Tag: mahalinga naik

  • ಮುಟ್ಟಾಳೆ ಧರಿಸಿ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಅಮೈ ಮಹಾಲಿಂಗ ನಾಯ್ಕ

    ಮುಟ್ಟಾಳೆ ಧರಿಸಿ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಅಮೈ ಮಹಾಲಿಂಗ ನಾಯ್ಕ

    ನವದೆಹಲಿ: ದಕ್ಷಿಣ ಕನ್ನಡ ಜಿಲ್ಲೆಯ ಪಗ್ರತಿಪರ ಕೃಷಿಕ ಅಮೈ ಮಹಾಲಿಂಗ ನಾಯ್ಕ ಅವರು ಮುಟ್ಟಾಳೆ ಧರಿಸಿ ಪದ್ಮಶ್ರೀ ಪ್ರಶಸ್ತಿ ಸ್ವೀಕಾರ ಮಾಡಿದ್ದಾರೆ.

    ಏಕಾಂಗಿಯಾಗಿ 7 ಸುರಂಗಗಳನ್ನು ಕೊರೆದು ಕೃಷಿ ಭೂಮಿಗೆ ನೀರು ಹರಿಸಿದ ಮಹಾಲಿಂಗ ನಾಯ್ಕ ಅವರು ಪ್ರಶಸ್ತಿಗೆ ಆಯ್ಕೆಯಾಗಿದ್ದರು. ಇಧಿಗ ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ರಾಮ್ ನಾಥ್ ಕೋವಿಂದ್ ಅವರಿಂದ ಪದ್ಮಶ್ರೀ ಪ್ರಶಸ್ತಿ ಪಡೆದುಕೊಂಡರು. ಈ ವೇಳೆ ಮಹಾಲಿಂಗ ನಾಯ್ಕ ಅವರು ಮುಟ್ಟಾಳೆ ಧರಿಸಿರುವುದು ಎಲ್ಲರ ಗಮನ ಸೆಳೆದಿದೆ.

    ಮಹಾಲಿಂಗ ನಾಯ್ಕ ಅವರು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಡ್ಯನಡ್ಕ ಸಮೀಪದ ಅಮೈ ನಿವಾಸಿ. 27 ವರ್ಷದ ಮಹಾಲಿಂಗ ನಾಯ್ಕ ಅವರು ಕೃಷಿಗೆ ನೀರು ಹಾಯಿಸಲು ಪಂಪ್ ಸೆಟ್‍ಗಳ ಸೌಲಭ್ಯಗಳೇ ಇಲ್ಲದ ಕಾಲದಲ್ಲಿ ಸುರಂಗ ನೀರಿನ ವ್ಯವಸ್ಥೆಯ ಮೊರೆ ಹೋದರು. ಹೀಗೆ ವಿದ್ಯುತ್ ರಹಿತವಾಗಿ ಗುರುತ್ವದ ನೆರವಿನಲ್ಲಿ ಕೃಷಿಗೆ ತುಂತುರು ನೀರಾವರಿ, ಸ್ಪ್ರಿಂಕ್ಲರ್ ನೀರಿನ ವ್ಯವಸ್ಥೆಯನ್ನು ಕಲ್ಪಿಸುವ ಮೂಲಕ ಮನೆ ಮಾತಾದರು.

    6 ಸುರಂಗ ಕೊರೆದರೂ ಮಹಾಲಿಂಗ ನಾಯ್ಕ ಅವರಿಗೆ ನೀರು ಸಿಕ್ಕಿರಲಿಲ್ಲ. ಆದರೂ ತನ್ನ ಪ್ರಯತ್ನ ಬಿಡದ ಅವರು 7 ಸುರಂಗ ಕೊರೆದೇ ಬಿಟ್ಟರು. ಈ ವೇಳೆ ಅವರ ಪ್ರಯತ್ನ ಯಶಸ್ಸು ದೊರಕಿತ್ತು. ಇದೀಗ ಇವರ ಈ ಸಾಧನೆಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಇದನ್ನೂ ಓದಿ: ಸುರಂಗ ಕೊರೆದು ನೀರು ಹರಿಸಿದ ಮಹಾಲಿಂಗ ನಾಯ್ಕರಿಗೆ ಪದ್ಮಶ್ರೀ

    ಇವರ ಜೊತೆಗೆ ಧಾರವಾಡ ಜಿಲ್ಲೆ ಅಣ್ಣಿಗೇರಿಯ ಅಬ್ದುಲ್ ಖಾದರ್ ನಡಕಟ್ಟಿನ, ಶಿವಮೊಗ್ಗದ ಹೆಚ್. ಆರ್ ಕೇಶವಮೂರ್ತಿ, ಮಾಜಿ ಮುಖ್ಯಮಂತ್ರಿ ದಿ. ಕಲ್ಯಾಣ್ ಸಿಂಗ್, ಭಾರತ್ ಬಯೋಟೆಕ್‍ನ ಕೃಷ್ಣ ಎಲ್ಲಾ ದಂಪತಿ, , ನಟಿ ಸಾಹುಕಾರ್ ಜಾನಕಿ, ಗಾಯಕ ಸೋನು ನಿಗಂ, ಒಲಿಂಪಿಕ್ ವಿಜೇತ ಕ್ರೀಡಾಪಟು ನೀರಜ್ ಚೋಪ್ರಾ ಸೇರಿದಂತೆ ಒಟ್ಟು 74 ಗಣ್ಯರಿಗೆ ಪದ್ಮ ಪ್ರದಾನ ಮಾಡಲಾಯಿತು.

  • ಇನ್ಮುಂದೆ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಹಾಕುವಂತಿಲ್ಲ: ಸುನಿಲ್ ಕುಮಾರ್

    ಇನ್ಮುಂದೆ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಹಾಕುವಂತಿಲ್ಲ: ಸುನಿಲ್ ಕುಮಾರ್

    ಮಂಗಳೂರು: ಮುಂದಿನ ವರ್ಷದಿಂದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿಗಳನ್ನು ಪಡೆಯದೆ, ಆಯ್ಕೆ ಸಮಿತಿಯನ್ನು ರಚಿಸಿ ಸಾಧಕರನ್ನು ಗುರುತಿಸಿ ಪ್ರಶಸ್ತಿ ನೀಡಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ತಿಳಿಸಿದರು.

    ಸನ್ಮಾನ ಕಾರ್ಯಕ್ರಮದಲ್ಲಿ ಪದ್ಮಶ್ರೀ ಪುರಸ್ಕೃತ ಮಹಾಲಿಂಗ ನಾಯ್ಕ ಅವರನ್ನು ಸನ್ಮಾನಿಸಿ ಮಾತನಾಡಿದ ಅವರು, ಪ್ರಶಸ್ತಿಗಾಗಿ ನಾವು ಎಂದು ಹುಡುಕಿಕೊಂಡು ಹೋಗಬಾರದು, ಪ್ರಶಸ್ತಿ ಸಾಧಕರನ್ನು ಗುರುತಿಸಿ ನೀಡುವಂತಾಗಬೇಕು. ಆ ನಿಟ್ಟಿನಲ್ಲಿ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಹ ಸಾಧಕರ ಆಯ್ಕೆ ನಡೆಯಲಿದೆ ಎಂದು ಹೇಳಿದರು.

    ನಾಡಿನೆಲ್ಲಡೆ ನೀರಿಗಾಗಿ ಗಲಾಟೆ, ಸಂಘರ್ಷ, ನ್ಯಾಯಾಲಯದ ಮೆಟ್ಟಿಲೇರುವ ಈ ಸಂದರ್ಭದಲ್ಲಿ ಮಹಾಲಿಂಗ ನಾಯ್ಕರ ಸಾಧನೆ ಯುವ ಪೀಳಿಗೆಗೆ ಪ್ರೇರಣೆಯಾಗಿದೆ. ನೀರಿನ ಸಮಸ್ಯೆಯನ್ನು ಎದುರಿಸುತ್ತಿರುವ ಈ ಸಂದರ್ಭದಲ್ಲಿ ದೇಶದ ಜನರನ್ನು ಕಣ್ತೆರೆಸುವಲ್ಲಿ ಈ ಪ್ರಶಸ್ತಿ ಅರ್ಹವಾಗಿಯೇ ಮಹಾಲಿಂಗ ನಾಯ್ಕರನ್ನು ಹುಡುಕಿಕೊಂಡು ಬಂದಿದೆ ಎಂದರು.

    ಮಹಾಲಿಂಗ ನಾಯ್ಕರದ್ದು ಮೌನ ಕ್ರಾಂತಿ. ಅವರು ವಾಸವಿದ್ದ ಗುಡ್ಡದಲ್ಲಿ ಬಾವಿ ತೋಡಿ ನೀರು ಸಿಗದಿದ್ದಾಗ ಅವರು ವಿಚಲಿತರಾಗದೆ ನಿರಂತರ ಶ್ರಮದಿಂದ ಅವರು ಕಲಿಯುಗದಲ್ಲಿ ಸುರಂಗವನ್ನು ಕೊರೆದು ಗಂಗೆಯನ್ನು ಭೂಮಿಗೆ ತರಿಸಿದ ಸಾಧನೆ ಎಲ್ಲರಿಗೂ ಸ್ಫೂರ್ತಿಯಾಗಿದೆ. ಇಂತಹ ಭಗೀರಥರನ್ನು ಕೇಂದ್ರ ಸರ್ಕಾರ ಗುರುತಿಸಿ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿರುವುದು ಸಂತೋಷದ ವಿಷಯ ಎಂದರು.

    ಸನ್ಮಾನ ಸ್ವೀಕರಿಸಿ ಮಾತನಾಡಿದ ಮಹಾಲಿಂಗ ನಾಯ್ಕ ಅವರು, ಇಂದು ನೀರಿಗಾಗಿ ಸಮಸ್ಯೆಗಳು ಹೆಚ್ಚಾಗುತ್ತಿರುವಂತೆಯೇ ಮುಂದಿನ ದಿನಗಳಲ್ಲಿ ನೀರು ಬಂಗಾರಕ್ಕಿಂತಲೂ ಹೆಚ್ಚು ಬೆಲೆ ಬಾಳಲಿದೆ. ಅದಕ್ಕಾಗಿ ನೀರಿನ ಮಹತ್ವವನ್ನು ಅರಿತು ಸಾರ್ವಜನಿಕರು ಮಿತವಾಗಿ ಉಪಯೋಗಿಸಬೇಕು ಎಂದು ತಿಳಿಸಿದರು. ಇದನ್ನೂ ಓದಿ: ಲತಾ ಮಂಗೇಶ್ಕರ್‌ ಹಾಡು ಕೇಳಿ ವೇದಿಕೆಯಲ್ಲಿ ಕಣ್ಣೀರು ಹಾಕಿದ್ರು ಜವಾಹರ್‌ಲಾಲ್‌ ನೆಹರೂ

    ಶಾಸಕ ವೇದವ್ಯಾಸ ಕಾಮತ್, ಶಾರದಾ ವಿದ್ಯಾಲಯದ ಮುಖ್ಯಸ್ಥ ಎಂ.ಬಿ. ಪುರಾಣಿಕ್, ಮೇಯರ್ ಪ್ರೇಮಾನಂದ ಶೆಟ್ಟಿ, ಕಸಾಪ ಮಾಜಿ ಜಿಲ್ಲಾಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಸುಧಾಕರ ರಾವ್ ಪೇಜಾವರ ಉಪಸ್ಥಿತರಿದ್ದರು. ಇದನ್ನೂ ಓದಿ: ಲತಾ ಮಂಗೇಶ್ಕರ್‌ರ ಮೊದಲ ಹಾಡನ್ನು ಸಿನಿಮಾದಿಂದ ತೆಗೆಯಲಾಗಿತ್ತು – ನೀವು ತಿಳಿಯಲೇಬೇಕಾದ 10 ಸಂಗತಿಗಳು ಇಲ್ಲಿವೆ!

  • ಸುರಂಗ ಕೊರೆದು ನೀರು ಹರಿಸಿದ ಮಹಾಲಿಂಗ ನಾಯ್ಕರಿಗೆ ಪದ್ಮಶ್ರೀ

    ಸುರಂಗ ಕೊರೆದು ನೀರು ಹರಿಸಿದ ಮಹಾಲಿಂಗ ನಾಯ್ಕರಿಗೆ ಪದ್ಮಶ್ರೀ

    ಬೆಂಗಳೂರು: ಕೃಷಿ ಕಾಯಕದ ಮೂಲಕ ಸ್ವಾವಲಂಬಿ, ಕರಾವಳಿ ಭಾಗದ ಭಗೀರಥ ಎಂದೇ ಗುರುತಿಸಿಕೊಂಡ ಬಂಟ್ವಾಳ ತಾಲೂಕಿನ ಅಡ್ಯನಡ್ಕ ಸಮೀಪದ ಅಮೈ ಮಹಾಲಿಂಗ ನಾಯ್ಕ (76) ಅವರು ಕೃಷಿ ಕ್ಷೇತ್ರದ ಸಾಧನೆಗಾಗಿ 2022ನೇ ಸಾಲಿನ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇವರ ಸಾಧನೆಯ ಹಿಂದೆನ ಕಥೆ ರೋಚಕವಾಗಿದೆ.

    ಮಹಾಲಿಂಗ ನಾಯ್ಕ ಕೃಷಿಯೇ ಬದುಕಿಗೆ ಮೂಲಾಧಾರವೆಂಬ ಕಲ್ಪನೆಯನ್ನು ಬಿತ್ತುತ್ತಿರುವ ಸಾಧಕ. ಕೃಷಿ ಕಾಯಕದ ಮೂಲಕ ಸ್ವಾವಲಂಬಿ ಜೀವನ ಸಾಧ್ಯ, ಆಧುನಿಕ ತಲೆಮಾರಿಗೆ ತೋರಿಸಿಕೊಟ್ಟವರು. ಕೃಷಿಗೆ ನೀರು ಹಾಯಿಸಲು ಪಂಪ್ ಸೆಟ್‍ಗಳ ಸೌಲಭ್ಯಗಳೇ ಇಲ್ಲದ ಕಾಲದಲ್ಲಿ ಹಿಂದಿನ ತಲೆಮಾರಿನವರು ಅವಲಂಬಿಸಿದ್ದ ಸುರಂಗ ನೀರಿನ ವ್ಯವಸ್ಥೆಯಲ್ಲಿ ನಂಬಿಕೆ ಇಟ್ಟು, ಇದೇ ವ್ಯವಸ್ಥೆಯಲ್ಲಿ ವಿದ್ಯುತ್ ರಹಿತವಾಗಿ ಗುರುತ್ವಾಕರ್ಷಣೆಯ ನೆರವಿನಲ್ಲಿ ಕೃಷಿಗೆ ತುಂತುರು ನೀರಾವರಿ, ಹನಿ ನೀರಾವರಿ ವ್ಯವಸ್ಥೆಯನ್ನು ಕಲ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ.

    ಸಾಧನೆಯ ಹಿನ್ನೆಲೆ: ಅಡಿಕೆ, ತೆಂಗಿನ ಮರ ಏರುವುದರಲ್ಲಿ ಪರಿಣತಿ ಹೊಂದಿದ್ದ ಕೃಷಿ ಕೂಲಿ ಕಾರ್ಮಿಕರಾಗಿದ್ದ ಮಹಾಲಿಂಗ ನಾಯ್ಕ 40 ವರ್ಷಗಳ ಹಿಂದೆ ಕೃಷಿಕರ ತೋಟಗಳಲ್ಲಿ ದುಡಿಯುವಾಗ ಸ್ವಂತ ತೋಟ ಮಾಡುವ ಸ್ವಾವಲಂಬಿ ಜೀವನದ ಕನಸು ಕಂಡಿದ್ದರು. ಅವರಲ್ಲಿ ಜಮೀನು ಇರಲಿಲ್ಲ. ಭೂಮಾಲೀಕ ಅಮೈ ಮಹಾಬಲ ಭಟ್ಟರ ತೋಟಕ್ಕೆ ದಿನಾ ಕೂಲಿ ಕೆಲಸಕ್ಕೆ ಹೋಗುತ್ತಿದ್ದರು. ಈ ಆದಾಯದಲ್ಲಿ ಅವರ ಸಂಸಾರದ ರಥ ಸಾಗುತ್ತಿತ್ತು. ಒಂದು ದಿನ ಮಹಾಬಲ ಭಟ್ ಅವರು ಮಹಾಲಿಂಗ ನಾಯ್ಕರಿಗೆ ಎರಡು ಎಕರೆ ಜಮೀನು ನೀಡಲು ಒಪ್ಪಿಕೊಂಡರು. 1978ರಲ್ಲಿ ಮಹಾಬಲ ಭಟ್ಟರ ಬೆಂಬಲದಿಂದಾಗಿ ಎರಡು ಎಕರೆ ಗುಡ್ಡ ದರ್ಖಾಸ್ತು ರೂಪದಲ್ಲಿ ಮಹಾಲಿಂಗ ನಾಯ್ಕರಿಗೆ ನೀಡಲಾಗಿತ್ತು.

    ಸುರಂಗ ಕೊರೆದ ಕಥೆ: ಮನೆ ಕಟ್ಟಲು ಅಸಾಧ್ಯವಾದ, ನೀರಿಲ್ಲದ ಇಳಿಜಾರು ಬೋಳು ಗುಡ್ಡದಲ್ಲಿ ಕೃಷಿ ತೋಟ ಮಾಡುವುದು ಮಹಾಲಿಂಗ ನಾಯ್ಕರಿಗೆ ಸವಾಲಾಗಿತ್ತು. ಆದರೂ ಇವರ ಪ್ರಯತ್ನ ಬಿಟ್ಟಿರಲಿಲ್ಲ. ಕುಡಿಯುವ ನೀರಿಗಾಗಿ ಪಕ್ಕದ ಮನೆಯವರನ್ನು ಆಶ್ರಯಿಸಿದ್ದ ಮಹಾಲಿಂಗ ನಾಯ್ಕರಿಗೆ ಬಾವಿ ತೋಡಿಸಲು ಕೈಯಲ್ಲಿ ದುಡ್ಡಿರಲಿಲ್ಲ. ಬಾವಿ ತೋಡಿದರೆ ನೀರು ದೊರೆಯುವ ಸಾಧ್ಯತೆ ಕಡಿಮೆ ಇತ್ತು. ಏಕಾಂಗಿಯಾಗಿ ಬಾವಿ ತೋಡುವುದು ಅಸಾಧ್ಯ ಮಾತು. ಆಗ ಅವರಿಗೆ ಹೊಳೆದದು ಸುರಂಗ ಕೊರೆತ. ಅರ್ಧ ದಿನ ಕೂಲಿ ಕೆಲಸ, ಉಳಿದರ್ಧ ದಿನ ಮತ್ತು ರಾತ್ರಿ ಹೊತ್ತು ಸುರಂಗ ಕೊರೆಯುವ ಮೂಲಕ ಜೀವಜಲ ಹುಡುಕುವ ಪ್ರಯತ್ನವನ್ನು ಮಾಡಲು ಮಂದಾಗಿದ್ದರು. ಇದನ್ನೂ ಓದಿ: ಸಾಲ ವಸೂಲಿಯಲ್ಲೂ ಗುರು ರಾಘವೇಂದ್ರ ಬ್ಯಾಂಕ್ ವಂಚನೆ: ಎಎಪಿ ಆರೋಪ

    30 ಮೀ. ಉದ್ದದ ಸುರಂಗ ಕೊರೆದರೂ ನೀರು ಸಿಗಲಿಲ್ಲ. ಇದರಿಂದ ನಿರಾಸೆಯಾಗದ ಅವರು ಪ್ರಯತ್ನ ಮುಂದುವರಿಸಿ ಸೀಮೆಎಣ್ಣೆ , ತೆಂಗಿನೆಣ್ಣೆ ದೀಪದ ಬೆಳಕಿನಲ್ಲಿ ಪ್ರತಿ ವರ್ಷ ತಲಾ ಒಂದರಂತೆ 25-30 ಮೀಟರ್ ಉದ್ದದ ಸತತ ಐದು ಸುರಂಗಗಳನ್ನು ಕೊರೆದರು. ಪ್ರಯತ್ನಕ್ಕೆ ಫಲ ದೊರೆಯಲಿಲ್ಲ. ಅವರ ಪ್ರಯತ್ನವನ್ನು ನೋಡಿ ಹಲವರು ಗೇಲಿ ಮಾಡಿದ್ದರು. ಮಹಾಲಿಂಗ ನಾಯ್ಕರಿಗೆ ಆರನೇ ಪ್ರಯತ್ನ ಫಲ ನೀಡಿತು.ಇದೀಗ ಕೇಂದ್ರ ಸರ್ಕಾರ ಇವರ ಸಾಧನೆಗೆ ಮೆಚ್ಚಿ 2022ನೇ ಸಾಲಿನ ಪದ್ಮಶ್ರೀ ಪ್ರಶಶ್ತಿಯನ್ನು ನೀಡಿ ಗೌರವಿಸುತ್ತಿದೆ.  ಇದನ್ನೂ ಓದಿ: ಬಿಪಿನ್‌ ರಾವತ್‌ಗೆ ಪದ್ಮವಿಭೂಷಣ – ರಾಜ್ಯದ ಐವರಿಗೆ ಪದ್ಮಶ್ರೀ

    ಆರನೇ ಸುರಂಗದ ಪಕ್ಕದಲ್ಲಿ ಇನ್ನೊಂದು ಸುರಂಗ ಕೊರೆದರು. 25 ಮೀ. ತಲುಪುವಾಗ ನೀರು ಕಾಣಿಸಿಕೊಂಡಿತು. ಮತ್ತೆ ಮುಂದುವರಿಸಿ 75 ಮೀ. ಉದ್ದದ ಸುರಂಗವಾಗುವ ಹೊತ್ತಿಗೆ ಯೆಥೇಚ್ಛ ನೀರು ಸಿಕ್ಕಿತು. ಆಗ ಅವರ ತೋಟದ ಕನಸು ಮತ್ತೆ ಗರಿಗೆದರಿತು. ಸುರಂಗದ ನೀರನ್ನು ಸಂಗ್ರಹಿಸಲು ಮಣ್ಣಿನ ಟ್ಯಾಂಕ್ ನಿರ್ಮಿಸಿದರು. ನೀರಿನ ಸಂಪನ್ನತೆಯಿಂದಾಗಿ ತೋಟ ಮಾಡುವ ಕನಸು ನನಸಾಯಿತು. ಗುಡ್ಡವನ್ನು ಸಮತಟ್ಟು ಮಾಡಿ ಭತ್ತ, ಅಡಕೆ, ತೆಂಗು, ಬಾಳೆ ಕೃಷಿ ಕೈಗೊಂಡರು. ಮಡದಿ ಲಲಿತ ಮೂವರು ಮಕ್ಕಳು ಪ್ರಯತ್ನಕ್ಕೆ ಕೈಜೋಡಿಸಿದ್ದಾರೆ.