Tag: mahantesh bilagi

  • ದಾವಣಗೆರೆಯಲ್ಲಿ ಒಂದೇ ದಿನ 21 ಮಂದಿಗೆ ಕೊರೊನಾ

    ದಾವಣಗೆರೆಯಲ್ಲಿ ಒಂದೇ ದಿನ 21 ಮಂದಿಗೆ ಕೊರೊನಾ

    -ಕೊರೊನಾ ಹೊಡೆತಕ್ಕೆ ನಲುಗಿದ ಬೆಣ್ಣೆ ನಗರಿ

    ದಾವಣಗೆರೆ: ಬೆಣ್ಣೆ ನಗರಿ ದಾವಣಗೆರೆಯಲ್ಲಿ ಇಂದು ಒಂದೇ ದಿನ 21 ಜನರಿಗೆ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿದೆ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 31ಕ್ಕೆ ಏರಿಕೆಯಾಗಿದೆ. ಕೊರೊನಾ ಹೊಡೆತಕ್ಕೆ ದಾವಣಗೆರೆ ಜನ ಆತಂಕಕ್ಕೆ ಒಳಗಾಗಿದ್ದಾರೆ. ಇಂದು ಬೆಳಗ್ಗೆ 5 ಪ್ರಕರಣಗಳು ಬೆಳಕಿಗೆ ಬಂದಿದ್ದವು. ದಾವಣಗೆರೆಯ 21 ಪ್ರಕರಣ ಸೇರಿದಂತೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 627ಕ್ಕೆ ಏರಿಕೆಯಾಗಿದೆ.

    ಜಿಲ್ಲಾಡಳಿತ ಕಳುಹಿಸಿದ 94 ಸ್ಯಾಂಪಲ್ ಗಳ ಪೈಕಿ 21 ಮಂದಿಗೆ ಸೋಂಕು ತಗುಲರೋದು ದೃಢಪಟ್ಟಿದೆ. ಜಿಲ್ಲೆಯಲ್ಲಿ ಸಂಖ್ಯೆ 31ಕ್ಕೆ ಏರಿಕೆಯಗಿದೆ. ಯಾರಿಂದ ಈ 21 ಮಂದಿಗೆ ಸೋಂಕು ತಗುಲಿದೆ ಎಂಬುದರ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತಿಳಿಸಿದ್ದಾರೆ.

    ರಾಜ್ಯ ಆರೋಗ್ಯ ಇಲಾಖೆ ಬೆಳಗ್ಗೆ ಬಿಡುಗಡೆ ಮಾಡಿದ ಬುಲೆಟಿನ್ ಪ್ರಕಾರ, ಇಂದು ಕಲಬುರಗಿಯ ಮೂವರಿಗೆ, ಬಾಗಲಕೋಟೆಯ ಇಬ್ಬರಿಗೆ ಸೋಂಕು ತಗುಲಿರುವುದು ಪತ್ತೆಯಾಗಿತ್ತು. ಅವರನ್ನು ಈಗಾಗಲೇ ಪ್ರತ್ಯೇಕವಾಗಿರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

  • ಪುಂಡಪೋಕರಿಗಳಿಗೆ ಪಾಸ್ ಕೊಟ್ಟಿಲ್ಲ: ಮೇಯರ್-ಡಿಸಿ ನಡುವೆ ಫೈಟ್

    ಪುಂಡಪೋಕರಿಗಳಿಗೆ ಪಾಸ್ ಕೊಟ್ಟಿಲ್ಲ: ಮೇಯರ್-ಡಿಸಿ ನಡುವೆ ಫೈಟ್

    – ನಾನು ಸಣ್ಣ ಹುಡುಗ ಅಲ್ಲ, ಪಾಸ್ ಮಾರಾಟ ಮಾಡಿಕೊಂಡಿಲ್ಲ

    ದಾವಣಗೆರೆ: ಕೊರೊನಾ ಭೀತಿ ಹಿನ್ನೆಲೆಯಲ್ಲಿ ದೇಶವೇ ಲಾಕ್‍ಡೌನ್ ಆಗಿದೆ. ಆದರೆ ಅಗತ್ಯ ಸೇವೆಗಳಿಗೆ ಮನೆಯಿಂದ ಹೊರಬರಬೇಕಾದರೆ ಪಾಸ್ ವ್ಯವಸ್ಥೆ ಮಾಡಲಾಗಿದೆ. ಪೊಲೀಸರಿಂದ ಪಾಸ್ ತೆಗೆದುಕೊಂಡು ಮನೆಯಿಂದ ಹೊರಬರಬಹುದು. ಆದರೆ ಈ ಪಾಸ್ ವಿಚಾರದಲ್ಲಿ ದಾವಣಗೆರೆಯ ಮೇಯರ್ ಮತ್ತು ಡಿಸಿ ನಡುವೆ ಫೈಟ್ ನಡೆದಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

    ಲಾಕ್‍ಡೌನ್ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಅಗತ್ಯ ಸೇವೆಗಳಿಗೆ ಪಾಸ್ ವಿತರಣೆ ಮಾಡಿದ್ದರು. ಮೇಯರ್ ಕೂಡ ಪಾಲಿಕೆ ವತಿಯಿಂದ ವ್ಯಾಪಾರಸ್ಥರಿಗೆ ಸಾವಿರಾರು ಪಾಸ್ ವಿತರಿಸಿದ್ದರು. ಆದರೆ ಮೇಯರ್ ನೀಡಿದ ಪಾಸ್ ದುರ್ಬಳಕೆಯಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಆದ್ದರಿಂದ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಮೇಯರ್ ನೀಡಿದ್ದ ಪಾಸ್‍ಗಳನ್ನು ಅಸಿಂಧು ಮಾಡಿದ್ದಾರೆ. ಈ ವಿಚಾರದಲ್ಲಿ ಮೇಯರ್ ಬಿ.ಜಿ.ಅಜಯ್‍ಕುಮಾರ್ ಮತ್ತು ಡಿಸಿ ಮಹಾಂತೇಶ್ ಬೀಳಗಿ ನಡುವೆ ಜಗಳ ನಡೆದಿದೆ.

    ನಾನು ಪುಂಡಪೋಕರಿಗಳಿಗೆ ಪಾಸ್ ಕೊಟ್ಟಿಲ್ಲ. ಕಳೆದ 15 ದಿನಗಳಿಂದ ಪಾಸ್‍ಗಾಗಿ ಪಾಲಿಕೆ ಪರದಾಡಿದೆ. ಆದರೆ ಜಿಲ್ಲಾಡಳಿತ ಪಾಸ್ ಕೊಡಲಿಲ್ಲ. ನಾನು ವ್ಯಾಪಾರಿಗಳ ಕಷ್ಟ ನೋಡಲಾಗದೆ ಪಾಸ್ ನೀಡಿರುವೆ. ಆದರೆ ನಾನು ಪಾಸ್ ಮಾರಾಟ ಮಾಡಿಕೊಂಡಿಲ್ಲ. ಮೇಯರ್ ಸ್ಥಾನದಲ್ಲಿ ಕುಳಿತ ನನಗೆ ಕನಿಷ್ಠ ಜ್ಞಾನ ಇದೆ ಎಂದು ಡಿಸಿಗೆ ಮೇಯರ್ ಬಿ.ಜಿ. ಅಜಯ್‍ಕುಮಾರ್ ತಿರುಗೇಟು ನೀಡಿದ್ದಾರೆ.

    ನಾನು ಸಣ್ಣ ಹುಡುಗ ಅಲ್ಲ, ಪಾಲಿಕೆ ಸದಸ್ಯರ ಆಗ್ರಹದ ಮೇಲೆ ಪಾಸ್ ನೀಡಲಾಗಿದೆ. ಅಷ್ಟೇ ಅಲ್ಲದೇ ಎಲ್ಲ ದಾಖಲೆ ಪಡೆದು ಪಾಸ್ ನೀಡಲಾಗಿದೆ. ನಾನು ಕೊಟ್ಟ ಪಾಸ್ ಅಸಿಂಧು ಮಾಡಿ. ಆದರೆ ಬೇಕಾದಷ್ಟು ಪಾಸ್ ಜಿಲ್ಲಾಡಳಿತ ನೀಡಲಿ ಎಂದು ಮೇಯರ್ ಗರಂ ಆಗಿ ಮಾತನಾಡಿದರು.

  • ಕರ್ತವ್ಯ ಲೋಪ ಅಧಿಕಾರಿಗಳ ಅಮಾನತು- ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಎಂದ ಕಾಂಗ್ರೆಸ್

    ಕರ್ತವ್ಯ ಲೋಪ ಅಧಿಕಾರಿಗಳ ಅಮಾನತು- ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಎಂದ ಕಾಂಗ್ರೆಸ್

    ದಾವಣಗೆರೆ: ಮಹಾನಗರ ಪಾಲಿಕೆ ಮೇಯರ್ ಚುನಾವಣೆಯಲ್ಲಿ ಮತದಾರರ ಪಟ್ಟಿಯಲ್ಲಿ ಎಂಎಲ್‍ಸಿಗಳ ಸೇರ್ಪಡೆಯಲ್ಲಿ ಕರ್ತವ್ಯ ಲೋಪ ಎಸಗಿದ್ದಾರೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಪಾಲಿಕೆಯ ಮತದಾರ ನೋಂದಾಣಾಧಿಕಾರಿ ಕೆ.ನಾಗರಾಜ್, ಉಪ ನೋಂದಾಣಾಧಿಕಾರಿ ಜಯಣ್ಣ ಕೆ. ಎಂಬವರನ್ನು ಅಮಾನತು ಮಾಡಿ ಅದೇಶ ಹೊರಡಿಸಿದ್ದಾರೆ.

    ಜಿಲ್ಲಾಧಿಕಾರಿಗಳು ಅಮಾನತು ಮಾಡಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವಿರೋಧ ವ್ಯಕ್ತವಾಗಿದ್ದು, ತಮ್ಮ ತಪ್ಪನ್ನು ಮುಚ್ಚಿಕೊಳ್ಳಲು ಬೇರೆ ಅಧಿಕಾರಿಗಳನ್ನು ಬಲಿ ಪಶು ಮಾಡಿದ್ದಾರೆ. ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಪ್ರಯೋಗಿಸಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ 19 ರಂದು ನಡೆದ ಪಾಲಿಕೆ ಮೇಯರ್ ಚುನಾವಣೆಯಲ್ಲಿ ಬೋಗಸ್ ದಾಖಲೆಗಳನ್ನು ನೀಡಿ ಎಂಎಲ್‍ಸಿ ಗಳನ್ನು ಸೇರ್ಪಡೆ ಮಾಡಲಾಗಿದೆ ಎನ್ನುವ ಅರೋಪ ಕೇಳಿ ಬಂದಿದೆ. ವಾಮಮಾರ್ಗದಲ್ಲಿ ಬಿಜೆಪಿ ಪಾಲಿಕೆ ಅಧಿಕಾರವನ್ನು ಹಿಡಿಯಲು ಈ ರೀತಿಯ ಕುತಂತ್ರವನ್ನು ಬಳಸುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿತ್ತು.

    ಇದಕ್ಕೆ ಐಎಎಸ್ ಅಧಿಕಾರಿಯಾದ ಹರ್ಷಗುಪ್ತರನ್ನು ಕೂಡ ಚುನಾವಣೆಯ ವೀಕ್ಷಕರಾಗಿ ನೇಮಿಸಿದ್ದು, ಬೋಗಸ್ ದಾಖಲೆ ನೀಡಿದ ಎಂಎಲ್‍ಸಿಗಳ ಮನೆಗಳನ್ನು ಪರಿಶೀಲನೆ ಮಾಡಿ ವರದಿ ನೀಡಿದ್ದಾರೆ. ಇನ್ನು ಕಾಂಗ್ರೆಸ್ ಮತದಾರರ ಪಟ್ಟಿಯನ್ನು ಪ್ರಶ್ನಿಸಿ ಹೈಕೋರ್ಟ್ ಮೊರೆ ಕೂಡ ಹೋಗಿತ್ತು. ಚುನಾವಣೆ ಇರುವ ಕಾರಣ ಕೋರ್ಟ್ ಮಧ್ಯಪ್ರವೇಶ ಮಾಡುವುದಿಲ್ಲ. ಮತದಾನ ಮಾಡಬೇಕೋ ಅಥವಾ ಬೇಡವೋ ಎನ್ನುವುದು ಜಿಲ್ಲಾಧಿಕಾರಿಗಳ ವಿವೇಚನೆಗೆ ಬಿಟ್ಟ ವಿಚಾರ ಎಂದು ಸೂಚಿಸಿತ್ತು.

    ಮತದಾನ ಮಾಡಲು ಜಿಲ್ಲಾಧಿಕಾರಿಗಳು ಅವಕಾಶ ಕೊಟ್ಟಿದ್ದಕ್ಕೆ ಕಾಂಗ್ರೆಸ್ ವಿರೋಧ ಕೂಡ ಮಾಡಿತ್ತು. ಆದ್ರೆ ಈಗ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಿ ಅದೇಶ ನೀಡಿದ್ದು, ಸಾಕಷ್ಟು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಇದರಿಂದ ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ನಡೆಯ ಮೇಲೆ ಬೇಸರಗೊಂಡಿದ್ದು, ತಾವು ತಪ್ಪಿಸಿಕೊಳ್ಳಲು ಈಗ ಇಬ್ಬರು ಅಧಿಕಾರಿಗಳನ್ನು ಬಲಿ ಪಶು ಮಾಡಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅಸಮಾಧಾನವನ್ನು ಹೊರ ಹಾಕಿದ್ದಾರೆ.

    ವಿಧಾನ ಪರಿಷತ್ ಸದಸ್ಯರುಗಳನ್ನು ಮತದಾರರ ಪಟ್ಟಿಯಲ್ಲಿ ಸೇರಿಸಲು ನೀಡಿದ ನಮೂನೆ-6 ಅರ್ಜಿಗಳ ಪರಿಶೀಲನೆ ಸಮಯದಲ್ಲಿ ಕಂಡುಬಂದ ಲೋಪದೋಷಗಳು ಮೇಲ್ನೋಟಕ್ಕೆ ಚುನಾವಣಾ ಕರ್ತವ್ಯದಲ್ಲಿನ ನಿರ್ಲಕ್ಷ್ಯ ತೋರಿಸುತ್ತವೆ. ಈ ಹಿನ್ನೆಲೆಯಲ್ಲಿ ಪ್ರಜಾಪ್ರತಿನಿಧಿ ಕಾಯ್ದೆ 1950 ಕಲಂ 32ರಂತೆ ಮತ್ತು ಕರ್ನಾಟಕ ಸಿವಿಲ್ ಸೇವಾ ನಿಯಮಗಳು 1957ರ ನಿಯಮ 10(1) (ಡಿ) ಅನ್ವಯ ಇಬ್ಬರು ಅಧಿಕಾರಿಗಳನ್ನು ತಕ್ಷಣದಿಂದ ನಿಲಂಬನೆಯಲ್ಲಿಡಲಾಗಿದೆ. ಸದರಿ ಅಧಿಕಾರಿಗಳು ನಿಲಂಬನಾ ಅವಧಿಯಲ್ಲಿ ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೇ ಕೇಂದ್ರ ಸ್ಥಾನ ಬಿಡುವಂತಿಲ್ಲ ಮತ್ತು ನಿಲಂಬನಾ ಅವಧಿಯಲ್ಲಿ ಕೆಸಿಎಸ್‍ಆರ್ ನಿಯಮ 98ರಡಿ ಜೀವನಾಧಾರ ಭತ್ಯ ಪಡೆಯಲಿದ್ದಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

  • ಆತ್ಮಹತ್ಯೆ ಮಾಡಿಕೊಳ್ಳಲು ಬಂದಿದ್ದ ವ್ಯಕ್ತಿಗೆ ಜಿಲ್ಲಾಧಿಕಾರಿ ಕ್ಲಾಸ್

    ಆತ್ಮಹತ್ಯೆ ಮಾಡಿಕೊಳ್ಳಲು ಬಂದಿದ್ದ ವ್ಯಕ್ತಿಗೆ ಜಿಲ್ಲಾಧಿಕಾರಿ ಕ್ಲಾಸ್

    ದಾವಣಗೆರೆ: ತಮಗೆ ನ್ಯಾಯ ಸಿಗಲಿಲ್ಲ ಎಂದು ದಾವಣಗೆರೆಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ವಿಷ ಕುಡಿಯಲು ಯತ್ನಿಸಿದ ವ್ಯಕ್ತಿಗೆ ಜಿಲ್ಲಾಧಿಕಾರಿಗಳೇ ಕ್ಲಾಸ್ ತೆಗೆದುಕೊಂಡು ಬುದ್ದಿವಾದ ಹೇಳಿದ ಘಟನೆ ದಾವಣಗೆರೆಯಲ್ಲಿ ನಡೆದಿದೆ.

    ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕು ಆಸ್ಪತ್ರೆಯಲ್ಲಿ ಲಿಂಗರಾಜ್ ಎಂಬವರು ನಾಲ್ಕು ವರ್ಷಗಳಿಂದ ಅಂಬ್ಯುಲೆನ್ಸ್ ಚಾಲಕರಾಗಿ ಕೆಲಸ ಮಾಡುತ್ತಿದ್ದು, ಕೆಲ ತಿಂಗಳ ಹಿಂದೆ ಏಕಾಏಕಿ ಕೆಲಸದಿಂದ ತೆಗೆದುಹಾಕಿದ್ದಾರೆ. ಇದರಿಂದ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸಾಕಷ್ಟು ಮನವಿ ಮಾಡಿದ್ರು ಯಾವುದೇ ಪ್ರಯೋಜನವಾಗಿಲ್ಲ.

    ಶಾಸಕ ಮಾಡಾಳ್ ವಿರುಪಾಕ್ಷಪ್ಪ ನವರ ಶಿಫಾರಸ್ಸಿನಿಂದ ಬೇರೆಯವರನ್ನು ಕೆಲಸಕ್ಕೆ ಸೇರಿಸಿಕೊಂಡಿದ್ದರಿಂದ ಇಂದು ನಿಂಗರಾಜ್ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗ ವಿಷ ಕುಡಿಯುವುದಾಗಿ ಹೆದರಿಸಿದ್ದಾರೆ. ಇದರಿಂದ ಕೋಪಗೊಂಡ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು, ಆತ್ಮಹತ್ಯೆ ಯತ್ನ ಮಾಡುತ್ತೇನೆ ಎಂದ ನಿಂಗರಾಜ್‍ಗೆ ಸರಿಯಾಗಿ ಕ್ಲಾಸ್ ತೆಗೆದುಕೊಂಡರು.

    ಏನ್ ಸಾಧನೆ ಮಾಡಬೇಕು ಎಂದು ಆತ್ಮಹತ್ಯೆ ಮಾಡಿಕೊಳ್ಳುತ್ತೀಯಾ. ನಾನು 5 ವರ್ಷ ಮಗುವಾಗಿದ್ದಾಗ ತಂದೆಯನ್ನು ಕಳೆದುಕೊಂಡಿದ್ದೆ. ನನ್ನ ತಾಯಿ ರೊಟ್ಟಿ ಮಾಡಿ ಖಾನಾವಳಿಗೆ ಮಾರಿ ಜೀವನ ನಡೆಸುತ್ತಾ ನನ್ನನ್ನು ಸಾಕಿದ್ದಾರೆ. ಕಷ್ಟದಿಂದ ಓದಿ ಜಿಲ್ಲಾಧಿಕಾರಿಯಾಗಿದ್ದೇನೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ಗ್ರಾಮದಲ್ಲಿ ಹೋಗಿ ಅಲ್ಲಿನ ಜನರನ್ನು ಕೇಳಿ ನಮ್ಮ ಕಷ್ಟ ಏನು ಎಂದು ಗೊತ್ತಾಗುತ್ತೆ. ದುಡಿದು ತಿನ್ನುವ ಬದಲು ಆತ್ಮಹತ್ಯೆ ಮಾಡಿಕೊಳ್ಳಲು ಬಂದಿಯಲ್ಲ ನೀನೆಂತ ಗಂಡಸು ಎಂದು ಖಡಕ್ ಆಗಿ ನಿಂಗರಾಜ್ ಗೆ ಬುದ್ದಿ ಹೇಳಿದರು.

    ಇದೇ ವೇಳೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ನಿನ್ನ ಸಮಸ್ಯೆಯನ್ನು ಬಗೆಹರಿಸಿ ನಾನು ನಿನಗೆ ನ್ಯಾಯ ಕೊಡಿಸುತ್ತೇನೆ ಎಂದು ಭರವಸೆ ನೀಡಿದರು. ಅಲ್ಲದೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ತನ್ನ ಕಷ್ಟದ ಜೀವನ ನೆನಪಿಸಿಕೊಂಡು ಕಣ್ಣಲ್ಲಿ ನೀರು ತಂದರು.

  • ‘ಜಲಯುದ್ಧ’ ಪಬ್ಲಿಕ್ ಟಿವಿ ಇಂಪ್ಯಾಕ್ಟ್ – ಜಿಪಂ ಸಿಇಓ ಸ್ಥಳಕ್ಕೆ ದಿಢೀರ್ ಭೇಟಿ

    ‘ಜಲಯುದ್ಧ’ ಪಬ್ಲಿಕ್ ಟಿವಿ ಇಂಪ್ಯಾಕ್ಟ್ – ಜಿಪಂ ಸಿಇಓ ಸ್ಥಳಕ್ಕೆ ದಿಢೀರ್ ಭೇಟಿ

    ಬೀದರ್: ಗುಟುಕು ನೀರಿಗಾಗಿ ಜೀವದ ಹಂಗು ತೊರೆದು ಬಾವಿಯಿಂದ ನೀರು ಸೇದುತ್ತಿದ್ದ ಸುದ್ದಿಯನ್ನು ಪಬ್ಲಿಕ್ ಟಿವಿ ಬೆಳಗ್ಗೆ ಪ್ರಸಾರ ಮಾಡಿತ್ತು. ‘ಜಲಯುದ್ಧ’ ಶೀರ್ಷಿಕೆಯಲ್ಲಿ ಸುದ್ದಿ ಪ್ರಸಾರ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಜಿಲ್ಲಾ ಪಂಚಾಯತ್ ಸಿಇಓ ಸ್ಥಳಕ್ಕೆ ದಿಢೀರ್ ಭೇಟಿ ಕೊಟ್ಟಿದ್ದಾರೆ.

    ಜಿಪಂ ಸಿಇಓ ಮಹಾಂತೇಶ ಬೀಳಗಿ ಚಿಮ್ಮೆಗಾಂವ್ ಗ್ರಾಮಕ್ಕೆ ಭೇಟಿ ಕೊಟ್ಟಿದ್ದು, ಬಾವಿಯೊಳಗೆ ನೀರು ಬಿಡದಂತೆ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ. ಅಷ್ಟೇ ಅಲ್ಲದೇ ಟ್ಯಾಂಕರ್ ಮೂಲಕ ಗ್ರಾಮಕ್ಕೆ ನೀರನ್ನು ಸರಬರಾಜು ಮಾಡುವಂತೆ ಸೂಚಿಸಿದ್ದಾರೆ.

    ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಚಿಮ್ಮೇಗಾಂವ್ ಗ್ರಾಮದಲ್ಲಿ ನೀರಿನ ಸಮಸ್ಯೆ ಇರುವುದು ನಿಜ. ನಿಷ್ಕಾಳಜಿ ವಹಿಸಿದ ಅಧಿಕಾರಿಗಳನ್ನು ಪರಿಶೀಲನೆ ಮಾಡಿ  ಅಮಾನತು ಮಾಡುತ್ತೇನೆ. ಚಿಮ್ಮೆಗಾಂವ್ ಗ್ರಾಮಕ್ಕೆ ದಿನಕ್ಕೆ ನಾಲ್ಕು ಟ್ಯಾಂಕರ್ ನೀರು ಒದಗಿಸಲು ಕ್ರಮ ಕೈಗೊಳ್ಳುತ್ತೇನೆ ಎಂದು ಸಿಇಓ ಮಹಾಂತೇಶ ಬೀಳಗಿ ಹೇಳಿದ್ದಾರೆ.

    ಚಿಮ್ಮೆಗಾಂವ್ ಗ್ರಾಮದಲ್ಲಿ ಸುಮಾರು 70 ರಿಂದ 80 ಕುಟುಂಬಗಳು ವಾಸವಾಗಿದ್ದು, ಈ ಗ್ರಾಮದಲ್ಲಿ ಜಾನುವಾರಗಳು ಸೇರಿದಂತೆ ಮನುಷ್ಯ ಕುಲಕ್ಕೆ ನೀರಿನ ದಾಹ ತಣಿಸಲು ಒಂದೇ ಬಾವಿ ಇದೆ. ಪ್ರತಿದಿನ ಒಂದು ಕೊಡ ನೀರಿಗಾಗಿ ಗ್ರಾಮಸ್ಥರು ಕಿತ್ತಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಜನರು 50 ಅಡಿ ಬಾವಿಯಿಂದ ನೀರು ಸೇದುತ್ತಿದ್ದರು. ಜನರು ಬಾವಿ ಸುತ್ತ ನಿಂತುಕೊಂಡು ಹಗ್ಗಕ್ಕೆ ಬಿಂದಿಗೆ ಕಟ್ಟಿಕೊಂಡು ಆಳವಾದ ಬಾವಿಗೆ ಬಿಟ್ಟು ನೀರು ಸೇದುತ್ತಿರುವ ದೃಶ್ಯ ಸಾಮಾನ್ಯವಾಗಿತ್ತು.