ಚೆನ್ನೈ: 77ನೇ ವಸಂತಕ್ಕೆ ಕಾಲಿಟ್ಟ ಸಿಎಂ ಸಿದ್ದರಾಮಯ್ಯ (Siddaramaiah) ಅವರಿಗೆ ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ (M.K.Stalin) ಕನ್ನಡದಲ್ಲೇ (Kannada) ಶುಭ ಹಾರೈಸಿದ್ದಾರೆ.
ಕರ್ನಾಟಕದ ಮಾನ್ಯ ಮುಖ್ಯಮಂತ್ರಿಗಳಾದ ತಿರು. @Siddaramaiah ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು.
ಭಾಷಾ ಹಕ್ಕುಗಳನ್ನು ರಕ್ಷಿಸುವಲ್ಲಿ ಮತ್ತು ಸಾಮಾಜಿಕ ನ್ಯಾಯವನ್ನು ಮುನ್ನಡೆಸುವಲ್ಲಿ ನಿಮ್ಮ ಬಲವಾದ ಧ್ವನಿಯು ನಿಜವಾದ ಒಕ್ಕೂಟ ಮತ್ತು ಅಂತರ್ಗತ ಪ್ರಜಾಪ್ರಭುತ್ವದ ಚೈತನ್ಯವನ್ನು ಪ್ರತಿಬಿಂಬಿಸುತ್ತದೆ. ಈ ಮೌಲ್ಯಗಳು ಇಂದಿನ ಭಾರತದಲ್ಲಿ ಅಪಾರ… pic.twitter.com/2Q13WobUEW
ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಸ್ಟಾಲಿನ್, ಭಾಷಾ ಹಕ್ಕುಗಳನ್ನು ರಕ್ಷಿಸುವಲ್ಲಿ ಮತ್ತು ಸಾಮಾಜಿಕ ನ್ಯಾಯವನ್ನು ಮುನ್ನಡೆಸುವಲ್ಲಿ ನಿಮ್ಮ ಬಲವಾದ ಧ್ವನಿಯು ನಿಜವಾದ ಒಕ್ಕೂಟ ಮತ್ತು ಅಂತರ್ಗತ ಪ್ರಜಾಪ್ರಭುತ್ವದ ಚೈತನ್ಯವನ್ನು ಪ್ರತಿಬಿಂಬಿಸುತ್ತದೆ. ಈ ಮೌಲ್ಯಗಳು ಇಂದಿನ ಭಾರತದಲ್ಲಿ ಅಪಾರ ಮಹತ್ವವನ್ನು ಹೊಂದಿವೆ. ತಮಿಳುನಾಡು ಮತ್ತು ಕರ್ನಾಟಕದ ಜನರು ಅವುಗಳನ್ನು ಎತ್ತಿಹಿಡಿಯುವಲ್ಲಿ ಒಟ್ಟಾಗಿ ನಿಲ್ಲುತ್ತಾರೆ.
ನಿಮಗೆ ನಿರಂತರ ಶಕ್ತಿ, ಸಂತೋಷ ಮತ್ತು ದೀರ್ಘಾಯುಷ್ಯವನ್ನು ಹಾರೈಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
– ಭಾರತಕ್ಕೆ ಎರಡಲ್ಲ, ಬಹು ಭಾಷೆಗಳು ಬೇಕು: ಸ್ಟಾಲಿನ್‌ಗೆ ಆಂಧ್ರ ಡಿಸಿಎಂ ಟಾಂಗ್
ತ್ರಿಭಾಷಾ ಸೂತ್ರದ ಮೂಲಕ ಕೇಂದ್ರ ಸರ್ಕಾರ ಹಿಂದಿ ಹೇರಿಕೆ ಮಾಡುತ್ತಿದೆ ಎಂದು ಆಕ್ಷೇಪಿಸಿರುವ ತಮಿಳುನಾಡು ಸಿಎಂ ಸ್ಟಾಲಿನ್‌ಗೆ ನಟ ಹಾಗೂ ಆಂಧ್ರಪ್ರದೇಶ ಡಿಸಿಎಂ ಪವನ್ ಕಲ್ಯಾಣ್ (Pawan Kalyan) ತಿರುಗೇಟು ನೀಡಿದ್ದಾರೆ. ಹಿಂದಿ ಭಾಷೆ ವಿರೋಧಿಸುವವರು ತಮಿಳು ಸಿನಿಮಾವನ್ನು ಯಾಕೆ ಹಿಂದಿಗೆ ಡಬ್ಬಿಂಗ್ ಮಾಡ್ತೀರಾ ಎಂದು ಪವನ್ ಪ್ರಶ್ನಿಸಿದ್ದಾರೆ.
ಕೇಂದ್ರ ಸರ್ಕಾರ ಮತ್ತು ತಮಿಳುನಾಡು ನಡುವೆ ನಡೆಯುತ್ತಿರುವ ತ್ರಿಭಾಷಾ ಫೈಟ್ ನಡುವೆ, ಜನಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್ ಈ ಹೇಳಿಕೆ ನೀಡಿದ್ದಾರೆ. ಭಾರತದ ಭಾಷಾ ವೈವಿಧ್ಯತೆಯನ್ನು ಕಾಪಾಡುವ ಅಗತ್ಯವನ್ನು ಒತ್ತಿ ಹೇಳಿದ್ದಾರೆ. ದೇಶಕ್ಕೆ ಎರಡಲ್ಲ, ತಮಿಳು ಸೇರಿದಂತೆ ಬಹು ಭಾಷೆಗಳು ಬೇಕು ಎಂದು ನಟ ಮಾತನಾಡಿದ್ದಾರೆ. ಇದನ್ನೂ ಓದಿ: ಕೇಂದ್ರದ 2 ಸಾವಿರ ಕೋಟಿ ಕಳೆದುಕೊಂಡರೂ ನಾವು ನಮ್ಮ ಸಿದ್ಧಾಂತದಲ್ಲಿ ರಾಜಿಯಾಗಲ್ಲ: ತಮಿಳುನಾಡು
ಭಾರತಕ್ಕೆ ತಮಿಳು ಸೇರಿದಂತೆ ಬಹು ಭಾಷೆಗಳ ಅಗತ್ಯವಿದೆ. ನಾವು ಭಾಷಾ ವೈವಿಧ್ಯತೆಯನ್ನು ಅಳವಡಿಸಿಕೊಳ್ಳಬೇಕು. ನಮ್ಮ ರಾಷ್ಟ್ರದ ಸಮಗ್ರತೆಯನ್ನು ಕಾಪಾಡಿಕೊಳ್ಳುವುದು ಮಾತ್ರವಲ್ಲದೇ, ಜನರಲ್ಲಿ ಪ್ರೀತಿ ಮತ್ತು ಏಕತೆಯನ್ನು ಬೆಳೆಸಬೇಕು ಎಂದು ಕಾಕಿನಾಡ ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಆಶಯ ವ್ಯಕ್ತಪಡಿಸಿದ್ದಾರೆ.
ಕೆಲವರು ಸಂಸ್ಕೃತವನ್ನು ಏಕೆ ಟೀಕಿಸುತ್ತಾರೆಂದು ನನಗೆ ಅರ್ಥವಾಗುತ್ತಿಲ್ಲ. ಆರ್ಥಿಕ ಲಾಭಕ್ಕಾಗಿ ತಮ್ಮ ಸಿನಿಮಾಗಳನ್ನು ಹಿಂದಿಗೆ (Hindi) ಡಬ್ ಮಾಡಲು ಅವಕಾಶ ನೀಡುವ ತಮಿಳುನಾಡು ರಾಜಕಾರಣಿಗಳು ಹಿಂದಿಯನ್ನು ಏಕೆ ವಿರೋಧಿಸುತ್ತಾರೆ? ಅವರು ಬಾಲಿವುಡ್‌ನಿಂದ ಹಣವನ್ನು ಬಯಸುತ್ತಾರೆ. ಆದರೆ ಹಿಂದಿ ಸ್ವೀಕರಿಸಲು ನಿರಾಕರಿಸುತ್ತಾರೆ. ಇದು ಯಾವ ರೀತಿಯ ತರ್ಕ ಎಂದು ಹಿಂದಿ ವಿರೋಧಿಗಳಿಗೆ ಟಾಂಗ್ ಕೊಟ್ಟಿದ್ದಾರೆ. ಇದನ್ನೂ ಓದಿ: ಬಜೆಟ್ ಪ್ರತಿಯಲ್ಲಿ ರೂಪಾಯಿ ಚಿಹ್ನೆ ‘₹’ ಕೈಬಿಟ್ಟ ತಮಿಳುನಾಡು
ಕೇಂದ್ರ ಸರ್ಕಾರದ ವಿರುದ್ಧ ‘ಹಿಂದಿ ಹೇರಿಕೆ’ ಮತ್ತು ರಾಷ್ಟ್ರೀಯ ಶಿಕ್ಷಣ ನೀತಿಯ (ಎನ್‌ಇಪಿ) ತ್ರಿಭಾಷಾ ಸೂತ್ರವನ್ನು ಜಾರಿಗೆ ತರಲು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ವಿರೋಧ ವ್ಯಕ್ತಪಡಿಸಿದ್ದಾರೆ. ಇವರ ನಿಲುವಿಗೆ ಅನೇಕ ನಟರು, ರಾಜಕಾರಣಿಗಳು ಬೆಂಬಲ ಸೂಚಿಸಿದ್ದಾರೆ. ಈ ಹೊತ್ತಲ್ಲೇ ನಟ, ರಾಜಕಾರಣಿ ಪವನ್ ಕಲ್ಯಾಣ್ ಬಹುಭಾಷಾ ಅಗತ್ಯತೆ ಬಗ್ಗೆ ಮಾತನಾಡಿದ್ದಾರೆ.
ನವದೆಹಲಿ: ಸಿಲಿಕಾನ್ ಸಿಟಿಯಲ್ಲಿ 2ನೇ ವಿಮಾನ ನಿಲ್ದಾಣಕ್ಕೆ ಸ್ಥಳ ಆಯ್ಕೆ ಮಾಡಿ ಮೊನ್ನೆಯಷ್ಟೇ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಪ್ರಸ್ತಾವನೆ ಸಲ್ಲಿಸಿದೆ. ಈ ನಡುವೆ ತಮಿಳುನಾಡು ಸರ್ಕಾರವು (Tamil Nadu Government) ಹೊಸೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಿಸಲು 2 ಸ್ಥಳ ಸೂಕ್ತ ಅಂತ ವಿಮಾನ ನಿಲ್ದಾಣ ಪ್ರಾಧಿಕಾರದಿಂದ ಗ್ರೀನ್ ಸಿಗ್ನಲ್ ಪಡೆದುಕೊಂಡು ಬಂದಿದೆ.
ಕರ್ನಾಟಕ ಸರ್ಕಾರವು ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ (Bengalur Airport) ದಟ್ಟಣೆ ತಗ್ಗಿಸಲು 2ನೇ ವಿಮಾನ ನಿಲ್ದಾಣವನ್ನು ಸ್ಥಾಪಿಸಲು ನಿರ್ಧಾರ ಕೈಗೊಂಡಿತ್ತು. ಇತ್ತ ತಮಿಳುನಾಡು ಸರ್ಕಾರ ಕೂಡ ಹೊಸೂರಿನಲ್ಲಿ ವಿಮಾನ ನಿಲ್ದಾಣ ಸ್ಥಾಪನೆ ಮಾಡಲು ಮುಂದಾಗಿತ್ತು. ಸದ್ಯ ಕರ್ನಾಟಕ ಸರ್ಕಾರವು ಸ್ಥಳ ಹುಡುಕಾಟ ನಡೆಸಿ 2-3 ದಿನಗಳ ಹಿಂದಷ್ಟೇ ಕೇಂದ್ರ ಸರ್ಕಾರದ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಅಷ್ಟರೊಳಗೆ ತಮಿಳುನಾಡು ಸರ್ಕಾರವು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದಿಂದ ಹೊಸೂರು ಬಳಿಯ 2 ಸ್ಥಳ ಸೂಕ್ತ ಎಂಬ ವರದಿಯನ್ನು ಪಡೆದುಕೊಂಡಿದೆ. ಇದನ್ನೂ ಓದಿ: ರಾಜ್ಯದಲ್ಲಿರೋದು ಸಿದ್ದರಾಮಯ್ಯನ ಸರ್ಕಾರ… ನಿಮ್ಮಪ್ಪನ ಸರ್ಕಾರ ಅಲ್ಲ – ಬಿಜೆಪಿ ಕಾರ್ಯಕರ್ತರ ವಿರುದ್ಧ ರೊಚ್ಚಿಗೆದ್ದ ಪ್ರದೀಪ್ ಈಶ್ವರ್
ಆಯ್ಕೆಯಾದ ಸ್ಥಳಗಳಾವುವು?
ಒಂದು ತನೇಜಾ ಏರೋಸ್ಪೇಸ್ ಮತ್ತು ಏವಿಯೇಷನ್ ಲಿಮಿಟೆಡ್ (TAAL) ವಿಮಾನ ನಿಲ್ದಾಣದಿಂದ ಸುಮಾರು 1.5 ಕಿ.ಮೀ ದೂರದಲ್ಲಿದೆ. ಮತ್ತೊಂದು ಉಲಗಂ ಬಳಿ (ಹೊಸೂರಿನ ಪೂರ್ವ ಮತ್ತು ಶೂಲಗಿರಿಯ ಉತ್ತರ) ಹೊಸೂರಿನಿಂದ ಸುಮಾರು 15.5 ಕಿ.ಮೀ ದೂರದಲ್ಲಿದೆ. ಎಲೆಕ್ಟ್ರಾನಿಕ್ ಸಿಟಿ ಹಾಗೂ ಸರ್ಜಾಪುರ ಎರಡಕ್ಕೂ ಉಲಗಂ ಸಮೀಪದಲ್ಲಿಯೇ ಇದೆ. ಎರಡರಲ್ಲಿ ಒಂದು ಸ್ಥಳವನ್ನು ಆಯ್ಕೆ ಮಾಡಿಕೊಳ್ಳುವಂತೆ ತಮಿಳುನಾಡಿಗೆ ಕೇಂದ್ರ ತಿಳಿಸಿದೆ. ಇದನ್ನೂ ಓದಿ: ಗ್ಯಾರಂಟಿಗಳಿಗೆ SCSP – TSP ಹಣ ಬಳಕೆ – ದಲಿತರ ಎಷ್ಟು ಕೋಟಿ ಹಣ ಬಳಕೆ? ಇಲ್ಲಿದೆ ಲೆಕ್ಕ..
ಅಕ್ಟೋಬರ್‌ನಲ್ಲೇ ಅರ್ಜಿ ಸಲ್ಲಿಸಿದ್ದ ತಮಿಳುನಾಡು
ತಮಿಳುನಾಡು ಸರ್ಕಾರವು 2024ರ ಅಕ್ಟೋಬರ್‌ನಲ್ಲಿ ಅಧ್ಯಯನಕ್ಕಾಗಿ ಐದು ಸ್ಥಳಗಳನ್ನು ಆಯ್ಕೆ ಮಾಡಿತ್ತು. ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹೊಸೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣದ ಕುರಿತು ಸಾಧ್ಯಾಸಾಧ್ಯತಾ ವರದಿಯನ್ನು ತಮಿಳುನಾಡು ಸರ್ಕಾರಕ್ಕೆ ನೀಡಿದೆ. ಎರಡು ಸ್ಥಳಗಳನ್ನು ಪರಿಶೀಲಿಸಿದ ನಂತರ ಈ ವರದಿಯನ್ನು ಸಿದ್ಧಪಡಿಸಿದೆ. ಈ ವರದಿಯ ಪ್ರಕಾರ, ಎರಡೂ ಸ್ಥಳಗಳು ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸೂಕ್ತವಾಗಿವೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಯುಪಿಯ ಪುರುಷನಿಗೆ ಪಾಕ್ ಏಜೆಂಟ್ ನೇಹಾ ಆಮಿಷ – ರಕ್ಷಣಾ ಇಲಾಖೆಯ ಮಾಹಿತಿ ಸೋರಿಕೆ ಮಾಡ್ತಿದ್ದವನ ಬಂಧನ
– ಸನಾತನ ಧರ್ಮ ಮಲೇರಿಯಾ ಎಂದಿದ್ದ ಸ್ಟಾಲಿನ್ ಪುತ್ರ ಉದಯನಿಧಿ – ಮನೆಯವರ ವಿಚಾರಗಳಿಂದ ಅಂತರ ಕಾಯ್ದುಕೊಂಡಿರುವ ಸ್ಟಾಲಿನ್ ಪತ್ನಿ
ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ (Kollur Mookambika Temple) ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ (M.K.Stalin) ಅವರ ಪತ್ನಿ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.
ಸ್ನೇಹಿತೆಯರ ಜೊತೆ ದೇಗುಲಕ್ಕೆ ಭೇಟಿ ನೀಡಿದ ದುರ್ಗಾ ಸ್ಟಾಲಿನ್ ಅವರು, ಮೂಕಾಂಬಿಕೆಯ ದರ್ಶನ ಮಾಡಿದರು. ದುರ್ಗಾ ಅವರು ಕೊಲ್ಲೂರು ಮೂಕಾಂಬಿಕೆಯ ಭಕ್ತರಾಗಿದ್ದಾರೆ.
ತಮಿಳುನಾಡು ಸಿಎಂ ಪತ್ನಿ ಜೊತೆಗೆ ಬಂದಿದ್ದ ಅವರ ಸ್ನೇಹಿತರೆಯರು ಮೂಕಾಂಬಿಕಾ ದೇವಿಗೆ ಚಿನ್ನದ ಕಿರೀಟ ಅರ್ಪಣೆ ಮಾಡಿದ್ದಾರೆ. ಖಾಸಗಿಯಾಗಿ ದೇವಿಗೆ ಕಿರೀಟ ಅರ್ಪಿಸಿ ದೇವಿ ಕೃಪೆಗೆ ಪಾತ್ರರಾಗಿದ್ದಾರೆ.
ಸ್ಟಾಲಿನ್ ಪುತ್ರ ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ಬಗ್ಗೆ ನಿರಂತರವಾಗಿ ಟೀಕಾಪ್ರಹಾರ ನಡೆಸಿದ್ದಾರೆ. ‘ಸನಾತನ ಧರ್ಮ ಮಲೇರಿಯಾ ಇದ್ದಂತೆ.. ಅದನ್ನು ನಿರ್ಮೂಲನೆ ಮಾಡಬೇಕು’ ಎಂದು ಡಿಸಿಎಂ ಉದಯನಿಧಿ ಹೇಳಿಕೆ ನೀಡಿದ್ದರು. ವಿವಾದಿತ ಹೇಳಿಕೆಯು ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿತ್ತು.
ಮನೆಯವರ ಇಂತಹ ಹೇಳಿಕೆಗಳಿಂದ ದುರ್ಗಾ ಸ್ಟಾಲಿನ್ ಅವರು ಅಂತರ ಕಾಯ್ದುಕೊಂಡಿದ್ದಾರೆ. ದೇವಾಲಯಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಗಮನ ಸೆಳೆದಿದ್ದಾರೆ. ಮನೆಯವರ ವಿಚಾರಧಾರೆ ಜೊತೆ ಅಂತರ ಕಾಯ್ದುಕೊಂಡಿದ್ದಾರೆ. ದಕ್ಷಿಣ ಭಾರತದ ವಿವಿಧ ದೇಗುಲಗಳಿಗೆ ಭೇಟಿ ನೀಡಿ, ಕೊಡುಗೆಗಳಿಂದ ದೈವ ಭಕ್ತೆ ಎನಿಸಿಕೊಂಡಿದ್ದಾರೆ.
– ದಕ್ಷಿಣ ರಾಜ್ಯಗಳ ಸಂಸದರು, ಪಕ್ಷದ ಪ್ರತಿನಿಧಿಗಳ ಜಂಟಿ ಕ್ರಿಯಾ ಸಮಿತಿ ರಚನೆಗೆ ನಿರ್ಧಾರ
ಚೆನ್ನೈ: ಕ್ಷೇತ್ರ ಪುನರ್‌ವಿಂಗಡಣೆ (Delimitation Row) ವಿಷಯವನ್ನು ಚರ್ಚಿಸಲು ನಡೆದ ಸರ್ವಪಕ್ಷ ಸಭೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ (M.K.Stalin), ಜನಸಂಖ್ಯೆಯ ಆಧಾರದ ಮೇಲೆ ಸಂಸದೀಯ ಕ್ಷೇತ್ರಗಳನ್ನು ಪುನರ್‌ವಿಂಗಡಿಸುವ ಪ್ರಸ್ತಾವಿತ ಕ್ರಮವನ್ನು ಸಾಮೂಹಿಕವಾಗಿ ವಿರೋಧಿಸಲು ದಕ್ಷಿಣ ರಾಜ್ಯಗಳ ಸಂಸದರು ಮತ್ತು ಪಕ್ಷದ ಪ್ರತಿನಿಧಿಗಳ ಜಂಟಿ ಕ್ರಿಯಾ ಸಮಿತಿಯನ್ನು ರಚಿಸುವಂತೆ ಸೂಚಿಸಿದ್ದಾರೆ.
ಎಂ.ಕೆ ಸ್ಟಾಲಿನ್ ಅಧ್ಯಕ್ಷತೆಯಲ್ಲಿ ಚೆನ್ನೈನಲ್ಲಿ ನಡೆದ ಸಭೆಯಲ್ಲಿ ಪ್ರಮುಖ ವಿರೋಧ ಪಕ್ಷ ಎಐಎಡಿಎಂಕೆ, ಕಾಂಗ್ರೆಸ್ ಮತ್ತು ಎಡ ಪಕ್ಷಗಳು, ನಟ-ರಾಜಕಾರಣಿ ಕಮಲ್ ಹಾಸನ್ ಮತ್ತು ವಿಜಯ್ ಅವರ ಟಿವಿಕೆ ಸೇರಿದಂತೆ ಇತರರು ಭಾಗವಹಿಸಿದ್ದರು. ಇದನ್ನೂ ಓದಿ: ಕುಂಭಮೇಳ: ಯುಪಿಯ ಮೂರು ಹೆದ್ದಾರಿಗಳಲ್ಲಿ 40 ಲಕ್ಷ ದಾಖಲೆಯ ವಾಹನಗಳ ಸಂಚಾರ
ತಮಿಳುನಾಡು ಬಿಜೆಪಿ ಸಭೆಗೆ ಗೈರಾಗಿದ್ದು, ರಾಜ್ಯಾಧ್ಯಕ್ಷ ಅಣ್ಣಾಮಲೈ ಇದನ್ನು ಅತ್ಯಂತ ತಮಾಷೆ ಎಂದು ಬಣ್ಣಿಸಿದ್ದಾರೆ. ಕ್ಷೇತ್ರ ಪುನರ್‌ವಿಂಗಡಣೆ ದಕ್ಷಿಣ ರಾಜ್ಯಗಳಿಗೆ ಅನಾನುಕೂಲಕರವಾಗುವ ಭಯ ಕಾಲ್ಪನಿಕ ಎಂದು ಹೇಳಿದ್ದಾರೆ. ತಮಿಳು ರಾಷ್ಟ್ರೀಯವಾದಿ ನಾಮ್ ತಮಿಳರ್ ಕಚ್ಚಿ (ಎನ್‌ಟಿಕೆ) ಮತ್ತು ಮಾಜಿ ಕೇಂದ್ರ ಸಚಿವ ಜಿಕೆ ವಾಸನ್ ಅವರ ತಮಿಳು ಮಾನಿಲ ಕಾಂಗ್ರೆಸ್ (ಮೂಪನಾರ್) ಕೂಡ ಸಭೆಗೆ ಗೈರಾಗಿದ್ದವು.
ಸಭೆಯಲ್ಲಿ ಮಾತನಾಡಿದ ಸಿಎಂ ಎಂ.ಕೆ.ಸ್ಟಾಲಿನ್, ಸಂಸದೀಯ ಸ್ಥಾನಗಳ ಸಂಖ್ಯೆಯನ್ನು ಹೆಚ್ಚಿಸಿದರೆ ನಮಗೆ 22 ಹೆಚ್ಚುವರಿ ಸ್ಥಾನಗಳು ಸಿಗಬೇಕು. ಆದರೆ, ಪ್ರಸ್ತುತ ಜನಸಂಖ್ಯೆಯ ಪ್ರಕಾರ ನಮಗೆ ಕೇವಲ 10 ಹೆಚ್ಚುವರಿ ಸ್ಥಾನಗಳು ಸಿಗುತ್ತವೆ. ಅಂದರೆ ನಾವು 12 ಸ್ಥಾನಗಳನ್ನು ಕಳೆದುಕೊಳ್ಳುತ್ತೇವೆ. ಇದು ಭಾರತೀಯ ಪ್ರಜಾಪ್ರಭುತ್ವದಲ್ಲಿ ತಮಿಳುನಾಡಿನ ರಾಜಕೀಯ ಪ್ರಾತಿನಿಧ್ಯದ ಮೇಲಿನ ನೇರ ದಾಳಿಯಾಗಿದೆ. ತಮಿಳುನಾಡಿನ ಧ್ವನಿಯನ್ನು ಹತ್ತಿಕ್ಕಲಾಗುತ್ತಿದೆ. ತನ್ನ ಜನರ ಹಿತಾಸಕ್ತಿಗಳನ್ನು ರಕ್ಷಿಸುವಲ್ಲಿ ನಮ್ಮ ರಾಜ್ಯದ ಬಲವನ್ನು ಕಡಿಮೆ ಮಾಡಲಾಗುತ್ತಿದೆ. ನಾವು ಕ್ಷೇತ್ರ ಪುನರ್‌ವಿಂಗಡಣೆಯನ್ನು ವಿರೋಧಿಸುವುದಿಲ್ಲ. ಆದರೆ, ಕಳೆದ 50 ವರ್ಷಗಳಲ್ಲಿ ಸಾಮಾಜಿಕ ಮತ್ತು ಆರ್ಥಿಕ ಕಲ್ಯಾಣ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತಂದಿದ್ದಕ್ಕಾಗಿ ಇದು ಶಿಕ್ಷೆಯಾಗಬಾರದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕುಂಭಮೇಳದಲ್ಲಿ ಕಿರುಕುಳ, ಅಪಹರಣ, ದರೋಡೆ, ಕೊಲೆಯಂಥ ಒಂದೇ ಒಂದು ಕೇಸ್ ವರದಿಯಾಗಿಲ್ಲ: ಯೋಗಿ ಆದಿತ್ಯನಾಥ್
ಈ ಸರ್ವಪಕ್ಷ ಸಭೆಯು 2026 ರ ಜನಗಣತಿಯ ಆಧಾರದ ಮೇಲೆ ಕ್ಷೇತ್ರ ಪುನರ್‌ವಿಂಗಡಣೆ ಪ್ರಕ್ರಿಯೆಯನ್ನು ಕೈಗೊಳ್ಳಬಾರದು ಎಂದು ಒತ್ತಾಯಿಸುತ್ತದೆ. 2026 ರ ನಂತರ ಮತ್ತು ಮುಂದಿನ 30 ವರ್ಷಗಳವರೆಗೆ 1971 ರ ಜನಗಣತಿಯ ಆಧಾರದ ಮೇಲೆ ಕ್ಷೇತ್ರ ಪುನರ್‌ವಿಂಗಡಣೆ ಪ್ರಕ್ರಿಯೆಯನ್ನು ಮಾಡಲಾಗುವುದು ಎಂದು ಪ್ರಧಾನಿ ಭರವಸೆ ನೀಡಬೇಕೆಂದು ನಾವು ಒತ್ತಾಯಿಸುತ್ತೇವೆ. ಸಂಸದೀಯ ಸ್ಥಾನಗಳ ಸಂಖ್ಯೆಯನ್ನು ಹೆಚ್ಚಿಸಬೇಕು ಮತ್ತು ಅಗತ್ಯ ಸಾಂವಿಧಾನಿಕ ತಿದ್ದುಪಡಿಗಳನ್ನು ಮಾಡಬೇಕು. ಈ ಸರ್ವಪಕ್ಷ ಸಭೆಯು ಈ ಬೇಡಿಕೆಗಳನ್ನು ತಮಿಳುನಾಡಿನ ಕನಿಷ್ಠ ನಿರೀಕ್ಷೆಗಳಾಗಿ ಇರಿಸುತ್ತದೆ. ನಾವು ಈ ವಿಷಯವನ್ನು ಜನರ ಬಳಿಗೆ ತೆಗೆದುಕೊಂಡು ಹೋಗಿ ಅದರ ಬಗ್ಗೆ ಜಾಗೃತಿ ಮೂಡಿಸುತ್ತೇವೆ. ಈ ವಿಷಯವನ್ನು ಮುಂದಕ್ಕೆ ಕೊಂಡೊಯ್ಯಲು ದಕ್ಷಿಣ ಭಾರತದ ಸಂಸದರಿಗಾಗಿ ಜಂಟಿ ಕ್ರಿಯಾ ಸಮಿತಿಯನ್ನು ಸಹ ರಚಿಸುತ್ತೇವೆ ಎಂದು ಹೇಳಿದರು.
ಕೇಂದ್ರ ಸರ್ಕಾರವು ನಿರಂಕುಶವಾಗಿ ಸಂಸದೀಯ ಕ್ಷೇತ್ರಗಳ ವಿಂಗಡಣೆ ಪ್ರಕ್ರಿಯೆಯನ್ನು ಆರಂಭಿಸಿದರೆ ದಕ್ಷಿಣ ರಾಜ್ಯಗಳ ರಾಜಕೀಯ ಮಹತ್ವವನ್ನು ಸಂಪೂರ್ಣವಾಗಿ ನಾಶಮಾಡುವ ಪ್ರಯತ್ನವೆಂದು ಪರಿಗಣಿಸಲಾಗುತ್ತದೆ. ಇದನ್ನು ಯಾವುದೇ ರೀತಿಯಲ್ಲಿಯೂ ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಕ್ಷೇತ್ರ ಪುನರ್ ವಿಂಗಡಣೆಯ ವಿರುದ್ಧ ಹೋರಾಡಲು ತಮಿಳಗ ವೆಟ್ರಿ ಕಳಗಂ ಎಲ್ಲಾ ಪಕ್ಷಗಳೊಂದಿಗೆ ನಿಲ್ಲುತ್ತದೆ. ಈ ಕೆಟ್ಟ ಪರಿಸ್ಥಿತಿಯಲ್ಲಿ ತಮಿಳುನಾಡು ಕಲ್ಯಾಣವನ್ನು ಯಾರು ವಿರೋಧಿಸುತ್ತಾರೆ ಎಂಬುದನ್ನು ಬಹಿರಂಗಪಡಿಸಲಾಗುತ್ತದೆ. ತಮಿಳುನಾಡು ಕಲ್ಯಾಣಕ್ಕಾಗಿ ಯಾರು ನಿಲ್ಲುತ್ತಾರೆ ಎಂಬುದನ್ನು ಸಹ ತಿಳಿಯುತ್ತದೆ ಎಂದು ನಟ ಮತ್ತು ತಮಿಳಗ ವೆಟ್ರಿ ಕಳಗಂ ಮುಖ್ಯಸ್ಥ ವಿಜಯ್ ಟ್ವೀಟ್ ಮಾಡಿದ್ದಾರೆ.
ಚೆನ್ನೈ: ಕನ್ಯಾಕುಮಾರಿ (Kanyakumari) ಕರಾವಳಿಯಲ್ಲಿರುವ ವಿವೇಕಾನಂದ ರಾಕ್ ಸ್ಮಾರಕ ಮತ್ತು 133 ಅಡಿ ಎತ್ತರದ ತಿರುವಳ್ಳುವರ್ ಪ್ರತಿಮೆಯನ್ನು ಸಂಪರ್ಕಿಸುವ ಗಾಜಿನ ಸೇತುವೆಯನ್ನು (Glass Bridge) ತಮಿಳುನಾಡು (Tamil Nadu) ಸಿಎಂ ಎಂ.ಕೆ ಸ್ಟಾಲಿನ್ (M.K Stalin) ಅವರು ಸೋಮವಾರ ಸಂಜೆ ಉದ್ಘಾಟಿಸಿದ್ದಾರೆ.
ಈ ಗಾಜಿನ ಸೇತುವೆಯು ದೇಶದಲ್ಲೇ ಮೊದಲನೆಯದಾಗಿದೆ. ಪ್ರವಾಸಿಗರಿಗೆ ಇಬ್ಬರು ಮಹಾನ್ ವ್ಯಕ್ತಿಗಳ ಸ್ಮಾರಕಗಳು ಮತ್ತು ಸುತ್ತಲೂ ಸಮುದ್ರದ ವೀಕ್ಷಣೆಗಾಗಿ ಇದನ್ನು ನಿರ್ಮಿಸಲಾಗಿದೆ. ಅಲ್ಲದೇ ಈ ಸೇತುವೆ ಸಮುದ್ರದ ಮೇಲೆ ನಡೆಯುವ ರೋಮಾಂಚಕ ಅನುಭವವನ್ನು ನೀಡುತ್ತದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
ತಿರುವಳ್ಳುವರ್ ಪ್ರತಿಮೆ ಅನಾವರಣದ ಬೆಳ್ಳಿಹಬ್ಬದ ಸಂದರ್ಭದಲ್ಲಿ ರಾಜ್ಯ ಸರ್ಕಾರವು 37 ಕೋಟಿ ರೂ. ವೆಚ್ಚದಲ್ಲಿ ಈ ಸೇತುವೆಯನ್ನು ನಿರ್ಮಿಸಿದೆ. ಬೌಸ್ಟ್ರಿಂಗ್ ಕಮಾನನ್ನು ಗಾಜಿನ ಸೇತುವೆಗೆ ಲವಣಯುಕ್ತ ಗಾಳಿಯನ್ನು ತಡೆದುಕೊಳ್ಳುವಂತೆ ವಿನ್ಯಾಸಗೊಳಿಸಲಾಗಿದೆ. ಸೇತುವೆ 77 ಮೀಟರ್ ಉದ್ದ ಮತ್ತು 10 ಮೀಟರ್ ಅಗಲವಿದೆ.
ಉದ್ಘಾಟನೆಯ ನಂತರ ಎಂ.ಕೆ ಸ್ಟಾಲಿನ್ ಹಾಗೂ ಡಿಸಿಎಂ ಉದಯನಿಧಿ ಸ್ಟಾಲಿನ್, ರಾಜ್ಯ ಸಚಿವರು, ಸಂಸದೆ ಕನಿಮೋಳಿ ಮತ್ತು ಹಿರಿಯ ಅಧಿಕಾರಿಗಳು ಸೇತುವೆಯ ಮೇಲೆ ಓಡಾಡಿ ಸಂಭ್ರಮಿಸಿದ್ದಾರೆ. ಬಳಿಕ ತಿರುವಳ್ಳುವರ್ ಪ್ರತಿಮೆ ಬಳಿ ಲೇಸರ್ ಲೈಟ್ ಶೋ ನಡೆಯಿತು.
ಚೆನ್ನೈ: ಅತಿ ಕಿರಿಯ ವಯಸ್ಸಿನಲ್ಲೇ ಚೆಸ್‌ನಲ್ಲಿ ವಿಶ್ವ ಚಾಂಪಿಯನ್ (World Chess Champion) ಆಗಿ ಹೊರಹೊಮ್ಮಿದ ಡಿ.ಗುಕೇಶ್ (D.Gukesh) ಐತಿಹಾಸಿಕ ಸಾಧನೆ ಗುರುತಿಸಿ ತಮಿಳುನಾಡಿನ ಸಿಎಂ ಎಂ.ಕೆ. ಸ್ಟಾಲಿನ್ (M.K.Stalin) ಅವರು 5 ಕೋಟಿ ನಗದು ಬಹುಮಾನವನ್ನು ಘೋಷಿಸಿದ್ದಾರೆ.
18ರ ಹರೆಯದ ಹುಡುಗ ಗುಕೇಶ್ ವಿಶ್ವ ಚೆಸ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯದಲ್ಲಿ ಚೀನಾದ ಡಿಂಗ್ ಲಿರೆನ್ ಅವರನ್ನು ಸೋಲಿಸಿ ಐತಿಹಾಸಿಕ ಸಾಧನೆ ಮಾಡಿದರು. ವಿಶ್ವನಾಥನ್ ಆನಂದ್ ನಂತರ ಚೆಸ್ ವಿಶ್ವ ಚಾಂಪಿಯನ್‌ಶಿಪ್ ಗೆದ್ದ ಎರಡನೇ ಭಾರತೀಯನಾಗಿ ಹೊರಹೊಮ್ಮಿದ್ದಾರೆ. ಇದನ್ನೂ ಓದಿ: ಭಾರತದ ಗುಕೇಶ್ ವಿಶ್ವ ಚೆಸ್ ಚಾಂಪಿಯನ್ – 18ನೇ ವಯಸ್ಸಿಗೆ ಸಾಧನೆ
ಗುಕೇಶ್ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ ಸಿಎಂ ಸ್ಟಾಲಿನ್, ಈ ಪ್ರಶಸ್ತಿಯು ಇಷ್ಟು ಚಿಕ್ಕ ವಯಸ್ಸಿನಲ್ಲಿ ಗುಕೇಶ್ ಅವರ ಅದ್ಭುತ ಸಾಧನೆಯನ್ನು ಪ್ರತಿಬಿಂಬಿಸುತ್ತದೆ. ತಮಿಳುನಾಡಿನ ಪ್ರತಿಭೆಯ ಗೆಲುವು ಜಾಗತಿಕ ಚೆಸ್ ಕಣದಲ್ಲಿ ಭಾರತದ ಹೆಮ್ಮೆಯ ಪರಂಪರೆಯನ್ನು ಮುಂದುವರಿಸಿದೆ ಎಂದು ಬಣ್ಣಿಸಿದ್ದಾರೆ.
ಅತ್ಯಂತ ಕಿರಿಯ ವಿಶ್ವ ಚೆಸ್ ಚಾಂಪಿಯನ್ ಗುಕೇಶ್ ಅವರ ಸಾಧನೆಯನ್ನು ಗೌರವಿಸಲು, ನಾನು 5 ಕೋಟಿ ರೂ. ನಗದು ಬಹುಮಾನವನ್ನು ಘೋಷಿಸಲು ಸಂತೋಷಪಡುತ್ತೇನೆ. ಅವರ ಐತಿಹಾಸಿಕ ಗೆಲುವು ರಾಷ್ಟ್ರಕ್ಕೆ ಅಪಾರ ಹೆಮ್ಮೆ ಮತ್ತು ಸಂತೋಷ ತಂದಿದೆ. ಅವರು ಮುಂದೆಯೂ ಮಿಂಚಲಿ ಮತ್ತು ಭವಿಷ್ಯದಲ್ಲಿ ಎತ್ತರಕ್ಕೆ ಏರಲಿ ಎಂದು ಸಿಎಂ ಸ್ಟಾಲಿನ್ ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ: ಭಾರತಕ್ಕೂ ಮೊದಲೇ ಚಾಂಪಿಯನ್ಸ್ ಟ್ರೋಫಿ ಬಾಯ್ಕಾಟ್ ಮಾಡ್ಬೇಕು – ಪಾಕ್ ಹೊಸ ಕ್ಯಾತೆ
– 15 ತಿಂಗಳು ಜೈಲುವಾಸ ಅನುಭವಿಸಿದ್ದ ಸೆಂಥಿಲ್ ಬಾಲಾಜಿ ಸಚಿವನಾಗಿ ಪ್ರಮಾಣವಚನ
ಚೆನ್ನೈ: ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ (M K Stalin) ಅವರು ಮಂತ್ರಿಮಂಡಲ ಪುನರ್‌ರಚನೆ ಮಾಡಿದ್ದು, ಉದಯನಿಧಿ ಸ್ಟಾಲಿನ್ ಸೇರಿ ಮೂವರು ಡಿಎಂಕೆ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ತಮಿಳುನಾಡು ಡಿಸಿಎಂ (DCM) ಆಗಿ ಉದಯನಿಧಿ ಸ್ಟಾಲಿನ್ (Udhayanidhi Stalin) ಇಂದು (ಸೆ.29) ಪ್ರಮಾಣವಚನ ಸ್ವೀಕರಿಸಿದರು.
ಉಪ ಮುಖ್ಯಮಂತ್ರಿಯಾಗಿ ಉದಯನಿಧಿ ಸ್ಟಾಲಿನ್ ಪ್ರಮಾಣವಚನ ಸ್ವೀಕರಿಸಿದರೇ, ಅವರೊಂದಿಗೆ ಗೋವಿ ಚೆಜಿಯಾನ್ ಅವರು ಉನ್ನತ ಶಿಕ್ಷಣ ಖಾತೆ ಸಚಿವರಾಗಿ, ಎಸ್.ಎಂ ನಾಸರ್ ಅವರು ಅಲ್ಪಸಂಖ್ಯಾತರ ಸಚಿವರಾಗಿ ಹಾಗೂ ಆರ್.ರಾಜೇಂದ್ರನ್ ಪ್ರವಾಸೋದ್ಯಮ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಜೊತೆಗೆ ಸೆಂಥಿಲ್ ಬಾಲಾಜಿ ಅವರು ವಿದ್ಯುತ್, ಅಬಕಾರಿ ಮತ್ತು ನಿಷೇಧ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಮೂಲಕ ಮಂತ್ರಿಮಂಡಲಕ್ಕೆ ಮರಳಿದರು.
#WATCH | Chennai: Tamil Nadu Governor RN Ravi, CM MK Stalin and Deputy CM Udhayanidhi Stalin along with the State ministers at Raj Bhavan after the swearing-in ceremony of newly-inducted ministers.
ಉದಯನಿಧಿ ಸ್ಟಾಲಿನ್ ಅವರನ್ನು ಉಪಮುಖ್ಯಮಂತ್ರಿ ಸ್ಥಾನಕ್ಕೇರಿಸುವ ಮೂಲಕ ಮೂರನೇ ತಲೆಮಾರಿನ ನಾಯಕರಾಗಿದ್ದಾರೆ. ಇದಕ್ಕೂ ಮುಂಚೆ ಉದಯನಿಧಿ ಸ್ಟಾಲಿನ್ ಅವರ ಅಜ್ಜ, ಡಿಎಂಕೆ ಪಕ್ಷದ ಹಿರಿಯ ನಾಯಕ ದಿವಂಗತ ಎಂ.ಕರುಣಾನಿಧಿ (M Karunanidhi), ಬಳಿಕ ಉದಯನಿಧಿ ಅವರ ತಂದೆ ಎಂಕೆ ಸ್ಟಾಲಿನ್ ಬಳಿಕ ಸ್ವತಃ ತಾವೇ ಉಪಮುಖ್ಯಮಂತ್ರಿ ಸ್ಥಾನಕ್ಕೇರಿದ್ದಾರೆ.
நம் பெருமைமிகு தமிழ்நாட்டின் துணை முதலமைச்சராக பணியாற்றுவதற்கான வாய்ப்பை நமக்கு அளித்த கழகத்தலைவர் – மாண்புமிகு முதலமைச்சர் @mkstalin அவர்களை, பொதுச்செயலாளர் – பொருளாளர் மற்றும் மாண்புமிகு அமைச்சர்களுடன் நேரில் சந்தித்து வாழ்த்து பெற்றோம்.
ಉದಯನಿಧಿ ಸ್ಟಾಲಿನ್ ಅವರು ಇದಕ್ಕೂ ಮುಂಚೆ ಸಚಿವರಾಗಿದ್ದ ಕಾರಣ ಅವರು ಇಂದು ಪ್ರಮಾಣವಚನ ಸ್ವೀಕರಿಸಲಿಲ್ಲ. ಬದಲಿಗೆ ಅಧಿಕಾರ ಸ್ವೀಕರಿಸಿದರು. ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ ಉದಯನಿಧಿ ಸ್ಟಾಲಿನ್ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಉಪಮುಖ್ಯಮಂತ್ರಿ ನನಗೆ ಅದು ಸ್ಥಾನವಲ್ಲ. ಜವಾಬ್ದಾರಿ ಎಂದು ಬರೆದುಕೊಂಡಿದ್ದಾರೆ.ಇದನ್ನೂ ಓದಿ: ಲಾ ಕಾಲೇಜ್‌ಗೆ ಸೇರಿಸದಿದ್ದರೇ ಆಸ್ತಿಯಲ್ಲಿ ಭಾಗ ಕೊಡು ಅಂತ ನಮ್ಮಪ್ಪನನ್ನ ಕೇಳಿದ್ದೆ: ಸಿಎಂ
ನವದೆಹಲಿ: ತಮಿಳುನಾಡಿನ (Tamil Nadu) ಉಪ ಮುಖ್ಯಮಂತ್ರಿಯಾಗಿ ಉದಯನಿಧಿ ಸ್ಟಾಲಿನ್ (Udhayanidhi Stalin) ಅವರನ್ನು ನೇಮಕ ಮಾಡಲಾಗಿದ್ದು, ಇಂದು ಮಧ್ಯಾಹ್ನ 3.30ಕ್ಕೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಸದ್ಯ ಅಸ್ತಿತ್ವದಲ್ಲಿರುವ ಕ್ರೀಡಾ ಸಚಿವ ಸ್ಥಾನದ ಜೊತೆಗೆ, ಉದಯನಿಧಿ ಅವರಿಗೆ ಯೋಜನೆ ಮತ್ತು ಅಭಿವೃದ್ಧಿಯ ಖಾತೆಯನ್ನು ಸಹ ನೀಡಲಾಗಿದೆ. ಇದಕ್ಕೂ ಮುನ್ನ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಉದಯನಿಧಿ ಅವರಿಗೆ ಈಗಿರುವ ಖಾತೆಗಳ ಜೊತೆಗೆ ಯೋಜನೆ ಮತ್ತು ಅಭಿವೃದ್ಧಿ ಖಾತೆಯನ್ನು ಮಂಜೂರು ಮಾಡಿ ಉಪಮುಖ್ಯಮಂತ್ರಿ ಹುದ್ದೆಗೆ ನಿಯೋಜಿಸುವಂತೆ ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ ಅವರಿಗೆ ಶಿಫಾರಸು ಮಾಡಿದ್ದರು. ಇದನ್ನೂ ಓದಿ: ಗುಜರಾತ್‌ನ ಸೋಮನಾಥದಲ್ಲಿ 9 ಅಕ್ರಮ ಮಸೀದಿಗಳ ತೆರವು
ಮಹತ್ವದ ಕ್ಯಾಬಿನೆಟ್ ಪುನರ್ ರಚನೆಯಲ್ಲಿ, ಉನ್ನತ ಶಿಕ್ಷಣ ಸಚಿವ ಕೆ.ಪೊನ್ಮುಡಿ ಅವರನ್ನು ಅರಣ್ಯ, ಪರಿಸರ ಮತ್ತು ಹವಾಮಾನ ಬದಲಿಸಿದೆ. ಶಿವ ವಿ.ಮೆಯ್ಯನಾಥನ್ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾಗಿ ನೇಮಕಗೊಂಡರೆ, ಎನ್.ಕಯಲ್ವಿಝಿ ಸೆಲ್ವರಾಜ್ ಅವರು ಮಾನವ ಸಂಪನ್ಮೂಲ ನಿರ್ವಹಣೆ ಮತ್ತು ಮಾಜಿ ಸೈನಿಕರ ಕಲ್ಯಾಣ ಖಾತೆಗಳನ್ನು ವಹಿಸಿಕೊಳ್ಳಲಿದ್ದಾರೆ. ಎಂ.ಮತಿವೆಂಥನ್ ಅವರು ಆದಿ ದ್ರಾವಿಡರ್ ಮತ್ತು ಗಿರಿಜನ ಕಲ್ಯಾಣದ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ.
ಆರ್‌ಎಸ್ ರಾಜಕಣ್ಣಪ್ಪನ್ ಅವರನ್ನು ಹಾಲು ಮತ್ತು ಡೈರಿ ಅಭಿವೃದ್ಧಿ ಹಾಗೂ ಖಾದಿ ಮತ್ತು ಗ್ರಾಮೋದ್ಯೋಗ ಸಚಿವರನ್ನಾಗಿ ನೇಮಿಸಲಾಗಿದೆ. ತಂಗಂ ತೆನ್ನರಸು ಅವರ ಪ್ರಸ್ತುತ ಹಣಕಾಸು ಮತ್ತು ಪುರಾತತ್ವ ಖಾತೆಗಳ ಜೊತೆಗೆ ಪರಿಸರ, ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ಹವಾಮಾನ ಬದಲಾವಣೆಯನ್ನು ನೋಡಿಕೊಳ್ಳಲಿದ್ದಾರೆ. ವಿ.ಸೆಂಥಿಲಬಾಲಾಜಿ, ಗೋವಿ ಚೆಜಿಯಾನ್, ಆರ್.ರಾಜೇಂದ್ರನ್, ಮತ್ತು ಎಸ್.ಎಂ.ನಾಸರ್ ಸೇರಿದಂತೆ ಇತರ ಡಿಎಂಕೆ ನಾಯಕರನ್ನು ಸಚಿವ ಸಂಪುಟದಲ್ಲಿ ಮುಂದುವರಿಸಲು ಶಿಫಾರಸು ಮಾಡಲಾಗಿದೆ. ಇದನ್ನೂ ಓದಿ: Uttar Pradesh | ರೈಲು ಹಳಿಯ ಮೇಲೆ ಕಾಂಕ್ರೀಟ್ ಕಂಬ ಇರಿಸಿದ್ದ ಅಪ್ರಾಪ್ತ ವಶಕ್ಕೆ
ಬೆಂಗಳೂರು: ಸನಾತನ ಧರ್ಮ (Sanatan Dharma) ಡೆಂಗ್ಯೂ, ಮಲೇರಿಯಾ ಇದ್ದಂತೆ ಅಂತ ವಿವಾದಾತ್ಮಕ ಹೇಳಿಕೆ ನೀಡಿದ್ದ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ (Udhayanidhi Stalin) ಅವರಿಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ (Representatives Speical Court) ಮುಂದೆ ಹಾಜರಾಗುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.
ಸನಾತನ ಧರ್ಮದ ವಿರುದ್ಧ ಅವಹೇಳನಕಾರಿ ಹೇಳಿಕೆ ಹಿನ್ನೆಲೆಯಲ್ಲಿ 5 ತಿಂಗಳ ಹಿಂದೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ನೀಡಿತ್ತು. ಖುದ್ದಾಗಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು. ಕಳೆದ ಮಾರ್ಚ್ 4 ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿತ್ತು. ಆದ್ರೆ ಕಾರಣಾಂತರದಿಂದ ಗೈರಾಗಿದ್ದ ಉದಯನಿಧಿ ಸ್ಟಾಲಿನ್ ಅವರಿಂದು ಬೆಳಗ್ಗೆ 10:30ರ ವೇಳೆಗೆ ಬೆಂಗಳೂರಿನ 42ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಎದುರು ಹಾಜರಾಗಲಿದ್ದಾರೆ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಸನಾತನ ಧರ್ಮದ ಬಗ್ಗೆ ಮಾತನಾಡಿದ್ದಕ್ಕೆ ಚಿಕ್ಕ ಮಗುವನ್ನ ಬೇಟೆಯಾಡ್ತಿದ್ದಾರೆ; ಉದಯನಿಧಿ ಸ್ಟಾಲಿನ್ ಬೆಂಬಲಿಸಿದ ಕಮಲ್
ಬೆಂಗಳೂರಿನ ಪರಮೇಶ್ ಎಂಬುವವರು ಉದಯನಿಧಿ ಹೇಳಿಕೆ ವಿರುದ್ಧ ಖಾಸಗಿ ದೂರು ಸಲ್ಲಿಸಿದ್ದರು. ಈ ಸಂಬಂಧ ವಿಚಾರಣೆ ನಡೆಸಿದ್ದ 42ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರಾದ ಜೆ. ಪ್ರೀತ್ ಅವರಿದ್ದ ಪೀಠ 5 ತಿಂಗಳ ಹಿಂದೆ ಸಮನ್ಸ್ ಜಾರಿಗೊಳಿಸಿತ್ತು.
ಸನಾತನ ಧರ್ಮದ ನಿರ್ಮೂಲನೆ ಆಗಬೇಕು. ಅದು ಸಾಮಾಜಿಕ ನ್ಯಾಯ ಮತ್ತು ಸಮಾನತೆಗೆ ವಿರುದ್ಧವಾಗಿದೆ ಎಂದು ಕರೆ ನೀಡಿದ್ದರು. “ಕೆಲವು ವಿಷಯಗಳನ್ನು ವಿರೋಧಿಸಲು ಸಾಧ್ಯವಿಲ್ಲ. ಅದನ್ನು ನಿರ್ಮೂಲನೆ ಮಾಡಬೇಕು. ನಾವು ಡೆಂಗ್ಯೂ, ಸೊಳ್ಳೆಗಳು, ಮಲೇರಿಯಾ ಅಥವಾ ಕೊರೊನಾ ವೈರಸ್ ಅನ್ನು ವಿರೋಧಿಸಲು ಸಾಧ್ಯವಿಲ್ಲ. ಇದನ್ನು ನಿರ್ಮೂಲನೆ ಮಾಡಬೇಕು. ಅದೇ ರೀತಿ ಸನಾತನವನ್ನು ನಿರ್ಮೂಲನೆ ಮಾಡಬೇಕು ಎಂದು ಕರೆ ಕೊಟ್ಟಿದ್ದರು. ಈ ಸಂಬಂಧ ದೇಶಾದ್ಯಂತ ಪ್ರತಿಪಕ್ಷ ನಾಯಕರಿಂದ ವಿರೋಧ ವ್ಯಕ್ತವಾಗಿತ್ತು. ಇದರ ಹೊರತಾಗಿಯೂ ಉದಯನಿಧಿ ಸ್ಟಾಲಿನ್ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದರು.