Tag: Maharashtra Assembly Elections

  • ಮಹಾರಾಷ್ಟ್ರ ಚುನಾವಣೆಯಲ್ಲಿ ಮ್ಯಾಚ್ ಫಿಕ್ಸಿಂಗ್ – ಚುನಾವಣಾ ಆಯೋಗದ ವಿರುದ್ಧ ರಾಹುಲ್ ಗಾಂಧಿ ಬಾಂಬ್‌

    ಮಹಾರಾಷ್ಟ್ರ ಚುನಾವಣೆಯಲ್ಲಿ ಮ್ಯಾಚ್ ಫಿಕ್ಸಿಂಗ್ – ಚುನಾವಣಾ ಆಯೋಗದ ವಿರುದ್ಧ ರಾಹುಲ್ ಗಾಂಧಿ ಬಾಂಬ್‌

    – ಮುಂದೆ ಬಿಹಾರಕ್ಕೂ ಬರಬಹುದು, ಬಿಜೆಪಿ ಸೋಲುವಲ್ಲೆಲ್ಲಾ ಮ್ಯಾಚ್ ಫಿಕ್ಸಿಂಗ್ ನಡೆಯಬಹುದು; ಆರೋಪ

    ಮುಂಬೈ: ಮಹಾರಾಷ್ಟ್ರದಲ್ಲಿ ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆಯಲ್ಲಿ (Maharashtra Assembly Elections) ನಡೆದ ಮ್ಯಾಚ್ ಫಿಕ್ಸಿಂಗ್ ಈಗ ಬಿಹಾರದಲ್ಲಿ ನಡೆಯಬಹುದು. ಹಾಗೂ ಬಿಜೆಪಿ ಸೋಲುವಲ್ಲೆಲ್ಲಾ ಮ್ಯಾಚ್ ಫಿಕ್ಸಿಂಗ್ ನಡೆಯಬಹುದು ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ (Rahul Gandhi) ಆರೋಪಿಸಿದ್ದಾರೆ.

    ರಾಹುಲ್‌ ಗಾಂಧಿ ಅವರು ಶನಿವಾರ (ಇಂದು) ಮತ್ತೆ ಎನ್‌ಡಿಎ ನೇತೃತ್ವದ ಬಿಜೆಪಿ (BJP) ಚುನಾವಣಾ ಅಕ್ರಮಗಳಲ್ಲಿ ತೊಡಗಿದೆ ಎಂದು ಆರೋಪಿಸಿದ್ದಾರೆ. ಕಳೆದ ವರ್ಷ ಮಹಾರಾಷ್ಟ್ರ ಚುನಾವಣೆಯಲ್ಲಿ ಮ್ಯಾಚ್‌ ಫಿಕ್ಸಿಂಗ್‌ (Match Fixing) ನಡೆದಿದೆ. ಇದು ಬಿಹಾರಕ್ಕೂ ಬರಬಹುದು. ಈ ರೀತಿ ಮ್ಯಾಚ್ ಫಿಕ್ಸಿಂಗ್ ಚಟುವಟಿಕೆ ನಡೆಸದಂತೆ ಎಚ್ಚರಿಕೆ ನೀಡಿದ್ದಾರೆ.

    ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA) ರಾಜ್ಯದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನ ಬುಡಮೇಲು ಮಾಡಲು ಮ್ಯಾಚ್ ಫಿಕ್ಸಿಂಗ್ ಮಾದರಿಯನ್ನು ಬಳಸಿದೆ ಎಂದು ಆರೋಪಿಸಿದ್ದಾರೆ. ತಮ್ಮ ಸೋಷಿಯಲ್‌ ಮೀಡಿಯಾ ಎಕ್ಸ್‌ ಖಾತೆಯಲ್ಲಿ ಇಂಗ್ಲಿಷ್‌ ಪತ್ರಿಕೆಯೊಂದರಲ್ಲಿ ʻಮ್ಯಾಚ್ ಫಿಕ್ಸಿಂಗ್ ಮಹಾರಾಷ್ಟ್ರʼ ಶೀರ್ಷಿಕೆಯಲ್ಲಿ ಪ್ರಕಟವಾದ ಲೇಖನವನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ಮಹಾರಾಷ್ಟ್ರ ಚುನಾವಣಾ ಫಲಿತಾಂಶದಲ್ಲಿ ಮ್ಯಾಚ್‌ ಫಿಕ್ಸಿಂಗ್‌ ಹೇಗೆ ನಡೆಯಿತು? ಎಂಬುದನ್ನು ಹಂತ-ಹಂತವಾಗಿ ವಿವರಿಸಿದ್ದಾರೆ.

    ಅವುಗಳೆಂದರೆ….
    ಹಂತ 1: ಚುನಾವಣಾ ಆಯೋಗ ನೇಮಿಸುವ ಸಮಿತಿಯನ್ನು ರಿಗ್ಗಿಂಗ್ ಮಾಡುವುದು.
    ಹಂತ 2: ಮತದಾರರ ಪಟ್ಟಿಗೆ ನಕಲಿ ಹೆಸರುಗಳನ್ನು ಸೇರಿಸುವುದು.
    ಹಂತ 3: ಮತದಾನದ ಶೇಕಡಾವಾರು (ವೋಟ್‌ ಶೇರಿಂಗ್‌) ಪ್ರಮಾಣವನ್ನ ಹೆಚ್ಚಿಸುವುದು
    ಹಂತ 4: ಬಿಜೆಪಿ ಗೆಲ್ಲಲು ಅಗತ್ಯವಿರುವ ಕಡೆಗಳಲ್ಲಿ ನಕಲಿ ಮತದಾನ ಮಾಡಿಸುವುದು.
    ಹಂತ 5: ಸಾಕ್ಷ್ಯಗಳನ್ನು ಮುಚ್ಚಿಡುವ ಕೆಲಸಗಳನ್ನು ಮಾಡಿದ್ದಾರೆ ಎಂದು ವಿವರಿಸಿದ್ದಾರೆ.

    ಬಿಜೆಪಿ ತಿರುಗೇಟು:
    ಇನ್ನೂ ರಾಹುಲ್‌ ಗಾಂಧಿ ಅವರ ಹೇಳಿಕೆಗಳು ಸೋಷಿಯಲ್‌ ಮೀಡಿಯಾದಲ್ಲಿ ಚರ್ಚೆಗೀಡಾಗುತ್ತಿದ್ದಂತೆ ಬಿಜೆಪಿ ನಾಯಕರು ತಿರುಗೇಟು ನೀಡುವ ಕೆಲಸ ಮಾಡಿದ್ದಾರೆ. ಇದು ದಾರಿತಪ್ಪಿಸುವ ಹೇಳಿಕೆ ಎಂದು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಕರೆದಿದ್ದಾರೆ.

    ರಾಹುಲ್‌ ಗಾಂಧಿ ಅವರು ಪದೇ ಪದೇ ಮತದಾರರಲ್ಲಿ ಅನುಮಾನ ಹಾಗೂ ವಿಭಜನೆತ ಬೀಜ ಬಿತ್ತುವ ಪ್ರಯತ್ನ ಮಾಡುತ್ತಿದ್ದಾರೆ. ಚುನಾವಣಾ ಪ್ರಕ್ರಿಯೆ ಹೇಗೆ ಕೆಲಸ ಮಾಡುತ್ತದೆ ಅನ್ನೋದು ಅವರಿಗೆ ಅರ್ಥವಾಗುತ್ತಿಲ್ಲ ಅನ್ನೋದು ಚೆನ್ನಾಗಿ ಗೊತ್ತಾಗ್ತಿದೆ. ತೆಲಂಗಾಣ, ಕರ್ನಾಟಕದಲ್ಲಿ ಕಾಂಗ್ರೆಸ್‌ ಗೆದ್ದಾಗ ಅಲ್ಲಿ ಅದೇ ವ್ಯವಸ್ಥೆಯನ್ನು ನ್ಯಾಯಯುತ ಎಂದು ಪ್ರಶಂಸಿಸಿದರು. ಹರಿಯಾಣದಿಂಧ ಮಹಾರಾಷ್ಟ್ರದ ವರೆಗೆ ಸೋತ ಚುನಾವಣೆಗಳಲೆಲ್ಲಾ ಪಿತೂರಿ ಅಂತ ಗೊಣಗುತ್ತಾ ಬಂದರು. ಮತದಾರರ ಮನಸ್ಸಿನಲ್ಲಿ ಭಿನ್ನಾಭಿಪ್ರಾಯದ ಬೀಜಗಳನ್ನು ಬಿತ್ತುವ ಪ್ರಯತ್ನವನ್ನು ಉದ್ದೇಶಪೂರ್ವಕವಾಗಿ ಮಾಡುತ್ತಲೇ ಇರುತ್ತಾರೆ ಎಂದು ಎಕ್ಸ್‌ನಲ್ಲಿ ಕಿಡಿ ಕಾರಿದ್ದಾರೆ.

    ಮಹಾರಾಷ್ಟ್ರ ಫಲಿತಾಂಶ ಏನಾಗಿತ್ತು?
    ಬಿಜೆಪಿ, ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಮತ್ತು ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಒಳಗೊಂಡ ಮಹಾಯುತಿ ಮೈತ್ರಿಕೂಟವು 288 ವಿಧಾನಸಭಾ ಸ್ಥಾನಗಳಲ್ಲಿ 235 ಸ್ಥಾನಗಳನ್ನು ಗೆದ್ದಿದೆ. ಇದರಲ್ಲಿ ಬಿಜೆಪಿ 132 ಸ್ಥಾನಗಳನ್ನು ಗಳಿಸಿದ್ದು, ರಾಜ್ಯದ ಇತಿಹಾಸದಲ್ಲಿ ಇದು ಅತ್ಯುತ್ತಮ ಪ್ರದರ್ಶನವಾಗಿದೆ.

  • ಮಹಾರಾಷ್ಟ್ರದಲ್ಲಿ ಚುನಾವಣೆ ನಡೆದರೆ ತೆಲಂಗಾಣ, ಕರ್ನಾಟಕದಲ್ಲಿ ವಸೂಲಿ ಡಬಲ್ ಆಗಿದೆ: ಮೋದಿ ವಾಗ್ದಾಳಿ

    ಮಹಾರಾಷ್ಟ್ರದಲ್ಲಿ ಚುನಾವಣೆ ನಡೆದರೆ ತೆಲಂಗಾಣ, ಕರ್ನಾಟಕದಲ್ಲಿ ವಸೂಲಿ ಡಬಲ್ ಆಗಿದೆ: ಮೋದಿ ವಾಗ್ದಾಳಿ

    ಅಕೋಲಾ: ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣೆ (Maharashtra Assembly Elections) ನಡೆದರೆ ತೆಲಂಗಾಣ ಮತ್ತು ಕರ್ನಾಟಕದಲ್ಲಿ ವಸೂಲಿ ಡಬಲ್ ಆಗಿದೆ. ಕಾಂಗ್ರೆಸ್‌ ಆಡಳಿತ ರಾಜ್ಯಗಳನ್ನು ಶಾಹಿ ಪರಿವಾರ ಎಟಿಎಂ ಮಾಡಿಕೊಂಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ವಾಗ್ದಾಳಿ ನಡೆಸಿದ್ದಾರೆ. ಅಕೋಲಾದಲ್ಲಿ ನಡೆದ ಚುನವಣಾ ರ‍್ಯಾಲಿ ನಡೆಸಿದ ಮೋದಿ ಮಹಾ ವಿಕಾಸ್ ಅಘಾಡಿ ನಾಯಕರನ್ನು ತರಾಟೆಗೆ ತೆಗೆದುಕೊಂಡರು.

    ಮಹಾರಾಷ್ಟ್ರದಲ್ಲಿ ಚುನಾವಣೆ ಆರಂಭವಾಗುತ್ತಿದ್ದಂತೆ ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರ (Congress Government) ಮದ್ಯದಂಗಡಿ ಮಾಲೀಕರಿಂದ 700 ಕೋಟಿ ರೂ. ಪಡೆದಿದೆ ಎನ್ನುವ ಆರೋಪ ಇದೆ. ಯೋಚನೆ ಮಾಡಿ ಚುನಾವಣೆ ಗೆದ್ದ ಮೇಲೆ ಇಲ್ಲಿ ಎಷ್ಟು ಭ್ರಷ್ಟಾಚಾರ ಮಾಡಿರಬಹುದು ಮಹಾರಾಷ್ಟ್ರವನ್ನು ಮಹಾ ಅಘಾಡಿಯ ಎಂಟಿಎಂ ಅಗಲು ಬಿಡುವುದಿಲ್ಲ ಎಂದರು. ಇದನ್ನೂ ಓದಿ: ಬೆಂಗ್ಳೂರಿಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಐರಾವತ ಬಸ್‌ ಮೇಲೆ ತೆಲಂಗಾಣದಲ್ಲಿ ಪುಂಡರಿಂದ ಕಲ್ಲು ತೂರಾಟ

    ದೇಶ ಬಲಹೀನವಾದಷ್ಟು ಕಾಂಗ್ರೆಸ್ ಬಲಿಷ್ಠವಾಗಲಿದೆ ಅಂತ ಅವರು ಅಂದುಕೊಂಡಿದ್ದಾರೆ. ಆದ್ರೆ ದೇಶ ಬಲಿಷ್ಠವಾದರೆ ಕಾಂಗ್ರೆಸ್ ಶಕ್ತಿಹೀನವಾಗಲಿದೆ. ಅದಕ್ಕಾಗಿ ಕಾಂಗ್ರೆಸ್ ದೇಶವನ್ನು ಬಲಿಷ್ಟವಾಗಲು ಬಿಡುವುದಿಲ್ಲ. ಹಿಂದುಳಿದ ವರ್ಗಗಳು, ಎಸ್ಸಿ, ಎಸ್ಟಿ ಆದಿವಾಸಿಗಳ ನಡುವೆ ಬಿರುಕು ಮೂಡಿಸಿ ಬೇರೆ ಬೇರೆ ಮಾಡಿದೆ, ಎಸ್ಸಿ ಸಮಾಜದ ಜನರು ಅವರೊಳಗೆ ಜಗಳವಾಡುತ್ತಿರಲಿ ಎಂದು ಕಾಂಗ್ರೆಸ್ ಬಯಸುತ್ತದೆ ಇದರಿಂದ ಅವರ ಧ್ವನಿ ಕುಂದುತ್ತದೆ, ಮತ್ತು ಮತ ಒಡೆದು ಹೋಗುತ್ತದೆ ಎಂದು ಕಾಂಗ್ರೆಸ್ ಭಾವಿಸಿರುವುದಾಗಿ ಆರೋಪಿಸಿದರು.

    ಕಾಂಗ್ರೆಸ್ ಮತ್ತು ಅದರ ಮಿತ್ರ ಪಕ್ಷಗಳು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನ, ನ್ಯಾಯಾಲಯದ ಬಗ್ಗೆ ಅಥವಾ ದೇಶದ ಭಾವನೆಗಳ ಬಗ್ಗೆ ಕಾಳಜಿ ವಹಿಸುವುದಿಲ್ಲ. 2014 ರಿಂದ 2024ರ ವರೆಗಿನ 10 ವರ್ಷಗಳಲ್ಲಿ, ಮಹಾರಾಷ್ಟ್ರವು ನಿರಂತರವಾಗಿ ಬಿಜೆಪಿಯನ್ನು ಪೂರ್ಣ ಹೃದಯದಿಂದ ಆಶೀರ್ವದಿಸಿದೆ. ಇದಕ್ಕೆ ಕಾರಣ ಮಹಾರಾಷ್ಟ್ರದ ಜನರ ದೇಶಭಕ್ತಿ, ರಾಜಕೀಯ ತಿಳಿವಳಿಕೆ ಮತ್ತು ದೂರದೃಷ್ಟಿ. ಕೇಂದ್ರದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು ಕೇವಲ 5 ತಿಂಗಳಾಗಿದೆ. ಈ 5 ತಿಂಗಳಲ್ಲಿ ಲಕ್ಷ ಕೋಟಿ ರೂ. ಯೋಜನೆಗಳನ್ನು ಆರಂಭಿಸಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಯುವತಿಯ ಖಾಸಗಿ ಕ್ಷಣ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಪ್ರಿಯಕರ, ಅಪ್ರಾಪ್ತ ಸೇರಿದಂತೆ 6 ಮಂದಿಯಿಂದ ಗ್ಯಾಂಗ್‌ ರೇಪ್‌

    ಮಹಾರಾಷ್ಟ್ರಕ್ಕೆ ಸಂಬಂಧಿಸಿದ ಹೆಚ್ಚಿನ ಸಂಖ್ಯೆಯ ಮೂಲಸೌಕರ್ಯ ಯೋಜನೆಗಳನ್ನು ಸಹ ಹೊಂದಿದೆ. ಕಳೆದ ಎರಡು ಅವಧಿಯಲ್ಲಿ ಮೋದಿ ಬಡವರಿಗಾಗಿ 4 ಕೋಟಿ ಪಕ್ಕಾ ಮನೆಗಳನ್ನು ನಿರ್ಮಿಸಿದ್ದಾರೆ. ಅಷ್ಟೇ ಅಲ್ಲ ಅಂದು ಹಾಕಿಕೊಂಡಿದ್ದ ಗುರಿಯೂ ತಪ್ಪಿತು. ಈಗ ನಾವು ಬಡವರಿಗಾಗಿ 3 ಕೋಟಿ ಹೊಸ ಮನೆಗಳನ್ನು ನಿರ್ಮಿಸಲು ಪ್ರಾರಂಭಿಸುತ್ತಿದ್ದೇವೆ. ಮರಾಠಿಗೆ ಗಣ್ಯ ಭಾಷೆಯ ಸ್ಥಾನಮಾನ ನೀಡುವ ಭಾಗ್ಯ ನಮ್ಮದಾಗಿದೆ. ಇಡೀ ಮಹಾರಾಷ್ಟ್ರದ ಹೆಮ್ಮೆಯ ಆ ಗೌರವ ಮರಾಠಿಗೆ ಸಿಕ್ಕಿದೆ ಎಂದರು‌. ಇದನ್ನೂ ಓದಿ: ಈ ಮೋದಿ ಇರೋವರೆಗೂ 370ನೇ ವಿಧಿ ಮರುಸ್ಥಾಪಿಸಲು ಸಾಧ್ಯವಿಲ್ಲ: ಗುಡುಗಿದ ಪ್ರಧಾನಿ

  • ವಿವಾದಕ್ಕೆ ಕಾರಣವಾದ ರಾಗಾ `ರೆಡ್‌ ಬುಕ್’ – ಸಂವಿಧಾನ ಪ್ರತಿ ಎಂದ ಪುಸ್ತಕದಲ್ಲಿ ಖಾಲಿ ಹಾಳೆ: ಫಡ್ನವಿಸ್‌ ಕೌಂಟರ್‌

    ವಿವಾದಕ್ಕೆ ಕಾರಣವಾದ ರಾಗಾ `ರೆಡ್‌ ಬುಕ್’ – ಸಂವಿಧಾನ ಪ್ರತಿ ಎಂದ ಪುಸ್ತಕದಲ್ಲಿ ಖಾಲಿ ಹಾಳೆ: ಫಡ್ನವಿಸ್‌ ಕೌಂಟರ್‌

    ಮುಂಬೈ: ಕಳೆದ ಲೋಕಸಭಾ ಚುನಾವಣೆಯ ಪ್ರಚಾರದ ವೇಳೆ ಮತ್ತು ಚುನಾವಣಾ ಫಲಿತಾಂಶದ ನಂತರವೂ, ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi), ಕೆಂಪು ಬಣ್ಣದ ಸಂವಿಧಾನ ಪ್ರತಿ ಎನ್ನಲಾದ ಪುಸ್ತಕವನ್ನು ಕೈಯಲ್ಲಿ ಹಿಡಿದುಕೊಂಡೇ ಸುತ್ತುತ್ತಿದ್ದರು. ತಮ್ಮ ಸಾರ್ವಜನಿಕ ಸಭೆಯಲ್ಲಿ ಇದನ್ನು ಪ್ರದರ್ಶಿಸುತ್ತಿದ್ದರು.

    ಇನ್ನೂ ಇತ್ತೀಚೆಗೆ ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆಯ (Maharashtra And Jharkhand Assembly Elections) ಪ್ರಚಾರದಲ್ಲಿ ರಾಹುಲ್ ಗಾಂಧಿ ಸಕ್ರಿಯವಾಗಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಸಂವಿಧಾನದ ಪುಸ್ತಕದ ಜೊತೆ ಭಾಷಣ ಮುಂದುವರಿಸಿದ್ದಾರೆ. ಅವರ ಸಾರ್ವಜನಿಕ ಸಭೆಯೊಂದರಲ್ಲಿ ಸಂವಿಧಾನದ (Constitution) ಪ್ರತಿ ಎನ್ನಲಾದ ಕೆಂಪು ಬಣ್ಣದ ಪುಸ್ತಕವನ್ನು ಜನರಿಗೆ ವಿತರಿಸಲಾಗಿತ್ತು. ಆದರೆ, ಅದರಲ್ಲಿ ಖಾಲಿ ಹಾಳೆಗಳಿವೆ ಎಂದು ಬಿಜೆಪಿ ಆರೋಪಿಸಿದೆ. ಇದನ್ನೂ ಓದಿ: 370ನೇ ವಿಧಿ ಜಾರಿ ನಿರ್ಣಯ ಬೆಂಬಲಿಸಿ ಬ್ಯಾನರ್ ಪ್ರದರ್ಶನ- ಜಮ್ಮು ಕಾಶ್ಮೀರ ವಿಧಾನಸಭೆಯಲ್ಲಿ ತಾರಕಕ್ಕೇರಿದ ಗದ್ದಲ

    ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ರ‍್ಯಾಲಿಗಳಲ್ಲಿ ʻರೆಡ್‌ ಬುಕ್‌ʼನೊಂದಿಗೆ (Red Book) ಕಾಣಿಸಿಕೊಳ್ತಿದ್ದಾರೆ. ಇದನ್ನೇ ಅಸ್ತ್ರ ಮಾಡಿಕೊಂಡಿರುವ ಬಿಜೆಪಿ ತಿರುಗೇಟು ನೀಡಿದೆ. ರಾಹುಲ್ ಗಾಂಧಿ ಪ್ರಚಾರದ ಸಭೆಗಳಲ್ಲಿ ಕೆಂಪು ಹೊದಿಕೆ ಇರುವ ಚಿಕ್ಕ ಪುಸ್ತಕವನ್ನು ಏಕೆ ಪ್ರದರ್ಶಿಸುತ್ತಾರೆ? ಎಂದು ಮಹಾರಾಷ್ಟ್ರ ಡಿಸಿಎಂ ದೇವೆಂದ್ರ ಫಡ್ನವಿಸ್‌ ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಕೃಷಿ ತ್ಯಾಜ್ಯಕ್ಕೆ ಬೆಂಕಿ: ದಂಡ ದುಪ್ಪಟ್ಟುಗೊಳಿಸಿ ಕೇಂದ್ರ ಸರ್ಕಾರ ಆದೇಶ’

    ಸಂವಿಧಾನ ಪ್ರತಿಯ ಮುಖಪುಟ ನೀಲಿ ಬಣ್ಣದ್ದಾಗಿರುತ್ತೆ, ಆದರೆ ರಾಹುಲ್ ಮಾತ್ರ ಕೆಂಪು ಹೊದಿಕೆ ತೋರಿಸುತ್ತಿದ್ದಾರೆ. ಈಗ ರಾಹುಲ್ ಗಾಂಧಿ ಸುತ್ತ ನಕ್ಸಲರು ಹಾಗೂ ಅರಾಜಕ ಶಕ್ತಿಗಳೇ ತುಂಬಿವೆ. ರಾಹುಲ್ ಗಾಂಧಿ ಕಾಂಗ್ರೆಸ್ ವ್ಯಕ್ತಿಯಾಗಿ ಉಳಿಯದೇ ಉಗ್ರ ಎಡಪಂಥೀಯ ವಿಚಾರವಾದಿಯಾಗಿ ಬದಲಾಗಿದ್ದಾರೆ ಎಂದು ಟೀಕಿಸಿದ್ದಾರೆ.

    ಇದೇ ವೇಳೆ, ಕೆಂಪು ಪುಸ್ತಕದ ಹಾಳೆಗಳು ಖಾಲಿ ಖಾಲಿ ಆಗಿರುವ ವಿಡಿಯೋ ವೈರಲ್ ಆಗಿದೆ. ಇದಕ್ಕೆ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಬಿಜೆಪಿ, ಬಾಬಾ ಸಾಹೇಬರ ಮೇಲೆ ದಾಳಿ ನಡೆಸ್ತಿದೆ. ಸಂವಿಧಾನಶಿಲ್ಪಿಗೆ ಅಪಮಾನ ಮಾಡುವ ಕೆಲಸ ಮಾಡ್ತಿದೆ ಎಂದು ಕಿಡಿಕಾರಿದೆ. ಇದನ್ನೂ ಓದಿ: ಕೋಲ್ಕತ್ತಾ ರೇಪ್‌ ಕೇಸ್‌ – ಬಂಗಾಳದಿಂದ ಬೇರೆ ರಾಜ್ಯಕ್ಕೆ ಕೇಸ್‌ ವರ್ಗಾಯಿಸಲು ಸುಪ್ರೀಂ ನಕಾರ

  • ಕೇಳಿದ್ದು 18 ಕ್ಷೇತ್ರ, ಸಿಕ್ಕಿದ್ದು 10 – ಮುಂಬೈ ಕಾಂಗ್ರೆಸ್‌ನಲ್ಲಿ ಬಿರುಕು

    ಕೇಳಿದ್ದು 18 ಕ್ಷೇತ್ರ, ಸಿಕ್ಕಿದ್ದು 10 – ಮುಂಬೈ ಕಾಂಗ್ರೆಸ್‌ನಲ್ಲಿ ಬಿರುಕು

    ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ (Maharashtra Assembly elections) ಸೀಟು ಹಂಚಿಕೆ ವಿಚಾರದಲ್ಲಿ ಮಹಾ ವಿಕಾಸ್ ಅಘಾಡಿ (Maha Vikas Aghadi) ಹೆಣಗಾಡುತ್ತಿದೆ. ಇದರ ನಡುವೆ ನಾಮಪತ್ರ ಸಲ್ಲಿಕೆಗೆ ಇನ್ನೆರಡು ದಿನ ಬಾಕಿ ಉಳಿದಿದ್ದು ಹಲವು ಕಾಂಗ್ರೆಸ್ (Congress ) ನಾಯಕರು ಸೀಟು ಹಂಚಿಕೆ ವಿಚಾರಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಮುಂಬೈನಲ್ಲಿ (Mumbai) 36 ವಿಧಾನಸಭಾ ಕ್ಷೇತ್ರಗಳ ಪೈಕಿ 18 ಸ್ಥಾನಗಳಿಗೆ ಕಾಂಗ್ರೆಸ್ ಪಕ್ಷವು ಆರಂಭದಲ್ಲಿ ಬೇಡಿಕೆ ಇಟ್ಟಿತ್ತು. ಈಗ ಕಾಂಗ್ರೆಸ್ ಕೇವಲ 10 ಸ್ಥಾನಗಳನ್ನು ಪಡೆಯುವ ಸಾಧ್ಯತೆ ಇದೆ. ಇದು ಕೆಲವು ನಾಯಕರಲ್ಲಿ ಅಸಮಾಧಾನವನ್ನು ಉಂಟುಮಾಡಿದೆ ಎಂದು ವರದಿಯಾಗಿದೆ.

    ಮುಂಬೈ ಕಾಂಗ್ರೆಸ್ ಅಧ್ಯಕ್ಷ ವರ್ಷಾ ಗಾಯಕ್‌ವಾಡ್ ಅವರು ಪಕ್ಷದ ಟಿಕೆಟ್‌ ಹಂಚಿಕೆಯಲ್ಲಿನ ಅಸಮಾಧಾನ ವದಂತಿಯನ್ನು ತಳ್ಳಿಹಾಕಿದ್ದಾರೆ. ವದಂತಿಗಳನ್ನು ಹರಡುವವರು ಪಟ್ಟಭದ್ರ ಹಿತಾಸಕ್ತಿ ಹೊಂದಿರುವ ಜನರು ಎಂದು ಆರೋಪಿಸಿದ್ದಾರೆ. ಅಲ್ಲದೇ ಅರ್ಹತೆ ಆಧರಿಸಿ ಟಿಕೆಟ್ ಹಂಚಿಕೆ ಮಾಡಲಾಗಿದೆ ಎಂದು ಸಮರ್ಥಿಸಿಕೊಂಡಿದ್ದಾರೆ. ಬೇಸರಗೊಂಡವರು ಅಥವಾ ಟಿಕೆಟ್ ಸಿಗದವರು ಏನು ಬೇಕಾದರೂ ಹೇಳಬಹುದು ಆದರೆ ಗೆಲ್ಲುವ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದು ನಮ್ಮ ಆದ್ಯತೆಯಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

    ಈ ಚುನಾವಣೆಯಲ್ಲಿ ಹಾಲಿ ಶಾಸಕ ಅಸ್ಲಾಂ ಶೇಖ್ ಮತ್ತು ಅಮೀನ್ ಪಟೇಲ್ ಅವರು ಮಲಾಡ್ ಪಶ್ಚಿಮ ಮತ್ತು ಮುಂಬಾದೇವಿ ಕ್ಷೇತ್ರಗಳನ್ನು ಉಳಿಸಿಕೊಂಡಿದ್ದಾರೆ. ಆಂತರಿಕ ವಿರೋಧದ ನಡುವೆಯೂ ಗಾಯಕ್ವಾಡ್ ಸಹೋದರಿ ಜ್ಯೋತಿ ಧಾರಾವಿ ಟಿಕೆಟ್ ಪಡೆದುಕೊಂಡಿದ್ದು, ಮಾಜಿ ಸಚಿವ ನಸೀಮ್ ಖಾನ್ ಚಾಂಡಿವಿಲಿಯಿಂದ ಸ್ಪರ್ಧಿಸಲಿದ್ದಾರೆ.

    ಇಲ್ಲಿಯವರೆಗೂ ಮಹಾರಾಷ್ಟ್ರದಲ್ಲಿ ಎಂವಿಎ 255 ಸ್ಥಾನಗಳಿಗೆ ಸೀಟು ಹಂಚಿಕೆಯನ್ನು ಮಾಡಿದೆ. ಮೈತ್ರಿಯ ಪ್ರತಿ ಪಕ್ಷವೂ 85 ಸ್ಥಾನಗಳನ್ನು ಪಡೆಯಲಿವೆ. ಕಾಂಗ್ರೆಸ್ ಇದುವರೆಗೂ 71 ಅಭ್ಯರ್ಥಿಗಳನ್ನು ಘೋಷಿಸಿದೆ. ಪಕ್ಷವು ವಿದರ್ಭದಿಂದ ಗರಿಷ್ಠ 30 ಅಭ್ಯರ್ಥಿಗಳನ್ನು ಹೆಸರಿಸಿದೆ. ಪಕ್ಷವು ಮುಂಬೈ ಮೆಟ್ರೋಪಾಲಿಟನ್ ಪ್ರದೇಶ (ಎಂಎಂಆರ್) ಮತ್ತು ಕೊಂಕಣದಿಂದ 14 ಅಭ್ಯರ್ಥಿಗಳನ್ನು, ಪಶ್ಚಿಮ ಮಹಾರಾಷ್ಟ್ರದಿಂದ 13, ಮರಾಠವಾಡದಿಂದ 10 ಮತ್ತು ಉತ್ತರ ಮಹಾರಾಷ್ಟ್ರದಿಂದ 8 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಉದ್ಧವ್ ಠಾಕ್ರೆ ಅವರ ಶಿವ ಸೇನೆಯು 83 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ.

  • Maharashtra Assembly Elections: ಕಾಂಗ್ರೆಸ್‌ನಿಂದ 48 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

    Maharashtra Assembly Elections: ಕಾಂಗ್ರೆಸ್‌ನಿಂದ 48 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

    ಮುಂಬೈ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ (Maharashtra Assembly Elections) ಕಾಂಗ್ರೆಸ್ (Congress) ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮೊದಲ ಪಟ್ಟಿಯಲ್ಲಿ 48 ಅಭ್ಯರ್ಥಿಗಳನ್ನು ಪಕ್ಷ ಘೋಷಿಸಿದೆ.

    ಬ್ರಹ್ಮಪುರಿಯಿಂದ ವಿಜಯ್ ವಾಡೆತ್ತಿವಾರ್, ನಾಗ್ಪುರ ಉತ್ತರದಿಂದ ನಿತಿನ್ ರಾವುತ್, ಸಂಗಮ್ನೇರ್‌ನಿಂದ ವಿಜಯ್ ಬಾಳಾಸಾಹೇಬ್ ಥೋರಟ್ ಮತ್ತು ಕರಡ್ ದಕ್ಷಿಣದಿಂದ ಪೃಥ್ವಿರಾಜ್ ಚವ್ಹಾಣ್ ಕಣದಲ್ಲಿರುವ ಪ್ರಮುಖರಾಗಿದ್ದಾರೆ.

    ನಾಗ್ಪುರ ನೈರುತ್ಯದಿಂದ ಪ್ರಫುಲ್ ವಿನೋದರಾವ್ ಗುಡಧೆ, ಮಲಾಡ್ ಪಶ್ಚಿಮದಿಂದ ಅಸ್ಲಂ ಆರ್.ಶೇಖ್ ಕೂಡ ಕಣದಲ್ಲಿದ್ದಾರೆ.