Tag: madduru

  • ನವೆಂಬರ್ ಅಂತ್ಯಕ್ಕೆ ಶ್ರೀರಂಗಪಟ್ಟಣ-ಮದ್ದೂರು ಬೈಪಾಸ್ ಓಪನ್

    ನವೆಂಬರ್ ಅಂತ್ಯಕ್ಕೆ ಶ್ರೀರಂಗಪಟ್ಟಣ-ಮದ್ದೂರು ಬೈಪಾಸ್ ಓಪನ್

    ಮಂಡ್ಯ: ಮೈಸೂರು-ಬೆಂಗಳೂರು (Mysuru_ Bengaluru) ದಶಪಥ ಹೆದ್ದಾರಿ ಯೋಜನೆಯ ಮದ್ದೂರು ಫ್ಲೈಓವರ್ ಜೊತೆಗೆ ಶ್ರೀರಂಗಪಟ್ಟಣ (Srirangapatna) ಬೈಪಾಸ್ ಕೂಡ ನವೆಂಬರ್ ಅಂತ್ಯಕ್ಕೆ ಸಂಚಾರಕ್ಕೆ ಮುಕ್ತಾಯವಾಗಲಿದೆ ಎನ್ನುವ ಮೂಲಕ ವಾಹನ ಸವಾರರಿಗೆ ಸಂಸದ ಪ್ರತಾಪ್ ಸಿಂಹ (Pratap simha) ಸಿಹಿ ಸುದ್ದಿ ಕೊಟ್ಟಿದ್ದಾರೆ.

    ಖುದ್ದು ಶ್ರೀರಂಗಪಟ್ಟಣ ಬೈಪಾಸ್ ನಲ್ಲಿ ಸಂಚರಿಸಿ ಸಂಸದರು ತಮ್ಮ ಫೇಸ್ ಬುಕ್ ಲೈವ್ ಮೂಲಕ ಹೆದ್ದಾರಿ ಕಾಮಗಾರಿ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಈಗಾಗಲೇ ಮದ್ದೂರು ಬೈಪಾಸ್ ಕೆಲಸ ಕಂಪ್ಲೀಟ್ ಆಗಿದೆ. ಶ್ರೀರಂಗಪಟ್ಟಣ ಬೈಪಾಸ್ ಎಕ್ಸೆಪೆಷ್ಸನ್ ಜಾಯಿಂಟ್ಸ್ ಕಾರ್ಯವು ಸದ್ಯ ಮುಕ್ತಾಯದ ಹಂತದಲ್ಲಿದೆ. ನವೆಂಬರ್ ಅಂತ್ಯದ ಒಳಗೆ ಮದ್ದೂರು ಮತ್ತು ಶ್ರೀರಂಗಪಟ್ಟಣ ಬೈಪಾಸ್ ಅನ್ನು ಸಂಚಾರಕ್ಕೆ ಮುಕ್ತ ಮಾಡ್ತೇವೆ ಎಂದಿದ್ದಾರೆ. ಇದನ್ನೂ ಓದಿ: ಮೋದಿ ಅವರಿಂದ್ಲೆ ಬೆನ್ನು ತಟ್ಟಿಸಿಕೊಂಡಿರುವ ರಾಮದಾಸ್‌ಗೆ ಕಿರುಕುಳ ಕೊಡುವಷ್ಟು ಶಕ್ತಿ ನನಗಿಲ್ಲ – ಪ್ರತಾಪ್‌ ಸಿಂಹ

    ಮಂಡ್ಯ ಬೈಪಾಸ್ ಒಂದು ಮಾತ್ರ ಡಿಸೆಂಬರ್ ಅಂತ್ಯದ ಒಳಗೆ ಓಪನ್ ಮಾಡಲಾಗುತ್ತದೆ. ಯಾಕಂದ್ರೆ ದಶಪಥ ಹೆದ್ದಾರಿ ಕಾಮಗಾರಿ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದೆ. ಮಂಡ್ಯ ಜಿಲ್ಲಾ ವ್ಯಾಪ್ತಿಯ ನಾಲ್ಕು ಕಡೆ ಸ್ವಲ್ಪ ಕೆಲಸ ಆಗಬೇಕಿದೆ. ಅಲ್ಲಲ್ಲಿ ನೂರು ಮೀಟರ್‍ನಷ್ಟು ಸರ್ವಿಸ್ ರಸ್ತೆಯಲ್ಲಿ ಸಂಚರಿಸಬೇಕಿದೆ. ಉಳಿದಂತೆ ಡಿಸೆಂಬರ್ ಅಂತ್ಯದ ಒಳಗೆ ಮದ್ದೂರು, ಮಂಡ್ಯ, ಶ್ರೀರಂಗಪಟ್ಟಣ ಸಿಟಿಗೆ ಬಾರದೇ ಮೈ-ಬೆಂಗೆ ಸಂಚರಿಸಬಹುದಾಗಿದೆ. ಇದರಿಂದ ಬಹಳಷ್ಟು ಸಮಯ ವಾಹನ ಸವಾರರಿಗೆ ಉಳಿಯಲಿದೆ ಎಂದು ಪ್ರತಾಪ್ ಸಿಂಹ ಮಾಹಿತಿ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ನವೆಂಬರ್ ಅಂತ್ಯಕ್ಕೆ ಮದ್ದೂರು ಬೈಪಾಸ್ ಸಂಚಾರಕ್ಕೆ ಮುಕ್ತ

    ನವೆಂಬರ್ ಅಂತ್ಯಕ್ಕೆ ಮದ್ದೂರು ಬೈಪಾಸ್ ಸಂಚಾರಕ್ಕೆ ಮುಕ್ತ

    ಮಂಡ್ಯ: ಬೆಂಗಳೂರು-ಮೈಸೂರು (Bengaluru-Mysuru) ದಶಪಥ ಹೆದ್ದಾರಿ ರಸ್ತೆ (Dashpath Highway Road) ಕಾಮಗಾರಿ ಅಂತಿಮ ಘಟ್ಟಕ್ಕೆ ತಲುಪಿದ್ದು, ನವೆಂಬರ್ ಅಂತ್ಯದ ವೇಳೆಗೆ ಮದ್ದೂರು ಬೈಪಾಸ್ ಸಂಚಾರಕ್ಕೆ ಮುಕ್ತವಾಗಲಿದೆ ಎಂದು ಸಂಸದ ಪ್ರತಾಪ್ ಸಿಂಹ (Pratap Simha)ಮಾಹಿತಿ ನೀಡಿದ್ದಾರೆ.

    ಮದ್ದೂರು (Madduru) ಬೈಪಾಸ್ ಕೆಲಸ ಬಹುತೇಕ ಕಂಪ್ಲೀಟ್ ಆಗಿದೆ.  ಎಕ್ಸ್‌ಪೆನ್ಷನ್‌ ಜಾಯಿಂಟ್ಸ್ ಕೆಲಸ ಮಾತ್ರ ಬಾಕಿ ಇದೆ. 10-15 ದಿನದಲ್ಲಿ ಆ ಕೆಲಸವು ಮುಗಿಯುವ ಭರವಸೆ ಇದೆ. ಮಂಡ್ಯ, ಶ್ರೀರಂಗಪಟ್ಟಣ ಬೈಪಾಸ್ ಕೂಡ ಡಿಸೆಂಬರ್ ವೇಳೆಗೆ ಕಂಪ್ಲೀಟ್ ಆಗಲಿದೆ. ಹೊಸ ವರ್ಷದಿಂದ ಸರಾಗವಾಗಿ ಬೆಂಗಳೂರು-ಮೈಸೂರಿಗೆ ಸಂಚಾರ ಮಾಡಬಹುದು ಎಂದಿದ್ದಾರೆ. ಇದನ್ನೂ ಓದಿ: ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು – ಬಸ್ ಚಾಲಕನಿಗೆ ಸಾರ್ವಜನಿಕರಿಂದ ಥಳಿತ

    ಈ ಕಾಮಗಾರಿ ಮುಕ್ತಾಯಗೊಂಡರೆ 75 ರಿಂದ 80 ನಿಮಿಷಗಳಲ್ಲಿ ಬೆಂಗಳೂರು-ಮೈಸೂರು ತಲುಪಬಹುದು. ಕೆಲವೆಡೆ ಕೆನಾಲ್, ಅಂಡರ್ ಪಾಸ್‍ನ ಸಣ್ಣ ಪುಟ್ಟ ಕೆಲಸವಿದೆ, ಆ ಕೆಲಸದ ಬಳಿ ಟ್ರಾಫಿಕ್ ಡೈವರ್ಟ್ ಮಾಡಿ, ಮುಕ್ತ ಸಂಚಾರಕ್ಕೆ ಅವಕಾಶ ನೀಡುತ್ತೇವೆ ಎಂದು ಸಂಸದ ಪ್ರತಾಪ್ ಸಿಂಹ ಮದ್ದೂರು ಬೈಪಾಸ್ ಮೇಲೆ ನಿಂತು ಫೇಸ್‍ಬುಕ್ ಲೈವ್ ನಲ್ಲಿ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಚಿಕ್ಕಮಗಳೂರು, ಉಡುಪಿಯಲ್ಲಿ ಡೇಂಜರ್ ಸೇತುವೆ – ನಿರ್ವಹಣೆ ಇಲ್ಲದೇ ಬೀಳುವ ಸ್ಥಿತಿ

    Live Tv
    [brid partner=56869869 player=32851 video=960834 autoplay=true]

  • ಕೊರೊನಾ ಬರಬಾರದೆಂದು ಮಂಡ್ಯದಲ್ಲಿ ಕುರಿ, ಕೋಳಿ ಬಲಿ

    ಕೊರೊನಾ ಬರಬಾರದೆಂದು ಮಂಡ್ಯದಲ್ಲಿ ಕುರಿ, ಕೋಳಿ ಬಲಿ

    ಮಂಡ್ಯ: ನಮ್ಮೂರಿಗೆ ಕೊರೊನಾ ಮಹಾಮಾರಿ ಬರಬಾರದು ಎಂದು ಊರಿನ ಗ್ರಾಮಸ್ಥರು ಗ್ರಾಮದಲ್ಲಿ ಕೋಳಿ ಹಾಗೂ ಕುರಿಯನ್ನು ಬಲಿ ಕೊಟ್ಟು ಪೂಜೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ರಾಮಂದೂರು ಗ್ರಾಮದಲ್ಲಿ ಜರುಗಿದೆ.

    ಸದ್ಯ ರಾಮಂದೂರು ಗ್ರಾಮದಲ್ಲಿ ಮೂರು ಕೊರೊನಾ ಕೇಸ್‍ಗಳಿದ್ದು, ಮುಂದಿನ ದಿನಗಳಲ್ಲಿ ನಮ್ಮೂರಿನಲ್ಲಿ ಕೊರೊನಾ ಹೆಚ್ಚಬಾರದು ಎಂದು, ಊರಿನ ಗ್ರಾಮಸ್ಥರು ಬಲಿ ಹಾಗೂ ಪೂಜೆಯನ್ನು ಮಾಡಿದ್ದಾರೆ.

    ಊರಿನ ಹೊರ ವಲಯದ ನಾಲ್ಕು ಕಡೆ ಬೇವಿನ ಸೊಪ್ಪು ಹಾಗೂ ಹೊಂಗೆ ಸೊಪ್ಪಿನಲ್ಲಿ ಚಪ್ಪರ ಹಾಕಿ ಅದರ ಒಳಗೆ ಕಲ್ಲನ್ನು ಇಟ್ಟು ಕೊರೊನಾ ಮಾರಿಯಮ್ಮ ಎಂದು ಪೂಜೆ ಮಾಡಿದ್ದಾರೆ. ನಂತರ ಕೋಳಿ ಹಾಗೂ ಕುರಿಯನ್ನು ಬಲಿ ಕೊಟ್ಟಿದ್ದಾರೆ. ಈ ಮೂಲಕ ನಮ್ಮೂರಿಗೆ ಕೊರೊನಾ ಮಾರಿ ಹೆಚ್ಚಾಗಬಾರದು ಎಂದು ಪ್ರಾರ್ಥನೆ ಮಾಡಿದ್ದಾರೆ.

  • ಸಚಿವ ತಮ್ಮಣ್ಣ ಮನೆಗೆ ಮುತ್ತಿಗೆ ಹಾಕಿ ಮದ್ದೂರು ಜನ ಎಚ್ಚರಿಕೆ

    ಸಚಿವ ತಮ್ಮಣ್ಣ ಮನೆಗೆ ಮುತ್ತಿಗೆ ಹಾಕಿ ಮದ್ದೂರು ಜನ ಎಚ್ಚರಿಕೆ

    ಮಂಡ್ಯ: ಒಂದು ಕಡೆ ಮಂಡ್ಯದಲ್ಲಿ ಚುನಾವಣೆಯ ರಂಗು ದಿನದಿಂದ ದಿನಕ್ಕೆ ಏರುತ್ತಿದ್ದು, ಮತ್ತೊಂದು ಕಡೆ ಚುನಾವಣೆ ಘೋಷಣೆಗೂ ಮುನ್ನವೇ ರೈತರಿಂದ ಮತದಾನಕ್ಕೆ ಬಹಿಷ್ಕಾರಕ್ಕೆ ನಿರ್ಧರಿಸಲಾಗಿದೆ.

    ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ಸಾರಿಗೆ ಸಚಿವ ಡಿಸಿ.ತಮ್ಮಣ್ಣ ಮನೆಗೆ ಮುತ್ತಿಗೆ ಹಾಕಿ ಚುನಾವಣೆ ಬಹಿಷ್ಕಾರ ಮಾಡುವ ಎಚ್ಚರಿಕೆಯನ್ನು ರೈತರು ನೀಡಿದ್ದಾರೆ. ಮದ್ದೂರು ತಾಲೂಕಿನ ಕಡೆಯ ಭಾಗಕ್ಕೆ ವ್ಯವಸಾಯಕ್ಕೆ ನೀರು ಬಿಡದ ಹಿನ್ನೆಲೆಯಲ್ಲಿ ಸಚಿವರ ಮನೆಗೆ ರೈತರು ಮುತ್ತಿಗೆ ಹಾಕಿದ್ದಾರೆ.

    ಅಜ್ಜಹಳ್ಳಿ, ಮಾರ್ಗೇನಹಳ್ಳಿ, ಉಪ್ಪಾರದೊಡ್ಡಿ ಗ್ರಾಮಸ್ಥರಿಂದ ಸಚಿವರ ಮನೆಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮ್ಮ ಭಾಗದ ಜಮೀನಿಗೆ ವ್ಯವಸಾಯಕ್ಕೆ ನೀರಿಲ್ಲ. ಹೀಗಿರುವಾಗ ನಮಗೆ ಚುನಾವಣೆ ಯಾಕೆ? ಮತಪೆಟ್ಟಿಗೆ ನಮ್ಮ ಊರಿಗೆ ಬರಲು ಬಿಡಲ್ಲ ಎಂದು ಗ್ರಾಮಸ್ಥರು ಸಚಿವರ ಮನೆಗೆ ಮುತ್ತಿಗೆ ಹಾಕಿ ಸಚಿವರ ವಿರುದ್ಧ ಕಿಡಿಕಾರಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ನಾಳೆ KSRTC, ಬಿಎಂಟಿಸಿ ಬಸ್ ಇರುತ್ತಾ – ಸಾರಿಗೆ ಸಚಿವರು ಹೇಳೋದು ಏನು

    ನಾಳೆ KSRTC, ಬಿಎಂಟಿಸಿ ಬಸ್ ಇರುತ್ತಾ – ಸಾರಿಗೆ ಸಚಿವರು ಹೇಳೋದು ಏನು

    ಮಂಡ್ಯ: ವಿವಿಧ ಕಾರ್ಮಿಕ ಸಂಘಟನೆಗಳು ಕರೆ ನೀಡಿದ ಭಾರತ್ ಬಂದ್ ಗೆ ಸಹಕಾರ ನೀಡುವುದಾಗಿ ಸಾರಿಗೆ ಸಚಿವ ಡಿಸಿ.ತಮ್ಮಣ್ಣ ಹೇಳಿದ್ದಾರೆ.

    ಮದ್ದೂರಿನಲ್ಲಿ ಮಾತನಾಡಿದ ಅವರು, ಅನೇಕ ಸಂಘ ಸಂಸ್ಥೆಗಳು ಬಂದ್‍ಗೆ ಕರೆ ನೀಡಿವೆ. ಹೀಗಾಗಿ ಸಾರಿಗೆ ಇಲಾಖೆಯ ನೌಕರರು ಸಹಕರಿಸುತ್ತಾರೆ ಎಂದು ತಿಳಿಸಿದರು.

    ಸರ್ಕಾರದ ಬೆಂಬಲ ಎಂದು ಹೇಳುತ್ತಿಲ್ಲ. ಕಾರ್ಮಿಕರ ಹಿತದೃಷ್ಟಿಯಿಂದ ಅಖಿಲ ಭಾರತ ಮಟ್ಟದಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ. ಅದಕ್ಕೆ ನಾವು ಕೂಡ ಸಹಕರಿಸುತ್ತಿದ್ದೇವೆ. ನಾಳೆ ಬಸ್ ಸಂಚಾರದ ಬಗ್ಗೆ ಪರಿಸ್ಥಿತಿ ನೋಡಿ ತೀರ್ಮಾನಕ್ಕೆ ಬರುತ್ತೇವೆ. ಆದರೆ ಬಂದ್ ಇರುವುದರಿಂದ ಸಾರಿಗೆ ವ್ಯವಸ್ಥೆ ಕಷ್ಟ ಎಂದು ಹೇಳಿದರು.

    ಸಾರ್ವಜನಿಕರ ಹಿತದೃಷ್ಟಿಯಿಂದ ಬಸ್ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರೆ ಮಾತ್ರ ಬಸ್ ಸಂಚಾರ ಇರುತ್ತೆ. ಇಲ್ಲದಿದ್ರೆ ಬಸ್ ಸಂಚಾರ ಇರುವುದಿಲ್ಲ ಎಂದು ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಶೂಟೌಟ್ ಹೇಳಿಕೆ – ಭಾವನಾತ್ಮಕ ಪ್ರತಿಕ್ರಿಯೆ ಹೊರತು, ಆದೇಶವಲ್ಲ: ಸಿಎಂ ಸ್ಪಷ್ಟನೆ

    ಶೂಟೌಟ್ ಹೇಳಿಕೆ – ಭಾವನಾತ್ಮಕ ಪ್ರತಿಕ್ರಿಯೆ ಹೊರತು, ಆದೇಶವಲ್ಲ: ಸಿಎಂ ಸ್ಪಷ್ಟನೆ

    ಬೆಂಗಳೂರು: ಮದ್ದೂರಿನಲ್ಲಿ ಇಂದು ಹಾಡಹಗಲೇ ನಡೆದಿರುವ ಕೊಲೆ ಪ್ರಕರಣ ಬಗ್ಗೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಆಘಾತವಾಗಿದೆ ಎಂದು ತಿಳಿಸಿದ್ದಾರೆ.

    ಕೊಲೆಯಾದ ಪ್ರಕಾಶ್ ಅವರು ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದರು. ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರ ವಹಿಸಲು ಕಾನೂನು ಪ್ರಕಾರ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಿದ್ದೇನೆ. ಈ ಪ್ರಕರಣ ಕುರಿತು ಮಾಹಿತಿ ಪಡೆಯುವ ಸಂದರ್ಭದಲ್ಲಿ ಬಳಸಿದ ಪದ ಭಾವನಾತ್ಮಕ ಪ್ರತಿಕ್ರಿಯೆಯೇ ಹೊರತು, ಆದೇಶವಲ್ಲ. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಅವರು ಹೇಳಿಕೆಯನ್ನು ಬಿಡುಗಡೆಗೊಳಿಸಿ ಸ್ಪಷ್ಟ ಪಡಿಸಿದ್ದಾರೆ.

    ಸಿಎಂ ಹೇಳಿದ್ದೇನು?
    ವಿಜಯಪುರ ಹೆಲಿಪ್ಯಾಡ್ ನಲ್ಲಿ ಇಳಿದ ಕೂಡಲೇ ಮುಖ್ಯಮಂತ್ರಿ ಕುಮಾರಸ್ವಾಮಿ ಮಂಡ್ಯ ಜಿಲ್ಲಾ ವರಿಷ್ಠಾಧಿಕಾರಿಗಳಿಗೆ ಹಂತಕರನ್ನು ಶೂಟೌಟ್ ಮಾಡಿ ಎಂದು ಆದೇಶಿಸಿದ್ದರು.

    ಈ ಕುರಿತು ದೂರವಾಣಿ ಮೂಲಕ ಜಿಲ್ಲಾ ವರಿಷ್ಠಾಧಿಕಾರಿಗಳೊಂದಿಗೆ ಮಾತನಾಡಿದ ಅವರು, ನಿಜಕ್ಕೂ ನನಗೆ ಯಾವ ವಿಚಾರಕ್ಕೆ ಕೊಲೆ ನಡೆದಿದೆ ಎಂಬುದು ತಿಳಿಯುತ್ತಿಲ್ಲ. ಕೊಲೆಯಾದ ವ್ಯಕ್ತಿ ತುಂಬಾ ಒಳ್ಳೆಯ ಮನುಷ್ಯನಾಗಿದ್ದ. ಈ ಹಿಂದೆಯೂ ಎರಡು ಕೊಲೆಗಳು ನಡೆದಿವೆ ಎನ್ನುವ ಮಾತು ಕೇಳಿದ್ದೇನೆ. ಕೂಡಲೇ ಹಂತಕರನ್ನು ಶೂಟೌಟ್ ಮಾಡಿ, ಯಾವುದೇ ತೊಂದರೆ ಇಲ್ಲ. ಕೊಲೆ ಮಾಡಿದ ಹಂತಕನನ್ನ ಯಾವುದೇ ಕಾರಣಕ್ಕೂ ಬಿಡಬೇಡಿ ಎಂದು ಸಿಎಂ ಹೇಳಿದ್ದರು. ಸಿಎಂ ಎಚ್‍ಡಿಕೆ ಫೋನಿನಲ್ಲಿ ಕರೆ ಮಾಡುತ್ತಿರುವ ದೃಶ್ಯ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮಧ್ಯರಾತ್ರಿ ನಡುರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಖಾಸಗಿ ಬಸ್

    ಮಧ್ಯರಾತ್ರಿ ನಡುರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಖಾಸಗಿ ಬಸ್

    ಮಂಡ್ಯ: ಖಾಸಗಿ ಕಂಪೆನಿಗೆ ಸೇರಿದ ಬಸ್ ಚಲಿಸುತ್ತಿರುವಾಗಲೇ ರಾತ್ರೋರಾತ್ರಿ ಧಗಧಗನೆ ಹೊತ್ತಿ ಉರಿದಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.

    ಜಿಲ್ಲೆಯ ಮದ್ದೂರು ಸಮೀಪ ಕೊಲ್ಲಿ ವೃತ್ತದ ಬಳಿ ಬಸ್ ಹೊತ್ತಿ ಉರಿದಿದೆ. ಖಾಸಗಿ ಕಂಪೆನಿಗೆ ಸೇರಿದ ಬಸ್ ಸುಮಾರು 35 ಮಂದಿ ಸಿಬ್ಬಂದಿಯನ್ನು ಕರೆದುಕೊಂಡು ಬಿಡದಿಯಿಂದ ಮಂಡ್ಯದ ಕಡೆಗೆ ಬರುತ್ತಿತ್ತು ಎನ್ನಲಾಗಿದೆ.

    ಅಂತೆಯೇ ಮಧ್ಯರಾತ್ರಿ 1 ಗಂಟೆ 30 ನಿಮಿಷದ ಸುಮಾರಿಗೆ ಕೊಲ್ಲಿ ವೃತ್ತದ ಬಳಿ ಬಸ್ ತಲುಪಿದಾಗ ಬಸ್ ನ ಪ್ರಯಾಣಿಕರಿಗೆ ಮತ್ತು ಡ್ರೈವರ್ ಗೆ ಬಸ್ ನಲ್ಲಿ ಏನೋ ಬದಲಾವಣೆ ಆಗುತ್ತಿರುವ ಅನುಮಾನ ಮೂಡಿದೆ. ತಕ್ಷಣ ಬಸ್ ನಿಲ್ಲಿಸಿ ಪರೀಕ್ಷಿಸಿದಾಗ ಬಸ್ ನ ಎಂಜಿನಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅದು ಬಸ್ ಪೂರ್ತಿ ಹರಡುತ್ತಿರುವುದು ಕಂಡು ಬಂದಿದೆ. ಇದ್ರಿಂದ ಭಯಭೀತರಾಗಿ ತಕ್ಷಣ ಬಸ್ ನೊಳಗಿದ್ದ ಪ್ರಯಾಣಿಕರು ಕೆಳಗೆ ಇಳಿದಿದ್ದಾರೆ. ಆದ್ರೆ ಅಷ್ಟರಲ್ಲಾಗಲೇ ಬೆಂಕಿಯ ತೀವ್ರತೆ ಹೆಚ್ಚಾಗಿ ಬಸ್ ಧಗಧಗನೆ ಹೆದ್ದಾರಿಯಲ್ಲೇ ಹೊತ್ತಿ ಉರಿದಿದೆ.

    ಪರಿಣಾಮ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ವಿಷಯ ತಿಳಿದು ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಅಷ್ಟರಲ್ಲಾಗಲೇ ಬಸ್ ಸಂಪೂರ್ಣ ಭಸ್ಮವಾಗಿತ್ತು. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

    ಘಟನೆ ಸಂಬಂಧ ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಬೈಕ್, ಲಾರಿ ನಡುವೆ ಅಪಘಾತ: ಇಬ್ಬರು ಯುವಕರ ದುರ್ಮರಣ

    ಬೈಕ್, ಲಾರಿ ನಡುವೆ ಅಪಘಾತ: ಇಬ್ಬರು ಯುವಕರ ದುರ್ಮರಣ

    ಮಂಡ್ಯ: ಬೈಕ್ ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ನಡೆದಿದೆ.

    22 ವರ್ಷದ ಅಜಿತ್ ಮತ್ತು 26 ವರ್ಷದ ಉಮೇಶ್ ಮೃತ ದುರ್ದೈವಿಗಳು. ತಡರಾತ್ರಿ ಕೆಲಸದ ನಿಮಿತ್ತ ಇಬ್ಬರು ಯುವಕರು ಬೈಕ್‍ನಲ್ಲಿ ತೆರಳುತ್ತಿದ್ರು. ಈ ವೇಳೆ ಮದ್ದೂರು ಕೆಎಸ್‍ಆರ್‍ಟಿಸಿ ನಿಲ್ದಾಣದ ಸಮೀಪ, ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಲಾರಿಗೆ ಬೈಕ್ ಡಿಕ್ಕಿ ಹೊಡೆದಿದೆ. ಪರಿಣಾಮ ಸವಾರರಿಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

    ಇದೀಗ ಮಕ್ಕಳ ಸಾವನ್ನು ನೋಡಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಘಟನೆ ಸಂಬಂಧ ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

     

  • ಮಂಡ್ಯ: ಮದ್ಯದಂಗಡಿ ಉದ್ಘಾಟನೆ ವಿಚಾರವಾಗಿ 2 ಗುಂಪುಗಳ ನಡುವೆ ಘರ್ಷಣೆ

    ಮಂಡ್ಯ: ಮದ್ಯದಂಗಡಿ ಉದ್ಘಾಟನೆ ವಿಚಾರವಾಗಿ 2 ಗುಂಪುಗಳ ನಡುವೆ ಘರ್ಷಣೆ

    ಮಂಡ್ಯ: ನೂತನವಾಗಿ ಎಂಎಸ್‍ಐಎಲ್ ಮದ್ಯದಂಗಡಿ ತೆರೆಯಲು ಮುಂದಾಗಿರೋ ಸರ್ಕಾರದ ನಡೆಯನ್ನ ವಿರೋಧಿಸಿ ಗ್ರಾಮದಲ್ಲಿ ಪರ ವಿರೋಧ ಗುಂಪುಗಳು ಹೋರಾಟ ನಡೆಸುತ್ತಿರುವುದರಿಂದ ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಮರಳಿಗ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

    ಇಂದು ಮರಳಿಗ ಗ್ರಾಮದಲ್ಲಿ ನೂತನವಾಗಿ ಎಂಎಸ್‍ಐಎಲ್ ಮದ್ಯದಂಗಡಿ ಉದ್ಘಾಟನೆಗೆ ತಯಾರಿ ನಡೆಸಲಾಗಿತ್ತು. ಆದ್ರೆ ಗ್ರಾಮದಲ್ಲಿ ಕುಡಿಯಲು ನೀರಿಲ್ಲ. ದನ ಕರುಗಳು ನೀರಿಲ್ಲದೇ ಬವಣೆ ಪಡುತ್ತಿವೆ. ಕುಡಿಯೋ ನೀರಿನ ಸಮಸ್ಯೆ ಬಗೆಹರಿಸಿ ಅಂತಾ ಅಧಿಕಾರಿಗಳಿಗೆ ಕೇಳಿಕೊಂಡ್ರೆ ಗ್ರಾಮದಲ್ಲಿ ಮದ್ಯದಂಗಡಿ ತೆರೆಯಲು ಅವಕಾಶ ಕೊಟ್ಟು ಯುಗಾದಿ ಹಬ್ಬಕ್ಕೆ ಎಣ್ಣೆ ಭಾಗ್ಯ ಕೊಡಲು ಹೊರಟಿದ್ದಾರೆ ಎಂದು ಗ್ರಾಮದ ಮಹಿಳೆಯರು ಕಣ್ಣೀರು ಹಾಕುತ್ತಿದ್ದಾರೆ.

    ಇದಕ್ಕೆ ಪ್ರತಿಯಾಗಿ ಮತ್ತೊಂದು ಗುಂಪು ಊರಿನಲ್ಲಿ ಕಲಬೆರಕೆ ಮದ್ಯವನ್ನ ಅಕ್ರಮವಾಗಿ ಮಾರಲಾಗ್ತಿದೆ. ಅದರ ಬದಲು ಅಧಿಕೃತವಾಗಿ ಮದ್ಯ ಮಾರಾಟ ಮಾಡಲಿ ಎಂದು ವಾದ ಮಾಡುತ್ತಿದೆ. ಇದ್ರಿಂದ ಪರ ವಿರೋಧ ಹೋರಾಟ ಏರ್ಪಟ್ಟಿದ್ದು, ಮದ್ಯ ವಿರೋಧಿ ಹೋರಾಟಗಾರರು ಬಂದೋಬಸ್ತ್ ಗೆಂದು ಗ್ರಾಮಕ್ಕೆ ಬಂದ ಪೊಲೀಸ್ ಜೀಪ್ ತಡೆದು, ಬಿರು ಬಿಸಿಲಿನಲ್ಲಿ ಪೊಲೀಸ್ ವಾಹನದ ಕೆಳಗೆ ಮಲಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಘಟನೆಯಿಂದಾಗಿ ಗ್ರಾಮದಲ್ಲಿ ಬೂದಿ ಮುಚ್ಚಿದ ಕೆಂಡದ ರೀತಿ ವಾತಾವಣವಿದ್ದು ಸುಮಾರು 50 ಕ್ಕೂ ಹೆಚ್ಚು ಸಿಬ್ಬಂದಿ ಮುನ್ನೆಚ್ಚರಿಕಾ ಕ್ರಮವಾಗಿ ಗ್ರಾಮದಲ್ಲೇ ಮೊಕ್ಕಾಂ ಹೂಡಿದ್ದಾರೆ.