Tag: Mahender

  • ನಟಿ ಶ್ರುತಿ ಮಗಳಿಂದ ತಂದೆಗೆ ಭಾವನಾತ್ಮಕ ಪೋಸ್ಟ್

    ನಟಿ ಶ್ರುತಿ ಮಗಳಿಂದ ತಂದೆಗೆ ಭಾವನಾತ್ಮಕ ಪೋಸ್ಟ್

    ಬೆಂಗಳೂರು: ಹಿರಿಯ ನಟಿ ಶ್ರುತಿ ಅವರ ಮಗಳು ಗೌರಿ ತಮ್ಮ ತಂದೆಯನ್ನು ನೆನಪಿಸಿಕೊಂಡು ಒಂದು ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ.

    ಎರಡು ದಿನಗಳ ಹಿಂದೆ ಗೌರಿ ಅಪ್ಪ ಎಸ್.ಮಹೇಂದರ್ ಹುಟ್ಟುಹಬ್ಬವಿತ್ತು. ಈ ಹಿನ್ನೆಲೆಯಲ್ಲಿ ತಂದೆಯನ್ನು ನೆನಪಿಸಿಕೊಂಡು ಅವರ ಬಗ್ಗೆ ಇನ್‍ಸ್ಟಾಗ್ರಾಂನಲ್ಲಿ ಪೋಸ್ಟ್ ಬರೆದುಕೊಂಡಿದ್ದಾರೆ.

    “ಹುಟ್ಟುಹಬ್ಬದ ಶುಭಾಶಯಗಳು ಅಪ್ಪ. ನೀವು ನನ್ನ ಮೊದಲ ಪ್ರೀತಿ ಮತ್ತು ನನ್ನ ನೆಚ್ಚಿನ ನಾಯಕನಾಗಿದ್ದೀರಿ. ನಿಮ್ಮ ಮೇಲಿನ ಪ್ರೀತಿ ಹಾಗೂ ನಮ್ಮಿಬ್ಬರ ನಡುವಿನ ಬಾಂಧವ್ಯವನ್ನು ಯಾರೂ ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲ. ನಾನು ನಿಮ್ಮನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ. ಅದನ್ನು ಪದಗಳಲ್ಲಿ ಹೇಳಲು ಸಾಧ್ಯವಿಲ್ಲ. ಆದರೆ ನಿಮ್ಮ ಜೊತೆ ಕಾಲ ಕಳೆಯಲು ಕಾಯುತ್ತೀದ್ದೀನಿ” ಎಂದು ಪ್ರೀತಿಯಿಂದ ಬರೆದು ಪೋಸ್ಟ್ ಮಾಡಿದ್ದಾರೆ.

    ಜೊತೆಗೆ ತಮ್ಮ ತಂದೆ ಜೊತೆಗಿದ್ದ ಫೋಟೋವನ್ನು ಕೂಡ ಶೇರ್ ಮಾಡಿಕೊಂಡಿದ್ದಾರೆ.

    ಶ್ರುತಿ ಅವರು 1998ರಲ್ಲಿ ನಿರ್ದೇಶಕ ಎಸ್.ಮಹೇಂದರ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಆದರೆ ಕೌಟುಂಬಿಕ ಕಾರಣದಿಂದ 2009ರಲ್ಲಿ ಶ್ರುತಿ ಮತ್ತು ಎಸ್.ಮಹೇಂದರ್ ಇಬ್ಬರು ವಿಚ್ಛೇದನ ಪಡೆದುಕೊಂಡಿದ್ದಾರೆ. ಅಂದಿನಿಂದ ತಮ್ಮ ಮಗಳು ಗೌರಿ ಜೊತೆ ಶ್ರುತಿ ಜೀವನ ನಡೆಸುತ್ತಿದ್ದು, ಇತ್ತ ವಿಚ್ಛೇದನದ ಬಳಿಕ ಎಸ್.ಮಹೇಂದರ್ ಅವರು ಮೈಸೂರು ಮೂಲದ ಯಶೋದ ಅವರನ್ನು ಎರಡನೇ ಮದುವೆಯಾಗಿದ್ದಾರೆ.

    https://www.instagram.com/p/ByI0-YKguO-/