Tag: Madurai

  • ತಲೈವಾಗೆ ದೇವಸ್ಥಾನ ಕಟ್ಟಿಸಿದ ಅಭಿಮಾನಿ ದೇವ್ರು – 250Kg ತೂಕದ ರಜನಿಕಾಂತ್‌ ವಿಗ್ರಹ ಸ್ಥಾಪನೆ

    ತಲೈವಾಗೆ ದೇವಸ್ಥಾನ ಕಟ್ಟಿಸಿದ ಅಭಿಮಾನಿ ದೇವ್ರು – 250Kg ತೂಕದ ರಜನಿಕಾಂತ್‌ ವಿಗ್ರಹ ಸ್ಥಾಪನೆ

    ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ರಜನಿಕಾಂತ್ (Rajanikanth) ಅವರು ‘ಜೈಲರ್’ (Jailer) ಸಕ್ಸಸ್ ನಂತರ ಸಾಲು ಸಾಲು ಸಿನಿಮಾಗಳನ್ನ ಮಾಡುತ್ತಿದ್ದು, ಬ್ಯುಸಿಯಲ್ಲಿದ್ದಾರೆ. ಈ ನಡುವೆ ತಲೈವಾಗೆ ಅಭಿಮಾನಿಯೊಬ್ಬರು ಯಾರೂ ಊಹಿಸದ ವಿಶೇಷ ಉಡುಗೊರೆ ನೀಡಿದ್ದಾರೆ.

    ಕಾರ್ತಿಕ್‌ ಎಂಬ ಅಭಿಮಾನಿಯೊಬ್ಬರು (Rajinikanth Fans) ತಮಿಳುನಾಡಿನ ಮಧುರೈನಲ್ಲಿರುವ ತಮ್ಮ ಮನೆಯ ಆವರಣದಲ್ಲಿ ತಲೈವಾಗೆ ದೇವಸ್ಥಾನವನ್ನೇ ಕಟ್ಟಿಸಿದ್ದಾರೆ. ದೇವಸ್ಥಾನಲ್ಲಿ 250 ಕೆ.ಜಿ ತೂಕದ ರಜನಿಕಾಂತ್‌ ಅವರ ವಿಗ್ರಹ ನಿರ್ಮಿಸಲಾಗಿದೆ. ಕಾರ್ತಿಕ್ ಪುತ್ರಿ ಅನುಶಿಯಾ ಕೂಡ ರಜನಿಕಾಂತ್ ಬಗ್ಗೆ ಅಭಿಮಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಶಾರುಖ್ ಹುಟ್ಟುಹಬ್ಬ: ನಟನ ಮನೆಮುಂದೆ ಪೊಲೀಸ್ ಸರ್ಪಗಾವಲು

    ಅಲ್ಲದೇ ಕಾರ್ತಿಕ್‌, ನಾನು ರಜನಿಕಾಂತ್‌ ಬಿಟ್ಟು ಬೇರೆ ಯಾವುದೇ ನಟರ ಸಿನಿಮಾ ನೋಡುವುದಿಲ್ಲ. ನಮಗೆ ಅವರೇ ದೇವರು. ಗೌರವದ ಸಂಕೇತಕ್ಕಾಗಿ ದೇವಾಲಯ ಕಟ್ಟಿಸಿದ್ದೇನೆ ಎಂದು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಬಿಗ್ ಬಾಸ್ ಮನೆಯಲ್ಲಿ ಸುದೀಪ್ ಮಿಮಿಕ್ರಿ ಮಾಡಿದ ತುಕಾಲಿ ಸಂತು

    ಸದ್ಯ ಜೈಲರ್‌ ಸಿನಿಮಾ ಸಕ್ಸಸ್‌ ಬಳಿಕ ಸಾಲು ಸಾಲು ಸಿನಿಮಾಗಳನ್ನು ಮುಂದಿಟ್ಟುಕೊಂಡಿರುವ ರಜನಿಕಾಂತ್‌ ʻತಲೈವರ್‌ 170ʼ (Thalaivar 170) ಚಿತ್ರದಲ್ಲಿ ರಜನಿಕಾಂತ್‌ಗೆ ಬಿಗ್ ಬಿ ಜೊತೆಯಾಗುತ್ತಿದ್ದಾರೆ. 33 ವರ್ಷಗಳ ಬಳಿಕ ಮತ್ತೆ ಈ ಜೋಡಿ ಒಂದಾಗ್ತಿರೋದು ವಿಶೇಷ. ಈ ಬಗ್ಗೆ ಸ್ಪೆಷಲ್ ಪೋಸ್ಟ್‌ವೊಂದನ್ನ ತಲೈವಾ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಹಾಸನಾಂಬ ಜಾತ್ರಾ ಮಹೋತ್ಸವಕ್ಕೆ ಕ್ಷಣಗಣನೆ- ಶುಕ್ರವಾರದಿಂದ ಸಾರ್ವಜನಿಕರ ದರ್ಶನಕ್ಕೆ ಅವಕಾಶ

    ಟಿ.ಜಿ ಜ್ಞಾನವೇಲ್ ನಿರ್ದೇಶನದ, ಲೈಕಾ ಪ್ರೋಡಕ್ಷನ್ಸ್ ನಿರ್ಮಾಣ ಮಾಡುತ್ತಿರುವ ‘ತಲೈವರ್ 170’ ಚಿತ್ರದಲ್ಲಿ 33 ವರ್ಷಗಳ ನಂತರ ನಾನು ನನ್ನ ಗುರು ಶ್ರೀ ಅಮಿತಾಭ್ ಬಚ್ಚನ್ ಅವರೊಂದಿಗೆ ಮತ್ತೆ ಕೆಲಸ ಮಾಡುತ್ತಿದ್ದೇನೆ ಎಂಬುದಾಗಿ ರಜನಿಕಾಂತ್‌ ಹೇಳಿಕೊಂಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ತಮಿಳುನಾಡಿನ ರೈಲು ಕಂಪಾರ್ಟ್‌ಮೆಂಟ್‌ನಲ್ಲಿ ಹೊತ್ತಿ ಉರಿದ ಬೆಂಕಿ – 10 ಮಂದಿ ಸಾವು

    ತಮಿಳುನಾಡಿನ ರೈಲು ಕಂಪಾರ್ಟ್‌ಮೆಂಟ್‌ನಲ್ಲಿ ಹೊತ್ತಿ ಉರಿದ ಬೆಂಕಿ – 10 ಮಂದಿ ಸಾವು

    ಚೆನ್ನೈ: ತಮಿಳುನಾಡಿನ (Tamil Nadu) ಮಧುರೈ (Madurai Train Fire) ರೈಲು ನಿಲ್ದಾಣದ ಸ್ಥಾಯಿ ರೈಲು ಕಂಪಾರ್ಟ್‌ಮೆಂಟ್‌ನಲ್ಲಿ ಇಂದು ಮುಂಜಾನೆ ಸಂಭವಿಸಿದ ಭಾರಿ ಬೆಂಕಿಯಲ್ಲಿ ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ. 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

    ಬೋರ್ಡ್‌ನಲ್ಲಿದ್ದ ಅಕ್ರಮ ಗ್ಯಾಸ್ ಸಿಲಿಂಡರ್ ಬೆಂಕಿಗೆ ಕಾರಣವಾಯಿತು ಎಂದು ದಕ್ಷಿಣ ರೈಲ್ವೆ ಹೇಳಿದೆ. ಪ್ರಯಾಣಿಕರು ಉತ್ತರ ಪ್ರದೇಶದ ಲಕ್ನೋದಿಂದ ಆಗಮಿಸಿದ್ದರು ಎಂದು ದಕ್ಷಿಣ ರೈಲ್ವೆ ತಿಳಿಸಿದೆ.

    ಮಧುರೈ ಜಿಲ್ಲಾಧಿಕಾರಿ ಎಂ.ಎಸ್.ಸಂಗೀತಾ ಅವರು ಠಾಣೆಗೆ ಧಾವಿಸಿ ವಿಚಾರಣೆ ನಡೆಸಿದ್ದಾರೆ. ಬೆಂಕಿ ಅವಘಡದಲ್ಲಿ ಗಾಯಗೊಂಡಿರುವ 20 ಜನರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಪೊಲೀಸರು, ಅಗ್ನಿಶಾಮಕ ಮತ್ತು ರಕ್ಷಣಾ ಸೇವೆಗಳ ಸಿಬ್ಬಂದಿ, ರೈಲ್ವೆ ಸಿಬ್ಬಂದಿ, ಬೆಂಕಿಯನ್ನು ನಂದಿಸುವಲ್ಲಿ ತೊಡಗಿದ್ದು, ಸುಟ್ಟ ದೇಹಗಳನ್ನು ಕಂಪಾರ್ಟ್‌ಮೆಂಟ್‌ನಿಂದ ಹೊರತೆಗೆದರು.

    ಇಂದು ಮುಂಜಾನೆ 5:15 ಕ್ಕೆ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಅರ್ಧ ಗಂಟೆಯ ನಂತರ ಬೆಂಕಿಯನ್ನು ನಂದಿಸಿದ್ದಾರೆ ಎಂದು ದಕ್ಷಿಣ ರೈಲ್ವೆ ಪ್ರಕಟಣೆ ತಿಳಿಸಿದೆ.

    ಗ್ಯಾಸ್ ಸಿಲಿಂಡರ್ ಅನ್ನು ಕಳ್ಳಸಾಗಣೆ ಮಾಡಿದ್ದರಿಂದ ಬೆಂಕಿ ಹೊತ್ತಿಕೊಂಡಿದೆ. ಬೆಂಕಿಯನ್ನು ಗಮನಿಸಿದ ಅನೇಕ ಪ್ರಯಾಣಿಕರು ಕೋಚ್‌ನಿಂದ ಹೊರಬಂದಿದ್ದಾರೆ. ಕೆಲವು ಪ್ರಯಾಣಿಕರು ಪ್ಲಾಟ್‌ಫಾರ್ಮ್‌ನಲ್ಲಿಯೇ ಇಳಿದಿದ್ದಾರೆ ಎಂದು ಪ್ರಕಟಣೆಯಲ್ಲಿ ಹೇಳಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಮಲ್ ಜೊತೆ ನಟಿಸಿದ್ದ ಸಹನಟನ ಮೃತದೇಹ ರಸ್ತೆಬದಿಯಲ್ಲಿ ಪತ್ತೆ

    ಕಮಲ್ ಜೊತೆ ನಟಿಸಿದ್ದ ಸಹನಟನ ಮೃತದೇಹ ರಸ್ತೆಬದಿಯಲ್ಲಿ ಪತ್ತೆ

    ಲವಾರು ಚಿತ್ರಗಳಲ್ಲಿ ಪೋಷಕ ಕಲಾವಿದನಾಗಿ ಬೆಳ್ಳಿತೆರೆಯ ಮೇಲೆ ಕಾಣಿಸಿಕೊಂಡಿದ್ದ ಮೋಹನ್ (Mohan) ವಿಧಿವಶರಾಗಿದ್ದಾರೆ (Passed away). ಕಮಲ್ ಹಾಸನ್ (Kamal Haasan)ಸೇರಿದಂತೆ ಹಲವಾರು ನಟರ ಜೊತೆ ತೆರೆ ಹಂಚಿಕೊಂಡಿದ್ದ ಮೋಹನ್ ಅವರ ಮೃತದೇಹ ರಸ್ತೆ ಬದಿಯಲ್ಲಿ ಪತ್ತೆಯಾಗಿದೆ. ತಮಿಳಿನ ನಾಡಿನ ಮಧುರೈ (Madurai) ಜಿಲ್ಲೆಯ ತಿರುಪ್ಪಂಗುಂಡ್ರಂ ರಸ್ತೆಯಲ್ಲಿ ಅನಾಥ ಶವ ನೋಡಿದ್ದ ಜನರು ಪೊಲೀಸರಿಗೆ ಮಾಹಿತಿ ನೀಡಿದ್ದರು.

    ಸ್ಥಳಕ್ಕೆ ಆಗಮಿಸಿದ್ದ ಪೊಲೀಸರು ಶವವನ್ನು ಸರಕಾರಿ ಆಸ್ಪತ್ರೆಗೆ ರವಾನಿಸಿದ್ದರು. ಆಮೇಲೆ ಅದು ನಟ ಮೋಹನ್ ಅವರ ಮೃತದೇಹ ಎಂದು ಗೊತ್ತಾಗಿದೆ. ಅವರ ಕುಟುಂಬಸ್ಥರಿಗೆ ಪೊಲೀಸರು ಮಾಹಿತಿ ನೀಡಿದ್ದಾರೆ. ಮೋಹನ್ ಕುಟುಂಬಸ್ಥರು ಸೇಲಂ (Salem) ಜಿಲ್ಲೆಯ ಮೆಟ್ಟೂರಿನಲ್ಲಿ ವಾಸವಿದ್ದಾರೆ ಎಂದು ತಿಳಿದು ಬಂದಿದೆ.

     

    ಮೋಹನ್ ಕೂಡ ಅದೇ ಗ್ರಾಮದಲ್ಲಿ ವಾಸವಿದ್ದರು. ಆದರೆ, ಮಧುರೈಗೆ ಹೋಗಿದ್ದು ಏಕೆ ಎನ್ನುವ ಅನುಮಾನ ಮೂಡಿದೆ. ಮೂಲಗಳ ಪ್ರಕಾರ ಆರ್ಥಿಕ ಸ್ಥಿತಿ ತೀರಾ ಹದಗೆಟ್ಟ ಕಾರಣದಿಂದಾಗಿ ಕೆಲಸ ಹುಡುಕಿಕೊಂಡು ಬಂದಿದ್ದರು ಎಂದು ಹೇಳಲಾಗುತ್ತಿದೆ. 60ರ ವಯಸ್ಸಿನ ಮೋಹನ್ ಅನಾರೋಗ್ಯದ ಕಾರಣದಿಂದ ಮೃತಪಟ್ಟಿರಬಹುದು ಎಂದು ಅಂದಾಜಿಸಲಾಗಿದೆ. ತನಿಖೆ ನಡೆಯುತ್ತಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 20 ವರ್ಷದ ವಿದ್ಯಾರ್ಥಿ ಮ್ಯಾರಥಾನ್‌ನಲ್ಲಿ ಓಡಿದ ಬಳಿಕ ಹೃದಯಾಘಾತದಿಂದ ಸಾವು

    20 ವರ್ಷದ ವಿದ್ಯಾರ್ಥಿ ಮ್ಯಾರಥಾನ್‌ನಲ್ಲಿ ಓಡಿದ ಬಳಿಕ ಹೃದಯಾಘಾತದಿಂದ ಸಾವು

    ಚೆನ್ನೈ: ಮ್ಯಾರಥಾನ್‌ನಲ್ಲಿ (Marathon) ಭಾಗವಹಿಸಿದ 20 ವರ್ಷದ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ (Heart Attack) ಸಾವನ್ನಪ್ಪಿರುವ ಆಘಾತಕಾರಿ ಘಟನೆ ಭಾನುವಾರ ತಮಿಳುನಾಡಿನ (Tamil Nadu) ಮಧುರೈನಲ್ಲಿ (Madurai) ನಡೆದಿದೆ.

    ಮೃತನನ್ನು ಕಲ್ಲಕುರಿಚಿಯ ದಿನೇಶ್ ಕುಮಾರ್ ಎಂದು ಗುರುತಿಸಲಾಗಿದ್ದು, ಆತ ಭಾನುವಾರ ನಡೆದ ಉತಿರಂ 2023 ರಕ್ತದಾನ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ. ಈ ಕಾರ್ಯಕ್ರಮಕ್ಕೆ ಆರೋಗ್ಯ ಸಚಿವ ಸುಬ್ರಮಣಿಯನ್ ಹಾಗೂ ವಾಣಿಜ್ಯ ತೆರಿಗೆ ಮತ್ತು ನೋಂದಣಿ ಸಚಿವ ಪಿ ಮೂರ್ತಿ ಅವರು ಚಾಲನೆ ನೀಡಿದ್ದರು.

    ಮುಂಜಾನೆ ಮ್ಯಾರಥಾನ್‌ನಲ್ಲಿ ಭಾಗವಹಿಸಿದ ಬಳಿಕ ವಿದ್ಯಾರ್ಥಿ 1 ಗಂಟೆಗಳ ಕಾಲ ಆರೋಗ್ಯವಾಗಿಯೇ ಇದ್ದಂತೆ ಕಾಣಿಸುತ್ತಿದ್ದ ಎಂದು ಆತನ ಸಹಪಾಠಿಗಳು ತಿಳಿಸಿದ್ದಾರೆ. ಬಳಿಕ ಆತ ಮೂರ್ಛೆ ಹೋಗಿದ್ದು, ತಕ್ಷಣ ಆತನನ್ನು ಸಮೀಪದ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಇದನ್ನೂ ಓದಿ: ಬೆಂಗ್ಳೂರಿನ ಬಾಡಿಗೆ ಮನೆಯಲ್ಲಿದ್ದುಕೊಂಡೇ ಡ್ರಗ್ಸ್ ಸಪ್ಲೈ ಮಾಡ್ತಿದ್ದ ನೈಜೀರಿಯನ್ ಪ್ರಜೆ ಅರೆಸ್ಟ್!

    ಆಸ್ಪತ್ರೆಯ ಅಧಿಕಾರಿಗಳು ವಿದ್ಯಾರ್ಥಿಯನ್ನು 8:45ರ ಸುಮಾರಿಗೆ ತುರ್ತು ವಿಭಾಗಕ್ಕೆ ದಾಖಲಿಸಿದ್ದಾರೆ. ಅಲ್ಲಿ ಆತನಿಗೆ ಕೃತಕ ಉಸಿರಾಟದ ಬೆಂಬಲ ನೀಡಲಾಗಿದೆ. ಆದರೆ ಇದಾದ ಕೆಲವೇ ಗಂಟೆಗಳಲ್ಲಿ ಬೆಳಗ್ಗೆ 10:10ರ ಸುಮಾರಿಗೆ ಆತ ಹೃದಯ ಸ್ಥಂಭನಕ್ಕೆ ಒಳಗಾಗಿದ್ದಾನೆ. ಆತನನ್ನು ವೈದ್ಯರು ಬದುಕಿಸಲು ಪ್ರಯತ್ನಿಸಿದರೂ ಬೆಳಗ್ಗೆ 10:45ಕ್ಕೆ ಆತ ಸಾವನ್ನಪ್ಪಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ.

    ಘಟನೆಗೆ ಸಂಬಂಧಿಸಿದಂತೆ ಪೊಲೀಸರು ದೂರು ದಾಖಲಿಸಿಕೊಂಡಿದ್ದು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ದಿನೇಶ್ ಕುಮಾರ್ ಮಧುರೈನ ಖಾಸಗಿ ಕಾಲೇಜಿನಲ್ಲಿ ಎಂಜಿನಿಯರಿಂಗ್ ಪದವಿ ವ್ಯಾಸಂಗ ಮಾಡುತ್ತಿದ್ದು, ಅಂತಿಮ ವರ್ಷದ ವಿದ್ಯಾರ್ಥಿಯಾಗಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಕುಸಿದು ಬಿದ್ದ ಜಿಮ್ ಛಾವಣಿ- 10 ಮಂದಿ ದುರ್ಮರಣ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹಿಂದಿ ದಬ್ಬಾಳಿಕೆ ವಿರುದ್ಧ ನಟ ಸಿದ್ದಾರ್ಥ ಆಕ್ರೋಶ

    ಹಿಂದಿ ದಬ್ಬಾಳಿಕೆ ವಿರುದ್ಧ ನಟ ಸಿದ್ದಾರ್ಥ ಆಕ್ರೋಶ

    ಕ್ಷಿಣ ಭಾರತದ ಹೆಸರಾಂತ ನಟ ಸಿದ್ದಾರ್ಥ ಹಿಂದಿ ಹೇರಿಕೆಯ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ವಿಮಾನ ನಿಲ್ದಾಣದಲ್ಲಿ ತಮ್ಮೊಂದಿಗೆ ಇಂಗ್ಲಿಷ್ ಮಾತನಾಡದೇ, ಭದ್ರತಾ ಸಿಬ್ಬಂದಿ ಸಾಕಷ್ಟು ಕಿರುಕುಳ ನೀಡಿದ್ದಾರೆ ಎಂದು ಅವರು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ಮಧುರೈ ವಿಮಾನ ನಿಲ್ದಾಣದಲ್ಲಿ ನಡೆದ ಈ ಘಟನೆಗೆ ತನ್ನ ವಯಸ್ಸಾದ ಪಾಲಕರು ಕೂಡ ಕಿರಿಕಿರಿ ಅನುಭವಿಸಿದ್ದಾರೆ ಎಂದು ಹೇಳಿಕೊಂಡಿದ್ದಾರೆ.

    ಮಧುರೈ ವಿಮಾನ ನಿಲ್ದಾಣದಲ್ಲಿ ಸಿ.ಆರ್.ಪಿ.ಎಫ್ ಅಧಿಕಾರಿಗಳು ಸಿದ್ದಾರ್ಥ ಅವರ ತಾಯಿಯ ಬ್ಯಾಗ್‍ನಲ್ಲಿದ್ದ ನಾಣ್ಯಗಳನ್ನು ತಗೆಯುವಂತೆ ಹೇಳಿದ್ದಾರೆ. ಹಿಂದಿ ಬರುವುದಿಲ್ಲ ಇಂಗ್ಲಿಷಿನಲ್ಲಿ ಮಾತನಾಡಿ ಎಂದು ಪದೇ ಪದೇ ಸಿದ್ದಾರ್ಥ ಕೇಳಿಕೊಂಡರೂ, ಅವರು ಹಿಂದಿಯಲ್ಲೇ ಮಾತನಾಡುತ್ತಿದ್ದರಂತೆ. ಇಪ್ಪತ್ತು ನಿಮಿಷಗಳ ಕಾಲ ನಟ ಮತ್ತು ಆತನ ತಂದೆ ತಾಯಿಗೆ ಮಾನಸಿಕ ಹಿಂಸೆ ನೀಡುವಂತೆ ಅಧಿಕಾರಿಗಳು ಮಾತನಾಡಿದರು ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ:ದಿವ್ಯಾಳ ಆಸೆಯಂತೆ ದೊಡ್ಮನೆಗೆ ಎಂಟ್ರಿ ಕೊಟ್ಟ ಅರವಿಂದ್ ಕೆ.ಪಿ

    ಸಿದ್ದಾರ್ಥ ಆಗಾಗ್ಗೆ ನರೇಂದ್ರ ಮೋದಿ ಸರಕಾರದ ವಿರುದ್ಧ ಮಾತನಾಡುತ್ತಲೇ ಇರುತ್ತಾರೆ. ಆಳುವ ಸರಕಾರದ ವಿರುದ್ಧ ಧ್ವನಿ ಎತ್ತಿದ್ದಾರೆ. ಅನೇಕ ಜನಪರ ಕೆಲಸಗಳಲ್ಲೂ ಅವರು ಭಾಗಿಯಾಗಿದ್ದಾರೆ. ಅದರಲ್ಲೂ ಹಿಂದಿ ಹೇರಿಕೆಯ ವಿರುದ್ಧ ಸಾಕಷ್ಟು ಮಾತನಾಡಿದ್ದಾರೆ. ತಮಗೇ ಆಗಿರುವ ಈ ಕಹಿ ನೋವನ್ನು ಹಂಚಿಕೊಂಡು, ಹಿಂದಿ ಹೇರಿಕೆಯನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ – 5 ಸಾವು, 13 ಮಂದಿಗೆ ಗಂಭೀರ ಗಾಯ

    ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ – 5 ಸಾವು, 13 ಮಂದಿಗೆ ಗಂಭೀರ ಗಾಯ

    ಚೆನ್ನೈ: ಪಟಾಕಿ ಕಾರ್ಖಾನೆಯೊಂದರಲ್ಲಿ (Firecracker Factory) ಸ್ಫೋಟ (Explosion) ಉಂಟಾಗಿ ಭಾರೀ ಬೆಂಕಿಗೆ (Fire) ಐವರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಇಂದು ತಮಿಳುನಾಡಿನ (Tamil Nadu) ಮಧುರೈ (Madurai) ಜಿಲ್ಲೆಯಲ್ಲಿ ನಡೆದಿದೆ. ಘಟನೆಯಲ್ಲಿ 13 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

    ಮೂಲಗಳ ಪ್ರಕಾರ ಮಧುರೈ ಜಿಲ್ಲೆಯ ಉಸಿಲಂಪಟ್ಟಿ ಬಳಿಯ ಅಜುಗುಸಿರೈ ಗ್ರಾಮದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದೆ. ಸ್ಫೋಟದ ಸದ್ದು ಕೇಳಿದ ಸ್ಥಳೀಯರು ಘಟನಾ ಸ್ಥಳಕ್ಕೆ ದೌಡಾಯಿಸಿದ್ದಾರೆ. ಇದನ್ನೂ ಓದಿ: ಬಾಲಕನಿಗೆ ಬೈಕ್‌ ಓಡಿಸಲು ಕೊಟ್ಟ ತಂದೆಗೆ 25 ಸಾವಿರ ರೂ. ದಂಡ

    ಬಳಿಕ ಸ್ಥಳಕ್ಕಾಗಮಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ದಳದವರು ಬೆಂಕಿ ನಂದಿಸಿದ್ದಾರೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ 13 ಜನರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಅವುಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಇದನ್ನೂ ಓದಿ: ಮದ್ಯ ಕುಡಿದು ಮಲಗಿದ 24 ಕಾಡಾನೆಗಳು – ಎಬ್ಬಿಸಲು ಡೋಲು ಬಾರಿಸಿದ್ರು

    ಘಟನೆಯ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸ್ಫೋಟದ ಹಿಂದಿನ ಕಾರಣ ತಿಳಿಯಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಹೆತ್ತವರಿಗಾಗಿ ದೇವಾಲಯವನ್ನೇ ಕಟ್ಟಿಸಿದ ನಿವೃತ್ತ ಎಸ್‌ಐ- ಪ್ರತಿನಿತ್ಯ ಪೂಜೆ

    ಹೆತ್ತವರಿಗಾಗಿ ದೇವಾಲಯವನ್ನೇ ಕಟ್ಟಿಸಿದ ನಿವೃತ್ತ ಎಸ್‌ಐ- ಪ್ರತಿನಿತ್ಯ ಪೂಜೆ

    ಚೆನ್ನೈ: ಮಧುರೈನಲ್ಲಿ (Madurai) ವ್ಯಕ್ತಿಯೊಬ್ಬರು ತಮ್ಮ ಹೆತ್ತವರಿಗಾಗಿ ದೇವಾಲಯವನ್ನು (Temple) ನಿರ್ಮಾಣ ಮಾಡಿ, ಅದಕ್ಕೆ ಪ್ರತಿನಿತ್ಯ ಪೂಜೆ ಸಲ್ಲಿಸುತ್ತಿದ್ದಾರೆ.

    ತಮಿಳುನಾಡಿನ ನಿವೃತ್ತ ಎಸ್‍ಐ (Retired SI) ರಮೇಶ್ ಬಾಬು ತಮ್ಮ ಹೆತ್ತವರ (Parents) ನೆನಪಿಗಾಗಿ ತಮ್ಮ ಮನೆಯ ಸಮೀಪವೇ ದೇವಸ್ಥಾನವೊಂದನ್ನು ನಿರ್ಮಾಣ ಮಾಡಿದ್ದಾರೆ. ರಮೇಶ್ ಬಾಬು ಯುವಕರಾಗಿದ್ದ ಸಂದರ್ಭದಲ್ಲಿ ಕೆಲಸದಲ್ಲಿ ನಿರತರಾಗಿದ್ದರು. ಆದರೂ ತಮ್ಮ ಬಿಡುವಿನ ವೇಳೆಯಲ್ಲಿ ತಂದೆ-ತಾಯಿಗೆ ದೇವಾಲಯವನ್ನು ನಿರ್ಮಿಸಲು ಪ್ರಾರಂಭಿಸಿದ್ದರು. ಇದೀಗ ಈ ದೇವಾಲಯ ಪೂರ್ಣಗೊಂಡಿದ್ದು, ಪ್ರತಿನಿತ್ಯ ಈ ದೇವಸ್ಥಾನದಲ್ಲಿ ಪೂಜೆಯನ್ನು ಸಲ್ಲಿಸುತ್ತಿದ್ದಾರೆ. ಇದನ್ನೂ ಓದಿ: ಹನೂರಿನಲ್ಲಿ 20 ಅಡಿ ಆಳದ ಹಳ್ಳಕ್ಕೆ ಬಿದ್ದ ಬೆಂಗಳೂರಿನ ಕಾರು

    ಈ ಬಗ್ಗೆ ಮಾತನಾಡಿದ ರಮೇಶ್ ಬಾಬು, ನಾನು ನನ್ನ ಹೆತ್ತ ತಂದೆ ತಾಯಿಗಾಗಿ ದೇವಸ್ಥಾನವನ್ನು ನಿರ್ಮಿಸಲು ಬಯಸಿದ್ದೆ. ಆದರೆ ನನ್ನ ಕೆಲಸದಿಂದಾಗಿ ಅದು ಮಂದಗತಿಯಲ್ಲಿ ಸಾಗುತ್ತಿತ್ತು. ಹಾಗಾಗಿ ನಿವೃತ್ತಿಯ ನಂತರ ಅದನ್ನು ನಿರ್ಮಿಸಿ ಪ್ರತಿದಿನ ಅವರಿಗೆ ಪೂಜೆ ಸಲ್ಲಿಸುತ್ತಿದ್ದೇನೆ. ನಾನು ಈ ದೇವಾಲಯವನ್ನು ನಿರ್ಮಿಸುವಾಗ ನನ್ನ ಪೋಷಕರು ಮೃತಪಟ್ಟರು. ಆದರೂ ಅವರು ನನ್ನೊಂದಿಗಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಪಟಾಕಿ ಬ್ಲಾಸ್ಟ್‌ ನೆಪದಲ್ಲಿ ಸ್ಫೋಟಕ ಸ್ಫೋಟ – ಇದು ಶಿವಮೊಗ್ಗ ಶಂಕಿತ ಉಗ್ರನ ಟ್ರಯಲ್‌ ಬ್ಲ್ಯಾಸ್ಟ್‌ ಕಥೆ

    Live Tv
    [brid partner=56869869 player=32851 video=960834 autoplay=true]

  • 24 ದಿನಗಳಲ್ಲಿ 9ನೇ ಕೇಸ್ – ಮಂಗಳೂರಿನಿಂದ ದುಬೈಗೆ ತೆರಳಿದ್ದ ಸ್ಪೈಸ್‌ಜೆಟ್ ವಿಮಾನದಲ್ಲಿ ತಾಂತ್ರಿಕ ದೋಷ

    24 ದಿನಗಳಲ್ಲಿ 9ನೇ ಕೇಸ್ – ಮಂಗಳೂರಿನಿಂದ ದುಬೈಗೆ ತೆರಳಿದ್ದ ಸ್ಪೈಸ್‌ಜೆಟ್ ವಿಮಾನದಲ್ಲಿ ತಾಂತ್ರಿಕ ದೋಷ

    ನವದೆಹಲಿ: ದುಬೈನಿಂದ ಮಧುರೈಗೆ ತೆರಳಬೇಕಿದ್ದ ಸ್ಪೈಸ್‌ಜೆಟ್ ವಿಮಾನ ವಿಳಂಬವಾಗಿದೆ. ವಿಮಾನದ ಮುಂದಿನ ಚಕ್ರ ಅಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿದ್ದ ಕಾರಣ ವಿಮಾನ ವಿಳಂಬವಾಗಿದೆ. ಇದು ಕಳೆದ 24 ದಿನಗಳಲ್ಲಿ ಸ್ಪೈಸ್‌ಜೆಟ್ ವಿಮಾನಗಳು ತಾಂತ್ರಿಕ ದೋಷವನ್ನು ಎದುರಿಸುತ್ತಿರುವ 9ನೇ ಘಟನೆಯಾಗಿದೆ.

    ವಿಟಿ-ಎಸ್‌ಝಡ್‌ಕೆ ನೋಂದಣಿ ಸಂಖ್ಯೆಯ ಬೋಯಿಂಗ್ ಬಿ737 ಮ್ಯಾಕ್ಸ್ ವಿಮಾನ ಸೋಮವಾರ ಮಂಗಳೂರಿನಿಂದ ದುಬೈಗೆ ತೆರಳಿತ್ತು. ವಿಮಾನ ಲ್ಯಾಂಡ್ ಆದ ಬಳಿಕ ಎಂಜಿನಿಯರ್‌ಗಳು ಪರಿಶೀಲನೆ ನಡೆಸಿದಾಗ ಅದರ ಮುಂದಿನ ಚಕ್ರದಲ್ಲಿ ತಾಂತ್ರಿಕ ದೋಷ ಕಂಡುಬಂದಿದೆ ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ(ಡಿಜಿಸಿಎ) ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ನ. 11ರಿಂದ ಒಂದು ತಿಂಗಳ ಕಾಲ ಬೆಂಗಳೂರು ಡಿಸೈನ್ ಫೆಸ್ಟಿವಲ್: ಅಶ್ವಥ್ ನಾರಾಯಣ

    ತಾಂತ್ರಿಕ ದೋಷವನ್ನು ಕಂಡುಹಿಡಿದ ಬಳಿಕ ಸ್ಪೈಸ್‌ಜೆಟ್ ಆ ವಿಮಾನವನ್ನು ಅಲ್ಲಿಯೇ ಸ್ಥಗಿತಗೊಳಿಸಲು ನಿರ್ಧರಿಸಿ, ಮಧುರೈಗೆ ಹಿಂದಿರುಗಲು ಮುಂಬೈನಿಂದ ದುಬೈಗೆ ಇನ್ನೊಂದು ವಿಮಾನವನ್ನು ಕಳುಹಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಳಿಕ ವಿಮಾನಯಾನ ಸಂಸ್ಥೆ ಕೊನೇ ಕ್ಷಣದ ತಾಂತ್ರಿಕ ಸಮಸ್ಯೆಯಿಂದ ವಿಮಾನ ವಿಳಂಬವಾಗಿದೆ ಎಂದು ಪ್ರಯಾಣಿಕರಿಗೆ ಸ್ಪಷ್ಟೀಕರಣ ನೀಡಿತು.

    ಜುಲೈ 2 ರಂದು ಜಬ್ಬಲ್‌ಪುರಕ್ಕೆ ತೆರಳುತ್ತಿದ್ದ ವಿಮಾನ 5,000 ಅಡಿ ಎತ್ತರದಲ್ಲಿರುವಾಗ ಹೊಗೆ ಕಂಡುಬಂದಿತ್ತು. ಬಳಿಕ ಅದನ್ನು ದೆಹಲಿಯಲ್ಲಿ ಇಳಿಸಲಾಗಿತ್ತು. ಇದನ್ನೂ ಓದಿ: ಸಿಎಂಗೆ ಕಳಪೆ ಗುಣಮಟ್ಟದ ಟೀ ನೀಡಿದ್ದ ಅಧಿಕಾರಿಗೆ ಶೋಕಾಸ್ ನೋಟಿಸ್

    ಸ್ಪೈಸ್‌ಜೆಟ್ ವಿಮಾನಗಳಲ್ಲಿ ಪದೇ ಪದೇ ತಾಂತ್ರಿಕ ದೋಷಗಳು ಕಂಡುಬರುತ್ತಿರುವುದರಿಂದ ಜೂನ್ 19ರಂದು ಡಿಜಿಸಿಎ ಕಂಪನಿಗೆ ಶೋಕಾಸ್ ನೀಡಿತ್ತು. ಇದು 24 ದಿನಗಳಲ್ಲಿ ವರದಿಯಾಗಿರುವ ಸ್ಪೈಸ್‌ಜೆಟ್‌ನ ತಾಂತ್ರಿಕ ದೋಷದ 9ನೇ ಘಟನೆಯಾಗಿದೆ.

    Live Tv
    [brid partner=56869869 player=32851 video=960834 autoplay=true]

  • ತಮಿಳುನಾಡಿನ ಮಧುರೈನಲ್ಲಿ ಚಿತಿರೈ ಹಬ್ಬದ ವೇಳೆ ಕಾಲ್ತುಳಿತ – ಇಬ್ಬರು ಬಲಿ, 24 ಮಂದಿಗೆ ಗಾಯ

    ತಮಿಳುನಾಡಿನ ಮಧುರೈನಲ್ಲಿ ಚಿತಿರೈ ಹಬ್ಬದ ವೇಳೆ ಕಾಲ್ತುಳಿತ – ಇಬ್ಬರು ಬಲಿ, 24 ಮಂದಿಗೆ ಗಾಯ

    ಚೆನ್ನೈ: ಚಿತಿರೈ ಹಬ್ಬದ ಆಚರಣೆ ವೇಳೆ ಕಾಲ್ತುಳಿತ ಸಂಭವಿಸಿ ಇಬ್ಬರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ತಮಿಳುನಾಡಿನ ಮಧುರೈನಲ್ಲಿ ನಡೆದಿದೆ.

    ಘಟನೆಯಲ್ಲಿ ಮೃತಪಟ್ಟ ಕುಟುಂಬಸ್ಥರಿಗೆ 5 ಲಕ್ಷ ರೂಪಾಯಿ, ಗಂಭೀರವಾಗಿ ಗಾಯಗೊಂಡವರಿಗೆ ತಲಾ 2 ಲಕ್ಷ ರೂಪಾಯಿ ಹಾಗೂ ಸಣ್ಣಪುಟ್ಟ ಗಾಯಗಳಾಗಿರುವವರಿಗೆ ತಲಾ 1 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಸಿಎಂ ಪರಿಹಾರ ನಿಧಿಯಿಂದ ಹಣ ಬಿಡುಗಡೆ ಮಾಡಲಾಗುವುದು ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ತಿಳಿಸಿದ್ದಾರೆ. ಇದನ್ನೂ ಓದಿ: ಔಷಧಿ ಗುಣಗಳಿರುವ ಏಲಕ್ಕಿ ಸೇವನೆಯಿಂದ ಸಿಗುತ್ತೆ ಈ ಪ್ರಯೋಜನ!

    ಕಳೆದ ಎರಡು ವರ್ಷಗಳಿಂದ ಕೋವಿಡ್-19 ಇದ್ದಿದ್ದರಿಂದ ತಮಿಳುನಾಡಿನ ಅತ್ಯಂತ ಪ್ರಸಿದ್ಧ ಚಿತಿರೈ ಹಬ್ಬವನ್ನು ಸಾರ್ವಜನಿಕವಾಗಿ ನಡೆಸಲಾಗಲಿಲ್ಲ. ಆದರೆ ಈ ವರ್ಷ ಕೋವಿಡ್-19 ನಿಯಮಗಳನ್ನು ಸಡಿಲಗೊಳಿಸಿದ್ದರಿಂದ, ಉತ್ಸವವನ್ನು ಅದ್ದೂರಿಯಾಗಿ ನಡೆಸಲಾಯಿತು. ಏಪ್ರಿಲ್ 12 ರಂದು ಪ್ರಾರಂಭವಾದ ಉತ್ಸವವನ್ನು ವೀಕ್ಷಿಸಲಿ ರಾಜ್ಯದ ವಿವಿಧ ಮೂಲೆಗಳಿಂದ ಮಧುರೈ ನಗರಕ್ಕೆ ಜನ ಜಮಾಯಿಸುತ್ತಿದ್ದಾರೆ. ಇದನ್ನೂ ಓದಿ: ಹನುಮ ಜಯಂತಿ ಹಿನ್ನೆಲೆ ಕೇಸರಿ ಶಾಲು ಧರಿಸಿ ಗಣೇಶ್ ಹುಕ್ಕೇರಿ ಪಾದಯಾತ್ರೆ

    ಸದ್ಯ ಇಂದು ಬೆಳಗ್ಗೆ ಆಚರಣೆಯ ಸಂದರ್ಭದಲ್ಲಿ, ಜನಸಂದಣಿಯಿಂದಾಗಿ ನೂಕುನುಗ್ಗಲು ಉಂಟಾಗಿದ್ದು, 60 ವರ್ಷದ ಮಹಿಳೆ ಮತ್ತು 40 ವರ್ಷದ ಪುರುಷ ಸಾವನ್ನಪ್ಪಿದ್ದಾರೆ. ಉಳಿದಂತೆ 24 ಜನರು ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಮಧುರೈನ ಸರ್ಕಾರಿ ರಾಜಾಜಿ ಆಸ್ಪತ್ರೆಗೆ ದಾಖಲಿಸಲಾಗಿದೆ. 24 ಮಂದಿಯಲ್ಲಿ ಐವರಿಗೆ ಗಂಭೀರವಾಗಿ ಗಾಯಗಳಾಗಿದೆ.

  • ಕರ್ನಾಟಕ ಹೈಕೋರ್ಟ್ ಜಡ್ಜ್‌ಗೆ ಕೊಲೆ ಬೆದರಿಕೆ ಹಾಕಿದ್ದ ಆರೋಪಿ ಅರೆಸ್ಟ್

    ಕರ್ನಾಟಕ ಹೈಕೋರ್ಟ್ ಜಡ್ಜ್‌ಗೆ ಕೊಲೆ ಬೆದರಿಕೆ ಹಾಕಿದ್ದ ಆರೋಪಿ ಅರೆಸ್ಟ್

    ಬೆಂಗಳೂರು/ ಚೆನ್ನೈ: ಹಿಜಬ್ ತೀರ್ಪು ಪ್ರಕಟಿಸಿದ ಕರ್ನಾಟಕ ಹೈಕೋಟ್ ಮುಖ್ಯನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಅವರಿಗೆ ಕೊಲೆಬೆದರಿಕೆ ಹಾಕಿದ್ದ ಆರೋಪಿಯನ್ನು ಮಧುರೈ ಪೊಲೀಸರು ಬಂಧಿಸಿದ್ದಾರೆ.

    ರೆಹಮತ್ತುಲ್ಲಾ ಬಂಧಿತ ಆರೋಪಿ. ಈತ ತೌಹಿಫ್ ಜಮಾತ್ ಸಂಘಟನೆಯ ಸದಸ್ಯನಾಗಿದ್ದಾನೆ. ಮಧುರೈ ಪೊಲೀಸರು ಶನಿವಾರ ರಾತ್ರಿ ಆರೋಪಿಯನ್ನು ತಿರುನಲ್ವೇಲಿಯಲ್ಲಿ ಬಂಧಿಸಿದ್ದರು. ಸದ್ಯ ಆರೋಪಿಗೆ ಮಾರ್ಚ್ 31ರ ವರೆಗೂ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ತಿರುಪತ್ತೂರ್ ಜೈಲಿನಲ್ಲಿರಿಸಲಾಗಿದೆ.

    ಏನಿದು ಘಟನೆ?: ಹಿಜಬ್ ತೀರ್ಪು ಪ್ರಕಟಿಸಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ತಮಿಳುನಾಡು ಮೂಲದ ಮತೀಯ ಸಂಘಟನೆಯೊಂದು ಕೊಲೆ ಬೆದರಿಕೆ ಹಾಕಿತ್ತು. ತೌಹೀದ್ ಜಮಾತ್ ಸಂಘಟನೆ ಬೆದರಿಕೆ ಹಾಕಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಬೆಂಗಳೂರಿನ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಸಂಘಟನೆ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಇದೇ ವೇಳೆ ಮಧುರೈ ಪೊಲೀಸರೂ ಪ್ರಕರಣ ದಾಖಲಿಸಿಕೊಂಡಿದ್ದರು. ಜಡ್ಜ್‍ಗೆ ಬೆದರಿಕೆ ಹಾಕಿದ ಸಂಬಂಧ ತನಿಖೆ ನಡೆಸುವಂತೆ ಒತ್ತಾಯಿಸಿ ಹೈಕೋರ್ಟ್ ರಿಜಿಸ್ಟ್ರಾರ್ ಅವರಿಗೆ ಸಾಮಾಜಿಕ ಕಾರ್ಯಕರ್ತ ಗಿರೀಶ್ ಭಾರದ್ವಾಜ್ ಮನವಿ ಮಾಡಿದ್ದರು. ಇದನ್ನೂ ಓದಿ: ಹಿಜಬ್‌ ತೀರ್ಪು ಪ್ರಕಟಿಸಿದ ಜಡ್ಜ್‌ಗಳಿಗೆ ಕೊಲೆ ಬೆದರಿಕೆ – ಕೇಸ್‌ ದಾಖಲು

    ತೌಹೀದ್ ಜಮಾತ್ ಸಂಘಟನೆಯ ಮುಖಂಡ ಆರ್.ರೆಹ್ಮತ್‍ವುಲ್ಲಾ ಮಧುರೈನಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಹಿಜಬ್ ತೀರ್ಪಿಗೆ ಆಕ್ಷೆ?ಪ ವ್ಯಕ್ತಪಡಿಸಿ ಪರೋಕ್ಷವಾಗಿ ನ್ಯಾಯಾಧಿ?ಶರಿಗೆ ಕೊಲೆ ಬೆದರಿಕೆ ಹಾಕಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ವಿಡಿಯೋ ಆಧಾರಿಸಿ ವಕೀಲ, ಸುಧಾ ಕಟ್ವ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

    ಪ್ರಕರಣ ಸಂಬಂಧ ಐಪಿಸಿ ಸೆಕ್ಷನ್ 506(ಬೆದರಿಕೆ), 501(1)(ಮಾನಹಾನಿ), 503(ಕ್ರಿಮಿನಲ್ ಬೆದರಿಕೆ), 109(ಪ್ರಚೋದನೆ), 504(ಶಾಂತಿ ಭಂಗ), 505(ಸಾರ್ವಜನಿಕ ಕಿಡಿಗೇಡಿತನ) ಸೇರಿದಂತೆ ವಿವಿಧ ಸೆಕ್ಷನ್‍ಗಳಲ್ಲಿ ಎಫ್‍ಐಆರ್ ದಾಖಲಾಗಿದೆ. ಈ ಪ್ರಕರಣ ಸಂಬಂಧ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿತ್ತು. ಇದನ್ನೂ ಓದಿ: ಭಗವದ್ಗೀತೆ ಹೊಟ್ಟೆ ತುಂಬಿಸುವುದಿಲ್ಲ, ತಲೆಯನ್ನು ತುಂಬಿಸುತ್ತದೆ: ಪ್ರತಾಪ್‍ಸಿಂಹ

    ಗಿರೀಶ್ ಪತ್ರದಲ್ಲಿ ಏನಿತ್ತು?: ತೌಹೀದ್ ಜಮಾತ್ ಸಂಘಟನೆಯ ಮುಖಂಡ ಆರ್.ರಹ್ಮತ್‍ವುಲ್ಲಾ ಅವರು, ಸಾರ್ವಜನಿಕ ಭಾಷಣದಲ್ಲಿ ಹಿಜಬ್ ಕುರಿತು ತೀರ್ಪು ನೀಡಿರುವ ನ್ಯಾಯಾಮೂರ್ತಿಗಳು ಕೊಲೆಯಾದಲ್ಲಿ ಅವರೇ ನೇರ ಹೊಣೆಯಾಗಲಿದ್ದಾರೆ ಎಂದು ಹೇಳಿದ್ದರು. ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸಂಘಟನೆ ನಾಯಕರು ತೀರ್ಪು ಸಂವಿಧಾನಕ್ಕೆ ವಿರುದ್ಧವಾಗಿದೆ ಎಂದು ತಿಳಿಸಿದ್ದರು. ಅಲ್ಲದೆ, ಹೊಸಪೇಟೆಯಲ್ಲಿ ಹಿಜಬ್ ಧರಿಸುವುದನ್ನು ಸಮರ್ಥಿಸಿ ಗೋಡೆಗಳ ಮೇಲೆ ಬರಹಗಳನ್ನು ಬರೆಯಲಾಗಿದ್ದು, ಅಮೀರ್- ಇ-ಶರಿತ್ ಎಂಬ ಸಂಘಟನೆ ತೀರ್ಪು ಖಂಡಿಸಿ ಬಂದ್‍ಗೆ ಕರೆ ನೀಡಿತ್ತು. ಈ ಎಲ್ಲ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಸ್ವಯಂಪ್ರೆರಿತ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ತಪ್ಪಿತಸ್ಥರನ್ನು ಶಿಕ್ಷೆಗೆ ಗುರಿಪಡಿಸಬೇಕು ಎಂದು ಅವರು ಪತ್ರದಲ್ಲಿ ಒತ್ತಾಯಿಸಿದ್ದರು.