Tag: Maddur Stone Pelting

  • ರಾಜ್ಯ ಸರ್ಕಾರ ಹುಡುಗಾಟಿಕೆ ಬಿಟ್ಟು ಕಲ್ಲು ತೂರಿದ ಅಯೋಗ್ಯರನ್ನು ಒದ್ದು ಒಳಗೆ ಹಾಕಲಿ: ವಿಜಯೇಂದ್ರ

    ರಾಜ್ಯ ಸರ್ಕಾರ ಹುಡುಗಾಟಿಕೆ ಬಿಟ್ಟು ಕಲ್ಲು ತೂರಿದ ಅಯೋಗ್ಯರನ್ನು ಒದ್ದು ಒಳಗೆ ಹಾಕಲಿ: ವಿಜಯೇಂದ್ರ

    – ಮದ್ದೂರು ಘಟನೆ ನ್ಯಾಯಾಂಗ ತನಿಖೆ ಆಗಲೇಬೇಕು: ವಿಜಯೇಂದ್ರ ಆಗ್ರಹ

    ಬೆಂಗಳೂರು: ಮುಖ್ಯಮಂತ್ರಿಗಳ ಹೇಳಿಕೆ, ಭದ್ರಾವತಿ ಶಾಸಕರ ಹೇಳಿಕೆ ಇವೆಲ್ಲವುಗಳ ಮೂಲಕ ರಾಜ್ಯ ಸರ್ಕಾರದ ಕಡೆಯಿಂದ ಬೆಂಕಿಗೆ ತುಪ್ಪ ಸುರಿಯುವ ಕೆಲಸ ಆಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ (BY Vijayendra) ಟೀಕಿಸಿದ್ದಾರೆ.

    ಇಂದು ಮದ್ದೂರಿನಲ್ಲಿ (Maddur) ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪೊಲೀಸ್ ವೈಫಲ್ಯ ಮೊದಲಾದವು ಬಹಿರಂಗವಾಗಲಿ. ಇದಕ್ಕಾಗಿ ಮದ್ದೂರು ಘಟನೆ ಬಗ್ಗೆ ನ್ಯಾಯಾಂಗ ತನಿಖೆ ಆಗಲೇಬೇಕು ಎಂದು ಆಗ್ರಹಿಸಿದರು. ವಿಪಕ್ಷ ನಾಯಕರು, ಪ್ರಮುಖರು ಎಲ್ಲರೂ ಚರ್ಚೆ ಮಾಡಿದ್ದೇವೆ. ಮೆರವಣಿಗೆಯಲ್ಲಿ ನಾವೂ ಪಾಲ್ಗೊಳ್ಳುತ್ತೇವೆ. ಹಿಂದೂ ಸಂಘಟನೆಗಳು, ಕಾರ್ಯಕರ್ತರಿಗೆ ಧೈರ್ಯ ತುಂಬುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ಸರ್ಕಾರದ ಓಲೈಕೆ ರಾಜಕಾರಣದಿಂದ ಜನರಿಗೆ ತೊಂದರೆ: ಛಲವಾದಿ ನಾರಾಯಣಸ್ವಾಮಿ

    ಬಿಜೆಪಿಯವರು ಕೋಮು ಸೌಹಾರ್ದ ಕದಡುವ ಕೆಲಸ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿಗಳು ಹೇಳಿಕೆ ನೀಡಿದ್ದಾರೆ. ಯಾವಾಗ ಮಸೀದಿ ಒಳಗೆ ತೆರಳಿ ಕಲ್ಲನ್ನು ಹಿಡಿದಿದ್ದರೋ ಆ ಷಡ್ಯಂತ್ರ ರೂಪಿಸಿದಾಗಲೇ ಇವರು ಎಚ್ಚೆತ್ತುಕೊಳ್ಳಬೇಕಿತ್ತು. ಈಗ ನಮ್ಮ ಮೇಲೆ, ಹಿಂದೂಗಳ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಇದನ್ನು ಮುಖ್ಯಮಂತ್ರಿಗಳು ರಾಜಕಾರಣ ಎಂದಾದರೂ ಅಂದುಕೊಳ್ಳಲಿ, ಇನ್ನೇನಾದರೂ ಅಂದುಕೊಳ್ಳಲಿ. ನಮ್ಮ ಕರ್ತವ್ಯ ಮಾಡಲಿದ್ದೇವೆ. ಸರ್ಕಾರಕ್ಕೆ ಸ್ವಲ್ಪವಾದರೂ ಮಾನ ಮರ್ಯಾದೆ ಇದ್ದರೆ, ಮಸೀದಿ ಒಳಗೆ ಕಲ್ಲು ಶೇಖರಿಸಿ ಬಿಸಾಡಿದ ಹಾಗೂ ಗೂಂಡಾವರ್ತನೆ ಪ್ರಾರಂಭಿಸಿದ ದೇಶದ್ರೋಹಿಗಳ ವಿರುದ್ಧ ಗೂಂಡಾ ಕಾಯ್ದೆ ಹಾಕಬೇಕು. ಅವರನ್ನು ಒದ್ದು ಒಳಗೆ ಹಾಕಲಿ. ಸುಮ್ಮನೆ ಅಮಾಯಕ ಹಿಂದೂ ಮಹಿಳೆಯರ ಮೇಲೆ ಎಫ್‌ಐಆರ್ ದಾಖಲಿಸಿ, ಹಿಂದೂ ಕಾರ್ಯಕರ್ತರಿಗೆ ತೊಂದರೆ ಕೊಡುವುದು ಸರಿಯಲ್ಲ ಎಂದು ನುಡಿದರು. ಇದನ್ನೂ ಓದಿ: ನಟ ಪ್ರಥಮ್‌ಗೆ ಡ್ರ್ಯಾಗರ್‌ ತೋರಿಸಿ ಧಮ್ಕಿ ಹಾಕಿ ಹಲ್ಲೆಗೆ ಯತ್ನಿಸಿದ್ದ ರೌಡಿಶೀಟರ್‌ ಅರೆಸ್ಟ್‌

    ಮೋಜು ಮಸ್ತಿಯೇ ಅವರಿಗೆ ಹೆಚ್ಚಾಗಿದೆ. ಪೊಲೀಸರು ಮುಂಜಾಗ್ರತೆ ಕೈಗೊಳ್ಳದ ಪರಿಣಾಮವಾಗಿಯೇ ಈ ಬೆಳವಣಿಗೆಗಳು ನಡೆಯುತ್ತಿವೆ ಎಂದು ಆರೋಪಿಸಿದರು. ಇದನ್ನೂ ಓದಿ: ಅರಣ್ಯ ಇಲಾಖೆ ಸಿಬ್ಬಂದಿಯಿಂದ ಏಲಕ್ಕಿ ಬೆಳೆ ನಾಶ – ಲಕ್ಷಾಂತರ ರೂಪಾಯಿ ನಷ್ಟ, ರೈತರ ಆಕ್ರೋಶ

    ಮುಖ್ಯಮಂತ್ರಿಗಳು, ಸಣ್ಣಪುಟ್ಟ ಘಟನೆ ಎಂದಿರುವ ಗೃಹ ಸಚಿವರು ತಮ್ಮ ಸ್ಥಾನಕ್ಕೆ ಕಿಂಚಿತ್ತಾದರೂ ಗೌರವ ಇದ್ದರೆ ಮದ್ದೂರಿಗೆ ಬರಲಿ. ನಿಮ್ಮ ಆಡಳಿತ ಪಕ್ಷದ ಶಾಸಕರು ಪಾಪ ವಿದೇಶ ಪ್ರವಾಸದಲ್ಲಿದ್ದಾರೆ. ಅವರಿಗೆ ಇಂಥ ಸಂದರ್ಭದಲ್ಲಿ ಅವರ ಮೋಜೇ ಹೆಚ್ಚಾಗಿದೆ ಹೊರತು ಕಾನೂನು- ಸುವ್ಯವಸ್ಥೆ ಕಾಪಾಡುವ ಕಡೆ ಶಾಸಕರು ಗಮನಿಸುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: Ballari | ಮಟ್ಕಾ ದಂಧೆ ಬಯಲಿಗೆಳೆದ ವ್ಯಕ್ತಿಯ ಮೇಲೆ ಅಟ್ರಾಸಿಟಿ ಕೇಸ್

    ಹಿಂದೂ ಕಾರ್ಯಕರ್ತರು ಭಯ ಪಡುವ ಅವಶ್ಯಕತೆ ಇಲ್ಲ. ಬಿಜೆಪಿ ಮಾತ್ರವಲ್ಲ; ಜೆಡಿಎಸ್‌ನವರೂ ಇಲ್ಲಿ ಬಂದಿದ್ದಾರೆ. ಪಕ್ಷಾತೀತವಾಗಿ ನಾವೆಲ್ಲರೂ ಹಿಂದೂ ಸಂಘಟನೆ-ಕಾರ್ಯಕರ್ತರ ಪರವಾಗಿದ್ದೇವೆ. ರಾಜ್ಯ ಸರ್ಕಾರವು ಹುಡುಗಾಟಿಕೆ ಮಾಡುವುದನ್ನು ಬಿಟ್ಟು ಅಯೋಗ್ಯರನ್ನು ಒದ್ದು ಒಳಗೆ ಹಾಕಲಿ. ಹಿಂದೂ ಸಂಘಟನೆ- ಕಾರ್ಯಕರ್ತರನ್ನು ಮುಟ್ಟದಿರಿ ಎಂದು ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಸಿಎಂ ಕುರ್ಚಿಯಲ್ಲಿ ಕುಳಿತು ನ್ಯಾಯ ಕೊಡುವುದು ಮುಖ್ಯ: ಬಿ.ವೈ.ವಿಜಯೇಂದ್ರ ಅಭಿಪ್ರಾಯ

    ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಅವರು ಮೊನ್ನೆ ನಡೆದ ಘಟನೆ ಕುರಿತು ಸಂಪೂರ್ಣ ಮಾಹಿತಿ ನೀಡಿದ್ದಾರೆ. ಅವರ ಮಾತಿನ ಆಧಾರದಲ್ಲಿ ಹೇಳುವುದಾದರೆ ಒಂದಂತೂ ಸ್ಪಷ್ಟ. ಇಲ್ಲಿ ಒಂದು ಕೋಮಿನ ಜನರು ಹಿಂದೂಗಳು ಆ ಬೀದಿಯಲ್ಲಿ ಮೆರವಣಿಗೆ ಮಾಡಬಾರದು, ಗಣಪತಿ ಮೆರವಣಿಗೆಯೂ ಸಾಗಬಾರದು ಎನ್ನುತ್ತಿರುವ ಮಾಹಿತಿ ಲಭಿಸಿದೆ. ಗೂಂಡಾವರ್ತನೆ ಬಗ್ಗೆಯೂ ಅವರೇ ಉಲ್ಲೇಖಿಸಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಚಿಕ್ಕಬಳ್ಳಾಪುರ | 3 ವರ್ಷಗಳಲ್ಲಿ 536 ಮಂದಿ ಆತ್ಮಹತ್ಯೆ – ಮಹಿಳೆಯರಿಗಿಂತ ಪುರುಷರ ಸಂಖ್ಯೆಯೇ ಹೆಚ್ಚು!

    ದುಷ್ಕರ್ಮಿಗಳ ಅಟ್ಟಹಾಸವು ಬೀದಿಗಿಳಿದ ಹಿಂದೂ ಮಹಿಳೆಯರ ಆಕ್ರೋಶದಿಂದ ಗೊತ್ತಾಗುತ್ತದೆ. ಗಾಂಜಾ, ಅಫೀಮು ಕಾಟವೂ ಯಥೇಚ್ಛವಾಗಿ ಇಲ್ಲೂ ನಡೆಯುತ್ತಿದೆ. ಹಿಂದೂ ಹೆಣ್ಣುಮಕ್ಕಳು ಗೌರವಯುತವಾಗಿ ರಸ್ತೆಯಲ್ಲಿ ನಡೆದು ಹೋಗಲು ಅಸಾಧ್ಯ ಆಗುವಂಥ ವಾತಾವರಣ ಮದ್ದೂರಿನಲ್ಲಿ ನಿರ್ಮಾಣವಾಗಿದ್ದರೆ, ದೇಶದ್ರೋಹಿಗಳು ಯಾವ ರೀತಿ ಮೆರೆಯುತ್ತಿದ್ದಾರೆ ಎಂಬುದು ಇದರಲ್ಲೇ ಗೊತ್ತಾಗುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಗದಗ | ಕಾರಿನ ಮೇಲೆ ಪಾಕ್ ಧ್ವಜ ಪ್ರದರ್ಶನ – ಅಪ್ರಾಪ್ತನ ವಿರುದ್ಧ ಕೇಸ್

    ಮುಖ್ಯಮಂತ್ರಿಗಳು, ಸಚಿವರ ಹೇಳಿಕೆ ಗಮನಿಸಿದರೆ ಇವರು ಹಿಂದೂಗಳ ಮತ ಪಡೆಯದೇ ಅಧಿಕಾರಕ್ಕೆ ಬಂದಂತೆ ಕಾಣುತ್ತಿದೆ. ಮುಖ್ಯಮಂತ್ರಿಗಳಿಗೆ ಕೇಸರಿ ಕಂಡರೆ ಆಗುವುದಿಲ್ಲ, ಇವರ ನಡವಳಿಕೆಯೂ ಕುಮ್ಮಕ್ಕನ್ನು ನೀಡುತ್ತಿದೆ. ದೇಶದ್ರೋಹಿಗಳು, ಕೆಲವರಲ್ಲಿರುವ ಜಿಹಾದಿ ಮಾನಸಿಕ ಸ್ಥಿತಿ ಏನಿದೆಯೋ ಅವರಿಗೂ ಇದೇ ಕಾರಣಕ್ಕಾಗಿ ಧೈರ್ಯ ಬಂದಿದೆ ಎಂದು ಆರೋಪಿಸಿದರು. ಗಲಭೆಗೆ ರಾಜ್ಯ ಸರ್ಕಾರವೇ ಸಂಪೂರ್ಣ ಹೊಣೆ ಹೊರಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಕೋರ್ಟ್ ಆದೇಶ ಬಳಿಕ ದರ್ಶನ್‌ಗೆ ರಿಲ್ಯಾಕ್ಸ್ – ದಿಂಬು, ಚಾಪೆ ಜೊತೆಗೆ ಎರಡು ಜಮ್ಖಾನ ನೀಡಿದ ಅಧಿಕಾರಿಗಳು

    ಬೀದಿಯಲ್ಲಿ ಓಡಾಡುವುದು ಕಷ್ಟ ಆಗಲಿದೆ:
    ಧರ್ಮಸ್ಥಳದ ವಿಚಾರದಲ್ಲಿ ಸರ್ಕಾರದ ನಡವಳಿಕೆಯನ್ನು ಜನತೆ ಗಮನಿಸಿದ್ದಾರೆ. ಚಾಮುಂಡಿ ಬೆಟ್ಟಕ್ಕೆ ತೆರಳುವ ಮಹಿಳೆಯರನ್ನು ತಡೆಯುವ ದುಸ್ಸಾಹಸಕ್ಕೆ ಸರ್ಕಾರ ಕೈಹಾಕಿದೆ. ಅಧಿಕಾರ ಇದೆ ಎಂದು ಚೆಲ್ಲಾಟ, ಹಿಂದೂಗಳ ಮೇಲೆ ದಬ್ಬಾಳಿಕೆ ಮಾಡುತ್ತಿದ್ದಾರೆ. ಇವರ ಪಾಪದ ಕೊಡ ತುಂಬಿದೆ. ಇವತ್ತಲ್ಲ ನಾಳೆ ಇವರು ಬೀದಿಯಲ್ಲಿ ಓಡಾಡುವುದು ಕಷ್ಟ ಆಗಲಿದೆ. ಹಿಂದೂಗಳೆಲ್ಲರೂ ಪ್ರಜ್ಞಾವಂತರಾಗಿದ್ದಾರೆ. ನಿಮ್ಮ ಅಲ್ಪಸಂಖ್ಯಾತರ ಓಲೈಕೆ ರಾಜಕಾರಣವೇ ರಾಜ್ಯದಲ್ಲಿ ಬೆಂಕಿ ಹಚ್ಚುವ ಕೆಲಸಕ್ಕೆ ಕುಮ್ಮಕ್ಕು ನೀಡುತ್ತಿದೆ ಎಂದು ಆರೋಪಿಸಿದರು. ಇದನ್ನೂ ಓದಿ: ನೇಪಾಳದ 18 ಜಿಲ್ಲೆಗಳ ಜೈಲಿನಿಂದ 6 ಸಾವಿರಕ್ಕೂ ಹೆಚ್ಚು ಕೈದಿಗಳು ಪರಾರಿ

    ಬಿಜೆಪಿ ಮುಸಲ್ಮಾನರ ವಿರೋಧಿಗಳಲ್ಲ. ಪ್ರಧಾನಿ ಮೋದಿಜೀ ಅವರು ಸಬ್ ಕಾ ಸಾಥ್ ನೀತಿಯೊಂದಿಗೆ ಕೆಲಸ ಮಾಡುತ್ತಿದ್ದಾರೆ. ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗುವ ದೇಶದ್ರೋಹಿಗಳಿಗೆ ಬಿರಿಯಾನಿ ತಿನ್ನಿಸುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆಯಲ್ಲವೇ ಎಂದು ಕೇಳಿದರು. ಇದು ಅಕ್ಷಮ್ಯ ಅಪರಾಧ ಎಂದು ಟೀಕಿಸಿದರು. ಇದನ್ನೂ ಓದಿ: ಲೈಂಗಿಕ ದೌರ್ಜನ್ಯ ಕೇಸ್‌ | ಕ್ರಿಕೆಟಿಗ ಪೃಥ್ವಿ ಶಾಗೆ 100 ರೂ. ದಂಡ ವಿಧಿಸಿದ ಮುಂಬೈ ಕೋರ್ಟ್

    ಅಯೋಗ್ಯ ಕಾಂಗ್ರೆಸ್ಸಿಗರ ಮಾತನ್ನು ಕಟ್ಟಿಕೊಂಡು ಮುಸಲ್ಮಾನರು ಬೀದಿಗಿಳಿದು ಕಲ್ಲೆಸೆಯುವ ಕೆಲಸ ಆಗುತ್ತಿದ್ದು, ಅವರ ಭವಿಷ್ಯವನ್ನೂ ಕಾಂಗ್ರೆಸ್ಸಿನವರು ಹಾಳು ಮಾಡುತ್ತಿದ್ದಾರೆ ಎಂದು ಮುಸಲ್ಮಾನ ಧರ್ಮಗುರುಗಳಿಗೆ ತಿಳಿಸುವುದಾಗಿ ಹೇಳಿದರು. ಇದನ್ನೂ ಓದಿ: ಅಕ್ರಮ ಗಣಿ ಆಸ್ತಿ ಜಪ್ತಿ ಕಾನೂನಿಗೆ ಅಧಿಕೃತ ಮುದ್ರೆ: ಹೆಚ್.ಕೆ ಪಾಟೀಲ್

  • ದರಿದ್ರ ಕಾಂಗ್ರೆಸ್ ಆಡಳಿತದಲ್ಲಿ ಹಿಂದೂಗಳಿಗೆ ಅಪಮಾನ, ಹಿಂದೂ ಭಾವನೆಗೆ ಧಕ್ಕೆ: ಬಿ.ವೈ.ವಿಜಯೇಂದ್ರ

    ದರಿದ್ರ ಕಾಂಗ್ರೆಸ್ ಆಡಳಿತದಲ್ಲಿ ಹಿಂದೂಗಳಿಗೆ ಅಪಮಾನ, ಹಿಂದೂ ಭಾವನೆಗೆ ಧಕ್ಕೆ: ಬಿ.ವೈ.ವಿಜಯೇಂದ್ರ

    ನವದೆಹಲಿ: ಈ ಬಿಜೆಪಿಯವರಿಂದ ರಾಜ್ಯದಲ್ಲಿ ನೆಮ್ಮದಿ ಹಾಳಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿಕೆ ಕೊಟ್ಟಿದ್ದಾರೆ. ದರಿದ್ರ ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ಅಧಿಕಾರಕ್ಕೆ ಬಂದಾಗಿನಿಂದ ಕರ್ನಾಟಕದಲ್ಲಿ ಹಿಂದೂಗಳಿಗೆ ಅಪಮಾನ, ಹಿಂದೂ ಭಾವನೆಗೆ ಧಕ್ಕೆ ಆಗುತ್ತಿದೆ. ಹಿಂದೂಗಳ ವಿರುದ್ಧ ಪ್ರಕರಣ ದಾಖಲಿಸಲಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ (B.Y.Vijayendra) ಆಕ್ಷೇಪಿಸಿದ್ದಾರೆ.

    ಸಂಸದ ಬಿ.ವೈ. ರಾಘವೇಂದ್ರ ಅವರ ದೆಹಲಿಯ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮದ್ದೂರಿನಲ್ಲಿ ಹೆಣ್ಮಕ್ಕಳ ಮೇಲೆ ಲಾಠಿ ಚಾರ್ಜ್ ಮಾಡಿದ್ದು ಸಣ್ಣ ಘಟನೆ ಎಂದು ಗೃಹ ಸಚಿವರಿಗೆ ಮತ್ತು ಮುಖ್ಯಮಂತ್ರಿಗಳಿಗೆ ಅನಿಸುವುದಾದರೆ, ಲಜ್ಜೆಗೆಟ್ಟ ವರ್ತನೆ ರಾಜ್ಯ ಸರ್ಕಾರದ್ದು ಎಂದು ಖಂಡಿಸಿದರು.

    ಮದ್ದೂರಿನಲ್ಲಿ ಇವತ್ತು ಹೆಣ್ಮಕ್ಕಳ ಮೇಲೆ ಲಾಠಿ ಚಾರ್ಜ್ ಮಾಡಿದ್ದಾರೆ. ದೇಶಾದ್ಯಂತ ಗಣೇಶ ಉತ್ಸವ ವಿಜೃಂಭಣೆಯಿಂದ ನಡೆಯುತ್ತಿದೆ. ಮಹಾರಾಷ್ಟ್ರ ಸೇರಿ ಎಲ್ಲ ರಾಜ್ಯಗಳಲ್ಲಿ ಗಣೇಶ ಹಬ್ಬ, ವಿಗ್ರಹ ವಿಸರ್ಜನೆ ವಿಜೃಂಭಣೆಯಿಂದ ನಡೆಯುತ್ತದೆ. ಕರ್ನಾಟಕದಲ್ಲಿ ಯಾಕೆ ಗಲಾಟೆ ಆಗುತ್ತಿದೆ ಎಂದು ಪ್ರಶ್ನಿಸಿದರು. ರಾಜ್ಯದಲ್ಲಿ ಈದ್ ಮಿಲಾದ್ ನಡೆದಾಗ ಎಲ್ಲಾದರೂ ಗಲಾಟೆ ಆಗಿದೆಯೇ ಎಂದು ಕೇಳಿದರು. ಇದನ್ನೂ ಓದಿ: ಮದ್ದೂರು ಘಟನೆಗೆ ಕಾಂಗ್ರೆಸ್ ಸರ್ಕಾರವೇ ಕಾರಣ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪ

    ಕರ್ನಾಟಕದಲ್ಲೂ ಹಿಂದೂಗಳು ಶಾಂತಿಪ್ರಿಯರು. ಎಲ್ಲ ಧರ್ಮ, ಎಲ್ಲ ಸಮುದಾಯಗಳನ್ನು ಪ್ರೀತಿಸುವ ಕೆಲಸವನ್ನು ಹಿಂದೂ ಸಮಾಜ ಮಾಡುತ್ತಿದೆ. ಆದರೆ, ರಾಜ್ಯ ಸರ್ಕಾರ ನಡೆಸುವ ಕಾಂಗ್ರೆಸ್ ಪಕ್ಷ, ಮುಖ್ಯಮಂತ್ರಿಗಳು ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದರು. ಮದ್ದೂರಿನದ್ದು ಸಣ್ಣಪುಟ್ಟ ಘಟನೆ ಎಂದು ಗೃಹ ಸಚಿವರು ಹೇಳಿದ್ದಾರೆ. ಮಹಿಳೆಯರ ಮೇಲೆ ಲಾಠಿ ಚಾರ್ಜ್ ಮಾಡಿದ್ದು, ಸಣ್ಣಪುಟ್ಟ ಘಟನೆ ಆಗಲು ಸಾಧ್ಯವೇ ಎಂದು ಕೇಳಿದರು. ನಿಮ್ಮ ಮನೆಯ ಹೆಣ್ಮಕ್ಕಳ ಮೇಲೆ ಕಲ್ಲೆಸೆದರೆ, ಲಾಠಿ ಚಾರ್ಜ್ ಮಾಡಿದರೆ ಯಾವ ಪರಿಸ್ಥಿತಿ ಆಗಲಿದೆ ಎಂದು ಪ್ರಶ್ನಿಸಿದರು.

    ಕೇಸರಿ ಕಂಡರೆ ಆಗದ ಮುಖ್ಯಮಂತ್ರಿ
    ಸಿದ್ದರಾಮಯ್ಯನವರಿಗೆ ಕೇಸರಿ ಕಂಡರೆ ಆಗುವುದಿಲ್ಲ. ಕೇಸರಿ ಪೇಟ ತೊಡಿಸಿದರೆ ಕಿತ್ತು ಬಿಸಾಡುತ್ತಾರೆ. ಆದರೆ, ಮೊನ್ನೆ ಈದ್ ಮಿಲಾದ್‍ನಲ್ಲಿ ಇಡೀ ದಿನ ಆ ಟೊಪ್ಪಿ ಹಾಕಿಕೊಂಡು ಆನಂದವಾಗಿ ಕುಳಿತಿದ್ದರು. ಕಾಂಗ್ರೆಸ್ ಸರ್ಕಾರದ ಧೋರಣೆ ಸ್ಪಷ್ಟವಾಗಿ ಗೋಚರಿಸುತ್ತಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬರಲು ಅವರಿಗೆ ಹಿಂದೂಗಳ ಮತ ಸಿಕ್ಕಿಲ್ಲವೇ? ಕಾಂಗ್ರೆಸ್ಸಿನವರಿಗೆ ಹಿಂದೂಗಳ ಬಗ್ಗೆ ಇಷ್ಟೊಂದು ದ್ವೇಷ ಏಕೆ ಎಂದು ಅವರು ಕೇಳಿದರು. ಹಿಂದೂಗಳ ಬಗ್ಗೆ ಕಾಂಗ್ರೆಸ್ ಸರ್ಕಾರಕ್ಕೆ ಅಸಡ್ಡೆ ಏಕೆ ಎಂದು ಪ್ರಶ್ನೆಯನ್ನೂ ಮುಂದಿಟ್ಟರು.

    ಸರ್ಕಾರದ ಹಿಂದೂ ವಿರೋಧಿ, ಅಲ್ಪಸಂಖ್ಯಾತರ ಪರ ನೀತಿಯಿಂದ ಹಿಂದೂಗಳ ಮೇಲೆ ದಬ್ಬಾಳಿಕೆ ನಡೆದಿದೆ ಎಂದು ಆಕ್ಷೇಪಿಸಿದರು. ಕಾಂಗ್ರೆಸ್ ಪಕ್ಷದ, ಸರ್ಕಾರದ ಪಾಪದ ಕೊಡ ತುಂಬಿದೆ. ಇದೇ ರೀತಿ ಸರ್ಕಾರ ಮುಂದುವರೆದರೆ ಮುಂದೆ ಬೀದಿಯಲ್ಲಿ ನಡೆದು ಹೋಗಲು ಕಾಂಗ್ರೆಸ್ ಕಾರ್ಯಕರ್ತರಿಗೆ ಕಷ್ಟ ಆಗಲಿದೆ ಎಂದು ಎಚ್ಚರಿಸಿದರು. ಇದನ್ನೂ ಓದಿ: ಮದ್ದೂರು ಗಲಭೆಕೋರರನ್ನು ಬಂಧಿಸಲಿ, ಸ್ವಯಂಪ್ರೇರಿತ ಬಂದ್‌ಗೆ ನಮ್ಮ ಬೆಂಬಲ: ಎನ್.ರವಿಕುಮಾರ್

    ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅಪಪ್ರಚಾರವನ್ನು ಗಮನಿಸಿ ಈ ಸರ್ಕಾರ ಕೈಕಟ್ಟಿ ಕೂತಿತ್ತು. ಕೊಪ್ಪಳದಲ್ಲಿ ಈಚೆಗೆ ಪರಿಶಿಷ್ಟ ಪಂಗಡಕ್ಕೆ ಸೇರಿದ ಒಬ್ಬ ಹಿಂದೂ ಕಾರ್ಯಕರ್ತ ಗವಿಸಿದ್ದಪ್ಪರ ಬರ್ಬರ ಹತ್ಯೆ ನಡೆದಿತ್ತು. ಮಸೀದಿ ಎದುರು ಅವರನ್ನು ಕೊಚ್ಚಿ ಹಾಕಿದ್ದರು. ಸುಹಾಸ್ ಶೆಟ್ಟಿ ಬರ್ಬರ ಹತ್ಯೆಯೂ ದೇಶಾದ್ಯಂತ ಚರ್ಚೆಯಾಗಿದೆ ಎಂದು ಗಮನ ಸೆಳೆದರು.

    ಸಿದ್ದರಾಮಯ್ಯರ ನೇತೃತ್ವದ ಕಾಂಗ್ರೆಸ್ ಸರ್ಕಾರವು ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ, ಹಿಂದೂಗಳಿಗೆ ಪದೇಪದೇ ಅಪಮಾನ ಆಗುತ್ತಿದೆ. ಹಿಂದೂಗಳು ಗೌರವದಿಂದ ತಲೆ ಎತ್ತಿಕೊಂಡು ಓಡಾಡಲು ಆಗದಂಥ ಪರಿಸ್ಥಿತಿ ನಿರ್ಮಾಣವಾಗಿದೆ. ರಾಜ್ಯ ಸರ್ಕಾರವು ಹಿಂದೂಗಳ ಮೇಲೆ ಕೇಸುಗಳನ್ನು ದಾಖಲಿಸುತ್ತಿದೆ ಎಂದು ಆಕ್ಷೇಪಿಸಿದರು.

    ಸಮಾಜಘಾತುಕ ಶಕ್ತಿಗಳ ವಿರುದ್ಧ ದಾಖಲಿಸಿದ್ದ ಮೊಕದ್ದಮೆಗಳನ್ನು ಹಿಂಪಡೆದಿದ್ದಾರೆ. ಮದ್ದೂರಿನಲ್ಲಿ ಹಿಂದೂಗಳ ಮೇಲೆ ಕಲ್ಲು ತೂರಾಟ ಆಗಿದ್ದು, ಆ ದೇಶದ್ರೋಹಿಗಳು, ಸಮಾಜಘಾತುಕ ಶಕ್ತಿಗಳಿಗೆ ರಾಜ್ಯ ಸರ್ಕಾರದ ಎಲ್ಲ ತೀರ್ಮಾನಗಳಿಂದ ಧೈರ್ಯ ಬಂದಿದೆ ಎಂದು ಆರೋಪಿಸಿದರು. ಸಿದ್ದರಾಮಯ್ಯನವರೇ ಸಚಿವ ಸಂಪುಟ ಸಭೆಯಲ್ಲಿ ಕೇಸು ಹಿಂಪಡೆಯುತ್ತೀರಾ ಎಂದು ಪ್ರಶ್ನಿಸಿದರು. ಪತ್ರಿಕಾಗೋಷ್ಠಿಯಲ್ಲಿ ಶಾಸಕರಾದ ಶೈಲೇಂದ್ರ ಬೆಲ್ದಾಳೆ, ಹರೀಶ್ ಪೂಂಜಾ, ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಸತೀಶ್ ಕುಂಪಲ ಮತ್ತು ಪ್ರಮುಖರು ಉಪಸ್ಥಿತರಿದ್ದರು.

  • ಮದ್ದೂರು ಘಟನೆಗೆ ಕಾಂಗ್ರೆಸ್ ಸರ್ಕಾರವೇ ಕಾರಣ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪ

    ಮದ್ದೂರು ಘಟನೆಗೆ ಕಾಂಗ್ರೆಸ್ ಸರ್ಕಾರವೇ ಕಾರಣ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪ

    ನವದೆಹಲಿ: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಕೆಟ್ಟ ಆಡಳಿತ, ನಡವಳಿಕೆಯಿಂದಲೇ ಮದ್ದೂರಿನಲ್ಲಿ (Maddur Stone Pelting) ಗಣಪತಿ ಮೆರವಣಿಗೆ ಮೇಲೆ ಕಲ್ಲು ಎಸೆಯುವಂಥ ಪರಿಸ್ಥಿತಿ ಸೃಷ್ಟಿಯಾಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (H.D.Kumaraswamy) ಆರೋಪಿಸಿದರು.

    ಘಟನೆಯ ವಿಷಯ ತಿಳಿಯುತ್ತಿದ್ದಂತೆಯೇ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳ ಜತೆ ಮಾತನಾಡಿ ಮಾಹಿತಿ ಪಡೆದುಕೊಂಡ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮಂಡ್ಯ ಜಿಲ್ಲೆಯಲ್ಲಿ ಇಷ್ಟು ದೊಡ್ಡಮಟ್ಟದಲ್ಲಿ ಇಂಥ ಕೆಟ್ಟ ಘಟನೆಗಳು ನಡೆಯಲು ಕಾಂಗ್ರೆಸ್ ಸರ್ಕಾರವೇ ಕಾರಣ ಎಂದು ದೂರಿದರು.

    ಶಾಂತಿ ನೆಮ್ಮದಿಗೆ ಹೆಸರಾಗಿದ್ದ ಮಂಡ್ಯ ಜಿಲ್ಲೆಗೆ ಬೆಂಕಿ ಹಚ್ಚುವ ಕೆಲಸವಾಗುತ್ತಿದೆ. ಹಿಂದೆಂದೂ ಈ ಜಿಲ್ಲೆಯಲ್ಲಿ ಇಂಥ ಘಟನೆಗಳು ಆಗಿಲ್ಲ. ನಾಗಮಂಗಲದಲ್ಲಿ ಕೆಲ ದುಷ್ಟಶಕ್ತಿಗಳು ಬೆಂಕಿ ಹಾಕುವ ಕೆಲಸ ಮಾಡಿದವು. ಈಗ ಮದ್ದೂರಿನಲ್ಲಿಯೂ ಅಂತಹ ಶಕ್ತಿಗಳೇ ಜನರ ನೆಮ್ಮದಿ ಕೆಡಿಸುವ ಹುನ್ನಾರ ನಡೆಸಿವೆ ಎಂದು ಆಪಾದಿಸಿದರು. ಇದನ್ನೂ ಓದಿ: ನಾಳೆ ಮದ್ದೂರು ಸ್ವಯಂ ಪ್ರೇರಿತ ಬಂದ್‌ಗೆ ಕರೆ – ಹಿಂದೂ ಮುಖಂಡರ ತೀರ್ಮಾನ

    ಮಂಡ್ಯ ಜಿಲ್ಲೆ ಯಾವಾಗಲೂ ಶಾಂತಿ ಸೌಹಾರ್ದತೆಗೆ ಹೆಸರಾಗಿದೆ. ಜನರು ಕಷ್ಟಪಟ್ಟು ಕೆಲಸ ಮಾಡುತ್ತಾ ನೆಮ್ಮದಿ ಜೀವನ ಮಾಡುತ್ತಿದ್ದಾರೆ. ಕುವೆಂಪು ಅವರ ಆಶಯದ ಸರ್ವ ಜನಾಂಗದ ಶಾಂತಿಯ ತೋಟವಾಗಿದೆ. ಆದರೆ ಕೆಲ ಶಕ್ತಿಗಳು ವ್ಯವಸ್ಥಿತವಾಗಿ ಜನರ ನೆಮ್ಮದಿ ಹಾಳು ಮಾಡುವ ಕೆಲಸ ಮಾಡುತ್ತಿವೆ. ಕಾಂಗ್ರೆಸ್‌ ಪಕ್ಷದ ಓಲೈಕೆ ರಾಜಕಾರಣದಿಂದ ಇಂಥ ಕೆಟ್ಟ ಪರಿಸ್ಥಿತಿ ರಾಜ್ಯದ ಉದ್ದಗಲಕ್ಕೂ ಸೃಷ್ಟಿಯಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.

    ಶಾಂತಿ ನೆಲೆಸುವುದಕ್ಕೆ ಎಲ್ಲರೂ ಸಹಕಾರ ನೀಡಬೇಕು. ನಾನು ಈಗಾಗಲೇ ಜಿಲ್ಲಾಧಿಕಾರಿ ಮತ್ತು ಪೊಲೀಸ್‌ ವರಿಷ್ಠಾಧಿಕಾರಿಗಳ ಜೊತೆ ಮಾತನಾಡಿ ಕಿಡಿಗೇಡಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದ್ದೇನೆ ಎಂದು ಕೇಂದ್ರ ಸಚಿವರು ಹೇಳಿದರು. ಇದನ್ನೂ ಓದಿ: ಗಣೇಶ ವಿಸರ್ಜನೆ ವೇಳೆ ಅನ್ಯಕೋಮಿನ ಯುವಕರಿಂದ ಕಲ್ಲು ತೂರಾಟ – ಮದ್ದೂರು ಉದ್ವಿಗ್ನ

    ಸರ್ವ ಜನಾಂಗದ ಶಾಂತಿಯ ತೋಟವಾದ ರಾಜ್ಯಕ್ಕೆ ಬೆಂಕಿ ಹಚ್ಚುವ ಕೆಲಸ ಆಗುತ್ತಿದೆ. ಕಾಂಗ್ರೆಸ್ ನಡವಳಿಕೆ, ಅವರ ಆಡಳಿತವೇ ಈ ಘಟನೆಗೆ ಕಾರಣ. ಹಿಂದೂಗಳು ಅಸಮಾಧಾನವಾಗುವ ರೀತಿಯಲ್ಲಿ ‌ಕಾಂಗ್ರೆಸ್ ಕೆಲಸ ಮಾಡುತ್ತಿದೆ. ಇದನ್ನು ನಾನು ರಾಜಕೀಯ ಉದ್ದೇಶದಿಂದ ಹೇಳುತ್ತಿಲ್ಲ. ರಾಜ್ಯದ ಹಲವೆಡೆ ಗಲಾಟೆಗಳು ನಡೆಯಲು ಕಾಂಗ್ರೆಸ್ ಪಕ್ಷವೇ ಕಾರಣ. ಈ ಮೂಲಕ ಕಾಂಗ್ರೆಸ್ ಪಕ್ಷವು ತನ್ನ ಅವನತಿಯನ್ನು ತಾನೇ ತಂದುಕೊಳ್ಳುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಈ ಹಿಂದೆ ಇಂಥ ಘಟನೆಗಳು ಒಂದೆರಡು ಜಿಲ್ಲೆಗಳಲ್ಲಿ ಅಲ್ಲೊಂದು ಇಲ್ಲೊಂದು ನಡೆಯುತ್ತಿದ್ದವು. ಕಾಂಗ್ರೆಸ್‌ ಸರ್ಕಾರ ಬಂದ ಮೇಲೆ ಎಲ್ಲಾ ಜಿಲ್ಲೆಗಳಲ್ಲಿ ಪ್ರತಿ ಭಾಗದಲ್ಲಿಯೂ ಅವ್ಯಾಹತವಾಗಿ ನಡೆಯುತ್ತಿವೆ. ಆ ಕೆಟ್ಟ ಪರಿಸ್ಥಿತಿ ಕಾಂಗ್ರೆಸ್ ಆಡಳಿತದಲ್ಲಿ ಇಡೀ ರಾಜ್ಯಕ್ಕೆ ವ್ಯಾಪಿಸಿದೆ. ಕೇವಲ ಓಲೈಕೆ ರಾಜಕಾರಣದಿಂದ ಇಷ್ಟೆಲ್ಲಾ ನಡೆಯುತ್ತಿದೆ ಎಂದು ದೂರಿದರು.

    ಇಂಥ ಗಲಭೆಗಳನ್ನು ನೋಡಿದರೆ ಕಾಂಗ್ರೆಸ್ ಪಕ್ಷದ ಅವನತಿ ಆರಂಭವಾಗಿದೆ ಎಂದು ಅರ್ಥವಾಗುತ್ತದೆ. ಇದೆಲ್ಲವನ್ನೂ ಕಾಂಗ್ರೆಸ್ ಅರ್ಥ ಮಾಡಿಕೊಳ್ಳದಿದ್ದರೆ ಇದು ಸೆಲ್ಪ್ ಸೂಸೈಡ್ (ಆತ್ಮಹತ್ಯೆ) ಆಗಲಿದೆ. ಸಾರ್ವಜನಿಕ ಆಸ್ತಿ-ಪಾಸ್ತಿ ಹಾನಿ ಆಗಬಾರದು. ಕಟ್ಟುನಿಟ್ಟಿನ ಕ್ರಮಕೈಗೊಂಡು ಕಿಡಿಗೇಡಿಗಳ ಹೆಡೆಮುರಿ ಕಟ್ಟುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದೇನೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ಕೊಟ್ಟರು.