ವಿಜಯಪುರ: ಮಹಾರಾಷ್ಟ್ರದಲ್ಲಿ ಮಳೆ (Maharashtra Rains) ಎಫೆಕ್ಟ್ ಹಿನ್ನೆಲೆ ಜಯಪುರದಲ್ಲಿ ಭೀಮಾನದಿ ಪ್ರವಾಹ ಉಂಟಾಗಿದೆ. ಹೀಗಾಗಿ ಈ ಭಾಗದ ಪ್ರವಾಹ ಪೀಡಿತ ಪ್ರದೇಶಗಳ ವೀಕ್ಷಣೆಗೆ ತೆರಳುತ್ತಿದ್ದ ಅಧಿಕಾರಿಗಳು ಮಧ್ಯದಲ್ಲೇ ಲಾಕ್ ಆದ ಘಟನೆ ನಡೆದಿದೆ.
ನೀರಿದ್ದ ಕಾರಣ ಸೇತುವೆ (Bridge) ಮೇಲೆ ವಾಹನ ಕೆಟ್ಟು ಅಧಿಕಾರಿಗಳು ಸಮಸ್ಯೆ ಅನುಭವಿಸಿದ್ದಾರೆ. ಪಿಡಬ್ಲ್ಯೂಡಿ ಅಧಿಕಾರಿಗಳು ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದಿಂದ ಭೀಮಾ ನದಿ (Bheema River) ಪಾತ್ರಕ್ಕೆ ತೆರಳುತ್ತಿದ್ದಾಗ ಘಟನೆ ನಡೆದಿದೆ.
ಪ್ರವಾಹದಿಂದ ಅಧಿಕ ನೀರು ಬಂದಿದ್ದು, ರಸ್ತೆಯ ಮೇಲೆ ಸಂಚಾರ ಮಾಡುವಾಗ ವಾಹನ ಕೈಕೊಟ್ಟಿದೆ. ಕೊನೆಗೆ ನೀರಿನಲ್ಲೇ ನಡೆದುಕೊಂಡು ಅಧಿಕಾರಿಗಳು ಸಾಗಿದ್ದಾರೆ.
ಭೀಮಾ ನದಿ ಒಳಹರಿವು ಹೆಚ್ಚುತ್ತಿದ್ದು, ನದಿ ತೀರದ ಗ್ರಾಮಸ್ಥರಲ್ಲಿ ಪ್ರವಾಹ ಆತಂಕ ಸೃಷ್ಟಿಯಾಗಿದೆ. ಅಲ್ಲದೇ ಅಕ್ಕಪಕ್ಕದ ಊರುಗಳಿಗೆ ನದಿ ನೀರು ನುಗ್ಗುವ ಭೀತಿ ಉಂಟಾಗಿದ್ದು, ನದಿ ತೀರದ ಪ್ರದೇಶಗಳಲ್ಲಿ ತೀವ್ರ ಕಟ್ಟೆಚ್ಚರದಿಂದ ಇರುವಂತೆ ಕಲಬುರಗಿ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ
ಕಲಬುರಗಿ: ಮಹಾರಾಷ್ಟ್ರದಲ್ಲಿ ಧಾರಕಾರ ಮಳೆ (Maharashtra Rain) ಹಿನ್ನಲೆ ಉಜನಿ ಜಲಾಶಯದಿಂದ 2 ಲಕ್ಷಕ್ಕೂ ಅಧಿಕ ಕ್ಯೂಸೆಕ್ ನೀರು ಬಿಡಲಾಗಿದ್ದು, ಇದರ ಪರಿಣಾಮ ಕಲಬುರಗಿಯ ಭೀಮಾ ನದಿ ಪಾತ್ರದಲ್ಲಿ ಪ್ರವಾಹ (Flood) ಪರಿಸ್ಥಿತಿ ನಿರ್ಮಾಣವಾಗಿದೆ.
ಚಿಕ್ಕೋಡಿ: ಮಹಾರಾಷ್ಟ್ರ (Maharashtra) ಘಟ್ಟ ಪ್ರದೇಶದಲ್ಲಿನ ಮಳೆಯ ಅಬ್ಬರ ಹಾಗೂ ಮಹಾರಾಷ್ಟ್ರ ಜಲಾಶಯಗಳಿಂದ ಬರುತ್ತಿರುವ ಭಾರೀ ಪ್ರಮಾಣದ ನೀರಿನಿಂದ ಕೃಷ್ಣಾ ನದಿ (Krishna River Water) ನೀರಿನ ಒಳ ಹರಿವಿನಲ್ಲಿ ಗಣನೀಯ ಏರಿಕೆಯಾಗಿದೆ.
ಮಹಾರಾಷ್ಟ್ರದಿಂದ ಕೃಷ್ಣಾ ನದಿಗೆ ಒಟ್ಟು 2 ಲಕ್ಷದ 52 ಸಾವಿರ ಕ್ಯೂಸೆಕ್ ನೀರಿನ ಒಳ ಹರಿವು ದಾಖಲಾಗಿದೆ. ಅಪಾಯದ ಮಟ್ಟ ಮೀರಿ ಕೃಷ್ಣಾ ನದಿ ಹರಿಯುತ್ತಿದ್ದು ಒಟ್ಟು 12 ಪ್ರಮುಖ ಸೇತುವೆಗಳ ಮುಳುಗಡೆ ಯಥಾಸ್ಥಿತಿ ಮುಂದುವರೆದಿದೆ. ಚಿಕ್ಕೋಡಿ ತಾಲೂಕಿನ ಕಲ್ಲೋಳ ಗ್ರಾಮದ ನದಿ ತೀರದ ದತ್ತ ಮಂದಿರ ಸಂಪೂರ್ಣ ಜಲಾವೃತವಾಗಿದೆ ನದಿ ತೀರದಲ್ಲಿ ಬೆಳಗಾವಿ ಜಿಲ್ಲಾಡಳಿತ ಹೈಅಲರ್ಟ ಜಾರಿ ಮಾಡಿದೆ. ಇದನ್ನೂ ಓದಿ: ಬೀದಿ ನಾಯಿಗಳನ್ನ ಹಿಡಿಯಿರಿ, ಸಂತಾನಹರಣ ಶಸ್ತ್ರಚಿಕಿತ್ಸೆ ಬಳಿಕ ಬಿಟ್ಟುಬಿಡಿ: ಸುಪ್ರೀಂ ತೀರ್ಪಿನಲ್ಲಿ ಮಹತ್ವದ ತಿದ್ದುಪಡಿ
ಚಿಕ್ಕೋಡಿ, ನಿಪ್ಪಾಣಿ, ರಾಯಬಾಗ, ಅಥಣಿ ತಾಲೂಕಿನಲ್ಲಿ ಪ್ರವಾಹ ಸೃಷ್ಟಿಯಾಗುವ ಆತಂಕ ಎದುರಾಗಿದೆ. ಈಗಾಗಲೇ ದೂದಗಂಗಾ ಹಾಗೂ ವೇದಗಂಗಾ ನದಿ ತೀರದ ಕಾರದಗಾ, ಹುನ್ನರಗಿ ಗ್ರಾಮಗಳು ಸೇರಿ ಕೆಲ ಪ್ರದೇಶಗಳಿಗೆ ನೀರು ನುಗ್ಗಿದ್ದು ಜನರು ತಮ್ಮ ಜಾನುವಾರುಗಳ ಜೊತೆಗೆ ಸುರಕ್ಷಿತ ಸ್ಥಳಗಳತ್ತ ತೆರಳುತ್ತಿದ್ದಾರೆ. ಇದನ್ನೂ ಓದಿ: ವಿಧಾನಸಭೆಯಲ್ಲಿ RSS ಗೀತೆ ಹಾಡಿ ಗಮನ ಸೆಳೆದ ಡಿಕೆಶಿ – ಬಿಜೆಪಿಗೆ ಸಿಕ್ತು ಬ್ರಹ್ಮಾಸ್ತ್ರ
ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿಯ ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯಕ್ಕೆ ಭಾರಿ ಪ್ರಮಾಣದ ನೀರು ಹರಿದು ಬರುತ್ತಿದೆ. ಸದ್ಯ ಜಲಾಶಯಕ್ಕೆ 98,611 ಕ್ಯುಸೆಕ್ ನೀರಿನ ಒಳಹರಿವು ಇದೆ.
ಜಲಾಶಯದಿಂದ ಬಸವಸಾಗರ ಡ್ಯಾಂಗೆ 70 ಸಾವಿರ ಕ್ಯುಸೆಕ್ ನೀರು ಬಿಡಲಾಗುತ್ತಿದೆ. ಇದರಿಂದ ಕೃಷ್ಣಾ ತಟದಲ್ಲಿ ಹೈಅಲರ್ಟ್ ಘೋಷಿಸಲಾಗಿದ್ದು, ಜನರಲ್ಲಿ ಪ್ರವಾಹದ ಭೀತಿ ಎದುರಾಗಿದೆ. 519.60 ಅಡಿ ಗರಿಷ್ಠ ಸಂಗ್ರಹ ಸಾಮರ್ಥ್ಯ ಹೊಂದಿರುವ ಜಲಾಶಯದಲ್ಲಿ ಸದ್ಯ 516.21 ಅಡಿ ನೀರಿದೆ. 123.081 ಟಿಎಂಸಿ ಸಾಮರ್ಥ್ಯದ ಡ್ಯಾಂನಲ್ಲಿ ಇಂದು 75.248 ಟಿಎಂಸಿ ನೀರಿದೆ.ಇದನ್ನೂ ಓದಿ: ಮೈದುಂಬಿ ಹರಿಯುತ್ತಿದ್ದಾಳೆ ಕಪಿಲಾ – ಮುಳುಗಡೆಯ ಭೀತಿಯಲ್ಲಿ ನಂಜನಗೂಡಿನ ಸ್ನಾನ ಘಟ್ಟ
– ಪ್ರವಾಹಕ್ಕೆ ಸಿಲುಕಿದ ರಾಜ್ಯದ 18 ತಾಲೂಕು, 131 ಗ್ರಾಮಗಳು
ಬೆಂಗಳೂರು: ಮುಂದಿನ ಎರಡ್ಮೂರು ದಿನಗಳಲ್ಲಿ ಕೃಷ್ಣಾ ನದಿಯ ಹರಿವು ಹೆಚ್ಚಾಗುವುದರಿಂದ ತೀವ್ರ ಪ್ರವಾಹ ಪರಿಸ್ಥಿತಿ ಉದ್ಭವಿಸುವ ಸಾಧ್ಯತೆಗಳು ಹೆಚ್ಚಿವೆ ಎಂದು ಕಂದಾಯ ಸಚಿವ ಆರ್.ಅಶೋಕ್ ಆತಂಕ ವ್ಯಕ್ತಪಡಿಸಿದ್ದಾರೆ.
ಪ್ರವಾಹ ಪರಿಸ್ಥಿತಿ ನಿಭಾಯಿಸಲು ಮತ್ತು ಪ್ರವಾಹ ಕಾರ್ಯಾಚರಣೆಗಾಗಿ 4 ಎನ್‍ಡಿಆರ್ ಎಫ್ ತಂಡಗಳನ್ನು ರಾಯಚೂರು, ಕೊಡಗು, ಬೆಳಗಾವಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪೂರ್ವ ನಿಯೋಜಿಸಲಾಗಿದೆ. ಬೆಂಗಳೂರಿನಲ್ಲಿರುವ ತಂಡವನ್ನು ಶಿವಮೊಗ್ಗಕ್ಕೆ ಕಳುಹಿಸಲು ಸರ್ಕಾರ ಕ್ರಮ ತೆಗೆದುಕೊಂಡಿದೆ.
ರಾಜ್ಯದ ಒಟ್ಟು 13 ಪ್ರಮುಖ ಜಲಾಶಯಗಳಲ್ಲಿನ ಒಟ್ಟು ಸಂಗ್ರಹಣ 860 ಟಿಎಂಸಿಗಳ ಪೈಕಿ ಇಲ್ಲಿಯವರೆಗೂ 561.42 ಟಿಎಂಸಿ ನೀರು ಸಂಗ್ರಹವಾಗಿದ್ದು, ಒಟ್ಟು ಸಂಗ್ರಹಣದ ಶೇ.65ರಷ್ಟಿದೆ. ಕಳೆದ ಮೂರು ದಿನಗಳಿಂದ ಮಹಾರಾಷ್ಟ್ರದ ಕೃಷ್ಣಾ ನದಿ ಪಾತ್ರದಲ್ಲಿ ಮಳೆಯಿಂದಾಗಿ ಅಲ್ಲಿ ಜಲಾಶಯಗಳು ಪೂರ್ಣ ಮಟ್ಟ ತಲುಪಿದ್ದು, ಅಪಾರ ಪ್ರಮಾಣದ ನೀರು ಹೊರ ಬಿಡಲಾಗುತ್ತಿದೆ. ಹಾಗಾಗಿ ನಮ್ಮ ರಾಜ್ಯದ ಕೃಷ್ಣಾ ನದಿ ಪಾತ್ರದ ಎಲ್ಲಾ ಜಲಾಶಯಗಳ ಪೂರ್ಣ ಮಟ್ಟ ತಲುಪವದರಿಂದ ಒಳಹರಿವಿನಷ್ಟೇ ಹೊರ ಹರಿವು ಹೆಚ್ಚಿಸಲಾಗಿದೆ. ಆದ್ದರಿಂದ ಬೆಳಗಾವಿ, ಬಾಗಲಕೋಟೆ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಹೆಚ್ಚಾಗುವ ಸಾಧ್ಯತೆ ಇದೆ.
ಜುಲೈ 23ರಂದು ಉತ್ತರ ಕನ್ನಡ, ಶಿವಮೊಗ್ಗ, ಕೊಡಗು, ಬೆಳಗಾವಿ, ಹಾವೇರಿ, ಚಿಕ್ಕಮಗಳೂರು, ಧಾರವಾಡ, ಹಾಸನ ಮತ್ತು ದಾವಣಗೆರೆ ಜಿಲ್ಲೆಯಲ್ಲಿ ಭಾರೀ ದಾಖಲೆ ಪ್ರಮಾಣದ ಮಳೆಯಾಗಿದೆ. ಉತ್ತರ ಕನ್ನಡದ ಹಲವು ಭಾಗಗಳಲ್ಲಿ 24 ಗಂಟೆಗಳಲ್ಲಿಯೇ 300 ಮಿ.ಮೀ.ಗೂ ಅಧಿಕ ಮಳೆಯಾಗಿದೆ. ಅಂಕೋಲಾ ತಾಲೂಕಿನ ಡೋಗ್ರಿ ಪಂಚಾಯಿತಿಯಲ್ಲಿ 541 ಮಿ.ಮೀ ಮತ್ತು ಶಿರಸಿ ತಾಲೂಕಿನ ಹಲವೆಡೆ 400 ಮಿ.ಮೀ.ಗೂ ಅಧಿಕ ಮಳೆಯಾಗಿದೆ.
ಹಾಸನ ಮತ್ತು ಮಂಗಳೂರು ನಡುವಿನ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭೂಕುಸಿತ ಉಂಟಾಗಿ ಸಂಪರ್ಕ ಕಡಿತಗೊಂಡಿದ್ದು, ಬೇಲೂರು ಮಾರ್ಗವಾಗಿ ಪರ್ಯಾಯ ಮಾರ್ಗ ಕಲ್ಪಿಸಲಾಗಿದೆ. ಪ್ರವಾಹಕ್ಕೆ ತುತ್ತಾದ ಗ್ರಾಮಗಳಿಂದ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ಕ್ರಮಕೈಗೊಂಡಿದೆ. ರಾಜ್ಯದ ಕರಾವಳಿ, ಮಲೆನಾಡಿಗೆ ಹೊಂದಿಕೊಂಡ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮುಂದಿನ 2-3 ದಿನಗಳವರೆಗೂ ಭಾರೀ ಮಳೆ ಮುಂದುವರಿಯುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದನ್ನೂ ಓದಿ:ಮಳೆಯ ರಣಾರ್ಭಟ, ಚಿಕ್ಕೋಡಿಯಲ್ಲಿ ಪ್ರವಾಹ, ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಸಂಚಾರ ಸ್ಥಗಿತ
ಪ್ರವಾಹದಿಂದಾಗಿ ರಾಜ್ಯದಲ್ಲಿ ಮೂರು ಸಾವು ಆಗಿದ್ದು, ಉತ್ತರ ಕನ್ನಡದ ಇಬ್ಬರು ಕಾಣೆಯಾಗಿದ್ದಾರೆ. ರಾಜ್ಯದ 18 ತಾಲೂಕು, 131 ಗ್ರಾಮಗಳು ಪ್ರವಾಹಕ್ಕೆ ಸಿಲುಕಿದ್ದು, 830 ಮನೆಗಳಿಗೆ ಹಾನಿಯಾಗಿದೆ. ಸದ್ಯ ರಾಜ್ಯದಲ್ಲಿ 80 ಕಾಳಜಿ ಕೇಂದ್ರ ತೆರೆಯಲಾಗಿದ್ದು, 8733 ಜನರನ್ನು ಅಲ್ಲಿಗೆ ಸ್ಥಳಾಂತರಿಸಲಾಗಿದೆ. ಇದನ್ನೂ ಓದಿ: ರಾಜ್ಯಾದ್ಯಂತ ಮುಂದುವರಿಯಲಿದೆ ಭಾರೀ ಮಳೆ – ಹವಾಮಾನ ಇಲಾಖೆ
ಬೆಂಗಳೂರು: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆಯಿಂದ ಉತ್ತರ ಕರ್ನಾಟಕದಲ್ಲಿ ಪ್ರವಾಹ ಸ್ಥಿತಿ ಏರ್ಪಟ್ಟಿದೆ. ಕಳೆದ ಎರಡು ದಿನಕ್ಕೆ ಹೋಲಿಸಿದ್ರೆ ಮಳೆ ಪ್ರಮಾಣ ಕಡಿಮೆ ಆಗಿದೆ. ಆದ್ರೆ ಕೃಷ್ಣೆಯಲ್ಲಿ ಅಬ್ಬರ ಮಾತ್ರ ಕಡಿಮೆ ಆಗಿಲ್ಲ. ದೂದ್‍ಗಂಗಾ ಹಾಗೂ ಹೀರಣ್ಯಕೇಶಿ ನದಿಗಳು ಮಾತ್ರ ಸ್ವಲ್ಪ ಶಾಂತಗೊಂಡಿವೆ. ಕೋಯ್ನಾ ಡ್ಯಾಂನಿಂದ ನೀರು ಬಿಟ್ಟಿಲ್ಲ. ಸುಳ್ಳು ಸುದ್ದಿ ಹಬ್ಬಿಸಬೇಡಿ ಎಂದು ನೀರಾವರಿ ಅಧಿಕಾರಿಗಳು ಮನವಿ ಮಾಡ್ಕೊಂಡಿದ್ದಾರೆ.
ಚಿಕ್ಕೋಡಿ ಉಪವಿಭಾಗದ ಎಂಟು ಸೇತುವೆಗಳು ಮುಳುಗಡೆಯಾಗಿವೆ ಇವೆ. ಇಲ್ಲಿ ನೀರಿನ ಮಟ್ಟ ಕಡಿಮೆ ಆಗಿಲ್ಲ. ಅಪಾರ ಪ್ರಮಾಣದ ಬೆಳೆ ಹಾನಿ ಸಂಭವಿಸಿದೆ. ಬೆಳಗಾವಿಯ ರಾಕಸಕೊಪ್ಪ ಜಲಾಶಯ ಭರ್ತಿ ಆಗಿದೆ. ಜಲಾಶಯದ 2 ಗೇಟ್‍ಗಳ ಮೂಲಕ ಮಾರ್ಕಂಡೇಯ ನದಿಗೆ ನೀರು ಬಿಡಲಾಗಿದೆ. ಇದರಿಂದ ಮಾರ್ಕಂಡೇಯ ನದಿ ತುಂಬಿ ಹರಿಯುತ್ತಿದೆ. ನದಿ ತೀರದ ಜನರಿಗೆ ಆತಂಕ ಹೆಚ್ಚಾಗಿದೆ.
ಧಾರವಾಡದ ತುಪ್ರಿಹಳ್ಳದಲ್ಲಿ ಪ್ರವಾಹ ಇಳಿದಿದ್ದು, ಧಾರವಾಡ – ಸವದತ್ತಿ ರಸ್ತೆ ಸಂಚಾರ ಆರಂಭವಾಗಿದೆ. ಹಾವೇರಿಯಲ್ಲಿ ವರದಾ ನದಿಯಲ್ಲಿ ಸಿಲುಕಿದ್ದ ಎಮ್ಮೆಗಳಿಗಾಗಿ ನದಿಗೆ ಹಾರಿದ್ದ ಯುವಕ ನೀರು ಪಾಲಾಗಿದ್ದಾನೆ. ಹಿರಣ್ಯಕೇಶಿ, ಮಾರ್ಕಂಡೇಯ ಡ್ಯಾಂಗಳಿಂದ ಅಪಾರ ಪ್ರಮಾಣದ ನೀರು ಬಿಟ್ಟ ಹಿನ್ನೆಲೆಯಲ್ಲಿ ಘಟಪ್ರಭಾ ನದಿ ಅಪಾಯದ ಮಟ್ಟ ಮೀರಿ ಹರೀತಿದೆ.
ಮುಧೋಳ ತಾಲೂಕಿನ ಚಿಚಕಂಡಿ ಬ್ಯಾರೇಜ್ ಬಳಿ ಹೊಲಗದ್ದೆಗಳಿಗೆ ನೀರು ನುಗ್ಗಿದೆ. ಕಬ್ಬು, ಸೂರ್ಯಕಾಂತಿ, ಹೆಸರು ಬೆಳೆಗಳು ನೀರಲ್ಲಿ ನಿಂತು ಲಕ್ಷಾಂತರ ರೂಪಾಯಿ ಹಾನಿ ಆಗಿದೆ. ನಾರಾಯಣಪುರ ಜಲಾಶಯದಿಂದ ಕೃಷ್ಣನದಿಗೆ ಭಾರೀ ಪ್ರಮಾಣದ ನೀರು ಹರಿದು ಬರುತ್ತಿರುವುದರಿಂದ ರಾಯಚೂರಿನಲ್ಲಿ ಪ್ರವಾಹ ಭೀತಿ ಹೆಚ್ಚಾಗಿದೆ. ದೇವದುರ್ಗದ ಹೂವಿನಹೆಡಗಿ ಸೇತುವೆ ಮುಳುಗಡೆ ಹಂತದಲ್ಲಿದೆ.
ಯಾದಗಿರಿ: ಮಹಾರಾಷ್ಟ್ರದಲ್ಲಿ ಭಾರೀ ಪ್ರಮಾಣದ ಮಳೆಯಾಗುತ್ತಿರುವ ಹಿನ್ನೆಲೆ ಇಂದು ಬಸವಸಾಗರ ಜಲಾಶಯದಿಂದ 50 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ನಾಳೆ ವೇಳೆಗೆ ನೀರಿನ ಹೊರ ಹರಿವು ಜಾಸ್ತಿಯಾಗುವ ಸಾಧ್ಯತೆಯಿದೆ.
ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರದಲ್ಲಿರುವ ಬಸವಸಾಗರ ಜಲಾಶಯ ಇದಾಗಿದ್ದು, ಈಗಾಗಲೇ ಜಲಾಶಯ ಭರ್ತಿಯಾಗಿದೆ. ಇನ್ನೂ ಮತ್ತೆ ಪ್ರವಾಹ ಪರಿಸ್ಥಿತಿ ಎದುರಿಸಲು ಜಿಲ್ಲಾಡಳಿತ ಸನ್ನದವಾಗುತ್ತಿದ್ದು, ಕೃಷ್ಣಾ ನದಿ ತೀರಕ್ಕೆ ಜನರು ತೆರಳದಂತೆ ಯಾದಗಿರಿ ಜಿಲ್ಲಾಡಳಿತ ಸೂಚನೆ ನೀಡಿದೆ.
ಈಗಾಗಲೇ ನದಿ ತೀರದ ತಾಲೂಕಗಳಾದ ಶಹಾಪುರ, ಸುರಪುರ, ವಡಗೇರಾ, ಹುಣಸಗಿಯಲ್ಲಿ ಕಾಳಜಿ ಕೇಂದ್ರ ಗುರುತಿಸುವ ಕಾರ್ಯ ಆರಂಭಗೊಂಡಿದೆ. ಒಂದು ಲಕ್ಷ ಕ್ಯೂಸೆಕ್ ನೀರು ನದಿಗೆ ಹರಿಯುವ ತನಕ ಜಿಲ್ಲೆಯ ಯಾವುದೇ ಗ್ರಾಮಕ್ಕೆ ಅಪಾಯವಾಗುವುದಿಲ್ಲ. ಆದರೆ ಜಲಾಶಯದ ಹೊರ ಹರಿವು ಒಂದು ಲಕ್ಷ ಕ್ಯೂಸೆಕ್ ದಾಟಿದ್ರೆ, ಸುರಪುರ ತಾಲೂಕಿನ ನೀಲಕಂಠರಾಯನ ಗಡ್ಡಿ ಸಂಪೂರ್ಣ ಸಂಪರ್ಕ ಕಳೆದುಕೊಂಡು, ನಡುಗಡ್ಡೆಯಾಗಲಿದೆ. ಇನ್ನೂ ಕೊಳ್ಳೂರು ಸೇತುವೆ ಮುಳುಗಡೆಯಾಗುವ ಸಾಧ್ಯತೆಯಿದೆ. ಛಾಯಾಭಗವತಿ ದೇವಸ್ಥಾನ ಮುಳುಗಡೆ ಸೇರಿದಂತೆ ಯಕ್ಷಚಿಂತಿ, ಗೌಡೂರು, ಯಮನೂರು, ಸೂಗೂರು ಗ್ರಾಮಗಳ ಜಮೀನಿಗಳು ಸಂಪೂರ್ಣ ನೀರಿನಲ್ಲಿ ಜಲಾವೃತಗೊಳ್ಳಲಿವೆ. ನೀರಿನ ಪ್ರಮಾಣ ಹೆಚ್ಚಾದಂತೆ ಗ್ರಾಮಗಳಿಗೂ ನೀರು ನುಗ್ಗುವ ಸಾಧ್ಯತೆ ಇದೆ.
ಬಸವಸಾಗರ ಜಲಾಶಯ ಒಟ್ಟು 33.31 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿದ್ದು, ಸದ್ಯ ಡ್ಯಾಂ ನಲ್ಲಿ 30.06 ಟಿಎಂಸಿ ನೀರು ಸಂಗ್ರಹವಾಗಿದೆ. ಜಲಾಶಯಕ್ಕೆ ಸದ್ಯ 50 ಸಾವಿರ ಕ್ಯೂಸೆಕ್ ಒಳಹರಿವು ಇದ್ದರೆ, ಒಟ್ಟು 24 ಗೇಟ್ ಗಳ ಪೈಕಿ ಏಳು ಗೇಟ್ ಗಳ ಮೂಲಕ 50 ಸಾವಿರ ಕ್ಯೂಸೆಕ್ ನೀರನ್ನು ಕೃಷ್ಣಾ ನದಿಗೆ ಹರಿಸಲಾಗುತ್ತಿದೆ. ಹಂತ ಹಂತವಾಗಿ ಹೊರ ಹರಿವಿನ ಪ್ರಮಾಣದಲ್ಲಿ ಹೆಚ್ಚಳವಾಗಲಿದೆ.