Tag: Magisterial Investigation

  • ಅತ್ತಿಬೆಲೆ ಪಟಾಕಿ ದುರಂತ; ಮ್ಯಾಜಿಸ್ಟ್ರಿಯಲ್‌ ವಿಚಾರಣೆಗೆ ಸರ್ಕಾರ ಆದೇಶ

    ಅತ್ತಿಬೆಲೆ ಪಟಾಕಿ ದುರಂತ; ಮ್ಯಾಜಿಸ್ಟ್ರಿಯಲ್‌ ವಿಚಾರಣೆಗೆ ಸರ್ಕಾರ ಆದೇಶ

    ಬೆಂಗಳೂರು: ಅತ್ತಿಬೆಲೆ ಪಟಾಕಿ ದುರಂತದಲ್ಲಿ (Attibele Fire Incident) 16 ಮಂದಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮ್ಯಾಜಿಸ್ಟ್ರಿಯಲ್ ವಿಚಾರಣೆಗೆ (Magisterial Inquiry) ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

    ಹಿರಿಯ ಐಎಎಸ್ ಅಧಿಕಾರಿ ಹಾಗೂ ಬೆಂಗಳೂರು (Bengaluru) ಪ್ರಾದೇಶಿಕ ಆಯುಕ್ತ ಆದಿತ್ಯ ಅಮಲನ್ ಬಿಸ್ವಾಸ್ ನೇತೃತ್ವದಲ್ಲಿ ಮ್ಯಾಜಿಸ್ಟ್ರಿಯಲ್ ವಿಚಾರಣೆ ನಡೆಯಲಿದೆ. 3 ತಿಂಗಳಲ್ಲಿ ವರದಿ ನೀಡಲು ಗಡುವು ನೀಡಲಾಗಿದೆ. ಇದನ್ನೂ ಓದಿ: ಅತ್ತಿಬೆಲೆ ಪಟಾಕಿ ದುರಂತದಲ್ಲಿ ಗಾಯಗೊಂಡಿದ್ದ ಯುವಕ ದುರ್ಮರಣ- ಸಾವಿನ ಸಂಖ್ಯೆ 16ಕ್ಕೆ ಏರಿಕೆ

    ಏನಿದು ಪ್ರಕರಣ?
    ರಾಜಧಾನಿ ಬೆಂಗಳೂರಿನ ಹೊರವಲಯದ ಅತ್ತಿಬೆಲೆಯಲ್ಲಿ ಪಟಾಕಿ ಗೋದಾಮಿನಲ್ಲಿ ಈಚೆಗೆ ಸಂಭವಿಸಿದ ಬೆಂಕಿ ದುರಂತದಲ್ಲಿ 16 ಮಂದಿ ಕಾರ್ಮಿಕರು ದಾರುಣ ಸಾವಿಗೀಡಾಗಿದ್ದರು.

    ತಮಿಳುನಾಡಿನ ಶಿವಕಾಶಿಯಿಂದ ಬಂದ ಲಾರಿಯಿಂದ ಪಟಾಕಿಗಳನ್ನು ಗೋದಾಮಿನಲ್ಲಿ ದಾಸ್ತಾನು ಮಾಡುತ್ತಿದ್ದಾಗ ಏಕಾಏಕಿ ಬೆಂಕಿ ಹೊತ್ತಿಕೊಂಡಿತು. ತಕ್ಷಣ ಎಲ್ಲ ದಿಕ್ಕುಗಳಲ್ಲೂ ಪಟಾಕಿಗಳು ಸಿಡಿಯಲು ಆರಂಭಿಸಿದ ಕಾರಣ ಬೆಂಕಿ ನಂದಿಸಲು ಸಾಧ್ಯವಾಗಲಿಲ್ಲ. ದುರಂತದಲ್ಲಿ 16 ಮಂದಿ ಕಾರ್ಮಿಕರು ತಮ್ಮ ಪ್ರಾಣ ಕಳೆದುಕೊಂಡರು. ಇದನ್ನೂ ಓದಿ: ಅತ್ತಿಬೆಲೆ ಪಟಾಕಿ ದುರಂತ- ನಾಲ್ವರು ಅಧಿಕಾರಿಗಳ ಅಮಾನತು

    ಅವಘಡದಲ್ಲಿ ಸುಮಾರು 5 ಕೋಟಿ ರೂ. ಮೌಲ್ಯದ ಪಟಾಕಿ ಭಸ್ಮವಾಗಿವೆ ಎಂದು ಅಂದಾಜಿಸಲಾಗಿದೆ. ಲಾರಿ, ಸರಕು ಸಾಗಣೆ ವಾಹನ, ನಾಲ್ಕು ದ್ವಿಚಕ್ರ ವಾಹನಗಳು ಸುಟ್ಟು ಕರಕಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಅಂಗಡಿ ಮಾಲೀಕ ಮತ್ತು ಆತನ ಮಗನನ್ನು ಬಂಧಿಸಲಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಂಗ್ಳೂರು ಗೋಲಿಬಾರ್: ಮ್ಯಾಜಿಸ್ಟೀರಿಯಲ್ ತನಿಖೆ ಆರಂಭ

    ಮಂಗ್ಳೂರು ಗೋಲಿಬಾರ್: ಮ್ಯಾಜಿಸ್ಟೀರಿಯಲ್ ತನಿಖೆ ಆರಂಭ

    ಮಂಗಳೂರು: ಪೌರತ್ವ ತಿದ್ದುಪಡೆ ಕಾಯ್ದೆ ವಿರುದ್ಧ ಡಿಸೆಂಬರ್ 19ರಂದು ನಡೆದ ಹಿಂಸಾಚಾರ, ಗೋಲಿಬಾರ್ ಕುರಿತ ಮ್ಯಾಜಿಸ್ಟೀರಿಯಲ್ ತನಿಖೆ ಮಂಗಳೂರಿನ ಮಿನಿ ವಿಧಾನಸೌಧದಲ್ಲಿ ಇಂದು ಆರಂಭಗೊಂಡಿದೆ.

    ಉಡುಪಿ ಜಿಲ್ಲಾಧಿಕಾರಿ ಜಗದೀಶ್ ಅವರ ನೇತೃತ್ವದಲ್ಲಿ ವಿಚಾರಣೆ ನಡೆಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಇಂದಿನಿಂದ ತನಿಖಾಧಿಕಾರಿಯಾದ ಉಡುಪಿ ಜಿಲ್ಲಾಧಿಕಾರಿ ಜಗದೀಶ್ ವಿಚಾರಣೆ ಆರಂಭಿಸಿದ್ದಾರೆ. ವಿಚಾರಣೆ ವೇಳೆ ಸಾಕ್ಷ್ಯ, ಅಹವಾಲು ಸಲ್ಲಿಕೆಗೆ ಅವಕಾಶವಿದ್ದು, ಪೊಲೀಸರು ಹಾಗೂ ಸಾರ್ವಜನಿಕರಿಂದ ಅಹವಾಲು ಸಲ್ಲಿಕೆ ನಡೆಯಿತು.

    ಈ ಹಿಂದೆಯೇ ತನಿಖಾಧಿಕಾರಿ ಸಾರ್ವಜನಿಕರಲ್ಲಿ ವಿನಂತಿ ಮಾಡಿದ್ದು, ಯಾರು ಬೇಕಾದರೂ ಸಾಕ್ಷಿ ಹೇಳಬಹುದು ಎಂದಿದ್ದರು. ಅದರಂತೆ ಬಂದ ಸಾರ್ವಜನಿಕರ ಹಾಗೂ ಪೊಲೀಸರಿಂದ ಸಾಕ್ಷ್ಯ ದಾಖಲೀಕರಣ ಮಾಡಿದ ತನಿಖಾಧಿಕಾರಿ ಜಿ.ಜಗದೀಶ್ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದರು.

    ಪ್ರತ್ಯಕ್ಷದರ್ಶಿಗಳಿಗೆ ಸಾಕ್ಷ್ಯ ನುಡಿಯಲು ಅವಕಾಶ ನೀಡಲಾಗಿತ್ತು. ಒಟ್ಟು 14 ಜನರು ಸಾಕ್ಷಿ ಹೇಳಲು ಆಗಮಿಸಿದ್ದು, ಅದರಲ್ಲಿ ಹಲವರು ಪ್ರತ್ಯಕ್ಷ ದರ್ಶಿಗಳು ಇದ್ದರು. ಲಿಖಿತ ರೂಪದಲ್ಲಿ ಅವರ ಹೇಳಿಕೆಯನ್ನು ದಾಖಲಿಸಲಾಗಿದೆ. ಸಾಕ್ಷಿಗಳು ನೀಡಿರುವ ದಾಖಲೆಗಳನ್ನು ಪಡೆದುಕೊಂಡಿದ್ದೇವೆ. ಮುಂದೆ ಮೃತರ ಕುಟುಂಬಕ್ಕೆ ಹಾಗೂ ಪೊಲೀಸರಿಗೆ ನೋಟೀಸ್ ನೀಡಿ ವಿಚಾರಣೆ ಮಾಡುತ್ತೇವೆ ಎಂದು ಜಗದೀಶ್ ತಿಳಿಸಿದ್ದಾರೆ.