ಮುಸ್ಲಿಂ ಅನ್ನುವ ಕಾರಣಕ್ಕಾಗಿ ಬಾಲಿವುಡ್ ನಟ ಸೈಫ್ ಅಲಿ ಖಾನ್ (Saif Ali Khan) ಪುತ್ರಿ ಸಾರಾ ಅಲಿ ಖಾನ್ ಹಿಂದೂ ದೇವಾಲಯಕ್ಕೆ ಭೇಟಿ ನೀಡಿದ್ದು ಸಖತ್ ಟ್ರೋಲ್ (Troll) ಆಗಿತ್ತು. ಮುಸ್ಲಿಂ ನಟಿಯು ಹಿಂದೂ ದೇವಾಲಯಕ್ಕೆ ಹೋಗುವುದು, ಪೂಜೆ ಸಲ್ಲಿಸುವುದು, ಹಿಂದೂ ಸಂಪ್ರದಾಯ ಆಚರಿಸುವುದು ಎಲ್ಲವೂ ಗಿಮಿಕ್ ಎಂದು ಕೆಲವರು ಕಾಮೆಂಟ್ ಕೂಡ ಮಾಡಿದ್ದರು. ಇದಕ್ಕೆ ನಟಿ ಸಾರಾ ಅಲಿ ಖಾನ್ ಉತ್ತರ ನೀಡಿದ್ದಾರೆ.
ಯಾರು, ಏನೇ ಹೇಳಿದರೂ ದೇವರ ಮೇಲಿನ ನನ್ನ ನಂಬಿಕೆ ಕಡಿಮೆ ಆಗದು. ಇಂತಹ ಅನೇಕ ಟ್ರೋಲ್ ಗಳನ್ನು ನಾನು ಕಂಡಿದ್ದೇನೆ. ಅವೆಕ್ಕೆಲ್ಲ ಹೆದರುವುದಿಲ್ಲ. ನಾನು ದೇವಸ್ಥಾನಕ್ಕೆ ಹೋಗುವುದು, ಪೂಜೆ ಸಲ್ಲಿಸುವುದು ಅದು ನನ್ನ ನಂಬಿಕೆ. ಅದನ್ನು ಯಾರಿಂದಲೂ ತಡೆಯುವುದಕ್ಕೆ ಆಗುವುದಿಲ್ಲ ಎಂದಿದ್ದಾರೆ ಸಾರಾ ಅಲಿ ಖಾನ್.
ಸಾರಾ ಅಲಿ ಖಾನ್ (Sara Ali Khan) ನಿನ್ನೆಯಷ್ಟೇ ಉಜ್ಜಯಿನಿಯಲ್ಲಿನ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ವಿಕ್ಕಿ ಕೌಶಲ್, ಸಾರಾ ನಟನೆಯ ‘ಝರಾ ಹಟ್ಕೆ ಝರಾ ಬಚ್ಕೆ’ ರಿಲೀಸ್ ಆದ ಬೆನ್ನಲ್ಲೇ ನಟಿ ದೇವರ ಸನ್ನಿಧಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದರು. ಈ ಫೋಟೋಗಳು ಸಖತ್ ವೈರಲ್ ಆಗಿದ್ದವು. ಇದನ್ನೂ ಓದಿ:ಪಿಎಚ್‌ಡಿ ಪ್ರವೇಶ ಪರೀಕ್ಷೆ ಬರೆದ ನಟಿ ಪವಿತ್ರಾ ಲೋಕೇಶ್
ಸೈಫ್ ಪುತ್ರಿ ಸಾರಾ ಅವರು ಆಗಾಗ ಹಿಂದೂ ದೇವಾಲಯಕ್ಕೆ ಭೇಟಿ ನೀಡಿ ಸುದ್ದಿ ಆಗುತ್ತಾರೆ. ಕೆಲವೇ ದಿನಗಳ ಹಿಂದೆ ಅವರು ಕೇದಾರನಾಥಕ್ಕೆ ಹೋಗಿದ್ದರು. ಈಗ ಅವರು ಉಜ್ಜಯಿನಿಯಲ್ಲಿನ ಮಹಾಕಾಳೇಶ್ವರ ದೇವಸ್ಥಾನಕ್ಕೆ (Mahakaleshwara Temple) ಭೇಟಿ ಕೊಟ್ಟಿದ್ದಾರೆ. ಗುಲಾಬಿ ಬಣ್ಣದ ಸಾಂಪ್ರದಾಯಿಕ ಉಡುಗೆ ಧರಿಸಿ ಕಾಣಿಸಿಕೊಂಡ ಅವರು ಅಲ್ಲಿನ ಪುರೋಹಿತರ ಜೊತೆ ಮಾತನಾಡಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಸಾರಾ, ಹಿಂದೂ ದೇವಸ್ಥಾನಕ್ಕೆ ಭೇಟಿ ನೀಡಿರುವುದಕ್ಕೆ ಕೆಲವರು ತಕರಾರು ತೆಗೆದಿದ್ದಾರೆ. ಇದೆಲ್ಲ ಪ್ರಚಾರದ ಗಿಮಿಕ್ ಎಂದು ವ್ಯಂಗ್ಯವಾಡಿದ್ದಾರೆ. ಸಾರಾ ಅಲಿ ಖಾನ್ ಹಿಂದೂ ಧರ್ಮಕ್ಕೆ ಬಂದ್ರಾ ಎಂದು ನೆಟ್ಟಿಗರು ಪ್ರಶ್ನೆ ಮಾಡಿದ್ದಾರೆ.
ಸಾರಾ, ವಿಕ್ಕಿ ಕೌಶಲ್ ನಟನೆಯ ‘ಝರಾ ಹಟ್ಕೆ ಝರಾ ಬಚ್ಕೆ’ ಸಿನಿಮಾದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿ ಗಮನ ಸೆಳೆದಿದೆ. ಈ ಸಿನಿಮಾದಲ್ಲಿ ವಿಕ್ಕಿ ಕೌಶಲ್ ಅವರ ಜೊತೆಯಾಗಿ ಸಾರಾ ನಟಿಸಿದ್ದಾರೆ. ಜೂನ್ 2ರಂದು ಈ ಚಿತ್ರ ಬಿಡುಗಡೆ ಆಗಲಿದೆ.
ಇತ್ತೀಚೆಗೆ ಸಾರಾ ಅಲಿ ಖಾನ್ ಅವರು ಕಾನ್ ಚಿತ್ರೋತ್ಸವಕ್ಕೆ (Cannes Festival) ಹಾಜರಿ ಹಾಕಿದ್ದರು. ಅಲ್ಲಿ ಅವರು ಟಸ್ಸೆಲ್ ಗೌನ್ ತೊಟ್ಟು ಮಿರಿ-ಮಿರಿ ಮಿಂಚಿದ್ದರು. ಟಸ್ಸೆಲ್ ಗೌನ್ ಪುರಾತನ ಈಜಿಪ್ಟ್ ಕಾಲದ ಉಡುಗೆಯಾಗಿದೆ. ನಟಿ ಸಾರಾ ಅವರು ಕಾನ್ ಚಿತ್ರೋತ್ಸವದಲ್ಲಿ ಮೊದಲ ಬಾರಿಗೆ ಭಾಗಿಯಾಗಿದ್ದು, ಅಲ್ಲಿ ರೆಡ್ ಕಾರ್ಪೆಟ್ ಮೇಲೆ ಹೆಜ್ಜೆ ಹಾಕಿ ಎಲ್ಲರ ಗಮನ ಸೆಳೆದಿದ್ದರು.















