Tag: madikeri chalo

  • ಕೊಡಗಿನಲ್ಲಿ ಪ್ರತಿಭಟನೆಗೆ ಅವಕಾಶ ನೀಡಿದ್ರೆ ಪಕ್ಕಾ ಹೆಣ ಬೀಳುತ್ತೆ: ಜಗ್ಗೇಶ್

    ಕೊಡಗಿನಲ್ಲಿ ಪ್ರತಿಭಟನೆಗೆ ಅವಕಾಶ ನೀಡಿದ್ರೆ ಪಕ್ಕಾ ಹೆಣ ಬೀಳುತ್ತೆ: ಜಗ್ಗೇಶ್

    ತುಮಕೂರು: ಕೊಡಗಿನಲ್ಲಿ ಪ್ರತಿಭಟನೆಗೆ ಅವಕಾಶ ನೀಡಿದರೆ ಪಕ್ಕಾ ಹೆಣ ಬೀಳುತ್ತೆ. ಹೀಗಾಗಿ ಪ್ರತಿಭಟನೆಗೆ ಅವಕಾಶ ಕೊಟ್ಟು ಹೆಣ ಬಿದ್ದು ದೊಡ್ಡ ಗಲಾಟೆಯಾಗಲು ಯಾಕೆ ಅವಕಾಶ ನೀಡಬೇಕು ಎಂದು ರಾಜ್ಯಸಭಾ ಸದಸ್ಯ, ನಟ ಜಗ್ಗೇಶ್ ಪ್ರಶ್ನಿಸಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಷ್ಟು ಕೊಲೆ ನಡೆದಿದೆ ಗೊತ್ತಾ ನಿಮಗೆ. ಎಲ್ಲೆಲ್ಲಿಂದ ಬಂದು ಕೊಲೆ ಮಾಡಿದ್ದಾರೆ ಗೊತ್ತಾ..?. ಕೇರಳ ಗಡಿ ದಾಟಿ ಬಂದು ಕೊಲೆ ಮಾಡ್ತಾರೆ. ಅದಕ್ಕೆ ಸಾಕಷ್ಟು ಅವಕಾಶವಿದೆ. ಅದನ್ನು ಅವೈಡ್ ಮಾಡಬೇಕು ಎಂದರು. ಇದನ್ನೂ ಓದಿ: ಮಡಿಕೇರಿ ಚಲೋ ಕೈಬಿಟ್ಟ ಕಾಂಗ್ರೆಸ್ ನಿಲುವು ಸ್ವಾಗತಿಸಿದ ಮಾಜಿ ಸಿಎಂ ಬಿಎಸ್‍ವೈ

    ಕಾಂಗ್ರೆಸ್ ಕಾರ್ಯಕರ್ತನೇ ಮೊಟ್ಟೆ ಎಸೆದಿದ್ದಾನೆ. ಆತ ಯಾವುದೋ ವಿಚಾರಕ್ಕೆ ಬೇಸರಗೊಂಡು ಎಸೆದಿದ್ದಾನೆ. ಇದು ಜಗಜ್ಜಾಹೀರಾಗಿದೆ. ಆತನ ಸಂದೇಶಗಳನ್ನು ನೋಡಿದ್ದೇನೆ. ಆತ ನಾನು ಜೆಡಿಎಸ್ ನಲ್ಲಿದ್ದೆ ಆನಂತರ ಕಾಂಗ್ರೆಸ್ ಗೆ ಬಂದೆ ಅಂದಿದ್ದಾನೆ. ಇದೀಗ ಆತನನ್ನ ಅರೆಸ್ಟ್ ಮಾಡಲಾಗಿದೆ ಎಂದು ಹೇಳಿದರು. ಇದನ್ನೂ ಓದಿ: ನಾನು ಎಲ್ಲರೊಂದಿಗೆ ಅಡ್ಜಸ್ಟ್ ಆಗಿದ್ದರೆ, ನೀವ್ಯಾರು ಮುಖ್ಯಮಂತ್ರಿ ಆಗುತ್ತಿರಲಿಲ್ಲ: ಬಸನಗೌಡ ಯತ್ನಾಳ್

    ಕಾಂಗ್ರೆಸ್ ಹೋರಾಟ ನೆಕ್ಸ್ಟ್ ಜೂನ್ ವರೆಗೂ ಇರಬಹುದು. ಆಮೇಲೆ ಎಲ್ಲಾ ತಣ್ಣಾಗಿ ಬಿಡುತ್ತೆ. ರಾಜ್ಯದ ಜನತೆಗೆ ಗೊತ್ತಿದೆ ಯಾಕೆ ಈಗ ಪ್ರತಿಭಟನೆ ಆಗ್ತಿದೆ ಅಂತ. ಪ್ರತಿಯೊಬ್ಬರಿಗೂ ಆ ಜಾಗ ಹಿಡಿಯಬೇಕು ಎಂಬ ಹುಮ್ಮಸಿದೆ. ಬಟ್ ವಿಷಯಗಳಿಲ್ಲ, ವಿಷಯ ಇದ್ದಿದ್ದರೆ ಅದ್ಭುತ ಡಿಬೆಟ್ ನಡೆಯುತ್ತಿತ್ತು. ಡಿಬೆಟ್ ನಡೆಯದೇ ಬರೀ ಮೊಟ್ಟೆ ವಿಚಾರವೇ ಚರ್ಚೆ ನಡೆಯುತ್ತಿದೆ ಅಂದರೆ ಇಶ್ಯೂ ಇಲ್ಲ ಅಂತ ಜಗ್ಗೇಶ್ ತಿಳಿಸಿದರು.

    Live Tv
    [brid partner=56869869 player=32851 video=960834 autoplay=true]

  • ಮಡಿಕೇರಿ ಚಲೋ ಕೈಬಿಟ್ಟ ಕಾಂಗ್ರೆಸ್ ನಿಲುವು ಸ್ವಾಗತಿಸಿದ ಮಾಜಿ ಸಿಎಂ ಬಿಎಸ್‍ವೈ

    ಮಡಿಕೇರಿ ಚಲೋ ಕೈಬಿಟ್ಟ ಕಾಂಗ್ರೆಸ್ ನಿಲುವು ಸ್ವಾಗತಿಸಿದ ಮಾಜಿ ಸಿಎಂ ಬಿಎಸ್‍ವೈ

    ಮೈಸೂರು: ಮಡಿಕೇರಿ ಚಲೋ ಕೈ ಬಿಟ್ಟ ಕಾಂಗ್ರೆಸ್ ನಿಲುವನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸ್ವಾಗತಿಸಿದ್ದಾರೆ.

    ನಗರದಲ್ಲಿ ಈ ಕುರಿತು ಪ್ರತಿಕ್ರಿಯಿಸಿದ ಬಿಎಸ್‍ವೈ, ಶಾಂತಿ ವಾತಾವರಣ ಇದ್ದಾಗ ಎಷ್ಟು ಜನರನ್ನಾದರೂ ಸೇರಿಸಿ. ಶಾಂತಿ ಸುವ್ಯವಸ್ಥೆ ದೃಷ್ಟಿಯಿಂದ ಈ ನಿರ್ಧಾರ ಸ್ವಾಗತಾರ್ಹ. ಬಿಜೆಪಿ ಕಾರ್ಯಕರ್ತರು ಕೂಡ ಯಾವುದೇ ಕಾರ್ಯಕ್ರಮ ಮಾಡಬಾರದು ಎಂದು ಅವರು ಹೇಳಿದರು.

    ಸಿದ್ದರಾಮಯ್ಯ ಮೊಟ್ಟೆ ಎಸೆತ ಪ್ರಕರಣವನ್ನು ನೆಪ ಮಾಡಿಕೊಂಡು ಅನಗತ್ಯ ಗೊಂದಲ ಸೃಷ್ಟಿಸುತ್ತಿದ್ದಾರೆ. ಮೊಟ್ಟೆಯನ್ನು ಯಾರೇ ಎಸೆದಿದ್ದರೂ ಅದು ತಪ್ಪೇ. ಆದರೆ ಅದನ್ನೇ ನೆಪ ಮಾಡಿಕೊಂಡು ಪಾದಯಾತ್ರೆ ಹಮ್ಮಿಕೊಂಡಿದ್ದು ಕೂಡ ತಪ್ಪು ಎಂದರು. ಇದನ್ನೂ ಓದಿ: ಆಗಸ್ಟ್‌ 26ಕ್ಕೆ ಮಡಿಕೇರಿ ಚಲೋ ಇಲ್ಲ: ಸಿದ್ದರಾಮಯ್ಯ ಸ್ಪಷ್ಟನೆ

    ಸಾವರ್ಕರ್ ಸ್ವಾತಂತ್ರ್ಯ ಹೋರಾಟಗಾರ ಅಲ್ಲ ಎಂದು ಸಿದ್ದರಾಮಯ್ಯ ಟೀಕಿಸುತ್ತಿರುವುದು ಸರಿಯಲ್ಲ. ಯಾರಿಗೆ ಧರ್ಮ, ದೇಶದ ಪರಿಕಲ್ಪನೆ ಇರುವುದಿಲ್ಲವೋ ಅಂತಹವರು ಈ ರೀತಿ ಬೇಜವಾಬ್ದಾರಿತನದಿಂದ ಮಾತಾಡ್ತಾರೆ. ಸಾವರ್ಕರ್ ಕುರಿತು ಸಿದ್ದರಾಮಯ್ಯ ನೀಡುತ್ತಿರುವ ಹೇಳಿಕೆ ಅವರಿಗೆ ಶೋಭೆ ತರುವುದಿಲ್ಲ ಎಂದು ವಾಗ್ದಾಳಿ ನಡೆಸಿದರು.

    ಸಿದ್ದರಾಮಯ್ಯ ಇದೇ ರೀತಿ ಮುಂದುವರಿದರೆ ರಾಜ್ಯದ ಜನರು ತಕ್ಕ ಪಾಠ ಕಲಿಸಲಿದ್ದಾರೆ. ಆ ಕಾಲ ಬಹಳ ದೂರವಿಲ್ಲ. ಸಾವರ್ಕರ್ ಅವರ ದೇಶಭಕ್ತಿಯನ್ನು ಜನರಿಗೆ ಸಾರುವ ಸಲುವಾಗಿ ರಥಯಾತ್ರೆ ನಡೆಸುತ್ತಿದ್ದೇವೆ. ಹೆಚ್ಚಿನ ಜನರನ್ನು ಸೇರಿಸದೇ ಸಾವರ್ಕರ್ ರಥಯಾತ್ರೆ ನಡೆಸುತ್ತೇವೆ. ಶಾಂತಿಯುತವಾಗಿ ರಥಯಾತ್ರೆ ನಡೆಸುತ್ತೇವೆ ಎಂದರು.

    Live Tv
    [brid partner=56869869 player=32851 video=960834 autoplay=true]

  • ಆಗಸ್ಟ್‌ 26ಕ್ಕೆ ಮಡಿಕೇರಿ ಚಲೋ ಇಲ್ಲ: ಸಿದ್ದರಾಮಯ್ಯ ಸ್ಪಷ್ಟನೆ

    ಆಗಸ್ಟ್‌ 26ಕ್ಕೆ ಮಡಿಕೇರಿ ಚಲೋ ಇಲ್ಲ: ಸಿದ್ದರಾಮಯ್ಯ ಸ್ಪಷ್ಟನೆ

    ಬೆಂಗಳೂರು: ಆಗಸ್ಟ್‌ 26ಕ್ಕೆ ಕರೆ ನೀಡಿದ್ದ ಮಡಿಕೇರಿ ಚಲೋ ನಡೆಸುವುದಿಲ್ಲ. ವಿರೋಧ ಪಕ್ಷದ ನಾಯಕನಾಗಿ ನಾನು ಕಾನೂನು ಉಲ್ಲಂಘನೆ ಮಾಡಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

    ತಮ್ಮ ಕಾರಿಗೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಡಿಕೇರಿ ಚಲೋ ಮಾಡಲು ಜಿಲ್ಲಾಧಿಕಾರಿ, ಎಸ್‌ಪಿ ಅನುಮತಿ ಕೊಟ್ಟಿಲ್ಲ. ಈ ಸಂಬಂಧ ಪಕ್ಷದ ಶಾಸಕರು, ಅಧ್ಯಕ್ಷರ ಜೊತೆ ಚರ್ಚಿಸಿ ತೀರ್ಮಾನ ಮಾಡಿದ್ದೇವೆ. ಮಡಿಕೇರಿ ಚಲೋ ಮುಂದೂಡುತ್ತೇವೆ. ಕಾನೂನು ಉಲ್ಲಂಘನೆ ಮಾಡಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಮಡಿಕೇರಿ ಚಲೋಗೆ ನಿಷೇಧಾಜ್ಞೆ ಅಡ್ಡಿ – ಕಾಂಗ್ರೆಸ್‌ ಮುಂದಿನ ನಡೆ ಏನು?

    ಅತಿವೃಷ್ಟಿ ಹಾನಿ ಪರಿಶೀಲನೆಗೆ ಕೊಡಗಿಗೆ ಹೋಗಿದ್ದಾಗ ಕೆಲವರು ಕೋಳಿ ಮೊಟ್ಟೆ ಎಸೆದರು. ಆಗ ಪೊಲೀಸರು ಮಾತ್ರ ಸುಮ್ಮನೆ ನಿಂತಿದ್ದರು, ಏನೂ ಮಾಡಲಿಲ್ಲ. ನಮ್ಮ ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್‌ ಮಾಡಿದ್ರೆ ಹೊರತು ಬಿಜೆಪಿ, ಭಜರಂಗದಳ ಕಾರ್ಯಕರ್ತರ ಮೇಲೆ ಏನೂ ಕ್ರಮ ತೆಗೆದುಕೊಳ್ಳಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

    ಕೊಡಗಿಗೆ ಬರಲಿ ನಾವು ನೋಡ್ಕೋತೀವಿ ಅಂತಾ ಬೋಪಯ್ಯ ಹೇಳ್ತಾರೆ. ನಾವೇನು ಸ್ವಾತಂತ್ರ್ಯ ಭಾರತದಲ್ಲಿ ಇದ್ದೇವಾ? ನನಗೆ ಸವಾಲು ಹಾಕ್ತಾರೆ ಇವರು. ರೆಡ್ಡಿ ಬ್ರದರ್ಸ್ ಹೀಗೆ ಸವಾಲು ಹಾಕಿ ಅವರ ಆಟಾಟೋಪದ ವಿರುದ್ಧ ಪಾದಯಾತ್ರೆ ಮಾಡಿದ್ವಿ. ಬಿಜೆಪಿ ಜನಜಾಗೃತಿ ಸಮಾವೇಶ ಮಾಡಲು ಹೊರಟಿದ್ದು ದ್ವೇಷದಿಂದ. ನಾನು ಮಡಿಕೇರಿ ಚಲೋ ಘೋಷಣೆ ಮಾಡಿದ ಬಳಿಕ ಅದರ ಮಾರನೇ ದಿನ ಬಿಜೆಪಿ ಅವರು ಘೋಷಣೆ ಮಾಡಿದ್ರು. ನಮ್ಮ ಮೇಲೆ ಕುಟಿಲ ಪ್ರಯತ್ನ ಮಾಡಿ ಷಡ್ಯಂತ್ರ ಮಾಡಿದ್ದಾರೆ ಎಂದು ಟೀಕಿಸಿದರು. ಇದನ್ನೂ ಓದಿ: ಸಾವರ್ಕರ್ ರಥಯಾತ್ರೆಗೆ ಬಿಎಸ್‌ವೈ ಚಾಲನೆ- ಸಿದ್ದರಾಮಯ್ಯಗೆ ಠಕ್ಕರ್ ಕೊಡಲು ಬಿಜೆಪಿ ಪ್ಲ್ಯಾನ್

    ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣವನ್ನೇ ಮುಂದಿಟ್ಟುಕೊಂಡು ಎಸ್‌ಪಿ ಕಚೇರಿಗೆ ಮುತ್ತಿಗೆ ಹಾಕಲು ಕಾಂಗ್ರೆಸ್ಸಿನ ʼಮಡಿಕೇರಿ ಚಲೋʼಗೆ ಕೊಡಗು ಜಿಲ್ಲಾಡಳಿತ ಬ್ರೇಕ್‌ ಹಾಕಿದೆ. ಕಾನೂನು ಸುವ್ಯವಸ್ಥೆಯ ಕಾರಣ ನೀಡಿ ಜಿಲ್ಲಾಡಳಿತ ಬುಧವಾರದಿಂದ ಶುಕ್ರವಾರದವರೆಗೆ ನಿಷೇಧಾಜ್ಞೆ ಜಾರಿ ಮಾಡಿದೆ. ಈ ಹಿನ್ನೆಲೆ ಮಡಿಕೇರಿ ಚಲೋ ನಡೆಸುವುದಿಲ್ಲ ಎಂದು ಕಾಂಗ್ರೆಸ್‌ ಸ್ಪಷ್ಟಪಡಿಸಿದೆ.

    Live Tv
    [brid partner=56869869 player=32851 video=960834 autoplay=true]