Tag: Maharashtra Court

  • ವಿಚಾರಣೆ ವೇಳೆ ನ್ಯಾಯಾಧೀಶರಿಗೆ ಚಪ್ಪಲಿ ಎಸೆದ ಕೊಲೆ ಆರೋಪಿ!

    ವಿಚಾರಣೆ ವೇಳೆ ನ್ಯಾಯಾಧೀಶರಿಗೆ ಚಪ್ಪಲಿ ಎಸೆದ ಕೊಲೆ ಆರೋಪಿ!

    ಮುಂಬೈ: ಕೊಲೆ ಪ್ರಕರಣದ ಆರೋಪಿಯೊಬ್ಬ ವಿಚಾರಣೆ ದಿನ ನ್ಯಾಯಾಧೀಶರ ಕಡೆಗೆ ಚಪ್ಪಲಿ ಎಸೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ನ್ಯಾಯಾಲಯದಲ್ಲಿ ನಡೆದಿದೆ.

    ಕಲ್ಯಾಣ್‌ ನ್ಯಾಯಾಲಯದಲ್ಲಿ ಈ ಘಟನೆ ನಡೆದಿದೆ. ಆರೋಪಿ ರೋಷನ್‌ ಘೋರ್ಪಡೆ ತನ್ನ ಪತ್ನಿ ಹಾಗೂ ತಾಯಿಯನ್ನು ಕೊಲೆ ಮಾಡಿದ ಆರೋಪ ಎದುರಿಸುತ್ತಿದ್ದಾನೆ. ವಿಚಾರಣೆ ದಿನಗಳಲ್ಲಿ ತನ್ನನ್ನು ನ್ಯಾಯಾಲಯಕ್ಕೆ ಪೊಲೀಸರು ಕರೆತರುವುದಿಲ್ಲ ಎಂದು ಕೋಪಗೊಂಡು ನ್ಯಾಯಾಧೀಶರ ಕಡೆಗೆ ಚಪ್ಪಲಿ ಎಸೆದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಕಲ್ಯಾಣ ಕರ್ನಾಟಕ ಬಸ್‍ಗಳಲ್ಲಿ ಮೊಬೈಲ್ ಲೌಡ್ ಸ್ಪೀಕರ್ ಇಟ್ಟು ಸಾಂಗ್, ಸಿನಿಮಾ ನೋಡೋದಕ್ಕೆ ನಿರ್ಬಂಧ

    ವಿಚಾರಣೆ ವೇಳೆ ಆರೋಪಿ ತನ್ನ ಕಾಲಿನಲ್ಲಿದ್ದ ಚಪ್ಪಲಿಯನ್ನು ತೆಗೆದು ನ್ಯಾಯಾಧೀಶರ ಕಡೆಗೆ ಎಸೆದಿದ್ದಾನೆ. ತಕ್ಷಣ ನ್ಯಾಯಾಧೀಶರು ಕೆಳಗೆ ಬಗ್ಗಿ ತಪ್ಪಿಸಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಲಸಿಕೆ ಪಡೆಯದಿದ್ದರೆ ರೇಷನ್, ಗ್ಯಾಸ್‌, ಪೆಟ್ರೋಲ್‌ ಇಲ್ಲ

    ಆರೋಪಿ ವಿರುದ್ಧ ಐಪಿಸಿ ಸೆಕ್ಷನ್‌ 353 (ಸಾರ್ವಜನಿಕ ಸೇವಕ ತನ್ನ ಕರ್ತವ್ಯವನ್ನು ನಿರ್ವಹಿಸದಂತೆ ಅಡ್ಡಿಪಡಿಸಲು ಯತ್ನ), 504 (ಶಾಂತಿಯನ್ನು ಭಂಗಗೊಳಿಸಿ ಉದ್ದೇಶಪೂರ್ವಕ ಅವಮಾನ)ರಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.