Tag: madduru

  • ಮದ್ದೂರು | ಕೋರ್ಟ್‌ಗೆ ತಲುಪಲಾಗದ ವೃದ್ಧನ ಬಳಿ ಬಂದು ತೀರ್ಪು ನೀಡಿದ ಜಡ್ಜ್

    ಮದ್ದೂರು | ಕೋರ್ಟ್‌ಗೆ ತಲುಪಲಾಗದ ವೃದ್ಧನ ಬಳಿ ಬಂದು ತೀರ್ಪು ನೀಡಿದ ಜಡ್ಜ್

    ಮಂಡ್ಯ: ಅಪಘಾತದಿಂದ (Accident) ಕಾಲಿನ ಸ್ವಾಧೀನ ಕಳೆದುಕೊಂಡು ಕೋರ್ಟ್‍ನ (Court) ಮೆಟ್ಟಿಲುಗಳನ್ನು ಹತ್ತಲಾಗದ ವೃದ್ಧ ಇದ್ದಲ್ಲಿಯೇ ಜಡ್ಜ್ ಬಂದು ತೀರ್ಪು ನೀಡಿದ ಘಟನೆ ಮದ್ದೂರಿನಲ್ಲಿ (Madduru) ನಡೆದಿದೆ.

    ಮದ್ದೂರು ಜೆಎಂಎಫ್‍ಸಿ ನ್ಯಾಯಾಲಯಕ್ಕೆ ಲೋಕ ಅದಾಲತ್ ಕಾರ್ಯಕ್ರಮಕ್ಕೆ ಅಪಘಾತ ವಿಮಾ ಸಂಬಂಧ ವಿಚಾರಣೆಗೆ ವೃದ್ಧ ಮಾದೇಗೌಡ ಎಂಬವರು ಬಂದಿದ್ದರು. ಈ ವೇಳೆ ಕಟ್ಟಡದ ಮೇಲಿನ ಮಹಡಿಯಲ್ಲಿ ಕೋರ್ಟ್ ಕಲಾಪ ನಡೆಯುತ್ತಿತ್ತು. ಮಾದೇಗೌಡರಿಗೆ ಮೇಲೆ ಮೆಟ್ಟಿಲು ಏರಲಾಗದೇ ಕೆಳಗಿನ ಕೊಠಡಿಯಲ್ಲಿ ಕುಳಿತಿದ್ದರು. ಇದನ್ನೂ ಓದಿ: ಬಾನು ಮುಷ್ತಾಕ್ ಆಯ್ಕೆ ಪ್ರಶ್ನಿಸಿ ಪ್ರತಾಪ್‌ ಸಿಂಹ ಸೇರಿ ಮೂವರು ಸಲ್ಲಿಸಿದ್ದ ಅರ್ಜಿ ವಜಾ

    ಈ ವಿಚಾರ ತಿಳಿದ ನ್ಯಾಯಾಧೀಶೆ ಹರಿಣಿಯವರು ಕೆಳಗಿಳಿದು ಬಂದು ವಿಚಾರಿಸಿದರು. ಬಳಿಕ ವಿಮಾ ಕಂಪನಿಗೆ 2.5 ಲಕ್ಷ ರೂ. ಪರಿಹಾರ ನೀಡುವಂತೆ ಸ್ಥಳದಲ್ಲೇ ಆದೇಶಿಸಿದರು. ನ್ಯಾಯಾಧೀಶರ ಮಾನವೀಯತೆ ಕಂಡು ಸ್ಥಳದಲ್ಲಿದ್ದ ಜನರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕೋರ್ಟ್ ಆದೇಶಿಸಿದ್ರೂ ಹಾಸಿಗೆ, ದಿಂಬು ಒದಗಿಸಿಲ್ಲ – ಮತ್ತೆ ಅರ್ಜಿ ಸಲ್ಲಿಸಿದ ದರ್ಶನ್ ಪರ ವಕೀಲರು

  • ಇಂದು ಮದ್ದೂರಿನಲ್ಲಿ ಸಾಮೂಹಿಕ ಗಣೇಶ ವಿಸರ್ಜನೆ – 20 ಸಾವಿರಕ್ಕೂ ಹೆಚ್ಚು ಜನ ಭಾಗಿ ಸಾಧ್ಯತೆ

    ಇಂದು ಮದ್ದೂರಿನಲ್ಲಿ ಸಾಮೂಹಿಕ ಗಣೇಶ ವಿಸರ್ಜನೆ – 20 ಸಾವಿರಕ್ಕೂ ಹೆಚ್ಚು ಜನ ಭಾಗಿ ಸಾಧ್ಯತೆ

    – ಬೆಳಗ್ಗೆ 10:30 ರಿಂದ ಮೆರವಣಿಗೆ ಆರಂಭ
    – ಭದ್ರತೆಗೆ 2 ಸಾವಿರಕ್ಕೂ ಹೆಚ್ಚು ಪೊಲೀಸರ ನಿಯೋಜನೆ

    ಮಂಡ್ಯ: ಮದ್ದೂರಿನಲ್ಲಿಂದು (Madduru) ಸಾಮೂಹಿಕ ಗಣೇಶ ವಿಸರ್ಜನಾ (Ganesh Procession) ಮೆರವಣಿಗೆ ನಡೆಯಲಿದೆ. 28ಕ್ಕೂ ಹೆಚ್ಚು ಗಣೇಶ ಮೂರ್ತಿಗಳ ಮೆರವಣಿಗೆ ನಡೆಯಲಿದ್ದು 20 ಸಾವಿರಕ್ಕೂ ಹೆಚ್ಚು ಜನ ಭಾಗಿಯಾಗುವ ಸಾಧ್ಯತೆಯಿದೆ.

    ಬೆಳಗ್ಗೆ 10:30ಕ್ಕೆ ಮದ್ದೂರು ಪಟ್ಟಣದಿಂದ ಮೆರವಣಿಗೆ ಆರಂಭವಾಗಿ ಮೂರು ಕಿ.ಮೀ ಸಾಗಿ ಶಿಂಷಾ ನದಿಯಲ್ಲಿ ಗಣೇಶ ವಿಸರ್ಜನೆ ನಡೆಯಲಿದೆ. ಈ ಕಾರಣಕ್ಕೆ ಮದ್ದೂರು, ಮಳವಳ್ಳಿ, ಮಂಡ್ಯ ತಾಲೂಕಿನಲ್ಲಿ ಇಂದು ಮದ್ಯ ಮಾರಾಟ, ಸಾಗಾಣಿಕೆಗೆ ಬ್ರೇಕ್ ಹಾಕಲಾಗಿದೆ.

    ಮದ್ದೂರು ತಾಲೂಕಿನ ಕೆಲವು ಗ್ರಾಮಗಳಲ್ಲಿ ಪ್ರತಿಷ್ಠಾಪಿಸಿರುವ ಎಲ್ಲಾ ಗಣೇಶ ಮೂರ್ತಿಗಳನ್ನು ಗ್ರಾಮಕ್ಕೆ ತರುವಂತೆ ಕರೆ ನೀಡಲಾಗಿದೆ. ನಂತರ ಕಾಶಿ ವಿಶ್ವಾನಾಥ ದೇವಸ್ಥಾನದಿಂದ ಮೆರವಣಿಗೆ ಪ್ರಾರಂಭವಾಗಲಿದೆ.

    ಈ ಮೆರವಣಿಗೆ ಹೊಳೆಬೀದಿ, ಪೇಟೇಬೀದಿ , ಟಿಬಿ ಸರ್ಕಲ್, ಹಳೆ ಬೆಂಗಳೂರು-ಮೈಸೂರು ರಸ್ತೆಯಲ್ಲಿ ಸಂಚರಿಸಿ ಕೊಲ್ಲಿ ಸರ್ಕಲ್‌ನಲ್ಲಿ ಅಂತ್ಯವಾಗಲಿದೆ. ಬಳಿಕ ಹೊಳೆ ಆಂಜನೇಯ ದೇವಾಲಯ ಬಳಿಯ ಶಿಂಷಾ ನದಿಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆ ಮಾಡಲಾಗುತ್ತದೆ. ಇದನ್ನೂ ಓದಿ: ಇದನ್ನೂಓದಿ: ಮದ್ದೂರಿನಲ್ಲಿ ಗಣೇಶನ ಮೇಲೆ ಕಲ್ಲು ತೂರಲು ಪ್ರಚೋದನೆ ಏನು? ಇಲ್ಲಿದೆ ಇನ್‌ಸೈಡ್‌ ಸ್ಟೋರಿ

     

    ಮದ್ದೂರಿನ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲು ಸಂಘಟನೆಗಳು ನಿರ್ಧಾರ ಮಾಡಿದ ಹಿನ್ನೆಲೆಯಲ್ಲಿ ದಕ್ಷಿಣ ವಲಯದ ಐಜಿಪಿ ಬೋರಲಿಂಗಯ್ಯ ನೇತೃತ್ವದಲ್ಲಿ 5 ಮಂದಿ ಎಸ್ಪಿ, 4 ಮಂದಿ ಎಎಸ್ಪಿ ಸೇರಿದಂತೆ ಭದ್ರತೆಗೆ 2 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ಯಾವುದೇ ಅಹಿತಕರ ಘಟನ ನಡೆಯದೇ ಇರಲು ಮಂಡ್ಯ, ಮೈಸೂರು, ಬೆಂಗಳೂರು, ರಾಮನಗರ, ಚಾಮರಾಜನಗರ, ಹಾಸನ ಸೇರಿ ಹಲವು ಜಿಲ್ಲೆ ಪೊಲೀಸರು ಮದ್ದೂರಿಗೆ ಆಗಮಿಸಿದ್ದಾರೆ. ಕೆಎಸ್ಆರ್‌ಪಿ, ಡಿಎಆರ್ ತುಕಡಿ, ರ್ಯಾಪಿಡ್ ಆ್ಯಕ್ಷನ್ ಪೋರ್ಸ್ ಸಹ ನಗರಕ್ಕೆ ಬಂದಿದೆ. ಇದನ್ನೂ ಓದಿ: ಮುಂದಿನ ಜನ್ಮ ಅಂತಿದ್ರೆ ಮುಸ್ಲಿಂ ಆಗಿಯೇ ಹುಟ್ಟಬೇಕು: `ಕೈ’ ಶಾಸಕ ಸಂಗಮೇಶ್

    ಮದ್ದೂರಿಗೆ ಬಿಜೆಪಿ ನಾಯಕರು
    ಇಂದು ಮದ್ದೂರಿಗೆ ಬಿಜೆಪಿ ನಾಯಕರ ತಂಡ ಭೇಟಿ ನೀಡಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ್, ಸಿ.ಟಿ.ರವಿ, ಪ್ರತಾಪ್ ಸಿಂಹ, ಛಲವಾದಿ ನಾರಾಯಸ್ವಾಮಿ, ಸುಮಲತಾ ಅಂಬರೀಶ್ ಸೇರಿದಂತೆ ಹಲವು ನಾಯಕರು ಆಗಮಿಸಲಿದ್ದಾರೆ.

    ಸಾಮೂಹಿಕ ಗಣೇಶ ವಿಸರ್ಜನಾ ಮೆರವಣಿಗೆಯಲ್ಲಿ‌ ಭಾಗಿಯಾಗುವುದಕ್ಕೂ ಮೊದಲು ಕಲ್ಲೆಸೆತದಲ್ಲಿ ಗಾಯಗೊಂಡವರ ಮನೆಗೆ ಭೇಟಿ ನೀಡಿ ಸ್ಥಳೀಯರಿಗೆ ಧೈರ್ಯ ತುಂಬಲಿದ್ದಾರೆ. ನಂತರ ಲಾಠಿ ಚಾರ್ಜ್ ವೇಳೆ ಗಾಯಗೊಂಡವರ ಮನೆಗಳಿಗೂ ಬಿಜೆಪಿ ನಾಯಕರು ಭೇಟಿ ನೀಡಲಿದ್ದಾರೆ.

  • ಮದ್ದೂರಿನಲ್ಲಿ ಗಣೇಶನ ಮೇಲೆ ಕಲ್ಲು ತೂರಲು ಪ್ರಚೋದನೆ ಏನು? – ಇಲ್ಲಿದೆ ಇನ್‌ಸೈಡ್‌ ಸ್ಟೋರಿ

    ಮದ್ದೂರಿನಲ್ಲಿ ಗಣೇಶನ ಮೇಲೆ ಕಲ್ಲು ತೂರಲು ಪ್ರಚೋದನೆ ಏನು? – ಇಲ್ಲಿದೆ ಇನ್‌ಸೈಡ್‌ ಸ್ಟೋರಿ

    ಮಂಡ್ಯ: ಮದ್ದೂರಿನಲ್ಲಿ (Madduru) ನಡೆದ ಗಣೇಶ ವಿಸರ್ಜನೆ ಮೆರವಣಿಗೆ (Ganesh Procession) ವೇಳೆ ಕಲ್ಲು ತೂರಲು (Stone Pelting) ಮತಾಂಧ ಮನಸ್ಥಿತಿಯೇ ಕಾರಣ ಎನ್ನುವ ವಿಚಾರ ಬೆಳಕಿಗೆ ಬಂದಿದೆ.

    ಗಲಭೆ ಕಿಂಗ್‌ಪಿನ್ ಚನ್ನಪಟ್ಟಣ ಮೂಲದ ಇರ್ಫಾನ್ ಆಗಿದ್ದು ಹಲವು ವರ್ಷಗಳಿಂದ ಮದ್ದೂರಿನಲ್ಲಿ ವಾಸವಾಗಿದ್ದಾನೆ. ಮಸೀದಿ ಮುಂದೆ ಗಣೇಶಮೂರ್ತಿ ಮೆರವಣಿಗೆ ಸಹಿಸಲಾಗದೇ ಇರ್ಫಾನ್‌ನನ್ನ ಸ್ನೇಹಿತ ಜಾಫರ್ ಕಲ್ಲು ತೂರುವಂತೆ ಪ್ರಚೋದಿಸಿದ್ದ ವಿಚಾರ ಮೂಲಗಳಿಂದ ತಿಳಿದುಬಂದಿದೆ.

    ಈ ಕೃತ್ಯ ಎಸಗಲು ಮುಸ್ಲಿಂ ಯುವಕರ ಗುಂಪನ್ನು ಕಟ್ಟಿಕೊಂಡ ಇವರು ಗಣೇಶ ವಿಸರ್ಜನೆಯ ಮೆರವಣಿಗೆ ಮಸೀದಿ ದಾಟಿ 50 ಮೀಟರ್ ಮುಂದೆ ಹೋದ ಮೇಲೆ ಕಲ್ಲು ತೂರಿದ್ದಾರೆ. ಕಲ್ಲುಗಳು ಎಲ್ಲಿಂದ ಬಂದಿದೆ ಎನ್ನುವುದು ತಿಳಿಯಬಾರದು ಎಂಬ ಕಾರಣಕ್ಕೆ ಆರೋಪಿ ಸಲ್ಮಾನ್ ಬೀದಿ ದೀಪವನ್ನು ಆಫ್ ಮಾಡಿದ್ದ. ಎಸೆದ ಕಲ್ಲುಗಳು ಗಣೇಶ ಕೂರಿಸಿದ್ದ ಟ್ರಾಕ್ಟರ್‌‌ಗೆ ಮತ್ತು ಗಣೇಶನ ಮೂರ್ತಿಗೆ ಬಡಿಯುತ್ತಿದ್ದಂತೆ ಹಿಂದೂ ಯುವಕರು ಸಿಟ್ಟಾಗಿದ್ದಾರೆ.  ಇದನ್ನೂ ಓದಿ: ಮದ್ದೂರು ಗಲಾಟೆ | ನನ್ನ ಪ್ರಕಾರ ಪೊಲೀಸರು ತಪ್ಪು ಮಾಡಿಲ್ಲ, ಬಿಜೆಪಿ-ಜೆಡಿಎಸ್ ಪ್ರಚೋದನೆ: ಸಿದ್ದರಾಮಯ್ಯ

     

    ಪ್ರತಿಯಾಗಿ ಮಸೀದಿ ಬಳಿಯಿಂದ ಮುಸ್ಲಿಮರು ನಮ್ಮ ಮೇಲೆ ಕಲ್ಲು ತೂರಿದ್ದಾರೆಂದು ಭಾವಿಸಿ ಪ್ರತಿದಾಳಿ ನಡೆಸಿದ್ದಾರೆ. ಕೆಲಕಾಲ ಎರಡು ಕೋಮುಗಳ ಯುವಕರ ನಡುವೆ ಸಂಘರ್ಷ ಉಂಟಾಗಿದೆ.

    ಗಲಾಟೆ ಜೋರಾಗುತ್ತಿದ್ದಂತೆ ಇರ್ಫಾನ್‌ ಮತ್ತು ಗ್ಯಾಂಗ್‌ ಸದಸ್ಯರು ಪರಾರಿಯಾಗಿದ್ದರು. ಕೃತ್ಯ ಬೆಳಕಿಗೆ ಬರುತ್ತಿದ್ದಂತೆ ಇರ್ಫಾನ್‌ಮತ್ತು 22 ಜನರನ್ನು ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ. ಕೃತ್ಯಕ್ಕೆ ಪ್ರಚೋದನೆ ನೀಡಿದ್ದ ಜಾಫರ್ ಈಗ ಪರಾರಿಯಾಗಿದ್ದಾನೆ. ಇದನ್ನೂ ಓದಿ: ಡಿಜೆ ಹಳ್ಳಿ, ಕೆಜೆ ಹಳ್ಳಿ ಗಲಭೆಕೋರರ ಮೇಲಿನ ಕೇಸ್ ಹಿಂಪಡೆದಿದ್ದಕ್ಕೆ ಬಾಲ ಬಿಚ್ಚಿದ್ದಾರೆ: ಪ್ರತಾಪ್ ಸಿಂಹ

    ಕಲ್ಲು ತೂರಾಟ ಹಿಂದೆ ಸಂಘಟನೆಗಳ ಕೈವಾಡ ಇದ್ಯಾ? ಆರೋಪಿಗಳು ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದಾರಾ? ಬಂಧಿತರಿಗೆ ಕ್ರಿಮಿನಲ್ ಹಿನ್ನೆಲೆ ಇದೆಯಾ ಎಂಬುದರ ಬಗ್ಗೆ ಪೊಲೀಸರು ಈಗ ತನಿಖೆ ನಡೆಸುತ್ತಿದ್ದಾರೆ. ಈ ಸಂಬಂಧ ರಾಮ್ ರಹೀಮ್ ನಗರದ ಮಸೀದಿ ಅಕ್ಕಪಕ್ಕ ಸಿಸಿಟಿವಿ ದೃಶ್ಯಗಳ ಪರಿಶೀಲನೆಗೆ ಮುಂದಾಗಿದ್ದಾರೆ. ಸಾಕ್ಷ್ಯಗಳು ಸಿಕ್ಕಿದರೆ ನ್ಯಾಯಾಂಗ ಬಂಧನದಲ್ಲಿರುವ ಆರೋಪಿಗಳನ್ನು ತಮ್ಮ ಕಸ್ಟಡಿಗೆ ಪಡೆದು ಪೊಲೀಸರು ವಿಚಾರಣೆ ನಡೆಸಲಿದ್ದಾರೆ.

  • ಗಣೇಶ ವಿಸರ್ಜನೆ ವೇಳೆ ಕಲ್ಲು – ನಾಳೆ ಬೆಳಗ್ಗೆಯವರೆಗೆ ಮದ್ದೂರಿನಲ್ಲಿ ನಿಷೇಧಾಜ್ಞೆ ಜಾರಿ

    ಗಣೇಶ ವಿಸರ್ಜನೆ ವೇಳೆ ಕಲ್ಲು – ನಾಳೆ ಬೆಳಗ್ಗೆಯವರೆಗೆ ಮದ್ದೂರಿನಲ್ಲಿ ನಿಷೇಧಾಜ್ಞೆ ಜಾರಿ

    ಮಂಡ್ಯ: ಗಣೇಶ ಮೆರವಣಿಗೆ (Ganesh Procession) ವೇಳೆ ಕಲ್ಲುತೂರಾಟ ನಡೆಸಿ ಪರಿಸ್ಥಿತಿ ಉದ್ವಿಗ್ನಗೊಂಡ ಹಿನ್ನೆಲೆಯಲ್ಲಿ ನಾಳೆ ಬೆಳಗ್ಗೆವರೆಗೆ ಮದ್ದೂರು (Madduru)  ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

    ಘಟನಾ ನಡೆದ ಸ್ಥಳಕ್ಕೆ ರಾತ್ರಿಯೇ ಮಂಡ್ಯ ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ ಆಗಮಿಸಿ ರೌಂಡ್‌ ಹಾಕಿದರು. ಇಂದು ಬೆಳಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ಮಂಗಳವಾರ ಬೆಳಗ್ಗೆಯವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ ಎಂದು ತಿಳಿಸಿದರು.   ಇದನ್ನೂ ಓದಿ: ಗಣೇಶ ವಿಸರ್ಜನೆ ವೇಳೆ ಅನ್ಯಕೋಮಿನ ಯುವಕರಿಂದ ಕಲ್ಲು ತೂರಾಟ ಮದ್ದೂರು ಉದ್ವಿಗ್ನ

    ತಮಿಳು ಕಾಲೋನಿಯ ಯುವಕರು ಗಣೇಶ ಪ್ರತಿಷ್ಠಾಪನೆ ಮಾಡಿ ವಿಸರ್ಜನೆ ಮಾಡಲು ಮೆರವಣಿಗೆ ಮಾಡಿದ್ದಾರೆ. ರಾಮ್ ರಹೀಮ್ ನಗರದಲ್ಲಿ ಮೆರವಣಿಗೆ ಸಾಗುತ್ತಿದ್ದಾಗ ಕಲ್ಲು ಬಿದ್ದಿದೆ. ನಂತರ ಎರಡೂ ಕಡೆಯಿಂದ ಕಲ್ಲು ತೂರಾಟ ಆಗಿದೆ. ಲೈಟ್ ಆಫ್ ಮಾಡಿ ಕಲ್ಲು ತೂರಾಟ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಅದರ ಬಗ್ಗೆ ತನಿಖೆ ಮಾಡುತ್ತಿದ್ದೇವೆ ಎಂದು ಹೇಳಿದರು.

    ಸಂಬಂಧ ಒಂದು ಸ್ವಯಂಪ್ರೇರಿತ ಇನ್ನೊಂದು ಅಜಯ್ ಎಂಬ ಗಾಯಾಳು ದೂರಿನ ಅನ್ವಯ ಪ್ರಕರಣ ದಾಖಲಿಸಿದ್ದೇವೆ. 21 ಜನರನ್ನು ವಶಕ್ಕೆ ಪಡೆದಿದ್ದೇವೆ. ವಶಕ್ಕೆ ಪಡೆದವರ ಪೈಕಿ ಇಬ್ಬರು ಮಾತ್ರ ಚನ್ನಪಟ್ಟಣದವರು ಉಳಿದವರು ಸ್ಥಳೀಯರಾಗಿದ್ದಾರೆ. ಸದ್ಯ ಬಿಗಿ ಭದ್ರತೆ ಮಾಡಿದ್ದೇವೆ ಎಂದು ಹೇಳಿದರು.

    ಇಬ್ಬರು ಸಿಬ್ಬಂದಿಗೆ ಸಹ ಏಟು ಬಿದ್ದಿದೆ. ಹೆಚ್ಚಿನ ಸಂಖ್ಯೆಯಲ್ಲಿ ಸಿಬ್ಬಂದಿ ಇದ್ದ ಕಾರಣ ಪರಿಸ್ಥಿತಿಯನ್ನು ಹತೋಟಿಗೆ ತರಲಾಗಿದೆ ಎಂದು ವಿವರಿಸಿದರು.

  • ಗಣೇಶ ವಿಸರ್ಜನೆ ವೇಳೆ ಅನ್ಯಕೋಮಿನ ಯುವಕರಿಂದ ಕಲ್ಲು ತೂರಾಟ – ಮದ್ದೂರು ಉದ್ವಿಗ್ನ

    ಗಣೇಶ ವಿಸರ್ಜನೆ ವೇಳೆ ಅನ್ಯಕೋಮಿನ ಯುವಕರಿಂದ ಕಲ್ಲು ತೂರಾಟ – ಮದ್ದೂರು ಉದ್ವಿಗ್ನ

    – ಇವರ ಹಬ್ಬಕ್ಕೆ ನಾವು ಕಲ್ಲು ತೂರಿದ್ದೀವಾ?

    ಮಂಡ್ಯ: ಮದ್ದೂರಿನಲ್ಲಿ ಗಣಪತಿ ವಿಸರ್ಜನೆ (Madduru Ganesh Procession) ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಗಣಪತಿ ಮೆರವಣಿಗೆ ಮೇಲೆ ಅನ್ಯ ಕೋಮಿನ ಯುವಕರ ಗುಂಪು ಕಲ್ಲುತೂರಿದೆ.

    ಕಳೆದ ವರ್ಷ ಇದೇ ಸಂದರ್ಭದಲ್ಲಿ ಮಂಡ್ಯದ ನಾಗಮಂಗಲದಲ್ಲಿ ಗಣಪತಿ ವಿಸರ್ಜನೆ ವೇಳೆ ಕಲ್ಲುತೂರಾಟ (Stone Pelting) ಮಾಡಲಾಗಿತ್ತು. ಈ ವೇಳೆ ಕೋಟ್ಯಾಂತರ ರೂ ಮೌಲ್ಯದ ಆಸ್ತಿಪಾಸ್ತಿ ನಷ್ಟವಾಗಿತ್ತು. ಇದೀಗ ಅಂತಹುದೆ ಘರ್ಷಣೆ ಪರಿಸ್ಥಿತಿ ಎದುರಾಗಿದ್ದು, ತಕ್ಷಣವೇ ಎಚ್ಚೆತ್ತ ಪೊಲೀಸರು ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ.

    ಮದ್ದೂರಿನ ಚನ್ನೇಗೌಡ ಬಡಾವಣೆ ನಿವಾಸಿಗಳು ಭಾನುವಾರ ರಾತ್ರಿ ಮದ್ದೂರಿನ ಬೀದಿಗಳಲ್ಲಿ ಗಣಪತಿ ಮೆರವಣಿ ನಡೆಸುತ್ತಿದ್ದರು. ಈ ವೇಳೆ ಮಸೀದಿ ಬಳಿಗೆ ಮೆರವಣಿಗೆ ಬಂದಿದ್ದು ಈ ವೇಳೆ ಗಣಪತಿ ಮೆರವಣಿಗೆ ಮೇಲೆ ಮಸೀದಿಯಿಂದ ಕಲ್ಲು ತೂರಿದ್ದಾರೆ. ಈ ವೇಳೆ ಕಲ್ಲು ತೂರಿದವರ ಮೇಲೆ ಪ್ರತಿಯಾಗಿ ಕಲ್ಲು ತೂರಿದ್ದಾರೆ. ಈ ವೇಳೆ ನಾಲ್ವರು ಹೋಮ್‌ ಗಾರ್ಡ್‌ ಸೇರಿದಂತೆ ಎಂಟು ಮಂದಿಗೆ ಗಾಯವಾಗಿದೆ.

    ರಾತ್ರಿ 7.30ರ ಸಂಧರ್ಭದಲ್ಲಿ ಈ ಗಲಾಟೆ ನಡೆದಿದೆ. ಮೊದಲಿಗೆ ಪ್ರಮುಖ ಬೀದಿಗಳಲ್ಲಿ ಗಣಪತಿ ಮೆರವಣಿಗೆ ನಡೆಸಿದ್ದಾರೆ. ಈ ವೇಳೆ ಮಸೀದಿ ಬಳಿ ಬಂದಾಗ ಯಾವುದೇ ಘೋಷಣೆ ಕೂಗಬಾರದು, ಮೈಕ್ ಹಾಕಬಾರದು ಎಂದು ಎಚ್ಚರಿಕೆ ನೀಡಿದ್ದರಂತೆ. ಅದರಂತೆ ಮೈಕ್ ಆಫ್ ಮಾಡಿ ಮೆರವಣಿಗೆ ಮಾಡಲಾಗಿತ್ತು. ಇದಾದ ಬಳಿಕ ಲೈಟ್ ಆಫ್ ಮಾಡಿ ಏಕಾಏಕಿ ಗಣಪತಿ ಮೆರವಣಿಗೆ ಮೇಲೆ ಮಸೀದಿಯಿಂದ ಕಲ್ಲು ತೂರಾಟ ಮಾಡಲಾಗಿದೆ. ಕಲ್ಲು ತೂರಾಟದಿಂದ ಕ್ಷಣಕಾಲ ಗಾಬರಿಗೊಂಡ ಯುವಕರು ಕಲ್ಲು ತೂರಿದ ಕಡೆಗೆ ಇವರು ಕಲ್ಲು ಎಸೆದಿದ್ದಾರೆ.

    ನಾವು ಸುಮ್ಮನಿದ್ದರೂ ನಮ್ಮ ಮೇಲೆ ಈ ರೀತಿ ದಾಳಿ ಮಾಡಿದ್ದಾರೆ. ಮೊನ್ನೆ ಮೊನ್ನೆಯಷ್ಟೆ ಅವರ ಹಬ್ಬ ಮಾಡಿದಾಗ ನಾವು ಗಲಾಟೆ ಮಾಡಿದ್ದವ ಎಂದು ಹಿಂದೂ ಯುವಕರು ಪ್ರಶ್ನೆ ಮಾಡುತ್ತಿದ್ದಾರೆ.

    ಒಂದು ವರ್ಷದ ಹಿಂದೆ ನಡೆದಿದ್ದ ನಾಗಮಂಗಲ ಗಲಾಟೆ ಮಾಸುವ ಮುನ್ನವೇ ಮತ್ತೊಂದು ಅದೇ ರೀತಿಯ ಘಟನೆ ಮರುಕಳಿಸಿದ್ದು, ಸದ್ಯ ಪರಿಸ್ಥಿತಿ ಮಾತ್ರ ಬೂದಿಮುಚ್ಚಿದ ಕೆಂಡದಂತಿದೆ.

  • ಇಂದು ಸಂಜೆ ಹುಟ್ಟೂರಿನಲ್ಲಿ ಎಸ್‌ಎಂಕೆ ಅಂತ್ಯಕ್ರಿಯೆ – ಏನೇನು ಸಿದ್ಧತೆ ನಡೆದಿದೆ?

    ಇಂದು ಸಂಜೆ ಹುಟ್ಟೂರಿನಲ್ಲಿ ಎಸ್‌ಎಂಕೆ ಅಂತ್ಯಕ್ರಿಯೆ – ಏನೇನು ಸಿದ್ಧತೆ ನಡೆದಿದೆ?

    ಬೆಂಗಳೂರು/ಮಂಡ್ಯ: ರಾಜ್ಯ ರಾಜಕಾರಣದ ಧೀಮಂತ ನಾಯಕ, ಕರುನಾಡು ಕಂಡ ಅದಮ್ಯ ಚೇತನ, ಸೌಮ್ಯ ಸ್ವಭಾವದ ಅಜಾತಶತ್ರು, ದೂರದೃಷ್ಟಿಯ ಕನಸುಗಾರ, ಕಲಾಪ್ರೇಮಿ, ಮಾಜಿ ಸಿಎಂ ಸೋಮನಹಳ್ಳಿ ಮಲ್ಲಯ್ಯ ಕೃಷ್ಣ (SM Krishna) ತಮ್ಮ ಬದುಕಿನ ಪಯಣ ಮುಗಿಸಿದ್ದು ಇಂದು ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಹುಟ್ಟೂರು ಸೋಮನಹಳ್ಳಿಯಲ್ಲಿ (Somanahalli) ನಡೆಯಲಿದೆ.

    ಬೆಳಗ್ಗೆ 8 ಗಂಟೆಗೆ ಕೃಷ್ಣ ಪಾರ್ಥಿವ ಶರೀರವನ್ನು ಮದ್ದೂರಿಗೆ ಕೊಂಡೊಯ್ಯಲಾಗುತ್ತದೆ. ಮಾರ್ಗಮಧ್ಯೆ ಕೆಂಗೇರಿ, ರಾಮನಗರ, ಚನ್ನಪಟ್ಟಣದಲ್ಲಿ ಕೆಲಹೊತ್ತು ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ.

    ಸಂಜೆ 3 ಗಂಟೆ ಸುಮಾರಿಗೆ ಒಕ್ಕಲಿಗ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನೆರವೇರಲಿದೆ. ಸಿಎಂ ಸಿದ್ದರಾಮಯ್ಯ, ಸಚಿವರು, ಕೇಂದ್ರದ ಪರವಾಗಿ ಪ್ರಹ್ಲಾದ್‌ ಜೋಶಿ, ಕುಮಾರಸ್ವಾಮಿ ಸೇರಿ ರಾಜಕೀಯ ಗಣ್ಯರು, ಸ್ವಾಮೀಜಿಗಳು, ಅಪಾರ ಅಭಿಮಾನಿಗಳು ಭಾಗವಹಿಸಲಿದ್ದಾರೆ. ಇಂದು ಅಗತ್ಯ ತಯಾರಿಗಳು ನಡೆದಿವೆ. ಡಿಸಿಎಂ ಶಿವಕುಮಾರ್‌ ಸೇರಿ ಪ್ರಮುಖರು ಸಿದ್ಧತೆಗಳನ್ನು ಪರಿಶೀಲಿಸಿದ್ದಾರೆ. ಇದನ್ನೂ ಓದಿ: ಶಾಸಕನಿಂದ ಮುಖ್ಯಮಂತ್ರಿವರೆಗೆ…. ಎಸ್‌ಎಂಕೆ ರಾಜಕೀಯ ಜೀವನದ ಏಳುಬೀಳು!

    3 ಗಂಟೆಯವರೆಗೆ ಅಂತಿಮ ದರ್ಶನ:
    ಸೋಮನಹಳ್ಳಿಗೆ 10 ಗಂಟೆ ಬರಲಿರುವ ಕೃಷ್ಣರ ಪಾರ್ಥಿವ ಶರೀರವನ್ನು ಕಾಫಿ ಡೇ (Cafe Coffee Day) ಆವರಣದಲ್ಲಿ ಇಡಲಾಗುತ್ತದೆ. ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

     

    ಒಕ್ಕಲಿಗ ಸಂಪ್ರದಾಯದಂತೆ ಭಾನುಪ್ರಕಾಶ್ ಶರ್ಮಾ ನೇತೃತ್ವದಲ್ಲಿ 15 ಕ್ಕೂ ಹೆಚ್ಚು ವೈದಿಕರಿಂದ ವಿಧಿ ವಿಧಾನ ಕಾರ್ಯಗಳು ನಡೆಯಲಿದೆ. ಗಂಧದ ಕಟ್ಟಿಗೆಳಿಂದ ಮೃತ ದೇಹವನ್ನು ಸುಡುವ ಮೂಲಕ ಅಂತ್ಯ ಸಂಸ್ಕಾರ ಮಾಡಲಾಗುತ್ತದೆ.

    ಮೃತದೇಹ ಇಡಲಾಗುವ ಜಾಗದಲ್ಲಿ ಜರ್ಮನ್ ಟೆಂಟ್ ಹಾಕಲಾಗಿದ್ದು ಬ್ಯಾರೀಕೇಡ್ ಅಳವಡಿಕೆ ಮಾಡಲಾಗಿದೆ. ಮೂರು ಸರತಿ ಮೂಲಕ ದರ್ಶನಕ್ಕೆ ಅಧಿಕಾರಿಗಳು ವ್ಯವಸ್ಥೆ ಮಾಡಿದ್ದಾರೆ. ವಿಐಪಿಗಳಿಗೆ ಜಿಲ್ಲಾಡಳಿತ ವಿಶೇಷ ಗ್ಯಾಲರಿ ನಿರ್ಮಾಣ ಮಾಡಿದೆ. ಎಸ್.ಎಂ.ಕೃಷ್ಣರ ಕುಟುಂಬಸ್ಥರಿಗೆ ಕಾಫಿ ಡೇ ಕಟ್ಟಡದ ಪಕ್ಕದಲ್ಲೇ ಆಸನದ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 3 ಗಂಟೆಯಿಂದ ಅಂತ್ಯಕ್ರಿಯೆ ಪ್ರಕ್ರಿಯೆ ಆರಂಭವಾಗಲಿದ್ದು 5 ಗಂಟೆ ಒಳಗೆ ಮುಕ್ತಾಯವಾಗಲಿದೆ.

  • ಎಸ್‌ ಎಂ ಕೃಷ್ಣ ವಿಧಿವಶ – ಮದ್ದೂರಿನ ಸೋಮನಹಳ್ಳಿಯಲ್ಲಿ ನಾಳೆ ಅಂತ್ಯಕ್ರಿಯೆ

    ಎಸ್‌ ಎಂ ಕೃಷ್ಣ ವಿಧಿವಶ – ಮದ್ದೂರಿನ ಸೋಮನಹಳ್ಳಿಯಲ್ಲಿ ನಾಳೆ ಅಂತ್ಯಕ್ರಿಯೆ

    ಬೆಂಗಳೂರು: ನಿಧನರಾದ ಮಾಜಿ ಸಿಎಂ ಎಸ್‌ಎಂ ಕೃಷ್ಣ (SM Krishna) ಅವರ ಅಂತ್ಯಕ್ರಿಯೆಯ ನಾಳೆ ಅವರ ಹುಟ್ಟೂರಾದ ಮಂಡ್ಯ ಜಿಲ್ಲೆ ಮದ್ದೂರಿನ (Madduru) ಸೋಮನಹಳ್ಳಿಯಲ್ಲಿ(Somanahalli) ನಡೆಯಲಿದೆ ಎಂದು ದೀರ್ಘಕಾಲದ ಒಡನಾಡಿಗಳು, ಸಂಬಂಧಿ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಮಾಧ್ಯಮ ಹೇಳಿಕೆಯ ಮೂಲಕ ತಿಳಿಸಿದ್ದಾರೆ.

    ಮಾಧ್ಯಮ ಹೇಳಿಕೆಯಲ್ಲಿ ಏನಿದೆ?
    ಮಾಜಿ ಮುಖ್ಯಮಂತ್ರಿಗಳು, ಮಾಜಿ ರಾಜ್ಯಪಾಲರು, ಕೇಂದ್ರದ ಮಾಜಿ ಸಚಿವರಾದ ಎಸ್ ಎಂ ಕೃಷ್ಣ ಅವರು ಸದಾಶಿವನಗರದ ಸ್ವಗೃಹದಲ್ಲಿ ಇಂದು ಬೆಳಗಿನ ಜಾವ 2:30 ರ ಸುಮಾರಿಗೆ ನಿಧನರಾದರು. ಅವರಿಗೆ 93 ವರ್ಷ ವಯಸ್ಸಾಗಿತ್ತು.

     

    ಕೆಲಕಾಲದಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದರು. ಇಂದು ಬೆಳಗಿನ ಜಾವ ಕೊನೆಯುಸಿರು ಎಳೆದಿದ್ದಾರೆ. ಮೃತರ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕೆ ಸದಾಶಿವನಗರದ ನಿವಾಸದಲ್ಲಿ ಇಂದು ಇಡೀ ದಿನ ಇಡಲಾಗುವುದು. ಕೃಷ್ಣ ಅವರ ಹುಟ್ಟೂರಾದ ಮಂಡ್ಯ ಜಿಲ್ಲೆ ಮದ್ದೂರಿನ ಸೋಮನಹಳ್ಳಿಯಲ್ಲಿ ನಾಳೆ ನೆರವೇರಿಸಲಾಗುವುದು ಎಂದು ಡಿಕೆಶಿ ತಿಳಿಸಿದ್ದಾರೆ.

    ಪಬ್ಲಿಕ್‌ ಟಿವಿ ಈಗ ಲಭ್ಯವಾಗಿರುವ ಮಾಹಿತಿ ಪ್ರಕಾರ ನಾಳೆ ಬೆಳಗ್ಗೆ ಬೆಂಗಳೂರಿನಿಂದ ಪಾರ್ಥಿವ ಶರೀರವನ್ನು ಸೋಮನಹಳ್ಳಿಗೆ ತರಲಾಗುತ್ತದೆ. ಇಲ್ಲಿಯ ಶಾಲೆಯಲ್ಲಿ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ  ಇಡಲಾಗುತ್ತದೆ.  ಮಧ್ಯಾಹ್ನದ ನಂತರ ಅಂತ್ಯಕ್ರಿಯೆ ನಡೆಸಲಾಗುತ್ತದೆ.

  • ನನ್ನ ಗನ್‌ ಮ್ಯಾನ್‌ ಮೇಲೆ ದರ್ಶನ್‌ ಗ್ಯಾಂಗ್‌ನಿಂದ ಹಲ್ಲೆ ನಡೆದಿಲ್ಲ: ಶಾಸಕ ಉದಯ್‌ ಗೌಡ

    ನನ್ನ ಗನ್‌ ಮ್ಯಾನ್‌ ಮೇಲೆ ದರ್ಶನ್‌ ಗ್ಯಾಂಗ್‌ನಿಂದ ಹಲ್ಲೆ ನಡೆದಿಲ್ಲ: ಶಾಸಕ ಉದಯ್‌ ಗೌಡ

    ಬೆಂಗಳೂರು: ನನ್ನ ಗನ್‌ ಮ್ಯಾನ್‌ (Gun Man) ಮೇಲೆ ಹಲ್ಲೆ ನಡೆದ ವಿಚಾರ ನನಗೆ ಗೊತ್ತಿಲ್ಲ ಎಂದು ಮದ್ದೂರು ಕಾಂಗ್ರೆಸ್‌ ಶಾಸಕ (Congress MLA) ಕದಲೂರು ಉದಯ್ ಗೌಡ (Kadalur Uday Gowda) ಹೇಳಿದ್ದಾರೆ.

    ಲೋಕಸಭಾ ಚುನಾವಣೆಯ ಸಮಯದಲ್ಲಿ ದರ್ಶನ್‌ ಗ್ಯಾಂಗ್‌ (Darshan Gang) ಸದಸ್ಯರು ಗನ್‌ಮ್ಯಾನ್‌ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪಕ್ಕೆ ಮಾಧ್ಯಮಗಳ ಜೊತೆ ಅವರು ಪ್ರತಿಕ್ರಿಯಿಸಿದರು.

    ಹಲ್ಲೆಯಂತಹ ಯಾವುದೇ ಘಟನೆ ನಡೆದಿಲ್ಲ ಮತ್ತು ನನ್ನ ಗಮನಕ್ಕೆ ಬಂದಿಲ್ಲ. ನನ್ನ ಗನ್ ಮ್ಯಾನ್ ದೂರು ಕೊಟ್ಟಿಲ್ಲ. ನಾನು ಮಧ್ಯಸ್ಥಿಕೆ ಮಾಡಿದ್ದೇನೆ ಎನ್ನುವುದು ಸುಳ್ಳು ಎಂದು ತಿಳಿಸಿದರು. ಇದನ್ನೂ ಓದಿ: ದರ್ಶನ್ ಕೊಲೆ ಮಾಡೋ ವ್ಯಕ್ತಿ ಅಲ್ಲ : ಮದ್ದೂರು ಎಂಎಲ್‌ಎ ಉದಯ್‌ ಗೌಡ ಸರ್ಟಿಫಿಕೇಟ್‌

     

    ಇಲ್ಲಿಯವರೆಗೆ ನಾನು 5 ಮಂದಿ ಗನ್ ಮ್ಯಾನ್‌ಗಳನ್ನು ಬದಲಾವಣೆ ಮಾಡಿದ್ದೇನೆ. ಅದರಲ್ಲಿ ಯಾವ ಗನ್ ಮ್ಯಾನ್ ಗೊತ್ತಿಲ್ಲ. ದರ್ಶನ್ ನನ್ನ ಜತೆ ಬರೋವಾಗ ಅವರೊಬ್ಬರೇ ಬರುತ್ತಿದ್ದರು. ಜಗಳ ಮಾಡುವವರು ಬಂದಿಲ್ಲ. ಜಗಳ ನಡೆದಿಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಹೆಚ್‌ಡಿಕೆ ವಿರುದ್ಧ ನಾಲಿಗೆ ಹರಿಬಿಟ್ಟಿದ್ದ ದರ್ಶನ್ ಅಭಿಮಾನಿ – ಮಹಿಳೆ ವಿರುದ್ಧ ಮಂಡ್ಯದಲ್ಲಿ ದೂರು!

    ಏನಿದು ಹಲ್ಲೆ ಆರೋಪ?
    ಲೋಕಸಭಾ ಚುನಾವಣೆ (Lok Sabha Election) ಸಮಯದಲ್ಲಿ ದರ್ಶನ್‌ ಅವರು ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್‌ ಚಂದ್ರು (Star Chandru) ಪರ ಪ್ರಚಾರಕ್ಕೆ ಮಂಡ್ಯಕ್ಕೆ (Mandya) ಆಗಮಿಸಿದ್ದರು. ಏಪ್ರಿಲ್ 22 ರಂದು ಮದ್ದೂರು (Madduru) ಕ್ಷೇತ್ರದಲ್ಲಿ ಸ್ಟಾರ್ ಚಂದ್ರು ಪರ ದರ್ಶನ್ ಪ್ರಚಾರ ನಡೆಸುತ್ತಿದ್ದಾಗ ಮದ್ದೂರು ಶಾಸಕ ಉದಯ್ (MLA Uday) ಅವರ ಗನ್‌ ಮ್ಯಾನ್‌ ಆಗಿದ್ದ ನಾಗೇಶ್ (Nagesh) ಜೊತೆ ದರ್ಶನ್ ಪಟಾಲಂ ಗಲಾಟೆ ನಡೆಸಿದ್ದ ಆರೋಪ ಬಂದಿತ್ತು.

     

    ಮುಖಂಡರನ್ನ ಹತ್ತಿರಕ್ಕೆ ಬಿಟ್ಟುಕೊಳ್ಳುವ ವಿಚಾರದಲ್ಲಿ ಲಕ್ಷ್ಮಣ್, ನಾಗರಾಜು ಹಾಗೂ ಇತರರು ಡಿಎಆರ್ ಪೇದೆ ನಾಗೇಶ್ ಜೊತೆ ಜಗಳ ಮಾಡಿದ್ದರು. ಇದೇ ಜಗಳ ಮುಂದುವರಿಸಿ ಕದಲೂರು ಉದಯ್ ಮನೆ ಮುಂದೆ ಪೇದೆ ನಾಗೇಶ್‌ ಅವರ ಮೇಲೆ ಹಲ್ಲೆ ಮಾಡಿತ್ತು. ಪೊಲೀಸರು ನಮ್ಮನ್ನ ಏನು ಮಾಡಲು ಆಗಲ್ಲ. ನಮ್ಮ ಹತ್ತಿರ ಏನು ಕಿತ್ತುಕೊಳ್ಳಲು ಆಗಲ್ಲ ಎಂದು ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡಿ ಹಲ್ಲೆ ಮಾಡಿದ್ದರು. ಹಲ್ಲೆ ಮಾಡಿದವರ ವಿರುದ್ಧ ಕೆಸ್ತೂರು ಪೊಲೀಸ್ ಠಾಣೆಗೆ ನಾಗೇಶ್‌ ಅವರು ದೂರು ನೀಡಲು ಹೋಗಿದ್ದರು. ಅಷ್ಟೇ ಅಲ್ಲದೇ ಮದ್ದೂರಿನ ತಾಲೂಕು ಆಸ್ಪತ್ರೆಯಲ್ಲಿ ನಾಗೇಶ್‌ ಅವರಿಗೆ ಚಿಕಿತ್ಸೆ ಸಹ ನಡೆದಿತ್ತು.

    ಈ ವಿಚಾರ ದೊಡ್ಡದಾಗುತ್ತಿದ್ದಂತೆ ಶಾಸಕ ಉದಯ್ ಅವರು ರಾಜಿ ಸಂಧಾನ ಮಾಡಿ ನಾಗೇಶ್‌ ಅವರನ್ನು ಮನವೊಲಿಸಿದ್ದರು. ನಂತರ ಉದಯ್ ಗನ್‌ ಮ್ಯಾನ್ ಹುದ್ದೆಯಿಂದ ಹೊರಬಂದಿದ್ದ ನಾಗೇಶ್ ಅವರು ಈಗ ಡಿಎಆರ್ ತುಕಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

     

  • ದರ್ಶನ್ ಕೊಲೆ ಮಾಡೋ ವ್ಯಕ್ತಿ ಅಲ್ಲ : ಮದ್ದೂರು ಎಂಎಲ್‌ಎ ಉದಯ್‌ ಗೌಡ ಸರ್ಟಿಫಿಕೇಟ್‌

    ದರ್ಶನ್ ಕೊಲೆ ಮಾಡೋ ವ್ಯಕ್ತಿ ಅಲ್ಲ : ಮದ್ದೂರು ಎಂಎಲ್‌ಎ ಉದಯ್‌ ಗೌಡ ಸರ್ಟಿಫಿಕೇಟ್‌

    ಬೆಂಗಳೂರು: ದರ್ಶನ್‌ (Darshan) ಪ್ರಕರಣದಲ್ಲಿ ಯಾರೂ ಯಾವುದೇ ಹೇಳಿಕೆ ನೀಡಬೇಡಿ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಹೇಳಿದ್ದರೂ ಮದ್ದೂರು ಶಾಸಕ ಕದಲೂರು ಉದಯ್ ಗೌಡ (Kadalur Uday Gowda) ನಟನ ಪರ ಬ್ಯಾಟ್‌ ಬೀಸಿದ್ದಾರೆ.

    ದರ್ಶನ್‌ ಒಳ್ಳೆಯ ವ್ಯಕ್ತಿತ್ವ ಇರುವ ವ್ಯಕ್ತಿಯಾಗಿದ್ದು ಸ್ವಲ್ಪ ಸಿಡುಕು ಹೊಂದಿದ್ದಾರೆ. ಕೊಲೆ (Murder) ಮಾಡುವಂತಹ ಬುದ್ಧಿ ದರ್ಶನ್‌ಗೆ ಇಲ್ಲ ಎಂದು ಉದಯ್‌  ಗೌಡ ಸರ್ಟಿಫಿಕೇಟ್‌ ನೀಡಿದ್ದಾರೆ.

    ತುಂಬಾ ವರ್ಷಗಳಿಂದ ನಾನು ಮತ್ತು ದರ್ಶನ್‌ ಸ್ನೇಹಿತರಾಗಿದ್ದೇವೆ. ಇದು ಯಾಕೆ ಆಯ್ತು? ಏನಕ್ಕೆ ಆಯ್ತು ಅಂತ ನಮಗೆ ಮಾಹಿತಿ ಇಲ್ಲ. ತನಿಖೆಯಲ್ಲಿ ಸತ್ಯ ವಿಚಾರ ಗೊತ್ತಾಗುತ್ತದೆ. ಇಷ್ಟಂತೂ ಸತ್ಯ ದರ್ಶನ್ ಕೊಲೆಗಡುಕ ಅಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ರೇಣುಕಸ್ವಾಮಿ ಕೊಲೆಗೆ ಸಂಚು ರೂಪಿಸಿದ್ದೇ ಪವಿತ್ರಾಗೌಡ – ಹೊಸ ರಿಮ್ಯಾಂಡ್‌ ಕಾಪಿಯಲ್ಲಿ ಏನಿದೆ?

     

    ದರ್ಶನ್ ಅವರನ್ನು ಯಾರೂ ರಕ್ಷಣೆ ಮಾಡುತ್ತಿಲ್ಲ. ಕಾನೂನು ಎಲ್ಲರಿಗೂ ಒಂದೇಯಾಗಿದ್ದು ಯಾರನ್ನು ರಕ್ಷಣೆ ಮಾಡುವುದಿಲ್ಲ. ತಪ್ಪು ಮಾಡಿದರೆ ಕಾನೂನು ಪ್ರಕಾರವೇ ಶಿಕ್ಷೆ ಆಗುತ್ತದೆ ಎಂದರು.

    ನಾವು ಪ್ರಭಾವ ಬೀರುವ ಹಾಗೇ ಇದ್ದರೆ ಅವರು ಜೈಲಿನಲ್ಲಿ ಇರುತ್ತಿದ್ದರಾ ಹೇಳಿ? ಯಾರು ಕೇಸ್ ಮೇಲೆ ಪ್ರಭಾವ ಬೀರಿಲ್ಲ. ಬೀರಿದ್ದರೆ ಇಂತಹ ಸ್ಥಿತಿಗೆ ಬರುತ್ತಿರಲಿಲ್ಲ. ಯಾರು ಇದರಲ್ಲಿ ಭಾಗಿ ಆಗುತ್ತಿಲ್ಲ. ಪಾರದರ್ಶಕವಾಗಿ ತನಿಖೆ ಆಗುತ್ತಿದ್ದು ಸತ್ಯ ಹೊರಗೆ ಬರುತ್ತದೆ ಎಂದು ಹೇಳಿದರು.

     

    ರೇಣುಕಾಸ್ವಾಮಿ ಕೊಲೆ ಖಂಡನೀಯ. ಅದರಲ್ಲಿ ಎರಡು ಮಾತಿಲ್ಲ. ಯಾರೇ ಕೊಲೆ ಮಾಡಿದರೂ ತಪ್ಪು. ಇದರಲ್ಲಿ ದರ್ಶನ್ ಪಾತ್ರ ಏನು? ಜೊತೆಯಲ್ಲಿ ಇರವವರು ಮಾಡಿದ್ದರಿಂದ ಸುತ್ತಿಕೊಂಡಿದೆಯಾ? ತನಿಖೆಯಿಂದ ಹೊರಗೆ ಬರಬೇಕು. ಅದರ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ತಿಳಿಸಿದರು.

  • ಚಾರ್ಜ್ ಹಾಕಿದ್ದ ಎಲೆಕ್ಟ್ರಿಕ್ ಬೈಕ್ ಸ್ಫೋಟ

    ಚಾರ್ಜ್ ಹಾಕಿದ್ದ ಎಲೆಕ್ಟ್ರಿಕ್ ಬೈಕ್ ಸ್ಫೋಟ

    ಮಂಡ್ಯ: ಮನೆಯಲ್ಲಿ ಎಲೆಕ್ಟ್ರಿಕ್ ಚಾರ್ಜ್‌ ಹಾಕಿದ್ದ ಬೈಕ್‌ವೊಂದು (Electric Bike) ಇದ್ದಕ್ಕಿದ್ದಂತೆ ಸ್ಫೋಟಗೊಂಡು ಗೃಹ ಉಪಯೋಗಿ ವಸ್ತುಗಳು ಸುಟ್ಟು ಕರಕಲಾಗಿರುವ ಘಟನೆ ಮಂಡ್ಯ (Mandya) ಜಿಲ್ಲೆಯ ಮದ್ದೂರು (Madduru) ತಾಲೂಕಿನ ವಳೆಗೆರೆಹಳ್ಳಿಯಲ್ಲಿ ಜರುಗಿದೆ.

    ವಳೆಗೆರೆಹಳ್ಳಿಯ ಮುತ್ತುರಾಜ್ ಎಂಬುವವರ ಮನೆಯ ಒಳ ಭಾಗದಲ್ಲಿ ಬೈಕ್ ಚಾರ್ಜ್ ಹಾಕಿದ್ದ ವೇಳೆ ಈ ಘಟನೆ ಜರುಗಿದೆ. ಬೈಕ್ ಚಾರ್ಜ್ ಹಾಕಿದ್ದ ವೇಳೆ ಇದಕ್ಕಿದ್ದ ಹಾಗೆ ಸ್ಫೋಟಗೊಂಡಿದ್ದು, ಈ ವೇಳೆ‌ ಮನೆಯ ಒಳಭಾಗದಲ್ಲಿ ಇದ್ದ 5 ಮಂದಿ ಬೆಚ್ಚಿ ಬಿದ್ದಿದ್ದಾರೆ. ಇದನ್ನೂ ಓದಿ: ಪರೀಕ್ಷಾ ಕೇಂದ್ರದಲ್ಲಿ ಎಡವಟ್ಟು- ಮೊಬೈಲ್ ಕೊಂಡೊಯ್ದು ಸೆಲ್ಫಿ ಕ್ಲಿಕ್ಕಿಸಿದ ಮೇಲ್ವಿಚಾರಕಿ

    ಅದೃಷ್ಟವಶಾತ್ ಎಲ್ಲರೂ ಬೈಕ್‌ನಿಂದ ದೂರವಿದ್ದರಿಂದ ಪ್ರಾಣಾಪಾಯದಿಂದ ಪಾರಗಿದ್ದಾರೆ. ಇನ್ನೂ ಈ ಸ್ಫೋಟದಿಂದ ಪಕ್ಕದಲ್ಲಿ‌ ಇದ್ದ ಟಿವಿ, ಫ್ರಿಡ್ಜ್, ಡೈನಿಂಗ್ ಟೇಬಲ್ ಸೇರಿದಂದೆ ಇತರೆ ವಸ್ತುಗಳು ಸುಟ್ಟು ಕರಕಲಾಗಿವೆ. ಬಳಿಕ ಸ್ಫೋಟದ ಬೆಂಕಿಯನ್ನು‌ ಕುಟುಂಬಸ್ಥರು ನಂದಿಸಿದ್ದಾರೆ. ಮದ್ದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದೆ. ಇದನ್ನೂ ಓದಿ: ಹೇ ನಡೀಯಪ್ಪ ನೀನು, ನಮಗೆ ತಲೆ ಬಿಸಿಯಾಗಿದೆ: ಸಿದ್ದರಾಮಯ್ಯ ಇನ್ ಟೆನ್ಶನ್