Tag: Madikeri Police

  • ದಸರಾ ದಶಮಂಟಪಗಳ ಶೋಭಯಾತ್ರೆಯಲ್ಲಿ ನಿಯಮ ಉಲ್ಲಂಘಿಸಿ ಡಿಜೆ ಬಳಕೆ – 62 ಮಂದಿ ವಿರುದ್ಧ ಕೇಸ್‌

    ದಸರಾ ದಶಮಂಟಪಗಳ ಶೋಭಯಾತ್ರೆಯಲ್ಲಿ ನಿಯಮ ಉಲ್ಲಂಘಿಸಿ ಡಿಜೆ ಬಳಕೆ – 62 ಮಂದಿ ವಿರುದ್ಧ ಕೇಸ್‌

    ಮಡಿಕೇರಿ: ಮಡಿಕೇರಿ ದಸರಾಕ್ಕೆ (Madikeri Dasara) ವಿದ್ಯುಕ್ತವಾಗಿ ತೆರೆ ಬಿದ್ದು ನಾಲ್ಕು 5 ದಿನ ಕಳೆದರು ಇಂದಿನ ದಸರಾದ ದಶಮಂಟಪಗಳ ಸಮಿತಿಯ ಸದಸ್ಯರು ಗೊಂದಲಕ್ಕೆ ಸಿಲುಕಿದ್ದಾರೆ. ನ್ಯಾಯಾಲಯದ ಆದೇಶವನ್ನ ಸಮಿತಿಯ ಸದಸ್ಯರು ಉಲ್ಲಂಘನೆ ಮಾಡಿದ್ದಾರೆ ಎಂದು ಪೊಲೀಸರೇ ಸ್ವಯಂ ಪ್ರೇರಿತವಾಗಿ ಸಮಿತಿಯ ಸುಮಾರು 62 ಮಂದಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಹೀಗಾಗಿ ದಶಮಂಟಪಗಳ ಸಮಿತಿಯ ಸದಸ್ಯರು ಪೊಲೀಸ್ (Madikeri Police) ಇಲಾಖೆಯ ವಿರುದ್ಧ ಆಕ್ರೋಶ ಹೋರ ಹಾಕುತ್ತಿದ್ದಾರೆ‌.

    ಐತಿಹಾಸಿಕ ಮಡಿಕೇರಿ ದಸರಾಕ್ಕೆ ವರ್ಣರಂಜಿತವಾಗಿ ತೆರೆ ಬಿದ್ದಿದೆ. ಪ್ರತಿ ವರ್ಷ ದಸರಾ ಸಂದರ್ಭದಲ್ಲಿ ರಾಜ್ಯದ ನಾನಾ ಭಾಗಗಳಿಂದ ಮಡಿಕೇರಿ ದಸರಾಕ್ಕೆ ಆಗಮಿಸುವ ಲಕ್ಷಾಂತರ ಪ್ರವಾಸಿಗರು ದಶ ದೇವಾಲಯಗಳಿಂದ ಸಿದ್ಧ ಪಡಿಸುವ ಪೌರಾಣಿಕ ಕಥಾ ಸಾರಾಂಶ ನೋಡಲು ಆಗಮಿಸುತ್ತಾರೆ. ಅಲ್ಲದೇ ಡಿಜೆ‌ ಸೌಂಡ್‌ಗೆ ಹೆಜ್ಜೆ ಹಾಕಿ ಖುಷಿ ಪಡುತ್ತಾರೆ. ಆದರೆ ಈ ಬಾರಿ ಮಡಿಕೇರಿ ದಸರಾಕ್ಕೆ ಡಿಜೆ ಬಳಸಬಾರದು ಎಂದು ಪೊಲೀಸ್ ಇಲಾಖೆ ಮೊದಲೇ ಸೂಚಿಸಿತ್ತು. ಅದರಂತೆ ದಶಮಂಟಪ ಸಮಿತಿ ಸದಸ್ಯರೂ ಕೂಡ ನಡೆದುಕೊಂಡಿದ್ದರು. ಆದರೆ ದೇವಾಲಯಗಳ ಪೌರಾಣಿಕ ಕಥಾ ಸಾರಾಂಶ ಪ್ರಸ್ತುತ ಪಡಿಸುವ ವೇಳೆಯಲ್ಲಿ ಧ್ವನಿವರ್ಧಕದ ಶದ್ಧ ಸ್ವಲ್ಪ ಜಾಸ್ತಿ ಮಾಡಬೇಕಾಗುತ್ತದೆ ಎಂದು ಕೇಳಿಕೊಂಡಿದ್ದರು. ಆದಾಗ್ಯೂ ದಸರಾ ಮುಗಿದ ಬಳಿಕ ದೇವಾಲಯ ಸಮಿತಿ ಸದಸ್ಯರಿಗೆ ಪೊಲೀಸರು ಶಾಕ್ ನೀಡಿದ್ದಾರೆ.

    ರಾತ್ರಿ 10 ಗಂಟೆ ನಂತರ ಸಾರ್ವಜನಿಕ ಸ್ಥಳದಲ್ಲಿ ಹೆಚ್ಚಿನ ಪ್ರಮಾಣದ ಧ್ವನಿವರ್ಧಕ ಬಳಸಬಾರದೆಂಬ ನ್ಯಾಯಾಲಯದ ಆದೇಶ ಉಲ್ಲಂಘಿಸಿ ಅ.2 ರಂದು ದಶಮಂಟಪ ಶೋಭಾಯಾತ್ರೆ ವೇಳೆ ಧ್ವನಿವರ್ಧಕ ಬಳಸಲಾಗಿದೆ ಎಂದು ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ಮಡಿಕೇರಿ ನಗರದ ಪೇಟೆ ಶ್ರೀರಾಮಮಂದಿರ, ದೇಚೂರು ಶ್ರೀರಾಮ ಮಂದಿರ. ದಂಡಿನ ಮಾರಿಯಮ್ಮ, ಕಂಚಿ ಕಾಮಾಕ್ಷಿ, ಕೋದಂಡ ರಾಮ ದೇವಾಲಯ ಮಂಟಪ ಸಮಿತಿಗಳ ತಲಾ 6 ಮಂದಿ, ಕರವಲೆ ಭಗವತಿ, ಕೋಟೆ ಮಾರಿಯಮ್ಮ ಮಂಟಪ ಸಮಿತಿಗಳ ತಲಾ 7 ಮಂದಿ, ಕೋಟೆ ಗಣಪತಿಯ 8 ಮಂದಿ ಚೌಡೇಶ್ವರಿ ಹಾಗೂ ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಾಲಯ ಮಂಟಪ ಸಮಿತಿಯ ತಲಾ 5 ಮಂದಿ ವಿರುದ್ಧ ಸೆಕ್ಷನ್ 37, 109, ಅಡಿ ಪ್ರಕರಣಗಳು ದಾಖಲಾಗಿವೆ.

    ಇದರಿಂದ ಸಮಿತಿ ಸದಸ್ಯರು ಪೊಲೀಸರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಪ್ರಕರಣ ರದ್ದುಗೊಳಿಸದಿದ್ದರೆ, ಮುಂದಿನ ದಿನಗಳಲ್ಲಿ ತಕ್ಕ ಉತ್ತರ ಕೊಡಬೇಕಾಗುತ್ತದೆ. ಪ್ರತಿಭಟನೆ ಕೂಡ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

  • ಕೊಡಗಿನಲ್ಲಿ ಬಾಂಗ್ಲಾ ನುಸುಳುಕೋರರ ಆತಂಕ – ಕಾರ್ಮಿಕರ ಮೇಲೆ ನಿಗಾ ವಹಿಸುವಂತೆ ಎಚ್ಚರಿಕೆ

    ಕೊಡಗಿನಲ್ಲಿ ಬಾಂಗ್ಲಾ ನುಸುಳುಕೋರರ ಆತಂಕ – ಕಾರ್ಮಿಕರ ಮೇಲೆ ನಿಗಾ ವಹಿಸುವಂತೆ ಎಚ್ಚರಿಕೆ

    ಮಡಿಕೇರಿ: ಕಳೆದ ಹಲವು ತಿಂಗಳಿನಿಂದ ಕೊಡಗು (Kodagu) ಜಿಲ್ಲೆಗೆ ಆಗಮಿಸುತ್ತಿರುವ ಅಸ್ಸಾಂ ಮೂಲದ ಕಾರ್ಮಿಕರ ಸಂಖ್ಯೆ ಹೆಚ್ಚಾಗಿದ್ದು, ಈ ಪೈಕಿ ಕೆಲವು ಬಾಂಗ್ಲಾ ನುಸುಳುಕೋರರು (Bangladeshi Infiltrators) ಇದ್ದಾರೆ ಅನ್ನೋ ಶಂಕೆ ವ್ಯಕ್ತವಾಗಿದೆ.

    ಹೌದು. ಕೊಡಗು ಜಿಲ್ಲೆಯ ಮಡಿಕೇರಿ, ಸುಂಟಿಕೊಪ್ಪ, ಕುಶಾಲನಗರ, ವಿರಾಜಪೇಟೆ, ಗೋಣಿಕೊಪ್ಪಲು, ನಾಪೋಕ್ಲು ಸೇರಿದಂತೆ ಕೊಡಗಿನ ಪ್ರಮುಖ ಪಟ್ಟಣಗಳಲ್ಲಿ ನಡೆಯುವ ವಾರದ ಸಂತೆಗಳಲ್ಲಿ ಹೊಸ ಮುಖಗಳೇ ಹೆಚ್ಚಾಗಿ ಕಂಡುಬರುತ್ತಿವೆ. ಸಂತೆಗಳಲ್ಲಿ ವ್ಯಾಪಾರ ಮಾಡುವುದರಿಂದ ಆರಂಭಿಸಿ ಹೋಂ ಸ್ಟೇ, ರೆಸಾರ್ಟ್ ಗಳಲ್ಲಿ ರೂಮ್ ಬಾಯ್ ತನಕವೂ ಹೊರ ರಾಜ್ಯದ ಕಾರ್ಮಿಕರೇ ಹೆಚ್ಚಾಗಿ ಕಂಡುಬರುತ್ತಿದ್ದಾರೆ. ಇತ್ತೀಚೆಗೆ ಕೆಲವು ಅಪರಾಧ ಪ್ರಕರಣಗಳಲ್ಲೂ ಹೊರ ರಾಜ್ಯದವರೇ ಕಾಣಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ನಿಗಾ ವಹಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ. ದನ್ನೂ ಓದಿ: ರಾಷ್ಟ್ರೀಯ ಮಟ್ಟದ ಐಸ್ ಸ್ಕೇಟಿಂಗ್‌ನಲ್ಲಿ ಮಂಗಳೂರಿನ ಅಣ್ಣ-ತಂಗಿ ಪದಕಗಳ ಸಾಧನೆ

    ಕೊಡಗಿಗೆ ಬರುವ ವಲಸೆ ಕಾರ್ಮಿಕರು ಜಿಲ್ಲಾದ್ಯಂತ ಚದುರಿ ಹೋಗುತ್ತಿದ್ದಾರೆ. ಇದರಿಂದ ಅಕ್ರಮ ವಲಸಿಗರನ್ನು ಪತ್ತೆ ಮಾಡುವುದು ಕಷ್ಟವಾಗುತ್ತಿದೆ. ಹೀಗಾಗಿ ಕೆಲಸ ನೀಡುವ ಕಾಫಿ ತೋಟದ ಮಾಲೀಕರು, ಕಾರ್ಮಿಕರನ್ನು ಕರೆ ತರುವ ದಲ್ಲಾಳಿಗಳು ಆಯಾ ಕಾರ್ಮಿಕರ ಪೂರ್ವಾಪರ ವಿಚಾರಿಸಿ ಬಳಿಕ ಕೆಲಸಕ್ಕೆ ನೇಮಿಸಿಕೊಳ್ಳುವಂತೆ ಎಚ್ಚರಿಸಿದ್ದಾರೆ.

    ಒಂದು ವೇಳೆ ಅನುಮಾನಾಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ಕೂಡಲೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡುವಂತೆ ಕೊಡಗು ಎಸ್ಪಿ ರಾಮರಾಜನ್ ಮನವಿ ಮಾಡಿದ್ದಾರೆ. ದನ್ನೂ ಓದಿ: ಎಎಸ್‌ಪಿ ನಾರಾಯಣ ಬರಮಣ್ಣಿ ಅವ್ರಿಗೆ ಮತ್ತೆ ಪೋಸ್ಟಿಂಗ್ ಮಾಡ್ತೇವೆ: ಪರಮೇಶ್ವರ್

  • 10 ಕೋಟಿ ರೂಪಾಯಿ ಮೌಲ್ಯದ ತಿಮಿಂಗಿಲ ವಾಂತಿ ವಶ – 10 ಮಂದಿ ಅರೆಸ್ಟ್‌

    10 ಕೋಟಿ ರೂಪಾಯಿ ಮೌಲ್ಯದ ತಿಮಿಂಗಿಲ ವಾಂತಿ ವಶ – 10 ಮಂದಿ ಅರೆಸ್ಟ್‌

    ಮಡಿಕೇರಿ: ಸುಮಾರು 10 ಕೋಟಿ ರೂ. ಮೌಲ್ಯದ ತಿಮಿಂಗಿಲ ವಾಂತಿ (Ambergris) ವಶಪಡಿಸಿಕೊಂಡು 10 ಮಂದಿಯನ್ನು ಬಂಧಿಸಿರುವ ಘಟನೆ ಕೊಡಗು ಜಿಲ್ಲೆ (Kodagu District) ವಿರಾಜಪೇಟೆ ತಾಲ್ಲೂಕಿನ ಬೇಟೋಳಿ ಗ್ರಾಮದಲ್ಲಿ ನಡೆದಿದೆ.

    ಕೇರಳದ ತಿರುನಂತಪುರಂನಿಂದ ತಂದು ಆಂಧ್ರಪ್ರದೇಶ ಅಥವಾ ಬೆಂಗಳೂರಿನಲ್ಲಿ (Bengaluru) ಮಾರಾಟ ಮಾಡಲು ಯತ್ನಿಸಿದ್ದ ಆರೋಪಿಗಳನ್ನು ವಿರಾಜಪಟೇಟೆ ಪೊಲೀಸರು (Virajpet Police) ಬಂಧಿಸಿದ್ದಾರೆ. ಬಳಿಕ ಬಂಧಿತರಿಂದ 10 ಕೋಟಿ ರೂ. ಮೌಲ್ಯದ 10 ಕೆ.ಜಿ 390 ಗ್ರಾಂ ತೂಕದ ತಿಮಿಂಗಿಲ ವಾಂತಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

    ಸ್. ಶಂಶುದ್ದೀನ್ (45), ಎಂ.ನವಾಜ್ (54 ವರ್ಷ), ವಿ.ಕೆ ಲತೀಶ್ (53), ಜೇಶ್.ವಿ (40), ಪ್ರಶಾಂತ್.ಟಿ (52), ಎ.ವಿ ಶಂಶುದ್ದೀನ್ (48), ಬಾಲಚಂದ್ರನಾಯಕ್ (55), ಕೆ.ಕೆ ಜೋಬಿಸ್ (33) ವರ್ಷ ಬಂಧಿತ ಆರೋಪಿಗಳು. ಇದನ್ನೂ ಓದಿ: ಗುತ್ತಿಗೆದಾರರು ಕಮಿಷನ್ ಆರೋಪದ ಸಾಕ್ಷಿ ಕೊಟ್ಟರೆ ತನಿಖೆ ಮಾಡಿಸುತ್ತೇವೆ – ಕೃಷ್ಣಬೈರೇಗೌಡ

    ತಿಮಿಂಗಿಲ ವಾಂತಿಗೆ ಯಾಕಿಷ್ಟು ಬೇಡಿಕೆ?
    ಅಂಬರ್ ಗ್ರೀಸ್ ಅಥವಾ ತಿಮಿಂಗಿಲ ವಾಂತಿ ಎನ್ನುವುದು ಮೇಣದಂಥ ವಸ್ತುವಾಗಿದ್ದು, ಇದನ್ನ ಸುಗಂಧ ದ್ರವ್ಯಗಳ ತಯಾರಿಕೆಯಲ್ಲಿ ಬಳಸಲಾಗುತ್ತದೆ. ಕಚ್ಚಾವಸ್ತುವಾಗಿದ್ದಾಗಲೂ ಅಂಬರ್ ಗ್ರೀಸ್ ಕೊಂಚ ಸುವಾಸನೆ ಬೀರುವಂಥದ್ದಾಗಿರುತ್ತದೆ. ಕೆಲವು ದೇಶಗಳಲ್ಲಿ ಕಾಮೋತ್ತೇಜಕ ವಸ್ತುಗಳ ತಯಾರಿಕೆಯಲ್ಲೂ ಇದನ್ನ ಬಳಸಲಾಗುತ್ತದೆ.  ಇದನ್ನೂ ಓದಿ: ಮುಂದಿನ ದಿನಗಳಲ್ಲಿ ಭಾರೀ ಇಳಿಕೆಯಾಗಲಿದೆ ಟಿವಿ, ಫ್ರಿಡ್ಜ್‌, ಮೊಬೈಲ್‌ ಬೆಲೆ!

    ತಿಮಿಂಗಿಲ ವಾಂತಿ ಸಿಗುವುದು ಬಹಳ ಅಪರೂಪ. ಏಕೆಂದರೆ, ತಿಮಿಂಗಿಲಗಳು ಸಮುದ್ರದಲ್ಲಿ ವಾಂತಿ ಮಾಡಿಕೊಳ್ಳುವುದು ಅಪರೂಪ ಹಾಗೂ ಅವು ಜನಸಾಮಾನ್ಯರಿಗೆ ಸಿಗುವುದು ತುಂಬಾ ವಿರಳ. ಹಾಗಾಗಿ ಈ ವಸ್ತುವಿಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಭಾರೀ ಬೇಡಿಕೆಯಿದೆ. ಆದರೆ ಕಳ್ಳಸಾಗಣೆದಾರರು ಅಂಬರ್ ಗ್ರೀಸ್‌ಗಾಗಿ ಸಮುದ್ರಗಳಿಗೆ ದಾಂಗುಡಿ ಇಡುವುದನ್ನು ತಪ್ಪಿಸಲು ಬಹುತೇಕ ದೇಶಗಳು ಇದರ ಮಾರಾಟ ನಿಷೇಧಿಸಿವೆ. ಹಾಗಾಗಿ ಇದು ಕಳ್ಳಸಾಗಣೆಯಾಗುತ್ತಿದೆ.  ಇದನ್ನೂ ಓದಿ: ಕೋಟ್ಯಂತರ ರೂಪಾಯಿ ಮೌಲ್ಯದ ತಿಮಿಂಗಿಲ ವಾಂತಿ ವಶ – ಇಬ್ಬರು ಅರೆಸ್ಟ್‌

  • ಯೇಸುವಿನ ಕುರಿತು ಅವಹೇಳನ – ಕೊಡಗಿನ ವಿವಿಧ ಪೊಲೀಸ್‌ ಠಾಣೆಗಳಲ್ಲಿ ದೂರು ದಾಖಲು

    ಯೇಸುವಿನ ಕುರಿತು ಅವಹೇಳನ – ಕೊಡಗಿನ ವಿವಿಧ ಪೊಲೀಸ್‌ ಠಾಣೆಗಳಲ್ಲಿ ದೂರು ದಾಖಲು

    ಮಡಿಕೇರಿ: ಯೇಸುಕ್ರಿಸ್ತನ (Jesus) ಕುರಿತು ಸಾಮಾಜಿಕ ಜಾಲತಾಣಗಳಲ್ಲಿ (Social Media) ಅವಹೇಳನ ಮಾಡಿದ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಿ ಕ್ರಮ ಕೈಗೊಳ್ಳಬೇಕೆಂದು ಇಲ್ಲಿನ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್‌ ಸಂಸ್ಥೆ ಆಗ್ರಹಿಸಿದೆ. ಅಲ್ಲದೇ ಸಂಸ್ಥೆಯ ತಾಲೂಕು ಘಟಕಗಳು ಕೊಡಗು (Kodagu) ಜಿಲ್ಲೆಯ ವಿವಿಧ ಪೊಲೀಸ್‌ ಠಾಣೆಗಳಲ್ಲಿ ದೂರು ದಾಖಲಿಸಿವೆ.

    ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್‌ನ ಮಡಿಕೇರಿ ನಗರ, ಕುಶಾಲನಗರ, ವಿರಾಜಪೇಟೆ ಮತ್ತು ಸೋಮವಾರಪೇಟೆ ಘಟಕಗಳು ಆಯಾ ವ್ಯಾಪ್ತಿಯ ಪೊಲೀಸ್‌ ಠಾಣೆಗಳಲ್ಲಿ ದೂರು ದಾಖಲಿಸಿ ಕಠಿಣ ಕ್ರಮಕ್ಕೆ ಒತ್ತಾಯಿಸಿವೆ. ಇದನ್ನೂ ಓದಿ: ನಕಲಿ ಕಾಂಗ್ರೆಸ್ ನೀತಿ ವಿರುದ್ಧ ನಾಳೆ ಮಹಾತ್ಮ ಗಾಂಧಿ ಪ್ರತಿಮೆ ಮುಂದೆ ಧರಣಿ: ಬಿ.ವೈ.ವಿಜಯೇಂದ್ರ

    ಈ ಕುರಿತು ʻಪಬ್ಲಿಕ್‌ ಟಿವಿʼ ಜೊತೆಗೆ ಮಾತನಾಡಿರುವ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್‌ನ (Roman Catholic Association) ಜಿಲ್ಲಾಧ್ಯಕ್ಷ ಜಾನ್ಸನ್ ಪಿಂಟೋ, ಕೆಲವು ಕಿಡಿಗೇಡಿಗಳು ಯೇಸುಕ್ರಿಸ್ತನಿಗೆ ಅವಹೇಳನ ಮಾಡಿ ಕ್ರೈಸ್ತ ಸಮುದಾಯದ ಭಾವನೆಗೆ ಧಕ್ಕೆಯುಂಟು ಮಾಡಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಪೂಂಚ್‍ನಲ್ಲಿ ಸೇನಾ ವಾಹನ ಅಪಘಾತದಲ್ಲಿ ಹುತಾತ್ಮರಾಗಿದ್ದ ರಾಜ್ಯದ ಮೂವರು ಯೋಧರಿಗೆ ಕಣ್ಣೀರ ವಿದಾಯ  

    ಸಾವಿರಾರು ವರ್ಷಗಳಿಂದ ಕ್ರಿಸ್‌ಮಸ್‌ ಹಬ್ಬವನ್ನ ಶಾಂತಿಯುತವಾಗಿ ಆಚರಿಸಿಕೊಂಡು ಬರಲಾಗುತ್ತಿದೆ. ಆದ್ರೆ ಕಿಡಿಗೇಡಿಗಳು ಜಾಲತಾಣದಲ್ಲಿ ಕ್ರಿಸ್ಮಸ್‌ ಹಬ್ಬ ಹಾಗೂ ಯೇಸುವಿನ ಕುರಿತು ಅಗೌರವ ಪೋಸ್ಟ್‌ ಮಾಡಿರುವುದಲ್ಲದೇ, ಕೀಳು ಪದಗಳನ್ನ ಬಳಸಿ ನಿಂದಿಸಿದ್ದಾರೆ. ಇದು ಸಮಾಜದಲ್ಲಿ ಅಶಾಂತಿ ಮೂಡಿಸುವ ಪ್ರಯತ್ನವಾಗಿದೆ. ಹಾಗಾಗಿ ಪೊಲೀಸರು ತಪ್ಪಿತಸ್ಥರನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ, ಕ್ರೈಸ್ತರು ಒಗ್ಗೂಡಿ ಜಿಲ್ಲಾದ್ಯಂತ ಹೋರಾಟ ನಡೆಸಲಿದ್ದೇವೆ ಎಂದು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಸಿರಿಯಾದಲ್ಲಿ ಬಿಕ್ಕಟ್ಟು – ಅಲ್ಲೋಲ ಕಲ್ಲೋಲ ಎಬ್ಬಿಸಿದೆ ಆಕೆಯ ಒಂದು ವೀಡಿಯೋ; ದೊಡ್ಡಣ್ಣನ ಕುತಂತ್ರದಿಂದ ಹೀಗಾಯ್ತಾ?

  • ಮಡಿಕೇರಿ-ಗೋಣಿಕೊಪ್ಪ ದಸರಾಗೆ ಬಿಗಿ ಬಂದೋಬಸ್ತ್ – ಭದ್ರತೆಗೆ 2,000 ಸಾವಿರ ಪೊಲೀಸರ ನಿಯೋಜನೆ

    ಮಡಿಕೇರಿ-ಗೋಣಿಕೊಪ್ಪ ದಸರಾಗೆ ಬಿಗಿ ಬಂದೋಬಸ್ತ್ – ಭದ್ರತೆಗೆ 2,000 ಸಾವಿರ ಪೊಲೀಸರ ನಿಯೋಜನೆ

    ಮಡಿಕೇರಿ: ವಿಜಯದಶಮಿ (Vijayadashami) ಪ್ರಯುಕ್ತ ಇದೇ ಅ.12ರಂದು ಮಡಿಕೇರಿ (Madikeri) ಹಾಗೂ ಗೋಣಿಕೊಪ್ಪದಲ್ಲಿ ನಡೆಯಲಿರುವ ಮಂಟಪಗಳ ಶೋಭಾಯಾತ್ರೆ ಸುಸೂತ್ರವಾಗಿ ನೆರವೇರಲು ಒಟ್ಟು ಸುಮಾರು 2,000 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿ ಸೂಕ್ತ ಬಂದೋಬಸ್ತ್ ಕಲ್ಪಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಮಾಹಿತಿ ನೀಡಿದ್ದಾರೆ.

    80 ಪಿಎಸ್‌ಐ, 126 ಎಎಸ್‌ಐ, 975 ಕಾನ್ಸ್‌ಸ್ಟೇಬಲ್‌ ಹಾಗೂ ಹೆಡ್‌ ಕಾನ್ಸ್‌ಟೇಬಲ್ಸ್‌, 360 ಹೋಂ ಗಾರ್ಡ್ಸ್ ಸೇರಿದಂತೆ ಒಟ್ಟು 2,000 ಪೊಲೀಸ್ ಸಿಬ್ಬಂದಿ, ಮಡಿಕೇರಿ – ಗೋಣಿಕೊಪ್ಪ ದಸರಾದಲ್ಲಿ (Madikeri Gonikoppa Dasara) ಅಹಿತಕರ ಘಟನೆಗಳು ನಡೆಯದಂತೆ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಿದ್ದಾರೆ. ಕಳೆದ ದಸರಾದಲ್ಲಿ ನಡೆದಂತಹ ಸಣ್ಣಪುಟ್ಟ ಲೋಪಗಳನ್ನು ಈ ಬಾರಿ ಸರಿಪಡಿಸಿಕೊಂಡು ಇಲಾಖೆ ಕಾರ್ಯನಿರ್ವಹಿಸಲಿದೆ ಎಂದಿದ್ದಾರೆ. ಇದನ್ನೂ ಓದಿ: ಪಕ್ಷದ ಶಿಸ್ತು ಉಲ್ಲಂಘಿಸಿದ್ದು ಸಾಬೀತಾದ್ರೆ ಸಚಿವ ಸ್ಥಾನದಿಂದ ವಜಾ ಮಾಡುವಂತೆ ಎಐಸಿಸಿ ಸೂಚನೆ: ಸಿಎಂ

    ಮಡಿಕೇರಿ ದಸರಾಗೆ 1.5 ಲಕ್ಷ ಮಂದಿ ಆಗಮಿಸುವ ನಿರೀಕ್ಷೆಯಿದೆ. ಮಹಿಳೆಯರು ಹಾಗೂ ಮಕ್ಕಳ ರಕ್ಷಣೆ, ಟ್ರಾಫಿಕ್ ನಿರ್ವಹಣೆ ಹಾಗೂ ಪಾರ್ಕಿಂಗ್ ವ್ಯವಸ್ಥೆಗಳ ಮೇಲೆ ಹೆಚ್ಚಿನ ನಿಗಾ ವಹಿಸಲಾಗುತ್ತದೆ. ಈ ನಿಟ್ಟಿನಲ್ಲಿ ವಿಶೇಷ ತಂಡಗಳನ್ನು ರಚಿಸಿ ಪೊಲೀಸ್ ಇಲಾಖೆ ಕಾರ್ಯ ನಿರ್ವಹಿಸಲಿದೆ ಎಂದು ಮಾಹಿತಿ ನೀಡಿದ್ದಾರೆ.

    ನಗರದಲ್ಲಿನ ನಿರ್ಜನ ಪ್ರದೇಶಗಳಲ್ಲಿ, ಹೆಚ್ಚಾಗಿ ಹೊರವಲಯದಲ್ಲಿ ಅಪರಾಧ ಚಟುವಟಿಕೆಗಳನ್ನು ತಡೆಯಲು ಪೊಲೀಸ್ ಜೀಪ್ ಹಾಗೂ ಚೀತಾ ದ್ವಿಚಕ್ರ ವಾಹನಗಳನ್ನು ಪೊಲೀಸ್ ಸಿಬ್ಬಂದಿ ಬಳಸಿ ಗಸ್ತು ನಡೆಸಲಿದ್ದಾರೆ. ಶೋಭಾಯಾತ್ರೆ ವೀಕ್ಷಿಸಲು ಆಗಮಿಸುವ ಸಾರ್ವಜನಿಕರು, ಸುರಕ್ಷತಾ ದೃಷ್ಟಿಯಿಂದ ಹಳೆಯ ಮತ್ತು ಸುರಕ್ಷಿತವಲ್ಲದ ಕಟ್ಟಡ ಏರದಂತೆ ಎಸ್ಪಿ ಮನವಿ ಮಾಡಿದ್ದಾರೆ. ಕಟ್ಟಡದ ಮಾಲೀಕರು ಕೂಡ ಈ ಬಗ್ಗೆ ಗಮನಹರಿಸುವಂತೆ ಸೂಚಿಸಿದರು. ಇದನ್ನೂ ಓದಿ: ಅವಕಾಶಕ್ಕಾಗಿ ಕಾಯಬೇಡಿ. ನೀವೇ ಸ್ವಂತ ಅವಕಾಶಗಳನ್ನು ಸೃಷ್ಟಿಸಿ: ರತನ್‌ ಟಾಟಾ ಪ್ರಸಿದ್ದ ಅಣಿಮುತ್ತುಗಳನ್ನು ಓದಿ

    ಗೋಣಿಕೊಪ್ಪ ದಸರಾದಲ್ಲಿಯೂ ಹೆಚ್ಚಿನ ಜನ ಸೇರುವುದರಿಂದ ವಿಜಯದಶಮಿಯಂದು ಸಂಜೆ 6 ರಿಂದ ಮುಂದಿನ ದಿನ ಬೆಳಿಗ್ಗೆ 6 ಗಂಟೆಯವರೆಗೆ ಸಂಚಾರಿ ವ್ಯವಸ್ಥೆಯಲ್ಲಿ ನಿಯಂತ್ರಣ ಮಾಡಲಾಗುವುದು. ಗೋಣಿಕೊಪ್ಪ ಕಾವೇರಿ ಕಾಲೇಜಿನಲ್ಲಿ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಸಂಚಾರಿ ವ್ಯವಸ್ಥೆಯಲ್ಲಿ ಬದಲಾವಣೆಗಾಗಿ 11 ಕಡೆಗಳಲ್ಲಿ ಚೆಕ್‌ಪೋಸ್ಟ್‌ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

  • ಮಾನಸಿಕ ಖಿನ್ನತೆ – 13ರ ಬಾಲಕಿ ಆತ್ಮಹತ್ಯೆಗೆ ಶರಣು

    ಮಾನಸಿಕ ಖಿನ್ನತೆ – 13ರ ಬಾಲಕಿ ಆತ್ಮಹತ್ಯೆಗೆ ಶರಣು

    ಮಡಿಕೇರಿ: ಖಿನ್ನತೆಯಿಂದ (Mental Depression) ಬಳಲುತ್ತಿದ್ದ 7ನೇ ತರಗತಿಯ ವಿದ್ಯಾರ್ಥಿನಿ ತಮ್ಮ ಮನೆಯಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆಗೆ (Suicide) ಶರಣಾಗಿರುವ ಘಟನೆ ಕೊಡಗು (Kodagu) ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಶಿವರಹಳ್ಳಿ ಗ್ರಾಮದಲ್ಲಿ ನಡೆದಿದೆ.

    ಶಿವರಹಳ್ಳಿ ಗ್ರಾಮದ ಜಿತೇಂದ್ರ-ಅಕ್ಷತಾ ದಂಪತಿಯ ಪುತ್ರಿ ವೈಷ್ಣವಿ (13) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಇದನ್ನೂ ಓದಿ: ಸ್ವಲ್ಪ ನಕ್ಕುಬಿಡಿ – ಮಾ.19 ರಾಷ್ಟ್ರೀಯ ನಗುವಿನ ದಿನ; ಆರೋಗ್ಯಕ್ಕೆ ಎಷ್ಟು ಒಳ್ಳೆಯದು ಗೊತ್ತಾ..?

    CRIME 2

    ಸೊಮವಾರಪೇಟೆಯ ಖಾಸಗಿ ಶಾಲೆಯಲ್ಲಿ (Private School) 7ನೇ ತರಗತಿ ಓದುತ್ತಿದ್ದ ವೈಷ್ಣವಿ ಕಳೆದ ಒಂದು ವಾರದಿಂದಲೂ ಖಿನ್ನತೆಯಿಂದ ಬಳಲುತ್ತಿದ್ದಳು. ಭಾನುವಾರ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಇದನ್ನೂ ಓದಿ: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಹೇಳಿಕೆ – ವಿವರ ಪಡೆಯಲು ರಾಗಾ ಮನೆಗೆ ಆಗಮಿಸಿದ ಪೊಲೀಸರು

    ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ (Shanivarasanthe Police Station) ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಶನಿವಾರಸಂತೆ ಸಮುದಾಯ ಆರೋಗ್ಯ ಕೇಂದ್ರಕ್ಕೆ ರವಾನಿಸಲಾಗಿದೆ.