Tag: Mafia

  • ಪ್ರಜ್ವಲ್ ಹುಟ್ಟುಹಬ್ಬಕ್ಕೆ `ಮಾಫಿಯಾ’ ಟೀಮ್ ಗಿಫ್ಟ್

    ಪ್ರಜ್ವಲ್ ಹುಟ್ಟುಹಬ್ಬಕ್ಕೆ `ಮಾಫಿಯಾ’ ಟೀಮ್ ಗಿಫ್ಟ್

    ಇಂದು ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ (Prajwal Devaraj) ಅವರ ಹುಟ್ಟುಹಬ್ಬ. ಈ ಸಂದರ್ಭದಲ್ಲಿ `ಮಾಫಿಯಾ’ ಚಿತ್ರತಂಡ (Mafia Movie ) ವಿಶೇಷ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ತಮ್ಮ ಚಿತ್ರದ ನಾಯಕನಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ. ಬಹು ನಿರೀಕ್ಷಿತ ಈ ಚಿತ್ರ ಗಣಪತಿ ಹಬ್ಬದ ಸಂದರ್ಭದಲ್ಲಿ ತೆರೆಗೆ ಬರಲಿದೆ.

    ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್ ಬಿ ನಿರ್ಮಿಸಿರುವ, ಲೋಹಿತ್ ಹೆಚ್ ನಿರ್ದೇಶಿಸಿರುವ ಈ ಚಿತ್ರದ ನಾಯಕನಾಗಿ ಪ್ರಜ್ವಲ್ ದೇವರಾಜ್ ಹಾಗೂ ನಾಯಕಿಯಾಗಿ ಅದಿತಿ ಪ್ರಭುದೇವ ಅಭಿನಯಿಸಿದ್ದಾರೆ. ದೇವರಾಜ್ ಅವರು ಸಹ ʻಮಾಫಿಯಾʼ ಚಿತ್ರದಲ್ಲಿ ಅಭಿನಯಿಸಿದ್ದು, ತಂದೆ – ಮಗ ಇಬ್ಬರು ಈ ಚಿತ್ರದಲ್ಲಿ ನಟಿಸಿರುವುದು ವಿಶೇಷ. ಸಾಧುಕೋಕಿಲ, ಶೈನ್ ಶೆಟ್ಟಿ, ವಿಜಯ್ ಚೆಂಡೂರ್, ವಾಸುಕಿ ವೈಭವ್ ಮುಂತಾದವರು ತಾರಾಬಳಗದಲ್ಲಿದ್ದಾರೆ. ಇದನ್ನೂ ಓದಿ: ತಾಯಿ ಚಾಮುಂಡಿ ದರ್ಶನ ಪಡೆದ ನಟ ದರ್ಶನ್

    ಈಗಾಗಲೇ ಟೀಸರ್ ಹಾಗೂ ಹಾಡುಗಳ ಮೂಲಕ ಜನಪ್ರಿಯವಾಗಿರುವ ʻಮಾಫಿಯಾʼ ಚಿತ್ರದಲ್ಲಿ ಮೈನವಿರೇಳಿಸುವ ಆಕ್ಷನ್ ಸನ್ನಿವೇಶಗಳಿದೆ. ಚಿತ್ರ ಬಿಡುಗಡೆಗಾಗಿ ಪ್ರಜ್ವಲ್ ದೇವರಾಜ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

    ಆಕ್ಷನ್ ಜಾನರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಬೆಂಗಳೂರು, ಮೈಸೂರು ಹಾಗೂ ಹೈದರಾಬಾದ್ ನಲ್ಲಿ ಚಿತ್ರೀಕರಣ ನಡೆದಿದೆ. ಅಪಾರವೆಚ್ಚದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗಿರುವ ಈ ಚಿತ್ರಕ್ಕೆ ಅನೂಪ್ ಸೀಳಿನ್ ಹಾಗೂ ಗಗನ್ ಭಡೇರಿಯಾ ಸಂಗೀತ ನೀಡಿದ್ದಾರೆ. ಎಸ್ ಪಾಂಡಿಕುಮಾರ್ ಛಾಯಾಗ್ರಹಣ ʻಮಾಫಿಯಾʼ ಚಿತ್ರಕ್ಕಿದೆ. ಇದನ್ನೂ ಓದಿ: ಜಾನಿ ಮಾಸ್ಟರ್ ಜೊತೆಗಿನ ಫೋಟೋ: ಟೀಕೆಗೆ ಒಳಗಾದ ನಯನತಾರಾ-ವಿಘ್ನೇಶ್

  • ಪ್ರಜ್ವಲ್ ದೇವರಾಜ್ – ಅದಿತಿ ಪ್ರಭುದೇವ ಚಿತ್ರಕ್ಕೆ ಸೆನ್ಸಾರ್

    ಪ್ರಜ್ವಲ್ ದೇವರಾಜ್ – ಅದಿತಿ ಪ್ರಭುದೇವ ಚಿತ್ರಕ್ಕೆ ಸೆನ್ಸಾರ್

    ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್ ಬಿ ನಿರ್ಮಿಸಿರುವ, ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕರಾಗಿ, ಅದಿತಿ ಪ್ರಭುದೇವ ನಾಯಕಿಯಾಗಿ ನಟಿಸಿರುವ ಹಾಗೂ ಲೋಹಿತ್ ಹೆಚ್ ನಿರ್ದೇಶಿಸಿರುವ ಬಹು ನಿರೀಕ್ಷಿತ “ಮಾಫಿಯಾ” ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯಾವುದೇ ಕಟ್ ಅಥವಾ ಮ್ಯೂಟ್ ಹೇಳದೆ ಯು\ಎ ಪ್ರಮಾಣಪತ್ರ ನೀಡಿದೆ. ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿರುವ “ಮಾಫಿಯಾ” ಚಿತ್ರದ ಬಿಡುಗಡೆ ದಿನಾಂಕವನ್ನು ಸದ್ಯದಲ್ಲೇ ಘೋಷಿಸುವುದಾಗಿ ನಿರ್ಮಾಪಕ  ಕುಮಾರ್ ತಿಳಿಸಿದ್ದಾರೆ. ಸಾಕಷ್ಟು ಕುತೂಹಲ ಮೂಡಿಸಿರುವ ಈ ಚಿತ್ರ ಬಿಡುಗಡೆಗೆ ಪ್ರಜ್ವಲ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

    ಆಕ್ಷನ್ ಜಾನರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಬೆಂಗಳೂರು, ಮೈಸೂರು ಹಾಗೂ ಹೈದರಾಬಾದ್ ನಲ್ಲಿ ಚಿತ್ರೀಕರಣ ನಡೆದಿದೆ.  ಅಪಾರವೆಚ್ಚದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗಿರುವ ಈ ಚಿತ್ರದಲ್ಲಿ ಮೈನವಿರೇಳಿಸುವ ಐದು ಸಾಹಸ ಸನ್ನಿವೇಶಗಳಿದೆ. ಈ ಚಿತ್ರಕ್ಕಾಗಿ ಪ್ರಜ್ವಲ್ ದೇವರಾಜ್ ಅವರು ಸಾಕಷ್ಟು ಶ್ರಮವಹಿಸಿದ್ದಾರೆ.

    ನಾಲ್ಕು ಹಾಡುಗಳಿರುವ ಈ ಚಿತ್ರಕ್ಕೆ ಅನೂಪ್ ಸೀಳಿನ್ ಹಾಗೂ ಗಗನ್ ಭಡೇರಿಯಾ ಸಂಗೀತ ನೀಡಿದ್ದಾರೆ. ಎಸ್ ಪಾಂಡಿಕುಮಾರ್ ಛಾಯಾಗ್ರಹಣವಿರುವ ಈ ಚಿತ್ರದ ತಾರಾಬಳಗದಲ್ಲಿ  ಪ್ರಜ್ವಲ್ ದೇವರಾಜ್, ಅದಿತಿ ಪ್ರಭುದೇವ, ದೇವರಾಜ್ , ಸಾಧುಕೋಕಿಲ, ಶೈನ್ ಶೆಟ್ಟಿ, ವಿಜಯ್ ಚೆಂಡೂರ್, ವಾಸುಕಿ ವೈಭವ್ ಮುಂತಾದವರಿದ್ದಾರೆ.

  • ‘ಮಾಫಿಯಾ’ ಚಿತ್ರತಂಡದಿಂದ ಮತ್ತೊಂದು ಪೋಸ್ಟರ್

    ‘ಮಾಫಿಯಾ’ ಚಿತ್ರತಂಡದಿಂದ ಮತ್ತೊಂದು ಪೋಸ್ಟರ್

    ಲೋಹಿತ್.ಹೆಚ್  (Lohit) ನಿರ್ದೇಶಿಸಿರುವ ಹಾಗೂ ಪ್ರಜ್ವಲ್ ದೇವರಾಜ್ (Prajwal Devaraj) & ಅದಿತಿ ಪ್ರಭುದೇವ ನಾಯಕ, ನಾಯಕಿಯಾಗಿ ನಟಿಸಿರುವ ‘ಮಾಫಿಯಾ’ (Mafia) ಚಿತ್ರತಂಡದಿಂದ ಮಕರ ಸಂಕ್ರಾಂತಿ ಹಬ್ಬಕ್ಕೆ ಹೊಸ ಪೋಸ್ಟರ್ ಬಿಡುಗಡೆಯಾಗಿದೆ. ಪ್ರಜ್ವಲ್ ಅವರು ಹೊಸ ಲುಕ್ ನಲ್ಲಿರುವ ಈ ಪೋಸ್ಟರ್ ರಿಲೀಸ್ ಮಾಡುವ ಮೂಲಕ ಮಾಫಿಯಾ ಚಿತ್ರತಂಡ ರಾಜ್ಯದ ಜನತೆಗೆ ಸಂಕ್ರಾಂತಿ ಶುಭಾಶಯ ಹೇಳಿದೆ.

    ಇದೊಂದು ವಿಭಿನ್ನ ಕಥಾ ಹಂದರ ಹೊಂದಿರುವ ಸಿನಿಮಾವಾಗಿದ್ದು, ಚಿತ್ರದ ಬಗ್ಗೆ ನಿರೀಕ್ಷೆ ಮೂಡಿಸಿದೆ. ಅದರ ಭಾಗವಾಗಿ ಟೀಸರ್ ರಿಲೀಸ್ ಕೂಡ ಆಗಿದ್ದು, ಅದಕ್ಕೆ ಅದ್ಭುತ ರೆಸ್ಪಾನ್ಸ್ ಕೂಡ ಸಿಕ್ಕಿತ್ತು.

    ಆಕ್ಷನ್ ಜಾನರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಬೆಂಗಳೂರು, ಮೈಸೂರು ಹಾಗೂ ಹೈದರಾಬಾದ್ ನಲ್ಲಿ ಚಿತ್ರೀಕರಣ ನಡೆದಿದೆ. ಅಪಾರ ವೆಚ್ಚದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗಿರುವ ಈ ಚಿತ್ರದಲ್ಲಿ ಮೈನವಿರೇಳಿಸುವ ಐದು ಸಾಹಸ ಸನ್ನಿವೇಶಗಳಿವೆ.  ಈ ಚಿತ್ರಕ್ಕಾಗಿ ಪ್ರಜ್ವಲ್ ಅವರು ಸಾಕಷ್ಟು ಶ್ರಮವಹಿಸಿದ್ದಾರೆ.

     

    ಈ ಚಿತ್ರದಲ್ಲಿ ನಾಲ್ಕು ಹಾಡುಗಳಿವೆ. ಅನೂಪ್ ಸೀಳಿನ್ ಸಂಗೀತ ನೀಡಿದ್ದಾರೆ. ಎಸ್ ಪಾಂಡಿಕುಮಾರ್ ಛಾಯಾಗ್ರಹಣವಿರುವ ಈ ಚಿತ್ರದ ತಾರಾಬಳಗದಲ್ಲಿ  ಪ್ರಜ್ವಲ್ ದೇವರಾಜ್, ಅದಿತಿ ಪ್ರಭುದೇವ, ದೇವರಾಜ್, ಸಾಧುಕೋಕಿಲ, ಶೈನ್ ಶೆಟ್ಟಿ, ವಿಜಯ್ ಚೆಂಡೂರ್, ವಾಸುಕಿ ವೈಭವ್ ಮುಂತಾದವರಿದ್ದಾರೆ.

  • ಅದಿತಿ ಜೊತೆ ರೊಮ್ಯಾಂಟಿಕ್ ಹಾಡಿಗೆ ಹೆಜ್ಜೆ ಹಾಕಿದ ಪ್ರಜ್ವಲ್

    ಅದಿತಿ ಜೊತೆ ರೊಮ್ಯಾಂಟಿಕ್ ಹಾಡಿಗೆ ಹೆಜ್ಜೆ ಹಾಕಿದ ಪ್ರಜ್ವಲ್

    ಸ್ಯಾಂಡಲ್‌ವುಡ್‌ನ ಡೈನಾಮಿಕ್ ಪ್ರಿನ್ಸ್  ಪ್ರಜ್ವಲ್ ದೇವರಾಜ್ ನಟನೆಯ ಮಾಫಿಯಾ ಸಿನಿಮಾದ ರೊಮ್ಯಾಂಟಿಕ್ ಹಾಡು ರಿಲೀಸ್ ಆಗಿದೆ. ಮಾಫಿಯಾ ಈಗಾಗಲೇ ಟೀಸರ್ ಮೂಲಕ ಗಮನ ಸೆಳೆಯುತ್ತಿರುವ ಸಿನಿಮಾ. ಇದೀಗ ಪ್ರಜ್ವಲ್ ರೊಮ್ಯಾಂಟಿಕ್ ಹಾಡಿನ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದಾರೆ. ಅಂದಹಾಗೆ ಈ ಸಿನಿಮಾದಲ್ಲಿ ಪ್ರಜ್ವಲ್‌ಗೆ ನಾಯಕಿಯಾಗಿ ಅದಿತಿ ಪ್ರಭುದೇವ ಕಾಣಿಸಿಕೊಂಡಿದ್ದಾರೆ. ಇತ್ತೀಚಿಗಷ್ಟೆ ತಾಯಿಯಾಗುತ್ತಿರುವ ಸಂಭ್ರಮವನ್ನು ಹಂಚಿಕೊಂಡಿದ್ದ ಅದಿತಿ ಇದೀಗ ಮಾಫಿಯಾ ಮೂಲಕ ಅಭಿಮಾನಿಗಳ ಮುಂದೆ ಬರಲಿ ಸಜ್ಜಾಗಿದ್ದಾರೆ.

    ಅಂದಹಾಗೆ ಮಾಫಿಯಾ ಮಮ್ಮಿ ಖ್ಯಾತಿಯ ನಿರ್ದೇಶಕ ಲೋಹಿತ್ ಸಾರಥ್ಯದಲ್ಲಿ ಮೂಡಿ ಬಂದಿರುವ ಸಿನಿಮಾ. ಲೋಹಿತ್ ಮತ್ತು ಪ್ರಜ್ವಲ್ ಕಾಂಬಿನೇಷನ್ ನ ಮೊದಲ ಸಿನಿಮಾ ಇದಾಗಿದೆ. ಹಾಗಾಗಿ ಸಿನಿಮಾದ ಮೇಲಿನ ನಿರೀಕ್ಷೆ ಹೆಚ್ಚಾಗಿದೆ.

    ಸದ್ಯ ರಿಲೀಸ್ ಆಗಿರುವ ‘ತುಂಬನೇ ಕೇಳಲಾರೆ…’ ಸಾಲುಗಳಿಂದ ಪ್ರಾರಂಭವಾಗುವ ಈ ರೊಮ್ಯಾಂಟಿಕ್ ಹಾಡು ಹರಿಚರಣ್ ಧ್ವನಿಯಲ್ಲಿ ಮೂಡಿ ಬಂದಿದೆ. ಈ ಚಿತ್ರಕ್ಕೆ ಅನೂಪ್ ಸೀಳಿನ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಪ್ರಮೋದ್ ಮರವಂತೆ ಸಾಹಿತ್ಯ ಈ ಹಾಡಿಗಿದೆ. ಪ್ರಜ್ವಲ್ ಮತ್ತು ಅದಿತಿ ಅವರನ್ನು ಈ ರೊಮ್ಯಾಂಟಿಕ್ ಹಾಡಿನಲ್ಲಿ ನೋಡಿ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ.

    ಮಾಫಿಯಾ ಈಗಾಗಲೇ ಚಿತ್ರೀಕಣ ಮುಗಿಸಿ ರಿಲೀಸ್‌ಗೆ ರೆಡಿಯಾಗಿರುವ ಸಿನಿಮಾ. ಸದ್ಯ ಟೀಸರ್ ಮತ್ತು ಹಾಡಿನ ಮೂಲಕ ಸದ್ದು ಮಾಡುತ್ತಿರುವ ಈ ಸಿನಿಮಾ ಸದ್ಯದಲ್ಲೇ ಚಿತ್ರಮಂದಿರಕ್ಕೆ ಎಂಟ್ರಿ ಕೊಡಲಿದೆ. ಎಲ್ಲವೂ ಅಂದುಕೊಂಡಂತೆ ಆದರೆ ಸಿನಿಮಾ ಮುಂದಿನ ತಿಂಗಳು ತೆರೆಗೆ ಬರುವ ಸಾಧ್ಯತೆ ಇದೆ. ಚಿತ್ರಕ್ಕೆ ಕುಮಾರ್ ಅವರು ಬಂಡವಾಳ ಹೂಡಿದ್ದಾರೆ.

  • ಪ್ರಜ್ವಲ್ ದೇವರಾಜ್ ನಟನೆಯ ‘ಮಾಫಿಯಾ’ ಸಿನಿಮಾದ ಟೀಸರ್ ರಿಲೀಸ್

    ಪ್ರಜ್ವಲ್ ದೇವರಾಜ್ ನಟನೆಯ ‘ಮಾಫಿಯಾ’ ಸಿನಿಮಾದ ಟೀಸರ್ ರಿಲೀಸ್

    ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್ ಬಿ ನಿರ್ಮಿಸಿರುವ, ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ (Prajwal Devaraj) ನಾಯಕರಾಗಿ, ಅದಿತಿ ಪ್ರಭುದೇವ ನಾಯಕಿಯಾಗಿ ನಟಿಸಿರುವ ಹಾಗೂ ಲೋಹಿತ್ ಹೆಚ್ ನಿರ್ದೇಶಿಸಿರುವ  ‘ಮಾಫಿಯಾ’ (Mafia) ಚಿತ್ರದ ಟೀಸರ್ (Teaser) ಇತ್ತೀಚಿಗೆ ಬಿಡುಗಡೆಯಾಯಿತು. ಬಿಗ್ ಬಾಸ್ ಖ್ಯಾತಿಯ ಪ್ರಶಾಂತ್ ಸಂಬರ್ಗಿ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ನಂತರ ಚಿತ್ರತಂಡದ ಸದಸ್ಯರು ಮಾಫಿಯಾ ಕುರಿತು ಮಾತನಾಡಿದರು.

    ಮೊದಲು ಮಾತನಾಡಿದ ನಿರ್ದೇಶಕ ಲೋಹಿತ್ (Lohit), ಈವರೆಗೂ ಯಾರು ತೋರಿಸಿರದ ಮಾಫಿಯಾ ಈ ಚಿತ್ರದಲ್ಲಿ ತೋರಿಸಿದ್ದೇವೆ. ಬೇರೆ ಬೇರೆ ಮಾರ್ಕೆಟ್ ಹೆಸರು ಕೇಳಿರುತ್ತೀರಾ.‌ ಆದರೆ ಇದೆ ಮೊದಲ ಬಾರಿಗೆ ರೆಡ್ ಮಾರ್ಕೆಟ್ ಪರಿಚಯಿಸಲಾಗಿದೆ. ಅದು ಏನೆಂಬುದನ್ನು ಚಿತ್ರದಲ್ಲೇ ನೋಡಬೇಕು ಎಂದರು.

    ಪ್ರಜ್ವಲ್ ದೇವರಾಜ್ ಅಭಿನಯದ 35 ನೇ ಚಿತ್ರವನ್ನು ನಿರ್ಮಿಸುತ್ತಿರುವುದು ಖುಷಿಯಾಗಿದೆ. ನಿರ್ದೇಶಕ ಲೋಹಿತ್ ಸೇರಿದಂತೆ ಚಿತ್ರತಂಡದ ಸಹಕಾರದಿಂದ “ಮಾಫಿಯಾ” ಚಿತ್ರ ಚೆನ್ನಾಗಿ ಮೂಡಿಬಂದಿದೆ.  ಜನವರಿಯಲ್ಲಿ ಚಿತ್ರವನ್ನು ಬಿಡುಗಡೆ ಮಾಡುವ ಯೋಜನೆಯಿದೆ ಎಂದರು ನಿರ್ಮಾಪಕ ಕುಮಾರ್ ಬಿ.

    ಸಿಕ್ಸರ್ ಚಿತ್ರದಿಂದ ನನ್ನ ಸಿನಿ ಜರ್ನಿ ಸಾಗಿಬಂದಿದೆ. ಮೂವತ್ತೈದು ಚಿತ್ರಗಳನ್ನು ಪೂರೈಸಲು ಸಹಕಾರ ನೀಡಿದ ಪ್ರತಿಯೊಬ್ಬರಿಗೂ ಧನ್ಯವಾದ. ಇನ್ನು ಮಾಫಿಯಾ ಚಿತ್ರದ ಬಗ್ಗೆ ಹೇಳಬೇಕಾದರೆ, ಕುಮಾರ್ ಅವರು ಒಳ್ಳೆಯ ಚಿತ್ರ ನಿರ್ಮಾಣ ಮಾಡಿದ್ದಾರೆ. ನಿರ್ದೇಶಕ ಲೋಹಿತ್ ಅವರ ವಯಸ್ಸು ಚಿಕ್ಕದಾಗಿದ್ದರೂ ಕೆಲಸದಲ್ಲಿ ಅಸಾಧಾರಣ. ನಾನು, ಈವರೆಗೂ ಮಾಡಿರದ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ ಎಂದರು ನಾಯಕ ಪ್ರಜ್ವಲ್ ದೇವರಾಜ್.

    ಪಟಪಟ ಎಂದು ಮಾತನಾಡುವ ಹುಡುಗಿಯ ಪಾತ್ರದಲ್ಲಿ ಕಾಣಿಸಿಕೊಂಡಿರುವುದಾಗಿ ನಾಯಕಿ ಅದಿತಿ ಪ್ರಭುದೇವ ಹೇಳಿದರು. ನಟ ಶೈನ್ ಶೆಟ್ಟಿ, ಸಾಹಸ ನಿರ್ದೇಶಕ ಜಾಲಿ ಬಾಸ್ಟಿನ್, ಸಂಗೀತ ನಿರ್ದೇಶಕ ಅನೂಪ್ ಸೀಳಿನ್ ಹಾಗೂ ಛಾಯಾಗ್ರಾಹಕ ಪಾಂಡಿಕುಮಾರ್ ಸೇರಿದಂತೆ ಅನೇಕರು “ಮಾಫಿಯಾ” ಚಿತ್ರದ ಬಗ್ಗೆ ಮಾತನಾಡಿದರು.

  • ನ.29ಕ್ಕೆ ಪ್ರಜ್ವಲ್ ನಟನೆಯ ‘ಮಾಫಿಯಾ’ ಚಿತ್ರದ ಟೀಸರ್ ರಿಲೀಸ್

    ನ.29ಕ್ಕೆ ಪ್ರಜ್ವಲ್ ನಟನೆಯ ‘ಮಾಫಿಯಾ’ ಚಿತ್ರದ ಟೀಸರ್ ರಿಲೀಸ್

    ಪ್ರಜ್ವಲ್ ದೇವರಾಜ್ ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ಇದೇ ನವೆಂಬರ್ 29ಕ್ಕೆ ಪ್ರಜ್ವಲ್ ನಟನೆಯ ಮಾಫಿಯಾ ಸಿನಿಮಾದ ಟೀಸರ್ (Teaser) ರಿಲೀಸ್ ಆಗಲಿದೆ. ಇದೊಂದು ವಿಭಿನ್ನ ಕಥಾ ಹಂದರ ಹೊಂದಿರುವ ಸಿನಿಮಾವಾಗಿದ್ದು, ಚಿತ್ರದ ಬಗ್ಗೆ ನಿರೀಕ್ಷೆ ಮೂಡಿಸಿದೆ. ಅದರ ಭಾಗವಾಗಿ ಟೀಸರ್ ರಿಲೀಸ್ ಮಾಡಲು ಚಿತ್ರತಂಡ ಸಿದ್ಧತೆ ಮಾಡಿಕೊಂಡಿದೆ.

    ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್. ಬಿ ನಿರ್ಮಿಸಿರುವ, ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ (Prajwal Devaraj) ನಾಯಕರಾಗಿ, ಅದಿತಿ ಪ್ರಭುದೇವ (Aditi Prabhudeva) ನಾಯಕಿಯಾಗಿ ನಟಿಸಿರುವ ಹಾಗೂ ಲೋಹಿತ್ ಹೆಚ್ ನಿರ್ದೇಶಿಸಿರುವ  ಮಾಫಿಯಾ (Mafia) ಚಿತ್ರಕ್ಕೆ ಸಾಧುಕೋಕಿಲ ಅವರ ಲೂಪ್ ಸ್ಟುಡಿಯೋದಲ್ಲಿ ಡಬ್ಬಿಂಗ್ (Dubbing) ಕಾರ್ಯ ಮುಕ್ತಾಯವಾಗಿದೆ.

    ಆಕ್ಷನ್ ಜಾನರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಬೆಂಗಳೂರು, ಮೈಸೂರು ಹಾಗೂ ಹೈದರಾಬಾದ್ ನಲ್ಲಿ ಚಿತ್ರೀಕರಣ ನಡೆದಿದೆ. ಅಪಾರ ವೆಚ್ಚದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗಿರುವ ಈ ಚಿತ್ರದಲ್ಲಿ ಮೈನವಿರೇಳಿಸುವ ಐದು ಸಾಹಸ ಸನ್ನಿವೇಶಗಳಿವೆ.  ಈ ಚಿತ್ರಕ್ಕಾಗಿ ಪ್ರಜ್ವಲ್ ಅವರು ಸಾಕಷ್ಟು ಶ್ರಮವಹಿಸಿದ್ದಾರೆ.

     

    ಈ ಚಿತ್ರದಲ್ಲಿ ನಾಲ್ಕು ಹಾಡುಗಳಿವೆ. ಅನೂಪ್ ಸೀಳಿನ್ ಸಂಗೀತ ನೀಡಿದ್ದಾರೆ. ಎಸ್ ಪಾಂಡಿಕುಮಾರ್ ಛಾಯಾಗ್ರಹಣವಿರುವ ಈ ಚಿತ್ರದ ತಾರಾಬಳಗದಲ್ಲಿ  ಪ್ರಜ್ವಲ್ ದೇವರಾಜ್, ಅದಿತಿ ಪ್ರಭುದೇವ, ದೇವರಾಜ್, ಸಾಧುಕೋಕಿಲ, ಶೈನ್ ಶೆಟ್ಟಿ, ವಿಜಯ್ ಚೆಂಡೂರ್, ವಾಸುಕಿ ವೈಭವ್ ಮುಂತಾದವರಿದ್ದಾರೆ.

  • ‘ಮಾಫಿಯಾ’ ಚಿತ್ರಕ್ಕೆ ಡಬ್ಬಿಂಗ್ ಮುಗಿಸಿದ ಅದಿತಿ-ಪ್ರಜ್ವಲ್

    ‘ಮಾಫಿಯಾ’ ಚಿತ್ರಕ್ಕೆ ಡಬ್ಬಿಂಗ್ ಮುಗಿಸಿದ ಅದಿತಿ-ಪ್ರಜ್ವಲ್

    ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್. ಬಿ ನಿರ್ಮಿಸಿರುವ, ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ (Prajwal Devaraj) ನಾಯಕರಾಗಿ, ಅದಿತಿ ಪ್ರಭುದೇವ (Aditi Prabhudeva) ನಾಯಕಿಯಾಗಿ ನಟಿಸಿರುವ ಹಾಗೂ ಲೋಹಿತ್ ಹೆಚ್ ನಿರ್ದೇಶಿಸಿರುವ  ಮಾಫಿಯಾ (Mafia) ಚಿತ್ರಕ್ಕೆ ಸಾಧುಕೋಕಿಲ ಅವರ ಲೂಪ್ ಸ್ಟುಡಿಯೋದಲ್ಲಿ ಡಬ್ಬಿಂಗ್ಮು (Dubbing)ಕ್ತಾಯವಾಗಿದೆ. ಅಕ್ಟೋಬರ್ ನಲ್ಲಿ ಟೀಸರ್ ಬರಲಿದ್ದು, ನವೆಂಬರ್ ಅಂತ್ಯದ ವೇಳೆಗೆ ಸಿನಿಮಾ ತೆರೆಗೆ ಬರಲಿದೆ.

    ಆಕ್ಷನ್ ಜಾನರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಬೆಂಗಳೂರು, ಮೈಸೂರು ಹಾಗೂ ಹೈದರಾಬಾದ್ ನಲ್ಲಿ ಚಿತ್ರೀಕರಣ ನಡೆದಿದೆ. ಅಪಾರ ವೆಚ್ಚದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗಿರುವ ಈ ಚಿತ್ರದಲ್ಲಿ ಮೈನವಿರೇಳಿಸುವ ಐದು ಸಾಹಸ ಸನ್ನಿವೇಶಗಳಿವೆ.  ಈ ಚಿತ್ರಕ್ಕಾಗಿ ಪ್ರಜ್ವಲ್ ಅವರು ಸಾಕಷ್ಟು ಶ್ರಮವಹಿಸಿದ್ದಾರೆ.

    ಈ ಚಿತ್ರದಲ್ಲಿ ನಾಲ್ಕು ಹಾಡುಗಳಿವೆ. ಅನೂಪ್ ಸೀಳಿನ್ ಸಂಗೀತ ನೀಡಿದ್ದಾರೆ. ಎಸ್ ಪಾಂಡಿಕುಮಾರ್ ಛಾಯಾಗ್ರಹಣವಿರುವ ಈ ಚಿತ್ರದ ತಾರಾಬಳಗದಲ್ಲಿ  ಪ್ರಜ್ವಲ್ ದೇವರಾಜ್, ಅದಿತಿ ಪ್ರಭುದೇವ, ದೇವರಾಜ್, ಸಾಧುಕೋಕಿಲ, ಶೈನ್ ಶೆಟ್ಟಿ, ವಿಜಯ್ ಚೆಂಡೂರ್, ವಾಸುಕಿ ವೈಭವ್ ಮುಂತಾದವರಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಗಡಿ ಜಿಲ್ಲೆ ಕೋಲಾರದಲ್ಲಿ ಎಗ್ಗಿಲ್ಲದೆ ನಡೆಯುತ್ತಿದೆ ಪೆಟ್ರೋಲ್, ಡೀಸೆಲ್ ಸಾಗಾಟ

    ಗಡಿ ಜಿಲ್ಲೆ ಕೋಲಾರದಲ್ಲಿ ಎಗ್ಗಿಲ್ಲದೆ ನಡೆಯುತ್ತಿದೆ ಪೆಟ್ರೋಲ್, ಡೀಸೆಲ್ ಸಾಗಾಟ

    ಕೋಲಾರ: ಆಂಧ್ರಪ್ರದೇಶದ (Andhra Pradesh) ರಾಜ್ಯಕ್ಕೆ ಹೊಂದಿಕೊಂಡಿರುವ ಕೋಲಾರ (Kolar) ಜಿಲ್ಲೆಯಲ್ಲಿ ಅಕ್ರಮ ಪೆಟ್ರೋಲ್ (Petrol) ಮತ್ತು ಡೀಸೆಲ್ (Diesel) ಮಾಫಿಯಾ ಸಖತ್ ಸದ್ದು ಮಾಡುತ್ತಿದೆ.

    ಕೋಲಾರ ಜಿಲ್ಲೆಯ ಶ್ರೀನಿವಾಸಪುರ (Srinivaspura) ಹಾಗೂ ಮುಳಬಾಗಿಲು (Mulabagilu) ತಾಲೂಕಿನಲ್ಲಿ ಎಗ್ಗಿಲ್ಲದೆ ಈ ಮಾಫಿಯಾ ಸದ್ದು ಮಾಡುತ್ತಿದೆ. ಶ್ರೀನಿವಾಸಪುರ ತಾಲೂಕಿನ ರಾಯಲ್ಪಾಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮಾಫಿಯಾ (Mafia) ಜೋರಾಗಿದ್ದು, ಗಡಿಯ ಪೆಟ್ರೋಲ್ ಬಂಕ್‌ಗಳಿಂದ ಆಂಧ್ರಪ್ರದೇಶಕ್ಕೆ ಪೆಟ್ರೋಲ್ ಡೀಸೆಲ್ ಸಾಗಾಟ ಮಾಡಲಾಗುತ್ತಿದೆ. ಇದನ್ನೂ ಓದಿ: ನೂರು ಕೋಟಿ ಕ್ಲಬ್ ಸೇರಿದ ಚುನಾವಣೆ ಅಕ್ರಮ- ಹಣಕ್ಕಿಂತ ಕುಕ್ಕರ್, ತವಾಗಳದ್ದೇ ಮೇಲುಗೈ

    ಆಂಧ್ರದಲ್ಲಿ ಡೀಸೆಲ್ ಬೆಲೆ ಹೆಚ್ಚಾಗಿರುವ ಕಾರಣ ಕರ್ನಾಟಕದ (Karnataka) ಬಂಕ್‌ಗಳಿಂದ ಅಕ್ರಮವಾಗಿ ಪ್ರತಿನಿತ್ಯ ನೂರಾರು ಲೀಟರ್ ಟ್ರಾಕ್ಟರ್, ಟ್ಯಾಂಕರ್ ಹಾಗೂ ಡ್ರಮ್‌ಗಳಲ್ಲಿ ರಾತ್ರೋರಾತ್ರಿ ಸಾಗಾಟ ಮಾಡಲಾಗುತ್ತಿದೆ. ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಪ್ರಭಾವಿ ನಾಯಕರು ಇದರಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿದ್ದು, ಅಕ್ರಮ ಪೆಟ್ರೋಲ್, ಡೀಸೆಲ್ ಸಾಗಾಟಕ್ಕೆ ಪೊಲೀಸರ ಕುಮ್ಮಕ್ಕು ಸಿಕ್ಕಿದೆ. ಇದನ್ನೂ ಓದಿ: ಬೀದರ್‌ನಲ್ಲಿ 1 ಕೋಟಿ 50 ಲಕ್ಷ ರೂ. ಮೌಲ್ಯದ ಗಾಂಜಾ ಜಪ್ತಿ

    ಹಾಗಾಗಿ ರಾಯಲ್ಪಾಡು ಪೊಲೀಸರ ಕುಮ್ಮಕ್ಕಿನಿಂದಲೇ ಇಷ್ಟೆಲ್ಲಾ ನಡೆಯುತ್ತಿದೆ ಎನ್ನುವ ಮಾಹಿತಿ ತಿಳಿದು ಬಂದಿದೆ. ಆಂಧ್ರಪ್ರದೇಶದ ಸರ್ಕಾರದಲ್ಲಿರುವ ಪ್ರಭಾವಿ ನಾಯಕರು ತಮ್ಮ ಗುತ್ತಿಗೆ ಕಾಮಗಾರಿಗಳಿಗೆ ಹೀಗೆ ಪೆಟ್ರೋಲ್ ಹಾಗೂ ಡೀಸೆಲ್ ಖರೀದಿ ಮಾಡುತ್ತಿದ್ದಾರೆ ಎನ್ನುವುದು ಜಗಜ್ಜಾಹೀರಾಗಿದೆ. ಇದನ್ನೂ ಓದಿ: ಪೊಲೀಸರ ಬಂಧನದಿಂದ ಎಸ್ಕೇಪ್ ಆಗಿದ್ದ ಅಮೃತ್‌ಪಾಲ್ ಸಿಂಗ್‌ನ ಆಪ್ತ ಸಹಾಯಕ ಅರೆಸ್ಟ್ 

    ಹಾಗಾಗಿ ಇದರಲ್ಲಿ ಕೆಲ ಅಧಿಕಾರಿಗಳು ಶಾಮೀಲಾಗಿದ್ದು, ನಿತ್ಯ ಸಾವಿರಾರು ಲೀಟರ್ ಪೆಟ್ರೋಲ್, ಡೀಸೆಲ್ ಸಾಗಾಟ ಮಾಡುತ್ತಿದ್ದರೂ ಕೋಲಾರದ ಅಧಿಕಾರಿಗಳು ಕಣ್ಣುಮುಚ್ಚಿ ಕುಳಿತಿದ್ದಾರೆ ಎನ್ನುವ ಆರೋಪ ಜಿಲ್ಲೆಯಲ್ಲಿ ಕೇಳಿ ಬರುತ್ತಿದೆ. ಇದನ್ನೂ ಓದಿ: ಬಿಜೆಪಿ ಬೆಂಬಲಿಸಿ ವಾಟ್ಸಪ್ ಸ್ಟೇಟಸ್ ಹಾಕಿದ್ದಕ್ಕೆ ಗಲಾಟೆ – ಮಾರಕಾಸ್ತ್ರ ಹಿಡಿದು ಎರಡು ಗುಂಪುಗಳು ಹೊಡೆದಾಟ

  • ಪ್ರಜ್ವಲ್ ದೇವರಾಜ್ ನಟನೆಯ ‘ಮಾಫಿಯಾ’ ಚಿತ್ರಕ್ಕೆ ಶೂಟಿಂಗ್ ಮುಕ್ತಾಯ

    ಪ್ರಜ್ವಲ್ ದೇವರಾಜ್ ನಟನೆಯ ‘ಮಾಫಿಯಾ’ ಚಿತ್ರಕ್ಕೆ ಶೂಟಿಂಗ್ ಮುಕ್ತಾಯ

    ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ (Prajwal Devaraj) ನಾಯಕರಾಗಿ ನಟಿಸಿರುವ “ಮಾಫಿಯಾ” (Mafia) ಚಿತ್ರದ ಚಿತ್ರೀಕರಣ (Shooting) ಮುಕ್ತಾಯವಾಗಿದೆ. ಬೆಂಗಳೂರು, ಮೈಸೂರು ಹಾಗೂ ಹೈದರಾಬಾದ್ ನಲ್ಲಿ ಅರವತ್ತು ದಿನಗಳ ಚಿತ್ರೀಕರಣ ನಡೆದಿದೆ. ಚಿತ್ರೀಕರಣ ನಂತರದ ಚಟುವಟಿಕೆಗಳು ಬಿರುಸಿನಿಂದ ಸಾಗಿದೆ. ಜೂನ್ ತಿಂಗಳಲ್ಲಿ ಚಿತ್ರ ತೆರೆಗೆ ಬರಲಿದೆ.

    ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರ ಅಪಾರವೆಚ್ಚದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗುತ್ತಿದೆ. ಆಕ್ಷನ್ ಪ್ರಿಯರಿಗೆ ಈ ಚಿತ್ರ ಬಹಳ ಮೆಚ್ಚುಗೆಯಾಗಲಿದೆ. “ಮಾಫಿಯಾ” ಚಿತ್ರಕ್ಕಾಗಿ ಪ್ರಜ್ವಲ್ ಅವರು ಸಾಕಷ್ಟು ಶ್ರಮವಹಿಸಿದ್ದಾರೆ ಹಾಗೂ ವಿಭಿನ್ನ ಗೆಟಪ್ ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ‌. ಇದು ಅವರ ನಟನೆಯ ಮೂವತ್ತೈದನೇ ಚಿತ್ರವೂ ಹೌದು.

    ಈ ಚಿತ್ರದಲ್ಲಿ ಐದು ಸಾಹಸ ಸನ್ನಿವೇಶಗಳಿದೆ‌. ವಿನೋದ್, ರಿಯಲ್ ಸತೀಶ್, ಡಿಫರೆಂಟ್ ಡ್ಯಾನಿ ಹಾಗೂ ಜಾಲಿ ಬಾಸ್ಟಿನ್ ಅವರು ಸಾಹಸ ನಿರ್ದೇಶನ ಮಾಡಿದ್ದಾರೆ. ಕ್ಲೈಮ್ಯಾಕ್ಸ್ ಭಾಗದ ಸಾಹಸ ಸನ್ನಿವೇಶದ ಚಿತ್ರೀಕರಣ ಹತ್ತು ದಿನಗಳ ಕಾಲ ನಡೆದಿದೆ.  ಚಿತ್ರ ಚೆನ್ನಾಗಿ ಮೂಡಿಬರಲು ಸಹಕಾರ ನೀಡುತ್ತಿರುವ ಇಡೀ ತಂಡಕ್ಕೆ  ಧನ್ಯವಾದ ಎನ್ನುತ್ತಾರೆ ನಿರ್ಮಾಪಕ  ಕುಮಾರ್ ಬಿ.

    ಲೋಹಿತ್ ಹೆಚ್ ನಿರ್ದೇಶನದ ಈ ಚಿತ್ರದಲ್ಲಿ ಮೂರು ಹಾಡುಗಳಿದೆ. ಅನೂಪ್ ಸೀಳಿನ್ ಸಂಗೀತ ನೀಡಿದ್ದಾರೆ. ಎಸ್ ಪಾಂಡಿಕುಮಾರ್ ಛಾಯಾಗ್ರಹಣವಿರುವ ಈ ಚಿತ್ರದ ತಾರಾಬಳಗದಲ್ಲಿ  ಪ್ರಜ್ವಲ್ ದೇವರಾಜ್, ಅದಿತಿ ಪ್ರಭುದೇವ, ದೇವರಾಜ್ , ಸಾಧುಕೋಕಿಲ, ಶೈನ್ ಶೆಟ್ಟಿ, ವಿಜಯ್ ಚೆಂಡೂರ್, ವಾಸುಕಿ ವೈಭವ್ ಮುಂತಾದವರಿದ್ದಾರೆ.

  • ಪ್ರೇಮಿಗಳ ದಿನಕ್ಕೆ ‘ಮಾಫಿಯಾ’ ಚಿತ್ರದ ಹೊಸ ಪೋಸ್ಟರ್

    ಪ್ರೇಮಿಗಳ ದಿನಕ್ಕೆ ‘ಮಾಫಿಯಾ’ ಚಿತ್ರದ ಹೊಸ ಪೋಸ್ಟರ್

    ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಹಾಗೂ ಅದಿತಿ ಪ್ರಭುದೇವ  ನಾಯಕ – ನಾಯಕಿಯಾಗಿ ನಟಿಸಿರುವ “ಮಾಫಿಯಾ” ಚಿತ್ರದಿಂದ ಪ್ರೇಮಿಗಳ ದಿನಕ್ಕೆ ಶುಭಕೋರುವ ಪೋಸ್ಟರ್ ಬಿಡುಗಡೆಯಾಗಿದೆ. ‌ಪೋಸ್ಟರ್ ಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಲೋಹಿತ್ ಹೆಚ್ ನಿರ್ದೇಶನದ ಈ ಚಿತ್ರವನ್ನು ಕುಮಾರ್ ಬಿ ನಿರ್ಮಿಸಿದ್ದಾರೆ.

    ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಪ್ರಜ್ವಲ್ ದೇವರಾಜ್, ಹಿಂದಿನ ಚಿತ್ರಗಳಿಗಿಂತ ವಿಭಿನ್ನ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಪ್ರಜ್ವಲ್ ದೇವರಾಜ್ ಅಭಿನಯದ 35ನೇ ಚಿತ್ರ “ಮಾಫಿಯಾ” ಬಿಡುಗಡೆಗೆ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.  ಇದನ್ನೂ ಓದಿ:`ಬಿಗ್ ಬಾಸ್’ ಖ್ಯಾತಿಯ ಅಕ್ಷತಾ ಕುಕ್ಕಿ ಮದುವೆ ಡೇಟ್ ಫಿಕ್ಸ್

    ಎಸ್ ಪಾಂಡಿಕುಮಾರ್ ಛಾಯಾಗ್ರಹಣ ಹಾಗೂ ಅನೂಪ್ ಸೀಳಿನ್ ಸಂಗೀತ ನಿರ್ದೇಶನವಿರುವ ಈ ಚಿತ್ರದ ತಾರಾಬಳಗದಲ್ಲಿ ಪ್ರಜ್ವಲ್ ದೇವರಾಜ್, ಅದಿತಿ ಪ್ರಭುದೇವ, ದೇವರಾಜ್ , ಸಾಧುಕೋಕಿಲ, ಶೈನ್ ಶೆಟ್ಟಿ, ವಿಜಯ್ ಚೆಂಡೂರ್, ವಾಸುಕಿ ವೈಭವ್ ಮುಂತಾದವರಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k