Tag: Madhava

  • ‘ಯಾವ ಮೋಹನ ಮುರಳಿ ಕರೆಯಿತು’ ಸಿನಿಮಾದ ಟೈಟಲ್ ಸಾಂಗ್ ರಿಲೀಸ್

    ‘ಯಾವ ಮೋಹನ ಮುರಳಿ ಕರೆಯಿತು’ ಸಿನಿಮಾದ ಟೈಟಲ್ ಸಾಂಗ್ ರಿಲೀಸ್

    ಹೆಸರಾಂತ ಕವಿ ಗೋಪಾಲಕೃಷ್ಣ ಅಡಿಗರು ಬರೆದಿರುವ ‘ಯಾವ ಮೋಹನ ಮುರಳಿ ಕರೆಯಿತು’ (Yaava Mohana Murali Kareyitu) ಎಂಬ ಹಾಡಿನ ಮೊದಲ ಸಾಲೇ ಚಿತ್ರದ ಶೀರ್ಷಿಕೆಯಾಗಿದೆ. ಇತ್ತೀಚೆಗೆ ಈ ಚಿತ್ರಕ್ಕಾಗಿ ವಿ.ನಾಗೇಂದ್ರಪ್ರಸಾದ್ ಬರೆದಿರುವ ‘ಯಾವ ಮೋಹನ ಮುರಳಿ ಕರೆಯಿತು’ ಟೈಟಲ್  (Title) ಸಾಂಗ್ ಬಿಡುಗಡೆಯಾಯಿತು. ಖ್ಯಾತ ನಿರ್ಮಾಪಕ ಉಮಾಪತಿ ಶ್ರೀನಿವಾಸಗೌಡ ಹಾಡನ್ನು ಬಿಡುಗಡೆ ಮಾಡಿ, ಚಿತ್ರ ಯಶಸ್ವಿಯಾಗಲೆಂದು ಹಾರೈಸಿದರು.

    ಅಂಗವಿಕಲ ಹುಡುಗಿ  ಹಾಗೂ ಶ್ವಾನದ ನಡುವಿನ ಪ್ರೀತಿಯ ಕುರಿತಾದ ಚಿತ್ರವಿದು. ಕನ್ನಡದಲ್ಲಿ ಶ್ವಾನದ ಕುರಿತಾದ ಚಿತ್ರಗಳು ಬಂದಿದೆ. ಆದರೆ ಈ ಕಥೆ ವಿಭಿನ್ನ. ಅನಿಲ್ ಸಿ.ಜೆ ಸಂಗೀತ ನೀಡಿರುವ ಎಲ್ಲಾ ಹಾಡುಗಳು ಚೆನ್ನಾಗಿದೆ. ಸದ್ಯದಲ್ಲೇ ಚಿತ್ರ ತೆರೆಗೆ ಬರಲಿದೆ ಎಂದು ನಿರ್ದೇಶಕ ವಿಶ್ವಾಸ್ ಕೃಷ್ಣ ತಿಳಿಸಿದರು .

    ನಾನು ಮೂಲತಃ ಉದ್ಯಮಿ. ನಿರ್ದೇಶಕರು ಹೇಳಿದ ಕಥೆ ಇಷ್ಟವಾಯಿತು. ನಿರ್ಮಾಣಕ್ಕೆ ಮುಂದಾದೆ. ಹಾಡು ಬಿಡುಗಡೆ ಮಾಡಿಕೊಟ್ಟ ಉಮಾಪತಿ ಅವರಿಗೆ ಧನ್ಯವಾದ ಎಂದರು ನಿರ್ಮಾಪಕ ಶರಣಪ್ಪ ಗೌರಮ್ಮ. ಚಿತ್ರದ ಪ್ರಮುಖ ಪಾತ್ರಧಾರಿ ಬೇಬಿ ಪ್ರಕೃತಿ, ನಾಯಕ ಮಾಧವ (Madhava), ನಾಯಕಿ ಸ್ವಪ್ನ ಶೆಟ್ಟಿಗಾರ್, ಪಟೇಲ್ ವರುಣ್ ರಾಜ್ ತಮ್ಮ ಪಾತ್ರದ ಬಗ್ಗೆ ಮಾಹಿತಿ ನೀಡಿದರು.

     

    ಹಾಡುಗಳ ಬಗ್ಗೆ ಸಂಗೀತ ನಿರ್ದೇಶಕ ಅನಿಲ್ ಸಿ ಜೆ, ಟೈಟಲ್ ಸಾಂಗ್ ಕುರಿತು ವಿ.ನಾಗೇಂದ್ರ ಪ್ರಸಾದ್ ಮಾತನಾಡಿದರು. ಆನಂದ್ ಆಡಿಯೋ ಶ್ಯಾಮ್, ಗೀತರಚನೆಕಾರ ಗೌಸ್ ಫಿರ್ ಹಾಗೂ ರಾಕಿ (ಶ್ವಾನ) ಟ್ರೈನರ್ ಸ್ವಾಮಿ  ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.  ರಾಕಿ(ಶ್ವಾನ) ಸಹ ವೇದಿಕೆ ಮೇಲೆ ಕುಳಿತು ಸಮಾರಂಭ ವೀಕ್ಷಿಸಿದ್ದು ವಿಶೇಷವಾಗಿತ್ತು.

  • ‘ಮಾದೇವ’ನಾಗಿ ಮರಿ ಯಂಗ್ ಟೈಗರ್ ವಿನೋದ್ ಪ್ರಭಾಕರ್

    ‘ಮಾದೇವ’ನಾಗಿ ಮರಿ ಯಂಗ್ ಟೈಗರ್ ವಿನೋದ್ ಪ್ರಭಾಕರ್

    ಮ್ಮದೇ ಬ್ಯಾನರ್ ನ ಸಿನಿಮಾದಲ್ಲಿ ನಟಿಸುತ್ತಿರುವ ಮರಿ ಯಂಗ್ ಟೈಗರ್ ವಿನೋದ್ ಪ್ರಭಾಕರ್ ಇದೀಗ ಹೊಸ ಸಿನಿಮಾವೊಂದನ್ನು ಒಪ್ಪಿಕೊಂಡಿದ್ದಾರೆ. ಈ ಸಿನಿಮಾಗೆ ಮಾದೇವ ಎಂದು ಹೆಸರಿಡಲಾಗಿದೆ. ಇದೊಂದು ಮಾಸ್ ಸಿನಿಮಾವಾಗಿದ್ದು, ಈ ಸಿನಿಮಾದಲ್ಲಿ ಅವರು ಮಾದೇವನಾಗಿ ಅಬ್ಬರಿಸಲಿದ್ದಾರೆ. ಈ ಸಿನಿಮಾದ ಪೋಸ್ಟರ್ ಇಂದು ರಿಲೀಸ್ ಆಗಿದೆ.

    ಗಾಯತ್ರಿ ಆರ್ ಹಳಲೆ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದು, ನವೀನ್ ರೆಡ್ಡಿ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬರಲಿದೆ. ಮಾಸ್ ಸಿನಿಮಾಗಳಿಗೆ ವಿನೋದ್ ಪ್ರಭಾಕರ್ ಹೇಳಿ ಮಾಡಿಸಿದ ನಟ. ಅವರಿಗಾಗಿಯೇ ಈ ರೀತಿಯ ಕಥೆಯನ್ನು ಬರೆದಿದ್ದಾರಂತೆ ನಿರ್ದೇಶಕ ನವೀನ್ ರೆಡ್ಡಿ. ಸದ್ಯದಲ್ಲೇ ಸಿನಿಮಾದ ಶೂಟಿಂಗ್ ಕೂಡ ಶುರುವಾಗಲಿದೆಯಂತೆ. ಇದನ್ನೂ ಓದಿ: ರಾಧಿಕಾ ಪಂಡಿತ್ ತಂದೆ -ತಾಯಿಯ ವಿವಾಹ ವಾರ್ಷಿಕೋತ್ಸವ ಸಂಭ್ರಮ

    ಮಾದೇವ ಶಿವನ ಮತ್ತೊಂದು ಹೆಸರು. ಹಾಗಾಗಿ ಉಗ್ರ ಸ್ವರೂಪಿಯ ಹೆಸರಿನಲ್ಲಿ ಈ ಸಿನಿಮಾ ತಯಾರಾಗಲಿದೆಯಂತೆ. ಪಾತ್ರದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಸಿನಿಮಾ ಟೀಮ್ ಬಹಿರಂಗ ಪಡಿಸದೇ ಇದ್ದರೂ, ಈ ಸಿನಿಮಾದಲ್ಲಿ ವಿನೋದ್ ರಗಡ್ ಲುಕ್ ನಲ್ಲಿ ಕಾಣಿಸಿಕೊಳ್ಳಲಿದ್ದಾರಂತೆ. ಈವರೆಗೂ ಮಾಡದೇ ಇರುವಂತಹ ಪಾತ್ರ ಅದಾಗಿದೆ ಎಂದಿದ್ದಾರೆ.

    Live Tv