ಮುಂಬೈ: ನಾವು ಮಂತ್ರಿಗಳು, ಹಾಗಾಗಿ ಕಾನೂನು ಉಲಂಘಿಸುವ ಹಕ್ಕು ನಮಗಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಮಹಾರಾಷ್ಟ್ರದ ನಾಗ್ಪುರದಲ್ಲಿ ಆರೋಗ್ಯ ವಿಜ್ಞಾನ ವಿಶ್ವ ವಿದ್ಯಾಲಯದಲ್ಲಿ ಬುಡಕಟ್ಟು ಜನಾಂಗದವರ ಆರೋಗ್ಯಕ್ಕಾಗಿ ಃಐಔSSಔಒ ಹೆಸರಿನ ಯೋಜನೆಯನ್ನು ಉದ್ಘಾಟಿಸಿ ಮಾತನಾಡಿದರು.
ಈ ವೇಳೆ ಮಾತನಾಡಿದ ಅವರು, ಬಡವರ ಕಲ್ಯಾಣಕ್ಕಾಗಿ ಯಾವುದೇ ಕಾನೂನು ಅಡ್ಡಿಯಾಗುವುದಿಲ್ಲ. ಆ ಸಂದರ್ಭದಲ್ಲಿ 10 ಬಾರಿ ಬೇಕಾದರೂ ಕಾನೂನುಗಳನ್ನು ಉಲ್ಲಂಘಿಸಬಹುದು ಎಂದು ಮಹಾತ್ಮ ಗಾಂಧೀಜಿ ಹಿಂದೆ ಹೇಳಿದ್ದರು. ಹಾಗಾಗಿ ಕೆಲವೊಮ್ಮೆ ಜನರ ಅನುಕೂಲಕ್ಕಾಗಿ ಕಾನೂನನ್ನು ಉಲ್ಲಂಘಿಸುವ ಹಕ್ಕು ನಮಗಿದೆ ಎಂದು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡರು.
ಹಳೆಯ ಘಟನೆಯನ್ನು ಮೆಲುಕು ಹಾಕಿದ ಗಡ್ಕರಿ, 1995ರಲ್ಲಿ ಮನೋಹರ ಜೋಶಿ ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಗಡ್ಚಿರೋಲಿ ಮತ್ತು ಮೇಲ್ಘಾಟ್‍ನಲ್ಲಿ ಅಪೌಷ್ಟಿಕತೆಯಿಂದ 2 ಸಾವಿರ ಆದಿವಾಸಿ ಮಕ್ಕಳು ಸಾವನ್ನಪ್ಪಿದ್ದರು ಎಂದು ವರದಿಯಾಗಿತ್ತು. ಆಗ ಆ ಭಾಗದ 450 ಹಳ್ಳಿಗಳಿಗೆ ರಸ್ತೆ ಇರಲಿಲ್ಲ ಮತ್ತು ಅರಣ್ಯ ಇಲಾಖೆ ಕಾನೂನುಗಳು ರಸ್ತೆ ನಿರ್ಮಿಸಲು ಅಡ್ಡಿಯಾಗುತ್ತಿತ್ತು. ರಸ್ತೆ ಇಲ್ಲದ ಕಾರಣ ಆ ಹಳ್ಳಿಗಳು ಅಭಿವೃದ್ಧಿಯಾಗಿರಲಿಲ್ಲ. ಆಗ ಆ ಸಮಸ್ಯೆಯನ್ನು ನನ್ನದೇ ಆದ ರೀತಿಯಲ್ಲಿ ಬಗೆಹರಿಸಿದ್ದೆ ವಿವರಿಸಿದರು. ಇದನ್ನೂ ಓದಿ: ದೇವಸ್ಥಾನದ ಹಣ ಕದಿಯುವುದಕ್ಕೂ ಮುನ್ನ ದೇವಿ ವಿಗ್ರಹಕ್ಕೆ ನಮಸ್ಕರಿಸಿದ ಅರೆನಗ್ನ ಕಳ್ಳ
Live Tv
[brid partner=56869869 player=32851 video=960834 autoplay=true]
ಚಂಡೀಗಢ: ಸಾರ್ವಜನಿಕ ಉದ್ಯಾನವನದಲ್ಲಿ ದುಷ್ಕರ್ಮಿಗಳು ಮಹಾತ್ಮ ಗಾಂಧಿ ಅವರ ಪ್ರತಿಮೆಯನ್ನು ಧ್ವಂಸಗೊಳಿಸಿದ ಘಟನೆ ಪಂಜಾಬ್‍ನ ರಮ್ಮನ್ ಮಂಡಿಯಲ್ಲಿ ನಡೆದಿದೆ.
ಗಾಂಧೀಜಿ ಪ್ರತಿಮೆಯನ್ನು ರಾಮನ್ ಮಂಡಿಯ ಸಾರ್ವಜನಿಕ ಉದ್ಯಾನವನದಲ್ಲಿ ಸ್ಥಾಪಿಸಲಾಗಿತ್ತು. ಅದನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ. ಇದಾದ ಬಳಿಕ ಪ್ರತಿಮೆಯ ಮುಖವನ್ನು ತೆಗೆದುಕೊಂಡು ಹೋಗಿದ್ದಾರೆ.
ಸ್ಟೇಷನ್ ಹೌಸ್ ಆಫೀಸರ್ ಹರ್ಜೋತ್ ಸಿಂಗ್ ಮಾನ್ ಮಾತನಾಡಿ, ಘಟನೆ ಸಂಬಂಧಿಸಿ ತನಿಖೆ ನಡೆಸುತ್ತಿದ್ದಾರೆ. ಘಟನೆ ಸಂಬಂಧಿಸಿ ರಮ್ಮನ್ ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ. ಅಪರಾಧಿಗಳನ್ನು ಪತ್ತೆಹಚ್ಚಲು ಘಟನೆ ನಡೆದ ಸ್ಥಳದ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಹೇಳಿದರು.
ನವದೆಹಲಿ: ಜವಹರಲಾಲ್ ನೆಹರೂ ದೇಶ ವಿಭಜನೆ ಮಾಡಿದ ಉದಾರವಾದಿ, ಅದನ್ನು ತಡೆಯಲು ರಾಷ್ಟ್ರಪಿತ ಮಹಾತ್ಮಗಾಂಧಿ ಏನೂ ಮಾಡಲಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಎರಡನೇ ಮಹಾಯುದ್ಧದ ಪರಿಣಾಮ ಬ್ರಿಟಿಷರು ಸಾಮರ್ಥ್ಯ ಕಳೆದುಕೊಂಡಿದ್ದರು. ಈ ವೇಳೆ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡದ ದೇಶಗಳಿಗೂ ಬ್ರಿಟಿಷರು ಸ್ವಾತಂತ್ರ್ಯ ನೀಡಿದ್ದಾರೆ. ಗಾಂಧಿ ಜನಸಮೂಹ ಜೋಡಿಸಿದರು, ಕ್ರಾಂತಿಕಾರಿಗಳು ಬ್ರಿಟಿಷರ ಎದೆ ನಡುಗಿಸಿದರು. ಗಾಂಧಿ ಹೋರಾಟದಿಂದಲೇ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿತ್ತು ಎನ್ನುವುದು ಪೂರ್ಣ ಒಪ್ಪಲು ಸಾಧ್ಯವಿಲ್ಲ ಎಂದಿದ್ದಾರೆ. ಇದನ್ನೂ ಓದಿ : ಪ್ರಭುದೇವ್ ನಟನೆಯ ಪ್ಯಾನ್ ಇಂಡಿಯಾ ಸಿನಿಮಾಗೆ ಸಂದೇಶ್ ನಾಗರಾಜ್ ನಿರ್ಮಾಪಕ
ಭಾರತ ಸ್ವಾತಂತ್ರ್ಯವಾದ ಬಳಿಕ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದವರಿಗೆ ಏನು ಸಿಕ್ತು? ದೇಶ ಇಬ್ಘಾಗವಾಯಿತು. ನೆಹರೂ – ಜಿನ್ನಾ ಸೇರಿ ದೇಶ ಒಡೆದರು, ಅದನ್ನು ನೋಡಿಕೊಂಡು ಗಾಂಧಿ ಸುಮ್ಮನೆ ಕೂತಿದ್ದರು. ದೇಶ ಒಡೆದ ಪರಿಣಾಮ ಸ್ವಾತಂತ್ರ್ಯ ಹೋರಾಟಗಾರಿಗೆ ಅತ್ಯಾಚಾರ, ಮತಾಂತರ ನೋಡುವುದು ಬಿಟ್ಟು ಬೇರೆನು ಸಿಗಲಿಲ್ಲ, ಗಾಂಧಿಯಲ್ಲೂ ದೌರ್ಬಲ್ಯಗಳು ಇದ್ದವು ನಾವು ಅದನ್ನು ಒಪ್ಪಿಕೊಳ್ಳಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ದೇಶ ಒಡೆಯುವುದನ್ನು ಅರ್ಥ ಮಾಡಿಕೊಂಡಿದ್ದ ವೀರ ಸಾರ್ವರಕರ್, ಹಿಂದೂಗಳಿಗೆ ಸೇನೆಯಲ್ಲಿ ಹೆಚ್ಚು ಸೇರಲು ಕರೆ ನೀಡಿದರು. ಒಂದು ವೇಳೆ ಸೇನೆಯಲ್ಲಿ ಮುಸ್ಲಿಂ ಸಂಖ್ಯೆ ಹೆಚ್ಚಾಗಿದ್ದರೆ, ಇಂದು ಕಾಶ್ಮೀರ, ದೆಹಲಿ ಇರಲಿ ಭಾರತವೂ ಉಳಿಯುತ್ತಿರಲಿಲ್ಲ, ಎಲ್ಲವೂ ಒಡೆದು ಚೂರಾಗುತ್ತಿತ್ತು ಎನ್ನುವ ಮೂಲಕ ಮತ್ತೊಂದು ಹೊಸ ವಿವಾದ ಹುಟ್ಟು ಹಾಕಿದ್ದಾರೆ.
ಅಗರ್ತಲಾ: ತ್ರಿಪುರಾದ ಮಾಜಿ ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೇವ್, ಸ್ವಾಮಿ ವಿವೇಕಾನಂದ, ಮಹಾತ್ಮ ಗಾಂಧಿ, ರವೀಂದ್ರನಾಥ ಠಾಗೋರ್‌ರಂತಹ ಮಹನ್ ನಾಯಕ ಎಂದು ತ್ರಿಪುರಾದ ಶಿಕ್ಷಣ ಸಚಿವ ರತನ್ ಲಾಲ್ ನಾಥ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ತ್ರಿಪುರಾದ ಧೈಲೆ ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಬಿಪ್ಲಬ್ ಕುಮಾರ್ ದೇವ್ ತ್ರಿಪುರಾದ ಮಹನ್ ನಾಯಕರಾಗಿದ್ದರು. ಇಲ್ಲಿನ ಪ್ರಜೆಗಳು ಇಂತಹ ನಾಯಕರನ್ನು ಪಡೆಯಲು ತುಂಬಾ ಅದೃಷ್ಟ ಮಾಡಿದ್ದರು ಎಂದು ಹಾಡಿ ಹೊಗಳಿದ್ದಾರೆ. ಇದನ್ನೂ ಓದಿ: ತ್ರಿಪುರಾ ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೇವ್ ರಾಜೀನಾಮೆ
ತ್ರಿಪುರಾದ ಜನ ಸರ್ಕಾರದ ಮೇಲೆ ಇಟ್ಟಿದ್ದಂತ ನಿರೀಕ್ಷೆಗಳಲ್ಲಿ ಕೆಲವನ್ನು ಬಿಪ್ಲಬ್ ದೇವ್ ಈಡೇರಿಸಿದ್ದಾರೆ. ಇಂತಹ ಮಹನ್ ನಾಯಕ ನಮ್ಮ ರಾಜ್ಯದಲ್ಲಿ ಹುಟ್ಟಿರುವುದು ನಮ್ಮ ಪುಣ್ಯ. ಸುಭಾಶ್ ಚಂದ್ರ ಬೋಸ್, ರವೀಂದ್ರನಾಥ್ ಠಾಕೂರ್, ಮಹಾತ್ಮ ಗಾಂಧಿ, ವಿವೇಕಾನಂದರಂತೆ ಬಿಪ್ಲಬ್ ದೇವ್ ನಮ್ಮ ರಾಜ್ಯದ ಮಹನ್ ನಾಯಕ ಎಂದು ನುಡಿದಿದ್ದಾರೆ. ಇದನ್ನೂ ಓದಿ: ಕಪಾಳಕ್ಕೆ ಹೊಡೆದು ಮಾನಸಿಕ ಅಸ್ವಸ್ಥ ವೃದ್ಧನ ಹತ್ಯೆ – ಬಿಜೆಪಿ ಮುಖಂಡನಿಂದ ಕೃತ್ಯ
There are times when great men are born in our country & the world…like Subhash Bose, Tagore, Mahatma Gandhi, Vivekananda, Einstein…Good for us that in our state one such person Biplab Deb was born. He has given us new direction: Tripura education minister Ratan Lal Nath pic.twitter.com/P3dy9c90nL
— Indrajit Kundu | ইন্দ্রজিৎ (@iindrojit) May 22, 2022
ಬಿಪ್ಲಬ್ ಕುಮಾರ್ ದೇವ್ ಕೆಲದಿನಗಳ ಹಿಂದೆ ತ್ರಿಪುರಾ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಆ ಬಳಿಕ ಇದೀಗ ಸಿಎಂ ಆಗಿ ಡಾ. ಮಾಣಿಕ್ ಸಹಾ ಅಧಿಕಾರ ವಹಿಸಿಕೊಂಡಿದ್ದಾರೆ.
ಗಾಂಧೀನಗರ: ಗುಜರಾತ್‍ನ ಅಹಮದಾಬಾದ್‍ನಲ್ಲಿರುವ ಮಹಾತ್ಮ ಗಾಂಧಿ ಅವರ ಸಬರಮತಿ ಆಶ್ರಮಕ್ಕೆ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಭೇಟಿ ನೀಡಿದರು.
ಮುಂಬರುವ ಗುಜರಾತ್ ಚುನಾವಣೆ ಮೇಲೆ ಹೆಚ್ಚು ಗಮನ ಹರಿಸಿರುವ ಈ ಇಬ್ಬರು ನಾಯಕರು ಇಂದು ಗಾಂಧೀಜಿ ಅವರ ಆಶ್ರಮದಲ್ಲಿ ಚರಕ ಹಿಡಿದು ನೂಲು ತೆಗೆದರು. ಅಹಮದಾಬಾದ್ ಪ್ರವಾಸ ಕೈಗೊಂಡಿರುವ ಇಬ್ಬರು ನಾಯಕರು ಈ ವರ್ಷದ ಡಿಸೆಂಬರ್‍ನಲ್ಲಿ ನಡೆಯಲಿರುವ ಗುಜರಾತ್ ವಿಧಾನಸಭಾ ಚುನಾವಣೆ ಮೇಲೆ ಕಣ್ಣಿಟ್ಟಿದ್ದಾರೆ. ಕಳೆದ ವರ್ಷ, ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ತಮ್ಮ ಪಕ್ಷವು ರಾಜ್ಯ ಚುನಾವಣೆಯಲ್ಲಿ ಎಲ್ಲಾ 182 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂದು ತಿಳಿಸಿದ್ದರು.
ಇತ್ತೀಚೆಗೆ ನಡೆದ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಎಎಪಿ ಪಕ್ಷವು ಭರ್ಜರಿ ಗೆಲುವನ್ನು ಸಾಧಿಸಿತ್ತು.
ರಾಯ್‍ಪುರ: ದ್ವೇಷ ಭಾಷಣ ಮಾಡಿದ ಪ್ರಕರಣದ ಹಿನ್ನೆಲೆ ಹಿಂದೂ ಧಾರ್ಮಿಕ ಮುಖಂಡ ಕಾಳಿಚರಣ್ ಮಹಾರಾಜ್ ಕಳೆದ ಮೂರು ತಿಂಗಳಿಂದ ಸೆರೆವಾಸ ಅನುಭವಿಸುತ್ತಿದ್ದರು. ಆದರೆ ಈಗ ಛತ್ತೀಸ್‍ಗಢ ಹೈಕೋರ್ಟ್ ಕಾಳಿಚರಣ್ ಅವರಿಗೆ ಜಾಮೀನು ನೀಡಿದೆ.
ರಾಜ್ಯ ರಾಜಧಾನಿ ರಾಯ್‍ಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಹಾತ್ಮ ಗಾಂಧಿ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಮತ್ತು ಹಂತಕ ನಾಥೂರಾಂ ಗೋಡ್ಸೆಯನ್ನು ಹೊಗಳಿದ್ದಕ್ಕಾಗಿ ಹಿಂದೂ ಧಾರ್ಮಿಕ ಮುಖಂಡ ಕಾಳಿಚರಣ್ ಅವರನ್ನು ಬಂಧನಕ್ಕೊಳಪಡಿಸಲಾಗಿತ್ತು. ಈ ಕುರಿತು ಭಾರೀ ಚರ್ಚೆಯಾಗುತ್ತಿತ್ತು. ಕಾಳಿಚರಣ್ ವಕೀಲರು ಜಾಮೀನಿಗಾಗಿ ಓಡಾಡುತ್ತಿದ್ದರೂ ಸಿಕ್ಕಿರಲಿಲ್ಲ. ಆದರೆ ಮೂರು ತಿಂಗಳ ನಂತರ ಛತ್ತೀಸ್‍ಗಢ ಹೈಕೋರ್ಟ್ ಶುಕ್ರವಾರ ಜಾಮೀನು ನೀಡಿದೆ. ಇದನ್ನೂ ಓದಿ: ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಪೊಲೀಸರ ಮಸ್ತ್ ಡ್ಯಾನ್ಸ್: ಪರ,ವಿರೋಧ ಚರ್ಚೆ
ಡಿಸೆಂಬರ್ 30 ರಂದು ಮಧ್ಯಪ್ರದೇಶದ ರಾಯ್‍ಪುರ ಕಾರ್ಯಕ್ರಮದಲ್ಲಿ ಕಾಳಿಚರಣ್ ಅವರು ಮುಖ್ಯ ಅತಿಥಿಗಳಾಗಿ ಬಂದಿದ್ದರು. ಈ ವೇಳೆ ಕಾಳಿಚರಣ್ ಅವರು ಗಾಂಧಿ ದೇಶವನ್ನು ನಾಶಮಾಡುತ್ತಿದ್ದಾರೆ ಎಂದು ಆರೋಪಿಸಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.
ಈ ವೀಡಿಯೋದಲ್ಲಿ ಅವರು, ನಾನು ನಾಥೂರಾಂ ಗೋಡ್ಸೆಗೆ ನಮನ ಸಲ್ಲಿಸುತ್ತೇನೆ ಎಂದು ಹೇಳಿದ್ದರು. ಈ ಹೇಳಿಕೆ ಚರ್ಚೆಗೆ ಕಾರಣವಾಗಿತ್ತು. ವಿಚಾರಣೆಯಲ್ಲಿ ಕಾಳಿಚರಣ್ ಪರ ವಕೀಲ ಕಿಶೋರ್ ಭಾದುರಿ ಅವರು, ತಮ್ಮ ಕಕ್ಷಿದಾರರು ನಿರಪರಾಧಿಯಾಗಿದ್ದು, ರಾಜಕೀಯ ಪೈಪೋಟಿಯಿಂದಾಗಿ ಈ ಪ್ರಕರಣದಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಹೈಕೋರ್ಟ್‍ಗೆ ತಿಳಿಸಿದ್ದರು. ಇದನ್ನೂ ಓದಿ: ಬಾಲ್ಯ ವಿವಾಹ ಮಾಡಿ ತಾಳಿ ಬಿಚ್ಚಿಸಿ ಪರೀಕ್ಷೆಗೆ ಕಳುಹಿಸಿದ್ರು
– ಪ್ರಜಾಪ್ರಭುತ್ವಕ್ಕೆ ದೊಡ್ಡ ಅಪಾಯವೆಂದರೆ ರಾಜವಂಶದ ಪಕ್ಷಗಳು
ನವದೆಹಲಿ: ರಾಜವಂಶದ ಆಚೆಗೆ ಕಾಂಗ್ರೆಸ್ ಯೋಚಿಸಲು ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿಯವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ಮಾಡಿದರು.
ಇಂದು ಸಂಸತ್ತಿನಲ್ಲಿ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಮೋದಿ, ಕಾಂಗ್ರೆಸ್ ಪಕ್ಷದ ಸಮಸ್ಯೆಯೆಂದರೆ ಅದು ತನ್ನ ರಾಜವಂಶವನ್ನು ಮೀರಿ ಎಂದಿಗೂ ಯೋಚಿಸುವುದಿಲ್ಲ. ಪ್ರಜಾಪ್ರಭುತ್ವಕ್ಕೆ ದೊಡ್ಡ ಅಪಾಯವೆಂದರೆ ರಾಜವಂಶದ ಪಕ್ಷಗಳು. ಕುಟುಂಬವು ಅತ್ಯುನ್ನತವಾದಾಗ ಅಲ್ಲಿ ಪ್ರತಿಭೆ ಬಲಿಯಾಗುತ್ತೆ ಎಂದರು. ಇದನ್ನೂ ಓದಿ: ಹಿಜಬ್-ಕೇಸರಿ ಅಂತಾ ಮಕ್ಕಳ ಭವಿಷ್ಯ ಹಾಳು ಮಾಡಬೇಡಿ: HDK ಕಿಡಿ
ಕಾಂಗ್ರೆಸ್ ಇಲ್ಲದಿದ್ದರೆ ಏನು ಎಂದು ಜನರು ಆಶ್ಚರ್ಯ ಪಡುತ್ತಾರೆ. ಅವರು ಇಂಡಿಯಾ ಈಸ್ ಇಂದಿರಾ, ಇಂದಿರಾ ಈಸ್ ಇಂಡಿಯಾ ಎಂದು ಸಿಲುಕಿಸಿದ್ದಾರೆ. ಮಹಾತ್ಮಾ ಗಾಂಧೀಜಿ ಅವರು ಕಾಂಗ್ರೆಸ್ ಕಿತ್ತೊಗೆಯಬೇಕು ಎಂದು ಬಯಸಿದ್ದರು. ಇದು ಮಹಾತ್ಮ ಗಾಂಧಿ ಅವರ ಆಶಯವಾಗಿತ್ತು. ಈ ಪಕ್ಷ ಉಳಿದರೆ ಏನಾಗುತ್ತದೆ ಎಂದು ಅವರಿಗೆ ತಿಳಿದಿತ್ತು. ಗಾಂಧಿ ಅವರ ಆಶಯಗಳನ್ನು ಅನುಸರಿಸಿದ್ದರೆ, ಭಾರತವು ಸ್ವಜನಪಕ್ಷಪಾತದಿಂದ ಮುಕ್ತವಾಗುತ್ತಿತ್ತು ಎಂದು ವಿವರಿಸಿದರು.
ಗಾಂಧೀಜಿ ಅವರ ಆಶಯದಂತೆ ನಡೆದಿದ್ದರೆ, ಕಾಂಗ್ರೆಸ್ ಅಸ್ತಿತ್ವದಲ್ಲಿ ಇರುತ್ತಿರಲಿಲ್ಲ. ಪ್ರಜಾಪ್ರಭುತ್ವವು ಸ್ವಜನಪಕ್ಷಪಾತದಿಂದ ಮುಕ್ತವಾಗುತ್ತಿತ್ತು. ಭಾರತವು ಸ್ವದೇಶಿ ಮಾರ್ಗವನ್ನು ಹಿಡಿಯುತ್ತಿತ್ತು. ತುರ್ತುಪರಿಸ್ಥಿತಿಯ ಕಳಂಕ ಇರುತ್ತಿರಲಿಲ್ಲ. ದಶಕಗಳಿಂದ ಭ್ರಷ್ಟಾಚಾರ ಜೀವಂತವಾಗುತ್ತಿರಲಿಲ್ಲ. ಜಾತೀಯತೆ ಅಥವಾ ಪ್ರಾದೇಶಿಕತೆ ಇರಲಿಲ್ಲ. ಸಿಖ್ಖರನ್ನು ಕಗ್ಗೊಲೆ ಮಾಡುತ್ತಿರಲಿಲ್ಲ. ಮಹಿಳೆಯರನ್ನು ತಂದೂರಿನಲ್ಲಿ ಸುಟ್ಟು ಹಾಕುತ್ತಿರಲಿಲ್ಲ. ಸಾಮಾನ್ಯ ಜನರು ಮೂಲ ಸೌಕರ್ಯಗಳಿಗಾಗಿ ಇಷ್ಟು ದಿನ ಕಾಯಬೇಕಾಗಿರಲಿಲ್ಲ. ಇದೇ ರೀತಿ ನಾನು ಹೇಳುತ್ತಿದ್ರೆ ತುಂಬಾ ಇದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ತಮಿಳುನಾಡಿನ 16 ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ನೌಕಾಪಡೆ!
ಬೆಂಗಳೂರು: ಮಹಾತ್ಮಾ ಗಾಂಧೀಜಿಯವರ(Mahatma Gandhi) ಆದರ್ಶಗಳು ಸ್ವತಂತ್ರ ಹಾಗೂ ಗಣತಂತ್ರ ಭಾರತದ ಆಧಾರಸ್ಥಂಭಗಳಾಗಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ತಿಳಿಸಿದರು.
ಇಂದು ಹುತಾತ್ಮರ ದಿನಾಚರಣೆಯ ಅಂಗವಾಗಿ ಮಹಾತ್ಮಾ ಗಾಂಧೀಜಿಯವರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿ, ಮಹಾತ್ಮಾ ಗಾಂಧೀಜಿಯವರು ತಮ್ಮ ಪ್ರಾಣವನ್ನು ಬಲಿದಾನ ಮಾಡಿದ ದಿನವನ್ನು ಹುತಾತ್ಮರ ದಿನವನ್ನಾಗಿ ಆಚರಿಸುತ್ತೇವೆ. ಮಹಾತ್ಮಾ ಗಾಂಧಿ ವಿಶ್ವದ ನಾಯಕರು. ಸತ್ಯ ಮತ್ತು ಅಹಿಂಸೆಯ ಪ್ರತಿಪಾದಕರು. ಶಾಂತಿಯಿಂದಲೇ ಸ್ವತಂತ್ರ ಪಡೆಯುವ ಚಲವನ್ನು ತೊಟ್ಟವರು. ಜೈಲು ವಾಸ, ಲಾಠಿ ಏಟು ಮುಂತಾದ ಹಲವಾರು ಕಷ್ಟ ಕಾರ್ಪಣ್ಯಗಳನ್ನು ಅನುಭವಿಸಿಯೂ ತಮ್ಮ ಸತ್ಯ, ಅಹಿಂಸೆಯ ಸಿದ್ಧಾಂತವನ್ನು ಎಂದೂ ಬಿಟ್ಟುಕೊಡಲಿಲ್ಲ ಎಂದರು. ಇದನ್ನೂ ಓದಿ: ಫೆಬ್ರವರಿಯಲ್ಲಿ 12 ದಿನ ಬ್ಯಾಂಕುಗಳಿಗೆ ರಜೆ
ನನ್ನ ಜೀವನವೇ ಒಂದು ಸಂದೇಶ ಎಂದ ಅವರು, ತಮ್ಮ ಆತ್ಮ ಚರಿತ್ರೆ ಸತ್ಯಾನ್ವೇಷಣೆಯ ಮಾತನ್ನು ಹೇಳಲು ನೈತಿಕವಾಗಿ ಬಹಳ ದೊಡ್ಡ ಶಕ್ತಿ ಇರಬೇಕು. ಅಂಥಹ ವ್ಯಕ್ತಿಗಳು ಮಾತ್ರ ಇದನ್ನು ಹೇಳಲು ಸಾಧ್ಯ. ಅವರ ಜೀವನ ಅತ್ಯಂತ ಪರಿಶುದ್ಧ ಹಾಗೂ ಸತ್ಯದಿಂದ ಕೂಡಿರುವಂಥದ್ದು. ರಾಷ್ಟ್ರಪಿತ ಮಹಾತ್ಮಾ ಗಾಂಧಿ ಹೀಗಾಗಿಯೇ ಅತ್ಯಂತ ಆದರ್ಶಪ್ರಾಯವಾಗಿದ್ದರೆ. ಅವರ ಬದುಕು ಮತ್ತು ವಿಚಾರಗಳು ನಮಗೆ ಸದಾ ದಾರಿದೀಪವಾಗಿದೆ. ಇಂದು ಅವರ ಜೊತೆಗೆ ಸಾವಿರಾರು ಜನ ಹುತಾತ್ಮರಾಗಿದ್ದಾರೆ. ಸುಭಾಷ್ ಚಂದ್ರ ಬೋಸ್, ಭಗತ್ ಸಿಂಗ್, ಲಾಲಾ ಲಜಪತ್ ರಾಯ್ ಪ್ರಮುಖರು. ಇವರೆಲ್ಲರೂ ಸ್ವತಂತ್ರ ಪೂರ್ವದಲ್ಲಿ ಬಲಿದಾನ ಮಾಡಿದವರು. ಅದರ ಜೊತೆಗೆ ಪ್ರತಿ ರಾಜ್ಯದಲ್ಲಿ ಆಯಾ ಪ್ರಾಂತ್ಯಗಳ ಪ್ರಮುಖರು, ಸಾಮಾನ್ಯ ಜನರು ಪ್ರಾಣ ಬಲಿದಾನ, ಆಸ್ತಿ ಅಂತಸ್ತು ನೀಡಿ ತ್ಯಾಗ ಮಾಡಿದ್ದಾರೆ. ಪೂಜ್ಯ ಮಹಾತ್ಮಾ ಗಾಂಧೀಜಿಯವರಿಗೆ ಹಾಗೂ ವಿಶೇಷವಾಗಿ ಅನಾಮಧೇಯ ಸ್ವತಂತ್ರ ಯೋಧರಿಗೆ ನಮನ ಸಲ್ಲಿಸಿದರು.
ಇಂದು ಮಹಾತ್ಮಾ ಗಾಂಧೀಜಿಯವರ ಪುಣ್ಯ ಸ್ಮರಣೆಯ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪನಮನ ಸಲ್ಲಿಸಲಾಯಿತು.
ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕ ರಾಜ್ ಕುಮಾರ್ ತೇಲ್ಕೂರ್ ಹಾಗೂ ಮೊದಲಾದವರು ಉಪಸ್ಥಿತರಿದ್ದರು. pic.twitter.com/BprOo7idpZ
ದೇಶದ ಅಭಿವೃದ್ಧಿಗೆ ಸಂಕಲ್ಪ: ದೇಶಕ್ಕೆ ಸ್ವಾತಂತ್ರ್ಯ ಸುಲಭವಾಗಿ ಬಂದಿಲ್ಲ ಎನ್ನುವುದನ್ನು ಅರ್ಥಮಾಡಿಕೊಂಡು, ಸ್ವಾತಂತ್ರ್ಯ ನಂತರದ ದಿನಗಳಲನ್ನು ಅವಲೋಕಿಸಿದರೆ, 75 ವರ್ಷಗಳಲ್ಲಿ ಹಲವಾರು ರಂಗದಲ್ಲಿ ಸಾಧನೆ ಮಾಡಿದ್ದೇವೆ. ಆದರೆ ಸಾಮಾನ್ಯ ಜನ ತಮ್ಮ ಬದುಕನ್ನು, ಜೀವನದ ಗುಣಮಟ್ಟವನ್ನು ಹೆಚ್ಚಿಸಲು ಕೆಲಸ ಮಾಡಬೇಕಿದೆ. 75 ವರ್ಷಗಳಲ್ಲಿ ನಾವು ಇನ್ನಷ್ಟು ಕೆಲಸಗಳನ್ನು ಮಾಡಬಹುದಾಗಿತ್ತು ಎನ್ನುವುದು ನಾವು ಆತ್ಮಾವಲೋಕನ ಮಾಡಿಕೊಂಡಾಗ ತಿಳಿಯುತ್ತದೆ. ಅದಕ್ಕಾಗಿ ಪ್ರಧಾನ ಮಂತ್ರಿಗಳು ಆತ್ಮನಿರ್ಭರ್ ಭಾರತ, ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಧ್ಯೇಯವನ್ನಿಟ್ಟುಕೊಂಡು ಗ್ರಾಮೀಣಾಭಿವೃದ್ಧಿ, ನಗರಾಭಿವೃದ್ಧಿ, ಇಂಧನ, ಶಿಕ್ಷಣ ಆರೋಗ್ಯ ಮುಂತಾದ ಹಲವಾರು ರಂಗಗಳಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ತಂದಿದ್ದಾರೆ. ಅವರ ಮಾರ್ಗದರ್ಶನ ದಲ್ಲಿ ರಾಜ್ಯವನ್ನು ಸಂಪದ್ಭರಿತ ವಾಗಿಸಲು ಹಾಗೂ ಅಭಿವೃದ್ಧಿಯ ಕಡೆಗೆ ಕೊಂಡೊಯ್ಯಲು ಪ್ರಾಮಾಣಿಕ ಪ್ರಯತ್ನ ಮಾಡಲು ಸಂಕಲ್ಪ ಮಾಡುವ ದಿನ ಇದು ಎಂದರು.
ಟೋಯಿಂಗ್ ಅತಿರೇಕದ ವರ್ತನೆ ಸಲ್ಲದು: ಟೋಯಿಂಗ್ ವಿಚಾರದಲ್ಲಿ ಸಾರ್ವಜನಿಕರು ಮತ್ತು ಪೊಲೀಸರ ಮಧ್ಯೆ ಘರ್ಷಣೆ ಶುರುವಾಗುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಟೋಯಿಂಗ್ ಬಗ್ಗೆ ಈಗಿರುವ ವ್ಯವಸ್ಥೆ ಬಗ್ಗೆ ಪುನರ್ ಪರಿಶೀಲನೆ ಮಾಡಲಾಗುತ್ತಿದೆ. ಇಲಾಖೆಯೇ ಇದನ್ನು ಮಾಡುತ್ತಿತ್ತು, ಈಗ ಖಾಸಗಿ ಯವರಿಗೆ ಗುತ್ತಿಗೆ ನೀಡಲಾಗಿದೆ. ಹಲವಾರು ಘಟನೆಗಳ ಬಗ್ಗೆ ಗಮಣಿಸಲಾಗಿದ್ದು, ಸಾರ್ವಜನಿಕರು ಕಾನೂನಿನ ಪ್ರಕಾರ ನಡೆದುಕೊಳ್ಳಬೇಕು. ಆದರೆ ಕಾನೂನಿನ ರಕ್ಷಣೆ ಮಾಡುವವರು ಸಾರ್ವಜನಿಕರೊಂದಿಗೆ ಅತ್ಯಂತ ಸೌಹಾರ್ದಯುತವಾಗಿ ವರ್ತಿಸಬೇಕು. ಅತಿರೇಕದ ವರ್ತನೆ ಸಹಿಸುವುದಿಲ್ಲ. ಈ ಬಗ್ಗೆ ನಾಳೆ ಪೊಲೀಸ್ ಆಯುಕ್ತರು, ಪೊಲೀಸ್ ಮಹಾ ನಿರ್ದೇಶಕರು ಹಾಗೂ ಟ್ರಾಫಿಕ್ ಪೊಲೀಸ್ ಅಧಿಕಾರಿಗಳ ಸಭೆ ಕರೆದು ಸಂಪೂರ್ಣವಾಗಿ ಪುನರ್ ಪರಿಶೀಲನೆ ಮಾಡಲು ತೀರ್ಮಾನಿಸಲಾಗಿದೆ. ಹಲವಾರು ಬದಲಾವಣೆಗಳನ್ನು ತಂದು ಜನಸ್ನೇಹಿಯಾಗಿಸಲಿದ್ದೇವೆ ಎಂದರು. ಇದನ್ನೂ ಓದಿ: ಸಚಿವ ಸ್ಥಾನಕ್ಕೆ ಲಾಬಿ ಆರಂಭಿಸಿದ ವಲಸಿಗ ಶಾಸಕರು
ಜನೀಶ್ ಚಿಕಿತ್ಸೆಗೆ ಸಹಾಯ: ಜನೀಶ್ ಎನ್ನುವ ಮಗುವಿಗೆ ಚಿಕಿತ್ಸೆ ಗಾಗಿ 16 ಕೋಟಿ ಅವಶ್ಯಕತೆ ಇದೆ. ಈ ರೀತಿಯ ಬಹಳಷ್ಟು ಮಕ್ಕಳಿದ್ದು, ಸರ್ಕಾರ ಈ ಬಗ್ಗೆ ಏನು ಕ್ರಮ ಕೈಗೊಂಡಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯ ಮಂತ್ರಿಗಳು ಈ ಬಗ್ಗೆ ಸಂಪೂರ್ಣ ವಿವರಗಳನ್ನು ಪಡೆದು, ಈ ಮೊತ್ತ ಏಕೆ ಬೇಕೆನ್ನುವ ಬಗ್ಗೆ ತಿಳಿದು, ಅಗತ್ಯ ಸಹಾಯ ಸಹಕಾರ ನೀಡುವುದಾಗಿ ತಿಳಿಸಿದರು. ಸಾರ್ವಜನಿಕರೂ ಸಹಾಯ ಮಾಡಬೇಕೆಂದು ಮಾಧ್ಯಮಗಳು ಕರೆ ನೀಡಿವೆ. ಸರ್ಕಾರವಾಗಿ ಕೂಲಂಕುಷವಾಗಿ ಪರಿಶೀಲನೆ ಮಾಡಿ ಅದಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದರು.
ಚಿತ್ರಮಂದಿರಗಳಲ್ಲಿ ಆಸನ ವ್ಯವಸ್ಥೆ: ಕೋವಿಡ್ ನಿಯಮಗಳನ್ನು ಸಡಿಲಿಕೆ ಮಾಡಿರುವ ಬಗ್ಗೆ ಸಿನಿಮಾದವರು ಅಸಮಾಧಾನ ವ್ಯಕ್ತಪಡಿಸಿರುವ ಬಗ್ಗೆ ಉತ್ತರಿಸಿ, ಸಿನಿಮಾದವರಿಗೆ ಗೃಹ ಸಚಿವನಾಗಿ, ಮುಖ್ಯಮಂತ್ರಿಯಾಗಿ ಬಹಳಷ್ಟು ಸವಲತ್ತುಗಳನ್ನು ನೀಡಲಾಗಿದೆ.ಅವರಿಂದ ಮನವಿ ಪಡೆದು ಆಸನ ವ್ಯವಸ್ಥೆಗಳ ಬಗ್ಗೆ ತಾಂತ್ರಿಕ ತಜ್ಞರ ಸಲಹೆ ಮೇರೆಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಮುಂಬೈ: ನಿಜವಾದ ಹಿಂದುತ್ವವಾದಿಗಳು ಪಾಕಿಸ್ತಾನದ ಸಂಸ್ಥಾಪಕ ಮೊಹಮ್ಮದ್ ಅಲಿ ಜಿನ್ನಾ ಅವರನ್ನು ಕೊಲ್ಲುತ್ತಿದ್ದರೆ ಹೊರತು ಮಹಾತ್ಮ ಗಾಂಧಿಯನ್ನಲ್ಲ ಎಂದು ಶಿವಸೇನಾ ಸಂಸದ ಸಂಜಯ್ ರಾವತ್ ಹೇಳಿದರು.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಟ್ವೀಟ್‌ಗೆ ಪ್ರತಿಕ್ರಿಯಿಸಿದ ಅವರು, ಭಾರತವನ್ನು ವಿಭಜಿಸಿ ಪಾಕಿಸ್ತಾನದ ಹುಟ್ಟಿಗೆ ಜಿನ್ನಾ ಕಾರಣರಾದರು. ಅವರನ್ನು ಅಂದು ಯಾರದರೂ ಕೊಂದಿದ್ದರೆ ನಿಜವಾದ ಹಿಂದೂತ್ವವಾದಿ ಎನಿಸಿಕೊಳ್ಳುತ್ತಿದ್ದರು. ಆದರೆ ಅಂತಹ ಯಾವ ಕೆಲಸವನ್ನು ಮಾಡದೇ ಗೋಡ್ಸೆ ಗಾಂಧಿ ಅವರನ್ನು ಕೊಂದಿದ್ದು ತಪ್ಪು, ಗಾಂಧೀಜಿ ಹತ್ಯೆಗೆ ಇಡೀ ಜಗತ್ತೆ ಶೋಕವನ್ನು ವ್ಯಕ್ತಪಡಿಸುತ್ತದೆ ಎಂದು ಪ್ರತಿಕ್ರಿಯಿಸಿದರು.
#WATCH Formation of Pakistan was Jinnah’s demand. If there was a real ‘Hindutvawadi’, then he/she would’ve shot Jinnah, not Gandhi. Such an act would’ve been an act of patriotism. The world even today mourns Gandhi Ji’s death: Sanjay Raut, Shiv Sena pic.twitter.com/f0uJUvUjRB
“When I despair, I remember that all through history the way of truth and love have always won. There have been tyrants and murderers, and for a time they can seem invincible but in the end, they always fall. Think of it always.”
ಹಾಸನ: ಭಾರತ ಕೃಷಿ ಪ್ರಧಾನ ದೇಶವಾಗಿದ್ದು, ರೈತರು ಬೇಸಾಯದ ಜೊತೆಗೆ ಹೈನುಗಾರಿಕೆ ಮೇಲೂ ಹೆಚ್ಚು ಅವಲಂಬಿತರಾಗಿದ್ದಾರೆ. ಅವರಿಗೆ ಶಕ್ತಿ ತುಂಬುವ ಕೆಲಸವನ್ನು ಪಶುಪಾಲನೆ ಹಾಗೂ ಪಶುವೈದ್ಯಕೀಯ ಇಲಾಖೆ ಮಾಡಬೇಕಿದೆ ಎಂದು ಶಾಸಕರಾದ ಪ್ರೀತಂ.ಜೆ.ಗೌಡ ತಿಳಿಸಿದ್ದಾರೆ.
ನಗರದ ಸಂತೆ ಪೇಟೆ ಬಳಿ ನೂತನವಾಗಿ ನಿರ್ಮಿಸಲಾಗಿರುವ ಪಶುವೈದ್ಯಕೀಯ ಇಲಾಖೆ ಉಪ ನಿರ್ದೇಶಕರ ಕಚೇರಿ ಹಾಗೂ ತರಬೇತಿ ಕಟ್ಟಡಗಳನ್ನು ಪ್ರೀತಂ ಗೌಡ ಉದ್ಘಾಟಿಸಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅತಿವೃಷ್ಠಿ, ಅನಾವೃಷ್ಠಿ ಕೃಷಿಕರ ಲಾಭ ಹಾಳು ಮಾಡಿದ್ರೂ, ಹೈನುಗಾರಿಕೆ ರೈತಾಪಿ ವರ್ಗದ ಬದುಕು ಉಳಿಸುತ್ತಿದೆ ಎಂದರು. ಇದನ್ನೂ ಓದಿ: 60ಕ್ಕೂ ಹೆಚ್ಚು ಅಡಿಕೆ ಗಿಡ ಕಡಿದ ದುಷ್ಕರ್ಮಿಗಳು – ಕಣ್ಣೀರಿಟ್ಟ ರೈತ ಮಹಿಳೆ
ಜಾನುವಾರುಗಳ ಆರೋಗ್ಯ ಸುರಕ್ಷತೆಯ ಜವಾಬ್ದಾರಿ ಪಶುವೈದ್ಯಕೀಯ ಇಲಾಖೆಯದ್ದಾಗಿದೆ. ಸಣ್ಣ ಮತ್ತು ಮಧ್ಯಮ ಪ್ರಮಾಣದ ರೈತರಿಗೆ ಹೈನುಗಾರಿಕೆ ಪ್ರಧಾನ ಕಸುಬು. ಇದೇ ಅವರ ಆದಾಯ ಮೂಲವಾಗಿದೆ. ಜೊತೆಗೆ ಕುರಿ, ಕೋಳಿ ಸಾಕಾಣಿಕೆ ಮಾಡಿ ಜೀವನ ಸಾಗಿಸುತ್ತಿದ್ದಾರೆ. ಅವರ ಪಶುಗಳಿಗೆ ಉತ್ತಮ ವೈದ್ಯಕೀಯ ಚಿಕಿತ್ಸೆ ಒದಗಿಸುವ ಜೊತೆಗೆ ತಮ್ಮ ಶ್ರಮವನ್ನು ಲಾಭದಾಯಕವಾಗಿಸಿಕೊಳ್ಳುವ ಬಗ್ಗೆ ಸೂಕ್ತ ತರಬೇತಿ ಒದಗಿಸಿ ಎಂದು ಮನವಿ ಮಾಡಿದರು.
ರೈತರಿಗೆ ಬೇಕಾದ ಮಾಹಿತಿ ಮಾರ್ಗದರ್ಶನಕ್ಕೆ ಸೂಕ್ತ ನಿಗದಿತ ಸ್ಥಳ ಬೇಕಾಗಿತ್ತು. ಜೊತೆಗೆ ವೈದ್ಯಾಧಿಕಾರಿಗಳು ಪಶುವೈದ್ಯಕೀಯ ಸಿಬ್ಬಂದಿಗೂ ತರಬೇತಿ ನೀಡುವ ಮೈಸೂರು ವಿಭಾಗದ ಕಚೇರಿ ಹಾಸನದಲ್ಲಿ ಪ್ರಾರಂಭವಾಗಿರುವುದು ಸಂತೋಷದ ವಿಚಾರ. ಕಟ್ಟಡಗಳ ಉಳಿಕೆ ಕಾಮಗಾರಿ ಹಾಗೂ ಮೂಲಭೂತ ಸೌಕರ್ಯಗಳನ್ನು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಪಂಚಾಯಿತಿ ಮೂಲಕ ಶೀಘ್ರದಲ್ಲೇ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕಾಂತರಾಜ್ ಅವರು ಮಾತನಾಡಿದ್ದು, ಹೈನುಗಾರಿಕೆ ಉತ್ತಮವಾಗಿರುವ ದೇಶಗಳಲ್ಲಿ ಆರ್ಥಿಕತೆಯೂ ಉತ್ತಮವಾಗಿರುತ್ತದೆ. ಪಶುಪಾಲನಾ ಇಲಾಖೆ ಅತ್ಯಂತ ಪ್ರಧಾನವಾಗಿದೆ. ಅದು ಶಕ್ತಿಯುತವಾಗಿದ್ದರೆ, ರೈತರು ಸಬಲರಾಗುತ್ತಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಜಿಲ್ಲೆಯಲ್ಲಿ ಹೆಚ್ಚಿನ ರಾಸುಗಳಿದ್ದು, ಅಧಿಕ ಪ್ರಮಾಣದಲ್ಲಿ ಹಾಲು ಉತ್ಪಾದನೆ ನಡೆಯುತ್ತಿದೆ. ಇಲಾಖೆ ಗುಣಾತ್ಮಕ ಪರಿವರ್ತನೆ ಕಾರ್ಯಕ್ರಮಗಳಿಗೆ ಒತ್ತು ನೀಡದರೆ ರೈತರಿಗೂ ಅನುಕೂಲವಾಗಲಿದೆ. ರೈತ ಸಂಜೀವಿನಿ ಜಾನುವಾರು ವಿಮಾ ಯೋಜನೆ ಬಗ್ಗೆ ಹೆಚ್ಚಿನ ಅರಿವು ಮೂಡಿಸಿ ರಾಸುಗಳ ಅನಿರೀಕ್ಷಿತ ಸಾವಿನಿಂದ ಕೃಷಿಕರು ಆರ್ಥಿಕ ನಷ್ಟ ಎದುರಿಸುವ ಸಾಮಥ್ರ್ಯವಿದೆ ಎಂದರು.
ಇಂದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಹತ್ಯೆಯಾದ ದಿನ. ಇಂದು ನಮ್ಮ ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ ಬಲಿದಾನಗೈದ ಎಲ್ಲರ ನೆನೆಪಿಗಾಗಿ ಹುತಾತ್ಮರ ದಿನವಾಗಿ ಆಚರಿಸಲಾಗಿದೆ. ಹಿರಿಯರು ತಂದುಕೊಟ್ಟ ಸ್ವಾತಂತ್ರ್ಯವನ್ನು ಅರ್ಥಪೂರ್ಣವಾಗಿ ಉಳಿಸಿಕೊಳ್ಳೋಣ. ನೂತನ ಕಟ್ಟಡದ ಮೂಲಭೂತ ಸೌಕರ್ಯಕ್ಕಾಗಿ ಮುಂದಿನ ದಿನಗಳಲ್ಲಿ ಹೆಚ್ಚಿನ ಅನುದಾನ ಒದಗಿಸಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ಜಾನ್ವಿ, ನನ್ನ ಮಧ್ಯೆ ಹಲವು ಅಂಶ ಒಂದೇ ರೀತಿ ಇದ್ದರೂ, ನಾವಿಬ್ಬರು ಬೆಸ್ಟ್ ಫ್ರೆಂಡ್ಸ್ ಅಲ್ಲ: ಸಾರಾ
ಪಶುಪಾಲನಾ ಇಲಾಖೆ ಉಪ ನಿರ್ದೇಶಕರಾದ ಡಾ.ಕೆ.ಆರ್.ರಮೇಶ್ ಮಾತನಾಡಿ, 80 ವರ್ಷಗಳ ಹಿಂದಿನ ಕಟ್ಟಡ ಶಿಥಿಲವಾಗಿದ್ದ ಕಾರಣ ಒಟ್ಟು 125 ಲಕ್ಷ ರೂ. ವೆಚ್ಚದಲ್ಲಿ ನೂತನ ಕಟ್ಟಡ ನಿರ್ಮಿಸಲಾಗಿದೆ. ರಾಜ್ಯದ ಮೈಸೂರು ವಿಭಾಗದ ತರಬೇತಿ ಕೇಂದ್ರ ಹಾಸನದಲ್ಲಿ ಪ್ರಾರಂಭವಾಗುತ್ತಿದೆ. ಇಲ್ಲಿ ಪಶುವೈದ್ಯರಿಗೆ ಬುನಾದಿ ತರಬೇತಿ ಹಾಗೂ ರೈತರಿಗೆ ತರಬೇತಿ ನೀಡಲಾಗುತ್ತದೆ. ಇಲ್ಲಿ ಅತ್ಯಂತ ವ್ಯವಸ್ಥಿತ ಸೌಲಭ್ಯ ನೀಡಲಾಗಿದೆ ಎಂದು ಮಾಹಿತಿ ನೀಡಿದರು.
ನಗರಸಭೆ ಅಧ್ಯಕ್ಷರಾದ ಮೋಹನ್, ಉಪ ವಿಭಾಗಾಧಿಕಾರಿ ಬಿ.ಎ.ಜಗದೀಶ್, ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಸಂಘದ ಅಧ್ಯಕ್ಷರಾದ ಈ.ಕೃಷ್ಣೇಗೌಡ, ಪಶು ವೈದ್ಯಕೀಯ ತರಬೇತಿ ಸಂಸ್ಥೆ ಉಪ ನಿರ್ದೇಶಕರಾದ ನಾಗರಾಜ್, ಕೆ.ಅರ್ ಐ.ಡಿ.ಎಲ್ ಸಂಸ್ಥೆಯ ಮಹದೇವ್ ಪ್ರಸಾದ್ ಮತ್ತಿತರರು ಹಾಜರಿದ್ದರು.