Tag: Madeva

  • ವಿನೋದ್  ಪ್ರಭಾಕರ್ ಹೀರೋ, ಶ್ರೀನಗರ ಕಿಟ್ಟಿ ವಿಲನ್: ಇದು ‘ಮಾದೇವ’ ಅವತಾರ

    ವಿನೋದ್ ಪ್ರಭಾಕರ್ ಹೀರೋ, ಶ್ರೀನಗರ ಕಿಟ್ಟಿ ವಿಲನ್: ಇದು ‘ಮಾದೇವ’ ಅವತಾರ

    ವೀನ್ ರೆಡ್ಡಿ ಬಿ ಸಾರಥ್ಯದಲ್ಲಿ ಮೂಡಿ ಬರ್ತಿರುವ ಮಾದೇವ (Madeva) ಸಿನಿಮಾ ಅಖಾಡಕ್ಕೆ ಇದೀಗ ಶ್ರೀನಗರ ಕಿಟ್ಟಿ ಎಂಟ್ರಿ ಕೊಟ್ಟಿದ್ದಾರೆ. 80 ರ ದಶಕದ ಕಥೆಯನ್ನು ಒಳಗೊಂಡಿರುವ ಈ ಚಿತ್ರದಲ್ಲಿ  ಮರಿ ಟೈಗರ್ ವಿನೋದ್ ಪ್ರಭಾಕರ್ ನಾಯಕನಾಗಿ ನಟಿಸಿದ್ದು, ವಿನೋದ್ (Vinod Prabhakar) ಎದುರು ಶ್ರೀನಗರ ಕಿಟ್ಟಿ (Shrinagar Kitty) ಖಳನಾಯಕನಾಗಿ ತೊಡೆ ತಟ್ಟಿದ್ದಾರೆ.  ಸಮುದ್ರ ಎಂಬ ಪವರ್ ಫುಲ್ ಪಾತ್ರದ ಮೂಲಕ ಶ್ರೀನಗರ ಕಿಟ್ಟಿ ಗ್ಯಾಂಗ್ ಸ್ಟಾರ್ ಆಗಿ ಅಬ್ಬರಿಸಲಿದ್ದಾರೆ.

    ಭಂಟಿ ಎಂಬ ಸಿನಿಮಾ ನಿರ್ಮಾಣ ಮಾಡಿರುವ ಆರ್ ಕೇಶವ್ ದೇವಸಂದ್ರ ಮಾದೇವ ಚಿತ್ರಕ್ಕೆ ಬಂಡವಾಳ ಹೂಡಿದ್ದು, ಲವ್ ಗುರು ಸಮಂತ್ ಸಹ ನಿರ್ಮಾಣದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ.  ಶೃತಿ, ಅಚ್ಯುತ್ ಕುಮಾರ್, ಕಾಕ್ರೋಚ್ ಸುಧಿ ನಟಿಸುತ್ತಿರುವ ಈ ಚಿತ್ರದಲ್ಲಿ ವಿನೋದ್ ಪ್ರಭಾಕರ್ ಗೆ ಜೋಡಿಯಾಗಿ ಸೋನಲ್ ಮೊಂಥೆರೋ (Sonal Monthero) ನಾಯಕಿಯಾಗಿ ಬಣ್ಣ ಹಚ್ಚಿದ್ದಾರೆ. ಬಾಲಕೃಷ್ಣ ಥೋಟ ಛಾಯಾಗ್ರಹಣ, ಪ್ರದ್ಯೋತ್ಥನ್ ಸಂಗೀತ ಸಿನಿಮಾಕ್ಕಿದೆ. ಇದನ್ನೂ ಓದಿ:ಕಾಸ್ಟಿಂಗ್ ಕೌಚ್ ಬಗ್ಗೆ ಕರಾಳ ಅನುಭವ ಬಿಚ್ಚಿಟ್ಟ ನಟಿ ಶಮಾ ಸಿಕಂದರ್

    ಹೈದ್ರಾಬಾದ್ ರಾಮೋಜಿ ಫಿಲ್ಮ್ ಸಿಟಿ, ಮದ್ದೂರು, ಕನಕಪುರ, ಚನ್ನಪಟ್ಟಣ ಭಾಗದಲ್ಲಿ ಶೇಕಡ ಐವತ್ತರಷ್ಟು ಶೂಟಿಂಗ್ ಕಂಪ್ಲೀಟ್ ಮಾಡಿರುವ ಚಿತ್ರತಂಡ ಉಳಿದ ಭಾಗದ ಚಿತ್ರೀಕರಣವನ್ನು ಮಲೆನಾಡು ಶಿವಮೊಗ್ಗ ಸೇರಿದಂತೆ ಇತರೆ ಭಾಗಗಳಲ್ಲಿ ನಡೆಸಲು ಯೋಜನೆ ಹಾಕಿಕೊಂಡಿದೆ.

    Live Tv
    [brid partner=56869869 player=32851 video=960834 autoplay=true]

  • ಮಾದೇವನಿಗೆ ಸೋನಲ್ ಮೊಂಥೆರೋ ಜೋಡಿ

    ಮಾದೇವನಿಗೆ ಸೋನಲ್ ಮೊಂಥೆರೋ ಜೋಡಿ

    ರಿ ಟೈಗರ್ ವಿನೋದ್ ಪ್ರಭಾಕರ್ ಭತ್ತಳಿಕೆಯ ಬಹುನಿರೀಕ್ಷಿತ ಸಿನಿಮಾಗಳಲ್ಲೊಂದು ಮಾದೇವ. ವಿಭಿನ್ನ ಕಥಾಹಂದರ ಹೊಂದಿರುವ ಈ ಸಿನಿಮಾ ಅಂಗಳಕ್ಕೀಗ ಪಂಚತಂತ್ರ ಬ್ಯೂಟಿ ಸೋನಲ್ ಮೊಂಥೆರೋ ಎಂಟ್ರಿ ಕೊಟ್ಟಿದ್ದಾರೆ. ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಸೋನಲ್ ಈ ಚಿತ್ರದಲ್ಲಿ ವಿನೋದ್ ಪ್ರಭಾಕರ್ ಗೆ ಜೋಡಿಯಾಗಿ ನಟಿಸಲಿದ್ದಾರೆ.

    ವಿನೋದ್ ಹಾಗೂ ಸೋನಲ್ ಈ ಹಿಂದೆ ರಾಬರ್ಟ್ ಸಿನಿಮಾದಲ್ಲಿ ತನು-ರಾಘವ ಎಂಬ ಪಾತ್ರದ ಮೂಲಕ ಪ್ರೇಕ್ಷಕರ ಮನೆ ಗೆದ್ದಿದ್ದರು. ಇದೀಗ ಮತ್ತೊಮ್ಮೆ ಈ ಜೋಡಿ ಒಂದಾಗಿರುವುದು ಅಭಿಮಾನಿಗಳಲ್ಲಿ ನಿರೀಕ್ಷೆ ಹೆಚ್ಚಿಸಿದೆ. ಖಾಕಿ ಸಿನಿಮಾ ಸಾರಥಿ ನವೀನ್ ಬಿ ರೆಡ್ಡಿ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಮಾದೇವ ಚಿತ್ರದಲ್ಲಿ ಸೋನಲ್ 80ರ ದಶಕದ ಮಧ್ಯಮವರ್ಗದ ಹುಡುಗಿಯಾಗಿ ಬಣ್ಣ ಹಚ್ಚಲಿದ್ದಾರೆ. ಇದನ್ನೂ ಓದಿ:ನೇಪಾಳದಲ್ಲೂ ರಿಲೀಸ್ ಆಗಲಿದೆ ವಿಕ್ರಾಂತ್ ರೋಣ: 27 ದೇಶಗಳಲ್ಲಿ ಪ್ರಿವ್ಯೂ ಶೋ

    80 ದಶಕದ ಎಮೋಷನಲ್ ಹಾಗೂ ಮಾಸ್ ಎಲಿಮೆಂಟ್ ಕಂಟೆಂಟ್ ಹೊಂದಿರುವ ಮಾದೇವ ಸಿನಿಮಾ ರೈಲು ಮತ್ತು ಜೈಲಿನ ಬ್ಯಾಕ್ ಡ್ರಾಪ್ ನಲ್ಲಿ ನಡೆಯಲಿದೆ. ವಿನೋದ್ ಪ್ರಭಾಕರ್ ಈ ಹಿಂದಿನ ಪಾತ್ರಗಳಿಗಿಂತ ಈ ಚಿತ್ರದಲ್ಲಿ ಡಿಫರೆಂಟ್ ಆಗಿ ಕಾಣಿಸಿಕೊಳ್ಳಲಿದ್ದಾರೆ. ಶಿವಮೊಗ್ಗ, ಧಾರವಾಡ ಮತ್ತು ಹೈದರಾಬಾದ್‌ನಲ್ಲಿ ಸಿನಿಮಾದ ಶೂಟಿಂಗ್ ನಡೆಯಲಿದೆ. ಹಿರಿಯ ನಟಿ ಶ್ರುತಿ, ಪೋಷಕ ಕಲಾವಿದ ಅಚ್ಯುತ್ ಕುಮಾರ್, ಕಾಕ್ರೋಚ್ ಸುಧಿ ಸೇರಿದಂತೆ ಹಲವರು ತಾರಾಬಳಗದಲ್ಲಿದ್ದು, ಬಾಲಕೃಷ್ಣ ತೋಟ ಕ್ಯಾಮೆರಾ ಕೈಚಳಕ, ಪ್ರದ್ಯೋಥನ್ ಮ್ಯೂಸಿಕ್ ಪುಳಕ ಸಿನಿಮಾಕ್ಕಿದೆ. ಗಾಯತ್ರಿ ರಾಜೇಶ್ ಹಾಗೂ ಲವ್ ಗುರು ಸುಮನ್ ನಿರ್ಮಾಣದ ಮಾದೇವ ಸಿನಿಮಾದ ಶೂಟಿಂಗ್ ಭರದಿಂದ ಸಾಗ್ತಿದೆ.

    Live Tv
    [brid partner=56869869 player=32851 video=960834 autoplay=true]