Tag: maharastra. ekanath shinde

  • ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿಸ್ತೀವಿ: ಏಕ್‍ನಾಥ್ ಶಿಂಧೆ ಉದ್ಧಟತನ

    ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿಸ್ತೀವಿ: ಏಕ್‍ನಾಥ್ ಶಿಂಧೆ ಉದ್ಧಟತನ

    ಬೆಳಗಾವಿ: ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಬಳಿಕ ಇದೀಗ ಸಚಿವ ಏಕನಾಥ ಶಿಂಧೆ ಮತ್ತೆ ಗಡಿ ವಿವಾದ ಕೆಣಕಿದ್ದಾರೆ.

    ಜನವರಿ 17ರಂದು ಎಂಇಎಸ್ ಹುತಾತ್ಮ ದಿನಾಚರಣೆ ಹಿನ್ನೆಲೆಯಲ್ಲಿ ಉದ್ಧಟತನ ಹೇಳಿಕೆ ನೀಡಿರೋ ಏಕನಾಥ್ ಶಿಂಧೆ, ಬೆಳಗಾವಿ ಸೇರಿ ಗಡಿಭಾಗ ಮಹಾರಾಷ್ಟ್ರ ಸೇರುವವರೆಗೂ ನಾವು ಸುಮ್ಮನೆ ಕೂರಲ್ಲ. ಉದ್ಧವ್ ಠಾಕ್ರೆ ನೇತೃತ್ವದಲ್ಲಿ ಕಾನೂನು ಹೋರಾಟ ಮಾಡ್ತೀವಿ. ಬೆಳಗಾವಿ ಸೇರಿ ಮರಾಠಿ ಭಾಷಿಕ ಗಡಿ ಪ್ರದೇಶ ಮಹಾರಾಷ್ಟ್ರ ಸೇರ್ಪಡೆಯಾಗುವ ವಿಶ್ವಾಸವಿದೆ. ಹುತಾತ್ಮರ ಬಲಿದಾನ ವ್ಯರ್ಥವಾಗಲು ನಾವು ಬಿಡಲ್ಲ ಎಂದಿದ್ದಾರೆ.

    ನಿನ್ನಯಷ್ಟೇ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಕರ್ನಾಟಕ ಆಕ್ರಮಿತ ಕೆಲ ಭಾಗಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳಲಿದ್ದೇವೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಬಹುಸಂಖ್ಯೆಯಲ್ಲಿ ಮರಾಠಿ ಭಾಷಿಕರಿರುವ ಹಾಗೂ ಮರಾಠಿ ಸಂಸ್ಕೃತಿಯನ್ನು ಒಳಗೊಂಡಿರುವ ಕೆಲವು ಪ್ರದೇಶವನ್ನು ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ಸೇರ್ಪಡೆ ಮಾಡಿಕೊಳ್ಳಲು ಸರ್ಕಾರ ಬದ್ಧವಾಗಿದೆ. ಇದು ಗಡಿ ವಿವಾದಕ್ಕಾಗಿ ಹೋರಾಟ ಮಾಡಿ ಪ್ರಾಣ ತ್ಯಾಗ ಮಾಡಿದವರಿಗೆ ನಾವು ನೀಡುವ ನಿಜವಾದ ಗೌರವವಾಗಿದೆ ಎಂದು ಮಹಾರಾಷ್ಟ್ರ ಸಿಎಂ ಕಚೇರಿ ಟ್ವೀಟ್ ಮಾಡಿತ್ತು.