Tag: Mahesh Kumathalli

  • ಡಿಕೆಶಿಗೆ ದೇವರು ಒಳ್ಳೆಯದು ಮಾಡಲಿ: ರಮೇಶ್ ಜಾರಕಿಹೊಳಿ

    ಡಿಕೆಶಿಗೆ ದೇವರು ಒಳ್ಳೆಯದು ಮಾಡಲಿ: ರಮೇಶ್ ಜಾರಕಿಹೊಳಿ

    ಮೈಸೂರು: ನನ್ನ ಶತ್ರುಗಳಿಕೆ ದೇವರು ಒಳ್ಳೆಯದು ಮಾಡಲಿ. ಆದರ ಜೊತೆಗೆ ಆಪ್ತರಾಗಿರುವ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಗೂ ಒಳ್ಳೆಯದು ಮಾಡಲಿ ಎಂದು ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

    ಇಂದು ಮೈಸೂರಿನಲ್ಲಿ ಚಾಮುಂಡಿ ದೇವಿ ದರ್ಶನ ಪಡೆದು ನಂತರ ಮಾತನಾಡಿದ ಅವರು, ನನಗೆ ಸುಪ್ರೀಂ ಕೋರ್ಟ್ ತೀರ್ಪಿನ ಬಗ್ಗೆ ಯಾವ ಭಯವೂ ಇಲ್ಲ. ನನ್ನೂರಿನಲ್ಲಿ ಇದ್ದಿದ್ದರೆ ಕೋಲಾಪುರ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಹೋಗುತ್ತಿದೆ. ಇವತ್ತು ಮೈಸೂರಿನಲ್ಲಿದ್ದೀನಿ ಹಾಗಾಗಿ ಚಾಮುಂಡಿ ದೇವಿ ದರ್ಶನ ಪಡೆದಿದ್ದೇನೆ ಎಂದು ತಿಳಿಸಿದರು.

    ಇದೇ ವೇಳೆ ಡಿಕೆಶಿ ಅವರು ಕೂಡ ಇವತ್ತೇ ಚಾಮುಂಡಿ ದರ್ಶನ ಪಡೆಯುತ್ತಿರುವ ವಿಚಾರದ ಬಗ್ಗೆ ಕೇಳಿದಾಗ ನೋ ಕಾಮೆಂಟ್ಸ್ ಎಂದ ಅವರು, ಸುಪ್ರೀಂ ಕೋರ್ಟ್ ತೀರ್ಪು ನಮ್ಮ ಪರವಾಗಿ ಬರುತ್ತೆ ಎಂಬ ವಿಶ್ವಾಸವಿದೆ. ತೀರ್ಪು ಏನಾಗುತ್ತೆ ಅದು ಆಗಲಿ ಬಿಡಲಿ. ಚುನಾವಣೆಗೆ ಸ್ಪರ್ಧಿಸುವ ಅವಕಾಶ ಸಿಕ್ಕರೆ ಸಾಕು, ನೋಡೋಣಾ ಏನಾಗುತ್ತೆ ಎಂದರು.

    ರಮೇಶ್ ಜಾರಕಿಹೊಳಿ ಜೊತೆ ಮೊತ್ತೋರ್ವ ಅನರ್ಹ ಶಾಸಕ ಮಹೇಶ್ ಕಮಟ್ಟಳಿ ಕೂಡ ಚಾಮುಂಡಿ ತಾಯಿಯ ದರ್ಶನ ಪಡೆದಿದ್ದು, ದೇವರ ದರ್ಶನಕ್ಕೂ ಸುಪ್ರೀಂ ಕೋರ್ಟ್ ತೀರ್ಪಿಗೂ ಸಂಬಂಧ ಇಲ್ಲ. ನಮಗೆ ಒಳ್ಳೆಯದಾಗುತ್ತೆ ಅಂದುಕೊಂಡಿದ್ದೇನೆ. ರಾಜಕೀಯ ಕಾರಣಕ್ಕೆ ಇಲ್ಲಿಗೆ ಬಂದಿಲ್ಲ ಎಂದು ಹೇಳಿದರು.

  • ಈ ಕಡೆ ಮಂದಿ ನಮ್ಮ ಮಾತ್ ಕೇಳಿದ್ರೆ ಎದೆ ಒಡ್ಕೋತೀರಿ: ಶ್ರೀರಾಮುಲು

    ಈ ಕಡೆ ಮಂದಿ ನಮ್ಮ ಮಾತ್ ಕೇಳಿದ್ರೆ ಎದೆ ಒಡ್ಕೋತೀರಿ: ಶ್ರೀರಾಮುಲು

    – ಕೃಷ್ಣನ ಆಶೀರ್ವಾದ ಇದ್ರೆ ಡಿಸಿಎಂ ಆಗ್ತೀನಿ

    ಉಡುಪಿ: ಆರೋಗ್ಯ ಸಚಿವ ಶ್ರೀರಾಮುಲು ಅವರು ಡಿಸಿಎಂ ಲಕ್ಷ್ಮಣ ಸವದಿ ಪರ ಬ್ಯಾಟ್ ಬೀಸಿ, ನಮ್ಮ ಕಡೆ ಭಾಷೆನೇ ಹಂಗೆ ಎಂದು ಹೇಳಿದ್ದಾರೆ.

    ಅವಾಚ್ಯ ಪದಗಳಿಂದ ಅನರ್ಹ ಶಾಸಕ ಮಹೇಶ್ ಕುಮಟಳ್ಳಿ ಅವರಿಗೆ ಡಿಸಿಎಂ ಅವಮಾನಿಸಿದ ವಿಚಾರವಾಗಿ ನಗರದಲ್ಲಿ ಪ್ರತಿಕ್ರಿಯಿಸಿದ ಸಚಿವರು, ಅದೇನೂ ಗಂಭೀರ ವಿಚಾರ ಅಲ್ಲ. ಉತ್ತರ ಕರ್ನಾಟಕದ ಆಡು ಭಾಷೆನೇ ಹಂಗೆ ಇರೋದು. ಕುಮಟಳ್ಳಿ ಅವರಿಗೆ ನಾನು ಸಮಾಧಾನ ಮಾಡುತ್ತೇನೆ ಎಂದು ನಗೆ ಚಟಾಕಿ ಹಾರಿಸಿದರು.

    ‘ನಮ್ ಕಡೆ ಹೆಂಗ್ ಮಾತಾಡ್ತಾರೆ ಅಂತ ನೀವು ಊಹಿಸಲೂ ಸಾಧ್ಯವಿಲ್ಲ. ನಮ್ ಆಡುಮಾತಿಗೆ ಯಾರೂ ತಪ್ಪು ಭಾವಿಸಲ್ಲ. ಈ ಕಡೆ ಮಂದಿ ನಮ್ ಮಾತು ಕೇಳಿದ್ರೆ ಎದೆ ಒಡ್ಕೋತೀರಿ. ಲಕ್ಷ್ಮಣ ಸವದಿ ಅವರು ಉದ್ದೇಶ ಪೂರ್ವಕವಾಗಿ ಮಾತನಾಡಿರಲ್ಲ. ನಾವು ಇನ್ನೂ ಬೇರೆ ಬೇರೆ ಶಬ್ದ ಮಾತಾಡಿರ್ತೀವಿ. ನಮ್ ಕಡೆ ಮಂದಿ ಅಭ್ಯಾಸ ಅಷ್ಟೇ. ಕುಮಟಳ್ಳಿಯವರು ಮಿಸ್ ಅಂಡರ್ ಸ್ಟಾಡಿಂಗ್ ಮಾಡ್ಕೊಂಡಿರಬಹುದು’ ಎಂದು ನಗುತ್ತಲೇ ಹೇಳಿದರು.

    ಮಹೇಶ್ ಕುಮಟಳ್ಳಿ ಹಾಗೂ ಲಕ್ಷ್ಮಣ ಸವದಿ ನಮ್ಮ ಸ್ನೇಹಿತರು. ಏನಾದ್ರೂ ಗೊಂದಲ ಇದ್ದರೆ ಸರಿಪಡಿಸುವ ಕೆಲಸ ಮಾಡುತ್ತೇನೆ ಎಂದು ತಿಳಿಸಿದರು.

    ಇದೇ ವೇಳೆ ಉಪ ಮುಖ್ಯಮಂತ್ರಿ ಆಕಾಂಕ್ಷೆ ಹೊರ ಹಾಕಿದ ಸಚಿವರು, ಕೃಷ್ಣನ ದಯೆ ಹೇಗಿದೆಯೋ ನೋಡೋಣ. ಕೃಷ್ಣನ ಆಶೀರ್ವಾದ ಇದ್ದರೆ ಡಿಸಿಎಂ ಆಗುತ್ತೇನೆ ಎಂದು ನಸುನಕ್ಕು ಮಾಧ್ಯಮಗಳಿಗೆ ಕೈಮುಗಿದರು.

    ಸವದಿ ಹೇಳಿದ್ದೇನು?
    ಕೃಷ್ಣಾ ನದಿ ಪ್ರವಾಹ ಪೀಡಿತ ಗ್ರಾಮಕ್ಕೆ ಲಕ್ಷ್ಮಣ ಸವದಿ ಭೇಟಿ ನೀಡಿದ್ದರು. ಈ ವೇಳೆ ಅಥಣಿ ಮತ ಕ್ಷೇತ್ರದ ಅನರ್ಹ ಶಾಸಕ ಮಹೇಶ್ ಕುಮಟಳ್ಳಿ ಕುರಿತು ಅಪನಿಂದನೆ ಮಾಡಿದ್ದಾರೆ. ಸವದಿ ತಮ್ಮ ಬೆಂಬಲಿಗನ ಜೊತೆ ಮೊಬೈಲ್ ಮಾತನಾಡುತ್ತಾ ಕುಮುಟಳ್ಳಿ ವಿರುದ್ಧ ಆಕ್ಷೇಪಾರ್ಹ ಮಾತಾಡಿರುವುದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

    ಪ್ರವಾಹ ಪೀಡಿತ ಗ್ರಾಮಗಳಿಗೆ ಸಂತ್ರಸ್ತರ ಅಳಲು ಕೇಳಲು ಹೋಗುತ್ತಿದ್ದಾಗ ಮೊಬೈಲ್‍ನಲ್ಲಿ ಮಾತನಾಡುತ್ತಾ ಮುಂಜಾನೆ ಕುಮಟಳ್ಳಿ ಅಂತಹ ದರಿದ್ರ ಮಕ್ಕಳ ಹೆಸರು ನೆನಪಿಸಬೆಡಿ. ಅವನ ಸುದ್ದಿ ತಗೊಂಡ್ ನಾನೇನು ಮಾಡಲಿ. ನನ್ನ ಮೂಡ್ ಹಾಳು ಮಾಡಬೇಡಿ ಎಂದಿದ್ದರು.

    ಸಮ್ಮಿಶ್ರ ಸರ್ಕಾರದ ಪತನಕ್ಕೆ ಕಾರಣವಾಗಿ ಬಿಜೆಪಿ ಸರ್ಕಾರದ ಆಸ್ತಿತ್ವಕ್ಕೆ ಮಹೇಶ್ ಕುಮುಟಳ್ಳಿ ಬಲ ತುಂಬಿದ್ದರು. ಆದರೆ ಇದೀಗ ಅವರ ವಿರುದ್ಧವೇ ಡಿಸಿಎಂ ಗರಂ ಆಗಿರುವುದಕ್ಕೆ ಆಕ್ರೋಶ ವ್ಯಕ್ತವಾಗುತ್ತಿದೆ.

  • ನನ್ನ ಹೇಳಿಕೆ ವಾಪಸ್ ಪಡೆಯುತ್ತೇನೆ: ಡಿಸಿಎಂಗೆ ಹೆದರಿದ್ರಾ ರಮೇಶ್ ಜಾರಕಿಹೊಳಿ?

    ನನ್ನ ಹೇಳಿಕೆ ವಾಪಸ್ ಪಡೆಯುತ್ತೇನೆ: ಡಿಸಿಎಂಗೆ ಹೆದರಿದ್ರಾ ರಮೇಶ್ ಜಾರಕಿಹೊಳಿ?

    ಚಿಕ್ಕೋಡಿ (ಬೆಳಗಾವಿ): ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಬಗ್ಗೆ ಪಬ್ಲಿಕ್ ಟಿವಿಗೆ ನೀಡಿದ್ದ ಹೇಳಿಕೆ ವಾಪಸ್ ಪಡೆಯುತ್ತೆನೆ ಎಂದು ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಈ ಮೂಲಕ ಮಾಜಿ ಸಚಿವರು, ಡಿಸಿಎಂಗೆ ಹೆದರಿದ್ರಾ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಯಾಗುತ್ತಿದೆ.

    ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ದರೂರು ಗ್ರಾಮದಲ್ಲಿ ಅನರ್ಹ ಶಾಸಕ ಮಹೇಶ್ ಕುಮಟಳ್ಳಿ ಬೆಂಬಲಿಗರ ಸಭೆಗೆ ರಮೇಶ್ ಜಾರಕಿಹೊಳಿ ಹಾಜರಾಗಿದ್ದರು. ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಟೆನ್ಷನ್‍ನಲ್ಲಿ ಏನನ್ನೋ ಮಾತನಾಡಿದೆ. ಪಬ್ಲಿಕ್ ಟಿವಿಗೆ ನೀಡಿದ್ದ ಹೇಳಿಕೆಯನ್ನು ವಾಪಸ್ ಪಡೆಯುತ್ತೇನೆ. ಲಕ್ಷ್ಮಣ ಸವದಿ ಬಗ್ಗೆ ಬಾಯಿ ತಪ್ಪಿ ಏನನ್ನೋ ಹೇಳಿಬಿಟ್ಟೆ ಎಂದು ತಿಳಿಸಿದ್ದಾರೆ.

    ಸಾಮಾನ್ಯ ಪ್ರಜೆಯ ಬಗ್ಗೆ ಮಾತನಾಡಲು ಪ್ರಜಾಪ್ರಭುತ್ವದಲ್ಲಿ ಅವಕಾಶವಿದೆ. ಆದರೆ ಉನ್ನತ ಹುದ್ದೆಯಲ್ಲಿ ಇರುವವರ ಬಗ್ಗೆ ಮಾತನಾಡುವುದು ಸರಿಯಲ್ಲ. ಬಾಯಿ ತಪ್ಪಿ ಮಾತನಾಡಿಬಿಟ್ಟೆ. ಅವನ ಮಾತಿನಿಂದಲೇ ಈ ಮಟ್ಟಕ್ಕೆ ಬಂದಿದ್ದಾನೆ. ಹೀಗಾಗಿ ನನ್ನ ಹೇಳಿಕೆ ವಾಪಸ್ ಪಡೆಯುತ್ತೇನೆ ಎಂದು ಪುನರುಚ್ಚರಿಸಿದರು.

    ಈ ಹಿಂದೆ ಹೇಳಿದ್ದೇನು?:
    ದರೂರು ಗ್ರಾಮದಲ್ಲಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ರಮೇಶ್ ಜಾರಕಿಹೊಳಿ, ಡಿಸಿಎಂ ಲಕ್ಷ್ಮಣ ಸವದಿ ಅಥಣಿಯ ಶಾಸಕ ಮಹೇಶ್ ಕುಮಟಳ್ಳಿ ಬಗ್ಗೆ ಮಾತನಾಡಿದ್ದು ದುರ್ದೈವ. ಲಕ್ಷ್ಮಣ ಸವದಿ ಮಾತನಾಡಿದ್ದರ ಬಗ್ಗೆ ನನಗೆ ಮಾಹಿತಿ ಇಲ್ಲ. ಒಂದು ವೇಳೆ ಮಾತನಾಡಿದ್ರೆ ಅದು ದುರ್ದೈವ. ಅಥಣಿ ಜನರು ತಿರಸ್ಕಾರ ಮಾಡಿದ್ದರೂ ಲಕ್ಷ್ಮಣ ಸವದಿ ಅವರಿಗೆ ಅಧಿಕಾರ ಸಿಕ್ಕಿದೆ. ರಾಜಕೀಯದಲ್ಲಿ ಯಾವಾಗ ಏನು ಆಗುತ್ತೆ ಎಂದು ಹೇಳಲು ಸಾಧ್ಯವಿಲ್ಲ. ನಾವೆಲ್ಲ ಸರ್ಕಾರ ಬೀಳಬೇಕೆಂದು ರಾಜೀನಾಮೆ ನೀಡಿಲ್ಲ. ಅನ್ಯಾಯ ಆಗಿದ್ದರಿಂದ ರಾಜೀನಾಮೆ ನೀಡಿದ್ದು, ಬಿಜೆಪಿಗೂ ನಮಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದರು.

    ನಾನೋರ್ವ ಸಾಮಾನ್ಯ ಕಾರ್ಯಕರ್ತನಾಗಿದ್ದು, ಮಹೇಶ್ ಕುಮಟಳ್ಳಿ ಅವರನ್ನು ಅಥಣಿ ಜನರು ಗೆಲ್ಲಿಸಬೇಕಿದೆ. ಕಳೆದ ಏಳೆಂಟು ತಿಂಗಳನಿಂದ ಸುಪ್ರೀಂಕೋರ್ಟ್ ವಿಷಯದಲ್ಲಿ ತೊಡಗಿಕೊಂಡಿದ್ದರಿಂದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲು ಸಾಧ್ಯವಾಗಿರಲಿಲ್ಲ. ಹಾಗಾಗಿ ಕ್ಷೇತ್ರದ ಜನರಲ್ಲಿ ಕ್ಷಮೆ ಕೇಳುತ್ತೇನೆ ಎಂದು ತಿಳಿಸಿದ್ದರು.

  • ಅದು ಬೇರೆ ಕುಮಟಳ್ಳಿ, ಅನರ್ಹ ಕುಮಟಳ್ಳಿ ಅಲ್ಲ: ಲಕ್ಷ್ಮಣ ಸವದಿ

    ಅದು ಬೇರೆ ಕುಮಟಳ್ಳಿ, ಅನರ್ಹ ಕುಮಟಳ್ಳಿ ಅಲ್ಲ: ಲಕ್ಷ್ಮಣ ಸವದಿ

    – ಕುಮಟಳ್ಳಿ, ನನ್ನ ಮಧ್ಯೆ ಭಿನ್ನಾಭಿಪ್ರಾಯಕ್ಕೆ ಯತ್ನ

    ಚಿಕ್ಕೋಡಿ (ಬೆಳಗಾವಿ): ವೈರಲ್ ಆಗಿರುವ ವಿಡಿಯೋದಲ್ಲಿ ನಾನು ಅನರ್ಹ ಶಾಸಕ ಮಹೇಶ್ ಕುಮಟಳ್ಳಿ ಬಗ್ಗೆ ಮಾತನಾಡಿಲ್ಲ. ಅದು ಬೇರೆ ಕುಮಟಳ್ಳಿ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ.

    ವಿಡಿಯೋ ಮೂಲಕ ಸ್ಪಷ್ಟನೆ ನೀಡಿರುವ ಡಿಸಿಎಂ ಲಕ್ಷ್ಮಣ ಸವದಿ, ಮಹಾ ಮಳೆಗೆ ಕೃಷ್ಣಾ ನದಿ ಪ್ರವಾಹ ಮಟ್ಟ ಮೀರಿ ಹರಿಯುತ್ತಿತ್ತು. ಈ ವೇಳೆ ಅಥಣಿ ಕ್ಷೇತ್ರದ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದಾಗ ಕೆಲ ಮಾಧ್ಯಮಗಳು ನಾನು ಫೋನ್‍ನಲ್ಲಿ ಮಾತನಾಡಿದ ದೃಶ್ಯವನ್ನು ಸೆರೆ ಹಿಡಿದಿದ್ದವು. ಆ ವಿಡಿಯೋವನ್ನು ಈಗ ಪ್ರಸಾರ ಮಾಡಿ ಮಹೇಶ್ ಕುಮಟಳ್ಳಿ ಅವರ ಬಗ್ಗೆ ಮಾತನಾಡಿದ್ದೇನೆ ಎಂಬಂತೆ ಬಿಂಬಿಸಲಾಗುತ್ತಿದೆ. ನಾನು ಅನರ್ಹ ಶಾಸಕರ ಬಗ್ಗೆ ತಪ್ಪಾಗಿ ಮಾತನಾಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಇದನ್ನು ಓದಿ: ಮಹೇಶ್ ಕುಮಟಳ್ಳಿ ಬಗ್ಗೆ ಡಿಸಿಎಂ ಮಾತನಾಡಿದ್ದು ದುರ್ದೈವ: ರಮೇಶ್ ಜಾರಕಿಹೊಳಿ

    ನಾನು ಮಾತಾಡಿರುವ ವಿಡಿಯೋ ಬೇರೆ ಕುಮಟಳ್ಳಿ ಅವರಿಗೆ ಸಂಬಂಧಿಸಿದ್ದು. ಅವರು ನಮ್ಮ ಸ್ನೇಹಿತರು. ಯಾವುದೋ ವಿಚಾರಕ್ಕೆ ಫೋನ್ ಮಾಡಿದ್ದರು. ಆಗ ನಾನು ಕುಮಟಳ್ಳಿ ಬಗ್ಗೆ ಯಾಕ ತಲೆ ಕೆಡಿಸಿಕೊಳ್ಳುತ್ತಿಯಾ, ಓಡಿ ಹೋಗತಾನೆ ಬಿಡು ಎಂದು ಹೇಳಿದ್ದೆ. ಆದರೆ ಈಗ ನಾನು ಅನರ್ಹ ಶಾಸಕ ಮಹೇಶ್ ಕುಮಟಳ್ಳಿ ಅವರ ಬಗ್ಗೆ ಮಾತನಾಡಿದ್ದೇನೆ ಎಂಬಂತೆ ತೋರಿಸಲಾಗುತ್ತಿದೆ ಎಂದು ಮಾಧ್ಯಮಗಳ ವಿರುದ್ಧವೇ ಆರೋಪ ಮಾಡಿದ್ದಾರೆ.

    ಮಹೇಶ್ ಕುಮಟಳ್ಳಿ ಹಾಗೂ ನನ್ನ ಮಧ್ಯೆ ಭಿನ್ನಾಭಿಪ್ರಾಯ ತಂದಿಡಲು ಯಾರೋ ಸ್ಥಳೀಯ ನಾಯಕರು ಹೀಗೆ ಮಾಡಿದ್ದಾರೆ. ಉಪ ಚುನಾವಣೆಯ ಲಾಭ ಪಡೆಯಲು ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಅನರ್ಹ ಶಾಸಕ ಹಾಗೂ ನನ್ನ ಮಧ್ಯೆ ಯಾವುದೇ ರೀತಿಯ ಭಿನ್ನಾಭಿಪ್ರಾಯವಿಲ್ಲ. ನಾವು ಸ್ನೇಹಿತರಾಗಿಯೇ ಇರುತ್ತೇವೆ. ಹೀಗಾಗಿ ವಿಡಿಯೋ ಬಗ್ಗೆ ಅಪಾರ್ಥ ಮಾಡಿಕೊಳ್ಳುವ ಅಗತ್ಯವಿಲ್ಲ ಎಂದು ಹೇಳಿದರು.

    ಸವದಿ ಹೇಳಿದ್ದೇನು?
    ಕೃಷ್ಣಾ ನದಿ ಪ್ರವಾಹ ಪೀಡಿತ ಗ್ರಾಮಕ್ಕೆ ಲಕ್ಷ್ಮಣ ಸವದಿ ಭೇಟಿ ನೀಡಿದ್ದರು. ಈ ವೇಳೆ ಅಥಣಿ ಮತ ಕ್ಷೇತ್ರದ ಅನರ್ಹ ಶಾಸಕ ಮಹೇಶ್ ಕುಮಟಳ್ಳಿ ಕುರಿತು ಅಪನಿಂದನೆ ಮಾಡಿದ್ದಾರೆ. ಸವದಿ ತಮ್ಮ ಬೆಂಬಲಿಗನ ಜೊತೆ ಮೊಬೈಲ್ ಮಾತನಾಡುತ್ತಾ ಕುಮುಟಳ್ಳಿ ವಿರುದ್ಧ ಆಕ್ಷೇಪಾರ್ಹ ಮಾತಾಡಿರುವುದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

    ಪ್ರವಾಹ ಪೀಡಿತ ಗ್ರಾಮಗಳಿಗೆ ಸಂತ್ರಸ್ತರ ಅಳಲು ಕೇಳಲು ಹೋಗುತ್ತಿದ್ದಾಗ ಮೊಬೈಲ್‍ನಲ್ಲಿ ಮಾತನಾಡುತ್ತಾ ಮುಂಜಾನೆ ಕುಮಟಳ್ಳಿ ಅಂತಹ ದರಿದ್ರ ಮಕ್ಕಳ ಹೆಸರು ನೆನಪಿಸಬೆಡಿ. ಅವನ ಸುದ್ದಿ ತಗೊಂಡ್ ನಾನೇನು ಮಾಡಲಿ. ನನ್ನ ಮೂಡ್ ಹಾಳು ಮಾಡಬೇಡಿ ಎಂದಿದ್ದರು.

    ಸಮ್ಮಿಶ್ರ ಸರ್ಕಾರದ ಪತನಕ್ಕೆ ಕಾರಣವಾಗಿ ಬಿಜೆಪಿ ಸರ್ಕಾರದ ಆಸ್ತಿತ್ವಕ್ಕೆ ಮಹೇಶ್ ಕುಮುಟಳ್ಳಿ ಬಲ ತುಂಬಿದ್ದರು. ಆದರೆ ಇದೀಗ ಅವರ ವಿರುದ್ಧವೇ ಡಿಸಿಎಂ ಗರಂ ಆಗಿರುವುದಕ್ಕೆ ಆಕ್ರೋಶ ವ್ಯಕ್ತವಾಗುತ್ತಿದೆ.

  • ಕಾಂಗ್ರೆಸ್‍ನಲ್ಲಿ ಬಿರುಸುಗೊಂಡಿತು ಅತೃಪ್ತ ಶಾಸಕರ ರಣತಂತ್ರ

    ಕಾಂಗ್ರೆಸ್‍ನಲ್ಲಿ ಬಿರುಸುಗೊಂಡಿತು ಅತೃಪ್ತ ಶಾಸಕರ ರಣತಂತ್ರ

    ಬೆಂಗಳೂರು: ಮೈತ್ರಿ ಸರ್ಕಾರದ ಸಂಪುಟದಲ್ಲಿ ಪಕ್ಷೇತರರಿಬ್ಬರಿಗೆ ಸಚಿವ ಸ್ಥಾನ ಸಿಕ್ಕ ಬೆನ್ನಲ್ಲಿಯೇ ಕಾಂಗ್ರೆಸ್‍ನಲ್ಲಿ ಅತೃಪ್ತ ಶಾಸಕರ ರಣತಂತ್ರ ಬಿರುಸುಗೊಂಡಿದೆ.

    ಅತೃಪ್ತ ನಾಯಕ ರಮೇಶ್ ಜಾರಕಿಹೊಳಿ ಅವರ ಮನೆಗೆ ಮಸ್ಕಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಪ್ರತಾಪ್‍ಗೌಡ ಪಾಟೀಲ್ ಬೆಳ್ಳಂಬೆಳಗ್ಗೆ ಭೇಟಿ ನೀಡಿದ್ದಾರೆ. ಅಥಣಿ ಶಾಸಕ ಮಹೇಶ್ ಕುಮಟ್ಟಳ್ಳಿ ಅವರು ಕೂಡ ನಿನ್ನೆಯಷ್ಟೇ ರಮೇಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿದ್ದರು. ಈ ಎಲ್ಲ ಬೆಳವಣಿಗೆ ಕಾಂಗ್ರೆಸ್ ನಾಯಕರಲ್ಲಿ ಆತಂಕ ಹುಟ್ಟಿಸಿದೆ.

    ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಸೆವನ್ ಮಿನಿಸ್ಟರ್ ಕ್ವಾರ್ಟರ್ಸ್ ನಿವಾಸದಿಂದ ಹೊರ ಬರುತ್ತಿಲ್ಲ. ಹೀಗಾಗಿ ಮಾಜಿ ಸಚಿವರ ನಿವಾಸಕ್ಕೆ ಅತೃಪ್ತರ ಗುಂಪಿನಲ್ಲಿ ಸೇರಿರುವ ಪ್ರತಾಪ್ ಗೌಡ ಪಾಟೀಲ್ ರಹಸ್ಯ ಭೇಟಿ ನೀಡಿದ್ದಾರೆ. ರಮೇಶ್ ಜಾರಕಿಹೊಳಿ ಅವರ ಜೊತೆಗೆ ಮಾತುಕತೆ ನಡೆಸಿ, ಬಳಿಕ ಹಿಂದಿನ ಗೇಟ್‍ನಿಂದ ಹೊರ ಬಂದಿದ್ದಾರೆ. ಈ ವೇಳೆ ಶಾಸಕರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ಹಿಂದೇಟು ಹಾಕಿದರು.

    ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದಂತೆ ಪ್ರತಾಪ್ ಗೌಡ ಪಾಟೀಲ್ ಅವರಿಗೆ ರಮೇಶ್ ಜಾರಕಿಹೊಳಿ ತಾಕೀತು ಮಾಡಿದ್ದಾರೆ. ಇದೇ ಕಾರಣಕ್ಕೆ ಮಾಧ್ಯಮಗಳಿಂದ ಶಾಸಕರು ದೂರ ಉಳಿದರು ಎಂದು ಪಕ್ಷದ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

  • ಮತ್ತೆ ಒಂದಾದ ಗುರು ಶಿಷ್ಯರು – ಬೆಳಗಾವಿ ರಾಜಕೀಯದಲ್ಲಿ ಮತ್ತೆ ಸ್ಫೋಟಕ ಟ್ವಿಸ್ಟ್

    ಮತ್ತೆ ಒಂದಾದ ಗುರು ಶಿಷ್ಯರು – ಬೆಳಗಾವಿ ರಾಜಕೀಯದಲ್ಲಿ ಮತ್ತೆ ಸ್ಫೋಟಕ ಟ್ವಿಸ್ಟ್

    ಬೆಳಗಾವಿ: ಮಹತ್ವದ ಬೆಳವಣಿಗೆಯಲ್ಲಿ ರೆಬೆಲ್ ಶಾಸಕ ರಮೇಶ್ ಜಾರಕಿಹೊಳಿ ಜೊತೆ ಅಥಣಿ ಕಾಂಗ್ರೆಸ್ ಶಾಸಕ ಮಹೇಶ್ ಕುಮಟಳ್ಳಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ್ದಾರೆ.

    ರಮೇಶ್ ಮತ್ತು ಮಹೇಶ್ ಕುಮಟಳ್ಳಿ ತಮ್ಮ ಬೆಂಬಲಿಗರನ್ನು ದೂರ ಇಟ್ಟು ಗುಪ್ತ್ ಗುಪ್ತ್ ಮೀಟಿಂಗ್ ಮಾಡಿದ್ದಾರೆ. ಬೆಳಗಾವಿ ಜಿಲ್ಲೆಯ ಗೋಕಾಕ್ ನಿವಾಸದಲ್ಲಿ ಸುಮಾರು ಒಂದು ಗಂಟೆ ಕಾಲ ಗುರು-ಶಿಷ್ಯರ ನಡೆದು ಚರ್ಚೆ ನಡೆದಿದೆ. ರಾಜೀನಾಮೆ ನೀಡುವ ಕುರಿತು ಮಹೇಶ್ ಕುಮಟಳ್ಳಿ ಜೊತೆಗೆ ಮಾತುಕತೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

    ರಮೇಶ್ ಮೇ.23ರ ನಂತರ ರಾಜೀನಾಮೆ ನೀಡುತ್ತಿರುವ ಕುರಿತು ಹೇಳಿಕೊಂಡಿದ್ದಾರೆ. ನೀವು ಬಂದರೆ ಓಕೆ, ಇಲ್ಲ ಅಂದರೂ ಒಬ್ಬನೇ ರಾಜೀನಾಮೆ ನೀಡುತ್ತೇನೆ ಎಂದು ಹೇಳುವ ಮೂಲಕ ಪರೋಕ್ಷವಾಗಿ ಶಾಸಕ ಮಹೇಶ್ ಕುಮಟಳ್ಳಿ ಸೆಳೆಯಲು ಯತ್ನಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

    ಕೆಎಂಎಫ್ ಚುನಾವಣೆಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಸೇರಿದಂತೆ ಎಲ್ಲರ ಆಶೀರ್ವಾದ ಇದೆ. ಕುಮಟಳ್ಳಿ ಕಾರ್ಯಕ್ರಮಕ್ಕೆ ಬಂದಿದ್ದಾನೆ ಅವನು ನಮ್ಮವನೇ. ಕೆಎಂಎಫ್ ಚುನಾವಣೆ ಅಂದರೆ ಎಂಎಲ್‍ಎ ಚುನಾವಣೆ ಇದ್ದ ಹಾಗೆ. ಅದಕ್ಕೆ ನೀವು ಸಹಕಾರ ಕೊಡಬೇಕು. 23ರ ಚುನಾವಣೆ ಫಲಿತಾಂಶದ ನಂತರ ಸರ್ಕಾರದಲ್ಲಿ ಬಹಳ ಬದಲಾವಣೆ ಆಗಲಿದೆ ಎಂದರು.

    ಕೆಂಪು ಲೈಟ್ ಹಾಕಿಕೊಂಡು ಓಡಾಡುವರು ಮಾಜಿ ಆಗುತ್ತಾರೆ. ಪರೋಕ್ಷವಾಗಿ ಈಗಿರುವ ಎಲ್ಲ ಸಚಿವರು ಮಾಜಿ ಆಗಲಿದ್ದಾರೆ. ಈಗ ಕೆಂಪು ಲೈಟ್ ಹಾಕಿಕೊಂಡು ಓಡಾಡುವರನ್ನ ನೋಡಿ ಹೆದರಬೇಡಿ. ದೊಡ್ಡ ಪ್ರಮಾಣದಲ್ಲಿ ನಮಗೆ ಅಧಿಕಾರ ಬರುತ್ತದೆ. ವಿಶ್ವಾಸ ದ್ರೋಹ, ಬೆನ್ನಿಗೆ ಚೂರಿ ಹಾಕುವ ಮಂದಿಯನ್ನು ನಂಬಬೇಡಿ. ಅಧಿಕಾರ ಬರಲಿ ಬಿಡಲಿ ನಮ್ಮನ್ನ ನಂಬಿ ಎಂದು ಹೇಳುವ ಮೂಲಕ ಸಹೋದರ ಸತೀಶ್‍ಗೆ ರಮೇಶ್ ಟಾಂಗ್ ಕೊಟ್ಟಿದ್ದಾರೆ.

    ಇತ್ತ ರಮೇಶ್ ಜಾರಕಿಹೊಳಿ ಮಾತಿಗೆ ಮಹೇಶ್ ಕುಮಟಳ್ಳಿ ತಲೆ ಅಲ್ಲಾಡಿಸಿದ್ದು, ಮಾತುಕತೆ ಮುಗಿಸಿ ಹೊರ ಬಂದ ಮಹೇಶ್ ಕುಮಟಳ್ಳಿ ರಾಜಕೀಯ ಕುರಿತು ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ. ಅಥಣಿ ತಾಲೂಕಿನಲ್ಲಿ ನೀರಿನ ಸಮಸ್ಯೆ ಹೆಚ್ಚಾಗಿದ್ದು, ಈ ಕುರಿತು ಶಾಸಕ ರಮೇಶ್ ಜಾರಕಿಹೊಳಿಯೊಂದಿಗೆ ಚರ್ಚೆ ಮಾಡಿದ್ದೇನೆ. ರಮೇಶ್ ಜಾರಕಿಹೊಳಿ ಮಹಾರಾಷ್ಟ್ರದ ಸಿಎಂ ಜೊತೆ ಮಾತನಾಡುತ್ತೇನೆ ಅಂದಿದ್ದಾರೆ. ಇನ್ನು ಎರಡು ದಿನಗಳಲ್ಲಿ ಕೃಷ್ಣಾ ನದಿಗೆ ನೀರು ಬಿಡಿಸುವ ಭರವಸೆಯನ್ನು ರಮೇಶ್ ನೀಡಿದ್ದಾರೆ. ರಮೇಶ್ ಮಗ ಅಮರನಾಥ ಸತ್ಕಾರ ಕಾರ್ಯಕ್ರಮ ಇತ್ತು ಇದರಲ್ಲಿ ಭಾಗಿಯಾಗಿದ್ದೆ ಅಷ್ಟೇ ಎಂದು ಮಹೇಶ್ ಕುಮಟಳ್ಳಿ ಹೇಳಿದ್ದಾರೆ.

  • ಮತ್ತೆ ದಿಢೀರ್ ನಾಪತ್ತೆಯಾದ ಅತೃಪ್ತ ಕೈ ಶಾಸಕ ಮಹೇಶ್ ಕುಮಟಳ್ಳಿ

    ಮತ್ತೆ ದಿಢೀರ್ ನಾಪತ್ತೆಯಾದ ಅತೃಪ್ತ ಕೈ ಶಾಸಕ ಮಹೇಶ್ ಕುಮಟಳ್ಳಿ

    ಬೆಳಗಾವಿ (ಚಿಕ್ಕೋಡಿ): ಆಪರೇಷನ್ ಕಮಲ ವಿಫಲವಾದ ಬೆನ್ನಲ್ಲೇ ಮುಂಬೈನಿಂದ ರಾತ್ರೋರಾತ್ರಿ ಕ್ಷೇತ್ರಕ್ಕೆ ಆಗಮಿಸಿದ್ದ ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಅವರು ಮತ್ತೆ ದಿಢೀರ್ ನಾಪತ್ತೆಯಾಗಿದ್ದಾರೆ.

    ಶಾಸಕ ಮಹೇಶ್ ಕುಮಟಳ್ಳಿ ಅವರು ಕಾಂಗ್ರೆಸ್ ಶಾಸಕಾಂಗ ಸಭೆಗೂ ಹಾಜರಾಗದೇ, ಕ್ಷೇತ್ರದ ಜನರಿಗೂ ಸಿಗದೆ ಕೆಲವು ದಿನಗಳಿಂದ ನಾಪತ್ತೆಯಾಗಿದ್ದರು. ಬಳಿಕ ಆಪರೇಷನ್ ಕಮಲ ವಿಫಲವಾಗಿದ್ದರಿಂದ ನಾಲ್ಕು ದಿನಗಳ ಹಿಂದೆಯಷ್ಟೇ (ಜನವರಿ 25ರಂದು) ರಾತ್ರಿ ಅಥಣಿ ಪಟ್ಟಣದ ಅಬ್ದುಲ್ ಕಲಾಂ ಪದವಿ ಪೂರ್ವ ಕಾಲೇಜಿನಲ್ಲಿ ಕಾಣಿಸಿಕೊಂಡಿದ್ದರು. ಆಗ ಮಾಧ್ಯಮಗಳ ಜೊತೆಗೆ ಮಾತನಾಡಿದ್ದ ಅವರು, ನನಗೆ ಬೆನ್ನು ನೋವು ಕಾಣಿಸಿಕೊಂಡಿತ್ತು. ಹೀಗಾಗಿ ಮುಂಬೈಗೆ ತೆರಳಿದ್ದೆ ಅಂತ ತಿಳಿಸಿದ್ದರು.

    ಮಹೇಶ್ ಕುಮಠಳ್ಳಿ ಅವರು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದಾರೆ. ಶಾಸಕರು ಮುಂಬೈನಿಂದ ವಾಪಸ್ ಬಂದು, ಕೇವಲ ನಾಲ್ಕು ದಿನ ಕ್ಷೇತ್ರದಲ್ಲಿದ್ದು ಮತ್ತೆ ನಾಪತ್ತೆಯಾಗಿದ್ದಾರೆ. ಅವರ ಈ ನಡೆ ರಾಜಕೀಯ ವಲಯದಲ್ಲಿ ಹಾಗೂ ಕ್ಷೇತ್ರದ ಜನರ ಚರ್ಚೆಗೆ ಗ್ರಾಸವಾಗಿದ್ದಾರೆ.

    ಕಾಂಗ್ರೆಸ್ ಪಕ್ಷದಲ್ಲಿಯೇ ಇರುತ್ತೇನೆ. ಎಲ್ಲಿಯೂ ಹೋಗುವುದಿಲ್ಲ ಅಂತ ಹೇಳಿದ್ದ ಮಹೇಶ್ ಕುಮಠಳ್ಳಿ ಅವರು, ಕ್ಷೇತ್ರದ ಅಭಿವೃದ್ಧಿ ಕೆಲಸಗಳತ್ತ ಗಮನ ಹರಿಸುತ್ತಿಲ್ಲ. ಅವರು ಮತ್ತೆ ಮಹಾರಾಷ್ಟ್ರಕ್ಕೆ ತೆರಳಿದ್ದು ಕೂತುಹಲ ಕೆರಳಿಸಿದೆ ಎಂದು ಕ್ಷೇತ್ರದ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv