Tag: mahalakshmi layout

  • ಇಂದು ಬೆಂಗಳೂರಿನ ಹಲವಡೆ ವಿದ್ಯುತ್‌ ವ್ಯತ್ಯಯ – ನಿಮ್ಮ ಏರಿಯಾ ಇದ್ಯಾ ಚೆಕ್‌ ಮಾಡಿಕೊಳ್ಳಿ

    ಇಂದು ಬೆಂಗಳೂರಿನ ಹಲವಡೆ ವಿದ್ಯುತ್‌ ವ್ಯತ್ಯಯ – ನಿಮ್ಮ ಏರಿಯಾ ಇದ್ಯಾ ಚೆಕ್‌ ಮಾಡಿಕೊಳ್ಳಿ

    ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL) ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ (Bengaluru) ಮಹಾಲಕ್ಷ್ಮೀ ಲೇಔಟ್ (Mahalakshmi Layout) ಉಪಕೇಂದ್ರ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

    ಇಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಣೆಯಲ್ಲಿ ತಿಳಿಸಿದೆ.


    ಯಾವ ಪ್ರದೇಶದಲ್ಲಿ ವ್ಯತ್ಯಯ?
    ಮಂಜುನಾಥ್ ನಗರ, ತಿಮ್ಮಯ್ಯ ರಸ್ತೆ, ಭೋವಿ ಕಾಲೋನಿ, ಮಹಾಗಣಪತಿ ನಗರ, ಪುಷ್ಪಾಂಜಲಿ ಅಪಾರ್ಟ್‌ಮೆಂಟ್, ಶಿವನಹಳ್ಳಿ ಪಾರ್ಕ್, ಆದರ್ಶ ನಗರ, ಆದರ್ಶ ಲೇಔಟ್, ಯುನಿಕ್ಸ್ ಕಾಲೋನಿ. ಇದನ್ನೂ ಓದಿ: ರಷ್ಯಾ ಡ್ರೋನ್‌ ದಾಳಿ ಮುಳುಗಿತು ಉಕ್ರೇನ್‌ ಅತಿ ದೊಡ್ಡ ನೌಕಾ ಹಡಗು

    ಇಂದಿರಾ ನಗರ, ಮಂಜುನಾಥ್ ನಗರ, 3ನೇ ಹಂತ 1ನೇ ಬ್ಲಾಕ್, ಲಕ್ಷ್ಮೀ ನಗರ, HVKಲೇಔಟ್, ಕರ್ನಾಟಕ ಲೇಔಟ್, ಕಮಲಾ ನಗರ, VJSSಲೇಔಟ್, ನಾಗಾಪುರ, ಮಹಾಲಕ್ಷ್ಮಿ ಪುರಂ, ಮೋದಿ ಆಸ್ಪತ್ರೆ ರಸ್ತೆ, ಪಂಜಾಬ್ ನ್ಯಾಷನಲ್ ಬ್ಯಾಂಕ್, ಹಂಸಲೇಖ ಹೋಮ್ ಸುತ್ತಮುತ್ತ, ಶಂಕರಮಠ, ಪೈಪ್ ಲೈನ್ ರಸ್ತೆ, ಜೆ.ಸಿ.ನಗರ, ಕುರಬರಳ್ಳಿ, ರಾಜಾಜಿನಗರ 2ನೇ ಬ್ಲಾಕ್.

    ESI ಹಾಸ್ಪಿಟಲ್, ಗೃಹಲಕ್ಷ್ಮಿ ಲೇಔಟ್ 2ನೇ ಹಂತ, ಗೆಳೆಯರ ಬಳಗ, ಮೈಕೋ ಲೇಔಟ್, ಜಿ.ಡಿ.ನಾಯ್ಡು ಹಾಲ್, ವೆಸ್ಟ್ ಆಫ್ ಕಾರ್ಡ್ ರಸ್ತೆ, ಇಸ್ಕಾನ್, BNES ಕಾಲೇಜು, ಎಸ್ಟೀಮ್ ಕ್ಲಾಸಿಕ್ ಅಪಾರ್ಟ್ ಮೆಂಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವ್ಯತ್ಯಯವಾಗಲಿದೆ.

  • ಬೆಂಗಳೂರಿನಲ್ಲಿ ಗೃಹಿಣಿ ಅನುಮಾನಾಸ್ಪದ ಸಾವು

    ಬೆಂಗಳೂರಿನಲ್ಲಿ ಗೃಹಿಣಿ ಅನುಮಾನಾಸ್ಪದ ಸಾವು

    ಬೆಂಗಳೂರು: ಗೃಹಿಣಿ (House Wife) ನೇಣು ಬಿಗಿದುಕೊಂಡು ಅನುಮಾನಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮಹಾಲಕ್ಷ್ಮಿ ಲೇಔಟ್‌ನ  (Mahalakshmi Layout) ಶ್ರೀ ಕಂಠೇಶ್ವರ ನಗರದಲ್ಲಿ ನಡೆದಿದೆ.

    ಪ್ರೇಮಲತಾ (35) ಸಾವನ್ನಪ್ಪಿದ ಮಹಿಳೆ. ಮಹಿಳೆಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆಕೆಯ ಪತಿ ಶಿವಶಂಕರ್ ಕೊಲೆ ಮಾಡಿರಬಹುದು ಎಂಬ ಆನುಮಾನವಿದೆ. ಮಹಿಳೆಯನ್ನು ಕೊಲೆ ಮಾಡಿದ ಬಳಿಕ ನೇಣು ಬಿಗಿಯಲಾಗಿದೆ ಎಂದು ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ಆಕೆಯ ಗಂಡನೇ ಕೊಲೆ ಮಾಡಿ ನೇಣು ಬಿಗಿದಿರಬಹುದು ಎಂಬ ಶಂಕೆಯನ್ನು ಪ್ರೇಮಲತಾ ಸಂಬಂಧಿಕರು ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಮದುವೆ ಮಾಡದಿದ್ದಕ್ಕೆ ಹೆತ್ತ ತಾಯಿಯನ್ನೇ ಕೊಲೆಗೈದ ಮಗ

    ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡ ಮಹಾಲಕ್ಷ್ಮಿ ಲೇಔಟ್‌ನ ಪೊಲೀಸರು ಶಿವಶಂಕರ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಸ್ನೈಪರ್‌ ಬಳಸಿ ಅಟ್ಯಾಕ್‌ – ಪಾಕ್‌ನಲ್ಲಿ ಉಗ್ರರ ದಾಳಿಗೆ 10 ಮಂದಿ ಪೊಲೀಸ್‌ ಅಧಿಕಾರಿಗಳು ಬಲಿ

  • ಡಾ.ನಟರಾಜ್ ಆತ್ಮಹತ್ಯೆಗೆ ಕೌಟುಂಬಿಕ ಕಲಹವೇ ಕಾರಣ: ಮಂಡ್ಯ ಡಿಹೆಚ್‌ಒ

    ಡಾ.ನಟರಾಜ್ ಆತ್ಮಹತ್ಯೆಗೆ ಕೌಟುಂಬಿಕ ಕಲಹವೇ ಕಾರಣ: ಮಂಡ್ಯ ಡಿಹೆಚ್‌ಒ

    ಮಂಡ್ಯ: ಮಂಡ್ಯದಲ್ಲಿ (Mandya) ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಡಾ.ನಟರಾಜ್ (Dr Nataraj) ಬೆಂಗಳೂರಿನಲ್ಲಿ (Bengaluru) ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆ. ಈ ಆತ್ಮಹತ್ಯೆಗೆ ಮೇಲಾಧಿಕಾರಿಗಳ ಕಿರುಕುಳ ಕಾರಣ ಎಂದು ಆರೋಪ ಮಾಡಲಾಗಿದೆ. ಈ ಆರೋಪವನ್ನು ಮಂಡ್ಯ ಡಿಹೆಚ್‌ಒ (DHO) ಡಾ.ಮೋಹನ್ ತಳ್ಳಿ ಹಾಕಿದ್ದಾರೆ.

    ಡಾ.ನಟರಾಜ್ ಕುಣಿಗಲ್ ತಾಲೂಕಿನ ಚೌಡನಕುಪ್ಪೆಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಮಂಡ್ಯದ ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿಯಾಗಿ ವರ್ಗಾವಣೆಯಾಗಿತ್ತು. ಅಧಿಕಾರ ವಹಿಸಿಕೊಂಡು ಮೂರು ತಿಂಗಳು ಆಗಿದೆ. ಆದರೆ ಇವರು ಕೆಲಸ ಮಾಡಿರುವುದು ಎರಡು ತಿಂಗಳು ಮಾತ್ರ. 30 ದಿನಗಳ ಕಾಲ ಆರೋಗ್ಯ ಸಮಸ್ಯೆ ಎಂದು ರಜೆ ಹಾಕಿದ್ದರು. ಕೌಟುಂಬಿಕ ಕಲಹದಿಂದಾಗಿ ಇವರು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು. ಹೀಗಾಗಿ ಅವರಿಗೆ ಹೆಚ್ಚಿನ ಕಾರ್ಯ ಒತ್ತಡವನ್ನು ನೀಡುತ್ತಿರಲಿಲ್ಲ. ಕೌಟುಂಬಿಕ ಕಲಹದಿಂದಾಗಿ ಮಾನಸಿಕ ಕಿರುಕುಳದಿಂದ ಬಳಲುತ್ತಿದ್ದ ನಟರಾಜ್ ಈ ಹಿಂದೆ ಮೂರು ಬಾರಿ ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದರು ಎಂದರು. ಇದನ್ನೂ ಓದಿ: ತೆಲಂಗಾಣ ಶಾಸಕರಿಗೆ ಮಟನ್, ಚಿಕನ್ ಬಿರಿಯಾನಿ ಬೇಕಾ ಅಂತ ವಿಚಾರಿಸಲು ಡಿಕೆಶಿ ತೆರಳಿದ್ದು: ಆರ್.ಅಶೋಕ್

    ಕಳೆದ ನವೆಂಬರ್ 11 ರಂದು ಕೌಟುಂಬಿಕ ಕಲಹ ಹಾಗೂ ಅನಾರೋಗ್ಯದಿಂದ ಕುಟುಂಬ ಕಲ್ಯಾಣ ಅಧಿಕಾರಿಯಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಮೊದಲು ಇದ್ದ ಚೌಡನಕುಪ್ಪೆ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿಯಾಗಿ ನೇಮಕ ಮಾಡುವಂತೆ ಸಚಿವ ಚಲುವರಾಯಸ್ವಾಮಿ ಹಾಗೂ ಡಿಹೆಚ್‌ಒಗೆ ನಟರಾಜ್ ಪತ್ರ ಬರೆದ್ದರು. ಇವರ ಸಾವಿಗೆ ಇವರ ಕೌಟುಂಬಿಕ ಕಲಹದಿಂದ ಉಂಟಾದ ಮಾನಸಿಕ ಖಿನ್ನತೆಯೇ ಕಾರಣ. ಈ ಆತ್ಮಹತ್ಯೆಗೂ ನಮಗೂ ಯಾವುದೇ ಸಂಬಂಧ ಇಲ್ಲ ಎಂದು ಡಾ.ಮೋಹನ್ ತಿಳಿಸಿದ್ದಾರೆ. ಇದನ್ನೂ ಓದಿ: ರಾಜ್ಯ ರಾಜಕೀಯ ಒತ್ತಡದ ನಡುವೆ ಕ್ಷೇತ್ರಕ್ಕೆ ಟೈಂ ಕೊಡಲು ಆಗ್ತಿಲ್ಲ: ಡಿಕೆಶಿ

  • ಬೆಂಗಳೂರಿನಲ್ಲಿ ವೈದ್ಯ ನೇಣು ಬಿಗಿದು ಆತ್ಮಹತ್ಯೆ

    ಬೆಂಗಳೂರಿನಲ್ಲಿ ವೈದ್ಯ ನೇಣು ಬಿಗಿದು ಆತ್ಮಹತ್ಯೆ

    ಬೆಂಗಳೂರು: ಮಂಡ್ಯ ಡಿಹೆಚ್‌ಒ (DHO) ಕಿರುಕುಳದಿಂದ ಬೇಸತ್ತ ವೈದ್ಯರೊಬ್ಬರು (Doctor) ನೇಣು ಬಿಗಿದು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಬೆಂಗಳೂರಿನ (Bengaluru) ಮಹಾಲಕ್ಷ್ಮಿ ಲೇಔಟ್‌ನಲ್ಲಿ (Mahalakshmi Layout) ನಡೆದಿದೆ.

    ನಟರಾಜ್ ಆತ್ಮಹತ್ಯೆಗೆ ಶರಣಾದ ವೈದ್ಯ. ಇವರು ಮಂಡ್ಯ (Mandya) ಆರೋಗ್ಯ ಇಲಾಖೆಯ ವೆಲ್‌ಫೇರ್ ಆಫೀಸರ್ (Welfare Officer) ಆಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಇಂದು ಮಹಾಲಕ್ಷ್ಮಿ ಲೇಔಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ತಿಂಗಳಿಗೆ 70 ಮಕ್ಕಳನ್ನು ಅಬಾರ್ಷನ್ ಮಾಡುತ್ತಿದ್ದೆ: ಭ್ರೂಣ ಹತ್ಯೆ ಕುರಿತು ನರ್ಸ್ ಮಂಜುಳ ಸ್ಫೋಟಕ ಮಾಹಿತಿ

    ಹೃದಯಾಘಾತಕ್ಕೊಳಗಾದ ಹಿನ್ನೆಲೆ ಕಳೆದ ಕೆಲ ದಿನಗಳಿಂದ ನಟರಾಜ್ ರಜೆಯಲ್ಲಿದ್ದರು. ಇಂದು ಮಂಡ್ಯಗೆ ಹೋಗಿ ರಿಪೋರ್ಟ್ ಮಾಡಿಕೊಳ್ಳಬೇಕಿತ್ತು. ಆದರೆ ಮಂಡ್ಯ ಡಿಹೆಚ್‌ಒ ಇವರಿಗೆ ರಿಪೋರ್ಟ್ ಮಾಡಿಕೊಳ್ಳದಂತೆ ಸೂಚನೆ ನೀಡಿದ್ದು, ಕಿರುಕುಳದಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ರೆಸ್ಟೋರೆಂಟಲ್ಲಿ ಕೈ ತೊಳೆದು ಬರುವಷ್ಟರಲ್ಲಿ ಪಿಎಸ್‌ಐ ಪಿಸ್ತೂಲ್ ಮಂಗಮಾಯ!

    ಬೆಟ್ಟಸ್ವಾಮಿ ಎಂಬ ಅಧಿಕಾರಿಯನ್ನು ಪಾಂಡವಪುರ ಟಿಹೆಚ್‌ಒ ಆಗಿ ವರ್ಗಾವಣೆ ಮಾಡಲಾಗಿತ್ತು. ಆದರೆ ಬೆಟ್ಟಸ್ವಾಮಿ ಪಾಂಡವಪುರದಲ್ಲಿ ರಿಪೋರ್ಟ್ ಮಾಡಿಕೊಂಡಿರಲಿಲ್ಲ. ಡಿಹೆಚ್‌ಒ ಬೆಟ್ಟಸ್ವಾಮಿ ಪರವಾಗಿ ಇದ್ದರು. ಈ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಇದನ್ನೂ ಓದಿ: 900 ಭ್ರೂಣಗಳ ಹತ್ಯೆ ಆರೋಪಕ್ಕೆ ಅಂಜಿ ವಿಷದ ಚುಚ್ಚುಮದ್ದು ತೆಗೆದುಕೊಂಡು ಆತ್ಮಹತ್ಯೆ ಮಾಡಿಕೊಂಡ್ರಾ ವೈದ್ಯ?

  • ಪ್ರೀತಿಸಿದ ಯುವತಿ ಕೈಕೊಟ್ಟಿದ್ದಕ್ಕೆ ಡೆತ್‌ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ

    ಪ್ರೀತಿಸಿದ ಯುವತಿ ಕೈಕೊಟ್ಟಿದ್ದಕ್ಕೆ ಡೆತ್‌ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ

    ಬೆಂಗಳೂರು: ಪ್ರೀತಿಸಿದ ಯುವತಿ ಕೈಕೊಟ್ಟ ಹಿನ್ನೆಲೆ ಯುವಕ ಡೆತ್‌ನೋಟ್ (Death Note) ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ (Bengaluru) ಮಹಾಲಕ್ಷ್ಮಿ ಲೇಔಟ್‌ನ (Mahalakshmi Layout) ಎಸ್‌ಜೆ ನಗರದಲ್ಲಿ ನಡೆದಿದೆ.

    ನವೀನ್ ಆತ್ಮಹತ್ಯೆಗೆ ಶರಣಾದ ಭಗ್ನ ಪ್ರೇಮಿ. ಮೂಲತಃ ಚಾಮರಾಜನಗರ (Chamarajanagara) ನಿವಾಸಿಯಾದ ನವೀನ್ ಬದುಕು ರೂಪಿಸಿಕೊಳ್ಳುವ ಸಲುವಾಗಿ ಕುಟುಂಬದವರೇ ಬಾಳೆಕಾಯಿ ಮಂಡಿ ಹಾಕಿಕೊಟ್ಟಿದ್ದರು. ಈ ವೇಳೆ ನವೀನ್‌ಗೆ ಯುವತಿಯೊಬ್ಬಳು ಪರಿಚಯವಾಗಿ ಇಬ್ಬರ ಮಧ್ಯೆ ಪ್ರೀತಿ ಶುರುವಾಗಿದೆ. ಇಬ್ಬರೂ ಪರಸ್ಪರ ಕೈ ಕೈ ಹಿಡಿದುಕೊಂಡು ಸುತ್ತಾಡಿ ಮದುವೆಯ ಕನಸು ಕೂಡಾ ಕಂಡಿದ್ದರು. ಇದನ್ನೂ ಓದಿ: ಪತ್ನಿ, ಸೋದರಳಿಯನಿಗೆ ಗುಂಡು ಹಾರಿಸಿ ಆತ್ಮಹತ್ಯೆಗೆ ಶರಣಾದ ಎಸಿಪಿ

    ಈ ವಿಚಾರವನ್ನು ನವೀನ್ ತನ್ನ ಮನೆಯಲ್ಲೂ ತಿಳಿಸಿದ್ದ. ಆದರೆ ಯುವತಿ ಇತ್ತೀಚಿಗೆ ಪ್ರಿಯಕರ ನವೀನ್‌ನನ್ನು ನಿರ್ಲಕ್ಷಿಸಲು ಶುರುಮಾಡಿದ್ದಳು. ಇದರಿಂದ ನೊಂದ ನವೀನ್ ಯುವತಿಯನ್ನು ಮನವೊಲಿಸಲು ಸಾಕಷ್ಟು ಪ್ರಯತ್ನಪಟ್ಟಿದ್ದ. ಆದರೆ ಯುವತಿ ಮಾತ್ರ ಡೋಂಟ್ ಕೇರ್ ಎನ್ನುವ ರೀತಿ ವರ್ತಿಸಲು ಶುರುಮಾಡಿದ್ದಳು. ಇದನ್ನೂ ಓದಿ: ಬೆಂಗ್ಳೂರಿನ ಬಾಡಿಗೆ ಮನೆಯಲ್ಲಿದ್ದುಕೊಂಡೇ ಡ್ರಗ್ಸ್ ಸಪ್ಲೈ ಮಾಡ್ತಿದ್ದ ನೈಜೀರಿಯನ್ ಪ್ರಜೆ ಅರೆಸ್ಟ್!
    ಈ ಮಧ್ಯೆ ಯುವತಿ ಮತ್ತೊಬ್ಬ ಹುಡುಗನ ಜೊತೆಗೆ ಓಡಾಡುತ್ತಿದ್ದಾಳೆ ಎನ್ನುವ ವಿಚಾರ ತಿಳಿದ ನವೀನ್ ಮತ್ತಷ್ಟು ಕೋಪಗೊಂಡಿದ್ದ. ಮದುವೆ ಆಗುವುದಾಗಿ ಹೇಳಿ ಮೋಸ ಮಾಡಿದ್ದಾಳೆ ಎಂದು ಯುವತಿಯ ಕಡೆಯವರಿಗೂ ರಾಜಿ ಸಂಧಾನಕ್ಕೆ ಒತ್ತಾಯಿಸಿದ್ದ. ಈ ಬಗ್ಗೆ ಮನೆಯವರು ಕೂಡಾ ಬುದ್ಧಿ ಹೇಳಿದರೂ ಏನೂ ಪ್ರಯೋಜನವಾಗಲಿಲ್ಲ. ಇದನ್ನೂ ಓದಿ: ಗ್ಯಾಸ್ ಕಟರ್ ಬಳಸಿ ATMನಲ್ಲಿದ್ದ 15 ಲಕ್ಷ ದರೋಡೆ

    ಕೊನೆಗೆ ಪ್ರೀತಿಸಿದ ಹುಡುಗಿ ಕೈಕೊಟ್ಟಳು ಎಂದು ನೊಂದ ಪ್ರಿಯಕರ ನವೀನ್ ಕೊನೆಯದಾಗಿ ಭಾನುವಾರ ಸಂಜೆ ಯುವತಿಗೆ ಕರೆ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಹೇಳೀ ಫೋನ್ ಕಟ್ ಮಾಡಿದ್ದ. ಇದರಿಂದ ಗಾಬರಿಗೊಂಡ ಯುವತಿ ನೂರಕ್ಕೂ ಹೆಚ್ಚು ಬಾರಿ ವಾಪಸ್ ಕರೆ ಮಾಡಿದ್ದಾಳೆ. ಆದರೆ ನವೀನ್ ಫೋನ್ ರಿಸೀವ್ ಮಾಡಿಲ್ಲ. ಬದಲಾಗಿ ಇವರಿಬ್ಬರ ಪ್ರೀತಿ, ಹುಡುಗಿ ಮದುವೆ ಆಗುವುದಾಗಿ ಹೇಗೆ ಮೋಸ ಮಾಡಿದ್ಳು ಎನ್ನುವುದನ್ನು ಡಿಟೇಲ್ ಆಗಿ ಡೆತ್‌ನೋಟಲ್ಲಿ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ. ಇದನ್ನೂ ಓದಿ: 4 ವರ್ಷ ಪ್ರೀತಿಸಿ ಕೈಕೊಟ್ಟ ಪ್ರಿಯಕರ- ಇಲಿ ಪಾಷಾಣ ತಿಂದು ಆಸ್ಪತ್ರೆ ಸೇರಿದ್ದ ಯುವತಿ ಸಾವು

     

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪಾರಿವಾಳ ಹಿಡಿಯಲು ಹೋಗಿ ಹೈಟೆನ್ಷನ್ ವಯರ್ ಸ್ಪರ್ಶಿಸಿದ್ದ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಸಾವು

    ಪಾರಿವಾಳ ಹಿಡಿಯಲು ಹೋಗಿ ಹೈಟೆನ್ಷನ್ ವಯರ್ ಸ್ಪರ್ಶಿಸಿದ್ದ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಸಾವು

    ಬೆಂಗಳೂರು: 3 ದಿನಗಳ ಹಿಂದೆ ಕರೆಂಟ್ ಶಾಕ್ (Electric Shock) ತಗುಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಬಾಲಕರಲ್ಲಿ (Boys) ಒಬ್ಬ ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಬಾಲಕ ಸುಪ್ರೀತ್ ಭಾನುವಾರ ಬೆಳಗ್ಗೆ ಸಾವನ್ನಪ್ಪಿದ್ದಾನೆ.

    ಬೆಂಗಳೂರಿನ (Bengaluru) ಮಹಾಲಕ್ಷ್ಮಿ ಲೇಔಟ್‌ನಲ್ಲಿ (Mahalakshmi Layout) ಈ ದುರ್ಘಟನೆ ನಡೆದಿದೆ. ಡಿಸೆಂಬರ್ 1 ರಂದು ಶಾಲೆಯಿಂದ ಮನೆಗೆ ಬಂದಿದ್ದ ಬಾಲಕರಿಬ್ಬರು ಮನೆಯ ಮಹಡಿ ಮೇಲಿದ್ದ ಪಾರಿವಾಳವನ್ನು (Pigeon) ಹಿಡಿಯಲು ಹೋಗಿದ್ದರು. ಈ ವೇಳೆ ಕಬ್ಬಿಣದ ರಾಡ್‌ನಿಂದ ಹೈಟೆನ್ಷನ್ ವಯರ್ ಅನ್ನು ಬಾಲಕರು ಮುಟ್ಟಿದ್ದರು. ಘಟನೆಯ ತೀವ್ರತೆ ಎಷ್ಟಿತ್ತು ಎಂದರೆ ಮನೆಯಲ್ಲಿದ್ದ ಎಲೆಕ್ಟ್ರಿಕ್ ಉಪಕರಣಗಳೆಲ್ಲವೂ ಸ್ಫೋಟಗೊಂಡಿತ್ತು.

    ಘಟನೆಯಿಂದ ಬಾಲಕ ಸುಪ್ರೀತ್ ದೇಹದಲ್ಲಿ ಸುಮಾರು ಶೇ.90 ರಷ್ಟು ಸುಟ್ಟ ಗಾಯಗಳಾಗಿತ್ತು. ಇನ್ನೊಬ್ಬ ಬಾಲಕ ಚಂದ್ರು ಕೂಡಾ ಸುಮಾರು ಶೇ.70 ರಷ್ಟು ಸುಟ್ಟ ಗಾಯಗಳಿಂದ ಆಸ್ಪತ್ರೆ ಸೇರಿದ್ದ. ದುರ್ಘಟನೆ ನಡೆದ ತಕ್ಷಣವೇ ಬಾಲಕರನ್ನು ನಗರದ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಬಾಲಕ ಸುಪ್ರೀತ್ ಬೆಳಗ್ಗೆ 7:30ರ ವೇಳೆಗೆ ಕೊನೆಯುಸಿರೆಳೆದಿದ್ದಾನೆ. ಇದನ್ನೂ ಓದಿ: ದತ್ತಜಯಂತಿಗೆ ಕಾಫಿನಾಡಲ್ಲಿ ಪೊಲೀಸ್ ಸರ್ಪಗಾವಲು – ಡಿ.5 ರಿಂದ 9ರವರೆಗೆ ಪ್ರವಾಸಿಗರಿಗೆ ನಿಷೇಧ

    ಬಾಲಕ ಸುಪ್ರೀತ್ ತಂದೆ ಮಂಜುನಾಥ್ ಹಾಗೂ ತಾಯಿ ಪ್ರೇಮ ಅವರ ಒಬ್ಬನೇ ಮಗನಾಗಿದ್ದ. ಬಾಲಕನ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಯ ಶವಾಗಾರಕ್ಕೆ ಕಳುಹಿಸಲಾಗಿದೆ. ಮರಣೋತ್ತರ ಪರೀಕ್ಷೆಯ ಬಳಿಕ ಬಾಲಕನ ಮೃತದೇಹವನ್ನು ಕುಟುಂಬದವರಿಗೆ ರವಾನೆ ಮಾಡಲಾಗುತ್ತದೆ. ಘಟನೆಯಲ್ಲಿ ಗಾಯಗೊಂಡಿರುವ ಇನ್ನೊಬ್ಬ ಬಾಲಕ ಚಂದ್ರುವಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಇದನ್ನೂ ಓದಿ: ಮಗಳನ್ನು ಕೋಚಿಂಗ್ ಸೆಂಟರ್‌ಗೆ ಕರೆದೊಯ್ಯುತ್ತಿದ್ದ ವ್ಯಕ್ತಿ ರಾಜಸ್ಥಾನದ ಗ್ಯಾಂಗ್‌ವಾರ್‌ಗೆ ಬಲಿ

    Live Tv
    [brid partner=56869869 player=32851 video=960834 autoplay=true]

  • ಮಹಾಲಕ್ಷ್ಮಿ ಲೇಔಟ್ 55ನೇ ವಾರ್ಡ್‍ಗೆ ಅಪ್ಪು ಹೆಸರಿಟ್ಟಿರೋದು ಸಂತೋಷ ತಂದಿದೆ: ಸಿಎಂ

    ಮಹಾಲಕ್ಷ್ಮಿ ಲೇಔಟ್ 55ನೇ ವಾರ್ಡ್‍ಗೆ ಅಪ್ಪು ಹೆಸರಿಟ್ಟಿರೋದು ಸಂತೋಷ ತಂದಿದೆ: ಸಿಎಂ

    ಬೆಂಗಳೂರು: ಮಹಾಲಕ್ಷ್ಮಿ ಲೇಔಟ್‍ನ 55ನೇ ವಾರ್ಡ್‍ಗೆ ಕರ್ನಾಟಕ ರತ್ನ ಪುನೀತ್ ರಾಜ್‍ಕುಮಾರ್ ಹೆಸರಿಟ್ಟಿರೋದು ಸಂತೋಷ ತಂದಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

    ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದ ಶಂಕರಮಠ ವಾರ್ಡ್‍ನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಕಾರ್ಯಕ್ರಮಕ್ಕೆ ಬೊಮ್ಮಾಯಿ, ಸಚಿವರಾದ ಗೋಪಾಲಯ್ಯ, ಮುನಿರತ್ನ, ಭೈರತಿ ಬಸವರಾಜ್ ಭಾಗಿಯಾಗಿದ್ದರು. ಬೊಮ್ಮಾಯಿ ಅವರು ಮೇಲ್ಸೇತುವೆ ಕಾಮಗಾರಿ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿ, ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದಲ್ಲಿ ಸ್ಲಂ-ಬೋರ್ಡ್ ಅಡಿ ನಿರ್ಮಿಸಿರುವ ಮನೆಗಳ ಹಕ್ಕು ಪತ್ರ ವಿತರಿಸಿದರು. ಇದನ್ನೂ ಓದಿ: ಕುಮದ್ವತಿ ನದಿಯಲ್ಲಿ ಹೆಚ್ಚಿದ ನೀರು – ಸೇತುವೆ ಎರಡು ಬದಿಗೆ ಬ್ಯಾರಿಕೇಡ್ ಹಾಕಿ ಓಡಾಟಕ್ಕೆ ಬ್ರೇಕ್ 

    ವೇದಿಕೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮೈಸೂರು ರಸ್ತೆ ಮತ್ತು ತುಮಕೂರು ರಸ್ತೆ ಜೋಡಿಸುವ 11 ಕಿ.ಮೀ ಉದ್ದದ ಎಲಿವೇಟೆಡ್ ಕಾರಿಡಾರ್ ನಿರ್ಮಿಸಲಾಗುತ್ತಿದೆ. ಅಲ್ಲದೇ ಬಹಳ ದಿನಗಳಿಂದ ಅಭಿಮಾನಿಗಳ ಬೇಡಿಕೆ ಮೇರೆಗೆ 55ನೇ ವಾರ್ಡ್‍ಗೆ ಪುನೀತ್ ರಾಜ್‍ಕುಮಾರ್ ಹೆಸರು ಇಡಲಾಗಿದೆ. ಈ ವಾರ್ಡ್‍ಗೆ ಅಪ್ಪು ಹೆಸರಿಟ್ಟಿರೋದು ಸಂತೋಷ ತಂದಿದೆ. ಬೆಂಗಳೂರಿಗೆ ಅಮೃತ ನಗರೋತ್ಥಾನ ಯೋಜನೆಯಡಿ 6 ಸಾವಿರ ಕೋಟಿ ರೂ. ಅನುದಾನ ಕೊಡಲಾಗಿದೆ. ನಗರದ ಮೂಲಭೂತ ಸೌಕರ್ಯಗಳಿಗೆ ನಮ್ಮ ಸರ್ಕಾರ ಅನುದಾನದ ಕೊರತೆ ಮಾಡಿಲ್ಲ ಎಂದು ವಿವರಿಸಿದರು.

    ಮೆಟ್ರೋ ಮೂರನೇ ಫೇಸ್ ಮುಂದಿನ ವರ್ಷ ಶುರು ಮಾಡುತ್ತೇವೆ. ಬೆಂಗಳೂರಿನ ಹೊರ ಪಟ್ಟಣಗಳಿಗೆ ಮೂರನೇ ಫೇಸ್ ಮೆಟ್ರೋ ಸಂಪರ್ಕ ಕಲ್ಪಿಸಲಾಗುತ್ತಿದೆ. 15 ಸಾವಿರ ಕೋಟಿ ರೂ. ನಲ್ಲಿ ಸಬರ್ಬನ್ ರೈಲು ಯೋಜನೆ ಮಾಡ್ತಿದೀವಿ. ಈ ಯೋಜನೆಗೆ ಪ್ರಧಾನಿ ಮೋದಿ ಅವರು ಬಂದು ಚಾಲನೆ ಕೊಟ್ಟಿದ್ರು. ಮಹಾಲಕ್ಷ್ಮಿ ಲೇಔಟ್ ನಲ್ಲಿ ಗೋಪಾಲಣ್ಣ ಉತ್ತಮ ಕೆಲಸ ಮಾಡಿದ್ದಾರೆ. ಅವರ ದೇಹ ಎಷ್ಟು ದೊಡ್ಡದಿದೆಯೋ ಅಷ್ಟೇ ಅವರ ಹೃದಯವೂ ದೊಡ್ಡದಿದೆ ಎಂದು ತಮಾಷೆ ಮಾಡಿದರು. ಇದನ್ನೂ ಓದಿ:  ಬ್ಲಡ್ ಟೆಸ್ಟ್ ಮಾಡಿಸಿಕೊಳ್ಳಲು ಮಕ್ಕಳಂತೆ ಅತ್ತ ಪೊಲೀಸಪ್ಪ – ನೆಟ್ಟಿಗರಿಗೆ ಫುಲ್ ಮನರಂಜನೆ

    ಪ್ರತಿ ವಾರ್ಡ್‍ನಲ್ಲಿ ‘ನಮ್ಮ ಕ್ಲಿನಿಕ್’ ಮಾಡ್ತೇವೆ. ಮುಂದಿನ ತಿಂಗಳಿಂದ ‘ನಮ್ಮ ಕ್ಲಿನಿಕ್’ 243 ವಾರ್ಡ್‍ಗಳಲ್ಲೂ ಬಡವರಿಗಾಗಿ ಆರಂಭ ಮಾಡಲಾಗುತ್ತೆ ಎಂದು ಭರವಸೆ ಕೊಟ್ಟರು.

    Live Tv
    [brid partner=56869869 player=32851 video=960834 autoplay=true]

  • ಸೌಂದರ್ಯ ಜಗದೀಶ್ ಕುಟುಂಬಸ್ಥರಿಂದ ಹಲ್ಲೆ ಪ್ರಕರಣ- ಮನೆ ಸೆಕ್ಯೂರಿಟಿ ಗಾರ್ಡ್ ಅರೆಸ್ಟ್

    ಸೌಂದರ್ಯ ಜಗದೀಶ್ ಕುಟುಂಬಸ್ಥರಿಂದ ಹಲ್ಲೆ ಪ್ರಕರಣ- ಮನೆ ಸೆಕ್ಯೂರಿಟಿ ಗಾರ್ಡ್ ಅರೆಸ್ಟ್

    ಬೆಂಗಳೂರು: ನಿರ್ಮಾಪಕ ಸೌಂದರ್ಯ ಜಗದೀಶ್ ಕುಟುಂಬದಿಂದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಮನೆಯ ಸೆಕ್ಯೂರಿಟಿಯನ್ನು ಅರೆಸ್ಟ್ ಮಾಡಿದ್ದಾರೆ.

    ಬಾಲಾಜಿ ಅರೆಸ್ಟ್ ಆದ ಸೆಕ್ಯೂರಿಟಿ. ಮನೆಗೆ ನುಗ್ಗಿ ಹಲ್ಲೆ ನಡೆಸಲು ಪ್ರಚೋದನೆ ಮತ್ತು ಸಹಾಯದ ಹಿನ್ನೆಲೆಯಲ್ಲಿ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಸೆಕ್ಯೂರಿಟಿ ಬಾಲಾಜಿಯನ್ನ ಅರೆಸ್ಟ್ ಮಾಡಿ ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಸೌಂದರ್ಯ ಜಗದೀಶ್ ಕುಟುಂಬದಿಂದ ಹಲ್ಲೆ ಕೇಸ್ – ಪತ್ನಿ ರೇಖಾ, ಪುತ್ರ ಸ್ನೇಹಿತ್‍ಗೆ ಪೊಲೀಸರಿಂದ ನೋಟಿಸ್

    ಇತ್ತ ಎಫ್‍ಐಆರ್ ದಾಖಲಾದರೂ ಆರೋಪಿಗಳು ನಾಪತ್ತೆಯಾಗಿದ್ದಾರೆ. ನಿರ್ಮಾಪಕನ ಕಿರಿಕ್ ಮಗ, ಪತ್ನಿ ಹಾಗೂ ಬೌನ್ಸರ್ ಗಳು ಇನ್ನೂ ಪೊಲಿಸರ ಕೈಗೆ ಸಿಕ್ಕಿಲ್ಲ. ಹೀಗಾಗಿ ಮಹಾಲಕ್ಷ್ಮೀ ಲೇ ಔಟ್ ಪೊಲೀಸರು ಆರೋಪಿಗಳಿಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ರಾತ್ರಿಯೆಲ್ಲಾ ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ. ಕಳೆದ ರಾತ್ರಿ 1 ಗಂಟೆವರೆಗೂ ಬೌನ್ಸರ್ ಗಳ ಮನೆಯನ್ನು ಪೊಲೀಸರು ಜಾಲಾಡಿದ್ದಾರೆ. ಬಾಗಲಗುಂಟೆ, ಕೊಡಿಗೇಹಳ್ಳಿಯಲ್ಲಿ ಬೌನ್ಸರ್ ಮನೆ ಪರಿಶೀಲನೆ ನಡೆಸಿದ್ದಾರೆ. ಘಟನೆ ಬಳಿಕ ಮನೆಗೆ ಹೋಗಿಲ್ಲ. ಬೌನ್ಸರ್ ಮನೆಯವರಿಂದ ಮಾಹಿತಿ ಪಡೆದಿದ್ದಾರೆ. ಆದರೆ ಮನೆಯಲ್ಲಿ ಬೌನ್ಸರ್ ಗಳು ಸಿಗದೇ ವಾಪಸ್ ಆಗಿದ್ದಾರೆ. ಇದನ್ನೂ ಓದಿ: ಠಾಣೆ ಮೆಟ್ಟಿಲೇರಿದ ಕಸ ಫೈಟ್ – ಪ್ರೊಡ್ಯೂಸರ್ ಪುತ್ರ, ಪತ್ನಿ ವಿರುದ್ಧ FIR

    ಮಂಜುಳಾ ಪುರುಷೋತ್ತಮ್ ಅವರ ಕುಟುಂಬಕ್ಕೆ ಕ್ಷಮೆ ಕೇಳತ್ತೇನೆ. ಇನ್ನು ಮುಂದೆ ನಮ್ಮ ಮನೆ ಕೆಲಸದವರು ಮಂಜುಳ ಅವರ ಕೆಲಸದವರ ಜೊತೆ ಜಗಳವಾಡದಂತೆ ನೋಡಿ ಕೊಳ್ಳುತ್ತೇನೆ. ನನ್ನ ಮಗ ಸ್ನೇಹಿತ್ ಹಾಗೂ ಪತ್ನಿ ರೇಖಾ ಜಗಳ ಬಿಡಸಲು ಹೋಗಿದ್ದರು. ಅವರು ಯಾರ ಮೇಲೂ ಹಲ್ಲೆ ಮಾಡಲು ಹೋಗಿಲ್ಲ. ಈ ಘಟನೆಯಿಂದ ನಮ್ಮಿಬ್ಬರ ಕುಟುಂಬಕ್ಕೆ ಬಹಳ ನೋವಾಗಿದೆ. ಹೆಣ್ಣು ಮಗಳೊಬ್ಬಳಿಗೆ ಹಾಗೂ ಅವರ ತಾಯಿಗೆ ನೋವಾಗಿರುವ ವಿಷಯ ತಿಳಿದು ನನಗೆ ನೋವಾಗಿದೆ. ನಿರ್ಮಾಪಕ ಸೌಂದರ್ಯ ಜಗದೀಶ್ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.

  • ಸೀಲ್‍ಡೌನ್ ಪ್ರದೇಶದಲ್ಲಿ ವಾಕಿಂಗ್- ಪೊಲೀಸರ ಎಚ್ಚರಿಕೆಗೂ ಕ್ಯಾರೆ ಎನ್ನದ ಜನ

    ಸೀಲ್‍ಡೌನ್ ಪ್ರದೇಶದಲ್ಲಿ ವಾಕಿಂಗ್- ಪೊಲೀಸರ ಎಚ್ಚರಿಕೆಗೂ ಕ್ಯಾರೆ ಎನ್ನದ ಜನ

    – ಮಹಾಲಕ್ಷ್ಮಿ ಲೇಔಟ್ ನಲ್ಲಿ ಜನರ ಓಡಾಟ ಜೋರು

    ಬೆಂಗಳೂರು: ನಗರದ ಮಹಾಲಕ್ಷ್ಮಿ ಲೇಔಟ್‍ನ ಮಾರಪ್ಪನ ಪಾಳ್ಯದಲ್ಲಿ ಶನಿವಾರ ಪೊಲೀಸ್ ಪೇದೆಗೆ ಕೊರೊನಾ ಪಾಸಿಟಿವ್ ಬಂದಿದೆ. ಹೀಗಾಗಿ ಮಾರಪ್ಪನ ಪಾಳ್ಯದ ಶಂಕರ್ ನಗರದ 4ನೇ ಹಂತದ 1ನೇ ಕ್ರಾಸ್‍ನ್ನು ಸೀಲ್‍ಡೌನ್ ಮಾಡಿದ್ದಾರೆ. ಈ ಕುರಿತು ಪೊಲೀಸರು ಎಚ್ಚರಿಕೆ ನೀಡಿದರೂ ಜನ ವಾಕಿಂಗ್ ಮಾಡುತ್ತಿದ್ದಾರೆ.

    ಸೀಲ್‍ಡೌನ್ ಪ್ರದೇಶದ ರಸ್ತೆಯಲ್ಲಿ ವ್ಯಕ್ತಿಯೊಬ್ಬ ವಾಕ್ ಮಾಡುತ್ತಿದ್ದು, ಮನೆಯಿಂದ ಹೊರಗಡೆ ಬರಬೇಡಿ ಎಂದು ಪೊಲೀಸರು ಕೂಗಿ ಹೇಳಿದರೂ, ಕ್ಯಾರೇ ಅನ್ನದೆ ಓಡಾಟ ನಡೆಸಿದ್ದಾನೆ. ಸೀಲ್‍ಡೌನ್ ಆದ ರೋಡಲ್ಲಿ ವಾಕಿಂಗ್ ವಾಕಿಂಗ್ ಮಾಡಿ ನಿರ್ಲಕ್ಷ್ಯದಿಂದ ವರ್ತಿಸಿದ್ದಾನೆ. ಶನಿವಾರವಷ್ಟೇ ಪೋಲೀಸ್ ಪೇದೆಗೆ ಪಾಸಿಟಿವ್ ಬಂದಿದ್ದು, ಮಾರಪ್ಪನ ಪಾಳ್ಯದ ಶಂಕರ್ ನಗರದ 4ನೇ ಹಂತದ 1ನೇ ಕ್ರಾಸ್ ರಸ್ತೆಯನ್ನು ಸೀಲ್‍ಡೌನ್ ಮಾಡಲಾಗಿದೆ.

    ಸಂಪೂರ್ಣವಾಗಿ ಸೀಲ್‍ಡೌನ್ ಮಾಡಿ ಬ್ಯಾರಿಕೇಡ್ ಹಾಕಿದ್ದಾರೆ. ಆದರೆ ವ್ಯಕ್ತಿ ಓಡಾಟ ನಡೆಸಿದ್ದಾನೆ. ಮಹಾಲಕ್ಷ್ಮಿ ಲೇಔಟ್ ನಲ್ಲಿ ಜನರ ಓಡಾಟ ಜೋರಾಗಿದ್ದು, ಹಾಲು ಹಣ್ಣು, ತರಕಾರಿ ಹಾಗೂ ಅಗತ್ಯ ವಸ್ತುಗಳನ್ನು ಕೊಳ್ಳಲು ಗುಂಪಾಗಿ ಸೇರುತ್ತಿದ್ದಾರೆ. ಎಷ್ಟೇ ಬ್ಯಾರಿಕೇಡ್ ಹಾಕಿದರೂ ಜನ್ರ ಓಡಾಡೋದು ಬಿಡುತ್ತಿಲ್ಲ. ಲಾಕ್‍ಡೌನ್ 4.0 ಹಿನ್ನೆಲೆ ಮೇ ಅಂತ್ಯದವರೆಗೂ ಪ್ರತಿ ಭಾನುವಾರ ಬಂದ್ ಇರುತ್ತೆ. ಹಾಲು, ತರಕಾರಿ ಕೊಳ್ಳಲು ಅವಕಾಶವೂ ಇದೆ. ಆದರೆ ಮಾರ್ಕೆಟ್‍ನಲ್ಲಿ ಜನ ಸಾಮಾಜಿಕ ಅಂತರ ಕಾಯ್ದುಕೊಳ್ಳುತ್ತಿಲ್ಲ, ಮಾಸ್ಕ್ ಧರಿಸದೆ ಬರುತ್ತಿದ್ದಾರೆ. ಜೊತೆಗೆ ಚಿಕ್ಕ ಮಕ್ಕಳನ್ನು ಕರೆದುಕೊಂಡು ಬರುತ್ತಿದ್ದು, ಶನಿವಾರ ಪೇದೆಗೆ ಪಾಸಿಟಿವ್ ಬಂದರೂ ಜನರಿಗೆ ಭಯ ಇಲ್ಲದಂತಾಗಿದೆ.

  • ಕೆಲಸದಿಂದ ತೆಗೆದಿದ್ದಕ್ಕೆ ಮಾಲೀಕನ ಅಂಗಡಿ ಮುಂದೆ ವಾಮಾಚಾರ

    ಕೆಲಸದಿಂದ ತೆಗೆದಿದ್ದಕ್ಕೆ ಮಾಲೀಕನ ಅಂಗಡಿ ಮುಂದೆ ವಾಮಾಚಾರ

    ಬೆಂಗಳೂರು: ಕೆಲಸದಿಂದ ತೆಗೆದಿದ್ದರಿಂದ ಕೋಪಗೊಂಡ ಕೆಲಸಗಾರನೊಬ್ಬ ಮಾಲೀಕನ ಅಂಗಡಿ ಮುಂದೆ ವಾಮಾಚಾರ ನಡೆಸಿರುವ ಘಟನೆ ಮಹಾಲಕ್ಷ್ಮಿ ಲೇಔಟ್ ಕುರುಬರ ಹಳ್ಳಿಯಲ್ಲಿ ನಡೆದಿದೆ.

    ಕುರುಬರಹಳ್ಳಿ ಸರ್ಕಲ್‍ನ ಭುವನೇಶ್ವರಿ ಹಾರ್ಡ್ ವೇರ್‌ನಲ್ಲಿ ಶ್ರೀನಿವಾಸ್ ಎಂಬ ಯುವಕ ಕೆಲಸ ಮಾಡುತ್ತಿದ್ದ. ಆದರೆ ಅಂಗಡಿಗಳಲ್ಲಿ ಯಾರು ಇಲ್ಲದೆ ಇದ್ದಾಗ ಶ್ರೀನಿವಾಸ್ ಆಗಾಗ ಕ್ಯಾಶ್ ಕೌಂಟರ್‌ನಿಂದ ಹಣ ಕದಿಯುತ್ತಿದ್ದ. ಇದನ್ನು ಗಮನಿಸಿ ದ ಮಾಲೀಕ ವಿಶ್ವನಾಥ್ ಕೆಲ ದಿನಗಳ ಹಿಂದೆ ಶ್ರೀನಿವಾಸ್‍ನನ್ನು ತೆಗೆದು ಹಾಕಿದ್ದರು.

    ಮಾಲೀಕ ವಿಶ್ವನಾಥ್ ತನ್ನನ್ನು ಕೆಲಸದಿಂದ ತೆಗೆದು ಹಾಕಿದ್ದಕ್ಕೆ ಶ್ರೀನಿವಾಸ್ ಕೋಪಗೊಂಡಿದ್ದ. ಹೀಗಾಗಿ ಭಾನುವಾರ ಬೆಳಗ್ಗೆ ಅಂಗಡಿ ಮುಂಭಾಗದಲ್ಲಿ ಬಂದು ಕುಳಿದಿದ್ದ ಶ್ರೀನಿವಾಸ್, ಕಬ್ಬಿಣದ ಮೊಳೆ, ನಿಂಬೆ ಹಣ್ಣು, ಕರಿ ಎಳ್ಳು, ಅರಿಶಿಣ, ಕುಂಕುಮ ಎರಚಿ ಪರಾರಿಯಾಗಿದ್ದಾನೆ. ಶ್ರೀನಿವಾಸ್ ವಾಮಾಚಾರದ ವಸ್ತುಗಳನ್ನು ಎರಚುವ ದೃಶ್ಯವು ಅಂಗಡಿ ಮುಂಭಾಗದಲ್ಲಿದ್ದ ಸಿಸಿಟಿವಿ ಕ್ಯಾಮೆಯಾದಲ್ಲಿ ಸೆರೆಯಾಗಿದೆ.