Tag: Mahatma Gandhi

  • RSS ಸಂವಿಧಾನ ವಿರೋಧಿ ಸಂಸ್ಥೆ, ಯಾವತ್ತೂ ಅವರು ಸಂವಿಧಾನ ಗೌರವಿಸಿಲ್ಲ- ಸಿದ್ದು ಸಿಡಿಮಿಡಿ

    RSS ಸಂವಿಧಾನ ವಿರೋಧಿ ಸಂಸ್ಥೆ, ಯಾವತ್ತೂ ಅವರು ಸಂವಿಧಾನ ಗೌರವಿಸಿಲ್ಲ- ಸಿದ್ದು ಸಿಡಿಮಿಡಿ

    ಬೆಂಗಳೂರು: ಆರ್‌ಎಸ್‌ಎಸ್ (RSS) ಸಂವಿಧಾನದ ವಿರೋಧ ಸಂಸ್ಥೆ. ಅವರು ಮನುಸ್ಮೃತಿಯಲ್ಲಿ ನಂಬಿಕೆಯಿಟ್ಟವರು, ಯಾವತ್ತಿಗೂ ಸಂವಿಧಾನವನ್ನು (Constitution Of India) ಗೌರವಿಸಲ್ಲ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ವಾಗ್ದಾಳಿ ನಡೆಸಿದರು.

    ಲೇಖಕ ನಟರಾಜ್ ಹುಳಿಯಾರ್ ರಚಿತ `ಎಲ್ಲರ ಗಾಂಧಿ’ ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಬಿಜೆಪಿ (BJP), ಆರ್‌ಎಸ್‌ಎಸ್ (RSS) ವಿರುದ್ಧ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಸಂಕ್ರಾಂತಿ ಹಬ್ಬಕ್ಕೆ ಸೆಲೆಬ್ರೆಟಿಗಳ ಸಂಭ್ರಮ

    ಸಂವಿಧಾನ ಬಂದಾಗಲೇ ವಿರೋಧ ಮಾಡಿದ್ರು, ಈಗಲೂ ವಿರೋಧ ಮಾಡ್ತಾರೆ. ಮನುಸ್ಮೃತಿ ಯಲ್ಲಿ ನಂಬಿಕೆ ಇಟ್ಟವರು ಆರ್‌ಎಸ್‌ಎಸ್ ನವರು. ಇವರಿಗೆ ಸಂವಿಧಾನಕ್ಕಿಂತ ಮನುಸ್ಮೃಯೇ ಮುಖ್ಯ. ಇವರಿಂದ ಗಾಂಧೀಜಿ ಅವರಿಗೆ ಗೌರವ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಗವಿಗಂಗಾಧರೇಶ್ವರ ದೇವಾಲಯದಲ್ಲಿ ಸಂಕ್ರಾಂತಿಯ ವಿಸ್ಮಯ – ಸೂರ್ಯ ರಶ್ಮಿ ಗರ್ಭಗುಡಿ ಪ್ರವೇಶ

    ಹಿಂದೂ ಮಹಾ ಸಭಾದವರು ಗಾಂಧಿಯವರನ್ನ ಕೊಂದೇ ಹಾಕಿ ಬಿಟ್ರು. ಗಾಂಧಿ ಹತ್ಯೆ ಕೇಸ್ ನಲ್ಲಿ ಇದ್ದ ಸಾವರ್ಕರ್ (Savarkar) ಫೋಟೋವನ್ನ ವಿಧಾನಸಭೆಯಲ್ಲಿ ಇಟ್ಟಿದ್ದಾರೆ. ಸಾವರ್ಕರ್ ಅವರನ್ನ ಪೂಜಿಸುತ್ತಾರೆ. ಇವರು ಎಂತಹ ನೀಚರು. ಇಂತಹ ನೀಚರಿಗೆ ಗಾಂಧಿಯವರ ವಿಚಾರಧಾರೆ ಪರಿಹಾರ ಎಂದು ಕುಟುಕಿದರು.

    ಇಂದಿನ ಸರ್ಕಾರ, ಸರ್ಕಾರದ ವಿರುದ್ಧ ಮಾತನಾಡುವವರ ಹಕ್ಕನ್ನು ಕಸಿದುಕೊಳ್ಳುತ್ತಿದೆ. ಗಾಂಧೀಜಿ ಅವರನ್ನ ಮರೆತರೇ ದೇಶವನ್ನ ಸರಿಯಾದ ದಾರಿಯಲ್ಲಿ ತೆಗೆದುಕೊಂಡು ಹೋಗಲು ಕಷ್ಟ. ಗಾಂಧಿಜೀ ಚಿಂತನೆಗಳು, ಭಾಷಣ, ಮಾತುಗಳು ಎಂದೆಂದಿಗೂ ಪ್ರಸ್ತುತ. ಲೋಹಿಯಾ, ಅಂಬೇಡ್ಕರ್, ಬಸವಣ್ಣ, ಬುದ್ಧನ ಚಿಂತನೆಗಳು, ಬರಹಗಳು ಎಂದೆಂದಿಗೂ ಪ್ರಸ್ತುತ. ಸುಂದರ ಸಮಾಜ ನಿರ್ಮಾಣ ಮಾಡಬೇಕಾದ್ರೆ ಈ ಎಲ್ಲಾ ಚಿಂತನೆಗಳು ಅವಶ್ಯಕ, ಅಗತ್ಯ. ಇಂತಹ ದಾರಿಯಲ್ಲಿ ನಡೆದರೆ ಆರೋಗ್ಯಕರ ಸಮಾಜ ನಿರ್ಮಾಣ ಸಾಧ್ಯ ಎಂದು ಸಲಹೆ ನೀಡಿದರು.

    ಇಂದಿನ ರಾಜಕೀಯ ಸೇಡು, ಕೋಮುವಾದ, ಅಮಾನವೀಯ ದಾರಿಯಲ್ಲಿ ನಡೆಯುತ್ತಿದೆ. ಈ ಸರ್ಕಾರದ ವಿರುದ್ಧ ಮಾತಾಡಿದ್ರೆ ಅದೇ ಅಪರಾಧ ಆಗಿದೆ. ಒಳ್ಳೆ ಸರ್ಕಾರ ಇರಲಿ, ಕೆಟ್ಟ ಸರ್ಕಾರ ಇರಲಿ. ಮಾತಾಡುವುದು ಎಲ್ಲರ ಹಕ್ಕು. ಮಾತನಾಡುವ ಸ್ವಾತಂತ್ರ‍್ಯವನ್ನು ಕಿತ್ತುಕೊಳ್ಳುವ ಕೆಲಸ ಆಗ್ತಿದೆ. ಅವರ ವಿರುದ್ಧ ಮಾತಾಡಿದ್ರೆ ಜೈಲಿಗೆ ಹಾಕಿ, ದೇಶ ದ್ರೋಹ ಪಟ್ಟ ಕಟ್ಟುತ್ತಾರೆ. ಇದಕ್ಕೆಲ್ಲ ಗಾಂಧಿ, ಬುದ್ಧ, ಚಿಂತನೆಗಳು ಪರಿಹಾರ ಎಂದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಕಾಂಗ್ರೆಸ್ ವಿಸರ್ಜಿಸುವ ಬಾಪು ಕನಸು ನನಸಾಗುವ ಸಮಯ ಬಂದಿದೆ: ಯೋಗಿ ಆದಿತ್ಯನಾಥ್

    ಕಾಂಗ್ರೆಸ್ ವಿಸರ್ಜಿಸುವ ಬಾಪು ಕನಸು ನನಸಾಗುವ ಸಮಯ ಬಂದಿದೆ: ಯೋಗಿ ಆದಿತ್ಯನಾಥ್

    ಅಹಮದಾಬಾದ್: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (Congress) ಅನ್ನು ವಿಸರ್ಜಿಸುವ ಮಹಾತ್ಮ ಗಾಂಧಿಯವರ (Mahatma Gandhi) ಕನಸನ್ನು ನನಸಾಗಿಸುವ ಸಮಯ ಬಂದಿದೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಹೇಳಿದ್ದಾರೆ. ಗುಜರಾತ್‌ನಲ್ಲಿ (Gujarat) ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

    ಪೋರಬಂದರ್‌ನಲ್ಲಿ ಚುನಾವಣಾ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಯೋಗಿ, ಕಾಂಗ್ರೆಸ್ ಅಧಿಕಾರದಲ್ಲಿದ್ದರೆ ಕೊರೊನ ಸಾಂಕ್ರಾಮಿಕ ಸಮಯದಲ್ಲಿ ಚಿಕಿತ್ಸೆ ಮತ್ತು ಲಸಿಕೆಗಾಗಿ ಮೀಸಲಾದ ಹಣವನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿತ್ತು. ಬಿಕ್ಕಟ್ಟಿನ ಸಂದರ್ಭದಲ್ಲಿ ಕಾಂಗ್ರೆಸ್ ಎಂದಿಗೂ ಜನರೊಂದಿಗೆ ನಿಲ್ಲುವುದಿಲ್ಲ ಎಂದು ಹೇಳಿದರು.

    ಭಾರತಕ್ಕೆ ಸ್ವಾತಂತ್ರ‍್ಯ ಬಂದ ನಂತರ ಕಾಂಗ್ರೆಸ್ ಪಕ್ಷವನ್ನು ವಿಸರ್ಜಿಸಬೇಕೆಂದು ಗಾಂಧಿ ಸೂಚಿಸಿದ್ದರು. ಅಧಿಕಾರದ ಲಾಲಸೆಗೆ ಅದನ್ನು ಮುಂದುವರಿಸಲಾಯಿತು. ಆದರೆ ಕಾಂಗ್ರೆಸ್ ಎಂದೂ ಜನಪರ ಕೆಲಸ ಮಾಡಲಿಲ್ಲ. ಕಾಂಗ್ರೆಸ್‌ಗಿಂತ ಭಿನ್ನವಾಗಿ ಬಿಜೆಪಿ ಯಾವಾಗಲೂ ತನ್ನ ಭರವಸೆಗಳನ್ನು ಈಡೇರಿಸುತ್ತ ಬಂದಿದೆ ಎಂದರು. ಇದನ್ನೂ ಓದಿ: ಪ್ರಧಾನಿ ಪಕ್ಕ ಕುಳಿತು ಬಿಜೆಪಿಯನ್ನು ಹಾಡಿ ಹೊಗಳಿದ ಬಾಲಕಿ – ಶಭಾಶ್ ಅಂದ ಮೋದಿ

    ಬಿಜೆಪಿಗೆ ಜನರು ಅಭೂತಪೂರ್ವ ಬೆಂಬಲ ನೀಡುತ್ತಿದ್ದಾರೆ. ಹೀಗಾಗಿ ಬಾಪು ಅವರ ಕಾಂಗ್ರೆಸ್ ಅನ್ನು ವಿಸರ್ಜಿಸುವ ಕನಸು ನನಸಾಗುವ ಸಮಯ ಬಂದಿದೆ ಎಂದು ಅವರು ಹೇಳಿದರು.

    ಯೋಗಿ ಆದಿತ್ಯನಾಥ್ ಅವರು ಪಕ್ಷದ ಅಭ್ಯರ್ಥಿ ಬಾಬುಭಾಯಿ ಬೋಖಿರಿಯಾ ಪರ ಗುಜರಾತ್‌ನಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಗುಜರಾತ್‌ನ 182 ವಿಧಾನಸಭಾ ಸ್ಥಾನಗಳಿಗೆ ಡಿಸೆಂಬರ್ 1 ಮತ್ತು 5 ರಂದು 2 ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಡಿಸೆಂಬರ್ 8 ರಂದು ಮತ ಎಣಿಕೆ ನಡೆಯಲಿದೆ. ಇದನ್ನೂ ಓದಿ: ಜೈಲಿನಲ್ಲಿ ಸತ್ಯೇಂದ್ರ ಜೈನ್‍ಗೆ ಮಾಡಿದ್ದು ಮಸಾಜ್ ಅಲ್ಲ, ಫಿಸಿಯೋಥೆರಪಿ – ಬಿಜೆಪಿಗೆ ಕೇಜ್ರಿವಾಲ್ ತಿರುಗೇಟು

    Live Tv
    [brid partner=56869869 player=32851 video=960834 autoplay=true]

  • ಬಾಪುರನ್ನು ಕೊಲ್ಲಲು ಗೋಡ್ಸೆಗೆ ಬಂದೂಕು ಹುಡುಕಲು ಸಾವರ್ಕರ್ ಸಹಾಯ: ಗಾಂಧಿ ಮರಿ ಮೊಮ್ಮಗನ ಸ್ಫೋಟಕ ಹೇಳಿಕೆ

    ಬಾಪುರನ್ನು ಕೊಲ್ಲಲು ಗೋಡ್ಸೆಗೆ ಬಂದೂಕು ಹುಡುಕಲು ಸಾವರ್ಕರ್ ಸಹಾಯ: ಗಾಂಧಿ ಮರಿ ಮೊಮ್ಮಗನ ಸ್ಫೋಟಕ ಹೇಳಿಕೆ

    ಮುಂಬೈ: ವಿನಾಯಕ ದಾಮೋದರ್ ಸಾವರ್ಕರ್ (Savarkar) ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಹೇಳಿಕೆಯೊಂದನ್ನು ನೀಡಿದ ಬಳಿಕ ರಾಜಕೀಯ ವಾತಾವರಣ ಬಿಸಿಯಾಗಿದೆ. ರಾಹುಲ್ ಹೇಳಿಕೆಗೆ ಬಿಜೆಪಿ ಕೆಂಡಾಮಂಡಲವಾದರೆ, ಶಿವಸೇನೆ ಕೂಡಾ ಅವರ ಹೇಳಿಕೆಯನ್ನು ಒಪ್ಪುವುದಿಲ್ಲ, ಇದು ಪಕ್ಷದಲ್ಲಿ ವಿಭಜನೆಗೆ ಕಾರಣವಾಗಬಹುದು ಎಂದು ಎಚ್ಚರಿಸಿದೆ.

    ಈ ನಡುವೆ ಮಹಾತ್ಮ ಗಾಂಧಿಯವರ (Mahatma Gandhi) ಮರಿಮೊಮ್ಮಗ ತುಷಾರ್ ಗಾಂಧಿ (Tushar Gandhi) ಸಾವರ್ಕರ್ ಬಗ್ಗೆ ಟ್ವೀಟ್ ಮಾಡಿದ್ದಾರೆ. ಸಾವರ್ಕರ್ ಅವರು ಬ್ರಿಟಿಷರಿಗೆ ಸಹಾಯ ಮಾಡಿದ್ದು ಮಾತ್ರವಲ್ಲದೇ ನಾಥೂರಾಂ ಗೋಡ್ಸೆ (Nathuram Godse) ಅವರಿಗೆ ಬಾಪು ಅವರನ್ನು ಕೊಲ್ಲಲು ಸಮರ್ಥ ಬಂದೂಕನ್ನು ಪಡೆಯಲು ಸಹಾಯ ಮಾಡಿದ್ದರು ಎಂದು ತಿಳಿಸಿದ್ದಾರೆ. ರಾಹುಲ್ ಗಾಂಧಿ ಬಳಿಕ ಇದೀಗ ತುಷಾರ್ ಅವರ ಹೇಳಿಕೆ ವಿವಾದ ಸೃಷ್ಟಿಸುವ ಸಾಧ್ಯತೆಯಿದೆ.

    ಟೀಟ್‌ನಲ್ಲೇನಿದೆ?
    ಸಾವರ್ಕರ್ ಬ್ರಿಟಿಷರಿಗೆ ಸಹಾಯ ಮಾಡಿದ್ದಲ್ಲದೇ, ಬಾಪು ಅವರನ್ನು ಕೊಲ್ಲಲು ನಾಥೂರಾಂ ಗೋಡ್ಸೆಗೆ ಸಮರ್ಥ ಬಂದೂಕನ್ನು ಹುಡುಕಲು ಸಹಾಯ ಮಾಡಿದ್ದರು. ಬಾಪು ಹತ್ಯೆಗೂ 2 ದಿನಗಳ ಮೊದಲು ಗೋಡ್ಸೆ ಬಳಿ ಪ್ರಬಲವಾದ ಯಾವುದೇ ಶಸ್ತ್ರಗಳಿರಲಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಗೃಹ ಸಚಿವರ ಮನೆಯ ಸುತ್ತಮುತ್ತಲೇ ಉಗ್ರರು ಅಡಗಿದ್ದಾರೆ – ಮುತಾಲಿಕ್

    ಟ್ವೀಟ್ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ತುಷಾರ್ ಗಾಂಧಿ ತಮ್ಮ ಹೇಳಿಕೆಯನ್ನು ವಿವರಿಸಿದ್ದಾರೆ. ನಾನು ಯಾವುದೇ ಆರೋಪ ಮಾಡುತ್ತಿಲ್ಲ. ಇತಿಹಾಸದಲ್ಲಿ ದಾಖಲಾಗಿರುವುದನ್ನು ಹೇಳುತ್ತಿದ್ದೇನೆ. ಪೊಲೀಸ್ ಎಫ್‌ಐಆರ್ ಪ್ರಕಾರ ನಾಥೂರಾಂ ಗೋಡ್ಸೆ ಮತ್ತು ವಿನಾಯಕ ಆಪ್ಟೆ ಸಾವರ್ಕರ್ ಅವರು 1948 ರ ಜನವರಿ 26, 27 ರಂದು ಭೇಟಿಯಾಗಿದ್ದರು. ಅವರ ಭೇಟಿಯಾಗುವವರೆಗೂ ಗೋಡ್ಸೆ ಬಳಿ ಬಂದೂಕು ಇರಲಿಲ್ಲ. ಅವರು ಬಂದೂಕು ಹುಡುಕುತ್ತಾ ಮುಂಬೈನಾದ್ಯಂತ ಸುತ್ತಾಡಿದ್ದಾರೆ. ಆದರೆ ಈ ಭೇಟಿಯ ಬಳಿಕ ಅವರು ನೇರವಾಗಿ ದೆಹಲಿಗೆ ಹೋಗಿ, ಅಲ್ಲಿಂದ ಗ್ವಾಲಿಯರ್‌ಗೆ ಹೋದರು. ಅಲ್ಲಿ ಅವರಿಗೆ ಒಳ್ಳೆಯ ಪಿಸ್ತೂಲ್ ಸಿಕ್ಕಿದೆ. ಇದೆಲ್ಲವೂ ಬಾಪು ಹತ್ಯೆಯ 2 ದಿನಗಳ ಮೊದಲು ನಡೆದಿದೆ. ಇದು ಆರೋಪ ಅಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮಹಾನಗರ ಪಾಲಿಕೆ ಚುನಾವಣೆ ಟಿಕೆಟ್ ಮಾರಾಟ – ಆಪ್ ವಿರುದ್ಧ ಬಿಜೆಪಿ ಗಂಭೀರ ಆರೋಪ

    Live Tv
    [brid partner=56869869 player=32851 video=960834 autoplay=true]

  • ಗಾಂಧಿ ಪ್ರತಿಮೆಯನ್ನು ಹಾನಿಗೊಳಿಸಿದ ದುಷ್ಕರ್ಮಿಗಳು

    ಗಾಂಧಿ ಪ್ರತಿಮೆಯನ್ನು ಹಾನಿಗೊಳಿಸಿದ ದುಷ್ಕರ್ಮಿಗಳು

    ಭೋಪಾಲ್: ಮಹಾತ್ಮ ಗಾಂಧಿಯ (Mahatma Gandhi) ಪ್ರತಿಮೆಯನ್ನು (Statue) ದುಷ್ಕರ್ಮಿಗಳು ಹಾನಿಗೊಳಿಸಿರುವ ಘಟನೆ ಮಧ್ಯಪ್ರದೇಶದ ಖಾಂಡ್ವಾ ಜಿಲ್ಲೆಯಲ್ಲಿ ನಡೆದಿದೆ.

    ಮಧ್ಯಪ್ರದೇಶದ (Madhya Pradesh) ಖಾಂಡ್ವಾ ಜಿಲ್ಲೆ ರಂಗಾವ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿ ಜಾವರ್ ಗ್ರಾಮ ಪಂಚಾಯತ್ ಕಾರ್ಯದರ್ಶಿ ದೇವರಾಜ್ ಸಿಂಗ್ ನೀಡಿದ ದೂರಿನ ಮೇರೆಗೆ ಜವರ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

    POLICE JEEP

    ಸ್ಥಳೀಯ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕುಂದನ್ ಮಾಳವಿಯಾ ಮಾತನಾಡಿ, ಘಟನೆಯು ಗ್ರಾಮಸ್ಥರನ್ನು ಕೆರಳಿಸಿದೆ. ಇದರಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: BJPಯಂತೆ ಒಂದೊಂದು ಸಮಾಜಕ್ಕೆ ಒಂದೊಂದು ಸಮಾವೇಶ ಮಾಡಲ್ಲ – HDK

    ಗಾಂಧಿ ಪ್ರತಿಮೆಗೆ ಕಿಡಿಗೇಡಿಗಳು ಹಾನಿ ಮಾಡಿರುವುದು ಇದೇ ಮೊದಲಲ್ಲ. ಈ ವರ್ಷದ ಆರಂಭದಲ್ಲಿ ಪಂಜಾಬ್‍ನ ಬಟಿಂಡಾ ಜಿಲ್ಲೆಯ ಸಾರ್ವಜನಿಕ ಉದ್ಯಾನವನದಲ್ಲಿ ಹಾಗೂ ಕೆನಡಾದ ಒಂಟಾರಿಯೊ ಪ್ರಾಂತ್ಯದಲ್ಲಿ ಸ್ಥಾಪಿಸಲಾದ ಗಾಂಧಿ ಪ್ರತಿಮೆಗಳನ್ನು ದುಷ್ಕರ್ಮಿಗಳು ಹಾನಿಗೊಳಿಸಿದ್ದರು. ಇದನ್ನೂ ಓದಿ: ಬೆಳಗಾವಿಯಲ್ಲಿ ನಡೆಯಲಿದೆ ಅದ್ಧೂರಿ ಕನ್ನಡ ರಾಜ್ಯೋತ್ಸವ – ಕನ್ನಡಿಗರಿಗೆ 1 ಲಕ್ಷ ಹೋಳಿಗೆ ಊಟ

    Live Tv
    [brid partner=56869869 player=32851 video=960834 autoplay=true]

  • ಅಧಿಕಾರ ಚುಕ್ಕಾಣಿಗೂ ಮುನ್ನ ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ಖರ್ಗೆ

    ಅಧಿಕಾರ ಚುಕ್ಕಾಣಿಗೂ ಮುನ್ನ ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ಖರ್ಗೆ

    ನವದೆಹಲಿ: ಕಾಂಗ್ರೆಸ್ (Congress) ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸುವ ಮುನ್ನ ಕಾಂಗ್ರೆಸ್‍ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು ಇಂದು ರಾಜ್‍ಘಾಟ್‍ನಲ್ಲಿ (Rajghat) ಮಹಾತ್ಮ ಗಾಂಧಿ (Mahatma Gandhi) ಸ್ಮಾರಕಕ್ಕೆ ಗೌರವ ಸಲ್ಲಿಸಿದರು.

    ನವದೆಹಲಿಯಲ್ಲಿ (New Delhi) ಇಂದು ನಡೆಯುವ ಸಮಾರಂಭದಲ್ಲಿ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi) ಅವರು, 24 ವರ್ಷಗಳಲ್ಲೇ ಮೊದಲ ಬಾರಿಗೆ ಗಾಂಧಿಯೇತರ ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪ್ರಮಾಣಪತ್ರ ವಿತರಿಸಲಿದ್ದಾರೆ. ಅಲ್ಲದೇ ಈ ಕಾರ್ಯಕ್ರಮದಲ್ಲಿ ಭಾರತ್ ಜೋಡೋ (Bharat Jodo Yatra) ಪಾದಯಾತ್ರೆ ನಡೆಸುತ್ತಿರುವ ರಾಹುಲ್ ಗಾಂಧಿ ಅವರು ಕೂಡ ಪಾಲ್ಗೊಳ್ಳಲಿದ್ದಾರೆ.

    ಎಐಸಿಸಿ ಅಧ್ಯಕೀಯ ಚುನಾವಣೆಯಲ್ಲಿ ಒಟ್ಟು 9,385 ಮತಗಳು ಚಲಾವಣೆಗೊಂಡಿದ್ದವು. ಇದರಲ್ಲಿ 415 ಮತಗಳನ್ನು ಅಮಾನ್ಯಗೊಳಿಸಲಾಗಿತ್ತು. ಈ ಪೈಕಿ 7,897 ಮತಗಳನ್ನು ಪಡೆದ ಮಲ್ಲಿಕಾರ್ಜುನ ಖರ್ಗೆ ಜಯಭೇರಿ ಭಾರಿಸಿದ್ದಾರೆ. ಪ್ರತಿಸ್ಪರ್ಧಿಯಾಗಿದ್ದ ಶಶಿ ತರೂರ್ 1,072 ಮತಗಳನ್ನು ಪಡೆದು ಸೋಲನ್ನು ಅನುಭವಿಸಿದರು.

    ಗಾಂದಿ ಕುಟುಂಬಕ್ಕೆ ಆಪ್ತರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರು, ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರದಲ್ಲಿ ಕೇಂದ್ರ ಕ್ಯಾಬಿನೆಟ್ ಸಚಿವ- ಕಾರ್ಮಿಕ ಮತ್ತು ಉದ್ಯೋಗ, ರೈಲ್ವೆ ಮತ್ತು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರಗಳಲ್ಲಿ ವಿವಿಧ ಖಾತೆಗಳನ್ನು ಹೊಂದಿದ್ದಲ್ಲದೇ ಮತ್ತು ಕರ್ನಾಟಕ ಕಾಂಗ್ರೆಸ್‍ನ ಅಧ್ಯಕ್ಷರೂ ಮತ್ತು ರಾಜ್ಯ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ಕಾರ್ಯನಿರ್ವಹಿಸಿದ್ದಾರೆ. ಇಷ್ಟಾದರೂ ಮನೋಧರ್ಮ ಮತ್ತು ಸ್ವಭಾವದಿಂದ ಸಮಚಿತ್ತರಾಗಿರುವ ಖರ್ಗೆ ಅವರು, ಯಾವುದೇ ರಾಜಕೀಯ ವಿವಾದಕ್ಕೀಡಾಗಿಲ್ಲ.

    Live Tv
    [brid partner=56869869 player=32851 video=960834 autoplay=true]

  • ಖಾದಿ, ಕರಕುಶಲ ವಸ್ತುಗಳನ್ನು ಹೆಚ್ಚು ಖರೀದಿಸಿ – ರಾಜ್‌ಘಾಟ್‌ನಲ್ಲಿ ಗಾಂಧಿ ಸಮಾಧಿಗೆ ಮೋದಿ ಗೌರವ ನಮನ

    ಖಾದಿ, ಕರಕುಶಲ ವಸ್ತುಗಳನ್ನು ಹೆಚ್ಚು ಖರೀದಿಸಿ – ರಾಜ್‌ಘಾಟ್‌ನಲ್ಲಿ ಗಾಂಧಿ ಸಮಾಧಿಗೆ ಮೋದಿ ಗೌರವ ನಮನ

    ನವದೆಹಲಿ: ರಾಷ್ಟ್ರಪಿತ ಮಹಾತ್ಮ ಗಾಂಧಿ (Mahatma Gandhi) ಮತ್ತು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ (Lal Bahadur Shastri) ಅವರ ಜನ್ಮದಿನದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಭಾನುವಾರ ನಮನ ಸಲ್ಲಿಸಿದರು.

    ಮಹಾತ್ಮ ಗಾಂಧಿಯವರ 153ನೇ ಜನ್ಮದಿನದ ಪ್ರಯುಕ್ತವಾಗಿ ರಾಜ್‌ಘಾಟ್‌ಗೆ ತೆರಳಿ ಮಹಾತ್ಮ ಗಾಂಧೀಜಿಗೆ ಗೌರವ ಸಲ್ಲಿಸಿ ನಂತರ ಮಾತನಾಡಿದ ಅವರು, ಈ ಗಾಂಧಿ ಜಯಂತಿಯು ಇನ್ನೂ ಹೆಚ್ಚು ವಿಶೇಷವಾಗಿದೆ. ಏಕೆಂದರೆ ಭಾರತವು ಆಜಾದಿ ಕಾ ಅಮೃತ ಮಹೋತ್ಸವವನ್ನು ಆಚರಿಸುತ್ತಿದೆ. ಈ ಹಿನ್ನೆಲೆಯಲ್ಲಿ ಬಾಪು ಆದರ್ಶಗಳನ್ನು ಅನುಸರಿಸುವ ಮೂಲಕ ಖಾದಿ ಮತ್ತು ಕರಕುಶಲ ವಸ್ತುಗಳನ್ನು ಖರೀದಿಸಲು ನಾನು ನಿಮ್ಮನ್ನು ಒತ್ತಾಯಿಸುತ್ತೇನೆ ಎಂದರು.

    ದೆಹಲಿಯ ಪ್ರಧಾನಮಂತ್ರಿ ಸಂಗ್ರಹಾಲಯದಲ್ಲಿರುವ ಲಾಲ್‌ಬಹದ್ದೂರ್ ಶಾಸ್ತ್ರಿ ಅವರ ಗ್ಯಾಲರಿಯ ಫೋಟೋವನ್ನು ಮೋದಿ ಹಂಚಿಕೊಂಡರು ಹಾಗೂ ಮ್ಯೂಸಿಯಂಗೆ ಭೇಟಿ ನೀಡುವಂತೆ ಜನರಿಗೆ ಮನವಿ ಮಾಡಿದರು. ಇದನ್ನೂ ಓದಿ: ಹಳ್ಳದಲ್ಲಿ ನಾಲ್ವರು ಮಹಿಳೆಯರು ಕೊಚ್ಚಿ ಹೋದ ಪ್ರಕರಣ – ಇಬ್ಬರ ಮೃತದೇಹ ಪತ್ತೆ

    ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಸರಳತೆ ಮತ್ತು ನಿರ್ಣಾಯಕತೆಗಾಗಿ ಭಾರತದಾದ್ಯಂತ ಮೆಚ್ಚುಗೆ ಪಡೆದಿದ್ದಾರೆ. ನಮ್ಮ ಇತಿಹಾಸದ ಅತ್ಯಂತ ನಿರ್ಣಾಯಕ ಸಮಯದಲ್ಲಿ ಅವರ ಕಠಿಣ ನಾಯಕತ್ವವು ಯಾವಾಗಲೂ ಸ್ಮರಣೀಯವಾಗಿದೆ ಎಂದು ಹೇಳಿದರು. ಇದನ್ನೂ ಓದಿ: ರಾತ್ರೋರಾತ್ರಿ ಪಬ್‍ಗಳ ಮೇಲೆ ದಾಳಿ – ಕೇಸ್ ದಾಖಲು

    Live Tv
    [brid partner=56869869 player=32851 video=960834 autoplay=true]

  • ಮಹಾತ್ಮ ಗಾಂಧಿ ಮರಿ ಮೊಮ್ಮಗ ಸಲ್ಲಿಸಿದ್ದ ಅರ್ಜಿ ವಜಾ

    ಮಹಾತ್ಮ ಗಾಂಧಿ ಮರಿ ಮೊಮ್ಮಗ ಸಲ್ಲಿಸಿದ್ದ ಅರ್ಜಿ ವಜಾ

    ಅಹಮದಾಬಾದ್: ಸಬರಮತಿ ಆಶ್ರಮದ ಸುತ್ತ ನಡೆಯಲಿರುವ ಪುನರ್ ಅಭಿವೃದ್ಧಿ ಕಾರ್ಯಗಳಿಗೆ ತಡೆ ನೀಡುವಂತೆ ಕೋರಿ ಮಹಾತ್ಮ ಗಾಂಧಿ ಅವರ ಮರಿ ಮೊಮ್ಮಗ ತುಷಾರ್ ಗಾಂಧಿ ಸಲ್ಲಿಸಿದ್ದ ಅರ್ಜಿಯನ್ನು ಗುಜರಾತ್ ಹೈಕೋರ್ಟ್ ವಜಾ ಮಾಡಿದೆ. ಆಶ್ರಮಕ್ಕೆ ಯಾವುದೇ ಧಕ್ಕೆಗಳಿಲ್ಲ ಎನ್ನುವುದನ್ನು ಖಚಿತಪಡಿಸಿಕೊಂಡ ಕೋರ್ಟ್ ಅರ್ಜಿ ವಜಾ ಮಾಡಿದೆ.

    ಸಬರಮತಿ ಆಶ್ರಮದ ಸುತ್ತ 55 ಎಕರೆ ಭೂಮಿಯನ್ನು ಅಭಿವೃದ್ಧಿಗೊಳಿಸಲಾಗುತ್ತಿದೆ. ಇದರಿಂದ ಆಶ್ರಮಕ್ಕೆ ಧಕ್ಕೆಯಾಗಲಿದೆ ಮತ್ತು ತನ್ನ ಮೂಲ ಸಂಸ್ಕೃತಿಯನ್ನು ಕಳೆದುಕೊಳ್ಳಲಿದೆ. ಹೀಗಾಗಿ ಕಾಮಗಾರಿಗೆ ತಡೆ ನೀಡಬೇಕು ಎಂದು ಮನವಿ ಮಾಡಿದ್ದರು. ಇದನ್ನೂ ಓದಿ : KPTCL ಪರೀಕ್ಷೆಯಲ್ಲಿ ಅಕ್ರಮ- N95 ಮಾಸ್ಕ್ ಒಳಗಡೆ ಎಲೆಕ್ಟ್ರಾನಿಕ್‌ ಡಿವೈಸ್ ಸೇಲ್ ಮಾಡಿದ್ದ ಆರೋಪಿ ಅರೆಸ್ಟ್

    ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅರವಿಂದ್ ಕುಮಾರ್ ಮತ್ತು ನ್ಯಾಯಮೂರ್ತಿ ಅಶುತೋಷ್ ಜೆ ಶಾಸ್ತ್ರಿ ಅವರನ್ನೊಳಗೊಂಡ ಪೀಠವು, ಈ ಯೋಜನೆಯು ಮಹಾತ್ಮ ಗಾಂಧಿಯವರ ಆಲೋಚನೆಗಳು ಮತ್ತು ತತ್ವಶಾಸ್ತ್ರವನ್ನು ಉತ್ತೇಜಿಸುತ್ತದೆ ಎಂದು ಅಭಿಪ್ರಾಯಪಟ್ಟಿದೆ. ಅಲ್ಲದೇ ಗಾಂಧಿ ಆಶ್ರಮವು ಎಲ್ಲಾ ವಯೋಮಾನದ ಮನುಕುಲಕ್ಕೆ ಕಲಿಕೆಯ ಸ್ಥಳವಾಗಿದೆ ಎಂದು ಪೀಠ ಹೇಳಿದೆ. ಇದನ್ನೂ ಓದಿ: ಕೋಟ್ಯಧಿಪತಿಯಾಗಿದ್ರೂ ಬಿಪಿಎಲ್ ಕಾರ್ಡ್‌ – ಜೆಡಿಎಸ್‌ ನಾಯಕನ ನಗರ ಸಭೆ ಸದಸ್ಯತ್ವ ರದ್ದು

    court order law

    ವಿವಾರಣೆ ವೇಳೆ ಅಸ್ತಿತ್ವದಲ್ಲಿರುವ ಗಾಂಧಿ ಆಶ್ರಮಕ್ಕೆ ಯಾವುದೇ ತೊಂದರೆಯಾಗುವುದಿಲ್ಲ ಮತ್ತು ಆಶ್ರಮದ ಮೂಲ ಸ್ವರೂಪ ಬದಲಾವಣೆ ಮಾಡುವುದಿಲ್ಲ, ಆಶ್ರಮದ ಸುತ್ತಮುತ್ತಲಿನ 55 ಎಕರೆ ಭೂಮಿಯನ್ನು ಮಾತ್ರ ಮರು ಅಭಿವೃದ್ಧಿಪಡಿಸುತ್ತದೆ ಎಂದು ಅಡ್ವೊಕೇಟ್ ಜನರಲ್ ಕಮಲ್ ತ್ರಿವೇದಿ ಸಲ್ಲಿಸಿದ ಸಲ್ಲಿಕೆಯನ್ನು ಕೋರ್ಟ್ ಪರಿಗಣಿಸಿದೆ.

    ಈ ಅರ್ಜಿಯನ್ನು ಈ ಮೊದಲು ಸುಪ್ರೀಂಕೋರ್ಟ್‍ಗೆ ಸಲ್ಲಿಸಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಡಿವೈ ಚಂದ್ರಚೂಡ್ ಮತ್ತು ಸೂರ್ಯಕಾಂತ್ ಅವರ ಪೀಠವು ವಿವರವಾದ ವಿಚಾರಣೆಯ ನಂತರ ತೆಗೆದುಕೊಳ್ಳಬೇಕಾದ ಹೊಸ ನಿರ್ಧಾರಕ್ಕಾಗಿ ವಿಷಯವನ್ನು ಪಟ್ಟಿ ಮಾಡಲು ಮತ್ತೆ ಹೈಕೋರ್ಟ್‍ಗೆ ವರ್ಗಾಯಿಸಿತು.

    Live Tv
    [brid partner=56869869 player=32851 video=960834 autoplay=true]

  • ನ್ಯೂಯಾರ್ಕ್‍ನಲ್ಲಿ ಗಾಂಧಿ ಪ್ರತಿಮೆ ಧ್ವಂಸ – ಎರಡು ವಾರಗಳಲ್ಲಿ 2ನೇ ಬಾರಿಗೆ ಕೃತ್ಯ

    ನ್ಯೂಯಾರ್ಕ್‍ನಲ್ಲಿ ಗಾಂಧಿ ಪ್ರತಿಮೆ ಧ್ವಂಸ – ಎರಡು ವಾರಗಳಲ್ಲಿ 2ನೇ ಬಾರಿಗೆ ಕೃತ್ಯ

    ವಾಷಿಂಗ್ಟನ್: ನ್ಯೂಯಾರ್ಕ್‍ನ ದೇವಾಲಯದ ಮುಂಭಾಗದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆಯನ್ನು ಈ ತಿಂಗಳು ಎರಡನೇ ಬಾರಿಗೆ ಧ್ವಂಸಗೊಳಿಸಲಾಗಿದೆ.

    ಆಗಸ್ಟ್ 16ರ ಮುಂಜಾನೆ ಈ ಘಟನೆ ನಡೆದಿದ್ದು, ಯುನೈಟೆಡ್ ಸ್ಟೇಟ್ ನಲ್ಲಿ ಗಾಂಧಿ ಪ್ರತಿಮೆಗಳ ಮೇಲೆ ನಡೆಯುತ್ತಿರುವ ದಾಳಿಗಳಲ್ಲಿ ಇದು ಇತ್ತೀಚಿನದ್ದಾಗಿದೆ. 6 ಮಂದಿ ಸೇರಿಕೊಂಡು ಶ್ರೀ ತುಳಸಿ ಮಂದಿರದಲ್ಲಿರುವ ಗಾಂಧಿ ಪ್ರತಿಮೆಯನ್ನು ಸುತ್ತಿಗೆಯಿಂದ ಹೊಡೆದು ಧ್ವಂಸಗೊಳಿಸಿದ್ದಾರೆ. ಇದರ ಸುತ್ತಲೂ ಹಾಗೂ ರಸ್ತೆ ಮೇಲೆ ಪ್ರಚೋದನಕಾರಿ ಪದಗಳನ್ನು ಬರೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ಈ ಹಿಂದೆ ಆಗಸ್ಟ್ 3 ರಂದು ಕೂಡ ಮಹಾತ್ಮ ಗಾಂಧಿಯವರ ಪ್ರತಿಮೆಯನ್ನು ಹೊಡೆದು ಹಾಕಿ, ಧ್ವಂಸಗೊಳಿಸಲಾಗಿತ್ತು. ಈ ಕೃತ್ಯದಲ್ಲಿ ಭಾಗಿಯಾಗಿದ್ದ ಶಂಕಿತ 25 ರಿಂದ 30 ವರ್ಷ ವಯಸ್ಸಿನ ವ್ಯಕ್ತಿಗಳ ವೀಡಿಯೋವನ್ನು ಪೊಲೀಸರು ಇದೀಗ ಬಿಡುಗಡೆಗೊಳಿಸಿದ್ದಾರೆ. ವೀಡಿಯೋದಲ್ಲಿ ಆರೋಪಿಗಳು ಬಿಳಿ ಮರ್ಸಿಡಿಸ್ ಬೆಂಜ್ ಕಾರಿನಲ್ಲಿ ಪರಾರಿಯಾಗಿರುವುದನ್ನು ಕಾಣಬಹುದಾಗಿದೆ. ಇದನ್ನೂ ಓದಿ: ಸಿದ್ದರಾಮಯ್ಯ ಎಷ್ಟೇ ತುಷ್ಟೀಕರಣದ ರಾಜಕಾರಣ ಮಾಡಲಿ ಮೊಟ್ಟೆ ಎಸೆಯಬೇಡಿ – ಪ್ರಹ್ಲಾದ್‌ ಜೋಶಿ‌

    ಈ ಘಟನೆಯನ್ನು ನ್ಯೂಯಾರ್ಕ್ ಸ್ಟೇಟ್ ಅಸೆಂಬ್ಲಿ ಸದಸ್ಯೆ ಜೆನ್ನಿಫರ್ ರಾಜ್‍ಕುಮಾರ್ ಖಂಡಿಸಿದ್ದು, ದುಷ್ಕರ್ಮಿಗಳನ್ನು ಶೀಘ್ರವೇ ಬಂಧಿಸಿ, ಕಾನೂನುಬದ್ಧವಾಗಿ ಪೂರ್ಣ ಪ್ರಮಾಣದಲ್ಲಿ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದ್ದಾರೆ. ತುಳಸಿ ಮಂದಿರದಲ್ಲಿರುವ ಗಾಂಧಿ ಪ್ರತಿಮೆಯನ್ನು ಎರಡನೇ ಬಾರಿ ಧ್ವಂಸಗೊಳಿಸಲಾಗಿದ್ದು, ಈ ಬಾರಿ ಸಂಪೂರ್ಣವಾಗಿ ಪ್ರತಿಮೆ ಧ್ವಂಸಗೊಂಡಿದೆ. ಇದನ್ನೂ ಓದಿ: ಫಿನ್‌ಲ್ಯಾಂಡ್ ಪ್ರಧಾನಿಯ ಖಾಸಗಿ ವೀಡಿಯೋ ಲೀಕ್ – ಮುಚ್ಚಿಡಲು ಏನೂ ಇಲ್ಲವೆಂದ ಮರಿನ್

    Live Tv
    [brid partner=56869869 player=32851 video=960834 autoplay=true]

  • ಮಹಾತ್ಮ ಗಾಂಧಿ ಕೊಂದವರು, ನನ್ನನ್ನ ಬಿಡ್ತಾರಾ? : ಸಿದ್ದರಾಮಯ್ಯ

    ಮಹಾತ್ಮ ಗಾಂಧಿ ಕೊಂದವರು, ನನ್ನನ್ನ ಬಿಡ್ತಾರಾ? : ಸಿದ್ದರಾಮಯ್ಯ

    ಚಿಕ್ಕಮಗಳೂರು: ಮಹಾತ್ಮ ಗಾಂಧಿ ಕೊಂದವರು, ನನ್ನನ್ನ ಬಿಡ್ತಾರಾ ಎಂದು ಬಿಜೆಪಿ ಪ್ರತಿಭಟನಾಕಾರರ ವಿರುದ್ಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಕಾಫಿನಾಡು ಚಿಕ್ಕಮಗಳೂರು ಪ್ರವಾಸದಲ್ಲಿರುವ ಸಿದ್ದರಾಮಯ್ಯನವರು ಮಾತನಾಡಿ, ಮಹಾತ್ಮ ಗಾಂಧಿಯನ್ನೇ ಕೊಂದವರು, ನನ್ನನ್ನು ಬಿಡುತ್ತಾರಾ? ಮಹಾತ್ಮಾ ಗಾಂಧಿಯನ್ನು ಕೊಂದ ನಾಥೂರಾಮ್ ಗೋಡ್ಸೆ ಅವರ ಫೋಟೋವನ್ನು ಇಟ್ಟು ಬಿಜೆಪಿ ಯವರು ಪೂಜೆ ಮಾಡುತ್ತಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸೆತ ಪ್ರಕರಣ – ತಡರಾತ್ರಿ ಬಿಜೆಪಿಯ 9 ಮಂದಿ ಬಂಧನ, ಬಿಡುಗಡೆ

    ಮತ್ತೊಂದೆಡೆ ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಮಕ್ಕಿಕೊಪ್ಪ ಗ್ರಾಮಕ್ಕೆ ಆಗಮಿಸಿದ ಸಿದ್ದರಾಮಯ್ಯ ಅವರಿಗೆ ಹಿಂದೂ ಸಂಘಟನೆ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿದ್ದಾರೆ. ಅಲ್ಲದೇ ಪ್ರತಿಭಟನೆ ವೇಳೆ ಸಾವರ್ಕರ್ ಫೋಟೋ ಹಿಡಿದು ಸಿದ್ದರಾಮಯ್ಯ ವಿರುದ್ಧ ಧಿಕ್ಕಾರ ಕೂಗಿದ್ದಾರೆ.  ಇದನ್ನೂ ಓದಿ: ಸಿದ್ದರಾಮಯ್ಯ ಹತ್ಯೆಗೆ RSS, ಬಿಜೆಪಿ ಸಂಚು ಮಾಡಿದೆ: ಶಿವರಾಮ್ ಗಂಭೀರ ಆರೋಪ

    ಕೊಡಗು ಜಿಲ್ಲೆಯ ಮಳೆಹಾನಿ ಪ್ರದೇಶಗಳಿಗೆ ಗುರುವಾರ ಸಿದ್ದರಾಮಯ್ಯ ಅವರು ಭೇಟಿ ನೀಡಿದ್ದ ವೇಳೆ `ಕೊಡಗಿನ ವಿರೋಧಿ, ಕೊಡವರ ವಿರೋಧಿ ಸಿದ್ದರಾಮಯ್ಯ ಎಂಬಿತ್ಯಾದಿ ಘೋಷಣೆಗಳ ಮೂಲಕ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸುತ್ತಿದ್ದರು. ಅಲ್ಲದೇ ಅಲ್ಲಿನ ತಿಮ್ಮಯ್ಯ ವೃತ್ತದಲ್ಲಿ ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರು ಮುಖಾಮುಖಿಯಾಗಿದ್ದು ವಾತಾವರಣ ಉದ್ವಿಗ್ನಗೊಂಡಿತ್ತು. ಇದೇ ವೇಳೆ ಹಿಂದೂಪರ ಸಂಘಟನೆ ಕಾರ್ಯಕರ್ತರು ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದರು. ಈ ಪ್ರಕರಣ ರಾಜ್ಯಾದ್ಯಂತ ವ್ಯಾಪಕ ಟೀಕೆಗೆ ಗುರಿಯಾಗಿದೆ.

    Live Tv
    [brid partner=56869869 player=32851 video=960834 autoplay=true]

  • ‘ಗಾಂಧೀಜಿಯನ್ನು ಕೊಂದಿದ್ದು ನಾವೇ’ ಎಂದ ಹಿಂದೂ ಮಹಾಸಭಾದ ಅಧ್ಯಕ್ಷನ ವಿರುದ್ಧ ಕಾಂಗ್ರೆಸ್ ದೂರು

    ‘ಗಾಂಧೀಜಿಯನ್ನು ಕೊಂದಿದ್ದು ನಾವೇ’ ಎಂದ ಹಿಂದೂ ಮಹಾಸಭಾದ ಅಧ್ಯಕ್ಷನ ವಿರುದ್ಧ ಕಾಂಗ್ರೆಸ್ ದೂರು

    ಬೆಂಗಳೂರು: ‘ಮಹಾತ್ಮಗಾಂಧೀಜಿ ಅವರನ್ನು ಕೊಂದಿದ್ದು ನಾವೇ’ ಎಂದ ಸಂಘ ಪರಿವಾರದ ಮುಖಂಡ ಹಿಂದೂ ಮಹಾಸಭಾದ ಅಧ್ಯಕ್ಷ ಎಸ್.ಸುಬ್ರಮಣ್ಯ ರಾಜು ವಿರುದ್ಧ ಕಾಂಗ್ರೆಸ್ ದೂರು ನೀಡಿದೆ.

    ಹೈಗ್ರೌಂಡ್ಸ್ ಠಾಣೆಯಲ್ಲಿ ಕಾಂಗ್ರೆಸ್ ಎಸ್.ಸುಬ್ರಮಣ್ಯ ರಾಜು ವಿರುದ್ಧ ಕಾನೂನು ಕ್ರಮ ಕೈಗೊಳಬೇಕು ಎಂದು ಒತ್ತಾಯಿಸಿ ದೂರು ನೀಡಿದೆ. ಇದನ್ನೂ ಓದಿ: ರಾಷ್ಟ್ರ ರಾಜಧಾನಿಯಲ್ಲಿಲ್ಲ ಮಹಿಳೆಯರಿಗೆ ರಕ್ಷಣೆ – ನಿತ್ಯ 6 ರೇಪ್, 7 ಕಿರುಕುಳ ಪ್ರಕರಣಗಳು ವರದಿ 

    ದೂರಿನಲ್ಲಿ ಏನಿದೆ?
    ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರನ್ನು ಕೊಂದಿದ್ದು ನಾವೇ ಎಂದು ಹಿಂದೂ ಮಹಾಸಭಾದ ಅಧ್ಯಕ್ಷ ಹಾಗೂ ಸಂಘ ಪರಿವಾರದ ಮುಖಂಡರಾದ ಎನ್.ಸುಬ್ರಮಣ್ಯರಾಜು(ನಾರಾಯಣ) ಆವರು ವಾಹಿನಿಯೊಂದರಲ್ಲಿ ಬಹಿರಂಗ ಹೇಳಿಕೆ ನೀಡಿದ್ದಾರೆ. ಈ ಮೇಲಿನ ವಿಷಯಕ್ಕೆ ಸಂಬಂಧಿಸಿದಂತೆ, ದೇಶ ವಿಭಜನೆಗೆ ಮಹಾತ್ಮಗಾಂಧಿಯೇ ಕಾರಣ ಎಂಬ ಹೇಳಿಕೆ ದೇಶದ್ರೋಹದ ಹೇಳಿಕೆಯಾಗಿದೆ. ಆದ್ದರಿಂದ ಇಂತಹ ದೇಶದ್ರೋಹಿಗಳ ವಿರುದ್ಧ ಕೂಡಲೇ ಕಾನೂನು ಕ್ರಮ ಕೈಗೊಂಡು ಈ ದೇಶದ್ರೋಹಿಗೆ ಕಾನೂನು ಅಡಿಯಲ್ಲಿ ಕಠಿಣ ಕ್ರಮ ಹಾಗೂ ಶಿಕ್ಷೆ ವಿಧಿಸಲು ಕ್ರಮ ಕೈಗೊಳ್ಳಬೇಕು.

    ಈ ಕಿಡಿಗೇಡಿಯನ್ನು ಬಂಧಿಸಿ ಗಡಿಪಾರು ಮಾಡಬೇಕೆಂದು ಈ ದೂರನ್ನು ಸಲ್ಲಿಸುತ್ತಿದ್ದೇವೆ. ಈತನ ಹೇಳಿಕೆಯ ವೀಡಿಯೋವನ್ನು ಸಹ ಈ ಇದರೊಂದಿಗೆ ಲಗತ್ತಿಸಲಾಗಿದೆ ಎಂದು ಬರೆದು ಪೊಲೀಸರಿಗೆ ದೂರು ಕೊಟ್ಟಿದೆ. ಇದನ್ನೂ ಓದಿ:  80 ವರ್ಷಗಳ ನಂತರ ಬುಡಕಟ್ಟು ಕುಗ್ರಾಮದಲ್ಲಿ ಬೆಳಗಿತು ಸೌರಶಕ್ತಿ ಬೆಳಕು 

    Live Tv
    [brid partner=56869869 player=32851 video=960834 autoplay=true]