Tag: Mahesh Kumathalli

  • ಬಿಜೆಪಿಗೆ ಕಬ್ಬಿಣದ ಕಡಲೆಯಾದ ಅಥಣಿ ಕ್ಷೇತ್ರ

    ಬಿಜೆಪಿಗೆ ಕಬ್ಬಿಣದ ಕಡಲೆಯಾದ ಅಥಣಿ ಕ್ಷೇತ್ರ

    ಚಿಕ್ಕೋಡಿ: ಅಭ್ಯರ್ಥಿಗಳ ಆಯ್ಕೆಗೂ ಮುನ್ನವೇ ಬಿಜೆಪಿಯಲ್ಲಿ (BJP) ಬಂಡಾಯದ ಬಿಸಿ ತಟ್ಟಿದೆ. ಟಿಕೆಟ್ ಆಯ್ಕೆಗೂ ಮುನ್ನವೇ ಅಥಣಿ ಮತಕ್ಷೇತ್ರದಲ್ಲಿ ಅಸಮಾಧಾನ ಭುಗಿಲೆದ್ದಿದೆ. ವಲಸಿಗ ಶಾಸಕ ಕುಮಟಳ್ಳಿಗೆ ಟಿಕೆಟ್ ಸಿಗದಿದ್ದರೆ ರಾಜಕೀಯ ನಿವೃತ್ತಿ ಎನ್ನುತ್ತಿರುವ ಗೋಕಾಕ್ ಸಾಹುಕಾರ ಮತ್ತೊಂದೆಡೆ ಟಿಕೆಟ್ ನನಗೆ ನಾಮಪತ್ರ ಸಲ್ಲಿಕೆ ಬನ್ನಿ ಎಂದು ಸವದಿ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. ಬಿಜೆಪಿಗೆ ಇದೀಗ ಅಥಣಿ (Athani) ಕ್ಷೇತ್ರ ತಲೆನೋವು ಎನಿಸಿಕೊಂಡಿದೆ.

    ಬಿಜೆಪಿ ಸರ್ಕಾರ ರಚನೆಗೆ ಪ್ರಮುಖ ಪಾತ್ರ ವಹಿಸಿದ ವಲಸಿಗ ಶಾಸಕರು ಹಾಗೂ ಮೂಲ ಬಿಜೆಪಿಗರ ನಡುವಿನ ತಿಕ್ಕಾಟ ಬಿಜೆಪಿ ಪಕ್ಷದಲ್ಲಿ ಟಿಕೆಟ್ ಘೋಷಣೆಗೂ ಮುನ್ನವೇ ಭುಗಿಲೆದ್ದಿದೆ. ಬೆಳಗಾವಿ (Belegavi) ಜಿಲ್ಲೆಯ ಅಥಣಿ ಕ್ಷೇತ್ರದಲ್ಲಿ ವಲಸಿಗ ಶಾಸಕ ಮಹೇಶ್ ಕುಮಟಳ್ಳಿ (Mahesh Kumathalli) ಅವರಿಗೆ ಟಿಕೆಟ್ ನೀಡಬೇಡಿ ನನಗೆ ನೀಡಬೇಕು ಎಂದು ಬಿಜೆಪಿಯ ರಾಜ್ಯ ಉಪಾಧ್ಯಕ್ಷ ಹಾಗೂ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ (Laxman Savadi) ಹಠಕ್ಕೆ ಬಿದ್ದಿದ್ದಾರೆ. ಅಥಣಿ ಪಟ್ಟಣದಲ್ಲಿ ಪಂಚಮಸಾಲಿ ಸಮಾವೇಶ ನಡೆಸಿ ಈ ಬಾರಿ ಟಿಕೆಟ್ ನನಗೆ ಸಿಗುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಜೊತೆಗೆ ಸ್ವ ಪಕ್ಷದ ಶಾಸಕ ಮಹೇಶ್ ಕುಮಟಳ್ಳಿ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ.

    ಅಥಣಿ ಕ್ಷೇತ್ರದಲ್ಲಿ ಮಹೇಶ್ ಕುಮಟಳ್ಳಿ ಸೋಲಿನ ವಾತಾವರಣ ನಿರ್ಮಾಣವಾಗಿದೆ. ಈ ಸೋಲನ್ನು ನನ್ನ ಹಣೆಪಟ್ಟಿಗೆ ಕಟ್ಟುವುದಕ್ಕೆ ನನ್ನ ಜಿಲ್ಲೆಯಲ್ಲಿ ಕೆಲವರು ಇದ್ದಾರೆ. ಪಕ್ಷಕ್ಕೆ ಅಭ್ಯರ್ಥಿಗಳ ಸೋಲು ಬೇಡ. ನನಗೆ ಟಿಕೆಟ್ ಕೊಡಿ, ನಾನು ಗೆಲ್ಲುತ್ತೇನೆ ಎಂದು ಕೋರ್ ಕಮಿಟಿಯಲ್ಲಿ ತಿಳಿಸಿದ್ದೇನೆ ಎಂದು ಕುಮಟಳ್ಳಿ ವಿರುದ್ಧ ಸವದಿ ಹೊಸ ಬಾಂಬ್ ಸಿಡಿಸಿದ್ದಾರೆ. ಇದನ್ನೂ ಓದಿ: ಸುದೀಪ್ ವಿರುದ್ಧ ಚುನಾವಣೆ ಆಯೋಗಕ್ಕೆ ಜೆಡಿಎಸ್ ಪತ್ರ

    ಅಥಣಿ ಕ್ಷೇತ್ರದಲ್ಲಿ ಪ್ರಬಲ ಸಮಾಜವಾಗಿರುವ ಪಂಚಮಸಾಲಿ ಸಮಾಜದ ಓಲೈಕೆಗೆ ಸವದಿ ಮುಂದಾಗಿದ್ದಾರೆ. ಪಂಚಮಸಾಲಿ ಸಮಾಜ ನನ್ನ ವಿರುದ್ಧ ಇದೆ ಎಂದು ಬಿಂಬಿಸಲಾಗುತ್ತಿದೆ. ಯಾವತ್ತೂ ಪಂಚಮಸಾಲಿ ಮೀಸಲಾತಿಗಾಗಿ ಧ್ವನಿ ಎತ್ತಿದವನು ನಾನೇ. ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ನೀಡುವಂತೆ ಹೇಳಿದವನು ನಾನು. ಅಥಣಿ ಶಿವಯೋಗಿಗಳ ಮೇಲೆ ಆಣೆ ಮಾಡಿ ಹೇಳುತ್ತೇನೆ ಎಂದು ಪಂಚಮಸಾಲಿ ಮತದಾರರನ್ನು ಸೆಳೆಯಲು ಸವದಿ ಮುಂದಾಗಿದ್ದಾರೆ.

    ಪಂಚಮಸಾಲಿ ಸಮಾಜದ ಮಹೇಶ್ ಕುಮಟಳ್ಳಿ ಅವರ ವೋಟ್ ಬ್ಯಾಂಕ್ ಮೇಲೆ ಸವದಿ ಕಣ್ಣಿಟ್ಟು ಪಂಚಮಸಾಲಿ ಮುಖಂಡರನ್ನು ಸೆಳೆಯಲು ಮುಂದಾಗಿದ್ದಾರೆ. ಒಂದು ಕಡೆ ಮಹೇಶ್ ಕುಮಟಳ್ಳಿ ಅವರಿಗೆ ಅಥಣಿ ಟಿಕೆಟ್ ನೀಡದಿದ್ದರೆ ನಾನು ರಾಜಕೀಯ ನಿವೃತ್ತಿ ಪಡೆದುಕೊಳ್ಳುತ್ತೇನೆ ಎಂದು ಸವಾಲನ್ನು ಗೋಕಾಕ್ ಸಾಹುಕಾರ ಕುಮಟಳ್ಳಿ ಪರ ಬ್ಯಾಟ್ ಬೀಸಿದರೆ ಮತ್ತೊಂದೆಡೆ ಬಿಜೆಪಿ ಟಿಕೆಟ್ ನನಗೆ ನಾಮಪತ್ರ ಸಲ್ಲಿಕೆಗೆ ಬರುವಂತೆ ಕಾರ್ಯಕರ್ತರಿಗೆ ಸವದಿ ಕರೆ ಕೊಡುತ್ತಿದ್ದಾರೆ. ಅಥಣಿ ಕ್ಷೇತ್ರದ ಈ ತಿಕ್ಕಾಟ ರಾಜ್ಯ ರಾಜಕಾರಣದಲ್ಲಿ ಮುಂದೆ ಬಹುದೊಡ್ಡ ಬೆಳವಣಿಗೆಗೆ ಕಾರಣವಾಗುವುದರಲ್ಲಿ ಸಂಶಯವೇ ಇಲ್ಲ. ಇದನ್ನೂ ಓದಿ: ಕಾಂಗ್ರೆಸ್ ಬೇರೆ ಪಕ್ಷಗಳ ಅಭ್ಯರ್ಥಿಗಳಿಗೆ ಕಾದು ಕುಳಿತಿದೆ: ಬೊಮ್ಮಾಯಿ ವ್ಯಂಗ್ಯ

  • ಟಿಕೆಟ್ ಹಂಚಿಕೆ ಹೈಕಮಾಂಡ್ ನಿರ್ಧಾರಕ್ಕೆ ಬದ್ಧ: ಮಹೇಶ್ ಕುಮಟಳ್ಳಿ

    ಟಿಕೆಟ್ ಹಂಚಿಕೆ ಹೈಕಮಾಂಡ್ ನಿರ್ಧಾರಕ್ಕೆ ಬದ್ಧ: ಮಹೇಶ್ ಕುಮಟಳ್ಳಿ

    ಬೆಳಗಾವಿ: ಅಥಣಿ ಕ್ಷೇತ್ರದ ಟಿಕೆಟ್ ಹಂಚಿಕೆಯಲ್ಲಿ ಯಾವುದೇ ಗೊಂದಲ ಇಲ್ಲ. ಪಕ್ಷ ಸೂಕ್ತ ಸಮಯದಲ್ಲಿ ಸರಿಯಾದ ನಿರ್ಧಾರ ಕೈಗೊಳ್ಳಲಿದೆ. ಟಿಕೆಟ್ ಹಂಚಿಕೆಯಲ್ಲಿ ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧ ಎಂದು ಮಹೇಶ್ ಕುಮಟಳ್ಳಿ (Mahesh Kumathalli) ಬೆಳಗಾವಿಯಲ್ಲಿ (Belagavi) ಹೇಳಿದರು.

    ಅಥಣಿ (Athani) ಬಿಜೆಪಿ (BJP) ಟಿಕೆಟ್‍ಗಾಗಿ ಲಕ್ಷ್ಮಣ ಸವದಿ (Laxman Savadi) ಹಾಗೂ ಮಹೇಶ್ ಕುಮಟಳ್ಳಿ ನಡುವೆ ಪೈಪೋಟಿ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಪಕ್ಷ ಸೂಕ್ತ ನಿರ್ಧಾರ ಕೈಗೊಳ್ಳಲಿದೆ. ಲಕ್ಷ್ಮಣ ಸವದಿ ಅಥಣಿ ಟಿಕೆಟ್ ಕೇಳಿದ್ದಾರೆ ಎಂಬ ವರದಿಯನ್ನು ನಾನೂ ಗಮನಿಸಿದ್ದೇನೆ. ಆದರೆ ಅಥಣಿ ಟಿಕೆಟ್ ಬೇಕು ಎಂದು ಲಕ್ಷ್ಮಣ ಸವದಿ ಮಾಧ್ಯಮದ ಎದುರು ಹೇಳಿಲ್ಲ. ಲಕ್ಷ್ಮಣ ಸವದಿ ಟಿಕೆಟ್ ಕೇಳಿರುವ ವಿಚಾರವೂ ನನ್ನ ಗಮನಕ್ಕೆ ಬಂದಿಲ್ಲ ಎಂದರು. ಇದನ್ನೂ ಓದಿ: ಹಾಸನದ ವಿಷಯದಲ್ಲಿ ನನ್ನ ಸ್ಟ್ಯಾಂಡ್ ಬದಲಾಗಲ್ಲ: ಹೆಚ್‍ಡಿಕೆ

    ಅಥಣಿ ಕ್ಷೇತ್ರದಲ್ಲಿ ಲಕ್ಷ್ಮಣ ಸವದಿ ಜಾತಿವಾರು ಅಭಿಪ್ರಾಯ ಸಂಗ್ರಹ ವಿಚಾರವಾಗಿ, ಬಿಜೆಪಿ ಚಿಹ್ನೆ ಮೇಲೆಯೇ ಲಕ್ಷ್ಮಣ ಸವದಿ ಸಭೆ ಮಾಡುತ್ತಿದ್ದಾರೆ. ಅಥಣಿಯಲ್ಲಿ ಬಿಜೆಪಿ ಸಂಘಟನೆಗಾಗಿ ಲಕ್ಷ್ಮಣ ಸವದಿ ಶ್ರಮಿಸುತ್ತಿದ್ದಾರೆ. ನಾನೂ ಜನರನ್ನು ಕೂಡಿಸಿ ಪಕ್ಷ ಸಂಘಟನೆಗಾಗಿ ಸಭೆ ಮಾಡುತ್ತಿದ್ದೇನೆ. ಇದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ ಎಂದು ಮಹೇಶ್ ಕುಮಟಳ್ಳಿ ಮನವಿ ಮಾಡಿದರು. ಇದನ್ನೂ ಓದಿ: ನಾಲ್ಕನೇಯ ಬಾರಿ ಗೆಲ್ತಾರಾ ಖಾದರ್‌ ? ಮಂಗಳೂರಿನಲ್ಲಿ ಈ ಬಾರಿ ಬಿಜೆಪಿ ಕೊಡುತ್ತಾ ಠಕ್ಕರ್‌?

  • ಮಹೇಶ್ ಕುಮಠಳ್ಳಿಗೆ ಟಿಕೆಟ್ ನೀಡದಿದ್ದರೆ ನಾನು ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ: ರಮೇಶ್ ಜಾರಕಿಹೊಳಿ

    ಮಹೇಶ್ ಕುಮಠಳ್ಳಿಗೆ ಟಿಕೆಟ್ ನೀಡದಿದ್ದರೆ ನಾನು ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ: ರಮೇಶ್ ಜಾರಕಿಹೊಳಿ

    ಚಿಕ್ಕೋಡಿ: ಮಹೇಶ್ ಕುಮಠಳ್ಳಿ (Mahesh Kumathalli) ಅವರಿಗೆ ಟಿಕೆಟ್ ಸಿಗದೆ ಇದ್ದರೆ ನಾನು ರಾಜಕೀಯದಿಂದ ನಿವೃತ್ತಿ ಪಡೆಯುತ್ತೇನೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ (Ramesh Jarkiholi) ತಿಳಿಸಿದರು.

    ಅಥಣಿ ಪಟ್ಟಣದಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಲಕ್ಷ್ಮಣ ಸವದಿ (Laxman Savadi) ಬುದ್ಧಿವಂತ ರಾಜಕಾರಣಿ, ಅವರು ಹಿಂಗ್ಯಾಕೆ ಮಾಡುತ್ತಿದ್ದಾರೆ ಎಂಬುದು ತಿಳಿದಿಲ್ಲ. ಅವರಿಗೆ ಕನಿಷ್ಠ ಜ್ಞಾನ ಇರಬೇಕು. ಎಂಎಲ್‌ಸಿ ಆಗಿದ್ದರೂ, ವರಿಷ್ಠರ ಹತ್ತಿರ ಟಿಕೆಟ್ ಕೇಳುತ್ತೇನೆ ಎಂದು ಹೇಳಿಕೆ ನೀಡಿರುವುದು ನನಗೆ ಅಚ್ಚರಿಯಾಗಿದೆ. ಮಹೇಶ್ ಕುಮಠಳ್ಳಿ ತ್ಯಾಗದಿಂದ ಈ ಸರ್ಕಾರ ರಚನೆಯಾಗಿದೆ. ವರಿಷ್ಠರು ಎಲ್ಲವನ್ನೂ ಗಮನಿಸುತ್ತಿದ್ದಾರೆ. ಅಥಣಿ (Athani) ಮುಂದಿನ ಬಿಜೆಪಿ (BJP) ಅಭ್ಯರ್ಥಿ ಮಹೇಶ್ ಕುಮಠಳ್ಳಿ. ಒಂದು ವೇಳೆ ಮಹೇಶ್ ಕುಮಠಳ್ಳಿಗೆ ಟಿಕೆಟ್ ಕೊಡದಿದ್ದರೆ, ನಾನು ಗೋಕಾಕ್ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

    ಸ್ವಾಭಿಮಾನಕ್ಕೆ ಧಕ್ಕೆ ಬಂದಿದೆ ಎಂಬ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, ಯಾರ ಸ್ವಾಭಿಮಾನಕ್ಕೆ ಧಕ್ಕೆ ಬಂದಿದೆ ಎಂಬುದು ಗೊತ್ತಿಲ್ಲ. ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ಆದರೂ ಪಕ್ಷದಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ. ಮಹೇಶ್ ಕುಮಠಳ್ಳಿ ಅವರಿಗೆ ಟಿಕೆಟ್ ತಪ್ಪುವಂತ ಯಾವುದೇ ಸಮಸ್ಯೆಯಿಲ್ಲ, ಬಿಜೆಪಿಯಲ್ಲಿ ಆ ರೀತಿ ಯಾವುದೇ ಚರ್ಚೆ ನಡೆದಿಲ್ಲ. ಕೆಲವರು ಸುಮ್ಮನೆ ಗೊಂದಲ ಮೂಡಿಸುತ್ತಿದ್ದಾರೆ. ಅಥಣಿಯಿಂದ ಮಹೇಶ್ ಕುಮಠಳ್ಳಿ, ಗೋಕಾಕದಿಂದ ರಮೇಶ್ ಜಾರಕಿಹೊಳಿ, ಕಾಗವಾಡದಿಂದ ಶ್ರೀಮಂತ ಪಾಟೀಲ್ ಸ್ಪರ್ಧೆ ಮಾಡುತ್ತೇವೆ. ಇದರಲ್ಲಿ ಯಾವುದೇ ಗೊಂದಲವಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಬಿಜೆಪಿಗೆ ಚಿಂಚನಸೂರ್‌ ರಾಜೀನಾಮೆ ನೀಡಿದ್ಯಾಕೆ?

    ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಮೊನ್ನೆ ದೆಹಲಿಯಲ್ಲಿ ಭೇಟಿ ಮಾಡಿದ್ದೇನೆ. ಕೆಲವು ವಿಚಾರಗಳನ್ನು ಹೇಳುವುದಕ್ಕೆ ಬರುವುದಿಲ್ಲ. ನಾನು ಅವರ ಮುಖಾಂತರ ಬಿಜೆಪಿಗೆ ಬಂದೆ. ತುಂಬಾ ದಿನದಿಂದ ಭೇಟಿ ಆಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಭೇಟಿ ಆಗಿ ಬಂದಿದ್ದೇನೆ. ಮಾ. 28ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಥಣಿಗೆ ಭೇಟಿ ನೀಡಿ 1,250 ಕೋಟಿ ರೂ. ವೆಚ್ಚದಲ್ಲಿ ಅಮ್ಮಜೇಶ್ವರಿ ಏತ ನೀರಾವರಿ ಯೋಜನೆ ಕಾಮಗಾರಿಗೆ ಚಾಲನೆ ನೀಡಲಿದ್ದಾರೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ವಯಸ್ಸಾದ ವೃದ್ಧರಿಗೆ ಸೇರಬೇಕಾದ ಪಿಂಚಣಿ ವಯಸ್ಕರ ಜೇಬಿಗೆ – ಓರ್ವ ಅರೆಸ್ಟ್

  • ಕುಮಟಳ್ಳಿಗೆ ಟಿಕೆಟ್ ಸಿಗದಿದ್ರೆ ನಾನೂ ಸ್ಪರ್ಧಿಸಲ್ಲ: ದೋಸ್ತ್ ಪರ ಬ್ಯಾಟ್ ಬೀಸಿದ ರಮೇಶ್

    ಕುಮಟಳ್ಳಿಗೆ ಟಿಕೆಟ್ ಸಿಗದಿದ್ರೆ ನಾನೂ ಸ್ಪರ್ಧಿಸಲ್ಲ: ದೋಸ್ತ್ ಪರ ಬ್ಯಾಟ್ ಬೀಸಿದ ರಮೇಶ್

    ವಿಜಯಪುರ: ಅಥಣಿ ಶಾಸಕ ಮಹೇಶ್ ಕುಮಟಳ್ಳಿಗೆ (Mahesh Kumathalli) ಟಿಕೆಟ್ ನೀಡಬೇಕು. ಇಲ್ಲದೇ ಹೋದರೆ ನಾನು ಕೂಡಾ ಗೋಕಾಕ್‌ನಿಂದ ಸ್ಪರ್ಧಿಸುವುದಿಲ್ಲ ಎಂದು ಶಾಸಕ ರಮೇಶ್ ಜಾರಕಿಹೊಳಿ (Ramesh Jarkiholi) ಸ್ನೇಹಿತನ ಪರ ಬ್ಯಾಟ್ ಬೀಸಿ ಹೊಸ ಬಾಂಬ್ ಸಿಡಿಸಿದ್ದಾರೆ.

    ವಿಜಯಪುರದಲ್ಲಿ (Vijayapura) ಮಾತನಾಡಿದ ರಮೇಶ್ ಜಾರಕಿಹೊಳಿ, ಬೆಳಗಾವಿಯಲ್ಲಿ 13 ಸ್ಥಾನಗಳಲ್ಲಿ ಬಿಜೆಪಿ ಗೆದ್ದಿದೆ. ಈ ಬಾರಿ ಇನ್ನೂ 2 ಸ್ಥಾನ ಹೆಚ್ಚಿಗೆ ಗೆಲ್ಲಿಸುವ ಪ್ರಯತ್ನ ಮಾಡುತ್ತೇವೆ ಎಂದರು. ಇದನ್ನೂ ಓದಿ: ದಶಪಥ ಹೆದ್ದಾರಿ ಶ್ರೇಯಸ್ಸು ಒಬ್ಬರಿಗೆ ಸಲ್ಲಬೇಕು: ಜಾಣ್ಮೆಯ ಉತ್ತರ ನೀಡಿದ ಪ್ರತಾಪ್‌ ಸಿಂಹ

    ಸಚಿವ ನಾರಾಯಣಗೌಡ ಕಾಂಗ್ರೆಸ್ ಸೇರ್ಪಡೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಮುಳುಗುವ ಹಡಗು. ಈಗ ಹೋಗಿ ಏನು ಮಾಡುವುದು? ಬಿಜೆಪಿ ತತ್ವ ಸಿದ್ಧಾಂತ ನಂಬಿ ಕಾಂಗ್ರೆಸ್ ಬಿಟ್ಟು ಬಂದಿದ್ದೇನೆ. ಇನ್ನು ಬಿಜೆಪಿ ದೊಡ್ಡ ಪ್ರವಾಹ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಬಿಜೆಪಿಯನ್ನು ಕೊಂಡಾಡುತ್ತಿದ್ದಾರೆ ಎಂದರು. ಇದನ್ನೂ ಓದಿ: ಶಾಸಕ ಕೆ.ಜಿ ಬೋಪಯ್ಯ ವಿರುದ್ಧ ದೂರು ದಾಖಲು

  • ಅಮಿತ್ ಶಾ ಭೇಟಿ ಬಳಿಕ ಬೆಳಗಾವಿ ಬಿಜೆಪಿ ಪಾಳಯದಲ್ಲಿ ಒಗ್ಗಟ್ಟಿನ ಮಂತ್ರ

    ಅಮಿತ್ ಶಾ ಭೇಟಿ ಬಳಿಕ ಬೆಳಗಾವಿ ಬಿಜೆಪಿ ಪಾಳಯದಲ್ಲಿ ಒಗ್ಗಟ್ಟಿನ ಮಂತ್ರ

    ಚಿಕ್ಕೋಡಿ: ಅಮಿತ್ ಶಾ (Amit Shah) ಖಡಕ್ ವಾರ್ನಿಂಗ್ ಬಳಿಕ ಬೆಳಗಾವಿ (Belagavi) ಬಿಜೆಪಿ (BJP) ಮುಖಂಡರು ಒಗ್ಗಟ್ಟಿನ ಮಂತ್ರ ಜಪಿಸಲು ಮುಂದಾಗಿದ್ದಾರೆ. ಇಷ್ಟು ದಿನ ನಾ ಒಂದು ದಿಕ್ಕು ತಾ ಒಂದು ದಿಕ್ಕು ಎಂದು ಮುಖ ತಿರುಗಿಸಿ ಓಡಾಡುತ್ತಿದ್ದ ಅಥಣಿ ಶಾಸಕ ಮಹೇಶ್ ಕುಮಠಳ್ಳಿ (Mahesh Kumathalli) ಹಾಗೂ ಲಕ್ಷ್ಮಣ ಸವದಿ (Laxman Savadi) ಇದೀಗ ಒಗ್ಗಟ್ಟು ಪ್ರದರ್ಶಿಸಿದ್ದಾರೆ.

    ಅಥಣಿ ಪಟ್ಟಣದಲ್ಲಿ ಇಬ್ಬರು ನಾಯಕರು ಜೊತೆ ಜೊತೆಯಾಗಿ ಸಂಚಾರ ನಡೆಸಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ್ದಾರೆ. ಇಷ್ಟು ದಿನ ಒಬ್ಬರ ಕಾರ್ಯಕ್ರಮಕ್ಕೆ ಒಬ್ಬರು ಗೈರಾಗುತ್ತಿದ್ದರು. ಆದರೆ ಅಮಿತ್ ಶಾ ಖಡಕ್ ವಾರ್ನಿಂಗ್ ಬಳಿಕ ಒಗ್ಗಟ್ಟಿನ ಮಂತ್ರ ಜಪಿಸಿದ್ದಾರೆ.

    ಇದೀಗ ಇಬ್ಬರು ನಾಯಕರು ಒಗ್ಗಟ್ಟಿನಿಂದ ಮುದುವರಿಯುತ್ತಿರುವುದಕ್ಕೆ ಪಕ್ಷದ ಕಾರ್ಯಕರ್ತರ ಗೊಂದಲ ನಿವಾರಣೆ ಆದಂತಾಗಿದೆ. ಬೆಳಗಾವಿಗೆ ಅಮಿತ್ ಶಾ ಭೇಟಿ ನಂತರ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ಕೂಡಾ ಭಿನ್ನಮತ ಶಮನಕ್ಕೆ ಯತ್ನಿಸಿದ್ದರು. ಇಬ್ಬರು ರಾಷ್ಟ್ರೀಯ ನಾಯಕರ ಭೇಟಿ ನಂತರ ಬಿಜೆಪಿ ನಾಯಕರು ಒಗ್ಗಟ್ಟಾಗಿ ಚುನಾವಣೆ ಎದುರಿಸಲು ಸಜ್ಜಾಗಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಪಕ್ಷದ ತಾಯಿ ಬಂಜೆಯಾಗಿದ್ದಾಳೆ, ಇಲ್ಲಿ ಮಕ್ಕಳು ಹುಟ್ಟುವ ಪ್ರಶ್ನೆಯೇ ಇಲ್ಲ: ಲಕ್ಷ್ಮಣ ಸವದಿ

    ಈ ಸಂದರ್ಭದಲ್ಲಿ ಶಾಸಕ ಮಹೇಶ್ ಕುಮಠಳ್ಳಿ, ಸವದಿ ಎಂಎಲ್‌ಸಿ. ನಾನು ಅಥಣಿ ಎಂಎಲ್‌ಎ ಎನ್ನುವ ಸಂದೇಶವನ್ನು ಕಾರ್ಯಕರ್ತರಿಗೆ ರವಾನಿಸಿದ್ದಾರೆ. ಇದಕ್ಕೆ ಪರಿಷತ್ ಸದಸ್ಯ ಲಕ್ಷ್ಮಣ ಸವದಿ ಕೂಡಾ ಸಹಮತ ಸೂಚಿಸಿದ ಮಾತುಗಳನ್ನು ಕಾರ್ಯಕರ್ತರ ಮುಂದೆ ಹೇಳಿಕೊಂಡಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಸವದಿ ಅವರನ್ನು ಕುಮಠಳ್ಳಿ ಸೋಲಿಸಿ ಬಳಿಕ ಬಿಜೆಪಿ ಸೇರಿ ಅಥಣಿ ಕ್ಷೇತ್ರದಿಂದ ಗೆಲುವು ಸಾಧಿಸಿದ್ದರು. ಬಳಿಕ ಅಥಣಿ ಕ್ಷೇತ್ರದ ಇಬ್ಬರ ನಡುವಿನ ಭಿನ್ನಮತ ಹಾಗೇ ಮುಂದುವರಿದಿತ್ತು. ಸದ್ಯ ಅಮಿತ್ ಶಾ ಭೇಟಿ ಬಳಿಕ ಇಬ್ಬರು ನಾಯಕರು ಒಂದಾಗಿದ್ದಾರೆ. ಇದನ್ನೂ ಓದಿ: 13 ಜನರನ್ನ ಮಂಚದ ಮೇಲೆ ಮಲಗಿಸಿ ಸರ್ಕಾರ ತಂದ್ರಲ್ಲ ನಾಚಿಕೆ ಆಗ್ಬೇಕು ನಿಮ್ಗೆ – ಸಿಎಂ ಇಬ್ರಾಹಿಂ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಶಾಸಕ ಮಹೇಶ್‌ ಕುಮಟಳ್ಳಿಗೆ ಒಳ್ಳೆ ಬುದ್ಧಿ ಬರಲಿ – ಗ್ರಾಮಸ್ಥರಿಂದ ರಸ್ತೆ ಮಧ್ಯೆ ಹೋಮ ಮಾಡಿ ವಿನೂತನ ಪ್ರತಿಭಟನೆ

    ಶಾಸಕ ಮಹೇಶ್‌ ಕುಮಟಳ್ಳಿಗೆ ಒಳ್ಳೆ ಬುದ್ಧಿ ಬರಲಿ – ಗ್ರಾಮಸ್ಥರಿಂದ ರಸ್ತೆ ಮಧ್ಯೆ ಹೋಮ ಮಾಡಿ ವಿನೂತನ ಪ್ರತಿಭಟನೆ

    ಚಿಕ್ಕೋಡಿ: ಸಾಮಾನ್ಯವಾಗಿ ದೇವಸ್ಥಾನ ಹಾಗೂ ಮನೆ ಗೃಹಪ್ರವೇಶ ಸಮಯದಲ್ಲಿ ಹೋಮ ಹವನ ಮಾಡುವುದನ್ನು ನೋಡಿದ್ದೇವೆ. ಆದರೆ ಕಳೆದ 15 ವರ್ಷಗಳಿಂದ ರಸ್ತೆ (Road) ನಿರ್ಮಾಣವಾಗದ ಹಿನ್ನೆಲೆಯಲ್ಲಿ ಆದಷ್ಟು ಬೇಗನೇ ರಸ್ತೆ ಅಭಿವೃದ್ಧಿಯಾಗಬೇಕು ಎಂದು ರಸ್ತೆ ಮಧ್ಯದಲ್ಲೆ ಬೆಳಗಾವಿ (Belagavi) ಜಿಲ್ಲೆಯ ಅಥಣಿ ತಾಲೂಕಿನ ಸುಟ್ಟಟ್ಟಿ ಗ್ರಾಮಸ್ಥರು ಹೋಮ ನಡೆಸಿದ್ದಾರೆ.

    ಅಥಣಿ ಶಾಸಕ ಮಹೇಶ್ ಕುಮಟಳ್ಳಿ (Mahesh Kumathalli) ಅವರಿಗೆ ಹಾಗೂ ಸರ್ಕಾರಕ್ಕೆ ಒಳ್ಳೆಯ ಬುದ್ಧಿ ನೀಡಪ್ಪ ದೇವರೇ ಎಂದು ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸುಟ್ಟಟ್ಟಿ ಗ್ರಾಮದಲ್ಲಿ ವಿನೂತನ ಪ್ರತಿಭಟನೆ ನಡೆಸಲಾಗಿದೆ. ಸುಟ್ಟಟ್ಟಿ ಗ್ರಾಮದಿಂದ ಯಲ್ಲಮ್ಮವಾಡಿ ಗ್ರಾಮದವರೆಗೆ ಸರಿಸುಮಾರು 6 ಕಿ.ಮೀ ರಸ್ತೆ ಕಳೆದ 15 ವರ್ಷದಿಂದ ಸಂಪೂರ್ಣವಾಗಿ ಹದಿಗೆಟ್ಟ ಪರಿಣಾಮವಾಗಿ, ವಾಹನ ಸವಾರರು ಗರ್ಭಿಣಿಯರು, ರೋಗಿಗಳು, ಶಾಲೆ ಮಕ್ಕಳು ಪ್ರತಿಕ್ಷಣವೂ ಸಂಕಷ್ಟ ಪಡುವಂತಾಗಿತ್ತು. ಇದನ್ನೂ ಓದಿ: ಮತ್ತೆ ಹೊಸ ವರಸೆ ಶುರು ಮಾಡಿದ ಮಹಾರಾಷ್ಟ್ರ ಸಿಎಂ, ಗಡಿ ವಿವಾದ ಮಾತುಕತೆಯಿಂದ ಬಗೆಹರಿಯಲಿ: ಏಕನಾಥ ಶಿಂಧೆ

    ಹಲವಾರು ಬಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ ಹಾಗೂ ಶಾಸಕರಿಗೆ ಮನವಿ ಸಲ್ಲಿಸಿದರು. ಯಾವುದೇ ಪ್ರಯೋಜನ ಆಗದ ಹಿನ್ನೆಲೆಯಲ್ಲಿ ರಸ್ತೆ ಮಧ್ಯದಲ್ಲಿ ಹೋಮ ಹವನ ಮಾಡಿ, ಆದಷ್ಟು ಬೇಗನೆ ರಸ್ತೆ ಅಭಿವೃದ್ಧಿಗೆ ದೇವರಲ್ಲಿ ಪ್ರಾರ್ಥನೆ ಸಲ್ಲಿಸಿ ವಿನೂತನವಾಗಿ ಪ್ರತಿಭಟನೆ ಮಾಡಿ ಸರ್ಕಾರ ಗಮನವನ್ನು ಸೆಳೆದಿದ್ದಾರೆ. ಇದನ್ನೂ ಓದಿ: ಕದ್ರಿ ದೇವಸ್ಥಾನ ಮಾತ್ರವಲ್ಲ 6 ಸ್ಥಳಗಳು ಟಾರ್ಗೆಟ್‌ – ಮೊಬೈಲ್‌ನಲ್ಲಿ 6 ಜಾಗ ಸರ್ಚ್‌ ಮಾಡಿದ್ದ ಬಾಂಬರ್‌

    Live Tv
    [brid partner=56869869 player=32851 video=960834 autoplay=true]

  • ರಮೇಶ್ ಜಾರಕಿಹೊಳಿಗೆ ಮತ್ತೆ ಸಚಿವ ಸ್ಥಾನ ನೀಡಬೇಕು: ಮಹೇಶ್ ಕುಮಟಳ್ಳಿ

    ರಮೇಶ್ ಜಾರಕಿಹೊಳಿಗೆ ಮತ್ತೆ ಸಚಿವ ಸ್ಥಾನ ನೀಡಬೇಕು: ಮಹೇಶ್ ಕುಮಟಳ್ಳಿ

    ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಮತ್ತೆ ಸಚಿವ ಸ್ಥಾನ ನೀಡಬೇಕು ಎಂದು ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಆಗ್ರಹಿಸಿದ್ದಾರೆ.

    ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಮಹೇಶ್ ಕುಮಟಳ್ಳಿ, ರಮೇಶ್ ಜಾರಕಿಹೊಳಿ ಈ ಹಿಂದೆ ಮಂತ್ರಿಯಾಗಿದ್ದಾಗ ಉತ್ತಮ ಕೆಲಸ ಮಾಡಿದ್ದಾರೆ. ಜವಾಬ್ದಾರಿ ಸ್ಥಾನದಲ್ಲಿ ಮೊದಲು ಇದ್ದಂತವರು, ಇದೀಗ ಪಕ್ಷವನ್ನು ಕೂಡ ಕಟ್ಟುತ್ತಿದ್ದಾರೆ ಅವರನ್ನು ಮತ್ತೆ ಸಚಿವರನ್ನಾಗಿಸಬೇಕೆಂದು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ಎಲ್ಲಕ್ಕಿಂತ ಮುಖ್ಯವಾಗಿ ಬೈಗಮಿ – ಎಚ್‌ಡಿಕೆಯ ದ್ವಿಪತ್ನಿತ್ನ ವಿಚಾರ ಪ್ರಸ್ತಾಪಿಸಿ ಕಾಲೆಳೆದ ಬಿಜೆಪಿ

    ಹಲವಾರು ರಾಜಕೀಯ ವಿದ್ಯಮಾನಗಳಿಂದ ಜಾರಕಿಹೊಳಿ ಮೇಲೆ ಆರೋಪಗಳು ಬಂದಿತ್ತು. ಈ ಹಿಂದೆ ನಡೆದಂತಹ ಘಟನೆಯ ಬಗ್ಗೆ ನನಗೆ ಗೊತ್ತು ಹಾಗಾಗಿ ನಾನು ಮೊದಲಿನಿಂದಲೂ ಅವರೊಂದಿಗೆ ನಿಂತಿದ್ದೇನೆ. ಇವತ್ತು ಕೂಡ ಅವರನ್ನು ಸಮರ್ಥಿಸಿಕೊಳ್ಳುತ್ತೇನೆ. ರಮೇಶ್ ಜಾರಕಿಹೊಳಿಗೆ ಉನ್ನತ ಸ್ಥಾನ ಕೊಟ್ರೆ ನಮ್ಮದು ಸ್ವಾರ್ಥವಿದೆ, ಅವರು ಮಂತ್ರಿ ಆದರೆ ನಮ್ಮ ಕ್ಷೇತ್ರದ ಕೆಲಸಗಳು ಆಗುತ್ತವೆ. ಅದಕ್ಕೆ ವರಿಷ್ಠರಲ್ಲಿ ಸಹ ವಿನಂತಿ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಜಾರಕಿಹೊಳಿಗೆ ಸಚಿವ ಸ್ಥಾನ ನೀಡುವ ಆಶಾಭಾವನೆ ಇದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ತಾಯಿಯ 94ನೇ ಹುಟ್ಟಹಬ್ಬದ ಕೋರಿಕೆ ನೆರವೇರಿಸಿದ ಎಸ್.ಟಿ.ಸೋಮಶೇಖರ್

  • ಫೋನ್ ಬಂದ್ರ ಒಗಿಲೇನ, ಹೊತ್ಕೊಂಡ ಮಕ್ಕೋಬೇಕು ಅನಸತೈತಿ- ನೆರೆ ಸಂತ್ರಸ್ತರ ಬಗ್ಗೆ ಕುಮಟಳ್ಳಿ ನಿರ್ಲಕ್ಷ್ಯದ ಮಾತು

    ಫೋನ್ ಬಂದ್ರ ಒಗಿಲೇನ, ಹೊತ್ಕೊಂಡ ಮಕ್ಕೋಬೇಕು ಅನಸತೈತಿ- ನೆರೆ ಸಂತ್ರಸ್ತರ ಬಗ್ಗೆ ಕುಮಟಳ್ಳಿ ನಿರ್ಲಕ್ಷ್ಯದ ಮಾತು

    ಚಿಕ್ಕೋಡಿ/ಬೆಳಗಾವಿ: ಪ್ರವಾಹ ಸಂತ್ರಸ್ತರ ಬಗ್ಗೆ ಅಥಣಿ ಶಾಸಕ ಮಹೇಶ್ ಕುಮಟಳ್ಳಿ ನಿರ್ಲಕ್ಷ್ಯದ ಮಾತುಗಳನ್ನಾಡಿದ್ದು, ಈ ವೀಡಿಯೋ ಇದೀಗ ಸಖತ್ ವೈರಲ್ ಆಗಿದೆ. ಅಲ್ಲದೆ ಜನ ಶಾಸಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

    ಕೆಲ ದಿನಗಳ ಹಿಂದೆ ಶಾಸಕರು ತಮ್ಮ ಆಪ್ತರ ಬಳಿ ಈ ಮಾತುಗಳನ್ನಾಡಿದ್ದು, ಪ್ರವಾಹ ಸಂತ್ರಸ್ತರನ್ನು ನಿರ್ಲಕ್ಷಿಸಿ ಮಾತನಾಡಿದ್ದಾರೆ. ಫೋನ್ ಬಂದರೆ ಸಾಕು ಒಗಿಲೇನು ಅನಸ್ತೈತಿ, ನಿಮಗೆ ಗೊತ್ತಿಲ್ಲ ಅಷ್ಟ ತಲಿ ಬ್ಯಾರೆ ಬ್ಯಾರೆ ಕಡೆ ಐತಿ, ಒಂದು ಕಡೆ ಹೊತಕೊಂಡ ಮಕ್ಕೋಬೇಕು ಅನಸ್ತೈತಿ. ಮೈಯಲ್ಲ ಬಿಗದೈತಿ, ಫೋನ್ ಬಂದ್ರ ಫೋನ್ ಒಗಿಲೇನು ಅನಸತೈತಿ ಎಂದು ತಮ್ಮ ಆಪ್ತರ ಮುಂದೆ ಕುಮಟಳ್ಳಿ ಮಾತನಾಡಿದ್ದಾರೆ. ಈ ವೀಡಿಯೋ ಇದೀಗ ಸಾಮಾಜಿಕ ಜಲತಾಣಗಳಲ್ಲಿ ಸಖತ್ ವೈರಲ್ ಆಗಿದೆ.

    ಶಾಸಕರ ಮುಂದಲ್ಲದೆ ನಮ್ಮ ಪರಿಸ್ಥಿತಿಯನ್ನು ಇನ್ಯಾರ ಮುಂದೆ ಹೇಳಿಕೊಳ್ಳಬೇಕು. ಶಾಸಕರೇ ಹೀಗೆ ಮಾತನಾಡಿದರೆ ಹೇಗೆ, ಪ್ರವಾಹದಲ್ಲಿ ನೂರಾರು ಜನ ಸಿಲುಕಿ ನರಳುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಸಹಾಯ ಮಾಡುವುದು ಬಿಟ್ಟು, ಇಂತಹ ನಿರ್ಲಕ್ಷ್ಯದ ಮಾತುಗಳನ್ನು ಆಡಿದ್ದಾರೆ ಎಂದು ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಶಾಸಕರು ಹೇಳಿದ್ದೇನು?
    ನಿಮಗ್ ಗೊತ್ತಿಲ್ಲ ಅಷ್ಟ, ತಲಿ ಬ್ಯಾರೆ ಬ್ಯಾರೆ ಕಡೆ ಐತಿ, ಒಂದ ಕಡೆ ಹೊತಕೊಂಡ ಮಕ್ಕೊಬೇಕು ಅನಸ್ತೈತಿ, ಮೈಯಲ್ಲ ಬಿಗದೈತಿ ಯಾವುದಾದ್ರು ಫೋನ್ ಬಂದ್ರ ಮೊಬೈಲ್ ಒಗಿಲೇನ ಅನಸ್ತೈತಿ ಎಂದಿದ್ದಾರೆ.

  • ಕೃಷ್ಣಾ ನದಿಯಲ್ಲಿ ಮುಳುಗಿ ಮೃತಪಟ್ಟ ಸಹೋದರರ ಮನೆಗೆ ಡಿಸಿಎಂ ಭೇಟಿ

    ಕೃಷ್ಣಾ ನದಿಯಲ್ಲಿ ಮುಳುಗಿ ಮೃತಪಟ್ಟ ಸಹೋದರರ ಮನೆಗೆ ಡಿಸಿಎಂ ಭೇಟಿ

    – ಕುಟುಂಬಕ್ಕೆ ವೈಯಕ್ತಿಕವಾಗಿ 2 ಲಕ್ಷ ರೂ ಪರಿಹಾರ ವಿತರಣೆ

    ಚಿಕ್ಕೋಡಿ: ಕೃಷ್ಣಾ ನದಿಯಲ್ಲಿ ನಾಲ್ವರು ಸಹೋದರರು ಆಕಸ್ಮಿಕವಾಗಿ ಮುಳುಗಿ ಮೃತಪಟ್ಟ ಹಿನ್ನೆಲೆಯಲ್ಲಿ, ಡಿಸಿಎಂ ಲಕ್ಷ್ಮಣ ಸವದಿ ಮತ್ತು ಅಥಣಿ ಶಾಸಕ ಮಹೇಶ ಕುಮಟಳ್ಳಿ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ ಬನಸೋಡೆ ಅವರ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಇದನ್ನೂ ಓದಿ: 34ನೇ ವಸಂತಕ್ಕೆ ಕಾಲಿಟ್ಟ ಡೈನಾಮಿಕ್ ಪ್ರಿನ್ಸ್ – ಅಭಿಮಾನಿಗಳಿಗೆ ಸರ್ಪ್ರೈಸ್ ಗಿಫ್ಟ್

    ಮೃತಪಟ್ಟ ಸಹೋದರರ ತಂದೆ ಗೋಪಾಲ್‍ಗೆ ವೈಯಕ್ತಿಕವಾಗಿ 2 ಲಕ್ಷ ರೂ. ಪರಿಹಾರ ನೀಡಿ, ಮಾತನಾಡಿದ ಅವರು, ಪುತ್ರ ಶೋಕದಲ್ಲಿರುವ ವಯೋವೃದ್ದ ತಂದೆ-ತಾಯಿಯ ದುಃಖದಲ್ಲಿ ನಾವು ಕೂಡ ಭಾಗಿಯಾಗಿದ್ದೇವೆ. ಕಾರಣಾಂತರಗಳಿಂದ ಹಲವು ಇಲಾಖೆಗಳ ಕಾರ್ಯ ಬೆಂಗಳೂರಿನಲ್ಲಿದ್ದ ಸಮಯದಲ್ಲಿ ಘಟನೆ ನಡೆಯುತ್ತಿದ್ದಂತೆ ಹಲ್ಯಾಳ ಪಂಚಾಯತಿ ಅಧ್ಯಕ್ಷ ಮತ್ತು ಗ್ರಾಮದ ಹಿರಿಯರು ಫೋನ್ ಮೂಲಕ ತಿಳಿಸಿದ ವೇಳೆ ಜಿಲ್ಲಾಡಳಿತ, ಮತ್ತು ತಾಲೂಕು ಆಡಳಿತದೊಂದಿಗೆ ತಾವು ಹಾಗೂ ಶಾಸಕ ಮಹೇಶ ಕುಮಟಳ್ಳಿ ನಿರಂತರವಾಗಿ ಸಂಪರ್ಕದಲ್ಲಿ ಮಾಹಿತಿ ಪಡೆದಿದ್ದೇವೆ ಎಂದಿದ್ದಾರೆ.

    ಮೊದಲು ಪರಸುರಾಮ ನಂತರ ಉಳಿದ ಮೂವರ ಶವ ಮರುದಿನ ಪತ್ತೆಯಾಗಿದ್ದರಿಂದ ವೈಯುಕ್ತಿಕವಾಗಿ 2 ಲಕ್ಷ , ಶಾಸಕ ಮಹೇಶ ಕುಮಠಳ್ಳಿ 1 ಲಕ್ಷ ಮತ್ತು ತಾಲೂಕು ಆಡಳಿತದ ಅಧಿಕಾರಿಗಳು ನಿಮಿತ್ತ 4 ಲಕ್ಷ ರೂ. ತಾತ್ಕಾಲಿಕವಾಗಿ ಪರಿಹಾರ ಕೊಟ್ಟಿದ್ದೇವೆ. ಸರ್ಕಾರದ ಪರಿಹಾರ ಕೊಡಿಸುವ ನಿಟ್ಟಿನಲ್ಲಿ ಪ್ರಯತ್ನಿಸಲಿದ್ದೇವೆ ಎಂದು ತಿಳಿಸಿದ್ದಾರೆ.

    ಈ ಸಂದರ್ಭದಲ್ಲಿ ಅಥಣಿ ಡಿವೈಎಸ್ಪಿ ಎಸ್.ವಿ. ಗಿರೀಶ್ , ತಾಲೂಕು ದಂಡಾಧಿಕಾರಿ ದುಂಡಪ್ಪ ಕೋಮಾರ , ತಾ.ಪಂ ಅಧಿಕಾರಿ ರವಿ ಬಂಗಾರಪ್ಪನವರ , ತಾಲೂಕು ವೈದ್ಯಾಧಿಕಾರಿ ಡಾಕ್ಟರ್ ಬಿ.ಜಿ. ಕಾಗೆ , ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಪ್ರವೀಣ್ ಪಾಟೀಲ್ , ಉಪತಹಶೀಲ್ದಾರ ಮಹದೇವ ಬಿರಾದಾರ ಮತ್ತು ಪಂಚಾಯತಿ ಅಧ್ಯಕ್ಷ ಮುದಕಣ್ಣ ಶೇಗುಣಸಿ , ಚಂದ್ರಕಾಂತ್ ಕಾಗವಾಡ , ಮಹದೇವ ಬಿಸಲನಾಯಕ್ ಕುಮಾರಗೌಡ ಪಾಟೀಲ್ , ಬಾಳಪ್ಪ ಬಾಗಿ ಅಣ್ಣಪ್ಪ ಬಾಗಿ , ಸಂಗಮೇಶ್ ಇಂಗಳಿ , ಸಿದ್ದಪ್ಪ ಲೋಕುರ , ಸಿದ್ದಪ್ಪ ಪಾಟೀಲ್ ,ರಾಯಪ್ಪ ಬಾಗಿ ಮುರಗಪ್ಪ ಜಾಬಗೌಡರ ಉಪಸ್ಥಿತರಿದ್ದರು.

  • ಅಥಣಿ ಕ್ಷೇತ್ರದ ಅಭಿವೃದ್ಧಿಗೆ ರಮೇಶ್ ಜಾರಕಿಹೊಳಿ ಕೊಡುಗೆ ಅಪಾರ: ಕುಮಟಳ್ಳಿ

    ಅಥಣಿ ಕ್ಷೇತ್ರದ ಅಭಿವೃದ್ಧಿಗೆ ರಮೇಶ್ ಜಾರಕಿಹೊಳಿ ಕೊಡುಗೆ ಅಪಾರ: ಕುಮಟಳ್ಳಿ

    ಚಿಕ್ಕೋಡಿ: ಅಥಣಿ ಕ್ಷೇತ್ರದ ಸಮಗ್ರ ಅಭಿವೃದ್ದಿಗೆ ಮಾಜಿ ಸಚಿವರಾದ ರಮೇಶ್ ಜಾರಕಿಹೊಳಿ ಅವರ ಕೊಡುಗೆ ಅಪಾರವಾಗಿದೆ. ನೀರಾವರಿ ಇಲಾಖೆಯಡಿ ಅವರು ಅನೇಕ ಅಭಿವೃದ್ದಿ ಕಾರ್ಯಗಳಿಗೆ ಅನುದಾನ ನೀಡಿಲು ಸಹಕಾರ ನೀಡಿದ್ದಾರೆ. ಅವರ ಬೆಳವಣಿಗೆ ಸಹಿಸದೇ ರಾಜಕೀಯ ಷಡ್ಯಂತ್ರದಿಂದ ಈ ಎಲ್ಲ ಬೆಳವಣಿಗೆಗಳು ನಡೆದಿವೆ. ಆದಷ್ಟು ಬೇಗನೆ ಅವರು ಆರೋಪ ಮುಕ್ತರಾಗಲಿದ್ದಾರೆಂದು ಕೊಳಗೇರಿ ಅಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷ ಮಹೇಶ್ ಕುಮಟಳ್ಳಿ ಅಭಿಪ್ರಾಯಾಪಟ್ಟಿದ್ದಾರೆ.

    ನಂದೇಶ್ವರ-ಜನವಾಡ ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೆರಿಸಿ ಮಾತನಾಡಿದ ಮಹೇಶ್ ಕುಮಟಳ್ಳಿ ಅವರು, ಅಥಣಿ ಮತಕ್ಷೇತ್ರದಲ್ಲಿ ಶಿಕ್ಷಣ, ರಸ್ತೆ, ಕುಡಿಯುವ ನೀರು, ವಿದ್ಯುತ್ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಿ ಸುಧಾರಣೆ ಕೈಗೊಳ್ಳಲಾಗುತ್ತಿದೆ. ಮುಂಬರುವ ದಿನಗಳಲ್ಲಿ ನದಿ ದಂಡೆಯ ಗ್ರಾಮಗಳಿಗೆ ಶಾಪವಾಗಿರುವ ಸವಳು, ಜವಳು ಸಮಸ್ಯೆ ಹೋಗಲಾಡಿಸಲು ಯೋಜನೆ ಹಾಕಿಕೊಳ್ಳಲಾಗಿದೆ. ಕ್ಷೇತ್ರದ ಪ್ರತಿಯೊಂದು ಗ್ರಾಮಗಳಿಗೂ ಆದ್ಯತೆ ನೀಡಿ ಅಭಿವೃದ್ಧಿ ಪಡಿಸಲಾಗುವುದೆಂದು ಹೇಳಿದರು. ಇದನ್ನೂ ಓದಿ: ಹತ್ತು ದಿನಗಳಲ್ಲಿ ನನ್ನ ಮುಂದಿನ ರಾಜಕೀಯ ನಿರ್ಣಯ: ರಮೇಶ್ ಜಾರಕಿಹೊಳಿ

    ಕೊರೊನಾ ನಿಯಂತ್ರಣಕ್ಕೆ ಬಂದಿದೆ ಎಂದು ಯಾರು ನಿರ್ಲಕ್ಷ್ಯ ಮಾಡಬೇಡಿ, ಯಾವ ರೂಪದಲ್ಲಿ ಬರುತ್ತದೆ ಎಂಬುದು ಗೊತ್ತಾಗುವುದಿಲ್ಲ, ಕುಟುಂಬದ ಮುಖ್ಯಸ್ಥರು, ಮನೆಯಲ್ಲಿರುವ ಹಿರಿಯರು ಮತ್ತು ಮಕ್ಕಳ ಬಗ್ಗೆ ಕಾಳಜಿ ವಹಿಸಬೇಕೆಂದು ಮನವಿ ಮಾಡಿಕೊಂಡರು.

    ಈ ಸಂದರ್ಭದಲ್ಲಿ ಗ್ರಾಮದ ಹಿರಿಯ ಮುಖಂಡ ರಮೇಶ್ ಗೌಡ ಪಾಟೀಲ್, ವಿರುಪಾಕ್ಷ ಹಿರೇಮಠ, ರಾಮಣ್ಣ ದೇವಣ್ಣವರ, ಬಾಳಾಸಾಹೇಬ ಪಾಟೀಲ್, ಪಿ.ಕೆ.ಪಿ.ಎಸ್ ಅಧ್ಯಕ್ಷ ಬಸಪ್ಪ ಮುಧೋಳ, ಶಿವಾನಂದ ಪಾಟೀಲ್, ಬಸಪ್ಪ ಚಂಡಕಿ, ಮಹೇಶಗೌಡ ಪಾಟೀಲ್, ಶ್ರೀಧರ, ಷಣ್ಮುಖ ಲಾಲಸಿಂಗಿ, ಕೆಂಚಪ್ಪ ಪಾಟೀಲ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.