Tag: Madhya Pradesh High Court

  • ಪತಿಗೆ ದೈಹಿಕ ಸಂಬಂಧ ನಿರಾಕರಿಸುವುದು ಕ್ರೌರ್ಯಕ್ಕೆ ಸಮ: ಮಧ್ಯಪ್ರದೇಶ ಹೈಕೋರ್ಟ್‌

    ಪತಿಗೆ ದೈಹಿಕ ಸಂಬಂಧ ನಿರಾಕರಿಸುವುದು ಕ್ರೌರ್ಯಕ್ಕೆ ಸಮ: ಮಧ್ಯಪ್ರದೇಶ ಹೈಕೋರ್ಟ್‌

    – ಗಂಡನ ಡಿವೋರ್ಸ್‌ ಪ್ರಶ್ನಿಸಿದ್ದ ಹೆಂಡತಿಗೆ ಹಿನ್ನಡೆ

    ಭೋಪಾಲ್‌: ಪತಿಗೆ ದೈಹಿಕ ಸಂಬಂಧವನ್ನು ನಿರಾಕರಿಸುವುದು ಹಿಂದೂ ವಿವಾಹ ಕಾಯ್ದೆಯಡಿ ಕ್ರೌರ್ಯಕ್ಕೆ ಸಮಾನವಾಗಿದೆ ಎಂದು ಮಧ್ಯಪ್ರದೇಶ ಹೈಕೋರ್ಟ್ (Madhya Pradesh High Court) ಹೇಳಿದೆ. ಈ ಆಧಾರದ ಮೇಲೆ ಪತಿಗೆ ವಿಚ್ಛೇದನೆ ನೀಡುವ ಕೌಟುಂಬಿಕ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿಯಿತು.

    2013ರ ಮೇ 26 ರಂದು ವಿವಾಹವಾಗಿದ್ದ ದಂಪತಿಗೆ ಹೈಕೋರ್ಟ್‌ ವಿಚ್ಛೇದನೆ (Divorce) ನೀಡಿ ತೀರ್ಪು ಪ್ರಕಟಿಸಿದೆ. ಗಂಡನಿಗೆ ದೈಹಿಕ ಸಂಬಂಧ ನಿರಾಕರಿಸುವುದು ಕ್ರೌರ್ಯಕ್ಕೆ ಸಮ ಎಂದು ಇದೇ ಕೋರ್ಟ್‌ ಹೇಳಿದೆ. ಇದನ್ನೂ ಓದಿ: CSIR-UGC-NET ಪರೀಕ್ಷೆ ಮಂದೂಡಿಕೆ

    ಮದುವೆಯಾದ ಕೇವಲ 3 ದಿನಗಳಲ್ಲಿ ಮಹಿಳೆಯ ಸಹೋದರ ಆಕೆಯನ್ನು ಪರೀಕ್ಷೆಗೆ ಬರೆಯಲು ಪೋಷಕರ ಮನೆಗೆ ಕರೆದೊಯ್ದಿದ್ದರು. ಕೆಲವು ದಿನಗಳ ನಂತರ ಆಕೆಯನ್ನು ಕರೆತರಲು ಅತ್ತೆಯಂದಿರು ಹೋದಾಗ, ಆಕೆ ಅವರೊಂದಿಗೆ ಬರಲು ನಿರಾಕರಿಸಿದ್ದಳು.

    ನಂತರ ಮಹಿಳೆ ಸಿಧಿಯಲ್ಲಿ ತನ್ನ ಅತ್ತೆಯ ವಿರುದ್ಧ ವರದಕ್ಷಿಣೆ ಕಿರುಕುಳದ ದೂರು ನೀಡಿದ್ದಳು. ಬಳಿಕ ದಂಪತಿ ಪರಸ್ಪರ ಒಪ್ಪಂದದ ಮೂಲಕ ವಿಚ್ಛೇದನಕ್ಕೆ ಮುಂದಾದರು. ಆದಾಗ್ಯೂ, ಪತ್ನಿ ತನ್ನ ಪತಿ ವಿರುದ್ಧ ಕೌಟುಂಬಿಕ ದೌರ್ಜನ್ಯದ ದೂರು ದಾಖಲಿಸಿದಳು. ಆಕೆ ಪತಿ ಹಿಂದೂ ವಿವಾಹ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಸತ್ನಾ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದ. ಎರಡೂ ಕಡೆಯವರ ಮಾತನ್ನು ಆಲಿಸಿದ ನಂತರ, ಕೌಟುಂಬಿಕ ನ್ಯಾಯಾಲಯವು 2021ರ ಆಗಸ್ಟ್ 17 ರಂದು ವಿಚ್ಛೇದನ ನೀಡಿ ಆದೇಶ ಹೊರಡಿಸಿತ್ತು. ಇದನ್ನೂ ಓದಿ: ಪಿಕ್ನಿಕ್‍ಗೆ ತೆರಳಿದ್ದಾಗ ಅವಘಡ – ಮುಳುಗುತ್ತಿದ್ದವನ ರಕ್ಷಿಸಲು ಹೋಗಿ ನಾಲ್ವರು ದುರ್ಮರಣ

    ಆದರೆ, ಈ ವಿಚ್ಛೇದನದ ಆದೇಶವನ್ನು ಮಹಿಳೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಳು. ವಿಚಾರಣೆಯ ವೇಳೆ ಪತಿ, ‘ನನ್ನ ಹೆಂಡತಿ ತನ್ನೊಂದಿಗೆ ಕೇವಲ ಮೂರು ದಿನಗಳ ಕಾಲ ಇದ್ದಳು. ಈ ಅವಧಿಯಲ್ಲಿ ಆಕೆ ದೈಹಿಕ ಸಂಬಂಧ ಹೊಂದಿರಲಿಲ್ಲ’ ಎಂದು ಹೇಳಿದ್ದ.

  • ಒಪ್ಪಿತ ಸೆಕ್ಸ್ ವಯೋಮಿತಿ 18 ರಿಂದ 16 ಕ್ಕೆ ಇಳಿಸಿ: ಕೇಂದ್ರಕ್ಕೆ ಹೈಕೋರ್ಟ್ ಒತ್ತಾಯ

    ಒಪ್ಪಿತ ಸೆಕ್ಸ್ ವಯೋಮಿತಿ 18 ರಿಂದ 16 ಕ್ಕೆ ಇಳಿಸಿ: ಕೇಂದ್ರಕ್ಕೆ ಹೈಕೋರ್ಟ್ ಒತ್ತಾಯ

    ಭೂಪಾಲ್: ಲೈಂಗಿಕತೆಯ ಸಮ್ಮತಿ ವಯೋಮಿತಿಯನ್ನು ಈಗಿರುವ 18 ವರ್ಷದಿಂದ 16 ವರ್ಷಕ್ಕೆ ಇಳಿಸುವಂತೆ ಕೇಂದ್ರ ಸರ್ಕಾರಕ್ಕೆ (Central Government) ಮಧ್ಯಪ್ರದೇಶ ಹೈಕೋರ್ಟ್ (Madhya Pradesh High Court) ಹೇಳಿದೆ.

    ಕ್ರಿಮಿನಲ್ ಕಾನೂನು (ತಿದ್ದುಪಡಿ) ಕಾಯ್ದೆ 2013ನ್ನು ಜಾರಿಗೊಳಿಸಿದ್ದರಿಂದಾಗಿ ಹುಡುಗಿಯರ ಲೈಂಗಿಕ ಕ್ರಿಯೆಗೆ ಸಮ್ಮತಿಸುವ ವಯಸ್ಸನ್ನು 16ರಿಂದ 18 ವರ್ಷಕ್ಕೆ ಹೆಚ್ಚಳ ಮಾಡಲಾಗಿದೆ. ಅಲ್ಲದೇ ಸಮ್ಮತಿಯ ಲೈಂಗಿಕತೆ ವಯೋಮಿತಿಯನ್ನು 18 ವರ್ಷಕ್ಕೆ ಹೆಚ್ಚಿಸಿರುವುದು ಹದಿಹರೆಯದ ಹುಡುಗರನ್ನು ಸಮಾಜದಲ್ಲಿ ಅಪರಾಧಿಗಳೆಂದು ಪರಿಗಣಿಸುವಂತೆ ಮಾಡಿದೆ. ಇದು ಸಮ್ಮತಿಯ ಲೈಂಗಿಕ ಸಂಬಂಧ ಬೆಳೆಸುವ ಹದಿಹರೆಯದ ಹುಡುಗರಿಗೆ ಅನ್ಯಾಯವಾಗಿ ಪರಿಣಮಿಸಿದೆ ಎಂದು ನ್ಯಾಯಮೂರ್ತಿ ದೀಪಕ್ ಕುಮಾರ್ ಅಗರ್‌ವಾಲ್ ಅವರಿದ್ದ ಪೀಠ ಅಭಿಪ್ರಾಯಪಟ್ಟಿದೆ. ಇದನ್ನೂ ಓದಿ: ಮಗನನ್ನು ಹೊಡೆದು ಕೊಂದು ಬಳಿಕ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ತಂದೆ!

    ಹದಿಹರೆಯದಲ್ಲಿ ಹುಡುಗ ಹುಡುಗಿಯರು ಸ್ನೇಹ ಬೆಳೆಸುತ್ತಾರೆ. ಬಳಿಕ ಆಕರ್ಷಣೆಯಿಂದಾಗಿ ದೈಹಿಕ ಸಂಬಂಧ ಬೆಳೆಸುತ್ತಾರೆ. ಆದರೆ ಇದರಿಂದಾಗಿ ಸಮಾಜದಲ್ಲಿ ಅವರನ್ನು ಅಪರಾಧಿಗಳು ಎಂದು ಪರಿಗಣಿಸಲಾಗುತ್ತಿದೆ. ಹೆಚ್ಚಿನ ಅಪರಾಧ ಪ್ರಕರಣಗಳಲ್ಲಿ ಸಂತ್ರಸ್ತೆ 18 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿರುತ್ತಾರೆ. ಇದರಿಂದಾಗಿ ಹದಿಹರೆಯದ ಹುಡುಗರಿಗೆ ಅನ್ಯಾಯವಾಗುತ್ತಿದೆ. ಹೀಗಾಗಿ ಅನ್ಯಾಯ ಸರಿಪಡಿಸಲು ಹುಡುಗಿಯರ ವಯೋಮಿತಿಯನ್ನು 18ರಿಂದ 16 ವರ್ಷಕ್ಕೆ ಇಳಿಸುವ ಬಗ್ಗೆ ಕೇಂದ್ರ ಸರ್ಕಾರ ಯೋಚಿಸಬೇಕು ಎಂದು ಕೋರ್ಟ್ ಸಲಹೆ ನೀಡಿದೆ.

    ಇತ್ತೀಚಿನ ದಿನಗಳಲ್ಲಿ, ಸಾಮಾಜಿಕ ಮಾಧ್ಯಮದ ಅರಿವು ಮತ್ತು ಸುಲಭ ಲಭ್ಯವಾಗಿರುವ ಇಂಟರ್ನೆಟ್ ಸಂಪರ್ಕದಿಂದಾಗಿ 14 ವರ್ಷ ವಯಸ್ಸಿನ ಪ್ರತಿಯೊಬ್ಬ ಗಂಡು ಅಥವಾ ಹೆಣ್ಣು ಚಿಕ್ಕ ವಯಸ್ಸಿನಲ್ಲಿಯೇ ಪ್ರೌಢಾವಸ್ಥೆ ತಲುಪುತ್ತಿದ್ದಾರೆ. ಇದರಿಂದಾಗಿ ಹೆಣ್ಣು ಮತ್ತು ಗಂಡು ಮಕ್ಕಳು ಆಕರ್ಷಣೆಗೆ ಒಳಗಾಗುತ್ತಿದ್ದು ಈ ಆಕರ್ಷಣೆಗಳು ಸಮ್ಮತಿಯೊಂದಿಗೆ ದೈಹಿಕ ಸಂಬಂಧ ಬೆಳೆಸಲು ಪ್ರೇರಣೆ ನೀಡುತ್ತಿವೆ. ಇದರಲ್ಲಿ ಯುವಕರು ಅಪರಾಧಿಗಳಲ್ಲ. ಅವರು ಹೆಣ್ಣಿನ ಸಂಪರ್ಕಕ್ಕೆ ಬಂದಾಗ ಮತ್ತು ದೈಹಿಕ ಸಂಬಂಧ ಬೆಳೆಸಿದಾಗ ಅದು ವಯಸ್ಸಿಗೆ ಸಂಬಂಧಿಸಿದ ವಿಚಾರವಾಗಿರುತ್ತದೆ ಎಂದು ನ್ಯಾಯಾಲಯ ಹೇಳಿದೆ.

    ಪ್ರಕರಣವೊಂದರ ವಿಚಾರಣೆ ವೇಳೆ, ಸಂತ್ರಸ್ತೆ ರೀತಿಯ ಹದಿಹರೆಯದವರ ದೈಹಿಕ ಮತ್ತು ಮಾನಸಿಕ ಬೆಳವಣಿಗೆಯು ಸೂಕ್ತ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯ ಹೊಂದಿದ್ದಾರೆ. ಮೇಲ್ನೋಟಕ್ಕೆ ಪ್ರಸುತ ಪ್ರಕರಣದಲ್ಲಿ ಆರೋಪಿಗೆ ದುಷ್ಕøತ್ಯ ಎಸಗುವ ಉದ್ದೇಶ ಇರಲಿಲ್ಲ ಎಂದು ಕೋರ್ಟ್ ಹೇಳಿದೆ.

    23 ವರ್ಷದ ಯುವಕ ತನ್ನ ವಿರುದ್ಧ ಪೋಕ್ಸೊ (POCSO) ಹಾಗೂ ಮಾಹಿತಿ ಮತ್ತು ತಂತ್ರಜ್ಞಾನ (ಐಟಿ) ಕಾಯ್ದೆ ಅಡಿಯಲ್ಲಿ ದಾಖಲಾಗಿದ್ದ ಪ್ರಕರಣ ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ನ್ಯಾಯಾಲಯ ಈ ಅಭಿಪ್ರಾಯ ವ್ಯಕ್ತಪಡಿಸಿದೆ. ಅಲ್ಲದೇ ಎಫ್‍ಐಆರ್ ರದ್ದುಗೊಳಿಸುವುದು ಸೂಕ್ತ ಎಂದಿದೆ. ಇದನ್ನೂ ಓದಿ: ಈಗಿರುವ ಯಾರೂ ಬಿಜೆಪಿ ಕಟ್ಟಿಲ್ಲ: ಸ್ವಪಕ್ಷೀಯರ ವಿರುದ್ಧವೇ ಮತ್ತೆ ಗುಡುಗಿದ ರೇಣುಕಾಚಾರ್ಯ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅತ್ಯಾಚಾರದ ಬಳಿಕ ಕೊಲ್ಲದೇ ಜೀವ ಉಳಿಸಿದ್ದಾನೆಂದು ಆರೋಪಿ ಶಿಕ್ಷೆ ಕಡಿತಗೊಳಿಸಿದ ಕೋರ್ಟ್

    ಅತ್ಯಾಚಾರದ ಬಳಿಕ ಕೊಲ್ಲದೇ ಜೀವ ಉಳಿಸಿದ್ದಾನೆಂದು ಆರೋಪಿ ಶಿಕ್ಷೆ ಕಡಿತಗೊಳಿಸಿದ ಕೋರ್ಟ್

    ಭೋಪಾಲ್: ಅತ್ಯಾಚಾರಕ್ಕೀಡಾದ ಸಂತ್ರಸ್ತೆಯನ್ನು ಕೊಲ್ಲದೇ ಜೀವಂತವಾಗಿ ಉಳಿಸಿ ದಯೆ ತೋರಿದ್ದಾನೆ ಎಂಬ ಹಿನ್ನೆಲೆಯಲ್ಲಿ ಮಧ್ಯಪ್ರದೇಶ ಹೈಕೋರ್ಟಿನ (Madhya Pradesh High Court) ಇಂದೋರ್ ಪೀಠವು ಇತ್ತೀಚೆಗೆ ಅತ್ಯಾಚಾರ ಅಪರಾಧಿಯೋರ್ವನಿಗೆ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು 20 ವರ್ಷಗಳ ಕಠಿಣ ಜೈಲು (Jail) ಶಿಕ್ಷೆಗೆ ಇಳಿಸಿದೆ.

    ನ್ಯಾಯಮೂರ್ತಿಗಳಾದ (Justices) ಸುಬೋಧ್ ಅಭ್ಯಂಕರ್ ಮತ್ತು ಸತ್ಯೇಂದ್ರ ಕುಮಾರ್ ಸಿಂಗ್ ಅವರಿದ್ದ ದ್ವಿಸದಸ್ಯ ಪೀಠವು ಶಿಕ್ಷೆಯ ಪ್ರಮಾಣವನ್ನು ಕಡಿತಗೊಳಿಸಿ ತೀರ್ಪು ನೀಡಿದೆ. ಇದನ್ನೂ ಓದಿ: ನಿನ್ಮನೆ ಕಾಯ್ವಾಗ ನಿಂಗೆ NDRF ಯಾವ್ದು, SDRF ಯಾವ್ದು ಗೊತ್ತಿಲ್ಲ – ಅಧಿಕಾರಿ ವಿರುದ್ಧ ಸೋಮಣ್ಣ ಗರಂ

    ಮೇಲ್ಮನವಿಯನ್ನು ಭಾಗಶಃ ಅನುಮತಿಸಿದ ದ್ವಿಸದಸ್ಯ ಪೀಠವು, ಮಹಿಳೆಯರ ಘನತೆಯ ಬಗ್ಗೆ ಗೌರವವಿಲ್ಲ ಎಂದು ತೋರಿಸುವ 4 ವರ್ಷ ವಯಸ್ಸಿನ ಹೆಣ್ಣುಮಗುವಿನ ಮೇಲೆ ಪೈಶಾಚಿಕ ಕೃತ್ಯ ಎಸಗಿರುವುದು ರಾಕ್ಷಸ ಮನಸ್ಥಿತಿಯನ್ನು ತೋರಿಸುತ್ತದೆ. ಆದರೂ ಜೀವಾವಧಿ ಶಿಕ್ಷೆಗೆ ಈ ಪ್ರಕರಣ ಅರ್ಹವಲ್ಲ. ಸಂತ್ರಸ್ತೆಯನ್ನು ಜೀವಂತ ಬಿಟ್ಟು ದಯೆ ತೋರಿದ್ದಾನೆ. ಆ ಕಾರಣಕ್ಕೆ ಜೀವಾವಧಿ ಶಿಕ್ಷೆಯನ್ನು 20 ವರ್ಷಗಳ ಕಠಿಣ ಜೈಲು ಶಿಕ್ಷೆಗೆ ಇಳಿಸಬಹುದು ಎಂದು ಹೇಳಿದೆ.

    ಕ್ರಿಮಿನಲ್ ಮೇಲ್ಮನವಿಗೆ ಭಾಗಶಃ ಅನುಮತಿ ನೀಡಲಾಗಿದ್ದು ಮೇಲ್ಮನವಿದಾರರು ಕಾನೂನಿನ (Law) ಪ್ರಕಾರ 20 ವರ್ಷಗಳ ಜೈಲುವಾಸ ಅನುಭವಿಸಬೇಕು ಎಂದು ನ್ಯಾಯಾಲಯ ಸೂಚಿಸಿದೆ. ಇದನ್ನೂ ಓದಿ: ವೇದಿಕೆ ಮೇಲೆಯೇ ನೃತ್ಯಗಾರ್ತಿಯೊಂದಿಗೆ ರೊಮ್ಯಾನ್ಸ್ – ಪುರಸಭೆ ಕಾರ್ಯಕರ್ತ ಅಮಾನತು

    12 ವರ್ಷದೊಳಗಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಕ್ಕಾಗಿ ತನ್ನನ್ನು ದೋಷಿ ಎಂದು ಇಂದೋರ್‌ನ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರು ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಮೇಲ್ಮನವಿದಾರ ರಾಮು ಅಲಿಯಾಸ್ ರಾಮ್‌ಸಿಂಗ್ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ನ್ಯಾಯಾಲಯ ಈ ತೀರ್ಪು ನೀಡಿದೆ.

    court order law

    ಪ್ರಕರಣದಲ್ಲಿ ಅಪರಾಧಿಯು ಸಂತ್ರಸ್ತೆ ಗುಡಿಸಲಿನ ಬಳಿ ಟೆಂಟ್‌ನಲ್ಲಿ ವಾಸಿಸುತ್ತಿದ್ದನು. ಒಂದು ರೂಪಾಯಿ ಕೊಡುವ ನೆಪದಲ್ಲಿ ಸಂತ್ರಸ್ತೆಯನ್ನು ಆರೋಪಿ ಟೆಂಟ್‌ಗೆ ಕರೆದಿದ್ದಾನೆ. ಅಲ್ಲಿಯೇ ಬಾಲಕಿ ಮೇಲೆ ದೌರ್ಜನ್ಯ ಎಸಗಿದ್ದಾನೆ. ಬಳಿಕ ಸಂತ್ರಸ್ತೆ ಕೂಗು ಕೇಳಿ ಆಕೆಯ ತಂದೆ ಹಾಗೂ ಅಜ್ಜಿ ಸಹಾಯಕ್ಕೆ ಧಾವಿಸಿದ್ದಾರೆ. ಟೆಂಟ್ ಪ್ರವೇಶಿಸಿದಾಗ ಮಗು ರಕ್ತಸ್ರಾವವಾಗಿ ಬಿದ್ದಿರುವುದು ಹಾಗೂ ಅಪರಾಧಿ ಬೆತ್ತಲೆಯಾಗಿರುವುದನ್ನು ಕಂಡಿದ್ದಾರೆ. ಬಳಿಕ ಆತ ಓಡಿಹೋಗಿದ್ದಾನೆ. ನಂತರ ಬಾಲಕಿ ಇಡೀ ಘಟನೆಯ ಬಗ್ಗೆ ತಂದೆಗೆ ತಿಳಿಸಿದ್ದು, ಆಕೆಯನ್ನು ಪರೀಕ್ಷೆಗಾಗಿ ಆಸ್ಪತ್ರೆಗೆ (Hospital) ಕರೆದೊಯ್ದಾಗ, ವೈದ್ಯರು ಅತ್ಯಾಚಾರ ಆಗಿರುವುದನ್ನು ಖಚಿತಪಡಿಸಿದ್ದರು.

    ಬಳಿಕ ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯ್ದೆ 1989ರ ಸೆಕ್ಷನ್ 3(1)12ರ (SCST Act 1989) ಭಾರತೀಯ ದಂಡ ಸಂಹಿತೆಯ (IPC) ಅಡಿಯಲ್ಲಿ ಆರೋಪಿ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ನಂತರ ತನಿಖೆ ನಡೆಸಿ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು. ಇದು ವಿಚಾರಣಾ ನ್ಯಾಯಾಲಯಕ್ಕೆ ಬದ್ಧವಾಗಿತ್ತು. ಸಾಕ್ಷ್ಯವನ್ನು ದಾಖಲಿಸಿದ ನಂತರ ಮೇಲ್ಮನವಿದಾರನನ್ನು ಅಪರಾಧಿ ಎಂದು ಘೋಷಿಸಿ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು.

    Live Tv
    [brid partner=56869869 player=32851 video=960834 autoplay=true]