Tag: Madappa

  • ಕೊರೊನಾ ಕಾಲದಲ್ಲೂ ಮಾದಪ್ಪನಿಗೆ ಹಣದ ಹೊಳೆ – 47 ದಿನದಲ್ಲಿ 2.33 ಕೋಟಿ ಸಂಗ್ರಹ

    ಕೊರೊನಾ ಕಾಲದಲ್ಲೂ ಮಾದಪ್ಪನಿಗೆ ಹಣದ ಹೊಳೆ – 47 ದಿನದಲ್ಲಿ 2.33 ಕೋಟಿ ಸಂಗ್ರಹ

    ಚಾಮರಾಜನಗರ: ರಾಜ್ಯದ ಪ್ರಮುಖ ದೇಗುಲಗಳಲ್ಲಿ ಒಂದಾದ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಎಣಿಕೆ ನಡೆದಿದ್ದು, ಬರೋಬ್ಬರಿ 2.33 ಕೋಟಿ ಸಂಗ್ರಹವಾಗಿದೆ.

    122 ದಿನಗಳ ಬಳಿಕ ಹುಂಡಿ ಎಣಿಕೆ ಕಾರ್ಯ ನಡೆದರೂ ಕೊರೊನಾ ಲಾಕ್ ಡೌನ್ ಪರಿಣಾಮ 75 ದಿನ ಭಕ್ತರಿಗೆ ದೇವಾಲಯ ಬಂದ್ದಾಗಿದ್ದರಿಂದ ಕೇವಲ 47 ದಿನಗಳಲ್ಲಿ 2,33,57,28 ಕೋಟಿ ರೂ. ಸಂಗ್ರಹವಾಗಿದ್ದು ಭಕ್ತಾದಿಗಳು ಮಾದಪ್ಪನಿಗೆ ಹಣದ ರೂಪದಲ್ಲಿ ಭಕ್ತಿಯ ಹೊಳೆಯನ್ನೇ ಹರಿಸಿದ್ದಾರೆ. ಇಷ್ಟೇ ಅಲ್ಲದೇ ಹುಂಡಿಯಲ್ಲಿ 150 ಗ್ರಾಂ ಚಿನ್ನ, 2.2 ಕೆಜಿ ಬೆಳ್ಳಿಯನ್ನು ಭಕ್ತರು ದೇವರಿಗೆ ಅರ್ಪಿಸಿದ್ದಾರೆ.

    ಇಂದಿನಿಂದ ದಾಸೋಹ ವ್ಯವಸ್ಥೆ: ಮಹಾಮಾರಿ ಕರಿ ಛಾಯೆ ಮಲೆಮಹದೇಶ್ವರ ಬೆಟ್ಟದಲ್ಲಿ ಸ್ಥಗಿತಗೊಂಡಿದ್ದ ದಾಸೋಹ ವ್ಯವಸ್ಥೆ ಇಂದಿನಿಂದ ಪ್ರಾರಂಭವಾಗಲಿದೆ. ಆದರೆ ಲಾಡು ವಿತರಣೆ, ವಿಶೇಷ ಸೇವೆಗಳು, ಮುಡಿ ಸೇವೆಗಳಿಗೆ ನಿರ್ಬಂಧ ಹೇರಲಾಗಿದೆ. ಇದನ್ನೂ ಓದಿ:  ಬಿಎಸ್‍ವೈ ರಾಜೀನಾಮೆ ನೀಡಿದ್ರೆ ಬಿಜೆಪಿಯಿಂದ ಲಿಂಗಾಯತ ಸಮುದಾಯ ದೂರಾಗುತ್ತೆ: ಸಿದ್ದಲಿಂಗ ಸ್ವಾಮೀಜಿ

  • ಚಂದನ್ ಶೆಟ್ಟಿ ವಿರುದ್ಧ ದೂರು ದಾಖಲು

    ಚಂದನ್ ಶೆಟ್ಟಿ ವಿರುದ್ಧ ದೂರು ದಾಖಲು

    ಬೆಂಗಳೂರು: ಮಾದಪ್ಪನ ಗೀತೆಯನ್ನು ಅಶ್ಲೀಲವಾಗಿ ತೋರಿಸಿರುವ ಆರೋಪದ ಮೇರೆಗೆ ಬಿಗ್‍ಬಾಸ್ ವಿನ್ನರ್, ರ‍್ಯಾಪರ್ ಚಂದನ್ ಶೆಟ್ಟಿ ವಿರುದ್ಧ ದೂರು ದಾಖಲಾಗಿದೆ.

    ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಚಂದನ್ ಶೆಟ್ಟಿ ವಿರುದ್ಧ ದೂರು ದಾಖಲಾಗಿದೆ. ಬಜರಂಗದಳ ಮುಖಂಡ ತೇಜಸ್ ಗೌಡ ಅವರು ಚಂದನ್ ವಿರುದ್ಧ ದೂರು ದಾಖಲಿಸಿದ್ದಾರೆ. ದೂರು ಸಂಬಂಧ ಕಬ್ಬನ್ ಪಾರ್ಕ್ ಪೊಲೀಸರು ಎನ್‍ಸಿಆರ್(ಗಂಭೀರವಲ್ಲದ ಪ್ರಕರಣ) ದಾಖಲು ಮಾಡಿದ್ದಾರೆ. ಇದನ್ನೂ ಓದಿ: ಚಂದನ್ ಶೆಟ್ಟಿಗೆ ಬ್ಯಾನ್ ವಾರ್ನಿಂಗ್ ಕೊಟ್ಟ ಎಸ್ಪಿ

    ಹಿಂದೂ ಧಾರ್ಮಿಕ ಭಾವನೆಗಳಿಗೆ ದಕ್ಕೆ ತರುವ ರೀತಿಯಲ್ಲಿ ಜಾನಪದ ಗೀತೆಯನ್ನು ಚಿತ್ರೀಕರಣ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಚಂದನ್ ಶೆಟ್ಟಿ ವಿರುದ್ಧ ಕ್ರಮಕೈಗೊಳ್ಳುವಂತೆ ತೇಜಸ್ ಗೌಡ ದೂರು ನೀಡಿದ್ದಾರೆ.

    ಏನಿದು ಪ್ರಕರಣ?
    ಗಣೇಶ ಹಬ್ಬಕ್ಕೆ ‘ಕೋಲು ಮಂಡೆ ಜಂಗಮ ದೇವರು’ ಎಂಬ ಹೊಸ ರ‍್ಯಾಪ್ ಸಾಂಗ್ ಅನ್ನು ಚಂದನ್ ಶೆಟ್ಟಿ ಯೂಟ್ಯೂಬ್‍ನಲ್ಲಿ ಬಿಡುಗಡೆ ಮಾಡಿದ್ದರು. ಆದರೆ ಮಾದಪ್ಪನ ಗೀತೆಯನ್ನು ಅಶ್ಲೀಲವಾಗಿ ತೋರಿಸಿರುವ ಆರೋಪ ಚಂದನ್ ಶೆಟ್ಟಿ ವಿರುದ್ಧ ಕೇಳಿಬಂದಿದೆ. ಶಿವಶರಣೆ ಸಂಕಮ್ಮನ ಬಗ್ಗೆ ಅಶ್ಲೀಲ ಪ್ರದರ್ಶಿಸಲಾಗಿದೆ ಮತ್ತು ಭಕ್ತಿ ಗೀತೆಯನ್ನು ತಿರುಚಲಾಗಿದೆ. ಈ ಮೂಲಕ ಮಾದಪ್ಪನ ಭಕ್ತರ ಧಾರ್ಮಿಕ ಮನೋಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಚಂದನ್ ಶೆಟ್ಟಿ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿತ್ತು.

    ಈ ಸಂಬಂಧ ವಿಡಿಯೋ ಮಾಡಿ ಸ್ಪಷ್ಟನೆ ಕೊಟ್ಟ ಚಂದನ್, ಯಾರ ಭಾವನೆಗಳಿಗೂ ಧಕ್ಕೆ ಉಂಟು ಮಾಡಲು ಈ ಹಾಡನ್ನು ಮಾಡಿಲ್ಲ. ಈಗಿನ ಪೀಳಿಗೆಗೆ ನಮ್ಮ ಜಾನಪದ ತಲುಪಲಿ ಅನ್ನೋ ಕಾರಣಕ್ಕೆ ರ್ಯಾಪ್ ಹಾಡಿನ ರೂಪ ಕೊಟ್ಟಿದ್ದೆ. ಇದರಿಂದ ಯಾರಿಗಾದರೂ ಬೇಸರವಾಗಿದ್ದರೆ ಕ್ಷಮೆ ಕೇಳುತ್ತೇನೆ ಎಂದು ಹೇಳಿದ್ದರು. ನಂತರ ಚಂದನ್ ಶೆಟ್ಟಿ ವಿಡಿಯೋವನ್ನು ಯೂಟ್ಯೂಬ್ ಖಾತೆಯಿಂದ ಡಿಲೀಟ್ ಮಾಡಿದ್ದಾರೆ.

  • ಮಾದಪ್ಪನ ಭಕ್ತರ ಧಾರ್ಮಿಕ ಭಾವನೆಗೆ ಧಕ್ಕೆ- ಕ್ಷಮೆ ಕೇಳಿದ ಚಂದನ್

    ಮಾದಪ್ಪನ ಭಕ್ತರ ಧಾರ್ಮಿಕ ಭಾವನೆಗೆ ಧಕ್ಕೆ- ಕ್ಷಮೆ ಕೇಳಿದ ಚಂದನ್

    ಬೆಂಗಳೂರು: ತನ್ನ ವಿರುದ್ಧ ಜನಪದ ಹಾಡು ತಿರುಚಿದ ಆರೋಪ ಕೇಳಿ ಬರುತ್ತಿದ್ದಂತೆಯೇ ಕನ್ನಡ ರ‍್ಯಾಪರ್, ಬಿಗ್ ಬಾಸ್ ವಿಜೇತ ಚಂದನ್ ಶೆಟ್ಟಿ ಜನತೆಯಲ್ಲಿ ಕ್ಷಮೆ ಕೇಳಿದ್ದಾರೆ.

    ಈ ಸಂಬಂಧ ವಿಡಿಯೋ ಮಾಡಿ ಸ್ಪಷ್ಟನೆ ಕೊಟ್ಟ ಚಂದನ್, ಯಾರ ಭಾವನೆಗಳಿಗೂ ಧಕ್ಕೆ ಉಂಟು ಮಾಡಲು ಈ ಹಾಡನ್ನು ಮಾಡಿಲ್ಲ. ಈಗಿನ ಪೀಳಿಗೆಗೆ ನಮ್ಮ ಜಾನಪದ ತಲುಪಲಿ ಅನ್ನೋ ಕಾರಣಕ್ಕೆ ರ್ಯಾಪ್ ಹಾಡಿನ ರೂಪ ಕೊಟ್ಟಿದ್ದೆ. ಇದರಿಂದ ಯಾರಿಗಾದರೂ ಬೇಸರವಾಗಿದ್ದರೆ ಕ್ಷಮೆ ಕೇಳುತ್ತೇನೆ ಎಂದು ಹೇಳಿದ್ದಾರೆ.

    ಏನಿದು ಘಟನೆ?:
    ಗಣೇಶ ಹಬ್ಬಕ್ಕೆ ‘ಕೋಲು ಮಂಡೆ ಜಂಗಮ ದೇವರು’ ಎಂಬ ಹೊಸ ರ‍್ಯಾಪ್ ಸಾಂಗ್ ಅನ್ನು ಚಂದನ್ ಶೆಟ್ಟಿ ಯೂಟ್ಯೂಬ್‍ನಲ್ಲಿ ಬಿಡುಗಡೆ ಮಾಡಿದ್ದರು. ಇದೀಗ ಮಾದಪ್ಪನ ಗೀತೆಯನ್ನು ಅಶ್ಲೀಲವಾಗಿ ತೋರಿಸಿರುವ ಆರೋಪ ಚಂದನ್ ಶೆಟ್ಟಿ ವಿರುದ್ಧ ಕೇಳಿಬಂದಿದೆ.

    ಶಿವಶರಣೆ ಸಂಕಮ್ಮನ ಬಗ್ಗೆ ಅಶ್ಲೀಲ ಪ್ರದರ್ಶಿಸಲಾಗಿದೆ ಮತ್ತು ಭಕ್ತಿ ಗೀತೆಯನ್ನು ತಿರುಚಲಾಗಿದೆ. ಈ ಮೂಲಕ ಮಾದಪ್ಪನ ಭಕ್ತರ ಧಾರ್ಮಿಕ ಮನೋಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಚಂದನ್ ಶೆಟ್ಟಿ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ.

    ಮಲೆ ಮಹದೇಶ್ವರ ಸ್ವಾಮಿ ಗ್ರೂಪ್‍ನಲ್ಲಿ ಚಾಮರಾಜನಗರ ಜಿಲ್ಲೆಯ ಹಲವು ಯುವಕರು ಚಂದನ್ ವಿರುದ್ಧ ಕಿಡಿಕಾರಿದ್ದಾರೆ. ಹಾಡು ವೈರಲ್ ಆದ್ರೂ, ಚಾಮರಾಜನಗರದಲ್ಲಿ ಈ ಹಾಡಿಗೆ ವಿರೋಧ ವ್ಯಕ್ತವಾಗಿದೆ. ಆಗಸ್ಟ್ 23 ರಂದು ಈ ವಿಡಿಯೋ ಬಿಡುಗಡೆಯಾಗಿದ್ದು, ಈಗಾಗಲೇ 35 ಲಕ್ಷಕ್ಕೂ ಅಧಿಕ ವ್ಯೂ ಕಂಡಿದೆ. ಯೂಟ್ಯೂಬ್‍ನಲ್ಲಿ ನಂಬರ್ ಒನ್ ಟ್ರೆಂಡಿಂಗ್ ಆಗಿದೆ.

  • ಕ್ಷುಲ್ಲಕ ವಿಚಾರಕ್ಕೆ ಕಲಹ- ವ್ಯಕ್ತಿ ಮೇಲೆ ಗುಂಡಿನ ದಾಳಿ

    ಕ್ಷುಲ್ಲಕ ವಿಚಾರಕ್ಕೆ ಕಲಹ- ವ್ಯಕ್ತಿ ಮೇಲೆ ಗುಂಡಿನ ದಾಳಿ

    ಮಡಿಕೇರಿ: ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ಕಲಹ ನಡೆದ ಪರಿಣಾಮ ವ್ಯಕ್ತಿಯೋರ್ವ ಗುಂಡಿನ ದಾಳಿ ನಡೆಸಿರುವ ಘಟನೆ ಮಡಿಕೇರಿಯಲ್ಲಿ ನಡೆದಿದೆ.

    ಜಿಲ್ಲೆಯ ಮಡಿಕೇರಿ ತಾಲೂಕಿನ ಅಯ್ಯಂಗೇರಿ ಗ್ರಾಮದಲ್ಲಿ ನಾಗೇಶ್ ಹಾಗೂ ಮಾದಪ್ಪ ಎಂಬವರಿಗೆ ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆ ನಡೆದಿತ್ತು. ಮಾತಿಗೆ ಮಾತು ಬೆಳೆದಿದ್ದು, ನಾಗೇಶ್ ಮಾದಪ್ಪ ಎಂಬವರ ಮೇಲೆ 2 ಸುತ್ತು ಗುಂಡು ಹಾರಿಸಿ ದಾಳಿಗೆ ಮುಂದಾಗಿದ್ದಾನೆ. ದಾಳಿಯಿಂದ ತಪ್ಪಿಸಿಕೊಂಡ ಮಾದಪ್ಪ ಪ್ರಾಣಪಾಯದಿಂದ ಪಾರಾಗಿದ್ದಾರೆ.

    ಈ ಘಟನೆ ಬಗ್ಗೆ ಮಾದಪ್ಪ ಭಾಗಮಂಡಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಘಟನೆ ಬಳಿಕ ತಲೆಮರೆಸಿಕೊಂಡಿದ್ದ ನಾಗೇಶ್‍ ನನ್ನ ಪೊಲೀಸರು ಬಂಧಿಸಿ ನಾಡ ಬಂದೂಕನ್ನ ವಶಕ್ಕೆ ಪಡೆದಿದ್ದಾರೆ.