Tag: madiwala

  • ಲಾಡ್ಜ್‌ನಲ್ಲಿ ಯುವಕ ಅನುಮಾನಾಸ್ಪದ ಸಾವು ಕೇಸ್ – ಮರಣೋತ್ತರ ಪರೀಕ್ಷೆ ವರದಿಯಲ್ಲಿ ಕಿಡ್ನಿ ಫೇಲ್ಯೂರ್ ಪತ್ತೆ

    ಲಾಡ್ಜ್‌ನಲ್ಲಿ ಯುವಕ ಅನುಮಾನಾಸ್ಪದ ಸಾವು ಕೇಸ್ – ಮರಣೋತ್ತರ ಪರೀಕ್ಷೆ ವರದಿಯಲ್ಲಿ ಕಿಡ್ನಿ ಫೇಲ್ಯೂರ್ ಪತ್ತೆ

    ಬೆಂಗಳೂರು: ಮಡಿವಾಳ ಲಾಡ್ಜ್‌ನಲ್ಲಿ (Lodge) ಪುತ್ತೂರು ಯುವಕ ತಕ್ಷಿತ್ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮರಣೋತ್ತರ ಪರೀಕ್ಷೆಯ ವರದಿ (Postmortem Report) ಪೊಲೀಸರ ಕೈ ಸೇರಿದೆ. ವರದಿಯಲ್ಲಿ ತಕ್ಷಿತ್‌ಗೆ ಕಿಡ್ನಿ ಫೇಲ್ಯೂರ್ (Kidney Failure) ಆಗಿರೋದು ಪತ್ತೆಯಾಗಿದೆ.

    ಕಿಡ್ನಿ ವೈಫಲ್ಯ ಮಾತ್ರವಲ್ಲದೇ ಯುವಕ ತಕ್ಷಿತ್‌ಗೆ ಲಿವರ್ ಸಮಸ್ಯೆ ಹಾಗೂ ಅಸ್ತಮಾ ಖಾಯಿಲೆ ಇರೋದು ಕೂಡ ಪತ್ತೆಯಾಗಿದೆ. ಹೀಗಾಗಿ ಸಾವನ್ನಪ್ಪಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ಶಬರಿಮಲೆಗೆ ಭೇಟಿ| ಲ್ಯಾಂಡಿಂಗ್‌ ವೇಳೆ ಹೂತು ಹೋಯ್ತು ಮುರ್ಮು ಪ್ರಯಾಣಿಸಿದ್ದ ಹೆಲಿಕಾಪ್ಟರ್‌

    ತಕ್ಷಿತ್ ಹಾಗೂ ಯುವತಿ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಮದುವೆ ಮಾಡಿಕೊಳ್ಳಬೇಕು ಎಂದು ಮಾತನಾಡಿಕೊಂಡಿದ್ದರು. 20 ದಿನಗಳ ಹಿಂದೆಯೇ ಬೆಂಗಳೂರಿಗೆ ಬಂದು ಬೇರೆ ಬೇರೆ ಲಾಡ್ಜ್‌ನಲ್ಲಿ ವಾಸವಿದ್ದರು. 8 ದಿನ ಮಡಿವಾಳದ ಲಾಡ್ಜ್‌ಗೆ ಶಿಫ್ಟ್ ಆಗಿದ್ದರು ಎಂದು ತಿಳಿದುಬಂದಿದೆ. ಸದ್ಯ ಪೊಲೀಸರು ಯುವಕನ ಜೊತೆಯಲ್ಲಿದ್ದ ಯುವತಿಯ ಹೇಳಿಕೆಯನ್ನ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಭಾಗಿ – ಅಡುಗೆ ಸಿಬ್ಬಂದಿಗೆ ಗೇಟ್‌ಪಾಸ್‌

    ಮೃತ ತಕ್ಷಿತ್ ಡ್ರಿಂಕ್ಸ್ ಹಾಗೂ ಚೈನ್ ಸ್ಮೋಕರ್ ಆಗಿದ್ದ. ತಕ್ಷಿತ್ ತಂದೆ-ತಾಯಿಗೂ ಅಸ್ತಮಾ ಇರೋದು ಪತ್ತೆಯಾಗಿದೆ. ಸದ್ಯ ಪೊಲೀಸರು ಕೆಲ ಮಾದರಿ ಸಂಗ್ರಹಿಸಿ ಎಫ್‌ಎಸ್‌ಎಲ್‌ಗೆ ಕಳುಹಿಸಿದ್ದಾರೆ. ಎಫ್‌ಎಸ್‌ಎಲ್ ವರದಿ ಬಳಿಕ ಸಾವಿಗೆ ನಿಖರ ಕಾರಣ ತಿಳಿಯಲಿದೆ. ಘಟನೆ ಸಂಬಂಧ ಮಡಿವಾಳ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿತ್ತು. ಇದನ್ನೂ ಓದಿ: ಐತಿಹಾಸಿಕ ಬಸವನಗುಡಿ ಕಡಲೆಕಾಯಿ ಪರಿಷೆಗೆ ದಿನಾಂಕ ನಿಗದಿ

  • 7 ದಿನ ಲವ್ವರ್ ಜೊತೆ ಲಾಡ್ಜ್‌ನಲ್ಲಿದ್ದ ಪುತ್ತೂರಿನ ಯುವಕ ಸಾವು – ಹೆಚ್ಚು ಮಾತ್ರೆ ಸೇವಿಸಿದ್ದರಿಂದ ಮೃತಪಟ್ಟಿರೋ ಶಂಕೆ

    7 ದಿನ ಲವ್ವರ್ ಜೊತೆ ಲಾಡ್ಜ್‌ನಲ್ಲಿದ್ದ ಪುತ್ತೂರಿನ ಯುವಕ ಸಾವು – ಹೆಚ್ಚು ಮಾತ್ರೆ ಸೇವಿಸಿದ್ದರಿಂದ ಮೃತಪಟ್ಟಿರೋ ಶಂಕೆ

    ಬೆಂಗಳೂರು: 7 ದಿನ ಲವ್ವರ್ ಜೊತೆ ಲಾಡ್ಜ್‌ನಲ್ಲಿದ್ದ ಯುವಕ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚು ಮಾತ್ರೆ ಸೇವಿಸಿದ್ದಕ್ಕಾಗಿ ಮೃತಪಟ್ಟಿರೋ ಶಂಕೆ ವ್ಯಕ್ತವಾಗಿದೆ.

    ಮೃತ ಯುವಕನನ್ನು ಪುತ್ತೂರು ಮೂಲದ ತಕ್ಷಿತ್ (20) ಎಂದು ಗುರುತಿಸಲಾಗಿದ್ದು, ಮಡಿವಾಳದ ಲಾಡ್ಜ್ವೊಂದರಲ್ಲಿ ಪ್ರೇಯಿಸಿ 7 ದಿನ ಕಾಲ ಕಳೆದು, ಬಳಿಕ ಮಾರನೇ ದಿನ ಸಾವನ್ನಪ್ಪಿದ್ದಾನೆ.ಇದನ್ನೂ ಓದಿ: ಬೆಂಗಳೂರು | 8 ದಿನ ಪ್ರೇಯಸಿ ಜೊತೆಯಿದ್ದ ಯುವಕ ಲಾಡ್ಜ್‌ನಲ್ಲಿ ಸಾವು

    ಸದ್ಯ ಈ ಪ್ರಕರಣ ಸಂಬಂಧಿಸಿದಂತೆ ಯುವಕನ ಮರಣೋತ್ತರ ಪರೀಕ್ಷೆಯಲ್ಲಿ ಹಲವು ವಿಚಾರಗಳು ಬಯಲಾಗಿವೆ. ಇದು ಅನುಮಾನಾಸ್ಪದ ಸಾವು ದೇಹದ ಮೇಲೆ ಯಾವುದೇ ಗಾಯಗಳಿಲ್ಲ ಎಂದು ರಿಪೋರ್ಟ್ ಪೆಂಡಿಂಗ್ ಇಟ್ಟಿದ್ದಾರೆ. ಹೀಗಾಗಿ ಪೊಲೀಸರು ಸಾವಿಗೆ ನಿಖರ ಕಾರಣ ಪತ್ತೆ ಹಚ್ಚಲು ದೇಹದ ಹಲವು ಸ್ಯಾಂಪಲ್‌ಗಳನ್ನ ಎಫ್‌ಎಸ್‌ಎಲ್‌ಗೆ ರವಾನೆ ಮಾಡಿದ್ದಾರೆ.

    ಲಿವರ್ ಪೀಸ್, ಜಠರ ಪೀಸ್, ಹೊಟ್ಟೆಯ ದ್ರವಣಾಂಶಗಳು, ಕಾಲರಾ ಪತ್ತೆ ಹಚ್ಚುವುದಕ್ಕೆ ವಿಸರ್ಜನಾ ತ್ಯಾಜ್ಯ, ಮಾತ್ರೆ ಸೇವನೆ ಪತ್ತೆಗೆ ರಕ್ತದ ಸ್ಯಾಂಪಲ್ ಸೇರಿ ಹಲವು ಪರೀಕ್ಷೆಗಾಗಿ ಎಫ್‌ಎಸ್‌ಲ್‌ಗೆ ರವಾನಿಸಿದ್ದಾರೆ. ಈ ಎಲ್ಲ ಪರೀಕ್ಷೆಗಳ ವರದಿ ಒಂದು ತಿಂಗಳ ಒಳಗಡೆ ಬರಲಿದೆ.

    ಏನಿದು ಪ್ರಕರಣ?
    ಶುಕ್ರವಾರ (ಅ.18) ಯುವಕ ಸಾವನ್ನಪ್ಪಿದ್ದು, ಬೆಳಗ್ಗೆ ಲಾಡ್ಜ್ ಸಿಬ್ಬಂದಿ ರೂಂ ಬಾಗಿಲು ತೆಗೆದಾಗ ಘಟನೆ ಬೆಳಕಿಗೆ ಬಂದಿದೆ. ಕಳೆದ ವಾರ ತನ್ನ ಪ್ರೇಯಸಿಯೊಂದಿಗೆ ಬೆಂಗಳೂರಿಗೆ ಬಂದಿದ್ದ ತಕ್ಷಿತ್ ಆನ್‌ಲೈನ್‌ನಲ್ಲಿ ಮಡಿವಾಳದಲ್ಲಿರುವ ಲಾಡ್ಜ್ವೊಂದರಲ್ಲಿ ರೂಂ ಬುಕ್ ಮಾಡಿದ್ದ. 7 ದಿನ ಲಾಡ್ಜ್‌ನಲ್ಲಿ ಪ್ರೇಯಸಿಯೊಂದಿಗೆ ಇದ್ದ. ಗುರುವಾರ ಯುವತಿಯ ಆರೋಗ್ಯದಲ್ಲಿ ಏರುಪೇರು ಉಂಟಾಗಿ ಆಕೆ ವಿರಾಜಪೇಟೆಗೆ ಹೋಗಿದ್ದಳು. ಹುಡುಗಿ ಹೋದ ಮರುದಿನವೇ ಯುವಕ ಮೃತಪಟ್ಟಿದ್ದಾನೆ.ಇದನ್ನೂ ಓದಿ: ಮಂಗಳೂರು| ಯುವತಿಯರು ಬಟ್ಟೆ ಬದಲಿಸುವ ವೀಡಿಯೋ ಮಾಡಿ ವೈರಲ್ ಮಾಡಿದ್ದ ರೂಮ್‌ಮೇಟ್ ಬಂಧನ

  • Bengaluru | ಸಿಮೆಂಟ್ ಇಟ್ಟಿಗೆಯಿಂದ ತಲೆಗೆ ಹೊಡೆದು ಟೆಕ್ಕಿಯ ಬರ್ಬರ ಹತ್ಯೆ

    Bengaluru | ಸಿಮೆಂಟ್ ಇಟ್ಟಿಗೆಯಿಂದ ತಲೆಗೆ ಹೊಡೆದು ಟೆಕ್ಕಿಯ ಬರ್ಬರ ಹತ್ಯೆ

    ಬೆಂಗಳೂರು: ಎಣ್ಣೆ ಪಾರ್ಟಿ ವೇಳೆ ಗಲಾಟೆ ನಡೆದು ಸಿಮೆಂಟ್ ಇಟ್ಟಿಗೆಯಿಂದ (Cement Brick) ತಲೆಗೆ ಹೊಡೆದು ಟೆಕ್ಕಿಯನ್ನು (Techie) ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮಡಿವಾಳದ (Madiwala) ವೆಂಕಟೇಶ್ವರ ಲೇಔಟ್‌ನಲ್ಲಿ ನಡೆದಿದೆ.

    ಮಾರ್ಟಿನ್ ಸೈಮನ್ (29) ಕೊಲೆಯಾದ ಟೆಕ್ಕಿ. ಇನ್ಪೆಂಟ್ ರಾಜ್ ಎಂಬಾತ ಕೃತ್ಯ ಎಸಗಿಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಕೊಲೆಯಾದ ಮಾರ್ಟಿನ್ ಸೈಮನ್ ಹಾಗೂ ಶಂಕಿತ ಆರೋಪಿ ಇನ್ಪೆಂಟ್ ರಾಜ್ ಒಂದೇ ಬಿಲ್ಡಿಂಗ್‌ನಲ್ಲಿ ಬಾಡಿಗೆಗೆ ವಾಸವಾಗಿದ್ದರು. ಇದನ್ನೂ ಓದಿ: ಭಾರತ-ಪಾಕ್ ಸಂಘರ್ಷ ತ್ವರಿತ ಶಮನಕ್ಕೆ ಟ್ರಂಪ್ ಒತ್ತಾಯ

    ಇಂದು ಸಂಜೆ ಬಿಲ್ಡಿಂಗ್ ಟೆರೆಸ್ ಮೇಲೆ ಇಬ್ಬರೂ ಪಾರ್ಟಿ ಮಾಡುತ್ತಿದ್ದರು. ರಾತ್ರಿ ಹತ್ತು ಗಂಟೆ ವೇಳೆ ಇಬ್ಬರ ನಡುವೆ ಜಗಳ ನಡೆದಿರುವ ಅನುಮಾನವನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಈ ವೇಳೆ ಅಲ್ಲೇ ಇದ್ದ ಸಿಮೆಂಟ್ ಇಟ್ಟಿಗೆಯಿಂದ ತಲೆಗೆ ಹೊಡೆದು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಘಟನೆ ಸಂಬಂಧ ಮಡಿವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ನಾಗರಿಕ ವಿಮಾನಗಳನ್ನು ಬಳಸಿಕೊಂಡು ಪಾಕ್ ಡ್ರೋನ್ ದಾಳಿ

  • ಬೆಂಗ್ಳೂರಿನಲ್ಲಿ ಆತ್ಮಹತ್ಯೆಗೆ ಶರಣಾದ ಕಾನ್ಸ್‌ಟೇಬಲ್ ಮೃತದೇಹ ಪತ್ತೆ ಮಾಡಿದ್ದೇ ರೋಚಕ

    ಬೆಂಗ್ಳೂರಿನಲ್ಲಿ ಆತ್ಮಹತ್ಯೆಗೆ ಶರಣಾದ ಕಾನ್ಸ್‌ಟೇಬಲ್ ಮೃತದೇಹ ಪತ್ತೆ ಮಾಡಿದ್ದೇ ರೋಚಕ

    – ಬರೋಬ್ಬರಿ 250 ಸಿಸಿಟಿವಿ ಪರಿಶೀಲನೆ

    ಬೆಂಗಳೂರು: ಇಲ್ಲಿನ ಮಡಿವಾಳ (Madiwala) ಪೊಲೀಸ್ ಕಾನ್ಸ್‌ಟೇಬಲ್ (Police Constable) ಆತ್ಮಹತ್ಯೆ ಪ್ರಕರಣದಲ್ಲಿ ಶಿವರಾಜ್ ಮೃತದೇಹ ಪತ್ತೆ ಮಾಡಿದ್ದೇ ರೋಚಕವಾಗಿದೆ. ಶಿವರಾಜ್ ಮೃತದೇಹ ಪತ್ತೆ ಮಾಡೋಕೆ ಬರೋಬ್ಬರಿ 250 ಸಿಸಿಟಿವಿಯನ್ನು ಮಡಿವಾಳ ಪೊಲೀಸರು ಪರಿಶೀಲನೆ ಮಾಡಿದ್ದಾರೆ.

    ಸುಬ್ರಮಣ್ಯಪುರ ಪೊಲೀಸರು ಹಾಗೂ ಮಡಿವಾಳ ಪೊಲೀಸರಿಂದ ಶಿವರಾಜ್‌ಗಾಗಿ ಹುಡುಕಾಟ ನಡೆದಿತ್ತು. ಆದರೆ ಮಡಿವಾಳ ಪೊಲೀಸ್ ಸಿಬ್ಬಂದಿಯಾದ ಹಿನ್ನೆಲೆ ಇನ್ಸ್ಪೆಕ್ಟರ್ ಸೂಚನೆ ಮೇರೆಗೆ ಮಡಿವಾಳ ಪೊಲೀಸರೇ ಹುಡುಕಾಟ ಶುರು ಮಾಡಿದ್ದರು. ಸುಬ್ರಹ್ಮಣ್ಯಪುರದಿಂದ ಮೈಸೂರು ರಸ್ತೆಯ ಜ್ಞಾನಭಾರತಿ ಮೆಟ್ರೊ ಸ್ಟೇಷನ್‌ವರೆಗೂ ಸಿಸಿಟಿವಿ ಪರಿಶೀಲನೆ ಮಾಡಲಾಗಿತ್ತು. ಸತತ ಐದು ದಿನಗಳಿಂದ ನಿರಂತರವಾಗಿ ಹುಡುಕಾಟ ನಡೆಸಿದ್ದ ಮಡಿವಾಳ ಪೊಲೀಸರು ಕೊನೆಗೆ ಜ್ಞಾನಭಾರತಿ ಮೆಟ್ರೊ ಸ್ಟೇಷನ್‌ಗೆ ಬಂದು ತಲುಪಿದ್ದಾರೆ. ಈ ವೇಳೆ ಮೆಟ್ರೊ ಸ್ಟೇಷನ್ ಪಾರ್ಕಿಂಗ್‌ನಲ್ಲಿ ಬೈಕ್ ನಿಲ್ಲಿಸಿದ್ದ ಶಿವರಾಜ್ ನಂತರ ನೀರಿನ ಬಾಟಲಿ ಹಿಡಿದು ಬೆಂಗಳೂರು ವಿವಿ ಒಳಗೆ ನಡೆದು ಬಂದಿದ್ದರು. ಇದನ್ನೂ ಓದಿ: ಇಂದು ಲೋಕಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ

    ಶಿವರಾಜ್ ಬೆಂಗಳೂರು ವಿವಿ ಒಳಗೆ ನಡೆದು ಬಂದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಹೀಗಾಗಿ ಬೆಂಗಳೂರು ವಿವಿ ಆವರಣದೊಳಗೆ ಹುಡುಕಾಡಿದ್ದ ಸಂದರ್ಭ ಆವರಣದ ಪಾಳು ಬಿದ್ದ ಬಾವಿಯಲ್ಲಿ ಶಿವರಾಜ್ ಮೃತದೇಹ ತೇಲುತ್ತಿರುವುದು ಪತ್ತೆಯಾಗಿದೆ. ಕೂಡಲೇ ಜ್ಞಾನಭಾರತಿ ಪೊಲೀಸರಿಗೆ ಮಾಹಿತಿ ನೀಡಿದ್ದ ಪೊಲೀಸರು ಸ್ಥಳಕ್ಕೆ ಬಂದು ಮೃತದೇಹ ಹೊರತೆಗೆಸಿ ಮರಣೋತ್ತರ ಪರೀಕ್ಷೆಗೆ ರವಾನಿಸಿದರು. ಶಿವರಾಜ್ ಅವರದು ಕೊಲೆಯಲ್ಲ ಆತ್ಮಹತ್ಯೆ ಎಂಬ ನಿರ್ಧಾರಕ್ಕೆ ಪೊಲೀಸರು ಬಂದಿದ್ದು, ಮೃತದೇಹ ಹೊರತೆಗೆದಾಗ ಮೃತದೇಹಕ್ಕೆ ಕಲ್ಲು ಕಟ್ಟಿರೋದು ಬೆಳಕಿಗೆ ಬಂದಿದೆ. ಸಿಸಿಟಿಯಲ್ಲಿ ಒಬ್ಬನೇ ಬಂದಿರುವುದರಿಂದ ಇದೊಂದು ಆತ್ಮಹತ್ಯೆ ಎಂಬ ನಿರ್ಧಾರಕ್ಕೆ ಪೊಲೀಸರು ಬಂದಿದ್ದಾರೆ. ಇದನ್ನೂ ಓದಿ: ಮಂಗಳೂರು ಜೈಲಿನಲ್ಲಿ ಮಾರಾಮಾರಿ- ಇಬ್ಬರಿಗೆ ಗಾಯ

  • ಬಿಎಂಟಿಸಿಗೆ ಗೃಹಿಣಿ ಬಲಿ – ಬಸ್ ಚಾಲಕ, ನಿರ್ವಾಹಕ ಎಸ್ಕೇಪ್

    ಬಿಎಂಟಿಸಿಗೆ ಗೃಹಿಣಿ ಬಲಿ – ಬಸ್ ಚಾಲಕ, ನಿರ್ವಾಹಕ ಎಸ್ಕೇಪ್

    ಬೆಂಗಳೂರು: ಬೆಂಗಳೂರಿನಲ್ಲಿ (Bengaluru) ಬಿಎಂಟಿಸಿ (BMTC) ಬಸ್‌ಗೆ ಬಲಿಯಾಗುತ್ತಿರುವವರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಅದೇ ರೀತಿ ಬುಧವಾರ ಸಂಜೆ ಬಿಎಂಟಿಸಿಗೆ ಗೃಹಿಣಿಯೊಬ್ಬರು ಬಲಿಯಾದ ಘಟನೆ ಸಿಲ್ಕ್‌ಬೋರ್ಡ್‌  (Sikboard) ಸಮೀಪದ ಮಡಿವಾಳ ಫ್ಲೈಓವರ್ (Madiwala Flyover) ಮೇಲೆ ನಡೆದಿದೆ.

    ಸೀಮಾ ಬಿಎಂಟಿಸಿಗೆ ಬಲಿಯಾದ ಗೃಹಿಣಿ. ಬುಧವಾರ ಸಂಜೆ 6:30ರ ವೇಳೆಗೆ ಘಟನೆ ನಡೆದಿದ್ದು, ಗೃಹಿಣಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಿಎಂಟಿಸಿ ಬಸ್ ಚಾಲಕನ ಅಜಾಗರೂಕತೆಯಿಂದ ಅಪಘಾತವಾಗಿದೆ ಎಂದು ಆರೋಪಿಸಲಾಗಿದೆ. ಬಸ್ ಪಕ್ಕದಲ್ಲಿ ಚಲಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಗುದ್ದಿದ್ದರಿಂದ ಸವಾರರು ಆಯತಪ್ಪಿ ಬಿದ್ದಿದ್ದಾರೆ. ಘಟನೆಯಲ್ಲಿ ಗೃಹಿಣಿ ಸಾವನ್ನಪ್ಪಿದರೆ ಒಂದೂವರೆ ವರ್ಷದ ಮಗು ಗಾನವಿ ಹಾಗೂ ಆಕೆಯ ಪತಿ ಗುರುಮೂರ್ತಿ ಕೂದಲೆಳೆ ಅಂತರದಲ್ಲಿ ಬಚಾವ್ ಆಗಿದ್ದಾರೆ. ಇದನ್ನೂ ಓದಿ: ಆತ್ಮಹತ್ಯೆ ರೀತಿ ಬಿಂಬಿಸಿ ನಾಪತ್ತೆಯಾಗಿದ್ದ ಪೇದೆ ಅಯ್ಯಪ್ಪ ಮಾಲೆ ಧರಿಸಿ ಪತ್ತೆ

    ತಮ್ಮ ಮಗುವಿನೊಂದಿಗೆ ದಂಪತಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಸಂದರ್ಭ ಅಪಘಾತ ಸಂಭವಿಸಿದೆ. ಪತಿ ಗುರುಮೂರ್ತಿ ಸಿಂಗಸಂದ್ರ ಬೆಸ್ಕಾಂ ಉದ್ಯೋಗಿಯಾಗಿದ್ದು, ಕಳೆದ 8 ವರ್ಷದಿಂದ ಬೆಸ್ಕಾಂನಲ್ಲಿ ಲೈನ್‌ಮೆನ್ ಆಗಿ ಕೆಲಸ ಮಾಡುತ್ತಿದ್ದಾರೆ. ಮೂಲತಃ ವಿಜಯನಗರ ಜಿಲ್ಲೆ, ಗುಡೇಕೋಟೆ ಕೂಡ್ಲಿಗಿಯ ಶ್ರೀಕಂಠಪುರ ತಾಂಡದ ನಿವಾಸಿಗಳಾದ ದಂಪತಿ ಉದ್ಯೋಗ ನಿಮಿತ್ತ ಬೆಂಗಳೂರಿಗೆ ಬಂದು ನೆಲೆಸಿದ್ದರು. ಸೈಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಮೃತ ಗೃಹಿಣಿಯ ಮರಣೋತ್ತರ ಪರೀಕ್ಷೆ ನಡೆಯಲಿದೆ. ಮಡಿವಾಳ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಘಟನೆ ಬಳಿಕ ಚಾಲಕ ಮತ್ತು ನಿರ್ವಾಹಕ ಬಸ್ ಬಿಟ್ಟು ಪರಾರಿಯಾಗಿದ್ದಾರೆ. ಇದನ್ನೂ ಓದಿ: ಸೋಶಿಯಲ್ ಮೀಡಿಯಾ ಖಾತೆ ಇಲ್ಲ – ಮನೋರಂಜನ್ ಬೆಂಗಳೂರು ನೆಟ್‌ವರ್ಕ್ ಯಾವುದು?

  • 77 ಬಾರಿ ನಿಯಮ ಉಲ್ಲಂಘಟನೆ- ಬೈಕ್ ಮಾಲೀಕನಿಗೆ ಬಿತ್ತು ಭಾರೀ ದಂಡ

    77 ಬಾರಿ ನಿಯಮ ಉಲ್ಲಂಘಟನೆ- ಬೈಕ್ ಮಾಲೀಕನಿಗೆ ಬಿತ್ತು ಭಾರೀ ದಂಡ

    ಬೆಂಗಳೂರು: 77 ಬಾರಿ ಟ್ರಾಫಿಕ್ ನಿಯಮಗಳನ್ನು ಉಲ್ಲಂಘಿಸಿದ ಆರೋಪದ ಅಡಿ ಬೈಕ್ ಮಾಲೀಕನಿಗೆ 42,500 ರೂ. ದಂಡ ವಿಧಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

    ಮಡಿವಾಳ ಸಂಚಾರಿ ಪೋಲೀಸರ ಕಾರ್ಯಾಚರಣೆ ವೇಳೆ ಬೈಕ್ ಸವಾರ ಅರುಣ್ ಕುಮಾರ್ ಇಂದು ಪೊಲೀಸರಿಗೆ ಸಿಕ್ಕಿ ಬಿದ್ದಿದ್ದು, ಪೊಲೀಸ್ ಇನ್ಸ್ ಪೆಕ್ಟರ್ ನವೀನ್ ಕುಮಾರ್ ಮತ್ತು ಪಿಎಸ್‍ಐ ಶಿವರಾಜ್ ಕುಮಾರ್ ಅವರು ಕಾರ್ಯಾಚರಣೆ ನಡೆಸಿದ್ದರು. ಸದ್ಯ ಬೈಕ್ ಸವಾರ ಅರುಣ್ ಕುಮಾರ್ ಗೆ 42,500 ರೂ. ದಂಡ ವಿಧಿಸಿದ್ದಾರೆ. ಮಡಿವಾಳ ಪೊಲೀಸರು ಬೈಕ್ ಸವಾರನಿಗೆ ನೋಟಿಸ್ ನೀಡಿ ಬೈಕ್ ವಶಕ್ಕೆ ಪಡೆದಿದ್ದಾರೆ.

    ಕೊರೊನಾ ಲಾಕ್‍ಡೌನ್ ಬಳಿಕ ಟ್ರಾಫಿಕ್ ನಿಯಮಗಳನ್ನು ಮರೆತು ಸಂಚಾರ ಮಾಡುತ್ತಿದ್ದ ಸವಾರರಿಗೆ ಸದ್ಯ ಟ್ರಾಫಿಕ್ ಪೊಲೀಸರು ಬಿಸಿ ಮುಟ್ಟಿಸುತ್ತಿದ್ದಾರೆ. ಅಲ್ಲದೇ ಕಟ್ಟು ನಿಟ್ಟಿನ ಕ್ರಮಕೈಗೊಂಡು ನಿಯಮಗಳನ್ನು ಉಲ್ಲಂಘಿಸುವವರಿಂದ ದಂಡ ವಸೂಲಿ ಮಾಡುತ್ತಿದ್ದಾರೆ.

    ಕಳೆದ ಎರಡು ತಿಂಗಳ ಹಿಂದೆ ಆಡುಗೊಡಿಯಲ್ಲಿ ಬುಲೆಟ್ ಬೈಕ್ ಮಾಲೀಕನೊಬ್ಬ ಬರೋಬ್ಬರಿ 58 ಸಾವಿರದ 200 ರೂಪಾಯಿ ದಂಡವನ್ನು ಪಾವತಿ ಮಾಡಿದ್ದ. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿಕೊಂಡುತ್ತಿದ್ದ ರಾಜೇಶ್ ಬುಲೆಟ್ ಬೈಕ್ ಮೇಲೆ ಬರೋಬ್ಬರಿ 103 ಕೇಸ್ ಇರುವುದನ್ನು ಕಂಡು ಪೊಲೀಸರು, ಸಂಚಾರಿ ನಿಮಯ ಉಲ್ಲಂಘನೆ ಕೇಸ್‍ಗಳು ಸೆಂಚುರಿ ದಾಟಿದ ಪರಿಣಾಮ 58 ಸಾವಿರದ 200 ರೂಪಾಯಿಯನ್ನು ದಂಡ ಹಾಕಿದ್ದರು.

  • ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ ಸ್ಫೋಟ- 6 ಸಿಬ್ಬಂದಿಯ ಸ್ಥಿತಿ ಗಂಭೀರ

    ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ ಸ್ಫೋಟ- 6 ಸಿಬ್ಬಂದಿಯ ಸ್ಥಿತಿ ಗಂಭೀರ

    ಬೆಂಗಳೂರು: ಮಡಿವಾಳದಲ್ಲಿರುವ ವಿಧಿವಿಜ್ಞಾನ ಪ್ರಯೋಗಾಲಯ (ಎಫ್‍ಎಸ್‍ಎಲ್)ದಲ್ಲಿ ಕೆಮಿಕಲ್ ಸ್ಫೋಟಗೊಂಡು 6 ಜನ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

    ಮಡಿವಾಳದಲ್ಲಿರುವ ವಿಧಿವಿಜ್ಞಾನ ಪ್ರಯೋಗಾಲಯದ ಸಿಬ್ಬಂದಿ ಅಂಥೋನಿ ಪ್ರಭು, ನವ್ಯ, ವಿಶ್ವನಾಥ್, ಶ್ರೀನಾಥ್, ವಿಶುವಲ್ಲಭ, ಬಸವ ಪ್ರಭು, ನೇತ್ರಾವತಿ ಘಟನೆಯಲ್ಲಿ ಗಾಯಗೊಂಡವರು. ಡಿಟೋನೇಟರ್ ಗಳನ್ನು ಪರೀಕ್ಷೆ ಮಾಡಲಾಗುತ್ತಿದ್ದಾಗ ಸ್ಫೋಟ ಸಂಭವಿಸಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಈ ಕುರಿತು ಪ್ರತಿಕ್ರಿಯೆ ನೀಡಿರುವ ನಗರ ಪೊಲೀಸ್ ಆಯುಕ್ತ ಭಾಸ್ಕರ ರಾವ್ ಅವರು, ರಾಯಚೂರಿನಿಂದ ಬಂದಿದ್ದ 9 ಜೀವಂತ ಡಿಟೋನೇಟರ್ ಗಳ ಪರೀಕ್ಷೆ ನಡೆದಿತ್ತು. ಈ ಪೈಕಿ ಒಂದು ಡಿಟೋನೇಟರ್ ಸ್ಫೋಟಗೊಂಡ ಪರಿಣಾಮ ಪ್ರಯೋಗಾಲಯದಲ್ಲಿದ್ದ 6 ಜನ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

    ಪ್ರಯೋಗಾಲಯದ ಮೇಲ್ವಿಚಾರಕರಾದ ವಾಣಿ ಅವರು ಕೆಲಸದ ನಿಮಿತ್ತ ಶಿವಮೊಗ್ಗಕ್ಕೆ ಹೋಗಿದ್ದರು. ಹೀಗಾಗಿ ಹಿರಿಯ ಇಂಜಿನೀಯರ್ ಶ್ರೀನಾಥ್ ನೇತೃತ್ವದಲ್ಲಿ ಡಿಟೋನೇಟರ್ ಪರಿಶೀಲನೆ ಮಾಡಲಾಗುತ್ತಿತ್ತು. ಈ ವೇಳೆ ಸ್ಫೋಟ ಸಂಭವಿಸಿ, ಸಿಬ್ಬಂದಿ ನವ್ಯ ಕಣ್ಣು ಹಾಗೂ ಕಿವಿಗೆ ಗಂಭೀರವಾಗಿ ಗಾಯವಾಗಿದೆ. ಶ್ರೀನಾಥ್ ಅವರ ಎರಡು ಬೆರಳು ತುಂಡಾಗಿವೆ ಎಂದು ಭಾಸ್ಕರ ರಾವ್ ತಿಳಿಸಿದ್ದಾರೆ.

    ಗಂಭೀರವಾಗಿ ಗಾಯಗೊಂಡಿರುವ ಶ್ರೀನಾಥ್ ಹಾಗೂ ನವ್ಯ ಅವರಿಗೆ ಸಿಟಿ ಸ್ಕ್ಯಾನ್ ಮಾಡಿಸಿ, ಶಸ್ತ್ರಚಿಕಿತ್ಸೆಗೆ ಒಳಪಡಿಸಲಾಗಿದೆ. ನವ್ಯ ಕಳೆದ ಒಂದು ವರ್ಷದ ಹಿಂದಷ್ಟೇ ಕೆಲಸಕ್ಕೆ ಸೇರಿದ್ದರು. ಅವರು ಡಿಟೋನೇಟರ್ ಪರೀಕ್ಷೆ ವೇಳೆ ಪರಿಶೀಲನೆ ಮಾಡುವುದನ್ನು ನೋಡಿಕೊಳ್ಳುತ್ತಿದ್ದರು ಎಂದು ಹೇಳಿದರು.

  • ಮಡಿವಾಳ ಕೆರೆ ದಡದಲ್ಲಿ ಬಿದ್ದಿದೆ ರಾಶಿ ರಾಶಿ ಶಂಖದ ಹುಳ, ಕಪ್ಪೆಚಿಪ್ಪು ಮೀನು

    ಮಡಿವಾಳ ಕೆರೆ ದಡದಲ್ಲಿ ಬಿದ್ದಿದೆ ರಾಶಿ ರಾಶಿ ಶಂಖದ ಹುಳ, ಕಪ್ಪೆಚಿಪ್ಪು ಮೀನು

    ಬೆಂಗಳೂರು: ಮಡಿವಾಳ ಕೆರೆಯ ದಡಕ್ಕೆ ರಾಶಿ ರಾಶಿ ಶಂಖದ ಹುಳ, ಕಪ್ಪೆಚಿಪ್ಪು ಮೀನುಗಳು ಹರಿದುಬಂದಿದೆ. ಇದರಿಂದ ಸ್ಥಳೀಯರು ಆತಂಕಕ್ಕೀಡಾಗಿದ್ದಾರೆ.


    ಕೆರೆಯ ದಡದಲ್ಲಿಯೇ ಸತ್ತ ಕಪ್ಪೆ ಚಿಪ್ಪು ಮೀನುಗಳ ರಾಶಿಯೇ ಬಿದ್ದಿದೆ. ಕೆರೆಯ ದಡದಲ್ಲಿ ಬಿದ್ದ ರಾಶಿ ಮೀನು ಶಂಖದ ಹುಳ, ಕಪ್ಪೆ ಚಿಪ್ಪು ಮೀನುಗಳನ್ನು ನೋಡಿ ಸಾರ್ವಜನಿಕರು ಗಾಬರಿಯಾಗಿದ್ದಾರೆ.

    ಕೆರೆ ಸಂಪೂರ್ಣ ಕಲುಷಿತಗೊಂಡಿದ್ದಕ್ಕೆ ಈ ಅನಾಹುತ ಸಂಭವಿಸಿದೆ. ಜಲಮಂಡಳಿಗೆ ಇಲ್ಲಿ ನೀರಿನ ಶುದ್ಧೀಕರಣ ಘಟಕ ಕಟ್ಟೋದಕ್ಕೆ ಸರ್ಕಾರದಿಂದ ದುಡ್ಡು ಬಿಡುಗಡೆಯಾದ್ರೂ ಯಾವುದೇ ಪ್ರಯೋಜನವಾಗಿಲ್ಲ. ಇದ್ರಿಂದ ಕೆರೆಯಲ್ಲಿರುವ ಅಷ್ಟು ಜಲಚರಗಳು ಪ್ರಾಣ ಕಳೆದುಕೊಂಡು ದಡಕ್ಕೆ ಬಂದು ತೇಲುತ್ತಿದೆ ಅಂತಾ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

    ಬಿಬಿಎಂಪಿ ರಾಜಕಾಲುವೆಯ ನೀರನ್ನು ನೇರವಾಗಿ ಮಡಿವಾಳ ಕೆರೆಗೆ ಬಿಟ್ಟಿದೆ. ಇದರಿಂದಲೇ ಟನ್ ಗಟ್ಟಲೇ ಶೆಲ್ ಫಿಶ್, ಮೀನುಗಳು ಹಾಗೂ ಹಕ್ಕಿಗಳ ಮಾರಣ ಹೋಮ ನಡೆದಿದೆ. ರಾಜಕಾಲುವೆಯ ಮೇಲೆ ರಸ್ತೆ ನಿರ್ಮಾಣ ಮಾಡಿ ಆ ನೀರನ್ನು ಬಿಬಿಎಂಪಿ ಕೆರೆಗೆ ತಿರುಗಿಸಿದೆ. ಮೊದಲ ಹಂತದಲ್ಲಿಯೂ ತ್ಯಾಜ್ಯ ನೀರನ್ನು ಶುದ್ಧೀಕರಿಸದೇ ನೇರವಾಗಿ ಮಡಿವಾಳ ಕೆರೆಗೆ ಬಿಟ್ಟಿದ್ರಿಂದ ಕೆರೆ ಸಂಪೂರ್ಣ ಹಾಳಾಗಿದೆ. ಜೆಪಿನಗರ, ಜಯನಗರ, ಬಿಟಿಎಂ ಲೇಔಟ್ ನ ತ್ಯಾಜ್ಯ ನೀರು ನೇರ ಕೆರೆಗೆ ಬಿಟ್ಟುಬಿಡುತ್ತಿದೆ. ಈ ಕೆರೆಯಲ್ಲಿ ಬೋಟಿಂಗ್ ಗೇ ಬೇರೆ ಅವಕಾಶ ಕಲ್ಪಿಸಿಕೊಡುತ್ತಿದೆ ಅಂತ ಸ್ಥಳೀಯರು ದೂರಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://www.youtube.com/watch?v=rRYhngT1sak