Tag: madras eye

  • ಕೊಡಗಿಗೂ ವಿಸ್ತರಿಸಿದ ಮದ್ರಾಸ್ ಐ – ಕಳೆದ 20 ದಿನಗಳಲ್ಲಿ 136 ಪ್ರಕರಣಗಳು ಪತ್ತೆ

    ಕೊಡಗಿಗೂ ವಿಸ್ತರಿಸಿದ ಮದ್ರಾಸ್ ಐ – ಕಳೆದ 20 ದಿನಗಳಲ್ಲಿ 136 ಪ್ರಕರಣಗಳು ಪತ್ತೆ

    ಮಡಿಕೇರಿ: ರಾಜ್ಯದ ಎಲ್ಲೆಡೆ ಮದ್ರಾಸ್ ಐ (Madras Eye) ಸೋಂಕಿನ ಬಗ್ಗೆಯೇ ಚರ್ಚೆಯಾಗುತ್ತಿದೆ. ಸಾಮಾನ್ಯವಾಗಿ ಬೇಸಿಗೆಗಾಲದಲ್ಲಿ ಜಾಸ್ತಿಯಾಗಿ ಹರಡುತ್ತಿದ್ದ ಮದ್ರಾಸ್ ಐ ಎಂಬ ಕಣ್ಣಿನ ಸೋಂಕು ಈಗ ಮಳೆಗಾಲದಲ್ಲೂ ಕಾಣಿಸಿಕೊಳ್ಳತೊಡಗಿದೆ. ಅಲ್ಲದೇ ಕೊಡಗಿನಲ್ಲಿ (Kodagu) ಈಗಾಗಲೇ ಸುಮಾರು 136 ಜನರಲ್ಲಿ ಮದ್ರಾಸ್ ಐ ಸೋಂಕು ಕಾಣಿಸಿಕೊಂಡಿದ್ದು, ಜಿಲ್ಲೆಯ ಜನರಲ್ಲಿ ಆತಂಕ ಮೂಡುವಂತೆ ಮಾಡಿದೆ.

    ಬಿಳಿ ಮತ್ತು ಕೆಂಪು ಬಣ್ಣದ ಪದರ ರೀತಿಯ ವಸ್ತು ಕಣ್ಣಿನಲ್ಲಿ ಕಾಣಿಸಿಕೊಂಡು, ತುರಿಕೆ, ಕಣ್ಣಲ್ಲಿ ನೀರು ಬರುವುದು ಇತ್ಯಾದಿ ಈ ರೋಗದ ಲಕ್ಷಣಗಳಾಗಿವೆ. ಮಂಗಳೂರು ಸೇರಿ ರಾಜ್ಯದ ವಿವಿಧ ಭಾಗಗಳಲ್ಲಿ ಕಾಣಿಸಿಕೊಂಡಿರುವ ಸೋಂಕು ಈಗ ಕೊಡಗಿನಲ್ಲೂ ಕಾಣಿಸಿಕೊಂಡಿದ್ದು, ಜಿಲ್ಲೆಯಲ್ಲಿ ಬಹುವೇಗವಾಗಿ ಹರಡುತ್ತಿದೆ. ಈಗಾಗಲೇ ಜಿಲ್ಲೆಯಲ್ಲಿ 136 ಪ್ರಕರಣಗಳು ಕಂಡು ಬಂದಿದೆ. ಜಿಲ್ಲೆಯಲ್ಲಿರುವ ಹಾಸ್ಟೆಲ್, ಶಾಲಾ, ಕಾಲೇಜು ಮಕ್ಕಳಲ್ಲೇ ಮದ್ರಾಸ್ ಐ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಇದನ್ನೂ ಓದಿ: ನನ್ನ ಹತ್ತಿರನೂ ಪೆನ್‌ಡ್ರೈವ್ ಇದೆ, ಬಿಡುಗಡೆಗಾಗಿ ಕಾಯ್ತಿದ್ದೇನೆ: ಲಕ್ಷ್ಮಣ ಸವದಿ

    ಜುಲೈ ತಿಂಗಳಲ್ಲಿ ಜಿಲ್ಲೆಯ ವಿವಿಧ ಆರೋಗ್ಯ ಕೇಂದ್ರಗಳಲ್ಲಿ ಒಟ್ಟು 136ಕ್ಕೂ ಅಧಿಕ ಪ್ರಕರಣಗಳು ದಾಖಲಾಗಿದೆ. ಹಾಸ್ಟೆಲ್ ಶಾಲೆಗಳಲ್ಲಿ ಒಬ್ಬರಿಗೆ ಕಾಣಿಸಿಕೊಂಡರೆ ಎಲ್ಲರಿಗೂ ಹರಡುವ ಸಾಧ್ಯತೆ ಇದೆ. ಹೀಗಾಗಿ ರೋಗದ ಬಗ್ಗೆ ಮತ್ತು ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಆರೋಗ್ಯ ಇಲಾಖೆಯಿಂದ ಜಾಗೃತಿ ಮೂಡಿಸಲಾಗುತ್ತಿದೆ. ಇದನ್ನೂ ಓದಿ: ರೈತರ ದ್ರೋಹಿ ಯಾರಾದ್ರೂ ಇದ್ರೆ ಅದು ಸಿದ್ದರಾಮಯ್ಯ – ಈಶ್ವರಪ್ಪ ಕಿಡಿ

    ಈ ಸಾಂಕ್ರಮಿಕ ರೋಗ ಬ್ಯಾಕ್ಟೀರಿಯಾ ಮತ್ತು ವೈರಲ್‌ನಿಂದ ಹರಡುವ ಸಾಧ್ಯತೆ ಇದೆ. ಕಳೆದ 20 ದಿನಗಳಲ್ಲಿ ಕೊಡಗು ಜಿಲ್ಲೆಯ ಹಲವೆಡೆ ಮದ್ರಾಸ್ ಐ ಪ್ರಕರಣ ಕಂಡು ಬರುತ್ತಿದೆ. ಹೀಗಾಗಿ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಈ ಸಾಂಕ್ರಮಿಕ ರೋಗ ಹರಡುವ ಬಗ್ಗೆ ಹಾಗೂ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಮನೆ ಮನೆಗೆ ಭೇಟಿ ನೀಡಿ ಕಣ್ಣು ನೋವಿನಿಂದ ಬಳಲುತ್ತಿರುವ ರೋಗಿಗಳಿಗೆ ಔಷಧಿ, ಉಪಚಾರ ಹಾಗೂ ಪ್ರಾಥಮಿಕ ವ್ಯವಸ್ಥೆಯನ್ನು ಸಮುದಾಯದ ಆರೋಗ್ಯ ಕೇಂದ್ರಗಳ ಮೂಲಕ ಮಾಡಲಾಗುತ್ತಿದೆ. ಇದನ್ನೂ ಓದಿ: ಸಿಂಗಾಪುರ ಉದ್ಯಮಿಗಳ ಜೊತೆಗೆ ಕೃಷ್ಣಭೈರೇಗೌಡ ಸಭೆ- 70 ಮಿಲಿಯನ್ ಡಾಲರ್ ಹೂಡಿಕೆ ಸಾಧ್ಯತೆ

    ಜಿಲ್ಲೆಯ ವಿವಿಧ ಭಾಗಗಳಲ್ಲಿ ಇರುವ ಕಣ್ಣಿನ ತಜ್ಞರು ಈ ಪ್ರಕರಣವನ್ನು ಪರಿಶೀಲಿಸುತ್ತಿದ್ದಾರೆ. ಆಶಾ ಕಾರ್ಯಕರ್ತೆಯರು ಇದರ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ:  ತೂಕ ಕಡಿಮೆ ಮಾಡುವ ಉತ್ಸಾಹ ಬೇಡ, ಅತಿಯಾದ ಒತ್ತಡವೂ ಹೃದಯದ ಸಮಸ್ಯೆಗಳಿಗೆ ಕಾರಣ: ಡಾ. ಮಂಜುನಾಥ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರಾಜ್ಯದಲ್ಲಿ ಹೆಚ್ಚಿದ ʻಮದ್ರಾಸ್ ಐʼ ಪ್ರಕರಣ – ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ

    ರಾಜ್ಯದಲ್ಲಿ ಹೆಚ್ಚಿದ ʻಮದ್ರಾಸ್ ಐʼ ಪ್ರಕರಣ – ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ

    ಬೆಂಗಳೂರು: ರಾಜ್ಯದಲ್ಲಿ ಆತಂಕ ಸೃಷ್ಟಿಸಿರುವ ʻಮದ್ರಾಸ್‌ ಐʼ (Madras Eye) ವೈರಾಣುವಿನಿಂದ ಮುನ್ನೆಚ್ಚರಿಕೆ ವಹಿಸಲು ಆರೋಗ್ಯ ಇಲಾಖೆ (Health Department) ಮಾರ್ಗಸೂಚಿ ಹೊರಡಿಸಿದೆ.

    ಕಂಜಕ್ಟಿವೈಟಿಸ್ (Conjunctivitis) ಎಂದು ಕರೆಯಲಾಗುವ ಮದ್ರಾಸ್ ಐ ಅಥವಾ `ಕಣ್ಣು’ ವೈರಾಣುಗಳಿಂದ ಹರಡುವ ಕಣ್ಣಿನ ಸಮಸ್ಯೆ. ವಾತಾವರಣದಲ್ಲಿ ತೇವಾಂಶ ಹೆಚ್ಚಾದಾಗ ಅಥವಾ ಚಳಿ ವಾತಾವರಣದಲ್ಲಿ ಹುಟ್ಟಿಕೊಳ್ಳುವ ವೈರಾಣುಗಳು ನೇರವಾಗಿ ಕಣ್ಣಿನ ಮೇಲೆ ಪರಿಣಾಮ ಉಂಟುಮಾಡುತ್ತದೆ. ಈ ಬಾರಿ ರಾಜ್ಯದಲ್ಲಿ ಮಳೆಗಾಲಕ್ಕೂ ಮುನ್ನವೇ ʻಮದ್ರಾಸ್‌ ಐʼ ಪ್ರಕರಣ ಕಾಲಿಟ್ಟಿತ್ತು. ಈ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜನರು ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳುವಂತೆ ಆರೋಗ್ಯ ಇಲಾಖೆ ಮಾರ್ಗಸೂಚಿ ಪ್ರಕಟಿಸಿದೆ.

    ಮದ್ರಾಸ್‌ ಐ ರೋಗ ಲಕ್ಷಣಗಳು:

    * ಕಣ್ಣು ಕೆಂಪಾಗುವುದು, ನೀರು ಸೋರುವಿಕೆ
    * ಅತಿಯಾದ ಕಣ್ಣೀರು
    * ಕಣ್ಣಿನಲ್ಲಿ ತುರಿಕೆ
    * ಸತತ ಕಣ್ಣು ನೋವು ಮತ್ತು ಚುಚ್ಚುವಿಕೆ
    * ಬೆಳಕನ್ನು ನೋಡಲು ಸಾಧ್ಯವಾಗದೇ ಇರುವುದು
    * ದೃಷ್ಟಿ ಮಂಜಾಗುವುದು
    * ಕಣ್ಣಿನ ಎರಡು ರೆಪ್ಪೆಗಳು ಕೀವು ಮಿಶ್ರಿತದಿಂದ ಕೂಡಿರುವುದು

    ಮದ್ರಾಸ್‌ ಐ ಬಗ್ಗೆ ಮುಂಜಾಗ್ರತಾ ಕ್ರಮ ಏನು ?

    * ವೈಯಕ್ತಿಕವಾಗಿ ಸ್ವಚ್ಛತೆಗೆ ಆದ್ಯತೆ ಕೊಡಿ
    * ಆರೋಗ್ಯವಂತ ವ್ಯಕ್ತಿಯು ಸೊಂಕು ಇರುವ ವ್ಯಕ್ತಿಯ ಕಣ್ಣಿನ ನೇರ ಸಂಪರ್ಕದಿಂದ ದೂರ ಇರುವುದು
    * ಸೋಂಕಿತ ವ್ಯಕ್ತಿ ಬಳಸಿದ ಕರವಸ್ತ್ರ ಮತ್ತು ಇತರ ವಸ್ತುಗಳನ್ನ‌ ಬಳಸಬಾರದು
    * ಆಗಾಗ್ಗೆ ಸೋಪು ನೀರಿನಿಂದ ಕೈಗಳನ್ನ ತೊಳೆಯಬೇಕು
    * ಸೋಂಕಿತ ವ್ಯಕ್ತಿಗಳಿಗೆ ಶೀತ, ಜ್ವರ, ಕೆಮ್ಮು ಇದ್ದಲ್ಲಿ ಕೂಡಲೇ ಚಿಕಿತ್ಸೆ ಪಡೆಯಬೇಕು
    * ತೀವ್ರ ಸೋಂಕು ಉಂಟಾದರೆ ತಕ್ಷಣವೇ ನೇತ್ರ ತಜ್ಞರನ್ನ ಭೇಟಿ ಮಾಡಬೇಕು

    ಏನು ಮಾಡಬೇಕು ?

    * ಸ್ಪಚ್ಫವಾದ ನೀರಿನಿಂದ ಕಣ್ಣುಗಳನ್ನ ಶುಚಿಗೊಳಿಸಿ
    * ಸೋಂಕು ಕಂಡು ಬಂದ ತಕ್ಷಣವೇ ವೈದ್ಯರಿಂದ ಚಿಕಿತ್ಸೆ ಪಡೆಯಿರಿ
    * ಸೋಂಕಿತ ವ್ಯಕ್ತಿಗಳಿಗೆ ಪೌಷ್ಟಿಕ ಆಹಾರ ಕೊಡಬೇಕು
    * ಸೋಂಕಿತ ವ್ಯಕ್ತಿಗಳು ಬಳಸಿದ ಕರವಸ್ತ್ರ, ಇತರ ವಸ್ತುಗಳನ್ನ ಸಂಸ್ಕರಿಸಿ ಬಳಸಿರಿ

    ಏನು ಮಾಡಬಾರದು ?

    * ಕೈಗಳಿಂದ ಪದೇ ಪದೇ ಕಣ್ಣುಗಳನ್ನ ಮುಟ್ಟಬೇಡಿ
    * ಸ್ವಯಂ ಚಿಕಿತ್ಸಾ ವಿಧಾನಗಳನ್ನ ಮಾಡಬಾರದು
    * ಸೋಂಕಿತ ವ್ಯಕ್ತಿಯ ಸನಿಹದಿಂದ ದೂರವಿರಿ
    * ಸೋಂಕಿತ ವ್ಯಕ್ತಿಗಳು ಬಳಸಿದ ವಸ್ತುಗಳನ್ನ ಮುಟ್ಟಬೇಡಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಣ್ಣು ಕೆಂಪಾಗಿಸುತ್ತಿದೆ `ಮದ್ರಾಸ್ ಐ’ – ಮಕ್ಕಳೇ ಇದರ ಟಾರ್ಗೆಟ್!

    ಕಣ್ಣು ಕೆಂಪಾಗಿಸುತ್ತಿದೆ `ಮದ್ರಾಸ್ ಐ’ – ಮಕ್ಕಳೇ ಇದರ ಟಾರ್ಗೆಟ್!

    ಬೆಂಗಳೂರು: ಸಾಮಾನ್ಯವಾಗಿ ಚಳಿಗಾಲದಲ್ಲಿ ಕಾಣಿಸಿಕೊಳ್ಳುತ್ತಿದ್ದ `ಮದ್ರಾಸ್ ಐ’ (Madras Eye) ಈ ಬಾರಿ ಅವಧಿಗೂ ಮುನ್ನ ಮಳೆಗಾಲದಲ್ಲೇ ಎಂಟ್ರಿ ಕೊಟ್ಟು ರಾಜ್ಯದ ಜನರ ಕಣ್ಣು ಕೆಂಪಗಾಗಿಸುತ್ತಿದೆ.

    ಮದ್ರಾಸ್ ಐ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು, ಮಕ್ಕಳೇ ಈ ವೈರಾಣುವಿನ ಟಾರ್ಗೆಟ್ ಎಂದು ಹೇಳಲಾಗಿದೆ. ಪ್ರತಿದಿನ 60 ರಿಂದ 80 ಕೇಸ್‌ಗಳು ರಾಜ್ಯದಲ್ಲಿ ದಾಖಲಾಗುತ್ತಿದ್ದು ಜನರಲ್ಲಿ ಆತಂಕ ಹೆಚ್ಚಿಸಿದೆ. ಇದನ್ನೂ ಓದಿ: ವೈದ್ಯಕೀಯ, ಎಂಜಿನಿಯರಿಂಗ್ ಸೇರಿ ಎಲ್ಲಾ ಕೋರ್ಸ್‌ಗಳಿಗೂ ಒಟ್ಟಿಗೆ ಸಿಇಟಿ ಸೀಟು ಹಂಚಿಕೆ – ಹೊಸ ವ್ಯವಸ್ಥೆ ಹೇಗೆ ಕೆಲಸ ಮಾಡುತ್ತೆ?

    ಕಂಜಕ್ಟಿವೈಟಿಸ್ (Conjunctivitis) ಎಂದು ಕರೆಯಲಾಗುವ ಮದ್ರಾಸ್ ಐ ಅಥವಾ `ಕಣ್ಣು’ ವೈರಾಣುಗಳಿಂದ (Eye Flu) ಹರಡುವ ಕಣ್ಣಿನ ಸಮಸ್ಯೆ. ವಾತಾವರಣದಲ್ಲಿ ತೇವಾಂಶ ಹೆಚ್ಚಾದಾಗ ಅಥವಾ ಚಳಿ ವಾತಾವರಣದಲ್ಲಿ ಹುಟ್ಟಿಕೊಳ್ಳುವ ವೈರಾಣುಗಳು ನೇರವಾಗಿ ಕಣ್ಣಿನ ಮೇಲೆ ಪರಿಣಾಮ ಉಂಟು ಮಾಡುತ್ತವೆ. ಜುಲೈ ಆರಂಭದಿಂದಲೂ ರಾಜ್ಯಾದ್ಯಂತ ಮಳೆ ಸುರಿಯುತ್ತಿದ್ದು, ಸೂರ್ಯನ ಕಿರಣಗಳ ದರ್ಶನ ಕಡಿಮೆಯಾಗಿದೆ. ಇದರ ಪರಿಣಾಮ ವಾತಾವರಣದಲ್ಲಿ ತೇವಾಂಶ ಹೆಚ್ಚಾಗಿ, ಅವಧಿಗೂ ಮೊದಲೇ ಮದ್ರಾಸ್ ಐ ವೈರಾಣು ಎಂಟ್ರಿ ಕೊಟ್ಟಿದೆ. ತಮಿಳುನಾಡಿನಲ್ಲೂ ಈ ಸಮಸ್ಯೆ ಕಾಣಿಸಿಕೊಂಡಿದ್ದು, ಇದೀಗ ರಾಜ್ಯಕ್ಕೆ ಎಂಟ್ರಿ ಕೊಟ್ಟಿದೆ.

    ಮದ್ರಾಸ್ ಐ ರೋಗ ಲಕ್ಷಣಗಳೇನು?
    ಕಣ್ಣು ವಿಪರೀತ ಕೆಂಪಾಗುವುದು, ದೃಷ್ಟಿ ಅಸ್ಪಷ್ಟವಾಗಿ ಕಾಣುವುದು, ತೀರ ಜ್ವರ ಹಾಗೂ ಮೈ-ಕೈ ನೋವು ಕಾಣಿಸಿಕೊಳ್ಳುವುದು ಈ ರೋಗದ ಲಕ್ಷಣಗಳಾಗಿವೆ. ಹೆಚ್ಚಾಗಿ ಮಕ್ಕಳಲ್ಲಿ ಈ ರೋಗ ಕಾಣಿಸಿಕೊಳ್ಳುತ್ತಿದೆ. ಕಳೆದ ವರ್ಷಕ್ಕಿಂತಲೂ ಈ ವರ್ಷ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಅದರಲ್ಲೂ ವಯಸ್ಕರಿಗಿಂದ ಮಕ್ಕಳಲ್ಲೇ ಹೆಚ್ಚಾಗಿ ರೋಗ ಪತ್ತೆಯಾಗುತ್ತಿದ್ದು, ಪೋಷಕರು ಎಚ್ಚರ ವಹಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಇದನ್ನೂ ಓದಿ: ಕೊಡಗು ಜಿಲ್ಲೆಯಲ್ಲಿ ವರುಣಾರ್ಭಟ – ಉಕ್ಕಿ ಹರಿದ ಕಾವೇರಿ ನದಿ; ಬಡಾವಣೆ ಜಲಾವೃತ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಂಗಳೂರಿನಲ್ಲಿ ಮದ್ರಾಸ್ ಐ ಹಾವಳಿ- ನಿತ್ಯ 100ಕ್ಕೂ ಹೆಚ್ಚು ಮಂದಿಗೆ ವೈರಸ್

    ಮಂಗಳೂರಿನಲ್ಲಿ ಮದ್ರಾಸ್ ಐ ಹಾವಳಿ- ನಿತ್ಯ 100ಕ್ಕೂ ಹೆಚ್ಚು ಮಂದಿಗೆ ವೈರಸ್

    ಮಂಗಳೂರು: ಕಡಲನಗರಿ ಮಂಗಳೂರಿನಲ್ಲಿ ಕೆಂಗಣ್ಣು ಕಾಯಿಲೆ ರೋಗದಿಂದ ಜನ ಸುಸ್ತಾಗಿ ಹೋಗಿದ್ದಾರೆ. ಕಣ್ಣಿನ ಆಸ್ಪತ್ರೆ (Eye Hospital) ಗೆ ಚಿಕಿತ್ಸೆಗೆ ಬರುವ ರೋಗಿಗಳ ಸಂಖ್ಯೆ ಹೆಚ್ಚಾಗಿದ್ದು ಜಿಲ್ಲಾ ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ವಹಿಸುವಂತೆ ಜನರಿಗೆ ಕರೆ ನೀಡಿದೆ.

    ದಕ್ಷಿಣಕನ್ನಡ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೆಂಗಣ್ಣು (Madras Eye) ಕಾಯಿಲೆ ಹೆಚ್ಚಾಗ್ತಿದೆ. ಮಂಗಳೂರು ನಗರ ಹೊರವಲಯದ ಬಜಪೆ, ಎಕ್ಕಾರು ಸೇರಿದಂತೆ ಬಂಟ್ವಾಳ, ಬೆಳ್ತಂಗಡಿ ತಾಲೂಕು ಪರಿಸರದಲ್ಲಿ ಹೆಚ್ಚಿನ ಜನರಲ್ಲಿ ಮದ್ರಾದ್ ಐ ಕಾಯಿಲೆ ಆವರಿಸಿದೆ. ಇಡೀ ಊರಿನಲ್ಲಿ ಕಪ್ಪು ಕನ್ನಡಕ ಧರಿಸಿ ಓಡಾಡೋ ಜನ ಕಾಣಿಸ್ತಿದ್ದಾರೆ. ಭಾದಿತರಲ್ಲಿ ವಿದ್ಯಾರ್ಥಿಗಳು, ವ್ಯಾಪಾರಿಗಳು ಹೆಚ್ಚಿದ್ದು ಇವರ ಮೂಲಕ ಈ ವೈರಸ್ ಇತರರಿಗೆ ವೇಗವಾಗಿ ಹರಡುತ್ತಿದೆ. ಹೀಗಾಗಿ ದಿನವೊಂದಕ್ಕೆ 100ಕ್ಕಿಂತ ಹೆಚ್ಚು ಜನ ಈ ಕೆಂಗಣ್ಣು ಕಾಯಿಲಿಗೆ ತುತ್ತಾಗುತ್ತಿದ್ದು ಕಣ್ಣಿನ ಆಸ್ಪತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಜನ ಬರುತ್ತಿದ್ದಾರೆ. ಇದನ್ನೂ ಓದಿ: ಶಿರಾಡಿ ಘಾಟ್ ರಸ್ತೆ ದುರಸ್ಥಿಗೆ ಮನವಿ- ಉದ್ಯಮಿಗಳಿಂದ ಸಂಸದ ವೀರೇಂದ್ರ ಹೆಗ್ಡೆಗೆ ಪತ್ರ

    ಮದ್ರಾಸ್ ಐ ಎಂದು ಕರೆಯಲ್ಪಡುವ ಕೆಂಗಣ್ಣು ಅಥವಾ ಕಂಜಕ್ಟಿವಿಟಿಸ್‍ಗೆ ಕಾರಣ ಬ್ಯಾಕ್ಟೀರಿಯಾ. ಕಣ್ಣಿನ ಬಿಳಿಭಾಗದ ಮೇಲ್ಮೆ ಮತ್ತು ಕಣ್ಣಿನ ರೆಪ್ಪೆಗಳ ಒಳಭಾಗ ಉರಿಯೂತಕ್ಕೆ ಈಡಾಗಿ ಕೆಂಪು ಅಥವಾ ಗುಲಾಬಿ ಬಣ್ಣ ಹೊಂದಿ ಊದಿಕೊಳ್ಳುವುದು ಇದರ ಲಕ್ಷಣ. ಇದು ಸುಲಭವಾಗಿ ಹರಡುವ ಸೋಂಕು ರೋಗವಾಗಿದ್ದು ಇದು ಕಣ್ಣಿನ ಕಪ್ಪು ಗುಡ್ಡೆಗೆ ಹರಡಿದ್ರೆ ದೃಷ್ಟಿಗೆ ಸಂಚಕಾರವಾಗೋ ಸಾಧ್ಯತೆಯಿದೆ. ಹೀಗಾಗಿ ಕೆಂಗಣ್ಣು ರೋಗ ಪ್ರದೇಶದಲ್ಲಿ ಇರುವಾಗ ಕಣ್ಣನ್ನು ಮುಟ್ಟಿಕೊಳ್ಳದಿರುವುದು, ಆಗಾಗ ಕೈ ಸ್ವಚ್ಚಗೊಳಿಸುತ್ತಿರುವುದು, ವೈರಸ್‍ಗೆ ತುತ್ತಾದವರ ಸಂಪರ್ಕದಿಂದ ದೂರವಿರುವುದರಿಂದ ಅಪಾಯದಿಂದ ಪಾರಾಗಬಹುದು.

    ಈ ರೋಗ ಭಾದೆಯಿಂದಾಗಿ ಬೆಳ್ತಂಗಡಿ (Belthangady) ಯ ಖಾಸಗಿ ಶಾಲೆಯೊಂದಕ್ಕೆ ರಜೆ ಘೋಷಿಸಲಾಗಿದೆ. ರೋಗಭಾದೆಗೆ ಒಳಗಾಗಿರುವ ವಿದ್ಯಾರ್ಥಿಗಳಿಗೆ ರಜೆ ನೀಡುವಂತೆ ಶಿಕ್ಷಣ ಇಲಾಖೆ ಶಾಲೆಗಳ ಮುಖ್ಯಸ್ಥರುಗಳಿಗೆ ಸೂಚನೆ ನೀಡಿದೆ. ಒಟ್ಟಿನಲ್ಲಿ ಕೆಂಗಣ್ಣು ಕಾಯಿಲೆಯಿಂದ ಜೀವ ಹಾನಿ ಆಗದೇ ಇದ್ದರು ದೃಷ್ಟಿ ದೋಷ ಉಂಟಾಗದಂತೆ ಎಚ್ಚರಿಕೆ ವಹಿಸಬೇಕಾಗಿದೆ. ಇದನ್ನೂ ಓದಿ: ಮಗನ ಅನಾರೋಗ್ಯ ನಿವಾರಿಸಿದ ಕೊರಗಜ್ಜನಿಗೆ ಉಕ್ರೇನ್ ಕುಟುಂಬದಿಂದ ಅಗೆಲು ಸೇವೆ

    Live Tv
    [brid partner=56869869 player=32851 video=960834 autoplay=true]