Tag: Maharashtra Election Results

  • ಮಹಾರಾಷ್ಟ್ರದಲ್ಲಿ ‘ಮಹಾಯುತಿ’ಗೆ ಐತಿಹಾಸಿಕ ಗೆಲುವು: ಜನತೆಗೆ ನಿತಿನ್‌ ಗಡ್ಕರಿ ಕೃತಜ್ಞತೆ

    ಮಹಾರಾಷ್ಟ್ರದಲ್ಲಿ ‘ಮಹಾಯುತಿ’ಗೆ ಐತಿಹಾಸಿಕ ಗೆಲುವು: ಜನತೆಗೆ ನಿತಿನ್‌ ಗಡ್ಕರಿ ಕೃತಜ್ಞತೆ

    – ಮೋದಿ ದೂರದೃಷ್ಟಿಯಿಂದ ಡಬಲ್‌ ಇಂಜಿನ್‌ ಸರ್ಕಾರ ರಾಜ್ಯವನ್ನು ಎತ್ತರಕ್ಕೆ ಕೊಂಡೊಯ್ಯಲಿದೆ

    ಮುಂಬೈ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ (Maharashtra Election Results) ಬಿಜೆಪಿ ನೇತೃತ್ವದ ‘ಮಹಾಯುತಿ’ ಮೈತ್ರಿಕೂಟದ ಐತಿಹಾಸಿಕ ಗೆಲುವಿಗೆ ಕೇಂದ್ರ ಸಚಿವ ನಿತಿನ್‌ ಗಡ್ಕರಿ (Nitin Gadkari) ಖುಷಿ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಮಹಾರಾಷ್ಟ್ರದ ಜನರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

    ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿರುವ ಅವರು, ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ-ಮಹಾಯುತಿ ಮೈತ್ರಿಕೂಟದ ಐತಿಹಾಸಿಕ ವಿಜಯಕ್ಕಾಗಿ ಮಹಾರಾಷ್ಟ್ರದ ಜನತೆಗೆ ಹೃತ್ಪೂರ್ವಕ ಅಭಿನಂದನೆಗಳು. ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಅವರ ನಾಯಕತ್ವದಲ್ಲಿ, ಬಿಜೆಪಿ-ಮಹಾಯುತಿ ನಿರಂತರವಾಗಿ ಅಭಿವೃದ್ಧಿಗೆ ಆದ್ಯತೆ ನೀಡಿದೆ. ಮಹಾರಾಷ್ಟ್ರದ ಸಮಗ್ರ ಪ್ರಗತಿ ಮತ್ತು ಜನರ ಆಕಾಂಕ್ಷೆಗಳಿಗೆ ಬದ್ಧವಾಗಿದೆ. ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಮಹಾಯುತಿಗೆ 200+ ಕ್ಷೇತ್ರಗಳಲ್ಲಿ ಮುನ್ನಡೆ

    ಪ್ರಧಾನಿ ಮೋದಿ ಅವರ ದೂರದೃಷ್ಟಿಯಿಂದ ಪ್ರೇರಿತವಾದ ಡಬಲ್ ಇಂಜಿನ್ ಸರ್ಕಾರವು ರಾಜ್ಯದ ಬೆಳವಣಿಗೆಯನ್ನು ಎತ್ತರಕ್ಕೆ ಕೊಂಡೊಯ್ಯಲಿದೆ ಎಂದು ನಾನು ದೃಢವಾಗಿ ನಂಬುತ್ತೇನೆ. ಈ ಮಹೋನ್ನತ ಸಾಧನೆಗಾಗಿ ಪ್ರಧಾನಿ ಮೋದಿ, ಪಕ್ಷದ ಅಧ್ಯಕ್ಷ ಜಿ.ಪಿ.ನಡ್ಡಾ, ಸಿಎಂ ಏಕನಾಥ್‌ ಶಿಂಧೆ, ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್‌ ಮತ್ತು ಅಜಿತ್‌ ಪವಾರ್‌ ಅವರು ಮತ್ತು ಬಿಜೆಪಿ ನಾಯಕರು ಹಾಗೂ ಮಹಾಯುತಿ ಕಾರ್ಯಕರ್ತರಿಗೆ ನನ್ನ ಪ್ರಾಮಾಣಿಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.

    ಮತದಾರರಲ್ಲಿ ಜಾಗೃತಿ ಮೂಡಿಸಲು ಚುನಾವಣಾ ಸಮಯದಲ್ಲಿ ಅವಿರತವಾಗಿ ಶ್ರಮಿಸಿದ ಸ್ವಯಂಸೇವಾ ಸಂಸ್ಥೆಗಳಿಗೆ ನಾನು ಪ್ರಾಮಾಣಿಕ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ ಎಂದು ಗಡ್ಕರಿ ಪೋಸ್ಟ್‌ ಹಾಕಿದ್ದಾರೆ. ಇದನ್ನೂ ಓದಿ: Maharashtra Election Results: ಬಿಷ್ಣೋಯ್‌ ಗ್ಯಾಂಗ್‌ನಿಂದ ಹತ್ಯೆಯಾಗಿದ್ದ ಬಾಬಾ ಸಿದ್ದಿಕಿ ಪುತ್ರನಿಗೆ ಹಿನ್ನಡೆ

    ಸದ್ಯದ ಅಂಕಿಅಂಶಗಳ ಪ್ರಕಾರ, ಮಹಾರಾಷ್ಟ್ರ ಚುನಾವಣೆಯಲ್ಲಿ ಬಿಜೆಪಿ+ 225, ಕಾಂಗ್ರೆಸ್‌+ 53 ಹಾಗೂ ಇತರೆ 10 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿವೆ.

  • ಯಾರಾಗ್ತಾರೆ ಮಹಾರಾಷ್ಟ್ರ ಸಿಎಂ – ರಾತ್ರೋರಾತ್ರಿ ತಲೆ ಎತ್ತಿದೆ ಅಜಿತ್ ಪವಾರ್ ಪೋಸ್ಟರ್

    ಯಾರಾಗ್ತಾರೆ ಮಹಾರಾಷ್ಟ್ರ ಸಿಎಂ – ರಾತ್ರೋರಾತ್ರಿ ತಲೆ ಎತ್ತಿದೆ ಅಜಿತ್ ಪವಾರ್ ಪೋಸ್ಟರ್

    – ಎಲ್ಲ ಬಣಗಳಲ್ಲೂ ಮುಂದಿನ ಸಿಎಂ ಬಗ್ಗೆಯೇ ಚರ್ಚೆ

    ಮುಂಬೈ: ಮಹಾರಾಷ್ಟ್ರ (Maharashtra) ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟಕ್ಕೆ ಕ್ಷಣಗಣನೆ ಶುರುವಾಗಿದೆ. ‘ಮಹಾ’ ಅಧಿಕಾರದ ಚುಕ್ಕಾಣಿ ಯಾರಿಗೆ ಎಂಬ ಕುತೂಹಲ ಎಲ್ಲರಲ್ಲೂ ಮನೆಮಾಡಿದೆ. ಈ ಹೊತ್ತಿನಲ್ಲೇ, ಎನ್‌ಸಿಪಿ ಮುಖ್ಯಸ್ಥ ಅಜಿತ್‌ ಪವಾರ್‌ ಮುಂದಿನ ಸಿಎಂ ಎಂದು ಬಿಂಬಿಸುವ ಪೋಸ್ಟರ್‌ಗಳು ರಾರಾಜಿಸುತ್ತಿವೆ.

    ನ.23 ರಂದು ನಡೆಯಲಿರುವ ಮಹಾರಾಷ್ಟ್ರ ಚುನಾವಣೆಯ ಮತ ಎಣಿಕೆಗೆ ಮುನ್ನ, ಪುಣೆಯಲ್ಲಿ ಎನ್‌ಸಿಪಿ ಮುಖ್ಯಸ್ಥ ಮತ್ತು ಉಪ ಮುಖ್ಯಮಂತ್ರಿ ಅಜಿತ್ ಪವಾರ್ (Ajit Pawar) ಅವರನ್ನು ಮುಖ್ಯಮಂತ್ರಿ ಎಂದು ಬಿಂಬಿಸುವ ಪೋಸ್ಟರ್‌ಗಳು ರಾತ್ರೋರಾತ್ರಿ ತಲೆ ಎತ್ತಿವೆ. ಈ ಪೋಸ್ಟರ್ ಅನ್ನು ಪಕ್ಷದ ಮುಖಂಡ ಸಂತೋಷ್ ನಂಗರೆ ಹಾಕಿದ್ದಾರೆ. ಇದನ್ನೂ ಓದಿ: ಅಘಾಡಿಗೆ ಆಪರೇಷನ್‌ ಭೀತಿ – ಮತ್ತೆ ರೆಸಾರ್ಟ್‌ ಪಾಲಿಟಿಕ್ಸ್‌ , ಕರ್ನಾಟಕಕ್ಕೆ ಶಾಸಕರು?

    ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಮತ್ತು ಕಾಂಗ್ರೆಸ್ ನೇತೃತ್ವದ ಮಹಾ ವಿಕಾಸ್ ಅಘಾಡಿ (ಎಂವಿಎ) ನಡುವೆ ಪೈಪೋಟಿ ಇರಲಿದೆ ಎಂದು ಮತಗಟ್ಟೆ ಸಮೀಕ್ಷೆಗಳು ಭವಿಷ್ಯ ನುಡಿದಿದ್ದವು.

    ಆಡಳಿತಾರೂಢ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಯಲ್ಲಿ ಬಿಜೆಪಿ, ಶಿವಸೇನೆ ಮತ್ತು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ (ಅಜಿತ್ ಪವಾರ್ ಬಣ) ಸೇರಿವೆ. ವಿರೋಧ ಪಕ್ಷದ ಎಂವಿಎ ಮೈತ್ರಿಕೂಟದಲ್ಲಿ ಕಾಂಗ್ರೆಸ್, ಶಿವಸೇನೆ (ಉದ್ಧವ್‌ ಬಣ) ಮತ್ತು ಎನ್‌ಸಿಪಿ (ಶರದ್ ಪವಾರ್ ಬಣ) ಒಳಗೊಂಡಿದೆ. ಇದನ್ನೂ ಓದಿ: axis MY INDIA Exit Poll: ಮಹಾರಾಷ್ಟ್ರದಲ್ಲಿ ಮಹಾಯುತಿಗೆ ಅಧಿಕಾರ

    ಆಡಳಿತಾರೂಢ ಮಹಾಯುತಿಯು ಮಹಾರಾಷ್ಟ್ರದಲ್ಲಿ ಅಧಿಕಾರವನ್ನು ಉಳಿಸಿಕೊಳ್ಳಲು ಸಜ್ಜಾಗಿದೆ. ಜಾರ್ಖಂಡ್‌ನಲ್ಲಿ ಎನ್‌ಡಿಎ ಕೂಡ ಸರ್ಕಾರ ರಚಿಸುವ ಹೊಸ್ತಿಲಲ್ಲಿದೆ ಎಂದು ಸಮೀಕ್ಷೆಗಳು ಭವಿಷ್ಯ ನುಡಿದಿವೆ.