Tag: Mahadevpur

  • ಸಾಕು ನಾಯಿ, ಬೀದಿ ನಾಯಿ ಕಚ್ಚಾಟಕ್ಕೆ ಪೊಲೀಸ್ ಠಾಣೆ ಮೆಟ್ಟಿಲೇರಿದ 2 ಕುಟುಂಬಗಳು

    ಸಾಕು ನಾಯಿ, ಬೀದಿ ನಾಯಿ ಕಚ್ಚಾಟಕ್ಕೆ ಪೊಲೀಸ್ ಠಾಣೆ ಮೆಟ್ಟಿಲೇರಿದ 2 ಕುಟುಂಬಗಳು

    ದಾವಣಗೆರೆ: ಸಾಕು ನಾಯಿ ಮತ್ತು ಬೀದಿ ನಾಯಿ (Dog) ಕಚ್ಚಾಟದಿಂದ 2 ಕುಟುಂಬಗಳು ಪೊಲೀಸ್ ಠಾಣೆ ಮೆಟ್ಟಿಲೇರಿದ ಘಟನೆ ದಾವಣಗೆರೆ (Davanagere) ತಾಲೂಕಿನ ಮಹಾದೇವಪುರ (Mahadevpur) ಗ್ರಾಮದಲ್ಲಿ ಜರುಗಿದೆ.

    ಗ್ರಾಮದ ಬಸವರಾಜ್ ಎಂಬ ಯುವಕ 10 ಸಾವಿರ ರೂ. ಕೊಟ್ಟು ರೊಟ್‌ವೀಲರ್ ನಾಯಿಯನ್ನು ತಂದು ಸಾಕಿದ್ದ. ಅದೇ ಬೀದಿಯ ಹನುಮಂತಪ್ಪ ಎಂಬುವವರು ಬೀದಿ ನಾಯಿಗಳನ್ನು ಸಾಕುತ್ತಿದ್ದರು. ಬೀದಿ ಶ್ವಾನಗಳು ರೊಟ್‌ವೀಲರ್ ನಾಯಿ ಮೇಲೆ ದಾಳಿ ನಡೆಸಿ ಕೊಂದಿದ್ದವು.

    ಇದರಿಂದ ರೊಚ್ಚಿಗೆದ್ದ ಬಸವರಾಜ್ ಮತ್ತು ಸಂಬಂಧಿ ಯುವಕರು ಹನುಮಂತಪ್ಪ ಮನೆಗೆ ನುಗ್ಗಿ ಬೀದಿ ನಾಯಿಗಳಿಗೆ ಮನಸೋ ಇಚ್ಛೆ ಥಳಿಸಿದ್ದಾರೆ. ಅಲ್ಲದೆ ವೃದ್ಧ ಹನುಮಂತಪ್ಪನ ಮೇಲೂ ಹಲ್ಲೆ ನಡೆಸಿದ್ದಾರೆ. ಇದನ್ನೂ ಓದಿ: ಸಾಮೂಹಿಕ ಆತ್ಮಹತ್ಯೆಗೆ ಯತ್ನಿಸಿದ 14 ವಿದ್ಯಾರ್ಥಿನಿಯರು- ಕಾರಣ ನಿಗೂಢ

    ಬೀದಿ ನಾಯಿ ಜಗಳ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, 8 ಜನರ ವಿರುದ್ಧ ಹದಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಅಂದರ್‌ಗೂ ಮುನ್ನ ಬಚಾವ್ ಆಗಲು ಕಾರನ್ನೇ ಮುಚ್ಚಿಟ್ಟಿದ್ದ ಚೈತ್ರಾ ಕುಂದಾಪುರ!

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಹಾದೇವಪುರದಲ್ಲಿ ರಾಜಕಾಲುವೆ ಒತ್ತುವರಿ – 8 ಕಡೆ ಜೆಸಿಬಿ ಆಪರೇಷನ್ ಆರಂಭ

    ಮಹಾದೇವಪುರದಲ್ಲಿ ರಾಜಕಾಲುವೆ ಒತ್ತುವರಿ – 8 ಕಡೆ ಜೆಸಿಬಿ ಆಪರೇಷನ್ ಆರಂಭ

    ಬೆಂಗಳೂರು: ನಗರದ ಮಹಾದೇವಪುರದಲ್ಲಿ(Mahadevpur) ಇತ್ತೀಚೆಗೆ ಭಾರೀ ಮಳೆಯಿಂದಾಗಿ ಪ್ರವಾಹದ(Flood) ಸ್ಥಿತಿ ಉಂಟಾಗಿತ್ತು. ಈ ಹಿನ್ನೆಲೆ ಬಿಬಿಎಂಪಿ(BBMP) ಅಧಿಕಾರಿಗಳು ಒತ್ತುವರಿ ತೆರವಿಗೆ ಸೋಮವಾರ ಕಾರ್ಯಾಚರಣೆ ನಡೆಸಲು ಮುಂದಾಗಿದ್ದಾರೆ.

    ಇಂದು ಮುನೇನಕೊಳಲು, ಚಿನ್ನಪ್ಪನಹಳ್ಳಿ, ಚಳ್ಳಗಟ್ಟ, ಬಸವಣನಗರ ಸೇರಿದಂತೆ ಹಲವು ಪ್ರದೇಶಗಳಲ್ಲಿ ಒತ್ತುವರಿ ತೆರವು ಕಾರ್ಯಾಚರಣೆಗೆ ಸಿದ್ಧತೆ ನಡೆಸಲಾಗಿದೆ. 4 ಪ್ರಮುಖ ಭಾಗಗಳಲ್ಲಿ ಮೊದಲ ಹಂತದ ಆಪರೇಷನ್ ಪ್ರಾರಂಭವಾಗಿದ್ದು, ಈ ಭಾಗದ ರಾಜಕಾಲುವೆ ಒತ್ತುವರಿದಾರರಿಗೆ ಬುಲ್ಡೋಜರ್ ಶಾಕ್ ನೀಡಲು ಬಿಬಿಎಂಪಿ ಮುಂದಾಗಿದೆ. ಇದನ್ನೂ ಓದಿ: ಪಾರ್ಸೆಲ್ ಮಾಡಿರೋ 10 ದೋಸೆ ನನಗೆ ಬಂದಿಲ್ಲ, ಇದರಲ್ಲೂ ಮೋಸ: ಕಾಂಗ್ರೆಸ್ ವಿರುದ್ಧ ತೇಜಸ್ವಿ ಸೂರ್ಯ ಕಿಡಿ

    ಕಂದಾಯ ಇಲಾಖೆಯ ಸರ್ವೆ ವರದಿಯಲ್ಲಿ ಮಳೆ ಹಾನಿಗೆ ಈ ಅಪಾರ್ಟ್ಮೆಂಟ್‌ಗಳೇ ಕಾರಣ ಎಂಬುದು ತಿಳಿದುಬಂದಿತ್ತು. 145 ಅಪಾರ್ಟ್ಮೆಂಟ್‌ಗಳಿಂದ ರಾಜಕಾಲುವೆ ಹಾಗೂ ಸಬ್ ಕಾಲುವೆಗಳ ಒತ್ತುವರಿಯಾಗಿತ್ತು. ಹಲವೆಡೆ ಕಾಂಪೌಂಡ್, ರಸ್ತೆ, ಮನೆ, ಪಾರ್ಟ್ಮೆಂಟ್‌ಗಳ ನಿರ್ಮಾಣ ಮಾಡಿಕೊಂಡು ಒತ್ತುವರಿ ಮಾಡಲಾಗಿದೆ. ಇಂದು 8ಕ್ಕೂ ಹೆಚ್ಚು ಕಡೆಗಳಲ್ಲಿ ಒತ್ತುವರಿ ತೆರವು ಕಾರ್ಯ ಪ್ರಾರಂಭವಾಗಿದೆ. ಇದನ್ನೂ ಓದಿ: ವಿಧಾನಸಭೆ ಕಲಾಪ: ಉಮೇಶ್ ಕತ್ತಿ ಕ್ರಿಯಾಶೀಲ, ವರ್ಣರಂಜಿತ ರಾಜಕಾರಣಿ- ಸಿಎಂ

    Live Tv
    [brid partner=56869869 player=32851 video=960834 autoplay=true]