Tag: Mahila congress

  • ತಮಿಳುನಾಡು ಪ್ರದೇಶ ಮಹಿಳಾ ಕಾಂಗ್ರೆಸ್ ಉಸ್ತುವಾರಿಯಾಗಿ ಸೌಮ್ಯಾ ರೆಡ್ಡಿ ನೇಮಕ

    ತಮಿಳುನಾಡು ಪ್ರದೇಶ ಮಹಿಳಾ ಕಾಂಗ್ರೆಸ್ ಉಸ್ತುವಾರಿಯಾಗಿ ಸೌಮ್ಯಾ ರೆಡ್ಡಿ ನೇಮಕ

    ಬೆಂಗಳೂರು: ತಮಿಳುನಾಡು ಪ್ರದೇಶ ಮಹಿಳಾ ಕಾಂಗ್ರೆಸ್ ಉಸ್ತುವಾರಿಯಾಗಿ ಜಯನಗರ ಶಾಸಕಿ ಸೌಮ್ಯಾ ರೆಡ್ಡಿ ಅವರನ್ನು ನೇಮಕಗೊಂಡಿದ್ದಾರೆ.

    ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಬುಧವಾರ ಐದು ರಾಜ್ಯಗಳಿಗೆ ಉಸ್ತುವಾರಿ ನೇಮಿಸಿ ಆದೇಶ ಹೊರಡಿಸಿದೆ. ಈ ಪೈಕಿ ಸೌಮ್ಯಾ ರೆಡ್ಡಿ ಅವರನ್ನು ತಮಿಳುನಾಡು ಪ್ರದೇಶ ಮಹಿಳಾ ಕಾಂಗ್ರೆಸ್ ಉಸ್ತುವರಿಯಾಗಿ ನೇಮಿಸಿ ಮಾಜಿ ಸಂಸದೆ ಸುಷ್ಮಿತ ದೇವ್ ಆದೇಶ ಹೊರಡಿಸಿದ್ದಾರೆ.

    ಸೌಮ್ಯಾ ರೆಡ್ಡಿ ಅವರು ಕಾಂಗ್ರೆಸ್ ನ  ಹಿರಿಯ ಮುಖಂಡ ಮಾಜಿ ಸಚಿವ ರಾಮಲಿಂಗಾರೆಡ್ಡಿ ಅವರ ಪುತ್ರಿ. 2018ರ ವಿಧಾನಸಭಾ ಚುನಾವಣೆಯಲ್ಲಿ ಸೌಮ್ಯಾ ರೆಡ್ಡಿ ಜಯನಗರ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ. ಅವರು ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಆಗಿದ್ದರು.

    ಸೌಮ್ಯಾ ರೆಡ್ಡಿ ಅವರ ತಂದೆ, ಮಾಜಿ ಸಚಿವ ರಾಮಲಿಂಗಾರೆಡ್ಡಿ ಅವರು ರಾಜೀನಾಮೆ ನೀಡಿ ರಾಜ್ಯ ನಾಯಕರ ವಿರುದ್ಧವೇ ಗುಡುಗಿದ್ದರು. ಅಷ್ಟೇ ಅಲ್ಲದೆ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರುತ್ತಾರೆ ಎಂಬ ಮಾತುಗಳು ಕೇಳಿ ಬಂದಿದ್ದವು. ಆಗ ಶಾಸಕಿ ಸೌಮ್ಯಾ ರೆಡ್ಡಿ ಅವರು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಭೇಟಿಯಾಗಿ ಅವರ ಮಾತಿನಂತೆ ತಂದೆಯನ್ನು ಪಕ್ಷದಲ್ಲಿಯೇ ಉಳಿಯುವಂತೆ ಮಾಡಿದ್ದರು. ಅವರ ಪಕ್ಷ ನಿಷ್ಠೆ, ಅನುಭವದ ಆಧಾರದ ಮೇಲೆ ಹೆಚ್ಚಿನ ಜವಾಬ್ದಾರಿಯನ್ನು ಹೈಕಮಾಂಡ್ ನೀಡಿದೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.