Tag: Madalu Virupakshappa

  • ಮಾಡಾಳ್ ಕುಟುಂಬದಿಂದ ಖತರ್ನಾಕ್ ಪ್ಲಾನ್- ಲೋಕಾಯುಕ್ತ ಬರುತ್ತೆ ಅಂತ ಸಿಸಿಟಿವಿ ಆಫ್!

    ಮಾಡಾಳ್ ಕುಟುಂಬದಿಂದ ಖತರ್ನಾಕ್ ಪ್ಲಾನ್- ಲೋಕಾಯುಕ್ತ ಬರುತ್ತೆ ಅಂತ ಸಿಸಿಟಿವಿ ಆಫ್!

    ದಾವಣಗರೆ: ಶಾಸಕ ಮಾಡಾಳು ವಿರೂಪಾಕ್ಷಪ್ಪ (Madal Virupakshappa) ಚನ್ನಗಿರಿ ಮನೆಯ ಮೇಲೂ ಲೋಕಾಯುಕ್ತ ದಾಳಿ ನಡೆಸಿದೆ. ಲೋಕಾಯುಕ್ತ (Lokayukta) ಅಧಿಕಾರಿಗಳು ಬರುತ್ತಿರುವ ವಿಚಾರ ತಿಳಿಯುತ್ತಿದ್ದಂತೆಯೇ ಮಾಡಾಳು ಕುಟುಂಬಸ್ಥರು ಖತರ್ನಾಕ್ ಪ್ಲಾನ್ ಮಾಡಿದ್ದಾರೆ.

    ಹೌದು. ಲೋಕಾಯುಕ್ತ ಅಧಿಕಾರಿಗಳು ಬರುತ್ತಿರುವ ಮಾಹಿತಿ ಲಭ್ಯವಾಗುತ್ತಿದ್ದಂತೆಯೇ ಕುಟುಂಬಸ್ಥರು ಮನೆಯ ಸಿಸಿಟಿವಿ ಆಫ್ ಮಾಡಿದ್ದರು. ಅಲ್ಲದೆ ಸಿಸಿಟಿವಿ ಆಫ್ ಮಾಡಿ ಹಣ ಸಾಗಾಟ ಮಾಡಿರೋ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಸಿಸಿಟಿವಿ ಡಿವಿಆರ್ ವಶಕ್ಕೆ ಪಡೆದಿದ್ದಾರೆ.

    ಚನ್ನಗಿರಿ ಮನೆಯಲ್ಲಿ ಅಲ್ಪ ಪ್ರಮಾಣದ ಹಣ ಮತ್ತು ಚಿನ್ನಾಭರಣ ಮಾತ್ರ ಪತ್ತೆಯಾಗಿದೆ. ಇನ್ನೂ 16 ಲಕ್ಷದ 47 ಸಾವಿರ ಹಣವನ್ನು ಕೂಡ ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಪುತ್ರ ಸಿಕ್ಕಿಬಿದ್ದ ಬೆನ್ನಲ್ಲೇ ಬಿಜೆಪಿ ಶಾಸಕ ವಿರೂಪಾಕ್ಷಪ್ಪ ನಾಪತ್ತೆ

    ಶಾಸಕರು ನಾಪತ್ತೆ: ಇತ್ತ ಲೋಕಾಯುಕ್ತ ಅಧಿಕಾರಿಗಳ ಪುತ್ರ ಬಲೆಗೆ ಬೀಳುತ್ತಿದ್ದಂತೆಯೇ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ನಾಪತ್ತೆಯಾಗಿದ್ದಾರೆ. ಇದನ್ನೂ ಓದಿ: ಶಾಸಕರ ದಾವಣಗೆರೆಯ ಮನೆ ಮೇಲೂ ರೇಡ್- ಇಂದು ಬೇನಾಮಿ ಆಸ್ತಿ ಮೇಲೂ ದಾಳಿ ಸಾಧ್ಯತೆ

    ಲೋಕಾಯುಕ್ತ ದಾಳಿ ವೇಳೆ 40 ಲಕ್ಷ ಪಂಚ ಪಡೆಯುವಾಗ ಹಾಗೂ ಅಪಾರ ಪ್ರಮಾಣದ ನಗದು ಸಿಕ್ಕ ಪ್ರಕರಣದಲ್ಲಿ ಮಾಡಾಳ್ ವಿರೂಪಾಕ್ಷಪ್ಪ ಎಫ್‍ಐಆರ್ ನಲ್ಲಿ A1 ಆರೋಪಿ. ಹೀಗಾಗಿ ಬಂಧನ ಭೀತಿ ಹಿನ್ನೆಲೆಯಲ್ಲಿ ಶಾಸಕರು ಅಜ್ಞಾತ ಸ್ಥಳದಲ್ಲಿದ್ದು, ಈಗಾಗಲೇ ಕಾನೂನು ತಜ್ಞರ ಜೊತೆ ಚರ್ಚೆ ನಡೆಸುತ್ತಿದ್ದಾರೆ. ಮುಂದಿನ ಕಾನೂನು ಹೋರಾಟದ ಬಗ್ಗೆ ತಜ್ಞರಿಂದ ಅಜ್ಞಾತ ಸ್ಥಳದಿಂದ ಮಾಡಾಳ್ ವಿರೂಪಾಕ್ಷಪ್ಪ ಮಾಹಿತಿ ಪಡೆಯುತ್ತಿದ್ದಾರೆ ಎನ್ನಲಾಗಿದೆ.

  • ಒಬ್ಬ ವ್ಯಕ್ತಿ ತಪ್ಪು ಮಾಡಿದ್ರೆ ಅದು ಪಕ್ಷಕ್ಕೆ ಹೇಗೆ ಬರುತ್ತದೆ – ಗೋವಿಂದ ಕಾರಜೋಳ ಪ್ರಶ್ನೆ

    ಒಬ್ಬ ವ್ಯಕ್ತಿ ತಪ್ಪು ಮಾಡಿದ್ರೆ ಅದು ಪಕ್ಷಕ್ಕೆ ಹೇಗೆ ಬರುತ್ತದೆ – ಗೋವಿಂದ ಕಾರಜೋಳ ಪ್ರಶ್ನೆ

    ಬೆಳಗಾವಿ: ಲೋಕಾಯುಕ್ತ ಸ್ವತಂತ್ರ ಸಂಸ್ಥೆ ಯಾರನ್ನೂ ಬೇಕಾದರೂ ತನಿಖೆ ನಡೆಸುತ್ತದೆ. ಒಬ್ಬ ವ್ಯಕ್ತಿ ತಪ್ಪು ಮಾಡಿದ್ರೆ ಅದು ಪಕ್ಷಕ್ಕೆ ಹೇಗೆ ಬರುತ್ತದೆ? ಸಿದ್ದರಾಮಯ್ಯ (Siddaramaiah) ಸುಳ್ಳು ಆರೋಪ ಮಾಡೋದು ಬಿಟ್ಟು ಜೀವನದಲ್ಲಿ ಏನೂ ಸಾಧನೆ ಮಾಡಿಲ್ಲ ಎಂದು ಉಸ್ತುವಾರಿ ಸಚಿವ ಗೋವಿಂದ ಕಾರಜೋಳ (Govinda Karajola) ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಕಾಲಿನಲ್ಲಿ ಬಲವಿಲ್ಲದ ಅಂಗವಿಕಲ, ಮಂಗಳೂರಿನ ಯಶಸ್ವಿ ಫುಡ್ ಡೆಲಿವರಿ ಬಾಯ್

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ ಮಾಡಾಳ್ ವಿರೂಪಾಕ್ಷಪ್ಪ (Madalu Virupakshappa) ಅವರ ಮಗನ ವಿಚಾರವಾಗಿ ಪ್ರತಿಕ್ರಿಯಿಸಿ, ಅವರ ಬಳಿ 7ಕೋಟಿ ಹಣ ಸಿಕ್ಕ ಬಗ್ಗೆ ನನಗೆ ಮಾಹಿತಿ ಇಲ್ಲ. ಲೋಕಾಯುಕ್ತ ಸ್ವತಂತ್ರ ಸಂಸ್ಥೆ, ನಮ್ಮ ಸರ್ಕಾರ ತನಿಖೆಯಲ್ಲಿ ಮಧ್ಯಪ್ರವೇಶಿಸಲ್ಲ ಎಂದು ಅವರು ಹೇಳಿದ್ದಾರೆ.

    ಸಿದ್ದರಾಮಯ್ಯ ಅಷ್ಟೇ ಅಲ್ಲ ಕಾಂಗ್ರೆಸ್ ಇದಕ್ಕಿಂತ ಹೀನಾಯ ಸ್ಥಿತಿಗೆ ಹೋಗ್ತದೆ. ಸಿದ್ದರಾಮಯ್ಯ ಒಳ್ಳೆಯ ಕೆಲಸ ಮಾಡಿದ್ರೆ ಐದು ವರ್ಷ ಅಧಿಕಾರ ನಡೆಸಿ ತಿರುಗಿ ಏಕೆ ಅಧಿಕಾರಕ್ಕೆ ಬರಲಿಲ್ಲ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ನನ್ನ ಕ್ರೀಡಾ ಜೀವನದ ಆರಂಭ ಸುಖಕರವಾಗಿರಲಿಲ್ಲ- ಬೆಳ್ಳಿ ಗೆದ್ದ ಸಹಾನಿ