Tag: Madhusudan Havaldar

  • `ದಾಸವರೇಣ್ಯ ಶ್ರೀ ವಿಜಯ ದಾಸರು 2′ ಚಿತ್ರಕ್ಕೆ ಚಾಲನೆ

    `ದಾಸವರೇಣ್ಯ ಶ್ರೀ ವಿಜಯ ದಾಸರು 2′ ಚಿತ್ರಕ್ಕೆ ಚಾಲನೆ

    ಖ್ಯಾತ ಹರಿದಾಸರಾದ ಭೃಗು ಋಷಿಗಳ ಅಂಶ ಸಂಭೂತರಾದ ಶ್ರೀವಿಜಯದಾಸರ  ಆರಾಧನಾ ಪರ್ವಕಾಲದಲ್ಲಿ “ದಾಸವರೇಣ್ಯ ಶ್ರೀ ವಿಜಯದಾಸರು ಭಾಗ ೨” (Dasavarenya Sri Vijaya Dasaru 2) ಚಿತ್ರದ ಮುಹೂರ್ತ ಸಮಾರಂಭ ಬಸವನಗುಡಿಯ ಶ್ರೀಕಾರಂಜಿ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ನೆರವೇರಿತು. ವಿದ್ವಾನ್ ಶ್ರೀಸತ್ಯಧ್ಯಾನಾಚಾರ್ಯ ಕಟ್ಟಿ ಚಿತ್ರದ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರು.  ತೇಜಸ್ವಿನಿ ಅನಂತ ಕುಮಾರ್ ಕ್ಯಾಮೆರಾ ಚಾಲನೆ ಮಾಡಿದರು.‌ ಇತ್ತೀಚೆಗಷ್ಟೇ ಟಿಟಿಡಿ ಸದಸ್ಯರಾಗಿ ಆಯ್ಕೆಯಾಗಿರುವ ನರೇಶ್ ಕುಮಾರ್ ಹಾಗೂ ಖ್ಯಾತ ಗಮಕ ಕಲಾವಿದರಾದ ಪ್ರಸನ್ನ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಮುಹೂರ್ತ ಸಮಾರಂಭದ ನಂತರ ಮಾತನಾಡಿದ ಗಣ್ಯರು ಚಿತ್ರ  ಯಶಸ್ವಿಯಾಗಲೆಂದು ಹಾರೈಸಿದರು. ಚಿತ್ರತಂಡದ ಸದಸ್ಯರು ಚಿತ್ರದ ಕುರಿತು ಮಾತನಾಡಿದರು.            ‌‌‌

    ನಾನು ನಮ್ಮ ತಂದೆ ತಾಯಿಯ ಆಶೀರ್ವಾದದಿಂದ ಎಸ್ ಪಿ ಜೆ ಮೂವೀಸ್ ಲಾಂಛನದಲ್ಲಿ ಈ ಚಿತ್ರವನ್ನು ನಿರ್ಮಿಸುತ್ತಿರುವುದಾಗಿ ತಿಳಿಸಿದ ನಿರ್ಮಾಪಕ ತ್ರಿವಿಕ್ರಮ ಜೋಶಿ (Trivikrama Joshi),  ನಾನೇ ವಿಜಯದಾಸರ ಪಾತ್ರವನ್ನು ನಿರ್ವಹಿಸುತ್ತಿದ್ದೇನೆ. ಭಾಗ ಒಂದನ್ನು ಎಲ್ಲರೂ ಮೆಚ್ಚಿಕೊಂಡಿದ್ದಾರೆ. ವಿಜಯದಾಸರ ಆರಾಧನಾ ಸಂದರ್ಭದಲ್ಲೇ ಎರಡನೇ ಭಾಗಕ್ಕೆ ಚಾಲನೆ ದೊರಕ್ಕಿದೆ. ನನ್ನದಲ್ಲದ ಕ್ಷೇತ್ರಕ್ಕೆ ನಿರ್ದೇಶಕ ಮಧುಸೂದನ್ ಹವಾಲ್ದಾರ್ (Madhusudan Havaldar) ನನ್ನನ್ನು ಎಳೆದು ತಂದಿದ್ದಾರೆ. ಹರಿದಾಸರ ಕುರಿತಾಗಿ ಹತ್ತು ಸಿನಿಮಾಗಳನ್ನು ನಿರ್ಮಿಸುವ ಯೋಜನೆಯಿದೆ.‌  ಇದೇ ಸಂದರ್ಭದಲ್ಲಿ ಮತ್ತೊಂದು ವಿಷಯ ತಿಳಿಸುತ್ತಿದ್ದೇನೆ. ನವೆಂಬರ್ 12, ದೇಶ ಕಂಡ ಸಜ್ಜನ ರಾಜಕಾರಣಿ ದಿ.ಅನಂತಕುಮಾರ್ ಅವರು ನಮ್ಮನೆಲ್ಲಾ ಬಿಟ್ಟು‌ ಹೋದ ದಿನ. ಅವರು ನನ್ನ ಗುರುಗಳು. ಇಂದು ಅವರ ಶ್ರೀಮತಿ ಅವರು ಬಂದಿದ್ದಾರೆ. ಅವರ ಜೊತಗೆ ಅನಂತಕುಮಾರ್ ಅವರ ಕುರಿತಾದ ಚಿತ್ರ ಮಾಡುವ ಬಗ್ಗೆ ಚರ್ಚಿಸಿದ್ದೇನೆ. ಸದ್ಯದಲ್ಲೇ ಈ ಚಿತ್ರವನ್ನು ಆರಂಭಿಸುತ್ತೇವೆ. ನನ್ನ ತರಹ ಸಾಕಷ್ಟು ಅನಂತಕುಮಾರ್ ಅಭಿಮಾನಿಗಳು ನನ್ನೊಂದಿಗಿರುತ್ತಾರೆ. ಇಂದು ಪೂಜ್ಯ ಆಚಾರ್ಯರು ಸಹ ಈ ಚಿತ್ರ ಆರಂಭಿಸುವಂತೆ ಹೇಳಿ ಆಶೀರ್ವದಿಸಿದ್ದಾರೆ ಎಂದರು.

    “ದಾಸವರೇಣ್ಯ ಶ್ರೀ ವಿಜಯದಾಸರು ಭಾಗ ೨” ಚಿತ್ರಕ್ಕೆ ಚಾಲನೆ ನೀಡಿದ ಗಣ್ಯರಿಗೆ ಧನ್ಯವಾದ ತಿಳಿಸುತ್ತೇನೆ.‌ ಇಂದಿನಿಂದ ಈ ಚಿತ್ರದ ಚಿತ್ರೀಕರಣ ಆರಂಭವಾಗಿದೆ. ಇನ್ನು ನಾಲ್ಕು ತಿಂಗಳಲ್ಲಿ ಚಿತ್ರ ಸಿದ್ದವಾಗಲಿದೆ. ಹಂಪೆ, ಆನೆಗುಂದಿ, ಹುಲಗಿ, ಶ್ರೀರಂಗಪಟ್ಟಣ ಮುಂತಾದ ಕಡೆ ಚಿತ್ರೀಕರಣ ನಡೆಯಲಿದೆ. ಜೆ.ಎಂ.ಪ್ರಹ್ಲಾದ್ ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. ಒಂಭತ್ತು ಹಾಡುಗಳು ಚಿತ್ರದಲ್ಲಿರುತ್ತದೆ. ತ್ರಿವಿಕ್ರಮ ಜೋಶಿ, ಪ್ರಭಂಜನ ದೇಶಪಾಂಡೆ, ಶರತ್ ಜೋಶಿ, ಶ್ರೀಲತ ಬಾಗೇವಾಡಿ ಮುಂತಾದವರು ಚಿತ್ರದ ತಾರಾಬಳಗದಲ್ಲಿರುತ್ತಾರೆ ಎಂದು ನಿರ್ದೇಶಕ ಮಧುಸೂದನ್ ಹವಾಲ್ದಾರ್ ತಿಳಿಸಿದರು.

    ಚಿತ್ರಕಥೆ ಹಾಗೂ ಸಂಭಾಷಣೆ ಕುರಿತು ಜೆ.ಎಂ.ಪ್ರಹ್ಲಾದ್ ಮಾತನಾಡಿದರು. ಗೋಪಾಲದಾಸರ ಪಾತ್ರದಲ್ಲಿ ಕಾಣಿಕೊಳ್ಳುತ್ತಿರುವುದಾಗಿ ಪ್ರಭಂಜನ ದೇಶಪಾಂಡೆ ಹಾಗು ವಿಜಯದಾಸರ ಪತ್ನಿ ಹರಳಮ್ಮನವರ ಪಾತ್ರ ನಿರ್ವಹಿಸುತ್ತಿರುವುದಾಗಿ ನಟಿ ಶ್ರೀಲತ ಬಾಗೇವಾಡಿ ತಿಳಿಸಿದರು.

  • ‘ಶಿವಶರಣ ಮೋಳಿಗೆ ಮಾರಯ್ಯ’ ಚಿತ್ರಕ್ಕೆ ಚಾಲನೆ ನೀಡಿದ ಗವಿಶ್ರೀ

    ‘ಶಿವಶರಣ ಮೋಳಿಗೆ ಮಾರಯ್ಯ’ ಚಿತ್ರಕ್ಕೆ ಚಾಲನೆ ನೀಡಿದ ಗವಿಶ್ರೀ

    ಹೆಸರಾಂತ ಶಿವಶರಣ ಮೋಳಿಗೆ ಮಾರಯ್ಯ (Shivsharan Molige Maraiah) ಚಿತ್ರ ಅಕ್ಷಯ ತೃತೀಯ ಹಾಗೂ ಬಸವ ಜಯಂತಿ ಶುಭದಿನದಂದು ಕೊಪ್ಪಳದ ಶ್ರೀಗವಿ ಸಿದ್ದೇಶ್ವರ ಮಠದಲ್ಲಿ ಆರಂಭವಾಗಿದೆ. ಪೂಜ್ಯ ಗವಿ ಸಿದ್ದೇಶ್ವರ ಮಠದ ಶ್ರೀಗಳು ಚಿತ್ರಕ್ಕೆ ಚಾಲನೆ ನೀಡಿದ್ದಾರೆ.

    ಶ್ರೀ ಜಗನ್ನಾಥದಾಸರು, ಶ್ರೀಪ್ರಸನ್ನವೆಂಕಟದಾಸರು ಹಾಗೂ ಇತ್ತೀಚಿಗೆ ತೆರೆಕಂಡ ದಾಸವರೇಣ್ಯ ಶ್ರೀ ವಿಜಯದಾಸರು  ಸೇರಿದಂತೆ ನಾಡಿನ ಹೆಸರಾಂತ ಹರಿದಾಸರ ಚಿತ್ರಗಳ ನಿರ್ದೇಶಕ ಮಧುಸೂದನ್ ಹವಾಲ್ದಾರ್ (Madhusudan Havaldar) ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಮಾತಾಂಬುಜ ಮೂವೀಸ್ ಅರ್ಪಿಸುವ ಹಾಗೂ ಹವಾಲ್ದಾರ್ ಫಿಲಂಸ್ ನ ಮೂಲಕ ಮಧುಸೂದನ್ ಹವಾಲ್ದಾರ್ ಅವರೆ ಈ ಚಿತ್ರವನ್ನು ನಿರ್ಮಿಸುತ್ತಿರುವುದಲ್ಲದೆ, ಸಂಗೀತ ನಿರ್ದೇಶನವನ್ನು ಮಾಡುತ್ತಿದ್ದಾರೆ. ಆರು ಹಾಡುಗಳು ಹಾಗೂ ವಚನಗಳು ಈ ಚಿತ್ರದಲ್ಲಿರುತ್ತದೆ. ಆನೆಗುಂದಿ, ಕೊಪ್ಪಳ, ಬಾಗಲಕೋಟೆ ಹಾಗೂ ಹಂಪಿಯ ಆಸುಪಾಸಿನಲ್ಲಿ ಚಿತ್ರೀಕರಣ ನಡೆಯಲಿದೆ. ಸಿ.ನಾರಾಯಣ ಈ ಚಿತ್ರದ ಛಾಯಾಗ್ರಾಹಕರು.

    ಶಿವಶರಣ ಮೋಳಿಗೆ ಮಾರಯ್ಯ ಅವರು ಕಾಶ್ಮೀರದ ರಾಜರಾಗಿದ್ದವರು. ಅವರು  ಕಲ್ಯಾಣಕ್ಕೆ ಬರುತ್ತಾರೆ. ಶರಣ ತತ್ವಕ್ಕೆ ಮನಸೋತ್ತು ಶಿವಶರಣರಾಗುತ್ತಾರೆ. ರಾಜ್ಯವನ್ನು ಮಗನಿಗೆ ಒಪ್ಪಿಸುತ್ತಾರೆ. ದಿನವೂ ಕಟ್ಟಿಗೆ ಮಾರಿ ಅದರಿಂದ ಬಂದ ಹಣದಿಂದ ದಿನ ದಾಸೋಹ ಮಾಡಿಸುತ್ತಿರುತ್ತಾರೆ. ಇಂತಹ ಮಹಾಮಹಿಮ ಶಿವಶರಣರ ಜೀವನ ಚರಿತ್ರೆಯನ್ನು ತೆರೆಗೆ ತರಲು ತುಂಬಾ ಸಂತೋಷವಾಗಿದೆ. ನಾನು ಹಾಗೂ ಜೆ.ಎಂ.ಪ್ರಹ್ಲಾದ್ ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದೇವೆ. ಈ ಹಿಂದ ಕೆಲವು ಚಿತ್ರಗಳಲ್ಲಿ ನಟಿಸರುವ ವಿಷ್ಣುವರ್ಧನ್ ಅವರು ಮೋಳಿಗೆ ಮಾರಯ್ಯ ಅವರ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ.

     

    ಶರತ್ ಕುಮಾರ್ ದಂಡಿನ್, ಇಂಗಳಗಿ ನಾಗರಾಜ್, ಕೆ‌.ಪುರುಷೋತ್ತಮ ರೆಡ್ಡಿ, ನಿಶ್ಚಿತ ಶೆಟ್ಟಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಇದೇ ಸಂದರ್ಭದಲ್ಲಿ ನನ್ನ ನಿರ್ದೇಶನದ ದಾಸವರೇಣ್ಯ ಶ್ರೀವಿಜಯದಾಸರು ಚಿತ್ರ ಇಪ್ಪತ್ತೈದು ದಿನಗಳನ್ನು ಯಶಸ್ವಿಯಾಗಿ ಪೂರೈಸಿದೆ ಎಂದು ನಿರ್ದೇಶಕ ಹಾಗೂ ನಿರ್ಮಾಪಕ ಮಧುಸೂದನ್ ಹವಾಲ್ದಾರ್ ತಿಳಿಸಿದ್ದಾರೆ.

  • ಅಂಜನಾದ್ರಿ ಬೆಟ್ಟದಲ್ಲಿ ‘ಅಯೋಧ್ಯೆ ರಾಮ’ ಚಿತ್ರಕ್ಕೆ ಚಾಲನೆ

    ಅಂಜನಾದ್ರಿ ಬೆಟ್ಟದಲ್ಲಿ ‘ಅಯೋಧ್ಯೆ ರಾಮ’ ಚಿತ್ರಕ್ಕೆ ಚಾಲನೆ

    ನಿನ್ನೆಯಷ್ಟೇ (ಜ.22) ಅಯೋಧ್ಯೆಯಲ್ಲಿ ಶ್ರೀರಾಮನ ಪ್ರತಿಷ್ಟಾಪನೆಯಾದ ಪರ್ವದಿನ. ಅದೇ ಶುಭ ಮುಹೂರ್ತದಲ್ಲಿ ಆಂಜನೇಯನ ಜನ್ಮಭೂಮಿಯಾದ ಅಂಜನಾದ್ರಿಯಲ್ಲಿ ‘ಅಯೋಧ್ಯೆ ರಾಮ’ (Ayodhya Ram) ಚಿತ್ರದ ಮುಹೂರ್ತ ಸಮಾರಂಭ ನೆರವೇರಿತು. ಶಾಸಕ ಗಾಲಿ ಜನಾರ್ದನ ರೆಡ್ಡಿ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರುವುದರ ಮೂಲಕ ಚಿತ್ರಕ್ಕೆ ಚಾಲನೆ ನೀಡಿದರು.

    ಈ ಹಿಂದೆ ಶ್ರೀಜಗನ್ನಾಥ ದಾಸರು, ಶ್ರೀ ಪ್ರಸನ್ನವೆಂಕಟದಾಸರು ಸೇರಿದಂತೆ ಅನೇಕ ದಾಸವರೇಣ್ಯರ ಚಿತ್ರಗಳನ್ನು ನಿರ್ಮಿಸಿ, ನಿರ್ದೇಶಿಸುವ ಮೂಲಕ ಜನಪ್ರಿಯರಾಗಿರುವ ಮಧುಸೂದನ್ ಹವಾಲ್ದಾರ್  (Madhusudan Havaldar) ತಮ್ಮ ಮಾತಾಂಬುಜ ಮೂವೀಸ್ ಲಾಂಛನದಲ್ಲಿ ಈ ಚಿತ್ರವನ್ನು ನಿರ್ಮಿಸುತ್ತಿರುವುದಲ್ಲದೆ ನಿರ್ದೇಶನವನ್ನು ಮಾಡುತ್ತಿದ್ದಾರೆ.

    ಇಂದಿನಿಂದ  ಈ ಪೌರಾಣಿಕ ಚಿತ್ರದ ಚಿತ್ರೀಕರಣ ಆರಂಭವಾಗಲಿದೆ. ಕನ್ನಡ ಸೇರಿದಂತೆ ಹನ್ನೆರಡು ಭಾಷೆಗಳಲ್ಲಿ ಈ ಚಿತ್ರ ಬರಲಿದೆ. ವಿಕ್ರಮ್ ಜೋಶಿ ಈ ಚಿತ್ರದ ನಾಯಕನಾಗಿ ಹಾಗೂ ಶ್ರೀಲತ ನಾಯಕಿಯಾಗಿ ನಟಿಸುತ್ತಿದ್ದಾರೆ. ಕನ್ನಡ, ತೆಲುಗು, ತಮಿಳು ಹಾಗೂ ಚಿತ್ರರಂಗದ ಹೆಸರಾಂತ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಲಿದ್ದಾರೆ.

     

    ವಿಜಯ್ ಕೃಷ್ಣ ಸಂಗೀತ ನಿರ್ದೇಶನ, ನಾರಾಯಣ್ ಛಾಯಾಗ್ರಹಣ, ಆರ್ ಡಿ ರವಿ ಅವರ ಸಂಕಲನವಿರುವ ಅಯೋಧ್ಯಾ ರಾಮ ಚಿತ್ರಕ್ಕೆ ತೀರ್ಥರಾಜ್ ಡಿ ಹಾಗೂ ರವಿಶಂಕರ್ ಸಹ ನಿರ್ಮಾಣವಿದೆ. ಪ್ರಶಾಂತ್ ಕುಷ್ಟಗಿ ಅವರ ಸಹಕಾರವಿರುವ ಈ ಚಿತ್ರವನ್ನು ಹನ್ನೆರಡು ಭಾಷೆಗಳಲ್ಲಿ ಒಂದು ವರ್ಷದಲ್ಲಿ ಬಿಡುಗಡೆ ಮಾಡುವ ಯೋಜನೆಯಿದೆ ಎಂದು ನಿರ್ದೇಶಕ ಮಧುಸೂದನ್ ಹವಾಲ್ದಾರ್ ತಿಳಿಸಿದ್ದಾರೆ.