Tag: Magic

  • ಸಾಂಸ್ಕೃತಿಕ ಪಟ್ಟಿಗೆ ಜಾದೂ ಕಲೆ ಸೇರ್ಪಡೆಯಾಗಲಿ: ಕುದ್ರೋಳಿ ಗಣೇಶ್ ಮನವಿ

    ಸಾಂಸ್ಕೃತಿಕ ಪಟ್ಟಿಗೆ ಜಾದೂ ಕಲೆ ಸೇರ್ಪಡೆಯಾಗಲಿ: ಕುದ್ರೋಳಿ ಗಣೇಶ್ ಮನವಿ

    ಮಂಗಳೂರು:‌ ಮನರಂಜನೆ ಜೊತೆಗೆ ವಿಸ್ಮಯ ಮೂಡಿಸುವ ಜಾದೂ ಕೂಡ ಸಾಂಸ್ಕೃತಿ ಕಲೆಯಾಗಿದೆ. ಕೇಂದ್ರದ ನಾಟಕ ಅಕಾಡೆಮಿ ಪಟ್ಟಿಯಲ್ಲಿ ಜಾದೂವಿಗೆ ಸ್ಥಾನ ನೀಡಿದ್ದು, ರಾಜ್ಯದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪಟ್ಟಿಯಲ್ಲಿಯೂ ಜಾದೂ ಸೇರ್ಪಡೆಯಾಗಬೇಕು. ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಪರಿಶೀಲನೆ ನಡೆಸಿ ಕ್ರಮ ವಹಿಸಬೇಕು ಎಂದು ಅಂತಾರಾಷ್ಟ್ರೀಯ ಜಾದೂಗಾರ ಕುದ್ರೋಳಿ ಗಣೇಶ್ (Kudroli Ganesh) ವಿನಂತಿಸಿದ್ದಾರೆ.

    ನಗರದ ಪ್ರೆಸ್‌ಕ್ಲಬ್‌ನಲ್ಲಿ ಮಂಗಳೂರು ಪ್ರೆಸ್‌ಕ್ಲಬ್ ಗೌರವ ಅತಿಥಿಯಾಗಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಸಂಗೀತ, ನೃತ್ಯ, ಯಕ್ಷಗಾನದಂತೆ (Yakshagana) ಜಾದೂ ಕೂಡ ಸಾಂಸ್ಕೃತಿಕ ಕಲೆಯಾಗಿದೆ. ನಶಿಸಿ ಹೋಗುತ್ತಿರುವ ಈ ಕಲೆಯನ್ನು ಸಂಕ್ಷಿಸುವ ನಿಟ್ಟಿನಲ್ಲಿ ನೀನಾಸಂ, ರಂಗಾಯಣ ಮಾದರಿಯ ತರಬೇತಿ ವ್ಯವಸ್ಥೆ ಕಲ್ಪಿಸಬೇಕಾಗಿದೆ ಎಂದರು.

    ಜಾದೂವನ್ನು ಇತರ ಕಲೆಗಳಂತೆ ತರಗತಿ ಕೊಠಡಿಯಲ್ಲಿ ವಿದ್ಯಾರ್ಥಿಗಳಿಗೆ ಒಟ್ಟಾಗಿ ಕಲಿಸಲು ಸಾಧ್ಯವಿಲ್ಲ. ಜಾದೂ ಕಲಿಯುವ ವಿದ್ಯಾರ್ಥಿಯಲ್ಲಿ ಮೆದುಳು ಮತ್ತು ಕೈಚಳಕದ ಜೊತೆಗೆ ಸಮರ್ಪಣಾ ಮನೋಭಾವ ಅಗತ್ಯ. ಜಾದೂ ಕಲೆ ಸಿದ್ಧಿಸಿಕೊಳ್ಳಬೇಕೆಂದರೆ ಕನಿಷ್ಠ ಆರೇಳು ವರ್ಷಗಳ ಅಭ್ಯಾಸದ ಅಗತ್ಯವಿದೆ. ಈ ನಿಟ್ಟಿನಲ್ಲಿ ತರಬೇತಿ ನೀಡುವ, ಕಾಲೇಜು ತೆರೆಯುವ ಆಶಯವೂ ಇದೆ. ವೃತ್ತಿಪರತೆಗಿಂತಲೂ ಹವ್ಯಾಸಿ ಕಲೆಯಾಗಿ ಉಳಿದಿರುವ ಜಾದೂವನ್ನು ನವರಸ ಪೂರ್ಣ ಭಾವದೊಂದಿಗೆ, ರಂಗಭೂಮಿಯ ಕಲೆಯಾಗಿ ಬೆಳೆಸಬೇಕಾಗಿದೆ ಎಂದು ಅವರು ಅಭಿಪ್ರಾಯ ಪಟ್ಟರು. ಇದನ್ನೂ ಓದಿ: ರಷ್ಯಾದ ಡೇಂಜರ್‌ ಸೇನೆಯಲ್ಲಿದ್ದಾರೆ ಕಲಬುರಗಿಯ ಮೂವರು – ನಮ್ಮನ್ನು ರಕ್ಷಿಸಿ ಎಂದ ಯುವಕರು

    1998ರಿಂದ ತುಳುನಾಡಿನ ದೈವರಾಧಾನೆಯನ್ನು ಬಿಂಬಿಸುವ ಜಾದೂವನ್ನು ಪ್ರಸ್ತುತ ಪಡಿಸಿದ ಪರಿಣಾಮ ನಮ್ಮ ವಿಸ್ಮಯ ತಂಡ ಇದು ವಿಶ್ವವಿಖ್ಯಾತಿಯಾಗಲು ಸಾಧ್ಯವಾಗಿದೆ. ನಮ್ಮ ಮಣ್ಣಿನ ಜನಪದ ಸ್ಪರ್ಶವನ್ನು ಜಾದೂವಿನ ತಂತ್ರಗಾರಿಕೆಯ ಜೊತೆ ಬೆಸೆದಾಗ ವೀಕ್ಷಕನ ಭಾವನೆಗಳನ್ನು ತಟ್ಟಲು ಸಾಧ್ಯವಾಗುತ್ತದೆ. ಜಾದೂ ಕೂಡ ಸಾಮಾಜಿಕ ಕಳಕಳಿಯೊಂದಿಗೆ ಬೆರೆತಾಗ ಹೃದಯವನ್ನು ತಲುಪಲು ಸಾಧ್ಯವಾಗುತ್ತದೆ ಎಂದು ಕುದ್ರೋಳಿ ಗಣೇಶ್ ಹೇಳಿದರು.

    ನಮ್ಮ ಟಿವಿಯ ವ್ಯವಸ್ಥಾಪಕ ನಿರ್ದೇಶಕ ಡಾ.ಶಿವಶರಣ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ. ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸಿದ್ದರು. ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಕಾರ್ಯಕ್ರಮ ಸಂಯೋಜಕ ಆತ್ಮಭೂಷಣ ಭಟ್ ಉಪಸ್ಥಿತರಿದ್ದರು. ಪ್ರೆಸ್‌ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ವಂದಿಸಿದರು. ಆರ್.ಸಿ. ಭಟ್ ಕಾರ್ಯಕ್ರಮ ನಿರೂಪಿಸಿದರು.

    ಓದಿನ ಹವ್ಯಾಸ ಜಾದೂ ಕಲೆಗೆ ಪ್ರೇರಣೆ: 8ನೇ ತರಗತಿಯಿಂದಲೇ ಪುಸ್ತಕ ಓದುವ ಹುಚ್ಚು ಸಣ್ಣ ಪುಟ್ಟ ಮ್ಯಾಜಿಕ್‌ಗಳ ಬಗ್ಗೆ ಆಸಕ್ತಿ ಬೆಳೆಸಿತು. ದ್ವಿತೀಯ ಪಿಯುಸಿಯಲ್ಲಿ ಇರುವಾಗ ಓದಿದ ಮ್ಯಾಜಿಕ್ ಫೋರ್ ದಿ ಬಿಗಿನರ್ಸ್ ಎಂಬ ಪುಸ್ತಕ ಓದಿನ ಜಾದೂವಿನ ಆಸಕ್ತಿಯನ್ನು ಇಮ್ಮಡಿಸಿತು. ಬಳಿಕ ಹವ್ಯಾಸಿ ಜಾದೂಗಾರರಾಗಿದ್ದ ಪ್ರದೀಪ್ ಸೂರಿ ಅವರು ನನ್ನ ಗುರುವಾದರು. ಅವರು ಜಾದೂ ತಂತ್ರಗಾರಿಕೆಯನ್ನು ನನಗೆ ಹೇಳಿಕೊಟ್ಟಿದ್ದಲ್ಲದೆ, ಹಲವು ಪರಿಕರಗಳನ್ನೂ ನೀಡಿದರು. ಪದವಿ ಬಳಿಕ ಮುಂಗಾರು ಪತ್ರಿಕೆಯಲ್ಲಿ ಸುಮಾರು 3 ವರ್ಷಗಳ ಕಾಲ ಉಪಸಂಪಾದಕನಾಗಿದ್ದ ಸಂದರ್ಭ ಓದಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿದ್ದರಿಂದ ಜಾದೂವಿನ ನನ್ನ ಆಸಕ್ತಿಯನ್ನು ಮತ್ತಷ್ಟು ಗಟ್ಟಿಗೊಳಿಸಲು ಸಾಧ್ಯವಾಯಿತು ಎಂದು ಅವರು ಕುದ್ರೋಳಿ ಗಣೇಶ್ ಹೇಳಿದರು.

  • ಪಬ್ಲಿಕ್ ಪ್ಲೇಸ್‍ನಲ್ಲಿ ಸ್ನಾನ ಮಾಡುವಂತೆ ಪತ್ನಿಗೆ ಕಿರುಕುಳ – ಪತಿ ವಿರುದ್ಧ ಕೇಸ್

    ಪಬ್ಲಿಕ್ ಪ್ಲೇಸ್‍ನಲ್ಲಿ ಸ್ನಾನ ಮಾಡುವಂತೆ ಪತ್ನಿಗೆ ಕಿರುಕುಳ – ಪತಿ ವಿರುದ್ಧ ಕೇಸ್

    ಮುಂಬೈ: ಸಾರ್ವಜನಿಕವಾಗಿ ಸ್ನಾನ ಮಾಡುವಂತೆ ಪತ್ನಿಗೆ ಕಿರುಕುಳ ನೀಡಿದ್ದ ಪತಿ ವಿರುದ್ಧ ಪುಣೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

    ಪತ್ನಿ ಗರ್ಭಧರಿಸಬೇಕಾದರೆ ಸಾರ್ವಜನಿಕವಾಗಿ ಸ್ನಾನ ಮಾಡಬೇಕೆಂದು ಮಾಂತ್ರಿಕನೋರ್ವ ಸಲಹೆ ನೀಡಿದ್ದರಿಂದ ವ್ಯಕ್ತಿಯೊರ್ವ ತನ್ನ ಪತ್ನಿಗೆ ಸಾರ್ವಜನಿಕವಾಗಿ ಎಲ್ಲರ ಮುಂದೆ ಸ್ನಾನ ಮಾಡುವಂತೆ ಕಿರುಕುಳ ನೀಡಿದ ಹಿನ್ನೆಲೆ ಆತ ಮತ್ತು ಆತನ ಪೋಷಕರ ವಿರುದ್ಧ  ಪ್ರಕರಣ ದಾಖಲಾಗಿದೆ.

    ಮಾಂತ್ರಿಕ ನೀಡಿದ ಸಲಹೆಯ ಮೇರೆಗೆ ಮಹಿಳೆಯನ್ನು ರಾಯಗಡ ಜಿಲ್ಲೆಯ ಜಲಪಾತಕ್ಕೆ ಕರೆದೊಯ್ದು ವ್ಯಕ್ತಿ ಎಲ್ಲರ ಮುಂದೆ ಸ್ನಾನ ಮಾಡುವಂತೆ ಒತ್ತಾಯಿಸಿದ್ದಾನೆ. ಇದನ್ನೂ ಓದಿ: ಮಡಿಕೇರಿಯಲ್ಲಿ ನಡೆದ ಮೊಟ್ಟೆ ಎಸೆತ ಪ್ರಕರಣ ನನಗೆ ಗೊತ್ತಿಲ್ಲ: ಅಪ್ಪಚ್ಚು ರಂಜನ್

    ಆರೋಪಿ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 498 (ವಿವಾಹಿತ ಸ್ತ್ರೀಯನ್ನು ಆಪರಾಧಿಕ ಉದ್ದೇಶದಿಂದ ಪುಸಲಾಯಿಸುವುದು ಅಥವಾ ಕರೆದುಕೊಂಡುಹೋಗುವುದು) ಮತ್ತು ಮಾನವಬಲಿ, ಅಮಾನವೀಯ, ದುಷ್ಟ, ಅಘೋರಿ ಆಚರಣೆಗಳು ಸೇರಿದಂತೆ ಮಹಾರಾಷ್ಟ್ರದ 2013ರ ಬ್ಲ್ಯಾಕ್ ಮ್ಯಾಜಿಕ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಭಾರತಿ ವಿದ್ಯಾಪೀಠದ ಪೊಲೀಸರು ತಿಳಿಸಿದ್ದಾರೆ.

    ಈ ಸಂಬಂಧ ತನಿಖೆ ನಡೆಸುವ ವೇಳೆ ದಂಪತಿಗೆ ಮಕ್ಕಳಿರಲಿಲ್ಲ. ಹಾಗಾಗಿ ಮಾಂತ್ರಿಕನ ಸಲಹೆಯ ಮೇರೆಗೆ ಮಹಿಳೆಯನ್ನು ರಾಯಗಡ ಜಿಲ್ಲೆಯ ಜಲಪಾತಕ್ಕೆ ಕರೆದೊಯ್ದು ನಂತರ ಎಲ್ಲರ ಮುಂದೆ ಸ್ನಾನ ಮಾಡುವಂತೆ ಹಿಂಸೆ ನೀಡಿದ್ದಾನೆ ಎಂದು ತಿಳಿದುಬಂದಿದೆ.  ಇದನ್ನೂ ಓದಿ: ಕೊಡಗಿನಲ್ಲಿ ನಾಳೆಯಿಂದ ಶನಿವಾರದವರೆಗೆ ನಿಷೇಧಾಜ್ಞೆ- ಮದ್ಯ ಮಾರಾಟ ನಿಷೇಧ

    Live Tv
    [brid partner=56869869 player=32851 video=960834 autoplay=true]

  • ಎಮ್ಮೆಗಾಗಿ ಪಕ್ಕದ ಮನೆಯ ಬಾಲಕನನ್ನು ಕೊಂದ ದಂಪತಿ

    ಎಮ್ಮೆಗಾಗಿ ಪಕ್ಕದ ಮನೆಯ ಬಾಲಕನನ್ನು ಕೊಂದ ದಂಪತಿ

    – ದ್ವೇಷ ಸಾಧನೆಗೆ ಕಂಡಿದ್ದು 6ರ ಹುಡುಗ

    ಮುಂಬೈ: ಮನೆಯಲ್ಲಿ ಎಮ್ಮೆ ಸತ್ತಿದ್ದಕ್ಕೆ ಪಕ್ಕದ ಮನೆಯ ಬಾಲಕನನ್ನು ಹೊಡೆದು ಕೊಂದಿರುವ ದಂಪತಿಯನ್ನು ಪೊಲೀಸರು ಬಂಧಿಸಿರುವ ಘಟನೆ ಮುಂಬೈನ ಬೀಡ್ ಜಿಲ್ಲೆಯಲ್ಲಿ ನಡೆದಿದೆ.

    ರೋಹಿದಾಸ್ ಸಪ್ಕಲ್ ಮತ್ತು ಆತನ ಪತ್ನಿ ದೇವೀಬಾಯಿಯನ್ನು ಬಂಧಿಸಲಾಗಿದೆ. ಈ ದಂಪತಿ ಸಾಕಿದ್ದ ಎಮ್ಮೆ ಸಾವನ್ನಪ್ಪಿತ್ತು. ಈ ವಿಚಾರದಿಂದ ಮನನೊಂದ ದಂಪತಿ ನಮ್ಮ ಎಮ್ಮೆಯನ್ನು ಪಕ್ಕದ ಮನೆಯವರು ಮಾಟ ಮಂತ್ರ ಮಾಡಿಕೊಂದಿದ್ದಾರೆ ಎಂದು ಅವರ ಮನೆಯ ಬಾಲಕನನ್ನು ಕೊಲೆ ಮಾಡಿದ್ದಾರೆ.

    ಮನೆಯಲ್ಲಿ ಸಾಕಿದ್ದ ಎಮ್ಮೆ ಯಾವುದೋ ಕಾಯಿಲೆಯಿಂದ ಸಾವನ್ನಪ್ಪಿದೆ. ಆಗ ಎಮ್ಮೆ ಮಾಲೀಕರು ಎಮ್ಮೆಗೆ ಮಾಟ ಮಂತ್ರ ಮಾಡಿದ್ದರಿಂದಲೇ ಸಾವನ್ನಪ್ಪಿದೆ ಎಂದು ಭಾವಿಸಿದ್ದಾರೆ. ಎಮ್ಮೆ ಸಾಕಿದ್ದ ಮಾಲೀಕರಿಗೆ ಊರಲ್ಲಿ ಇರುವ ಒಂದು ಕುಟುಂಬಕ್ಕೆ ಮೊದಲಿನಿಂದಲು ಆಗುತ್ತಿರಲ್ಲಿಲ್ಲ. ಅವರೇ ಮಾಟ ಮಂತ್ರ ಮಾಡಿ ನಮ್ಮ ಎಮ್ಮೆಯನ್ನು ಕೊಂದಿದ್ದಾರೆ ಎಂದು ದ್ವೇಷ ತೀರಿಸಿಕೊಳ್ಳಲು ಮುಂದಾಗಿದ್ದಾರೆ. ಪಕ್ಕದ ಮನೆಯವರ ಮೇಲೆ ದ್ವೇಷ ಸಾಧನೆಗಾಗಿ ಕಾದಿದ್ದ ದಂಪತಿಗಳ ಕಣ್ಣಿಗೆ ಬಿದ್ದಿದ್ದು ಆ ಮನೆಯ 6 ವರ್ಷದ ಬಾಲಕ.

    ಒಂದು ದಿನ ಅಪ್ರಾಪ್ತ ಬಾಲಕ ಬೀದಿಯಲ್ಲಿ ಆಟವಾಡುತ್ತಿದ್ದನು. ಎಮ್ಮ ಮಾಲೀಕರಾದ ದಂಪತಿ ಬಾಲಕನನ್ನು ಅಪಹರಿಸಿ ಬಾಲಕನ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ. ಈ ಕೊಲೆ ಯಾರಿಗೂ ತಿಳಿಯಬಾರದು ಎಂದು ನಿರ್ಜನ ಪ್ರದೇಶದಲ್ಲಿ ಬಾಲಕನ ಶವವನ್ನು ಎಸೆದು ಮುಗ್ಧರಂತೆ ಊರಲ್ಲಿ ಓಡಾಡಿಕೊಂಡು ಇದ್ದರು. ಬಾಲಕನ ಶವ ಪೊಲೀಸರಿಗೆ ಸಿಕ್ಕ ಬಳಿಕ ತನಿಖೆಯನ್ನು ಚುರುಕುಗೊಳಿಸಲಾಗಿತ್ತು. ತನಿಖೆ ವೇಳೆ ದಂಪತಿ ಮೇಲೆ ಅನುಮಾನ ಬಂದು ವಿಚಾರಣೆ ನಡೆಸಿದಾಗ ಕೊಲೆ ಮಾಡಿರುವುದನ್ನು ಒಪ್ಪಿಕೊಂಡಿದ್ದಾರೆ.

  • ಮಂಜಿನ ನಗರಿಯಲ್ಲಿ ಜಾದೂ ಮೂಲಕ ಕೊರೊನಾ ಜಾಗೃತಿ

    ಮಂಜಿನ ನಗರಿಯಲ್ಲಿ ಜಾದೂ ಮೂಲಕ ಕೊರೊನಾ ಜಾಗೃತಿ

    ಮಡಿಕೇರಿ: ಎಲ್ಲೆಡೆ ತೀವ್ರಗತಿಯಲ್ಲಿ ಹರಡುತ್ತಿರುವ ಕೊರೊನಾ ವೈರಸ್ ಜನರಲ್ಲಿ ಆತಂಕ ಸೃಷ್ಟಿಸುತ್ತಿದೆ. ಸೋಂಕನ್ನು ನಿಯಂತ್ರಿಸಲು ಸರ್ಕಾರಗಳು ಕೂಡ ಇನ್ನಿಲ್ಲದ ಕಸರತ್ತು ನಡೆಸುತ್ತಿವೆ. ಅದಕ್ಕಾಗಿ ನಿರಂತರವಾಗಿ ಜಾಗೃತಿ ಮೂಡಿಸುವ ಕಾರ್ಯಗಳು ಕೂಡ ನಡೆಯುತ್ತಿವೆ. ಅದಕ್ಕೆ ಪೂರಕವಾಗಿ ಮಡಿಕೇರಿಯಲ್ಲಿ ವಿಕ್ರಮ್ ಜಾದುಗಾರ್ ಅವರು ಜಾದೂ ಕಾರ್ಯಕ್ರಮ ಮಾಡುವ ಮೂಲಕ ಜನರಲ್ಲಿ ಕೊರೊನಾ ಸೋಂಕಿನ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ.

    ಕೊರೊನಾ ವೈರಸ್ ಬಗ್ಗೆ ಆತಂಕದಿಂದ ಹೇಳುವ ಬದಲು ಮನರಂಜನೆಯ ಮೂಲಕ ಹೇಳಿದರೆ ವಿಷಯ ಹೆಚ್ಚು ಜನರನ್ನು ತಲಪುತ್ತದೆ. ಜನರನ್ನು ಹೆಚ್ಚು ಆಕರ್ಷಿತರನ್ನಾಗಿಸಿ ಜಾಗೃತಿ ಮೂಡಿಸಲು ಇದು ಸುಲಭದ ಮಾರ್ಗವಾಗಿದೆ. ಆದ್ದರಿಂದ ವಿಕ್ರಮ್ ಜಾದೂಗಾರ ಅವರು ಮಡಿಕೇರಿಯ ಸಾರ್ವಜನಿಕ ಸ್ಥಳಗಳಲ್ಲಿ ಜಾದೂ ಮಾಡುವ ಮೂಲಕ ಜನರಿಗೆ ಕೊರೊನಾ ಸೋಂಕಿನ ಬಗ್ಗೆ ಅರಿವು ಮೂಡಿಸುತ್ತಿದ್ದಾರೆ.

    ವೈರಸ್ ಬಗ್ಗೆ ನಾವು ಎಚ್ಚರಿಕೆಯಿಂದ ಇರಬೇಕು, ಶುಚಿತ್ವದ ಕಡೆ ಒತ್ತು ನೀಡಬೇಕು ಎಂದು ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ. ಅಲ್ಲದೇ ವಿರಾಜಪೇಟೆ ತಾಲೂಕಿನ ಸಿದ್ದಾಪುರದ ಅನೇಕ ಹಾಡಿಗಳಿಗೆ ಹೋಗಿ ಕಾಡಿನ ನಿವಾಸಿಗಳಿಗೂ ಕೊರೊನಾ ವೈರಸ್ ಬಗ್ಗೆ ತಿಳಿಸಿ, ಅರಿವು ಮೂಡಿಸುತ್ತೇನೆ ಎಂದು ವಿಕ್ರಮ್ ಅವರು ತಿಳಿಸಿದ್ದಾರೆ.

  • ವಿಕೆಟ್ ಪಡೆದು ಜಾದು ಮಾಡಿ ಅಭಿಮಾನಿಗಳನ್ನು ರಂಜಿಸಿದ ಆಫ್ರಿಕಾ ಬೌಲರ್ – ವಿಡಿಯೋ

    ವಿಕೆಟ್ ಪಡೆದು ಜಾದು ಮಾಡಿ ಅಭಿಮಾನಿಗಳನ್ನು ರಂಜಿಸಿದ ಆಫ್ರಿಕಾ ಬೌಲರ್ – ವಿಡಿಯೋ

    ಪಾರ್ಲ್: ದಕ್ಷಿಣ ಆಫ್ರಿಕಾದಲ್ಲಿ ನಡೆಯುತ್ತಿರುವ ಎಂಝಾಂಸಿ ಸೂಪರ್ ಲೀಗ್ (ಎಂಎಸ್‍ಎಲ್) ಟಿ20 ಪಂದ್ಯದಲ್ಲಿ ಪಾರ್ಲ್ ರಾಕ್ಸ್ ತಂಡದ ಲೆಗ್ ಸ್ಪಿನ್ನರ್ ತಬ್ರೇಜ್ ಶಮ್ಸಿ ಮ್ಯಾಜಿಕ್ ಮಾಡಿದ್ದಾರೆ.

    ಬುಧವಾರ ಪಾರ್ಲ್ ರಾಕ್ಸ್ ಮತ್ತು ಡರ್ಬನ್ ಹೀಟ್ ತಂಡಗಳ ನಡುವೆ ಪಂದ್ಯ ನಡೆದಿತ್ತು. ಈ ವೇಳೆ ಡರ್ಬನ್ ಹೀಟ್ ತಂಡದ ವಿಹಾನ್ ಲಬ್ಬೆ ಶಮ್ಸಿ ಎಸೆತವನ್ನು ಬಲವಾಗಿ ಹೊಡೆಯಲು ಹೋಗಿ ಕ್ಯಾಚ್ ನೀಡಿ ಔಟಾದರು.

    https://twitter.com/MSL_T20/status/1202287999020650496

    ವಿಕೆಟ್ ಪಡೆದ ಸಂಭ್ರಮದಲ್ಲಿ ಶಮ್ಸಿ ಕೆಂಪು ಬಣ್ಣದ ಕರವಸ್ತ್ರವನ್ನು ತೆಗೆದು ಅದರಲ್ಲಿ ಬಿಳಿ ಬಣ್ಣದ ದಂಡವನ್ನು ಹೊರ ತೆಗೆಯುವ ಮೂಲಕ ಜಾದು ಮಾಡಿ ಸಂಭ್ರಮಿಸಿ ಅಭಿಮಾನಿಗಳನ್ನು ರಂಜಿಸಿದ್ದಾರೆ. ಶಮ್ಸಿ 4 ಓವರ್ ಎಸೆದು 37 ರನ್ ನೀಡಿ 2 ವಿಕೆಟ್ ಪಡೆದಿದ್ದರೂ ತಂಡ ಸೋತಿದೆ.

    ಟಾಸ್ ಸೋತು ಬ್ಯಾಟಿಂಗ್ ನಡೆಸಿದ ಪಾರ್ಲ್ ರಾಕ್ಸ್ 20 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 195 ರನ್ ಗಳಿಸಿತ್ತು. ಇದಕ್ಕೆ ಉತ್ತರವಾಗಿ ಡರ್ಬನ್ ಹೀಟ್ಸ್ 18.5 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 197 ರನ್ ಗಳಿಸುವ ಮೂಲಕ 6 ವಿಕೆಟ್‍ಗಳ ಜಯ ಗಳಿಸಿತು.

    ಡರ್ಬನ್ ಹೀಟ್ಸ್ ಪರವಾಗಿ ಆರಂಭಿಕ ಆಟಗಾರ ಅಲೆಕ್ಸ್ ಹೇಲ್ಸ್ ಔಟಾಗದೇ 97 ರನ್(55 ಎಸೆತ, 9 ಬೌಂಡರಿ, 4 ಸಿಕ್ಸ್) ಹೊಡೆದರೆ, ಡೇವಿಡ್ ಮಿಲ್ಲರ್ 40 ರನ್(22 ಎಸೆತ, 1 ಬೌಂಡರಿ, 3 ಸಿಕ್ಸರ್) ಸಿಡಿಸಿ ಪಂದ್ಯಕ್ಕೆ ಜಯವನ್ನು ತಂದುಕೊಟ್ಟರು. ಈ ಪಂದ್ಯವನ್ನು ಸೋತರೂ ಜಾದು ಮೂಲಕ ಶಮ್ಸಿ ಅಭಿಮಾನಿಗಳನ್ನು ರಂಜಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.