Tag: madras high court

  • ತಮಿಳುನಾಡಿನಲ್ಲಿ ಶೀಘ್ರವೇ SIR- ಮದ್ರಾಸ್ ಹೈಕೋರ್ಟ್‌ಗೆ ಚುನಾವಣಾ ಆಯೋಗ ಮಾಹಿತಿ

    ತಮಿಳುನಾಡಿನಲ್ಲಿ ಶೀಘ್ರವೇ SIR- ಮದ್ರಾಸ್ ಹೈಕೋರ್ಟ್‌ಗೆ ಚುನಾವಣಾ ಆಯೋಗ ಮಾಹಿತಿ

    ಚೆನ್ನೈ: ಮುಂಬರುವ ವಿಧಾನಸಭಾ ಚುನಾವಣೆ ಸಿದ್ಧತೆಯಾಗಿ ತಮಿಳುನಾಡಿನಲ್ಲಿ (Tamil Nadu) ಶೀಘ್ರದಲ್ಲೇ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಡೆಸಲಾಗುವುದು ಎಂದು ಚುನಾವಣಾ ಆಯೋಗ (Election Commission of India) ಮದ್ರಾಸ್ ಹೈಕೋರ್ಟ್‌ಗೆ (Madras High Court) ತಿಳಿಸಿದೆ. ಪರಿಷ್ಕರಣೆ ಪ್ರಕ್ರಿಯೆಯು ಮುಂದಿನ ವಾರ ಪ್ರಾರಂಭವಾಗುವ ಸಾಧ್ಯತೆ ಇದೆ.

    ಇದಲ್ಲದೆ, ಚುನಾವಣೆ ಎದುರಿಸುತ್ತಿರುವ ಇತರ ಹಲವಾರು ರಾಜ್ಯಗಳು ಸಹ ಬಿಹಾರದ ಮಾದರಿಯಲ್ಲಿ ಇದೇ ರೀತಿಯ ವ್ಯಾಯಾಮಗಳನ್ನು ಕೈಗೊಳ್ಳಲಿದ್ದೇವೆ ಎಂದು ಚುನಾವಣಾ ಆಯೋಗ ಮುಖ್ಯ ನ್ಯಾಯಮೂರ್ತಿ ಮಣೀಂದ್ರ ಮೋಹನ್ ಶ್ರೀವಾಸ್ತವ ಮತ್ತು ನ್ಯಾಯಮೂರ್ತಿ ಜಿ.ಅರುಳ್ ಮುರುಗನ್ ಅವರ ಪೀಠದ ಮುಂದೆ ತಿಳಿಸಿದೆ. ಇದನ್ನೂ ಓದಿ: ಸಿಎಂ ಅವ್ರೇ ನಿಮ್ಮ ಇಲಾಖೆಯಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ, ಪ್ರತಿ ಇಲಾಖೆಯೂ ರೇಡ್‌ ಕಾರ್ಡ್‌ ಫಿಕ್ಸ್‌ ಮಾಡಿದೆ: ಮೋಹನ್ ದಾಸ್ ಪೈ

    ಎಐಎಡಿಎಂಕೆ ಮಾಜಿ ಶಾಸಕ ಬಿ. ಸತ್ಯನಾರಾಯಣನ್ ಅವರು ಟಿ.ನಗರ ವಿಧಾನಸಭಾ ಕ್ಷೇತ್ರದ 229 ಮತಗಟ್ಟೆಗಳಲ್ಲಿ ಸಂಪೂರ್ಣ ಮತ್ತು ಪಾರದರ್ಶಕ ಮರು ಪರಿಶೀಲನೆ ನಡೆಸಲು ಚುನಾವಣಾ ಆಯೋಗಕ್ಕೆ ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ್ದರು. ಚೆನ್ನೈನ ಟಿ ನಗರ ಕ್ಷೇತ್ರದ ಅಧಿಕಾರಿಗಳು ಆಡಳಿತಾರೂಢ ಡಿಎಂಕೆಗೆ ಲಾಭ ಮಾಡಿಕೊಡಲು ಉದ್ದೇಶಪೂರ್ವಕವಾಗಿ ಸುಮಾರು 13,000 ಎಐಎಡಿಎಂಕೆ ಬೆಂಬಲಿಗರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಿದ್ದಾರೆ ಎಂದು ಆರೋಪಿಸಿದ್ದರು. ಈ ಅರ್ಜಿಯ ವಿಚಾರಣೆ ವೇಳೆ ಆಯೋಗ ಹೈಕೋರ್ಟ್‌ಗೆ ಈ ಮಾಹಿತಿ ನೀಡಿದೆ. ಇದನ್ನೂ ಓದಿ: FATF ಹೊಸ ಪಟ್ಟಿ ಬಿಡುಗಡೆ – ಉತ್ತರ ಕೊರಿಯಾ, ಇರಾನ್, ಮ್ಯಾನ್ಮಾರ್ ಮತ್ತೆ ಕಪ್ಪುಪಟ್ಟಿಗೆ

  • ನಟ ವಿಜಯ್ ರ‍್ಯಾಲಿಯಲ್ಲಿ ಕಾಲ್ತುಳಿತ ಪ್ರಕರಣ – ಸಿಬಿಐ ತನಿಖೆಗೆ ನಿರಾಕರಿಸಿದ ಮದ್ರಾಸ್ ಹೈಕೋರ್ಟ್

    ನಟ ವಿಜಯ್ ರ‍್ಯಾಲಿಯಲ್ಲಿ ಕಾಲ್ತುಳಿತ ಪ್ರಕರಣ – ಸಿಬಿಐ ತನಿಖೆಗೆ ನಿರಾಕರಿಸಿದ ಮದ್ರಾಸ್ ಹೈಕೋರ್ಟ್

    – ರಾಜಕೀಯ ರ‍್ಯಾಲಿ ಕಠಿಣ ಷರತ್ತು

    ಚೆನ್ನೈ: ಕರೂರಿನಲ್ಲಿ ನಟ, ರಾಜಕಾರಣಿ ವಿಜಯ್ ಅವರ ರ‍್ಯಾಲಿಯಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 41 ಜನರು ಸಾವನ್ನಪ್ಪಿದ ಪ್ರಕರಣದ ತನಿಖೆಯನ್ನು ಕೇಂದ್ರೀಯ ತನಿಖಾ ದಳಕ್ಕೆ ಆದೇಶಿಸಲು ಮದ್ರಾಸ್ ಹೈಕೋರ್ಟ್ ನಿರಾಕರಿಸಿದೆ.

    ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ಅರ್ಜಿಗಳನ್ನು ಒಟ್ಟುಗೂಡಿಸಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಂ ದಂಡಪಾಣಿ ಮತ್ತು ಎಂ ಜೋತಿರಾಮನ್ ಅವರ ಪೀಠವು ಸಿಬಿಐ ತನಿಖೆಗೆ ನೀಡಲು ನಿರಾಕರಿಸಿತು.

    ಘಟನೆಯ ಕುರಿತು ತಮಿಳುನಾಡು ಪೊಲೀಸರ ತನಿಖೆ ಆರಂಭಿಕ ಹಂತದಲ್ಲಿದೆ. ಸಿಬಿಐ ತನಿಖೆ ಕೋರಿದ ಅರ್ಜಿದಾರರು ಕಾಲ್ತುಳಿತಕ್ಕೆ ಬಲಿಯಾಗಿರಲಿಲ್ಲ. ಕಾಲ್ತುಳಿತಕ್ಕೆ ಬಲಿಯಾದ ಕುಟುಂಬಸ್ಥರು ಈ ನ್ಯಾಯಾಲಯಕ್ಕೆ ಬಂದರೆ, ನಾವು ಅವರನ್ನು ರಕ್ಷಿಸುತ್ತೇವೆ. ಈ ನ್ಯಾಯಾಲಯವನ್ನು ರಾಜಕೀಯ ಕ್ಷೇತ್ರವೆಂದು ಪರಿಗಣಿಸಬೇಡಿ. ತನಿಖೆಯಲ್ಲಿ ಏನಾದರೂ ತಪ್ಪಾದಲ್ಲಿ, ನೀವು ಬನ್ನಿ. ತನಿಖೆ ಇನ್ನು ಆರಂಭಿಕ ಹಂತದಲ್ಲಿದೆ ಎಂದು ನ್ಯಾಯಾಲಯ ಛೀಮಾರಿ ಹಾಕಿದೆ.

    ರಾಜ್ಯ ಅಥವಾ ರಾಷ್ಟ್ರೀಯ ಹೆದ್ದಾರಿಗಳ ಬಳಿ ಯಾವುದೇ ರ‍್ಯಾಲಿಗಳು ಅಥವಾ ಸಭೆಗಳನ್ನು ನಡೆಸಲು ಪ್ರಮಾಣಿತ ಕಾರ್ಯಾಚರಣಾ ಕಾರ್ಯವಿಧಾನಗಳು (SOP ಗಳು) ರೂಪಿಸುವವರೆಗೆ ಅನುಮತಿಸುವುದಿಲ್ಲ ಎಂಬ ರಾಜ್ಯ ಸರ್ಕಾರದ ವಾದವನ್ನು ನ್ಯಾಯಪೀಠ ದಾಖಲಿಸಿಕೊಂಡಿತು.

    ರಾಜಕೀಯ ರ‍್ಯಾಲಿಗಳು ಅಥವಾ ಸಭೆಗಳು ನಡೆದಾಗಲೆಲ್ಲಾ, ಗೊತ್ತುಪಡಿಸಿದ ಸ್ಥಳಗಳಲ್ಲಿಯೂ ಸಹ, ಕುಡಿಯುವ ನೀರು ಮತ್ತು ನೈರ್ಮಲ್ಯ ಸೌಲಭ್ಯಗಳಿಗೆ ಸೂಕ್ತ ವ್ಯವಸ್ಥೆಗಳನ್ನು ಮಾಡಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳಲು ನ್ಯಾಯಾಲಯವು ಸರ್ಕಾರ ಮತ್ತು ರಾಜಕೀಯ ಪಕ್ಷಗಳಿಗೆ ನಿರ್ದೇಶನ ನೀಡಿತು. ಇದಲ್ಲದೆ, ರ‍್ಯಾಲಿಗಳಲ್ಲಿ ತಪ್ಪಿಸಿಕೊಳ್ಳುವ ಮಾರ್ಗಗಳು ಮತ್ತು ಪಾರ್ಕಿಂಗ್ ಸೌಲಭ್ಯಗಳನ್ನು ಸಹ ಒದಗಿಸಬೇಕು ಎಂದು ನ್ಯಾಯಾಲಯ ಹೇಳಿದೆ.

    ಕರೂರ್ ಕಾಲ್ತುಳಿತದ ನಂತರ ಸಲ್ಲಿಸಲಾದ ಒಂದು ಡಜನ್‌ಗೂ ಹೆಚ್ಚು ಅರ್ಜಿಗಳ ಸಲ್ಲಿಕೆಯಾಗಿವೆ‌. ಒಂದು ಗುಂಪಿನ ಅರ್ಜಿಗಳು ಸಿಬಿಐ ತನಿಖೆಗೆ ಕೋರಿದರೆ, ಇನ್ನೊಂದು ಗುಂಪಿನ ಅರ್ಜಿಗಳು ಎಲ್ಲಾ ಸಭೆಗಳಿಗೆ SOP ಗಳನ್ನು ರೂಪಿಸುವಂತೆ ಕೋರಿದವು. ಮೂರನೇ ಗುಂಪಿನ ಅರ್ಜಿಗಳು ಹೆಚ್ಚಿನ ಪರಿಹಾರವನ್ನು ನೀಡುವಂತೆ ಕೋರಿವೆ. ಪರಿಹಾರ ಹೆಚ್ಚಿಸುವ ಬಗ್ಗೆ ಕೋರ್ಟ್ ಸರ್ಕಾರಕ್ಕೆ ನೋಟಿಸ್ ನೀಡಿದ್ದು, ಅ.18 ಕ್ಕೆ ವಿಚಾರಣೆ ಮುಂದೂಡಲಾಗಿದೆ.

  • TVK Vijay Rally Stampede | ಮದ್ರಾಸ್‌ ಹೈಕೋರ್ಟ್‌ನಲ್ಲಿಂದು ವಿಚಾರಣೆ – ಸಾವಿನ ಸಂಖ್ಯೆ 41ಕ್ಕೆ ಏರಿಕೆ

    TVK Vijay Rally Stampede | ಮದ್ರಾಸ್‌ ಹೈಕೋರ್ಟ್‌ನಲ್ಲಿಂದು ವಿಚಾರಣೆ – ಸಾವಿನ ಸಂಖ್ಯೆ 41ಕ್ಕೆ ಏರಿಕೆ

    – ಸಿಬಿಐ ತನಿಖೆಗೆ ಆಗ್ರಹಿಸಿ ಕೋರ್ಟ್‌ ಮೆಟ್ಟಿಲೇರಿದ್ದ ನಟ ವಿಜಯ್‌ & ಟೀಂ

    ಚೆನ್ನೈ: ಕರೂರು ರಾಜಕೀಯ ರ‍್ಯಾಲಿವೇಳೆ ಸಂಭವಿಸಿದ ಕಾಲ್ತುಳಿತ ದುರಂತದ (TVK Vijay Rally Stampede) ಬಗ್ಗೆ ಸ್ವತಂತ್ರ ತನಿಖೆ ಅಥವಾ ಸಿಬಿಐ ತನಿಖೆ ನಡೆಸಬೇಕೆಂದು ನಟ ಹಾಗೂ ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್‌ ದಳಪತಿ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ ನಡೆಯಲಿದೆ.

    ವಿಜಯ್ ಅವರ ಪರವಾಗಿ ತಮಿಳಗ ವೆಟ್ರಿ ಕಳಗಂ ಪಕ್ಷದ ಕಾನೂನು ತಂಡ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಮದ್ರಾಸ್‌ ಹೈಕೋರ್ಟ್‌ನಲ್ಲಿ ನಡೆಯಲಿದೆ. ಈ ನಡುವೆ ರ‍್ಯಾಲಿಗಳಿಗೆ ಇನ್ಮುಂದೆ ಪ್ರೋಟೋಕಾಲ್‌ ತಯಾರಿಸುವವರೆಗೆ ನಟ ವಿಜಯ್‌ ರ‍್ಯಾಲಿಗೂ ಅನುಮತಿ ನೀಡದಂತೆ ಅರ್ಜಿ ಸಲ್ಲಿಸಿದೆ. ಈ ಅರ್ಜಿಯೂ ಇಂದೇ ವಿಚಾರಣೆಗೆ ಬರುವ ಸಾಧ್ಯತೆ. ಇದನ್ನೂ ಓದಿ: Vijay Rally Stampede | ದುರಂತದ ಬೆನ್ನಲ್ಲೇ ನಟ ವಿಜಯ್‌ ನಿವಾಸಕ್ಕೆ ಬಾಂಬ್‌ ಬೆದರಿಕೆ – ಬಿಗಿ ಭದ್ರತೆ

    ಈ ಕುರಿತು ಮಾತನಾಡಿರುವ ಟಿವಿಕೆ ಪಕ್ಷದ ವಕೀಲ ಅರಿವಳಗನ್‌, ಕರೂರಿನಲಿ ನಡೆದ ಘಟನೆ ಹಿಂದೆ ಕ್ರಿಮಿನಲ್‌ ಪಿತೂರಿ ಇದೆ. ಆದ್ದರಿಂದ ನಾವು ರಾಜಕೀಯ ಸಂಸ್ಥೆಯ ಮೂಲಕ ತನಿಖೆ ಮಾಡೋದು ಬೇಡ. ಸ್ವತಂತ್ರ ಸಂಸ್ಥೆ ಮೂಲಕ ತನಿಖೆ ನಡೆಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದೇವೆ. ನ್ಯಾಯಾಲಯವೇ ವಿಶೇಷ ತನಿಖಾ ತಂಡವನ್ನ ರಚಿಸಬೇಕು. ಇಲ್ಲದಿದ್ದರೆ ಪ್ರಕರಣವನ್ನ ಸಿಬಿಐಗೆ ವಹಿಸಬೇಕು ಅಂತ ಆಗ್ರಹಿಸಿದ್ದಾರೆ,

    ಸಾವಿನ ಸಂಖ್ಯೆ ಏರಿಕೆ
    ಇನ್ನೂ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 41ಕ್ಕೆ ಏರಿಕೆಯಾಗಿದೆ. ಕರೂರು ಸರ್ಕಾರಿ ಆಸ್ಪತ್ರೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಶಾರದಾ ಮೃತಪಟ್ಟಿದ್ದಾರೆ. ಇದನ್ನೂ ಓದಿ: TVK Vijay Rally Stampede | ದುರಂತದಲ್ಲಿ 2 ವರ್ಷದ ಕಂದಮ್ಮ ಬಲಿ – ಕುಟುಂಬದಲ್ಲಿ ಮುಗಿಲು ಮುಟ್ಟಿದ ಆಕ್ರಂದನ

    ಸಿಸಿಟಿವಿ, ಡ್ರೋನ್‌ ವಿಡಿಯೋ ಪರಿಶೀಲನೆ
    ಈಗಾಗಲೇ ಪ್ರಕರಣ ದಾಖಲಿಸಿಕೊಂಡು ಪ್ರಾಥಮಿಕ ತನಿಖೆ ಆರಂಭಿಸಿರುವ ಪೊಲೀಸರು ಕಾಲ್ತುಳಿತದ ಸ್ಥಳದಲ್ಲಿರುವ ಎಲ್ಲಾ ಸಿಸಿಕ್ಯಾಮರಾ, ಡ್ರೋನ್ ವಿಡಿಯೋ ಹಾಗೂ ಮೊಬೈಲ್‌ಗಳಲ್ಲಿ ರೆಕಾರ್ಡ್ ಮಾಡಿದ್ದ ವಿಡಿಯೋಗಳನ್ನ ವಶಕ್ಕೆ ಪಡೆದು ಪರಿಶೀಲಿಸುತ್ತಿದ್ದಾರೆ.

  • ಸಿಡಿದೆದ್ದ ಜಯಂ ರವಿ: ಪರಿಹಾರಕ್ಕಾಗಿ 9 ಕೋಟಿ ಬೇಡಿಕೆ

    ಸಿಡಿದೆದ್ದ ಜಯಂ ರವಿ: ಪರಿಹಾರಕ್ಕಾಗಿ 9 ಕೋಟಿ ಬೇಡಿಕೆ

    ಮಿಳು ನಟ ಜಯಂ ರವಿ (Jayam Ravi) ಇತ್ತೀಚೆಗೆ ತಮ್ಮ ಸಿನಿಮಾಗಳಿಗಿಂತ ವೈಯಕ್ತಿಕ ಕಾರಣಗಳಿಂದಲೇ ಹೆಚ್ಚು ಸುದ್ದಿಯಲ್ಲಿದ್ದಾರೆ. ಪತ್ನಿಯೊಂದಿಗೆ ಜಗಳ ಹಾಗೂ ವಿಚ್ಛೇದನ ವಿಚಾರವಾಗಿ ಜಯಂ ರವಿ ಸುದ್ದಿಯಾಗಿದ್ದರು. ಇದೀಗ ಸಿನಿಮಾ ನಿರ್ಮಾಪಕರು ಹಾಗೂ ನಿರ್ಮಾಣ ಸಂಸ್ಥೆಯ ವಿಚಾರವಾಗಿ ಕೋರ್ಟ್ ಮೆಟ್ಟಿಲು ಹತ್ತಿದ್ದಾರೆ.

    ಜಯಂ ರವಿ ಜೊತೆ ಸಿನಿಮಾ ಮಾಡುವುದಾಗಿ 80 ದಿನಗಳ ಕಾಲ್‌ಶೀಟ್ ಪಡೆದು ಅನಾವಶ್ಯಕವಾಗಿ ಕಾಲಹರಣ ಮಾಡಿದೆ. ಕಾಲ್‌ಶೀಟ್ ಕೊಟ್ಟ ದಿನಾಂಕದಂದು ಯಾವುದೇ ಸಿನಿಮಾ ಮಾಡಿಲ್ಲ. ಹೀಗಾಗಿ, ಜಯಂ ರವಿ ಇದಕ್ಕೆ ಪರಿಹಾರವಾಗಿ ನಿರ್ಮಾಪಕರು 9 ಕೋಟಿ ಹಣ ನೀಡಬೇಕು ಅಂತಾ ಕೋರ್ಟ್ ಮುಂದೆ ಹೋಗಿದ್ದಾರೆ. ಇದನ್ನೂ ಓದಿ: ಸುಪ್ರೀಂ ಟೆನ್ಶನ್‌ ನಡ್ವೆಯೂ ʻಡೆವಿಲ್ʼ ಸಂಭ್ರಮಕ್ಕೆ ಸಜ್ಜಾದ ಡಿಬಾಸ್‌ ಫ್ಯಾನ್ಸ್

    ಅಂದಹಾಗೆ ನಟ ರವಿ ಮೋಹನ್ ಅವರು ಬಾಂಬೆ ಟಚ್ ಗೋಲ್ಡ್ ಯೂನಿವರ್ಸ್ ಪ್ರೈವೆಟ್ ಲಿಮಿಟೆಡ್ ಹೆಸರಿನ ನಿರ್ಮಾಣ ಸಂಸ್ಥೆಗೆ ಬರೋಬ್ಬರಿ 80 ದಿನಗಳ ಕಾಲ್‌ಶೀಟ್ ನೀಡಿದ್ದರಂತೆ. ಈ ಸಂಸ್ಥೆ ಸಿನಿಮಾವನ್ನ ಪ್ರಾರಂಭ ಕೂಡ ಮಾಡಿಲ್ಲ. ಅಲ್ಲದೇ ಆ ಕಾಲ್‌ಶೀಟ್ ಕೊಟ್ಟ ಟೈಂನಲ್ಲಿ ಜಯಂ ರವಿ ಬೇರೆ ಯಾವುದೇ ಪ್ರಾಜೆಕ್ಟ್ ಒಪ್ಪಿಕೊಂಡಿಲ್ಲ. ಕಾಲ್‌ಶೀಟ್ ಮೇಲೆ ಎರಡು ಸಿನಿಮಾಗಳ ಆಫರ್ ಕೂಡಾ ಬಂದಿದ್ದರೂ ಒಪ್ಪಿಕೊಳ್ಳಲಿಲ್ಲ.

    ಸುಳ್ಳು ಭರವಸೆ ನೀಡಿ ಸಿನಿಮಾನೂ ಮಾಡದೇ ಇರೋ ಕಾರಣಕ್ಕೆ ಜಯಂ ರವಿ ಬಾಂಬೆ ಟಚ್ ಗೋಲ್ಡ್ ಯೂನಿವರ್ಸ್ ಪ್ರೈವೆಟ್ ಲಿಮಿಟೆಡ್ ಹೆಸರಿನ ನಿರ್ಮಾಣ ಸಂಸ್ಥೆ ವಿರುದ್ಧ ಹೈದರಾಬಾದ್ ಕೋರ್ಟ್‌ನಲ್ಲಿ ಅರ್ಜಿ ಹಾಕಿದ್ದಾರಂತೆ. ಇದನ್ನೂ ಓದಿ: ಫೋಟೋಶೂಟ್ ಮೂಡ್‌ನಲ್ಲಿ ಪವಿತ್ರಾ ಗೌಡ

  • ನಯನತಾರಾಗೆ ನೋಟಿಸ್ : 5 ಕೋಟಿ ರೂಪಾಯಿಗೆ ಡಿಮಾಂಡ್

    ನಯನತಾರಾಗೆ ನೋಟಿಸ್ : 5 ಕೋಟಿ ರೂಪಾಯಿಗೆ ಡಿಮಾಂಡ್

    ಟಿ ನಯನತಾರಾಗೆ (Nayanthara) ಡಾಕ್ಯುಮೆಂಟರಿ ವಿಚಾರದಲ್ಲಿ ಪದೇ ಪದೇ ನೋಟಿಸ್ (Legal Notice) ಜಾರಿ ಆಗುತ್ತಿದೆ. ನಯನತಾರಾ ಕುರಿತಂತೆ ನೆಟ್ ಫ್ಲಿಕ್ಸ್ ನಲ್ಲಿ ಡಾಕ್ಯುಮೆಂಟರಿ ಪ್ರಸಾರವಾಗುತ್ತಿದ್ದು, ಈ ಹಿಂದೆ ತಮ್ಮ ಸಿನಿಮಾದ ಕೆಲವು ದೃಶ್ಯಗಳನ್ನು ಈ ಡಾಕ್ಯುಮೆಂಟರಿಯಲ್ಲಿ ಬಳಸಲಾಗಿದೆ ಅಂತ ನಟ ಧನುಷ್ ನೋಟಿಸ್ ನೀಡಿದ್ದರು. ಐದು ಕೋಟಿ ರೂಪಾಯಿ ಪರಿಹಾರ ಕೂಡ ಕೇಳಿದ್ದರು. ಆ ಕೇಸ್ ಇನ್ನೂ ಕೋರ್ಟ್ ನಲ್ಲಿ ಇದೆ.

    ಧನುಷ್ ನಿರ್ಮಾಣದಲ್ಲಿ ನಯನತಾರಾ ನಟನೆಯಲ್ಲಿ ಮೂಡಿ ಬಂದಿದ್ದ ನಾನುಂ ರೌಡಿ ದಾ ಸಿನಿಮಾದ ಕೆಲವು ದೃಶ್ಯಗಳನ್ನು ಡಾಕ್ಯುಮೆಂಟರಿಯಲ್ಲಿ ಅಳವಡಿಸಲಾಗಿತ್ತು. ಕಾಪಿರೈಟ್ ಉಲ್ಲಂಘನೆ ಆಗಿದೆ ಅನ್ನುವ ಕಾರಣಕ್ಕಾಗಿ ಧನುಷ್ ಸಂಸ್ಥೆ ಐದು ಕೋಟಿ ರೂಪಾಯಿ ಪರಿಹಾರ ನೀಡಬೇಕು ಅಂತ ನೋಟಿಸ್ ಜಾರಿ ಮಾಡಿತ್ತು.

    ಇದೀಗ ಅದೇ ಡಾಕ್ಯುಮೆಂಟರಿಗೆ ಸಂಬಂಧಿಸಿದಂತೆ ಮತ್ತೊಂದು ಸಿನಿಮಾ ಟೀಮ್ ನಿಂದ ನಯನತಾರಾಗೆ ನೋಟಿಸ್ ಕಳುಹಿಸಲಾಗಿದೆ. ಆಪ್ತಮಿತ್ರ ಸಿನಿಮಾದ ರಿಮೇಕ್ ಚಂದ್ರಮುಖಿ (Chandramukhi) ಸಿನಿಮಾದ ಕೆಲವು ದೃಶ್ಯಗಳನ್ನು ನಯನತಾರಾ ಅವರ ಡಾಕ್ಯುಮೆಂಟರಿಯಲ್ಲಿ ಬಳಸಿಕೊಳ್ಳಲಾಗಿದೆ ಎನ್ನುವ ಕಾರಣಕ್ಕಾಗಿ ನಿರ್ಮಾಣ ಸಂಸ್ಥೆಯು ನೋಟಿಸ್ ಕೊಟ್ಟಿದೆ. ಐದು ಕೋಟಿ ರೂಪಾಯಿ ಪರಿಹಾರ ಕೊಡುವಂತೆ ನೋಟಿಸ್ ನಲ್ಲಿ ತಿಳಿಸಲಾಗಿದೆ.

    ಧನುಷ್ ನೋಟಿಸ್ ಕಳುಹಿಸಿದ್ದಕ್ಕೆ ಕೆಂಡ ಕಾರಿದ್ದರು ನಯನತಾರಾ. ಸೋಷಿಯಲ್ ಮೀಡಿಯಾದಲ್ಲಿ ಧನುಷ್ ವ್ಯಕ್ತಿತ್ವದ ಕುರಿತು ಬರೆದುಕೊಂಡಿದ್ದರು. ಈಗ ಚಂದ್ರಮುಖಿ ಸಿನಿಮಾ ಟೀಮ್ ಕುರಿತು ಯಾವ ರೀತಿಯಲ್ಲಿ ಪ್ರತಿಕ್ರಿಯೆ ಕೊಡುತ್ತಾರೋ ಕಾದು ನೋಡಬೇಕು.

  • ಅಣ್ಣಾ ವಿವಿ ಲೈಂಗಿಕ ದೌರ್ಜನ್ಯ ಕೇಸ್ ರಾಜಕೀಯಗೊಳಿಸಲಾಗುತ್ತಿದೆ: ಮದ್ರಾಸ್ ಹೈಕೋರ್ಟ್

    ಅಣ್ಣಾ ವಿವಿ ಲೈಂಗಿಕ ದೌರ್ಜನ್ಯ ಕೇಸ್ ರಾಜಕೀಯಗೊಳಿಸಲಾಗುತ್ತಿದೆ: ಮದ್ರಾಸ್ ಹೈಕೋರ್ಟ್

    – ಮಹಿಳೆಯರ ಸುರಕ್ಷತೆಯ ಬಗ್ಗೆ ನಿಜವಾದ ಕಾಳಜಿ ಯಾರಿಗೂ ಇಲ್ಲ ಕೋರ್ಟ್‌ ಕಳವಳ

    ಚೆನ್ನೈ: ಅಣ್ಣಾ ವಿಶ್ವವಿದ್ಯಾನಿಲಯದಲ್ಲಿ (Anna University) ನಡೆದ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ರಾಜಕೀಯಗೊಳಿಸಲಾಗುತ್ತಿದೆ ಎಂದು ಮದ್ರಾಸ್ ಹೈಕೋರ್ಟ್  (Madras High Court) ಅಸಮಾಧಾನ ವ್ಯಕ್ತಪಡಿಸಿದೆ.

    ಘಟನೆಯ ಕುರಿತು ಚೆನ್ನೈನಲ್ಲಿ (Chennai) ಪ್ರತಿಭಟನೆಗೆ ಪೊಲೀಸರ ಅನುಮತಿ ನಿರಾಕರಣೆ ಕುರಿತು ಪಟ್ಟಾಲಿ ಮಕ್ಕಳ್ ಕಚ್ಚಿ (ಪಿಎಂಕೆ) ವಕೀಲರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಾಲಯ ಈ ಅಭಿಪ್ರಾಯ ವ್ಯಕ್ತಪಡಿಸಿದೆ. ಅಣ್ಣಾ ವಿಶ್ವವಿದ್ಯಾನಿಲಯದ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ರಾಜಕೀಯಗೊಳಿಸಲಾಗುತ್ತಿದೆ. ಮಹಿಳೆಯರ ಸುರಕ್ಷತೆಯ ಬಗ್ಗೆ ನಿಜವಾದ ಕಾಳಜಿ ಯಾರಿಗೂ ಇಲ್ಲ ಎಂದು ಹೈಕೋರ್ಟ್ ಕಳವಳ ವ್ಯಕ್ತಪಡಿಸಿದೆ.

    ಡಿ.23 ರಂದು ಅಣ್ಣಾ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ 19 ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿತ್ತು. ಈ ಸಂಬಂಧ ರಾಷ್ಟ್ರೀಯ ಮಹಿಳಾ ಆಯೋಗದ (NCW) ನಿವೃತ್ತ ಐಪಿಎಸ್ ಅಧಿಕಾರಿ ಪ್ರವೀಣ್ ದೀಕ್ಷಿತ್ ಸೇರಿದಂತೆ ಇಬ್ಬರು ಸದಸ್ಯರ ಸತ್ಯಶೋಧನಾ ಸಮಿತಿಯನ್ನು ರಚಿಸಿದೆ. ಸಮಿತಿಯು ವಿಶ್ವವಿದ್ಯಾನಿಲಯಕ್ಕೆ ಭೇಟಿ ನೀಡಿ, ಸಂತ್ರಸ್ತೆ, ಆಕೆಯ ಕುಟುಂಬ, ಅಧಿಕಾರಿಗಳು ಮತ್ತು ಎನ್‌ಜಿಒಗಳನ್ನು ಭೇಟಿ ಮಾಡಿ ಮಾಹಿತಿ ಕಲೆಹಾಕಿದೆ.

    ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ NWS, ಅಣ್ಣಾ ವಿಶ್ವವಿದ್ಯಾನಿಲಯದಲ್ಲಿ ಭದ್ರತೆಯನ್ನು ಮೌಲ್ಯಮಾಪನ ಮಾಡಲಾಗಿದೆ. ಅಲ್ಲದೇ ಶಿಫಾರಸುಗಳೊಂದಿಗೆ ವಿವರವಾದ ವರದಿಯನ್ನು ಸಿದ್ಧಪಡಿಸಲಾಗಿದೆ ಎಂದು ಬರೆದುಕೊಂಡಿದೆ.

    ಸಂತ್ರಸ್ತೆ ನೀಡಿದ್ದ ದೂರಿನಲ್ಲಿ, ದುಷ್ಕರ್ಮಿಯು ತನ್ನ ಮತ್ತು ಸ್ನೇಹಿತನ ಮೇಲೆ ದಾಳಿ ಮಾಡಿದ್ದಾನೆ. ಪೊದೆಗೆ ಎಳೆದೊಯ್ದು ದೌರ್ಜನ್ಯ ಎಸಗಿದ್ದಾನೆ ಎಂದು ಉಲ್ಲೇಖಿಸಿದ್ದಳು.

    ದೂರು ದಾಖಲಾದ ಕೆಲವೇ ಕ್ಷಣಗಳಲ್ಲಿ ಆರೋಪಿಯನ್ನು ರಸ್ತೆ ಬದಿಯ ಬಿರಿಯಾನಿ ಮಾರಾಟಗಾರ ಜ್ಞಾನಶೇಖರನ್ ಎಂದು ಗುರುತಿಸಲಾಗಿತ್ತು. ಆರೋಪಿ ಕ್ರಿಮಿನಲ್ ಹಿನ್ನೆಲೆ ಹೋದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

    ಈ ಸಂಬಂಧ ಪ್ರಕರಣದ ತನಿಖೆಗೆ ಮೂವರು ಹಿರಿಯ ಐಪಿಎಸ್ ಅಧಿಕಾರಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚನೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶಿಸಿದೆ.

  • ತಮಿಳುನಾಡು | 68 ಮಂದಿ ಬಲಿ ಪಡೆದ ಮದ್ಯ ದುರಂತ – ಸಿಬಿಐ ತನಿಖೆಗೆ ಹೈಕೋರ್ಟ್ ಆದೇಶ

    ತಮಿಳುನಾಡು | 68 ಮಂದಿ ಬಲಿ ಪಡೆದ ಮದ್ಯ ದುರಂತ – ಸಿಬಿಐ ತನಿಖೆಗೆ ಹೈಕೋರ್ಟ್ ಆದೇಶ

    ಚೆನ್ನೈ: ತಮಿಳುನಾಡಿನ (Tamil Nadu) ವಿಲ್ಲುಪುರಂ ಜಿಲ್ಲೆಯಲ್ಲಿ 68 ಜನರ ಸಾವಿಗೆ ಕಾರಣವಾದ ಅಕ್ರಮ ಮದ್ಯ ದುರಂತ (Kallakurichi Hooch Tragedy0 ಪ್ರಕರಣವನ್ನು ಕೇಂದ್ರ ತನಿಖಾ ದಳದ (CBI) ತನಿಖೆಗೆ ಮದ್ರಾಸ್ ಹೈಕೋರ್ಟ್ (Madras High Court) ಆದೇಶಿಸಿದೆ.

    ಡಿಎಂಕೆ (DMK) ಸರ್ಕಾರ ಈ ಪ್ರಕರಣವನ್ನು ಈಗಾಗಲೇ ಸಿಐಡಿಯ ಕ್ರೈಂ ಬ್ರಾಂಚ್ ವಿಭಾಗಕ್ಕೆ ವರ್ಗಾಯಿಸಿತ್ತು. ಇನ್ನೂ ಸಿಬಿಐ ತನಿಖೆಗೆ ಈ ಪ್ರಕರಣದ ವರ್ಗಾವಣೆಯನ್ನು ವಿರೋಧಿಸಿತ್ತು. ಈ ಸಂಬಂಧ ಐಎಡಿಎಂಕೆ, ಪಿಎಂಕೆ ಮತ್ತು ಬಿಜೆಪಿ ನ್ಯಾಯಾಲಯದ ಮೊರೆ ಹೋಗಿದ್ದವು. ಇದೀಗ ಆಡಳಿತಾರೂಢ ಡಿಎಂಕೆಗೆ ನ್ಯಾಯಾಲಯದಲ್ಲಿ ಹಿನ್ನಡೆಯಾಗಿದೆ.

    ಪ್ರಕರಣ ಸಂಬಂಧ 24 ಜನರನ್ನು ಬಂಧಿಸಲಾಗಿದೆ. ಜಿಲ್ಲಾಧಿಕಾರಿಯನ್ನು ವರ್ಗಾವಣೆ ಮಾಡಲಾಗಿದ್ದು, ಎಸ್ಪಿಯನ್ನು ಅಮಾನತು ಮಾಡಲಾಗಿದೆ. ಪ್ರಮುಖ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಈ ಪ್ರಕರಣವನ್ನು ಸಿಬಿಐಗೆ ವಹಿಸುವ ಅಗತ್ಯ ಇಲ್ಲ ಎಂದು ನ್ಯಾಯಾಲಯದಲ್ಲಿ ಸರ್ಕಾರದ ಪರ ವಕೀಲರು ವಾದ ಮಂಡಿಸಿದ್ದರು.

    ಅರ್ಜಿದಾರರ ಪರ ವಕೀಲರು, ಈ ಹಿಂದೆ ಇದೇ ರೀತಿಯ ದುರಂತದಿಂದ ಸರ್ಕಾರವು ಯಾವುದೇ ಪಾಠವನ್ನು ಕಲಿತಿಲ್ಲ. ಪಕ್ಕದ ರಾಜ್ಯಗಳಿಂದ ಮೆಥೆನಾಲ್ ಬರುತ್ತಿದೆ. ಇದರಿಂದ ಪ್ರಕರಣವನ್ನು ಸಿಬಿಐಗೆ ನಿಭಾಯಿಸಲು ಸುಲಭವಾಗಲಿದೆ ಎಂದು ಅವರು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಅರ್ಜಿದಾರರ ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯ ಸಿಬಿಐ ತನಿಖೆಗೆ ಸಮ್ಮತಿಸಿದೆ.

    ಈ ಬಗ್ಗೆ ವಿರೋಧ ಪಕ್ಷದ ಎಐಎಡಿಎಂಕೆಯ ಕಾನೂನು ವಿಭಾಗದ ಕಾರ್ಯದರ್ಶಿ ಇನ್ಬದುರೈ, ಪ್ರತಿಕ್ರಿಯಿಸಿ, ಈ ಆದೇಶವು ತಮಿಳುನಾಡಿನ ಕಳಪೆ ಆಡಳಿತಕ್ಕೆ ಹಿಡಿದ ಕನ್ನಡಿಯಾಗಿದೆ ಎಂದಿದ್ದಾರೆ.

    ಪಿಎಂಕೆ ನಾಯಕ ಮತ್ತು ವಕೀಲ ಬಾಲು ಅವರು ಈ ಬಗ್ಗೆ ಪ್ರತಿಕ್ರಿಯಿಸಿ, ಡಿಎಂಕೆ, ಸಿಬಿಐ ತನಿಖೆಗೆ ಸ್ವಯಂಪ್ರೇರಿತರಾಗಿ ಒಪ್ಪಬೇಕಿತ್ತು. ದುರಂತದಲ್ಲಿ ಬಲಿಯಾದ ಕುಟುಂಬಗಳಿಗೆ ನ್ಯಾಯದ ಅಗತ್ಯವಿದೆ. ಡಿಎಂಕೆ ಸುಪ್ರೀಂ ಕೋರ್ಟ್‌ನಲ್ಲಿ ಇದರ ವಿರುದ್ಧ ಮೇಲ್ಮನವಿ ಸಲ್ಲಿಸುವುದಿಲ್ಲ ಎಂದು ನಾವು ಭಾವಿಸಿದ್ದೇವೆ ಎಂದಿದ್ದಾರೆ.

    ಡಿಎಂಕೆ ವಕ್ತಾರ ಕಾನ್‌ಸ್ಟಂಟೈನ್, ಮಾತನಾಡಿ, ಆದೇಶದ ಬಗ್ಗೆ ನಾವು ಪ್ರತಿಕ್ರಿಯಿಸಲು ಏನೂ ಇಲ್ಲ. ಆದರೆ ಸಿಬಿಐ ತನಿಖೆಯು ನ್ಯಾಯವನ್ನು ವಿಳಂಬಗೊಳಿಸುತ್ತದೆ ಎಂಬುದು ನಮ್ಮ ಆತಂಕ ಎಂದಿದ್ದಾರೆ.

  • ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ – ಸಚಿವೆ ಶೋಭಾ ಕರಂದ್ಲಾಜೆಗೆ ಮದ್ರಾಸ್ ಹೈಕೋರ್ಟ್ ತರಾಟೆ

    ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ – ಸಚಿವೆ ಶೋಭಾ ಕರಂದ್ಲಾಜೆಗೆ ಮದ್ರಾಸ್ ಹೈಕೋರ್ಟ್ ತರಾಟೆ

    – ಬಾಂಬರ್‌ಗಳಿಗೆ ತಮಿಳುನಾಡಿನಲ್ಲಿ ತರಬೇತಿ ನೀಡಿದೆ ಎಂದು ನಿಮಗೆ ಹೇಳಿದ್ಯಾರು? – ಹೈಕೋರ್ಟ್‌ ಕ್ಲಾಸ್‌

    ಚೈನೈ: ಬೆಂಗಳೂರಿನ ರಾಮೇಶ್ವರ ಕೆಫೆಯಲ್ಲಿ (Rameswaram Cafe Blast) ಬಾಂಬ್ ಸ್ಫೋಟಿಸಿದ ಆರೋಪಿಗಳು ತಮಿಳುನಾಡಿನಲ್ಲಿ ತರಬೇತಿ ಪಡೆದಿದ್ದರು ಎಂದು ಹೇಳಿಕೆ ನೀಡಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಮುದ್ರಾಸ್ ಹೈಕೋರ್ಟ್ (Madras High Court) ತೀವ್ರ ಅಸಮಧಾನ ವ್ಯಕ್ತಪಡಿಸಿದೆ. ಜವಾಬ್ದಾರಿಯುತ ಸ್ಥಾನದಲ್ಲಿದ್ದು, ಅಸಂಬದ್ಧ ಹೇಳಿಕೆ ನೀಡುವುದು ಸರಿಯಲ್ಲ ಎಂದು ಕೋರ್ಟ್ ಹೇಳಿದೆ.

    ಬಾಂಬರ್‌ಗಳು ತಮಿಳುನಾಡಿನಲ್ಲಿ ತರಬೇತಿ ಪಡೆದಿದ್ದರು ಎನ್ನುವ ಹೇಳಿಕೆ ವಿರುದ್ಧ ಸ್ಥಳೀಯ ನಿವಾಸಿಯೊಬ್ಬರು ಮಧುರೈ ಸಿಟಿ ಸೈಬರ್ ಕ್ರೈಂ ಠಾಣೆಗೆ ದೂರು ನೀಡಿದ್ದರು. ಎಫ್‌ಐಆರ್ ರದ್ದು ಕೋರಿ ಶೋಭಾ ಕರಂದ್ಲಾಜೆ (Shobha Karandlaje) ಮದ್ರಾಸ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಗುರುವಾರ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಜಿ.ಜಯಚಂದ್ರನ್ ಸರಣಿ ಪ್ರಶ್ನೆಗಳ ಮೂಲಕ ಶೋಭಾ ಕರಂದ್ಲಾಜೆ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕೇವಲ ನಾಮ್‌ಕಾವಸ್ತೆ ಹೋರಾಟ – ರಾಜ್ಯ ಬಿಜೆಪಿ ವಿರುದ್ಧ ಹೈಕಮಾಂಡ್‌ ಗರಂ

    ಬಾಂಬರ್‌ಗಳಿಗೆ ತಮಿಳುನಾಡಿನಲ್ಲಿ ತರಬೇತಿ ನೀಡಲಾಗಿದೆ ಎಂದು ಸಾರ್ವಜನಿಕವಾಗಿ ಏಕೆ ಹೇಳಿದ್ದೀರಿ? ಎನ್‌ಐಎ ಚೆನ್ನೈನಲ್ಲಿ ಶೋಧ ನಡೆಸುವ ಮುನ್ನವೇ ನೀವು ಹೇಳಿಕೆ ನೀಡಿದ್ದೀರಿ. ಇದರರ್ಥ ನೀವು ಸತ್ಯಗಳ ಬಗ್ಗೆ ತಿಳಿದಿರುತ್ತೀರಿ. ತರಬೇತಿ ಪಡೆದ ವ್ಯಕ್ತಿಗಳು ಯಾರು? ಅವರಿಗೆ ತರಬೇತಿ ನೀಡಿದವರು ಮತ್ತು ಅವರು ಏನು ಮಾಡಿದ್ದಾರೆಂದು ನಿಮಗೆ ತಿಳಿದಿದೆ. ಅಪರಾಧದ ಬಗ್ಗೆ ನಿಮಗೆ ಸ್ವಲ್ಪ ಮಾಹಿತಿ ಸಿಕ್ಕಿದ್ದರೆ, ನೀವು ಅದನ್ನು ಪೊಲೀಸರಿಗೆ ಬಹಿರಂಗಪಡಿಸಬೇಕು. ಒಬ್ಬ ಜವಾಬ್ದಾರಿಯುತ ನಾಗರಿಕನಾಗಿ ಸಚಿವರು ಅದನ್ನು ಮಾಡಿಲ್ಲ ಎಂದು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.

    ಈ ವೇಳೆ ವಾದ ಮಂಡಿಸಿದ ಸರ್ಕಾರಿ ವಕೀಲ ಕೆಎಂಡಿ ಮುಹಿಲನ್, ಕರಂದ್ಲಾಜೆ ಅವರು ನೀಡಿರುವ ಸಂದರ್ಶನದ ವೀಡಿಯೋ ತುಣುಕನ್ನು ವೀಕ್ಷಿಸುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದರು. ಪ್ರಕರಣದಲ್ಲಿ ತಮಿಳುನಾಡು ಭಾಗಿಯಾದ ಬಗ್ಗೆ ಎನ್‌ಐಎ ಇಲ್ಲಿಯವರೆಗೆ ಏನನ್ನೂ ಉಲ್ಲೇಖಿಸಿಲ್ಲ. ಆದರೆ ಯಾವುದೇ ಆಧಾರವಿಲ್ಲದೆ ಸಚಿವರು ಸಾರ್ವಜನಿಕವಾಗಿ ಇಂತಹ ಹೇಳಿಕೆಗಳನ್ನು ನೀಡಲು ಮುಂದಾಗಿದ್ದಾರೆ ಎಂದು ಟೀಕಿಸಿದರು‌. ಇದನ್ನೂ ಓದಿ: ಹಿಂದುಳಿದ ವರ್ಗದ ನಾನು ಎರಡನೇ ಬಾರಿ ಸಿಎಂ ಆಗಿದ್ದನ್ನು ಸಹಿಸಲು ಕೆಲವರಿಗೆ ಆಗ್ತಿಲ್ಲ: ಸಿದ್ದರಾಮಯ್ಯ

    ಶೋಭಾ ಕರಂದ್ಲಾಜೆ ಪರ ವಾದ ಮಂಡಿಸಿದ ವಕೀಲರು, ಪ್ರಕರಣ ರಾಜಕೀಯ ಪ್ರೇರಿತ. ದುರುದ್ದೇಶದಿಂದ ದೂರು ದಾಖಲಿಸಿದೆ. ಎಫ್‌ಐಆರ್ ರದ್ದು ಮಾಡುಬೇಕು ಎಂದು ಮನವಿ ಮಾಡಿದರು. ಬಳಿಕ ನ್ಯಾಯಧೀಶರು ಪ್ರಕರಣದ ವಿಚಾರಣೆಯನ್ನು ಜು.12 ಕ್ಕೆ ಮುಂದೂಡಿಕೆ ಮಾಡಿದರು.

  • ಪ್ರವಾಸಿಗರೇ ಗಮನಿಸಿ – ಊಟಿ, ಕೊಡೈಕೆನಾಲ್‌ಗೆ ಹೋಗಬೇಕಾದ್ರೆ ಇ-ಪಾಸ್‌ ಕಡ್ಡಾಯ

    ಪ್ರವಾಸಿಗರೇ ಗಮನಿಸಿ – ಊಟಿ, ಕೊಡೈಕೆನಾಲ್‌ಗೆ ಹೋಗಬೇಕಾದ್ರೆ ಇ-ಪಾಸ್‌ ಕಡ್ಡಾಯ

    ಚೆನ್ನೈ: ಮೇ 7 ರಿಂದ ಊಟಿ (Ooty) ಮತ್ತು ಕೊಡೈಕೆನಾಲ್‌ಗೆ (Kodaikanal) ತೆರಳುವ ಪ್ರವಾಸಿ ವಾಹನಗಳು ಇ-ಪಾಸ್‌ (E-Pass) ಕಡ್ಡಾಯವಾಗಿ ಹೊಂದಿರಬೇಕೆಂದು ಮದ್ರಾಸ್‌ ಹೈಕೋರ್ಟ್‌ (Madras High Court) ಆದೇಶ ಪ್ರಕಟಿಸಿದೆ.

    ಮೇ 7 ರಿಂದ ಜೂನ್‌ 30 ರವರೆಗೆ ಇ-ಪಾಸ್‌ ಹೊಂದಿರುವ ಪ್ರವಾಸಿ ವಾಹನಗಳಿಗೆ (Tourist Vehicle) ಮಾತ್ರ ಊಟಿ ಮತ್ತು ಕೊಡೈಕನಲ್‌ ಪ್ರವೇಶಕ್ಕೆ ಅನುಮತಿ ನೀಡುವಂತೆ ನೀಲಗಿರಿ ಮತ್ತು ದಿಂಡಿಗಲ್‌ ಜಿಲ್ಲಾಡಳಿತಕ್ಕೆ ಆದೇಶ ನೀಡಿದೆ.

    ಎಲ್ಲಾ ಮೋಟಾರು ವಾಹನಗಳು ಇ-ಪಾಸ್‌ಗಳನ್ನು ಪಡೆಯಬೇಕು. ಬೇಸಿಗೆಯಲ್ಲಿ ಎರಡು ಗಿರಿಧಾಮಗಳಿಗೆ ಪ್ರವೇಶಿಸುವ ವಾಹನಗಳ ಸಂಖ್ಯೆ ಮತ್ತು ವಿಧಗಳು, ಭೇಟಿ ನೀಡುವ ಪ್ರವಾಸಿಗರ ಸಂಖ್ಯೆಯ ಡೇಟಾವನ್ನು ಸಂಗ್ರಹಿಸಲು ಜಿಲ್ಲಾಡಳಿತಗಳಿಗೆ ಇದರಿಂದ ಸಹಾಯವಾಗಲಿದೆ ಎಂದು ಕೋರ್ಟ್‌ ಅಭಿಪ್ರಾಯಪಟ್ಟಿದೆ. ಇದನ್ನೂ ಓದಿ: ಬಾಗಲಕೋಟೆಯಲ್ಲಿ ಬಾಲಾಕೋಟ್ ಏರ್‌ಸ್ಟ್ರೈಕ್‌ ರಹಸ್ಯ ರಿವೀಲ್‌ ಮಾಡಿದ ಮೋದಿ

    ನ್ಯಾಯಮೂರ್ತಿಗಳಾದ ಎನ್.ಸತೀಶ್ ಕುಮಾರ್ ಮತ್ತು ಡಿ.ಭರತ ಚಕ್ರವರ್ತಿ ಅವರಿದ್ದ ವಿಶೇಷ ವಿಭಾಗೀಯ ಪೀಠ ಇ-ಪಾಸ್‌ ವಿತರಣೆಗೆ ನೀಲಗಿರಿ ಮತ್ತು ದಿಂಡಿಗಲ್ ಜಿಲ್ಲಾಡಳಿತಕ್ಕೆ ಯಾವುದೇ ಮಿತಿ ಹೇರಿಲ್ಲ. ಅಲ್ಲಿನ ಸ್ಥಳೀಯ ನಿವಾಸಿಗಳಿಗೆ ಇ-ಪಾಸ್‌ನಿಂದ ವಿನಾಯಿತಿ ನೀಡಬೇಕು. ಇ-ಪಾಸ್ ವ್ಯವಸ್ಥೆಗೆ ವ್ಯಾಪಕ ಪ್ರಚಾರ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ.

    ವಾಹನದ ವರ್ಗ, ಪ್ರಯಾಣಿಸುವವರ ಒಟ್ಟು ಸಂಖ್ಯೆ, ಹಗಲಿನಲ್ಲಿ ಪ್ರಯಾಣ ಮಾಡುತ್ತಿದ್ದಾರಾ ಅಥವಾ ರಾತ್ರಿಯಲ್ಲಿ ತಂಗಲು ಉದ್ದೇಶಿಸಿದ್ದಾರಾ ಎಂಬಿತ್ಯಾದಿ ಮಾಹಿತಿಗಳನ್ನು ಸಾಧ್ಯವಾದಷ್ಟು ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಪೀಠ ನಿರ್ದೇಶನ ನೀಡಿದೆ.  ಇದನ್ನೂ ಓದಿ: ಅಮಿತ್‌ ಶಾ ಫೇಕ್‌ ವಿಡಿಯೋ ಕೇಸ್‌ – ರೇವಂತ್‌ ರೆಡ್ಡಿಗೆ ಸಮನ್ಸ್‌, ಓರ್ವ ಕಾಂಗ್ರೆಸ್‌ ಕಾರ್ಯಕರ್ತ ಅರೆಸ್ಟ್‌

    ಇಬ್ಬರು ಜಿಲ್ಲಾಧಿಕಾರಿಗಳು ಮಾಹಿತಿ ತಂತ್ರಜ್ಞಾನ ಇಲಾಖೆಯ ನೆರವಿನೊಂದಿಗೆ ಇ-ಪಾಸ್ ವ್ಯವಸ್ಥೆಗೆ ಪಾವತಿ ಗೇಟ್‌ವೇಯನ್ನು ಲಿಂಕ್ ಮಾಡಬೇಕು. ಅರ್ಜಿದಾರರು ಆನ್‌ಲೈನ್‌ನಲ್ಲಿ ಟೋಲ್ ಶುಲ್ಕವನ್ನು ಪಾವತಿಸಬೇಕು. ಇದರಿಂದ ಚೆಕ್ ಪೋಸ್ಟ್‌ಗಳ ಬಳಿ ಗಂಟೆಗಟ್ಟಲೇ ವಾಹನಗಳ ಸರತಿ ಸಾಲು ತಪ್ಪುತ್ತದೆ. ಇಂಧನ ಉಳಿತಾಯವಾಗುತ್ತದೆ ಎಂದು ಕೋರ್ಟ್‌ ಅಭಿಪ್ರಾಯಪಟ್ಟಿದೆ.

    ಎಂಟು ಚೆಕ್ ಪೋಸ್ಟ್‌ಗಳ ಮೂಲಕ ಪ್ರತಿದಿನ ಸರಿಸುಮಾರು 20 ಸಾವಿರ ವಾಹನಗಳು (11,500 ಕಾರುಗಳು, 1,300 ವ್ಯಾನ್‌ಗಳು, 600 ಬಸ್‌ಗಳು ಮತ್ತು 6,500 ದ್ವಿಚಕ್ರ ವಾಹನಗಳು) ನೀಲಗಿರಿ ಪ್ರವೇಶಿಸುತ್ತವೆ ಎಂದು ರಾಜ್ಯ ಸರ್ಕಾರ ಸಲ್ಲಿಸಿದ ಸ್ಥಿತಿ ವರದಿಯನ್ನು ಓದಿ ನ್ಯಾಯಾಧೀಶರು ಆತಂಕ ವ್ಯಕ್ತಪಡಿಸಿದರು. ಇಷ್ಟು ವಾಹನ ದಟ್ಟಣೆ ಇರುವಾಗ ಆನೆಗಳು ರಸ್ತೆಗಳನ್ನು ದಾಟಲು ಹೇಗೆ ಸಾಧ್ಯವಾಗುತ್ತದೆ ಎಂದು ಪ್ರಶ್ನಿಸಿದರು.

    ಈಗ ಊಟಿಯಲ್ಲಿ ಬರಗಾಲ ಬಂದಿದೆ. ಅಲ್ಲಿನ ನಿವಾಸಿಗಳು ನೀರಿಗಾಗಿ ಪರದಾಡುತ್ತಿದ್ದಾರೆ. ಪರಿಸ್ಥಿತಿ ಹೀಗಿರುವಾಗ ಪ್ರವಾಸಿಗರಿಗೆ ಹೇಗೆ ವ್ಯವಸ್ಥೆ ಮಾಡಲಾಗುತ್ತದೆ ಎಂದು ನ್ಯಾಯಮೂರ್ತಿ ಚಕ್ರವರ್ತಿ ಕಳವಳ ವ್ಯಕ್ತಪಡಿಸಿದರು.

     

  • ಸನಾತನ ಧರ್ಮದ ಬಗ್ಗೆ ವಿವಾದಾತ್ಮಕ ಹೇಳಿಕೆ – ಉದಯನಿಧಿ ಸ್ಟಾಲಿನ್‌ಗೆ ಹೈಕೋರ್ಟ್‌ ರಿಲೀಫ್‌

    ಸನಾತನ ಧರ್ಮದ ಬಗ್ಗೆ ವಿವಾದಾತ್ಮಕ ಹೇಳಿಕೆ – ಉದಯನಿಧಿ ಸ್ಟಾಲಿನ್‌ಗೆ ಹೈಕೋರ್ಟ್‌ ರಿಲೀಫ್‌

    ಚೆನ್ನೈ: ಸನಾತನ ಧರ್ಮ ಕುರಿತು ಟೀಕೆ ವಿವಾದಕ್ಕೆ ಸಂಬಂಧಿಸಿದಂತೆ ಡಿಎಂಕೆ ಸಚಿವ ಉದಯನಿಧಿ ಸ್ಟಾಲಿನ್‌ಗೆ (Udhayanidhi Stalin) ರಿಲೀಫ್‌ ಸಿಕ್ಕಿದೆ. ಉದಯನಿಧಿ ಸ್ಟಾಲಿನ್‌ ಮತ್ತು ಇತರ ಇಬ್ಬರು ಡಿಎಂಕೆ ನಾಯಕರು ಶಾಸಕರನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್‌ ಹೈಕೋರ್ಟ್‌ (Madras High Court) ವಜಾಗೊಳಿಸಿದೆ.

    ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌, ಸ್ಟಾಲಿನ್‌ ಅವರು ಈ ರೀತಿ ಹೇಳಿಕೆಗಳನ್ನು ನೀಡಿರುವುದು ಸರಿಯಲ್ಲ. ಆದರೆ ಇದುವರೆಗೆ ಯಾವುದೇ ನ್ಯಾಯಾಲಯದಿಂದ ಅವರು ಶಿಕ್ಷೆಗೆ ಒಳಗಾಗಿಲ್ಲ ಎಂದು ಸ್ಪಷ್ಟಪಡಿಸಿದೆ. ಇದನ್ನೂ ಓದಿ: ಅಭಿವ್ಯಕ್ತಿ ಸ್ವಾತಂತ್ರ್ಯ ದುರುಪಯೋಗ – ಉದಯನಿಧಿ ಸ್ಟಾಲಿನ್‍ಗೆ ಸುಪ್ರೀಂ ಛೀಮಾರಿ

    ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ (M.K.Stalin) ಅವರ ಪುತ್ರ ಉದಯನಿಧಿ, ಕಳೆದ ಸೆಪ್ಟೆಂಬರ್‌ನಲ್ಲಿ ಸನಾತನ ಧರ್ಮದ (Sanatana Dharma) ಕುರಿತು ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದರು. ಸನಾತನವು ಮಲೇರಿಯಾ ಮತ್ತು ಡೆಂಗ್ಯೂ ಇದ್ದಂತೆ. ಅದನ್ನು ನಿರ್ಮೂಲನೆ ಮಾಡಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಅವರ ಈ ಮಾತುಗಳು ಭಾರಿ ಗದ್ದಲ ಎಬ್ಬಿಸಿತ್ತು.

    ಉದಯನಿಧಿ ಸ್ಟಾಲಿನ್ ಜೊತೆಗೆ ರಾಜ್ಯ ಸಚಿವ ಪಿ.ಕೆ.ಸೇಕರ್ ಬಾಬು ಮತ್ತು ಡಿಎಂಕೆ ಸಂಸದ ಎ.ರಾಜಾ ಅವರನ್ನೂ ವಜಾಗೊಳಿಸುವಂತೆ ಅರ್ಜಿದಾರರು ಕೋರ್ಟ್‌ಗೆ ಮನವಿ ಸಲ್ಲಿಸಿದ್ದರು. ಇದನ್ನೂ ಓದಿ: ಸನಾತನ ಧರ್ಮವನ್ನು ಕೊನೆವರೆಗೂ ವಿರೋಧಿಸುತ್ತೇನೆ: ಉದಯನಿಧಿ ಸ್ಟಾಲಿನ್‌