Tag: M Venkaiah Naidu

  • ಸಣ್ಣ ವಯಸ್ಸಿನಿಂದಲೇ ಸೇವಾ ಮನೋಭಾವವನ್ನು ಬೆಳೆಸಬೇಕು: ಎಂ.ವೆಂಕಯ್ಯ ನಾಯ್ಡು

    ಸಣ್ಣ ವಯಸ್ಸಿನಿಂದಲೇ ಸೇವಾ ಮನೋಭಾವವನ್ನು ಬೆಳೆಸಬೇಕು: ಎಂ.ವೆಂಕಯ್ಯ ನಾಯ್ಡು

    ತಿರುವನಂತಪುರಂ: ಸಣ್ಣ ವಯಸ್ಸಿನಿಂದಲೇ ಮಕ್ಕಳಿಗೆ ಸೇವಾ ಮನೋಭಾವವನ್ನು ಬೆಳೆಸುವ ಅವಶ್ಯಕತೆಯಿದೆ ಎಂದು ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಹೇಳಿದ್ದಾರೆ.

    ಕೇರಳದ ಕ್ಯಾಥೋಲಿಕ್ ಸಮುದಾಯದ ಆಧ್ಯಾತ್ಮಿಕ ನಾಯಕ ಮತ್ತು ಸಮಾಜ ಸುಧಾರಕ ಸಂತ ಕುರಿಯಾಕೋಸ್ ಎಲಿಯಾಸ್ ಚವರ ಅವರ 150ನೇ ಪುಣ್ಯತಿಥಿಯ ಅಂಗವಾಗಿ ಮನ್ನನಂನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಎಂ.ವೆಂಕಯ್ಯ ನಾಯ್ಡು ಅವರು ಆಗಮಿಸಿದ್ದು, ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ ಅವರು, ಇಂದು, ಈ ದೇಶದ ಯುವಜನರಲ್ಲಿ ಚಿಕ್ಕ ವಯಸ್ಸಿನಿಂದಲೇ ಸೇವಾ ಮನೋಭಾವವನ್ನು ಬೆಳೆಸುವ ಅವಶ್ಯಕತೆಯಿದೆ ಎಂದು ತಿಳಿಸಿದರು. ಇದನ್ನೂ ಓದಿ: ತಜ್ಞರ ವರದಿಯ ಆಧಾರದ ಮೇಲೆ ಸರ್ಕಾರ ಕ್ರಮ ತಗೆದುಕೊಳ್ಳುತ್ತೆ: ಭಗವಂತ್ ಖೂಬಾ

    ಒಮ್ಮೆ ಈ ಸಾಂಕ್ರಾಮಿಕ ರೋಗವು ಹೋಗಿ, ದೇಶದಲ್ಲಿ ಸಹಜ ಸ್ಥಿತಿ ನಿರ್ಮಾಣವಾದ ಮೇಲೆ ಶಾಲೆಗಳಲ್ಲಿ ಸೇವಾ ಮನೋಭಾವನ್ನು ಮೂಡಿಸಬೇಕು. ಇದಕ್ಕೆ ಸರ್ಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಎರಡರಿಂದ ಮೂರು ವಾರಗಳ ಸಮುದಾಯ ಸೇವೆಯನ್ನು ಕಡ್ಡಾಯಗೊಳಿಬೇಕು ಎಂದು ಸಲಹೆ ನೀಡಿದರು.

    ಶಾಲಾ ಹಂತದಲ್ಲಿಯೇ ಮಕ್ಕಳಲ್ಲಿ ಸೇವಾ ಮನೋಭಾವನೆಯನ್ನು ಬೆಳೆಸುವುದರಿಂದ ಇತರರೊಂದಿಗೆ ಹೇಗೆ ಮಾತನಾಡಬೇಕು. ಹೇಗೆ ಇತರರನ್ನು ಕಾಳಜಿ ವಹಿಸಬೇಕು ಎಂಬ ಮನೋಭಾವ ಬೆಳೆಯಲು ಸಹಾಯವಾಗುತ್ತೆ ಎಂದು ತಿಳಿಸಿದರು.


    ಕಾಳಜಿ ಮಾಡುವುದು ಮತ್ತು ಹಂಚಿ ತಿನ್ನುವುದು ಭಾರತದ ಪ್ರಾಚೀನ ಸಂಸ್ಕೃತಿಯ ತಿರುಳಾಗಿದೆ. ಅದನ್ನು ವ್ಯಾಪಕವಾಗಿ ಪ್ರಚಾರ ಮಾಡಬೇಕು. ನಮಗೆ, ಇಡೀ ಪ್ರಪಂಚವು ನಮ್ಮ ಕಾಲಾತೀತ ಆದರ್ಶದಲ್ಲಿ ಸುತ್ತುವರಿದಿರುವ ಒಂದು ಕುಟುಂಬವಾಗಿದೆ. ‘ವಸುಧೈವ ಕುಟುಂಬಕಂ’ ಈ ಮನೋಭಾವದಿಂದ ನಾವು ಒಟ್ಟಾಗಿ ಮುನ್ನಡೆಯಬೇಕು ಎಂದು ಮನವಿ ಮಾಡಿದರು. ಇದನ್ನೂ ಓದಿ: ಕಾರ್ಯಕ್ರಮದಲ್ಲಿ ಸಿಎಂ ಎದುರೇ ಡಿಕೆ ಸುರೇಶ್‌, ಅಶ್ವಥ್‌ ನಾರಾಯಣ ನಡುವೆ ಜಟಾಪಟಿ

    ಸಂತರ ಗುರುತು ಮತ್ತು ದೃಷ್ಟಿ ಕ್ಯಾಥೋಲಿಕ್ ನಂಬಿಕೆಯ ಆದರ್ಶಗಳ ಮೇಲೆ ರೂಪುಗೊಂಡಿದ್ದರೂ, ಅವರ ಸಾಮಾಜಿಕ ಮತ್ತು ಶೈಕ್ಷಣಿಕ ಸೇವೆಗಳ ಕಾರ್ಯಗಳು ಆ ಸಮುದಾಯದ ಪ್ರಗತಿ ಮತ್ತು ಅಭಿವೃದ್ಧಿಗೆ ಸೀಮಿತವಾಗಿಲ್ಲ ಎಂದು ವಿವರಿಸಿದರು.

  • ಪುನೀತ್ ನಿಧನದಿಂದ ತುಂಬಲಾರದ ನಷ್ಟವಾಗಿದೆ: ವೆಂಕಯ್ಯ ನಾಯ್ಡು

    ಪುನೀತ್ ನಿಧನದಿಂದ ತುಂಬಲಾರದ ನಷ್ಟವಾಗಿದೆ: ವೆಂಕಯ್ಯ ನಾಯ್ಡು

    ಬೆಂಗಳೂರು: ಇಂದು ನಡೆದ ಟೆಕ್ ಸಮ್ಮೇಳನಲ್ಲಿ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರು ನಟ ಪುನೀತ್ ರಾಜ್‍ಕುಮಾರ್ ಅವರ ಅಗಲಿಕೆಯ ನೋವನ್ನು ವ್ಯಕ್ತಪಡಿಸಿದ್ದಾರೆ.

    ಟೆಕ್ ಸಮ್ಮೇಳನದಲ್ಲಿ ಮಾತನಾಡಿದ ಅವರು, ಬೆಂಗಳೂರು ಟೆಕ್ ಸಮ್ಮಿಟ್ ಉದ್ಘಾಟನೆ ಮಾಡಿದ್ದು ಸಂತೋಷವಿದೆ. ಆದರೆ ಕನ್ನಡದ ಸ್ಟಾರ್‌ ನಟ ಪುನೀತ್ ರಾಜ್‍ಕುಮಾರ್ ಕಳೆದುಕೊಂಡಿದ್ದೇವೆ. ಅವರು ಪ್ರತಿಭಾನ್ವಿತ ನಟರಾಗಿ ಗುರುತಿಸಿಕೊಂಡಿದ್ದರು. ಸಾಕಷ್ಟು ಜನಪ್ರಿಯತೆ ಹೊಂದಿದವರಾಗಿದ್ದರು. ಪುನೀತ್ ರಾಜ್‍ಕುಮಾರ್ ಅವರ ನಿಧನದಿಂದ ತುಂಬಲಾರದ ನಷ್ಟವಾಗಿದೆ ಎಂದು ಹೇಳುತ್ತಾ ಪುನೀತ್ ರಾಜ್‍ಕುಮಾರ್‌ಗೆ ಶ್ರದ್ಧಾಂಜಲಿ ಅರ್ಪಿಸಿದ್ದಾರೆ. ಇದನ್ನೂ ಓದಿ: ಯುವರತ್ನನಿಗೆ ಪದ್ಮಶ್ರೀ ನೀಡಲು ಶಿಫಾರಸ್ಸಿಗೆ ತೀರ್ಮಾನ

    ಟೆಕ್ ಸಮ್ಮೇಳನ ತಾಜ್ ವೆಸ್ಟೆಂಡ್ ಹೊಟೇಲಿನಲ್ಲಿ ನಡೆಯುತ್ತಿದೆ. ಇಂದಿನಿಂದ ಮೂರು ದಿನಗಳ ಕಾಲ ಕಾರ್ಯಕ್ರಮ ನಡೆಯಲಿದೆ. ರಾಜ್ಯಪಾಲ ಟಿ.ಸಿ.ಗೆಹ್ಲೋಟ್, ಸಿಎಂ ಬಸವರಾಜ ಬೊಮ್ಮಾಯಿ, ಐಟಿಬಿಟಿ ಸಚಿವ ಅಶ್ವಥ ನಾರಾಯಣ, ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಷಾ ಸೇರಿ ಹಲವು ಐಟಿ ಬಿಟಿ ವಲಯದ ರಾಷ್ಟ್ರೀಯ, ಅಂತರಾಷ್ಟ್ರೀಯ ಸಂಸ್ಥೆಗಳು, ಉದ್ಯಮಿಗಳು ಭಾಗಿಯಾಗಲಿದ್ದಾರೆ