Tag: M Chinnaswamy Stadium

  • ಚಿನ್ನಸ್ವಾಮಿ ಕಾಲ್ತುಳಿತ – ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ ಘೋಷಿಸಿದ ಆರ್‌ಸಿಬಿ

    ಚಿನ್ನಸ್ವಾಮಿ ಕಾಲ್ತುಳಿತ – ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ ಘೋಷಿಸಿದ ಆರ್‌ಸಿಬಿ

    ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (M Chinnaswamy Stadium) ಸಂಭವಿಸಿದ ಕಾಲ್ತುಳಿತದಲ್ಲಿ (Stampede )ಮೃತಪಟ್ಟವರ ಕುಟುಂಬಗಳಿಗೆ ಹಾಲಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ (Royal Challengers Bengaluru) ತಲಾ 25 ಲಕ್ಷ ರೂ. ಪರಿಹಾರ (Compensation) ಘೋಷಿಸಿದೆ. ಫ್ರಾಂಚೈಸಿ ತನ್ನ ಹೊಸ ಉಪಕ್ರಮ `ಆರ್‌ಸಿಬಿ ಕೇರ್ಸ್’ ಅಡಿಯಲ್ಲಿ ಆರ್ಥಿಕ ಸಹಾಯವನ್ನು ವಿಸ್ತರಿಸಲಾಗುತ್ತಿದೆ ಎಂದು ತಿಳಿಸಿದೆ.

    ಈ ಸಂಬಂಧ ಆರ್‌ಸಿಬಿ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದೆ. ಜೂ.4 2025ರ ಈ ದಿನ ನಮ್ಮ ಹೃದಯದಲ್ಲಿ ಶಾಶ್ವತವಾಗಿ ಉಳಿಯಲಿದೆ. ನಾವು ಕಳೆದುಕೊಂಡಿದ್ದು 11 ಅಭಿಮಾನಿಗಳನ್ನಷ್ಟೇ ಅಲ್ಲ, ಅವರು ನಮ್ಮ ಕುಟುಂಬದ ಸದಸ್ಯರಾಗಿದ್ದರು. ನಮ್ಮ ಹೃದಯದ ಭಾಗವಾಗಿದ್ದರು. ಅವರ ಉತ್ಸಾಹವೇ ನಮ್ಮ ಶಕ್ತಿ. ಅದು ತಂಡಕ್ಕೆ ಜೀವ ತುಂಬುವ ಬೆಳಕಾಗಿತ್ತು. ಇದನ್ನೂ ಓದಿ: ಚಿನ್ನಸ್ವಾಮಿ ಕಾಲ್ತುಳಿತ – ಅಭಿಮಾನಿಗಳಿಗೆ ಕೇರ್‌ ಸೆಂಟರ್‌ ತೆರೆಯಲಿದೆ ಆರ್‌ಸಿಬಿ

    ನಮ್ಮ ನೆನಪುಗಳಲ್ಲಿ ಅವರು ಸದಾ ಜೀವಂತವಾಗಿರುತ್ತಾರೆ. ಜಾಗವನ್ನು ಯಾವ ಸಹಾಯವೂ ತುಂಬಲಾರದು. ಗೌರವದ ಸಂಕೇತವಾಗಿ, ಆರ್‌ಸಿಬಿ ಪ್ರತಿ ಕುಟುಂಬಕ್ಕೆ ತಲಾ 25 ಲಕ್ಷ ರೂ. ನೆರವು ನೀಡುತ್ತಿದೆ. ಇದು ಕೇವಲ ಆರ್ಥಿಕ ಸಹಾಯವಲ್ಲ, ಕರುಣೆ, ಒಗ್ಗಟ್ಟು ಮತ್ತು ನಿರಂತರ ಕಾಳಜಿಯ ಭರವಸೆಯಾಗಿದೆ.

    ಇದು ಆರ್‌ಸಿಬಿ ಕೇರ್ಸ್‍ನ ಆರಂಭವೂ ಹೌದು. ಅವರ ನೆನಪನ್ನೂ ಗೌರವಿಸುವ ಮೂಲಕ ಶುರುವಾದ ಈ ಪ್ರಯತ್ನ ಅಭಿಮಾನಿಗಳ ಭಾವನೆ, ನಂಬಿಕೆ ಮತ್ತು ಸುರಕ್ಷತೆ ಪ್ರತಿಬಿಂಬಿಸುವ ಬದ್ಧತೆಯಾಗಿದೆ ಎಂದು ಪೋಸ್ಟ್‍ನಲ್ಲಿ ಭಾವನಾತ್ಮಕ ಪೋಸ್ಟ್ ಹಂಚಿಕೊಂಡಿದೆ.

    ಏನಿದು ದುರ್ಘಟನೆ?
    ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ 18 ವರ್ಷಗಳ ಬಳಿಕ ಐಪಿಎಲ್ (IPL) ಚಾಂಪಿಯನ್ ಪಟ್ಟವನ್ನ ಮುಡಿಗೇರಿಸಿಕೊಂಡಿತ್ತು. ಆರ್‌ಸಿಬಿ ಫ್ಯಾನ್ಸ್‌ ಚಿನ್ನಸ್ವಾಮಿ ಸ್ಟೇಡಿಯಂ (Chinnaswamy Stadium) ಬಳಿ ಜೂ.4 ಸಂಭ್ರಮಾಚರಣೆಗೆ ಬಂದಿದ್ದಾಗ ಕಾಲ್ತುಳಿತ ಸಂಭವಿಸಿತ್ತು. ಈ ದುರಂತದಲ್ಲಿ 11 ಮಂದಿ ಸಾವಿಗೀಡಾಗಿದ್ದರು. ಉಚಿತ ಪ್ರವೇಶ ಘೋಷಣೆಯಿಂದ ಮಿತಿಮೀರಿದ ಜನ ಬಂದಿದ್ದರಿಂದ ಈ ಅವಘಡ ನಡೆದಿತ್ತು. ಇದನ್ನೂ ಓದಿ: Stampede Case | ಸಿಎಂ ಸೂಚನೆ ಬೆನ್ನಲ್ಲೇ ನಾಲ್ವರು ಅರೆಸ್ಟ್‌, ಉಳಿದವರು ಎಸ್ಕೇಪ್‌

  • ಬೆಂಗ್ಳೂರಲ್ಲಿ ಮಳೆ ಕಾಟ – ತವರಿನಲ್ಲಿ ನಡೆಯಬೇಕಿದ್ದ RCB ಕೊನೆಯ ಪಂದ್ಯ ಲಕ್ನೋಗೆ ಶಿಫ್ಟ್

    – ಅಭಿಮಾನಿಗಳಿಗೆ ಭಾರೀ ನಿರಾಸೆ

    ಬೆಂಗಳೂರು: ಕಳೆದ ಕೆಲವು ದಿನಗಳಿಂದ ಬೆಂಗಳೂರಿನಲ್ಲಿ (Bengaluru) ಸುರಿಯುತ್ತಿರುವ ಭಾರೀ ಮಳೆ ಹಿನ್ನೆಲೆ ಮೇ 23ರಂದು ತವರು ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bengaluru) ತಂಡದ ಲೀಗ್ ಸುತ್ತಿನ ಪಂದ್ಯ ಲಕ್ನೋಗೆ ಸ್ಥಳಾಂತರಿಸಲಾಗಿದೆ.

    ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ವರುಣನ ಅಬ್ಬರ ಜೋರಾಗಿದ್ದು, ಮೇ 24ರ ವರೆಗೆ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹೀಗಾಗಿ ಮೇ 23ರಂದು ಆರ್‌ಸಿಬಿ ತನ್ನ ತವರೂರಲ್ಲಿ ಆಡಬೇಕಿದ್ದ ಲೀಗ್‌ನ ಕೊನೆಯ ಪಂದ್ಯ ಸ್ಥಳಾಂತರಗೊಂಡಿದೆ. ಮೇ 23ರಂದು ಲಕ್ನೋದ ಏಕನಾ ಕ್ರೀಡಾಂಗಣದಲ್ಲಿ (Ekana Cricket Stadium) ಆರ್‌ಸಿಬಿ (RCB) ಹಾಗೂ ಎಸ್‌ಆರ್‌ಹೆಚ್ (SRH) ತಂಡಗಳು ಮುಖಾಮುಖಿಯಾಗಲಿವೆ.ಇದನ್ನೂ ಓದಿ: ರಾಹುಲ್ ಜೆಟ್‌ ಪ್ರಶ್ನೆಗೆ ಬಿಜೆಪಿ ಪಾಕ್ ಪೋಸ್ಟರ್ – ಬಿರಿಯಾನಿ ತಿಂದವರು ಯಾರು? ಅಂತ ಕಾಂಗ್ರೆಸ್ ಕೌಂಟರ್

    ಮುನ್ನ ಮೇ 17ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಆರ್‌ಸಿಬಿ ಹಾಗೂ ಕೆಕೆಆರ್ ಪಂದ್ಯ ಭಾರೀ ಮಳೆಯಿಂದಾಗಿ ರದ್ದಾಗಿತ್ತು. ಹೀಗಾಗಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಪಂದ್ಯವನ್ನ ಸ್ಥಳಾಂತರಿಸಲಾಗಿದೆ. ಅಲ್ಲಿಗೆ ತವರು ಕ್ರೀಡಾಂಗಣದಲ್ಲಿ ಆರ್‌ಸಿಬಿ ಈ ಆವೃತ್ತಿಯ ಪಂದ್ಯಗಳನ್ನು ಮುಗಿಸಿದಂತಾಗಿದೆ.

    ಈಗಾಗಲೇ 12 ಪಂದ್ಯಗಳನ್ನಾಡಿರುವ ಆರ್‌ಸಿಬಿ 8 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದು, 17 ಅಂಕ ಗಳಿಸಿ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ. ಪ್ಲೇ ಆಫ್‌ಗೆ ಎಂಟ್ರಿ ಕೊಟ್ಟಿರೋ ಆರ್‌ಸಿಬಿ ನಂ.1 ಪಟ್ಟಕ್ಕಾಗಿ ಹಣಾಹಣಿ ನಡೆಸುತ್ತಿದೆ.ಇದನ್ನೂ ಓದಿ: ಪಂಜಾಬ್‌ನಲ್ಲಿ ಏರೋಸ್ಪೇಸ್ ಎಂಜಿನಿಯರ್ ಸಾವು ಕೇಸ್ – ಪ್ರೊಫೆಸರ್ ಅರೆಸ್ಟ್

  • ನಾಳೆ ಚಿನ್ನಸ್ವಾಮಿ ಸುತ್ತಮುತ್ತ ನೋ ಪಾರ್ಕಿಂಗ್ – ಎಲ್ಲಿ ಪಾರ್ಕ್ ಮಾಡಬಹುದು?

    ನಾಳೆ ಚಿನ್ನಸ್ವಾಮಿ ಸುತ್ತಮುತ್ತ ನೋ ಪಾರ್ಕಿಂಗ್ – ಎಲ್ಲಿ ಪಾರ್ಕ್ ಮಾಡಬಹುದು?

    ಬೆಂಗಳೂರು: ಭಾರತ-ಪಾಕಿಸ್ತಾನ ಕದನ ವಿರಾಮದ ಬಳಿಕ ನಾಳೆಯಿಂದ ಐಪಿಎಲ್ ಮತ್ತೆ ಆರಂಭವಾಗುತ್ತಿದೆ. ಎಂ.ಚಿನ್ನಸ್ವಾಮಿ ಸ್ಟೇಡಿಯಂ (M Chinnaswamy Stadium) ಸುತ್ತಮುತ್ತ ನೋ ಪಾರ್ಕಿಂಗ್ ಇರಲಿದೆ.

    ಭಾರತ-ಪಾಕ್ ಉದ್ವಿಗ್ನತೆಯಿಂದಾಗಿ ಮೇ 8ರಂದು ಐಪಿಎಲ್ (IPL) ಸ್ಥಗಿತಗೊಂಡಿತ್ತು. ಕದನ ವಿರಾಮ ಘೋಷಣೆಯಾದ ಬಳಿಕ ಮತ್ತೆ ಆರಂಭವಾಗುತ್ತಿದ್ದು, ಮೇ 17ರಂದು ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ (RCB) ಹಾಗೂ ಕೆಕೆಆರ್ (KKR) ತಂಡಗಳು ಮುಖಾಮುಖಿಯಾಗಲಿವೆ.ಇದನ್ನೂ ಓದಿ: ಹಿಂದೂ ಯುವಕ, ಮುಸ್ಲಿಂ ಯುವತಿಯ ಪ್ರೇಮವಿವಾಹ – ರಕ್ಷಣೆ ಕೋರಿ ಪೊಲೀಸ್ ಮೊರೆ ಹೋದ ನವಜೋಡಿ

    ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಸಂಚಾರಿ ಪೊಲೀಸರು ಅಲರ್ಟ್ ಘೋಷಿಸಿದ್ದು, ಟ್ರಾಫಿಕ್ ತಡೆಗಟ್ಟಲು ಹಲವು ಕ್ರಮ ಕೈಗೊಂಡಿದ್ದಾರೆ. ಜೊತೆಗೆ ಸುಗಮ ಸಂಚಾರಕ್ಕಾಗಿ ವ್ಯವಸ್ಥೆ ಮಾಡಿದ್ದು, ಮಧ್ಯಾಹ್ನ 3ರಿಂದ ರಾತ್ರಿ 11ರವರೆಗೂ ಸ್ಟೇಡಿಯಂ ಸುತ್ತಮುತ್ತ ನೋ ಪಾರ್ಕಿಂಗ್ ಇರಲಿದೆ.

    ಪಂದ್ಯ ವೀಕ್ಷಿಸಲು ಬರುವವರಿಗೆ ಪಾರ್ಕಿಂಗ್‌ಗಾಗಿ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದ್ದು, ಓಲಾ, ಉಬರ್, ಆಟೋ ಇತ್ಯಾದಿ ಕ್ಯಾಬ್‌ಗಳು ಪಿಕ್‌ಪ್ ಮತ್ತು ಡ್ರಾಪ್ ಮಾಡಲು ಪ್ರತ್ಯೇಕ ಸ್ಥಳ ನಿಗದಿ ಮಾಡಲಾಗಿದೆ. ಸ್ಟೇಡಿಯಂ ಸುತ್ತಮುತ್ತ ಪಾರ್ಕಿಂಗ್ ಕೊರತೆಯಿರುವುದರಿಂದ ಬಿಎಂಟಿಸಿ, ಮೆಟ್ರೋ ಬಳಸಲು ಮನವಿ ಮಾಡಲಾಗಿದೆ.

    ಎಲ್ಲೆಲ್ಲಿ ವಾಹನಗಳ ನಿಲುಗಡೆ ನಿಷೇಧ?
    1. ಕ್ವೀನ್ಸ್ ರಸ್ತೆ- ಬಾಳೇಕುಂದ್ರಿ ವೃತ್ತದಿಂದ ಕ್ವೀನ್ಸ್ ವೃತ್ತದವರೆಗೆ ರಸ್ತೆಯ ಎರಡೂ ಕಡೆ
    2. ಎಂ.ಜಿ ರಸ್ತೆ- ಅನಿಲ್ ಕುಂಬ್ಳೆ ವೃತ್ತದಿಂದ ಕ್ವೀನ್ಸ್ ವೃತ್ತದವರೆಗೆ ರಸ್ತೆಯ ಎರಡೂ ಕಡೆ
    3. ಲಿಂಕ್ ರಸ್ತೆ- ಎಂ.ಜಿ ರಸ್ತೆಯಿಂದ ಕಬ್ಬನ್ ಪಾರ್ಕ್ ರಸ್ತೆವರೆಗೆ
    4. ರಾಜಭವನ ರಸ್ತೆ- ಟಿ.ಚೌಡಯ್ಯ ರಸ್ತೆ ಮತ್ತು ರೇಸ್ ಕೋರ್ಸ್ ರಸ್ತೆಗಳಲ್ಲಿ
    5. ಸೆಂಟ್ರಲ್ ಸ್ಟ್ರಿಟ್ ರಸ್ತೆಯ ಎರಡೂ ಕಡೆ
    6. ಕಬ್ಬನ್ ರಸ್ತೆ- ಸಿ.ಟಿ.ಓ. ವೃತ್ತದಿಂದ ಡಿಕೆನ್ ಸನ್ ರಸ್ತೆ ಜಂಕ್ಷನ್‌ನ ರಸ್ತೆಯ ಎರಡೂ ಕಡೆ
    7. ಸೆಂಟ್ ಮಾರ್ಕ್ಸ್ ರಸ್ತೆ- ಕ್ಯಾಶ್ ಫಾರ್ಮಸಿ ಜಂಕ್ಷನ್‌ನಿಂದ ಅನಿಲ್ ಕುಂಬ್ಳೆ ವೃತ್ತದವರೆಗೆ
    8. ಮ್ಯೂಸಿಯಂ ರಸ್ತೆ-,ಎಂ.ಜಿ ರಸ್ತೆಯಿಂದ ಸೆಂಟ್ ಮಾರ್ಕ್ಸ್ ರಸ್ತೆ ವರೆಗೆ ಹಾಗೂ ಆಶಿರ್ವಾದಂ ವೃತ್ತದವರೆಗೆ
    9. ಕಸ್ತೂರಬಾ ರಸ್ತೆ- ಕ್ವೀನ್ಸ್ ವೃತ್ತದಿಂದ ಹಡ್ಸನ್ ವೃತ್ತದವರೆಗೆ
    10. ಮಲ್ಯ ಆಸ್ಪತ್ರೆ ರಸ್ತೆ- ಸಿದ್ದಲಿಂಗಯ್ಯ ವೃತ್ತದಿಂದ ಆರ್.ಆರ್.ಎಂ.ಆರ್ ವೃತ್ತದವರೆಗೆ.
    11. ಕಬ್ಬನ್‌ಪಾರ್ಕ್ ಒಳಭಾಗ- ಕಿಂಗ್ ರಸ್ತೆ, ಪ್ರೆಸ್ ಕ್ಲಬ್ ಮುಂಭಾಗ, ಬಾಲಭವನ ಮುಂಭಾಗ
    11. ಲ್ಯಾವೆಲ್ಲಿ ರಸ್ತೆ- ಕ್ವೀನ್ಸ್ ವೃತ್ತದಿಂದ ವಿಠಲ್ ಮಲ್ಯ ರಸ್ತೆ ಜಂಕ್ಷನ್‌ವರೆಗೆ
    12. ವಿಠಲ್ ಮಲ್ಯ ರಸ್ತೆ- ಸಿದ್ದಲಿಂಗಯ್ಯ ವೃತ್ತದಿಂದ ಸೆಂಟ್ ಮಾರ್ಕ್ಸ್ ರಸ್ತೆಯ ಬಿಷಪ್‌ಕಾಟನ್ ಬಾಲಕಿಯರ ಶಾಲೆಯವರೆಗೆ

    ಪಾರ್ಕಿಂಗ್ ವ್ಯವಸ್ಥೆ:
    1. ಪಂದ್ಯ ವೀಕ್ಷಣೆ ಮಾಡಲು ಬರೋರಿಗೆ ಸೆಂಟ್ ಜೋಸೆಫ್ ಹೈಸ್ಕೂಲ್ ಗ್ರೌಂಡ್, ಯು.ಬಿ.ಸಿಟಿ ನಿಲುಗಡೆ ಸ್ಥಳದಲ್ಲಿ ವಾಹನಗಳ ನಿಲುಗಡೆಗೆ ವ್ಯವಸ್ಥೆ
    2. ಶಿವಾಜಿನಗರ ಬಸ್ ನಿಲ್ದಾಣದ 1ನೇ ಮಹಡಿಯಲ್ಲಿ ಪಾರ್ಕಿಂಗ್
    3. ಕೆ.ಎಸ್.ಸಿ.ಎ. ಸದಸ್ಯರ ವಾಹನಗಳಿಗೆ ಸೆಂಟ್ ಜೋಸೆಫ್ ಬಾಲಕರ ಶಾಲೆ ಮೈದಾನ.ಇದನ್ನೂ ಓದಿ: ಕಾಂಗ್ರೆಸ್‌ನವ್ರಿಗೆ ಪಾಕ್‌ ಫ್ರೀ ವೀಸಾ ಕೊಡುತ್ತೆ, ಮಂಜುನಾಥ್ ನೋಡ್ಕೊಂಡು ಬರಲಿ: ಯತ್ನಾಳ್ ಕಿಡಿ

  • ಚಲಿಸುತ್ತಿದ್ದ ಕಾರುಗಳ ಮೇಲೆ ಧರೆಗೆ ಉರುಳಿದ ಮರ: ಇಬ್ಬರಿಗೆ ಗಾಯ

    ಚಲಿಸುತ್ತಿದ್ದ ಕಾರುಗಳ ಮೇಲೆ ಧರೆಗೆ ಉರುಳಿದ ಮರ: ಇಬ್ಬರಿಗೆ ಗಾಯ

    ಬೆಂಗಳೂರು: ಒಣಗಿದ ಮರವೊಂದು ಧರೆಗೆ ಉರುಳಿ ಇಬ್ಬರು ಗಾಯಗೊಂಡಿರುವ ಘಟನೆ ನಗರದ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ (M.Chinnaswamy Stadium) ಹತ್ತಿರ ನಡೆದಿದೆ.ಇದನ್ನೂ ಓದಿ: ಇಂದು ಕಿಚ್ಚನ ಹುಟ್ಟುಹಬ್ಬ: ಸೆಲೆಬ್ರೆಷನ್‌ಗೆ ಜಯನಗರದಲ್ಲಿ ಭರ್ಜರಿ ತಯಾರಿ

    ನಿನ್ನೆ (ಸೆ.1) ಸಂಜೆ ಒಣಗಿದ ಬೃಹತ್ ಮರವೊಂದು ನಡುರಸ್ತೆಯಲ್ಲಿ ಉರುಳಿ ಬಿದ್ದಿದೆ. ಮೂರು ಕಾರುಗಳು ಅಡಿಗೆ ಸಿಲುಕಿದ್ದು, ಇಬ್ಬರು ಗಾಯಗೊಂಡಿದ್ದಾರೆ.

    ಚಲಿಸುತ್ತಿದ್ದ ಕಾರುಗಳ ಮೇಲೆ ಮರ ಧರೆಗೆ ಉರುಳಿದೆ. ಘಟನೆಯಲ್ಲಿ ಇಬ್ಬರಿಗೆ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಬಿಬಿಎಂಪಿ ಅರಣ್ಯ ಸಿಬ್ಬಂದಿಗಳು ಮರವನ್ನು ತೆರವುಗೊಳಿಸಿದ್ದು, ಸ್ಥಳಕ್ಕೆ ಕಬ್ಬನ್ ಪಾರ್ಕ್ (Cubbon Park) ಸಂಚಾರಿ ಪೊಲೀಸರು (Traffic Police) ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.ಇದನ್ನೂ ಓದಿ: ನನ್ನ ಬಂಧನಕ್ಕೆ ಇಡಿ ಬಂದಿದೆ – ದೆಹಲಿ ಆಪ್ ಶಾಸಕ ಕಿಡಿ

  • ಟೀಂ ಇಂಡಿಯಾ vs ಅಫ್ಘಾನಿಸ್ತಾನ ಮೂರನೇ ಟಿ20 – ಧೋನಿ ದಾಖಲೆ ಮುರಿತಾರಾ ರೋಹಿತ್?

    ಟೀಂ ಇಂಡಿಯಾ vs ಅಫ್ಘಾನಿಸ್ತಾನ ಮೂರನೇ ಟಿ20 – ಧೋನಿ ದಾಖಲೆ ಮುರಿತಾರಾ ರೋಹಿತ್?

    ಬೆಂಗಳೂರು: ಸತತ ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸಿರುವ ಟೀಂ ಇಂಡಿಯಾವು (Team India) ಅಫ್ಘಾನಿಸ್ತಾನ (Afghanistan) ವಿರುದ್ಧದ ಸರಣಿಯ ಮೂರನೇ ಟಿ20 ಪಂದ್ಯಕ್ಕೆ ತಯಾರಾಗಿದೆ. ಬುಧವಾರ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (M Chinnaswamy Stadium) ಅಂತಿಮ ಪಂದ್ಯದಲ್ಲಿ ಅಫ್ಘನ್ ತಂಡದ ವಿರುದ್ಧ ಟೀಂ ಇಂಡಿಯಾ ಸೆಣಸಲಿದೆ.

    2019ರಿಂದ ಭಾರತದಲ್ಲಿ ಆಡಿದ ಟಿ20 ಸರಣಿಯಲ್ಲಿ ಒಂದರಲ್ಲೂ ಭಾರತ ಸರಣಿಯನ್ನು ಸೋತಿಲ್ಲ. ಆಡಿದ 15 ಸರಣಿಗಳಲ್ಲಿ 13 ಸರಣಿ ವಶಪಡಿಸಿಕೊಂಡಿದೆ. ಉಳಿದ ಎರಡು ಸರಣಿ ಡ್ರಾದಲ್ಲಿ ಅಂತ್ಯಗೊಂಡಿದೆ. ಇನ್ನೂ ಮೂರನೇ ಟಿ20ಯಲ್ಲಿ ಭಾರತ ಗೆದ್ದರೆ, ಟೀಮ್ ಇಂಡಿಯಾ ಪರ ನಾಯಕನಾಗಿ 41 ಟಿ20 ಪಂದ್ಯಗಳನ್ನು ಗೆದ್ದ ಧೋನಿಯವರ ದಾಖಲೆಯನ್ನು ರೋಹಿತ್ ಮುರಿಯಲಿದ್ದಾರೆ. ಇದನ್ನೂ ಓದಿ: ಕೂಚ್ ಬೆಹಾರ್ ಟ್ರೋಫಿ ಫೈನಲ್‍ನಲ್ಲಿ ಯುವಿ ದಾಖಲೆ ಮುರಿದ ಕರ್ನಾಟಕದ ಓಪನರ್ ಪ್ರಖರ್ ಚತುರ್ವೇದಿ

    ಈ ಹಿಂದೆ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತವು ಆಸ್ಟ್ರೇಲಿಯಾ ವಿರುದ್ಧ 160 ರನ್‍ಗಳ ಮೊತ್ತವನ್ನು ಯಶಸ್ವಿಯಾಗಿ ರಕ್ಷಿಸಿಕೊಂಡಿತ್ತು. ಅಲ್ಲದೇ 6 ರನ್‍ಗಳಿಂದ ಗೆದ್ದಿತ್ತು.

    ಪಂದ್ಯವು ಸಂಜೆ 7 ಗಂಟೆಗೆ ಆರಂಭವಾಗಲಿದ್ದು, ಆ ಸಮಯದಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಮತ್ತು ಮುಕ್ತಾಯದ ಹಂತದಲ್ಲಿ 22 ಡಿಗ್ರಿಗೆ ಇಳಿಯುವ ಸಾಧ್ಯತೆ ಇದೆ. ಇನ್ನೂ ನಗರದಲ್ಲಿ ಬೆಳಗ್ಗೆ ಹಾಗೂ ಮಧ್ಯಾಹ್ನದ ವೇಳೆಗೆ ಮೋಡಕವಿದ ವಾತಾವರಣ ಇರಲಿದ್ದು, ಮಳೆ ಬರುವ ಲಕ್ಷಣ ಇಲ್ಲ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದನ್ನೂ ಓದಿ: ಯಶಸ್ಸಿನ ಶ್ರೇಯಸ್ಸು ಮಹಿ ಅಣ್ಣನಿಗೆ, CSKಗೆ ಸಲ್ಲಬೇಕು – ಚೆನ್ನೈಗೆ ಕ್ರೆಡಿಟ್‌ ಕೊಟ್ಟ ಶಿವಂ ದುಬೆ

  • ಚಿನ್ನಸ್ವಾಮಿ ಪಿಚ್‍ಗೆ -1 ರೇಟಿಂಗ್ – ಐಸಿಸಿ ಅಸಮಾಧಾನ

    ಚಿನ್ನಸ್ವಾಮಿ ಪಿಚ್‍ಗೆ -1 ರೇಟಿಂಗ್ – ಐಸಿಸಿ ಅಸಮಾಧಾನ

    ಬೆಂಗಳೂರು: ಭಾರತ ಹಾಗೂ ಶ್ರೀಲಂಕಾ ನಡುವಿನ 2ನೇ ಟೆಸ್ಟ್ ಪಂದ್ಯಕ್ಕೆ ಬಳಸಲಾದ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಪಿಚ್ ಸ್ಪರ್ಧಾತ್ಮಕವಾಗಿರಲಿಲ್ಲ ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ಅಸಮಾಧಾನ ವ್ಯಕ್ತಪಡಿಸಿದೆ. ಜೊತೆಗೆ -1 ರೇಟಿಂಗ್ ನೀಡಿದೆ.

    ಭಾರತ ಹಾಗೂ ಶ್ರೀಲಂಕಾ ನಡುವಿನ ಪಿಂಕ್ ಬಾಲ್ ಡೇ-ನೈಟ್ ಟೆಸ್ಟ್ ಪಂದ್ಯ ಕೇವಲ ಮೂರೇ ದಿನಕ್ಕೆ ಮುಕ್ತಾಯವಾಗಿತ್ತು. ಬಳಿಕ ಪಿಚ್ ಬಗ್ಗೆ ಐಸಿಸಿ ಮ್ಯಾಚ್ ರೆಫ್ರಿ ಜಾವಗಲ್ ಶ್ರೀನಾಥ್ ಐಸಿಸಿಗೆ ವರದಿ ಸಲ್ಲಿಸಿದ್ದರು. ಪಿಚ್ ಮೊದಲ ದಿನವೇ ಸ್ಪಿನ್ನರ್‌ಗಳಿಗೆ ನಿರೀಕ್ಷೆಗಿಂತ ಹೆಚ್ಚು ನೆರವು ನೀಡಿತ್ತು. ಪಿಚ್ ಸ್ಪರ್ಧಾತ್ಮಕವಾಗಿರಲಿಲ್ಲ ಎಂದು ಶ್ರೀನಾಥ್ ಐಸಿಸಿಗೆ ವರದಿ ಸಲ್ಲಿಕೆ ಮಾಡಿದ್ದಾರೆ. ಬಳಿಕ ಪಿಚ್ ಸಾಧಾರಣವಾಗಿತ್ತು ಎಂದು ಐಸಿಸಿ -1 ರೇಟಿಂಗ್ ನೀಡಿದೆ. ಇದನ್ನೂ ಓದಿ: ಟಿ20 ಮಾದರಿಯಲ್ಲಿ ಏಷ್ಯಾ ಕಪ್ – ಶ್ರೀಲಂಕಾದಲ್ಲಿ ಆಗಸ್ಟ್ 27ಕ್ಕೆ ಆರಂಭ

    ಅಂತಾರಾಷ್ಟ್ರೀಯ ಪಂದ್ಯ ಕೈತಪ್ಪುವ ಭೀತಿ:
    ಐದು ದಿನಗಳ ಕಾಲ ನಡೆಯುವ ಟೆಸ್ಟ್ ಪಂದ್ಯಗಳು ನಿಗದಿಪಡಿಸಿದ ದಿನಕ್ಕಿಂತ ಮುಂಚಿತವಾಗಿ ಪೂರ್ಣಗೊಂಡರೆ ಮ್ಯಾಚ್ ರೆಫ್ರಿ ಪಿಚ್ ಬಗ್ಗೆ ಐಸಿಸಿಗೆ ವರದಿ ಸಲ್ಲಿಸಬೇಕು. ಮ್ಯಾಚ್ ರೆಫ್ರಿ ಸಲ್ಲಿಸಿದ ವರದಿ ಪರಿಶೀಲಿಸಿದ ಬಳಿಕ ಐಸಿಸಿ ಪಿಚ್ ಕಳಪೆ ಮಟ್ಟದ್ದಾಗಿದ್ದರೆ -3 ಹಾಗೂ ಆಟಕ್ಕೆ ಯೋಗ್ಯವಲ್ಲದ ಪಿಚ್‍ಗೆ -5 ಅಂಕ ನೀಡುತ್ತದೆ. 5 ವರ್ಷಗಳೊಳಗೆ -5 ಅಂಕ ಪಡೆಯುವ ಪಿಚ್‍ಗಳಲ್ಲಿ 1 ವರ್ಷಗಳ ಕಾಲ ಯಾವುದೇ ಅಂತಾರಾಷ್ಟ್ರೀಯ ಪಂದ್ಯಗಳನ್ನು ನಡೆಸುವುದಿಲ್ಲ. ಇದೀಗ ಕೆಎಸ್‍ಸಿಎಗೆ -1 ಅಂಕ ಸಿಕ್ಕಿದ್ದು, ಮುಂದಿನ ದಿನಗಳಲ್ಲಿ ಅಂತಾರಾಷ್ಟ್ರೀಯ ಪಂದ್ಯಗಳಿಗೆ ಪಿಚ್ ಸಿದ್ಧಪಡಿಸುವಾಗ ಬಹಳ ಎಚ್ಚರಿಕೆ ವಹಿಸಬೇಕಿದೆ. ಅಲ್ಲದೇ ಗುಣಮಟ್ಟದ ಪಿಚ್ ತಯಾರಿಕೆಗಾಗಿ ಗಮನಹರಿಸಬೇಕಾಗಿದೆ. ಇದನ್ನೂ ಓದಿ: 238 ರನ್‍ಗಳ ಜಯದೊಂದಿಗೆ ದಾಖಲೆ ನಿರ್ಮಿಸಿದ ಭಾರತ

    ಪಿಂಕ್ ಬಾಲ್ ಟೆಸ್ಟ್ ಫಲಿತಾಂಶ:
    ಕೆಎಸ್‍ಸಿಎಯಲ್ಲಿ ನಡೆದ ಭಾರತ ಹಾಗೂ ಶ್ರೀಲಂಕಾ ನಡುವಿನ 2ನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‍ನಲ್ಲಿ ಭಾರತ 252ಕ್ಕೆ ಆಲೌಟ್ ಆಗಿತ್ತು. ಬಳಿಕ ಶ್ರೀಲಂಕಾ ಬ್ಯಾಟಿಂಗ್ ಆರಂಭಿಸಿ 109 ರನ್‍ಗಳಿಗೆ ಸರ್ವಪತನ ಕಂಡಿತು. 143 ರನ್‍ಗಳ ಮುನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್ ಆರಂಭಿಸಿದ ಭಾರತ ತಂಡ 303 ರನ್‍ಗಳಿಗೆ 9 ವಿಕೆಟ್ ಕಳೆದುಕೊಂಡು ಡಿಕ್ಲೇರ್ ಮಾಡಿಕೊಂಡಿತ್ತು. ಗೆಲ್ಲಲು 447 ರನ್ ಗುರಿ ಪಡೆದ ಶ್ರೀಲಂಕಾ ತಂಡ 208 ರನ್‍ಗಳಿಗೆ ಆಲೌಟ್ ಆಯಿತು. ಭಾರತ ತಂಡ 238 ರನ್‍ಗಳ ಜಯ ಗಳಿಸಿತು. ಈ ಮೂಲಕ ಮೂರೇ ದಿನಕ್ಕೆ ಟೆಸ್ಟ್ ಪಂದ್ಯ ಅಂತ್ಯಗೊಂಡಿತ್ತು.

  • ಕೆಎಸ್‍ಸಿಎ ವತಿಯಿಂದ ಸಿಎಂ ಪರಿಹಾರ ನಿಧಿಗೆ 10 ಲಕ್ಷ ದೇಣಿಗೆ

    ಕೆಎಸ್‍ಸಿಎ ವತಿಯಿಂದ ಸಿಎಂ ಪರಿಹಾರ ನಿಧಿಗೆ 10 ಲಕ್ಷ ದೇಣಿಗೆ

    ಬೆಂಗಳೂರು: ನೆರೆ ಸಂತ್ರಸ್ತರ ನೆರವಿಗೆ ಕರ್ನಾಟಕ ರಾಜ್ಯ ಕ್ರಿಕೆಟ್ ಅಕಾಡೆಮಿ (ಕೆಎಸ್‍ಸಿಎ) ಮುಂದಾಗಿದ್ದು, ಸಿಎಂ ಪರಿಹಾರ ನಿಧಿಗೆ 10 ಲಕ್ಷ ರೂ. ದೇಣಿಗೆ ನೀಡಿದೆ.

    ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಟಿ-20 ಸರಣಿಯ ಮೂರನೇ ಹಾಗೂ ಕೊನೆಯ ಪಂದ್ಯವು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರಂಭಗೊಂಡಿದೆ. ಇದಕ್ಕೂ ಮುನ್ನ ಸ್ಟೇಡಿಯಂನಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೆಎಸ್‍ಸಿಎ ಅಧಿಕಾರಿಗಳು 10 ಲಕ್ಷ ರೂ. ಚೆಕ್ ನೀಡಿದರು. ಈ ವೇಳೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಕೋಚ್ ರವಿಶಾಸ್ತ್ರಿ ಇದ್ದರು.

    ಟೀಂ ಇಂಡಿಯಾ ಹಾಗೂ ದಕ್ಷಿಣ ಆಫ್ರಿಕಾ ಆಟಗಾರರು ಸ್ಟೇಡಿಯಂಗೆ ಬರುತ್ತಿದ್ದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕೂಡ ಸ್ಟೇಡಿಯಂಗೆ ಪ್ರಯಾಣ ಬೆಳೆಸಿದರು. ಆದರೆ ಸಂಚಾರ ಅಸ್ತವ್ಯಸ್ತವಾಗಿದ್ದರಿಂದ ಸಿಎಂ ಚಿನ್ನಸ್ವಾಮಿ ಕ್ರೀಡಾಂಗಣದ ಮುಂಭಾಗದಲ್ಲಿ ಎರಡು ಮೂರು ನಿಮಿಷಗಳ ಕಾಲ ಟ್ರಾಫಿಕ್‍ನಲ್ಲಿ ಸಿಕ್ಕಿಹಾಕಿಕೊಂಡಿದ್ದರು. ಬಳಿಕ ಸ್ಟೇಡಿಯಂಗೆ ಆಗಮಿಸಿದ ಅವರನ್ನು ಆಡಳಿತ ಮಂಡಳಿ ಸ್ವಾಗತಿಸಿತು.

    ಸಿಎಂ ಯಡಿಯೂರಪ್ಪ ಅವರು ವಿರಾಟ್ ಕೊಹ್ಲಿ ಹಾಗೂ ರವಿಶಾಸ್ತ್ರಿ ಅವರಿಗೆ ಧನ್ಯವಾದ ಹೇಳಿದರು. ಉಪ ಮುಖ್ಯಮಂತ್ರಿ ಅಶ್ವಥ್ ನಾರಾಯಣ, ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಬಿ.ಎಸ್. ಯಡಿಯೂರಪ್ಪನವರಿಗೆ ಸಾಥ್ ನೀಡಿದರು.