Tag: Maharashtra Politics

  • Sharad Pawar: ಎನ್‌ಸಿಪಿ ಮುಖ್ಯಸ್ಥ ಸ್ಥಾನಕ್ಕೆ ಶರದ್‌ ಪವಾರ್‌ ರಾಜೀನಾಮೆ

    Sharad Pawar: ಎನ್‌ಸಿಪಿ ಮುಖ್ಯಸ್ಥ ಸ್ಥಾನಕ್ಕೆ ಶರದ್‌ ಪವಾರ್‌ ರಾಜೀನಾಮೆ

    ಮುಂಬೈ: ಮಹಾರಾಷ್ಟ್ರದ (Maharashtra) ಹಿರಿಯ ರಾಜಕಾರಣಿ, ಎನ್‌ಸಿಪಿ ರಾಷ್ಟ್ರೀಯ ಮುಖ್ಯಸ್ಥ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಎನ್‌ಸಿಪಿ (NCP) ಮುಖ್ಯಸ್ಥ ಶರದ್ ಪವಾರ್ (Sharad Pawar) ಘೋಷಿಸಿದ್ದಾರೆ.

    ಪವಾರ್ ಅವರು ದೇಶದ ಪ್ರಮುಖ ವಿರೋಧ ಪಕ್ಷದ ನಾಯಕರಲ್ಲಿ ಒಬ್ಬರು. ಮಹಾರಾಷ್ಟ್ರದಲ್ಲಿ ಮಹಾ ವಿಕಾಸ್ ಅಘಾಡಿ ಸರ್ಕಾರವನ್ನು ರಚಿಸಲು ಶಿವಸೇನಾ, ಕಾಂಗ್ರೆಸ್ ಮತ್ತು ಎನ್‌ಸಿಪಿ ನಡುವೆ ಮೈತ್ರಿಯನ್ನು ಒಟ್ಟುಗೂಡಿಸುವಲ್ಲಿ ದೊಡ್ಡ ಪಾತ್ರ ಹೊಂದಿದ್ದರು. ಇದನ್ನೂ ಓದಿ: ಹೆಲಿಕಾಪ್ಟರ್‌ಗೆ ಹದ್ದು ಡಿಕ್ಕಿ- ಡಿಕೆ ಶಿವಕುಮಾರ್‌ ಗ್ರೇಟ್‌ ಎಸ್ಕೇಪ್‌

    ಉದ್ಧವ್‌ ಠಾಕ್ರೆ ಸರ್ಕಾರದಿಂದ ಬೇರ್ಪಟ್ಟ ನಂತರ ಏಕನಾಥ್‌ ಶಿಂಧೆ ಅವರು ಪಕ್ಷದ ತಂಡದೊಂದಿಗೆ ಬಿಜೆಪಿ ಸೇರಿ ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಿದ್ದರು. ಇದಾದ ಬಳಿಕ, ಈಚೆಗೆ ಎನ್‌ಸಿಪಿಯ ಅಜಿತ್‌ ಪವಾರ್‌ ಅವರು ತಮ್ಮ ಚಿಕ್ಕಪ್ಪ ಶರದ್‌ ಪವಾರ್‌ ಅವರನ್ನು ತೊರೆದು ಬಿಜೆಪಿಯೊಂದಿಗೆ ಕೈಜೋಡಿಸಿ ಮುಂದಿನ ಸಿಎಂ ಆಗುತ್ತಾರೆಯೇ ಎಂಬ ಊಹಾಪೋಹದ ಸುದ್ದಿ ಹರಿದಾಡುತ್ತಿದೆ.

    ಇದರ ಬೆನ್ನಲ್ಲೇ ಶರದ್‌ ಪವಾರ್‌ ಅವರು ಮುಖ್ಯಸ್ಥ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಈ ರಾಜಕೀಯ ಬೆಳವಣಿಗೆ ಹಲವು ಕುತೂಹಲಗಳಿಗೆ ಎಡೆ ಮಾಡಿಕೊಟ್ಟಿದೆ. ಇದನ್ನೂ ಓದಿ: PublicTV Explainer: ಮತ ಪ್ರಮಾಣ ಹೆಚ್ಚಿದ್ದರೂ ಕರ್ನಾಟಕದಲ್ಲಿ ಕಾಂಗ್ರೆಸ್‌ ಏಕಾಂಗಿಯಾಗಿ ಅಧಿಕಾರಕ್ಕೆ ಏರಿಲ್ಲ ಯಾಕೆ?

  • ಉದ್ಧವ್‌ ಠಾಕ್ರೆಗೆ ಮತ್ತೊಂದು ಶಾಕ್‌ – ಶಿವಸೇನಾ ನಾಯಕ ಸ್ಥಾನಕ್ಕೆ ರಾಮದಾಸ್‌ ಕದಂ ರಾಜೀನಾಮೆ

    ಉದ್ಧವ್‌ ಠಾಕ್ರೆಗೆ ಮತ್ತೊಂದು ಶಾಕ್‌ – ಶಿವಸೇನಾ ನಾಯಕ ಸ್ಥಾನಕ್ಕೆ ರಾಮದಾಸ್‌ ಕದಂ ರಾಜೀನಾಮೆ

    ಮುಂಬೈ: ಶಿವಸೇನಾ ಶಾಸಕರು ಬಂಡಾಯವೆದ್ದು ಮಹಾರಾಷ್ಟ್ರ ಮೈತ್ರಿ ಸರ್ಕಾರ ಪತನದಿಂದಾಗಿ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಉದ್ಧವ್‌ ಠಾಕ್ರೆಗೆ ಮತ್ತೊಂದು ಆಘಾತ ಎದುರಾಗಿದೆ. ಶಿವಸೇನಾ ನಾಯಕ ಸ್ಥಾನಕ್ಕೆ ರಾಮದಾಸ್‌ ಕದಂ ಅವರು ರಾಜೀನಾಮೆ ನೀಡಿದ್ದಾರೆ.

    ಕದಂ ಅವರು ತಮ್ಮ ರಾಜೀನಾಮೆ ಪತ್ರದಲ್ಲಿ ಉದ್ಧವ್‌ ಠಾಕ್ರೆ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಪಕ್ಷದ ಸಂಸ್ಥಾಪಕ ಬಾಳಾಸಾಹೇಬ್‌ ಠಾಕ್ರೆ ನಿಧನ ನಂತರ ಮಹಾರಾಷ್ಟ್ರದ ಮಾಜಿ ಸಿಎಂ (ಉದ್ಧವ್‌ ಠಾಕ್ರೆ) ತಮ್ಮದೇ ಆದ ನಾಯಕರನ್ನು ಒಳಗೊಳ್ಳಲು ವಿಫಲರಾಗಿದ್ದಾರೆ. ಇದರಿಂದ ಶಿವಸೇನಾ ಮುಖ್ಯಸ್ಥರ ಹುದ್ದೆಗೆ ಯಾವುದೇ ಮೌಲ್ಯವಿಲ್ಲ ಎಂದು ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಈ ಚುನಾವಣೆ ಪ್ರಜಾಪ್ರಭುತ್ವದ ಉಳಿವಿನ ಬಗ್ಗೆ ನಿರ್ಧರಿಸುತ್ತೆ: ಯಶವಂತ್ ಸಿನ್ಹಾ

    2019 ರಲ್ಲಿ ಶಿವಸೇನಾವು ಎನ್‌ಸಿಪಿ ಮತ್ತು ಕಾಂಗ್ರೆಸ್‌ನೊಂದಿಗೆ ಕೈಜೋಡಿಸಲು ನಿರ್ಧರಿಸಿದಾಗ, ಬಾಳಾಸಾಹೇಬ್ ಠಾಕ್ರೆ ತಮ್ಮ ಜೀವನದುದ್ದಕ್ಕೂ ವಿರೋಧಿಸಿದವರೊಂದಿಗೆ ಮೈತ್ರಿ ಮಾಡಿಕೊಳ್ಳಬೇಡಿ ಎಂದು ಠಾಕ್ರೆಗೆ ಮನವಿ ಮಾಡಿದ್ದೆ. ಆದರೆ ಅದನ್ನು ಪರಿಗಣಿಸಲಿಲ್ಲ. ಪಕ್ಷದಲ್ಲಿ ನನಗೆ ಮತ್ತು ನನ್ನ ಪುತ್ರ ಯೋಗೇಶ್ ಕದಂ ಅವರನ್ನು ಪದೇ ಪದೇ ಅವಮಾನಿಸಲಾಗಿದೆ ಎಂದು ರಾಮದಾಸ್‌ ತಮ್ಮ ರಾಜೀನಾಮೆಗೆ ಕಾರಣ ತಿಳಿಸಿದ್ದಾರೆ.

    ಕದಂ ಅವರು ರಾಜೀನಾಮೆ ನೀಡಿದ ನಂತರ ಈಗ ಉದ್ಧವ್‌ ಠಾಕ್ರೆ ಬಣದಲ್ಲಿ ಉಳಿದಿರುವವರು ಕೇವಲ 8 ನಾಯಕರು. ಮಹಾ ವಿಕಾಸ್‌ ಅಘಾಡಿ ಮೈತ್ರಿ ವಿರುದ್ಧ ಬಂಡೆದ್ದ ಶಿವಸೇನಾ ಶಾಸಕರು ಏಕನಾಥ್‌ ಶಿಂಧೆ ನೇತೃತ್ವದಲ್ಲಿ ಉದ್ಧವ್‌ ಬಣ ತೊರೆದರು. ನಂತರ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಶಿಂಧೆ ನೇತೃತ್ವದಲ್ಲಿ (ಸಿಎಂ) ಸರ್ಕಾರ ರಚಿಸಲಾಯಿತು. ಇದನ್ನೂ ಓದಿ: ನಾನು ಅಪರಾಧಿಯಲ್ಲ: ಸಿಂಗಾಪುರ ಭೇಟಿಗೆ ಅನುಮತಿ ಸಿಗದೇ ಕೇಜ್ರಿವಾಲ್ ಅಸಮಾಧಾನ

    ಮಹಾರಾಷ್ಟ್ರದಲ್ಲಿ ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರದ ಪತನಕ್ಕೆ ಕಾರಣವಾದ ಇತ್ತೀಚಿನ ರಾಜಕೀಯ ಬಿಕ್ಕಟ್ಟಿಗೆ ಸಂಬಂಧಿಸಿದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಜುಲೈ 20 ರಂದು ವಿಚಾರಣೆಗೆ ನಿಗದಿಪಡಿಸಿದೆ.

    Live Tv
    [brid partner=56869869 player=32851 video=960834 autoplay=true]

  • ಅಭಿವೃದ್ಧಿ ಮತ್ತು ಹಿಂದುತ್ವಕ್ಕಾಗಿ ಬಿಜೆಪಿ ನಮ್ಮನ್ನು ಬೆಂಬಲಿಸಿದೆ – ಏಕನಾಥ್‌ ಶಿಂಧೆ

    ಅಭಿವೃದ್ಧಿ ಮತ್ತು ಹಿಂದುತ್ವಕ್ಕಾಗಿ ಬಿಜೆಪಿ ನಮ್ಮನ್ನು ಬೆಂಬಲಿಸಿದೆ – ಏಕನಾಥ್‌ ಶಿಂಧೆ

    ಮುಂಬೈ: ಬಿಜೆಪಿ ಅಧಿಕಾರಕ್ಕಾಗಿ ಅಲ್ಲ ಹಿಂದುತ್ವದ ಸಿದ್ಧಾಂತ ಮತ್ತು ಮಹಾರಾಷ್ಟ್ರದ ಅಭಿವೃದ್ಧಿಗೆ ನಮ್ಮ ಜೊತೆಗೆ ಕೈ ಜೋಡಿಸಿದೆ, ಬಿಜೆಪಿ ನಮಗೆ ಬೆಂಬಲ‌ ನೀಡಿದ ಕಾರಣದಿಂದಲೇ ನಾವು ಸರ್ಕಾರ ರಚಿಸುವಂತಾಯಿತು ಎಂದು ನೂತನ ಮುಖ್ಯಮಂತ್ರಿ ಏಕನಾಥ್‌ ಶಿಂಧೆ ಹೇಳಿದ್ದಾರೆ.

    ಪ್ರಮಾಣ ವಚನ ಸ್ವೀಕಾರದ ಬಳಿಕ ನೀಡಿದ ಮೊದಲ ಸಂದರ್ಶನದಲ್ಲಿ ಮಾತನಾಡಿರುವ ಅವರು, ಮಹಾವಿಕಾಸ್ ಅಘಾಡಿ ಸರ್ಕಾರದಲ್ಲಿ ಶಿವಸೇನಾ ಶಾಸಕರು ಕೆಲಸ ಮಾಡಲು ಕಷ್ಟಪಡುತ್ತಿದ್ದರು. ಕಾಂಗ್ರೆಸ್ ಮತ್ತು ಎನ್‌ಸಿಪಿ ಪ್ರಾಬಲ್ಯ ಸಾಧಿಸಿತ್ತು. ಉದ್ದವ್ ಠಾಕ್ರೆ ಹಿಂದುತ್ವದ ವಿಚಾರಣದಲ್ಲಿ ಮೊದಲಿನಂತಿರಲಿಲ್ಲ. ಇದನ್ನೂ ಓದಿ: ಐಸಿಯುವಿನಲ್ಲಿ ಲಾಲು ಪ್ರಸಾದ್ ಯಾದವ್‍ಗೆ ಚಿಕಿತ್ಸೆ – ಆರೋಗ್ಯ ವಿಚಾರಿಸಿದ ಮೋದಿ

    ಹಿಂದುತ್ವಕ್ಕೆ ಶಿವಸೇನಾ ಸೇರಿ ಪಕ್ಷೇತರ ಶಾಸಕರು ಮನ್ನಣೆ ನೀಡಿದರು. ಬಿಜೆಪಿ ಬರೀ ಅಧಿಕಾರಕ್ಕಾಗಿ ಇದನ್ನೆಲ್ಲ ಮಾಡದೇ ಅಭಿವೃದ್ಧಿ ಮತ್ತು ಹಿಂದುತ್ವಕ್ಕಾಗಿ ದೊಡ್ಡ ಸಂಖ್ಯೆಯಲ್ಲಿ ಶಾಸಕರು ಬೆಂಬಲ ನೀಡಿದ್ದಾರೆ. ನನ್ನ ಸಿಎಂ ಮಾಡುವ ಮೂಲಕ ಜನರಿಗೆ ಅಧಿಕಾರ ಮುಖ್ಯವಲ್ಲ ಎಂದು ಸಾಬೀತುಪಡಿಸಿದೆ.

    ರಾಜ್ಯವನ್ನು ಪ್ರಗತಿಯತ್ತ ಕೊಂಡೊಯ್ಯಿರಿ, ಅಭಿವೃದ್ಧಿಯತ್ತ ಕೊಂಡೊಯ್ಯಿರಿ, ಹೊಸ ಕಾರ್ಯಗಳನ್ನು ಆರಂಭಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸಲಹೆ ನೀಡಿದ್ದಾರೆ. ಮಹಾರಾಷ್ಟ್ರದ ಅಭಿವೃದ್ಧಿಗೆ ಕೇಂದ್ರ ಸರ್ಕಾರದ ಬೆಂಬಲ ಇರಲಿದೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಬೆಲೆ ಏರಿಕೆ ಬಿಸಿ – ಗೃಹಬಳಕೆಯ LPG ಸಿಲಿಂಡರ್ ಬೆಲೆ 50 ರೂ. ಏರಿಕೆ

    ಇದು ಬಹಳ ದೊಡ್ಡ ವಿಷಯ, ಕೇಂದ್ರ ಸರ್ಕಾರ ನಮ್ಮ ಜೊತೆಗೆ ಇದೆ. ಮುಖ್ಯವಾಗಿ ಯಾವುದೇ ತಪ್ಪು ಮಾಡಿಲ್ಲ. ಚುನಾವಣೆ ಪೂರ್ವದಲ್ಲಿ ಬಿಜೆಪಿ ಮತ್ತು ಶಿವಸೇನಾ ಮೈತ್ರಿ ಇತ್ತು. ನಾವು ಈಗ ಅದೇ ಪಕ್ಷದ ಜೊತೆಗೆ ಮೈತ್ರಿ ಮಾಡಿಕೊಂಡಿದ್ದೇವೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ನಾವು 200 ಸ್ಥಾನಗಳನ್ನು ಗೆಲ್ಲಲಿದ್ದೇವೆ ಎಂದ ಅವರು, ಫಡ್ನವಿಸ್ ಡಿಸಿಎಂ ಆಗಿರುವುದು ದೊಡ್ಡ ಮನಸ್ಸು ಎಂದಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮಹಾರಾಷ್ಟ್ರ ಸ್ಪೀಕರ್ ಆಗಿ ಆಯ್ಕೆಯಾದ ರಾಹುಲ್ ನಾರ್ವೇಕರ್ ಯಾರು?

    ಮಹಾರಾಷ್ಟ್ರ ಸ್ಪೀಕರ್ ಆಗಿ ಆಯ್ಕೆಯಾದ ರಾಹುಲ್ ನಾರ್ವೇಕರ್ ಯಾರು?

    ಮುಂಬೈ: ಮಹಾರಾಷ್ಟ್ರ ವಿಧಾನಸಭೆಯ ಸ್ಪೀಕರ್ (Maharashtra Assembly Speaker) ಆಗಿ ಬಿಜೆಪಿಯ ರಾಹುಲ್ ನಾರ್ವೇಕರ್ ಆಯ್ಕೆಯಾಗಿದ್ದಾರೆ. ಭಾನುವಾರ ನಡೆದ ಸ್ಪೀಕರ್ ಆಯ್ಕೆ ಪ್ರಕ್ರಿಯೆಯಲ್ಲಿ ರಾಹುಲ್ ನಾರ್ವೇಕರ್ (Rahul Narwekar) 164 ಮತಗಳನ್ನು ಪಡೆದರು.

    ರಾಹುಲ್ ನಾರ್ವೇಕರ್ ಯಾರು?: ರಾಹುಲ್ ನಾರ್ವೇಕರ್ ಮಹಾರಾಷ್ಟ್ರದ ಕೊಲಾಬಾ (Colaba) ವಿಧಾನಸಭಾ ಕ್ಷೇತ್ರದ ಶಾಸಕ. ರಾಜಕೀಯ ಕುಟುಂಬಕ್ಕೆ ಸೇರಿದ ವ್ಯಕ್ತಿ. ಮಹಾರಾಷ್ಟ್ರ ರಾಜಕೀಯದಲ್ಲಿ ಚಿರಪರಿಚಿತ ವ್ಯಕ್ತಿ. ವೃತ್ತಿಯಲ್ಲಿ ವಕೀಲರಾಗಿರುವ ರಾಹುಲ್ 2019ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದರು.

    ಈ ಹಿಂದೆ ಶಿವಸೇನೆ ಹಾಗೂ ಎನ್‍ಸಿಪಿ ಜೊತೆಗೂ ಗುರುತಿಸಿಕೊಂಡಿದ್ದರು. ಶಿವಸೇನೆ ಯೂತ್ ವಿಂಗ್‍ನ ವಕ್ತಾರರಾಗಿಯೂ ಕಾರ್ಯನಿರ್ವಹಿಸಿದ್ದರು.  ಇದನ್ನೂ ಓದಿ: ಸಿದ್ದರಾಮಯ್ಯಗೆ ನಾಯಕತ್ವ ಘೋಷಣೆ ವದಂತಿ – ಅಖಾಡಕ್ಕೆ ಇಳಿದ ಡಿಕೆಶಿ

    ಕೌಟುಂಬಿಕ ಹಿನ್ನೆಲೆ: ರಾಹುಲ್ ನಾರ್ವೇಕರ್ ತಂದೆ ಸುರೇಶ್ ನಾರ್ವೇಕರ್ ಕೌನ್ಸಿಲರ್ ಆಗಿದ್ದರು. 2014ರಲ್ಲಿ ರಾಹುಲ್ ಶಿವಸೇನೆ ಪಕ್ಷದಲ್ಲಿದ್ದರು. ಈ ವೇಳೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಉತ್ಸುಕರಾಗಿದ್ದರೂ ಟಿಕೆಟ್ ಸಿಕ್ಕಿರಲಿಲ್ಲ.

    ಮಹಾರಾಷ್ಟ್ರ ವಿಧಾನ ಪರಿಷತ್ ಸಭಾಪತಿ ರಾಮ್ ರಾಜೇ ನಾಯ್ಕ್ ನಿಂಬಾಳ್ಕರ್ ರಾಹುಲ್ ನಾರ್ವೇಕರ್ ಅವರ ಮಾವ. ಶಿವಸೇನೆ ಟಿಕೆಟ್ ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ರಾಹುಲ್ ಎನ್‍ಸಿಪಿ ಸೇರಿದ್ದರು. ಮಾವಲ್ ಲೋಕಸಭಾ ಕ್ಷೇತ್ರದ ಟಿಕೆಟ್ ನೀಡಿದರೂ ರಾಹುಲ್ ಚುನಾವಣೆಯಲ್ಲಿ ಸೋತರು. ಬಳಿಕ ಬಿಜೆಪಿಗೆ ಸೇರ್ಪಡೆಯಾಗಿದ್ದರು. ಇದನ್ನೂ ಓದಿ: ಮಹಾರಾಷ್ಟ್ರದ ನೂತನ ಸ್ಪೀಕರ್ ಆಗಿ ರಾಹುಲ್ ನಾರ್ವೇಕರ್ ಆಯ್ಕೆ

    ಕಾಂಗ್ರೆಸ್ ನಾಯಕ ನಾನಾ ಪಟೋಲೆ 2021ರ ಫೆಬ್ರವರಿ ತಿಂಗಳಲ್ಲಿ ರಾಜೀನಾಮೆ ನೀಡಿದ್ದ ಹಿನ್ನೆಲೆಯಲ್ಲಿ ಸ್ಪೀಕರ್ ಸ್ಥಾನ ತೆರವಾಗಿತ್ತು. ಕಳೆದ ಗುರುವಾರ ಏಕನಾಥ್ ಶಿಂಧೆ ಅವರು ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದರು. ವಿಧಾನಸಭೆ ಅಧಿವೇಶನ ಇಂದಿನಿಂದ ಆರಂಭವಾಗಿದ್ದು, ನಾಳೆ ಸದನದಲ್ಲಿ ವಿಶ್ವಾಸಮತ ಯಾಚನೆ ಪ್ರಕ್ರಿಯೆ ನಡೆಯಲಿದೆ.

    Live Tv

  • ಮಹಾರಾಷ್ಟ್ರದಲ್ಲಿ ಇಂದು ಉದ್ಧವ್ ಸರ್ಕಾರ ರಚನೆ – ಎನ್‍ಸಿಪಿಗೆ ಡಿಸಿಎಂ, ಕಾಂಗ್ರೆಸ್‍ಗೆ ಸ್ಪೀಕರ್ ಸ್ಥಾನ

    ಮಹಾರಾಷ್ಟ್ರದಲ್ಲಿ ಇಂದು ಉದ್ಧವ್ ಸರ್ಕಾರ ರಚನೆ – ಎನ್‍ಸಿಪಿಗೆ ಡಿಸಿಎಂ, ಕಾಂಗ್ರೆಸ್‍ಗೆ ಸ್ಪೀಕರ್ ಸ್ಥಾನ

    ಮುಂಬೈ: ಮಹಾರಾಷ್ಟ್ರದಲ್ಲಿಂದು ಉದ್ಧವ್ ಠಾಕ್ರೆ ನೇತೃತ್ವದ ‘ಮಹಾವಿಕಾಸ್ ಅಘಡಿ’ ಸರ್ಕಾರ ರಚನೆಯಾಗಲಿದೆ. ಸಂಜೆ 6.40ಕ್ಕೆ ಮುಂಬೈನ ಶಿವಾಜಿ ಪಾರ್ಕ್ ನಲ್ಲಿ ನಡೆಯಯುವ ಕಾರ್ಯಕ್ರಮದಲ್ಲಿ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಉದ್ಧವ್ ಠಾಕ್ರೆ ಜೊತೆಗೆ ಎನ್‍ಸಿಪಿಯ ಒಬ್ಬರು ಡಿಸಿಎಂ ಆಗಿ, ಕಾಂಗ್ರೆಸ್‍ನ ಇಬ್ಬರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಎನ್‍ಸಿಪಿಯ ಅಜಿತ್ ಪವಾರ್ ಬದಲು ಜಯಂತ್ ಪಾಟೀಲ್‍ಗೆ ಡಿಸಿಎಂ ಹುದ್ದೆ ಒಲಿಯುವ ಸಂಭವ ಇದೆ ಎನ್ನಲಾಗುತ್ತಿದೆ.

    ಉದ್ಧವ್ ಠಾಕ್ರೆ ಪ್ರಮಾಣ ವಚನ ಸಮಾರಂಭಕ್ಕೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಪ್ರಧಾನಿ ಮೋದಿ, ಗೃಹ ಮಂತ್ರಿ ಅಮಿತ್ ಶಾ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಎಂಕೆಯ ಸ್ಟಾಲಿನ್ ಸೇರಿದಂತೆ ಹಲವು ಗಣ್ಯರನ್ನು ಆಹ್ವಾನಿಸಲಾಗಿದೆ. ಜೊತೆಗೆ ಮಹಾರಾಷ್ಟ್ರದ 400 ರೈತರನ್ನು ಪದಗ್ರಹಣ ಸಮಾರಂಭಕ್ಕೆ ಆಹ್ವಾನಿಸಲಾಗಿದೆ.

    ಬುಧವಾರ ಸಂಜೆ ಸುಧೀರ್ಘ ಆರು ಗಂಟೆಗಳ ಕಾಲ ನಡೆದ ಮಹಾ ವಿಕಾಸ್ ಅಘಡಿ ಸಭೆಯಲ್ಲಿ ಅಧಿಕಾರ ಹಂಚಿಕೆಯ ಸೂತ್ರವನ್ನು ಫೈನಲ್ ಮಾಡಲಾಯ್ತು. ಇದರ ಅನ್ವಯ ಉದ್ಧವ್ ಠಾಕ್ರೆ ಐದು ವರ್ಷ ಸಿಎಂ ಆಗಲಿದ್ದಾರೆ. ಇಬ್ಬರು ಡಿಸಿಎಂಗಳ ಬದಲು ಎನ್‍ಸಿಪಿಯ ಒಬ್ಬರನ್ನು ಡಿಸಿಎಂ ಮಾಡಲು ತೀರ್ಮಾನಿಸಲಾಗಿದೆ. ಜೊತೆಗೆ ಕಾಂಗ್ರೆಸ್‍ಗೆ ಡಿಸಿಎಂ ಬದಲು ಸ್ಪೀಕರ್ ಹುದ್ದೆ ಕೊಡಲು ಸಭೆ ತೀರ್ಮಾನಿಸಿದೆ. ಡಿಸೆಂಬರ್ 3ರಂದು ಪೂರ್ಣ ಪ್ರಮಾಣದ ಸಂಪುಟ ಅಸ್ತಿತ್ವಕ್ಕೆ ಬರಲಿದೆ. ಇನ್ನು ಆದಿತ್ಯ ಠಾಕ್ರೆಗೆ ಮಂತ್ರಿ ಸ್ಥಾನ ಕೊಡದೇ, ಅವರನ್ನು ಶಾಡೋ ಸಿಎಂ ರೀತಿ ಬಿಂಬಿಸಲು ಶಿವಸೇನೆ ತೀರ್ಮಾನಿಸಿದೆ ಎಂದು ವರದಿಯಾಗಿದೆ.

    ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರ ಬುಲೆಟ್ ರೈಲು ಯೋಜನೆಗೆ ಕೊಕ್ಕೆ ಹಾಕೋದು ಬಹುತೇಕ ಖಚಿತವಾಗಿದೆ. ನಮಗೆ ಬುಲೆಟ್ ರೈಲಿಗಿಂತ ರೈತರ ಹಿತ ಮುಖ್ಯ ಎಂದು ಸ್ಪಷ್ಟಪಡಿಸಿದೆ. ಸಭೆ ಬಳಿಕ ಮಾತನಾಡಿದ ಶಿವಸೇನೆಯ ದೀಪಕ್ ಕೆಸಾರ್ಕರ್, ನಮಗೆ ರೈತರ ಹಿತವೇ ಪ್ರಥಮ ಆದ್ಯತೆ. ಹಾಗಂತಾ ನಾವು ಬುಲೆಟ್ ರೈಲು ಯೋಜನೆಯನ್ನು ವಿರೋಧಿಸುತ್ತಿಲ್ಲ. ಮುಂಬೈ-ಅಹಮದಾಬಾದ್ ಸಂಪರ್ಕಿಸುವ ಈ ಯೋಜನೆ ಒಳ್ಳೆಯದು. ಆದ್ರೆ ಮೂರೂವರೆ ಸಾವಿರ ಖರ್ಚು ಮಾಡಿ ರೈಲಿನಲ್ಲಿ ಹೋಗುವ ಬದಲು ವಿಮಾನದಲ್ಲೇ ಪ್ರಯಾಣ ಮಾಡಬಹುದು. ಸದ್ಯಕ್ಕೆ ಬುಲೆಟ್ ರೈಲು ಯೋಜನೆ ಅಗತ್ಯವಿಲ್ಲ. ನಮ್ಮ ಸರ್ಕಾರಕ್ಕೆ ರೈತರು, ಮಹಿಳೆಯರು, ಕಾರ್ಮಿಕರ ಹಿತ ಮುಖ್ಯ. ನಿರುದ್ಯೋಗ ಹೋಗಲಾಡಿಸುವುದು ನಮ್ಮ ಆದ್ಯತೆ ಎಂದು ತಿಳಿಸಿದ್ದಾರೆ.

  • ಸಿಎಂ ಸ್ಥಾನಕ್ಕೆ ದೇವೇಂದ್ರ ಫಡ್ನವೀಸ್ ರಾಜೀನಾಮೆ

    ಸಿಎಂ ಸ್ಥಾನಕ್ಕೆ ದೇವೇಂದ್ರ ಫಡ್ನವೀಸ್ ರಾಜೀನಾಮೆ

    ಮುಂಬೈ: ವಿಶ್ವಾಸಮತಯಾಚನೆಗೂ ಮುನ್ನವೇ ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ದೇವೇಂದ್ರ ಫಡ್ನವೀಸ್ ರಾಜೀನಾಮೆ ನೀಡಿದ್ದಾರೆ.

    ಇಂದು ಬೆಳಗ್ಗೆ ಸುಪ್ರೀಂ ಕೋರ್ಟ್ ಬುಧವಾರ ಸಂಜೆ 5 ಗಂಟೆಯ ಒಳಗಡೆ ಬಹುಮತ ಸಾಬೀತು ಪಡಿಸುವಂತೆ ಬಿಜೆಪಿ ಸರ್ಕಾರಕ್ಕೆ ಸೂಚಿಸಿತ್ತು. ಈ ಆದೇಶದ ಬಳಿಕ ಸಂಖ್ಯಾಬಲ ಇಲ್ಲದ ಹಿನ್ನೆಲೆಯಲ್ಲಿ ಅಜಿತ್ ಪವಾರ್ ಉಪಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದರ ಬೆನ್ನಲ್ಲೇ ಇಂದು ಮಧ್ಯಾಹ್ನ ಸುದ್ದಿಗೋಷ್ಠಿ ನಡೆಸಿ ರಾಜೀನಾಮೆ ನೀಡುವುದಾಗಿ ಫಡ್ನವೀಸ್ ಪ್ರಕಟಿಸಿದ್ದಾರೆ.

    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದೇವೇಂದ್ರ ಫಡ್ನವೀಸ್, ಚುನಾವಣೆಯಲ್ಲಿ 105 ಸ್ಥಾನ ಗೆದ್ದು ದೊಡ್ಡ ಪಕ್ಷವಾಗಿ ಬಿಜೆಪಿ ಹೊರಹೊಮ್ಮಿದೆ. ಚುನಾವಣೆಯಲ್ಲಿ ಜೊತೆಯಾಗಿದ್ದ ಶಿವಸೇನೆ ಜನಾದೇಶವನ್ನು ಧಿಕ್ಕರಿಸಿತು. ಶಿವಸೇನೆ ನಂಬರ್ ಆಟಕ್ಕೆ ಮುಂದಾಗಿ ಚೌಕಾಸಿಗೆ ಮುಂದಾಯಿತು. ಶಿವಸೇನೆಗೆ ಮುಖ್ಯಮಂತ್ರಿ ಸ್ಥಾನ ಎಂದು ತೀರ್ಮಾನವಾಗಿರಲಿಲ್ಲ. ಫಲಿತಾಂಶದ ಬಳಿಕ ದೇವೇಂದ್ರ ಫಡ್ನವೀಸ್ ಮುಖ್ಯಮಂತ್ರಿ ಆಗ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಅಮಿತ್ ಶಾ ಘೋಷಣೆ ಮಾಡಿದ್ದರು. ಖಾಸಗಿ ವಾಹಿನಿ ನೀಡಿದ ಸಂದರ್ಶನದಲ್ಲಿಯೂ ಅಮಿತ್ ಈ ಬಗ್ಗೆ ಹಲವು ಬಾರಿ ಸ್ಪಷ್ಟಪಡಿಸಿದ್ದರು ಎಂದು ಹೇಳಿದರು.

    ಮೊದಲ ಬಾರಿಗೆ ರಾಜ್ಯಪಾಲರು ಸರ್ಕಾರ ರಚನೆಗೆ ಆಹ್ವಾನಿಸಿದಾಗ ನಮ್ಮ ಜೊತೆಗೆ ಶಿವಸೇನೆ ಇಲ್ಲ. ಹಾಗಾಗಿ ನಾವು ಸರ್ಕಾರ ರಚನೆ ಮಾಡಲ್ಲ ಎಂದು ಹೇಳಿದ್ದೇವೆ. ಹೀಗೆ ರಾಜ್ಯಪಾಲರು ಪ್ರತಿಯೊಂದು ಪಕ್ಷಕ್ಕೂ ಸರ್ಕಾರ ರಚನೆಗೆ ಆಹ್ವಾನಿಸಿದ್ದರು. ಯಾರು ಸರ್ಕಾರ ರಚನೆಗೆ ಮುಂದಾಗದೇ ಇದ್ದಾಗ ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸ್ಸು ಮಾಡಲಾಗಿತ್ತು. ತದನಂತರ ಶಿವಸೇನೆ, ಎನ್‍ಸಿಪಿ ಮತ್ತು ಕಾಂಗ್ರೆಸ್ ಸರ್ಕಾರ ರಚನೆಯ ಕಸರತ್ತು ಮುಂದುವರಿಸಿದ್ದವು ಎಂದು ತಿಳಿಸಿದರು.

    ಅಜಿತ್ ಪವಾರ್ ಬೆಂಬಲ ನೀಡಿದಾಗ ಸರ್ಕಾರ ರಚಿಸುವ ಪ್ರಸ್ತಾಪವನ್ನು ಸಲ್ಲಿಸಿ ಪ್ರಮಾಣ ವಚನ ಸ್ವೀಕರಿಸಲಾಯ್ತು. ಸದ್ಯ ನಮ್ಮ ಬಳಿ ಬಹುಮತ ಇಲ್ಲ. ಹಾಗಾಗಿ ನಾನು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ಮುಂದಿನ ದಿನಗಳಲ್ಲಿ ಬಿಜೆಪಿ ವಿಪಕ್ಷ ಸ್ಥಾನದಲ್ಲಿ ಕುಳಿತು ಸಮರ್ಥವಾಗಿ ಕೆಲಸ ಮಾಡುತ್ತದೆ. ಬೇರೆ ಬೇರೆ ಮನಸ್ಸಿನ ಜನರು ಹೇಗೆ ಸರ್ಕಾರ ನಡೆಸುತ್ತಾರೆ ಎಂಬುವುದು ಗೊತ್ತಾಗುತ್ತಿಲ್ಲ ಎಂದರು.

  • ಡಿಸಿಎಂ ಸ್ಥಾನಕ್ಕೆ ಅಜಿತ್ ಪವಾರ್ ರಾಜೀನಾಮೆ

    ಡಿಸಿಎಂ ಸ್ಥಾನಕ್ಕೆ ಅಜಿತ್ ಪವಾರ್ ರಾಜೀನಾಮೆ

    ಮುಂಬೈ: ವಿಶ್ವಾಸಮತ ಯಾಚನೆಗೂ ಮುನ್ನವೇ ಮಹಾರಾಷ್ಟ್ರದ ಡಿಸಿಎಂ ಅಜಿತ್ ಪವಾರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

    ಬಿಜೆಪಿಗೆ ಬೆಂಬಲ ಘೋಷಿಸಿ ದೇವೇಂದ್ರ ಫಡ್ನವೀಸ್ ಜೊತೆಯಲ್ಲಿ ಅಜಿತ್ ಪವಾರ್ ಭಾನುವಾರ ಉಪಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಅಜಿತ್ ಪವಾರ್ ಗೆ ಬೆಂಬಲ ನೀಡಿದ್ದ ಶಾಸಕರು ಮಾತೃಪಕ್ಷಕ್ಕೆ ಹಿಂದಿರುಗಿದ್ದರು. ಇಂದು ಸುಪ್ರೀಂಕೋರ್ಟ್ ನಾಳೆ ಸಂಜೆ 5 ಗಂಟೆಯೊಳಗೆ ವಿಶ್ವಾಸಮತ ಸಾಬೀತು ಮಾಡುವಂತೆ ಮಧ್ಯಂತರ ಆದೇಶ ನೀಡಿದೆ. ಈ ಬೆನ್ನಲ್ಲೇ ಅಜಿತ್ ಪವಾರ್ ದಿಢೀರ್ ರಾಜೀನಾಮೆ ಸಲ್ಲಿಸಿದ್ದಾರೆ. ಇತ್ತ ಸಿಎಂ ದೇವೇಂದ್ರ ಫಡ್ನವೀಸ್ ಮಧ್ಯಾಹ್ನ 3.30ಕ್ಕೆ ಸುದ್ದಿಗೋಷ್ಠಿ ಕರೆದಿದ್ದಾರೆ.

    ಇತ್ತ ಸಂಜೆ 5 ಗಂಟೆಗೆ ಎನ್‍ಸಿಪಿ, ಶಿವಸೇನೆ ಮತ್ತು ಕಾಂಗ್ರೆಸ್ ಜಂಟಿ ಸುದ್ದಿಗೋಷ್ಠಿಯನ್ನು ಕರೆದಿವೆ. ಈಗಾಗಲೇ ಅಜಿತ್ ಪವಾರ್ ಅವರನ್ನು ಎನ್‍ಸಿಪಿ ಶಾಸಕಾಂಗ ನಾಯಕ ಸ್ಥಾನದಿಂದ ಉಚ್ಛಾಟಿಸಿ ಜಯಂತ್ ಪಾಟೀಲ್ ಅವರನ್ನು ಆಯ್ಕೆ ಮಾಡಲಾಗಿದೆ. ಅಜಿತ್ ಪವಾರ್ ಅವರನ್ನು ಎನ್‍ಸಿಪಿಗೆ ಸೆಳೆಯಲು ಶರದ್ ಪವಾರ್ ಕುಟುಂಬಸ್ಥರು ಪ್ರಯತ್ನಿಸುತ್ತಿದ್ದಾರೆ ಎಂಬ ಮಾತುಗಳು ಮಹಾ ಅಂಗಳದಲ್ಲಿ ಕೇಳಿ ಬರುತ್ತಿವೆ. ಇದನ್ನೂ ಓದಿ: ಬಿಜೆಪಿಗೆ ಅಧಿಕಾರದ ಕುರ್ಚಿ ನೀಡಿದ ಅಜಿತ್ ಪವಾರ್ ಯಾರು? ಇಲ್ಲಿದೆ ಮಾಹಿತಿ

    ಸುಪ್ರಿಂಕೋರ್ಟ್ ಆದೇಶವೇನು?
    ಚುನಾವಣೆ ನಡೆಸದೇ ಹಿರಿಯ ಶಾಸಕರೊಬ್ಬರನ್ನು ಹಂಗಾಮಿ ಸ್ಪೀಕರ್ ಆಗಿ ನೇಮಕ ಮಾಡಬೇಕು. ಬುಧವಾರ ಸಂಜೆ 5 ಗಂಟೆಯೊಳಗೆ ವಿಶ್ವಾಸಮತ ಸಾಬೀತು ಪಡಿಸಬೇಕು. ಬಹುಮತ ಸಾಬೀತು ಸಂಪೂರ್ಣ ಪ್ರಕ್ರಿಯೆ ನೇರ ಪ್ರಸಾರವಾಗಬೇಕು. ವಿಶ್ವಾಸಮತ ಯಾಚನೆಗೂ ಮುನ್ನ ಎಲ್ಲ ಶಾಸಕರ ಪ್ರಮಾಣವಚನ ತೆಗೆದುಕೊಳ್ಳಬೇಕು. ಗುಪ್ತ ಮತದಾನ ಮಾಡುವಂತಿಲ್ಲ, ಎಲ್ಲ ಪ್ರಕ್ರಿಯೆಗಳು ಪಾರದರ್ಶಕವಾಗಿರಬೇಕು ಎಂದು ಸುಪ್ರೀಂಕೋರ್ಟ್ ಆದೇಶಿಸಿದೆ. ಇದನ್ನೂ ಓದಿ: 1978ರ ಇತಿಹಾಸ ಮರುಕಳಿಸಿದ ಅಜಿತ್ ಪವಾರ್

    ನಾವು 162: ಸೋಮವಾರ ರಾತ್ರಿ ಶಿವಸೇನೆ, ಎನ್‍ಸಿಪಿ ಮತ್ತು ಕಾಂಗ್ರೆಸ್ ಪಕ್ಷಗಳು ಖಾಸಗಿ ಹೋಟೆಲಿನಲ್ಲಿ ತಮ್ಮ ಶಾಸಕರೊಂದಿಗೆ ಶಕ್ತಿ ಪ್ರದರ್ಶನ ಮಾಡಿದ್ದವು. ಮೂರು ಪಕ್ಷಗಳ ಹಿರಿಯ ನಾಯಕರು ಸಭೆಯಲ್ಲಿ ಭಾಗಿಯಾಗಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿ, ಶಾಸಕರು ಯಾವುದೇ ಆಸೆ, ಆಮಿಷಗಳಿಗೆ ಒಳಗಾಗದೇ ಪಕ್ಷಕ್ಕೆ ನಿಷ್ಠರಾಗಿರಬೇಕು. ಸಭೆಯ ಅಂತ್ಯಕ್ಕೆ ಎಲ್ಲ ಶಾಸಕರಿಗೆ ಶಪಥವನ್ನು ಬೋಧಿಸಲಾಗಿತ್ತು.

  • ಬಿಜೆಪಿಯ ಆಟ ಮುಗಿತು: ಎನ್‍ಸಿಪಿ

    ಬಿಜೆಪಿಯ ಆಟ ಮುಗಿತು: ಎನ್‍ಸಿಪಿ

    ಮುಂಬೈ: ಸುಪ್ರೀಂಕೋರ್ಟ್ ನೀಡಿರುವ ತೀರ್ಪು ಭಾರತದ ಪ್ರಜಾಪ್ರಭುತ್ವದಲ್ಲಿ ಮೈಲಿಗಲ್ಲಾಗಲಿದೆ. ಸರ್ಕಾರ ರಚಿಸಿರುವ ಬಿಜೆಪಿ ಬುಧವಾರ ಸಂಜೆ 5ಗಂಟೆಯೊಳಗೆ ಬಹುಮತ ಸಾಬೀತು ಮಾಡಬೇಕು. ಬಿಜೆಪಿಯ ಆಟ ಇಲ್ಲಿಗೆ ಮುಗಿತು ಅನ್ನೋದು ಸ್ಪಷ್ಟವಾಗುತ್ತದೆ. ಕೆಲವೇ ದಿನಗಳಲ್ಲಿ ಶಿವಸೇನ-ಎನ್‍ಸಿಪಿ-ಕಾಂಗ್ರೆಸ್ ಮೈತ್ರಿ ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಮಾಡಲಿದೆ ಎಂದು ಎನ್‍ಸಿಪಿ ನಾಯಕ ನವಾಬ್ ಮಲಿಕ್ ಹೇಳಿದ್ದಾರೆ.

    ಸುಪ್ರೀಂಕೋರ್ಟ್ ಮಧ್ಯಂತರ ಆದೇಶಕ್ಕೆ ಪ್ರತಿಕ್ರಿಯಿಸಿರುವ ಶಿವಸೇನೆ ನಾಯಕ ಸಂಜಯ್ ರಾವತ್, ಕೆಲವೊಮ್ಮೆ ಸತ್ಯ ತೊಂದರೆಗೆ ಒಳಗಾಗಬಹುದು. ಆದ್ರೆ ಕೊನೆಗೆ ಸತ್ಯಕ್ಕೆ ಜಯ ಸಿಗುತ್ತದೆ. ಸತ್ಯಮೇವ ಜಯತೆ ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಮಹಾರಾಷ್ಟ್ರದಿಂದಲೇ ಬಿಜೆಪಿಯ ಅಂತ್ಯ ಆರಂಭ: ಶಿವಸೇನೆ

    ಸುಪ್ರಿಂಕೋರ್ಟ್ ಆದೇಶವೇನು?
    ಚುನಾವಣೆ ನಡೆಸದೇ ಹಿರಿಯ ಶಾಸಕರೊಬ್ಬರನ್ನು ಹಂಗಾಮಿ ಸ್ಪೀಕರ್ ಆಗಿ ನೇಮಕ ಮಾಡಬೇಕು. ಬುಧವಾರ ಸಂಜೆ 5 ಗಂಟೆಯೊಳಗೆ ವಿಶ್ವಾಸಮತ ಸಾಬೀತು ಪಡಿಸಬೇಕು. ಬಹುಮತ ಸಾಬೀತು ಸಂಪೂರ್ಣ ಪ್ರಕ್ರಿಯೆ ನೇರ ಪ್ರಸಾರವಾಗಬೇಕು. ವಿಶ್ವಾಸಮತ ಯಾಚನೆಗೂ ಮುನ್ನ ಎಲ್ಲ ಶಾಸಕರ ಪ್ರಮಾಣವಚನ ತೆಗೆದುಕೊಳ್ಳಬೇಕು. ಗುಪ್ತ ಮತದಾನ ಮಾಡುವಂತಿಲ್ಲ, ಎಲ್ಲ ಪ್ರಕ್ರಿಯೆಗಳು ಪಾರದರ್ಶಕವಾಗಿರಬೇಕು ಎಂದು ಸುಪ್ರೀಂಕೋರ್ಟ್ ಆದೇಶಿಸಿದೆ.

    ನಾವು 162: ಸೋಮವಾರ ರಾತ್ರಿ ಶಿವಸೇನೆ, ಎನ್‍ಸಿಪಿ ಮತ್ತು ಕಾಂಗ್ರೆಸ್ ಪಕ್ಷಗಳು ಖಾಸಗಿ ಹೋಟೆಲಿನಲ್ಲಿ ತಮ್ಮ ಶಾಸಕರೊಂದಿಗೆ ಶಕ್ತಿ ಪ್ರದರ್ಶನ ಮಾಡಿದ್ದವು. ಮೂರು ಪಕ್ಷಗಳ ಹಿರಿಯ ನಾಯಕರು ಸಭೆಯಲ್ಲಿ ಭಾಗಿಯಾಗಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿ, ಶಾಸಕರು ಯಾವುದೇ ಆಸೆ, ಆಮಿಷಗಳಿಗೆ ಒಳಗಾಗದೇ ಪಕ್ಷಕ್ಕೆ ನಿಷ್ಠರಾಗಿರಬೇಕು. ಸಭೆಯ ಅಂತ್ಯಕ್ಕೆ ಎಲ್ಲ ಶಾಸಕರಿಗೆ ಶಪಥವನ್ನು ಬೋಧಿಸಲಾಗಿತ್ತು. ಇದನ್ನೂ ಓದಿ: ಸುಪ್ರೀಂನಲ್ಲಿ ‘ಮಹಾ’ ಬಿಕ್ಕಟ್ಟು- ಕ್ಷಣ ಕ್ಷಣಕ್ಕೂ ರೋಚಕತೆ ಸೃಷ್ಟಿಸಿದ ವಾದ-ಪ್ರತಿವಾದ

  • ಮುಂದುವರಿದ ‘ಮಹಾ’ ನಾಟಕ- ಫೈವ್ ಸ್ಟಾರ್ ಹೋಟೆಲಿನಲ್ಲಿ ಮೂರು ಪಕ್ಷಗಳ ಶಕ್ತಿ ಪ್ರದರ್ಶನ

    ಮುಂದುವರಿದ ‘ಮಹಾ’ ನಾಟಕ- ಫೈವ್ ಸ್ಟಾರ್ ಹೋಟೆಲಿನಲ್ಲಿ ಮೂರು ಪಕ್ಷಗಳ ಶಕ್ತಿ ಪ್ರದರ್ಶನ

    -ಕರ್ನಾಟಕದಲ್ಲಿ ನಡೆದಂತೆ ಇಲ್ಲಿ ನಡೆಯಲ್ಲ
    -ಗೆಳೆಯರ ಸಂಖ್ಯೆ ಹೆಚ್ಚಾಗಿದೆ ಎಂದ ಠಾಕ್ರೆ
    -ಎಲ್ಲ ಶಾಸಕರ ಶಪಥ

    ಮುಂಬೈ: ಕಾಂಗ್ರೆಸ್, ಶಿವಸೇನೆ ಮತ್ತು ಎನ್‍ಸಿಪಿ ಮೂರು ಪಕ್ಷಗಳು ಇಂದು ನಗರದ ಖಾಸಗಿ ಹೋಟೆಲಿನಲ್ಲಿ 162 ಶಾಸಕರೊಂದಿಗೆ ಶಕ್ತಿ ಪ್ರದರ್ಶನ ಮಾಡಿವೆ.

    ಈ ವೇಳೆ ಮಾತನಾಡಿದ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ, ಕರ್ನಾಟಕದಲ್ಲಿ ನಡೆದಂತೆ ಇಲ್ಲಿ ನಡೆಯಲ್ಲ. ಇದು ಮಣಿಪುರ ಮತ್ತು ಗೋವಾ ಅಲ್ಲ ಎಂದು ಬಿಜೆಪಿ ತಿಳಿದುಕೊಳ್ಳಬೇಕು. ಬಹುಮತ ಇಲ್ಲದಿದ್ದರೂ ಬಿಜೆಪಿ ಕೆಲವು ರಾಜ್ಯಗಳಲ್ಲಿ ಸರ್ಕಾರ ರಚನೆ ಮಾಡಿದೆ. ಬಿಜೆಪಿ ಅನೈತಿಕವಾಗಿ ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಿದೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಇತಿಹಾಸ ಸೃಷ್ಟಿ – ಒಂದೇ ವರ್ಷ ಮೂರು ಬಾರಿ ರಜಾದಿನದಲ್ಲಿ ಸುಪ್ರೀಂ ಕಲಾಪ

    ಗೆಳೆಯರ ಸಂಖ್ಯೆ ಹೆಚ್ಚಾಗಿದ್ದು, ಒಂದೇ ಫೋಟೋದಲ್ಲಿ ಎಲ್ಲರನ್ನು ಸೆರೆ ಹಿಡಿಯಲು ಆಗುತ್ತಿಲ್ಲ. ಸುಪ್ರೀಂಕೋರ್ಟ್ ಆದೇಶ ಬಂದ ಕೂಡಲೇ ನಾವೆಲ್ಲರೂ ವಿಶ್ವಾಸಮತ ಸಾಬೀತುಪಡಿಸಲು ಸಿದ್ಧರಿದ್ದೇವೆ. ಆ ದಿನದಂದು ನೀವೆಲ್ಲರೂ ತಯಾರಾಗಿರಬೇಕು. ಆಯ್ಕೆಯಾಗಿರುವ ಶಾಸಕರಲ್ಲಿ ಗೊಂದಲ ಮೂಡಿಸುವ ಪ್ರಯತ್ನ ಮಾಡಲಾಗುತ್ತಿದ್ದು, ನೀವೆಲ್ಲರೂ ಎಚ್ಚರದಿಂದಿರಬೇಕೆಂದು ಎಲ್ಲ ಶಾಸಕರಿಗೆ ಉದ್ಧವ್ ಠಾಕ್ರೆ ಸಲಹೆ ನೀಡಿದರು. ಇದನ್ನೂ ಓದಿ: ಮಹಾರಾಷ್ಟ್ರದಿಂದಲೇ ಬಿಜೆಪಿಯ ಅಂತ್ಯ ಆರಂಭ: ಶಿವಸೇನೆ

    ಶಾಸಕರನ್ನು ಉದ್ದೇಶಿಸಿ ಮಾತನಾಡಿದ ಎನ್‍ಸಿಪಿ ಮುಖ್ಯಸ್ಥ ಶರದ್ ಪವಾರ್, ಯಾರು ಪಕ್ಷದ ವಿರುದ್ಧ ಹೋಗುವಂತಿಲ್ಲ. ಯಾರ ಪ್ರಲೋಭನೆಗೆ ಒಳಗಾಗದೇ ಪಕ್ಷಕ್ಕೆ ನಿಷ್ಠೆರಾಗಿರಬೇಕು. ಪಕ್ಷ ವಿರೋಧಿ ಚಟುವಟಿಕೆ ನಡೆಸಿದವರ ವಿರುದ್ಧ ಕ್ರಮಕೈಗೊಳ್ಳಲಾಗುವುದು. ಪಕ್ಷ ವಿರೋಧಿ ಕೆಲಸಗಳಲ್ಲಿ ಭಾಗಿಯಾದ್ರೆ ಮೂರು ಪಕ್ಷಗಳು ಕ್ರಮ ಜರುಗಿಸುತ್ತೇವೆ. ಅಜಿತ್ ಪವಾರ್ ತಮ್ಮ ತೀರ್ಮಾನದ ಪರಿಣಾಮವನ್ನು ಮುಂದಿನ ದಿನಗಳಲ್ಲಿ ಅನುಭವಿಸಲಿದ್ದಾರೆ. ಈಗ ಶಿವಸೇನೆ ನಮ್ಮ ಜೊತೆಯಲ್ಲಿದ್ದು, ತಪ್ಪು ಮಾಡಿದವರಿಗೆ ಪಾಠ ಕಲಿಸುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ಸುಪ್ರೀಂನಲ್ಲಿ ‘ಮಹಾ’ ಬಿಕ್ಕಟ್ಟು- ಕ್ಷಣ ಕ್ಷಣಕ್ಕೂ ರೋಚಕತೆ ಸೃಷ್ಟಿಸಿದ ವಾದ-ಪ್ರತಿವಾದ

    ಕೊನೆಗೆ ಶಿವಸೇನೆ, ಎನ್‍ಸಿಪಿ ಮತ್ತು ಕಾಂಗ್ರೆಸ್ ಶಾಸಕರು ಮೈತ್ರಿಯ ಶಪಥ ಸ್ವೀಕರಿಸಿದರು. ಸೋನಿಯಾ ಗಾಂಧಿ, ಶರದ್ ಪವಾರ್ ಮತ್ತು ಉದ್ಧವ್ ಠಾಕ್ರೆ ನೇತೃತ್ವದ ಮೈತ್ರಿ ಸರ್ಕಾರಕ್ಕೆ ನಾವು ಬೆಂಬಲ ನೀಡುತ್ತೇವೆ ಎಂಬ ಶಪಥವನ್ನು ಮೂರು ಪಕ್ಷಗಳ ಶಾಸಕರಿಗೆ ಬೋಧಿಸಲಾಯ್ತು. ಇದನ್ನೂ ಓದಿ: 1978ರ ಇತಿಹಾಸ ಮರುಕಳಿಸಿದ ಅಜಿತ್ ಪವಾರ್

    ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಮಾಜಿ ಸಿಎಂ ಪೃಥ್ವಿರಾಜ್ ಚೌಹಾಣ್, ಎನ್‍ಸಿಪಿ ಮತ್ತು ಶಿವಸೇನೆ ಎಲ್ಲ ಹಿರಿಯ ನಾಯಕರು ಶಕ್ತಿ ಪ್ರದರ್ಶನದಲ್ಲಿ ಉಪಸ್ಥಿತರಿದ್ದರು.

  • ಸುಪ್ರೀಂನಲ್ಲಿ ‘ಮಹಾ’ ಬಿಕ್ಕಟ್ಟು- ಕ್ಷಣ ಕ್ಷಣಕ್ಕೂ ರೋಚಕತೆ ಸೃಷ್ಟಿಸಿದ ವಾದ-ಪ್ರತಿವಾದ

    ಸುಪ್ರೀಂನಲ್ಲಿ ‘ಮಹಾ’ ಬಿಕ್ಕಟ್ಟು- ಕ್ಷಣ ಕ್ಷಣಕ್ಕೂ ರೋಚಕತೆ ಸೃಷ್ಟಿಸಿದ ವಾದ-ಪ್ರತಿವಾದ

    -ಇಂದು ಸುಪ್ರೀಂಕೋರ್ಟಿನಲ್ಲಿ ಏನೇನಾಯ್ತು ಇಲ್ಲಿದೆ ಮಾಹಿತಿ

    ನವದೆಹಲಿ: ಮಹಾರಾಷ್ಟ್ರದ ರಾಜಕೀಯ ಬಿಕ್ಕಟ್ಟು ಸುಪ್ರೀಂ ಅಂಗಳ ಪ್ರವೇಶಿಸಿದ್ದು, ಇಂದು ನಡೆದ ವಾದ-ಪ್ರತಿವಾದಗಳು ಕ್ಷಣ ಕ್ಷಣಕ್ಕೂ ಕುತೂಹಲವನ್ನುಂಟು ಮಾಡಿತ್ತು. ರಾಜ್ಯಪಾಲರ ಪರ ತುಷಾರ್ ಮೆಹ್ತಾ, ಬಿಜೆಪಿ ಪರ ಮುಕುಲ್ ರೋಹ್ಟಗಿ, ಅಜಿತ್ ಪವಾರ್ ಪರ ಮಣಿಂದರ್ ಸಿಂಗ್ ಮತ್ತು ಶಿವಸೇನೆ, ಎನ್‍ಸಿಪಿ, ಕಾಂಗ್ರೆಸ್ ಪರ ಕಪಿಲ್ ಸಿಬಲ್ ಹಾಗೂ ಅಭಿಷೇಕ್ ಮನುಸಿಂಘ್ವಿ ವಾದ ಮಂಡಿಸಿದರು. ವಾದ-ಪ್ರತಿವಾದ ಆಲಿಸಿದ ಸುಪ್ರೀಂಕೋರ್ಟ್ ತ್ರಿ ಸದಸ್ಯ ಪೀಠ ತೀರ್ಪನ್ನು ನಾಳೆ ಬೆಳಗ್ಗೆ 10.30ಕ್ಕೆ ಕಾಯ್ದಿರಿಸಿದೆ.

    ತುಷಾರ್ ಮೆಹ್ತಾ ವಾದ (ರಾಜ್ಯಪಾಲರ ಪರ):
    ರಾಜ್ಯಪಾಲರ ಬಹುಮತದ ಪತ್ರವನ್ನು ಇಂದು ಸುಪ್ರೀಂಕೋರ್ಟಿಗೆ ಸಲ್ಲಿಕೆ ಮಾಡಲಾಗಿದೆ. ಚುನಾವಣೆಯಲ್ಲಿ ಬಿಜೆಪಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಬಿಜೆಪಿ ಮತ್ತು ಶಿವಸೇನೆ ಮಧ್ಯೆ ಚುನಾವಣಾ ಪೂರ್ವ ಮೈತ್ರಿಯಾಗಿ ಕ್ಷೇತ್ರಗಳ ಹೊಂದಾಣಿಕೆ ಆಗಿತ್ತು. ಶಿವಸೇನೆಯ ನಿರ್ಧಾರದಿಂದಾಗಿ ಸ್ಥಿರ ಸರ್ಕಾರ ರಚನೆ ಮಾಡಲು ಸಾಧ್ಯವಾಗಲಿಲ್ಲ. ಫಲಿತಾಂಶ ಬಂದ 22 ದಿನ ಕಳೆದರೂ ಸರ್ಕಾರ ರಚನೆಯಾಗಲಿಲ್ಲ. ಹಾಗಾಗಿ ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸ್ಸು ಮಾಡಿದರು ಎಂದು ರಾಜ್ಯಪಾಲರ ಪರ, ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದರು. ಇದನ್ನೂ ಓದಿ: ಚಿಂತೆ ಬೇಡ, ಆಲ್ ಈಸ್ ವೆಲ್: ಅಜಿತ್ ಪವಾರ್

    ಇದೇ ವೇಳೆ ತುಷಾರ್ ಮೆಹ್ತಾ, ಎನ್‍ಸಿಪಿಯ 54 ಶಾಸಕರ ಬೆಂಬಲ ಪತ್ರ ನೀಡಿದರು. ಎಲ್ಲ ಶಾಸಕರು ದೇವೇಂದ್ರ ಫಡ್ನವೀಸ್ ಅವರಿಗೆ ಬೆಂಬಲವಿದೆ ಎಂದು ಹೇಳಿದ್ದಾರೆ. ಎನ್‍ಸಿಪಿ ಶಾಸಕಾಂಗದ ಪಕ್ಷದ ನಾಯಕರಾಗಿ ಅಜಿತ್ ಪವಾರ್ ಆಯ್ಕೆಯಾಗಿದ್ದರು. ನವೆಂಬರ್ 22ರಂದು ಅಜಿತ್ ಪವಾರ್ ನೀಡಿದ ಪತ್ರದಲ್ಲಿ 54 ಶಾಸಕರ ಸಹಿ ಇತ್ತು. ಆ ಪತ್ರವನ್ನು ಸ್ವೀಕರಿಸಿ ರಾಜ್ಯಪಾಲರು ಸರ್ಕಾರ ರಚನೆಗೆ ಆಹ್ವಾನ ನೀಡಿದ್ದಾರೆ. ಪತ್ರದಲ್ಲಿಯ ಸಹಿ ಅಸಲಿಯೋ ಅಥವಾ ನಕಲಿಯೋ ಎಂಬುದರ ತನಿಖೆ ಮಾಡೋದು ರಾಜ್ಯಪಾಲರ ಕೆಲಸವಲ್ಲ. ಸ್ಥಿರ ಸರ್ಕಾರಕ್ಕಾಗಿ ಫಡ್ನವೀಸ್ ಅವರಿಗೆ ಬೆಂಬಲ ನೀಡಿದ್ದೇವೆ ಎಂದು ಅಜಿತ್ ಪವಾರ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ ಎಂದು ರಾಜ್ಯಪಾಲರ ನಡೆಯನ್ನು ತುಷಾರ್ ಮೆಹ್ತಾ ಸಮರ್ಥಿಸಿಕೊಂಡರು. ಇದನ್ನೂ ಓದಿ: ಮಹಾರಾಷ್ಟ್ರದಿಂದಲೇ ಬಿಜೆಪಿಯ ಅಂತ್ಯ ಆರಂಭ: ಶಿವಸೇನೆ

    ಮುಕುಲ್ ರೋಹ್ಟಗಿ ವಾದ(ಬಿಜೆಪಿ ಪರ):
    ಸರ್ಕಾರ ರಚನೆ ಮಾಡಿದ ಬಿಜೆಪಿಗೆ 170 ಶಾಸಕರ ಬೆಂಬಲವಿದೆ. ಚುನಾವಣೆಯ ಮಿತ್ರ ನಮಗೆ ಶತ್ರುವಾದರು. ಬೆಂಬಲ ಪತ್ರದಲ್ಲಿರುವ ಎಲ್ಲ ಸಹಿಗಳು ಅಸಲಿ. ಎನ್‍ಸಿಪಿ ಶಾಸಕಾಂಗ ಪಕ್ಷದ ನಾಯಕರು ನೀಡಿದ್ದ ಪತ್ರದ ಮೇಲೆ ರಾಜ್ಯಪಾಲರು ಸರ್ಕಾರ ರಚನೆಗೆ ಅವಕಾಶ ನೀಡಿದರು. ಇದೇ ವೇಳೆ ಮುಕುಲ್ ರೋಹ್ಟಗಿ ಕರ್ನಾಟಕದ ಪ್ರಕರಣವನ್ನು ಉಲ್ಲೇಖಿಸಿದರು. ವಿಶ್ವಾಸಮತ ಯಾಚನೆ ಮಾಡಲು ನಮಗೆ 10 ದಿನಗಳ ಕಾಲಾವಕಾಶ ನೀಡಬೇಕಿತ್ತು. ರಾಜ್ಯಪಾಲರು ಐದು ಮಾತ್ರ ಟೈಮ್ ಕೊಟ್ಟಿದ್ದಾರೆ. ಆದರೂ ಬಹುಮತ ಯಾಚನೆಗೆ ನಾವು ಸಿದ್ಧವಿದೆ. ರಾಜ್ಯಪಾಲರ ನಿರ್ಧಾರ ಸರಿಯೇ ಅಥವಾ ತಪ್ಪೇ ಎಂಬುದನ್ನು ನೀವು ತೀರ್ಮಾನಿಸಬೇಕು. ನೀವು (ಸುಪ್ರೀಂಕೋರ್ಟ್) ವಿಶ್ವಾಸಮತ ಯಾಚನೆಗೆ ಸಮಯ ನಿಗದಿ ಮಾಡುವಂತಿಲ್ಲ.

    ಶಿವಸೇನೆ, ಕಾಂಗ್ರೆಸ್ ಮತ್ತು ಎನ್‍ಸಿಪಿ ಮೈತ್ರಿ ಕೂಟ ವಿಚಾರಣೆಗೂ ಮೊದಲೇ ರಾಜ್ಯಪಾಲರನ್ನು ಭೇಟಿ ಮಾಡಿ ಮಾತುಕತೆ ನಡೆಸಿತ್ತು. ಈ ಮಧ್ಯೆ ಎನ್‍ಸಿಪಿ ತನ್ನ ಶಾಸಕರನ್ನು ಹಿಡಿದಿಡ್ಡುಕೊಳ್ಳುವ ಸಲುವಾಗಿ ಕೇರಳಕ್ಕೆ ಶಿಫ್ಟ್ ಮಾಡಲು ತಯಾರಿ ನಡೆಸಿದೆ. ವಿಶ್ವಾಸಮತಯಾಚನೆ ಯಾವಾಗ ಮಾಡಬೇಕು ಎಂಬುದನ್ನು ವಿಧಾನಸಭೆಯಲ್ಲಿ ಸ್ಪೀಕರ್ ತೀರ್ಮಾನ ಮಾಡುತ್ತಾರೆ. ಈ ಮೊದಲು ಹಂಗಾಮಿ ಸ್ಪೀಕರ್ ನೇಮಕವಾದ ನಂತರವೇ ವಿಶ್ವಾಸಮತ ಆಗಬೇಕು. ವಿಧಾನಸಭಾ ಕಲಾಪ ಮತ್ತು ಹಂಗಾಮಿ ಸ್ಪೀಕರ್ ನೇಮಕ ಪ್ರಕ್ರಿಯೆ ಸುಪ್ರೀಂ ವ್ಯಾಪ್ತಿಗೆ ಬರಲ್ಲ. ಹಾಗಾಗಿ ಮಧ್ಯಂತರ ಆದೇಶ ನೀಡಬೇಡಿ. ಶಿವಸೇನೆಗಿಂತ ನಮಗೆ ಎರಡು ಪಟ್ಟ ಬೆಂಬಲವಿದೆ ಎಂದು ವಾದ ಮಂಡಿಸಿದರು. ಇದನ್ನೂ ಓದಿ: ಇತಿಹಾಸ ಸೃಷ್ಟಿ – ಒಂದೇ ವರ್ಷ ಮೂರು ಬಾರಿ ರಜಾದಿನದಲ್ಲಿ ಸುಪ್ರೀಂ ಕಲಾಪ

    ಹೊಸದಾಗಿ ಆಯ್ಕೆಯಾದ ಶಾಸಕರ ಪ್ರಮಾಣ ವಚನ ಸ್ವೀಕರಿಸಬೇಕು. ಎಲ್ಲವೂ ವಿಧಾನಸಭಾ ನಿಯಮಾವಾಳಿಗಳ ಪ್ರಕಾರ ನಡೆಯಲಿ. ಅವಸರೇ ಮಾಡದೇ ನಿಧಾನವಾಗಿ ನಡೆಯಲಿ. ಸುಪ್ರೀಂಕೋರ್ಟ್ ವಿಧಾನಸಭಾ ಕಲಾಪದಲ್ಲಿ ಮಧ್ಯ ಪ್ರವೇಶಿಸುವಂತಿಲ್ಲ. ಹಂಗಾಮಿ ಸ್ಪೀಕರ್ ನೇಮಕ ಮಾಡುವಂತೆ ಆದೇಶಿಸುವಂತಿಲ್ಲ. ವಿಶ್ವಾಸಮತಯಾಚನೆಗೆ ನಮಗೆ 14 ದಿನಗಳ ಅವಕಾಶ ನೀಡಿ. 14 ದಿನ ಆಗಲ್ಲ ಅಂದ್ರೆ ಕನಿಷ್ಠ ಏಳು ದಿನಗಳನ್ನಾದರು ನೀಡಬೇಕು. ಇದನ್ನೂ ಓದಿ: ಮಹಾರಾಷ್ಟ್ರ ರಾಜಕೀಯ ಡ್ರಾಮಾ ನೋಡಿ ಅನಾರೋಗ್ಯಕ್ಕೀಡಾದ ಪ್ರೊಫೆಸರ್ – ರಜಾ ಅರ್ಜಿ ವೈರಲ್

    ಮಣಿಂದರ್ ಸಿಂಗ್ (ಅಜಿತ್ ಪವಾರ್ ಪರ ವಕೀಲ): ನವೆಂಬರ್ 22ರಂದು ಎನ್‍ಸಿಪಿ ಪಕ್ಷದ ಶಾಸಕಾಂಗ ನಾಯಕನಾಗಿ ಅಜಿತ್ ಪವಾರ್ ಬೆಂಬಲ ಪತ್ರ ನೀಡಿದ್ದಾರೆ. ರಾಜ್ಯಪಾಲರು ತಮ್ಮ ವಿವೇಚನಾಧಿಕಾರ ಬಳಸಿ ಸರ್ಕಾರ ರಚನೆಗೆ ಆಹ್ವಾನ ನೀಡಿದ್ದಾರೆ. ಇದರಲ್ಲಿ ಅಜಿತ್ ಪವಾರ್ ನಡೆದುಕೊಂಡಿದ್ದು ಸರಿ ಇದೆ. ಇದರಲ್ಲಿ ಅಜಿತ್ ಪವಾರ್ ಅವರದ್ದು ತಪ್ಪಿಲ್ಲ. ಅಜಿತ್ ಪವಾರ್ ಎನ್‍ಸಿಪಿ ನಾಯಕ ಎಂದಾಗ ನ್ಯಾಯಾಧೀಶ ಖನ್ನಾ ಒಂದು ಕ್ಷಣ ನಸು ನಕ್ಕರು. ನಾವು ಕೊಟ್ಟ ಪತ್ರ ಅಸಲಿಯಾಗಿದ್ದು, ಎಲ್ಲ ಸಮಸ್ಯೆಗಳನ್ನು ಪಕ್ಷದೊಳಗೆಯೇ ಬಗೆಹರಿಸಿಕೊಳ್ಳುತ್ತೇವೆ. ನಾನೇ ಎನ್‍ಸಿಪಿ ಆಗಿದ್ದರಿಂದ ಬೇರೆಯವರ ಅರ್ಜಿಯನ್ನು ಸ್ವೀಕಾರ ಮಾಡಬಾರದು. ಎನ್‍ಸಿಪಿಯ ಎಲ್ಲ ಶಾಸಕರು ಬೆಂಬಲ ನೀಡಿದ್ದಾರೆ. ನಾವು ನೀಡಿರುವ ಬೆಂಬಲ ಪತ್ರ ಕಾನೂನು ಮತ್ತು ಸಂವಿಧಾನ ಬದ್ಧವಾಗಿದೆ ಎಂದು ಅಜಿತ್ ಪವಾರ್ ನಡೆಯನ್ನು ಮಣಿಂದರ್ ಸಿಂಗ್ ಸಮರ್ಥಿಸಿಕೊಂಡರು. ಇದನ್ನೂ ಓದಿ: 1978ರ ಇತಿಹಾಸ ಮರುಕಳಿಸಿದ ಅಜಿತ್ ಪವಾರ್

    ಕಪಿಲ್ ಸಿಬಲ್ (ಎನ್‍ಸಿಪಿ, ಶಿವಸೇನೆ, ಕಾಂಗ್ರೆಸ್ ಪರ): ನವೆಂಬರ್ 23ಕ್ಕೆ ನಾವು ಹಕ್ಕು ಮಂಡನೆ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಆದರೆ ರಾಜ್ಯಪಾಲರು ನಮಗೆ ಅವಕಾಶ ನೀಡಲಿಲ್ಲ. ನವೆಂಬರ್ 22 ರಾತ್ರಿ 7ರಿಂದ ಬೆಳಗ್ಗೆ 5.47ರ ನಡುವೆ ಏನಾಯ್ತು ಎಂಬುದರ ಬಗ್ಗೆ ಮಾಹಿತಿ ನೀಡಬೇಕು. ಅಕ್ಟೋಬರ್ 24ರಿಂದ ನವೆಂಬರ್ 22ರವರೆಗೆ ರಾಜ್ಯಪಾಲರು ಕಾಯುತ್ತಿದ್ದರು. ಇಷ್ಟು ದಿನ ಕಾದಿದ್ದ ರಾಜ್ಯಪಾಲರಿಗೆ ಒಂದು ಕಾಯಲು ಆಗಲಿಲ್ಲ. ಒಂದು ದಿನ ಮೊದಲೇ ಸುದ್ದಿಗೋಷ್ಠಿ ನಡೆಸಿ ಉದ್ಧವ್ ಠಾಕ್ರೆ ನಮ್ಮ ಸಿಎಂ ಎಂದು ಘೋಷಣೆ ಮಾಡಲಾಗಿತ್ತು. ಎನ್‍ಸಿಪಿ ನಿರ್ಣಯ ಪತ್ರವನ್ನು ತೋರಿಸಿಲ್ಲ. ಈ ಕ್ಷಣಕ್ಕೂ 54 ಶಾಸಕರು ನಮ್ಮ ಜೊತೆಯಲ್ಲಿಯೇ ಇದ್ದಾರೆ. ಅವಶ್ಯವಿದ್ದರೆ ನಾವು ಅಫಡವಿಟ್ ಸಲ್ಲಿಸಲು ಸಿದ್ಧರಿದ್ದೇವೆ. ಬಿಜೆಪಿಗೆ ಬೆಂಬಲ ನೀಡಬೇಕು ಎಂಬುದರ ಬಗ್ಗೆ ಎನ್‍ಸಿಪಿ ತೀರ್ಮಾನ ತೆಗೆದುಕೊಂಡಿರಲಿಲ್ಲ. ರಾಜ್ಯಪಾಲರು ಬಿಜೆಪಿಗೆ ಅನಕೂಲವಾಗುವಂತೆ ನಿರ್ಧಾರ ತೆಗೆದುಕೊಂಡಿದ್ದಾರೆ. ರಾಜ್ಯಪಾಲರು ವಿವೇಚನೆ ಮೀರಿ ವರ್ತಿಸಿದ್ದಾರೆ. ಹಾಗಾಗಿ ಬೇಗ ಬಹುಮತ ಸಾಬೀತಿಗೆ ಸೂಚಿಸಬೇಕೆಂದು ಕಪಿಲ್ ಸಿಬಲ್ ಮನವಿ ಮಾಡಿಕೊಂಡರು. ಇದನ್ನೂ ಓದಿ: ಬಿಜೆಪಿಗೆ ಅಧಿಕಾರದ ಕುರ್ಚಿ ನೀಡಿದ ಅಜಿತ್ ಪವಾರ್ ಯಾರು? ಇಲ್ಲಿದೆ ಮಾಹಿತಿ

    ರಾತ್ರಿಯವರೆಗೂ ಕಾಯೋದು ಬೇಡ, ಇವತ್ತೆ ಅಂದ್ರೆ ಹಗಲಲ್ಲೇ ಬಹುಮತ ಪ್ರಕ್ರಿಯೆ ನಡೆಯಲಿ. ಅಜಿತ್ ಪವಾರ್ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಅಜಿತ್ ಪವಾರ್ ನೀಡಿದ ಪತ್ರಕ್ಕೆ ಯಾವುದೇ ಬೆಲೆ ನೀಡುವುದು ಬೇಡ. ಮಹಾರಾಷ್ಟ್ರದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ. ಎನ್‍ಸಿಪಿ ಶಾಸಕರರನ್ನು ಯಾರು ಹೈಜಾಕ್ ಮಾಡಿಲ್ಲ. ಎಲ್ಲರೂ ಶರದ್ ಪವಾರ್ ಜೊತೆಯಲ್ಲಿದ್ದಾರೆ. ಹಿರಿಯ ಶಾಸಕರೊಬ್ಬರು ಸ್ಪೀಕರ್ ಆಗಲಿ, ಅವರೇ ಕಲಾಪ ನಡೆಸಿಕೊಡಲಿ. ಇದನ್ನೂ ಓದಿ: ಕದ್ದುಮುಚ್ಚಿ ಮಾಡೋದು ನಮಗೆ ಗೊತ್ತಿಲ್ಲ: ಬಿಜೆಪಿ ವಿರುದ್ಧ ಠಾಕ್ರೆ ಕೆಂಡ

    ಶಾಸಕರು ನೀಡಿದ ಸಹಿ ಪತ್ರಕ್ಕೆ ಯಾವುದೇ ಕವರಿಂಗ್ ಲೆಟರ್ ಇರಲಿಲ್ಲ. ಆದರೆ ರಾಜ್ಯಪಾಲರು ಆ ಪತ್ರವನ್ನು ಹೇಗೆ ಒಪ್ಪಿದ್ರೆ ಎಂಬುವುದು ಗೊತ್ತಾಗಿಲ್ಲ. ನಾವು ನಮ್ಮ ಮೈತ್ರಿಗಾಗಿ ಮತ್ತು ಅಜಿತ್ ಪವಾರ್ ಶಾಸಕಾಂಗ ನಾಯಕರಾಗಿ ಮಾಡಲು ಶಾಸಕರು ಸಹಿ ಮಾಡಿದ್ದರು. ಅದೇ ಪತ್ರವನ್ನು ಅಜಿತ್ ಪವಾರ್ ರಾಜ್ಯಪಾಲರಿಗೆ ನೀಡಿದ್ದಾರೆ. 154 ಶಾಸಕರ ಬೆಂಬಲ ಪತ್ರವನ್ನು ನೀಡಿದರು. ಆದ್ರೆ ಎನ್‍ಸಿಪಿಯ ಅಫಿಡವಿಟ್ ಮಾನ್ಯ ಮಾಡಲಿಲ್ಲ. ಇದನ್ನೂ ಓದಿ: ಅಜಿತ್ ಪವಾರ್ ನಿರ್ಧಾರದೊಂದಿಗೆ ಎನ್‍ಸಿಪಿ ಇಲ್ಲ: ಶರದ್ ಪವಾರ್

    ಅಭಿಷೇಕ್ ಮನುಸಿಂಘ್ವಿ (ಎನ್‍ಸಿಪಿ, ಶಿವಸೇನೆ, ಕಾಂಗ್ರೆಸ್ ಪರ): ಕರ್ನಾಟಕದಲ್ಲಿ ರಾಜಕೀಯ ಬಿಕ್ಕಟ್ಟು ಎದುರಾದಾಗ ತೆಗೆದುಕೊಂಡ ತೀರ್ಮಾನವನ್ನು ಇಲ್ಲಿಯೂ ತೆಗೆದುಕೊಳ್ಳಬೇಕು. ಮಹಾರಾಷ್ಟ್ರದಲ್ಲಿ ಪ್ರಜಾಪ್ರಭುತ್ವಕ್ಕೆ ಮೋಸ ಮಾಡಲಾಗುತ್ತಿದೆ. ಹಾಗಾಗಿ ಇಂದೇ ಬಹುಮತ ಸಾಬೀತು ಮಾಡಲು ಸೂಚಿಸಬೇಕು. ಬಿಜೆಪಿಯವರದ್ದು ಅರ್ಧ ಬುದ್ಧಿಯಾಗಿದ್ದು, ಕೆಲ ಶಾಸಕರ ಸಹಿಯನ್ನು ನಕಲು ಮಾಡಿದ್ದಾರೆ. ನಮಗೆ ಏಳು ಪಕ್ಷೇತರರ ಜೊತೆ 161 ಶಾಸಕರ ಬೆಂಬಲ ನಮ್ಮ ಮೈತ್ರಿಗಿದೆ. ಇಂದು ವಿಶ್ವಾಸಮತಯಾಚನೆ ಆದೇಶ ನೀಡಬೇಕು. ತಕ್ಷಣವೇ ವಿಶ್ವಾಸಮತಯಾಚನೆಗೆ ಆದೇಶ ನೀಡಬೇಕು, ಇಲ್ಲವಾದ್ರೆ ಪ್ರಜಾಪ್ರಭುತ್ವದ ಕಗ್ಗೊಲೆ ಆಗುತ್ತದೆ. ಅಜಿತ್ ಪವಾರ್ ನೀಡಿರುವ ಪತ್ರಕ್ಕೆ ಯಾವುದೇ ಬೆಲೆ ಇಲ್ಲ. ವಿಶ್ವಾಸಮತಯಾಚನೆ ವೇಳೆ ಬಿಜೆಪಿ ನಮ್ಮನ್ನು ಸೋಲಿಸಿದ್ರೆ, ನಾವು ಒಪ್ಪಿಕೊಳ್ಳುತ್ತೇವೆ. ಶಾಸಕಾಂಗ ನಾಯಕರಾಗಿ ಆಯ್ಕೆ ಮಾಡುವಾಗ ಶಾಸಕರು ಹಾಕಿದ ಸಹಿಯುಳ್ಳ ಪತ್ರವನ್ನೇ ಅಜಿತ್ ಪವಾರ್ ನೀಡಿದ್ದಾರೆ. ಅದೇ ಪತ್ರವನ್ನು ರಾಜ್ಯಪಾಲರು ಒಪ್ಪಿಕೊಂಡಿದ್ದು ತಪ್ಪು. ತಮಗೆ ಬೆಂಬಲವಿದೆ ಎಂದು ಹೇಳುವ ಬಿಜೆಪಿ 24 ಗಂಟೆಯೊಳಗೆ ಬಹುಮತ ಸಾಬೀತು ಮಾಡಲಿ ಎಂದು ಸಿಂಘ್ವಿ ಸವಾಲು ಎಸೆದರು.