Tag: Mahantesh

  • ವಿದ್ಯಾಕಾಶಿ ಜನರಿಗೆ ದೇವಸ್ಥಾನ ಕಟ್ಟಿಸೋದಾಗಿ ಹೇಳಿ ಹಣ ಪಡೆದಿದ್ದ ಚಂದ್ರಶೇಖರ್ ಗುರೂಜಿ ಹಂತಕ

    ವಿದ್ಯಾಕಾಶಿ ಜನರಿಗೆ ದೇವಸ್ಥಾನ ಕಟ್ಟಿಸೋದಾಗಿ ಹೇಳಿ ಹಣ ಪಡೆದಿದ್ದ ಚಂದ್ರಶೇಖರ್ ಗುರೂಜಿ ಹಂತಕ

    ಧಾರವಾಡ: ಸರಳವಾಸ್ತು ಚಂದ್ರಶೇಖರ್ ಗುರೂಜಿ ಕೊಲೆ ನಡೆದು ಇಂದಿಗೆ ನಾಲ್ಕು ದಿನ ಕಳೆದಿವೆ. ಈಗಾಗಲೇ ಆರೋಪಿಗಳಾದ ಮಹಾಂತೇಶ್ ಹಾಗೂ ಮಂಜುನಾಥ್ ಪೊಲೀಸ್ ಕಸ್ಟಡಿಯಲ್ಲಿದ್ದು, ತನಿಖೆ ಎದುರಿಸುತ್ತಿದ್ದಾರೆ. ಇಷ್ಟರಲ್ಲೇ ಕೊಲೆಗಾರ ಮಂಜುನಾಥ್ ಮರೇವಾಡ ಬಗ್ಗೆ ಇನ್ನು ಹಲವು ಅಂಶ ಬೆಳಕಿಗೆ ಬಂದಿದ್ದು, ಆತ ವಿದ್ಯಾಕಾಶಿ ಧಾರವಾಡದಲ್ಲಿ ಬಿಲ್ಡಿಂಗ್ ಕಟ್ಟುವ ಗುತ್ತಿಗೆ ಪಡೆಯುತ್ತಿದ್ದ ಎಂದು ತಿಳಿದುಬಂದಿದೆ.

    ನಗರದ ಸಿದ್ಧಾರೂಢ ಕಾಲೋನಿಯಲ್ಲಿ ಒಡೆಯರ್ ಹಾಗೂ ಹಂಚನಾಳ ಮನೆಗಳನ್ನ ಕಟ್ಟುವ ಗುತ್ತಿಗೆ ಪಡೆದಿದ್ದ ಕೊಲೆಗಾರ ಮಂಜುನಾಥ್ ಮರೇವಾಡ, ಹಂಚಿನಾಳ ಅವರಿಂದ 13 ಲಕ್ಷ ಹಣ ಪಡೆದಿದ್ದಾನೆ. ಆದರೆ ಅವರ ಮನೆಯ 6 ಲಕ್ಷ ರೂ.ಗಷ್ಟೇ ಕೆಲಸ ಮಾಡಿದ್ದಾನೆ. ಅಲ್ಲದೇ ಒಡೆಯರ್ ಎನ್ನುವವರ ಮನೆಯ ಕೆಲಸ ಕೂಡಾ ಅರ್ಧಕ್ಕೆ ನಿಂತಿದೆ. ಇದೇ ಕಾಲೋನಿಯಲ್ಲಿ ಹಲವು ಬಿಲ್ಡಿಂಗ್ ಕೆಲಸ ಮಾಡಿದ್ದಕ್ಕೆ, ಇವನಿಗೆ ಕಾಲೋನಿಯಲ್ಲಿ ಸಿದ್ಧಾರೂಢರ ದೇವಸ್ಥಾನ ಕಟ್ಟುವ ಗುತ್ತಿಗೆ ಕೂಡಾ ನೀಡಲಾಗಿದೆ. ಇದನ್ನೂ ಓದಿ:  ವೀರ ಮದಕರಿ ನಾಯಕ ಬಗ್ಗೆ ಆಕ್ಷೇಪಾರ್ಹ ಕಾಮೆಂಟ್ – ಪ್ರೋಫೆಸರ್ ಕ್ಷಮೆಯಾಚನೆ 

    ಕಳೆದ ನಾಲ್ಕು ತಿಂಗಳ ಹಿಂದೆ 5 ಲಕ್ಷಕ್ಕೆ ದೇವಸ್ಥಾನ ಕಟ್ಟಿಸಿ ಕೊಡಬೇಕು ಎಂದು ಗಡುವನ್ನು ನೀಡಿ 50 ಸಾವಿರ ಮುಂಗಡ ಹಣ ಕೂಡಾ ಕೊಡಲಾಗಿದೆ. ಆದರೆ ಈತ ಗುರೂಜಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದು, ಈ ಹಣ ಕೊಟ್ಟವರಿಗೆ ದೊಡ್ಡ ಸಂಕಷ್ಟ ಬಂದು ಒದಗಿದೆ. ಅಲ್ಲದೇ ಕೆಲ ಕಾರ್ಮಿಕರ ಸಂಬಳ ಕೂಡಾ ಈತ ನೀಡಬೇಕಾಗಿದ್ದು, ಅದೂ ಕೂಡಾ ಮಂಜುನಾಥ್ ಉಳಿಸಿಕೊಂಡಿದ್ದಾನೆ.

    ಮಂಜುನಾಥ್ ಮರೇವಾಡ ಜೈಲು ಸೇರಿದ ಮೇಲೆ ಯಾವಾಗ ಅವನು ಅಲ್ಲಿಂದ ಬಿಡುಗಡೆಯಾಗಿ ಬಂದು ನಮ್ಮ ಕೆಲಸ ಮುಗಿಸಿಕೊಡಬೇಕು, ಯಾವಾಗ ನಾವು ಆ ಮನೆಯಲ್ಲಿ ಇರಬೇಕು ಎಂದು ಮನೆ ಗುತ್ತಿಗೆ ಕೊಟ್ಟ ಮಾಲೀಕರು ಮಾತನಾಡಿಕೊಳ್ಳುತ್ತಿದ್ದಾರೆ. ಅಲ್ಲದೇ ದೇವಸ್ಥಾನದ ಕೆಲಸ ಕೂಡಾ ಇದೇ ರೀತಿಯಾಗಿದೆ ಎಂಬ ಮಾತುಗಳು ಹೇಳಿ ಬರುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಗುರೂಜಿಯನ್ನು ನಾವು ದೇವರಂತೆ ಕಾಣುತ್ತಿದ್ದೆವು: ವನಜಾಕ್ಷಿ

    ಗುರೂಜಿಯನ್ನು ನಾವು ದೇವರಂತೆ ಕಾಣುತ್ತಿದ್ದೆವು: ವನಜಾಕ್ಷಿ

    ಹುಬ್ಬಳ್ಳಿ: ಗುರೂಜಿ ಅವರನ್ನು ದೇವರಂತೆ ಕಾಣುತ್ತಿದ್ದೆವು ಎಂದು ಹೇಳುವ ಮೂಲಕ ಸರಳವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಭೀಕರ ಹತ್ಯೆಗೆ ಹಂತಕ ಮಹಾಂತೇಶ್ ಶಿರೂರು ಪತ್ನಿ ವನಜಾಕ್ಷಿ ಮರುಕ ವ್ಯಕ್ತಪಡಿಸಿದ್ದಾರೆ.

    ಹುಬ್ಬಳ್ಳಿಯಲ್ಲಿ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಹಂತಕ ಮಹಾಂತೇಶ್ ಶಿರೂರು ಪತ್ನಿ ವನಜಾಕ್ಷಿ ಅವರು, ನನ್ನ ಪತಿ ಹೀಗೆ ಮಾಡುತ್ತಾರೆ ಎಂದು ಕನಸ್ಸಿನಲ್ಲಿಯೂ ಕೂಡ ಅಂದುಕೊಂಡಿರಲಿಲ್ಲ. ಗುರೂಜಿ ನಮ್ಮನ್ನು ಬಹಳ ಚೆನ್ನಾಗಿ ನೋಡಿಕೊಂಡಿದ್ದರು. ಕೆಲಸ ಮಾಡುವ ಪ್ರತಿಯೊಬ್ಬರನ್ನು ಕೂಡ ಬಹಳ ಪ್ರೀತಿಯಿಂದ ನೋಡಿಕೊಳ್ಳುತ್ತಿದ್ದರು. ಇಲ್ಲಿವರೆಗೂ ಯಾವತ್ತು ಯಾರಿಗೂ ಗುರೂಜಿ ಮೋಸ ಮಾಡಿಲ್ಲ ಎಂದಿದ್ದಾರೆ.  ಇದನ್ನೂ ಓದಿ: ಸರಳವಸ್ತು ಗುರೂಜಿ ಹೆಸರು ಹೇಳಿ ಆಸ್ತಿ ಮಾಡಲು ಮುಂದಾಗಿದ್ದ ಹಂತಕರು

    ಗುರೂಜಿ ನಮ್ಮ ಮನೆಯ ದೇವರು, ನಮ್ಮ ತಂದೆ ತರಹ. ಗುರೂಜಿ ನನಗೆ ಯಾವುದೇ ಆಸ್ತಿ ನೀಡಿಲ್ಲ. ಅಪಾರ್ಟ್‍ಮೆಂಟ್ ಕೂಡ ಗುರೂಜಿ ಅವರ ಹೆಸರಿನಲ್ಲಿದೆ. ಆದರೆ ಒಂದು ಫ್ಲಾಟ್ ಮಾತ್ರ ನಮ್ಮದಾಗಿದೆ. ಅದನ್ನು 20 ಲಕ್ಷ ರೂಪಾಯಿ ಸಾಲ ಮಾಡಿ ಖರೀದಿಸಿದ್ದೇವೆ. ನನ್ನ ಮತ್ತು ಗಂಡನ ಹೆಸರಿನಲ್ಲಿ ಯಾವುದೇ ಬೇನಾಮಿ ಆಸ್ತಿ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: 60 ಬಾರಿ ಚುಚ್ಚಿ ಚುಚ್ಚಿ ಕೊಂದ ಪಾತಕಿಗಳು- ಬುಧವಾರ ಹುಬ್ಬಳ್ಳಿಯಲ್ಲೇ ಚಂದ್ರಶೇಖರ್ ಗುರೂಜಿ ಅಂತ್ಯಕ್ರಿಯೆ

    ಈ ಘಟನೆಗೂ ಮುನ್ನ ಕೆಲಸದ ನಿಮಿತ್ತ ಹೊರಗೆ ಹೋಗಿದ್ದ ನನ್ನ ಪತಿ 3 ದಿನದಿಂದ ಮನೆಗೆ ಬಂದಿರಲಿಲ್ಲ. ಹತ್ಯೆ ಮಾಡುವ ಮಟ್ಟಿಗೆ ನನ್ನ ಗಂಡ ಇಳಿಯುತ್ತಾನೆಂದು ಅಂದುಕೊಂಡಿರಲಿಲ್ಲ ಅಂತ ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಪಿಎಸ್‌ಐ ಪರೀಕ್ಷೆಯಲ್ಲಿ ಅಕ್ರಮ – ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಅರೆಸ್ಟ್‌

    ಪಿಎಸ್‌ಐ ಪರೀಕ್ಷೆಯಲ್ಲಿ ಅಕ್ರಮ – ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಅರೆಸ್ಟ್‌

    ಕಲಬುರಗಿ: ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌(ಪಿಎಸ್‌ಐ) ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ನಾಯಕನೊಬ್ಬನನ್ನು ಸಿಐಡಿ ಬಂಧಿಸಿದೆ.

    ಅಫಜಲಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಾಂತೇಶ್ ಪಾಟೀಲ್ ಬಂಧಿತ ಆರೋಪಿ. ಈ ಮೂಲಕ ಈ ಅಕ್ರಮ ಪ್ರಕರಣ ಕಾಂಗ್ರೆಸ್‌ ಬುಡಕ್ಕೂ ಬಂದಿದೆ. ಬ್ಲೂಟೂತ್ ಡಿವೈಸ್ ಬಳಕೆ ಮಾಡಿ ಪರೀಕ್ಷೆ ಬರೆಸುವಲ್ಲಿ ಅಕ್ರಮ ಎಸಗಿದ್ದ ಈತನನ್ನು ಅಫಜಲಪುರ ಪಟ್ಟಣದ ನ್ಯಾಷನಲ್ ಫಂಕ್ಷನ್ ಹಾಲ್‌ನಲ್ಲಿ ಬಂಧಿಸಲಾಗಿದೆ.  ಇದನ್ನೂ ಓದಿ: 35 ಲಕ್ಷ ಪಾವತಿ ಮಾಡಿ 5 ಲಕ್ಷ ಸಿಗದೇ ಪೇಚಾಡಿದ – ಆಪ್ತ ಸ್ನೇಹಿತನಿಂದಲೇ ಪಿಎಸ್‌ಐ ಅಕ್ರಮ ಲೀಕ್‌ ಆಗಿದ್ದು ಹೇಗೆ?

    ಮಹಾಂತೇಶ್‌ ಪಾಟೀಲ್ ಕಾಂಗ್ರೆಸ್ ಅವಧಿಯಲ್ಲಿ ಹಲವು ಉನ್ನತ ಸ್ಥಾನ ಪಡೆದಿದ್ದ. ಈ ಹಿಂದೆ ಸಿದ್ದರಾಯ್ಯ ಸರ್ಕಾರದ ಅವಧಿಯಲ್ಲಿ ಹಿಂದುಳಿದ ವರ್ಗಗಗಳ ಶಾಶ್ವತ ಆಯೋಗದ ಸದಸ್ಯನಾಗಿದ್ದ.

    ಶನಿವಾರ ಮಹಾಂತೇಶ್‌ ಪಾಟೀಲ್ ಹಾಗೂ ಆತನ ಸಹೋದರ ಆರ್.ಡಿ.ಪಾಟೀಲ್ 101 ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಇದನ್ನೂ ಓದಿ: PSI ಅಕ್ರಮ ನೇಮಕಾತಿ: ಎಂಎಲ್‌ಎ ಮುಂದೆಯೇ ಗನ್‌ಮ್ಯಾನ್ ಅರೆಸ್ಟ್

    ಮಹಾಂತೇಶ್‌ ಪಾಟೀಲ್ ಬಂಧನ ಮಾಡುವ ವೇಳೆ ಹೈಡ್ರಾಮಾ ಮಾಡಿದ್ದಾನೆ. ನಮ್ಮ ಹಿಂದೆ ಕಾಂಗ್ರೆಸ್‌ ನಾಯಕರಿದ್ದಾರೆ. ಅರೆಸ್ಟ್‌ ಮಾಡುವ ಮುನ್ನ ಎಚ್ಚರ ಎಂದು ಸಿಐಡಿ ಪೊಲೀಸರಿಗೆ ಅವಾಜ್‌ ಹಾಕಿದ್ದಾನೆ.

    ಇದರಿಂದ ಆಕ್ರೋಶಗೊಂಡ ಡಿವೈಎಸ್‌ಪಿ ಶಂಕರಗೌಡ, ಆರೋಪಿ ಮಹಾಂತೇಶ್‌ ಪಾಟೀಲ್ ಕೊರಳ ಪಟ್ಟಿ ಹಿಡಿದು ಎಳೆದುಕೊಂಡು ಹೋಗಿದ್ದಾರೆ. ಕಲಬುರಗಿ ನಗರದ ಐವಾನ್ ಏ ಶಾಹಿ ಅತಿಥಿ ಗೃಹದಲ್ಲಿರುವ ಸಿಐಡಿ ಕಚೇರಿಗೆ ಮಹಾಂತೇಶ್‌ ಪಾಟೀಲ್‌ನನ್ನು ಕರೆತಂದು ವಿಚಾರಣೆ ನಡೆಸುತ್ತಿದ್ದಾರೆ.

  • ಬಿಜೆಪಿ ಅಧಿಕೃತ ಸಭೆ ಅಲ್ಲ ಎಂದಿದ್ದ ಬಾಲಚಂದ್ರ ಜಾರಕಿಹೊಳಿಗೆ ಕತ್ತಿ ಟಾಂಗ್

    ಬಿಜೆಪಿ ಅಧಿಕೃತ ಸಭೆ ಅಲ್ಲ ಎಂದಿದ್ದ ಬಾಲಚಂದ್ರ ಜಾರಕಿಹೊಳಿಗೆ ಕತ್ತಿ ಟಾಂಗ್

    ಚಿಕ್ಕೋಡಿ: ಬೆಳಗಾವಿ ಬಿಜೆಪಿ ಪಾಳಯದಲ್ಲಿ ಗುಂಪು ರಾಜಕಾರಣ ನಡೆಯುತ್ತಿದೆ ಎಂಬುದು ಮತ್ತೆ-ಮತ್ತೆ ಸಾಬೀತಾಗುತ್ತಿದೆ. ಇದಕ್ಕೆ ಸಾಕ್ಷಿ ಎನ್ನುವಂತೆ ಸಚಿವ ಉಮೇಶ್ ಕತ್ತಿ ಮನೆಯಲ್ಲಿ ನಡೆದಿದ್ದ ಸಭೆ ಬಿಜೆಪಿ ಅಧಿಕೃತ ಸಭೆ ಅಲ್ಲ ಎಂದು ಬಾಲಚಂದ್ರ ಜಾರಕಿಹೊಳಿ ಹೇಳಿದ್ದರು. ಅದಕ್ಕೆ ಕತ್ತಿ ಅವರು ಟಾಂಗ್ ಕೊಟ್ಟಿದ್ದಾರೆ.

    ಬೆಳಗಾವಿ ಜಿಲ್ಲೆಯ ಸಂಕೇಶ್ವರ ಪಟ್ಟಣದಲ್ಲಿ 16 ಕೋಟಿ ರೂ. ಗಳ ವಿವಿಧ ಕಾಮಗಾರಿಗೆ ಚಾಲನೆ ನೀಡಿದ ಬಳಿಕ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಬೆಳಗಾವಿಯಲ್ಲಿ ಜಾರಕಿಹೊಳಿ ಸಹೋದರರನ್ನ ಬಿಟ್ಟು ನಡೆಸಿದ ರಹಸ್ಯ ಸಭೆಯ ಕುರಿತು ಸ್ಪಷ್ಟನೆ ನೀಡಿದ್ದಾರೆ. ಸಭೆಯಲ್ಲಿ ಬಿಜೆಪಿ ಅವರು ಇದ್ರೆ ಅದು ಅಧಿಕೃತ ಬಿಜೆಪಿ ಸಭೆ. ನಾನು ರಾಜ್ಯದ ಸಚಿವ, ಶಾಸಕ ಹಾಗಾಗಿ ಇದೇ ಬಿಜೆಪಿ ಅಧಿಕೃತ ಸಭೆ ಎಂದು ಟಾಂಗ್ ನೀಡಿದ್ದಾರೆ. ಇದನ್ನೂ ಓದಿ: ಬೆಳಗಾವಿಯ ಗೌಪ್ಯ ಸಭೆ ಬಿಜೆಪಿ ಅಧಿಕೃತ ಸಭೆಯಲ್ಲ: ಬಾಲಚಂದ್ರ ಜಾರಕಿಹೊಳಿ

    ಸಭೆಯಲ್ಲಿ ಪರಿಷತ್ ಚುನಾವಣೆ ಸೋಲಿನ ಕಾರಣಕ್ಕೆ ಹುಡುಕಾಟ ಮಾಡಿದ್ದು, ನಮ್ಮ ಅಭ್ಯರ್ಥಿ ಚುನಾವಣೆಯಲ್ಲಿ ಸೋತಿದ್ದೇಕೆ ಎಂದು ಚರ್ಚೆ ಮಾಡಿದ್ದೇವೆ. ಮುಂಬರುವ ಜಿಲ್ಲೆ ಪಂಚಾಯ್ತಿ ಹಾಗೂ ತಾಲೂಕು ಪಂಚಾಯ್ತಿ ಅಭ್ಯರ್ಥಿಗಳ ಹುಡುಕಾಟಕ್ಕೆ ಸಭೆ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.

    ಪಕ್ಷ ಸಂಘಟನೆ ದೃಷ್ಟಿಯಿಂದ ಸಭೆ ಮಾಡಲಾಗಿದ್ದು, ಸಭೆಯಲ್ಲಿ ಬಂದವರು, ಬಾರದೇ ಇದ್ದವರು ಯಾರೂ ದೊಡ್ಡವರಲ್ಲ. ಪರಿಷತ್ ಪರಾಜಿತ ಅಭ್ಯರ್ಥಿ ಮಹಾಂತೇಶ್ ಕವಟಗಿಮಠ ಎಲ್ಲರನ್ನೂ ಸೇರಿಸುವ ಕೆಲಸ ಮಾಡಿದ್ದರು ಎಂದು ವಿವರಿಸಿದ್ದಾರೆ. ಇದನ್ನೂ ಓದಿ:  ಅಖಿಲೇಶ್ ಆಡಳಿತದಲ್ಲಿ ಗಲಭೆ, ಗೂಂಡಾಗಿರಿ, ವಲಸೆ ಹೆಚ್ಚಿತ್ತು: ಕೇಶವ್ ಪ್ರಸಾದ್ ಮೌರ್ಯ

    ಮಹಾಂತೇಶ್ ಅವರು ಯಾರನ್ನ ಕರೆದರು, ಯಾರನ್ನ ಬಿಟ್ಟಿದ್ದಾರೆ ಎನ್ನುವುದು ನನಗೆ ಗೊತ್ತಿಲ್ಲ. ಬಂದವರೆಲ್ಲ ಸೇರಿ ಪಕ್ಷ ಸಂಘಟನೆ ಕುರಿತು ಚರ್ಚೆ ಮಾಡಿದ್ದೇವೆ. ಸಂಪುಟ ವಿಸ್ತರಣೆ ಸಿಎಂ ಬೊಮ್ಮಾಯಿ ವಿವೇಚನೆಗೆ ಬಿಟ್ಟಿದ್ದು ಎಂದು ತಿಳಿಸಿದ್ದಾರೆ.