಲ್ಲಿ ಇಂದು INDIA ಒಕ್ಕೂಟದ ಒಗ್ಗಟ್ಟು ಪ್ರದರ್ಶನ

    ಈ ವೇಳೆ ಶಾಸಕ ಚಂದ್ರಪ್ಪ ಮನೆಯಲ್ಲಿರಲಿಲ್ಲ. ಹೀಗಾಗಿ ರಘುಚಂದನ್‌ಗೆ ತುಂಬಾ ಅವಕಾಶಗಳಿವೆ. ಪಕ್ಷದ ಹಿರಿಯ ನಾಯಕರು ನಿಮ್ಮೊಂದಿಗೆ ಇರುತ್ತಾರೆ. ಮುಂದಿನ ದಿನಗಳಲ್ಲಿ ತಾನಾಗಿಯೇ ಅವಕಾಶ ನಿಮಗೆ ಒದಗಿ ಬರಲಿದ್ದು, ಬಿಜೆಪಿ ವಿರುದ್ಧ ಬಂಡಾಯವೇಳಬೇಡಿ. ಪಕ್ಷೇತರವಾಗಿ ಚುನಾವಣೆಗೆ ನಿಲ್ಲುವ ನಿರ್ಧಾರ ಕೈಬಿಡಿ ಎಂದು ಮನವಿ ಮಾಡಿದ್ದೇನೆಂದು ರವಿಕುಮಾರ್ ತಿಳಿಸಿದ್ದಾರೆ. ಇದನ್ನೂ ಓದಿ: ಡಿಕೆ ಬ್ರದರ್ಸ್ ಕೋಟೆಗೆ ಅಮಿತ್ ಶಾ ಎಂಟ್ರಿ – ಚನ್ನಪಟ್ಟಣದಲ್ಲಿ ರೋಡ್ ಶೋ

    ಆದರೆ ಟಿಕೆಟ್ ನೀಡುವಂತೆ ರಘುಚಂದನ್ ಪಟ್ಟು ಹಿಡಿದಿದ್ದು, ತಮಗೆ ಆಗಿರುವ ಅನ್ಯಾಯದ ಬಗ್ಗೆ ರವಿಕುಮಾರ್ ಬಳಿ ಹೇಳಿಕೊಂಡಿದ್ದಾರೆ. ಹಾಗೆಯೇ ರವಿಕುಮಾರ್ ಅವರ ಮನವೊಲಿಕೆಗೆ ಜಗ್ಗದ ರಘುಚಂದನ್ ಯಾವುದೇ ತೀರ್ಮಾನಕ್ಕೆ ಬಂದಿಲ್ಲ. ಹೀಗಾಗಿ ಬಿಜೆಪಿ ಎಂಎಲ್‌ಸಿ ರವಿಕುಮಾರ್ ಅವರ ಸಂಧಾನ ವಿಫಲವಾಗಿದ್ದು, ಮತ್ತೆ ಸಂಧಾನಕ್ಕೆ ಬಿಜೆಪಿ ಯತ್ನಿಸಲಿದೆ. ಶಾಸಕ ಚಂದ್ರಪ್ಪ ಮಂತ್ರಿಯಾಗದಿದ್ದರೂ ಬಿಜೆಪಿಯಲ್ಲೇ ಉಳಿದಿದ್ದಾರೆ. ಇನ್ಮುಂದೆಯೂ ಇರುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿ ಬಂದ ದಾರಿಗೆ ಸುಂಕವಿಲ್ಲವೆಂದು ಭಾವಿಸಿ ರವಿಕುಮಾರ್ ವಾಪಸ್ ಆಗಿದ್ದಾರೆ. ಇದನ್ನೂ ಓದಿ: ಸುನೀತಾ ಕೇಜ್ರಿವಾಲ್ ಭೇಟಿಯಾದ ಜೈಲಿನಲ್ಲಿರುವ ಜಾರ್ಖಂಡ್ ಮಾಜಿ ಸಿಎಂ ಪತ್ನಿ

    ಸಂಧಾನ ಸಭೆಯ ವೇಳೆ ಚಂದ್ರಪ್ಪ ಪುತ್ರ ರಘು ಚಂದನ್ ರವಿಕುಮಾರ್ ಬಳಿ ತಮ್ಮ ಅಳಲನ್ನು ತೋಡಿಕೊಂಡಿದ್ದು, ಬಿಎಸ್‌ವೈ ಅವರ ಮೇಲಿರುವ ಗೌರವ ಅಚಲ ಎಂದಿದ್ದಾರೆ. ಅಲ್ಲದೇ ಅವರ ಕುಟುಂಬ ಬಿಎಸ್ ವೈ ಕುಟುಂಬಕ್ಕೆ ತೋರಿದ ನಿಷ್ಠೆ ಹಾಗು ಪಕ್ಷದ ಏಳಿಗೆಗಾಗಿ ಮಾಡಿದ ತ್ಯಾಗಗಳನ್ನು ವಿವರಿಸಿದ್ದು, ತಮಗಾಗಿರುವ ಅನ್ಯಾಯದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ಬಂಡಾಯ ಶಮನಗೊಳಿಸಲು ಬಿಜೆಪಿ ಚುನಾವಣಾ ಚಾಣಕ್ಯ ಅಖಾಡಕ್ಕೆ; ಏ.2ರಂದು ಅಮಿತ್ ಶಾ ರಾಜ್ಯ ಪ್ರವಾಸ

  • ನನ್ನ ಮಗನಿಗೆ ಬಿಜೆಪಿ ಟಿಕೆಟ್ ತಪ್ಪಿಸಿದ್ದು ಬಿಎಸ್‍ವೈ: ಎಂ.ಚಂದ್ರಪ್ಪ

    ನನ್ನ ಮಗನಿಗೆ ಬಿಜೆಪಿ ಟಿಕೆಟ್ ತಪ್ಪಿಸಿದ್ದು ಬಿಎಸ್‍ವೈ: ಎಂ.ಚಂದ್ರಪ್ಪ

    ಚಿತ್ರದುರ್ಗ: ಪುತ್ರ ರಘುಚಂದನ್‍ಗೆ ಚಿತ್ರದುರ್ಗ (Chitradurga) ಲೋಕಸಭಾ ಕ್ಷೇತ್ರದ ಟಿಕೆಟ್ ಕೈತಪ್ಪಲು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ (B.S Yediyurappa) ಅವರೇ ಕಾರಣ ಎಂದು ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ (M.Chandrappa) ಆಕ್ರೋಶ ಹೊರಹಾಕಿದ್ದಾರೆ.

    ರಾಜ್ಯದ 27 ಕ್ಷೇತ್ರಗಳ ಬಿಜೆಪಿ ಟಿಕೆಟ್ ಘೋಷಣೆಯಾದರೂ ಸಹ ಚಿತ್ರದುರ್ಗ ಕ್ಷೇತ್ರದ ಟಿಕೆಟ್ ಮಾತ್ರ ಬಾಕಿಯಾಗಿತ್ತು. ಇದೀಗ ಮಾಜಿ ಡಿಸಿಎಂ ಗೋವಿಂದ ಕಾರಜೋಳ ಅವರಿಗೆ ಬಿಜೆಪಿ (BJP) ಮಣೆ ಹಾಕಿದೆ. ಪುತ್ರನಿಗೆ ಟಿಕೆಟ್ ಕೈತಪ್ಪಿದ್ದು, ಇದಕ್ಕೆ ಬಿಎಸ್‍ವೈ ಕಾರಣ ಎಂದು ಅವರು ಕಿಡಿಕಾರಿದ್ದಾರೆ. ಇದನ್ನೂ ಓದಿ: ಶಿಂಧೆ ಬಣದ ಶಿವಸೇನೆ ಸೇರಿದ ನಟ ಗೋವಿಂದ್

    ಗೋವಿಂದ ಕಾರಜೋಳ ಜೊತೆ ಅದೇನು ಹೊಂದಾಣಿಕೆ ಇದೆಯೋ ಗೊತ್ತಿಲ್ಲ. ಹೀಗಾಗಿ ಅವರಿಗೆ ಟಿಕೆಟ್ ನೀಡದಿದ್ರೆ ನಾನು ರಾಜ್ಯಾದ್ಯಂತ ಬಿಜೆಪಿ ಪರ ಪ್ರಚಾರ ಮಾಡುವುದಿಲ್ಲ ಎಂದು ಪಟ್ಟು ಹಿಡಿದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಅವರಿಗೆ ದಂಬಾಲು ಬಿದ್ದು, ಕಾರಜೋಳ ಅವರಿಗೆ ಟಿಕೆಟ್ ಕೊಡಿಸಿದ್ದಾರೆ. ಹೀಗಾಗಿ ನಾನು ಯಡಿಯೂರಪ್ಪ ಕುಟುಂಬಕ್ಕೆ ತೋರಿದ ನಿಷ್ಠೆ ಸಾರ್ಥಕವೆನಿಸಿದೆ ಎಂದು ವ್ಯಂಗ್ಯವಾಡಿದ್ದಾರೆ.

    ರಘುಚಂದನ್ ಸಹ ಪಕ್ಷದ ನಾಯಕರ ವಿರುದ್ಧ ಅಸಮಾಧಾನ ಹೊರ ಹಾಕಿದ್ದು, ಪದೇ ಪದೇ ವಲಸಿಗ ಅಭ್ಯರ್ಥಿಗಳಿಗೆ ಚಿತ್ರದುರ್ಗದಲ್ಲಿ ರಾಷ್ಡ್ರೀಯ ಪಕ್ಷಗಳು ಮಣೆ ಹಾಕುತ್ತಿವೆ. ವಿವಿಧ ಕ್ಷೇತ್ರಗಳ ಚುನಾವಣೆಗಳಲ್ಲಿ ಸೋತು ಸುಣ್ಣವಾದ ನಿರಾಶ್ರಿತರ ಆಶ್ರಯ ತಾಣ ಚಿತ್ರದುರ್ಗ ಕ್ಷೇತ್ರವಾಗಿದೆ. ಪಕ್ಷದ ಕೆಲ ಹಿರಿಯ ನಾಯಕರು ನನಗೆ ಟಿಕೆಟ್ ತಪ್ಪಿಸಲು ಕಳ್ಳಾಟದ ಕೆಲಸ ಮಾಡಿದ್ದಾರೆಂದು ವಾಗ್ದಾಳಿ ನಡೆಸಿದ್ದಾರೆ. ಅಲ್ಲದೇ ಶುಕ್ರವಾರ ಬೆಂಬಲಿಗರ ಸಭೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳುವುದಾಗಿ ಅವರು ತಿಳಿಸಿದ್ದಾರೆ.

    ಗೋವಿಂದ ಕಾರಜೋಳ ಅವರಿಗೆ ಟಿಕೆಟ್ ಘೋಷಿಸಿರುವುದನ್ನು ವಿರೋಧಿಸಿ ರಘುಚಂದನ್ ಬೆಂಬಲಿಗರು ಗೋ ಬ್ಯಾಕ್ ಕಾರಜೋಳ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಅರವಿಂದ್ ಕೇಜ್ರಿವಾಲ್ ಇಡಿ ಕಸ್ಟಡಿ 4 ದಿನ ವಿಸ್ತರಣೆ

  • ಹೊಳಲ್ಕೆರೆ ಅಖಾಡ ಹೇಗಿದೆ? ಬಿಜೆಪಿ, ಕಾಂಗ್ರೆಸ್ ಮಧ್ಯೆ ನೇರ ಸ್ಪರ್ಧೆ

    ಹೊಳಲ್ಕೆರೆ ಅಖಾಡ ಹೇಗಿದೆ? ಬಿಜೆಪಿ, ಕಾಂಗ್ರೆಸ್ ಮಧ್ಯೆ ನೇರ ಸ್ಪರ್ಧೆ

    ಚಿತ್ರದುರ್ಗ: ಹೊಳಲ್ಕೆರೆ (Holalkere) ವಿಧಾನಸಭಾ ಕ್ಷೇತ್ರವು ಪರಿಶಿಷ್ಟ ಜಾತಿ (SC) ಮೀಸಲು ಕ್ಷೇತ್ರವಾಗಿದೆ. ಈ ಬಾರಿ ಚುನಾವಣೆಗೆ ಹೊಳಲ್ಕೆರೆ ಕ್ಷೇತ್ರದಿಂದ ಕಾಂಗ್ರೆಸ್ (Congress) ಅಭ್ಯರ್ಥಿಯಾಗಿ ಮಾಜಿ ಸಚಿವ ಆಂಜನೇಯ (Anjaneya), ಬಿಜೆಪಿಯಿಂದ (BJP) ಎಂ.ಚಂದ್ರಪ್ಪ (M.Chandrappa), ಜೆಡಿಎಸ್ (JDS) ಪಕ್ಷದಿಂದ ಇಂದ್ರಜಿತ್ ನಾಯ್ಕ್ (Indrajith Naik) ಹಾಗೂ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಟಿಹೆಚ್‌ಒ ಡಾ.ಜಯಸಿಂಹ (Dr.Jayasimha) ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ.

    ಆಂಜನೇಯ:
    ಮಾಜಿ ಸಚಿವ ಆಂಜನೇಯ ಕಳೆದ ಬಾರಿ ಕಾಂಗ್ರೆಸ್ ಸರ್ಕಾರದಲ್ಲಿ ಪ್ರಭಾವಿ ಸಚಿವರಾಗಿ ಸಾಕಷ್ಟು ಅಭಿವೃದ್ಧಿ ಮಾಡಿದ್ದರು. ಆದರೆ ಸಚಿವರಾಗಿದ್ದ ಸಮಯದಲ್ಲಿ ಜನರ ಕೈಗೆ ಸಿಗಲಿಲ್ಲವೆಂಬ ಕಾರಣಕ್ಕೆ ಹೊಳಲ್ಕೆರೆ ಮತದಾರರು ಅವರನ್ನು ಸೋಲಿಸಿದ್ದರು.

    ಎಂ.ಚಂದ್ರಪ್ಪ:
    ಬಿಎಸ್‌ವೈ ಬೆಂಬಲಿಗರು ಆಂಜನೇಯ ಅವರ ವಿರುದ್ಧ ಎಂ.ಚಂದ್ರಪ್ಪ ಅವರನ್ನು ಗೆಲ್ಲಿಸಿದ್ದರು. ಆದರೆ ಈ ಬಾರಿ ಚಂದ್ರಪ್ಪ ವಿರುದ್ಧ ವಿರೋಧಿ ಅಲೆಯಿದೆ. ಸರ್ಕಾರದಲ್ಲಿ ಕೆಎಸ್‌ಆರ್‌ಟಿಸಿ ನಿಗಮದ ಅಧ್ಯಕ್ಷರಾಗಿ ಗೂಟದ ಕಾರಲ್ಲಿ ಓಡಾಡಿದ ಚಂದ್ರಪ್ಪ, ಕ್ಷೇತ್ರದಲ್ಲಿ ದ್ವೇಷದ ರಾಜಕಾರಣ ಮಾಡಿದ್ದಾರೆ ಎಂಬ ಆರೋಪವಿದೆ.

    ಕಳೆದ ಬಾರಿ ಸೋತರೂ ಸಹ ಕ್ಷೇತ್ರದಲ್ಲಿ ನಿರಂತರ ಸಂಪರ್ಕದಲ್ಲಿರುವ ಕಾಂಗ್ರೆಸ್ ಅಭ್ಯರ್ಥಿ ಆಂಜನೇಯ ಅವರ ಪರ ಜನರಿಗೆ ಸ್ವಲ್ಪ ಅನುಕಂಪವಿದೆ. ಹಾಗೆಯೇ ಇದು ನನ್ನ ಕೊನೆಯ ಚುನಾವಣೆ ಎಂದು ಘೋಷಿಸಿರುವ ಆಂಜನೇಯ ಅವರ ಸರಳತೆ ಹಾಗೂ ಸೌಜನ್ಯತೆ ಹೊಳಲ್ಕೆರೆಯಲ್ಲಿ ವರ್ಕೌಟ್ ಆಗುತ್ತಾ ಎನ್ನುವುದು ಸದ್ಯದ ಕುತುಹೂಲ.

    ಈ ಕ್ಷೇತ್ರದಲ್ಲಿ ಸಿರಿಗೆರೆ ಮಠ ಹಾಗೂ ಸಾದರ ಲಿಂಗಾಯತ ಸಮುದಾಯದ ಮತಗಳು ನಿರ್ಣಾಯಕ ಪಾತ್ರ ವಹಿಸಲಿದ್ದು, ಸಿರಿಗೆರೆ ಮಠಾಧಿಪತಿಯ ಕೃಪಾಕಟಾಕ್ಷ ಪಡೆದವರ ಗೆಲುವು ಸುಲಭವೆಂಬ ಚರ್ಚೆ ನಡೆಯುತ್ತಿದೆ. ಇವರಿಬ್ಬರ ಮಧ್ಯೆ ಬಿಜೆಪಿ ಬಂಡಾಯ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಡಾ.ಜಯಸಿಂಹ ಕ್ಷೇತ್ರದಲ್ಲಿ ಹೊಸಮುಖವಾಗಿದೆ.

    ಡಾ.ಜಯಸಿಂಹ:
    ಡಾ.ಜಯಸಿಂಹ ಸರಳ ಮತ್ತು ಮೃದು ಸ್ವಭಾವದವರಾಗಿದ್ದಾರೆ. ಅಲ್ಲದೇ ಇವರು ಲಂಬಾಣಿ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಇವರ ಪರ ಕ್ಷೇತ್ರದ ಜನರ ಒಲವಿದೆ. ಬಿಜೆಪಿ, ಕಾಂಗ್ರೆಸ್ ಮಧ್ಯೆ ಮೂರನೆಯವರಾದ ಜಯಸಿಂಹ ಅವರಿಗೆ ಮತದಾರರು ಮಣೆ ಹಾಕಿದರೂ ಅಚ್ಚರಿ ಪಡುವಂತಿಲ್ಲ. ಅಲ್ಲದೇ ಲಂಬಾಣಿ ಸಮುದಾಯ ಸಹ ಒಳಮೀಸಲಾತಿ ವರ್ಗೀಕರಣ ವಿಚಾರದಲ್ಲಿ ಬಿಜೆಪಿ ವಿರುದ್ಧ ಮತ ಚಲಾಯಿಸುವ ಅಭಿಯಾನ ನಡೆಸುತ್ತಿದ್ದು, ಈ ನಡೆ ಜಯಸಿಂಹ ಅವರಿಗೆ ವರವಾಗಬಹುದು.

    ಜೆಡಿಎಸ್‌ನಿಂದ ಸ್ಪರ್ಧಿಸಿರುವ ಇಂದ್ರಜಿತ್ ನಾಯ್ಕ್ ಸಹ ಲಂಬಾಣಿ ಸಮುದಾಯದವರಾದರೂ ಕ್ಷೇತ್ರದಲ್ಲಿ ಅಷ್ಟು ಪರಿಚಯವಿಲ್ಲ. ಹೀಗಾಗಿ ಹೊಳಲ್ಕೆರೆಯಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದ್ದು, ಬಿಜೆಪಿಯ ಬಂಡಾಯ ಕಾಂಗ್ರೆಸ್ ಅಭ್ಯರ್ಥಿ ಆಂಜನೇಯ ಅವರಿಗೆ ಸಹಕಾರಿಯಾಗಿ ಗೆಲ್ಲುವ ಸಾಧ್ಯತೆ ಹೆಚ್ಚಾಗಿದೆ. ಇದನ್ನೂ ಓದಿ: ಹಾಲಿ, ಮಾಜಿ ಶಾಸಕರ ಮಧ್ಯೆ ಜನಮನ ಗೆದ್ದವರ್ಯಾರು? ಹೇಗಿದೆ ಮೊಳಕಾಲ್ಮೂರು ಅಖಾಡ?

    ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದ ಜಾತಿವಾರು ಲೆಕ್ಕಾಚಾರ:
    ಒಟ್ಟು ಮತದಾರರು: 1,97,248
    ಪುರುಷರು: 1,17,885
    ಮಹಿಳೆಯರು: 1,17,079

    ಯಾರ ವೋಟು ಎಷ್ಟು?
    ಲಿಂಗಾಯತ: 82,000
    ಎಸ್ಸಿ: 44,000
    ಭೋವಿ: 17,000
    ಗೊಲ್ಲ: 15,000
    ನಾಯ್ಕ್‌: 17,000
    ಮುಸ್ಲಿಂ: 6,000
    ದೇವಾಂಗ: 5,000
    ಉಪ್ಪಾರ: 4,000
    ಇತರೆ: 7,000

  • 1 ತಿಂಗಳೊಳಗೆ ರಾಜ್ಯದಲ್ಲಿ ಎಲೆಕ್ಟ್ರಿಕ್  ಬಸ್‍ಗಳ ಸಂಚಾರ: KSRTC ಅಧ್ಯಕ್ಷ ಎಂ.ಚಂದ್ರಪ್ಪ

    1 ತಿಂಗಳೊಳಗೆ ರಾಜ್ಯದಲ್ಲಿ ಎಲೆಕ್ಟ್ರಿಕ್ ಬಸ್‍ಗಳ ಸಂಚಾರ: KSRTC ಅಧ್ಯಕ್ಷ ಎಂ.ಚಂದ್ರಪ್ಪ

    ಮಂಗಳೂರು: ಒಂದು ತಿಂಗಳೊಳಗೆ ರಾಜ್ಯದಲ್ಲಿ ಎಲೆಕ್ಟ್ರಿಕ್ ಬಸ್‍ಗಳು(Electric Buses) ಸಂಚರಿಸಲಿವೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಎಂ. ಚಂದ್ರಪ್ಪ(M. Chandrappa) ಅವರು ಹೇಳಿದರು.

    ಅವರು ನಗರದ ಕೆಎಸ್ಆರ್‌ಟಿಸಿ(KSRTC) ಬಸ್ ನಿಲ್ದಾಣದ ಆವರಣದಲ್ಲಿರುವ ಮಂಗಳೂರು ವಿಭಾಗೀಯ ನಿಯಂತ್ರಣಾಧಿಕಾರಿಯವರ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಮುಂದಿನ ತಿಂಗಳೊಳಗೆ ಮೊದಲ ಹಂತದಲ್ಲಿ 50 ಎಲೆಕ್ಟ್ರಿಕ್‌ ಬಸ್‍ಗಳ ಸಂಚಾರ ಆರಂಭಿಸಲಾಗುವುದು. ಸದ್ಯ ತೈಲೋತ್ಪನ್ನ, ಟೈರ್ ಹಾಗೂ ಬಸ್ ಬಿಡಿ ಭಾಗಗಳ ಮೊತ್ತ ಹೆಚ್ಚಿದ್ದರೂ ಕೂಡ ಪ್ರಯಾಣಿಕರ ಹಿತ ದೃಷ್ಟಿಯಿಂದ ಪ್ರಯಾಣಿಕರ ಟಿಕೆಟ್ ದರ ಹೆಚ್ಚಿಸಿಲ್ಲ. ಅರವತ್ತು ವರ್ಷಗಳ ಇತಿಹಾಸದಲ್ಲೇ ಇದೀಗ ತಿಂಗಳ ಮೊದಲ ದಿನವೇ ರಾಜ್ಯದ ಎಲ್ಲ ಕೆಎಸ್ಆರ್‌ಟಿಸಿ ಉದ್ಯೋಗಿಗಳಿಗೆ ವೇತನ ನೀಡಲಾಗುತ್ತಿದೆ ಮತ್ತು 6ನೇ ವೇತನ ಆಯೋಗದ ಬೇಡಿಕೆಯನ್ನು ಮುಂದಿನ ದಿನಗಳಲ್ಲಿ ಈಡೇರಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

    ಕೋವಿಡ್ ಹಾಗೂ ಇತರೆ ಕಾರಣಗಳಿಂದ ಈ ಹಿಂದೆ ಸರ್ಕಾರಿ ಬಸ್‍ಗಳಿಂದ ದಿನವೊಂದಕ್ಕೆ 6 ರಿಂದ 7ಕೋಟಿಗಳಷ್ಟು ಆದಾಯ ಬರುತ್ತಿತ್ತು. ಆದರೆ ಸದ್ಯ ಹಲವು ಸುಧಾರಣಾ ಕ್ರಮಗಳನ್ನು ಕೈಗೊಂಡ ಕಾರಣ ದಿನವೊಂದಕ್ಕೆ ಕನಿಷ್ಟ 12 ಕೋಟಿಯಷ್ಟು ವರಮಾನ ಬರುತ್ತಿದೆ ಎಂದು ಹರ್ಷ ವ್ಯಕ್ತಪಡಿಸಿದರು.

    450 ನೂತನ ಬಸ್ ಖರೀದಿಗೆ ಕ್ರಮಕೈಗೊಳ್ಳಲಾಗುತ್ತಿದೆ. ಅವುಗಳಲ್ಲಿ ಅತ್ಯುತ್ತಮ ಸೌಲಭ್ಯವಿರುವ 50 ವೋಲ್ವೋ ಹಾಗೂ ಎಲೆಕ್ಟ್ರಿಕಲ್ ಬಸ್‍ಗಳಿರಲಿವೆ. ಒಂದು ತಿಂಗಳಿನೊಳಗೆ ರಾಜ್ಯದಲ್ಲಿ ಪರಿಸರ ಸ್ನೇಹಿ ಎಲೆಕ್ಟ್ರಿಕಲ್ ಬಸ್‍ಗಳು ಓಡಾಡಲಿವೆ. ಮಂಗಳೂರು ವಿಭಾಗದಲ್ಲಿ ಸದ್ಯ 490 ಬಸ್‍ಗಳು ಪ್ರತಿದಿನ ಸಂಚರಿಸುತ್ತಿದ್ದು, ದಿನನಿತ್ಯ 1 ಕೋಟಿಯಷ್ಟು ವರಮಾನವಿದೆ. ಆದರೆ ಪುತ್ತೂರು ವಿಭಾಗದಲ್ಲಿ ವರಮಾನ ಕಡಿಮೆಯಿದ್ದರೂ ಧಾರ್ಮಿಕ ಕ್ಷೇತ್ರಗಳಿಗೆ ತೆರಳುವ ಪ್ರಯಾಣಿಕರು ಮತ್ತು ವಿದ್ಯಾರ್ಥಿಗಳು ಹೆಚ್ಚಿರುವ ಕಾರಣ ಬಸ್‍ಗಳನ್ನು ಕಡಿತಗೊಳಿಸಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಕಾಂಗ್ರೆಸ್ 80 ಸ್ಥಾನ ಗಳಿಸಿದ್ರೆ ನನ್ನ ಬೆರಳು ಕತ್ತರಿಸಿ ಕೊಡುತ್ತೇನೆ: ಶಿವನಗೌಡ ನಾಯಕ

    ರಾಜ್ಯದಲ್ಲಿರುವ ಕಟ್ಟಡ ಕಾರ್ಮಿಕರ ಕೂಲಿ ಉಳಿತಾಯಕ್ಕಾಗಿ ಉಚಿತ ಪಾಸ್ ವಿತರಿಸಲು ಚಿಂತಿಸಲಾಗಿದೆ. ಸದ್ಯ 1 ಲಕ್ಷ ಉಚಿತ ಪಾಸ್ ವಿತರಿಸಲು ಮುಖ್ಯಮಂತ್ರಿಗಳು ಆದೇಶ ನೀಡಿದ್ದು ಇನ್ನುಳಿದಂತೆ ರಾಜ್ಯದಲ್ಲಿರುವ ಒಟ್ಟು 37 ಲಕ್ಷ ಕಟ್ಟಡ ಕಾರ್ಮಿಕರಿಗೆ ಹಂತ ಹಂತವಾಗಿ ಪಾಸ್ ವಿತರಿಸಲಾಗುವುದು. ಒಟ್ಟಾರೆ ನೂತನವಾಗಿ ಕೈಗೊಂಡಿರುವ ಹಲವು ಸುಧಾರಣಾ ಕ್ರಮಗಳಿಂದಾಗಿ ಸಧ್ಯ ಅನವಶ್ಯಕ ಖರ್ಚುವೆಚ್ಚಗಳು ಕಡಿಮೆಯಾಗಿದೆ ಎಂದರು.

    ಮಂಗಳೂರು ವಿಭಾಗೀಯ ನಿಯಂತ್ರಣಾಧಿಕಾರಿ ರಾಜೇಶ್ ಶೆಟ್ಟಿ ಹಾಗೂ ಪುತ್ತೂರು ವಿಭಾಗಿಯ ನಿಯಂತ್ರಣಾಧಿಕಾರಿ ಜಯಕರ ಶೆಟ್ಟಿ ಗೋಷ್ಠಿಯಲ್ಲಿದ್ದರು.

    Live Tv
    [brid partner=56869869 player=32851 video=960834 autoplay=true]

  • ಭೋವಿ ಸಮುದಾಯಕ್ಕೆ ಟಿಕೆಟ್ ನೀಡಿಲ್ಲ ಅಂದ್ರೆ ರಾಜೀನಾಮೆ: ಬಿಜೆಪಿ ಶಾಸಕರಿಂದ ಎಚ್ಚರಿಕೆ

    ಭೋವಿ ಸಮುದಾಯಕ್ಕೆ ಟಿಕೆಟ್ ನೀಡಿಲ್ಲ ಅಂದ್ರೆ ರಾಜೀನಾಮೆ: ಬಿಜೆಪಿ ಶಾಸಕರಿಂದ ಎಚ್ಚರಿಕೆ

    ಬೆಂಗಳೂರು: ಭೋವಿ ಸಮುದಾಯಕ್ಕೆ ಟಿಕೆಟ್ ನೀಡಿಲ್ಲ ಅಂದ್ರೆ ಪಕ್ಷಕ್ಕೆ ರಾಜೀನಾಮೆ ನೀಡುತ್ತೇವೆ ಎಂದು ಬಿಜೆಪಿಯ ಇಬ್ಬರು ಶಾಸಕರು ಎಚ್ಚರಿಕೆ ನೀಡಿದ್ದಾರೆ.

    ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಭೋವಿ ಸಮುದಾಯದ ಅಭ್ಯರ್ಥಿಗೆ ಅವಕಾಶ ನೀಡಬೇಕು ಎಂದು ಜಿಲ್ಲೆಯ ಶಾಸಕರಾದ ಎಂ.ಚಂದ್ರಪ್ಪ ಹಾಗೂ ಗೂಳಿಹಟ್ಟಿ ಶೇಖರ್ ಒತ್ತಡ ಹೇರಿದ್ದಾರೆ. ಒಂದು ವೇಳೆ ನಮ್ಮ ಸಮುದಾಯಕ್ಕೆ ಟಿಕೆಟ್ ನೀಡದಿದ್ದರೆ ಪಕ್ಷಕ್ಕೆ ರಾಜೀನಾಮೆ ನೀಡುತ್ತೇವೆ ಎಂದು ನಾಯಕರಿಗೆ ಖಡಕ್ ಸಂದೇಶ ನೀಡಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

    ಚಿತ್ರದುರ್ಗ ಲೋಕಸಭಾ ಕ್ಷೇತ್ರವು ಪರಿಶಿಷ್ಟ ಜಾತಿಗೆ ಮೀಸಲಾಗಿದೆ. ಹೀಗಾಗಿ ಈ ಕ್ಷೇತ್ರದಿಂದ ಭೋವಿ ಸಮುದಾಯದ ನಾಯಕ ಆನೇಕಲ್ ನಾರಾಯಾಣಸ್ವಾಮಿ ಅವರ ಹೆಸರು ಮುಂಚೂಣಿಯಲ್ಲಿ ಕೇಳಿ ಬರುತ್ತಿದೆ. ಆದರೆ ಸಮುದಾಯದ ಯಾರಿಗೆ ಟಿಕೆಟ್ ನೀಡಿದರೂ ನಮಗೆ ಒಪ್ಪಿಗೆ ಇದೆ ಎಂದು ಶಾಸಕರು ಅಭ್ಯರ್ಥಿಯ ಹೆಸರು ಪ್ರಸ್ತಾಪಿಸದೆ ಬೇಡಿಕೆ ಇಟ್ಟಿದ್ದಾರಂತೆ.

    ಚಿತ್ರದುರ್ಗದಲ್ಲಿ ಇತ್ತೀಚೆಗೆ ಭೋವಿ ಸಮಾವೇಶ ನಡೆಸಿ ರಾಜ್ಯದಲ್ಲಿ ಐದು ಮೀಸಲಾತಿ ಕ್ಷೇತ್ರಗಳಿವೆ. ಅವುಗಳಲ್ಲಿ ಒಂದು ಕ್ಷೇತ್ರದ ಟಿಕೆಟ್ ಅನ್ನು ಭೋವಿ ಸಮುದಾಯದ ನಾಯಕರಿಗೆ ನೀಡಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಮಾಡಲಾಗಿತ್ತು. ಆದರೂ ಸ್ಥಳೀಯ ಶಾಸಕರು, ಮುಖಂಡರ ಅಭಿಪ್ರಾಯ ಕೇಳದೆ ಟಿಕೆಟ್ ಫೈನಲ್ ಮಾಡಲಾಗಿದೆ ಎಂದು ಶಾಸಕರು ಅಸಮಾಧಾನ ಹೊರಹಾಕಿದ್ದಾರೆ ಎಂದು ಮೂಲಗಳು ತಿಳಿಸಿವೆ.